Tag: Fake encounter

  • ಸಿ.ಟಿ ರವಿ ಫೇಕ್‌ ಎನ್‌ಕೌಂಟರ್‌ ಮಾಡಬೇಕೆಂಬ ವಿಚಾರ ಅಲ್ಲಿನ ಪೊಲೀಸ್‌ ತಂಡಕ್ಕೆ ಇತ್ತು ಅನಿಸುತ್ತೆ: ಜೋಶಿ ಬಾಂಬ್‌

    ಸಿ.ಟಿ ರವಿ ಫೇಕ್‌ ಎನ್‌ಕೌಂಟರ್‌ ಮಾಡಬೇಕೆಂಬ ವಿಚಾರ ಅಲ್ಲಿನ ಪೊಲೀಸ್‌ ತಂಡಕ್ಕೆ ಇತ್ತು ಅನಿಸುತ್ತೆ: ಜೋಶಿ ಬಾಂಬ್‌

    ಬಾಗಲಕೋಟೆ: ಮಾಧ್ಯಮದವರು ಇಲ್ಲದೇ ಇದ್ದಿದ್ರೆ, ಸಿ.ಟಿ ರವಿ (CT Ravi) ಅವರನ್ನ ಫೇಕ್‌ ಎನ್‌ಕೌಂಟರ್‌ ಮಾಡುವಂತಹ ವಿಚಾರ ಅಲ್ಲಿನ ಪೊಲೀಸ್‌ ತಂಡಕ್ಕೆ ಇತ್ತು ಅನ್ನಿಸುತ್ತೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ಬಾಂಬ್‌ ಸಿಡಿಸಿದ್ದಾರೆ.

    ಸಿ.ಟಿ ರವಿ ಅವರನ್ನು ಬಂಧಿಸಿದ್ದ ವಿಚಾರ ಕುರಿತು ಬಾಗಲಕೋಟೆಯಲ್ಲಿ (Bagalkote) ಮಾತನಾಡಿದ ಅವರು, ಅವಕಾಶ ಸಿಕ್ಕಿದ್ರೆ ಸಿ.ಟಿ ರವಿ ಅವರನ್ನು ಮುಗಿಸಬೇಕು ಅಂತಾ ಯೋಚನೆ ಮಾಡಿದ್ದರು ಅನ್ನಿಸುತ್ತೆ. ಆದ್ರೆ ಅವರಿಗೆ ಸರಿಯಾದ ಅವಕಾಶ ಸಿಕ್ಕಿಲ್ಲ. ಏಕೆಂದರೆ ಆಗ ನಮ್ಮ ಮತ್ತೊಬ್ಬರು ಎಂಎಲ್‌ಸಿ ಕೇಶವ್‌ ಪ್ರಸಾದ್‌ ಜೊತೆಯಲ್ಲಿದ್ದರು. ಮಾಧ್ಯಮದವರಿಂದ ನಮಗೆ ಲೈವ್‌ ಲೊಕೇಶನ್‌ ಸಿಗ್ತಾ ಇತ್ತು ಎಂದು ಹೇಳಿದ್ದಾರೆ. ಇದನ್ನೂ ಓದಿ: ಶೈಕ್ಷಣಿಕ ಪ್ರವಾಸದ ವೇಳೆ ವಿದ್ಯಾರ್ಥಿ ಸಾವು – ಮುಖ್ಯಶಿಕ್ಷಕ ಸೇರಿ 6 ಶಿಕ್ಷಕರು ಅಮಾನತು

    ನಿಜವಾಗ್ಲೂ ನಾವು ಮಾಧ್ಯಮದವರಿಗೆ ಧನ್ಯವಾದ ಹೇಳಬೇಕು. ಅಷ್ಟು ರಾತ್ರಿಯಲ್ಲೂ ಪೊಲೀಸರ ಬೆನ್ನತ್ತಿ, ವಿಡಿಯೋ ಮಾಡಿ, ಲೈವ್‌ ಲೊಕೇಶನ್‌ ಹಾಕ್ತಾ ಇದ್ರು. ಹಾಗಾಗಿ ಸಿ.ಟಿ ರವಿ ಅವರನ್ನ ಮುಗಿಸಲು ಅವಕಾಶ ಸಿಕ್ಕಿಲ್ಲ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.

    ಇದು ಸಂಪೂರ್ಣವಾಗಿ ಗೃಹ ಇಲಾಖೆಯ ವೈಫಲ್ಯ, ಹೀಗಾಗಿ ನಾವಿದನ್ನ ಇಲ್ಲಿಗೆ ಬಿಡಲ್ಲ. ಈಗಾಗಲೇ ನಾನು, ಸಿ.ಟಿ ರವಿ ಅವರಿಗೆ ಸೂಕ್ತ ಕಾನೂನು ಸಲಹೆ ಪಡೆಯುವಂತೆ ಹೇಳಿದ್ದೇನೆ. ಈ ಕುತಂತ್ರದ ಹಿಂದೆ ಯಾರಿದ್ದಾರೆ ಎಂಬುದರ ಬಗ್ಗೆ ತನಿಖೆ ಮಾಡಲು ನಾವು ಕೋರ್ಟ್‌ಗೆ ಹೋಗುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪಾಪ್ ಕಾರ್ನ್‌ ಮೇಲೆ 3 ರೀತಿಯ ಜಿಎಸ್‌ಟಿ – ಕೌನ್ಸಿಲ್‌ ಸಭೆಯಲ್ಲಿ ಒಪ್ಪಿಗೆ; ಯಾವುದು ದುಬಾರಿ?

    ಇನ್ನೂ ಸಿ.ಟಿ ರವಿ ಅವಹೇಳನಕಾರಿ ಶದ್ಧ ಬಳಸಿದಕ್ಕೆ ಎನ್ಕೌಂಟರ್ ಮಾಡ್ತಿದ್ರಾ? ಎಂಬ ಮಾಧ್ಯಮದವ್ರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಅದೊಂದೇ ಕಾರಣ ಅಂತ ನಾನು ಹೇಳೋದಿಲ್ಲ. ಈ ರೀತಿ ಒಬ್ಬರನ್ನ ಎನ್‌ಕೌಂಟರ್‌ ಮಾಡಿಬಿಟ್ರೆ, ಬಿಜೆಪಿಯವ್ರು ಮುಂದೆ ಯಾವುದೇ ಚಟುವಟಿಕೆ ಮಾಡಲ್ಲ, ಹೆದರಿಕೊಂಡು ಮೂಲೆ ಸೇರುತ್ತಾರೆ ಅಂತ ಭಯ ಸೃಷ್ಟಿ ಮಾಡುವ ಪ್ರಯತ್ನ ಎಂದು ಅಭಿಪ್ರಾಯಪಟ್ಟಿದ್ದಾರೆ.

    ನಾನು ವಿಶೇಷವಾಗಿ ಪೊಲೀಸರಿಗೆ ಹೇಳೋದು, ನೀವು ಈ ರೀತಿ ರಾಜಕೀಯ ಕೈಗೊಂಬೆಗಳಾಗಿ ವರ್ತಿಸಬಾರದು. ಏಕೆಂದರೆ ನಾಳೆ ಸರ್ಕಾರ ಬದಲಾಗುತ್ತೆ. ಸರ್ಕಾರದಲ್ಲಿ ಅಧಿಕಾರಕ್ಕೆ ಬರುವವರೂ ಚೇಂಜ್ ಆಗ್ತಾ ಇರ್ತಾರೆ, ಇದನ್ನ ನೆನಪಿಟ್ಟುಕೊಳ್ಳಬೇಕು ಎಂದು ಪೊಲೀಸರಿಗೆ ಖಡಕ್ ಎಚ್ವರಿಕೆ‌ನೀಡಿದ್ದಾರೆ. ಇದನ್ನೂ ಓದಿ: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವ್ರಿಗೆ ಲಿಂಗಾಯತ ವಿರೋಧಿ ಕಾಂಗ್ರೆಸ್‌ ಸರ್ಕಾರದಿಂದ 10,000 ಬಹುಮಾನ: ಯತ್ನಾಳ್‌ ಕಿಡಿ

  • ನಕಲಿ ಎನ್‌ಕೌಂಟರ್‌ – SP ಸೇರಿ 18 ಪೊಲೀಸರ ವಿರುದ್ಧ ಎಫ್‌ಐಆರ್‌ಗೆ ಕೋರ್ಟ್‌ ಆದೇಶ

    ನಕಲಿ ಎನ್‌ಕೌಂಟರ್‌ – SP ಸೇರಿ 18 ಪೊಲೀಸರ ವಿರುದ್ಧ ಎಫ್‌ಐಆರ್‌ಗೆ ಕೋರ್ಟ್‌ ಆದೇಶ

    ಲಕ್ನೋ: ನಕಲಿ ಎನ್‌ಕೌಂಟರ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್‌ ವರಿಷ್ಠಾಧಿಕಾರಿ ಸೇರಿದಂತೆ 18 ಪೊಲೀಸರ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಶಹಜಹಾನ್‌ಪುರದ ನ್ಯಾಯಾಲಯ ಆದೇಶ ಹೊರಡಿಸಿದೆ.

    18 ವರ್ಷಗಳ ಹಿಂದೆ ಇಬ್ಬರನ್ನು ನಕಲಿ ಎನ್‌ಕೌಂಟರ್‌ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶದ ಮೇರೆಗೆ ಜಲಾಲಾಬಾದ್‌ನಲ್ಲಿ 18 ಪೊಲೀಸರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅಪರಾಧ ವಿಭಾಗದ ಪೊಲೀಸರು ತನಿಖೆ ನಡೆಸಲಿದ್ದಾರೆ ಎಂದು ಎಸ್‌ಪಿ ಎಸ್.ಆನಂದ್‌ ತಿಳಿಸಿದ್ದಾರೆ. ಇದನ್ನೂ ಓದಿ: ಮತಗಟ್ಟೆ ಪ್ರವೇಶಿಸಲು ಯತ್ನಿಸಿದ ಸೋನು ಸೂದ್ ಕಾರು ಜಪ್ತಿ

    2004ರ ಅಕ್ಟೋಬರ್‌ 3ರಂದು ಜಲಾಲಾಬಾದ್‌ ಪೊಲೀಸ್‌ ಠಾಣೆ ವ್ಯಾಪ್ತಿಯ ಚಚುಪುರದ ಗ್ರಾಮದ ನಿವಾಸಿಗಳಾದ ಪ್ರಹ್ಲಾದ್‌ ಮತ್ತು ಧನಪಾಲ್‌ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ನಂತರ ಅವರಿಗೆ ಡಕಾಯಿತರು ಎಂಬ ಹಣಪಟ್ಟಿ ಕಟ್ಟಲಾಗಿತ್ತು.

    ಪ್ರಹ್ಲಾದ್‌ ಸಹೋದರ ರಾಮ್‌ ಕೀರ್ತಿ ಈ ಸಂಬಂಧ ದೂರು ನೀಡಿದ್ದರು. ಆದರೆ ಯಾವುದೇ ವಿಚಾರಣೆ ನಡೆಯದ ಕಾರಣ 2012ರ ನವೆಂಬರ್‌ ತಿಂಗಳಲ್ಲಿ ಪೊಲೀಸರ ವಿರುದ್ಧ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ನ್ಯಾಯಾಲಯದ ಮೊರೆ ಹೋಗಿದ್ದರು. ಇದನ್ನೂ ಓದಿ: ಬಾಲಿವುಡ್ ಅಪಹಾಸ್ಯ – ಕೆಆರ್‌ಕೆ, ಅಭಿಷೇಕ್ ಬಚ್ಚನ್ ರೋಚಕ ಟ್ವೀಟ್ ಸಮರ!

    POLICE JEEP

    ಆಗಿನ ಎಸ್‌ಪಿ ಸುಶೀಲ್‌ ಕುಮಾರ್‌, ಹೆಚ್ಚುವರಿ ಎಸ್‌ಪಿ ಮಾತಾ ಪ್ರಸಾದ್‌, ಮುಮ್ಮು ಲಾಲ್‌, ಜೈಕರನ್‌ ಸಿಂಗ್‌ ಭದೌರಿಯಾ, ಆರ್‌.ಕೆ.ಸಿಂಗ್‌ ಸೇರಿದಂತೆ 18 ಪೊಲೀಸರ ವಿರುದ್ಧ ಪ್ರಕರಣ ದಾಖಲಿಸುವಂತೆ ಕೋರ್ಟ್‌ ನಿರ್ದೇಶನ ನೀಡಿದೆ.

  • ‘ದುಬೆ ಕಾನ್ಪುರ ತಲುಪಲ್ಲ’- ಪೊಲೀಸ್ ಸಂಭಾಷಣೆಯ ಸ್ಫೋಟಕ ವಿಡಿಯೋ ವೈರಲ್

    ‘ದುಬೆ ಕಾನ್ಪುರ ತಲುಪಲ್ಲ’- ಪೊಲೀಸ್ ಸಂಭಾಷಣೆಯ ಸ್ಫೋಟಕ ವಿಡಿಯೋ ವೈರಲ್

    – ದಾರಿ ಮಧ್ಯೆ ದುಬೆ ಚಲಿಸುತ್ತಿದ್ದ ಕಾರು ಚೇಂಜ್
    – ರಹಸ್ಯಮಯವಾಗಿದೆ ದುಬೆ ಎನ್‍ಕೌಂಟರ್ ಕಥೆ

    ಲಕ್ನೋ: ಇಂದು ಮುಂಜಾನೆ ಎನ್‍ಕೌಂಟರ್ ಆದ ಗ್ಯಾಂಗ್‍ಸ್ಟರ್ ವಿಕಾಸ್ ದುಬೆ ಸಾವಿನ ಸುತ್ತ ಅನುಮಾನಗಳ ಹುತ್ತ ಮೂಡಿವೆ. ಈ ನಡುವೆ ದುಬೆ ಕಾನ್ಪುರ ತಲುಪಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿರುವ ವಿಡಿಯೋ ವೈರಲ್ ಆಗಿದೆ.

    ಸದ್ಯ ವೈರಲ್ ಆಗಿರುವ ವಿಡಿಯೋದಲ್ಲಿ, ಪೊಲೀಸ್ ಅಧಿಕಾರಿಗಳು ಮಾತನಾಡುತ್ತಿರುತ್ತಾರೆ. ಈ ವೇಳೆ ಓರ್ವ ಪೊಲೀಸ್ ಅಧಿಕಾರಿ ವಿಕಾಸ್ ದುಬೆ ಯಾವ ಸಮಯಕ್ಕೆ ಕಾನ್ಪುರಕ್ಕೆ ಬರುತ್ತಾನೆ ಎಂದು ಪ್ರಶ್ನೆ ಮಾಡುತ್ತಾರೆ. ಇದಕ್ಕೆ ಉತ್ತರಿಸಿದ ಪೊಲೀಸ್ ಅಧಿಕಾರಿಯೋರ್ವ, ವಿಕಾಸ್ ದುಬೆ ಕಾನ್ಪುರ ತಲುಪುವುದಿಲ್ಲ ಎಂದು ನಾನೂ ಭಾವಿಸುತ್ತೇನೆ ಎಂದು ನಗುತ್ತಾ ಹೇಳಿರುವುದು ಸ್ಪಷ್ಟವಾಗಿದೆ.

    ಈ ವಿಡಿಯೋ ಜೊತೆಗೆ ಇನ್ನೊಂದು ಸ್ಫೋಟಕ ಸುದ್ದಿ ಹೊರಬಿದ್ದಿದ್ದು, ವಿಕಾಸ್ ದುಬೆಯನ್ನು ಎನ್‍ಕೌಂಟರ್ ಮಾಡಲೆಂದೇ ಪೊಲೀಸರು ಮಾರ್ಗ ಮಧ್ಯೆ ಆತನಿದ್ದ ಕಾರನ್ನು ಚೇಂಜ್ ಮಾಡಿದ್ದರು ಎನ್ನಲಾಗಿದೆ. ವರದಿಯ ಪ್ರಕಾರ, ವಿಕಾಸ್ ದುಬೆ ಮಧ್ಯ ಪ್ರದೇಶದಿಂದ ಸಫಾರಿ ಕಾರಿನಲ್ಲಿ ಹೊರಟಿದ್ದಾನೆ. ಆದರೆ ಪೊಲೀಸ್ ಎನ್‍ಕೌಂಟರ್ ಸಮಯದಲ್ಲಿ ಪಲ್ಟಿಯಾದ ಕಾರ ಎಸ್‍ಯೂವಿಯಾಗಿದೆ. ಈ ಬದಲಾವಣೆಯಿಂದ ಇದು ಫೇಕ್ ಎನ್‍ಕೌಂಟರ್ ಎಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯಾಗುತ್ತಿದೆ.

    ಇದರ ಜೊತೆಗೆ ವಿಕಾಸ್ ದುಬೆಯನ್ನು ಪ್ಲಾನ್ ಮಾಡಿಯೇ ಎನ್‍ಕೌಂಟರ್ ಮಾಡಲಾಗಿದೆ ಎಂಬ ಮಾತುಗಳು ಕೂಡ ಕೇಳಿಬರುತ್ತಿವೆ. ಈಗಾಗಲೇ #ಫೇಕ್‍ಎನ್‍ಕೌಂಟರ್ ಎಂದು ಟ್ವಿಟ್ಟರ್ ನಲ್ಲಿ ಟ್ರೆಂಡ್ ಆಗಿದೆ. ದೇಶದ ಎಲ್ಲ ಪ್ರಮುಖ ನಾಯಕರು ಟ್ವೀಟ್ ಮಾಡಿ ಉತ್ತರ ಪ್ರದೇಶದ ಸರ್ಕಾರ ಮತ್ತು ಪೊಲೀಸರ ಮೇಲೆ ಕಿಡಿಕಾರುತ್ತಿದ್ದಾರೆ. ಈ ನಡುವೆ ದೊಡ್ಡ ದೊಡ್ಡ ವ್ಯಕ್ತಿಗಳು ತಪ್ಪಿಸಿಕೊಳ್ಳಲು ವಿಚಾರಣೆಗಿಂತ ಮುಂಚೆಯೇ ವಿಕಾಸ್ ದುಬೆಯನ್ನು ಹತ್ಯೆ ಮಾಡಿಸಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ.

    ಈ ವಿಚಾರಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಬಿಜೆಪಿ ಪಕ್ಷದ ಮೇಲೆ ವಿಪಕ್ಷಗಳು ಮುಗಿಬಿದ್ದಿವೆ. ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಟ್ವೀಟ್ ಮಾಡಿ, ವಿಕಾಸ್ ದುಬೆಯ ಫೇಕ್‍ಎನ್‍ಕೌಂಟರ್ ಗೆ ನ್ಯಾಯ ಸಿಗಬೇಕು. ಆತ ಅಮಾಯಕನಾಗಿದ್ದು, ಸಮಾಜವಾದಿ ಪಕ್ಷದ ಉತ್ತಮ ಕಾರ್ಯಕರ್ತನಾಗಿದ್ದ. ರಾಜಕೀಯ ವೈಷಮ್ಯದಿಂದ ಬಿಜೆಪಿ ಸರ್ಕಾರ ಆತನನ್ನು ಕೊಲೆ ಮಾಡಿದೆ. ಇದರ ಹಿಂದೆ ಏನೋ ರಹಸ್ಯವಿದೆ ಎಂದು ದೂರಿದ್ದಾರೆ.

    ವಿಕಾಸ್ ದುಬೆಯನ್ನು ಬಂಧಿಸಿ ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ (ಎಸ್‍ಟಿಎಫ್) ಮಧ್ಯ ಪ್ರದೇಶದಿಂದ ಕಾನ್ಪುರಕ್ಕೆ ವಾಪಸ್ ಕರೆತರಲಾಗುತ್ತಿತ್ತು. ಆದರೆ ಇಂದು ಮುಂಜಾನೆ ಕಾನ್ಪುರದ ಬಾರ್ರಾ ಪೊಲೀಸ್ ವಲಯಕ್ಕೆ ತಲುಪುತ್ತಿದ್ದಂತೆ ವಿಕಾಸ್ ದುಬೆ ಕುಳಿತಿದ್ದ ವಾಹನವು ಭಾರೀ ಮಳೆಯಿಂದಾಗಿ ರಸ್ತೆಯಲ್ಲಿ ಪಲ್ಟಿಯಾಗಿದೆ. ಈ ವೇಳೆ ಆರೋಪಿ ಗಾಯಗೊಂಡ ಪೊಲೀಸರೊಬ್ಬರಿಂದ ಬಂದೂಕನ್ನು ಕಿತ್ತುಕೊಂಡು ಪೊಲೀಸರ ಮೇಲೆ ಗುಂಡು ಹಾರಿಸಲು ಯತ್ನಿಸಿದ್ದಾನೆ. ಆಗ ಪೊಲೀಸರು ಎನ್‍ಕೌಂಟರ್ ಮಾಡಿದ್ದಾರೆ.