Tag: Family Feud

  • ಹಾಸನ | ಕೌಟುಂಬಿಕ ಕಲಹ – ಮನನೊಂದು ಮಹಿಳೆ ನೇಣಿಗೆ ಶರಣು

    ಹಾಸನ | ಕೌಟುಂಬಿಕ ಕಲಹ – ಮನನೊಂದು ಮಹಿಳೆ ನೇಣಿಗೆ ಶರಣು

    ಹಾಸನ: ಕೌಟುಂಬಿಕ ಕಲಹದಿಂದ (Family Feud) ಮನನೊಂದ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ (Hassan) ಜಿಲ್ಲೆ ಬೇಲೂರು (Belur) ತಾಲೂಕಿನ ಲಿಂಗಾಪುರ (Lingapura) ಗ್ರಾಮದಲ್ಲಿ ನಡೆದಿದೆ.

    ಹರಿಣಾಕ್ಷಿ (40) ಆತ್ಮಹತ್ಯೆಗೆ ಶರಣಾದ ಮಹಿಳೆ. ಹರಿಣಾಕ್ಷಿ 16 ವರ್ಷಗಳ ಹಿಂದೆ ಲಿಂಗಾಪುರ ಗ್ರಾಮದ ಶೇಖರ್ ಜೊತೆ ವಿವಾಹವಾಗಿದ್ದರು. ಪತಿ ತನ್ನ ಪತ್ನಿಯನ್ನು ಸದಾ ಅನುಮಾನದಿಂದ ನೋಡುತ್ತಿದ್ದ. ಇದೇ ವಿಚಾರಕ್ಕೆ ದಂಪತಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಎರಡೂ ಕುಟುಂಬಗಳ ಹಿರಿಯರು ಹಲವು ಬಾರಿ ರಾಜಿ ಸಂಧಾನ ಕೂಡ ಮಾಡಿದ್ದರು. ಆದರೂ ಪತಿ-ಪತ್ನಿ ನಡುವೆ ಜಗಳ ನಡೆಯುತ್ತಲೇ ಇತ್ತು. ಇದನ್ನೂ ಓದಿ: ಸರ್ಕಾರಿ ಬಸ್, ಆಟೋರಿಕ್ಷಾ ನಡುವೆ ಭೀಕರ ಅಪಘಾತ – 6 ಮಂದಿ ದುರ್ಮರಣ

    ಇದರಿಂದ ಮನನೊಂದಿದ್ದ ಹರಿಣಾಕ್ಷಿ ಮನೆಯಲ್ಲಿಯೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಟಾಯ್ಲೆಟ್‌ಗೆ ಹೋಗಿದ್ದವಳು ಕೊನೆ ಕ್ಷಣದಲ್ಲಿ ಹಾಜರ್ – ಸಿಇಟಿಯಲ್ಲಿ ನಕಲಿ ವಿದ್ಯಾರ್ಥಿ, ತನಿಖೆಗೆ ಆದೇಶ

  • Hassan| ಅತ್ತೆ-ಸೊಸೆ ಜಗಳ; ಕೆರೆಗೆ ಹಾರಿ ತಾಯಿ, ಮಗ ಆತ್ಮಹತ್ಯೆ

    Hassan| ಅತ್ತೆ-ಸೊಸೆ ಜಗಳ; ಕೆರೆಗೆ ಹಾರಿ ತಾಯಿ, ಮಗ ಆತ್ಮಹತ್ಯೆ

    ಹಾಸನ: ಕೌಟುಂಬಿಕ ಕಲಹ (Family Feud) ಹಿನ್ನೆಲೆ ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ (Hassan) ಜಿಲ್ಲೆ ಚನ್ನರಾಯಪಟ್ಟಣ (Channarayapatna) ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ನಡೆದಿದೆ.

    ಜಯಂತಿ (60), ಭರತ್ (35) ಆತ್ಮಹತ್ಯೆಗೆ ಶರಣಾದ ತಾಯಿ-ಮಗ. ಭರತ್ ಕಳೆದ ಎಂಟು ತಿಂಗಳ ಹಿಂದಷ್ಟೇ ಅರಸೀಕೆರೆ (Arasikere) ತಾಲೂಕು ಬಾಗೂರನಹಳ್ಳಿ ಗ್ರಾಮದ ಯುವತಿಯೊಂದಿಗೆ ವಿವಾಹವಾಗಿದ್ದರು. ಅತ್ತೆ-ಸೊಸೆ ನಡುವೆ ಹೊಂದಾಣಿಕೆ ಇಲ್ಲದೆ ಪದೇಪದೇ ಜಗಳ ನಡೆಯುತ್ತಿತ್ತು. ಇದೇ ಕಾರಣಕ್ಕೆ ಭರತ್ ಪತ್ನಿ ಮನೆಬಿಟ್ಟು ತವರು ಮನೆಗೆ ಹೋಗಿದ್ದರು. ಇದನ್ನೂ ಓದಿ: ನಲ್ಲೂರು ಮಠ ವರ್ಸಸ್ ಬಡಾಮಕಾನ್ ತೆರವು ವಿವಾದ – ಜಿಲ್ಲಾ ವಕ್ಫ್ ಅಧಿಕಾರಿ ಅಮಾನತು

    ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಎರಡು ಬಾರಿ ರಾಜಿ ಪಂಚಾಯ್ತಿ ಮಾಡಿದ್ದರು. ಆದರೂ ಭರತ್ ಪತ್ನಿ ಗಂಡನ ಜೊತೆ ಇರದೇ ತವರು ಮನೆಗೆ ಹೋಗಿದ್ದರು. ಇದರಿಂದ ಮನನೊಂದಿದ್ದ ಭರತ್ ಹಾಗೂ ತಾಯಿ ಜಯಂತಿ ಕೆರೆಗೆ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿರಿಸಾವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ನಾವ್ ಹೇಳಿದಂಗೆ ಕೆಲ್ಸ ಮಾಡೋ ಹಾಗಿದ್ರೆ ಇಲ್ಲಿರಿ, ಇಲ್ಲ ನಡೀರಿ: ಮಹಿಳಾ ಅಧಿಕಾರಿ ಮೇಲೆ ಸಚಿವ ವೆಂಕಟೇಶ್ ದರ್ಪ

  • Bengaluru| ಕೌಟುಂಬಿಕ ಕಲಹದಿಂದ ಮನನೊಂದು ಕ್ರಿಕೆಟ್ ಪಟು ನೇಣಿಗೆ ಶರಣು

    Bengaluru| ಕೌಟುಂಬಿಕ ಕಲಹದಿಂದ ಮನನೊಂದು ಕ್ರಿಕೆಟ್ ಪಟು ನೇಣಿಗೆ ಶರಣು

    ಬೆಂಗಳೂರು: ಕೌಟುಂಬಿಕ ಕಲಹದಿಂದ (Family Dispute) ಮನನೊಂದು ಕ್ರಿಕೆಟ್ ಪಟು ನೇಣಿಗೆ ಶರಣಾದ ಘಟನೆ ಸೋಲದೇವನಹಳ್ಳಿ (Soladevanahalli) ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಬಾಲರಾಜ್ (41) ಆತ್ಮಹತ್ಯೆಗೆ ಶರಣಾದ ಕ್ರಿಕೆಟ್ ಪಟು. ಹೆಸರಘಟ್ಟ (Hesaraghatta) ರಸ್ತೆ ಬಳಿಯ ಸಿಲುವೆಪುರದಲ್ಲಿ ಘಟನೆ ನಡೆದಿದೆ. ಬಾಲರಾಜ್ 18 ವರ್ಷದ ಹಿಂದೆ ಪತ್ನಿ ಕುಮಾರಿಯನ್ನು ಎರಡನೇ ಮದುವೆಯಾಗಿದ್ದ. ಗ್ರಾಮಾಂತರ ಭಾಗದಲ್ಲಿ ಕ್ರಿಕೆಟ್ ಪಟುವಾಗಿದ್ದ ಬಾಲರಾಜ್ ಹೆಂಡತಿ ಕಿರುಕುಳದ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪವನ್ನು ಎದುರಿಸುತ್ತಿದ್ದ. ಈ ಸಂಬಂಧ ಇಬ್ಬರ ಮಧ್ಯೆ ಆಗಾಗ ಗಲಾಟೆ ನಡೆಯುತ್ತಿತ್ತು. ಗಲಾಟೆ ಬಳಿಕ ಬಾಲರಾಜ್ ಪತ್ನಿ ಮನೆ ತೊರೆದು ತವರು ಸೇರಿದ್ದಳು. ಇದನ್ನೂ ಓದಿ: ಇಂದು ಲೋಕಸಭೆಯಲ್ಲಿ ಮಂಡನೆಯಾಗಲಿದೆ ಒಂದು ದೇಶ ಒಂದು ಚುನಾವಣೆ ಮಸೂದೆ

     ಇತ್ತ ಯಾರೂ ಇಲ್ಲದ ವೇಳೆ ಡೆತ್‌ನೋಟ್ ಬರೆದು ಮನೆಯ ಫ್ಯಾನ್‌ಗೆ ನೇಣು ಬಿಗಿದುಕೊಂಡು ಬಾಲರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತದೇಹದ ಜೊತೆ ತಾನು ಪಡೆದಿದ್ದ ಟ್ರೋಫಿ, ಬ್ಯಾಟ್, ಬಾಲ್, ವಿಕೆಟ್ ಇಡುವಂತೆ ಡೆತ್ ನೋಟ್‌ನಲ್ಲಿ ಉಲ್ಲೇಖಿಸಲಾಗಿದೆ. ಕೊನೆಯ ಆಸೆಯಂತೆ ಶವದ ಪೆಟ್ಟಿಗೆಯಲ್ಲಿ ಎಲ್ಲವನ್ನೂ ಇಟ್ಟು ಅಂತಿಮ ಸಂಸ್ಕಾರ ಮಾಡಲಾಗಿದೆ. ಘಟನೆ ಕುರಿತು ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ದುರ್ಗಾದೇವಿ ದೇವಸ್ಥಾನಕ್ಕೆ ಬಿಟ್ಟಿದ್ದ ದೇವಿಯ ಕೋಣ ನಾಪತ್ತೆ- ಹುಡುಕಿಕೊಡುವಂತೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಗ್ರಾಮಸ್ಥರು

  • ಕೌಟುಂಬಿಕ ಕಲಹ – ಸ್ನೇಹಿತನಿಗೆ ಸುಪಾರಿ ಕೊಟ್ಟು ಪತ್ನಿಯನ್ನೇ ಕೊಲೆ ಮಾಡಿಸಿದ ಪತಿ

    ಕೌಟುಂಬಿಕ ಕಲಹ – ಸ್ನೇಹಿತನಿಗೆ ಸುಪಾರಿ ಕೊಟ್ಟು ಪತ್ನಿಯನ್ನೇ ಕೊಲೆ ಮಾಡಿಸಿದ ಪತಿ

    ಹಾಸನ: ಕೌಟುಂಬಿಕ ಕಲಹದಿಂದಾಗಿ ಬೇಸತ್ತ ಪತಿ ತನ್ನ ಸ್ನೇಹಿತನಿಗೆ ಸುಪಾರಿ ಕೊಟ್ಟು ಪತ್ನಿಯನ್ನು ಕೊಲೆ ಮಾಡಿಸಿರುವ ಘಟನೆ ಹಾಸನ ಜಿಲ್ಲೆ (Hasan), ಬೇಲೂರು ತಾಲ್ಲೂಕಿನ, ಯಕಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಶೀಲಾ (42) ಪತಿಯ ಸ್ನೇಹಿತನಿಂದ ಹತ್ಯೆಯಾದ ಮಹಿಳೆ. ಕೌಟುಂಬಿಕ ಕಲಹದ ಹಿನ್ನೆಲೆ ಕೆಲ ವರ್ಷಗಳಿಂದ ಪರಸ್ಪರ ಗಂಡ ಹೆಂಡತಿ ದೂರ ಇದ್ದರು. ಕಳೆದ ಶನಿವಾರ ಮನೆ ಬಳಿ ಬಂದು ತನ್ನ ಸ್ನೇಹಿತ ರಾಜಶೇಖರ ಮೂಲಕ ಪತಿ ಜಗದೀಶ್ ಪತ್ನಿಯನ್ನು ಹೊರಗೆ ಕರೆದು ಜಗಳವಾಡಿದ್ದ. ಜಗದೀಶ್‌ನಿಂದ ಸುಪಾರಿ ಪಡೆದು ರಾಜಶೇಖರ ಶೀಲಾನನ್ನು ಮನೆ ಮುಂದೆ ಕುತ್ತಿಗೆ ಬಿಗಿದು ಬರ್ಬರವಾಗಿ ಹತ್ಯೆಗೈದಿದ್ದಾನೆ. ಇದನ್ನೂ ಓದಿ: ಪ್ರತಿಭಟನೆ ನಿಲ್ಲಿಸಿ, ದುರ್ಗಾಪೂಜೆಗೆ ಗಮನ ಹರಿಸಿ – ದೀದಿ ಹೇಳಿಕೆಗೆ ಮೃತ ಟ್ರೈನಿ ವೈದ್ಯೆಯ ತಾಯಿ ಆಕ್ರೋಶ

    ಕೊಲೆ ಬಳಿಕ ಮೃತದೇಹಕ್ಕೆ ಕಲ್ಲು ಕಟ್ಟಿ ಕೆರೆಗೆ ಎಸೆದು ಎಸ್ಕೇಪ್ ಆಗಿದ್ದಾರೆ. ಮಹಿಳೆಯನ್ನ ಹಾಡುಹಗಲೇ ಹತ್ಯೆಗೈಯ್ಯುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಸ್ಫೋಟ ಕೇಂದ್ರ ಸರ್ಕಾರದ ವೈಫಲ್ಯ: ಶಾಸಕ ರಂಗನಾಥ್

    ತಾಯಿ ಕಾಣೆಯಾದ ಬಗ್ಗೆ ಭಾನುವಾರ ಪುತ್ರಿ ದೂರು ನೀಡಿದ್ದು, ನಾಪತ್ತೆ ಪ್ರಕರಣ ದಾಖಲು ಮಾಡಿಕೊಂಡು ತನಿಖೆಗಿಳಿದಾಗ ಕೊಲೆ ರಹಸ್ಯ ಬಯಲಾಯಿತು. ಕೊಲೆ ಆರೋಪಿ ರಾಜಶೇಖರ ಹಾಗೂ ಪತಿ ಜಗದೀಶ್‌ನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: Haryana Poll | ಬಿಜೆಪಿಯಿಂದ 21 ಅಭ್ಯರ್ಥಿಗಳ 2ನೇ ಪಟ್ಟಿ ರಿಲೀಸ್‌ – ವಿನೇಶ್‌ ವಿರುದ್ಧ ಪ್ರಬಲ ಅಭ್ಯರ್ಥಿ ಅಖಾಡಕ್ಕೆ

    ಘಟನೆ ಕುರಿತು ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಸಿಎಂ ಸ್ಥಾನ ಖಾಲಿ ಇಲ್ಲ – ಖಾಲಿ ಇಲ್ಲದ ಸ್ಥಾನದ ಬಗ್ಗೆ ಚರ್ಚೆ ಅಪ್ರಸ್ತುತ: ಡಾ.ರಂಗನಾಥ್

  • ಕೌಟುಂಬಿಕ ದ್ವೇಷ – ಚಾಕುವಿನಿಂದ ಇರಿದು ನರ್ಸ್ ಹತ್ಯೆ

    ಕೌಟುಂಬಿಕ ದ್ವೇಷ – ಚಾಕುವಿನಿಂದ ಇರಿದು ನರ್ಸ್ ಹತ್ಯೆ

    ಪಾಟ್ನಾ: ವ್ಯಕ್ತಿಯೋರ್ವ ನರ್ಸ್ (Nurse) ಅನ್ನು ಚಾಕುವಿನಿಂದ ಹಲವು ಬಾರಿ ಇರಿದು ಕೊಂದ ಬಳಿಕ ಅಲ್ಲಿಂದ ಪರಾರಿಯಾದ ಘಟನೆ ಬಿಹಾರದ (Bihar) ಪಾಟ್ನಾದಲ್ಲಿ (Patna) ನಡೆದಿದೆ.

    ಮೃತ ನರ್ಸ್ ಅನ್ನು ಸೋನಿ ಕುಮಾರಿ (25) ಎಂದು ಗುರುತಿಸಲಾಗಿದ್ದು, ಕೌಟುಂಬಿಕ ದ್ವೇಷದ (Family Feud) ಹಿನ್ನೆಲೆ ಆಕೆಯನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ನಗರದ ಜನನಿಬಿಡ ತಾಣವಾದ ಪಾಟ್ನಾದ ಕಂಕರ್‌ಬಾಗ್‌ನಲ್ಲಿ ಶನಿವಾರ ಸಂಜೆ ಸುಮಾರು 4 ಗಂಟೆಯ ವೇಳೆಗೆ ಘಟನೆ ನಡೆದಿದೆ. ಇದನ್ನೂ ಓದಿ: ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 7 ಮಂದಿ ಸಾವು

    ಘಟನೆಯಲ್ಲಿ ನರ್ಸ್ ತೀವ್ರ ಗಾಯಗೊಂಡಿದ್ದು, ಕೂಡಲೇ ದಾರಿಹೋಕರು ಆಕೆಯನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಆಕೆ ಕೊನೆಯುಸಿರೆಳೆದಿದ್ದಾಳೆ. ಈಕೆ ಪೂರ್ಣಿಯಾ ಮೂಲದವಳಾಗಿದ್ದು, ಪಾಟ್ನಾದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಿದ್ದಳು ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಭೀಕರ ಅಪಘಾತ- ಒಂದೇ ಕುಟುಂಬದ ನಾಲ್ವರ ದುರ್ಮರಣ

    ನರ್ಸ್ ಆಸ್ಪತ್ರೆಯಲ್ಲಿ ತನ್ನ ಕೆಲಸ ಮುಗಿಸಿ ಹಾಸ್ಟೆಲ್‌ಗೆ ತೆರಳುತ್ತಿದ್ದ ಸಂದರ್ಭ ಆಕೆಗೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಈ ಕುರಿತು ತನಿಖೆ ನಡೆಯುತ್ತಿದ್ದು, ಇದುವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಘಟನೆ ಕುರಿತು ಕುಟುಂಬದ ಸದಸ್ಯರಿಗೆ ಮಾಹಿತಿ ನೀಡಲಾಗಿದೆ. ಅಲ್ಲದೇ ಆರೋಪಿಯ ಪತ್ತೆಗಾಗಿ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ವೆಬ್ ಸಿರೀಸ್‍ನಿಂದ ಪ್ರೇರಣೆ – ದಂಪತಿ ಕೊಲೆಗೈದು ದರೋಡೆ ಮಾಡಿದ್ದ ಲಾ ಸ್ಟೂಡೆಂಟ್ ಅರೆಸ್ಟ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹೆಂಡತಿ ಮೊಬೈಲ್‌ನಲ್ಲಿ ಮಾತಾಡ್ತಾಳೆ ಅಂತ ಮಕ್ಕಳನ್ನು ಕೊಂದ ಪಾಪಿ ತಂದೆ

    ಹೆಂಡತಿ ಮೊಬೈಲ್‌ನಲ್ಲಿ ಮಾತಾಡ್ತಾಳೆ ಅಂತ ಮಕ್ಕಳನ್ನು ಕೊಂದ ಪಾಪಿ ತಂದೆ

    – ಕೌಟುಂಬಿಕ ಕಲಹ ಪ್ರಕರಣಕ್ಕೆ ಟ್ವಿಸ್ಟ್

    ಮಂಡ್ಯ: ಕೌಟುಂಬಿಕ ಕಲಹ (Family Feud) ಹಿನ್ನೆಲೆ ಸ್ವಂತ ತಂದೆಯೇ ತನ್ನ ಇಬ್ಬರು ಮಕ್ಕಳ ಕತ್ತು ಸೀಳಿ ಹತ್ಯೆಗೈದ (Murder) ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಲಬುರಗಿ (Kalaburagi) ಜಿಲ್ಲೆಯ ಜೇವರ್ಗಿಯಲ್ಲಿ (Jevargi) ಪೊಲೀಸರು ಬಂಧಿಸಿದ್ದಾರೆ.

    ಶ್ರೀಕಾಂತ್ ಬಂಧಿತ ಆರೋಪಿ. ಈತ ಕಲಬುರಗಿ ಜಿಲ್ಲೆಯ ಗಾಣಗಪುರದವನಾಗಿದ್ದು, ಲಕ್ಷ್ಮಿ ಎಂಬಾಕೆಯನ್ನು ವರಿಸಿದ್ದ. ಮದುವೆಯಾದಾಗಿನಿಂದ ಇವರಿಬ್ಬರ ಮಧ್ಯೆ ಒಂದಲ್ಲ ಒಂದು ವಿಚಾರಕ್ಕೆ ಗಲಾಟೆ ನಡೆಯುತ್ತಲೇ ಇತ್ತು. ಬುಧವಾರ ಈತ ತನ್ನ ತಂದೆ-ತಾಯಿಯೊಂದಿಗೆ ಜಗಳ ಮಾಡಿಕೊಂಡು ಶ್ರೀರಂಗಪಟ್ಟಣ (Srirangapatna) ಸಮೀಪದ ಮರಳಗಾಲ ಗ್ರಾಮದ ವಿರೂಪಾಕ್ಷ ಎಂಬವರ ತೋಟದ ಮನೆಯಲ್ಲಿ ಕೆಲಸ ಮಾಡುತ್ತಿದ್ದ. ನಂತರ ಅತ್ತೆ-ಮಾವನ ಮನೆಗೆ ಬಂದಿದ್ದ. ಅಲ್ಲದೇ ನಮಗೆ ಇಲ್ಲಿಯೇ ಕೆಲಸ ಕೊಡಿಸಿ, ಕೆಲಸ ಮಾಡಿಕೊಂಡು ಇಲ್ಲಿಯೇ ಇರುತ್ತೇವೆ ಎಂದು ಶ್ರೀಕಾಂತ್ ಹೇಳಿದ್ದ. ಇದನ್ನೂ ಓದಿ: 3 ವರ್ಷದ ಹಿಂದಿನ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ – ಮಹಿಳೆಯ ಅಸ್ತಿಪಂಜರ ಸೆಪ್ಟಿಕ್ ಟ್ಯಾಂಕ್‍ನಲ್ಲಿ ಪತ್ತೆ

    ಇದಕ್ಕೆ ಒಪ್ಪಿಕೊಂಡ ಅವರ ಅತ್ತೆ-ಮಾವ ಊಟ ಮಾಡಿ ಮಲಗಿದ್ದರು. ಗುರುವಾರ ಬೆಳಗ್ಗಿನ ಜಾವ ಏಕಾಏಕಿ ಶ್ರೀಕಾಂತ್ ತನ್ನ ಹೆಂಡತಿಗೆ ಸುತ್ತಿಗೆಯಿಂದ ಮಾರಣಾಂತಿಕ ಹಲ್ಲೆ ನಡೆಸಿ ಅಲ್ಲೇ ಪಕ್ಕದಲ್ಲಿದ್ದ ಆದರ್ಶ್ (4) ಮತ್ತು ಅಮೂಲ್ಯ (2) ಎಂಬ ತನ್ನ ಇಬ್ಬರು ಮಕ್ಕಳ ಕತ್ತು ಸೀಳಿ ಕೊಲೆ ಮಾಡಿ ಅಲ್ಲಿಂದ ಪರಾರಿಯಾಗಿದ್ದ. ಕೊಲೆ ಮಾಡಿದ ಪಾಪಿ ಶ್ರೀಕಾಂತ್ ಪರಾರಿಯಾಗಿ ತನ್ನ ಹುಟ್ಟೂರಾದ ಜೇವರ್ಗಿಗೆ ಬಂದು ಯಾವುದೇ ಪಾಪಪ್ರಜ್ಞೆ ಇಲ್ಲದೇ ಕುಡಿದು ಮಲಗಿದ್ದ. ಟಿವಿಯಲ್ಲಿ ಹತ್ಯೆ ವಿಚಾರ ತಿಳಿದ ಈತನ ತಂದೆ-ತಾಯಿ ಮನೆಯಲ್ಲಿ ಶ್ರೀಕಾಂತ್ ಇರುವಿಕೆಯ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಪತ್ನಿಯ ಜೊತೆ ಅಕ್ರಮ ಸಂಬಂಧ – ಪ್ರಿಯಕರನ ಕತ್ತು ಸೀಳಿ ರಕ್ತ ಕುಡಿದ ಗಂಡ

    ಮಾಹಿತಿ ಆಧಾರದ ಮೇಲೆ ಪೊಲೀಸರು ಆರೋಪಿ ಶ್ರೀಕಾಂತ್‌ನನ್ನು ಜೇವರ್ಗಿಯಲ್ಲಿ ಬಂಧಿಸಿದ್ದಾರೆ. ವಿಚಾರಣೆ ವೇಳೆ ಕೊಲೆಯ ಅಸಲಿ ಸತ್ಯವನ್ನು ಶ್ರೀಕಾಂತ್ ಬಾಯಿ ಬಿಟ್ಟಿದ್ದಾನೆ. ತನ್ನ ಹೆಂಡತಿ ಯಾವಾಗಲೂ ಯಾರದ್ದೋ ಜೊತೆ ಫೋನ್‌ನಲ್ಲಿ ಗಂಟೆಗಟ್ಟಲೆ ಮಾತನಾಡುತ್ತಿದ್ದಳು. ಈ ಹಿನ್ನೆಲೆ ಪತ್ನಿಯ ಶೀಲ ಶಂಕಿಸಿ ಮಕ್ಕಳನ್ನು ಕೊಲೆ ಮಾಡಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. ಪ್ರತಿದಿನ ಲಕ್ಷ್ಮಿ ಶೀಲ ಶಂಕಿಸಿ ಮನೆಯಲ್ಲಿ ಗಲಾಟೆ ನಡೆಯುತ್ತಿತ್ತು. ಇಬ್ಬರು ಮಕ್ಕಳು ನನ್ನದಲ್ಲ ಎಂದು ಸದಾ ಮಕ್ಕಳು ಮತ್ತು ಹೆಂಡತಿಯ ಮೇಲೆ ಹಲ್ಲೆ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಇದೀಗ ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಆತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಇದನ್ನೂ ಓದಿ: ಲೇಡಿಸ್ ಪಿಜಿಗಳೇ ಟಾರ್ಗೆಟ್ – ಸ್ನಾನ ಮಾಡುವುದನ್ನು ಕದ್ದುಮುಚ್ಚಿ ವೀಡಿಯೋ ಮಾಡುತ್ತಿದ್ದಾಗಲೇ ಕಿರಾತಕ ಲಾಕ್

  • ಕೌಟುಂಬಿಕ ಕಲಹ – ಮಕ್ಕಳ ಕತ್ತು ಸೀಳಿ ಕೊಲೆಗೈದ ಪಾಪಿ ತಂದೆ

    ಕೌಟುಂಬಿಕ ಕಲಹ – ಮಕ್ಕಳ ಕತ್ತು ಸೀಳಿ ಕೊಲೆಗೈದ ಪಾಪಿ ತಂದೆ

    – ಪತ್ನಿಯ ಮೇಲೆ ಸುತ್ತಿಗೆಯಿಂದ ಮಾರಣಾಂತಿಕ ಹಲ್ಲೆ

    ಮಂಡ್ಯ: ಕೌಟುಂಬಿಕ ಕಲಹ (Family Feud) ಹಿನ್ನೆಲೆ ಪಾಪಿ ತಂದೆ ಇಬ್ಬರು ಪುಟ್ಟ ಮಕ್ಕಳ ಕುತ್ತಿಗೆ ಸೀಳಿ ಕೊಲೆ (Murder) ಮಾಡಿದ್ದು, ತನ್ನ ಮಡದಿಗೂ (Wife) ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮರಳಗಾಲ ಗ್ರಾಮದಲ್ಲಿ ಜರುಗಿದೆ.

    ಆದರ್ಶ (4) ಹಾಗೂ ಅಮೂಲ್ಯ (2) ತಂದೆಯಿಂದ ಕೊಲೆಯಾದ ದುರ್ದೈವಿ ಮಕ್ಕಳು. ಶ್ರೀಕಾಂತ್ ತನ್ನ ಇಬ್ಬರು ಮಕ್ಕಳನ್ನು ಕೊಂದು ತನ್ನ ಪತ್ನಿ ಲಕ್ಷ್ಮಿಗೆ ಮಾರಣಾಂತಿಕ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ. ಶ್ರೀಕಾಂತ್ ಗುಲ್ಬರ್ಗ (Gulbarga) ಜಿಲ್ಲೆಯ ಗಾಣಗಪುರ ಗ್ರಾಮದವನಾಗಿದ್ದು, ಲಕ್ಷ್ಮಿಯನ್ನು ವರಿಸಿ 6 ವರ್ಷಗಳಾಗಿತ್ತು. ಮದುವೆಯಾದಾಗಿನಿಂದ ಒಂದಲ್ಲಾ ಒಂದು ವಿಚಾರಕ್ಕೆ ಗಲಾಟೆಯಾಗುತ್ತಿತ್ತು. ಬುಧವಾರ ಶ್ರೀಕಾಂತ್ ತನ್ನ ತಂದೆ, ತಾಯಿ ಜೊತೆ ಗಲಾಟೆ ಮಾಡಿಕೊಂಡು ಶ್ರೀರಂಗಪಟ್ಟಣ (Srirangapatna) ಸಮೀಪದ ಮರಳಗಾಲ ಗ್ರಾಮದ ವಿರುಪಾಕ್ಷ ಎಂಬವರ ತೋಟದ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಅತ್ತೆ-ಮಾವನ ಮನೆಗೆ ಬಂದಿದ್ದಾರೆ. ಬಳಿಕ ಇಲ್ಲೇ ಒಂದು ಕೆಲಸ ಕೊಡಿಸಿ ನಾವು ಇಲ್ಲಿಯೇ ಇರುತ್ತೇವೆ ಎಂದು ಶ್ರೀಕಾಂತ್ ಹೇಳಿದ್ದಾನೆ. ಇದನ್ನೂ ಓದಿ: ಬಾಡಿಗೆದಾರರ ಕಿರುಕುಳ – ಮನೆ ಒಡತಿ ಆತ್ಮಹತ್ಯೆ, ಮಗಳ ಸಾವಿನ ಸುದ್ದಿ ಕೇಳಿ ತಾಯಿಯೂ ಸಾವು

    ಇದಕ್ಕೆ ಅತ್ತೆ-ಮಾವ ಸರಿ ಎಂದು ಹೇಳಿ ಎಲ್ಲರೂ ಊಟ ಮಾಡಿ ಪ್ರತ್ಯೇಕ ಮನೆಯಲ್ಲಿ ಮಲಗಿದ್ದಾರೆ. ಬೆಳಗಿನ ಜಾವ ಇದ್ದಕ್ಕಿದ್ದ ಹಾಗೆ ಶ್ರೀಕಾಂತ್ ತನ್ನ ಪತ್ನಿ ಲಕ್ಷ್ಮಿಗೆ ಸುತ್ತಿಗೆಯಿಂದ (Hammer) ಹೊಡೆದಿದ್ದಾನೆ. ಹೊಡೆದ ರಭಸಕ್ಕೆ ಲಕ್ಷ್ಮಿ ರಕ್ತದ ಮಡುವಿನಲ್ಲಿ ಒದ್ದಾಡಿದ್ದಾಳೆ. ಬಳಿಕ ಪಕ್ಕದಲ್ಲೇ ಇದ್ದ ಮಕ್ಕಳ ಕುತ್ತಿಗೆ ಕೊಯ್ದು ಹತ್ಯೆ ಮಾಡಿ ಶ್ರೀಕಾಂತ್ ಪರಾರಿಯಾಗಿದ್ದಾನೆ. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಹೆಂಡತಿ ಹೆದರಿಸಲು ಬೆಂಕಿ ಹಚ್ಚಿಕೊಂಡ ಭೂಪ

    ಲಕ್ಷ್ಮಿ ತಾಯಿ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಮಾರಣಾಂತಿಕ ಹಲ್ಲೆಗೊಳಗಾದ ಲಕ್ಷ್ಮಿಯನ್ನು ಮೈಸೂರಿನ (Mysuru) ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಇತ್ತ ಏನು ತಪ್ಪು ಮಾಡದ ಎರಡು ಮುದ್ದಾದ ಜೀವಗಳು ತಂದೆಯ ಕ್ರೌರ್ಯಕ್ಕೆ ಬಲಿಯಾಗಿವೆ. ಈ ಬಗ್ಗೆ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಶ್ರೀಕಾಂತ್ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಈ ಪ್ರಕರಣ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದು, ಆರೋಪಿಯ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಬಸ್ ನಿಲ್ಲಿಸದೇ ಮಹಿಳೆ ಜೊತೆ ಅನುಚಿತ ವರ್ತನೆ – ನಿರ್ವಾಹಕನ ಮೇಲೆ ಸಂಬಂಧಿಕರಿಂದ ಹಲ್ಲೆ