ಈ ಕುಟುಂಬದವರು ಮೂಲತಃ ಧೋಲ್ಕಾದ ಬಾರ್ಕೋಥಾದ ದೇವಿಪೂಜಕ್ ವಾಸ್ ಪ್ರದೇಶದವರಾಗಿದ್ದು, ಸ್ವಲ್ಪ ಸಮಯ ಹಿಂದೆ ಬಾಗೋದ್ರಾಗೆ ಬಂದು ನೆಲೆಸಿದ್ದರು. ವಿಪುಲ್ ಅವರು ಆಟೋ ಓಡಿಸಿ, ಬಂದ ಹಣದಲ್ಲಿ ಜೀವನವನ್ನು ಸಾಗಿಸುತ್ತಿದ್ದರು. ವಿಫುಲ್, ಶನಿವಾರ ತಡರಾತ್ರಿ ಮೂವರು ಮಕ್ಕಳು ಹಾಗೂ ಪತ್ನಿಯೊಂದಿಗೆ ವಿಷ ಸೇವಿಸಿ ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಕೋಲ್ಕತ್ತಾ | ಬಾಯ್ಸ್ ಹಾಸ್ಟೆಲ್‌ನಲ್ಲಿ ಯುವತಿಯ ರೇಪ್ ಕೇಸ್ – ಬಾಗಲಕೋಟೆ ಆರೋಪಿಗೆ ಜಾಮೀನು
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದು, ಆರ್ಥಿಕ ಸಮಸ್ಯೆಯಿಂದ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಿದ್ದಾರೆ.
ಚಾಮರಾಜನಗರ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು ಕುಟುಂಬ ಸಮೇತರಾಗಿ ಬಿಳಿಗಿರಿರಂಗನ ಬೆಟ್ಟ, ಹರಳುಕೋಟೆ ಆಂಜನೇಯ ಸನ್ನಿಧಿಗೆ ಭೇಟಿ ನೀಡಿದರು.
ಯಳಂದೂರು ತಾಲೂಕಿನಲ್ಲಿರುವ ಪ್ರಸಿದ್ಧ ಯಾತ್ರೆ ಸ್ಥಳವಾದ ಬಿಳಿಗಿರಿರಂಗನ ಬೆಟ್ಟದ ಬಿಳಿಗಿರಿ ರಂಗನಾಥನಿಗೆ ವಿಶೇಷ ಪೂಜೆ, ಅರ್ಚನೆ ಮಾಡಿಸಿದರು. ಬಳಿಕ, ಬಿಳಿಗಿರಿರಂಗನ ಬೆಟ್ಟದಿಂದ ಕೆ.ಗುಡಿಗೆ ಬಂದು ಅರಣ್ಯ ಸೌಂದರ್ಯ ವೀಕ್ಷಿಸಿದರು.
ಚಾಮರಾಜನಗರದ ಹರಳುಕೋಟೆ ಆಂಜನೇಯ ಸನ್ನಿಧಿಗೆ ಭೇಟಿ ನೀಡಿ ಹನುಮನ ದರ್ಶನ ಪಡೆದು ಅರ್ಚನೆ ಮಾಡಿಸಿದರು. ಹರಳುಕೋಟೆ ಆಂಜನೇಯಸ್ವಾಮಿ ದೇಗುಲವು ಬಬ್ರುವಾಹನನಿಂದ ಸ್ಥಾಪಿತಗೊಂಡ ಮೂರ್ತಿ ಎಂಬ ನಂಬಿಕೆ ಇದ್ದು ಪುರಾಣ ಐತಿಹ್ಯ ಹಾಗೂ ಇತಿಹಾಸ ಇದೆ.
ಮೃತರನ್ನು ಉದ್ಯಮಿ ಮಣಿಕಂದನ್ (50), ಅವರ ಪತ್ನಿ ನಿತ್ಯ, ತಾಯಿ ಸರೋಜಾ ಮತ್ತು ಅವರ ಇಬ್ಬರು ಮಕ್ಕಳು ಎಂದು ಗುರುತಿಸಲಾಗಿದೆ. ಮೃತರು ಸೇಲಂ ನಿವಾಸಿಗಳು ಎಂದು ಗುರುತಿಸಲಾಗಿದೆ ಎಂದು ಸ್ಥಳೀಯ ವರದಿಗಳು ತಿಳಿಸಿವೆ. ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ವಿಷ ಸೇವಿಸಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಲೆಬನಾನ್‍ಗೆ ಬರಬೇಡಿ – ತನ್ನ ನಾಗರಿಕರಿಗೆ ಭಾರತ ರಾಯಭಾರ ಕಚೇರಿ ಸೂಚನೆ
ಘಟನೆಗೆ ಕಾರಣವೇನು ಎಂಬುದು ಇನ್ನಷ್ಟೇ ತಿಳಿಯಬೇಕಿದೆ. ಕುಟುಂಬಸ್ಥರು ಸಾಲಗಾರರ ಒತ್ತಡಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರಬಹುದಾ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೃತ ಮಣಿಕಂದನ್ ಲೋಹದ ವ್ಯಾಪಾರ ಮಾಡುತ್ತಿದ್ದು, ಸಾಲ ಮಾಡಿಕೊಂಡಿದ್ದರು ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಲೋಕಾಯುಕ್ತದಿಂದ ನಿಷ್ಪಕ್ಷಪಾತ ತನಿಖೆ ಅಸಾಧ್ಯ: ದೂರುದಾರ ಸ್ನೇಹಮಯಿ ಕೃಷ್ಣ
ಜೈಪುರ: ರಾಜಸ್ಥಾನದ (Rajastan) ಝಲಾವರ್‌ನಲ್ಲಿ 24 ವರ್ಷದ ಯುವತಿಯೊಬ್ಬಳು ತಾನು ಇಷ್ಟಪಟ್ಟವನನ್ನು ಮದುವೆಯಾದ ಕಾರಣಕ್ಕೆ ಆಕೆಯ ಮನೆಯವರೇ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ.
ವಿವರಗಳ ಪ್ರಕಾರ, ಪತಿಯ ಮುಂದೆಯೇ ಯುವತಿಯನ್ನು ಆಕೆಯ ಕುಟುಂಬಸ್ಥರು ಅಪಹರಣ ಮಾಡಿದ್ದಾರೆ. ಬಳಿಕ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಅಲ್ಲದೇ ಆಕೆಯ ಮೃತದೇಹವನ್ನು ಸುಡಲಾಗಿದೆ.
ಈ ಸಂಬಂಧ ಪೊಲೀಸರು ತನಿಖೆ ನಡೆಸಿದಾಗ ಯುವತಿ ತನ್ನ ಕುಟುಂಬದ ವಿರುದ್ಧವಾಗಿ ರವಿ ಭೀಲ್ ಎಂಬಾತನನ್ನು ಮದುವೆಯಾಗಿದ್ದಾಳೆ. ಅಲ್ಲದೇ ವಿಚಾರ ಗೊತ್ತಾಗಿ ಯುವತಿ ಕುಟುಂಬಸ್ಥರು ತಮ್ಮ ಮೇಲೆ ಕ್ರಮ ಕೈಗೊಳ್ಳುತ್ತಾರೆ ಎಂದು ದಂಪತಿ ಬೇರೆ ಕಡೆ ನೆಲೆಸಿದ್ದರು.
ಇತ್ತ ಪತ್ನಿ ಕಾಣೆಯಾಗಿರುವ ಕುರಿತು ಪತಿ ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ ಈ ನಡುವೆ ಕುಟುಂಬಸ್ಥರು ಆಕೆಯ ದೇಹವನ್ನು ಸುಟ್ಟು ಹಾಕಿದ್ದಾರೆ. ಪೊಲೀಸರು ಸ್ಥಳಕ್ಕೆ ಬರುವಷ್ಟರಲ್ಲಿ ಮಹಿಳೆಯ ದೇಹ 80%ಕ್ಕೂ ಹೆಚ್ಚು ಸುಟ್ಟಿತ್ತು. ಇನ್ನು ಆಕೆಯ ಕುಟುಂಬ ಸದಸ್ಯರು ಸ್ಥಳದಿಂದ ಪರಾರಿಯಾಗಿದ್ದಾರೆ.
ಸದ್ಯ ಮಹಿಳೆಯ ಸುಟ್ಟ ಅವಶೇಷಗಳನ್ನು ಹೆಚ್ಚಿನ ತನಿಖೆಗಾಗಿ ವಿಧಿವಿಜ್ಞಾನಕ್ಕೆ ಕಳುಹಿಸಲಾಗಿದೆ.
ಮುಂಬೈ: ಲೋನಾವಾಲಾದ (Lonavala) ಭೂಶಿ ಅಣೆಕಟ್ಟಿನ (Bhushi Dam) ನೀರಿನಲ್ಲಿ ಕೊಚ್ಚಿಹೋಗಿ ಐವರು ಸಾವನ್ನಪಿದ ಘಟನೆ ಮಹಾರಾಷ್ಟ್ರದಲ್ಲಿ (Maharashtra) ನಡೆದಿದೆ. ಭಾನುವಾರ ಮಧ್ಯಾಹ್ನ ನಾಲ್ವರು ಮಕ್ಕಳು ಮತ್ತು ಮಹಿಳೆ ಸೇರಿದಂತೆ ಐದು ಜನರು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿದ್ದು, ಇನ್ನೂ ಐವರು ಈಜಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಮಾಹಿತಿಯ ಪ್ರಕಾರ, ಮೃತರನ್ನು ಸಹಿಸ್ತಾ ಲಿಯಾಕತ್ ಅನ್ಸಾರಿ (36), ಅಮಿಮಾ ಆದಿಲ್ ಅನ್ಸಾರಿ (13), ಉಮೇರಾ ಅಲಿಯಾಸ್ ಸಲ್ಮಾನ್ ಆದಿಲ್ ಅನ್ಸಾರಿ (8) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಇನ್ನೂ ಇಬ್ಬರು ಕಾಣೆಯಾಗಿದ್ದಾರೆ. ನಾಪತ್ತೆಯಾದವರನ್ನು ಅದ್ನಾನ್ ಶಾಬತ್ ಅನ್ಸಾರಿ (4), ಮತ್ತು ಮರಿಯಾ ಅನ್ಸಾರಿ (9) ಎಂದು ಗುರುತಿಸಲಾಗಿದ್ದು, ಇಂದು (ಸೋಮವಾರ) ಶೋಧ ಕಾರ್ಯಾಚರಣೆ ಮುಂದುವರಿದಿದೆ. ಇದನ್ನೂ ಓದಿ: ಹಾಸನ ಎಸ್‌ಪಿ ಕಚೇರಿ ಆವರಣದಲ್ಲೇ ಪತ್ನಿಯನ್ನು ಹತ್ಯೆಗೈದ ಪತಿ
ಭಾನುವಾರ ಪುಣೆಯ ಹಡಪ್ಸರ್‌ನ ಲಿಯಾಕತ್ ಅನ್ಸಾರಿ ಮತ್ತು ಯೂನಸ್ ಖಾನ್ ಅವರ ಕುಟುಂಬ ಸದಸ್ಯರು ಭೂಶಿ ಅಣೆಕಟ್ಟಿಗೆ ಭೇಟಿ ನೀಡಿದ್ದರು. ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಏಕಾಏಕಿ ನೀರಿನ ಮಟ್ಟ ಹೆಚ್ಚಾದ ಪರಿಣಾಮ 10 ಮಂದಿ ಕುಟುಂಬದವರು ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಾರೆ. ಈ ಪೈಕಿ ಐವರು ಈಜಿ ಪ್ರಾಣ ಕಾಪಾಡಿಕೊಂಡಿದ್ದು, 5 ಮಂದಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಡೆಂಗ್ಯೂಗೆ 27 ವರ್ಷದ ಯುವಕ ಬಲಿ
ಪರಿಸ್ಥಿತಿಯ ಗಂಭೀರತೆಯನ್ನು ಪರಿಗಣಿಸಿ, ಸ್ಥಳೀಯ ಪೊಲೀಸರು, ಅಗ್ನಿಶಾಮಕ ದಳದ ಸೇವೆಗಳು, ಶಿವದುರ್ಗ ಮಿತ್ರ ಮಂಡಲ್, ಆಪಾದ ಮಿತ್ರ ಮಾವಲ್ ಮತ್ತು ವನ್ಯ ಜೀವ್ ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ದಿನದ ಅಂತ್ಯದ ವೇಳೆಗೆ, ಅಧಿಕಾರಿಗಳು ಮೂರು ಮೃತ ದೇಹಗಳನ್ನು ಹೊರತೆಗೆದಿದ್ದಾರೆ. ಇನ್ನೂ ಇಬ್ಬರಿಗಾಗಿ ಹುಡುಕಾಟ ಮುಂದುವರಿದಿದೆ. ಇದನ್ನೂ ಓದಿ: 19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್ ದರ 30 ರೂ. ಇಳಿಕೆ
ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಪುಣೆ ಜಿಲ್ಲೆಯ ಘಾಟ್ ಪ್ರದೇಶಗಳಲ್ಲಿ ಮಳೆಯ ಚಟುವಟಿಕೆಯು ಗಣನೀಯವಾಗಿ ಹೆಚ್ಚಾಗಿದೆ. ಲೋನಾವಾಲಾದಲ್ಲಿ ಜೂನ್ 30ರಂದು 163 ಮಿ.ಮೀ ಮಳೆಯಾಗಿದೆ. ಇದನ್ನೂ ಓದಿ: ಭಾರತೀಯ ನ್ಯಾಯ ಸಂಹಿತೆಯಡಿ ದೆಹಲಿಯಲ್ಲಿ ಮೊದಲ FIR ದಾಖಲು
ಬೆಂಗಳೂರು: ಲೋಸಕಭಾ ಚುನಾವಣೆಯ ಗದ್ದಲದ ಬಳಿಕ ಇದೀಗ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು (H.D Kumaraswamy) ತಮ್ಮ ಕುಟುಂಬದ ಜೊತೆಗೆ ವಿಶ್ರಾಂತಿಗೆ ತೆರಳಿದ್ದಾರೆ.
ರಾಜ್ಯದ ರೆಸಾರ್ಟ್ ಒಂದರಲ್ಲಿ ಹೆಚ್‌ಡಿಕೆಯವರು ತಮ್ಮ ಕುಟುಂಬ ಸಮೇತ ವಿಶ್ರಾಂತಿ ಪಡೆಯುತ್ತಿದ್ದಾರೆ. ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ, ಸೊಸೆ ರೇವತಿ ಅವರು ಹಾಗೂ ಮೊಮ್ಮಗ ಚಿ.ಅವ್ಯಾನ್ ದೇವ್ ಮಾಜಿ ಮುಖ್ಯಮಂತ್ರಿಗಳ ಜೊತೆಯಲ್ಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸ್ಥಳೀಯರ ಯೋಗಕ್ಷೇಮ ವಿಚಾರಿಸಿದರು.
ಎರಡು ತಿಂಗಳ ಹಿಂದೆ ಹೃದಯದ ಶಸ್ತ್ರಚಿಕಿತ್ಸೆಗಾಗಿ ಹೆಚ್‌ಡಿಕೆಯವರು ಅಪೋಲೋ ಆಸ್ಪತ್ರೆಗೆ (Apollo Hospital) ದಾಖಲಾಗಿ ಡಿಸ್ಚಾರ್ಜ್ ಆಗಿದ್ದರು. ಆ ಬಳಿಕ ವೈದ್ಯರ ಸಲಹೆಯ ಮೇರೆಗೆ ಒಂದೆರಡು ದಿನ ಮನೆಯಲ್ಲಿಯೇ ವಿಶ್ರಾಂತಿ ಪಡೆದು ನಂತರ ಮತ್ತೆ ಲೋಕಸಭಾ ಚುನಾವಣೆಯ ಪ್ರಚಾರಕ್ಕೆ ಧುಮಕಿದ್ದರು. ಇದನ್ನೂ ಓದಿ: ಬೆಂಗಳೂರಿನತ್ತ ಪ್ರಜ್ವಲ್ ರೇವಣ್ಣ- ಏರ್‌ಪೋರ್ಟ್‌ನಲ್ಲಿ ಹೈಅಲರ್ಟ್
ಅಮರಾವತಿ: ಆಂಧ್ರಪ್ರದೇಶದ (Andhrapradesh) ಪೂರ್ವ ಗೋದಾವರಿ ಜಿಲ್ಲೆಯಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ವಧುವಿನ ಕುಟುಂಬದವರೇ ಆಕೆಯನ್ನು ಸ್ಥಳದಿಂದ ಬಲವಂತವಾಗಿ ಕರೆದೊಯ್ಯಲು ಪ್ರಯತ್ನಿಸಿದ ಘಟನೆ ನಡೆದಿದೆ.
ಈ ಘಟನೆ ಕಡಿಯಂ ಪ್ರದೇಶದಲ್ಲಿ ನಡೆದಿದ್ದು, ಸ್ನೇಹಾ ಮತ್ತು ಬತ್ತಿನ ವೆಂಕಟಾನಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ವಿವಾಹ ಮಂಟಪಕ್ಕೆ ಏಕಾಏಕಿ ನುಗ್ಗಿದ ವಧುವಿನ ಕುಟುಂಬ ಆಕೆಯನ್ನು ಅಪಹರಣ ಮಾಡಲು ಯತ್ನಿಸಿದೆ. ಅಲ್ಲದೇ ಅಪಹರಣ ತಡೆಯಲು ಬಂದವರ ಮೇಲೆ ಮೆಣಸಿನ ಪುಡಿಯನ್ನು ಎರಚಿದ್ದಾರೆ.
ವಧು ಸ್ನೇಹಾಳ ತಾಯಿ, ಸಹೋದರ ಮತ್ತು ಸೋದರಸಂಬಂಧಿಗಳು ಆಕೆಯನ್ನು ಸ್ಥಳದಿಂದ ಬಲವಂತವಾಗಿ ಎಳೆದೊಯ್ಯಲು ಯತ್ನಿದ್ದಾರೆ. ಆದರೆ ಸ್ನೇಹಾ ಹರಸಾಹಪಟ್ಟು ಅವರ ಕೈಯಿಂದ ತಪ್ಪಿಸಿಕೊಂಡಿದ್ದಾಳೆ. ಇದರ ವೀಡಿಯೋ ಮಂಟಪದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಅಪಹರಣ ಯತ್ನವನ್ನು ವರ, ಆತನ ಕುಟುಂಬದವರು ಹಾಗೂ ಸ್ನೇಹಿತರು ವಿಫಲಗೊಳಿಸಿದ್ದಾರೆ. ಗಲಾಟೆಯಲ್ಲಿ ವರನ ಸ್ನೇಹಿತರೊಬ್ಬರು ತೀವ್ರ ಗಾಯಗೊಂಡಿದ್ದಾರೆ. ಸ್ನೇಹಾ ಅವರ ಕುಟುಂಬವು ಈಗ ಹಲ್ಲೆ, ಅಪಹರಣ ಯತ್ನ ಮತ್ತು ಚಿನ್ನ ಕಳ್ಳತನ ಸೇರಿದಂತೆ ಹಲವಾರು ಕ್ರಿಮಿನಲ್ ಆರೋಪಗಳನ್ನು ಎದುರಿಸುತ್ತಿದೆ. ಈ ಮದುವೆಗೆ ಅವರ ವಿರೋಧದ ಹಿಂದಿನ ಉದ್ದೇಶ ಸ್ಪಷ್ಟವಾಗಿಲ್ಲ. ಇದನ್ನೂ ಓದಿ: ಇಂದು ಮಧ್ಯರಾತ್ರಿ ವಿಶ್ವವಿಖ್ಯಾತ ಐತಿಹಾಸಿಕ ಕರಗೋತ್ಸವಕ್ಕೆ ವಿದ್ಯುಕ್ತ ಚಾಲನೆ
ಘಟನೆ ಕುರಿತು ಮಾತನಾಡಿದ ಕಡಿಯಂ ಸರ್ಕಲ್ ಇನ್ಸ್‌ಪೆಕ್ಟರ್ ಬಿ ತುಳಸಿಧರ್, ವೀರಬಾಬು ಕುಟುಂಬದವರು ಸ್ನೇಹಾ ಕುಟುಂಬದ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದಿದ್ದಾರೆ.
– ಮದುವೆ, ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ಕುಟುಂಬ – ದರೋಡೆ ಮಾಡಿಲ್ಲ, ಕೊಲೆಗಾಗಿಯೇ ಮನೆಗೆ ನುಗ್ಗಿದ್ದ ಕಿರಾತಕರು
ಗದಗ: ಮಲಗಿದಲ್ಲೇ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆಮಾಡಿದ ಘಟನೆ ಗದಗ ನಗರದ (Gadag) ನಗರದ ದಾಸರ ಓಣಿಯಲ್ಲಿ ನಡೆದಿದೆ.
ಬೆಟಗೇರಿಯ ಬಿಜೆಪಿ ನಾಯಕಿ (BJP Leader), ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ (Sunanda Bakale) ಅವರ ಪುತ್ರ ಸೇರಿ ನಾಲ್ಕು ಮಂದಿಯನ್ನು ಭೀಕರವಾಗಿ ಕೊಲೆ (Murder) ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಸುನಂದಾ ಬಾಕಳೆ ಮತ್ತು ಅವರ ಪತಿ ಪ್ರಕಾಶ್ ಕೆಳಗಡೆ ಮಲಗಿದ್ದರೆ ಕೊಲೆಯಾದ ನಾಲ್ವರು ಮೇಲುಗಡೆ ಮಲಗಿದ್ದರು.
ಸುನಂದಾ ಬಾಕಳೆ ಪುತ್ರ ಕಾರ್ತಿಕ್ ಬಾಕಳೆ(27) ಉಪಾಧ್ಯಕ್ಷೆ ಸಹೋದರ ಪರಶುರಾಮ ಹಾದಿಮನಿ (55), ಪತ್ನಿ ಲಕ್ಷ್ಮೀ (45) ಇನ್ನು ಪುತ್ರಿ ಆಕಾಂಕ್ಷಾ(16) ಕೊಲೆಯಾದವರು. ಈ ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಕೊಲೆಯಾದ ಪರಶುರಾಮ ಪರಶುರಾಮ ಹಾದಿಮನಿ, ಪತ್ನಿ ಲಕ್ಷ್ಮೀ, ಪುತ್ರಿ ಆಕಾಂಕ್ಷಾ, ಸುನಂದಾ ಬಾಕಳೆ ಪುತ್ರ ಕಾರ್ತಿಕ್
ಮಧ್ಯರಾತ್ರಿ ಮೇಲಿನ ಮಹಡಿಯಲ್ಲಿ ಕಿರುಚಾಟದ ಧ್ವನಿ ಕೇಳಿ ಪ್ರಕಾಶ್ ಅವರು ಪೊಲೀಸರಿಗೆ ಕರೆ ಮಾಡಿದ್ದಾರೆ. ಪೊಲೀಸರಿಗೆ ಫೋನ್ ಮಾಡುತ್ತಿದ್ದಂತೆ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಬಾಗಿಲು ತೆಗೆದಿದ್ದರೆ ನಮ್ಮನ್ನು ಕೊಲೆ ಮಾಡುತ್ತಿದ್ದರು ಎಂದು ಪ್ರಕಾಶ್ ಬಾಕಳೆ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಹರ್ಷಿಕಾ-ಭುವನ್ ಮೇಲೆ ಹಲ್ಲೆ: ಪಾಕಿಸ್ತಾನದಲ್ಲಿ ಇದ್ದೀವಾ ಎಂದು ಪ್ರಶ್ನೆ ಮಾಡಿದ ನಟಿ
ಹುಟ್ಟುಹಬ್ಬದ ಸಂಭ್ರಮ ಮುಗಿಸಿ ರಾತ್ರಿ 1ನೇ ಮಹಡಿಯ ಕೋಣೆಯಲ್ಲಿ ಮಲಗಿದ್ದರು. ರಾತ್ರಿ 2 ರಿಂದ 3 ಗಂಟೆ ಸುಮಾರಿಗೆ ಬಂದ ದುಷ್ಕರ್ಮಿಗಳು ಮನಬಂದಂತೆ ಹತ್ಯೆಗೈದು, ಮಾರಕಾಸ್ತ್ರಗಳನ್ನು ಚರಂಡಿಯಲ್ಲಿ ಎಸೆದು ಹೋಗಿದ್ದಾರೆ.
ಕುಟುಂಬಸ್ಥರಿಗೆ ಸಾಂತ್ವನ ಹೇಳುತ್ತಿರುವ ಸಚಿವ ಹೆಚ್‌ಕೆ ಪಾಟೀಲ್
ಹುಟ್ಟುಹಬ್ಬ ಆಚರಿಸಿದ್ದ ಕುಟುಂಬ: ಮೃತ ಪರಶುರಾ ಮ್ ಹಾಗೂ ಅವರ ಪತ್ನಿ, ಮಗಳು ಕೊಪ್ಪಳ ಮೂಲದವರು. ಎರಡು ದಿನಗಳ ಏ.17 ರಂದು ಮೃತ ಕಾರ್ತಿಕ್ ಬಾಕಳೆಯ ಮದುವೆ ನಿಗದಿ ಮಾಡುವ ಕಾರ್ಯಕ್ರಮ ನಡೆದಿತ್ತು. ಏ.25 ರಂದು ಸಕ್ಕರೆ ಕಾರ್ಯಕ್ಕೆ ಕುಟುಂಬಕ ಭರ್ಜರಿ ಸಿದ್ದತೆ ನಡೆಸಿತ್ತು. ಗುರುವಾರ ಮೃತ ಲಕ್ಷ್ಮೀ ಹುಟ್ಟುಹಬ್ಬದ ಇತ್ತು. ರಾತ್ರಿ ಎಲ್ಲರೂ ಹುಟ್ಟುಹಬ್ಬ ಆಚರಿಸಿ ಮಲಗಿದ್ದರು.
ಸ್ಥಳಕ್ಕೆ ಎಸ್ಪಿ ಬಿ.ಎಸ್. ನೇಮಗೌಡ, ಹೆಚ್ಚುವರಿ ಎಸ್ಪಿ ಎಂ.ಬಿ. ಸಂಕದ, ಡಿವೈಎಸ್ಪಿ, ಸಿಪಿಐ ಸೇರಿ ಹಲವು ಪೊಲೀಸ್ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸುತ್ತಿದ್ದು, ಶ್ವಾನದಳ, ವಿಧಿ ವಿಜ್ಞಾನ ಪ್ರಯೋಗಾಲಯದ ತಂಡಗಳು ಪರಿಶೀಲನೆ ನಡೆಸುತ್ತಿದೆ.
ಸ್ಥಳಕ್ಕೆ ಭೇಟಿ ನೀಡಿ ಪ್ರತಿಕ್ರಿಯಿಸುತ್ತಿರುವ ಎಸ್‌ಪಿ ಬಿ.ಎಸ್. ನೇಮಗೌಡ
ಮನೆಯಿಂದ ಮೃತ ದೇಹಗಳನ್ನು ಗದಗ ಜಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಶವ ಪರೀಕ್ಷೆಯ ನಂತರ ಅಂತ್ಯಕ್ರಿಯೆ ಸಕಲ ಸಿದ್ದತೆ ನಡೆಸಿದ್ದಾರೆ. ನಗರದ ರೆಹಮತ್ ನಗರದ ಮುಕ್ತಿಧಾಮದಲ್ಲಿ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ಮಾಡಲಾಗಿದೆ. ಪರಶುರಾಮ್ ಹಾಗೂ ಕುಟುಂಬಸ್ಥರ ಮೃತದೇಹ ಕೊಪ್ಪಳಕ್ಕೆ ರವಾನೆ ಮಾಡುವ ಸಾಧ್ಯತೆ ಇದೆ. ಆದರೆ ಕಾರ್ತಿಕ್ ಬಾಕಳೆ ಶವ ಮಾತ್ರ ಗದಗ ಮುಕ್ತಿಧಾಮದಲ್ಲಿ ಸಾಯಂಕಾಲ 4 ಗಂಟೆ ನಂತರ ಅಂತ್ಯಕ್ರಿಯೆ ನಡೆಯಲಿದೆ.
ಕೊಲೆ ಉದ್ದೇಶದಿಂದಲೇ ನುಗ್ಗಿದ್ದಾರೆ: ಕೊಲೆ ನಡೆದ ಸ್ಥಳಕ್ಕೆ ಬೆಳಗಾವಿ ಉತ್ತರ ವಲಯದ ಐಜಿಪಿ ವಿಕಾಸಕುಮಾರ್ ವಿಕಾಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಪರಾಧಿಗಳ ಪತ್ತೆಗಾಗಿ ನಾಲ್ಕು ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ. ಸದ್ಯ ಸಿಕ್ಕಿರುವ ಪ್ರಾಥಮಿಕ ಮಾಹಿತಿ ಆಧಾರದ ಮೇಲೆ ವಿಭಿನ್ನ ಆಯಾಮಗಳಲ್ಲಿ ತನಿಖೆ ಮಾಡಲಾಗುವುದು. ಅಪರಾಧ ಮಾಡಿರುವುದನ್ನು ಗಮನಿಸಿದರೆ ಕಳ್ಳತನ, ದರೋಡೆಗೆ ಮನೆಗೆ ನುಗ್ಗಿಲ್ಲ. ಕೊಲೆ ಮಾಡುವ ಉದ್ದೇಶಕ್ಕೆ ಬಂದಿರುವುದು ಮೇಲ್ನೋಟಕ್ಕೆ ಗೋಚರಿಸುತ್ತಿದೆ. ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಆರೋಪಿಗಳನ್ನು ಶೀಘ್ರವೇ ವಶಕ್ಕೆ ಪಡೆಯಲಾಗುವುದು ಎಂದು ಐಜಿಪಿ ವಿಕಾಸಕುಮಾರ್ ಹೇಳಿದರು.
ಮಾಧ್ಯಮಗಳಿಗೆ ಎಸ್‌ಪಿ ಬಿ.ಎಸ್. ನೇಮಗೌಡ ಪ್ರತಿಕ್ರಿಯೆ ನೀಡಿ, ಕುಟುಂಬಸ್ಥರು ಹೇಳುವ ಪ್ರಕಾರ ಮಧ್ಯರಾತ್ರಿ 2 ರಿಂದ 3 ಗಂಟೆಗೆ ಈ ಕೃತ್ಯ ನಡೆದಿದೆ. ಮಾರಕಾಸ್ತ್ರಗಳಿಂದ ಹತ್ಯೆ ಮಾಡಿರುವುದು ಕಂಡು ಬರುತ್ತಿದೆ. ಕುಟುಂಬಸ್ಥರು ಹೇಳುವ ಪ್ರಕಾರ ರಾತ್ರಿ ಮನೆಗ ಬಾಗಿಲು ಬಡಿದರೂ ತೆರೆಯಲಿಲ್ಲ. ಆದರೆ ಮೇಲುಗಡೆ ಬಂದು ನೋಡಿದಾಗ 2 ರೂಮಿನಲ್ಲಿ ಹತ್ಯೆ ಆಗಿತ್ತು. ಈ ಬಗ್ಗೆ ಪರಿಶೀಲನೆ ನಡೆಸಿದ್ದೇವೆ. ಹಂತಕರು ಟೆರೇಸ್‌ನಿಂದ ಬಂದಿದ್ದಾರೆ ಎನ್ನಲಾಗುತ್ತಿದ್ದು ಪರಿಶೀಲನೆ ನಡೆಸುತ್ತಿದ್ದೇವೆ ಎಂದು ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ ಪಾಟೀಲ್ ಸ್ಥಳಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ಗುವಾಹಟಿ: ಲೋಕಸಭಾ ಚುನಾವಣೆಗೆ (Lok sabha Elections 2024) ಸಜ್ಜಾಗುತ್ತಿದ್ದಂತೆಯೇ ಅಸ್ಸಾಂನ ರಂಗಪಾರ ವಿಧಾನಸಭಾ ಕ್ಷೇತ್ರ ಮತ್ತು ಸೋನಿತ್‌ಪುರ ಸಂಸದೀಯ ಕ್ಷೇತ್ರದ ವ್ಯಾಪ್ತಿಯಲ್ಲಿ ವಿಶಿಷ್ಟ ಕುಟುಂಬವೊಂದು ಬೆಳಕಿಗೆ ಬಂದಿದೆ.
ಹೌದು. ಅಸ್ಸಾಂನ (Assam) ಸೋನಿತ್‌ಪುರ ಜಿಲ್ಲೆಯಲ್ಲಿ ಒಂದೇ ಕುಟುಂಬದಲ್ಲಿ ಸುಮಾರು 350 ಮತದಾರರಿದ್ದಾರೆ. ಈ ಕುಟುಂಬವು ಒಟ್ಟು 1,200 ಸದಸ್ಯರನ್ನು ಹೊಂದಿದೆ. ಇದು ದೇಶದ ಅತಿದೊಡ್ಡ ಕುಟುಂಬಗಳಲ್ಲಿ ಒಂದಾಗಿದೆ. ಈ ಕುಟುಂಬದ ಎಲ್ಲಾ ಅರ್ಹ ಸದಸ್ಯರು ಏ.19 ರಂದು ಸೋನಿತ್‌ಪುರ ಲೋಕಸಭಾ ಕ್ಷೇತ್ರದಲ್ಲಿ ಮತ ಚಲಾಯಿಸಲಿದ್ದಾರೆ.
ಈ ಕುಟುಂಬವು ಜಿಲ್ಲೆಯ ಫುಲೋಗುರಿ ನೇಪಾಳಿ ಪಾಮ್‌ನ ದಿ.ರಾನ್ ಬಹದ್ದೂರ್ ಥಾಪಾ ಕುಟುಂಬಕ್ಕೆ ಸೇರಿದ್ದಾಗಿದೆ. ಥಾಪಾ ಅವರಿಗೆ ಐವರು ಹೆಂಡತಿಯರು, 12 ಗಂಡು ಮತ್ತು 9 ಮಂದಿ ಹೆಣ್ಣು ಮಕ್ಕಳಿದ್ದಾರೆ. ರಾನ್ ಬಹದ್ದೂರ್ ಅವರು 150 ಕ್ಕೂ ಹೆಚ್ಚು ಮೊಮ್ಮಕ್ಕಳನ್ನು ಹೊಂದಿದ್ದಾರೆ. ಒಟ್ಟಾರೆ 1,200 ಸದಸ್ಯರಿರುವ ಈ ಕುಟುಂಬದಲ್ಲಿ ಸುಮಾರು 350 ಸದಸ್ಯರು ಈ ಬಾರಿಯ ಚುನಾವಣೆಯಲ್ಲಿ ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಇದನ್ನೂ ಓದಿ: 200 ಕೋಟಿ ಆಸ್ತಿ ದಾನ ಮಾಡಿ ಸನ್ಯಾಸತ್ವ ಸ್ವೀಕರಿಸಿದ ಉದ್ಯಮಿ ದಂಪತಿ
ಈ ಕುರಿತು ದಿವಂಗತ ರಾನ್ ಬಹದ್ದೂರ್ ಅವರ ಪುತ್ರ ಟಿಲ್ ಬಹದ್ದೂರ್ ಥಾಪಾ ಅವರು ಸುದ್ದಿ ಸಂಸ್ಥೆಯೊಂದಕ್ಕೆ ಪ್ರತಿಕ್ರಿಯಿಸಿ, ನಮ್ಮ ಇಡೀ ಕುಟುಂಬದಲ್ಲಿ ಸುಮಾರು 350 ಜನರು ಮತ ಚಲಾಯಿಸಲು ಅರ್ಹರಾಗಿದ್ದಾರೆ. ನನ್ನ ತಂದೆ 1964 ರಲ್ಲಿ ನನ್ನ ಅಜ್ಜನೊಂದಿಗೆ ಇಲ್ಲಿಗೆ ಬಂದು ಇಲ್ಲಿ ನೆಲೆಸಿದರು. ತಂದೆಗೆ ಐದು ಮಂದಿ ಪತ್ನಿಯರು ಹಾಗೂ ನಮಗೆ 12 ಸಹೋದರರು ಮತ್ತು 9 ಮಂದಿ ಸಹೋದರಿಯರಿದ್ದಾರೆ. ಅವರ ಪುತ್ರರಿಂದ 56 ಮೊಮ್ಮಕ್ಕಳಿದ್ದು, ಇದರಲ್ಲಿ ಎಷ್ಟು ಹೆಣ್ಣುಮಕ್ಕಳು ಇದ್ದಾರೆ ಎಂದು ನನಗೆ ಗೊತ್ತಿಲ್ಲ. ಮೊಮ್ಮಕ್ಕಳು ಕೂಡ ಇದ್ದಾರೆ. ಈ ಚುನಾವಣೆಯಲ್ಲಿ ಥಾಪಾ ಕುಟುಂಬದ ಸುಮಾರು 350 ಸದಸ್ಯರು ಮತದಾನ ಮಾಡಲು ಅರ್ಹರಾಗಿದ್ದಾರೆ. ಎಲ್ಲರನ್ನು ಲೆಕ್ಕ ಹಾಕಿದರೆ ನಮ್ಮ ಕುಟುಂಬದ ಒಟ್ಟು ಸದಸ್ಯರು 1,200 ಕ್ಕಿಂತ ಹೆಚ್ಚಿರುತ್ತಾರೆ ಎಂದರು.
ಸಾಂದರ್ಭಿಕ ಚಿತ್ರ
ಕುಟುಂಬದವರ ಆರೋಪ: ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಲ್ಯಾಣ ಯೋಜನೆಗಳ ಸದುಪಯೋಗ ಈ ಕುಟುಂಬಕ್ಕೆ ಇನ್ನೂ ಸಾಧ್ಯವಾಗಿಲ್ಲ ಎಂದು ಇದೇ ವೇಳೆ ಟಿಲ್ ಬಹದ್ದೂರ್ ಥಾಪಾ ವಿಷಾದ ವ್ಯಕ್ತಪಡಿಸಿದರು. ನಮ್ಮ ಮಕ್ಕಳು ಉನ್ನತ ಶಿಕ್ಷಣ ಪಡೆದರು. ಆದರೆ ಯಾವುದೇ ಸರ್ಕಾರಿ ಕೆಲಸ ಸಿಗಲಿಲ್ಲ. ಕುಟುಂಬದ ಕೆಲವರು ಬೆಂಗಳೂರಿಗೆ ತೆರಳಿ ಖಾಸಗಿ ಉದ್ಯೋಗಗಳನ್ನು ಕಂಡುಕೊಂಡಿದ್ದಾರೆ. ಕೆಲವರು ದಿನಗೂಲಿ ಕೆಲಸ ಮಾಡುತ್ತಿದ್ದಾರೆ. ನಾನು 1989 ರಿಂದ ಗ್ರಾಮದ ಮುಖ್ಯಸ್ಥನಾಗಿದ್ದೇನೆ. ನನಗೆ 8 ಗಂಡು ಮತ್ತು ಮೂವರು ಹೆಣ್ಣು ಮಕ್ಕಳಿದ್ದಾರೆ ಎಂದು ತಿಳಿಸಿದರು.
9 ವಿಧಾನಸಭಾ ಕ್ಷೇತ್ರಗಳಿರುವ ಸೋನಿತ್‌ಪುರ ಲೋಕಸಭಾ ಕ್ಷೇತ್ರದಲ್ಲಿ 16.25 ಲಕ್ಷಕ್ಕೂ ಹೆಚ್ಚು ಮತದಾರರಿದ್ದಾರೆ. ಅಸ್ಸಾಂನ 14 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 19, ಏಪ್ರಿಲ್ 26 ಮತ್ತು ಮೇ 7 ಹೀಗೆ ಮೂರು ಹಂತಗಳಲ್ಲಿ ಮತದಾನ ನಡೆಯಲಿದೆ.
ಬೆಂಗಳೂರು: ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ (Sculptor Arun Yogiraj) ಅವರು ಏಪ್ರಿಲ್ 17 ರಂದು ರಾಮನವಮಿ (Rama Navami) ಹಬ್ಬವನ್ನು ಅಯೋಧ್ಯೆಯಲ್ಲಿ ತಮ್ಮ ಕುಟುಂಬದೊಂದಿಗೆ ಆಚರಿಸಲು ಪ್ಲಾನ್ ಮಾಡಿಕೊಂಡಿದ್ದಾರೆ.
ಈ ಸಂಬಂಧ ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ಜನವರಿ 22 ರ ಬಳಿಕ ಅಯೋಧ್ಯೆಗೆ ಭೇಟಿ ನೀಡಿಲ್ಲ. ಇದೀಗ ರಾಮಲಲ್ಲಾ ವಿಗ್ರಹವನ್ನು ವೀಕ್ಷಿಸಲು ತಮ್ಮ ಕುಟುಂಬವನ್ನು ಅಲ್ಲಿಗೆ ಕರೆದೊಯ್ಯಲು ಉತ್ಸುಕನಾಗಿರುವುದಾಗಿ ತಿಳಿಸಿದ್ದಾರೆ.
ಹೊಸ ಬಟ್ಟೆ ಖರೀದಿಸುವುದು ಸೇರಿದಂತೆ ತಮ್ಮ ಸಿದ್ಧತೆಗಳ ಜೊತೆಗೆ ತಮ್ಮ ಕುಟುಂಬ ಪ್ರವಾಸದ ಉತ್ಸಾಹವನ್ನು ಹಂಚಿಕೊಂಡರು. ವಿಶೇಷವಾಗಿ ವಿಗ್ರಹದ ನೋಟದಲ್ಲಿನ ಬದಲಾವಣೆಗಳ ಬಗ್ಗೆ ಸ್ನೇಹಿತರಿಂದ ಕೇಳಿದ ನಂತರ ರಾಮಲಲ್ಲಾನನ್ನು (Rama Lalla) ಮತ್ತೆ ನೋಡಲು ತುಂಬಾ ಉತ್ಸುಕನಾಗಿದ್ದೇನೆ. ಇಂತಹ ಐತಿಹಾಸಿಕ ಸ್ಥಳಕ್ಕಾಗಿ ವಿಗ್ರಹವನ್ನು ಕೆತ್ತಲು ಆಯ್ಕೆ ಮಾಡಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸಿದರು. ಇದನ್ನೂ ಓದಿ: ಈ ಬಾರಿ ಅಯೋಧ್ಯೆಯಲ್ಲಿ ರಾಮನವಮಿ ಅದ್ಧೂರಿ ಆಚರಣೆ- ಸೂರ್ಯ ತಿಲಕಕ್ಕೆ ಸಿದ್ಧತೆ
ನನ್ನ ಕುಟುಂಬದವರು ರಾಮಲಲ್ಲಾನನ್ನು ನೋಡಬೇಕೆಂದು ಪಟ್ಟು ಹಿಡಿದಿದ್ದಾರೆ. ದಿನನಿತ್ಯ ಹೇಳುತ್ತಾ ಇರುತ್ತಾರೆ. ಆದರೆ ನಾನು ಮುಂದೂಡುತ್ತಲೇ ಇದ್ದೆ. ಹಾಗಾಗಿ ಈ ಬಾರಿ ನಾನು ಅವರನ್ನು ಕರೆದುಕೊಂಡು ಹೋಗುತ್ತೇನೆ. ಅವರನ್ನು ಬಿಟ್ಟು ನಾನು ಅಯೋಧ್ಯೆಗೆ (Ayodhya) ಹೋದರೆ ಅವರು ನನ್ನನ್ನು ಶಿಕ್ಷಿಸುತ್ತಾರೆ ಎಂದು ನಗುತ್ತಲೇ ಅರುಣ್ ಅವರು ಹೇಳಿದರು.
ಇದೇ ವೇಳೆ ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆದ ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಭಾಗವಹಿಸಿದ್ದನ್ನು ನೆನಪಿಸಿಕೊಂಡರು. ಪ್ರಧಾನಿ ನರೇಂದ್ರ ಮೋದಿಯವರ ಕೃಪಾಶೀರ್ವಾದದಲ್ಲಿ ಸಾವಿರಾರು ಮಂದಿ ಪಾಲ್ಗೊಂಡಿದ್ದ ಈ ಕಾರ್ಯಕ್ರಮದಲ್ಲಿ ವಿಧಿವಿಧಾನಗಳ ನಡುವೆ ವಿಗ್ರಹ ಅನಾವರಣಗೊಳಿಸಲಾಯಿತು ಎಂದರು.