Tag: family

  • ಮೈಸೂರಿನಲ್ಲಿ ನಡೆದ ಅಪಘಾತ ಪ್ರಕರಣ- ಗಾಯಾಳುಗಳಲ್ಲಿ ಓರ್ವನ ಸ್ಥಿತಿ ಗಂಭೀರ

    ಮೈಸೂರಿನಲ್ಲಿ ನಡೆದ ಅಪಘಾತ ಪ್ರಕರಣ- ಗಾಯಾಳುಗಳಲ್ಲಿ ಓರ್ವನ ಸ್ಥಿತಿ ಗಂಭೀರ

    – ಚಿಕಿತ್ಸೆಗೆ ಸ್ಪಂದಿಸುತ್ತಿರೋ ಮಕ್ಕಳು

    ಮೈಸೂರು: ಜಿಲ್ಲೆಯ ಕುರುಬೂರು (Kuruburu Accident) ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಗಾಯಗೊಂಡವರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ. ಉಳಿದಂತೆ ಇಬ್ಬರು ಮಕ್ಕಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ಮೈಸೂರಿನ ಕೆಆರ್ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿದಿದೆ. ಗಾಯಾಳು ಶಶಿಕುಮಾರ್ ಹಾಗೂ ಜನಾರ್ಧನ್‍ಗೆ ಐಸಿಯು ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಇದರಲ್ಲಿ ಶಶಿಕುಮಾರ್ ಸ್ಥಿತಿ ಗಂಭೀರವಾಗಿದೆ. ಇನ್ನು ಕಾರಿನಲ್ಲಿದ್ದ ಮಗು ಪುನೀತ್ ಹಾಗೂ ಬಸ್‍ನಲ್ಲಿದ್ದ ಮಗುವಿಗೆ ಕೂಡ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಮಕ್ಕಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂಬುದಾಗಿ ವೈದ್ಯರು ತಿಳಿಸಿದ್ದಾರೆ.

    ಘಟನೆಯಲ್ಲಿ ಸಾವನ್ನಪ್ಪಿದ 10 ಮಂದಿಯ ಮೃತದೇಹಗಳನ್ನು ಆಸ್ಪತ್ರೆ ಸಿಬ್ಬಂದಿ ಮಧ್ಯರಾತ್ರಿ 3 ಗಂಟೆ ಸುಮಾರಿಗೆ ಬಳ್ಳಾರಿಗೆ ಕಳುಹಿಸಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಿ ಅಂಬುಲೆನ್ಸ್ ಮೂಲಕ ರವಾನಿಸಲಾಗಿದೆ. ಮಂಜುನಾಥ್ (35), ಪೂರ್ಣಿಮಾ (30), ಪವನ್ (10), ಕಾರ್ತಿಕ್ (8), ಸಂದೀಪ್ (24), ಸುಜಾತ (40), ಕೊಟ್ರೇಶ್ (45), ಗಾಯಿತ್ರಿ (35), ಶ್ರೇಯಾ (3) ಮೃತದೇಹ ಕುಟುಬಸ್ಥರಿಗೆ ಹಸ್ತಾಂತರ ಮಾಡಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು.

    ನಡೆದಿದ್ದೇನು..?: ಮೈಸೂರಿಗೆ ರೈಲಿನಲ್ಲಿ ಬಂದಿದ್ದ ಸಂಗನಕಲ್ಲು ಗ್ರಾಮದ ಮೂರು ಕುಟುಂಬಗಳ ಮಂದಿ ಬೆಳಗ್ಗೆ ಇನ್ನೋವಾ ಕಾರು (Innova Car) ಬಾಡಿಗೆ ಮಾಡಿಕೊಂಡು ಚಾಮುಂಡಿ ಬೆಟ್ಟ, ಬಿಆರ್ ಹಿಲ್ಸ್‍ಗೆ ತೆರಳಿದ್ರು. ಅಲ್ಲಿಂದ 5 ಗಂಟೆಯ ರೈಲು ಹತ್ತಲು ಮೈಸೂರಿಗೆ ವಾಪಸ್ ಆಗುವಾಗ ಪಿಂಜಾರಪೋಲ್ ಸಮೀಪದ ತಿರುವಿನಲ್ಲಿ ಈ ದುರಂತ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಇಡೀ ಇನ್ನೋವಾ ಕಾರ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪ್ಪಚ್ಚಿಯಾದ ಕಾರಿನಲ್ಲಿ ಸಿಲುಕಿದ್ದ ಮೃತದೇಹಗಳನ್ನು ಹರಸಾಹಸ ಮಾಡಿ ಹೊರತೆಗೆಯಬೇಕಾಯಿತು. ಇದನ್ನೂ ಓದಿ: ಮೈಸೂರು ಬಳಿ ರಸ್ತೆ ಅಪಘಾತಕ್ಕೆ 10 ಬಲಿ – ಪರಿಹಾರ ಘೋಷಿಸಿದ ಸಿಎಂ

    ಅಪಘಾತದ ದೃಶ್ಯ ಬಸ್‍ನಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ದುರಂತಕ್ಕೆ ಟೋಲ್ ಮತ್ತು ಲೋಕೋಪಯೋಗಿ ಇಲಾಖೆಯೇ ನೇರ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಟೋಲ್ ವಸೂಲಿ ಮಾಡ್ತಾರೆ. ಆದರೆ ತಿರುವಿನಲ್ಲಿ ಒಂದು ಸೂಚನಾ ಫಲಕವನ್ನು ಅಳವಡಿಸಿಲ್ಲ. ಗಿಡಗಂಟೆಗಳನ್ನು ತೆರವು ಮಾಡಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ. ಸಂಗನಕಲ್ಲಿನಲ್ಲಿ ಮೃತರ ಬಂಧುಗಳ ಆಕ್ರಂದನ ಮುಗಿಲುಮುಟ್ಟಿದೆ. ಈ ಮಧ್ಯೆ, ದುರಂತಕ್ಕೆ ಪ್ರಧಾನಿ ಮೋದಿ (Narendra Modi) ಸಿಎಂ ಸಿದ್ದರಾಮಯ್ಯ (Siddaramaiah) ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ ಘೋಷಿಸಿದ್ದಾರೆ. ರಾಷ್ಟ್ರಪತಿ ಮುರ್ಮು (Droupadi Murmu) ಅವರು ಸಂತಾಪ ಸೂಚಿಸಿದ್ದಾರೆ.

     

  • ಅಫ್ಘಾನಿಸ್ತಾನದಲ್ಲಿ ಉದ್ಯಾನವನ, ರೆಸ್ಟೊರೆಂಟ್‌ಗಳಿಗೆ ಕುಟುಂಬ, ಮಹಿಳೆಯರೊಂದಿಗೆ ಹೋಗೋದು ಬ್ಯಾನ್

    ಅಫ್ಘಾನಿಸ್ತಾನದಲ್ಲಿ ಉದ್ಯಾನವನ, ರೆಸ್ಟೊರೆಂಟ್‌ಗಳಿಗೆ ಕುಟುಂಬ, ಮಹಿಳೆಯರೊಂದಿಗೆ ಹೋಗೋದು ಬ್ಯಾನ್

    ಕಾಬೂಲ್: ಅಫ್ಘಾನಿಸ್ತಾನದ (Afghanistan) ಹೆರಾತ್ (Herat) ಪ್ರಾಂತ್ಯದಲ್ಲಿ ಉದ್ಯಾನವನಗಳು (Gardens) ಹಾಗೂ ರೆಸ್ಟೊರೆಂಟ್‌ಗಳಿಗೆ (Restaurant) ಕುಟುಂಬ (Family) ಹಾಗೂ ಮಹಿಳೆಯರು (Women) ಹೋಗುವುದನ್ನು ತಾಲಿಬಾನ್ (Taliban) ನಿಷೇಧಿಸಿದೆ ಎಂದು ಸೋಮವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ಬಳಿಕ ತಾಲಿಬಾನ್ ಮುಖ್ಯವಾಗಿ ಮಹಿಳೆಯರ ಮೇಲೆ ಹಿಡಿತ ಸಾಧಿಸುವುದನ್ನು ಮುಂದುವರಿಸುತ್ತಲೇ ಇದೆ. ಈ ಹಿಂದೆ ಪಾರ್ಕ್, ಜಿಮ್, ವಿಶ್ವವಿದ್ಯಾಲಯಗಳಿಗೆ ಮಹಿಳೆಯರು ಹೋಗುವುದನ್ನು ನಿಷೇಧಿಸಿದ ತಾಲಿಬಾನ್ ಇದೀಗ ಕುಟುಂಬದೊಂದಿಗೂ ಉದ್ಯಾನವನ ಹಾಗೂ ರೆಸ್ಟೊರೆಂಟ್‌ಗಳಿಗೆ ಹೋಗುವುದನ್ನು ನಿಷೇಧಿಸಿದೆ.

    ಅಫ್ಘಾನಿಸ್ತಾನದ ಪಶ್ಚಿಮ ಹೆರಾತ್ ಪ್ರದೇಶದಲ್ಲಿ ತಾಲಿಬಾನ್ ಲಿಂಗ ಪ್ರತ್ಯೇಕತೆಯ ಯೋಜನೆಯನ್ನು ಜಾರಿಗೆ ತಂದಿದೆ. ಇದರ ಅಡಿಯಲ್ಲಿ ಈಗ ಪುರುಷರು ಫ್ಯಾಮಿಲಿ ರೆಸ್ಟೊರೆಂಟ್‌ಗಳಲ್ಲಿ ಕುಟುಂಬದ ಸದಸ್ಯರೊಂದಿಗೆ ಊಟ ಮಾಡುವಂತಿಲ್ಲ. ಮಾತ್ರವಲ್ಲದೇ ಪುರುಷರು ಹಾಗೂ ಮಹಿಳೆಯರು ಒಟ್ಟಿಗೆ ಉದ್ಯಾನವನಕ್ಕೂ ಹೋಗುವಂತಿಲ್ಲ ಎನ್ನಲಾಗಿದೆ. ಇದನ್ನೂ ಓದಿ: ಮುಸ್ಲಿಮರು ಭಾರತದಲ್ಲಿ ಚೆನ್ನಾಗೇ ಇದ್ದಾರೆ: ಪಾಶ್ಚಿಮಾತ್ಯ ದೇಶಗಳ ವಿರುದ್ಧ ಸೀತಾರಾಮನ್ ಕಿಡಿ

    ಸಾರ್ವಜನಿಕ ಪ್ರದೇಶಗಳಲ್ಲಿ ಮಹಿಳೆಯರು ಹಿಜಬ್ ಅನ್ನು ಸರಿಯಾಗಿ ಧರಿಸದ ಕಾರಣ ಹಾಗೂ ಇಂತಹ ಪ್ರದೇಶಗಳಲ್ಲಿ ಲಿಂಗ ಮಿಶ್ರಣದ ಕಾರಣದಿಂದಾಗಿ ಈ ನಿರ್ಬಂಧಗಳನ್ನು ಜಾರಿಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರೆಸ್ಟೊರೆಂಟ್‌ಗಳಲ್ಲಿ ಊಟಕ್ಕೆ ನಿಷೇಧ ಹೆರಾತ್ ಪ್ರದೇಶದಲ್ಲಿ ಮಾತ್ರವೇ ಅನ್ವಯಿಸುತ್ತದೆ. ಇಂತಹ ಆವರಣಗಳು ಪರುಷರಿಗೆ ತೆರೆದಿರುತ್ತದೆ ಎಂದು ವರದಿಗಳು ತಿಳಿಸಿವೆ.

    ಈ ಹಿಂದೆ ತಾಲಿಬಾನ್ ಅಫ್ಘಾನಿಸ್ತಾನದಲ್ಲಿ ಪುರುಷರು ಹಾಗೂ ಮಹಿಳೆಯರು ವಿವಿಧ ದಿನಗಳಲ್ಲಿ ಉದ್ಯಾನವನಕ್ಕೆ ಭೇಟಿ ನೀಡಬಹುದು ಎಂದು ತಿಳಿಸಿತ್ತು. ಇದರ ಪ್ರಕಾರ ಗುರುವಾರ, ಶುಕ್ರವಾರ ಮತ್ತು ಶನಿವಾರ ಉದ್ಯಾನವನಗಳಲ್ಲಿ ಮಹಿಳೆಯರಿಗೆ ಹೋಗಲು ಅವಕಾಶವಿದ್ದು, ಭಾನುವಾರ, ಸೋಮವಾರ, ಮಂಗಳವಾರ ಹಾಗೂ ಬುಧವಾರ ಪುರುಷರಿಗೆ ಮಾತ್ರವೇ ತೆರೆಯಲಾಗುತ್ತದೆ ಎಂದು ತಿಳಿಸಲಾಗಿತ್ತು. ಇದನ್ನೂ ಓದಿ: ಉದ್ಯೋಗಿಯಿಂದಲೇ ಬ್ಯಾಂಕ್‌ನಲ್ಲಿ ಗುಂಡಿನ ದಾಳಿ – 5 ಮಂದಿ ಸಾವು, 9 ಮಂದಿಗೆ ಗಾಯ

  • ಮಂಗಳೂರಿನಲ್ಲಿ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ

    ಮಂಗಳೂರಿನಲ್ಲಿ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ

    ಮಂಗಳೂರು: ಒಂದೇ ಕುಟುಂಬದ ನಾಲ್ಕು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ಕೆ.ಎಸ್.ರಾವ್ ರೋಡ್ (K S Rao Road Mangaluru) ಬಳಿ ನಡೆದಿದೆ.

    ಮೃತರನ್ನು ದೇವೇಂದ್ರ(48), ನಿರ್ಮಲಾ(48), ಚೈತ್ರಾ(09) ಹಗೂ ಚೈತನ್ಯ (09) ಎಂದು ಗುರುತಿಸಲಾಗಿದೆ. ಕೆ.ಎಸ್.ರಾವ್ ರೋಡಿನ ಕರುಣಾ ಲಾಡ್ಜ್ ನಲ್ಲಿ ನಾಲ್ವರು ಆತ್ಮಹತ್ಯೆಗೆ ಶರಣಾಗಿದ್ದಾರೆ.

    ಮೃತರು ಮೈಸೂರು ಮೂಲದ ವಾಣಿವಿಲಾಸ ಬಡಾವಣೆ ನಿವಾಸಿಗಳಾಗಿದ್ದು, ಮಾ. 27ರಂದು ಮಂಗಳೂರಿನಲ್ಲಿ ಒಂದು ದಿನಕ್ಕಾಗಿ ರೂಂ ಬುಕ್ ಮಾಡಿದ್ದರು. ಬಳಿಕ ಅದನ್ನು ಎರಡು ದಿನಕ್ಕಾಗಿ ವಿಸ್ತರಣೆ ಮಾಡಿದ್ದರು. ಗುರುವಾರ ಸಂಜೆ ರೂಂ ಚೆಕ್ ಔಟ್ ಮಾಡಬೇಕಾಗಿತ್ತು. ಆದರೆ ಬಾಗಿಲು ತೆರೆಯದ ಕಾರಣ ಅನುಮಾನಗೊಂಡು ಇಂದು ತಪಾಸಣೆ ನಡೆಸಿದಾಗ ಬೆಳಕಿಗೆ ಬಂದಿದೆ.

    ಸಾಲಬಾಧೆ, ಸಾಲ ತೀರಿಸಲಾಗದೇ ಸಾಲಗಾರರ ಒತ್ತಡದಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ. ಡೆತ್ ನೋಟ್ ನಲ್ಲಿ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿರೋದಾಗಿ ತಿಳಿಸಿದ್ದಾರೆ. ಇದನ್ನೂ ಓದಿ; ಪಾಕಿಸ್ತಾನದಲ್ಲಿ ಹಿಂದೂ ವೈದ್ಯನ ಗುಂಡಿಕ್ಕಿ ಹತ್ಯೆ – ತಿಂಗಳಲ್ಲಿ 2ನೇ ಘಟನೆ

    ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಕುಲದೀಪ್ ಜೈನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  • ಕತ್ತಿಯಿಂದ ಕಡಿದು ಒಂದೇ ಕುಟುಂಬದ ನಾಲ್ವರ ಹತ್ಯೆ – ಅನಾಥವಾಯ್ತು ಮಗು

    ಕತ್ತಿಯಿಂದ ಕಡಿದು ಒಂದೇ ಕುಟುಂಬದ ನಾಲ್ವರ ಹತ್ಯೆ – ಅನಾಥವಾಯ್ತು ಮಗು

    ಕಾರವಾರ: ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ನಾಲ್ವರನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಭಟ್ಕಳ ತಾಲೂಕಿನ ಹಾಡವಳ್ಳಿ ಗ್ರಾಮದ ಸಮೀಪ ನಡೆದಿದೆ.

    ಕತ್ತಿಯಲ್ಲಿ ತಲೆ ಕಡಿದು ನಾಲ್ವರ ಕೊಲೆ ಮಾಡಲಾಗಿದೆ. ಶಂಭು ಭಟ್ (65) ಆತನ ಪತ್ನಿ ಮಾದೇವಿ ಭಟ್, ಮಗ ರಾಜೀವ್ ಭಟ್ (34) ಹಾಗೂ ಮಗನ ಪತ್ನಿ ಕುಸುಮಾ ಭಟ್ (30) ಕೊಲೆಯಾದವರು. ಕುಸುಮಾ ಭಟ್ ದಂಪತಿಯ ಚಿಕ್ಕ ಹೆಣ್ಣು ಮಗು ಅಂಗನವಾಡಿಗೆ ಹೋಗಿದ್ದರಿಂದ ಬದುಕುಳಿದಿದೆ. ಇದನ್ನೂ ಓದಿ: ಚಿಕ್ಕಮಗಳೂರಲ್ಲಿ ಅಕ್ರಮ ಬಂದೂಕುಗಳು ವಶ

    ಸ್ಥಳಕ್ಕೆ ಪೊಲೀಸರು ಹಾಜರಾಗಿ ಪರಿಶೀಲನೆ ನಡೆಸಿದ್ದಾರೆ. ಆಸ್ತಿ ವಿಚಾರಕ್ಕೆ ಕೊಲೆ ನಡೆದಿದೆ ಎನ್ನಲಾಗಿದೆ. ಈ ಸಂಬಂಧ ಭಟ್ಕಳ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

    ಶ್ರೀಧರ್ ಭಟ್, ವಿನಯ್ ಭಟ್, ವಿದ್ಯಾ ಭಟ್ ಆಕೆಯ ತಂದೆ ಹಾಗೂ ಸಹೋದರರಿಂದ ಹತ್ಯೆ ನಡೆದಿದೆ ಎಂದು ತಿಳಿದುಬಂದಿದೆ. ಶಂಭು ಭಟ್‌ ಅವರ ಮೊದಲ ಮಗ ಕಿಡ್ನಿ ವೈಫಲ್ಯದಿಂದ ಸಾವಾಗಿದ್ದರಿಂದ ಸೊಸೆ ವಿದ್ಯಾ ಭಟ್ ತವರು ಮನೆ ಸೇರಿದ್ದಳು. ಜೀವನಾಂಶ ಹಾಗೂ ಆಸ್ತಿ ನೀಡುವ ವಿಚಾರದಲ್ಲಿ ಶಂಭು ಭಟ್‌ರೊಂದಿಗೆ ವಿದ್ಯಾ ಭಟ್‌ ಕುಟುಂಬಸ್ಥರು ಗಲಾಟೆ ಮಾಡಿಕೊಂಡಿದ್ದರು. ಜೀವನಾಂಶ ಕೊಡಲು ನಿರಾಕರಿಸಿದ್ದರಿಂದ ರೊಚ್ಚಿಗೆದ್ದ ಹಿರಿಯ ಸೊಸೆ ಕುಟುಂಬದವರಿಂದ ಹತ್ಯೆ ಮಾಡಿಸಿ ಪರಾರಿಯಾಗಿದ್ದಾಳೆ. ಇದನ್ನೂ ಓದಿ: ಮತ್ತೆ ಒಂದಾದ ಕೆ.ಹೆಚ್.ಮುನಿಯಪ್ಪ ಹಾಗೂ ರಮೇಶ್ ಕುಮಾರ್ ಬಣ

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಶೀಲ ಶಂಕಿಸಿ ಪತ್ನಿಯ ಕೊಲೆ – ಬಾಮೈದನಿಗೆ ಮೆಸೇಜ್ ಹಾಕಿ ಎಸ್ಕೇಪ್

    ಶೀಲ ಶಂಕಿಸಿ ಪತ್ನಿಯ ಕೊಲೆ – ಬಾಮೈದನಿಗೆ ಮೆಸೇಜ್ ಹಾಕಿ ಎಸ್ಕೇಪ್

    ಬೆಂಗಳೂರು: ತನ್ನ ಪತ್ನಿಯ (Wife) ಶೀಲ ಶಂಕಿಸಿ, ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ತಾವರೆಕೆರೆಯ ಸುಭಾಷ್ ನಗರದ ಖಾಸಗಿ ಅಪಾರ್ಟ್ಮೆಂಟ್ (Private Apartment) ನಲ್ಲಿ ನಡೆದಿದೆ.

    ಪತ್ನಿಯನ್ನು ಉಸಿರುಗಟ್ಟಿಸಿಕೊಲೆ ಮಾಡಿದ ಪತಿರಾಯ ಬಳಿಕ ಬಾಮೈದನಿಗೆ ಮೆಸೇಜ್ ಕಳುಹಿಸಿ ಎಸ್ಕೇಪ್ ಅಗಿದ್ದಾನೆ. ನಾಜ್ಹ್ (22) ಕೊಲೆಯಾದ ಪತ್ನಿ. ನಾಸಿರ್ ಕೊಲೆ (Murder) ಮಾಡಿ ಎಸ್ಕೇಪ್ ಆಗಿರುವ ಆರೋಪಿ. ಇದನ್ನೂ ಓದಿ: ವೆಬ್ ಸೈಟ್‍ನಲ್ಲಿ ಯುವತಿಯರ ಫೋಟೋ ಅಪ್ಲೋಡ್ ಮಾಡಿ ವಂಚನೆ- ಐವರ ಬಂಧನ

    CRIME 2

    ಗಂಡ ಹೆಂಡ್ತಿ ಕಳೆದ 6 ತಿಂಗಳಿನಿಂದ ಫ್ಲ್ಯಾಟ್ ನಲ್ಲಿ ವಾಸವಿದ್ದರು. ಸಂಸಾರ ಚೆನ್ನಾಗಿಯೇ ಇತ್ತು. ಆದ್ರೆ ನಾಸಿರ್ ಹುಸೇನ್ ಇತ್ತೀಚೆಗೆ ಪತ್ನಿಯ ಶೀಲ ಶಂಕಿಸಿ ಗಲಾಟೆ ಮಾಡುವುದಕ್ಕೆ ಶುರು ಮಾಡಿಕೊಂಡಿದ್ದ. ಸೋಮವಾರ ಮಧ್ಯಾಹ್ನ (ಜ.16) ಮತ್ತೆ ಗಲಾಟೆ ಮಾಡಿ ಪತ್ನಿಯನ್ನ ಉಸಿರುಗಟ್ಟಿಸಿ ಕೊಂದೇಬಿಟ್ಟಿದ್ದಾನೆ. ಬಳಿಕ ಪತ್ನಿಯ ಅಣ್ಣನಿಗೆ ಮೆಸೇಜ್ ಕಳುಹಿಸಿ ಎಸ್ಕೇಪ್ ಆಗಿದ್ದಾನೆ.

    ಆರೋಪಿ ಪತಿ ಖಾಸಗಿ ಕಂಪೆನಿಯಲ್ಲಿ ಕೆಲಸ ಕೆಲಸ ಮಾಡಿಕೊಂಡಿದ್ದ. ಈ ಸಂಬಂಧ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್‌ ಅಧಿಕಾರಕ್ಕೆ ಬಂದ್ರೆ, ಮಹಿಳೆಗೆ ಪ್ರತಿ ತಿಂಗಳು 2,000 ರೂ.: ಪ್ರಿಯಾಂಕಾ ಗಾಂಧಿ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮಾನಸಿಕ ಕಿರುಕುಳಕ್ಕೆ ಬೇಸತ್ತು ತಾಯಿ, ಮಗ, ಸೊಸೆ ಆತ್ಮಹತ್ಯೆ

    ಮಾನಸಿಕ ಕಿರುಕುಳಕ್ಕೆ ಬೇಸತ್ತು ತಾಯಿ, ಮಗ, ಸೊಸೆ ಆತ್ಮಹತ್ಯೆ

    ಹಾವೇರಿ: ಒಂದೇ ಮನೆಯಲ್ಲಿ ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ತಾಲೂಕಿನ ಅಗಡಿ ಗ್ರಾಮದಲ್ಲಿ ನಡೆದಿದೆ.

    ಮೃತರನ್ನು ಭಾರತಿ ಕಮಡೊಳ್ಳಿ (40), ಸೌಜನ್ಯ ಕಮಡೊಳ್ಳಿ (20) ಹಾಗೂ ಕಿರಣ ಕಮಡೊಳ್ಳಿ (22) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಶ್ರದ್ಧಾ ಕೊಲೆ ಪ್ರಕರಣ – ಜಾಮೀನು ಅರ್ಜಿಯನ್ನು ವಾಪಸ್ ಪಡೆದ ಪೀಸ್ ಪೀಸ್ ಪ್ರೇಮಿ

    ಮೂರು ತಿಂಗಳ ಹಿಂದಷ್ಟೇ ಸೌಜನ್ಯ ಮತ್ತು ಕಿರಣನ ಮದುವೆಯಾಗಿತ್ತು (Marriage). ಮೃತ ಭಾರತಿ ಅವರ ಕಿರಿಯ ಪುತ್ರ ಅರುಣ (21) ಕಳೆದ ಕೆಲವು ದಿನಗಳಿಂದ ಗ್ರಾಮದ ಪುಟ್ಟಣ್ಣಶೆಟ್ಟಿ ಎಂಬವರ ಕುಟುಂಬದ ಯುವತಿಯನ್ನು ಪ್ರೀತಿಸುತ್ತಿದ್ದ (Love). ಕಳೆದ ಐದಾರು ದಿನಗಳಿಂದ ಅರುಣನ ಜೊತೆ ಯುವತಿಯೂ ನಾಪತ್ತೆಯಾಗಿದ್ದಳು. ಇದರಿಂದ ಯುವತಿ ಮನೆಯವರು ತಮ್ಮ ಮಗಳನ್ನು ಕರೆತರುವಂತೆ ಅರುಣನ ತಾಯಿ ಭಾರತಿ, ಹಿರಿಯ ಮಗ ಕಿರಣ ಮತ್ತು ಕಿರಣನ ಪತ್ನಿ ಸೌಜನ್ಯಳಿಗೆ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದರು.

    ಯುವತಿ ಮನೆಯವರ ಮಾನಸಿಕ ಕಿರುಕುಳಕ್ಕೆ ಬೇಸತ್ತು ಮೂವರೂ ನೇಣಿಗೆ ಶರಣಾಗಿದ್ದಾರೆ. ಮೂವರ ಆತ್ಮಹತ್ಯೆಗೆ ಪುಟ್ಟಣ್ಣಶೆಟ್ಟಿ ಕುಟುಂಬದವರೇ ಕಾರಣ ಎಂದು ಮೃತ ಕಿರಣನ ತಂದೆ ವಿರುಪಾಕ್ಷಪ್ಪ ಆರೋಪಿಸಿದ್ದಾರೆ. ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ. ಹಾವೇರಿ ಗ್ರಾಮಾಂತರ ವಿಭಾಗದ ಪೊಲೀಸ್ ಠಾಣೆ (Haveri Rural Police) ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಪರಭಾಷೆಯಲ್ಲೂ ಶಿವರಾಜ್ ಕುಮಾರ್ ಬ್ಯುಸಿ : ಎರಡು ತಮಿಳು, ಒಂದು ತೆಲುಗು ಚಿತ್ರದಲ್ಲಿ ನಟನೆ

    Live Tv
    [brid partner=56869869 player=32851 video=960834 autoplay=true]

  • ಮಧ್ಯರಾತ್ರಿ ಬೆಂಕಿ ಅವಘಡ – ಮನೆಯಲ್ಲಿದ್ದ ಇಬ್ಬರು ಮಕ್ಕಳು ಸೇರಿ 6 ಮಂದಿ ಸಜೀವ ದಹನ

    ಮಧ್ಯರಾತ್ರಿ ಬೆಂಕಿ ಅವಘಡ – ಮನೆಯಲ್ಲಿದ್ದ ಇಬ್ಬರು ಮಕ್ಕಳು ಸೇರಿ 6 ಮಂದಿ ಸಜೀವ ದಹನ

    ಹೈದರಾಬಾದ್: ಮಧ್ಯರಾತ್ರಿ ಮಲಗಿದ್ದ ವೇಳೆ ಏಕಾಏಕಿ ಮನೆಯಲ್ಲಿ (House) ಬೆಂಕಿ (Fire) ಕಾಣಿಸಿಕೊಂಡು ಒಂದೇ ಕುಟುಂಬದ (Family) 6 ಮಂದಿ ಸಜೀವ ದಹನಗೊಂಡಿರುವ ಘಟನೆ ತೆಲಂಗಾಣದ (Telangana) ಮಂಚಾರ್ಯಾಲದಲ್ಲಿ ನಡೆದಿದೆ.

    ಶಿವಯ್ಯ ಮತ್ತು ಪದ್ಮಾ ದಂಪತಿ ತೆಲಂಗಾಣದ ಮಂದಮರ್ರಿ ಮಂಡಲದ ವೆಂಕಟಾಪುರದ ಮನೆಯಲ್ಲಿ ವಾಸವಾಗಿದ್ದರು. ಮನೆಗೆ ಪದ್ಮಾ ಅವರ ತಂಗಿ ಮಗಳು ಮೌನಿಕ ಮತ್ತು ಆಕೆಯ ಇಬ್ಬರು ಮಕ್ಕಳು ಬಂದಿದ್ದರು. ರಾತ್ರಿ ಊಟ ಮಾಡಿ ಮಲಗಿದ ಬಳಿಕ 12 ರಿಂದ 12:30ರ ವೇಳೆಗೆ ಏಕಾಏಕಿ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮನೆಯಲ್ಲಿದ್ದವರೆಲ್ಲ ನಿದ್ದೆಯಲ್ಲಿದ್ದ ಪರಿಣಾಮ ಬೆಂಕಿಯ ಕೆನ್ನಾಲಿಗೆ ಬಲಿಯಾಗಿದ್ದಾರೆ. ಇದನ್ನೂ ಓದಿ: ಬಸ್ ನಿಲ್ದಾಣದಲ್ಲಿ ಅಧಿಕಾರಿಗಳಿಗೆ ಮಚ್ಚು ತೋರಿಸಿದ ಪ್ರಕರಣ – ದಂಪತಿ ವಿರುದ್ಧ ರೌಡಿಶೀಟರ್ ಕೇಸ್ ಹಾಕಿ ಅರೆಸ್ಟ್

    ಘಟನೆ ಕುರಿತು ಮಾಹಿತಿ ಹಂಚಿಕೊಂಡಿರುವ ಮಂದಮರ್ರಿಯ ಸರ್ಕಲ್ ಇನ್ಸ್‌ಪೆಕ್ಟರ್‌ ಪ್ರಮೋದ್ ಕುಮಾರ್, ಮನೆಯ ಯಜಮಾನ, ಶಿವಯ್ಯ (50), ಪದ್ಮಾ (45), ಪದ್ಮಾ ಅವರ ತಂಗಿ ಮಗಳು ಮೌನಿಕ (23) ಮತ್ತು ಆಕೆಯ ಇಬ್ಬರು ಮಕ್ಕಳು ಸಜೀವ ದಹನಗೊಂಡಿದ್ದಾರೆ. ಮಧ್ಯರಾತ್ರಿ 12 ರಿಂದ 12:30ರ ಸುಮಾರಿಗೆ ಘಟನೆ ನಡೆದಿದೆ ಎಂದು ಸ್ಥಳೀಯ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ದಸರಾ ಆನೆ ಬಲರಾಮನಿಗೆ ಗುಂಡೇಟು – ಫೈರಿಂಗ್‌ ಮಾಡಿದ್ದ ವ್ಯಕ್ತಿ ಬಂಧನ

    ಮನೆಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಘಟನಾ ಸ್ಥಳಕ್ಕೆ ಬರುತ್ತಿದ್ದಂತೆ ಮನೆ ಸಂಪೂರ್ಣ ಬೆಂಕಿಗಾಹುತಿ ಆಗಿತ್ತು. ಮನೆಯಲ್ಲಿದ್ದ 6 ಮಂದಿ ಸಜೀವ ದಹನಗೊಂಡಿದ್ದರು. ಘಟನೆಗೆ ಕಾರಣ ಏನು ಎಂಬ ಕುರಿತು ತನಿಖೆ ಆರಂಭಿಸಿದ್ದೇವೆ ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮತ್ತಷ್ಟು ಹಣ ಕೊಡ್ತೇವೆ, ಮಕ್ಕಳನ್ನು ಹಡೆಯಿರಿ – ಪೋಷಕರಿಗೆ ಜಪಾನ್ ಆಫರ್

    ಮತ್ತಷ್ಟು ಹಣ ಕೊಡ್ತೇವೆ, ಮಕ್ಕಳನ್ನು ಹಡೆಯಿರಿ – ಪೋಷಕರಿಗೆ ಜಪಾನ್ ಆಫರ್

    ಟೋಕಿಯೋ: ಜಪಾನ್‍ನಲ್ಲಿ (Japan) ಜನನ ಪ್ರಮಾಣ ಗಣನೀಯವಾಗಿ ಇಳಿಮುಖ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಅಲ್ಲಿನ ಆರೋಗ್ಯ, ಕಾರ್ಮಿಕ ಮತ್ತು ಕಲ್ಯಾಣ ಸಚಿವಾಲಯವು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದು, ಈ ನಿಟ್ಟಿನಲ್ಲಿ ಜನರು ಮಗುವನ್ನು (Baby) ಮಾಡಿಕೊಂಡರೆ ಈಗಾಗಲೇ ನೀಡುತ್ತಿರುವ ಹಣಕ್ಕಿಂತಲೂ (Money) 48 ಸಾವಿರ ರೂ. ಅಧಿಕ ನೀಡುವುದಾಗಿ ತಿಳಿಸಿದೆ.

    ಈಗಾಗಲೇ ಮಗುವಿನ ಜನನದ ನಂತರ ಹೊಸ ಪೋಷಕರಿಗೆ ಹೆರಿಗೆ ಮತ್ತು ಶಿಶುಪಾಲನೆಗಾಗಿ ಒಟ್ಟು 420,000 ಯೆನ್‍ಗಳ (2,52,338 ರೂ.) ಅನುದಾನವನ್ನು ನೀಡುತ್ತಿದೆ. ಇದೀಗ ಆರೋಗ್ಯ, ಕಾರ್ಮಿಕ ಮತ್ತು ಕಲ್ಯಾಣ ಸಚಿವ ಕ್ಯಾಟೊ ಕಟ್ಸುನೋಬು ಮಗು ಜನನದ ನಂತರ ನೀಡಲಾಗುವ ಹಣವನ್ನು ಹೆಚ್ಚಿಸಲು ನಿರ್ಧರಿಸಿದ್ದು, ಆ ಸಂಖ್ಯೆಯನ್ನು 5,00,000 ಯೆನ್‍ಗೆ (3,00,402 ರೂ.) ಹೆಚ್ಚಿಸುವುದಾಗಿ ತಿಳಿಸಿದ್ದಾರೆ. ಈಗಾಗಲೇ ಈ ಬಗ್ಗೆ ಅವರು ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರೊಂದಿಗೆ ಯೋಜನೆಯನ್ನು ಚರ್ಚಿಸಿದ್ದಾರೆ. ಸರ್ಕಾರ 2023ರ ಆರ್ಥಿಕ ವರ್ಷಕ್ಕೆ ಅಂಗೀಕರಿಸುವ ಸಾಧ್ಯತೆಯಿದೆ.

    ಜಪಾನ್‍ನಲ್ಲಿ ಸಾರ್ವಜನಿಕ ವೈದ್ಯಕೀಯ ವಿಮಾ ವ್ಯವಸ್ಥೆಯಿದೆ. ಇದರಿಂದಾಗಿ ಸರ್ಕಾರವು ನೀಡುವ ಅನುದಾನವನ್ನು ಹೆಚ್ಚಿಸಿದರೆ ಆಸ್ಪತ್ರೆಯಿಂದ ಮನೆಗೆ ಬರುವಾಗ ಪಾಲಕರು ಸರಾಸರಿ 30,000 ಯೆನ್‍ಗಳು ಉಳಿಯುತ್ತದೆ. ಇದನ್ನೂ ಓದಿ: ರಾಷ್ಟ್ರಗೀತೆ ಹಾಡುವಾಗ ಎದ್ದು ನಿಲ್ಲದ ಕಾಂಗ್ರೆಸ್ ಶಾಸಕ – ಬಿಜೆಪಿಯಿಂದ ಆಕ್ರೋಶ

    2021ರಲ್ಲಿ ಬಿಡುಗಡೆಯಾದ ಸರ್ಕಾರಿ ಅಂಕಿ ಅಂಶಗಳ ಪ್ರಕಾರ, ಜಪಾನ್‍ನಲ್ಲಿ ಜನನದ ದರಕ್ಕಿಂತ ಸಾವಿನ ದರವೇ ಹೆಚ್ಚಿದೆ. ದೇಶದಲ್ಲಿ ಕಳೆದ ವರ್ಷ 8,11,604 ಜನನವಾಗಿದ್ದರೆ, 14,39,809 ಸಾವು ದಾಖಲಿಸಿದೆ. ಇದನ್ನೂ ಓದಿ: ಪ್ರೇಯಸಿಯ ಶವವನ್ನು ಕಬ್ಬಿನ ಗದ್ದೆಯಲ್ಲಿ ಹೂತಾಕಿದ ಪ್ರಿಯಕರ – 15 ದಿನದ ಬಳಿಕ ಪ್ರಕರಣ ಬೆಳಕಿಗೆ

    Live Tv
    [brid partner=56869869 player=32851 video=960834 autoplay=true]

  • ದೆಹಲಿಯಲ್ಲಿ ಮತ್ತೆ ಬರ್ಬರ ಕೊಲೆ- ನಾಲ್ವರು ಕುಟುಂಬಸ್ಥರನ್ನು ಕತ್ತು ಸೀಳಿ ಕೊಲೆಗೈದ ಮಾದಕ ವ್ಯಸನಿ

    ದೆಹಲಿಯಲ್ಲಿ ಮತ್ತೆ ಬರ್ಬರ ಕೊಲೆ- ನಾಲ್ವರು ಕುಟುಂಬಸ್ಥರನ್ನು ಕತ್ತು ಸೀಳಿ ಕೊಲೆಗೈದ ಮಾದಕ ವ್ಯಸನಿ

    ನವದೆಹಲಿ: ಮಾದಕವ್ಯಸನಿಯೊಬ್ಬ ಪುನರ್ವಸತಿ ಕೇಂದ್ರದಿಂದ ಹಿಂದಿರುಗಿದ ಕೆಲವೇ ದಿನಗಳಲ್ಲಿ ತನ್ನ ಇಡೀ ಕುಟುಂಬವನ್ನೇ (Family) ಕೊಂದ ಘೋರ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (NewDelhi) ನಡೆದಿದೆ.

    ಕೇಶವ್ (25) ಬಂಧಿತ ಆರೋಪಿ. ಕೇಶವ್ ಒಂದು ತಿಂಗಳ ಹಿಂದೆ ಗುರ್ಗಾಂವ್‍ನಲ್ಲಿ ಕೆಲಸ ಬಿಟ್ಟಿದ್ದ. ಈ ಹಿನ್ನೆಲೆಯಿಂದ ದೀಪಾವಳಿಯಿಂದ ನಿರುದ್ಯೋಗಿಯಾಗಿದ್ದ. ಕೇಶವ್‍ನ ಅತಿಯಾದ ಮದ್ಯವಸನದಿಂದಾಗಿ ಆತನ ಕುಟುಂಬಸ್ಥರು ಪುನರ್ವಸತಿ ಕೇಂದ್ರಕ್ಕೆ ಸೇರಿಸಿದ್ದರು. ಅದಾದ ಬಳಿಕ ಮರಳಿ ನೈಋತ್ಯ ದೆಹಲಿಯ ಪಾಲಮ್‍ನಲ್ಲಿರುವ ಮನೆಗೆ ಬಂದಿದ್ದ. ಆದರೆ ಮಂಗಳವಾರ ಆತ ಡ್ರಗ್ಸ್‌ನ ಅಮಲಿನಲ್ಲಿ ತನ್ನ ಅಜ್ಜಿ ದೀವಾನಾ ದೇವಿ (75), ತಂದೆ ದಿನೇಶ್ (50), ತಾಯಿ ದರ್ಶನಾ ಮತ್ತು ಸಹೋದರಿ ಊರ್ವಶಿ (18)ಗೆ ಅನೇಕ ಬಾರಿ ಚಾಕುವಿನಿಂದ ಕತ್ತನ್ನು ಸೀಳಿ ತನ್ನ ವಿಕೃತಿಯನ್ನು ಮರೆದಿದ್ದಾನೆ.

    ಈ ವೇಳೆ ಮನೆಯಲ್ಲಿದ್ದವರ ಕಿರುಚಾಟ ಕೇಳಿದ ಅದೇ ಕಟ್ಟಡದಲ್ಲಿದ್ದ ನೆರೆಹೊರೆಯವರು ಪೊಲೀಸರಿಗೆ (Police) ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೂಡಲೇ ಪೊಲೀಸರು ಸ್ಥಳಕ್ಕಾಗಮಿಸಿದ್ದಾರೆ. ಆದರೆ ಅಷ್ಟರಲ್ಲಾಗಲೇ ಕೇಶವ್ ಕುಟುಂಬಸ್ಥರ ಜೀವ ಹೊರಟು ಹೋಗಿದ್ದು, ಇಡೀ ಮನೆಯು ರಕ್ತಸಿಕ್ತವಾಗಿತ್ತು. ಕೇಶವ್‍ನ ತಂದೆ- ತಾಯಿಯ ಶವವು ಸ್ನಾನಗೃಹದಲ್ಲಿ ಮತ್ತು ಆತನ ಸಹೋದರಿ ಮತ್ತು ಅಜ್ಜಿಯ ಮೃತದೇಹಗಳು ಇತರ ಕೊಠಡಿಗಳಲ್ಲಿ ಪತ್ತೆಯಾಗಿದೆ. ಇದನ್ನೂ ಓದಿ: ಚಿಲುಮೆ ವೋಟರ್ ಐಡಿ ಅಕ್ರಮ ಪ್ರಕರಣ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ಆಗಲಿ : ಜೆಡಿಎಸ್ ಒತ್ತಾಯ

    ಪೊಲೀಸರು ಸ್ಥಳಕ್ಕಾಗಮಿಸಿದ್ದನ್ನು ಗಮನಿಸಿದ ಕೇಶವ್ ಸ್ಥಳದಿಂದ ಪರಾರಿಯಾಗಲು ಪ್ರಯತ್ನಿಸಿದ್ದು, ಸ್ಥಳೀಯರು ಹಾಗೂ ಸಂಬಂಧಿಕರು ಆತನನ್ನು ಸೆರೆ ಹಿಡಿದಿದ್ದಾರೆ. ಇದನ್ನೂ ಓದಿ: ಗಂಡನ ಅನೈತಿಕ ಸಂಬಂಧಕ್ಕೆ ಬೇಸತ್ತು ಮದುವೆಯಾದ ಒಂದೇ ವರ್ಷಕ್ಕೆ ಆತ್ಮಹತ್ಯೆಗೆ ಶರಣಾದ ಟೆಕ್ಕಿ

    Live Tv
    [brid partner=56869869 player=32851 video=960834 autoplay=true]

  • ರಾಯಚೂರಿನಲ್ಲಿ ಅನಧಿಕೃತ ಶೆಡ್‍ಗಳ ತೆರವು- 200 ಕುಟುಂಬ ಬೀದಿಗೆ

    ರಾಯಚೂರಿನಲ್ಲಿ ಅನಧಿಕೃತ ಶೆಡ್‍ಗಳ ತೆರವು- 200 ಕುಟುಂಬ ಬೀದಿಗೆ

    ರಾಯಚೂರು: ನಗರದ ಜಲಾಲನಗರದ ಬಳಿ 20 ವರ್ಷಗಳಿಂದ ಅನಧಿಕೃತವಾಗಿ ಶೆಡ್ (Shed), ಗುಡಿಸಲು ಹಾಕಿಕೊಂಡಿದ್ದ ಸುಮಾರು 200 ಕುಟುಂಬಗಳನ್ನ ತಾಲೂಕು ಆಡಳಿತ ಏಕಾಏಕಿ ತೆರವುಗೊಳಿಸಿದೆ. ಇದರಿಂದ ಬೀದಿಗೆ ಬಂದಿರುವ ಜನ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ನಗರಸಭೆಗೆ ತೆರಿಗೆ ಕಟ್ಟಿರುವ ಇಲ್ಲಿನ ನಿವಾಸಿಗಳು ಅಕ್ರಮ-ಸಕ್ರಮದಲ್ಲಿ ಜಾಗ ಉಳಿಸಿಕೊಡುವ ಭರವಸೆ ನೀಡಿದ್ದ ಅಧಿಕಾರಿಗಳು ಈಗ ಏಕಾಏಕಿ ನಮ್ಮನ್ನ ಬೀದಿಗೆ ತಂದಿದ್ದಾರೆ ಅಂತ ಆರೋಪಿಸಿದ್ದಾರೆ. ಅಲೆಮಾರಿ ಜನಾಂಗ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕೂಲಿ ಕೆಲಸ ಮಾಡುವವರು ಅನಧಿಕೃತವಾಗಿ ಶೆಡ್‍ಗಳನ್ನ ಹಾಕಿಕೊಂಡು ಸರ್ಕಾರಿ ಜಾಗ (Government Place) ದಲ್ಲಿ ವಾಸ ಮಾಡುತ್ತಿದ್ದಾರೆ.

    ನಗರಸಭೆ ಹಾಗೂ ತಾಲೂಕು ಆಡಳಿತ ರಾತ್ರೋರಾತ್ರಿ ಶೆಡ್‍ಗಳನ್ನ ತೆರವುಗೊಳಿಸಿದೆ. ಬದುಕಲು ನೆಲೆಯಿಲ್ಲ ಪರ್ಯಾಯ ವ್ಯವಸ್ಥೆ ಮಾಡಿಕೊಡಿ ಅಂತ ಇಲ್ಲಿನ ಜನ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ವಿರೋಧದ ನಡುವೆಯೂ ಅಧಿಕೃತ ಅನುಮತಿಯೊಂದಿಗೆ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ

    Live Tv
    [brid partner=56869869 player=32851 video=960834 autoplay=true]