Tag: Facke Doctor

  • ಯೂಟ್ಯೂಬ್ ವೀಡಿಯೋ ನೋಡಿ ಸರ್ಜರಿ ಮಾಡಿದ ನಕಲಿ ವೈದ್ಯ- 17ರ ಬಾಲಕ ಸಾವು

    ಯೂಟ್ಯೂಬ್ ವೀಡಿಯೋ ನೋಡಿ ಸರ್ಜರಿ ಮಾಡಿದ ನಕಲಿ ವೈದ್ಯ- 17ರ ಬಾಲಕ ಸಾವು

    ಪಾಟ್ನಾ: ಯೂಟ್ಯೂಬ್ ನೋಡಿ ನಕಲಿ ವೈದ್ಯ ಸರ್ಜರಿ ಮಾಡಿದ ಪರಿಣಾಮ 17 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಬಿಹಾರದಲ್ಲಿ (Bihar) ನಡೆದಿದೆ.

    ಬಿಹಾರದ ಸರನ್ ಎಂಬಲ್ಲಿ ನಕಲಿ ವೈದ್ಯ ಯೂಟ್ಯೂಬ್ ವೀಡಿಯೋವನ್ನು ಅನುಸರಿಸಿ ಬಾಲಕನ ಪಿತ್ತಕೋಶದಲ್ಲಿರುವ ಕಲ್ಲನ್ನು ತೆಗೆಯುವುದಕ್ಕೆ ಆಪರೇಷನ್ ಮಾಡಿದ್ದಾರೆ.ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ ಬಾಲಕನನ್ನು ಪಾಟ್ನಾದ (Patna) ಬೇರೆ ಆಸ್ಪತ್ರೆಗೆ ಕರೆದೊಯ್ಯುವುದಕ್ಕೆ ಅಂಬುಲೆನ್ಸ್ ವ್ಯವಸ್ಥೆಯನ್ನು ಮಾಡಿದ್ದಾರೆ. ಮಾರ್ಗ ಮಧ್ಯೆ ಬಾಲಕ ಮೃತಪಟ್ಟಿದ್ದು, ದೇಹವನ್ನು ಆಸ್ಪತ್ರೆಯಲ್ಲಿ ಬಿಟ್ಟು ವೈದ್ಯರು ಹಾಗೂ ಜೊತೆಗಿದ್ದವರು ಪರಾರಿಯಾಗಿದ್ದಾರೆ. ಇದನ್ನೂ ಓದಿ: ಹಿಂದೂ ದೇವರುಗಳಿಗೆ ಅಪಮಾನ ಮಾಡಬೇಡಿ: ಸಿಎಂ ವಿರುದ್ಧ ಈಶ್ವರಪ್ಪ ಗರಂ

    ಬಾಲಕನು ಪದೇ ಪದೇ ವಾಂತಿ ಮಾಡುತ್ತಿದ್ದ. ಆದ್ದರಿಂದ ಆತನನ್ನು ಸರನ್ (Saran) ನಗರದಲ್ಲಿರುವ ಗಣಪತಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಡ್ಮಿಟ್ ಮಾಡಿಸಿದೆವು. ವಾಂತಿ ನಿಂತಿತ್ತು. ಆದರೆ ವೈದ್ಯ ಅಜಿತ್ ಕುಮಾರ್ ಪುರಿ ಈತನಿಗೆ ಆಪರೇಷನ್ ಅಗತ್ಯ ಇದೆ. ಆಪರೇಷನ್ ಮಾಡಬೇಕು ಎಂದರು. ಆದರೆ ಅವರು ಯೂಟ್ಯೂಬ್ ವೀಡಿಯೋವನ್ನು ನೋಡಿ ಆಪರೇಷನ್ ಮಾಡಿದ್ದರಿಂದ ನನ್ನ ಮಗ ಜೀವ ಕಳೆದುಕೊಂಡ ಎಂದು ಚಂದನ್ ಶಾ ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯ ರಾಜೀನಾಮೆ ಕೊಟ್ಟರೆ ಸತೀಶ್ ಜಾರಕಿಹೊಳಿ ಸಿಎಂ ಆಗಲಿ – ಅಭಿಮಾನಿಗಳ ಅಭಿಯಾನ

    ಮೃತ ಬಾಲಕನ ಅಜ್ಜ ಮಾತನಾಡಿ, ಬಾಲಕನ ತಂದೆಯನ್ನು ಬೇರೆ ಕೆಲಸದ ಮೇರೆಗೆ ಹೊರಗಡೆ ಕಳುಹಿಸಿದ್ದರು. ಕುಟುಂಬದವರ ಅನುಮತಿ ಪಡೆಯದೇ ಅವರು ಬಾಲಕನನ್ನು ಕರೆದುಕೊಂಡು ಹೋಗಿ ಆಪರೇಷನ್ ಮಾಡಿದ್ದಾರೆ. ಬಾಲಕ ನೋವಿನಿಂದ ಕಿರುಚಿದ್ದನ್ನು ನೋಡಿ ಏನಾಯಿತು ಎಂದು ವೈದ್ಯರನ್ನು ಪ್ರಶ್ನಿಸಿದರೆ, ನಾವು ವೈದ್ಯರು ಎಂದು ಎದುರುತ್ತರಿಸಿದರು. ಸಂಜೆಯ ಸುಮಾರಿಗೆ ಬಾಲಕನ ಶವವನ್ನು ಆಸ್ಪತ್ರೆಯ ಮೆಟ್ಟಿಲಲ್ಲಿ ಇಟ್ಟು ಪರಾರಿಯಾಗಿದ್ದಾರೆ ಎಂದು ತಿಳಿಸಿದರು.

    ಈ ಘಟನೆಯ ಕುರಿತಾಗಿ ಪೊಲೀಸರು ವೈದ್ಯರ ಹಾಗೂ ಇತರರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಪರಾರಿಯಾದ ವೈದ್ಯ ಮತ್ತು ಆತನ ತಂಡದವರನ್ನು ಹುಡುಕುವ ಕಾರ್ಯದಲ್ಲಿ ಪೊಲೀಸರು ತೊಡಗಿದ್ದಾರೆ. ಇದನ್ನೂ ಓದಿ: ಒಂದೇ ದಿನದಲ್ಲಿ ತನಗೆ ಸೇರಿದ ಜಾಗದ 848 ಖಾತೆ ಮಾಡಿಸಿಕೊಂಡ ಮುಡಾ ಮಾಜಿ ಅಧ್ಯಕ್ಷ

  • ನಕಲಿ ಡಾಕ್ಟರ್ ಎಡವಟ್ಟು – ಜ್ವರ ಎಂದು ಹೋದ ಮಹಿಳೆ ಕಾಲಿಗೆ ಗಂಡಾಂತರ

    ನಕಲಿ ಡಾಕ್ಟರ್ ಎಡವಟ್ಟು – ಜ್ವರ ಎಂದು ಹೋದ ಮಹಿಳೆ ಕಾಲಿಗೆ ಗಂಡಾಂತರ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಕಲಿ ವೈದ್ಯರ (Fake Doctor) ಹಾವಳಿ ಹೆಚ್ಚಾಗುತ್ತಿದ್ದು, ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೆ ಕುತ್ತು ತಂದಿಡುತ್ತಿದ್ದಾರೆ. ಇದಕ್ಕೆ ನಿದರ್ಶನ ಎನ್ನುವಂತೆ ಘಟನೆಯೊಂದು ಸಾಕ್ಷಿಯಾಗಿದೆ. ಮಾತ್ರೆ ಕೊಟ್ಟು ಸರಿಪಡಿಸಬಹುದಾಗಿದ್ದ ಕಾಯಿಲೆಯನ್ನ ನಕಲಿ ವೈದ್ಯ ಇಂಜೆಕ್ಷನ್, ಮಾತ್ರೆ ಕೊಟ್ಟು ಮಹಿಳೆಯನ್ನ (Women) ಶೋಚನಿಯ ಸ್ಥಿತಿಗೆ ತಂದೊಡ್ಡಿದ್ದಾನೆ.

    ಜ್ವರ (Fever) ಅಂತ ಹೋದ ಮಹಿಳೆಯ ಸ್ಥಿತಿ ಶೋಚನಿಯವಾಗಿದ್ದು, ಜೀವನದ ಮೇಲಿನ ಭರವಸೆಯನ್ನೇ ಕಳೆದುಕೊಂಡಿದ್ದಾರೆ. ಇದನ್ನೂ ಓದಿ: ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ – ಕಾಮುಕ ಶಿಕ್ಷಕನನ್ನು ಕೊಠಡಿಯಲ್ಲಿ ಕೂಡಿ ಹಾಕಿ ಧರ್ಮದೇಟು

    ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡಿಕೊಂಡಿರೋ ಜ್ಯೋತಿಗೆ ಜ್ವರ ಇದ್ದ ಕಾರಣ ಹೆಗ್ಗನಹಳ್ಳಿ ಸಂಜೀವಿನಿ ನಗರದಲ್ಲಿದ್ದ ಸಹನಾ ಪಾಲಿಕ್ಲಿನಿಕ್‌ಗೆ ಹೋಗಿದ್ದಾರೆ. ಕ್ಲಿನಿಕ್ (Clinic) ನಲ್ಲಿದ್ದ ನಕಲಿ ಡಾಕ್ಟರ್ ನಾಗರಾಜ್ ಶವಣೂರ್‌ಗೆ ತೋರಿಸಿದ್ದಾರೆ. ಮಹಿಳೆಯ ಸೊಂಟದ ಭಾಗಕ್ಕೆ ಒಂದೇ ಜಾಗದಲ್ಲಿ ಎರಡು ಇಂಜೆಕ್ಷನ್ ಚುಚ್ಚಿ ಮಾತ್ರೆ ಬರೆದು ಕಳಿಸಿಕೊಟ್ಟಿದ್ದಾನೆ. ಇದನ್ನೂ ಓದಿ: ಸಂಗೀತ ನಿರ್ದೇಶಕ ಮನೋರಂಜನ್ ಪ್ರಭಾಕರ್ ವಿಧಿವಶ

    ದಿನ ಕಳೆದಂತೆ ಇಂಜೆಕ್ಷನ್ ಕೊಟ್ಟ ಜಾಗ ಸಂಪೂರ್ಣ ಕಪ್ಪಾಗಲು ಶುರುವಾಗಿದೆ. ಮತ್ತೆ ಕ್ಲಿನಿಕ್‌ಗೆ ಹೋಗಿ ಜ್ಯೋತಿ ನಾಗರಾಜ್‌ಗೆ ತೋರಿಸಿದ್ದಾರೆ. ಆಗಲೂ ಆಯಿಟ್‌ಮೆಂಟ್ ಕೊಟ್ಟು ಕಳಿಸಿದ್ದಾನೆ. ಕೊಟ್ಟ ಆಯಿಟ್‌ಮೆಂಟ್‌ಗೂ ಕಡಿಮೆ ಆಗದೇ ಇಂಜೆಕ್ಷನ್ ನೀಡಿದ ಜಾಗ ಕೊಳೆಯಲು ಶುರುವಾಗಿದೆ. ನಂತರ ಬೇರೊಂದು ಆಸ್ಪತ್ರೆಗೆ ಹೋದಾಗ ಶಸ್ತ್ರಚಿಕಿತ್ಸೆಗೆ ಸೂಚನೆ ನೀಡಿದ್ದಾರೆ. ವೈದ್ಯರ ಸೂಚನೆಯಂತೆ ಸದ್ಯ ಮಹಿಳೆ ಶಸ್ತ್ರಚಿಕಿತ್ಸೆ (Surgery) ಮಾಡಿಸಿದ್ದು, ಸ್ವಲ್ಪಮಟ್ಟಿಗೆ ನಡೆಯುತ್ತಿದ್ದಾರೆ. ಆದರೂ ನರಕ ಯಾತನೇ ಅನುಭವಿಸುತ್ತಿದ್ದಾರೆ.’

    ನಕಲಿ ಡಾಕ್ಟರ್ ನಾಗರಾಜ್ ಶವಣೂರ್ ಅವಾಂತರದ ವಿರುದ್ಧ ರಾಜಗೋಪಾಲನಗರ ಪೊಲೀಸ್ ಠಾಣೆಗೆ (Rajagopalnagar Police Station) ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರೋ ಪೊಲೀಸರು ನಕಲಿ ಡಾಕ್ಟರ್ ನಾಗರಾಜ್ ಶವಣೂರ್ ಹಾಗೂ ಕ್ಲಿನಿಕ್ ಮಾಲೀಕ ಕುಮಾರ್ ಸ್ವಾಮಿಯನ್ನ ಬಂಧಿಸಿದ್ದು ತನಿಖೆ ಮಾಡುತ್ತಿದ್ದಾರೆ ಎಂದು ಉತ್ತರ ವಿಭಾಗದ ಡಿಸಿಪಿ ವಿನಾಯಕ್ ಪಾಟೀಲ್ ತಿಳಿಸಿದ್ದರೆ.

    Live Tv
    [brid partner=56869869 player=32851 video=960834 autoplay=true]