Tag: family

  • ತಂಗಿಯ ಗಂಡನ ಜೊತೆಗೆ ಅಕ್ಕನ ಅನೈತಿಕ ಸಂಬಂಧ – ಆಡಿಯೋ ಲೀಕ್

    ತಂಗಿಯ ಗಂಡನ ಜೊತೆಗೆ ಅಕ್ಕನ ಅನೈತಿಕ ಸಂಬಂಧ – ಆಡಿಯೋ ಲೀಕ್

    ಯಾದಗಿರಿ: ತಂಗಿಯ ಗಂಡನ ಜೊತೆಗೆ ಅನೈತಿಕ ಸಂಬಂಧ ಹೊಂದಿದ್ದ ಅಕ್ಕ ತನ್ನ ಗಂಡನಿಗೆ ದೇವರ ಪ್ರಸಾದವೆಂದು ನಂಬಿಸಿ ನಿದ್ದೆ ಮಾತ್ರೆ ಕೊಟ್ಟು ಕೊಲೆಗೆ ಯತ್ನಿಸಿದ ಅಮಾನವೀಯ ಘಟನೆ ಯಾದಗಿರಿಯಲ್ಲಿ ನಡೆದಿದೆ.

    ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಹೂವಿನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಚಂದ್ರಕಲಾ ತನ್ನ ತಂಗಿಯ ಗಂಡ ಬಸನಗೌಡ ಜೊತೆ ಸೇರಿ ಪತಿ ವಿಶ್ವನಾಥ್ ರೆಡ್ಡಿ ಕೊಲೆಗೆ ಯತ್ನಿಸಿದ ಪಾಪಿ ಪತ್ನಿ. ಚಂದ್ರಕಲಾ ಮತ್ತು ಬಸನಗೌಡ ಹಲವಾರು ವರ್ಷಗಳಿಂದ ಅನೈತಿಕ ಸಂಬಂಧ ಹೊಂದಿದ್ದರು. ಈ ವಿಷಯ ಗಂಡನಿಗೆ ಗೊತ್ತಾಗುತ್ತೆಂಬ ಭಯದಿಂದ ಮಧ್ಯ ರಾತ್ರಿ ನಿದ್ದೆ ಮಾತ್ರೆ ಕೊಟ್ಟು ತನ್ನ ಗಂಡನ ಕೊಲೆಗೆ ಚಂದ್ರಕಲಾ ಸ್ಕೆಚ್ ಹಾಕಿದ್ದಾಳೆ. ತಡರಾತ್ರಿ ದೇವರ ಪ್ರಸಾದವೆಂದು ನೀರಿನಲ್ಲಿ ನಿದ್ದೆ ಮಾತ್ರೆ ಪುಡಿ ಹಾಕಿ ತನ್ನ ಗಂಡನಿಗೆ ಕುಡಿಸಿದ್ದಾಳೆ. ಇದನ್ನೂ ಓದಿ: ದುಬೈನಿಂದ ಬಂದು ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಗೆ ಮತಚಲಾಯಿಸಿ ಕನ್ನಡಾಭಿಮಾನ ಮೆರೆದ ಮಹಿಳೆ

    ಬಳಿಕ ಬಸನಗೌಡನನ್ನು ಮನೆಗೆ ಕರೆಸಿ ಇಬ್ಬರು ವಿಶ್ವನಾಥ್ ರೆಡ್ಡಿಯ ಕತ್ತು ಹಿಸುಕಲು ಮುಂದಾಗಿದ್ದಾರೆ. ಈ ವೇಳೆ ವಿಶ್ವನಾಥ್ ಎಚ್ಚರಗೊಂಡಿದ್ದಾರೆ. ಚಂದ್ರಕಲಾ ಬಸನಗೌಡ ಕೊಲೆ ಮಾಡುವ ಬಗ್ಗೆ ಮಾತಾಡಿರುವ ಆಡಿಯೋದಿಂದ ಸತ್ಯ ಹೊರಬಿದ್ದಿದೆ. ಸದ್ಯ ಚಂದ್ರಕಲಾ ಹಾಗೂ ಬಸನಗೌಡ ಇಬ್ಬರನ್ನು ಸಹ ಪೊಲೀಸರು ಬಂಧಿಸಿದ್ದು, ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಹಂಸಲೇಖಾ ವಿರುದ್ಧ ನೀಡಿದ್ದ ದೂರನ್ನು ಹಿಂಪಡೆದ ಕೃಷ್ಣರಾಜ್

  • ಮಂಡ್ಯದಲ್ಲಿ ಭೀಕರ ಅಪಘಾತ – ಒಂದೇ ಕುಟುಂಬದ ಐವರ ದುರ್ಮರಣ

    ಮಂಡ್ಯದಲ್ಲಿ ಭೀಕರ ಅಪಘಾತ – ಒಂದೇ ಕುಟುಂಬದ ಐವರ ದುರ್ಮರಣ

    ಮಂಡ್ಯ: ಒಂದೇ ಕುಟುಂಬದ ಐವರು ಭೀಕರ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ನೆಲಮಾಕನಹಳ್ಳಿ ಗ್ರಾಮದ ಗೇಟ್ ಬಳಿ ಜರುಗಿದೆ.

    ಮಳವಳ್ಳಿ ತಾಲೂಕಿನ ಬಂಡೂರು ಗ್ರಾಮ ಪಂಚಾಯತಿ ಅಧ್ಯಕ್ಷೆ, ದಡದಪುರ ಗ್ರಾಮದ ಮುತ್ತಮ್ಮ(45), ಮಗಳು ಬಸಮ್ಮಣಿ(30), ಮಗ ವೆಂಕಟೇಶ(25), ಬಸಮ್ಮಣಿ ಅವರ ಮಕ್ಕಳಾದ 8 ವರ್ಷದ ಚಾಮುಂಡೇಶ್ವರಿ, 2 ವರ್ಷದ ಗಂಡು ಮಗು ಮೃತಪಟ್ಟಿದ್ದು, ಘಟನೆಯಲ್ಲಿ ಆಟೋ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಇದನ್ನೂ ಓದಿ: ಚಿಕ್ಕಬಳ್ಳಾಪುರ, ಕೋಲಾರದಲ್ಲಿ ವರುಣಾರ್ಭಟ- ದಾವಣೆಗೆರೆಯಲ್ಲಿ ದೇಗುಲ ಜಲಾವೃತ

    ದೇವಸ್ಥಾನವೊಂದಕ್ಕೆ ಮುತ್ತಮ್ಮ ಮತ್ತು ಕುಟುಂಬದ ಸದಸ್ಯರು ಭೇಟಿ ನೀಡಿ ಮದ್ದೂರು ಕಡೆಯಿಂದ ಆಟೋದಲ್ಲಿ ವಾಪಸ್ ಆಗುತ್ತಿದ್ದರು. ಇದೇ ವೇಳೆ ಮಳವಳ್ಳಿಯಿಂದ ಮದ್ದೂರಿನತ್ತ ತೆರಳುತ್ತಿದ್ದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಆಟೋ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಸ್ಥಳದಲ್ಲಿಯೇ ಮುತ್ತಮ್ಮ ಸೇರಿದಂತೆ ಮೃತಪಟ್ಟಿರೆ, ಇನ್ನಿಬ್ಬರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ.

    ಘಟನಾ ಸ್ಥಳಕ್ಕೆ ಸಿಪಿಐ ಎ.ಕೆ.ರಾಜೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ನಡೆದಿದೆ.

  • ಫ್ಯಾಮಿಲಿ ಜೊತೆಗೆ ಜಾಲಿ ಮೂಡ್‍ನಲ್ಲಿ ಶ್ವೇತಾ ಚೆಂಗಪ್ಪ

    ಫ್ಯಾಮಿಲಿ ಜೊತೆಗೆ ಜಾಲಿ ಮೂಡ್‍ನಲ್ಲಿ ಶ್ವೇತಾ ಚೆಂಗಪ್ಪ

    ಬೆಂಗಳೂರು: ಕನ್ನಡ ಕಿರುತೆರೆಯ ಜನಪ್ರಿಯ ನಟಿ ಶ್ವೇತಾ ಚೆಂಗಪ್ಪ ಫ್ಯಾಮಿಲಿ ಜೊತೆಗೆ ಸಖತ್ ಎಂಜಾಯ್ ಮಾಡಿರುವ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

    SwethaChangappa

    ನಟಿ ಶ್ವೇತಾ ಚೆಂಗಪ್ಪ ತಮ್ಮ ಬ್ಯೂಸಿ ಶೆಡ್ಯೂಲ್‍ಗಳ ಮಧ್ಯೆ ಫ್ಯಾಮಿಲಿಗೂ ಕೂಡ ಅಷ್ಟೇ ಸಮಯವನ್ನು ಮೀಸಲಿಡುತ್ತಾರೆ. ತಮ್ಮ ನಟನೆ ಮೂಲಕವೇ ಕನ್ನಡಿಗರ ಮನೆಮಾತಾಗಿರುವ ಶ್ವೇತಾ ಚೆಂಗಪ್ಪ ಕಂಡರೆ ಫ್ಯಾಮಿಲಿಗೂ ಕೂಡ ಅಷ್ಟೇ ಅಚ್ಚು ಮೆಚ್ಚು. ಇತ್ತೀಚೆಗಷ್ಟೇ ಸ್ನೇಹಿತರೊಂದಿಗೆ ಟ್ರಿಪ್ ಹೊಡೆದಿದ್ದ ಅವರು ಇದೀಗ ಪತಿ, ಮಗ ಹಾಗೂ ತಾಯಿ ಸೇರಿದಂತೆ ಫ್ಯಾಮಿಲಿಯ ಇತರ ಸದಸ್ಯರೊಂದಿಗೆ ಎಂಜಾಯ್ ಮಾಡಿರುವ ಫೋಟೋವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದಾರೆ.

     

    View this post on Instagram

     

    A post shared by Swetha Changappa (@swethachangappa)

    ಶ್ವೇತಾ ಚೆಂಗಪ್ಪ ಫ್ಯಾಮಿಲಿ ಜೊತೆ ರೆಸಾರ್ಟ್ ಒಂದರಲ್ಲಿ ಕಾಲ ಕಳೆದಿದ್ದು, ಸಮುದ್ರದ ನೀರಿನಲ್ಲಿ ಆಟ ಆಡಿರುವುದನ್ನು ಫೋಟೋದಲ್ಲಿ ಕಾಣಬಹುದಾಗಿದೆ. ಫೋಟೋ ಜೊತೆಗೆ ನಿಮ್ಮ ಕುಟುಂಬದೊಂದಿಗೆ ಸಮಯ ಕಳೆಯುವುದು ತುಂಬಾ ಅವಶ್ಯಕ, ಏಕೆಂದರೆ ನಾಳೆ ಎಂಬುದು ಎಂದಿಗೂ ಭರವಸೆ ನೀಡುವುದಿಲ್ಲ. ಅಷ್ಟೇ ಅಲ್ಲ, ಯಾವುದೇ ಹಣ ಅಥವಾ ಯಶಸ್ಸು ನಿಮ್ಮ ಕುಟುಂಬದವರ ಸ್ಥಾನ ತುಂಬುವುದಿಲ್ಲ ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ.  ಇದನ್ನೂ ಓದಿ: ಸ್ನೇಹಿತರೊಂದಿಗೆ ಶ್ವೇತಾ ಚೆಂಗಪ್ಪ ಮೋಜು, ಮಸ್ತಿ – ಫೋಟೋ ವೈರಲ್

    SwethaChangappa

    ಇತ್ತೇಚೆಗಷ್ಟೇ ಶ್ವೇತಾ ಚೆಂಗಪ್ಪ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಜನಪ್ರಿಯ ರಿಯಾಲಿಟಿ ಶೋ ತಂಡದ ಸದಸ್ಯರೊಂದಿಗೆ ಚಾಂಮುಡಿ ಬೆಟ್ಟಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದರು. ಅಲ್ಲದೇ ನಟ ಮಂಡ್ಯ ರಮೇಶ್ ಅವರ ನಿವಾಸಕ್ಕೆ ಭೇಟಿ ನೀಡಿ ಅವರೊಂದಿಗೆ ಸೆಲ್ಫಿಕ್ಲಿಕ್ಕಿಸಿಕೊಂಡಿದ್ದರು ಮತ್ತು ಸ್ನೇಹಿತೊಂದಿಗೆ ಒಟ್ಟಿಗೆ ಕುಳಿತು ಊಟ ಮಾಡಿದ್ದರು.

  • ಸಿಡಿಲು ಬಡಿದು ಶಾರ್ಟ್ ಸರ್ಕ್ಯೂಟ್ –  20 ಲಕ್ಷ ಮೌಲ್ಯದ ವಸ್ತುಗಳು ನಾಶ

    ಸಿಡಿಲು ಬಡಿದು ಶಾರ್ಟ್ ಸರ್ಕ್ಯೂಟ್ – 20 ಲಕ್ಷ ಮೌಲ್ಯದ ವಸ್ತುಗಳು ನಾಶ

    ಚಿಕ್ಕಮಗಳೂರು: ಭಾರೀ ಗಾಳಿ-ಮಳೆಯ ವೇಳೆ ಅಡಿಕೆ ಶೆಡ್‍ಗೆ ಸಿಡಿಲು ಬಡಿದು ಶಾರ್ಟ್ ಸರ್ಕ್ಯೂಟ್ ಆದ ಪರಿಣಾಮ ಸುಮಾರು 20 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ನಾಶವಾಗಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ವಿಟ್ಲಾಪುರ ಗ್ರಾಮದಲ್ಲಿ ನಡೆದಿದೆ.

    ಭಾನುವಾರ ಮಧ್ಯಾಹ್ನದಿಂದ ಸಂಜೆವರೆಗೂ ಭಾರೀ ಮಳೆ ಸುರಿದಿದ್ದು, ರಾತ್ರಿ 9 ಗಂಟೆ ವೇಳೆಗೆ ಧಾರಾಕಾರ ಮಳೆ ವೇಳೆ ಬಡಿದ ಸಿಡಿಲು ಅಡಿಕೆ ಗೋಡೌನ್‍ಗೆ ಬಡಿದಿದೆ. ಈ ವೇಳೆ ಗೋಡಾನ್‍ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಟ್ರ್ಯಾಕ್ಟರ್-ಟ್ರಿಲ್ಲರ್, 15 ಕ್ವಿಂಟಾಲ್ ಒಣ ಅಡಿಕೆ, ಒಂದು ಅಡಿಕೆ ಸುಲಿಯುವ ಮೆಷಿನ್, ಒಂದು ಗೊರಗಲು ಮೆಷಿನ್ ಸೇರಿದಂತೆ ವಿವಿಧ ವಸ್ತುಗಳು ಸಂಪೂರ್ಣ ಬೆಂಕಿಗಾವುತಿಯಾಗಿದೆ.  ಇದನ್ನೂ ಓದಿ: ಮಗಳ ಹುಟ್ಟುಹಬ್ಬವನ್ನು ವಿಲ್ಲಾದಲ್ಲಿ ಆಚರಿಸುತ್ತಿರೋ ಅಭಿ, ಐಶ್ – ದಿನಕ್ಕೆ ಇದರ ಬೆಲೆ ಎಷ್ಟು ಗೊತ್ತಾ?

    ಗೋಡೌನ್ ಮುಂಭಾಗದಲ್ಲಿದ್ದ ಗೊಬ್ಬರಿಗಳನ್ನು ಸ್ಥಳಿಯರು ಬೇರೆ ಕಡೆ ಶಿಫ್ಟ್ ಮಾಡಿದ್ದಾರೆ. ಅಡಿಕೆ ಗೋಡೌ ನ್‍ನಲ್ಲಿದ್ದವರು ಮಳೆ ಕಡಿಮೆಯಾಗಿದೆ ಎಂದು ಮನೆಗೆ ಊಟಕ್ಕೆ ಹೋಗಿದ್ದರು. ಈ ವೇಳೆ ಈ ದುರ್ಘಟನೆ ಸಂಭವಿಸಿದೆ. ಅವರು ಗೋಡೌನ್‍ನಲ್ಲಿಯೇ ಇದ್ದಿದ್ದರೆ ಬಹುಶಃ ದೊಡ್ಡ ಮಟ್ಟದ ಸಾವು-ನೋವುಗಳು ಸಂಭವಿಸುವ ಸಾಧ್ಯತೆ ಇತ್ತು. ಭಾರೀ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

    ಗೋಡೌನ್‍ಗೆ ಬೆಂಕಿ ಬಿದ್ದ ಕೂಡಲೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ. ಆದರೆ, ಅವರು ಬೇರೆ ಕಡೆ ಹೋಗಿದ್ದರಿಂದ ಬರುವುದು ತಡವಾಗಿದೆ. ಅಗ್ನಿಶಾಮಕ ಸಿಬ್ಬಂದಿ ಬರುವಷ್ಟರಲ್ಲಿ ಸ್ಥಳೀಯರೇ ಬೆಂಕಿಯನ್ನು ನಾಂದಿಸಿದ್ದರು. ಆದರೆ, ಇಡೀ ರಾತ್ರಿ ಹೊತ್ತಿ ಉರಿದ ಟ್ರ್ಯಾಕ್ಟರ್ ಬೆಳಗ್ಗೆ 10 ಗಂಟೆಯಾದರೂ ಉರಿಯುತ್ತಲೇ ಇದೆ. ಸುಮಾರು 20 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳನ್ನು ಕಳೆದುಕೊಂಡು ಕುಟುಂಬ ಆರ್ಥಿಕ ಸಂಕಷ್ಟದಿಂದ ಕಂಗಾಲಾಗಿದೆ. ಸರ್ಕಾರ ನಮಗೆ ಪರಿಹಾರ ನೀಡಬೇಕೆಂದು ಆಗ್ರಹಿಸಿದ್ದಾರೆ. ತರೀಕೆರೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ದಲಿತರು ಕೋಳಿ ಕೊಟ್ಟರೆ ತಿನ್ನುತ್ತಾರಾ? : ಕ್ಷಮೆ ಕೇಳಿದ ಹಂಸಲೇಖ

  • ಕಲ್ಲಿದ್ದಲು ಗಣಿಯ ಮೇಲ್ಛಾವಣಿ ಕುಸಿದು ನಾಲ್ವರ ಸಾವು

    ಕಲ್ಲಿದ್ದಲು ಗಣಿಯ ಮೇಲ್ಛಾವಣಿ ಕುಸಿದು ನಾಲ್ವರ ಸಾವು

    ಹೈದರಾಬಾದ್: ಸಿಂಗರೇನಿ ಕಲಿಯೇರೀಸ್ ಕಂಪನಿ ಲಿಮಿಟೆಡ್ (ಎಸ್‍ಸಿಸಿಎಲ್)ನ ಕಲ್ಲಿದ್ದಲು ಗಣಿ ಯೋಜನೆಯ ಮೇಲ್ಛಾವಣಿ ಕುಸಿದು ನಾಲ್ವರು ಕಾರ್ಮಿಕರು ಮೃತಪಟ್ಟಿರುವ ಘಟನೆ ತೆಲಂಗಾಣದ ಮಂಚೇರಿಯಲ್ ಜಿಲ್ಲೆಯಲ್ಲಿ ನಡೆದಿದೆ.

    Coal Mine

    ಶ್ರೀರಾಂಪುರ ಪ್ರದೇಶದಲ್ಲಿ ಮೇಲ್ಛಾವಣಿ ಹೊದಿಸುತ್ತಿರುವ ವೇಳೆ ಈ ಘಟನೆ ಸಂಭವಿಸಿದೆ. ಮೇಲ್ಛಾವಣಿಯ ಒಂದು ಭಾಗ 32 ಮತ್ತು 60 ವರ್ಷ ವಯಸ್ಸಿನ ನಾಲ್ವರು ಕಾರ್ಮಿಕರ ಮೇಲೆ ಬಿದ್ದಿದ್ದು, ಅವರು ಅವಶೇಷಗಳಡಿಯಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಕಾನ್ಪುರದಲ್ಲಿ ಝಿಕಾ ವೈರಸ್ ಪತ್ತೆ – ಮತ್ತೆ 3 ಪ್ರಕರಣ, ಸೋಂಕಿತರ ಸಂಖ್ಯೆ 91ಕ್ಕೆ ಏರಿಕೆ

    ಈ ಕುರಿತಂತೆ ಎಸ್‍ಸಿಸಿಎಲ್‍ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಎನ್.ಶ್ರೀಧರ್ ಅವರು, ಮೃತರ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದ್ದು, ಘಟನೆಯ ಕುರಿತು ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಬೇಕು ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಅಪ್ಪು ಪ್ರೇರಣೆ – ಸಪ್ತಪದಿಗೂ ಮುನ್ನವೇ ನವ ದಂಪತಿ ನೇತ್ರದಾನದ ಶಪಥ!

    ಈ ಸಂಬಂಧ ಉನ್ನತ ಅಧಿಕಾರಿಗಳು ಸಂತ್ರಸ್ತರ ಕುಟುಂಬದ ಒಬ್ಬ ಅರ್ಹ ಸದಸ್ಯರಿಗೆ ಉದ್ಯೋಗ ನೀಡುವುದಾಗಿ ತಿಳಿಸಿದ್ದಾರೆ. ಜೊತೆಗೆ 70 ಲಕ್ಷದಿಂದ 1 ಕೋಟಿ ನಡುವೆ ಪರಿಹಾರ ಘೋಷಿಸಿದ್ದಾರೆ.

  • ಒಂದೇ ಕುಟುಂಬದ ಮೂವರಿಗೆ ಕಚ್ಚಿದ ಹಾವು- 3 ತಿಂಗಳ ಮಗು ಸಾವು

    ಒಂದೇ ಕುಟುಂಬದ ಮೂವರಿಗೆ ಕಚ್ಚಿದ ಹಾವು- 3 ತಿಂಗಳ ಮಗು ಸಾವು

    ಹೈದರಾಬಾದ್: ಒಂದೇ ಕುಟುಂಬದ ಮೂವರಿಗೆ ಹಾವು ಕಚ್ಚಿದ್ದು, 3 ತಿಂಗಳ ಮಗು ಸಾವನ್ನಪ್ಪಿರುವ ಘಟನೆ ಮಹಬೂಬಾಬಾದ್ ಜಿಲ್ಲೆಯ ಶನಿಗಪುರಂನಲ್ಲಿ ನಡೆದಿದೆ.

    ಒಂದೇ ಕುಟುಂಬದ ಮೂವರಿಗೆ ಹಾವು ಕಚ್ಚಿದ್ದು, 3 ತಿಂಗಳ ಮಗು ಸಾವನ್ನಪ್ಪಿದೆ. ಮಗುವಿನ ಪೆÇೀಷಕರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ‘ಅಪ್ಪು ಜೊತೆ ರಾಜ್ ಸಮಾಧಿ ನೋಡಲು ಬರ್ತಿದ್ದ ನಾವು ಈಗ ಅವರದ್ದೇ ಸಮಾಧಿ ನೋಡೋಕೆ ಬರುವಂಗಾಯ್ತು

    ಕ್ರಾಂತಿ ಮತ್ತು ಮಮತಾ ದಂಪತಿಯ ಹೆಣ್ಣು ಮಗುವಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಕೆಲವು ದಿನಗಳಿಂದ ಖಮ್ಮಂನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರವಷ್ಟೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿಸಿಕೊಂಡು ದಂಪತಿ ಮನೆಗೆ ಮರಳಿದ್ದರು. ಮಧ್ಯರಾತ್ರಿ ಮಗುವಿನ ಬಾಯಿಂದ ನೊರೆ ಬರುತ್ತಿರುವುದನ್ನು ಕಂಡ ಪೋಷಕರು ಆತಂಕಕ್ಕೊಳಗಾಗಿದ್ದಾರೆ. ಇದನ್ನೂ ಓದಿ: ಜಿಮ್ ಮಾಡೋವ್ರಿಗೆ ಅಪ್ಪು ಸಾವು ಬಿಗ್ ಶಾಕ್ – ಜಿಮ್‍ಗೆ ಹೋಗದಂತೆ ಮಕ್ಕಳಿಗೆ ಪೋಷಕರ ಆಕ್ಷೇಪ

    ಮರುಘಳಿಗೆಯೇ ಮಗುವಿನ ಮೇಲೆ ಹೊದಿಸಿದ್ದ ಹೊದಿಕೆಯಿಂದ ಹಾವು ಬಿದ್ದಿದೆ. ಅದೇ ಹಾವು ಕ್ರಾಂತಿ ಮತ್ತು ಮಮತಾಗೂ ಕಚ್ಚಿದೆ. ಮೂವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ದಾರಿಮಧ್ಯೆ ಮಗು ಸಾವನ್ನಪ್ಪಿದೆ. ಕ್ರಾಂತಿ ಮತ್ತು ಮಮತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

  • ಅಪ್ಪು ಸಮಾಧಿ ಬಳಿಯೇ ಮದುವೆಯಾಗಲು ಆಗಮಿಸಿದ ಪ್ರೇಮಿಗಳು

    ಅಪ್ಪು ಸಮಾಧಿ ಬಳಿಯೇ ಮದುವೆಯಾಗಲು ಆಗಮಿಸಿದ ಪ್ರೇಮಿಗಳು

    ಬೆಂಗಳೂರು: ನೆಚ್ಚಿನ ನಟ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಸಮಾಧಿ ಬಳಿಯೇ ಮದುವೆಯಾಗಲು ಜೋಡಿಯೊಂದು ಆಗಮಿಸಿದೆ.

    ಗುರು ಪ್ರಸಾದ್ ಹಾಗೂ ಗಂಗಾ ಎಂಬವರು 2 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇದೀಗ ಬಳ್ಳಾರಿಯಿಂದ ಮದುವೆಯಾಗಲು ತಾಳಿ ಸಮೇತ ಬೆಂಗಳೂರಿನ ಕಂಠೀರವ ಸ್ಟುಡಿಯೋಗೆ ಬಂದಿದ್ದಾರೆ. ಇದನ್ನೂ ಓದಿ: ಒಬ್ಬ ಡ್ಯಾನ್ಸರ್ ಬರಬಹುದು, ಫೈಟರ್ ಬರಬಹುದು, ಆದ್ರೆ ಅಪ್ಪು ಬರಲ್ಲ: ರಮೇಶ್ ಅರವಿಂದ್

    ಈ ಕುರಿತಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಈ ಜೋಡಿ, ಪುನೀತ್ ಅಂದರೆ ನಮಗೆ ತುಂಬಾ ಇಷ್ಟ. ಕುಟುಂಬಸ್ಥರಿಂದ ನಮ್ಮ ಮದುವೆಗೆ ಯಾವುದೇ ಅಡ್ಡಿಯಿಲ್ಲ. ನಮ್ಮಿಬ್ಬರ ಕುಟುಂಬದವರ ಒಪ್ಪಿಗೆ ಇದೆ ಎಂದು ಡಾ. ರಾಜ್ ಕುಮಾರ್ ಅವರ ಕುಟುಂಬಕ್ಕೆ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಪುನೀತ್ ಸಾವಿನ ನಂತರ ಜಯದೇವ ಆಸ್ಪತ್ರೆ ರೋಗಿಗಳಲ್ಲಿ 30% ಹೆಚ್ಚಳ

    ಪುನೀತ್ ರಾಜ್ ಕುಮಾರ್ ನಿಧನರಾಗಿ ಇಂದಿಗೆ 9 ದಿನ ಕಳೆದಿದೆ. ಕಳೆದ 4 ದಿನಗಳಿಂದ ಕಂಠೀರವ ಸ್ಟುಡಿಯೋದಲ್ಲಿ ಅಭಿಮಾನಿಗಳ ಸಾಗರ ಹರಿದು ಬರುತ್ತಿದೆ. ಶುಕ್ರವಾರ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಅಪ್ಪು ದರ್ಶನ ಪಡೆದರು. ಮಳೆ ಸುರಿಯುತ್ತಿದ್ದರು ಮಳೆಯನ್ನು ಸಹ ಲೆಕ್ಕಿಸದೇ ಅಗಲಿದ ಕಲಾವಿದನಿಗೆ ಗೌರವ ಅರ್ಪಿಸಿದರು.

  • ನಾಳೆ ಪುನೀತ್ ಸಮಾಧಿಗೆ ಕುಟುಂಬಸ್ಥರಿಂದ ಹಾಲು ತುಪ್ಪ ಕಾರ್ಯ – ಕಂಠೀರವ ಸ್ಟುಡಿಯೋ ಬಳಿ ಪೊಲೀಸರ ಸರ್ಪಗಾವಲು

    ನಾಳೆ ಪುನೀತ್ ಸಮಾಧಿಗೆ ಕುಟುಂಬಸ್ಥರಿಂದ ಹಾಲು ತುಪ್ಪ ಕಾರ್ಯ – ಕಂಠೀರವ ಸ್ಟುಡಿಯೋ ಬಳಿ ಪೊಲೀಸರ ಸರ್ಪಗಾವಲು

    ಬೆಂಗಳೂರು: ಪುನೀತ್ ರಾಜ್‍ಕುಮಾರ್ ಅಗಲಿ ಇಂದಿಗೆ ನಾಲ್ಕು ದಿನ ಕಳೆದಿದ್ದು, 5ನೇ ದಿನದ ಹಾಲು ತುಪ್ಪ ಕಾರ್ಯ ಮುಗಿಯುವವರೆಗೂ ಸಮಾಧಿ ವೀಕ್ಷಣೆಗೆ ಸಾರ್ವಜನಿಕರನ್ನು ನಿರ್ಬಂಧಿಸಲಾಗಿದೆ. ನಾಳೆ ಸಮಾಧಿ ವೀಕ್ಷಣೆಗಾಗಿ ಹೆಚ್ಚು ಸಂಖ್ಯೆಯಲ್ಲಿ ಅಭಿಮಾನಿಗಳು ಬರುವ ಸಾಧ್ಯತೆ ಇರುವ ಕಾರಣ ಸದ್ಯ ಕಂಠೀರವ ಸ್ಟೂಡಿಯೋ ಬಳಿ ಪೊಲೀಸರು ಬಿಗಿ ಭದ್ರತೆಗೊಳಿಸಿದ್ದಾರೆ.

    ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಮಣ್ಣಲ್ಲಿ ಮಣ್ಣಾಗಿ ಒಂದು ದಿನ ಕಳೆದಿದ್ದು, ಇಂದು ಮತ್ತು ನಾಳೆ ಸಾರ್ವಜನಿಕರಿಗೆ ಕಂಠೀರವ ಸ್ಟುಡಿಯೋ ಪ್ರವೇಶವನ್ನು ನಿಷೇಧಿಸಲಾಗಿದೆ. ಈಗಾಗಲೇ ಪುನೀತ್ ಅವರ ಅನೇಕ ಅಭಿಮಾನಿಗಳು ಕಂಠೀರವ ಸ್ಟುಡಿಯೋಸ್ ಬಳಿ ಬಂದು ವಾಪಾಸ್ ಆಗುತ್ತಿದ್ದಾರೆ. ಇದನ್ನೂ ಓದಿ: ಅಪ್ಪುರನ್ನು ಪ್ರತಿ ದಿನವೂ ಆರಾಧಿಸೋಣ: ರಮ್ಯಾ

    ನಾಳೆ ಅಪ್ಪು ಸಮಾಧಿಗೆ ಕುಟುಂಬಸ್ಥರು ಹಾಲುತುಪ್ಪ ಕಾರ್ಯನೆರವೇರಿಸಲಿದ್ದು, ಕೇವಲ ವಿಐಪಿಗಳು ಹಾಗೂ ಕುಟುಂಬ ಸದಸ್ಯರನ್ನ ಹೊರತುಪಡಿಸಿ ಬೇರೆ ಯಾರೂ ಸಹ ಕಂಠೀರವ ಸ್ಟುಡಿಯೋ ಒಳಗೆ ಬರುವಂತಿಲ್ಲ. ಹೀಗಾಗಿ ಕಂಠೀರವ ಸ್ಟುಡಿಯೋ ಬಳಿ ಸಂಪೂರ್ಣ ಬ್ಯಾರಿಗೇಡ್ ಹಾಕಿ ಆರ್‌ಎಎಫ್ ಕಮಾಂಡೋ ಪಡೆ, ಎರಡು ಕೆಎಸ್‌ಆರ್‌ಪಿ ತುಕಡಿಯನ್ನು ನಿಯೋಜಿಸಲಾಗಿದೆ. ಇದನ್ನೂ ಓದಿ: ಉಪ್ಪಿನಲ್ಲಿ ಚಿತ್ರ ಬಿಡಿಸಿ ಅಪ್ಪುಗೆ ವಿಶೇಷ ವಿದಾಯ ಹೇಳಿದ ತೆಲುಗು ಅಭಿಮಾನಿ

    ಈ ಮಧ್ಯೆ ಅಭಿಮಾನಿಯೊಬ್ಬರು ದಿವಂಗತ ಪುನೀತ್ ರಾಜ್ ಕುಮಾರ್ ಸಮಾಧಿಗೆ ಹಾಕಲು ಸುಗಂಧರಾಜ ಹಾಗೂ ಚೆಂಡುಹೂವಿನ ಹಾರವನ್ನು ತಂದಿದ್ದಾರೆ. ಆದರೆ ಒಳಗೆ ಹೋಗಲು ಅವಕಾಶ ಇಲ್ಲದ ಹಿನ್ನೆಲೆ ಪೋಲಿಸ್ ಸಿಬ್ಬಂದಿಗೆ ಹೂ ಕೊಟ್ಟು ಹೋಗಿದ್ದಾರೆ.

  • ಮಕ್ಕಳ ಜೊತೆ ಶಿಲ್ಪಾ ಶೆಟ್ಟಿ ಸುತ್ತಾಟ- ರಾಜ್ ಕುಂದ್ರಾ ಮಿಸ್ಸಿಂಗ್

    ಮಕ್ಕಳ ಜೊತೆ ಶಿಲ್ಪಾ ಶೆಟ್ಟಿ ಸುತ್ತಾಟ- ರಾಜ್ ಕುಂದ್ರಾ ಮಿಸ್ಸಿಂಗ್

    ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ, ಪತಿ ರಾಜ್ ಕುಂದ್ರಾ ಬಿಡುಗಡೆಯಾಗುತ್ತಿದ್ದಂತೆ ಸೋಶಿಯಲ್ ಮೀಡಿಯಾ ಸೇರಿದಂತೆ ತಮ್ಮ ದಿನ ನಿತ್ಯದ ಚಟುವಟಿಕೆಯಲ್ಲಿ ಸಖತ್ ಆ್ಯಕ್ಟಿವ್ ಆಗಿದ್ದಾರೆ. ಇದೀಗ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಆದರೆ ರಾಜ್‍ ಕುಂದ್ರಾ ಕಾಣಿಸದೇ ಇರುವುದರ ಕುರಿತಾಗಿ ಅಭಿಮಾನಿಗಳು ಪ್ರಶ್ನೆ ಮಾಡುತ್ತಿದ್ದಾರೆ.

    ಈ ವೀಕೆಂಡ್‌ನಲ್ಲಿ ಶಿಲ್ಪಾ ಶೆಟ್ಟಿ ತಮ್ಮ ಮಕ್ಕಳಾದ ವಿಯಾನ್, ಸಮಿಷಾ ಹಾಗೂ ತಾಯಿ ಸುನಂದಾ ಶೆಟ್ಟಿ ಜೊತೆಯಲ್ಲಿ ಆಲಿಬಾಗ್‍ಗೆ ಹೋಗಿದ್ದಾರೆ. ಇದನ್ನೂ ಓದಿ: ಠಾಣೆ ಮೆಟ್ಟಿಲೇರಿದ ಕಸ ಫೈಟ್ – ಪ್ರೊಡ್ಯೂಸರ್ ಪುತ್ರ, ಪತ್ನಿ ವಿರುದ್ಧ FIR

    ಶಿಲ್ಪಾ ಶೆಟ್ಟಿ ತೆರಳುವಾಗ ನಗುಮೊಗದಿಂದಲೇ ಕ್ಯಾಮೆರಾಗೆ ಪೋಸ್ ನೀಡಿದ್ದಾರೆ. ರಾಜ್ ಕುಂದ್ರಾ ಗೈರು ಅವರ ಅಭಿಮಾನಿಗಳಿಗೆ ಎದ್ದು ಕಂಡಿದೆ.

    ಅಶ್ಲೀಲ ಸಿನಿಮಾ ತಯಾರಿಕೆ ಹಾಗೂ ಹಂಚಿಕೆಯ ಪ್ರಕರಣದ ಪ್ರಮುಖ ಆರೋಪಿಯಾಗಿ ರಾಜ್ ಕುಂದ್ರಾ ಜೈಲು ಸೇರಿದ್ದರು. ಸದ್ಯ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಆದರೆ ಇದುವರೆಗೆ ಅವರು ಅವರು ಹೊರಗೆಲ್ಲೂ ಕಾಣಿಸಿಕೊಳ್ಳುತ್ತಿಲ್ಲ. ಇದನ್ನೂ ಓದಿ: 14 ವರ್ಷದ ಬಳಿಕ ಬೆಂಕಿಪೊಟ್ಟಣದ ಬೆಲೆ ಏರಿಕೆ

    ಶಿಲ್ಪಾ ನೀಲಿ ಬಣ್ಣದ ಶರ್ಟ್, ಡ್ರೆಸ್ ಧರಿಸಿ ಗುಲಾಬಿ ಬಣ್ಣದ ಫ್ರಾಕ್ ಧರಿಸಿದ ಸಮಿಷಾಳನ್ನು ತನ್ನ ಸೊಂಟದ ಮೇಲೆ ಹೊತ್ತಿದ್ದರು. ವಿಯಾನ್ ಬಿಳಿ ಬಗೆಯ ಉಣ್ಣೆಬಟ್ಟೆ ಟಿ-ಶರ್ಟ್, ನೀಲಿ ಶಾರ್ಟ್‍ನಲ್ಲಿ ಕಾಣಿಸಿಕೊಂಡಿದ್ದಾನೆ. ಸುನಂದಾ ಅವರು ನೇರಳೆ ಸಲ್ವಾರ್ ಕಮೀಜ್ ತೊಟ್ಟುಕೊಂಡಿದ್ದರು. ರಾಯಲ್ ಪ್ಯಾಮಿಲಿ ಸರಳ ಉಡುಗೆಯಲ್ಲಿ ಸಖತ್ ಅಟ್ರಾಕ್ಟಿವ್ ಆಗಿ ಕಾಣಿಸಿಕೊಂಡಿದೆ.

    ಇತ್ತೀಚೆಗೆ ಶಿಲ್ಪಾ ಶೆಟ್ಟಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡ ಹಬ್ಬಗಳ ಆಚರಣೆಯ ಚಿತ್ರಗಳಲ್ಲೂ ರಾಜ್ ಕುಂದ್ರಾ ಸುಳಿವಿರಲಿಲ್ಲ.

    ರಾಜ್ ಕುಂದ್ರಾ ಕುಟುಂಬದ ಜೊತೆಗೆ ಉದ್ದೇಶಪೂರ್ವಕವಾಗಿ ಸುದ್ದಿಯಾಗುವುದರಿಂದ ದೂರವಿದ್ದಾರೋ ಅಥವಾ ಬೇರೆ ಕಾರಣ ಇದೆಯೋ ಎಂಬುದು ಅಭಿಮಾನಿಗಳಿಗೆ ಇನ್ನೂ ಸ್ಪಷ್ಟವಾಗಿಲ್ಲ.

    ಶಿಲ್ಪಾ ತಮ್ಮ ಕುಟುಂಬದವರೊಂದಿಗೆ ಸಂತಸದಿಂದ ಕಾಲ ಕಳೆಯುತ್ತಿರುವುದಕ್ಕೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

  • ಪತ್ನಿ ಸಾವಿನಿಂದ ಮನನೊಂದು ಒಂದೇ ಕುಟುಂಬದ ಐವರು ಆತ್ಮಹತ್ಯೆ

    ಪತ್ನಿ ಸಾವಿನಿಂದ ಮನನೊಂದು ಒಂದೇ ಕುಟುಂಬದ ಐವರು ಆತ್ಮಹತ್ಯೆ

    ಚಿಕ್ಕೋಡಿ(ಬೆಳಗಾವಿ): ಪತ್ನಿ ಸಾವಿನಿಂದ ಮನನೊಂದಿದ್ದ ವ್ಯಕ್ತಿಯೊಬ್ಬ ತನ್ನ ನಾಲ್ವರು ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೋರಗಲ್ ಗ್ರಾಮದಲ್ಲಿ ನಡೆದಿದೆ.

    ಬೋರಗಲ್ ಗ್ರಾಮದ ಗೋಪಾಲ ಹಾದಿಮನಿ (46) ಹಾಗೂ ಅವರ ಮಕ್ಕಳಾದ ಸೌಮ್ಯಾ ಹಾದಿಮನಿ (19), ಶ್ವೇತಾ ಹಾದಿಮನಿ (16), ಸಾಕ್ಷಿ ಹಾದಿಮನಿ (11), ಸೃಜನಾ ಹಾದಿಮನಿ (8) ಆತ್ಮಹತ್ಯೆಗೆ ಶರಣಾದವರು. ಇದನ್ನೂ ಓದಿ: ಬಿರಿಯಾನಿ ತಿನ್ನಲು ಹೋಗಿ 2 ಲಕ್ಷ ರೂ. ಕಳೆದುಕೊಂಡ ಆಟೋ ಚಾಲಕ

    ಜುಲೈ 6 ರಂದು ಗೋಪಾಲ್ ಅವರ ಪತ್ನಿ ಜಯಾ ಬ್ಲ್ಯಾಕ್ ಫಂಗಸ್ ಸೋಂಕಿನಿಂದ ಮೃತಪಟ್ಟಿದ್ದರು. ಇದರಿಂದ ನೊಂದಿದ್ದ ಗೋಪಾಲ್ ಅವರು ಆತ್ಯಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಫ್ರೀಯಾಗಿ ಕೋಳಿ ಕೊಡಲಿಲ್ಲ- ಹಿಗ್ಗಾಮುಗ್ಗ ಥಳಿಸಿದ್ರು

    ಸಂಕೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಪರ್ವತದ ನೀರು ಕುಡಿದು, ದೇವಾಲಯದ ಪ್ರಸಾದ ಸೇವಿಸಿ ಬದುಕುಳಿದೆವು: ಉತ್ತರಾಖಂಡ್ ಪ್ರವಾಹ ಭೀಕರತೆ ಬಿಚ್ಚಿಟ್ಟ ಕನ್ನಡಿಗರು