Tag: extramarital affair

  • ಅಕ್ರಮ ಸಂಬಂಧಕ್ಕೆ ಬಿತ್ತು 2 ಹೆಣ; ಗರ್ಭಿಣಿ ಹೆಂಡತಿಯನ್ನು ಕೊಂದ ಪ್ರಿಯಕರನ ಹತ್ಯೆಗೈದ ಪತಿ

    ಅಕ್ರಮ ಸಂಬಂಧಕ್ಕೆ ಬಿತ್ತು 2 ಹೆಣ; ಗರ್ಭಿಣಿ ಹೆಂಡತಿಯನ್ನು ಕೊಂದ ಪ್ರಿಯಕರನ ಹತ್ಯೆಗೈದ ಪತಿ

    ನವದೆಹಲಿ: ಅಕ್ರಮ ಸಂಬಂಧ ವಿಚಾರವಾಗಿ ಗರ್ಭಿಣಿ ಹಾಗೂ ಆಕೆಯ ಪ್ರಿಯಕರ ಹತ್ಯೆಯಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಗರ್ಭಿಣಿಯನ್ನು ಆಕೆಯ ಪ್ರಿಯಕರನೇ ಇರಿದು ಕೊಂದಿದ್ದಾನೆ. ಪತ್ನಿಯ ಪ್ರಿಯಕರನನ್ನು ಆಕೆಯ ಪತಿ ಹತ್ಯೆ ಮಾಡಿದ್ದಾರೆ.

    ಬೆಚ್ಚಿಬೀಳಿಸುವ ಹತ್ಯೆ ಘಟನೆ ರಾಮ್‌ನಗರ ಪ್ರದೇಶದಲ್ಲಿ ನಡೆದಿದೆ. ಗೃಹಿಣಿ ಶಾಲಿನಿ (22) ಮತ್ತು ಆಕೆಯ ಪ್ರಿಯಕರ ಆಶು ಅಲಿಯಾಸ್‌ ಶೈಲೇಂದ್ರ (34) ಮೃತಪಟ್ಟವರು. ಮಹಿಳೆ ಪತಿ ಆಕಾಶ್‌ (24) ಈಗ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ.

    ಶಾಲಿನಿ ಇಬ್ಬರು ಹೆಣ್ಣುಮಕ್ಕಳ ತಾಯಿಯಾಗಿದ್ದರು. ಆಕೆಯ ಪತಿ ಇ-ರಿಕ್ಷಾ ಚಾಲಕನಾಗಿದ್ದ. ಶಾಲಿನಿ ಜೊತೆ ಶೈಲೇಂದ್ರ ಅಕ್ರಮ ಸಂಬಂಧ ಹೊಂದಿದ್ದ. ಶಾಲಿನಿ ಗರ್ಭಿಣಿಯಾಗಿದ್ದಳು. ಪತಿ ಜೊತೆ ಜಗಳ ಮಾಡಿಕೊಂಡಿದ್ದಳೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ನಿನ್ನೆ ತಡರಾತ್ರಿ ಆಕಾಶ್ ಮತ್ತು ಶಾಲಿನಿ ಕುತುಬ್ ರಸ್ತೆಯಲ್ಲಿ ತಮ್ಮ ತಾಯಿಯನ್ನು ಭೇಟಿಯಾಗಲು ಹೋಗಿದ್ದಾಗ ಪ್ರಿಯಕರ ದಾಳಿ ನಡೆಸಿದ್ದಾನೆ. ಆಕಸ್ಮಿಕವಾಗಿ ಕಾಣಿಸಿಕೊಂಡ ಆಶು, ಆಕಾಶ್ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ. ನಂತರ ಇ-ರಿಕ್ಷಾದಲ್ಲಿ ಶಾಲಿನಿ ಇರುವುದನ್ನು ಗಮನಿಸಿ ಆಕೆಗೆ ಹಲವು ಬಾರಿ ಇರಿದಿದ್ದಾನೆ.

    ಪತ್ನಿಯನ್ನು ರಕ್ಷಿಸಲು ಮುಂದಾದ ಆಕಾಶ್‌ಗೂ ಚಾಕುವಿನಿಂದ ಇರಿಯುತ್ತಾನೆ. ಈ ವೇಳೆ ಆಶುವಿನಿಂದ ಚಾಕು ಕಸಿದುಕೊಂಡು ಆತನಿಗೆ ಇರಿದು ಆಕಾಶ್‌ ಹತ್ಯೆ ಮಾಡುತ್ತಾನೆ. ಶಾಲಿನಿಯ ಸಹೋದರ ರೋಹಿತ್ ತಕ್ಷಣ ಆಕೆ ಮತ್ತು ಆಕೆಯ ಪತಿಯನ್ನು ಆಸ್ಪತ್ರೆಗೆ ಸೇರಿಸುತ್ತಾನೆ. ಪೊಲೀಸರು ಆಶುನನ್ನು ಅದೇ ಆಸ್ಪತ್ರೆಗೆ ದಾಖಲಿಸುತ್ತಾರೆ. ಆಸ್ಪತ್ರೆಯಲ್ಲಿ ಶಾಲಿನಿ ಮತ್ತು ಪ್ರಿಯಕರ ಆಶು ಸಾವನ್ನಪ್ಪುತ್ತಾರೆ. ಪತ್ನಿಯನ್ನು ಉಳಿಸುವಾಗ ಆಕಾಶ್‌ಗೆ ಹಲವು ಇರಿತದ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಉಪ ಪೊಲೀಸ್ ಆಯುಕ್ತ (ಕೇಂದ್ರ) ನಿಧಿನ್ ವಲ್ಸನ್ ತಿಳಿಸಿದ್ದಾರೆ.

    ಶಾಲಿನಿಯ ತಾಯಿ ಶೀಲಾ ಅವರ ಹೇಳಿಕೆಯ ಆಧಾರದ ಮೇಲೆ ಪೊಲೀಸರು ಕೊಲೆ ಮತ್ತು ಕೊಲೆ ಯತ್ನ ಪ್ರಕರಣವನ್ನು ದಾಖಲಿಸಿದ್ದಾರೆ. ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

    ಶಾಲಿನಿ ಮತ್ತು ಪತಿ ಆಕಾಶ್ ನಡುವೆ ಜಗಳವಾಗಿ ಇಬ್ಬರ ಸಂಬಂಧ ಹದಗೆಟ್ಟಿತ್ತು. ನಂತರ ಆಕೆ ಮನೆಯನ್ನು ಬಿಟ್ಟಿದ್ದಳು. ಈ ವೇಳೆ ಆಶಯ ಪರಿಚಯವಾಗಿ ಆತನೊಟ್ಟಿಗೆ ಇದ್ದಳು. ಶಾಲಿನಿ ಮತ್ತು ಆಕಾಶ್ ನಂತರ ರಾಜಿ ಮಾಡಿಕೊಂಡು ತಮ್ಮ ಇಬ್ಬರು ಮಕ್ಕಳೊಂದಿಗೆ ಒಟ್ಟಿಗೆ ವಾಸಿಸಲು ಮುಂದಾದರು. ಇದು ಆಶು ಕೋಪಕ್ಕೆ ಕಾರಣವಾಯಿತು. ಶಾಲಿನಿಯ ಗರ್ಭದಲ್ಲಿರುವ ಮಗುವಿನ ತಂದೆ ನಾನೇ ಎಂದು ಹೇಳಿದ್ದ. ಈ ವಿಚಾರವಾಗಿ ಮಹಿಳೆ ಮತ್ತು ಪ್ರಿಯಕರನ ನಡುವೆ ಜಗಳವಾಗಿತ್ತು. ಕೊನೆಗೆ ಆಕೆಯ ಹತ್ಯೆಗೆ ಪ್ರಿಯಕರ ಯೋಜನೆ ರೂಪಿಸಿದ್ದ.

  • ಅನೈತಿಕ ಸಂಬಂಧ ಶಂಕೆ – ಪತ್ನಿಯ ಕತ್ತು ಸೀಳಿ ಕೊಂದ ಪತಿ

    ಅನೈತಿಕ ಸಂಬಂಧ ಶಂಕೆ – ಪತ್ನಿಯ ಕತ್ತು ಸೀಳಿ ಕೊಂದ ಪತಿ

    ಲಕ್ನೋ: ಸಹೋದ್ಯೋಗಿಯೊಂದಿಗೆ ಅನೈತಿಕ ಸಂಬಂಧ ಹೊಂದಿರುವುದಾಗಿ ಶಂಕಿಸಿ ಪತ್ನಿಯ ಕತ್ತು ಸೀಳಿ ಪತಿ ಕ್ರೂರವಾಗಿ ಕೊಂದಿರುವ ಪ್ರಕರಣ ಗುರುವಾರ ಬೆಳಕಿಗೆ ಬಂದಿದೆ.

    ಈ ಘಟನೆಯು ಗುರುವಾರ ಬುಧಾನಾ ಪೊಲೀಸ್ ಠಾಣಾ ವ್ಯಾಪ್ತಿಯ ಕಾರ್ಖಾನೆಯ ಆವರಣದಲ್ಲಿ ನಡೆದಿದೆ. ಆರೋಪಿ ಪತಿ ಮತ್ತು ಆತನ ಪತ್ನಿ ಒಂದೇ ಟೈಲ್ಸ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು ಮತ್ತು ಕಾರ್ಖಾನೆಯ ಆವರಣದಲ್ಲಿಯೇ ವಾಸಿಸುತ್ತಿದ್ದರು.

    ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಂದಿಗೆ ಪತ್ನಿ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನ ಹೊಂದಿದ್ದ ಆರೋಪಿ ಗುರುವಾರ ತಡರಾತ್ರಿ ಪತ್ನಿಯನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಆಕೆಯ ಮೇಲೆ ಹಲ್ಲೆ ನಡೆಸಿ ಕತ್ತು ಸೀಳಿಕೊಂದಿದ್ದಾನೆ ಎಂದು ಸ್ಟೇಷನ್ ಹೌಸ್ ಆಫೀಸರ್(ಎಸ್‍ಎಚ್‍ಒ) ಸಂಜೀವ್ ಕುಮಾರ್ ತಿಳಿಸಿದ್ದಾರೆ.  ಇದನ್ನೂ ಓದಿ:  ಸರ್ಕಾರಿ ಉದ್ಯೋಗ ಇಲ್ಲದೆ ಯುವಕರಲ್ಲಿ ಹತಾಶೆ: ವರುಣ್ ಗಾಂಧಿ

    ಇದೀಗ ಆರೋಪಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದು, ಆತನನ್ನು ಬಂಧಿಸಿದ್ದಾರೆ ಮತ್ತು ಹತ್ಯೆಗೈಯ್ಯಲು ಆರೋಪಿ ಬಳಸಿದ್ದ ಆಯುಧಗಳನ್ನು ವಶಕ್ಕೆ ಒಡೆದುಕೊಂಡಿದ್ದಾರೆ. ಇದನ್ನೂ ಓದಿ: ಪ್ರೇಯಸಿಯ ಪತಿಯನ್ನು ಕೊಂದು ದೇಹವನ್ನು ಛಿದ್ರಗೊಳಿಸಿದ- ಸಿನಿಮಾ ಸ್ಟೈಲ್‌ನಂತೆ ಶವ ಎಸೆದ

  • ವ್ಯಭಿಚಾರ ಕ್ರಿಮಿನಲ್ ಅಪರಾಧವಲ್ಲ: ಸುಪ್ರೀಂ ಕೋರ್ಟ್

    ವ್ಯಭಿಚಾರ ಕ್ರಿಮಿನಲ್ ಅಪರಾಧವಲ್ಲ: ಸುಪ್ರೀಂ ಕೋರ್ಟ್

    ನವದೆಹಲಿ: ಕಾನೂನಿನ ಮುಂದೆ ಗಂಡು-ಹೆಣ್ಣು ಎಂಬ ಬೇಧವಿಲ್ಲ. ವಿವಾಹಿತ ಪುರುಷ ಬೇರೊಬ್ಬ ಮಹಿಳೆಯೊಂದಿಗೆ ಸಂಬಂಧ ಹೊಂದಿರುವುದು ಅಪರಾಧವಲ್ಲ ಅಂತ ಸುಪ್ರೀಂ ಕೋರ್ಟ್‍ನ ಸಂವಿಧಾನಿಕ ಪೀಠ ಮಹತ್ವದ ತೀರ್ಪು ನೀಡಿದೆ.

    ಭಾರತೀಯ ದಂಡ ಸಹಿತೆಯ ಸೆಕ್ಷನ್ 497 ರ ಪ್ರಕಾರ ವಿವಾಹಿತ ಪುರುಷ ಅನೈತಿಕ ಸಂಬಂಧ ಹೊಂದಿದ್ದರೆ ಅಪರಾಧ ಎಂದು ಹೇಳಿತ್ತು. ಇದನ್ನು ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಅಪರಾಧ ಎಂದು ಹೇಳುವ ಈ ಸೆಕ್ಷನ್ ಅಸಂವಿಧಾನಿಕ ಎಂದು ಹೇಳಿದೆ.

    ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾಯಮೂರ್ತಿಗಳಾದ ರೊಹಿನ್‍ಟನ್ ಫಾಲಿ ನಾರಿಮನ್, ಎ ಎಂ ಖಾನ್‍ವಿಲ್ಕರ್, ಡಿ ವೈ ಚಂದ್ರಚೂಡ್ ಮತ್ತು ಇಂದೂ ಮಲ್ಹೋತ್ರ ಅವರನ್ನು ಒಳಗೊಂಡ ಈ ಪೀಠ ಈ ಆದೇಶವನ್ನು ಪ್ರಕಟಿಸಿದೆ. ಹಲವು ದೇಶಗಳು ವ್ಯಭಿಚಾರವನ್ನು ನಿಷೇಧಿಸಿದೆ. ಪ್ರತಿಯೊಬ್ಬ ವ್ಯಕ್ತಿಗೂ ವೈಯಕ್ತಿಕ ಜೀವನ ಇರುತ್ತದೆ. ಗಂಡ ಹೆಂಡತಿಗೆ ಮಾಲೀಕನಲ್ಲ ಎಂದು ಹೇಳುವ ಮೂಲಕ ಸಮಾನತೆಯನ್ನು ಪೀಠ ಸಾರಿದೆ.

    ಸಂವಿಧಾನದ 14ನೇ ವಿಧಿಯ ನೆಲೆಯಲ್ಲಿ (ಕಾನೂನಿನ ಮುಂದೆ ಎಲ್ಲರೂ ಸಮಾನರು) ಐಪಿಸಿಯ ಸೆಕ್ಷನ್ 497 ಕ್ರಿಮಿನಲ್ ಅಪರಾಧವಾಗಿ ಉಳಿಯಲು ಸಾಧ್ಯವಿಲ್ಲ. ಗಂಡು-ಹೆಣ್ಣು ಎಂಬ ಬೇಧವಿಲ್ಲ. ಎಲ್ಲರೂ ಸಂವಿಧಾನದ ಮುಂದೆ ಸಮಾನರು ಎಂದು ಹೇಳಿದೆ.

    ಸುಪ್ರೀಂ ಕೋರ್ಟ್ ತೀರ್ಪಿನ ಕುರಿತು ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ ಹಿರಿಯ ವಕೀಲ ಶ್ಯಾಮ್ ಸುಂದರ್, ನಮ್ಮದು ಸಾಂಸ್ಕೃತಿಕ ದೇಶ. ತೀರ್ಪು ಹಲವು ಗೊಂದಲಗಳನ್ನು ಹೊಂದಿದ್ದು, ಮುಂದೆ ಏನಾಗುತ್ತದೆ ಎಂಬುದರ ಬಗ್ಗೆ ಭಯ ಹುಟ್ಟಿಸುವಂತಿದೆ. ಸದ್ಯ ನನಗೆ ತೀರ್ಪಿನ ಸಂಪೂರ್ಣ ವಿವರ ನೋಡಿಲ್ಲ. ಒಬ್ಬ ವಿವಾಹಿತ ಪುರುಷ ಅಥವಾ ಮಹಿಳೆ ಅನೈತಿಕ ಸಂಬಂಧ ಹೊಂದಿದ್ದಲ್ಲಿ ಅದು ಅವನಿಗೆ/ಆಕೆಗೆ ಮಾಡಿದ ಮೋಸವಾಗಲಿದೆ. ನಂಬಿಕೆ, ಸಂಸ್ಕೃತಿಯನ್ನು ಒಳಗೊಂಡ ಸಮಾಜ. ನೈತಿಕವಾಗಿ ಅನೈತಿಕ ಸಂಬಂಧ ಮೋಸ ಎಂಬುವುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ತಿಳಿಸಿದರು.

    ಏನಿದು ಪ್ರಕರಣ:
    ಮದುವೆ ಬಳಿಕ ಪತಿಯಾದವನು ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ರೆ ಆತನಿಗೆ ಶಿಕ್ಷೆ ವಿಧಿಸಬಹುದಾಗಿತ್ತು. ಮದುವೆಯಾದರೂ ಅನೈತಿಕ ಸಂಬಂಧವನ್ನು ಹೊಂದಿದ್ದರೆ ಅದು ಅಪರಾಧವಾಗುತ್ತಿರಲಿಲ್ಲ. ಹೀಗಾಗಿ ವ್ಯಭಿಚಾರಕ್ಕೆ ಶಿಕ್ಷೆ ವಿಧಿಸುವ ಐಪಿಸಿ ಸೆಕ್ಷನ್ 497 ಸರಿಯೇ ಎಂದು ಪ್ರಶ್ನಿಸಿ ಜೋಸೆಫ್ ಶೈನ್ ಎಂಬವರು ಸಾರ್ವಜನಿಕಾ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ವಿವಾಹಿತ ಪರ ಸ್ತ್ರೀಯೊಂದಿಗೆ ಅಕ್ರಮ ಸಂಬಂಧ ಹೊಂದುವ ಪುರುಷರನ್ನು ಮಾತ್ರವೇ ಶಿಕ್ಷಿಸುವ ಈ ಸೆಕ್ಷನ್ ಅನ್ನು ರದ್ದು ಪಡಿಸಬೇಕೆಂದು ಅವರು ಅರ್ಜಿಯಲ್ಲಿ ಮನವಿ ಮಾಡಿದ್ದರು.

    ಪುರುಷನ ಮೇಲಿನ ಈ ಆರೋಪ ಸಾಬೀತಾದರೆ ಗರಿಷ್ಟ 5 ವರ್ಷ ಜೈಲು ಶಿಕ್ಷೆ ಅಥವಾ ದಂಡವನ್ನು ವಿಧಿಸಲಾಗುತಿತ್ತು. ಕೆಲವೊಮ್ಮೆ ಜೈಲು ಶಿಕ್ಷೆಯ ಜೊತೆ ದಂಡವನ್ನು ಪಾವತಿಸಬೇಕಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

  • ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಪತಿಯನ್ನೇ ಕೊಂದಳಾ ಪತ್ನಿ…?

    ರಾಯಚೂರು: ಸಿಂಧನೂರು ತಾಲೂಕಿನ ಕಲ್ಮಂಗಿ ಗ್ರಾಮದಲ್ಲಿ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಪತಿಯನ್ನೇ ಪತ್ನಿ ಕೊಂದಿರುವ ಘಟನೆ ನಡೆದಿದೆ. 43 ವರ್ಷದ ಬಸವನಗೌಡ ಕೊಲೆಯಾಗಿರುವ ವ್ಯಕ್ತಿ. ಪತ್ನಿ ದೇವಮ್ಮ ಗಂಡನನ್ನ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ ಎಂದು ಅಕ್ಕಪಕ್ಕದ ಮನೆಯ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

    ನಿನ್ನೆ ರಾತ್ರಿ ಗಂಡ ಹೆಂಡತಿ ನಡುವೆ ಜಗಳ ಜೋರಾಗಿ ನಡೆದಿದ್ದು ಪತಿಯ ಕೊಲೆಯಲ್ಲಿ ಅಂತ್ಯವಾಗಿದೆ. ಕುತ್ತಿಗೆಗೆ ಹಗ್ಗ ಬಿಗಿದು ಬಸವನಗೌಡನನ್ನ ಕೊಲೆ ಮಾಡಲಾಗಿದೆ. ಆದ್ರೆ ಪತ್ನಿ ದೇವಮ್ಮ ಮಾತ್ರ ಪತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅವನನ್ನು ನಾನೇ ನೇಣಿನ ಕುಣಿಕೆಯಿಂದ ಕೆಳಗಿಳಿಸಿದ್ದೇನೆ ಎಂದು ಹೇಳಿದ್ದಾಳೆ.

    ಬಸವನಗೌಡನ ಕುತ್ತಿಗೆ ಭಾಗದಲ್ಲಿ ಹಗ್ಗದಿಂದ ಬಿಗಿದಿರುವ ಗುರುತುಗಳಿದ್ದು. ಅಸಹಜ ಸಾವು ಅಂತ ಪ್ರಕರಣ ದಾಖಲಾಗಿದೆ.ಪ್ರಕರಣ ದಾಖಲಿಸಿಕೊಂಡಿರುವ ತುರ್ವಿಹಾಳ ಪೊಲೀಸರು ದೇವಮ್ಮನನ್ನ ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸಿದ್ದಾರೆ.