Tag: Family Conflict

  • ಆಸ್ತಿ ಕಲಹ – ಪತಿಯ ಕಾರಿಗೆ ಬೆಂಕಿ ಇಟ್ಟ ಪತ್ನಿ

    ಆಸ್ತಿ ಕಲಹ – ಪತಿಯ ಕಾರಿಗೆ ಬೆಂಕಿ ಇಟ್ಟ ಪತ್ನಿ

    ಚಿಕ್ಕೋಡಿ: ಕೌಟುಂಬಿಕ ಕಲಹ (Family Conflict) ಹಾಗೂ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಪುತ್ರನ ಜೊತೆ ಸೇರಿ ಪತ್ನಿ ಪತಿಯ ಕಾರಿಗೆ ಬೆಂಕಿ ಹಚ್ಚಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ (Chikkodi) ತಾಲೂಕಿನ ಪೊಗತ್ಯಾನಟ್ಟಿ ಗ್ರಾಮದಲ್ಲಿ ನಡೆದಿದೆ.

    ಪೊಗತ್ಯಾನಟ್ಟಿ ಗ್ರಾಮದ ಪ್ರಗತಿಪರ ರೈತ ಶಿವಗೌಡ ಪಾಟೀಲ (Car)  ಅವರಿಗೆ ಪತ್ನಿ ಸಾವಿತ್ರಿ ಹಾಗೂ ಪುತ್ರ ಪ್ರಜ್ವಲ್‌ ಹಲ್ಲೆ ಮಾಡಿ ಮಾರುತಿ ಇಕೋ ಕಾರಿಗೆ ಬೆಂಕಿ ಹಚ್ಚಿದ್ದಾರೆ. ಕಾರಿನಲ್ಲಿ ಕೂಡಿ ಹಾಕಿ ಹತ್ಯೆ ಮಾಡಲು ಯತ್ನಿಸಿದ್ದಾರೆ ಎಂದು ಶಿವಗೌಡ ಪಾಟೀಲ ಆರೋಪ ಮಾಡಿದ್ದಾರೆ.  ಇದನ್ನೂ ಓದಿ:  ಅನ್ನಭಾಗ್ಯ | 5 ಕೆಜಿ ಅಕ್ಕಿ ಬದಲು ʻಇಂದಿರಾ ಆಹಾರ ಕಿಟ್‌ʼ

    ದಂಪತಿ ಮದುವೆಯಾಗಿ 22 ವರ್ಷಗಳಾಗಿದ್ದು ಅನ್ಯೋನ್ಯವಾಗಿದ್ದರು. ಆದರೆ ಕಳೆದ ಕೆಲವು ದಿನಗಳಿಂದ ಭಿನ್ನಾಭಿಪ್ರಾಯ ಉಂಟಾಗಿ ಆಸ್ತಿ ಬೇಕು ಎಂದು ಪತ್ನಿ ಸಾವಿತ್ರಿ ಹಾಗೂ ಪುತ್ರ ಬೇಡಿಕೆ ಇಟ್ಟಿದ್ದರು. ಈ ಕಾರಣಕ್ಕೆ ಗಲಾಟೆಯಾಗಿದೆ ಎನ್ನುವ ಪ್ರಾಥಮಿಕ ಮಾಹಿತಿಯನ್ನ ಪೊಲೀಸರು ನೀಡಿದ್ದಾರೆ‌‌. ಸ್ಥಳಕ್ಕೆ ಚಿಕ್ಕೋಡಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ‌.

    ಪ್ರಗತಿಪರ ರೈತ ಆಗಿರುವ ಶಿವಗೌಡ ವಿವಿಧ ಬಗೆಯ ಬಾಳೆ ಹಣ್ಣು ಸೇರಿದಂತೆ ದೇಶ ವಿದೇಶದ ಬೆಳೆಗಳನ್ನ ಬೆಳೆದು ಹೆಸರುವಾಸಿಯಾಗಿದ್ದಾರೆ.

  • Bengaluru | ಕುಟುಂಬ ಕಲಹದಿಂದ ಮಾನಸಿಕವಾಗಿ ನೊಂದು ಟೆಕ್ಕಿ ಆತ್ಮಹತ್ಯೆ

    Bengaluru | ಕುಟುಂಬ ಕಲಹದಿಂದ ಮಾನಸಿಕವಾಗಿ ನೊಂದು ಟೆಕ್ಕಿ ಆತ್ಮಹತ್ಯೆ

    ಬೆಂಗಳೂರು: ಕುಟುಂಬ ಕಲಹದಿಂದ (Family Dispute) ಮಾನಸಿಕವಾಗಿ ನೊಂದು ಟೆಕ್ಕಿಯೊಬ್ಬರು (Techie) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ.

    ಖಾಸಗಿ ಕಂಪನಿಯ ಹಿರಿಯ ಉದ್ಯೋಗಿ ಪ್ರಶಾಂತ್ ನಾಯರ್ (40) ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ. ಚಿಕ್ಕಬಾಣಾವರದ (Chikkabanavara) ಡಿ.ಎಕ್ಸ್ ಸ್ಮಾರ್ಟ್ ನೆಸ್ಟ್ ಅಪಾರ್ಟ್ಮೆಂಟ್‌ನಲ್ಲಿ ಟೆಕ್ಕಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. 12 ವರ್ಷದ ಹಿಂದೆ ಪೂಜಾ ಎಂಬಾಕೆಯನ್ನು ಪ್ರಶಾಂತ್ ಮದುವೆಯಾಗಿದ್ದರು. ಪ್ರಶಾಂತ್ ದಂಪತಿಗೆ 8 ವರ್ಷದ ಮಗಳು ಸಹ ಇದ್ದಾಳೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಪೂಜಾ ನಾಯರ್ ದಂಪತಿ ನಡುವೆ ಸಾಕಷ್ಟು ಭಿನ್ನಾಭಿಪ್ರಾಯವಿತ್ತು. ಬಳಿಕ ಡಿವೋರ್ಸ್ ಕೂಡ ಆಗಿದೆ ಎಂಬ ಮಾಹಿತಿ ಲಭಿಸಿದೆ. ಇದರಿಂದ ಮಾನಸಿಕವಾಗಿ ನೊಂದಿದ್ದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಸಂಶಯ ವ್ಯಕ್ತವಾಗಿದೆ. ಇದನ್ನೂ ಓದಿ: ಬಿಜೆಪಿ ಅಸ್ತಿತ್ವಕ್ಕಾಗಿ ಜನಾಕ್ರೋಶ ಯಾತ್ರೆ ಮಾಡ್ತಿದೆ ಅಂದವರು ಅಯೋಗ್ಯರು: ವಿಜಯೇಂದ್ರ ಕಿಡಿ

    ಹಲವು ಬಾರಿ ಕರೆ ಮಾಡಿದರೂ ಟೆಕ್ಕಿ ಪ್ರಶಾಂತ್ ಕರೆ ಸ್ವೀಕರಿಸಿಲ್ಲ. ಅನುಮಾನಗೊಂಡ ಪ್ರಶಾಂತ್ ತಂದೆ ಮನೆ ಬಳಿ ಬಂದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬೆಂಗಳೂರು ದೊಡ್ಡ ನಗರ, ಅಲ್ಲೊಂದು-ಇಲ್ಲೊಂದು ಕಿರುಕುಳ ಘಟನೆ ಆಗುತ್ತೆ: ಪರಮೇಶ್ವರ್ ಬೇಜವಾಬ್ದಾರಿ ಹೇಳಿಕೆ

  • ಕೌಟುಂಬಿಕ ಕಲಹಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆಗೆ ಶರಣು

    ಕೌಟುಂಬಿಕ ಕಲಹಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆಗೆ ಶರಣು

    ರಾಯಚೂರು: ಸರ್ಕಾರಿ ಪಬ್ಲಿಕ್ ಶಾಲೆಯ ಹಿಂಭಾಗದಲ್ಲಿ ಮರವೊಂದಕ್ಕೆ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ನಡೆದಿದೆ.

    ಮಾನ್ವಿ ತಾಲೂಕಿನ ಬ್ಯಾಗವಾಟ ಗ್ರಾಮದ ಮಹಾಂತೇಶ(40) ಮೃತ ವ್ಯಕ್ತಿ. ಕೌಟುಂಬಿಕ ಕಲಹದಿಂದ ಬೇಸತ್ತಿದ್ದ ಮಹಾಂತೇಶ ರಾತ್ರಿ ಮನೆಯಲ್ಲಿ ಜಗಳವಾಡಿಕೊಂಡು ಬೈಕ್‍ನಲ್ಲಿ ಹೊರ ಬಂದಿದ್ದರು. ಇದನ್ನೂ ಓದಿ: ಉಪನ್ಯಾಸಕಿಯರ ಜೊತೆ ಅಸಭ್ಯ ವರ್ತನೆ – ಉಪನ್ಯಾಸಕನಿಗೆ ಹಿಗ್ಗಾಮುಗ್ಗ ಥಳಿತ

    ಜೀವನದಲ್ಲಿ ಜಿಗುಪ್ಸೆಹೊಂದಿ ಮಸ್ಕಿಯ ಲಿಂಗಸುಗೂರು ರಸ್ತೆಯಲ್ಲಿರುವ ಸರ್ಕಾರಿ ಪಬ್ಲಿಕ್ ಶಾಲೆಯ ಹಿಂಭಾಗದಲ್ಲಿ ಬೈಕ್ ನಿಲ್ಲಿಸಿ ಪಕ್ಕದ ಮರವೊಂದಕ್ಕೆ ನೇಣು ಹಾಕಿಕೊಂಡು ಪ್ರಾಣಬಿಟ್ಟಿದ್ದಾನೆ. ಘಟನೆ ಹಿನ್ನೆಲೆ ಮಸ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಜು.1ರಿಂದ ಪ್ರತಿ ಮನೆಗೆ 300 ಯೂನಿಟ್ ಉಚಿತ ವಿದ್ಯುತ್ – ಪಂಜಾಬ್ ಸರ್ಕಾರ ಘೋಷಣೆ