ಸೀತಾರಾಮಂ (Seetharamam), ಫ್ಯಾಮಿಲಿ ಸ್ಟಾರ್ ಸಿನಿಮಾಗಳ ಮೂಲಕ ಪಡ್ಡೆಹುಡುಗರ ನಿದ್ದೆ ಕದ್ದ ನಟಿ ಮೃಣಾಲ್ ಠಾಕೂರ್ (Mrunal Thakur) ಇದೀಗ ಡೇಟಿಂಗ್ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ಬಾಲಿವುಡ್ ಹೀರೋ ಸಿದ್ಧಾಂತ್ ಚತುರ್ವೇದಿ (Siddhant Chaturvedi) ಜೊತೆ ಮೃಣಾಲ್ ಲವ್ವಿ ಡವ್ವಿ ಶುರುವಾಗಿದೆ ಎಂದು ಗುಸು ಗುಸು ಶುರುವಾಗಿದೆ. ಇದನ್ನೂ ಓದಿ:ಅವಕಾಶ ಸಿಕ್ಕರೆ ಕನ್ನಡದಲ್ಲಿ ನಟಿಸ್ತೇನೆ : ನಟಿ ಚಾಂದನಿ

ಬಿಟೌನ್ ಅಂಗಳದ ನಯಾ ಜೋಡಿ ಅಂದರೆ ಸಿದ್ಧಾಂತ್ ಮತ್ತು ಮೃಣಾಲ್. ಇತ್ತೀಚೆಗೆ ರೆಸ್ಟೋರೆಂಟ್‌ವೊಂದರಲ್ಲಿ ಡಿನ್ನರ್ ಡೇಟ್ ಮುಗಿಸಿ ಜೊತೆಯಾಗಿ ಕೈ ಕೈ ಹಿಡಿದು ಇಬ್ಬರೂ ಕಾಣಿಸಿಕೊಂಡಿರುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಇದೀಗ ಇಬ್ಬರೂ ಎಂಗೇಜ್ ಆಗಿದ್ದಾರೆ ಎಂದು ಚರ್ಚೆ ಶುರುವಾಗಿದೆ. ಈ ಸುದ್ದಿ ನಿಜನಾ? ಎಂಬುದನ್ನು ಈ ಜೋಡಿ ಖಚಿತಪಡಿಸಬೇಕಿದೆ.

ಬಾಲಿವುಡ್ ಮತ್ತು ಟಾಲಿವುಡ್‌ನಲ್ಲಿ ಮೃಣಾಲ್‌ಗೆ ಭಾರೀ ಬೇಡಿಕೆ ಇದೆ. ಹಿಂದಿ ಸಿನಿಮಾಗಳಿಗಿಂತ ತೆಲುಗಿನಲ್ಲಿ ನಟಿ ಸಕ್ಸಸ್ ಕಂಡಿದ್ದಾರೆ. ಅದರಲ್ಲೂ ‘ಸೀತಾರಾಮಂ’ ಸಿನಿಮಾದಲ್ಲಿ ಸೀತಾ ಆಗಿ ಎಲ್ಲರ ಗಮನ ಸೆಳೆದಿದ್ದರು.
ಸದ್ಯ ಸಂಜಯ್ ಲೀಲಾ ಬನ್ಸಾಲಿ (Sanjay Leela Bansali) ಅವರ ಹೊಸ ಸಿನಿಮಾದಲ್ಲಿ ಮೃಣಾಲ್ ನಾಯಕಿಯಾಗಿದ್ದಾರೆ. ತೆಲುಗಿನಲ್ಲಿ ಕೆಲವು ಸಿನಿಮಾಗಳ ಮಾತುಕತೆ ನಡೆಯುತ್ತಿವೆ.








ಮೃಣಾಲ್‌ಗೆ ಚಿಕ್ಕ ವಯಸ್ಸಿನಿಂದಲೂ ನಟನೆ ಎಂದರೆ ತುಂಬಾ ಇಷ್ಟ. ಭಾಷೆ ತಿಳಿಯದಿದ್ದರೂ ಅದನ್ನು ಅರಿತು ಚೆನ್ನಾಗಿ ನಟಿಸುತ್ತಾರೆ. ಅದು ನನಗೆ ಹಲವು ಬಾರಿ ಅಚ್ಚರಿ ಮೂಡಿಸಿದೆ ಎಂದು ಮೃಣಾಲ್ ಬಗ್ಗೆ ವಿಜಯ್ ಹೇಳಿದ್ದಾರೆ. ಬಳಿಕ ನಿರ್ದೇಶಕರು ಏನೇ ಹೇಳಿದ್ದರು ಅದನ್ನು ಅರ್ಥ ಮಾಡಿಕೊಂಡು ನಟಿಸುವ ಸಾಮಾರ್ಥ್ಯ ಅವರಿಗಿದೆ. ಬ್ಯೂಟಿ ಅವರಿಗೆ ದೇವರು ಕೊಟ್ಟ ಕೊಡುಗೆ. ಮೃಣಾಲ್ ಕಣ್ಣು, ಮೂಗು, ತುಟಿ ಎಲ್ಲವೂ ಅವರಿಲ್ಲಿರುವ ಅದ್ಭುತ ಎಂದು ‘ಫ್ಯಾಮಿಲಿ ಸ್ಟಾರ್’ ನಾಯಕಿಯ ಬಗ್ಗೆ ವಿಜಯ್ ದೇವರಕೊಂಡ ಕೊಂಡಾಡಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ರಶ್ಮಿಕಾ ಮಂದಣ್ಣ (Rashmika Mandanna) ಕಥೆಯೇನು? ಎಂದು ವಿಜಯ್‌ಗೆ ನೆಟ್ಟಿಗರು ಕಾಲೆಳೆದಿದ್ದಾರೆ.







ಇದೀಗ ಚೆನ್ನೈನಲ್ಲಿ ‘ಫ್ಯಾಮಿಲಿ ಸ್ಟಾರ್’ (Family Star Film) ಚಿತ್ರದ ಪ್ರಚಾರ ಕಾರ್ಯಕ್ರಮ ಅದ್ಧೂರಿಯಾಗಿ ಜರುಗಿದೆ. ಈ ವೇಳೆ, ವಿಜಯ್ ದೇವರಕೊಂಡ ಮದುವೆಯ ಬಗ್ಗೆ ಪ್ರಶ್ನೆ ಎದುರಾಗಿದೆ. ವಿಜಯ್ ‘ಫ್ಯಾಮಿಲಿ ಸ್ಟಾರ್’ ಸಿನಿಮಾದಲ್ಲಿ ನಟಿಸಿದ್ದೇನೋ ನಿಜ. ಹಾಗೇ ಇದೇ ವರ್ಷ ರಿಯಲ್ ಲೈಫ್‌ನಲ್ಲೂ ಫ್ಯಾಮಿಲಿ ಸ್ಟಾರ್ ಆಗುವ ಸಾಧ್ಯತೆ ಇದೆಯೇ ಎಂದು ಪ್ರಶ್ನೆ ಮಾಡಲಾಗಿದೆ. ಆ ಪ್ರಶ್ನೆಗೆ ವಿಜಯ್ ದೇವರಕೊಂಡ ಪ್ರತಿಕ್ರಿಯಿಸಿ, ನಾನು ಖಂಡಿತವಾಗಿಯೂ ಮದುವೆ ಆಗುತ್ತೇನೆ. ನನಗೂ ಮದುವೆ ಆಗಬೇಕೆಂಬ ಆಸೆ ಇದೆ. ನನಗೂ ಮಕ್ಕಳು ಬೇಕು. ಆದರೆ, ಈ ವರ್ಷ ಖಂಡಿತಾ ಅಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.




