Tag: family

  • ಬೆಂಗ್ಳೂರಲ್ಲಿ ಮತ್ತೊಂದು ಘೋರ ದುರಂತ- ಒಂದೇ ಕುಟುಂಬದ ಮೂವರು ಆತ್ಮಹತ್ಯೆ

    ಬೆಂಗ್ಳೂರಲ್ಲಿ ಮತ್ತೊಂದು ಘೋರ ದುರಂತ- ಒಂದೇ ಕುಟುಂಬದ ಮೂವರು ಆತ್ಮಹತ್ಯೆ

    ಬೆಂಗಳೂರು: ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಪ್ರಕರಣ ಮಾಸುವ ಮುನ್ನವೇ ಇದೀಗ ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಘೋರ ದುರಂತ ಸಂಭವಿಸಿದೆ.

    ಹೌದು. ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾದ ಘಟನೆ ಮಾದನಯಾಕನ ಹಳ್ಳಿ ಬಳಿಯ ಪ್ರಕೃತಿ ಬಡಾವಣೆಯಲ್ಲಿ ನಡೆದಿದೆ. ಮೃತರನ್ನು ವಸಂತಾ(40), ಯಶವಂತ್ (15) ಹಾಗೂ ನಿಶ್ಚಿತಾ (6) ಎಂದು ಗುರುತಿಸಲಾಗಿದೆ.

    ಒಂದು ರೂಮಿನಲ್ಲಿ ತಾಯಿ- ಮಗಳು ಹಾಗೂ ಇನ್ನೊಂದು ರೂಮಿನಲ್ಲಿ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮನೆಯಿಂದ ಯಾರೂ ಹೊರಬರುತ್ತಿಲ್ಲ ಎಂದು ಸಂಶಯಗೊಂಡು ಸ್ಥಳೀಯ ನಿವಾಸಿಗಳು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಇದನ್ನೂ ಓದಿ: ನಾನು, ಸೌಜನ್ಯ ಲಿವಿಂಗ್ ಟುಗೆದರ್‌ನಲ್ಲಿ ಇರಲಿಲ್ಲ: ವಿವೇಕ್

    ವರ್ಷದ ಹಿಂದೆ ವಸಂತಾ ಅವರ ಪತಿ ಕೊರೊನಾದಿಂದ ಮೃತಪಟ್ಟಿದ್ದರು. ಆ ಬಳಿಕದಿಂದ ವಸಂತಾ ಅವರು ಮಾನಸಿಕವಾಗಿ ನೊಂದಿದ್ದರು ಎಂದು ಹೇಳಲಾಗುತ್ತಿದೆ. ಇದೇ ಈ ಆತ್ಮಹತ್ಯೆಗೆ ಕಾರಣ ಎಂಬುದಾಗಿ ಮೇಲ್ನೋಟಕ್ಕೆ ತಿಳಿದುಬಂದಿದೆ.

    ಸ್ಥಳಕ್ಕೆ ಮಾದನಾಯಕನ ಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

  • ವೀರಮರಣವಪ್ಪಿದ ಯೋಧರ ಕುಟುಂಬಕ್ಕೆ ಬಿಡಿಎ ನಿವೇಶನ

    ವೀರಮರಣವಪ್ಪಿದ ಯೋಧರ ಕುಟುಂಬಕ್ಕೆ ಬಿಡಿಎ ನಿವೇಶನ

    ಬೆಂಗಳೂರು: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಶಿಫಾರಸ್ಸಿನಂತೆ ಗಡಿ ಕಾಯುವ ಯೋಧರು ವೀರಮರಣ ಹೊಂದಿದ್ದಲ್ಲಿ ಅಥವಾ ತೀವ್ರವಾಗಿ ಗಾಯಗೊಂಡ ಯೋಧರ ಕುಟುಂಬಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಉಚಿತ ನಿವೇಶನ ನೀಡಲಾಗುತ್ತಿದೆ.

    ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಈ ಹಿಂದೆ ಇಬ್ಬರು ವೀರ ಯೋಧರ ಕುಟುಂಬಗಳಿಗೆ ಸಾಂಕೇತಿಕವಾಗಿ ನಿವೇಶನ ಹಂಚಿಕೆ ಮಾಡಿದ್ದರು. ಬೆಂಗಳೂರು ಮೂಲದ ಒಟ್ಟು 5 ಕುಟುಂಬಗಳಿಗೆ ನಿವೇಶನ ಹಂಚಿಕೆ ಮಾಡಲು ನಿರ್ಧರಿಸಲಾಗಿದ್ದು ಇಂದು ಯೋಧರಾದ ಲಾನ್ಸ್ ನಾಯಕ್ ನಾಗೇಂದ್ರಕುಮಾರ್ ಕೆ.ಎಮ್ ಅವರ ತಾಯಿ ಸರೋಜಮ್ಮ ಅವರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ವಿಶ್ವನಾಥ್, ಆಯುಕ್ತ ರಾಜೇಶ್ ಗೌಡ ಹಾಗೂ ಕಾರ್ಯದರ್ಶಿ ಆನಂದ ಅವರು ಹಕ್ಕು ಪತ್ರ ವಿತರಿಸಿದರು.

    ಇನ್ನುಳಿದ ಎರಡು ಕುಟುಂಬಗಳಿಗೆ ನೋಂದಾಯಿತ ಅಂಚೆಯ ಮೂಲಕ ಹಕ್ಕುಪತ್ರಗಳನ್ನು ತಲುಪಿಸಲಾಗುವುದು ಎಂದು ಆಯುಕ್ತರು ತಿಳಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯಗೆ ಮಾತಿನ ಮೇಲೆ ಹಿಡಿತ ಇಲ್ಲ: ವಿಶ್ವನಾಥ್ ಕಿಡಿ

  • ಕೋವಿಡ್‍ನಿಂದ ಮೃತಪಟ್ಟ ಬಿಪಿಎಲ್ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ವಿತರಣೆ

    ಕೋವಿಡ್‍ನಿಂದ ಮೃತಪಟ್ಟ ಬಿಪಿಎಲ್ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ವಿತರಣೆ

    ಬೆಂಗಳೂರು: ಕೋವಿಡ್ ನಿಂದ ಕುಟುಂಬದ ದುಡಿಯುವ ಸದಸ್ಯನನ್ನೇ ಕಳೆದುಕೊಂಡ, ಬಡತನ ರೇಖೆಗಿಂತ ಕೆಳಗಿರುವ ಕುಟುಂಬಕ್ಕೆ ಆಸರೆ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು 1 ಲಕ್ಷ ರೂಪಾಯಿಗಳ ಪರಿಹಾರ ಘೋಷಣೆ ಮಾಡಿತ್ತು. ಅದರಂತೆ ಇಂದು ವಿಧಾನಸೌಧದಲ್ಲಿ 18 ಜನರಿಗೆ ಪರಿಹಾರ ನೀಡುವ ಮೂಲಕ ಕಂದಾಯ ಸಚಿವ ಆರ್ ಅಶೋಕ್ ರಾಜ್ಯಾದ್ಯಂತ ಪರಿಹಾರ ನೀಡುವ ಕಾರ್ಯಕ್ಕೆ ಚಾಲನೆ ನೀಡಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಕೋವಿಡ್ ಸಮಯದಲ್ಲಿ ಅನೇಕ ಕುಟುಂಬಗಳು ತಂದೆ, ತಾಯಿಗಳನ್ನು ಕಳೆದುಕೊಂಡಿವೆ. ಇನ್ನು ಕೆಲವರು ಮಕ್ಕಳನ್ನು ಕಳೆದುಕೊಂಡಿದ್ದಾರೆ. ಅಂತವರ ನೆರವಿಗೆ ಸರ್ಕಾರ ನಿಲ್ಲಬೇಕು ಎನ್ನುವ ಕಾರಣಕ್ಕೆ ಒಂದು ಲಕ್ಷ ಪರಿಹಾರವನ್ನು ಬಿಪಿಎಲ್ ಕುಟುಂಬಕ್ಕೆ ನೀಡಲು ಇಂದಿನಿಂದ ಚಾಲನೆ ನೀಡಿದ್ದೇವೆ. ಒಟ್ಟು 7729 ಅರ್ಜಿಗಳು ಬಂದಿವೆ. ಅರ್ಜಿ ಸ್ವೀಕೃತಿ, ವಿತರಣೆಗೆ ತಂತ್ರಾಂಶ ಅಭಿವೃದ್ಧಿ ಪಡಿಸಿದ್ದೇವೆ. ಎಲ್ಲ ನಾಡಕಚೇರಿ, ತಾಲ್ಲೂಕು ಕಚೇರಿಯಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದೇವೆ. ಪರಿಹಾರದ ಕುರಿತು ಆಕ್ಷೇಪಣೆಗಳನ್ನು ಬಗೆಹರಿಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ್ದೇವೆ ಎಂದರು.

    ಸುಮಾರು 200 ಕೋಟಿಗೂ ಹೆಚ್ಚು ಹಣವನ್ನು ಇದಕ್ಕಾಗಿ ಮೀಸಲಿಡಲಾಗಿದೆ. ಹಣವನ್ನು ಕಂದಾಯ ಇಲಾಖೆಯ ವಿಪತ್ತು ನಿರ್ವಹಣಾ ಅಡಿಯಲ್ಲಿ ನೀಡುತ್ತಿದ್ದೇವೆ. ಕೋವಿಡ್ ನಿಂದ ಮೃತಪಟ್ಟವರ ಮಾಹಿತಿಯನ್ನು ಆರೋಗ್ಯ ಇಲಾಖೆಯಿಂದ ಪಡೆಯುತ್ತಿದ್ದೇವೆ. ಸುಪ್ರೀಂ ಕೋರ್ಟ್ ಆದೇಶದಂತೆ, ಕೋವಿಡ್ ನಿಂದ ದಾಖಲಾಗದ ಸಾವಿನ ಮಾಹಿತಿಯನ್ನು ಕೂಡ ಪಡೆಯುತ್ತೇವೆ. ಇಂದು ಸಾಂಕೇತಿಕವಾಗಿ ಚೆಕ್ ವಿತರಣೆ ಮಾಡಿದ್ದೇವೆ. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿ ಹಣ ನೀಡುತ್ತಾರೆ ಎಂದು ಹೇಳಿದರು. ಇದನ್ನೂ ಓದಿ: ದಾಖಲೆಯ ಹೊಸ್ತಿಲಲ್ಲಿ ಹಿಟ್ ಮ್ಯಾನ್ ರೋಹಿತ್ ಶರ್ಮಾ 

    ಕೇಂದ್ರ ಸರ್ಕಾರ ರೂ. 50 ಸಾವಿರ ಘೋಷಣೆ ಮಾಡಿದೆ. ಆ ಹಣ ಇನ್ನೂ ಬಂದಿಲ್ಲ. ಆ ಹಣ ಬಂದ ಬಳಿಕ ಅದನ್ನು ಕೊಡುತ್ತೇವೆ. ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ದಾರರಿಗೆ ಮಾತ್ರ ಕೊಡಲಿದೆ. ಇದು ರಾಜ್ಯ ಸರ್ಕಾರದ ನಿಲುವು. ಬಡಜನರ ಸಹಾಯಕ್ಕೆ ಸರ್ಕಾರ ಸದಾ ಸಿದ್ಧವಾಗಿದೆ ಎಂದು ತಿಳಿಸಿದರು.

  • ಕಂದಾಯ ಅಧಿಕಾರಿಗಳ ನಿರ್ಲಕ್ಷ್ಯ  – 16 ದಿನಗಳಿಂದ ಗುರುಮಠಕಲ್ ಬಸ್ ನಿಲ್ದಾಣದಲ್ಲೇ ಕುಟುಂಬ ವಾಸ

    ಕಂದಾಯ ಅಧಿಕಾರಿಗಳ ನಿರ್ಲಕ್ಷ್ಯ – 16 ದಿನಗಳಿಂದ ಗುರುಮಠಕಲ್ ಬಸ್ ನಿಲ್ದಾಣದಲ್ಲೇ ಕುಟುಂಬ ವಾಸ

    ಯಾದಗಿರಿ: ಜಮೀನು ವರ್ಗಾವಣೆಯ ಮೂಲ ನಕಲು ಪ್ರತಿಯನ್ನು ನೀಡಲು ಕಂದಾಯ ಅಧಿಕಾರಿಗಳು ನಿರ್ಲಕ್ಷ್ಯ ತೋರಿರುವ ಹಿನ್ನೆಲೆ ಊರಿಗೆ ತೆರಳದೆ ಬಸ್ ನಿಲ್ದಾಣದಲ್ಲಿ ಕುಟುಂಬವೊಂದು ವಾಸ ಮಾಡುತ್ತಿದೆ.

    ಜಿಲ್ಲೆಯ ಗುರುಮಠಕಲ್ ಬಸ್ ನಿಲ್ದಾಣದಲ್ಲಿ ಪ್ರಮಿಳಾ ವೆಂಕಟರೆಡ್ಡಿ ದಂಪತಿ ಕಳೆದ 16 ದಿನಗಳಿಂದ ವಾಸಮಾಡುತ್ತಿದ್ದಾರೆ. ಇವರು ಮೂಲತಃ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಬೆಡಪಳ್ಳಿ ಗ್ರಾಮದವರು. ಹೈದರಾಬಾದ್‍ನಲ್ಲಿ ಕೂಲಿ ಕೆಲಸ ಮಾಡಿ ಜೀವನ ನಡೆಸುತ್ತಿರುವ ಪ್ರಮಿಳಾಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಪ್ರಮಿಳಾ ತವರು ಊರು ಗುರುಮಠಕಲ್ ತಾಲೂಕಿನ ಹಿಮಲಾಪುರ ಗ್ರಾಮ, ಪಿತ್ರಾರ್ಜಿತ ಆಸ್ತಿ ಪಡೆಯಲು ಜಮೀನಿನ ದಾಖಲೆಗಾಗಿ ಹೈದರಾಬಾದ್‍ನಿಂದ ಸೆ.6 ರಂದು ಗುರುಮಠಕಲ್‍ಗೆ ಬಂದಿದ್ದಾರೆ. ಇದನ್ನೂ ಓದಿ: ನಿಷ್ಪಕ್ಷಪಾತವಾದ ವರದಿ ಕೊಡಿ – ಆಧಿಕಾರಿಗಳಿಗೆ ಆಣೆ ಮಾಡಿಸಿದ ಗ್ರಾಮಸ್ಥರು

    ತಹಶೀಲ್ದಾರ್ ಕಚೇರಿಗೆ ತೆರಳಿ ಜಮೀನಿನ ಮೂಲ ನಕಲು ಪ್ರತಿ ಪಡೆಯಲು ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಅರ್ಜಿ ಸಲ್ಲಿಸಿ 16 ದಿನಗಳಾದರೂ ಮೂಲ ನಕಲು ಪ್ರತಿ ನೀಡದೆ ಕಂದಾಯ ಇಲಾಖೆಯ ಅಧಿಕಾರಿಗಳು ಸತಾಯಿಸುತ್ತಿದ್ದಾರೆ. ಗುರುಮಿಠಕಲ್ ಪಟ್ಟಣದಲ್ಲಿ ಪ್ರಮಿಳಾವರಿಗೆ ಯಾವುದೇ ಸಂಬಂಧಿಕರಿಲ್ಲ, ಹೋಟೆಲ್ ನಲ್ಲಿ ರೂಮ್ ಮಾಡುವಷ್ಟು ಶಕ್ತರಲ್ಲದ ಕಾರಣ ಬಸ್ ನಿಲ್ದಾಣದಲ್ಲಿ ರಾತ್ರಿ ಕಳೆದು ಬೆಳಗ್ಗೆ ತಹಶೀಲ್ದಾರ್ ಕಚೇರಿ ಬಾಗಿಲು ಕಾಯುತ್ತಿದ್ದಾರೆ.  ಇದನ್ನೂ ಓದಿ: ಮಕ್ಕಳನ್ನು ವೈದ್ಯರಲ್ಲಿ ತೋರಿಸಲು ಪೋಷಕರ ನೂಕುನುಗ್ಗಲು

  • 17 ವರ್ಷದ ದಾಂಪತ್ಯ ಅಂತ್ಯಗೊಳಿಸಿ ಡೈವೋರ್ಸ್ ಪಾರ್ಟಿ ಮಾಡಿದ ಮಹಿಳೆ

    17 ವರ್ಷದ ದಾಂಪತ್ಯ ಅಂತ್ಯಗೊಳಿಸಿ ಡೈವೋರ್ಸ್ ಪಾರ್ಟಿ ಮಾಡಿದ ಮಹಿಳೆ

    ವಾಷಿಂಗ್ಟನ್: 45 ವರ್ಷದ ಮಹಿಳೆಯೊಬ್ಬರು ತಮ್ಮ 17 ವರ್ಷದ ದಾಂಪತ್ಯ ಜೀವನವನ್ನು ಅಂತ್ಯಗೊಳಿಸಿ ಡೈವೋರ್ಸ್ ಪಾರ್ಟಿ ಮಾಡಿದ್ದಾರೆ.

    ಸೋನಿಯಾ ಗುಪ್ತಾ(45)ರವರು ಸತತ ಮೂರು ವರ್ಷಗಳ ಸುದೀರ್ಘ ಹೋರಾಟದ ನಂತರ ಪತಿಯಿಂದ ವಿಚ್ಛೇದನ ಪಡೆದು ತಮ್ಮ ಯುಕೆ ನಿವಾಸದಲ್ಲಿ ಔತಣ ಕೂಟವನ್ನು ಆಯೋಜಿಸಿ ಕುಟುಂಬ ಮತ್ತು ಸ್ನೇಹಿತರನ್ನು ಆಹ್ವಾನಿಸಿದ್ದರು. ಕಲರ್‌ಫುಲ್ ಥೀಮ್‍ನೊಂದಿಗೆ ಪಾರ್ಟಿಯನ್ನು ಆಯೋಜಿಸಿ, ವಿಚ್ಛೇದನಾ ಪಡೆದ ಖುಷಿಯಲ್ಲಿ ಮಹಿಳೆ ಬ್ರೈಟ್ ಡ್ರೆಸ್‍ನನ್ನು ಧರಿಸಿದ್ದರು ಮತ್ತು ಅವರ ಸ್ನೇಹಿತರಿಗೂ ಅವರಂತೆಯೇ ಆಕರ್ಷಕವಾದ ಉಡುಪನ್ನು ಧರಿಸುವಂತೆ ಪ್ರೋತ್ಸಾಹಿಸಿದ್ದಾರೆ. ವಿವಾಹ ದಾಂಪತ್ಯದಿಂದ ಬಿಡುಗಡೆ ಹೊಂದಿದಕ್ಕೆ ಪಾರ್ಟಿ ಮಾಡುವ ಇಚ್ಛೆಯನ್ನು ಮಹಿಳೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬೀದರ್‌ನಲ್ಲಿ ಖಾಸಗಿ ಅಂಬುಲೆನ್ಸ್‌ಗಳದ್ದೇ ಕಾರ್‌ಬಾರ್ – ಬ್ರಿಮ್ಸ್ ಆಸ್ಪತ್ರೆ ಎದುರೇ ಖಾಸಗಿ ಸುಲಿಗೆ

    ಈ ವಿಚಾರವಾಗಿ ಮಹಿಳೆ ನಾನು ಥೀಮ್ ಡ್ರೆಸ್‍ನನ್ನು ಕಲರ್ ಫುಲ್, ಬ್ರೈಟ್ ಹಾಗೂ ಯುನಿಕ್ ಆಗಿ ಕಾಣಲು ಆರಿಸಿಕೊಂಡೆ. ಏಕೆಂದರೆ ನಾನು ತುಂಬಾ ಕಲರ್ ಫುಲ್ ವ್ಯಕ್ತಿ. ನನಗೆ ಥೀಮ್ ಒಂದು ರೀತಿ ಮ್ಯಾಜಿಕ್‍ನಂತೆ. ನಾನು ಬಯಸಿದಂತೆ ವಿಚ್ಛೇದನ ಪಾರ್ಟಿ ಒಂದು ರೀತಿ ಮೋಜಿನ ಸಂಗತಿಯಾಗಿದ್ದು, ಪಾರ್ಟಿಯಲ್ಲಿ ಪ್ರತಿಯೊಬ್ಬರು ಎಂಜಾಯ್ ಮಾಡಿದರು. ಇದನ್ನೂ ಓದಿ: ಕೊರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ 50,000 ಪರಿಹಾರ ನೀಡಲು NDMA ಶಿಫಾರಸು

    2003ರಲ್ಲಿ ಸೋನಿಯಾ ಭಾರತದಲ್ಲಿ ವಿವಾಹವಾಗಿ ಯುಕೆಗೆ ತೆರಳಿದ್ದರು. ಆದರೆ ಎಷ್ಟೇ ಪ್ರಯತ್ನಿಸಿದರೂ ದಾಂಪತ್ಯ ಜೀವನದಲ್ಲಿ ಸುಖ ಕಾಣಲು ಸಾಧ್ಯವಾಗಲಿಲ್ಲ ಎಂದು ಮನವರಿಕೆ ಮಾಡಿಕೊಂಡೆ ಮತ್ತು ನನಗೂ, ನನ್ನ ಪತಿಗೂ ಹೊಂದಾಣಿಕೆಯಾಗುವುದಿಲ್ಲ ಎಂದು ಅರಿತುಕೊಂಡೆ. ನಾನು ನಾನಾಗಿರಬೇಕು ಎಂದು ಬಯಸಿದೆ. ಮದುವೆಗೂ ಮುನ್ನ ನಾನು ಬಹಳ ಸಕ್ರಿಯ ಮತ್ತು ಔಟ್ ಗೋಯಿಂಗ್ ವ್ಯಕ್ತಿಯಾಗಿದ್ದೆ. ಆದರೆ ಮದುವೆಯ ನಂತರ ಇದೆಲ್ಲ ನರಕದಂತೆ ಆಯಿತು. ಈ ವಿಚಾರವಾಗಿ ನಾನು ಕುಟುಂಬದೊಂದಿಗೆ ಹೇಳಿದಾಗ ನನ್ನ ಜೊತೆಗೆ ಜಗಳ ಆಡಿದರು ಮತ್ತು ಯಾರು ನನಗೆ ಬೆಂಬಲ ನೀಡಲಿಲ್ಲ. ಆದರೆ ಈ ವಿಚಾರದಲ್ಲಿ ನನ್ನ ಎರಡು ಶಕ್ತಿಗಳಂತೆ ಮಿಖಲ್ ಮತ್ತು ಶೇ ಇಬ್ಬರು ಸ್ನೇಹಿತರು ಬೆಂಬಲ ನೀಡಿದರು. ವಿಚ್ಛೇದನ ಬಳಿಕ ನಾನು ಏಷ್ಯನ್ ಸಿಂಗಲ್ ಪೇರೆಂಟ್ ಆಗಿ ನೆರವು ಪಡೆದಿದ್ದೇನೆ ಎಂದು ಹೇಳಿದ್ದಾರೆ.

  • ಬಗೆದಷ್ಟು ಬಯಲಾಗ್ತಿದೆ ಐವರ ಡೆತ್ ಸೀಕ್ರೆಟ್ – ‘ಹಾಳಾಗ್ ಹೋಗ್ರಿ’ ಅಂದಿದ್ದಕ್ಕೇ ಆತ್ಮಹತ್ಯೆನಾ..?

    ಬಗೆದಷ್ಟು ಬಯಲಾಗ್ತಿದೆ ಐವರ ಡೆತ್ ಸೀಕ್ರೆಟ್ – ‘ಹಾಳಾಗ್ ಹೋಗ್ರಿ’ ಅಂದಿದ್ದಕ್ಕೇ ಆತ್ಮಹತ್ಯೆನಾ..?

    ಬೆಂಗಳೂರು: ತಿಗಳರಪಾಳ್ಯದಲ್ಲಿ ನಡೆದಿರುವ ಐವರು ಆತ್ಮಹತ್ಯೆ ಪ್ರಕರಣ ದಿನದಿಂದ ದಿನಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಇಡೀ ಕುಟುಂಬ ಸರ್ವನಾಶಕ್ಕೆ ಮನೆಯಲ್ಲಿ ಆಗಿದ್ದಾದ್ರು ಏನು..?, ಶಂಕರ್ ಮನೆಯಲ್ಲಿ ಕಳೆದ ಭಾನುವಾರ ಐವರ ಮಧ್ಯೆ ಆಗಿದ್ದೇನು…?, 3 ಕೋಟಿ ಮನೆ, ಲಕ್ಷಾಂತರ ರೂ. ದುಡ್ಡಿದ್ದರೂ ಆತ್ಮಹತ್ಯೆ ಮಾಡಿಕೊಂಡಿದ್ಯಾಕೆ..? ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡುವುದು ಸಹಜ. ಇದೀಗ ಸಾವಿನ ಕೊನೆ ಕ್ಷಣಗಳ ಎಕ್ಸ್ ಕ್ಲೂಸಿವ್ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಭಾನುವಾರ ನಡೆದಿದ್ದೇನು..?
    ಶಂಕರ್ ಮನೆಯಲ್ಲಿ ಒಂದಲ್ಲಾ ಒಂದು ಕಾರಣಕ್ಕೆ ನಿತ್ಯ ಗಲಾಟೆಗಳು ನಡೆಯುತ್ತಿದ್ದವು. ಶಂಕರ್-ಹೆಂಡತಿ, ಮೂವರು ಮಕ್ಕಳ ಮಧ್ಯೆ ನಿತ್ಯ ಕಲಹಗಳಾಗುತ್ತಿದ್ದವು. ಪತ್ನಿ, ಮಕ್ಕಳ ನಡುವಳಿಕೆ ಬಗ್ಗೆ ಶಂಕರ್ ಅಸಮಾಧಾನ ವ್ಯಕ್ತಪಡಿಸುತ್ತಿದ್ದರು. 10 ಲಕ್ಷ ಚೀಟಿ ಹಣ ನೀಡುವಂತೆ ಮಗ ಮಧುಸಾಗರ್‍ಗೆ ಶಂಕರ್ ಕೇಳಿದ್ದರು. ಹಣದ ವಿಚಾರವಾಗಿ ಅಪ್ಪ-ಮಗನ ಮಧ್ಯೆ ದೊಡ್ಡದಾಗಿ ವಾಗ್ವಾದ ನಡೆದಿತ್ತು. ಇದನ್ನೂ ಓದಿ: ನನ್ನ ಮಗ ಡೆತ್ ನೋಟ್‍ನಲ್ಲಿ ಹೇಳಿರುವುದೆಲ್ಲಾ ಸುಳ್ಳು: ಶಂಕರ್

    ಹಣ ಕೊಡುವುದಾಗಿ ಕರೆಸಿಕೊಂಡು ಮತ್ತೆ ಮಗ ತಗಾದೆ ತೆಗೆದಿದ್ದ. ಸಾಮೂಹಿಕ ಆತ್ಮಹತ್ಯೆಗೆ ಮುನ್ನ ಮನೆಯಲ್ಲಿ ರಣರಂಗವೇ ನಡೆದು ಹೋಗಿತ್ತು. ತಂದೆ- ಮಗನ ನಡುವೆ ಆರಂಭದ ಜಗಳ ಇಡೀ ಮನೆಗೆ ಅಂಟಿಕೊಂಡಿತ್ತು. ಕೊನೆಗೆ ಶಂಕರ್ ಒಬ್ಬರನ್ನ ಒಂದು ಕಡೆ ಮಾಡಿ ಎಲ್ಲರೂ ಶಂಕರ್ ಮೇಲೆ ಮುಗಿಬಿದ್ದಿದ್ದರು. ಎಷ್ಟರ ಮಟ್ಟಿಗೆ ಅಂದ್ರೆ ಶಂಕರ್ ‘ಹಾಳಾಗ್ ಹೋಗ್ರಿ’ ಎಂದು ಮನೆಯಲ್ಲಿದ್ದ ಬಟ್ಟೆಗಳನ್ನ ತುಂಬಿಕೊಂಡು ಶಂಕರ್ ಮನೆಯಿಂದ ಹೊರ ಬಂದಿದ್ದರು. ಇದನ್ನೂ ಓದಿ: ನಮ್ಮಪ್ಪ ಕಾಮುಕ, ಸ್ಯಾಡಿಸ್ಟ್, ಕುಡುಕ – ಡೆತ್‍ನೋಟ್‍ನಲ್ಲಿ ಮಧುಸಾಗರ್ ಗಂಭೀರ ಆರೋಪ

    ಬಟ್ಟೆ ಬರೆಯೊಂದಿಗೆ ಶಂಕರ್ ಮೈಸೂರು ಕಡೆ ಹೊರಟು ಹೋಗಿದ್ದರು. ಶಂಕರ್ ಮನೆ ಬಿಟ್ಟು ಹೋಗಿ ಮೂರ್ನಾಲ್ಕು ದಿನದಲ್ಲಿ ಇಡೀ ಮನೆ ಮಂದಿಯೆಲ್ಲಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯಲ್ಲಿ ನಡೆದ ವೇಳೆ ಶಂಕರ್ ಹೇಳಿದು ಅದೊಂದು ಮಾತು ಎಲ್ಲರು ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವಾಯ್ತಾ? ‘ಹಾಳಾಗಿ ಹೋಗಿ ನೀವೆಲ್ಲಾ’ ಎಂದು ಶಾಪ ಹಾಕಿದ್ದರಿಂದ ರೋಸಿ ಹೋಗಿ ಆತ್ಮಹತ್ಯೆ ಅಂತ ನಿರ್ಧಾರ ಮಾಡಿಕೊಂಟ್ರಾ ಅನ್ನೋದು ಸದ್ಯ ದೊಡ್ಡ ಚರ್ಚೆ ಆಗುತ್ತಿದೆ. ಇದನ್ನೂ ಓದಿ: ಐವರ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಶಂಕರ್, ಇಬ್ಬರು ಅಳಿಯಂದಿರ ವಿರುದ್ಧ ದೂರು ದಾಖಲು

  • ಕುಡಿಯುವ ನೀರಿಗಾಗಿ ಮಸೀದಿಗೆ ಹೋಗಿದ್ದಕ್ಕೆ ಒತ್ತೆಯಾಳು

    ಕುಡಿಯುವ ನೀರಿಗಾಗಿ ಮಸೀದಿಗೆ ಹೋಗಿದ್ದಕ್ಕೆ ಒತ್ತೆಯಾಳು

    – ಪಾಕಿಸ್ತಾನದಲ್ಲಿ ಹಿಂದು ಕುಟುಂಬಕ್ಕೆ ಕಿರುಕುಳ

    ಇಸ್ಲಾಮಾಬಾದ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿನ ಅಲ್ಪಸಂಖ್ಯಾತ ಹಿಂದೂ ಸಮುದಾಯಕ್ಕೆ ಸೇರಿದ ಕುಟುಂಬವೊಂದು ಮಸೀದಿಯಿಂದ ಕುಡಿಯುವ ನೀರು ತರಲು ಹೋಗಿದ್ದಕ್ಕೆ ಕೆಲ ಸ್ಥಳೀಯರಿಂದ ಕಿರುಕುಳ ಅನುಭವಿಸಿದ್ದಾರೆ. ಆರಾಧನಾ ಸ್ಥಳದ ಪಾವಿತ್ರ್ಯತೆ ಉಲ್ಲಂಘನೆಗಾಗಿ ಒತ್ತೆಯಾಳಾಗಿ ಇರಿಸಿಕೊಳ್ಳಲಾಗಿತ್ತು.

    ಪಂಜಾಬ್‍ನ ರಹೀಮಿಯಾರ್ ಖಾನ್ ನಗರದ ನಿವಾಸಿಯಾಗಿರುವ ಆಲಂ ರಾಮ್ ಭೀಲ್ ಹೊಲವೊಂದರಲ್ಲಿ ಪತ್ನಿ ಸೇರಿದಂತೆ ಅವರ ಇತರ ಕುಟುಂಬ ಸದಸ್ಯರೊಂದಿಗೆ ಹಸಿ ಹತ್ತಿಯನ್ನು ತೆಗೆಯುತ್ತಿದ್ದಾಗ ಕುಡಿಯುವ ನೀರಿಗಾಗಿ ಹತ್ತಿರವಿದ್ದ ಮಸೀದಿಗೆ ಹೋದಾಗ ಕೆಲವು ಸ್ಥಳೀಯ ಭೂಮಾಲೀಕರು ಅವರನ್ನು ಥಳಿಸಿದರು ಎಂದು ಪತ್ರಿಕೆಯೊಂದು ವರದಿ ಮಾಡಿದೆ. ಇದನ್ನೂ ಓದಿ:  ದಸರಾ ತಾಲೀಮು ವೇಳೆ ಅರಮನೆ ಬಳಿ ಆನೆ ರಂಪಾಟ

    ಕುಟುಂಬ ಹೊಲದಲ್ಲಿ ಕೆಲಸ ಮುಗಿಸಿ ಮನೆಗೆ ಹಿಂತಿರುಗಿದಾಗ ಅಲ್ಲಿಗೆ ಬಂದ ಭೂ ಮಾಲೀಕರು ತಮ್ಮ ಟೆಂಟ್‌ಗಳಲ್ಲಿ ಅವರನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಅಲ್ಲದೇ, ಮಸೀದಿಯಲ್ಲಿ ಪಾವಿತ್ರ್ಯತೆ ಉಲ್ಲಂಘನೆಗಾಗಿ ಕಿರುಕುಳ ನೀಡಲಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

    ಪೊಲೀಸರು ದಾಳಿಕೋರರ ವಿರುದ್ಧ ಕೇಸ್ ದಾಖಲಿಸಲಿಲ್ಲ ಎಂದು ಭೀಲ್ ಹೇಳಿದ್ದಾರೆ. ಪೊಲೀಸ್ ನಿರ್ಲಕ್ಷ್ಯವನ್ನು ಪ್ರತಿಭಟಿಸಿ, ಬೀಲ್ ಇನ್ನೊಬ್ಬ ಕುಲದ ಸದಸ್ಯ ಪೀಟರ್ ಜಾನ್ ಭೀಲ್ ಜೊತೆಗೆ ಪೊಲೀಸ್ ಠಾಣೆಯ ಹೊರಗೆ ಧರಣಿ ನಡೆಸಿದರು. ಜಿಲ್ಲಾ ಶಾಂತಿ ಸಮಿತಿಯ ಸದಸ್ಯರೂ ಆಗಿರುವ ಪೀಟರ್ ಅವರು, ತಾವು ಆಡಳಿತಾರೂಢ ಪಿಟಿಐ ಶಾಸಕ ಜಾವೇದ್ ವಾರಿಯಚ್ ಅವರನ್ನು ಸಂಪರ್ಕಿಸಿದ್ದು, ಅವರು ಪ್ರಕರಣ ದಾಖಲಿಸಲು ಸಹಾಯ ಮಾಡಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ:  ಹನಿಟ್ರ್ಯಾಪ್‍ಗೆ ಬಲೆಗೆ ಬಿದ್ದು ಪಾಕಿಗೆ ಸೇನಾ ಮಾಹಿತಿ ರವಾನೆ

    ಈ ವಿಚಾರದ ಬಗ್ಗೆ ಗಮನ ಹರಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧಿಕಾರಿ ಅಸಾದ್ ಸಫ್ರ್ರಾಜ್ ಹೇಳಿದ್ದಾರೆ. ಯಾವುದೇ ಕ್ರಮ ಕೈಗೊಳ್ಳುವ ಮುನ್ನ ಅಲ್ಪಸಂಖ್ಯಾತ ಹಿಂದೂ ಹಿರಿಯರೊಂದಿಗೆ ಮಾತುಕತೆ ನಡೆಸಲಾಗುವುದು ಎಂದು ಉಪ ಆಯುಕ್ತ ಡಾ. ಖುರಾಮ್ ಶೆಹಜಾದ್ ಹೇಳಿದ್ದಾರೆ. ಇದನ್ನೂ ಓದಿ:  ಸಿಎಂ ಬೊಮ್ಮಾಯಿ ಹಿಂದೊಮ್ಮೆ ಕಾಂಗ್ರೆಸ್ ಕದ ತಟ್ಟಿದ್ದರು: ವಿನಯ್ ಕುಮಾರ್ ಸೊರಕೆ

    ಅಧಿಕೃತ ಅಂದಾಜಿನ ಪ್ರಕಾರ, 75 ಲಕ್ಷ ಹಿಂದುಗಳು ಪಾಕಿಸ್ತಾನದಲ್ಲಿ ವಾಸಿಸುತ್ತಿದ್ದಾರೆ. ಸಮುದಾಯದ ಪ್ರಕಾರ, 90 ಲಕ್ಷಕ್ಕೂ ಹೆಚ್ಚು ಹಿಂದೂಗಳು ದೇಶದಲ್ಲಿ ವಾಸಿಸುತ್ತಿದ್ದಾರೆ. ಪಾಕಿಸ್ತಾನದ ಬಹುತೇಕ ಹಿಂದೂ ಜನಸಂಖ್ಯೆಯು ಸಿಂಧ್ ಪ್ರಾಂತ್ಯದಲ್ಲಿ ನೆಲೆಸಿದ್ದು, ಮುಸ್ಲಿಂ ನಿವಾಸಿಗಳೊಂದಿಗೆ ಸಂಸ್ಕೃತಿ, ಸಂಪ್ರದಾಯಗಳು ಮತ್ತು ಭಾಷೆಯನ್ನು ಹಂಚಿಕೊಳ್ಳುತ್ತಾರೆ. ಅವರು ಆಗಾಗೆ ಉಗ್ರರ ಕಿರುಕುಳದ ಬಗ್ಗೆ ದೂರು ನೀಡುತ್ತಾರೆ.

  • ಪ್ರಿಯಕರನೊಂದಿಗೆ ಓಡಿಹೋಗಲು ಹೆತ್ತವರಿಗೆ ವಿಷ ಇಟ್ಟ ಮಗಳು

    ಪ್ರಿಯಕರನೊಂದಿಗೆ ಓಡಿಹೋಗಲು ಹೆತ್ತವರಿಗೆ ವಿಷ ಇಟ್ಟ ಮಗಳು

    ಗಾಂಧಿನಗರ: ಯುವತಿಯೊಬ್ಬಳು ಪ್ರಿಯಕರನೊಂದಿಗೆ ಓಡಿಹೋಗಲು ಹೆತ್ತ ತಂದೆ ತಾಯಿಗೆ ವಿಷ ಪ್ರಾಶನ ಮಾಡಿಸಿದ ಘಟನೆ ಸೂರತ್‍ನಲ್ಲಿ ನಡೆದಿದೆ.

    ಪ್ರೀತಿಸುತ್ತಿದ್ದ ಯುವಕನನ್ನು ಮದುವೆಯಾಗಲು ಹೆತ್ತ ತಂದೆ ತಾಯಿಗೆ ವಿಷ ಹಾಕಿದ್ದಾಳೆ. ಆರೋಪಿತ ಯುವತಿಯನ್ನು ಖುಷ್ಬು ಎಂದು ಗುರುತಿಸಲಾಗಿದೆ. ಈಕೆಯ ಪ್ರಿಯಕರ ಸಚಿನ್ ಆಗಿದ್ದಾನೆ. ಪ್ರಿಯಕರ ಸಚಿನ್ ಜೊತೆ ಓಡಿ ಹೋಗಲು ನಿರ್ಧಾರ ಮಾಡಿದ್ದಳು. ಇದಕ್ಕೆ ಪೋಷಕರು ಅಡ್ಡಿಯಾದ್ದರಿಂದ, ಆಹಾರದಲ್ಲಿ ವಿಷ ಹಾಕಿ ನೀಡಿದ್ದಾಳೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಬೆಂಗ್ಳೂರು ಘಟನೆ ಮಾಸುವ ಮುನ್ನವೇ ದಾವಣಗೆರೆಯಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

    ಖುಷ್ಬು, ಸಚಿನ್ ಕುಟುಂಬವು ಸೂರತ್‍ನ ದಿಂಡೋಲಿ ಪ್ರದೇಶದಲ್ಲಿ ವಾಸಿಸುತ್ತಿದ್ದರು. ಆ ಸಮಯದಲ್ಲಿ ಇಬ್ಬರಿಗೂ ಸ್ನೇಹ ಬೆಳೆದಿದೆ. ದಿನ ಕಳೆಯುತ್ತಿದ್ದಂತೆ ಸ್ನೇಹ ಪ್ರೀತಿಯಾಗಿ ಬದಲಾಗಿದೆ. ಖುಷ್ಬು ಅಪ್ರಾಪ್ತ ವಯಸ್ಸಿನವಳಾದ್ದರಿಂದ ಪೋಷಕರು ಆ ಸಂಬಂಧವನ್ನು ನಿರಾಕರಿಸಿದ್ದಾರೆ. ಇದರಿಂದಾಗಿ ಬೇಸರಗೊಂಡ ಖುಷ್ಬು ಸಚಿನ್‍ನೊಡನೆ ಮನೆಬಿಟ್ಟು ಓಡಿ ಹೋಗಿದ್ದಳು. ಖುಷ್ಬು ಕುಟುಂಬ ಅವರಿರುವ ಜಾಗವನ್ನು ಹುಡುಕಿ ಮರಳಿ ಮನೆಗೆ ಕರೆತಂದಿದ್ದರು. ಪ್ರೀತಿಯ ಮೋಹದಿಂದ ಖುಷ್ಬುವಿನ ಮನ ಬದಲಾಯಿಸಲು ಆ ನಗರವನ್ನು ಬಿಟ್ಟು ಬೇರೆಡೆಗೆ ಹೋಗಿ ಕುಟುಂಬ ವಾಸವಿದ್ದರು. ಇದನ್ನೂ ಓದಿ: 40 ಕೆಜಿ ತೂಕ ಇಳಿಸಿಕೊಂಡ ಬಾಲಿವುಡ್‍ನ ನೃತ್ಯ ನಿರ್ದೇಶಕ ರೆಮೋ ಡಿಸೋಜಾ ಪತ್ನಿ

    ಬೇರೆಡೆಗೆ ವಾಸವಿದ್ದಾಗಲೂ ಸಹ ಖುಷ್ಬು ಮನ ಬದಲಾಗಿಲ್ಲ. ಸಚಿನ್ ಜೊತೆಗಿನ ಪ್ರೀತಿಯನ್ನು ಮತ್ತೆ ಮುಂದುವರೆಸಿದ್ದಳು. ಆದರೆ 18 ವರ್ಷ ವಯಸ್ಸಾಗುವುದನ್ನೇ ಕಾಯುತ್ತಿದ್ದು, ತನ್ನ 18ನೇ ವರ್ಷದ ಜನ್ಮದಿನದ ಎರಡು ದಿನಗಳ ಬಳಿಕ ಸಚಿನ್ ಜೊತೆಗೆ ಓಡಿ ಹೋಗಿ ಮದುವೆಯಾಗಲು ನಿರ್ಧರಿಸಿದ್ದಾಳೆ. ಸೆಪ್ಟೆಂಬರ್ 12ನೇ ತಾರೀಕಿನಂದು ಮೆಡಿಕಲ್ ಸ್ಟೋರ್ಸ್‍ನಿಂದ ಒಂದಿಷ್ಟು ಮಾತ್ರೆಗಳನ್ನು ತಂದು ಆಹಾರದಲ್ಲಿ ಬೆರೆಸಿ ಮನೆಯವರಿಗೆಲ್ಲಾ ನೀಡಿದ್ದಾಳೆ. ಸ್ವಲ್ಪ ಸಮಯದ ಬಳಿಕ ಮನೆಯವರು ಪ್ರಜ್ಞಾಹೀನ ಸ್ಥಿತಿಗೆ ತಲುಪುತ್ತಿದ್ದಂತೆಯೇ ಸಚಿನ್ ಆಕೆಯ ಮನೆಗೆ ಬಂದು ಖುಷ್ಬುಳನ್ನು ಕರೆದುಕೊಂಡು ಪರಾರಿಯಾಗಿದ್ದಾನೆ. ಇದನ್ನೂ ಓದಿ: ನಾಲಿಗೆ ಚಪ್ಪರಿಸಿ ತಿನ್ನುವ ಶುಂಠಿ ಉಪ್ಪಿನಕಾಯಿ ಮಾಡುವ ವಿಧಾನ 

    ಆಕೆಯ ತಂದೆ ವಂಜಾರಾ ಅವರಿಗೆ ಎಚ್ಚರವಾದ ಬಳಿಕ, ಎಚ್ಚರ ತಪ್ಪಿ ಬಿದ್ದಿದ್ದ ಮನೆಯವರನ್ನು ಎದ್ದೇಳಿಸಲು ಪ್ರಯತ್ನಿಸಿದ್ದಾರೆ. ಈ ಕಡೆ ಖುಷ್ಬು ಮತ್ತು ಸಚಿನ್ ಮದುವೆಯಾಗಲು ಪೊಲೀಸ್ ಠಾಣೆಯನ್ನು ತಲುಪಿದ್ದಾರೆ. ಖುಷ್ಬು ತಾಯಿ ಮತ್ತು ಸಹೋದರನ ಪರಿಸ್ಥಿತಿ ತುಂಬಾ ಹದಗೆಟ್ಟಿದ್ದು ಆಸ್ಪತ್ರೆಗೆ ಕರೆತರಲಾಗಿದೆ. ತಂದೆ ವಂಜಾರಾ ಅವರು ಖುಷ್ಬು, ಸಚಿನ್ ಮತ್ತು ಸಚಿನ್ ತಂದೆ ಅಶೋಕ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

  • ನಮ್ಮಪ್ಪ ಕಾಮುಕ, ಸ್ಯಾಡಿಸ್ಟ್, ಕುಡುಕ – ಡೆತ್‍ನೋಟ್‍ನಲ್ಲಿ ಮಧುಸಾಗರ್ ಗಂಭೀರ ಆರೋಪ

    ನಮ್ಮಪ್ಪ ಕಾಮುಕ, ಸ್ಯಾಡಿಸ್ಟ್, ಕುಡುಕ – ಡೆತ್‍ನೋಟ್‍ನಲ್ಲಿ ಮಧುಸಾಗರ್ ಗಂಭೀರ ಆರೋಪ

    – ನಮ್ಮಪ್ಪನಿಗೆ ಐವರು ಮಹಿಳೆಯರ ಜೊತೆಯಿದೆ ಸಂಬಂಧ
    – ಅಮ್ಮನ ಬಾಯಲ್ಲಿ ಚಪ್ಪಲಿಯಿಟ್ಟು ಅವಮಾನಿಸ್ತಿದ್ದ
    – ಸಹೋದರಿಯರ ಜೀವನ ಹಾಳಾಗಲು ಅಪ್ಪನೇ ಕಾರಣ
    – 3 ಕೋಟಿಯ ಮನೆ ಸೋರುತ್ತಿದೆ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಐವರ ಸಾವು ಪ್ರಕರಣ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಇದೀಗ ಆತ್ಮಹತ್ಯೆಗೂ ಮುನ್ನ ಮಕ್ಕಳು ಬರೆದಿರುವ ಡೆತ್ ನೋಟ್ ಪತ್ತೆಯಾಗಿದ್ದು, ಪ್ರತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಡೆತ್ ನೋಟ್ ನಲ್ಲಿ ಮಕ್ಕಳು ಅಪ್ಪ ಶಂಕರ್ ವಿರುದ್ಧ ಗಂಭೀರ ಆರೋಪಗಳ ಸುರಿಮಳೆಗೈದಿದ್ದಾರೆ.

    ನಮ್ಮಪ್ಪ ಕಾಮುಕ, ಸ್ಯಾಡಿಸ್ಟ್ ಹಾಗೂ ಕುಡುಕ ಎಂದು ಮೃತ ಪುತ್ರ ಮಧುಸಾಗರ್ ಆರೋಪಿಸಿದ್ದಾರೆ. ನಮ್ಮಪ್ಪನಿಗೆ ಐವರು ಮಹಿಳೆಯರೊಂದಿಗೆ ಸಂಬಂಧ ಇತ್ತು. ಅಲ್ಲದೆ ಅಕ್ರಮ ಸಂಬಂಧ ಹೊಂದಿರುವ ಮಹಿಳೆಯ ಮಗಳನ್ನು ಮದುವೆಯಾಗುವಂತೆ ನನ್ನನ್ನು ಪೀಡಿಸುತ್ತಿದ್ದನು. ಕುಡಿದು ಬಂದು ಅಮ್ಮನಿಗೆ ಹೊಡೆಯುತ್ತಿದ್ದನು ಎಂದೆಲ್ಲಾ ಡೆತ್ ನೋಟ್ ನಲ್ಲಿ ಬರೆದಿದ್ದಾನೆ.  ಇದನ್ನೂ ಓದಿ: ತಂದೆ ಶಂಕರ್ ಅನೈತಿಕ ಸಂಬಂಧವೇ ಕುಟುಂಬಕ್ಕೆ ಕುತ್ತಾಯ್ತಾ..? – ಅಪ್ಪನ ಬಗ್ಗೆ ಮೃತ ಮಕ್ಕಳ ಡೆತ್‍ನೋಟ್

    ಡೆತ್ ನೋಟ್ ನಲ್ಲೇನಿದೆ..?
    ನನ್ನ ತಂದೆ ಸ್ಯಾಡಿಸ್ಟ್, ಕಾಮುಕ. ತಂದೆ ಶಂಕರ್‍ಗೆ ಐವರು ವಿವಾಹಿತ ಮಹಿಳೆಯ ಜೊತೆ ಸಂಬಂಧವಿದೆ. ನಮ್ಮ ಏರಿಯಾದಲ್ಲೇ ಇರುವ ಓರ್ವ ಮಹಿಳೆ ಜೊತೆ ಸಂಪರ್ಕ ಇದೆ. ತಾನು ಸಂಬಂಧ ಹೊಂದಿದ್ದ ಮಹಿಳೆಯ ಮಗಳನ್ನೇ ಮದುವೆ ಆಗುವಂತೆ ಒತ್ತಾಯ ಮಾಡಿದ್ದಾನೆ. ತನ್ನ ಕಚೇರಿಯಲ್ಲಿ ಓರ್ವ ಮಹಿಳೆ ಜೊತೆ ಲೈಂಗಿಕ ಸಂಪರ್ಕ ಹೊಂದಿದ್ದಾರೆ. ಹೀಗೆ ಹಲವು ಮಹಿಳೆಯರಿಗೆ ಬ್ಲಾಕ್‍ಮೇಲ್ ಮಾಡಿ ಲೈಂಗಿಕ ಸಂಪರ್ಕ ಹೊಂದಿದ್ದಾರೆ. ಹಲವು ಮಹಿಳೆಯರನ್ನು ಟ್ರ್ಯಾಪ್ ಮಾಡಿ ಸಂಬಂಧ ಹೊಂದಿದ್ದರು. ಅಪ್ಪನ ಅನೈತಿಕ ಸಂಬಂಧಕ್ಕೆ ಬೇಸತ್ತು ಅಪ್ಪನಿಂದ ನಾನು, ಅಮ್ಮ ದೂರ ಉಳಿದಿದ್ದೆವು. ನಮ್ಮ ಅಮ್ಮ, ಅಕ್ಕಂದಿರಿಗೆ ಕಿರುಕುಳ ನೀಡುತ್ತಿದ್ದರು. ಈ ಮೂಲಕ ಅಕ್ಕಂದಿರ ಜೀವನವನ್ನೂ ಹಾಳು ಮಾಡಿದ್ದಾರೆ.

    ನನ್ನ ತಂದೆ ಕಾಮುಕ, ಅಪ್ಪನ ಎಲ್ಲಾ ಕೃತ್ಯದ ಬಗ್ಗೆ ಅಮ್ಮನಿಗೆ ಗೊತ್ತಿತ್ತು. ಇದೇ ವಿಚಾರವಾಗಿ ಮನೆಯಲ್ಲಿ ಸಾಕಷ್ಟು ಬಾರಿ ಗಲಾಟೆಗಳಾಗಿವೆ. ನಮ್ಮನ್ನು ಮನೆಯಲ್ಲೇ ಕೂಡಿ ಹಾಕುತ್ತಿದ್ದರು. ಅಪ್ಪನ ಕಿರುಕುಳದಿಂದ ಅಮ್ಮನಿಗೆ ನಿಮ್ಹಾನ್ಸ್ ನಲ್ಲಿ ಚಿಕಿತ್ಸೆಯನ್ನು ಕೂಡ ನೀಡಲಾಗಿತ್ತು. ಈ ಹಿಂದೆ ಪೊಲೀಸ್ ಠಾಣೆಯಲ್ಲೂ ಅಪ್ಪನ ವಿರುದ್ಧ ಕೇಸ್ ದಾಖಲಾಗಿತ್ತು. 2007ರಲ್ಲಿ ಇದೇ ವಿಚಾರಕ್ಕೆ ಅಪ್ಪನ ಮೇಲೆ ಹಲ್ಲೆ ನಡೆದಿತ್ತು. 3 ಕೋಟಿ ಖರ್ಚು ಮಾಡಿ ಮನೆ ಕಟ್ಟಿದ್ರು, ಆದರೆ ಮನೆ ಸೋರುತ್ತೆ. ಕಿಟಕಿಯಿಂದ ನೀರು ಮನೆ ಒಳಗೆ ಬರುತ್ತೆ. ಇದನ್ನೂ ಓದಿ: ಐವರ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಶಂಕರ್, ಇಬ್ಬರು ಅಳಿಯಂದಿರ ವಿರುದ್ಧ ದೂರು ದಾಖಲು

    ಅಕ್ಕನ ಗಂಡಂದಿರ ಮನೆಯವರು ಚೆನ್ನಾಗಿ ನೋಡಿಕೊಳ್ಳುತ್ತಿರಲಿಲ್ಲ. ಅಕ್ಕಂದಿರಿಗೆ ಅಪ್ಪ ಯಾವುದೇ ಆಸ್ತಿ ನೀಡಿರಲಿಲ್ಲ. ಹೀಗಾಗಿ ಗಂಡಂದಿರ ಮನೆಯವರು ನಿತ್ಯ ಕಿರುಕುಳ ನೀಡುತ್ತಿದ್ದರು. ನನ್ನ ತಂದೆ ಕುಡುಕ. ಹೀಗಾಗಿ ಮನೆಯ ಬಾಗಿಲು ಲಾಕ್ ಮಾಡುತ್ತಿರಲಿಲ್ಲ. ನಮ್ಮ ಅಪ್ಪ ಅತೀ ದೊಡ್ಡ ಸ್ಯಾಡಿಸ್ಟ್. ನನ್ನ ಅಮ್ಮನಿಗೆ ಕಿರುಕುಳ ಕೊಡುತ್ತಿದ್ದರು. ನನ್ನ ಅಮ್ಮನ ಚಾರಿತ್ರ್ಯಹರಣ ಮಾಡ್ತಿದ್ದರು. ಗಂಡ-ಹೆಂಡತಿ ನಡುವಿನ ಸಂಬಂಧ ಹಾಳು ಮಾಡ್ತಿದ್ದರು. ನಮ್ಮ ಅಪ್ಪ ಆತನ ಸಹೋದರಿಯನ್ನು ಆಕೆಯ ಗಂಡನಿಂದ ದೂರ ಮಾಡಿದ್ದಾರೆ.

    ನನ್ನ ಮೊದಲ ಸಹೋದರಿಗೆ ಆಕೆಯ ಅತ್ತೆ ಮತ್ತು ಮಾವ, ಗಂಡನಿಗೆ ಹೇಳಿ ಹೊಡೆಸ್ತಿದ್ದರು. ಗಂಡ-ಹೆಂಡತಿ ನಡುವೆ ಭಿನ್ನಾಭಿಪ್ರಾಯಕ್ಕೆ ನಮ್ಮಪ್ಪನೇ ಕಾರಣ ಎಂದು ಮಗ ಮಧುಸಾಗರ್ ದೂರಿದ್ದಾನೆ. ನನ್ನ ಎರಡನೇ ಸಹೋದರಿಗೂ ನನ್ನ ತಂದೆ ತೊಂದರೆ ಕೊಟ್ಟಿದ್ದರು. ನನ್ನ ತಾಯಿಗೆ ಹಾನಿ ಉಂಟು ಮಾಡಲು ಯತ್ನಿಸಿದ್ದರು. ನಮ್ಮನಿಗೆ ನಮ್ಮಪ್ಪ ಚಪ್ಪಲಿಯಿಂದ ಹೊಡೆಯುತ್ತಿದ್ದರು. ನಮ್ಮಮ್ಮನ ಬಾಯಲ್ಲಿ ಚಪ್ಪಲಿ ಇಟ್ಟು ಅವಮಾನಿಸ್ತಿದ್ದರು. ನಮ್ಮಮ್ಮನಿಗೆ ಇನ್ನೊಂದು ಸಂಬಂಧ ಇದೆ ಎಂದು ಶಂಕಿಸಿದ್ದರು. ಇದನ್ನೂ ಓದಿ: ಕೌಟುಂಬಿಕ ಕಲಹದಿಂದ್ಲೇ ಸಾಮೂಹಿಕ ಆತ್ಮಹತ್ಯೆ – ದುರಂತಕ್ಕೆ ಪತ್ನಿಯೇ ಕಾರಣವೆಂದ ಪತಿ ಶಂಕರ್

    ನಮ್ಮನ್ನು ಮನೆಯೊಳಗೆ ಕೂಡಿ ಹಾಕಿ ಅಫೀಸ್‍ಗೆ ಹೋಗ್ತಿದ್ದರು. ನಮ್ಮಪ್ಪನ ಕಿರುಕುಳದಿಂದ ನನ್ನ ತಾಯಿ ಖಿನ್ನತೆಗೆ ಒಳಗಾಗಿ ನಿಮ್ಹಾನ್ಸ್‍ನಲ್ಲಿ ಚಿಕಿತ್ಸೆ ಪಡೆದಿದ್ದರು. ನಮ್ಮಮ್ಮನ ಅಸಹಾಯಕತೆಯನ್ನೇ ನಮ್ಮಪ್ಪ ಬಳಸಿಕೊಂಡು ಆಕೆಗೆ ಕಿರುಕುಳ ನೀಡ್ತಿದ್ದರು. ದಿನಾ ಕುಡಿದು ಬಂದು ಗಲಾಟೆ ಮಾಡ್ತಿದ್ದರು. ನಮ್ಮಪ್ಪನ ಜೊತೆ ನಾವು ಊಟನೂ ಮಾಡ್ತಿರಲಿಲ್ಲ. ಅವರು ಮನೆಗೆ ಬರುವ ಮೊದಲೇ ಊಟ ಮಾಡಿ ಮಲಗ್ತಿದ್ವಿ.

    ಕೆಲಸ ಬಿಡುವಂತೆ ನನಗೆ, ನನ್ನ ಸಹೋದರರಿಗೆ ಕಿರುಕುಳ ಕೊಡ್ತಿದ್ದರು. ಅಪ್ಪನ ಕಿರುಕುಳ ತಾಳಲಾರದೇ ನಾನು ಕೆಲಸಕ್ಕೆ ರಾಜೀನಾಮೆ ಕೊಟ್ಟಿದ್ದೆ. ನಾನು, ಅಮ್ಮ, ಸಹೋದರರಿರನ್ನು ಬೇರೆ ಬೇರೆ ಇಟ್ಟಿದ್ದರು. ನಮ್ಮ ಅಪ್ಪನ ಕಾಟದಿಂದ ನನ್ನ ಸಹೋದರರಿಯ ಶಿಕ್ಷಣ ಒಂದು ವರ್ಷ ಹಾಳಾಗಿತ್ತು ಎಂದೆಲ್ಲಾ ಡೆತ್ ನೋಟ್ ಬರೆದಿದ್ದು, ಈ ಡೆತ್ ನೋಟ್ ಶಂಕರ್ ಜೀವನಕ್ಕೆ ಕುತ್ತು ತರುತ್ತಾ ಎಂಬ ಪ್ರಶ್ನೆ ಎದ್ದಿದೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ಒಂದೇ ಕುಟುಂಬದ ಐವರು ಸಾವು ಪ್ರಕರಣ- ಐದು ದಿನ ಅನ್ನ, ನೀರಿಲ್ಲದೆ ಬದುಕುಳಿದ ಎರಡೂವರೆ ವರ್ಷದ ಕಂದಮ್ಮ

  • ತಂದೆ ಶಂಕರ್ ಅನೈತಿಕ ಸಂಬಂಧವೇ ಕುಟುಂಬಕ್ಕೆ ಕುತ್ತಾಯ್ತಾ..? – ಅಪ್ಪನ ಬಗ್ಗೆ ಮೃತ ಮಕ್ಕಳ ಡೆತ್‍ನೋಟ್

    ತಂದೆ ಶಂಕರ್ ಅನೈತಿಕ ಸಂಬಂಧವೇ ಕುಟುಂಬಕ್ಕೆ ಕುತ್ತಾಯ್ತಾ..? – ಅಪ್ಪನ ಬಗ್ಗೆ ಮೃತ ಮಕ್ಕಳ ಡೆತ್‍ನೋಟ್

    – 2 ಕೋಟಿ ಬಂಗಲೆಯಲ್ಲಿ ನಗನಾಣ್ಯ ಪತ್ತೆ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಒಂದೇ ಕುಟುಂಬದ ಐವರ ಸಾವು ಪ್ರಕರಣ ದಿನದಿಂದ ದಿನ್ಕಕೆ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಸದ್ಯ ಮೃತ ಮಧುಸಾಗರ್ ಬರೆದ ಡೆತ್ ನೋಟ್ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಹೌದು. ತಿಗಳರಪಾಳ್ಯದ ಐವರ ಆತ್ಮಹತ್ಯೆ ರಹಸ್ಯ ಬಗೆದಷ್ಟು ಬಯಲಾಗ್ತಿದೆ. ಡೆತ್ ನೋಟ್ ಬರೆದಿಟ್ಟು ಕುಟುಂಬ ಆತ್ಮಹತ್ಯೆಗೆ ಶರಣಾಗಿದೆ. ಸಿಂಚನಾ, ಸಿಂಧುರಾಣಿ, ಮಧುಸಾಗರ್ ಹೀಗೆ ಪ್ರತಿಯೊಬ್ಬರೂ ಡೆತ್‍ನೋಟ್ ಬರೆದಿದ್ದಾರೆ. ಈ ಮೂಲಕ ಶಂಕರ್ ಹಾಗೂ ಅಳಿಯಂದಿರ ಪಾಲಿಗೆ ಇದು ಕಂಟಕವಾಗುತ್ತಾ ಎಂಬ ಪ್ರಶ್ನೆ ಮೂಡಿದೆ. ಅಲ್ಲದೆ ಮೂವರ ಡೆತ್‍ನೋಟ್‍ನ ಮುಖಪುಟದಲ್ಲಿ ಒಂದೇ ರೀತಿಯ ಫೋಟೋ ಹಾಕಿರುವುದು ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಐವರ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಶಂಕರ್, ಇಬ್ಬರು ಅಳಿಯಂದಿರ ವಿರುದ್ಧ ದೂರು ದಾಖಲು

    ಶಂಕರ್‌ಗೆ ಡೆತ್‍ನೋಟ್ ಕಂಟಕ..?: ನಮ್ಮ ಸಾವಿಗೆ ತಂದೆ ಶಂಕರ್ ಅವರೇ ಕಾರಣ. ನಮ್ಮಪ್ಪ ಪರ ಸ್ತ್ರೀಯೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದರು. ಪದೇ ಪದೇ ಹಣಕ್ಕಾಗಿ ನಮ್ಮ ಮೇಲೆ ಒತ್ತಡ ಹೇರುತ್ತಿದ್ದರು. ತಾಯಿ ಭಾರತಿಯನ್ನ ಸಂತೋಷವಾಗಿ ಬದುಕಲು ಬಿಟ್ಟಿರಲಿಲ್ಲ. ಹೀಗಾಗಿ ಗಂಡನ ಮನೆಯಲ್ಲಿಯೂ ಕಿರುಕುಳ, ತಂದೆ ಮನೆಯಲ್ಲೂ ಕಿರುಕುಳ ಅನುಭವಿಸುತ್ತಿದ್ದೇವೆ. ಮನೆ ಸಮಸ್ಯೆಗಳ ಬಗೆಹರಿಸುವ ಗೋಜಿಗೆ ತಂದೆ ಹೋಗ್ತಿರಲಿಲ್ಲ. ಗಂಡನ ಮನೆಯಲ್ಲಿ ಅತ್ತೆ, ಮಾವಂದಿರು ಬದುಕಲು ಬಿಡಲಿಲ್ಲ. ಇತ್ತ ನಮ್ಮ ಮನೆಯಲ್ಲಿ ತಂದೆಯೇ ಸಂತೋಷವಾಗಿ ಬದುಕೋದಕ್ಕೆ ಬಿಡಲಿಲ್ಲ ಎಂದೆಲ್ಲ ಡೆತ್ ನೋಟ್ ನಲ್ಲಿ ಮಕ್ಕಳು ತಮ್ಮ ತಂದೆಯ ವಿರುದ್ಧವೇ ಗಂಭೀರ ಆರೋಪ ಮಾಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಕೌಟುಂಬಿಕ ಕಲಹದಿಂದ್ಲೇ ಸಾಮೂಹಿಕ ಆತ್ಮಹತ್ಯೆ – ದುರಂತಕ್ಕೆ ಪತ್ನಿಯೇ ಕಾರಣವೆಂದ ಪತಿ ಶಂಕರ್

    ಕೆಜಿಗಟ್ಟಲೇ ಚಿನ್ನಾಭರಣ ಪತ್ತೆ: ಇತ್ತ ಪ್ರಕರಣ ಸಂಬಂಧ ತನಿಖೆಗೆ ತೆರಳಿರುವ ಪೊಲೀಸರಿಗೆ ಶಂಕರ್ ಮನೆಯಲ್ಲಿ ಕೆಜಿಗಟ್ಟಲೇ ಚಿನ್ನಾಭರಣ ಪತ್ತೆಯಾಗಿದೆ. 15 ಲಕ್ಷ ರೂ. ನಗದು, ಚೆಲ್ಲಾಪಿಲ್ಲಿ ಆಗಿರುವ ಹರಿದ ನೋಟುಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಪೊಲೀಸರು ಹಣ ಹಾಗೂ ಚಿನ್ನಾಭರಣದ ಬಗ್ಗೆ ಐಟಿಗೆ ತಿಳಿಸಲು ಚಿಂತನೆ ನಡೆಸಿದ್ದಾರೆ. ಶಂಕರ್ ಮನೆಯಲ್ಲಿ ರಾಶಿರಾಶಿ ಆರ್ ಟಿಐ ಚೀಟಿ ಕೂಡ ಪತ್ತೆಯಾಗಿವೆ. ಈ ಬಗ್ಗೆಯೂ ಪೊಲೀಸರು ತನಿಖೆ ನಡೆಸಲಿದ್ದಾರೆ. ಇದನ್ನೂ ಓದಿ:  ಬೆಂಗ್ಳೂರಲ್ಲಿ ಒಂದೇ ಕುಟುಂಬದ ಐವರು ಸಾವು ಪ್ರಕರಣ- ಐದು ದಿನ ಅನ್ನ, ನೀರಿಲ್ಲದೆ ಬದುಕುಳಿದ ಎರಡೂವರೆ ವರ್ಷದ ಕಂದಮ್ಮ