Tag: eye

  • ಮೂರು ಕಣ್ಣು, 4 ಮೂಗಿನ ರಂಧ್ರ ಹೊಂದಿರುವ ವಿಚಿತ್ರ ಕರು ಜನನ

    ಮೂರು ಕಣ್ಣು, 4 ಮೂಗಿನ ರಂಧ್ರ ಹೊಂದಿರುವ ವಿಚಿತ್ರ ಕರು ಜನನ

    ರಾಯ್ಪುರ: ಹಸುವೊಂದು ಮೂರು ಕಣ್ಣು ಮತ್ತು ನಾಲ್ಕು ಮೂಗಿನ ರಂಧ್ರ ಹೊಂದಿರುವ ವಿಚಿತ್ರ ಕರುವಿಗೆ ಜನ್ಮ ನೀಡಿರುವ ಘಟನೆ ಛತ್ತೀಸ್‌ಗಢದ ರಾಜನಂದಗಾಂವ್ ಜಿಲ್ಲೆಯಲ್ಲಿ ನಡೆದಿದೆ.

    ಸದ್ಯ ಮೂರು ಕಣ್ಣಿನ್ನು ಹೊಂದಿರುವ ಕರುವನ್ನು ನೋಡಲು ದೂರದ ಊರುಗಳಿಂದ ಜನ ಜಮಾಯಿಸುತ್ತಿದ್ದು, ಎಲ್ಲರೂ ಕರುವಿಗೆ ಹೂವಿನ ಮಾಲೆ ಹಾಕಿ, ಕಾಣಿಕೆ ರೂಪದಲ್ಲಿ ಹಣವನ್ನು ಅರ್ಪಿಸಿ ಮಹಾದೇವನ ರೂಪವೆಂದು ಪೂಜಿಸುತ್ತಿದ್ದಾರೆ. ಮತ್ತೊಂದೆಡೆ ಪಶು ವೈದ್ಯರು ಕರು ಸರಿಯಾಗಿ ಬೆಳವಣಿಗೆಯಾಗದ ಕಾರಣ ಹೀಗೆ ಜನಿಸಿದೆ ಎನ್ನುತ್ತಿದ್ದಾರೆ.  ಇದನ್ನೂ ಓದಿ: ದೇಶದಲ್ಲಿ ಒತ್ತಾಯದಿಂದ ಯಾರಿಗೂ Corona Vaccine ನೀಡಲ್ಲ: ಕೇಂದ್ರ ಸರ್ಕಾರ

    ಜನವರಿ 14 ರಂದು ಸಂಜೆ 7 ಗಂಟೆ ಸುಮಾರಿಗೆ ಹಸು ಕರುವಿಗೆ ಜನ್ಮ ನೀಡಿದ್ದು, ಅಂದು ಮಕರ ಸಂಕ್ರಾಂತಿ ಹಬ್ಬದವಾಗಿದ್ದರಿಂದ ಕರುವಿನ ಜನನದ ಮೇಲೆ ಎಲ್ಲರಿಗೂ ನಂಬಿಕೆ ಹೆಚ್ಚಾಗಿದೆ. 3 ಕಣ್ಣಿನ ಕರುವನ್ನು ನೋಡಲು ಜನ ಮುಗಿಬೀಳುತ್ತಿದ್ದು, ಗ್ರಾಮಸ್ಥರು ದೀಪ ಹಚ್ಚಿ, ತೆಂಗಿನಕಾಯಿ ಒಡೆದು ಕರು ಮಹಾದೇವನ ರೂಪ ತಾಳಿದೆ ಎಂದು ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.

    ರೈತ ಹೆಮಂತ್ ಚಂದೇಲ್ ಅವರು ಕೃಷಿ ಕೆಲಸದ ಜೊತೆಗೆ ಹಸು ಸಾಕಣೆಯಲ್ಲಿ ತೊಡಗಿಸಿಕೊಂಡಿದ್ದು, ಜರ್ಸಿ ಹಸುವನ್ನು ಸಾಕಿದ್ದಾರೆ. ಸಂಕ್ರಾತಿ ಹಬ್ಬದಂದು ಹಸು ಕರುವಿಗೆ ಜನ್ಮ ನೀಡಿದ್ದು, ಎರಡು ಕಣ್ಣುಗಳ ಮಧ್ಯೆ ಹಸುವಿನ ಹಣೆಯ ಮೇಲೆ ಮತ್ತೊಂದು ಕಣ್ಣಿದೆ. ವಿಶೇಷವೆಂದರೆ ಈ ಹಸು ಎರಡು ಮೂಗಿನ ರಂಧ್ರಗಳ ಬದಲಿಗೆ 4 ರಂಧ್ರಗಳನ್ನು ಹೊಂದಿದೆ ಹಾಗೂ ಅದರ ಬಾಲ ಜಡೆಯ ಮಾದರಿ ಇದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಪಕ್ಷದಿಂದ ಸಚಿವನ ಉಚ್ಛಾಟಿಸಿದ ಬಿಜೆಪಿ – ಮತ್ತೆ ‘ಕೈ’ ಹಿಡೀತಾರಾ ಹರಕ್ ಸಿಂಗ್ ರಾವತ್?

  • ಪುನೀತ್‍ರಿಂದ ಪ್ರೇರಣೆ ಪಡೆದು ದೇಹದಾನಕ್ಕೆ ಮುಂದಾದ ಕಾಫಿನಾಡ ದಂಪತಿ

    ಪುನೀತ್‍ರಿಂದ ಪ್ರೇರಣೆ ಪಡೆದು ದೇಹದಾನಕ್ಕೆ ಮುಂದಾದ ಕಾಫಿನಾಡ ದಂಪತಿ

    ಚಿಕ್ಕಮಗಳೂರು: ಸತ್ತ ಮೇಲೆ ಈ ದೇಹವನ್ನು ಮಣ್ಣು ತಿನ್ನುತ್ತೆ ಅದರ ಬದಲು ಪುನೀತ್ ಸರ್ ಅವರಂತೆ ದಾನ ಮಾಡಿದರೆ ಈ ನಮ್ಮ ದೇಹದ ಅಂಗಾಂಗಳಿಂದ ಮತ್ತೊಬ್ಬರ ಬದುಕು ಬೆಳಕಾಗುತ್ತೆ ಎಂದು ತಾಲೂಕಿನ ಅರೆನೂರು ಗ್ರಾಮದ ಪುನೀತ್ ರಾಜ್‍ಕುಮಾರ್ ಅವರ ಅಭಿಮಾನಿ ದಂಪತಿ ತಮ್ಮ ದೇಹವನ್ನೇ ದಾನ ಮಾಡಲು ಮುಂದಾಗಿದ್ದಾರೆ.

    ತಾಲೂಕಿನ ಅರೆನೂರು ಗ್ರಾಮದ ಸುಪ್ರಿತ್ ಹಾಗೂ ಲಕ್ಷ್ಮಿ ದಂಪತಿ ತಮ್ಮ ದೇಹವನ್ನು ಉಡುಪಿಯ KMC ಆಸ್ಪತ್ರೆಗೆ ನೀಡಲು ಮುಂದಾಗಿದ್ದಾರೆ. ನಮ್ಮ ಈ ನಡೆಗೆ ಪುನೀತ್ ರಾಜ್ ಕುಮಾರ್ ಅವರ ಪ್ರೇರೇಪಣೆಯೇ ಕಾರಣ ಎಂದು ಪಬ್ಲಿಕ್ ಟಿವಿ ಜೊತೆ ತಮ್ಮ ನಿರ್ಧಾರದ ಕುರಿತು ಮಾಹಿತಿ ನೀಡಿದ ದಂಪತಿ, ಮನುಷ್ಯನಾಗಿ ಹುಟ್ಟಿ, ಸತ್ತ ಬಳಿಕ ಈ ದೇಹವನ್ನು ಮಣ್ಣಲ್ಲಿ ಕೊಳೆಸುವುದಕ್ಕಿಂತ ನಮ್ಮ ದೇಹದ ಅಂಗಾಂಗಳು ಮತ್ತೊಬ್ಬರಿಗೆ ಉಪಯೋಗಕ್ಕೆ ಬರಬೇಕು ಎಂದು ಈ ನಿರ್ಧಾರಕ್ಕೆ ಬಂದಿದ್ದೇವೆ. ನಾವು ಚಿಕ್ಕಂದಿನಿಂದಲೂ ಪುನೀತ್ ಸರ್ ಸಿನಿಮಾ ನೋಡಿಕೊಂಡು ಬಂದಿದ್ದೇವೆ. ಒಂದೊಂದು ಸಿನಿಮಾಗಳು ಒಂದಕ್ಕಿಂತ ಒಂದು ಚೆನ್ನಾಗಿವೆ. ನಮ್ಮ ಈ ನಡೆಗೆ ಅವರೇ ಪ್ರೇರೇಪಣೆ ಎಂದು ತಮ್ಮ ಮನದ ಮಾತು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಅಪ್ಪು ಪ್ರೇರಣೆ – ಅಭಿಮಾನಿಗಳಿಂದ ನೇತ್ರದಾನದ ಜೊತೆಗೆ ದೇಹದಾನಕ್ಕೆ ನೋಂದಣಿ

    ಪುನೀತ್ ಅವರು ಅಷ್ಟು ದೊಡ್ಡ ವ್ಯಕ್ತಿಯಾದರೂ ಅವರ ಸಮಾಜಮುಖಿ ಕಾರ್ಯಗಳು ಬಹುತೇಕರಿಗೆ ಗೊತ್ತಿರಲಿಲ್ಲ. ನಮಗೂ ಗೊತ್ತಿರಲಿಲ್ಲ. ಅವರು ಸತ್ತ ಬಳಿಕವಷ್ಟೆ ಗೊತ್ತಾಗಿದ್ದು. ಅವರೇ ತಮ್ಮ ಕಣ್ಣುಗಳನ್ನು ದಾನ ಮಾಡಿದ್ದಾರೆ. ನಮ್ಮ ದೇಹವನ್ನು ಮಣ್ಣು ತಿನ್ನೋದಕ್ಕಿಂತ ನಾಲ್ಕು ಜನಕ್ಕೆ ಬೆಳಕಾಗಿಸಬಹುದು ಎಂದು ಈ ನಿರ್ಧಾರಕ್ಕೆ ಬಂದಿದ್ದೇವೆ ಎಂದರು. ಇದನ್ನೂ ಓದಿ: ಅಪ್ಪು ಪ್ರೇರಣೆ – ಒಂದೇ ಗ್ರಾಮದಲ್ಲಿ 60ಕ್ಕೂ ಹೆಚ್ಚು ಮಂದಿ ನೇತ್ರದಾನ

    ದೇಹದಾನಕ್ಕೆ ಮುಂದಾಗಿರುವ ಲಕ್ಷ್ಮಿ ಪ್ರಸ್ತುತ ಗ್ರಾಮ ಪಂಚಾಯತ್ ಅಧ್ಯಕ್ಷೆ ಕೂಡ. ಗಂಡ ಹೆಂಡತಿ ಮಾತನಾಡಿಕೊಂಡು, ಮನೆಯವರ ಒಪ್ಪಿಗೆ ಪಡೆದು ಈ ನಿರ್ಧಾರಕ್ಕೆ ಬಂದಿದ್ದಾರೆ. ಇಂದು ಪುನೀತ್ ರಾಜ್‍ಕುಮಾರ್ ಪತ್ನಿ ಅಶ್ವಿನಿಯವರ ಊರಾದ ತಾಲೂಕಿನ ಮಲ್ಲಂದೂರು ಸಮೀಪದ ಭಾಗ್‍ಮನೆ ಬಳಿ ಇರುವ ಆವುತಿ ಗ್ರಾಮದಲ್ಲಿ ಪುನೀತ್ ರಾಜ್‍ಕುಮಾರ್‍ ಗೆ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಈ ವೇಳೆ, ಸುಮಾರು 40ಕ್ಕೂ ಹೆಚ್ಚು ಜನ ನೇತ್ರದಾನಕ್ಕೆ ಮುಂದಾಗಿದ್ದಾರೆ. ಹೆಸರು ನೋಂದಾಯಿಸಿಕೊಂಡವರು ನಮ್ಮ ಬಳಿಕ ನಮ್ಮ ಕಣ್ಣುಗಳು ಮತ್ತೊಂದು ಜೀವ ಜಗತ್ತನ್ನು ನೋಡಲು ಸಹಕಾರಿಯಾಗಲಿದೆ. ಇದಕ್ಕೆ ನಮಗೆ ಪುನೀತ್ ರಾಜ್ ಕುಮಾರ್ ಅವರೇ ಪ್ರೇರಣೆ ಎಂದು ನೇತ್ರದಾನಕ್ಕೆ ಮುಂದಾಗಿದ್ದಾರೆ. ಬದುಕಿದ್ದಷ್ಟು ದಿನ ಭಾವನಾತ್ಮಕ ಜೀವಿಯಾಗಿದ್ದ ಪವರ್ ಸ್ಟಾರ್ ಪುನೀತ್ ಸಾವಿನ ಬಳಿಕ ಸಮಾಜಮುಖಿ ಸೇವೆಯಿಂದ ಜನಮಾನಸದಲ್ಲಿ ಅಜರಾಮರವಾಗಿ ಉಳಿದಿದ್ದಾರೆ.

  • ನೇತ್ರದಾನಕ್ಕೆ ಜಮೀರ್ ಅಹಮ್ಮದ್ ಖಾನ್ ಸಹಿ

    ನೇತ್ರದಾನಕ್ಕೆ ಜಮೀರ್ ಅಹಮ್ಮದ್ ಖಾನ್ ಸಹಿ

    ಬೆಂಗಳೂರು: ರಾಜ್ಯದಲ್ಲಿ ಕೆಲದಿನಗಳಿಂದ ನೇತ್ರದಾನ, ರಕ್ತದಾನ, ಹೆಚ್ಚಾಗುತ್ತಿದ್ದಂತೆ ಇಂದು ಶಾಸಕ ಜಮೀರ್ ಅಹಮ್ಮದ್ ಖಾನ್ ನೇತ್ರದಾನಕ್ಕೆ ಮುಂದಾಗಿದ್ದಾರೆ.

    ಮಿಂಟೋ ಆಸ್ಪತ್ರೆಗೆ ತೆರಳಿ ಜಮೀರ್ ಅಹಮ್ಮದ್ ಖಾನ್ ನೇತ್ರದಾನಕ್ಕೆ ಸಹಿ ಹಾಕಿದ್ದಾರೆ. ಸ್ಯಾಂಡಲ್‍ವುಡ್ ಪವರ್‌ಸ್ಟಾರ್ ಪುನೀತ್ ರಾಜ್‍ಕುಮಾರ್ ನಿಧನರಾದ ಬಳಿಕ ನೇತ್ರದಾನ ಮಾಡಿದರು. ಬಳಿಕ ಅವರ ಅಭಿಮಾನಿಗಳು ಸಹಿತ ಸಾವಿರಾರು ಮಂದಿ ನೇತ್ರದಾನ ಮಾಡಲು ಮುಂದಾಗಿದ್ದಾರೆ. ಇದನ್ನೂ ಓದಿ: ಇತಿಹಾಸ ಬರೆದ ಪವರ್ ಸ್ಟಾರ್ ಪುಣ್ಯಸ್ಮರಣೆ- ದಾಖಲೆ ಪ್ರಮಾಣದಲ್ಲಿ ನೇತ್ರದಾನಕ್ಕೆ ಅರ್ಜಿ

    ನಿನ್ನೆ ಪುನೀತ್ ರಾಜ್ ಕುಮಾರ್ ಪುಣ್ಯಸ್ಮರಣೆ ಹಿನ್ನೆಲೆ ಅಭಿಮಾನಿಗಳಿಗಾಗಿ ಅರಮನೆ ಮೈದಾನದಲ್ಲಿ ಅನ್ನಸಂತರ್ಪಣೆ ಜೊತೆಗೆ ನೇತ್ರದಾನ ಮತ್ತು ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಈ ವೇಳೆ ಬರೋಬ್ಬರಿ 3,100ಕ್ಕೂ ಹೆಚ್ಚು ಅಭಿಮಾನಿಗಳು ನೇತ್ರದಾನಕ್ಕೆ ಅರ್ಜಿ ಹಾಕುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ. ಈ ಬಗ್ಗೆ ಲಯನ್ ಸಂಸ್ಥೆ ಎನ್ವಿರ್ನಾಮೆಂಟ್ ಅಧ್ಯಕ್ಷರಾದ ಪ್ರಕೃತಿ ಪ್ರಸನ್ನ ಮಾತನಾಡಿ, ಒಂದೇ ದಿನದಲ್ಲಿ 3,100ಕ್ಕೂ ಹೆಚ್ಚು ನೇತ್ರದಾನ ಅರ್ಜಿ ಸ್ವೀಕಾರ ಮಾಡಿದ್ದೇವೆ. ಈ ದಿನ ನಿಜಕ್ಕೂ ಐತಿಹಾಸಿಕ ದಿನ. ಜೊತೆಗೆ 355 ಕ್ಕೂ ಹೆಚ್ಚು ಜನ ರಕ್ತದಾನ ಮಾಡಿದ್ದಾರೆ. ಇತಿಹಾಸದಲ್ಲೇ ಮೊದಲ ಬಾರಿಗೆ ಇಷ್ಟು ಜನ ರಕ್ತದಾನ ಮಾಡಿರುವುದಲ್ಲದೇ, ನೇತ್ರದಾನಕ್ಕೆ ಅರ್ಜಿ ಸಲ್ಲಿಸಿರುವುದನ್ನು ನೋಡುತ್ತಿದ್ದೇವೆ. ನಿನ್ನೆ ಕೂಡ ವಿಐಪಿಗಳು 350 ಮಂದಿ ನೇತ್ರದಾನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ನಾವು ಇಲ್ಲಿವರೆಗೆ ಎಷ್ಟೋ ಶಿಬಿರಗಳನ್ನು ಮಾಡಿದ್ದೇವೆ. ಇಷ್ಟು ಪ್ರಮಾಣದಲ್ಲಿ ನೋಂದಣಿ ಆಗಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕುಮಾರಸ್ವಾಮಿ ಬ್ರದರ್, ಬ್ರದರ್‌ ಅಂತ ಕತ್ತು ಕೊಯ್ಯೋದು: ಜಮೀರ್ ಅಹ್ಮದ್

     

  • ನೇತ್ರದಾನ ಜನಾಂದೋಲನ ಆಗಬೇಕು: ಡಾ.ಕೆ.ಸುಧಾಕರ್

    ನೇತ್ರದಾನ ಜನಾಂದೋಲನ ಆಗಬೇಕು: ಡಾ.ಕೆ.ಸುಧಾಕರ್

    – ಎರಡನೇ ಡೋಸ್ ಲಸಿಕೆ ಪಡೆಯಲು ಉದಾಸೀನ ಬೇಡ

    ಬೆಂಗಳೂರು: ನೇತ್ರದಾನದ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚು ಅರಿವು ಮೂಡಿಸಿ ಜನಾಂದೋಲನವಾಗುವಂತೆ ಮಾಡಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

    ಮಿಂಟೋ ಕಣ್ಣಾಸ್ಪತ್ರೆಯ 125 ನೇ ವಾರ್ಷಿಕೋತ್ಸವ ಆಚರಣೆಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ನಿಧನರಾದ ನಟ ಪುನೀತ್ ರಾಜ್‍ಕುಮಾರ್ ನೇತ್ರದಾನ ಮಾಡಿ ನಾಲ್ಕು ಜನರಿಗೆ ದೃಷ್ಟಿ ನೀಡಿದ್ದಾರೆ. ತಂತ್ರಜ್ಞಾನ ವಿಶಿಷ್ಟವಾಗಿ ಬೆಳೆದಿರುವುದರಿಂದ ಒಬ್ಬರು ನಾಲ್ಕು ಜನರಿಗೆ ದೃಷ್ಟಿ ನೀಡಲು ಸಾಧ್ಯವಾಗುತ್ತದೆ. ದೇಶದಲ್ಲಿ 3-4 ಕೋಟಿ ಜನರಿಗೆ ಅಂಧತ್ವ ಇದೆ. ಆದ್ದರಿಂದ ದಾನಿಗಳ ಸಂಖ್ಯೆ ಹೆಚ್ಚಬೇಕಿದೆ. ಮರಣ ಹೊಂದಿದ ನಂತರವೂ ನಾಲ್ಕು ಜನರಿಗೆ ದೃಷ್ಟಿ ನೀಡಿ ಅವರಿಗೆ ಜಗತ್ತು ನೋಡಲು ಅವಕಾಶ ನೀಡಬೇಕು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ಅಂಗಾಂಗ ದಾನಕ್ಕೆ ಪ್ರತಿಜ್ಞೆ ಮಾಡಿದ್ದಾರೆ. ನಾನು ಕೂಡ ಕಳೆದ ವರ್ಷವೇ ನೇತ್ರದಾನ ಮಾಡಲು ಪ್ರತಿಜ್ಞೆ ಮಾಡಿದ್ದೇನೆ. ಇದನ್ನು ಆಂದೋಲನದಂತೆ ನಡೆಸಿ ನೇತ್ರದಾನದ ಬಗ್ಗೆ ಅರಿವು ಮೂಡಿಸಬೇಕು ಎಂದರು.

    ಕೋವಿಡ್ ಸಮಯದಲ್ಲಿ ಮಿಂಟೋ, ವಿಕ್ಟೋರಿಯಾ ಆಸ್ಪತ್ರೆಯನ್ನು ಮೀಸಲಿಡಲಾಗಿತ್ತು. ಆದರೆ ಈಗ ಎಲ್ಲ ಬಗೆಯ ಚಿಕಿತ್ಸೆ ನೀಡಲಾಗುತ್ತಿದೆ. ಜನರು ಧೈರ್ಯವಾಗಿ ಬಂದು ಇತರೆ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯಬಹುದು ಎಂದರು. ಇದನ್ನೂ ಓದಿ: 46 ವರ್ಷಕ್ಕೆ ನನ್ನ ತಮ್ಮ ದೇವರಿಗೆ ತುಂಬಾ ಇಷ್ಟ ಆಗ್ಬಿಟ್ಟ: ಶಿವಣ್ಣ

    ಅನೇಕ ವೈದ್ಯರು, ಶುಶ್ರೂಷಕರು, ವೈದ್ಯಕೀಯೇತರ ಸಿಬ್ಬಂದಿಯ ಶ್ರಮದಿಂದಾಗಿ ಮಿಂಟೋ ಕಣ್ಣಾಸ್ಪತ್ರೆಯು 125 ನೇ ವರ್ಷಕ್ಕೆ ಕಾಲಿಟ್ಟಿದೆ. ಇಂತಹ ಸಂಸ್ಥೆ ಇರುವುದು ರಾಜ್ಯಕ್ಕೆ ಹೆಮ್ಮೆಯ ವಿಚಾರ. 1896 ರಲ್ಲಿ ಡಿಸ್ಪೆನ್ಸರಿಯಾಗಿ ಆರಂಭವಾದ ಸಂಸ್ಥೆ 125 ವರ್ಷದವರೆಗೂ ಸೇವೆ ನೀಡಿದೆ. ಪ್ಲೇಗ್ ನಿಂದ ಆರಂಭವಾಗಿ ಇತ್ತೀಚೆಗೆ ಕೋವಿಡ್ ತಡೆಗಟ್ಟುವವರೆಗೂ ಈ ಸಂಸ್ಥೆ ಕಾರ್ಯನಿರ್ವಹಿಸಿದೆ. ಇಂದು ಒಪಿಡಿಗೆ ಸುಮಾರು 800 ರೋಗಿಗಳು ಬರುತ್ತಿದ್ದಾರೆ. ವರ್ಷಕ್ಕೆ ಸುಮಾರು 10 ಸಾವಿರ ರೋಗಿಗಳಿಗೆ ಶಸ್ತ್ರಚಿಕಿತ್ಸೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

    ರಾಜ್ಯದಲ್ಲಿ ಕೊರೊನಾ ಲಸಿಕೆಯ ಮೊದಲ ಡೋಸ್ 89% ಹಾಗೂ ಎರಡನೇ ಡೋಸ್ 48% ರಷ್ಟು ಪ್ರಗತಿ ಕಂಡಿದೆ. ಎರಡನೇ ಡೋಸ್ ಪಡೆಯಲು ಜನರು ಉದಾಸೀನ ಮಾಡಬಾರದು. ಕೋವಿಡ್ ವಿರುದ್ಧ ಸಂಪೂರ್ಣ ರೋಗ ನಿರೋಧಕ ಶಕ್ತಿ ಬರಲು ಎರಡೂ ಡೋಸ್ ಪಡೆಯಬೇಕು. ಕೋವಿಡ್ ಸಂಪೂರ್ಣ ನಿರ್ಮೂಲನೆಯಾಗುವವರೆಗೂ ಎಚ್ಚರವಾಗಿರಬೇಕು ಎಂದರು. ಇದನ್ನೂ ಓದಿ: ಅನ್ನ ಸಂತರ್ಪಣೆ ವೇಳೆ ಪುನೀತ್ ನೆನೆದು ಕಣ್ಣೀರಿಟ್ಟ ಅಶ್ವಿನಿ

    ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೆ ಮಕ್ಕಳ ಲಸಿಕೆ ನೀಡಲಿದೆ. ಮಕ್ಕಳಲ್ಲಿ ಪ್ರಾಶಸ್ತ್ಯದಲ್ಲಿ ಲಸಿಕೆ ನೀಡಲಾಗುವುದು. ಆರೋಗ್ಯ ನಂದನ ಕಾರ್ಯಕ್ರಮದಡಿ ಈಗಾಗಲೇ ಆರೋಗ್ಯ ಶಿಬಿರ ಮಾಡಿ ಪಟ್ಟಿ ಮಾಡಲಾಗಿದೆ. ಮುಂದಿನ ವಾರ ಲಸಿಕೆಯನ್ನು ನಿರೀಕ್ಷಿಸುತ್ತಿದ್ದೇವೆ. ಆರೂಮುಕ್ಕಾಲು ಕೋಟಿ ಲಸಿಕೆಯನ್ನು ರಾಜ್ಯದಲ್ಲಿ ನೀಡಲಾಗಿದೆ. ಲಸಿಕೆ ವಿತರಣೆ ಈಗ ಕಷ್ಟದ ವಿಚಾರವಲ್ಲ ಎಂದರು. ಇದನ್ನೂ ಓದಿ: ಖುದ್ದು ರಕ್ತದಾನ ಮಾಡಿ ಮಾದರಿಯಾದ ನಟ ಶಿವರಾಜ್ ಕುಮಾರ್

  • ನಾಲ್ವರ ಬಾಳಿಗೆ ಬೆಳಕಾದ ಅಪ್ಪು

    ನಾಲ್ವರ ಬಾಳಿಗೆ ಬೆಳಕಾದ ಅಪ್ಪು

    ಬೆಂಗಳೂರು: ದೊಡ್ಮನೆ ಹುಡುಗ ಪುನೀತ್ ರಾಜ್ ಕುಮಾರ್ ಅವರ ಕಣ್ಣನ್ನು ನಾಲ್ವರಿಗೆ ಅಳವಡಿಸಿದ್ದೇವೆ ಎಂದು ನಾರಾಯಣ ನೇತ್ರಾಲಯ ಡಾ. ಭುಜಂಗಶೆಟ್ಟಿ ಅವರು ಹೇಳಿದ್ದಾರೆ.

     

    ಸ್ಯಾಂಡಲ್‍ವುಡ್ ನಟ ಪುನೀತ್ ರಾಜ್‍ಕುಮಾರ್ ಹೃದಯ ಸ್ತಂಭದಿಂದ ಕುಟುಂಬ, ಸ್ನೇಹಿತರು ಮತ್ತು ಅಭಿಮಾನಿಗಳನ್ನು ಅಗಲಿದ್ದಾರೆ. ಆದರೆ ಸತ್ತ ಮೇಲೂ ತಮ್ಮ ಕಣ್ಣುಗಳನ್ನು ದಾನ ಮಾಡುವ ಮಾನವೀಯತೆ ಮೆರೆದಿದ್ದಾರೆ. ಇದೀಗ ಪುನೀತ್ ಅವರ ಕಣ್ಣು ನಾಲ್ವರ ಅಂಧಕಾರವನ್ನು ದೂರ ಮಾಡಿದೆ. ಇದನ್ನೂ ಓದಿ: ಪುನೀತ್ ಓದಿಸುತ್ತಿದ್ದ 1,800 ಮಕ್ಕಳ ಜವಾಬ್ದಾರಿ ಹೊತ್ತ ನಟ ವಿಶಾಲ್

    ಈ ಕುರಿತಂತೆ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಾರಾಯಣ ನೇತ್ರಾಲಯ ಡಾ.ಭುಜಂಗಶೆಟ್ಟಿ ಅವರು, ರಾಜ್ ಕುಮಾರ್ ಕುಟುಂಬದವರಿಗೆ ವಂದನೆ ಹೇಳೋಕೆ ಬಯಸುತ್ತೇನೆ. ಮೊದಲಿಗೆ ರಾಜ್‍ಕುಮಾರ್ ಅವರು ಬಂದು ನೇತ್ರಾದಾನ ಶುರು ಮಾಡಿದರು. ಬಳಿಕ ಪಾರ್ವತಮ್ಮನವರು, ಇದೀಗ ಪುನೀತ್ ತಮ್ಮ ಕಣ್ಣುಗಳನ್ನು ದಾನ ಮಾಡಿದ್ದಾರೆ. ಹೀಗಾಗಿ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದರು. ಇದನ್ನೂ ಓದಿ: ಅಪ್ಪು ಹುಟ್ಟುಹಬ್ಬಕ್ಕೆ ಜೇಮ್ಸ್ ಸಿನಿಮಾ ರಿಲೀಸ್?

    ಶನಿವಾರವೇ ಅಪರೇಷನ್ ಮಾಡಿ ಪುನೀತ್ ಅವರ ಕಣ್ಣನ್ನು ಬೇರೆಯವರಿಗೆ ನೀಡಿದ್ದೇವೆ. ಸಾಮಾನ್ಯವಾಗಿ ಕಣ್ಣುದಾನ ಮಾಡಿದರೆ ಇಬ್ಬರಿಗೆ ಕೊಡುತ್ತೇವೆ. ಆದರೆ ಅಪ್ಪು ಕಣ್ಣುಗಳನ್ನು ನಾಲ್ಕು ಜನರಿಗೆ ಅಳವಡಿಸಿದ್ದೇವೆ. ಕರ್ನಿಯಾದ ಮುಂಭಾಗ ಮತ್ತು ಹಿಂಭಾಗದ ಪದರವನ್ನು ಎರಡು ಭಾಗವಾಗಿ ಮಾಡಿ ನಾಲ್ಕು ಜನರಿಗೆ ಕೊಟ್ಟಿದ್ದೇವೆ. ಅಂದರೆ ಕಣ್ಣಿನ ಮುಂದಿನ ಭಾಗ ಮತ್ತು ಬ್ಯಾಕ್ ಪೋಷನ್ ಬೇರ್ಪಡಿಸಿ ಅವಶ್ಯಕತೆ ಇರುವ ನಾಲ್ವರಿಗೆ ಕೊಟ್ಟಿದ್ದೇವೆ. ಒಬ್ಬರ ಕಣ್ಣನ್ನು ಒಂದೇ ದಿನ, ನಾಲ್ವರಿಗೆ ಕೊಟ್ಟಿರುವುದು ಇದೇ ಮೊದಲಾಗಿದೆ. ನಾಲ್ವರು ಇದೀಗ ತುಂಬಾ ಚೆನ್ನಾಗಿದ್ದಾರೆ. ಇದಕ್ಕೆ ಕಣ್ಣು ತುಂಬಾ ಚೆನ್ನಾಗಿ ಇರಬೇಕಾಗುತ್ತದೆ. ಪುನೀತ್ ಕಣ್ಣು ತುಂಬಾ ಚೆನ್ನಾಗಿದ್ದ ಕಾರಣ ಇದನ್ನು ನಾಲ್ವರಿಗೆ ನೀಡಲು ಸಾಧ್ಯವಾಯಿತು ಎಂದು ತಿಳಿಸಿದರು.

    ಐದು ಜನರ ತಂಡದ ಡಾಕ್ಟರ್‌ಗಳು ಆಪರೇಷನ್ ಅನ್ನು ಮಾಡಿದ್ದಾರೆ. ಈ ಮೊದಲು ಈ ರೀತಿಯ ಆಪರೇಷನ್ ಅನ್ನು ಬೇರೆ, ಬೇರೆ ದಿನ ಮಾಡಲಾಗುತ್ತಿತ್ತು. ಆದರೆ ಅಪ್ಪು ಕಣ್ಣಿಗೆ ಪೂರಕವಾದ ನಾಲ್ವರ ಕಣ್ಣುಗಳಿಗೆ ಮ್ಯಾಚ್ ಆಗಬೇಕು. ಇದೀಗ ಒಬ್ಬ ಯುವತಿ, ಮೂವರು ಯುವಕರಿಗೆ ಅಪ್ಪು ಕಣ್ಣು ನೀಡಲಾಗಿದೆ. ಬೆಳಗ್ಗೆ ಹನ್ನೊಂದು ಗಂಟೆಯಿಂದ ಸಂಜೆ ಆರು ಗಂಟೆ ತನಕ ಆಪರೇಷನ್ ಮಾಡಲಾಗಿದೆ ಎಂದು ಹೇಳಿದರು. ಇದನ್ನೂ ಓದಿ:  ಉಪ್ಪಿನಲ್ಲಿ ಚಿತ್ರ ಬಿಡಿಸಿ ಅಪ್ಪುಗೆ ವಿಶೇಷ ವಿದಾಯ ಹೇಳಿದ ತೆಲುಗು ಅಭಿಮಾನಿ

  • ಇಬ್ಬರು ಯುವಕರಿಗೆ ಸಂಚಾರಿ ವಿಜಯ್ ಕಣ್ಣು ಜೋಡಣೆ

    ಇಬ್ಬರು ಯುವಕರಿಗೆ ಸಂಚಾರಿ ವಿಜಯ್ ಕಣ್ಣು ಜೋಡಣೆ

    – ಮಿಂಟೋ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಯಶಸ್ವಿ

    ಬೆಂಗಳೂರು: ಸಂಚಾರಿ ವಿಜಯ್ ಅವರ ನಿಧನಕ್ಕೆ ಇಡೀ ರಾಜ್ಯವೇ ಕಂಬನಿ ಮಿಡಿಯುತ್ತಿದೆ. ಅವರ ಸಾಮಾಜಿಕ ಕಾರ್ಯ, ನಟನೆ, ಒಳ್ಳೆಯ ಗುಣ ಇರುವಂತಹ ನಟನನ್ನ ಕಳೆದುಕೊಂಡು ಕನ್ನಡಿಗರು ಕಣ್ಣೀರು ಹಾಕುತ್ತಾ ಇದ್ದಾರೆ. ಆದರೆ ಈಗ ಅವರ ನಿಧನದ ನಂತರ ಮಾಡಿರುವ ಮಹಾತ್ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತಿವೆ. ಅವರ ಅಂಗಾಂಗ ದಾನದ ನಿರ್ಧಾರಕ್ಕೆ ವೈದ್ಯರು ಅವರ ಪೋಷಕರಿಗೆ ಧನ್ಯವಾದ ತಿಳಿಸುತ್ತಾ ಇದ್ದಾರೆ.

    ಸಂಚಾರಿ ವಿಜಯ್ ಅವರ ಕಣ್ಣುಗಳನ್ನ ಮಿಂಟೋ ಆಸ್ಪತ್ರೆಯಲ್ಲಿ ಇಬ್ಬರು ಯುವಕರಿಗೆ ಜೋಡಣೆ ಮಾಡಲಾಗಿದೆ. ಸಂಚಾರಿ ವಿಜಯ್ ಅವರ ವಯಸ್ಸಿನ ಒಬ್ಬರಿಗೆ ಮತ್ತು ಅವರಿಗಿಂತ ಚಿಕ್ಕ ವಯಸ್ಸಿನ ಮತ್ತೊಬ್ಬ ವಯಸ್ಸಿನ ಯುವಕನಿಗೆ ಕಣ್ಣು ಜೋಡಣೆ ಮಾಡಲಾಗಿದೆ. ಇಂದು ಬೆಳಗ್ಗೆಯೇ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ಮಾಡಿರೋದಾಗಿ ಮಿಂಟೋ ಆಸ್ಪತ್ರೆ ನಿರ್ದೇಶಕಿ ಡಾ. ಸುಜಾತ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ. ಇದನ್ನೂ ಓದಿ: ಅಮೆರಿಕದ ರಾಯಭಾರ ಕಚೇರಿಯಿಂದ ವಿಜಯ್ ನಿಧನಕ್ಕೆ ಕನ್ನಡದಲ್ಲೇ ಸಂತಾಪ

    ಈ ಬಗ್ಗೆ ಮಾತನಾಡಿದ ಡಾ. ಸುಜಾತ ರಾಥೋಡ್, ನಮ್ಮಲ್ಲಿ ಇಬ್ಬರಿಗೆ ಕಣ್ಣನ್ನ ಹಾಕಲಾಗಿದೆ. ಇಬ್ಬರೂ ಕೂಡ ಅಗತ್ಯವಾಗಿ ಬೇಕಾದ ರೋಗಿಗಳಿಗೆ ಕಣ್ಣು ಹಾಕಲಾಗಿದೆ. ಬ್ರೈನ್ ಡೆಡ್ ಆದಾಗ ಕಣ್ಣುಗಳು ಉತ್ತಮ ಗುಣಮಟ್ಟದಲ್ಲೇ ಇರುತ್ತೆ ವಿಜಯ್ ಕಣ್ಣುಗಳು ಉತ್ತಮವಾಗಿ ಇದ್ದವು. ಇದನ್ನೂ ಓದಿ: ದೇವರು ನಿಜವಾಗ್ಲೂ ಕ್ರೂರಿ ಅಂದ್ರು ಮೇಘನಾ..!

    ವಿಜಯ್ ಅವರ ಕಣ್ಣಿನಿಂದ ಇಬ್ಬರು ಯುವಕರು ಇದೀಗ ಜಗತ್ತನ್ನ ನೋಡುವಂತಾಗಿದೆ. ಆಪರೇಷನ್ ಆಗಿದ್ದು 6 ರಿಂದ 8 ಗಂಟೆ ಬಳಿಕ ದೃಷ್ಟಿ ಬರಲಿದೆ. 24 ಗಂಟೆಯೊಳಗೆ ಅವರ ದೃಷ್ಟಿ ಯಾವ ಪ್ರಮಾಣದಲ್ಲಿದೆ ಗೊತ್ತಾಗತ್ತೆ ಈ ನಿರ್ಧಾರ ತೆಗೆದುಕೊಂಡ ಕುಟುಂಬಸ್ಥರಿಗೆ ಕೃತಜ್ಞತೆ ಸಲ್ಲಿಸುತ್ತೆವೆ ಎಂದು ವೈದ್ಯರು ಹೇಳಿದ್ದಾರೆ. ಇದನ್ನೂ ಓದಿ: ಸ್ನೇಹಿತ ರಘು ತೋಟದಲ್ಲೇ ಮಣ್ಣಲ್ಲಿ ಮಣ್ಣಾದ ವಿಜಯ್

  • ಬ್ಲ್ಯಾಕ್ ಫಂಗಸ್‍ನಿಂದ ಕಣ್ಣು ಕಳೆದುಕೊಂಡ ವ್ಯಕ್ತಿ

    ಬ್ಲ್ಯಾಕ್ ಫಂಗಸ್‍ನಿಂದ ಕಣ್ಣು ಕಳೆದುಕೊಂಡ ವ್ಯಕ್ತಿ

    – ಕುಟುಂಬಸ್ಥರ ಅನುಮತಿ ಪಡೆದು ಆಪರೇಷನ್

    ಕಲಬುರಗಿ: ಕೊರೊನಾದಿಂದ ತತ್ತರಿಸಿದ ಕಲಬುರಗಿಯಲ್ಲಿ ಇದೀಗ ಬ್ಲ್ಯಾಕ್ ಫಂಗಸ್ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸದ್ಯ ಬ್ಲ್ಯಾಕ್ ಫಂಗಸ್‍ಗೇ ಗುರಿಯಾಗಿದ ವ್ಯಕ್ತಿಯೊಬ್ಬರ ಬಲಗಣ್ಣು ತೆಗೆದು ವೈದ್ಯರು ಅವರ ಜೀವ ಉಳಿಸಿದ್ದಾರೆ.

    ಕಲಬುರಗಿಯ ನಿವಾಸಿಯಾದ ಅನಿಲ್ ಕುಮಾರ್ ಅವರಿಗೆ 8 ದಿನಗಳ ಹಿಂದೆ ಬಲಗಣ್ಣಿನ ಬಳಿ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡಿದೆ. ಆದಾದ ಬಳಿಕ ಕಲಬುರಗಿ ನಗರದ ಖಾಸಗಿ ಆಸ್ಪತ್ರೆಗೆ ಅವರ ಸಂಬಂಧಿಕರು ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ನಂತರ ಆತನ ಆರೋಗ್ಯ ತಪಾಸಣೆ ಮಾಡಿದ ವೈದ್ಯರು ಔಷಧಿ ಮೂಲಕ ಬ್ಲ್ಯಾಕ್ ಫಂಗಸ್ ಕಡಿಮೆ ಮಾಡಲು ಎಲ್ಲಾ ರೀತಿಯ ಪ್ರಯತ್ನಗಳು ನಡೆಸಿದ್ದಾರೆ. ಆದರೆ ಎಷ್ಟೇ ಔಷಧಿ ಇಂಜಕ್ಷನ್ ನೀಡಿದರೂ, ಬ್ಲ್ಯಾಕ್ ಫಂಗಸ್ ಮಾತ್ರ ಕಡಿಮೆಯಾಗಲಿಲ್ಲ.

    ಯಾವ ಔಷಧಿ ನೀಡಿದರೂ ಅನಿಕುಮಾರ್ ಆರೋಗ್ಯದಲ್ಲಿ ಚೇತರಿಕೆ ಕಾಣದಿದ್ದಾಗ, ಕುಟುಂಬಸ್ಥರ ಜೊತೆ ಚರ್ಚಿಸಿ ಬ್ಲ್ಯಾಕ್ ಫಂಗಸ್ ಆಗಿರುವ ಬಲಗಣ್ಣು ತೆಗೆದರೆ ಮಾತ್ರ ಇವರು ಉಳಿಯಲು ಸಾಧ್ಯವಾಗುತ್ತದೆ. ಇಲ್ಲವಾದರೆ ಮೆದುಳಿಗೂ ಸಹ ಇದು ಹರಡುವ ಸಾಧ್ಯತೆ ಇದೆ ಎಂದು ವೈದ್ಯರು ತಿಳಿಸಿದ್ದಾರೆ. ನಂತರ ಹೀಗಾಗಿ ಕುಟುಂಬಸ್ಥರ ಅನುಮತಿ ಪಡೆದು ಬ್ಲ್ಯಾಕ್‍ಫಂಗಸ್ ಆದ ಬಲಗಣ್ಣನ್ನು ಆಪರೇಷನ್ ಮಾಡಿ ವೈದ್ಯರು ತೆಗೆದಿದ್ದಾರೆ. ಇದೀಗ ಅನಿಲ್ ಕುಮಾರ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ.

  • ಮೃತ ತಂದೆಯ ಕಣ್ಣು ದಾನ ಮಾಡಿದ ಮಕ್ಕಳು – ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬ

    ಮೃತ ತಂದೆಯ ಕಣ್ಣು ದಾನ ಮಾಡಿದ ಮಕ್ಕಳು – ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬ

    ಹಾವೇರಿ: ಮೃತ ತಂದೆಯ ಮಾಡುವ ಮೂಲಕವಾಗಿ ಕುಟುಂಬದ ಸದಸ್ಯರು ಸಾವಿನಲ್ಲೂ ಸಾರ್ಥಕತೆ ಮರೆದಿರುವ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರಿನಲ್ಲಿ ನಡೆದಿದೆ.

    ರಾಣೇಬೆನ್ನೂರು ನಗರದ ಶಬರಿ ಕಾಲೋನಿಯ ನಿವಾಸಿ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಯಮ ನಿವೃತ್ತ ಚಾಲಕ ಶಿವಾನಂದ ಯಮ್ಮಿ(62) ಅವರ ಕಣ್ಣುಗಳನ್ನು ದಾನಮಾಡಲಾಗಿದೆ.

    ಶಿವಾನಂದ ಯಮ್ಮಿ ಅವರು ವಯೋಸಹಜವಾಗಿ ನಿಧನಹೊಂದಿದ್ದರು. ಯಮ್ಮಿ ಮಕ್ಕಳು ತಂದೆಯ ಎರಡು ಕಣ್ಣುಗಳನ್ನ ಹುಬ್ಬಳ್ಳಿಯ ಎಂ.ಎಂ.ಜೋಶಿ ಕಣ್ಣಿನ ಆಸ್ಪತ್ರೆಗೆ ದಾನಮಾಡಿದರು. ನೇತ್ರದಾನ ಮಾಡುವ ಮೂಲಕ ಎರಡು ಜೀವನಕ್ಕೆ ಬೆಳಕು ನೀಡಿದ್ದಾರೆ.

    ಅಕ್ಕಿ ಆಲೂರಿನ ಸ್ನೇಹಮೈತ್ರಿ ನೇತ್ರದಾನಿಗಳ ಬಳಗದ ಸಹಕಾರದೊಂದಿಗೆ ರಾಣೆಬೆನ್ನೂರಿನ ಡಾ. ಚಂದ್ರಶೇಖರ ಕೆಲಗಾರ ನೇತ್ರತ್ವದಲ್ಲಿ ನೇತ್ರಗಳನ್ನು ಸಂಗ್ರಹಿಸಲಾಯಿತು. ರಾಣೇಬೆನ್ನೂರು ನಗರದ ಜನತೆ ಹಾಗೂ ಅಪಾರ ಬಂದುಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥನೆ ಮಾಡಿದ್ದಾರೆ.

  • ಶಿವಲಿಂಗ ಮೂರ್ತಿಯಲ್ಲಿ ಕಣ್ಣು ಪ್ರತ್ಯಕ್ಷ – ಪವಾಡ ವೀಕ್ಷಿಸಲು ದೇವಾಲಯದತ್ತ ಸೇರಿದ ಜನರ ದಂಡು

    ಶಿವಲಿಂಗ ಮೂರ್ತಿಯಲ್ಲಿ ಕಣ್ಣು ಪ್ರತ್ಯಕ್ಷ – ಪವಾಡ ವೀಕ್ಷಿಸಲು ದೇವಾಲಯದತ್ತ ಸೇರಿದ ಜನರ ದಂಡು

    ಬೆಳಗಾವಿ: ಕಲ್ಲಿನ ಶಿವಲಿಂಗ ಮೂರ್ತಿ ಕಣ್ಣು ತೆರೆದಿದೆ ಎಂಬ ವದಂತಿ ಬೆಳಗಾವಿ ಜಿಲ್ಲೆಯ ಗೋಕಾಕ್‍ನಲ್ಲಿ ಹರಿದಾಡುತ್ತಿದೆ. ಶಿವಲಿಂಗ ಮೂರ್ತಿಯನ್ನು ನೋಡಲು ದೇವಾಲಯದತ್ತ ಭಕ್ತಸಾಗರವೇ ಹರಿದುಬರುತ್ತಿದೆ.

    ಬೆಳಗಾವಿ ಜಿಲ್ಲೆ ಗೋಕಾಕ್‍ನ ಬಣಗಾರ ಗಲ್ಲಿಯಲ್ಲಿನ ಶಂಕರಲಿಂಗ ದೇವಸ್ಥಾನದಲ್ಲಿ ಶಿವಲಿಂಗ ಮೂರ್ತಿಯಲ್ಲಿ ಕಣ್ಣು ಮೂಡಿದೆ ಎಂದು ದೇವಾಲಯದ ಅರ್ಚಕರು ಹೇಳುತ್ತಿದ್ದಾರೆ. ಅದನ್ನು ನೋಡಲು ಭಕ್ತರು ತಂಡೋಪತಂಡವಾಗಿ ಶಂಕರಲಿಂಗ ದೇವಾಲಯಕ್ಕೆ ಬರುತ್ತಿದ್ದಾರೆ.

    ಶಿವಲಿಂಗ ವೀಕ್ಷಿಸಿದ ಜನರು ಇಂದು ರಾತ್ರಿ ಸಂಕಷ್ಠಿ ಚಂದ್ರೋದಯ ಸಮಯದಲ್ಲಿ ಕಲ್ಲಿನ ಮೂರ್ತಿಯಲ್ಲಿ ಕಣ್ಣು ಮೂಡಿದೆ ಎಂದು ಮಾತನಾಡಿಕೊಳ್ಳುತ್ತಿದ್ದಾರೆ. ಅಲ್ಲದೆ ದೇವಾಲಯದ ಆರ್ಚಕರು ಈ ಹಿಂದೆ 2004 ರಲ್ಲಿಯೂ ಇದೇ ರೀತಿ ಶಿವಲಿಂಗದಲ್ಲಿ ಕಣ್ಣುಗಳು ಪ್ರತ್ಯಕ್ಷವಾಗಿದ್ದವು. ಇದೀಗ ಪುನಃ ಶಿವಲಿಂಗ ಮೂರ್ತಿಯಲ್ಲಿ ಕಣ್ಣು ಪ್ರತ್ಯಕ್ಷವಾಗಿದೆ. ಇದು ಶುಭ ಸಂದೇಶವಾಗಿದ್ದು ಜಗತ್ತಿನಲ್ಲಿರುವ ರೋಗರುಜಿನ ಹೋಗುತ್ತದೆ ಎಂದು ಹೇಳುತ್ತಿದ್ದಾರೆ.

    ಈ ಹಿಂದೆ ಸಾಯಿಬಾಬಾ ಫೋಟೋದಲ್ಲಿ ವಿಭೂತಿ ಉದುರಿತ್ತು, ಗಣೇಶ ಹಾಲು ಕುಡಿದಿತ್ತು, ಹೀಗೆ ಹಲವಾರು ರೀತಿಯ ವದಂತಿಗಳು ಹಬ್ಬಿದ್ದವು. ಇದೀಗ ಶಿವಲಿಂಗ ಮೂರ್ತಿ ಕಣ್ಣು ತೆರೆದಿದೆ ಎಂದು ಜನ ದಂಡೇ ದೇವಾಲಯದತ್ತಾ ಹರಿದುಬರುತ್ತಿದೆ.

  • ಒಂದೇ ಕಣ್ಬಿಟ್ಟ ಆಂಜನೇಯ ಮೂರ್ತಿ- ಭಜರಂಗಿಯನ್ನು ನೋಡಲು ಮುಗಿಬಿದ್ದ ಭಕ್ತರು

    ಒಂದೇ ಕಣ್ಬಿಟ್ಟ ಆಂಜನೇಯ ಮೂರ್ತಿ- ಭಜರಂಗಿಯನ್ನು ನೋಡಲು ಮುಗಿಬಿದ್ದ ಭಕ್ತರು

    ಬೆಳಗಾವಿ: ಆಂಜನೇಯ ಮೂರ್ತಿ ಒಂದೇ ಕಣ್ಣನ್ನು ತೆರೆದ ಅಚ್ಚರಿಯ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ನಡೆದಿದೆ.

    ಕಾಂತ್ರಿವೀರ ಸಂಗೊಳ್ಳಿ ರಾಯಣ್ಣನನ್ನು ನೇಣಿಗೇರಿಸಿದ ನಂದಗಡ ಗ್ರಾಮ ಈ ಅಚ್ಚರಿಯ ಘಟನೆಗೆ ಸಾಕ್ಷಿಯಾಗಿದೆ. ಒಂದೇ ಕಣ್ಣು ಬಿಟ್ಟ ಹನುಮನ ದರ್ಶನ ಪಡೆಯಲು ಭಕ್ತರು ಕಾತುರದಿಂದ ಮುಗಿಬಿದ್ದು ಸ್ಥಳಕ್ಕೆ ಬರುತ್ತಿದ್ದು, ಒಂದು ಕಣ್ಣನ್ನು ಬಿಟ್ಟಿರುವ ವಾಯುಪುತ್ರನ ಮೂರ್ತಿ ಕಂಡು ಅಚ್ಚರಿಪಟ್ಟಿದ್ದಾರೆ. ಆಂಜನೇಯ ಮೂರ್ತಿ ಒಂದೇ ಕಣ್ಣು ಬಿಟ್ಟಿರುವುದು ಶುಭ ಶಕುನವೋ? ಅಪಶಕುನವೋ ಎಂಬ ಆತಂಕ ನಂದಗಡ ಹಾಗೂ ಸುತ್ತಮುತ್ತಲಿನ ಜನತೆಯಲ್ಲಿ ಮನೆಮಾಡಿದೆ.

    ಸಂಗೊಳ್ಳಿ ರಾಯಣ್ಣನನ್ನು ಗಲ್ಲಿಗೇರಿಸಿದ ಆಲದ ಮರದ ಕೆಳಗೆ ಈ ಹನುಮನ ವಿಗ್ರಹವಿದ್ದು, ಆಂಜನೇಯ ದರ್ಶನಕ್ಕೆ ಪ್ರತಿ ಶನಿವಾರ ಜಿಲ್ಲೆಯ ಜನರು ಸೇರಿದಂತೆ ಹೊರ ಜಿಲ್ಲೆಯ ಸಾವಿರಾರು ಭಕ್ತರು ಬರುತ್ತಾರೆ. ಹನುಮನ ದರ್ಶನ ಪಡೆದು ಪುನಿತರಾಗುತ್ತಾರೆ. ಈ ಹಿಂದೆ ಇದೇ ಆಂಜನೇಯನ ವಿಗ್ರಹ ಎರಡು ಕಣ್ಣು ಬಿಟ್ಟು ಅಚ್ಚರಿ ಮೂಡಿಸಿತ್ತು ಎಂದು ಕೆಲ ಸ್ಥಳೀಯರು ತಿಳಿಸಿದ್ದಾರೆ.

    ಅದೇನೆ ಇರಲಿ, ಆಂಜನೇಯನ ಕಲ್ಲಿನ ವಿಗ್ರಹ ಕಣ್ಣು ಬಿಟ್ಟಿರುವುದು ಅಚ್ಚರಿಯ ವಿಷಯವಾಗಿದ್ದು, ಭಕ್ತರು ಆತಂಕದಲ್ಲಿದ್ದರೂ ಕೂಡ ಆನಂಜನೇಯನ ಮಹಿಮೆ ಕಂಡು ಇದೆಂಥ ವಿಸ್ಮಯ ಎಂದು ಚರ್ಚಿಸುತ್ತಿದ್ದಾರೆ.