Tag: family

  • ಖಾಸಗಿ ಬಸ್ಸಿನ ನಿರ್ಲಕ್ಷ್ಯಕ್ಕೆ ಮುಗ್ಧ ವಿದ್ಯಾರ್ಥಿ ಬಲಿ- ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬಸ್ಥರು

    ಖಾಸಗಿ ಬಸ್ಸಿನ ನಿರ್ಲಕ್ಷ್ಯಕ್ಕೆ ಮುಗ್ಧ ವಿದ್ಯಾರ್ಥಿ ಬಲಿ- ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬಸ್ಥರು

    ಮಂಗಳೂರು: ನಗರದಲ್ಲಿ ಖಾಸಗಿ ಬಸ್‍ಗಳ ವರ್ತನೆಗೆ ಮುಗ್ಧ ವಿದ್ಯಾರ್ಥಿಯೋರ್ವ ಬಲಿಯಾಗಿದ್ದಾನೆ. ನಾವೇನು ಮಾಡಿದ್ರೂ ಏನೂ ಆಗಲ್ಲ ಅಂದುಕೊಂಡಿದ್ದ ಖಾಸಗಿ ಬಸ್ಸಿನವರನ್ನು ಪೊಲೀಸರು ಇದೀಗ ಕಂಬಿ ಎಣಿಸುವಂತೆ ಮಾಡಿದ್ದಾರೆ.

    ಹೌದು. ಮಂಗಳೂರಿನ ಉಳ್ಳಾಲದ ತ್ಯಾಗರಾಜ್ ಮಮತಾ ಕರ್ಕೇರ ಅವರ ಪುತ್ರ, 16 ವರ್ಷದ ಯಶರಾಜ್ ಸೆಪ್ಟೆಂಬರ್ 7ರಂದು ಖಾಸಗಿ ಸಿಟಿ ಬಸ್ಸಿ (Citu Bus) ನಲ್ಲಿ ಬರುತ್ತಿದ್ದಾಗ ಉಳ್ಳಾಲದ ನೇತ್ರಾವತಿ ಸೇತುವೆಯ ಬಳಿ ಹೆದ್ದಾರಿ (Highway) ಯಲ್ಲಿ ಬಸ್ಸಿನಿಂದ ಎಸೆಯಲ್ಪಟ್ಟಿದ್ದ. ಬಸ್ಸಿನಲ್ಲಿ ರಶ್ ಇದ್ದ ಕಾರಣ ಫುಟ್ ಬೋರ್ಡ್ ಮೇಲೆ ನೇತಾಡುತ್ತಾ ಹೋಗುತ್ತಿದ್ದಾಗ ಹುಡುಗ ಹೊರಗೆ ಎಸೆಯಲ್ಪಟ್ಟಿದ್ದು, ತಲೆಯ ಭಾಗಕ್ಕೆ ತೀವ್ರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ.

    ಚಿಂತಾಜನಕ ಸ್ಥಿತಿಯಲ್ಲಿದ್ದ ಯಶರಾಜ್ ನನ್ನು ಬದುಕಿಸಲು ವೈದ್ಯರು (Doctor) ಶತ ಪ್ರಯತ್ನ ಮಾಡಿದ್ದಾರೆ. ಕೊನೆಗೆ ಕಳೆದ ಮಂಗಳವಾರ ಸಂಜೆ ಮೆದುಳು ಡೆಡ್ ಆಗಿರುವುದಾಗಿ ವೈದ್ಯರು ತಿಳಿಸಿದ್ದು, ಮಗನನ್ನು ಕಳಕೊಂಡ ದುಃಖದ ನಡುವೆಯೂ ಹೆತ್ತವರು ಅಂಗಾಂಗ ದಾನ ಮಾಡಿದ್ದಾರೆ. ಮಗನ ಸಾವಿಗೆ ಕಾರಣವಾದ ಖಾಸಗಿ ಬಸ್ ನ ವಿರುದ್ದ ಕ್ರಮಕ್ಕೆ ದ.ಕ ಜಿಲ್ಲಾಧಿಕಾರಿ ಹಾಗೂ ಪೊಲೀಸರಿಗೆ ದೂರು ನೀಡಿದ್ದು ಇಂದು ಬಸ್ಸಿನ ಚಾಲಕ, ನಿರ್ವಾಹಕನನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಮ್ಯಾನೇಜರ್ ನಂಬರ್ ಕೇಳಿದ್ದೆ ತಪ್ಪಾ? – ಬಟ್ಟೆ ಚಿಂದಿಯಾಗುವಂತೆ ವ್ಯಕ್ತಿಗೆ ಹೊಡೆದ್ರು ಮಹಿಳೆಯರು

    ಕೆಎ- 19 ಎಎ-0833 ನಂಬರ್ ನ ಖಾಸಗಿ ಬಸ್ಸಿನ ಡ್ರೈವರ್ (Driver) ಕಾರ್ತಿಕ್ ಶೆಟ್ಟಿ, ನಿರ್ವಾಹಕ ದಂಶೀರ್ ನನ್ನು ಬಂಧಿಸಿದ್ದು ಬಸ್ಸನ್ನು ವಶಕ್ಕೆ ಪಡೆಯಲಾಗಿದೆ. ಖಾಸಗಿ ಬಸ್ಸುಗಳ ನಿರ್ಲಕ್ಷ್ಯ ಮತ್ತು ಅತೀ ವೇಗದಿಂದ ಯಶ್ ರಾಜ್ ಸಾವನ್ನಪ್ಪಿದ್ದಾರೆ. ಪುಟ್ ಬೋರ್ಡ್ ನಲ್ಲಿ ಪ್ರಯಾಣಿಕರ ತುಂಬಿಸಿ ನಿರ್ಲಕ್ಷ್ಯ ತೋರುತ್ತಾರೆ ಎಂದು ಯಶ್ ರಾಜ್ ಕುಟುಂಬಸ್ಥರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಮಂಗಳೂರು ಸೌತ್ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 304 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಂದು ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

    ಮಂಗಳೂರಿನಲ್ಲಿ ಖಾಸಗಿ ಬಸ್ ಗಳ ಹಾವಳಿ ಇಂದು ನೆನ್ನೆಯದ್ದಲ್ಲ. ಅದೇ ರೀತಿ ರಸ್ತೆ ಕೂಡ ಅವ್ಯವಸ್ಥೆ ಸ್ಥಿತಿ ಯಾವಾಗಲೂ ಇರುತ್ತೆ. ಈ ಎಲ್ಲದರ ಮಧ್ಯೆ ಯಶ್ ರಾಜ್ ಸಾವಿಗೆ ನ್ಯಾಯ ಸಿಗುತ್ತಾ ಅನ್ನೋದ್ರ ಜೊತೆಗೆ ಈ ವ್ಯವಸ್ಥೆಯ ಕಾರಣದಿಂದ ಒಂದು ಅಮಾಯಕ ಜೀವ ಬಲಿಯಾಗಿದ್ದು ದುರಂತ.

    Live Tv
    [brid partner=56869869 player=32851 video=960834 autoplay=true]

  • ಸಚಿವ ಆನಂದ್ ಸಿಂಗ್ ವಿರುದ್ಧ ಪ್ರಕರಣ ದಾಖಲು!

    ಸಚಿವ ಆನಂದ್ ಸಿಂಗ್ ವಿರುದ್ಧ ಪ್ರಕರಣ ದಾಖಲು!

    ಬಳ್ಳಾರಿ: ಸಚಿವ ಆನಂದ್ ಸಿಂಗ್ ವಿರುದ್ಧ ಹೊಸಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಕುಟುಂಬಕ್ಕೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಆನಂದ್ ಸಿಂಗ್ ಸೇರಿದಂತೆ ಮಾರೆಪ್ಪಾ ಹಾಗೂ ಹಣಮಂತಪ್ಪ ವಿರುದ್ಧ ಐಪಿಸಿ -504 (ಶಾಂತಿ ಭಂಗ), 506 (ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

    ಏನಿದು ಕಿರುಕುಳ..?: ಹೊಸಪೇಟೆ ನಗರದ ಹಂಪಿ ರಸ್ತೆಯಲ್ಲಿರುವ 6ನೇ ವಾರ್ಡಿನಲ್ಲಿರುವ ಸುಣ್ಣದ ಬಟ್ಟೆ ಪ್ರದೇಶದಲ್ಲಿ ಪೊಲಯ್ಯ ಎಂಬ ಕುಟುಂಬ ಹಲವು ವರ್ಷಗಳಿಂದ ವಾಸವಿದೆ. ಆದರೆ ಇತ್ತೀಚೆಗೆ ಅಲ್ಲಿಗೆ ಭೇಟಿ ನೀಡಿದ ಸಚಿವರು, ನೀವು ಕಟ್ಟಿರುವ ಮನೆ ಅಕ್ರಮವಾಗಿದೆ. ಇದು ಸರ್ಕಾರಿ ಜಾಗ ಈ ಜಾಗವನ್ನ ನಗರಸಭೆ ವಶಕ್ಕೆ ಪಡೆಯುತ್ತಿದ್ದು, ಈ ಕೂಡಲೇ ಮನೆ ಖಾಲಿ ಮಾಡುವಂತೆ ತಿಳಿಸಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ ಈದ್ಗಾದಲ್ಲಿ ಬೆಳ್ಳಂಬೆಳಗ್ಗೆ ಗಣೇಶ ಮೂರ್ತಿ ಪ್ರತಿಷ್ಠಾಪನೆ

    ಆನಂದ್ ಸಿಂಗ್ ಹೇಳಿಕೆಯಿಂದ ಮನನೊಂದ ಕುಟುಂಬ ಸಾಮೂಹಿಕ ಆತ್ಮಹತ್ಯೆಗೆ ಯತ್ನಿಸಿದೆ. ಈ ಹಿಂದೆ ಆನಂದ್ ಸಿಂಗ್ ಜಾಗ ಒತ್ತವರಿ ಮಾಡಿಕೊಂಡು ಮನೆ ನಿರ್ಮಾಣ ಮಾಡಿದ್ದಾರೆ ಎಂದು ಪೊಲಯ್ಯ ಆರೋಪ ಮಾಡಿದ್ದರು. ಅಲ್ಲದೆ ಇದಕ್ಕೆ ಸಂಬಂಧಪಟ್ಟಂತೆ ದಾಖಲೆಗಳನ್ನು ಕೂಡ ಬಿಡುಗಡೆ ಮಾಡಿದ್ದರು. ದಾಖಲೆ ಬಿಡುಗಡೆ ಮಾಡಿದಾಗಿನಿಂದ ಆನಂದ್ ಸಿಂಗ್ ಅವರು ಕಿರುಕುಳ ನೀಡುತ್ತಿದ್ದಾರೆ ಎಂದು ಪೊಲಯ್ಯ ಕುಟುಂಬ ಗಂಭೀರ ಆರೋಪ ಮಾಡಿದೆ.

    ಸಚಿವರ ವಿರುದ್ಧ ಆರೋಪ ಮಾಡುತ್ತಿರುವ ಕುಟುಂಬ, ವಿಜಯನಗರ ಎಸ್‍ಪಿ ಕಚೇರಿ ಮುಂದೆ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದೆ. ಈ ವೇಳೆ ಸ್ಥಳದಲ್ಲೇ ಇದ್ದ ಪೊಲೀಸರು ಕುಟುಂಬವನ್ನು ರಕ್ಷಣೆ ಮಾಡಿದ್ದಾರೆ. ಅಲ್ಲದೆ ಕುಟುಂಬದ ಸದಸ್ಯರನ್ನ ಹೊಸಪೇಟೆ ಸರ್ಕಾರಿ ನೂರು ಹಾಸಿಗೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಹಣದಾಸೆಗೆ ಮದುವೆ – ಅನಾರೋಗ್ಯದ ನೆಪ ಹೇಳಿ, ಹಣ ದೋಚಿಕೊಂಡು ಸೊಸೆ ಎಸ್ಕೇಪ್

    ಹಣದಾಸೆಗೆ ಮದುವೆ – ಅನಾರೋಗ್ಯದ ನೆಪ ಹೇಳಿ, ಹಣ ದೋಚಿಕೊಂಡು ಸೊಸೆ ಎಸ್ಕೇಪ್

    ಬೆಂಗಳೂರು: ಹಣದಾಸೆಗೆ ಮದುವೆಯಾಗಿ ಬಳಿಕ ಅನಾರೋಗ್ಯದ ನೆಪ ಹೇಳಿ ಸೊಸೆ ಎಸ್ಕೇಪ್ ಆಗಿರುವ ಘಟನೆ ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಸೊಸೆ ಗೌತಮಿ ವಿರುದ್ಧ ಪತಿ ಕುಟುಂಬಸ್ಥರು ದೂರು ನೀಡಿದ್ದಾರೆ. ಮೊದಲೇ ನಿರ್ಧರಿಸಿದ್ದಂತೆ ಮದುವೆ ಬಳಿಕ ದಂಪತಿ ಅಮೆರಿಕಾಗೆ ಹೋಗಲು ಸಿದ್ಧತೆ ನಡೆಸಲಾಗಿತ್ತು. ಆದ್ರೆ ಅಮೆರಿಕಾಗೆ ತೆರಳಲು ಎತ್ತಿಟ್ಟಿದ್ದ 1.25 ಲಕ್ಷ ನಗದು, ಚಿನ್ನಾಭರಣ ಸಮೇತ ಸೊಸೆ ಎಸ್ಕೇಪ್ ಆಗಿದ್ದಾಳೆ.

    ಗೌತಮಿಗೆ 18 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ, 3 ಲಕ್ಷಕ್ಕೂ ಅಧಿಕ ಮೌಲ್ಯದ ಬಟ್ಟೆ ಕೊಡಿಸಲಾಗಿತ್ತು. ಅಷ್ಟೇ ಅಲ್ಲ ಸೊಸೆಯ ವಿದ್ಯಾಭ್ಯಾಸ ಸಲುವಾಗಿ 40 ಲಕ್ಷ ವರ್ಗಾವಣೆ ಮಾಡಲಾಗಿತ್ತು. ಇಷ್ಟೆಲ್ಲಾ ತೆಗೆದುಕೊಂಡಿದ್ದ ಸೊಸೆ ಅನಾರೋಗ್ಯದ ನೆಪ ಹೇಳಿ ಹೈಡ್ರಾಮಾ ಶುರುಮಾಡಿದ್ಲು. ಇನ್ನು ಸೊಸೆ ಗೌತಮಿ ತಾಯಿ ಮನೆಗೆ ಹೋಗಿ ನಾನು ಯಾವುದೇ ಕಾರಣಕ್ಕೂ ವಾಪಸ್ ಬರಲ್ಲ. ನೀವೇನಾದ್ರೂ ಬಂದ್ರೆ ಕಿರುಕುಳ ಕೊಡ್ತಿದ್ದೀರಾ ಅಂತ ಕೇಸ್ ಹಾಕ್ತೀನಿ ಅಂತ ಆವಾಜ್ ಹಾಕ್ತಿದ್ದಾರೆ.

    crime

    ಸದ್ಯ ಗೌತಮಿಯನ್ನು ತೋರಿಸಿ ಮದುವೆ ಮಾಡಿಸಿದ್ದ ವರಲಕ್ಷ್ಮೀ, ರವಿಚಂದ್ರನ್, ಹರೀಶ್ ಎಂಬುವರಿಗೂ ದುಡ್ಡು ನೀಡಲಾಗಿತ್ತು. ಹೀಗಾಗಿ ಈ ನಾಲ್ವರ ವಿರುದ್ಧ ಕೇಸ್ ದಾಖಲಿಸಲಾಗಿದೆ. ಬನಶಂಕರಿ ಠಾಣೆ ಪೊಲೀಸರಿಂದ ತನಿಖೆ ಮುಂದುವರಿದಿದೆ.

    Live Tv
    [brid partner=56869869 player=32851 video=960834 autoplay=true]

  • 11 ರಾಜ್ಯಗಳಲ್ಲಿ ಮಹಿಳೆಯರೇ ಹೆಚ್ಚು ಸೆಕ್ಸ್ ಪಾಲುದಾರರನ್ನು ಹೊಂದಿದ್ದಾರೆ: ವರದಿ

    11 ರಾಜ್ಯಗಳಲ್ಲಿ ಮಹಿಳೆಯರೇ ಹೆಚ್ಚು ಸೆಕ್ಸ್ ಪಾಲುದಾರರನ್ನು ಹೊಂದಿದ್ದಾರೆ: ವರದಿ

    ನವದೆಹಲಿ: ದೇಶದ 11 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಪುರುಷರಿಗಿಂತ ಮಹಿಳೆಯರೇ ಹೆಚ್ಚು ಸರಾಸರಿ ಲೈಂಗಿಕ ಪಾಲುದಾರರನ್ನು ಹೊಂದಿದ್ದಾರೆ ಎಂದು ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ (NFHS) ಸಮೀಕ್ಷಾ ವರದಿ ಹೇಳಿದೆ.

    ತಮ್ಮ ಸಂಗಾತಿ ಅಲ್ಲದ ಹಾಗೂ ತಮ್ಮೊಂದಿಗೆ ವಾಸಿಸದ ಪುರುಷರೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ ಮಹಿಳೆಯರ ಪ್ರಮಾಣ ಶೇ.4 ರಷ್ಟಿದೆ. ಇದೇ ರೀತಿಯ ಪುರುಷರ ಪ್ರಮಾಣ ಕೇವಲ ಶೇ 0.5 ಮಾತ್ರ ಇದೆ ಎಂದು ಸಮೀಕ್ಷೆಯಲ್ಲಿ ಕಂಡುಬಂದಿದೆ.

    1.1 ಲಕ್ಷ ಮಹಿಳೆಯರು ಹಾಗೂ 1 ಲಕ್ಷ ಪುರುಷರನ್ನೊಳಗೊಂಡು ನಡೆಸಲಾದ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯ ಪ್ರಕಾರ, ರಾಜಸ್ಥಾನ, ಹರಿಯಾಣ, ಚಂಡೀಗಢ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಮಧ್ಯ ಪ್ರದೇಶ, ಅಸ್ಸಾಂ, ಕೇರಳ, ಲಕ್ಷದ್ವೀಪ, ಪುದುಚೇರಿ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಮಹಿಳೆಯರ ಲೈಂಗಿಕ ಪಾಲುದಾರರ ಸಂಖ್ಯೆ ಪುರುಷರಿಗಿಂತ ಹೆಚ್ಚಾಗಿದೆ. ಇದನ್ನೂ ಓದಿ: ನ್ಯೂಯಾರ್ಕ್‍ನಲ್ಲಿ ಗಾಂಧಿ ಪ್ರತಿಮೆ ಧ್ವಂಸ – ಎರಡು ವಾರಗಳಲ್ಲಿ 2ನೇ ಬಾರಿಗೆ ಕೃತ್ಯ

    ರಾಜಸ್ಥಾನದಲ್ಲಿ ಮಹಿಳೆಯರು ಹೊಂದಿರುವ ಲೈಂಗಿಕ ಪಾಲುದಾರರ ಪ್ರಮಾಣ ಶೇ.3.1 ರಷ್ಟಿದೆ. ಇದು ಪುರುಷರಲ್ಲಿ ಶೇ.1.8 ಆಗಿದೆ. ಆದರೆ ಕಳೆದ 1 ವರ್ಷದ ಅವಧಿಯಲ್ಲಿ ತಮ್ಮ ಸಂಗಾತಿಗಳಲ್ಲದವರು ಅಥವಾ ಲಿವ್ ಇನ್ ರಿಲೇಶನ್‌ನಲ್ಲಿ ಮಹಿಳೆಯರೊಂದಿಗೆ ಲೈಂಗಿಕ ಸಂಬಂಧ ಹೊಂದಿರುವ ಪುರುಷರ ಪ್ರಮಾಣ ಶೇ.4 ರಷ್ಟಿದ್ದರೆ. ಇದು ಮಹಿಳೆಯರಲ್ಲಿ ಶೇ0.5ರಷ್ಟಿದೆ. ಇದನ್ನೂ ಓದಿ: ರೋಹಿಣಿ ಸಿಂಧೂರಿ ವಿರುದ್ಧ ಕರ್ತವ್ಯ ಲೋಪ ಆರೋಪ – 1,500 ಪುಟಗಳ ದಾಖಲೆ ಸಲ್ಲಿಸಿದ ಸಾ.ರಾ.ಮಹೇಶ್

    2019-21ರ ಅವಧಿಯಲ್ಲಿ ನಡೆಸಿದ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ-5ರಲ್ಲಿ 28 ರಾಜ್ಯಗಳು ಮತ್ತು 8 ಕೇಂದ್ರಾಡಳಿತ ಪ್ರದೇಶಗಳಿಂದ ದೇಶದ 707 ಜಿಲ್ಲೆಗಳನ್ನು ಸಮೀಕ್ಷೆಗೆ ಒಳಪಡಿಸಿದೆ. ರಾಷ್ಟ್ರೀಯ ವರದಿಯು ಸಾಮಾಜಿಕ-ಆರ್ಥಿಕ ಮತ್ತು ಇತರ ಹಿನ್ನೆಲೆಗೆ ಸಂಬಂಧಿಸಿದ ಡೇಟಾವನ್ನು ಸಹ ಒದಗಿಸುತ್ತದೆ. ಇದು ನೀತಿ ನಿರೂಪಣೆ ಮತ್ತು ಪರಿಣಾಮಕಾರಿ ಕಾರ್ಯಕ್ರಮ ಅನುಷ್ಠಾನಕ್ಕೆ ಉಪಯುಕ್ತವಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಜಮ್ಮುವಿನ ಮನೆಯಲ್ಲಿ ಒಂದೇ ಕುಟುಂಬದ 6 ಮಂದಿ ಶವವಾಗಿ ಪತ್ತೆ!

    ಜಮ್ಮುವಿನ ಮನೆಯಲ್ಲಿ ಒಂದೇ ಕುಟುಂಬದ 6 ಮಂದಿ ಶವವಾಗಿ ಪತ್ತೆ!

    ಶ್ರೀನಗರ: ಜಮ್ಮುವಿನ ಸಿದ್ರಾ ಪ್ರದೇಶದ ಮನೆಯಲ್ಲಿ ಒಂದೇ ಕುಟುಂಬದ ಆರು ಮಂದಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಘಟನೆ ಸಂಬಂಧ ಹೆಚ್ಚಿನ ತನಿಖೆ ಕೈಗೊಂಡಿದ್ದು, ಮೃತದೇಹಗಳನ್ನು ಜಮ್ಮುವಿನ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಕಾಶ್ಮೀರದಲ್ಲಿ ಮತ್ತೆ ಪಂಡಿತರು ಟಾರ್ಗೆಟ್ – ಓರ್ವನ ಹತ್ಯೆ, ಮತ್ತೋರ್ವ ಗಂಭೀರ

    ನಿನ್ನೆಯಷ್ಟೇ ಮುಂಜಾನೆ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಚೋಟಿಪೋರಾ ಪ್ರದೇಶದ ಸೇಬಿನ ತೋಟದಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿ ಕಾಶ್ಮೀರಿ ಪಂಡಿತನೊಬ್ಬನನ್ನು ಗುಂಡಿಕ್ಕಿ ಕೊಂದರು. ಈ ವೇಳೆ ಆತನ ಸಹೋದರ ಗಾಯಗೊಂಡಿದ್ದರು.

    ಮೃತ ವ್ಯಕ್ತಿ ಸುನೀಲ್ ಕುಮಾರ್ ಭಟ್ ಎಂದು ಗುರುತಿಸಲಾಗಿದೆ. ಆತನ ಸಹೋದರ ಪಿಂಟು ಅವರಿಗೆ ಗಾಯಗಳಾಗಿವೆ. ಘಟನೆ ಬಳಿಕ ಸ್ಥಳದಲ್ಲಿ ಭದ್ರತಾ ಪಡೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇದನ್ನೂ ಓದಿ: ಕಾಶ್ಮೀರಿ ಪಂಡಿತನ ಹತ್ಯೆ ಬಳಿಕ ಮತ್ತಷ್ಟು ದಾಳಿಗಳ ಎಚ್ಚರಿಕೆ

    ಈ ಘಟನೆಯಾದ ಮಾರನೇ ದಿನವೇ ಒಂದೇ ಕುಟುಂಬದ ಆರು ಮಂದಿ ಶವಗಳು ಪತ್ತೆಯಾಗಿವೆ. ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಹೊಳೆನರಸೀಪುರ ಕೋರ್ಟ್ ಆವರಣದಲ್ಲಿಯೇ ಪತ್ನಿಯ ಕತ್ತು ಸೀಳಿದ ಪತಿ

    ಹೊಳೆನರಸೀಪುರ ಕೋರ್ಟ್ ಆವರಣದಲ್ಲಿಯೇ ಪತ್ನಿಯ ಕತ್ತು ಸೀಳಿದ ಪತಿ

    – ಎಸ್ಕೇಪ್ ಆಗ್ತಿದ್ದ ಆರೋಪಿಯನ್ನು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು

    ಹಾಸನ: ಕೋರ್ಟ್ ಆವರಣದಲ್ಲೇ ಪತಿಯೇ ಪತ್ನಿಯ ಕತ್ತು ಸೀಳಿ ಕೊಲೆ ಮಾಡಲು ಯತ್ನಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಪತ್ನಿ ಆಸ್ಪತ್ರೆಯಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ.

    ಚೈತ್ರಾ (32) ಕೊಲೆಯಾದ ಮಹಿಳೆಯಾಗಿದ್ದು, ಶಿವಕುಮಾರ್ ಕೊಲೆ ಆರೋಪಿಯಾಗಿದ್ದಾನೆ. ಹೊಳೆನರಸೀಪುರ ತಾಲ್ಲೂಕಿನ, ತಟ್ಟೆಕೆರೆ ಗ್ರಾಮದ ಶಿವಕುಮಾರ್ ಹಾಗೂ ಚನ್ನರಾಯಪಟ್ಟಣ ತಾಲ್ಲೂಕಿನ, ನುಗ್ಗೇಹಳ್ಳಿ ಹೋಬಳಿ ಅವೇರಹಳ್ಳಿ ಗ್ರಾಮದ ಚೈತ್ರಾ ಕಳೆದ 7 ವರ್ಷದ ಹಿಂದೆ ಮದುವೆಯಾಗಿದ್ದರು. ದಂಪತಿಗೆ ಎರಡು ಹೆಣ್ಣುಮಕ್ಕಳಿದ್ದು, ದಾಂಪತ್ಯ ಜೀವನದಲ್ಲಿ ಹೊಂದಾಣಿಕೆ ಇಲ್ಲದ ಕಾರಣ ಮೂರು ವರ್ಷಗಳ ಹಿಂದೆ ಶಿವಕುಮಾರ್ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದನು. ಇದನ್ನೂ ಓದಿ: ಸ್ವಾತಂತ್ರ್ಯ ದಿನಾಚರಣೆಗೆ ಕಾಂತಾರ ಸಿನಿಮಾದಿಂದ ಮೊದಲ ಹಾಡು ಗಿಫ್ಟ್

    ಚೈತ್ರಾ ಜೀವನಾಂಶ ಕೋರಿ ಕೋರ್ಟ್ ಮೆಟ್ಟಿಲೇರಿದ್ದಳು. ಇಂದು ಹೊಳೆನರಸೀಪುರದ ನ್ಯಾಯಾಲಯದಲ್ಲಿ ಲೋಕ ಅದಾಲತ್ ನಡೆದಿದ್ದು, ಇಲ್ಲಿ ನ್ಯಾಯಧೀಶರು ದಂಪತಿ ಮನವೊಲಿಸಿ ಒಂದಾಗಿ ಬಾಳುವಂತೆ ತಿಳಿ ಹೇಳಿದ್ದರು. ನಂತರ ಇಬ್ಬರು ಪರಸ್ಪರ ಮಾತನಾಡಿಕೊಂಡು ಬರುವಂತೆ ಕಳುಹಿಸಿದ್ದರು. ಈ ವೇಳೆ ಚೈತ್ರಾ ಮಗಳನ್ನು ಶೌಚಾಲಯಕ್ಕೆ ಕರೆದುಕೊಂಡು ಹೋಗಿದ್ದಾಳೆ. ಆಕೆಯನ್ನು ಹಿಂಬಾಲಿಸಿ ಹೋದ ಶಿವಕುಮಾರ್ ಶೌಚಾಲಯದಲ್ಲೇ ಚಾಕುವಿನಿಂದ ಪತ್ನಿಯ ಕತ್ತು ಕೊಯ್ದು ಎಸ್ಕೇಪ್ ಆಗಲು ಯತ್ನಿಸಿದ್ದಾನೆ. ಚೈತ್ರಾ ಕುಸಿದು ಬಿದ್ದು ರಕ್ತಸ್ರಾವದಿಂದ ಒದ್ದಾಡುತ್ತಿದ್ದನ್ನು ಕಂಡ ವಕೀಲರು ಹಾಗೂ ಸಾರ್ವಜನಿಕರು ಕೂಡಲೇ ಆಕೆಯನ್ನು ಹೊಳೆನರಸೀಪುರ ಆಸ್ಪತ್ರೆಗೆ ದಾಖಲಿಸಿ, ತಪ್ಪಿಸಿಕೊಂಡು ಓಡುತ್ತಿದ್ದ ಶಿವಕುಮಾರ್‌ನ ಬೆನ್ನತ್ತಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ಮಡಿಕೇರಿಗೆ ತೆರಳುತ್ತಿದ್ದ KSRTC ಬಸ್ ಅಪಘಾತ – ಜನರ ರಕ್ಷಣೆಗೆ ಮುಂದಾದ ಅಪ್ಪಚ್ಚು ರಂಜನ್

    ಚೈತ್ರಾಗೆ ಹೊಳೆನರಸೀಪುರ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಅಂಬುಲೆನ್ಸ್‌ನಲ್ಲಿ ಹಾಸನ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿತ್ತು. ಆಸ್ಪತ್ರೆಗೆ ದಾಖಲಾದ ಕೆಲವೇ ನಿಮಿಷಗಳಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಚೈತ್ರಾ ಕೊನೆಯುಸಿರೆಳೆದಿದ್ದಾಳೆ. ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದು, ಹೊಳೆನರಸೀಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

    Live Tv
    [brid partner=56869869 player=32851 video=960834 autoplay=true]

  • ಪ್ರವೀಣ್ ಹತ್ಯೆಗೈದ ಆರೋಪಿಗಳ ಬಂಧನ- ಪೊಲೀಸ್ ಇಲಾಖೆಗೆ ಕುಟುಂಬಸ್ಥರು ಧನ್ಯವಾದ

    ಪ್ರವೀಣ್ ಹತ್ಯೆಗೈದ ಆರೋಪಿಗಳ ಬಂಧನ- ಪೊಲೀಸ್ ಇಲಾಖೆಗೆ ಕುಟುಂಬಸ್ಥರು ಧನ್ಯವಾದ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಇದೀಗ ಆರೋಪಿಗಳನ್ನು ಬಂಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರವೀಣ್ ಕುಟುಂಬಸ್ಥರು ಪೊಲಿಸ್ ಇಲಾಖೆಗೆ ಧನ್ಯವಾದ ಅರ್ಪಿಸಿದ್ದಾರೆ.

    ಹತ್ಯೆ ಪ್ರಮುಖ ಮೂವರು ಆರೋಪಿಗಳನ್ನು ಬಂಧಿಸಿದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಪ್ರತಿಕ್ರಿಯಿಸಿದ್ದಾರೆ. ಆರೋಪಿಗಳಿಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು. ಯಾವ ವಕೀಲನೂ ಆರೋಪಿಗಳಿಗೆ ವಕಾಲತು ನಡೆಸಬಾರದು ಎಂದು ನೆಟ್ಟಾರು ಕುಟುಂಬಸ್ಥರು ಮನವಿ ಮಾಡಿಕೊಂಡಿದ್ದಾರೆ. ಇದೆ ವೇಳೆ ಪೊಲಿಸ್ ಇಲಾಖೆಗೆ ಧನ್ಯವಾದ ಕೂಡ ತಿಳಿಸಿದ್ದಾರೆ. ಇದನ್ನೂ ಓದಿ: ವಾರದ ಹಿಂದೆಯೇ ಪ್ರವೀಣ್‌ ಹತ್ಯೆಗೆ ಸ್ಕೆಚ್‌ – ಕೇರಳದ 7 ಕಡೆ ಆಶ್ರಯ, ಹಂತಕರು ಕೊನೆಗೂ ಅಂದರ್‌

    ಪ್ರಕರಣದ ಕುರಿತು ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಡಿಜಿಪಿ ಅಲೋಕ್ ಕುಮಾರ್, ಹತ್ಯೆಯಲ್ಲಿ ನೇರವಾಗಿ ಭಾಗಿಯಾಗಿ ಹಲ್ಲೆ ನಡೆಸಿದ ಮೂವರು ಆರೋಪಿಗಳನ್ನು ಇಂದು ಬಂಧಿಸಲಾಗಿದೆ. ಮಂಗಳೂರಿನ ತಲಪಾಡಿ ಚೆಕ್ ಪೋಸ್ಟ್ ಬಳಿ ಬಂದಿಸಲಾಗಿದೆ. ಸುಳ್ಯದ ಶಿಯಾಬ್ (33), ರಿಯಾಝ್ (27) ಅಂಕತಡ್ಕ ಮತ್ತು ಸುಳ್ಯದ ಎಲಿಮಲೆ ನಿವಾಸಿ ಬಶೀರ್ ಬಂಧಿತ ಆರೋಪಿಗಳು. ರಿಯಾಝ್ ಕೊಳಿ ಸಪ್ಲೈ ಮಾಡುವ ವ್ಯಾಪಾರ, ಬಶೀರ್ ಹೋಟೆಲ್‍ನಲ್ಲಿ ಕೆಲಸ ಮಾಡುತ್ತಿದ್ದ, ಕೃತ್ಯಕ್ಕೆ ಬ್ಲ್ಯಾಕ್ ಸ್ಪ್ಲೆಂಡರ್ ಬೈಕ್ ಬಳಕೆ ಮಾಡಲಾಗಿದೆ. ಕಾರೊಂದನ್ನು ಸಹ ಬಳಕೆ ಮಾಡಿದ್ದಾರೆ. ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ಸಹ ವಶಪಡಿಸಿಕೊಳ್ಳುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಕಾಸರಗೋಡು ಮಸೀದಿಗೆ ಹೋಗಿದ್ದ ಹಂತಕರು – SDPI, PFI ಲಿಂಕ್‌, ವಾರಂಟ್ ಜಾರಿ ಮಾಡಿ ಆಸ್ತಿ ಸೀಜ್‌

    ಸಿಯಾಬ್ ಕೋಕೊ ಪೂರೈಕೆದಾರನಾಗಿ ಕೆಲಸ ಮಾಡುತ್ತಿದ್ದ. ವಾರೆಂಟ್ ಇಶ್ಯೂ ಮಾಡಿ ಆಸ್ತಿ ಮುಟ್ಟುಗೋಲು ಹಾಕುತ್ತೇವೆ. ಯಾವುದೇ ಅಮಾಯಕರ ಬಂಧನ ಮಾಡಲ್ಲ. ಆದರೆ ಕೃತ್ಯದಲ್ಲಿ ಭಾಗಿಯಾದವರೆಲ್ಲರನ್ನು ಬಂಧಿಸುತ್ತೇವೆ. ಯಾರನ್ನು ಫಿಕ್ಸ್ ಮಾಡೋದಕ್ಕೆ ಹೋಗಲ್ಲ. ಯಾರನ್ನೋ ಬಂಧಿಸೋದಕ್ಕೆ ಇದು ಹುಡುಗಾಟವಲ್ಲ. ನಮಗೆ ಜಾತಿ, ಧರ್ಮ, ಬಣ್ಣ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಚಾಮರಾಜಪೇಟೆ ಮೈದಾನದಲ್ಲಿ ಕಂದಾಯ ಇಲಾಖೆಯಿಂದಲೇ ಧ್ವಜಾರೋಹಣ

    Live Tv
    [brid partner=56869869 player=32851 video=960834 autoplay=true]

  • ವಿದ್ಯುತ್ ಕಂಬಕ್ಕೆ ಕಟ್ಟಿ ವೃದ್ಧನನ್ನು ಥಳಿಸಿ ಕೊಂದ ಮನೆಯವ್ರು – ಮನಕಲಕುವ ದೃಶ್ಯ ವೈರಲ್

    ವಿದ್ಯುತ್ ಕಂಬಕ್ಕೆ ಕಟ್ಟಿ ವೃದ್ಧನನ್ನು ಥಳಿಸಿ ಕೊಂದ ಮನೆಯವ್ರು – ಮನಕಲಕುವ ದೃಶ್ಯ ವೈರಲ್

    ಭುವನೇಶ್ವರ: ವೃದ್ಧ ಎಂಬುವುದನ್ನು ಲೆಕ್ಕಿಸದೇ ಹಾಡಹಗಲೇ ವಿದ್ಯುತ್ ಕಂಬಕ್ಕೆ ಕಟ್ಟಿ ಕುಟುಂಬಸ್ಥರು ಮರದ ದೊಣ್ಣೆನಿಂದ ಅಮಾನವೀಯವಾಗಿ ಥಳಿಸಿ ಕೊಂದಿರುವ ಘಟನೆ ಒಡಿಶಾದ ಕೋರಾಪುಟ್ ಜಿಲ್ಲೆಯ ಬುಡಕಟ್ಟು ಪ್ರದೇಶದಲ್ಲಿ ನಡೆದಿದೆ.

    ಮೃತ ವ್ಯಕ್ತಿಯನ್ನು ಕುರ್ಷಾ ಮಣಿಯಕ್ಕ ಎಂದು ಗುರುತಿಸಲಾಗಿದೆ. ವೈಯಕ್ತಿಕ ಜಗಳದಿಂದ ಮಗನ ಮನೆಯ ಮೇಲಿನ ಅಂಚನ್ನು ಹೊಡೆದು ಹಾಕಿದ್ದರಿಂದ ಕುಟುಂಬಸ್ಥರು ವೃದ್ಧನೊಂದಿಗೆ ವಾಗ್ವಾದ ನಡೆಸಿದ್ದಾರೆ. ಇದನ್ನೂ ಓದಿ: ಮನವಿ ಮಾಡಿದ್ರೂ ನನಗೆ ಸರ್ಕಾರದಿಂದ ಸಹಾಯವೇ ಸಿಗಲಿಲ್ಲ; ಗೆದ್ದಾಗ ಪ್ರಶಂಸಿಸುತ್ತಿದ್ದಾರೆ – ಕಾಮನ್‌ವೆಲ್ತ್‌ನಲ್ಲಿ ಕಂಚು ಗೆದ್ದ ಕ್ರೀಡಾಪಟು ಬೇಸರ

    POLICE JEEP

    ಕೊನೆಗೆ ಕುರ್ಷಾ ಮಣಿಯಕ್ಕನ ಸಹೋದರ, ಮಗ ಮತ್ತು ಸೊಸೆ ಅವರನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ, ಮರದ ದೊಣ್ಣೆಯಿಂದ ನಿರ್ದಾಕ್ಷಿಣ್ಯವಾಗಿ ಥಳಿಸಿದ್ದಾರೆ. ಇದೀಗ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ವೀಡಿಯೋದಲ್ಲಿ ವೃದ್ಧ ತನ್ನನ್ನು ತಾನು ರಕ್ಷಿಸಿಕೊಳ್ಳಲು ಸಾಧ್ಯವಾಗದೇ ತನ್ನ ಎರಡೂ ಪಾದಗಳನ್ನು ನೆಲದಿಂದ ಮೇಲಕ್ಕೆತ್ತಿರುವುದನ್ನು ಕಾಣಬಹುದು. ಕುಟುಂಬಸ್ಥರು ಆತನ ಕಾಲುಗಳ ಮೇಲೆ ಹಿಗ್ಗಾಮುಗ್ಗ ಥಳಿಸುವಾಗ ವೃದ್ಧ ನೋವಿನಿಂದ ಜೋರಾಗಿ ಅಳುತ್ತಾನೆ. ಕೊನೆಗೆ ನೋವು ತಡೆಯಲಾಗದೇ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಸಾವನ್ನಪ್ಪಿರುವುದನ್ನು ಕಾಣಬಹುದಾಗಿದೆ.

    ಘಟನೆ ನಂತರ ಸ್ಥಳೀಯರ ನೆರವಿನಿಂದ ಆರೋಪಿಗಳು ಕುರ್ಷಾ ಮಣಿಯಕ್ಕನ ಶವವನ್ನು ಸುಟ್ಟು ಹಾಕಿದ್ದಾರೆ. ಈ ಘಟನೆ ಕುರಿತಂತೆ ಕೆಲ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರ ತಂಡ, ಓರ್ವನನ್ನು ಬಂಧಿಸಿದ್ದಾರೆ. ಮತ್ತೊಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: 500ಮೀ. ದೂರದವರೆಗೆ ಕಾರನ್ನು ಎಳೆದೊಯ್ದ ಟ್ರಕ್- ಸಮಾಜವಾದಿ ಮುಖಂಡನಿದ್ದ ಕಾರು ಜಖಂ

    Live Tv
    [brid partner=56869869 player=32851 video=960834 autoplay=true]

  • 9 ವರ್ಷಗಳ ಹಿಂದೆ ಕಿಡ್ನ್ಯಾಪ್‌ ಆಗಿದ್ದ ಬಾಲಕಿ ಪೋಸ್ಟರ್ ಸಹಾಯದಿಂದ ಹೆತ್ತವರ ಮಡಿಲಿಗೆ

    9 ವರ್ಷಗಳ ಹಿಂದೆ ಕಿಡ್ನ್ಯಾಪ್‌ ಆಗಿದ್ದ ಬಾಲಕಿ ಪೋಸ್ಟರ್ ಸಹಾಯದಿಂದ ಹೆತ್ತವರ ಮಡಿಲಿಗೆ

    ಮುಂಬೈ: ಕಾಣೆಯಾಗಿದ್ದಾರೆ ಎನ್ನುವ 2013ರ ಡಿಜಿಟಲ್ ಪೋಸ್ಟರ್‌ನ ನಕಲು ಪ್ರತಿಯೊಂದು 9 ವರ್ಷಗಳ ಹಿಂದೆ ಕಿಡ್ನ್ಯಾಪ್‌ ಆಗಿದ್ದ ಅಪ್ರಾಪ್ತೆ ಮತ್ತೆ ತನ್ನ ಕುಟುಂಬದೊಂದಿಗೆ ಸೇರಲು ಸಹಾಯ ಮಾಡಿದೆ.

    2013ರಲ್ಲಿ ಪ್ರಕಟಿಸಿದ್ದ ಕಾಣೆಯಾಗಿದ್ದಾರೆ ಎನ್ನುವ ಪೋಸ್ಟರ್ ಸಹಾಯದಿಂದ ತನ್ನವರನ್ನು ಸಂಪರ್ಕಿಸಿದ ಬಾಲಕಿ 9 ವರ್ಷಗಳ ನಂತರ ತನ್ನ ಕುಟುಂಬದೊಂದಿಗೆ ಸೇರಿಕೊಂಡಿದ್ದಾಳೆ.

    ಮುಂಬೈನ ಅಂಧೇರಿಯಲ್ಲಿ ಪೋಷಕರೊಂದಿಗೆ ವಾಸವಿದ್ದ 7 ವರ್ಷದ ಬಾಲಕಿ ಪೂಜಾ 2013ರ ಜನವರಿ 22 ರಂದು ತನ್ನ ಸಹೋದರನೊಂದಿಗೆ ಶಾಲೆಗೆ ಹೋಗಿದ್ದಳು. ಈ ವೇಳೆ ಹೆನ್ರಿ ಜೋಸೆಫ್ ಡಿಸೋಜಾ ಹೆಸರಿನ ವ್ಯಕ್ತಿಯೊಬ್ಬ ತನಗೆ ಐಸ್‌ಕ್ರೀಂ ಕೊಡಿಸೋದಾಗಿ ಆಕೆಯನ್ನು ಅಪಹರಿಸಿದ್ದನು. ಇದೀಗ ಬಂಧನಕ್ಕೊಳಗಾಗಿರುವ ಹೆನ್ರಿ ತನಗೆ ಮಕ್ಕಳಾಗದಿರುವ ಕಾರಣ ಪೂಜಾಳನ್ನ ಅಪಹರಿಸಿದ್ದೆ ಎಂಬುದಾಗಿ ಕೇಳಿದ್ದಾನೆ. ಇದನ್ನೂ ಓದಿ: ಮಣಿಪುರದಲ್ಲಿ ಹಿಂಸಾಚಾರ – 5 ದಿನ ಇಂಟರ್‌ನೆಟ್ ಸ್ಥಗಿತ

    ಪೂಜಾ ಯಾರಿಂದಲೂ ಗುರುತಿಸಲ್ಪಡುವುದಿಲ್ಲ ಎಂದು ಹೇಳಿ ಹೆನ್ರಿ ಡಿಸೋಜಾ ಆಕೆಯನ್ನು ಕರ್ನಾಟಕದಲ್ಲಿನ ಹಾಸ್ಟೆಲ್‌ಗೆ ಕಳುಹಿಸಿದ್ದನು. ಅಲ್ಲದೆ ಆನಿ ಡಿಸೋಜಾ ಎಂದು ಹೆಸರನ್ನೂ ಬದಲಾಯಿಸಿದ್ದನು. ಹೆನ್ರಿ ದಂಪತಿಗೆ ಸ್ವಂತ ಮಗುವಾದಾಗ ಆಕೆಯನ್ನು ಹಾಸ್ಟೆಲ್‌ನಿಂದ ವಾಪಸ್ ತನ್ನ ಮನೆಗೆ ಕರೆತಂದಿದ್ದನು. ಅಂದಿನಿಂದ ಮನೆಗೆಲಸ ಮಾಡಿಸುತ್ತಾ ಪೂಜಾಳನ್ನು ಚೆನ್ನಾಗಿ ನೋಡಿಕೊಳ್ಳುವುದನ್ನೇ ನಿಲ್ಲಿಸಿದ್ದನು ಎಂಬುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಇದನ್ನೂ ಓದಿ: ಆಜಾದಿ ಸ್ಯಾಟ್ ಉಪಗ್ರಹ ಉಡಾವಣೆ ವಿಫಲ: ಇಸ್ರೋ

    ಸದ್ಯ ಪೂಜಾ 16 ವರ್ಷದ ಬಾಲಕಿಯಾಗಿದ್ದಾಳೆ. ಆದರೆ ಕುಟುಂಬದ ಸದಸ್ಯರ ಬಗ್ಗೆ ಹೆಚ್ಚು ನೆನಪಿರಲಿಲ್ಲ. ಹಾಗಾಗಿ ಪೋಷಕರಿಂದ ದೂರವೇ ಉಳಿದ್ದರು. ಆದರೆ ಹೆನ್ರಿ ಕುಡಿದ ಅಮಲಿನಲ್ಲಿ ಈಕೆ ತನ್ನ ಮಗಳಲ್ಲ ಎಂದು ಹೇಳಿದ ನಂತರ ಪೂಜಾ ತನ್ನ ನಿಜವಾದ ಸುಳಿವಿನ ಬಗ್ಗೆ ಹುಡುಕಾಟ ನಡೆಸಲು ಪ್ರಾರಂಭಿಸಿದಳು. ಪೂಜಾ ಕಾಣೆಯಾದ ನಂತರ ಆಕೆಯ ಸ್ನೇಹಿತರು ಅಂತರ್ಜಾಲದಲ್ಲಿ ಹುಡುಕಾಟ ನಡೆಸಿದ್ದರು. ಈ ವೇಳೆ ಪೂಜಾ ಸಹ ತನ್ನವರಿಗಾಗಿ ಹುಡುಕಾಟ ನಡೆಸುತ್ತಿದ್ದಾಗ 2013ರಲ್ಲಿ ಹಾಕಿದ್ದ ಕಾಣೆಯಾಗಿದ್ದಾರೆ ಎನ್ನುವ ಪೋಸ್ಟರ್‌ವೊಂದು ಸಿಕ್ಕಿದೆ. ಅದರಲ್ಲಿ 5 ಸಂಪರ್ಕ ಸಂಖ್ಯೆಗಳನ್ನು ನಮೂದಿಸಲಾಗಿತ್ತು. ಆದರೆ 4 ಸಂಖ್ಯೆಗಳು ಸೇವೆಯಲ್ಲಿರಲಿಲ್ಲ. ಅದೃಷ್ಟವಶಾತ್ ಉಳಿದ ಒಂದು ಸಂಖ್ಯೆ ಪೂಜಾ ಕುಟುಂಬದ ನೆರೆಯವರಾಗಿದ್ದ ರಫಿಕ್ ಅವರದ್ದಾಗಿತ್ತು. ಪೂಜಾ ರಫಿಕ್‌ಗೆ ಕರೆ ಮಾಡಿ ತನ್ನ ಬಗ್ಗೆ ಹೇಳಿಕೊಂಡಳು. ಆಗ ರಫಿಕ್ ವೀಡಿಯೋ ಕರೆ ಮಾಡಿ ಅವಳೊಂದಿಗೆ ಮಾತನಾಡಿ ಆಕೆಯನ್ನು ಗುರುತಿಸಿದನು. ವೀಡಿಯೋ ಕರೆ ಮಾಡಿ ಪೂಜಾಳ ತಾಯಿಯೊಂದಿಗೂ ಮಾತನಾಡಿಸಿದನು. ಪೂಜಾಳ ತಾಯಿಯೂ ಆಕೆಯನ್ನೂ ಗುರುತಿಸಿದರು.

    ನಂತರ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಹಿರಿಯ ಪೊಲೀಸ್ ಅಧಿಕಾರಿ ಮಿಲಿಂದ್ ಕುರ್ದರ್ ಅವರ ಸಹಾಯದಿಂದ ಪೂಜಾ ಮತ್ತೆ ತನ್ನ ಮನೆ ಸೇರಿದಳು. ಈ ಅವಧಿಯಲ್ಲಿ ಪೂಜಾ ತನ್ನ ತಂದೆಯನ್ನು ಕಳೆದುಕೊಂಡಿದ್ದಳು. ಕುಟುಂಬದವರನ್ನು ಭೇಟಿಯಾದ ಕೂಡಲೇ ತನ್ನ ತಾಯಿ ಹಾಗೂ ಸಹೋದರರೊಂದಿಗೆ ಸಂತಸ ಹಂಚಿಕೊಂಡರು.

    Live Tv
    [brid partner=56869869 player=32851 video=960834 autoplay=true]

  • ಕುಟುಂಬ ಕಲಹ – ವಿದ್ಯುತ್ ಹೈಟೆನ್ಷನ್ ಟವರ್ ಏರಿ ವ್ಯಕ್ತಿ ಹೈಡ್ರಾಮಾ

    ಕುಟುಂಬ ಕಲಹ – ವಿದ್ಯುತ್ ಹೈಟೆನ್ಷನ್ ಟವರ್ ಏರಿ ವ್ಯಕ್ತಿ ಹೈಡ್ರಾಮಾ

    ಹುಬ್ಬಳ್ಳಿ: ಕುಟುಂಬ ಕಲಹದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿದ್ಯುತ್ ಟವರ್ ಏರಿ ಹೈಡ್ರಾಮಾ ಸೃಷ್ಟಿಸಿದ್ದ ವ್ಯಕ್ತಿಯನ್ನು ಹೆಸ್ಕಾಂ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.

    ಇಲ್ಲಿನ ಬಿಡ್ನಾಳದ 11 ಕೆವಿ ಹೈಟೆನ್ಷನ್ ಟವರ್ ಮೇಲೆ ಏರಿ ರಾಘವೇಂದ್ರ ಬಳ್ಳಾರಿ ಎಂಬಾತ ಆತ್ಮಹತ್ಯೆಗೆ ಮುಂದಾಗಿದ್ದಾನೆ. ಇದನ್ನು ಗಮನಿಸಿದ ವ್ಯಕ್ತಿಯೊಬ್ಬರು ಹೆಸ್ಕಾಂ ಕಚೇರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಆದರೆ ವ್ಯಕ್ತಿ ಹತ್ತಿರುವುದು ಯಾವ ಲೈನ್ ಟವರ್ ಮೇಲೆ ಎಂಬುವುದು ಖಾತ್ರಿಯಾಗಿರಲಿಲ್ಲ. ಕೂಡಲೇ ಎಚ್ಚೆತ್ತುಕೊಂಡ ಗ್ರಾಮೀಣ ಉಪವಿಭಾಗದ ಕಾರ್ಯಾನಿರ್ವಾಹಕ ಅಭಿಯಂತರ ಕಿರಣಕುಮಾರ್, ಆ ಮಾರ್ಗದಲ್ಲಿ ವಿದ್ಯುತ್ ಪೂರೈಕೆಯನ್ನು ಸ್ಥಗಿತಗೊಳಿಸಿದ್ದಾರೆ. ಇತ್ತ ರಾಘವೇಂದ್ರ ವಿದ್ಯುತ್ ತಂತಿಯನ್ನು ಸ್ಪರ್ಶಿಸುತ್ತಿದ್ದಂತೆ ಅತ್ತ ವಿದ್ಯುತ್ ಸಂಪರ್ಕ ಕಡಿತಗೊಂಡಿತು. ಇದರಿಂದ ರಾಘವೇಂದ್ರನ ಪ್ರಾಣ ಉಳಿದಿದೆ.‌ ಇದನ್ನೂ ಓದಿ: ರಾಷ್ಟ್ರಧ್ವಜ ರಕ್ಷಣಾ ಅಭಿಯಾನ ಆರಂಭಿಸಿದ ಯೂತ್ ಕಾಂಗ್ರೆಸ್ – ಜಗದೀಶ್ ಶೆಟ್ಟರ್‌ಗೆ ಧ್ವಜ ಕಾಣಿಕೆ ನೀಡಿ ಚಾಲನೆ

    ಬಳಿಕ ಪೊಲೀಸರು ಹಾಗೂ ಹೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ರಾಘವೇಂದ್ರನಿಗೆ ಬುದ್ದಿ ಹೇಳಿ ಮನೆಗೆ ಕಳುಹಿಸಿದ್ದಾರೆ. ಕ್ಷಣದಲ್ಲೇ ಕಾರ್ಯಪ್ರವೃತರಾದ ಹೆಸ್ಕಾಂ ಸಿಬ್ಬಂದಿಗೆ ಪೊಲೀಸರು ಹಾಗೂ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]