ನವದೆಹಲಿ: ಭಾರತವು (India) ಸಕ್ಕರೆ (Sugar) ರಫ್ತಿನ (Exports) ಮೇಲಿನ ನಿರ್ಬಂಧಗಳನ್ನು (Restriction) 2023ರ ಅ.31 ರವರೆಗೆ ವಿಸ್ತರಿಸಿದೆ ಎಂದು ಡೈರಕ್ಟರೇಟ್ ಜನರಲ್ ಆಫ್ ಫಾರಿನ್ ಟ್ರೇಡ್ ಅಧಿಸೂಚನೆ ನೀಡಿದೆ.
ಆರಂಭದಲ್ಲಿ, ಈ ವರ್ಷದ ಜೂನ್ 1 ರಿಂದ ಅಕ್ಟೋಬರ್ 31 ರವರೆಗೆ ನಿರ್ಬಂಧಗಳನ್ನು ವಿಧಿಸಲಾಗಿತ್ತು. ಆದರೆ ಸಿಎಕ್ಸ್‌ಎಲ್ ಹಾಗೂ ಟಿಆರ್‌ಕ್ಯೂ ಕೋಟಾದ ಅಡಿಯಲ್ಲಿ ಯುರೋಪಿಯನ್ ಯೂನಿಯನ್‌ಗೆ ಸಕ್ಕರೆಯ ಈ ನಿರ್ಬಂಧವು ಅನ್ವಯಿಸುವುದಿಲ್ಲ ಎಂದು ಡಿಜಿಎಫ್‍ಟಿ ಸೂಚಿಸಿದೆ.
ಇನ್ನೆರಡೂ ದಿನಗಳಲ್ಲಿ ರಫ್ತು ನಿರ್ಬಂಧ ಮುಗಿಯುವ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ಮತ್ತೆ ತೆಗೆದುಕೊಂಡಿರುವ ಸರ್ಕಾರ ರಫ್ತಿಗೆ ಸಂಬಂಧಿಸಿದ ಇಲಾಖೆಯಿಂದ ಕಡ್ಡಾಯ ಅನುಮತಿಯಂತಹ ಇತರ ಷರತ್ತುಗಳು ಬದಲಾಗದೇ ಉಳಿಯುತ್ತವೆ ಎಂದು ತಿಳಿಸಿದೆ. ಇದನ್ನೂ ಓದಿ: ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದು ಖಚಿತ – ಬಿಜೆಪಿಯಿಂದಲ್ಲ: ಮುತಾಲಿಕ್
ನಿರ್ಬಂಧವನ್ನು ವಿಧಿಸುವಾಗ ಭಾರತದಲ್ಲಿ ಸಾಕಷ್ಟು ಸಕ್ಕರೆ ದಾಸ್ತಾನು ಲಭ್ಯತೆಯಿದೆಯೇ ಎಂಬುದರ ಕುರಿತಾಗಿ ಖಚಿತಪಡಿಸಿಕೊಳ್ಳಲು ಸರ್ಕಾರ ಬಯಸಿದೆ ಮತ್ತು ದೇಶೀಯ ಪೂರೈಕೆಯ ಹಿತಾಸಕ್ತಿಗಳನ್ನು ಕಾಪಾಡಲು ರಫ್ತು ನಿರ್ಬಂಧವನ್ನು ಸಂಪೂರ್ಣವಾಗಿ ವಿಧಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ. ಇದನ್ನೂ ಓದಿ: `ಆಪರೇಷನ್ ಕಮಲ’ ವಿರುದ್ಧ ಸ್ವಯಂಪ್ರೇರಿತ ಕೇಸ್ ದಾಖಲಿಸಿ- ಸುಪ್ರೀಂಗೆ ಡಿಕೆಶಿ ಮನವಿ
Live Tv
[brid partner=56869869 player=32851 video=960834 autoplay=true]
ಮಾಸ್ಕ್: ಜುಲೈನಲ್ಲಿ ರಷ್ಯಾ ಭಾರತದ ಮೂರನೇ ಅತಿದೊಡ್ಡ ಕಲ್ಲಿದ್ದಲು ಪೂರೈಕೆದಾರ ಆಗಿ ಹೊರಹೊಮ್ಮಿದೆ.
ಜೂನ್‍ಗೆ ಹೋಲಿಸಿದರೆ ಐದನೇ ಒಂದು ಭಾಗದಷ್ಟು ಆಮದುಗಳು ದಾಖಲೆಯ 2.06 ಮಿಲಿಯನ್ ಟನ್‍ಗಳಿಗೆ ಏರಿದೆ ಎಂದು ಭಾರತೀಯ ಸಲಹಾ ಸಂಸ್ಥೆ ಕೋಲ್‍ಮಿಂಟ್‍ನ ಮಾಹಿತಿಯು ತಿಳಿಸಿದೆ. ರಷ್ಯಾ ಐತಿಹಾಸಿಕವಾಗಿ ಇಂಡೋನೇಷ್ಯಾ, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಮತ್ತು ಯುನೈಟೆಡ್ ಸ್ಟೇಟ್ಸ್‌ನ ನಂತರ ಭಾರತಕ್ಕೆ ಕಲ್ಲಿದ್ದಲಿನ ಆರನೇ ಅತಿದೊಡ್ಡ ಪೂರೈಕೆದಾರವಾಗಿದೆ. ಟಾಪ್ ಐದರಲ್ಲಿ ಮೊಜಾಂಬಿಕ್ ಮತ್ತು ಕೊಲಂಬಿಯಾ ಕಾಣಿಸಿಕೊಂಡಿವೆ.
ರಷ್ಯಾದೊಂದಿಗಿನ ದ್ವಿಪಕ್ಷೀಯ ವ್ಯಾಪಾರಕ್ಕೆ ಪ್ರಮುಖ ಪೂರಕತೆಯನ್ನು ಒದಗಿಸಲು ಭಾರತೀಯ ರೂಪಾಯಿಯಲ್ಲಿ ಸರಕುಗಳಿಗೆ ಪಾವತಿಗಳನ್ನು ಅನುಮತಿಸಲು ತನ್ನ ಕೇಂದ್ರೀಯ ಬ್ಯಾಂಕ್‍ನ ಇತ್ತೀಚಿನ ಅನುಮೋದನೆಯನ್ನು ಭಾರತ ನಿರೀಕ್ಷಿಸುತ್ತಿದೆ. ರಷ್ಯಾ, ಉಕ್ರೇನ್ ಮೇಲೆ ಆಕ್ರಮಣ ಮಾಡಿದ ನಂತರ ಭಾರತವು ರಷ್ಯಾದಿಂದ ಆಮದು ಮಾಡಿಕೊಳ್ಳುವುದು ಸುಮಾರು ಐದು ಪಟ್ಟು ಹೆಚ್ಚು ಮಾಡಿದೆ. ಇದನ್ನೂ ಓದಿ: ಕೊನೆಗೂ ನನಸಾಯ್ತು ಅಮ್ಮ, ಮಗಳ ಕನಸು – ಒಂದೇ ವಿಮಾನಕ್ಕೆ ಇಬ್ಬರೂ ಪೈಲಟ್
ಕಾರಣವೇನು?
ವಿಶ್ವದ ಎರಡನೇ ಅತಿದೊಡ್ಡ ಉತ್ಪಾದಕ, ಆಮದುದಾರ ಮತ್ತು ಕಲ್ಲಿದ್ದಲಿನ ಗ್ರಾಹಕ ಭಾರತ, ಐತಿಹಾಸಿಕವಾಗಿ ಹೆಚ್ಚು ಕೋಕಿಂಗ್ ಕಲ್ಲಿದ್ದಲನ್ನು ಆಮದು ಮಾಡಿಕೊಂಡಿದೆ. ಇತ್ತೀಚಿನ ತಿಂಗಳುಗಳಲ್ಲಿ ಭಾರತೀಯ ಗ್ರಾಹಕರಿಗೆ ರಷ್ಯಾದ ಪೂರೈಕೆದಾರರು ನೀಡಿದ ರಿಯಾಯಿತಿಗಳು ಕಲ್ಲಿದ್ದಲಿನ ಹೆಚ್ಚಿನ ಖರೀದಿಯನ್ನು ಉತ್ತೇಜಿಸಿದೆ.
Live Tv
[brid partner=56869869 player=32851 video=960834 autoplay=true]
ನವದೆಹಲಿ: ಭಾರತ ಸರ್ಕಾರ ಗೋಧಿ ರಫ್ತಿಗೆ ಈ ಹಿಂದೆ ನಿಷೇಧ ಹೇರಿದ ಬಳಿಕ ಇದೀಗ ಮೈದಾ, ರವೆ ಸೇರಿದಂತೆ ಹಿಟ್ಟಿನ ರಫ್ತಿಗೆ ನಿಷೇಧ ಹೇರಿದೆ.
ಡೈರೆಕ್ಟರೇಟ್ ಜನರಲ್ ಆಫ್ ಫಾರಿನ್ ಟ್ರೇಡ್ (ಡಿಜಿಎಫ್‍ಟಿ)ಯ ಅಧಿಸೂಚನೆಯ ಪ್ರಕಾರ, ಈ ನಿರ್ಧಾರವು ಜುಲೈ 12 ರಿಂದ ಜಾರಿಗೆ ಬರಲಿದೆ. ಗೋಧಿ ಮತ್ತು ಗೋಧಿ ಹಿಟ್ಟಿನ ರಫ್ತಿನ ಕುರಿತಾಗಿ ಜುಲೈ 6 ರಂದು ಹೊರಡಿಸಲಾದ ಅಧಿಸೂಚನೆಯ ಪ್ರಕಾರ ಈಗಾಗಲೇ ರಫ್ತಿಗೆ ಸಿದ್ಧಗೊಂಡಿರುವ ಹಿಟ್ಟಿಗೆ ಸಚಿವಾಲಯದ ಸಮಿತಿಯಿಂದ ಪೂರ್ವಾನುಮತಿ ಪಡೆಯಬಹುದಾಗಿದೆ. ಆದರೆ ಜುಲೈ 12 ರಿಂದ ಸಂಪೂರ್ಣ ನಿಷೇಧ ಹೇರಲಾಗಿದೆ ಎಂದು ಸ್ಪಷ್ಟಪಡಿಸಿದೆ. ಇದನ್ನೂ ಓದಿ: ರಫ್ತು ನಿಲ್ಲಿಸಿದ ಭಾರತ – ಗೋಧಿಗಾಗಿ ರಷ್ಯಾ ಕಡೆ ಮುಖ ಮಾಡಿದ ಬಾಂಗ್ಲಾದೇಶ
ಗೋಧಿ ಮತ್ತು ಗೋಧಿ ಹಿಟ್ಟಿನ ಜಾಗತಿಕ ಪೂರೈಕೆ ಅಡೆತಡೆಗಳಿಂದಾಗಿ ಅನೇಕ ಏರುಪೇರು ಕಾಣುತ್ತಿದೆ. ಕಡಿಮೆ ಉತ್ಪಾದನೆ ಮತ್ತು ಜಾಗತಿಕ ಬೆಲೆಗಳು ತೀವ್ರವಾಗಿ ಹೆಚ್ಚಿರುವುದು ಸೇರಿದಂತೆ ತನ್ನದೇ ದೇಶದ ಜನರ ಆಹಾರ ಭದ್ರತೆಯ ಬಗ್ಗೆ ಭಾರತ ಚಿಂತಿಸಿ ಈ ಕ್ರಮಕ್ಕೆ ಮುಂದಾಗಿದೆ. ಇದರಿಂದಾಗಿ ರಫ್ತು ವ್ಯಾಪಾರಕ್ಕೆ ನಿಷೇಧದ ನಿರ್ಧಾರವನ್ನು ತೆಗೆದುಕೊಂಡಿದೆ. ಇದನ್ನೂ ಓದಿ: ಆರ್ಥಿಕ ಹಿಂಜರಿತ ಭೀತಿ – ಅಂತಾರಾಷ್ಟ್ರೀಯ ತೈಲಬೆಲೆ ಭಾರೀ ಇಳಿಕೆ
ಗೋಧಿ ರಫ್ತು ನಿಷೇಧವಾದಾಗ ಭಾರತದ ಈ ನಿರ್ಧಾರವನ್ನು US, ಕೆನಡಾ, EU ಮತ್ತು ಆಸ್ಟ್ರೇಲಿಯಾ ಸೇರಿದಂತೆ ಅನೇಕ ಪಾಶ್ಚಿಮಾತ್ಯ ರಾಷ್ಟ್ರಗಳು ಈ ನಿರ್ಧಾರದ ವಿರುದ್ಧ ಮಾತನಾಡಿದ್ದವು. ಇದೀಗ ಗೋಧಿ ಹಿಟ್ಟಿನ ರಫ್ತಿಗೆ ನಿಷೇಧ ಹೇರಿದ ಬಳಿಕ ಇನ್ನಷ್ಟು ಅಪಸ್ವರ ಕೇಳಿ ಬರುತ್ತಿದೆ. ಕೇಂದ್ರ ಸರ್ಕಾರವು ಗೋಧಿಯ ರಫ್ತು ನೀತಿಯನ್ನು ನಿಷೇಧಿತ ವರ್ಗದ ಅಡಿಯಲ್ಲಿ ತಿದ್ದುಪಡಿ ಮಾಡಿದ ಬಳಿಕ ಈ ನಿರ್ಧಾರಕ್ಕೆ ಮುಂದಾಗಿದೆ.
Live Tv
[brid partner=56869869 player=32851 video=960834 autoplay=true]
ನವದೆಹಲಿ: ಕಳೆದ ವರ್ಷ ಭಾರತ 30.5 ಲಕ್ಷ ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ವಿದೇಶಕ್ಕೆ ರಫ್ತು ಮಾಡಿ ಸರ್ವಕಾಲಿಕ ದಾಖಲೆ ಬರೆದಿದೆ ಎನ್ನುವ ಸುದ್ದಿ ಬೆನ್ನಲ್ಲೆ ಇದೀಗ ಅತಿ ಹೆಚ್ಚು ವಸ್ತುಗಳನ್ನು ರಫ್ತು ಮಾಡಿದ ಪಟ್ಟಿಯಲ್ಲಿ ಕರ್ನಾಟಕ ರಾಜ್ಯ 3ನೇ ಸ್ಥಾನ ಪಡೆದಿದೆ
ಯಾವ ರಾಜ್ಯಗಳು ಯಾವ ಸ್ಥಾನದಲ್ಲಿದೆ?: ನೀತಿ ಆಯೋಗ ಸಿದ್ಧಪಡಿಸಿರುವ ಸೂಚ್ಯಂಕ ಪ್ರಕಾರ 2021ರಲ್ಲಿ ಗುಜರಾತ್ ನಂಬರ್ 1, ಮಹಾರಾಷ್ಟ್ರ ನಂಬರ್ 2, ಹಾಗೂ ಕರ್ನಾಟಕ ಮೂರನೇ ಸ್ಥಾನದಲ್ಲಿದೆ. ಈ ರಾಜ್ಯಗಳು 2021-22ನೇ ಸಾಲಿನಲ್ಲಿ ವಿದೇಶಗಳಿಗೆ ಅತಿಹೆಚ್ಚು ರಫ್ತು ಮಾಡಿದ ರಾಜ್ಯಗಳಾಗಿವೆ.
ರಫ್ತು ಸೂಚ್ಯಂಕವನ್ನು ಇನ್‍ಸ್ಟಿಟ್ಯೂಟ್ ಆಫ್ ಕಾಂಪಿಟೆಟಿವ್‍ನೆಸ್‍ನ ಜೊತೆಗೂಡಿ ನೀತಿ ಆಯೋಗ ಸಿದ್ಧಪಡಿಸಿದೆ. ವ್ಯಾಪಾರ ನೀತಿ ಆಯೋಗ ಸಿದ್ಧಪಡಿಸಿದ ವ್ಯಾಪಾರ ನೀತಿ, ವಾಣಿಜ್ಯ ಪರಿಸರ, ರಫ್ತು ಪರಿಸರ ಹಾಗೂ ರಫ್ತು ಸಾಧನೆ ಎನ್ನುವ ನಾಲ್ಕು ಅಂಶಗಳನ್ನು ಪ್ರಮುಖವಾಗಿ ಇಲ್ಲಿ ಪರಿಗಣಿಸಲಾಗಿದೆ. ರಫ್ತು ಉತ್ತೇಜನಾ ನೀತಿ ಮತ್ತು ಉದ್ದಿಮೆಗಳನ್ನು ನಡೆಸಲು ಇರುವ ವಾತಾವರಣದಂತಹ 11 ಅಂಶಗಳನ್ನೂ ಪರಿಗಣಿಸಲಾಗಿದೆ. ಇದನ್ನೂ ಓದಿ: ಮೊದಲೇ ಟಾರ್ಗೆಟ್ ರೀಚ್, ರಫ್ತಿನಲ್ಲಿ ಸಾಧನೆ – ಇದು ಆತ್ಮನಿರ್ಭರ್ ಭಾರತದ ಮೈಲುಗಲ್ಲು ಎಂದ ಮೋದಿ
ಈ ಎಲ್ಲ ಅಂಶಗಳಲ್ಲಿ ಒಟ್ಟಾರೆಯಾಗಿ ಗುಜರಾತ್ ಸತತ 2ನೇ ವರ್ಷವೂ ನಂಬರ್ 1 ಸ್ಥಾನ ಪಡೆದುಕೊಂಡಿದೆ. ಈ ನಂತರದ ಸ್ಥಾನಗಳನ್ನು ಅನುಕ್ರಮವಾಗಿ ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು, ಹರಿಯಾಣ, ಉತ್ತರಪ್ರದೇಶ, ಮಧ್ಯಪ್ರದೇಶ, ಪಂಜಾಬ್, ಆಂಧ್ರ, ತೆಲಂಗಾಣ ಪಡೆದುಕೊಂಡಿವೆ. ಲಕ್ಷದ್ವೀಪ, ಅರುಣಾಚಲ ಪ್ರದೇಶ, ಮಿಜೋರಾಂ, ಲಡಾಖ್ ಮತ್ತು ಮೇಘಾಲಯ ಕೊನೆ ಸ್ಥಾನಗಳಲ್ಲಿವೆ.
ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್, ಭಾರತ ರಫ್ತು ಕ್ಷೇತ್ರ ಕಳೆದ ವರ್ಷ ಶೇ.36 ರಷ್ಟು ಬೆಳೆದಿದೆ. ಇದೇ ವೇಳೆ ಜಾಗತಿಕ ಮಟ್ಟದಲ್ಲಿ ರಫ್ತು ಕ್ಷೇತ್ರ ಶೇ. 30 ರಷ್ಟು ಬೆಳೆದಿದೆ. ಬಹಳ ವರ್ಷಗಳ ನಂತರ ಜಾಗತಿಕ ವ್ಯಾಪಾರದಲ್ಲಿ ಭಾರತದ ಪಾಲು ಶೇ.1.6 ರಿಂದ ಶೇ.1.7 ರಷ್ಟು ಏರಿಕೆಯಾಗಿದೆ ಎಂದು ಹೇಳಿದ್ದಾರೆ.
ವಾಹನ, ವಿದ್ಯುತ್, ಉಪಕರಣ, ಕಬ್ಬಿಣ ಮತ್ತು ಉಕ್ಕಿನಂತಹ ವಸ್ತುಗಳು ಇದಕ್ಕೆ ಹೆಚ್ಚು ಕೊಡುಗೆ ನೀಡಿವೆ. ರಫ್ತಾದ ವಸ್ತುಗಳಲ್ಲಿ ಶೇ.70 ಮಹಾರಾಷ್ಟ್ರ ಗುಜರಾತ್, ಕರ್ನಾಟಕ, ತಮಿಳುನಾಡು ಮತ್ತು ತೆಲಂಗಾಣದಿಂದ ಆಗಿವೆ.
ನವದೆಹಲಿ: ಭಾರತವು ಮೊದಲ ಬಾರಿಗೆ ಸರಕು ರಫ್ತಿನಿಂದ 400 ಬಿಲಿಯನ್ ಡಾಲರ್(30 ಲಕ್ಷ ಕೋಟಿ ರೂ.) ಗುರಿಯನ್ನು ಸಾಧಿಸಿದ್ದು, ಇದು ಆತ್ಮನಿರ್ಭರ್ ಭಾರತದ ಪ್ರಮುಖ ಮೈಲಿಗಲ್ಲು ಆಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಪ್ರಸ್ತುತ 2021-22 ಹಣಕಾಸು ವರ್ಷದಲ್ಲಿ ಭಾರತವು 400 ಬಿಲಿಯನ್ ಡಾಲರ್ ಸರಕು ರಫ್ತುಗಳಿಂದ ಮಹತ್ವಾಕಾಂಕ್ಷೆಯ ಗುರಿಯನ್ನು ಈಗಾಗಲೇ ತಲುಪಿದೆ. ಮೊದಲ ಬಾರಿಗೆ ಭಾರತವು ಈ ಮೈಲುಗಲ್ಲನ್ನು ಸಾಧಿಸಿದ್ದು, ಈ ಯಶಸ್ಸಿಗೆ ಕಾರಣರಾದ ರೈತರು, ಎಂಎಸ್‍ಎಂಇಗಳು ಮತ್ತು ರಫ್ತುದಾರರನ್ನು ಅಭಿನಂದಿಸುತ್ತೇನೆ. ಈ ಸಾಧನೆ ಆತ್ಮನಿರ್ಭರ್ ಭಾರತದ ಪ್ರಮುಖ ಮೈಲುಗಲ್ಲಾಗಿದೆ ಎಂದು ಅಭಿನಂದಿಸಿದ್ದಾರೆ.
India set an ambitious target of $400 Billion of goods exports & achieves this target for the first time ever. I congratulate our farmers, weavers, MSMEs, manufacturers, exporters for this success.
ಜನವರಿಯಲ್ಲಿ ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಮಾತನಾಡಿ, ರಫ್ತನ್ನು ಹೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ಕರೆಯನ್ನು ಎಲ್ಲರೂ ಗಂಭೀರವಾಗಿ ಪರಿಗಣಿಸಿದ್ದಾರೆ. ಇದರಿಂದಾಗಿ ಎಲ್ಲಾ ಭಾರತೀಯರು ಹೆಮ್ಮೆ ಪಡುವ ಸಮಯ ಬಂದಿದೆ. 2021-22ರ ಆರ್ಥಿಕ ವರ್ಷದ ಮೊದಲ ಒಂಬತ್ತು ತಿಂಗಳಲ್ಲಿ 220 ಶತಕೋಟಿ ಡಾಲರ್‍ನೊಂದಿಗೆ ನಮ್ಮ ಗುರಿಯನ್ನು ತಲುಪುವ ಹಾದಿಯಲ್ಲಿದ್ದೇವೆ ಎಂದಿದ್ದರು. ಇದನ್ನೂ ಓದಿ: `ಪುಷ್ಪಾ’ ಸಿನಿಮಾ ಸ್ಟೈಲ್‍ನಲ್ಲಿ ಸಾಗಣೆ – 2,200 ಕೆ.ಜಿ ರಕ್ತಚಂದನ ಜಪ್ತಿ
ವಾಣಿಜ್ಯ ಸಚಿವಾಲಯದ ಪ್ರಕಾರ, ಭಾರತವು 2021ರ ಡಿಸೆಂಬರ್‌ನಲ್ಲಿ 37 ಶತಕೋಟಿ ರಫ್ತುಗಳ ಗುರಿಯನ್ನು ಸಾಧಿಸಿದೆ. ಇದು ಡಿಸೆಂಬರ್ ತಿಂಗಳಲ್ಲೇ ಅತ್ಯಧಿಕವಾಗಿದೆ. ಕಳೆದ ಡಿಸೆಂಬರ್‌ನಲ್ಲಿ, ಭಾರತದ ಸರಕು ರಫ್ತುಗಳು 37.29 ಬಿಲಿಯನ್(2.83ಲಕ್ಷ ಕೋಟಿ ರೂ.) ಡಾಲರ್‌ನಷ್ಟಿದ್ದರೆ, 12 ತಿಂಗಳ ಹಿಂದಿನ ಅನುಗುಣವಾದ ಅಂಕಿಅಂಶಗಳು 27.22 ಬಿಲಿಯನ್ ಡಾಲರ್(1.67ಲಕ್ಷ ಕೋಟಿ ರೂ.)ಗಿಂತ ಹೆಚ್ಚು ದಾಖಲಾಗಿವೆ. ಇದನ್ನೂ ಓದಿ: ನಾನು ಗಾಂಧಿ, ನೆಹರೂ ಕುಟುಂಬದ ಗುಲಾಮ: ಕಾಂಗ್ರೆಸ್ ಶಾಸಕ
ನವದೆಹಲಿ: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮನವಿಯ ಹಿನ್ನೆಲೆಯಲ್ಲಿ ಭಾರತ ಸರ್ಕಾರ ಅಮೆರಿಕಕ್ಕೆ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಗಳನ್ನು ರಫ್ತು ಮಾಡಲು ಒಪ್ಪಿಗೆ ಸೂಚಿಸಿದೆ.
ಭಾರತ ಸರ್ಕಾರ ದೇಶದಲ್ಲಿ ಕೊರೊನಾ ಹರಡುತ್ತಿರುವ ಹಿನ್ನೆಲೆಯಲ್ಲಿ ಮಲೇರಿಯಾ ರೋಗದ ವಿರುದ್ಧವಾಗಿ ನೀಡುವ ಹೈಡ್ರಾಕ್ಸಿಕ್ಲೋರೋಕ್ವಿನ್, ಪ್ಯಾರಾಸಿಟಮೊಲ್ ಸೇರಿದಂತೆ 16 ಮಾತ್ರೆಗಳ ರಫ್ತಿಗೆ ನಿಷೇಧ ಹೇರಿತ್ತು. ಈ ಮಧ್ಯೆ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಗಳಿಂದ ಕೊರೊನಾ ಪೀಡಿತ ರೋಗಿಗಳು ಗುಣವಾಗುತ್ತಾರೆ ಎನ್ನುವ ವಿಚಾರ ಅಧ್ಯಯನದಿಂದ ತಿಳಿದು ಬಂದಿತ್ತು.
ಅಮೆರಿಕದಲ್ಲಿ ಕೊರೊನಾ ಸಾವು ನೋವು ಪ್ರಮಾಣ ತೀವ್ರವಾಗುತ್ತಿರುವ ಬೆನ್ನಲ್ಲೇ ಈ ವರದಿಯಿಂದ ಎಚ್ಚೆತ್ತ ಟ್ರಂಪ್ ಪ್ರಧಾನಿ ಮೋದಿಗೆ ಕರೆ ಮಾಡಿ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಗಳನ್ನು ರಫ್ತು ಮಾಡಬೇಕೆಂದು ಕೇಳಿಕೊಂಡಿದ್ದರು.
ಟ್ರಂಪ್ ಮನವಿಯ ಬೆನ್ನಲ್ಲೇ ಭಾರತ ಸರ್ಕಾರ ಇಂದು ಹೈಡ್ರಾಕ್ಸಿಕ್ಲೋರೋಕ್ವಿನ್, ಪ್ಯಾರಾಸಿಟಮೊಲ್ ಮಾತ್ರೆಗಳ ಮೇಲಿನ ರಫ್ತನ್ನು ಹಿಂದಕ್ಕೆ ಪಡೆದಿದೆ.
I may take it too, will have to talk to my doctors: US President Donald Trump in White House press conference after he announced he requested PM Narendra Modi for more Hydroxychloroquine tablets. pic.twitter.com/HkuiDGknCe
ಈ ಸಂಬಂಧ ಭಾರತದ ವಿದೇಶಾಂಗ ಇಲಾಖೆ ಪ್ರತಿಕ್ರಿಯಿಸಿ, ಕೊರೊನಾ ಸಂಕಷ್ಟದ ಸಮಯಯದಲ್ಲಿ ಮಾನವೀಯ ನೆಲೆಯಲ್ಲಿ ಭಾರತ ಹೈಡ್ರಾಕ್ಸಿಕ್ಲೋರೋಕ್ವಿನ್, ಪ್ಯಾರಾಸಿಟಮೊಲ್ ಮಾತ್ರೆಗಳನ್ನು ಹತ್ತಿರದ ರಾಷ್ಟ್ರಗಳಿಗೆ ರಫ್ತು ಮಾಡುತ್ತದೆ ಎಂದು ತಿಳಿಸಿದೆ.
ಕಳೆದ ವಾರವೇ ಟ್ರಂಪ್ ಮನವಿ ಮಾಡಿದ್ದರೂ ಭಾರತ ಈ ಬಗ್ಗೆ ಶೀಘ್ರವೇ ಯಾವುದೇ ನಿರ್ಧಾರ ಪ್ರಕಟಿಸಿರಲಿಲ್ಲ.
We will also be supplying these essential drugs to some nations who have been particularly badly affected by the pandemic. We would therefore discourage any speculation in this regard or any attempts to politicise the matter: Ministry of External Affairs (MEA) #COVID19https://t.co/T4BPoXkLDM
ಇಂದು ವಿದೇಶಾಂಗ ಇಲಾಖೆಯ ವಕ್ತಾರ ಶ್ರೀವತ್ಸವ ಪ್ರತಿಕ್ರಿಯಿಸಿ, ಆ ದೇಶದ ಪ್ರಜೆಗಳ ರಕ್ಷಣೆ ಮಾಡುವುದು ಯಾವುದೇ ಜವಾಬ್ದಾರಿಯುತ ಸರ್ಕಾರದ ಮೊದಲ ಕೆಲಸ. ಹೀಗಾಗಿ ಔಷಧಿಗಳು ನಮ್ಮ ಬೇಡಿಕೆಗೆ ತಕ್ಕಂಥೆ ಇದೆಯೇ ಎನ್ನುವುದನ್ನು ತಿಳಿದುಕೊಳ್ಳಬೇಕಾಗುತ್ತದೆ. ಈ ಕಾರಣಕ್ಕಾಗಿ ನಾವು ತಾತ್ಕಾಲಿಕವಾಗಿ ಔಷಧಿಗಳ ರಫ್ತಿಗೆ ನಿಷೇಧವನ್ನು ಹೇರಲಾಗಿತ್ತು. ಈಗ ನಮ್ಮ ಬೇಡಿಕೆಯನ್ನು ನೋಡಿಕೊಂಡು ಔಷಧಗಳ ರಫ್ತಿಗೆ ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಕೊರೊನಾ ಮೇಲೆ ಪರಿಣಾಮ ಬೀರುತ್ತಾ?
ಅಮೆರಿಕದಲ್ಲಿ 3.60 ಲಕ್ಷ ಮಂದಿಗೆ ಕೊರೊನಾ ಬಂದಿದ್ದು ಈಗಾಗಲೇ 10 ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಕೊರೊನಾಗೆ ಸಧ್ಯಕ್ಕೆ ಯಾವುದೇ ಔಷಧಿ ಇಲ್ಲ. ಹೀಗಾಗಿ ಇಂದು ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಾ ಎನ್ನವ ಪ್ರಶ್ನೆ ಏಳುವುದು ಸಹಜ.
ಮಲೇರಿಯಾ ರೋಗದ ವಿರುದ್ಧವಾಗಿ ಹೋರಾಡಲು ರೋಗಿಗಳಿಗೆ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಯನ್ನು ನೀಡಲಾಗುತ್ತಿದೆ. ಭಾರತದಲ್ಲಿ ಇದು ಯಶಸ್ವಿಯಾದ ಹಿನ್ನೆಲೆಯಲ್ಲಿ ಭಾರೀ ಪ್ರಮಾಣದಲ್ಲಿ ಈ ಮಾತ್ರೆಗಳನ್ನು ದೇಶದಲ್ಲಿ ಉತ್ಪಾದನೆ ಮಾಡಲಾಗುತ್ತಿದೆ.
ಮಲೇರಿಯಾಗೆ ನೀಡುವ ಈ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಯಿಂದಲೇ ಕೊರೊನಾ ಗುಣವಾಗುತ್ತದೆ ಎಂದು ಪೂರ್ಣವಾಗಿ ಹೇಳಲು ಬರುವುದಿಲ್ಲ. ಯಾಕೆಂದರೆ ವಿಶ್ವ ಆರೋಗ್ಯ ಸಂಸ್ಥೆಯೇ ಯಾವುದೇ ಔಷಧಿಯಿಂದ ಕೊರೊನಾ ವಾಸಿಯಾಗಿದ್ದಕ್ಕೆ ಯಾವುದೇ ಪುರಾವೆ ಇಲ್ಲ ಎಂದು ಹೇಳಿದೆ.
ಪರಿಸ್ಥಿತಿ ಹೀಗಿರುವಾಗ ತಾತ್ಕಾಲಿಕವಾಗಿ ಕೊರೊನಾಗೆ ಯಾವ ಮಾತ್ರೆ ನೀಡಿದರೆ ಕಡಿಮೆಯಾಗುತ್ತದೆ ಎನ್ನುವ ಬಗ್ಗೆ ಕಂಪನಿಯೊಂದು ಅಧ್ಯಯನ ನಡೆಸಿದೆ. ಹಲವು ದೇಶಗಳಲ್ಲಿ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಯಿಂದ ರೋಗಿಗಳು ಗುಣಮುಖರಾಗಿದ್ದಾರೆ ಎಂದು ಜಾಗತಿಕವಾಗಿ ಆರೋಗ್ಯ ಕುರಿತಾಗಿ ಅಧ್ಯಯನ ಮಾಡುವ sermo ಕಂಪನಿ ತಿಳಿಸಿದ ಹಿನ್ನೆಲೆಯಲ್ಲಿ ಈ ಮಾತ್ರೆಗೆ ಬೇಡಿಕೆ ಹೆಚ್ಚಾಗಿದೆ.
ಅಧ್ಯಯನ ಹೇಳಿದ್ದು ಏನು?
ಕೊರೊನಾ ತೀವ್ರವಾಗಿ ಹರಡುತ್ತಿರುವ ಯುರೋಪ್, ದಕ್ಷಿಣ ಅಮೆರಿಕ, ಆಸ್ಟ್ರೇಲಿಯಾ ಸೇರಿದಂತೆ ವಿಶ್ವದ 30 ದೇಶಗಳ ಒಟ್ಟು 6,227 ಮಂದಿ ವೈದ್ಯರನ್ನು ಸಂಪರ್ಕಿಸಿ ಅಧ್ಯಯನ ನಡೆಸಲಾಗಿದೆ. ಈ ಪೈಕಿ ಶೇ.37ರಷ್ಟು ಮಂದಿ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರ ಪರಿಣಾಮ ಬೀರಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಕೊರೊನಾ ತಡೆಗಟ್ಟಲು ನೀಡಲಾಗುವ ಔಷಧಿಗಳ ಪೈಕಿ ಶೇ.56 ನೋವು ನಿವಾರಕಗಳು, ಶೇ.41 ಅಜಿಥ್ರೊಮೈಸಿನ್, ಶೇ.33 ಹೈಡ್ರಾಕ್ಸಿಕ್ಲೋರೋಕ್ವಿನ್ ನೀಡಲಾಗುತ್ತಿದೆ. ಈ ಪೈಕಿ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆ ಉತ್ತಮ ಪರಿಣಾಮ ಬೀರಿದೆ ಎಂದು ಅಧ್ಯಯನ ತಿಳಿಸಿದೆ.
ಸ್ಪೇನ್ ಶೇ.72, ಇಟಲಿ ಶೇ.49, ಬ್ರೆಜಿಲ್ ಶೇ.41, ಮೆಕ್ಸಿಕೋ ಶೇ.39, ಫ್ರಾನ್ಸ್ ಶೇ.28, ಅಮೆರಿಕ ಶೇ.23, ಜರ್ಮನಿ ಶೇ.17, ಕೆನಡಾ ಶೇ.16, ಇಂಗ್ಲೆಂಡ್ ಶೇ.13, ಜಪಾನ್ ಶೇ.7 ರಷ್ಟು ರೋಗಿಗಳಿಗೆ ಹೈಡ್ರಾಕ್ಸಿಕ್ಲೋರೋಕ್ವಿನ್ ನೀಡಲಾಗಿದೆ.
ಟ್ರಂಪ್ ಹೇಳಿದ್ದು ಏನು?
ಇಂದಿನ ತುರ್ತು ಪರಿಸ್ಥಿತಿಯಲ್ಲಿ ಲ್ಯಾಬ್‍ನಲ್ಲಿ ಕೊರೊನಾಗೆ ಔಷಧಿ ಕಂಡು ಹುಡುಕುವುದು ಬಹಳ ಸವಾಲಿನ ಕೆಲಸ. ಹೀಗಿರುವಾಗ ಅಮೆರಿಕನ್ನರ ರಕ್ಷಣೆಗೆ ಹೈಡ್ರಾಕ್ಸಿಕ್ಲೋರೋಕ್ವಿನ್ ಅಗತ್ಯವಾಗಿದೆ. ಹೈಡ್ರಾಕ್ಸಿಕ್ಲೋರೋಕ್ವಿನ್ ಮತ್ತು ಅಜಿಥ್ರೊಮೈಸಿನ್ ಎರಡು ಮೆಡಿಕಲ್ ಇತಿಹಾಸದಲ್ಲಿ ಗೇಮ್ ಚೇಂಜರ್ ಎಂದು ಹೇಳಿದ್ದರು. ಅಷ್ಟೇ ಅಲ್ಲದೇ ನಾನು ಕೂಡ ಈ ಮಾತ್ರೆಯನ್ನು ತೆಗೆದುಕೊಳ್ಳುವುದಾಗಿ ತಿಳಿಸಿದ್ದರು.
ಇಸ್ಲಾಮಾಬಾದ್: ವಸ್ತುಗಳ ಮೇಲೆ ನಿಷೇಧ ಹೇರುವಂತೆ ಪಾಕಿಸ್ತಾನದ ಜನ ಅಭಿಯಾನ ನಡೆಸಿದ್ದರೆ ಫೆಡರಲ್ ಸರ್ಕಾರ ಜೀವ ಉಳಿಸುವ ಔಷಧಿ ಅಮದಿಗೆ ಒಪ್ಪಿಗೆ ಸೂಚಿಸಿದೆ.
ಪಾಕಿಸ್ತಾನದ ವಾಣಿಜ್ಯ ವ್ಯವಹಾರಗಳ ಸಚಿವಾಲಯ ಸೋಮವಾರ ಭಾರತದಿಂದ ಔಷಧಿಗಳನ್ನು ಆಮದು ಮಾಡಲು ಅನುಮತಿ ನೀಡಿದೆ.
ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ ಭಾರತ ಸರ್ಕಾರದ ನಡೆಯನ್ನು ಖಂಡಿಸಿ ದ್ವಿಪಕ್ಷೀಯ ವ್ಯವಹಾರವನ್ನು ಪಾಕಿಸ್ತಾನ ಬಂದ್ ಮಾಡಿತ್ತು. ಅಷ್ಟೇ ಅಲ್ಲದೇ ಪಾಕಿಸ್ತಾನದಲ್ಲಿದ್ದ ಭಾರತದ ರಾಯಭಾರಿಯನ್ನು ಹೊರ ಹೋಗುವಂತೆ ಸೂಚಿಸಿತ್ತು.
ಪಾಕಿಸ್ತಾನ ಆರೋಗ್ಯ ಸಚಿವಾಲಯ ಅಲ್ಲಿನ ಸಂಸತ್ತಿನಲ್ಲಿ ಪ್ರಕಟಿಸಿದ ಮಾಹಿತಿಯಂತೆ 2019ರ ಜೂನ್‍ವರೆಗೆ 136 ಕೋಟಿ ರೂ. ಮೌಲ್ಯದ ಔಷಧಿಗಳನ್ನು ಭಾರತ ರಫ್ತು ಮಾಡಿದೆ.
ಜನವರಿಯಲ್ಲಿ 15.43 ಕೋಟಿ ರೂ., ಫೆಬ್ರವರಿಯಲ್ಲಿ 19.37 ಕೋಟಿ ರೂ., ಮಾರ್ಚ್ ನಲ್ಲಿ 11.10 ಕೋಟಿ ರೂ., ಏಪ್ರಿಲ್ ನಲ್ಲಿ 18.96 ಕೋಟಿ ರೂ., ಮೇ ತಿಂಗಳಿನಲ್ಲಿ 4.89 ಕೋಟಿ ಪಾಕಿಸ್ತಾನ ರೂ. ಮೌಲ್ಯದ ಔಷಧಿಗಳನ್ನು ಖರೀದಿಸಿತ್ತು. ಪಾಕಿಸ್ತಾನ ಔಷಧಿಗಳನ್ನು ಹೆಚ್ಚಾಗಿ ಭಾರತ ಮತ್ತು ಚೀನಾದಿಂದ ಆಮದು ಮಾಡಿಕೊಳ್ಳುತ್ತಿದೆ.