Tag: fake clinic

  • ಕೋಲಾರ ಜಿಲ್ಲಾ ಆರೋಗ್ಯಾಧಿಕಾರಿಗಳ ಕಾರ್ಯಾಚರಣೆ – 8 ನಕಲಿ ಕ್ಲಿನಿಕ್ ಮೇಲೆ ದಾಳಿ

    ಕೋಲಾರ ಜಿಲ್ಲಾ ಆರೋಗ್ಯಾಧಿಕಾರಿಗಳ ಕಾರ್ಯಾಚರಣೆ – 8 ನಕಲಿ ಕ್ಲಿನಿಕ್ ಮೇಲೆ ದಾಳಿ

    ಕೋಲಾರ: ಇಲ್ಲಿನ ಜಿಲ್ಲಾ ಆರೋಗ್ಯಾಧಿಕಾರಿಗಳು (DHO) ಜಿಲ್ಲೆಯಾದ್ಯಂತ ಅನಧಿಕೃತವಾಗಿ ತೆರೆದಿದ್ದ 8 ನಕಲಿ ಕ್ಲಿನಿಕ್‌ಗಳ (Fake Clinic) ಮೇಲೆ ದಾಳಿ ನಡೆಸಿದ್ದಾರೆ.

    ಶ್ರೀನಿವಾಸಪುರದಲ್ಲಿ 6 ಕ್ಲಿನಿಕ್, ಬಂಗಾರಪೇಟೆ, ಕೋಲಾರದಲ್ಲಿ ತಲಾ ಒಂದು ನಕಲಿ ಕ್ಲಿನಿಕ್ ಮೇಲೆ ದಾಳಿ ಮಾಡಲಾಗಿದೆ. ಐದು ತಂಡಗಳಿಂದ ಕೋಲಾರ ಜಿಲ್ಲೆಯಾದ್ಯಂತ ದಾಳಿ ನಡೆಸಿದ್ದಾರೆ. ಈ ವೇಳೆ ವೈದ್ಯಕೀಯ ವಿದ್ಯಾರ್ಹತೆ ಹೊಂದಿಲ್ಲದ ಮತ್ತು ಅನಧಿಕೃತವಾಗಿ ಕ್ಲಿನಿಕ್ ತೆರದು ಚಿಕಿತ್ಸೆ ನೀಡುತ್ತಿರುವುದು ಕಂಡುಬಂದಿದೆ. ಇದನ್ನೂ ಓದಿ: ಬೆಂಗಳೂರು ಬಯೋಇನ್ನೊವೇಟಿವ್ ಸೆಂಟರ್‌ನಲ್ಲಿ ಅಗ್ನಿ ಅವಘಡ

    ಡಿಎಚ್‌ಓ ಡಾ.ಶ್ರೀನಿವಾಸ ನೇತೃತ್ವದಲ್ಲಿ ದಾಳಿ ನಡೆಸಿದ್ದು, ದಾಳಿಯ ವೇಳೆ ಇದ್ದ ಕೆಲ ಔಷಧಿಗಳನ್ನು ಜಪ್ತಿಪಡಿಸಿಕೊಳ್ಳಲಾಗಿದೆ. 5 ವೈದ್ಯಾಧಿಕಾರಿಗಳ ತಂಡದಿಂದ ದಾಳಿ ಮಾಡಿ ನಕಲಿ ಕ್ಲಿನಿಕ್‌ಗಳಿಗೆ ಬೀಗ ಜಡಿಯಲಾಗಿದೆ. ಈ ವೇಳೆ ವೈದ್ಯ ಅಧಿಕಾರಿಗಳು ಸ್ಟಿರಾಯಿಡ್ ಹಾಗೂ ಕೆಲ ಔಷಧಗಳನ್ನು ವಶಕ್ಕೆ ಪಡೆದು ಕ್ರಮಕ್ಕೆ ಮುಂದಾಗಿದ್ದಾರೆ. ಇದನ್ನೂ ಓದಿ: ಮಹಾಕುಂಭಮೇಳ: ಸಂಕ್ರಾಂತಿಯಂದು ಸಂಗಮದಲ್ಲಿ ‘ಅಮೃತ ಸ್ನಾನ’ ಮಾಡಿದ 1 ಕೋಟಿ ಭಕ್ತರು

  • ಕ್ಲಿನಿಕ್ ಮೇಲೆ ವೈದ್ಯಾಧಿಕಾರಿಗಳ ತಂಡ ದಾಳಿ – ವೈದ್ಯ ಪರಾರಿ, ಆಸ್ಪತ್ರೆಗೆ ಬೀಗ ಮುದ್ರೆ

    ಕ್ಲಿನಿಕ್ ಮೇಲೆ ವೈದ್ಯಾಧಿಕಾರಿಗಳ ತಂಡ ದಾಳಿ – ವೈದ್ಯ ಪರಾರಿ, ಆಸ್ಪತ್ರೆಗೆ ಬೀಗ ಮುದ್ರೆ

    ಕೋಲಾರ: ಜಿಲ್ಲೆಯ ಮಾಲೂರು ತಾಲೂಕಿನಲ್ಲಿ ನಕಲಿ ಕ್ಲಿನಿಕ್‍ಗಳ ಮೇಲೆ ಜಿಲ್ಲಾ ವೈದ್ಯಾಧಿಕಾರಿಗಳ ತಂಡ ದಾಳಿ ನಡೆಸಿದ್ದು, ಕ್ಲಿನಿಕ್ ಗೆ ಬೀಗ ಮುದ್ರೆ ಹಾಕಿದ್ದಾರೆ.

    ರೋಗಿಗಳ ಜೊತೆ ಚಲ್ಲಾಟವಾಡುವ ನಕಲಿ ಕ್ಲಿನಿಕ್ ಗಳ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸ್ಥಳೀಯರ ಮಾಹಿತಿ ಮೇರೆಗೆ ಮಾಲೂರಿನಲ್ಲಿ ನಕಲಿ ಕ್ಲಿನಿಕ್‍ಗಳ ಮೇಲೆ ಜಿಲ್ಲಾ ವೈದ್ಯಾಧಿಕಾರಿಗಳ ತಂಡ ದಾಳಿ ನಡೆಸಿದ್ದಾರೆ.

    ಮಾಲೂರು ಪಟ್ಟಣದ ರೈಲ್ವೇ ನಿಲ್ದಾಣ ಬಳಿಯ ದರ್ಶನ್ ಕ್ಲಿನಿಕ್ ಮೇಲೆ ದಾಳಿ ನಡೆಸಿದ ವೇಳೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರನ್ನ ತಪಾಸಣೆ ನಡೆಸಿದ್ದಾರೆ. ಈ ವೇಳೆ ನಕಲಿ ವೈದ್ಯ ಕ್ಲಿನಿಕ್ ಬಿಟ್ಟು ಪರಾರಿಯಾಗಿದ್ದಾನೆ. ಅಷ್ಟೇ ಅಲ್ಲದೇ ನಕಲಿ ಕ್ಲಿನಿಕ್ ಜೊತೆ ಔಷಧ, ಸಿರಂಜುಗಳನ್ನ ವಶಕ್ಕೆ ಪಡೆದುಕೊಂಡು ವೈದ್ಯಾಧಿಕಾರಿಗಳು ಬೀಗ ಮುದ್ರೆ ಹಾಕಿದ್ದಾರೆ.

    ಈ ನಕಲಿ ವೈದ್ಯರು ಭ್ರೂಣ ಲಿಂಗ ಪತ್ತೆ, ಭ್ರೂಣ ಹತ್ಯೆಯಂತಹ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿದ್ದರು ಎನ್ನಲಾಗಿದೆ. ಆದ್ದರಿಂದ ಈ ತಾಲೂಕಿನಲ್ಲಿ ಮತ್ತಷ್ಟು ನಕಲಿ ವೈದ್ಯರನ್ನ ಪತ್ತೆ ಹಚ್ಚುವ ಕೆಲಸಕ್ಕೆ ಮುಂದಾಗಿದ್ದಾರೆ.

    ನಕಲಿ ವೈದ್ಯ ನಾರಾಯಣಸ್ವಾಮಿ ವಿರುದ್ಧ ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv