Tag: Factory

  • ಮಂಡ್ಯದಿಂದ ಕಬ್ಬು ಸಂಶೋಧನಾ ಸಂಸ್ಥೆ ಸ್ಥಳಾಂತರ – ಸರ್ಕಾರದ ನಡೆಗೆ ರೈತರ ಆಕ್ರೋಶ

    ಮಂಡ್ಯದಿಂದ ಕಬ್ಬು ಸಂಶೋಧನಾ ಸಂಸ್ಥೆ ಸ್ಥಳಾಂತರ – ಸರ್ಕಾರದ ನಡೆಗೆ ರೈತರ ಆಕ್ರೋಶ

    ಮಂಡ್ಯ: ಸಕ್ಕರೆ ನಾಡು ಮಂಡ್ಯ ಮೈಶುಗರ್ ಕಾರ್ಖಾನೆ ಸದ್ಯ ಸ್ಥಗಿತಗೊಂಡಿದ್ದು, ಸರ್ಕಾರ ಮಾತ್ರ ಮತ್ತೆ ಕಾರ್ಖಾನೆ ಆರಂಭಿಸಲು ಮೀನಾಮೇಷ ಎಣಿಸುತ್ತಿದ್ದೆ. ಇದೀಗ ಮಂಡ್ಯದ ಕಬ್ಬು ಸಂಶೋಧನಾ ಕೇಂದ್ರ ಹಾಗೂ ಬೆಂಗಳೂರಿನ ಆಯುಕ್ತರ ಕಚೇರಿಯನ್ನು ಬೇರೆಡೆ ಸ್ಥಳಾಂತರಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಇದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

    ಮಂಡ್ಯ ರೈತರ ಜೀವನಾಡಿಯಾಗಿರುವ ಮೈಶುಗರ್ ಕಾರ್ಖಾನೆ ಸ್ಥಬ್ಧಗೊಂಡು ಹಲವು ವರ್ಷಗಳೇ ಕಳೆದಿದೆ. ಮತ್ತೆ ಕಾರ್ಖಾನೆ ಪುನರಾರಂಭಿಸುವಂತೆ ರೈತರು, ಜಿಲ್ಲೆಯ ಜನರು ಹೋರಾಟವನ್ನು ಮಾಡ್ತಾನೆ ಇದ್ದಾರೆ. ಆದರು ರಾಜ್ಯ ಸರ್ಕಾರ ಮಾತ್ರ ಕಾರ್ಖಾನೆ ಆರಂಭಿಸುವ ಬಗ್ಗೆ ಚಿಂತನೆ ನಡೆಸದೆ ಮೀನಾಮೇಷ ಎಣಿಸುತ್ತಿದೆ. ಈ ಹೊತ್ತಲ್ಲೇ ಮಂಡ್ಯದಲ್ಲಿರುವ ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯ ಕಬ್ಬು ಸಂಶೋಧನಾ ಸಂಸ್ಥೆ ಹಾಗೂ ಬೆಂಗಳೂರಿನಲ್ಲಿರುವ ಸಂಸ್ಥೆಯ ಆಯುಕ್ತರ ಕಚೇರಿಯನ್ನು ಕುಂದಾನಗರಿ ಬೆಳಗಾವಿಗೆ ಸ್ಥಳಾಂತರಿಸಲು ಮುಂದಾಗಿದೆ. ಸರ್ಕಾರದ ಈ ತೀರ್ಮಾನ ಇದೀಗ ಮಂಡ್ಯ ರೈತರ ಆಕ್ರೋಶಕ್ಕೆ ಕಾರಣವಾಗಿದ್ದು, ಯಾವುದೇ ಕಾರಣಕ್ಕೂ ಸಂಶೋಧನಾ ಸಂಸ್ಥೆ ಸ್ಥಳಾಂತರಿಸದೆ ಯಥಾಸ್ಥಿತಿ ಮುಂದುವರಿಸಬೇಕು ಎಂದು ಮಂಡ್ಯ ರೈತ ಹಿತರಕ್ಷಣಾ ಸಮಿತಿ ಆಗ್ರಹಿಸಿದೆ. ಇದನ್ನೂ ಓದಿ: ರಾತ್ರಿಯಾಗ್ತಿದ್ದಂತೆ ರಸ್ತೆಗಿಳಿಯೋ ಮೊಸಳೆ – ಜನರಲ್ಲಿ ಆತಂಕ

    ಕಬ್ಬು ಸಂಶೋಧನಾ ಸಂಸ್ಥೆ ನಾಲ್ವಡಿ ಕೃಷ್ಣರಾಜ ಒಡೆಯರ್ ರವರ ಕಲ್ಪನೆಯಂತೆ ಕಳೆದು ಹದಿನೈದು ವರ್ಷದ ಹಿಂದೆ ಪ್ರಾರಂಭಿಸುವ ಮೂಲಕ ಕಬ್ಬಿನ ಹಲವಾರು ತಳಿಗಳನ್ನು ರೈತರಿಗೆ ಪರಿಚಯಿಸಲಾಗಿದೆ. ಈ ಕೇಂದ್ರದಿಂದ ಮಂಡ್ಯವಲ್ಲದೇ ಹಳೆ ಮೈಸೂರು ಭಾಗದ ರೈತರಿಗೆ, ಸಂಶೋಧನಾ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ. ಆದರೆ ಇದೀಗ ಸ್ಥಳಾಂತರಿಸಿದ್ರೆ ಅನುಕೂಲಕ್ಕಿಂತ ಅನಾನುಕೂಲವೇ ಹೆಚ್ಚಾಗಲಿದ್ದು, ಸಂಶೋಧನಾ ಸಂಸ್ಥೆ ಉಳಿವಿಗಾಗಿ ಸೋಮವಾರ ಬೃಹತ್ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ಕೊಟ್ಟಿರುವ ರೈತರು, ಸದನದಲ್ಲಿ ಜಿಲ್ಲೆಯ ಶಾಸಕರು ಧ್ವನಿ ಎತ್ತದಿದ್ದರೆ ಅವರಿಗು ಘೇರಾವ್ ಹಾಕುತ್ತೇವೆ ಎನ್ನುತ್ತಿದ್ದಾರೆ. ಮೈಶುಗರ್ ಕಾರ್ಖಾನೆ ಸ್ಥಗಿತದಿಂದ ಈಗಾಗಲೇ ಕಂಗಾಲಾಗಿರುವ ಜಿಲ್ಲೆಯ ರೈತರಿಗೆ, ಕಬ್ಬು ಸಂಶೋಧನಾ ಸಂಸ್ಥೆ ಸ್ಥಳಾಂತರಗೊಳ್ಳುವ ವಿಚಾರ ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಕೊಡಗಿನಲ್ಲಿ ವಾಕ್ಸಿನ್ ಪಡೆದ 953 ಜನರಿಗೆ ಮತ್ತೆ ವಕ್ಕರಿಸಿದ ಕೊರೊನಾ

  • ಫುಡ್ ಪ್ರಾಡಕ್ಟ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ – ಇಬ್ಬರು ಬಲಿ

    ಫುಡ್ ಪ್ರಾಡಕ್ಟ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ – ಇಬ್ಬರು ಬಲಿ

    ಬೆಂಗಳೂರು: ನಗರದ ಮಾಗಡಿ ರಸ್ತೆಯ 5ನೇ ಕ್ರಾಸ್ ನಲ್ಲಿರುವ ಫುಡ್ ಪ್ರಾಡಕ್ಟ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟಗೊಂಡು ಇಬ್ಬರು ದುರ್ಮರಣಕ್ಕೀಡಾದ ಘಟನೆ ನಡೆದಿದೆ.

    ಮೃತರನ್ನು ಸೌರಭ್ ಮತ್ತು ಮನೀಶ್ ಎಂದು ಗುರುತಿಸಲಾಗಿದ್ದು. ಇವರು ಬಿಹಾರ ಮೂಲದವರು ಎನ್ನಲಾಗಿದೆ. ಘಟನೆಯಲ್ಲಿ ಸಚಿನ್, ಶಾಂತಿ ಹಾಗೂ ಧನಲಕ್ಷ್ಮಿ ಎಂಬವರಿಗೆ ಗಾಯಗಳಾಗಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಕೂಡಲೇ ವಿಕ್ಟೋರಿಯಾ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಮೂರು ಅಗ್ನಿಶಾಮಕ ವಾಹನಗಳು ದೌಡಾಯಿಸಿವೆ. ಹಾಗೆಯೇ ಡಿಸಿಪಿ ಸಂಜೀವ್ ಪಾಟೀಲ್ ಕೂಡ ಭೇಟಿ ಕೊಟ್ಟಿದ್ದಾರೆ. ಇದನ್ನೂ ಓದಿ: ಇದು ಜನಾಶೀರ್ವಾದ ಅಲ್ಲ, ಜನರ ಕ್ಷಮೆ ಕೋರುವ ಯಾತ್ರೆ ಆಗಬೇಕು: ಸಲೀಂ ಅಹ್ಮದ್

    ಇಂದು ಮಧ್ಯಾಹ್ನ 1.30ರ ಸುಮಾರಿಗೆ ವಿಜಯ್ ಮೆಹ್ತಾ ಒಡೆತನದ ಸ್ನ್ಯಾಕ್ಸ್ ತಿಂಡಿ ಪದಾರ್ಥ ತಯಾರಿ ಮಾಡುವ ಎಂಎಂ ಫುಡ್ ಫ್ಯಾಕ್ಟರಿಯಲ್ಲಿ ಅವಘಡ ಸಂಭವಿಸಿದೆ. ಘಟನೆಯ ವೇಳೆ ಫ್ಯಾಕ್ಟರಿ ಒಳಗಡೆ ಒಟ್ಟು 7 ಮಂದಿ ಕೆಲಸ ಮಾಡುತ್ತಿದ್ದರು. ಮಾಗಡಿ ರೋಡ್ ನಲ್ಲಿ ಇದ್ದ ಫ್ಯಾಕ್ಟರಿಗೆ ಈ ಹಿಂದೆ ಬೆಂಕಿ ಅವಘಡ ಸಂಭವಿಸಿತ್ತು. ಅಲ್ಲಿಂದ ಇಲ್ಲಿಗೆ ಫ್ಯಾಕ್ಟರಿಯನ್ನ ಶಿಫ್ಟ್ ಮಾಡಲಾಗಿತ್ತು. ಇಲ್ಲಿಗೆ ಶಿಪ್ಟ್ ಆಗಿ ಮೂರು ತಿಂಗಳಾಗಿದೆ. ಚಿಪ್ಸ್, ಚಕ್ಕುಲಿ, ಮೀಕ್ಷರ್ ಸೇರಿದಂತೆ ಬೇಕರಿ ಉತ್ಪನ್ನಗಳನ್ನ ತಯಾರಿಸುತ್ತಿದ್ದು, ಪಕ್ಕದಲ್ಲೇ ಶಾಲೆ ಕೂಡ ಇದೆ.

    ಸದ್ಯ ಪೊಲೀಸರು ಎಫ್‍ಎಸ್‍ಎಲ್‍ಟೀಂ ಗೆ ಸ್ಫೋಟದ ಬಗ್ಗೆ ಮಾಹಿತಿ ಕೊಡಲಾಗಿದೆ. ಈ ಹಿನ್ನೆಲೆಯಲ್ಲಿ ತಂಡ ಫ್ಯಾಕ್ಟರಿಗೆ ಭೇಟಿ ಕೊಟ್ಟಿದ್ದು, ಬಾಯ್ಲರ್ ಸ್ಫೋಟಕ್ಕೆ ಕಾರಣ ಹುಡಕಲಿದೆ. ಇದನ್ನೂ ಓದಿ: ಮಿಸ್ ಫೈರಿಂಗ್ – ಡಿಎಆರ್ ಪೊಲೀಸ್ ಪೇದೆ ಸಾವು

  • ಕಾಳಿ ನದಿಯಿಂದ ಗ್ರಾಮಕ್ಕೆ ಬಂತು ಮೊಸಳೆ – ಆತಂಕದಲ್ಲಿ ಗ್ರಾಮಸ್ಥರು

    ಕಾಳಿ ನದಿಯಿಂದ ಗ್ರಾಮಕ್ಕೆ ಬಂತು ಮೊಸಳೆ – ಆತಂಕದಲ್ಲಿ ಗ್ರಾಮಸ್ಥರು

    ಕಾರವಾರ: ಆಹಾರ ಅರಸಿ ನದಿ ಭಾಗದಿಂದ ಮೊಸಳೆಯೊಂದು ಗ್ರಾಮಕ್ಕೆ ನುಗ್ಗಿದ ಘಟನೆ ದಾಂಡೇಲಿಯ ಕೊಗಿಲಬನ ಗ್ರಾಮದ ರಸ್ತೆಯಲ್ಲಿ ಇಂದು ನಡೆದಿದೆ.

    ಕಾಳಿ ನದಿಯಿಂದ ಆಹಾರ ಅರಸಿ ನದಿ ದಡಕ್ಕೆ ಬಂದ ಬೃಹದಾಕಾರದ ಮೊಸಳೆಯು ದಾಂಡೇಲಿಯ ಕಾಳಿ ನದಿ ಪಕ್ಕದಲ್ಲೇ ಇರುವ ಕೊಗಿಲಬನ ಗ್ರಾಮಕ್ಕೆ ನುಗ್ಗಿ ರಸ್ತೆಯಲ್ಲಿ ಸಂಚರಿಸಿದೆ.

    ಬೆಳಂಬೆಳಗ್ಗೆ ಗ್ರಾಮದಲ್ಲಿ ಓಡಾಡಿದ ಮೊಸಳೆಯನ್ನು ನೋಡಿದ ಗ್ರಾಮದ ಜನರು ಬೆಚ್ಚಿ ಬಿದ್ದಿದ್ದು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಆದರೆ ಗ್ರಾಮದ ರಸ್ತೆಯಲ್ಲಿ ವಾಕ್ ಮಾಡಿದ ಮೊಸಳೆ ಅರಣ್ಯಾಧಿಕಾರಿಗಳು ಬರುವುದರೊಳಗೆ ಗ್ರಾಮವನ್ನು ದಾಟಿ ಕಾಡಿನ ಹಾದಿ ಮೂಲಕ ಮತ್ತೆ ನದಿಗೆ ಸೇರಿಕೊಂಡಿದೆ.

    ದಾಂಡೇಲಿಯ ಕಾಳಿ ನದಿಯಲ್ಲಿ ಸಾವಿರಾರು ಮೊಸಳೆಗಳು ವಾಸವಾಗಿವೆ. ಆದರೆ ನದಿಯನ್ನು ಬಿಟ್ಟು ಗ್ರಾಮಕ್ಕೆ ಇದೇ ಮೊದಲ ಬಾರಿ ಮೊಸಳೆ ಆಗಮಿಸಿದ್ದು ಜನರನ್ನು ಬೆಚ್ಚಿ ಬೀಳಿಸಿದೆ.

    ಈ ಹಿಂದೆ ನದಿ ಭಾಗದಲ್ಲಿ ಮೊಸಳೆಗಳು ಮನುಷ್ಯನ ಮೇಲೆ ಎರಗಿ ಸಾವುಗಳಾದ ಘಟನೆ ಸಹ ಈ ಭಾಗದಲ್ಲಿ ನಡೆದಿದೆ. ದಾಂಡೇಲಿಯ ಕಾಗದ ಕಾರ್ಖಾನೆ ಬಳಿ ನದಿ ತಡದಲ್ಲಿ ಅತೀ ಹೆಚ್ಚು ಮೊಸಳೆಗಳು ವಾಸಿಸುತ್ತಿವೆ. ಕಾರ್ಖಾನೆಯ ತ್ಯಾಜ್ಯಗಳೇ ಇವುಗಳಿಗೆ ಆಹಾರವಾಗಿದ್ದು ಲಾಕ್‍ಡೌನ್‍ನಿಂದ ಜನರ ಓಡಾಟ ಸಹ ಈ ಪ್ರದೇಶಗಳಲ್ಲಿ ಇಳಿಮುಖವಾಗಿತ್ತು. ಹೀಗಾಗಿ ಆಹಾರ ಅರಸಿ ಮೊಸಳೆಗಳು ನದಿ ದಡದಿಂದ ಸುತ್ತಮುತ್ತ ಓಡಾಟ ನಡೆಸುತಿದ್ದು, ಇಂದು ಗ್ರಾಮಕ್ಕೆ ಮೊಸಳೆ ನುಗ್ಗಿದ್ದರಿಂದ ಇದೀಗ ಜನರಲ್ಲಿ ಮತ್ತೆ ಆತಂಕ ಶುರುವಾಗಿದೆ. ಇದನ್ನೂ ಓದಿ:ಅಯೋಧ್ಯೆಯಲ್ಲಿ ರಾಮಮಂದಿರ ಅಡಿಪಾಯ ಕಾಮಗಾರಿ ವೀಕ್ಷಿಸಿದ ಪೇಜಾವರಶ್ರೀ

  • ಘಟಪ್ರಭಾ ನದಿಗೆ ಕಾರ್ಖಾನೆ ತ್ಯಾಜ್ಯ- ಮೀನುಗಳು ಮಾರಣ ಹೋಮ

    ಘಟಪ್ರಭಾ ನದಿಗೆ ಕಾರ್ಖಾನೆ ತ್ಯಾಜ್ಯ- ಮೀನುಗಳು ಮಾರಣ ಹೋಮ

    ಬಾಗಲಕೋಟೆ: ಸಕ್ಕರೆ ಕಾರ್ಖಾನೆ ತ್ಯಾಜ್ಯವನ್ನು ಘಟಪ್ರಭಾ ನದಿಗೆ ಹರಿಬಿಟ್ಟಿರುವ ಹಿನ್ನೆಲೆಯಲ್ಲಿ ಮೀನುಗಳ ಮಾರಣ ಹೋಮವಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.

    ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮಾಚಕನೂರು ಗ್ರಾಮದ ಬಳಿಯ ಘಟಪ್ರಭಾ ನದಿದಡದಲ್ಲಿ ಮೀನುಗಳು ಸತ್ತು ತೇಲಾಡುತ್ತಿವೆ. ಕಾರ್ಖಾನೆ ತ್ಯಾಜ್ಯದಲ್ಲಿರುವ ಕೆಮಿಕಲ್ಸ್ ನದಿಗೆ ಹರಿಬಿಟ್ಟಿರುವುದರಿಂದ ಮೀನುಗಳು ರಾಶಿ ರಾಶಿ ಸತ್ತು ಬೀಳುತ್ತಿವೆ. ಇದನ್ನೂಓದಿ: ಚಾರ್ಮಾಡಿ ಘಾಟಿಯಲ್ಲಿ ಉಕ್ಕಿ ಹರಿಯುತ್ತಿರುವ ಜಲಪಾತ- ಜಾರುವ ಬಂಡೆ ಮೇಲೆ ಪ್ರವಾಸಿಗರ ಹುಚ್ಚಾಟ

    ಘಟಪ್ರಭಾ ನದಿದಡದಲ್ಲಿ 8 ಸಕ್ಕರೆ ಕಾರ್ಖಾನೆಗಳಿವೆ. ಕಾರ್ಖಾನೆಗಳ ಮೊಲ್ಯಾಸಿಸ್ ನೇರವಾಗಿ ನದಿಗೆ ಹರಿಬಿಡುತ್ತಿರುವುದರಿಂದ ಮೀನುಗಳ ಮಾರಣ ಹೋಮವಾಗಿದೆ. ಪ್ರತೀವರ್ಷ ಇದೇ ರೀತಿ ಜಲಚರ ಪ್ರಾಣಿಗಳು ಸತ್ತು ಬೀಳುತ್ತಿವೆ. ಸಕ್ಕರೆ ಕಾರ್ಖಾನೆಯ ತ್ಯಾಜ್ಯ ನದಿಗೆ ಹರಿಬಿಡಬಾರದು ಎಂದು ಸ್ಥಳೀಯರು ಹಲವು ಬಾರಿ ಒತ್ತಾಯಿಸಿದ್ದರು, ಆದರೆ ಕಾರ್ಖಾನೆಯವರು ಮಾತ್ರ ನದಿಗೆ ಹರಿಬಿಡುತ್ತಿದ್ದಾರೆ. ಇದನ್ನೂಓದಿ: ಪುಕ್ಕಟೆ ಕೊತ್ತಂಬರಿ ಸೊಪ್ಪಿಗಾಗಿ ಮುಗಿ ಬಿದ್ದ ಜನ

    ಕಳೆದ ವಾರ ಬೆಳಗಾವಿ , ಮಹಾರಾಷ್ಟ್ರದಲ್ಲಿ ಭಾರೀ ಮಳೆ ಆದ ಹಿನ್ನೆಲೆಯಲ್ಲಿ ಘಟಪ್ರಭಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಬಿಡಲಾಗಿತ್ತು. ಇದರೊಂದಿಗೆ ಅಪಾರ ಪ್ರಮಾಣದಲ್ಲಿ ಮೀನು ಸಂಪತ್ತು ಹರಿದು ಬಂದಿದೆ. ಮೀನುಗಾರರು ಮೀನು ಹಿಡಿದು ಜೀವನ ನಿರ್ವಹಣೆ ಮಾಡುತ್ತಿದ್ದರು. ಆದರೆ ಇದೀಗ ಕಾರ್ಖಾನೆ ತ್ಯಾಜ್ಯ ಮೀನುಗಳನ್ನೇ ಬಲಿ ಪಡೆದಿದೆ. ನದಿ ದಡದಲ್ಲಿ ಸತ್ತು ಬಿದ್ದಿರುವ ಮೀನುಗಳು ದುರ್ನಾತ ಬೀರುತ್ತಿದೆ. ನದಿಗೆ ಕಾರ್ಖಾನೆ ತ್ಯಾಜ್ಯಾ ಹರಿಬಿಡದಂತೆ ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ಮೀನುಗಾರರು, ಸ್ಥಳೀಯರು ಆಗ್ರಹಿಸಿದ್ದಾರೆ.

  • ಕೋಲಾರದಲ್ಲಿ ಮಳೆ, ವಿದ್ಯುತ್ ತಂತಿ ತಗುಲಿ 14 ಕುರಿ ಸಾವು

    ಕೋಲಾರದಲ್ಲಿ ಮಳೆ, ವಿದ್ಯುತ್ ತಂತಿ ತಗುಲಿ 14 ಕುರಿ ಸಾವು

    – ವಿಷಪೂರಿತ ಮೇವು ತಿಂದು 2 ಹಸು ಸಾವು

    ಕೋಲಾರ: ಕೋಲಾರ ಜಿಲ್ಲೆಯಲ್ಲಿಂದು ಸಂಜೆ ಮಳೆರಾಯನ ಆರ್ಭಟ ಜೋರಾಗಿತ್ತು. ಅರ್ಧ ಗಂಟೆಗಳ ಕಾಲ ಬಿರುಗಾಳಿ ಸಹಿತ ಜೋರು ಮಳೆಯಾಗಿದ್ದು, ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು 14 ಕುರಿಗಳು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

    ಜಿಲ್ಲೆಯ ಕೆಜಿಎಫ್ ತಾಲೂಕು ಚೆನ್ನಪಲ್ಲಿ ಗ್ರಾಮದ ಸುರೇಶ್ ಎಂಬವರಿಗೆ ಸೇರಿದ ಕುರಿಗಳು ಮೃತಪಟ್ಟಿದ್ದು, ಗಾಳಿ ಮಳೆಯಿಂದ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಕುರಿಗಳು ಸಾವನ್ನಪ್ಪಿವೆ. ಬೇತಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

    ವಿಷಪೂರಿತ ನೀರಿನಿಂದ ಬೆಳೆದ ಮೇವು ತಿಂದು 2 ಹಸು ಸಾವು
    ವಿಷಪೂರಿತ ಮೇವು ತಿಂದು ಹಸುಗಳು ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲ್ಲುಕಿನ ಸೀತನಾಯಕನಹಳ್ಳಿ ಸಮೀಪ ನಡೆದಿದೆ. ಕಾರ್ಖಾನೆಯ ವಿಷಪೂರಿತ ತ್ಯಾಜ್ಯ ಹೊರಕ್ಕೆ ಬಿಟ್ಟ ಪರಿಣಾಮ ವಿಷಪೂರಿತವಾಗಿ ಮೇವು ತಿಂದ ಎರಡು ಹಸುಗಳು ಮೃತಪಟ್ಟಿವೆ. ಇದೀಗ ಹಸುವಿನ ಮಾಲೀಕ ಕಾರ್ಖಾನೆಯ ಬಳಿ ಹಸುವಿನ ಶವ ಇಟ್ಟು ಪ್ರತಿಭಟನೆ ಮಾಡಿದ್ದಾರೆ.

    ಕೋಲಾರ ಜಿಲ್ಲೆ ಮಾಲೂರಿನ ಕೈಗಾರಿಕಾ ಪ್ರದೇಶದ ಸೀತನಾಯಕನಹಳ್ಳಿ ಬಳಿ ಇರುವ ಕ್ಲೋರೈಡ್ ಮೆಟಲ್ ಲಿಮಿಟೆಡ್ ಎಂಬ ಕಂಪನಿಯ ಹೊಗೆ ವಿಷಪೂರಿತ ನೀರು ಬಿಡುಗಡೆ ಮಾಡಿದರ ಪರಿಣಾಮ ಈ ಘಟನೆ ನಡೆದಿದೆ. ನರಸಿಂಹ ರೆಡ್ಡಿ ಎಂಬವರಿಗೆ ಸೇರಿದ ಎರಡು ಹಸುಗಳು, ಅಂದಾಜು 1.5 ಲಕ್ಷ ಬೆಲೆಯುಳ್ಳದಾಗಿದೆ. ಹಾಗಾಗಿ ಪರಿಹಾರ ಭರಿಸಿಕೊಡುವಂತೆ ಕಾರ್ಖಾನೆ ಮುಂದೆ ಹಸುವಿನ ಮಾಲೀಕ ಪ್ರತಿಭಟನೆ ನಡೆಸು ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ವಿಜಯಪುರ ಜಿಲ್ಲೆಯಾದ್ಯಂತ ಮಳೆಯ ಆರ್ಭಟ – ಬಾಳೆ ನಾಶಗೊಳಿಸಿದ ರೈತ ಮಹಿಳೆ

  • ಕರ್ನಾಟಕ ಲಾಕ್‍ಡೌನ್ – ಗಾರ್ಮೆಂಟ್ಸ್ ತೆರೆಯಲು ಅನುಮತಿ

    ಕರ್ನಾಟಕ ಲಾಕ್‍ಡೌನ್ – ಗಾರ್ಮೆಂಟ್ಸ್ ತೆರೆಯಲು ಅನುಮತಿ

    ಬೆಂಗಳೂರು: ಲಾಕ್‍ಡೌನ್‍ಗಾಗಿ ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿ ಮತ್ತೆ ಬದಲಾವಣೆಯಾಗಿದೆ. ಪರಿಷ್ಕೃತ ಮಾರ್ಗಸೂಚಿಯಲ್ಲಿ ಗಾರ್ಮೆಂರ್ಟ್ ಗಳಲ್ಲಿ ಶೆ.50ರಷ್ಟು ನೌಕರರಿಗೆ ಅನುಮತಿ ಕೊಡಲಾಗಿದೆ.

    ಉತ್ಪಾದನಾ ವಲಯದ ಗಾರ್ಮೆಂಟ್ಸ್ ಗಳಿಗೆ ಮಾತ್ರ ಈ ಆದೇಶ ಅನ್ವಯವಾಗಲಿದೆ ಎಂದು ಸರ್ಕಾರ ಹೇಳಿದೆ. ಬಹುತೇಕ ಗಾರ್ಮೇಂಟ್ಸ್ ಗಳು  ಉತ್ಪಾದನಾ ವಲಯವೇ ಆಗಿರುವ ಕಾರಣ ಸರ್ಕಾರದ ಪರಿಷ್ಕೃತ  ಆದೇಶ ಎಲ್ಲಾ ಗಾರ್ಮೆಂಟ್ಸ್ ಗಳಿಗೆ ಅನ್ವಯವಾಗಲಿದೆ.

    ಗಾರ್ಮೆಂಟ್ಸ್ ನೌಕರರು ಗುರುತಿನ ಚೀಟಿ ತೋರಿಸಿ ಪ್ರಯಾಣಿಸಬಹುದಾಗಿದೆ. ಲಾಕ್‍ಡೌನ್ ಹಿನ್ನೆಲೆಯಲ್ಲಿ ಈಗಾಗಲೇ ಗಾರ್ಮೆಂಟ್ಸ್ ನೌಕರರು ಹಳ್ಳಿಗಳಿಗೆ ತೆರಳಿರುವ ಕಾರಣ ಸರ್ಕಾರದ ಹೊಸ ಆದೇಶದಿಂದ ಗೊಂದಲ ಉಂಟಾಗಿದೆ.

  • ಶಾರ್ಟ್ ಸರ್ಕ್ಯೂಟ್ ನಿಂದ ಫ್ಯಾಕ್ಟರಿಯಲ್ಲಿ ಬೆಂಕಿ- ನಾಲ್ವರು ಸಾವು

    ಶಾರ್ಟ್ ಸರ್ಕ್ಯೂಟ್ ನಿಂದ ಫ್ಯಾಕ್ಟರಿಯಲ್ಲಿ ಬೆಂಕಿ- ನಾಲ್ವರು ಸಾವು

    ಮುಂಬೈ: ಕೆಮಿಕಲ್ ಫ್ಯಾಕ್ಟರಿಯಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿದೆ. ಈ ವೇಳೆ ಕೆಲಸ ಮಾಡುತ್ತಿದ್ದ ನಾಲ್ವರು ಸಾವನ್ನಪ್ಪಿದ್ದು, ಹಲವರ ಸ್ಥಿತಿ ಗಂಭೀರವಾಗಿರುವ ಘಟನೆ ಮಹಾರಾಷ್ಟ್ರದ ಘರ್ಡಾ ಕೆಮಿಕಲ್ ಫ್ಯಾಕ್ಟರಿಯಲ್ಲಿ ನಡೆದಿದೆ.

    ಘಟನೆ ವೇಳೆ ಒಟ್ಟು ಮೂವತ್ತು ಮಂದಿ ಈ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು. ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್  ನಿಂದ ಅವಘಡ ಸಂಭವಿಸಿರುವುದು ತಿಳಿದುಬಂದಿದೆ.

    ಘಟನಾ ಸ್ಥಳದಲ್ಲಿ 10 ಮಂದಿ ಅಗ್ನಿಶಾಮಕ ದಳಗಳ ಸಿಬ್ಬಂದಿಯಿಂದ ಕಾರ್ಯಾಚರಣೆ ನಡೆದಿದೆ. ಐದು ಜನರು ಒಳಗೆ ಸಿಕ್ಕಿಬಿದ್ದರು, ಅಗ್ನಿಶಾಮಕ ಸಿಬ್ಬಂದಿ ಒಬ್ಬರನ್ನು ರಕ್ಷಿಸುವಲ್ಲಿ ಯಶಸ್ವಿಯಾದರು. ಕಾರ್ಯಾಚರಣೆಯಲ್ಲಿ ನಾಲ್ವರ ಸುಟ್ಟ ಶವಗಳು ಪತ್ತೆಯಾಗಿವೆ. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಗೊಂಡ ಕಾರ್ಮಿಕರನ್ನು ಚಿಕಿತ್ಸೆಗಾಗಿ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಮೃತರ ಶವಗಳನ್ನು ಶವಪರೀಕ್ಷೆ ಕಳುಹಿಸಲಾಗಿದೆ ಎಂದು ಖೇಡ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಘಟನೆಯಲ್ಲಿ ನಾಲ್ವರು ನೌಕರರು ಸ್ಥಳದಲ್ಲೇ ಸಾವನ್ನಪ್ಪಿದರು. ಇತರರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದ ಅವಘಡ ಸಂಭವಿಸಿರುವುದು ತಿಳಿದುಬಂದಿದೆ. ಆದರೆ ಸಂಸ್ಥೆ ಕೂಡ ಈ ಬಗ್ಗೆ ತನಿಖೆ ನಡೆಸುತ್ತಿದೆ. ಈ ಸಂಬಂಧ ಸ್ಥಳೀಯ ಠಾಣೆಯಲ್ಲಿ ದೂರು ಕೂಡ ದಾಖಲಾಗಿದೆ.

  • ಕಾರ್ಖಾನೆಯಲ್ಲಿ ಕಾಣಿಸಿಕೊಂಡ ಬೆಂಕಿ- 40 ಕಾರ್ಮಿಕರು ಪಾರು

    ಕಾರ್ಖಾನೆಯಲ್ಲಿ ಕಾಣಿಸಿಕೊಂಡ ಬೆಂಕಿ- 40 ಕಾರ್ಮಿಕರು ಪಾರು

    ನವದೆಹಲಿ: ಮುಂಜಾವಿನ ನಸುಕಿನಲ್ಲಿ ಫ್ಯಾಕ್ಟರಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು 40 ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ದೆಹಲಿಯ ಪ್ರಾತಾಪ್ ನಗರದ ಕಾರ್ಖಾನೆಯೊಂದರಲ್ಲಿ ನಡೆದಿದೆ.

    ಇಂದು ಬೆಳಗಿನ ಜಾವ 3.45ರ ಸುಮಾರಿಗೆ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸೌಂದರ್ಯವರ್ಧಕಗಳು, ಆಟಿಕೆಗಳು ಮತ್ತು ಬ್ಯಾಗ್‍ತಯಾರಿಸುವ ಕಾರ್ಖಾನೆ ಇದಾಗಿದೆ. ಈ ವೇಳೆ ಫ್ಯಾಕ್ಟರಿ ಆವರಣದೊಳಗೆ 40 ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.

    ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸ್ಥಳಕ್ಕೆ 18 ಅಗ್ನಿಶಾಮಕದಳ ವಾಹನಗಳು ದೌಡಾಯಿಸಿದ್ದು, ಬೆಂಕಿಯನ್ನು ನಂದಿಸುವ ಕಾರ್ಯಾಚಾರ ನಡೆಸಿದ್ದಾರೆ. 40 ಕಾರ್ಮಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

    ಎಲ್‍ಪಿಜಿ ಸಿಲಿಂಡರ್ ಸ್ಫೋಟಗೊಂಡ ನಂತರ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳುತ್ತಿದ್ದಾರೆ. ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 18 ಅಗ್ನಿಶಾಮಕ ಟೆಂಡರ್‍ಗಳು ಕಾರ್ಯನಿರ್ವಹಿಸುತ್ತವೆ, ಬೆಂಕಿಯನ್ನು ನಂದಿಸುವ ಕಾರ್ಯ ನಡೆಯುತ್ತಿದೆ ಎಂದು ಅಗ್ನಿಶಾಮಕ ಅಧಿಕಾರಿ ರಾಜಿಂದರ್ ಅಟ್ವಾಲ್ ಹೇಳಿದ್ದಾರೆ. ಈ ಅವಘಢದ ಸಾವು ನೋವುಗಳ ಕುರಿತಾದ ಕಚಿತಮಾಹಿತಿ ಬರಬೇಕಿದೆ.

  • ಕದ್ದು ಒಳ ಉಡುಪು ಧರಿಸಿದ್ದಕ್ಕೆ ರೊಚ್ಚಿಗೆದ್ದು ರೂಂಮೇಟ್ ಗೆಳೆಯನನ್ನೇ ಹತ್ಯೆಗೈದ ಸಹೋದ್ಯೋಗಿ

    ಕದ್ದು ಒಳ ಉಡುಪು ಧರಿಸಿದ್ದಕ್ಕೆ ರೊಚ್ಚಿಗೆದ್ದು ರೂಂಮೇಟ್ ಗೆಳೆಯನನ್ನೇ ಹತ್ಯೆಗೈದ ಸಹೋದ್ಯೋಗಿ

    ಲಕ್ನೋ: ಒಳ ಉಡುಪನ್ನು ಕದ್ದು ಧರಿಸಿದಕ್ಕೆ ವ್ಯಕ್ತಿಯನ್ನು ಆತನ ಸಹೋದ್ಯೋಗಿಯೇ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

    ತನಿಖೆ ವೇಳೆ ಆರೋಪಿ ಬಾಂಡಾ ಜಿಲ್ಲೆಯ ಅಜಯ್ ಕುಮಾರ್ ಹಾಗೂ ಮೃತಪಟ್ಟ ವ್ಯಕ್ತಿಯನ್ನು ಬ್ರಹೇಚ್‍ನ ವಿವೇಕ್ ಶುಕ್ಲಾ ಎಂದು ಗುರುತಿಸಲಾಗಿದೆ. ಇಬ್ಬರು ಕಾನ್ಪುರ ದೇಹತ್ ಜಿಲ್ಲೆ ಫ್ಯಾಕ್ಟರಿವೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಅಲ್ಲದೆ ಫ್ಯಾಕ್ಟರಿ ನೀಡಿದ್ದ ಒಂದೇ ಕೊಠಡಿಯಲ್ಲಿ ಇಬ್ಬರು ಒಟ್ಟಿಗೆ ವಾಸಿಸುತ್ತಿದ್ದರು.

    ಒಮ್ಮೆ ಕುಚೇಷ್ಟೆ ಮಾಡಲೆಂದು ಅಜಯ್ ಕುಮಾರ್, ವಿವೇಕ್ ಶುಕ್ಲಾ ಒಳ ಉಡುಪನ್ನು ಕದ್ದು ಧರಿಸಿದ್ದಾನೆ. ವಿಷಯ ತಿಳಿದು ಕೋಪಗೊಂಡ ಆರೋಪಿ ವಿವೇಕ್ ಶುಕ್ಲಾ, ಅಜಯ್ ಕುಮಾರ್ ಜೊತೆ ವಾಗ್ವಾದಕ್ಕೆ ಇಳಿದಿದ್ದಾನೆ. ಇಬ್ಬರ ನಡುವೆ ಮಾತಿನ ಚಕಮಕಿ ನಡೆದು ಕೋಪ ವಿಕೋಪಕ್ಕೆ ತಿರುಗಿ ಆರೋಪಿ ಶುಕ್ಲಾ ತರಕಾರಿ ಕತ್ತರಿಸು ಚಾಕುವಿನಿಂದ ಅಜಯ್ ಕುಮಾರ್‍ಗೆ ಸತತವಾಗಿ ಇರಿದಿದ್ದಾನೆ.

    ಗಂಭೀರವಾಗಿ ಗಾಯಗೊಂಡ ಅಜಯ್ ಕುಮಾರ್ ಸ್ಥಳದಿಂದ ಓಡಲು ಆರಂಭಿಸಿದ್ದಾನೆ. ಬಳಿಕ ಮತ್ತೊಬ್ಬ ಸಹೋದ್ಯೋಗಿ ಅಸ್ವಸ್ಥಗೊಂಡ ಅಜಯ್ ಕುಮಾರ್‍ರನ್ನು ಕೂಡಲೇ ಕಾನ್ಪುರದ ಲಾಲ ಲಜಪತ್ ರಾಯ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಷ್ಟೋತ್ತಿಗಾಗಲೇ ಅಜಯ್ ಕುಮಾರ್ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

    ಸದ್ಯ ಪೊಲೀಸರು ಐಪಿಸಿ ಸೆಕ್ಷನ್‍ಗಳ ಅಡಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಲು ಹುಡುಕಾಟ ನಡೆಸುತ್ತಿದ್ದಾರೆ. ಆರೋಪಿ ಕುರಿತಂತೆ ಕಾರ್ಖಾನೆಯ ಮಾಲೀಕರು, ಸಹೋದ್ಯೋಗಿಗಳ ವಿಚಾರಣೆ ನಡೆಸುತ್ತಿದ್ದಾರೆ.

  • ಬಟ್ಟೆಯ ರಾಶಿಗೆ ಬೆಂಕಿ – 20ಕ್ಕೂ ಹೆಚ್ಚು ಗುಡಿಸಲು ಸುಟ್ಟು ಭಸ್ಮ

    ಬಟ್ಟೆಯ ರಾಶಿಗೆ ಬೆಂಕಿ – 20ಕ್ಕೂ ಹೆಚ್ಚು ಗುಡಿಸಲು ಸುಟ್ಟು ಭಸ್ಮ

    ನವದೆಹಲಿ: ಕಾರ್ಖಾನೆಯಲ್ಲಿರುವ ಬಟ್ಟೆಗಳ ರಾಶಿಗೆ ಬೆಂಕಿ ಹತ್ತಿಕೊಂಡು ನಂತರ ಹತ್ತಿರದಲ್ಲಿದ್ದ 20ಕ್ಕೂ ಹೆಚ್ಚು ಕಾರ್ಮಿಕರ ಗುಡಿಸಲುಗಳಿಗೆ ಬೆಂಕಿತಾಗಿ ಸುಟ್ಟು ಭಸ್ಮವಾಗಿರುವ ಘಟನೆ ನವದೆಹಲಿಯ ಹರಿಕೇಶ್ ನಗರ ಮೆಟ್ರೋ ಸ್ಟೇಷನ್ ಬಳಿ ನಡೆದಿದೆ.

    ಕಾರ್ಖಾನೆಯೊಂದರಲ್ಲಿ ಇಂದು ಮುಂಜಾನೆ 2 ಗಂಟೆಯ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಬಳಿಕ ಸುತ್ತಮುತ್ತಲೂ ಇದ್ದ ಗುಡಿಸಲುಗಳಿಗೆ ಬೆಂಕಿ ಹರಡಿದೆ. 20ಕ್ಕೂ ಹೆಚ್ಚು ಗುಡಿಸಲುಗಳು ಸುಟ್ಟು ಭಸ್ಮವಾಗಿವೆ. ಇಂದು ಮುಂಜಾನೆ ಈ ಅವಘಡ ಸಂಭವಿಸಿದ್ದು, ಯಾರಿಗೂ ಪ್ರಾಣಾಪಾಯವಾಗಿಲ್ಲ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

    ಬಟ್ಟೆಗಳ ರಾಶಿಗೆ ಮೊದಲು ಬೆಂಕಿ ಹೊತ್ತಿಕೊಂಡಿದೆ ನಂತರ ಸುತ್ತಮುತ್ತಲೂ ಬೆಂಕಿ ಆವರಿಸಿಕೊಂಡಿದೆ. ಆ ಸ್ಥಳದ ಆಸುಪಾಸಿನಲ್ಲಿ 20ರಿಂದ 22 ಗುಡಿಸಲುಗಳನ್ನು ಹಾಕಿಕೊಂಡು ಕಾರ್ಮಿಕರು ವಾಸ ಮಾಡುತ್ತಿದ್ದರು. ಆ ಗುಡಿಸಲುಗಳಿಗೆ ಬೆಂಕಿ ಹೊತ್ತಿಕೊಂಡಿದ್ದರಿಂದ ಜನರು ಹೊರಗೆ ಓಡಿ ಬಂದಿದ್ದಾರೆ. ಆ ಜಾಗದಲ್ಲಿ ನಿಂತಿದ್ದ ಟ್ರಕ್‍ಗೂ ಬೆಂಕಿ ಹೊತ್ತಿಕೊಂಡಿದ್ದು, ಟ್ರಕ್ ಸಂಪೂರ್ಣವಾಗಿ ಸುಟ್ಟುಹೋಗಿದೆ ಎಂದು ಪೊಲೀಸರು ಹೇಳಿದ್ದಾರೆ.

    ಬೆಂಕಿ ಗುಡಿಸಿಲಿಗೆ ತಾಗಿರುವ ಪರಿಣಾಮ 30ರಿಂದ 40 ಜನರು ಬೆಂಕಿಯಲ್ಲಿ ಸಿಲುಕಿದ್ದರು. ಅವರನ್ನು ರಕ್ಷಿಸಿ, ಹೊರಗೆ ಕರೆತರಲಾಗಿದೆ. 26ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸುವ ಕಾರ್ಯವನ್ನು ಮಾಡಿದ್ದಾರೆ ಎಂದು ತಿಳಿಸಿದ್ದಾರೆ.