Tag: farm laws

  • ಈಗಲೂ ರೈತರು ಪ್ರತಿಭಟನೆ ಮಾಡುತ್ತಿರುವುದು ಯಾಕೆ – ಅಮರಿಂದರ್ ಪ್ರಶ್ನೆ

    ಚಂಡೀಗಢ: ಮೂರು ಕೃಷಿ ಕಾಯ್ದೆಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಹಿಂಪಡೆಯುವುದಾಗಿ ಘೋಷಿಸಿದ್ದಾರೆ. ಆದರೂ ರೈತರು ಪ್ರತಿಭಟನೆ ಮುಂದುವರಿಸಲು ನಿರ್ಧರಿಸಿರುವುದೇಕೆ ಎಂದು ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು ರೈತರನ್ನು ಪ್ರಶ್ನಿಸಿದ್ದಾರೆ.

    ರೈತರ ಬಳಿ ಪ್ರಧಾನಮಂತ್ರಿಗಳು ಕ್ಷಮೆಯಾಚಿಸಿದ್ದಾರೆ. ಆದರೆ ಕಾಯ್ದೆಗಳನ್ನು ರದ್ದುಪಡಿಸುವ ಸಂಬಂಧ ಸದನ ಯಾವಾಗ ನಡೆಯುತ್ತದೆ ಎಂಬುದಷ್ಟೇ ಪ್ರಶ್ನೆಯಾಗಿತ್ತು. ನ.29ರಂದು ಸದನ ನಡೆಯಲಿದೆ. ಮಸೂದೆಯನ್ನು ಹೊರಡಿಸಿದರು, ಈಗ ರದ್ದುಗೊಳಿಸಲಾಗುವುದು. ಈ ವಿಷಯ ಅಲ್ಲಿಗೆ ಮುಗಿಯುತ್ತದೆ. ಕಾಯ್ದೆಗಳನ್ನು ಹಿಂಪಡೆಯುವುದಾಗಿ ಪ್ರಧಾನಿಗಳು ಘೋಷಿಸಿದ ನಂತರವೂ, ರೈತರು ಪ್ರತಿಭಟನೆ ಮುಂದುವರಿಸಲು ಕುಳಿತಿರುವುದರ ಪ್ರಯೋಜನವಾದರೂ ಏನು ಎಂದು ಅಮರೀಂದರ್ ಸಿಂಗ್ ಕೇಳಿದ್ದಾರೆ. ಇದನ್ನೂ ಓದಿ: ಕೃಷಿ ಕಾಯ್ದೆ ವಾಪಸ್ ಪಡೆದ ಮೋದಿ ಸರ್ಕಾರ

    ಕೃಷಿ ಕಾಯ್ದೆಗಳ ವಿರುದ್ಧ ನಾವು ಆರಂಭಿಸಿದ ಹೋರಾಟಕ್ಕೆ ನ.26ಕ್ಕೆ ಒಂದು ವರ್ಷವಾಗಲಿದೆ. ಸಂಸತ್ತಿನಲ್ಲಿ ಕೃಷಿ ಕಾಯ್ದೆಗಳನ್ನು ಹಿಂಪಡೆಯುವವರೆಗೂ ನಾವು ಹೋರಾಟವನ್ನು ಮುಂದುವರಿಸುತ್ತೇವೆ. ಆ ದಿನಕ್ಕಾಗಿ ನಾವು ಕಾಯುತ್ತಿದ್ದೇವೆ ಎಂದು ಬಿಕೆಯು ನಾಯಕ ರಾಕೇಶ್ ಟಿಕಾಯತ್ ಹೇಳಿದ್ದರು. ಅದಕ್ಕೆ ಅಮರೀಂದರ್ ಸಿಂಗ್ ಮೇಲಿನಂತೆ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಯಾವುದೇ ಕಾರಣಕ್ಕೂ ಪ್ರತಿಭಟನೆ ಹಿಂಪಡೆಯಲ್ಲ: ರಾಕೇಶ್ ಟಿಕಾಯತ್

    ಮತ್ತೊಂದು ಗಮನಾರ್ಹ ವಿಚಾರವೆಂದರೆ, ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದು ಕಾಂಗ್ರೆಸ್ ವಿರುದ್ಧ ಬಂಡಾಯ ಸಾರಿದ್ದ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು ಹೊಸ ಪಕ್ಷ ಸ್ಥಾಪಿಸುವುದಾಗಿ ಘೋಷಿಸಿದ್ದರು. ರೈತರ ಸಮಸ್ಯೆಯನ್ನು ಪರಿಹರಿಸಿದರೆ 2022ರಲ್ಲಿ ಪಂಜಾಬ್ ವಿಧಾನಸಭಾ ಚುಣಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವುದಾಗಿ ತಿಳಿಸಿದ್ದರು. ಈ ನಡುವೆ ಪ್ರಧಾನಿ ಮೋದಿ ಅವರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಘೋಷಿಸಿದ್ದಾರೆ. ಈಗ ಅಮರೀಂದರ್ ಸಿಂಗ್ ಅವರ ಮುಂದಿನ ನಡೆ ಏನೆಂಬುದು ಪ್ರಶ್ನೆಯಾಗಿದೆ.

  • ಕೃಷಿ ಕಾಯ್ದೆಗಳನ್ನು ಹಿಂಪಡೆದಿರೋ ವಿಚಾರ ಗೊತ್ತಿಲ್ಲ, ಆಗ ಹೊಲದಲ್ಲಿದ್ದೆ: ಸಚಿವ ಬಿ.ಸಿ.ಪಾಟೀಲ್

    ಕೃಷಿ ಕಾಯ್ದೆಗಳನ್ನು ಹಿಂಪಡೆದಿರೋ ವಿಚಾರ ಗೊತ್ತಿಲ್ಲ, ಆಗ ಹೊಲದಲ್ಲಿದ್ದೆ: ಸಚಿವ ಬಿ.ಸಿ.ಪಾಟೀಲ್

    ಹಾವೇರಿ: ಮೂರು ಕೃಷಿ ಕಾನೂನುಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಯಾಕೆ ವಾಪಸ್ ಪಡೆದರೆಂಬ ವಿಚಾರ ಗೊತ್ತಿಲ್ಲ. ಆಗ ನಾನು ಹೊಲದಲ್ಲಿದ್ದೆ, ತಿಳಿದುಕೊಂಡು ಹೇಳುತ್ತೇನೆ ಎಂದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಪ್ರತಿಕ್ರಿಯಿಸಿದ್ದಾರೆ.

    ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲೂಕಿನ ಹಳ್ಳೂರು, ಪುರದಕೇರಿ ಗ್ರಾಮಗಳಲ್ಲಿ ಬೆಳೆ ಹಾನಿ ಪರಿಶೀಲನೆ ನಂತರ ಮಾತನಾಡಿದ ಅವರು, ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದ ವಿಚಾರವಾಗಿ ನನಗೆ ಇನ್ನೂ ಮಾಹಿತಿ ಬಂದಿಲ್ಲ. ಮಾಹಿತಿ ಬಂದ ನಂತರ ಹೇಳುತ್ತೇನೆ. ಕಾಯ್ದೆಗಳನ್ನು ಯಾವ ಕಾರಣಕ್ಕೆ ತೆಗೆದಿದ್ದಾರೆ, ಏನು ಮಾಡಿದ್ದಾರೆ. ಪ್ರಧಾನಿಯವರು ಏನು ಹೇಳಿದ್ದಾರೆ ಗೊತ್ತಿಲ್ಲ. ಅದರ ಬಗ್ಗೆ ತಿಳಿದುಕೊಂಡು, ಪರಿಶೀಲನೆ ಮಾಡಿ ಪ್ರತಿಕ್ರಿಯಿಸುತ್ತೇನೆ ಎಂದು ತಿಳಿಸಿದ್ದಾರೆ.

    ಅಕಾಲಿಕ ಮಳೆಯಿಂದ ಭತ್ತ, ಜೋಳ, ಬಾಳೆ ನೆಲಕಚ್ಚಿದೆ. ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ. ಕಂದಾಯ ಇಲಾಖೆಯವರ ಜೊತೆ ಸೇರಿ ಸಮೀಕ್ಷೆ ಮಾಡಿ ವರದಿ ಕೊಡುವಂತೆ ತಿಳಿಸಿದ್ದೇನೆ. ಚಿಕ್ಕಕಬ್ಬಾರ, ಹಿರೇಕಬ್ಬಾರ, ಚಟ್ನಳ್ಳಿ, ಪುರುದಕೇರಿ ಭಾಗದಲ್ಲಿ ನಾನೂ ಕೂಡ ವೀಕ್ಷಣೆ ಮಾಡಿದ್ದೇನೆ. ಕೂಡಲೆ ನಷ್ಟದ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ವರದಿ ಕೊಟ್ಟ ನಂತರ ಸರ್ಕಾರದಿಂದ ರೈತರಿಗೆ ಪರಿಹಾರ ಕೊಡುವ ಕೆಲಸ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ.

    ಜುಲೈನಿಂದ ಇಲ್ಲಿಯವರೆಗೆ 10 ಲಕ್ಷ 73 ಸಾವಿರ ಹೆಕ್ಟೇರ್ ಬೆಳೆ ಹಾನಿಯಾಗಿದೆ. ಅದಕ್ಕೆ ಪರಿಹಾರ ಒದಗಿಸಲು ಕ್ರಮ ಕೈಗೊಂಡಿದ್ದೇವೆ. ಎನ್‍ಡಿಆರ್‌ಎಫ್‌ ಮತ್ತು ಎಸ್‍ಡಿಆರ್‌ಎಫ್‌ ನಿಯಮದಂತೆ ಪರಿಹಾರ ಒದಗಿಸಲು ಪ್ರಮಾಣಿಕ ಪ್ರಯತ್ನ ಮಾಡುತ್ತೇವೆ. ಸಿಎಂ ಅವರಿಗೂ ಪರಿಹಾರಕ್ಕಾಗಿ ಒತ್ತಾಯ ಮಾಡುತ್ತೇನೆ. ಕೂಡಲೆ ಹಣ ಬಿಡುಗಡೆ ಮಾಡಿ ರೈತರಿಗೆ ಸಂದಾಯ ಆಗಬೇಕು. ಚಿಕ್ಕಬಳ್ಳಾಪುರ, ಕೋಲಾರ, ಬಳ್ಳಾರಿ, ತುಮಕೂರು ಜಿಲ್ಲೆ ಸೇರಿದಂತೆ ರಾಜ್ಯದ ಹಲವೆಡೆ ಹೆಚ್ಚಿನ ಪ್ರಮಾಣದ ಹಾನಿ ಆಗಿದೆ. ರಾಜ್ಯದಲ್ಲಿ ಎಲ್ಲೆಲ್ಲಿ ಹಾನಿ ಆಗಿದೆ. ಅದರ ಬಗ್ಗೆ ಪರಿಶೀಲನೆ ಮಾಡಿ ವರದಿ ಕೊಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.

  • ಪ್ರತಿಭಟನೆಯಿಂದ ಸಾಧಿಸಲಾಗದ್ದು, ಚುನಾವಣೆ ಭಯ ಸಾಧಿಸುತ್ತದೆ: ಪಿ. ಚಿದಂಬರಂ

    ಪ್ರತಿಭಟನೆಯಿಂದ ಸಾಧಿಸಲಾಗದ್ದು, ಚುನಾವಣೆ ಭಯ ಸಾಧಿಸುತ್ತದೆ: ಪಿ. ಚಿದಂಬರಂ

    ನವದೆಹಲಿ: ಪ್ರತಿಭಟನೆಯಿಂದ ಸಾಧಿಸಲಾಗದ್ದು, ಚುನಾವಣೆ ಭಯದಿಂದ ಸಾಧಿಸಬಹುದು ಎಂದು ಕಾಂಗ್ರೆಸ್ ಹಿರಿಯ ನಾಯಕ ಪಿ. ಚಿದಂಬರಂ ಕೃಷಿ ಕಾನೂನು ವಾಪಸ್ ಪಡೆದಿರುವ ವಿಚಾರವಾಗಿ ಟ್ವೀಟ್ ಮಾಡಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?: ಪ್ರಜಾಸತ್ತಾತ್ಮಕ ಪ್ರತಿಭಟನೆಗಳಿಂದ ಏನನ್ನು ಸಾಧಿಸಲಾಗದೋ ಅದನ್ನು ಮುಂಬರುವ ಚುನಾವಣೆಯ ಭಯದಿಂದ ಸಾಧಿಸಬಹುದು. ಮೂರು ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವ ಕುರಿತು ಪ್ರಧಾನ ಮಂತ್ರಿಯವರ ಘೋಷಣೆಯು ಯಾವುದೇ ನೀತಿಯ ಬದಲಾವಣೆ ಅಥವಾ ಹೃದಯದ ಬದಲಾವಣೆಯಿಂದ ಪ್ರೇರಿತವಾಗಿಲ್ಲ. ಇದು ಚುನಾವಣೆಯ ಭಯದಿಂದ ಪ್ರಚೋದಿಸಲ್ಪಟ್ಟಿದೆ. ಅದೇನೇ ಇರಲಿ, ಇದು ರೈತರಿಗೆ ಮತ್ತು ಈ ಕಾನೂನುಗಳ ವಿರುದ್ಧ ಅಚಲವಾಗಿ ನಿಂತಿದ್ದ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ವಿಜಯವಾಗಿದೆ ಎಂದು ಚಿದಂಬರಂ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಸರ್ಕಾರ ಅನ್ನದಾತನ ಮುಂದೆ ಮಂಡಿಯೂರಿದೆ: ಡಿ.ಕೆ. ಶಿವಕುಮಾರ್

     

    ದೇಶವನ್ನು ಉದ್ದೇಶಿಸಿ ಮಾತನಾಡಿದ ನರೇಂದ್ರ ಮೋದಿ ಅವರು, ಕೃಷಿ ತಿದ್ದುಪಡಿ ಕಾಯ್ದೆ ಹಿಂಪಡೆಯಲು ರೈತರ ನಿರಂತರ ಹೋರಾಟ ಹಿನ್ನೆಲೆ ಕಾಯ್ದೆಗಳು ವಾಪಸ್ ತೆಗೆದುಕೊಳ್ಳಲಾಗುವುದು. 3 ಕೃಷಿ ತಿದ್ದುಪಡಿ ಕಾಯ್ದೆ ಹಿಂಪಡೆಯುತ್ತಿದ್ದೇವೆ. ಅದಕ್ಕಾಗಿ ಸಮಿತಿ ರಚಿಸುತ್ತೇವೆ. ಇದರಲ್ಲಿ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ, ರೈತರು ಮತ್ತು ಕೃಷಿ ತಜ್ಞರು ಇರಲಿದ್ದಾರೆ. ರೈತರು ಹೋರಾಟವನ್ನು ಕೈ ಬಿಡಿ ಎಂದು ಮೋದಿ ರೈತರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ:   ಕೃಷಿ ಕಾಯ್ದೆ ವಾಪಸ್ ಪಡೆದ ಮೋದಿ ಸರ್ಕಾರ

     

    ಇತ್ತೀಚೆಗೆ ಭಾರೀ ಚರ್ಚೆಯಾಗಿ ವಿವಾದಕ್ಕೆ ತುತ್ತಾಗಿದ್ದ ಕೃಷಿ ಸಂಬಂಧಿತ ಮೂರೂ ಮಸೂದೆಗಳನ್ನು ವಾಪಸ್ ತೆಗೆದುಕೊಳ್ಳುತ್ತೇವೆ. ನಮ್ಮ ನಿರ್ಣಯದಲ್ಲಿಯೇ ಎಲ್ಲೋ ತಪ್ಪು ಆಗಿರಬಹುದು. ಹಾಗಾಗಿ ನಾನು ದೇಶವಾಸಿಗಳಲ್ಲಿ ಕ್ಷಮೆ ಕೋರುವೆ. ತನ್ಮೂಲಕ ಮೂರೂ ಕೃಷಿ ಮಸೂದೆಗಳನ್ನು ಇದೇ ತಿಂಗಳು ಸಂಸತ್ತಿನಲ್ಲಿ ವಾಪಸ್ ತೆಗೆದುಕೊಳ್ಳುವೆ. ರೈತ ಬಂಧುಗಳು ತಮ್ಮ ತಮ್ಮ ಹೊಲ, ತೋಟಗಳಿಗೆ ವಾಪಸ್ ಹೋಗಿ, ಕೃಷಿಯಲ್ಲಿ ತೊಡಗಿರಿ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

  • ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಬಿಜೆಪಿ ಈ ನಿರ್ಧಾರ ತೆಗೆದುಕೊಂಡಿದೆ: ಶ್ರೀನಿವಾಸ್ ಬಿ.ವಿ

    ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಬಿಜೆಪಿ ಈ ನಿರ್ಧಾರ ತೆಗೆದುಕೊಂಡಿದೆ: ಶ್ರೀನಿವಾಸ್ ಬಿ.ವಿ

    ನವದೆಹಲಿ: ಕೇಂದ್ರ ಸರ್ಕಾರ ಕೃಷಿ ಕಾನೂನು ವಾಪಸ್ ಪಡೆದುಕೊಂಡಿರುವುದು ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಬಿಜೆಪಿ ಈ ನಿರ್ಧಾರ ತೆಗೆದುಕೊಂಡಿದೆ ಎಂದು ಯೂಥ್ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿ.ವಿ ಹೇಳಿದ್ದಾರೆ.

    ದೆಹಲಿಯಲ್ಲಿ ಪಬ್ಲಿಕ್ ಟಿವಿಗೆ ಜೊತೆಗೆ ಮಾತನಾಡಿದ ಅವರು, ಗಾಂಧಿಯ ಶಾಂತಿಯ ತತ್ವ ಮತ್ತೊಮ್ಮೆ ಸಾಬೀತಾಗಿದೆ. ಶಾಂತಿಯುತ ಹೋರಾಟದಿಂದ ಎಲ್ಲವನ್ನೂ ಗೆಲ್ಲಬಹುದಾಗಿದೆ, ಅನ್ನದಾತರು ಇದನ್ನು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ ಎಂದಿದ್ದಾರೆ.  ಇದನ್ನೂ ಓದಿ: ಸರ್ಕಾರ ಅನ್ನದಾತನ ಮುಂದೆ ಮಂಡಿಯೂರಿದೆ: ಡಿ.ಕೆ. ಶಿವಕುಮಾರ್

    ನೂರಾರು ರೈತರು ಹುತಾತ್ಮರಾದರೂ ಅನ್ನದಾತರು ಶಾಂತಿಯುತ ಪ್ರತಿಭಟನೆ ನಡೆಸಿದರು. ಮುಂಬರುವ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ನಿರ್ಧಾರ ಬಿಜೆಪಿ ತೆಗೆದುಕೊಂಡಿದೆ. ಬೈ ಎಲೆಕ್ಷನ್ ನಲ್ಲಿ ಬಿಜೆಪಿಗೆ ಹಿನ್ನಡೆಯಾಗಿದೆ. ಆತಂರಿಕ ವರದಿಯಲ್ಲಿ ನೆಗೆಟಿವ್ ರಿಪೋರ್ಟ್ ಬಂದಿದೆ. ಇದಕ್ಕೆ ಬೆದರಿರುವ ಮೋದಿ ಸರ್ಕಾರ ಕಾನೂನು ವಾಪಸ್ ಪಡೆದಿದೆ. ಇದು ರೈತರ ಹೋರಾಟಕ್ಕೆ ಸಂದ ಅತಿದೊಡ್ಡ ಜಯವಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:   ಕೃಷಿ ಕಾಯ್ದೆ ವಾಪಸ್ ಪಡೆದ ಮೋದಿ ಸರ್ಕಾರ

  • ಪ್ರತಿಷ್ಠೆಗೆ ಮಣಿದು ಕೃಷಿ ಕಾಯ್ದೆ ಹಿಂಪಡೆದಿಲ್ಲ, ರೈತರ ಹಿತ ಮುಖ್ಯ: ಬಿಎಸ್‍ವೈ

    ಪ್ರತಿಷ್ಠೆಗೆ ಮಣಿದು ಕೃಷಿ ಕಾಯ್ದೆ ಹಿಂಪಡೆದಿಲ್ಲ, ರೈತರ ಹಿತ ಮುಖ್ಯ: ಬಿಎಸ್‍ವೈ

    ಹುಬ್ಬಳ್ಳಿ: ಯಾವುದೇ ಚುನಾವಣೆಯನ್ನು ಕಣ್ಮುಂದೆ ಇಟ್ಟುಕೊಂಡು ಈ ರೀತಿ ತೀರ್ಮಾನ ಮಾಡಿಲ್ಲ. ನಮ್ಮ ಕಾಯ್ದೆಯಲ್ಲಿ ಲೋಪದೋಷ ಇಲ್ಲ ಅಂತ ಹೇಳಿದ್ದು ನಿಜ. ಆದರೆ ರೈತರ ಹಿತಕ್ಕಾಗಿ ಕೃಷಿ ಕಾಯ್ದೆ ಹಿಂಪಡೆದಿದ್ದೇವೆ. ಇದರಲ್ಲಿ ಸೋಲು ಗೆಲುವು ಪ್ರಶ್ನೆ ಇಲ್ಲ, ಇದು ಉತ್ತಮ ನಿರ್ಧಾರ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

    ಕೇಂದ್ರ ಸರ್ಕಾರ ಕೃಷಿ ಕಾಯಿದೆ ಹಿಂಪಡೆದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಐತಿಹಾಸಿಕ ತೀರ್ಮಾನವನ್ನು ಈಗ ತೆಗೆದುಕೊಂಡಿದ್ದಾರೆ. ರೈತ ಸಮೂಹಕ್ಕೆ ಒಂದು ಒಳ್ಳೆಯ ತೀರ್ಮಾನದ ಮೂಲಕ ಖುಷಿ ಕೊಟ್ಟಿದ್ದಾರೆ. ಕೃಷಿ ಕಾಯ್ದೆ ಹೋರಾಟದಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರುತ್ತೇವೆ. ಚುನಾವಣೆ ಆಧಾರದ ಮೇಲೆ ಈ ನಿರ್ಧಾರ ಕೈಗೊಂಡಿಲ್ಲ. ಆ ಸಂದರ್ಭದಲ್ಲಿ ಏನೆಲ್ಲಾ ಆಯ್ತು ಎನ್ನುವುದು ಬೇರೆ. ಆದರೆ ಒಣ ಪ್ರತಿಷ್ಠೆಗೆ ಒಳಗಾಗದೆ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅವರು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಪ್ರತಿಭಟನೆ ಕೈ ಬಿಡುವಂತೆ ರೈತರಲ್ಲಿ ಮೋದಿ ಮನವಿ

    ಬಿಟ್‍ಕಾಯಿನ್ ವಿಚಾರವಾಗಿ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿ ಸೇರಿದಂತೆ ಪ್ರಧಾನಿ ಸಹ ಹೇಳಿದ್ದಾರೆ. ಇದೊಂದು ಆಕ್ಷಮ್ಯ ಅಪರಾಧ, ಯಾರೇ ತಪ್ಪು ಮಾಡಿದ್ದರೂ, ಅವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗುತ್ತೇವೆ. ಬಿಎಸ್‍ವೈ ರಾಜಕೀಯಕ್ಕೆ ಕಡಿವಾಣ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಯಾವುದೇ ಕಡಿವಾಣ ನನಗೆ ಹಾಕಿಲ್ಲ. ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಕ್ಕೆ ಹಿಂದೆ ಮುಂದೆ ನೋಡುತ್ತಾರೆ. ಆದರೆ ನಾನು ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿ ಬಂದಿದ್ದೇನೆ. ರಾಜ್ಯದ ಉದ್ದಗಲಕ್ಕೂ ಸಹ ಪ್ರವಾಸ ಮಾಡುತ್ತಿದ್ದೇನೆ. ಎಲ್ಲಿಯೇ ಹೋದರೂ ನಮ್ಮ ಯಡಿಯೂರಪ್ಪ ಅಂತ ಅಭಿಮಾನ ತೋರಿಸುತ್ತಿದ್ದಾರೆ ಎಂದು ಸಂತೋಷ ವ್ಯಕ್ತಪಡಿಸಿದರು. ಇದನ್ನೂ ಓದಿ: ಆ ಮೂರು ವಿವಾದಿತ ಕೃಷಿ ಕಾಯ್ದೆ ಯಾವುದು?- ರೈತರ ಹೋರಾಟಕ್ಕೆ ಜಯ ಸಿಕ್ಕಿದ್ದೇಗೆ?

    ಇತ್ತೀಚೆಗೆ ಮಳೆಯಿಂದಾಗಿ ರೈತರ ಬೆಳೆ ಸಂಪೂರ್ಣ ನಾಶವಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತರ ಪರವಾಗಿದೆ. ಅವರ ಸಂಕಷ್ಟಕ್ಕೆ ನಾವು ಸಹ ಸಹಕರಿಸಲಿದ್ದೇವೆ. ಈ ಮಳೆಯ ಅಬ್ಬರದಿಂದ ಬಹಳ ದೊಡ್ಡ ಪ್ರಮಾಣದಲ್ಲಿ ಸಮಸ್ಯೆಯಾಗಿದೆ. ಬೆಂಗಳೂರು ಸೇರಿದಂತೆ ಎಲ್ಲ ಕಡೆ ಇದೆ ಪರಸ್ಥಿತಿ ಇದೆ ಎಂದು ಅಭಿಪ್ರಾಯಪಟ್ಟರು.

  • ಸರ್ಕಾರ ಅನ್ನದಾತನ ಮುಂದೆ ಮಂಡಿಯೂರಿದೆ: ಡಿ.ಕೆ. ಶಿವಕುಮಾರ್

    ಸರ್ಕಾರ ಅನ್ನದಾತನ ಮುಂದೆ ಮಂಡಿಯೂರಿದೆ: ಡಿ.ಕೆ. ಶಿವಕುಮಾರ್

    -ದೇಶದ ಅನ್ನದಾತ, ಕಾಂಗ್ರೆಸ್ ಹೋರಾಟಕ್ಕೆ ಸಿಕ್ಕ ಜಯ

    ನವದೆಹಲಿ: ಮೂರು ಕರಾಳ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂಬ ದೇಶದ ಅನ್ನದಾತರ ಹೋರಾಟಕ್ಕೆ ಮಣಿದಿರುವ ಕೇಂದ್ರ ಸರ್ಕಾರ ತಿದ್ದುಪಡಿ ಕಾಯ್ದೆ ವಾಪಸ್ ಪಡೆದಿದೆ. ಇದು ದೇಶದ ಅನ್ನದಾತ ಮತ್ತು ಕಾಂಗ್ರೆಸ್ ನ ಹೋರಾಟಕ್ಕೆ ಸಂದ ಚಾರಿತ್ರಿಕ ಜಯ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

    ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿ ಅವರ ಜನ್ಮದಿನವಾದ ಶುಕ್ರವಾರ ದೆಹಲಿಯಲ್ಲಿರುವ ಅವರ ಸ್ಮಾರಕ ಶಕ್ತಿ ಸ್ಥಳ ಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತೆರಳಿ ಪುಷ್ಪನಮನ ಸಲ್ಲಿಸಿದರು. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿದ್ದ ಮೂರು ಕೃಷಿ ಕಾಯ್ದೆಗಳು ಎಪಿಎಂಸಿ ಮಾರುಕಟ್ಟೆಗೆ ಮಾರಕವಾಗಿದ್ದವು. ಬೆಂಬಲ ಬೆಲೆಗೆ ಕಾನೂನು ರಕ್ಷಣೆ ನೀಡಿರಲಿಲ್ಲ. ದೇಶದ ಕೃಷಿ ಕ್ಷೇತ್ರದಲ್ಲಿ ಖಾಸಗಿಯವರ ಪ್ರವೇಶ, ಒಪ್ಪಂದ ಕೃಷಿ ಸೇರಿದಂತೆ ಇತರೆ ಅಂಶಗಳು ರೈತರ ಭವಿಷ್ಯವನ್ನೇ ಸಮಾಧಿ ಮಾಡುತ್ತಿದ್ದವು. ಈ ಹಿನ್ನೆಲೆಯಲ್ಲಿ ದೇಶದ ಅನ್ನದಾತರು ಚಳಿ, ಮಳೆ, ಬಿಸಿಲೆನ್ನದೆ ಬೀದಿಗಿಳಿದು ಸುದೀರ್ಘ ಹೋರಾಟ ಮಾಡಿದ್ದರು. ಈ ಹೋರಾಟ ಹತ್ತಿಕ್ಕಲು ಸರ್ಕಾರ ಅಧಿಕಾರ, ಪೊಲೀಸ್ ಬಲ ಪ್ರಯೋಗಿಸಿತ್ತು. ಇದ್ಯಾವುದಕ್ಕೂ ಜಗ್ಗದ ರೈತರು ತಮ್ಮ ಭವಿಷ್ಯ ರಕ್ಷಣೆಗೆ ಬದ್ಧವಾಗಿ ನಿಂತರು ಎಂದಿದ್ದಾರೆ. ಇದನ್ನೂ ಓದಿ:   ಕೃಷಿ ಕಾಯ್ದೆ ವಾಪಸ್ ಪಡೆದ ಮೋದಿ ಸರ್ಕಾರ

    ಈ ಹೋರಾಟದಲ್ಲಿ 600ಕ್ಕೂ ಹೆಚ್ಚು ರೈತರು ಪ್ರಾಣ ತ್ಯಾಗ ಮಾಡಿದ್ದು, ಕೇಂದ್ರ ಸರ್ಕಾರ ಇದೀಗ ಅನ್ನದಾತನ ಮುಂದೆ ಮಂಡಿಯೂರಿದೆ. ದೇಶದ ಅನ್ನದಾತನನ್ನು ಎದುರುಹಾಕಿಕೊಂಡು ಉಳಿದವರಿಲ್ಲ. ಅಂದು ಬ್ರಿಟೀಷರು ರೈತರ ಮೇಲೆ ದಬ್ಬಾಳಿಕೆ ನಡೆಸಿ ದೇಶದಿಂದ ಕಾಲ್ಕಿತ್ತರು. ಇಂದು ಬಿಜೆಪಿ ಅದೇ ತಪ್ಪು ಮಾಡಿ ಬುದ್ಧಿ ಕಲಿತಿದೆ ಎಂದು ಶಿವಕುಮಾರ್ ಅವರು ಹೇಳಿದ್ದಾರೆ.

    ಹೋರಾಟದಲ್ಲಿ ಭಾಗವಹಿಸಿದ ಪ್ರತಿಯೊಬ್ಬ ರೈತನೂ ದೇಶದ ರಕ್ಷಣೆಯಲ್ಲಿ ಯೋಧನಂತೆ ಕೆಲಸ ಮಾಡಿದ್ದಾರೆ. ಇದು ಸರ್ವಾಧಿಕಾರಿ ಧೋರಣೆ ವಿರುದ್ಧ ಪ್ರಜಾಪ್ರಭುತ್ವಕ್ಕೆ ಸಿಕ್ಕ ಗೆಲುವು. ದುಷ್ಟ ಮನಸ್ಥಿತಿ ವಿರುದ್ಧ ಸಿಕ್ಕ ಗೆಲುವು. ರೈತರ ಹಿತದೃಷ್ಟಿಯಿಂದ ಕಾಂಗ್ರೆಸ್ ಕೂಡ ರೈತರ ಈ ಹೋರಾಟಕ್ಕೆ ಬೆಂಬಲ ಸೂಚಿಸಿತ್ತು. ಕಾಂಗ್ರೆಸ್ ಪಕ್ಷ ಸಂಸತ್ತಿನ ಉಭಯ ಸದನಗಳು, ರಾಜ್ಯ ವಿಧಾನ ಮಂಡಲಗಳಲ್ಲಿ ಈ ಕರಾಳ ಕೃಷಿ ಕಾಯ್ದೆ ವಿರುದ್ಧ ಹೋರಾಟ ಮಾಡಿತ್ತು. ಬೀದಿಗಿಳಿದು ಪ್ರತಿಭಟನೆ ಮಾಡಿತ್ತು. ಈ ಕರಾಳ ಕಾಯ್ದೆಯ ಹಿಂದೆ ಅಡಗಿರುವ ಕೇಂದ್ರ ಸರ್ಕಾರದ ಷಡ್ಯಂತ್ರವನ್ನು ಜನರಿಗೆ ತಿಳಿಸುವ ಪ್ರಯತ್ನ ಮಾಡಿದ್ದೆವು. ಕೇಂದ್ರ ಸರ್ಕಾರ ಇನ್ನುಮುಂದಾದರು ತನ್ನ ಸರ್ವಾಧಿಕಾರಿ ಮನಃಸ್ಥಿತಿಯಿಂದ ಹೊರಬಂದು ಏಕಪಕ್ಷೀಯ ನಿರ್ಧಾರ ಕೈಗೊಳ್ಳುವುದನ್ನು ನಿಲ್ಲಿಸಬೇಕು. ದೇಶ ಹಾಗೂ ಅನ್ನದಾತನ ಹಿತದೃಷ್ಟಿಯಿಂದ ಎಲ್ಲರ ಜತೆ ಚರ್ಚೆ ಮಾಡಬೇಕು ಎಂದು ಈ ಸಮಯದಲ್ಲಿ ಸರ್ಕಾರಕ್ಕೆ ಆಗ್ರಹಿಸುತ್ತೇನೆ ಎಂದು ಹೇಳಿದ್ದಾರೆ.

    ಕಾಂಗ್ರೆಸ್ ಎಂದೆಂದಿಗೂ ರೈತರು ಸೇರಿದಂತೆ ಎಲ್ಲ ವರ್ಗವರ ಜೊತೆಗೆ ಇರಲಿದೆ. ಅವರ ಹಿತಾಸಕ್ತಿಗೆ ಧಕ್ಕೆಯಾದರೆ ಹೋರಾಟ ಮಾಡಲಿದೆ ಎಂದೂ ಶಿವಕುಮಾರ್ ಅವರು ತಿಳಿಸಿದ್ದಾರೆ.

  • ರೈತರ ಹೋರಾಟಕ್ಕೆ ಬೆಲೆ ಕೊಟ್ಟ ಸರ್ಕಾರದ ನಿರ್ಧಾರಕ್ಕೆ ಸ್ವಾಗತ:  ಎಚ್‌ಡಿಡಿ

    ರೈತರ ಹೋರಾಟಕ್ಕೆ ಬೆಲೆ ಕೊಟ್ಟ ಸರ್ಕಾರದ ನಿರ್ಧಾರಕ್ಕೆ ಸ್ವಾಗತ: ಎಚ್‌ಡಿಡಿ

    ಬೆಂಗಳೂರು: ಕೇಂದ್ರ ಸರ್ಕಾರ ವಿವಾದಿತ 3 ಕೃಷಿ ಕಾಯ್ದೆ ವಾಪಸ್ ಪಡೆದಿದೆ. ಮಾಜಿ ಪ್ರಧಾನಿ ದೇವೇಗೌಡ ಟ್ವೀಟ್ ಮಾಡಿ ಕೇಂದ್ರದ ನಿರ್ಧಾರಕ್ಕೆ ಸ್ವಾಗತ ಕೋರಿದ್ದಾರೆ.

    ನಾನು ಪ್ರಧಾನಿಯನ್ನು ಸ್ವಾಗತಿಸುತ್ತೇನೆ. ರೈತರ ಹೋರಾಟಕ್ಕೆ ಬೆಲೆ ಕೊಟ್ಟ ಸರ್ಕಾರದ ನಿರ್ಧಾರ ಸ್ವಾಗತ ಮಾಡೋದಾಗಿ ಟ್ವೀಟ್ ಮಾಡಿ ಶುಭ ಕೊರಿದ್ದಾರೆ. ಇದನ್ನೂ ಓದಿ:   ಕೃಷಿ ಕಾಯ್ದೆ ವಾಪಸ್ ಪಡೆದ ಮೋದಿ ಸರ್ಕಾರ

    ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ. ಈ ವೇಳೆ ರೈತರ ಆರ್ಥಿಕ, ಸಾಮಾಜಿಕ ಸ್ಥಿತಿ ಸುಧಾರಿಸಲು ಪ್ರಯತ್ನ ಮಾಡಲಾಗುತ್ತಿದ್ದು, 3 ಕಾಯ್ದೆ ಜಾರಿಗೆ ತಂದಿದ್ದೆವು. ಸಣ್ಣ ರೈತರ ಒಳಿತಿಗಾಗಿಯೇ ಕೃಷಿ ಕಾಯ್ದೆ ಜಾರಿಗೆ ತಂದಿದ್ದೆವು. ಈ 3 ಕಾನೂನುಗಳು ಸಂಪೂರ್ಣವಾಗಿ ರೈತರ ಪರವಾಗಿದ್ದವು. ರೈತರ ಹಿತ ದೃಷ್ಟಿಯಲ್ಲಿಟ್ಟುಕೊಂಡೇ ಕಾಯ್ದೆ ಜಾರಿ ಮಾಡಲಾಗಿತ್ತು. ಯೋಜನೆ ಬಗ್ಗೆ ರೈತರಿಗೆ ತಿಳಿಸುವಲ್ಲಿ ಸಾಕಷ್ಟು ಯತ್ನಿಸಿದ್ದೇವೆ. ಆದರೆ ಕೆಲವು ರೈತರು ಕಾಯ್ದೆಯನ್ನು ಅವರ ಸಲಹೆ ಒಪ್ಪಿಕೊಂಡಿದ್ದರೂ ವಿರೋಧಿಸುತ್ತಿದ್ದಾರೆ. ರೈತರ ನಿರಂತರ ಹೋರಾಟದ ಹಿನ್ನೆಲೆಯಲ್ಲಿ ಇದೀಗ ಸರ್ಕಾರ ಮೂರು ಕೃಷಿ ಕಾಯ್ದೆ ವಾಪಸ್ ಪಡೆಯಲು ನಿರ್ಧರಿಸಲಾಗಿದೆ ಎಂದು ಪ್ರಧಾನಿ ಘೋಷಿಸಿದ್ದಾರೆ ಎಂದು ತಿಳಿಸಿದ್ದಾರೆ.

    ಕೃಷಿ ಮಾರುಕಟ್ಟೆ ಆಧುನೀಕರಣಕ್ಕೆ ಕೋಟ್ಯಂತರ ರೂ. ಖರ್ಚು ಮಾಡಲಾಗುತ್ತಿದೆ. ರೈತರು ಈಗ ಎಲ್ಲಿ ಬೇಕಾದರೂ ತಮ್ಮ ಬೆಳೆ ಮಾರಬಹುದು. ಕೃಷಿ ಬಜೆಟ್ ಮೊದಲಿಗಿಂತ 5 ಪಟ್ಟು ಹೆಚ್ಚಿಸಿದ್ದೇವೆ. ರೈತರಿಗೆ 22 ಕೋಟಿ ಸಾಯಿಲ್ ಹೆಲ್ತ್ ಕಾರ್ಡ್ ನೀಡಿದ್ದೇವೆ ಎಂದು ಪ್ರಧಾನಿ ಹೇಳಿದ್ದಾರೆ.

  • ಯಾವುದೇ ಕಾರಣಕ್ಕೂ ಪ್ರತಿಭಟನೆ ಹಿಂಪಡೆಯಲ್ಲ: ರಾಕೇಶ್ ಟಿಕಾಯತ್

    ಯಾವುದೇ ಕಾರಣಕ್ಕೂ ಪ್ರತಿಭಟನೆ ಹಿಂಪಡೆಯಲ್ಲ: ರಾಕೇಶ್ ಟಿಕಾಯತ್

    ನವದೆಹಲಿ: ಕೃಷಿ ಮಸೂದೆಯನ್ನು ಕೇಂದ್ರ ಸರ್ಕಾರ ವಾಪಸ್ ಪಡೆದರೂ ಕೂಡ ನಾವು ಪ್ರತಿಭಟನೆಯನ್ನು ಹಿಂಪಡೆಯಲ್ಲ ಎಂದು ಭಾರತ್ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಹೇಳಿದ್ದಾರೆ.

    ಕೃಷಿ ಮಸೂದೆಯನ್ನು ಹಿಂಪಡೆಯುತ್ತಿದ್ದಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ರೈತರೊಂದಿಗೆ ಪ್ರತಿಭಟನೆಯನ್ನು ಕೈ ಬಿಟ್ಟು ಮನೆಗೆ ತೆರಳುವಂತೆ ಮನವಿ ಮಾಡಿದ್ದಾರೆ. ಈ ಮನವಿ ಬಳಿಕ ಸ್ಥಳೀಯ ಮಾಧ್ಯಮಗಳೊಂದಿಗೆ ಮಾತನಾಡಿದ ರಾಕೇಶ್ ಟಿಕಾಯತ್, ಕೃಷಿ ಮಸೂದೆಯನ್ನು ಸಂಸತ್ತಿನಲ್ಲಿ ಪಾಸ್ ಮಾಡಲಾಗಿತ್ತು. ಇದೀಗ ಸಂಸತ್‍ನಲ್ಲಿ ಮತ್ತೆ ಕೃಷಿ ಮಸೂದೆ ಹಿಂಪಡೆಯುವ ಬಗ್ಗೆ ಬಿಲ್ ಪಾಸ್ ಆದ ಬಳಿಕ ನಾವು ಪ್ರತಿಭಟನಾ ಸ್ಥಳದಿಂದ ತೆರಳುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೃಷಿ ಕಾನೂನು ಹಿಂಪಡೆದಾಗ ರೈತರು ಹಿಂದಿರುಗುತ್ತಾರೆ: ರಾಕೇಶ್ ಟಿಕಾಯತ್

    ಇದಲ್ಲದೆ ರೈತರ ಹಲವು ಸಮಸ್ಯೆಗಳು ಬಾಕಿ ಇದೆ. ಕನಿಷ್ಠ ಬೆಂಬಲ ಬೆಲೆ ಬಗ್ಗೆ ನರೇಂದ್ರ ಮೋದಿ ಅವರು ಯಾವುದೇ ಮಾತನಾಡಿಲ್ಲ ಈ ಬಗ್ಗೆ ನಮಗೆ ಸ್ಪಷ್ಟಪಡಿಸಿದ ಬಳಿಕ ಮನೆಗೆ ತೆರಳುವ ಬಗ್ಗೆ ರೈತರೊಂದಿಗೆ ಮಾತುಕತೆ ನಡೆಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ. ಸಂಸತ್‍ನಲ್ಲಿ ಕೃಷಿ ಮಸೂದೆ ಹಿಂಪಡೆದ ಬಿಲ್ ಪಾಸ್ ಆಗುವವರೆಗೆ ನಾವು ಯಾವುದೇ ಹೇಳಿಕೆಗಳನ್ನು ನಂಬುವುದಿಲ್ಲ ಎಂದರು. ಇದನ್ನೂ ಓದಿ: ಆ ಮೂರು ವಿವಾದಿತ ಕೃಷಿ ಕಾಯ್ದೆ ಯಾವುದು?- ರೈತರ ಹೋರಾಟಕ್ಕೆ ಜಯ ಸಿಕ್ಕಿದ್ದೇಗೆ?

    ಕೃಷಿ ಮಸೂದೆ ಹಿಂಪಡೆದ ಬಗ್ಗೆ ಮಾಹಿತಿ ಸಿಕ್ಕಂತೆ ನಾನು ನಮ್ಮ ರೈತ ಹೋರಾಟದಲ್ಲಿರುವ ರೈತರೊಂದಿಗೆ ಮಾತುಕತೆ ನಡೆಸುತ್ತೇನೆ ಆ ಬಳಿಕ ಅವರು ಕೊಡುವಂತಹ ಸೂಚನೆಯ ಮೇಲೆ ನಮ್ಮ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:   ಕೃಷಿ ಕಾಯ್ದೆ ವಾಪಸ್ ಪಡೆದ ಮೋದಿ ಸರ್ಕಾರ

    ಕೇಂದ್ರ ಸರ್ಕಾರ ವಿವಾದಿತ ಮೂರು ಕೃಷಿ ಕಾನೂನು ಹಿಂಪಡೆದ ದಿನ ರೈತರು ಪ್ರತಿಭಟನಾ ಸ್ಥಳದಿಂದ ಹಿಂದಿರುಗುತ್ತಾರೆ ಎಂದು ನಾಯಕ ರಾಕೇಶ್ ಟಿಕಾಯತ್ ‌ ಈ ಹಿಂದೆ ಹೇಳಿದ್ದರು. ರೈತರು ದೆಹಲಿಯ ಗಡಿಯಿಂದ ಹಿಂದಿರುಗಲ್ಲ. ಆದ್ರೆ ಒಂದು ಷರತ್ತಿನ ಮೇಲೆ ರೈತರು ಹಿಂದಿರಗಬಹುದು. ಅದು ಮೂರು ಕಾನೂನುಗಳನ್ನ ರದ್ದುಗೊಳಿಸಿ, ಎಂಎಸ್‍ಪಿ ಗೆ ಕಾನೂನು ರೂಪಿಸಿದ ದಿನ ಮನೆಗೆ ತೆರಳುತ್ತೇವೆ ಎಂದು ಹೇಳಿಕೆ ನೀಡಿದ್ದರು. ಇದನ್ನೂ ಓದಿ: ಪ್ರತಿಭಟನೆ ಕೈ ಬಿಡುವಂತೆ ರೈತರಲ್ಲಿ ಮೋದಿ ಮನವಿ

  • ಎದೆಯಗಲ ಎಷ್ಟೇ ಇಂಚಿನದ್ದಾಗಿರ್ಲಿ, ಜನಶಕ್ತಿಯ ಎದುರು ಮಣಿಯಲೇಬೇಕು: ಸಿದ್ದರಾಮಯ್ಯ

    ಎದೆಯಗಲ ಎಷ್ಟೇ ಇಂಚಿನದ್ದಾಗಿರ್ಲಿ, ಜನಶಕ್ತಿಯ ಎದುರು ಮಣಿಯಲೇಬೇಕು: ಸಿದ್ದರಾಮಯ್ಯ

    ಬೆಂಗಳೂರು: ಕೇಂದ್ರ ಸರ್ಕಾರ ವಿವಾದಿತ ಕೃಷಿ ಕಾನೂನು ವಾಪಸ್ ಪಡೆದುಕೊಂಡಿರುವ ಕುರಿತಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಲು ಸಾಲು ಟ್ವೀಟ್ ಮಾಡುವ ಮೂಲಕವಾಗಿ ರೈತರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

    ಕರಾಳ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರ ದೇಶದ ಮಣ್ಣಿನ ಮಕ್ಕಳ ಅಭೂತಪೂರ್ವ ಹೋರಾಟಕ್ಕೆ ಸಿಕ್ಕ ಗೆಲುವಾಗಿದೆ. ರೈತ ಹೋರಾಟಗಾರರಿಗೆ ಅಭಿನಂದನೆಗಳು ತಿಳಿಸಿದ್ದಾರೆ. ಕೃಷಿಕಾಯ್ದೆಯನ್ನು ರದ್ದುಗೊಳಿಸಿದರಷ್ಟೇ ಸಾಲದು ಈ ಕರಾಳ ಕಾಯ್ದೆ ರದ್ದತಿಗಾಗಿ ನಡೆದ ಹೋರಾಟದಲ್ಲಿ ಹುತಾತ್ಮರಾದ ರೈತ ಕುಟುಂಬಗಳಿಗೆ ಕೇಂದ್ರ ಸರ್ಕಾರ ತಲಾ 25 ಲಕ್ಷ ರೂಪಾಯಿ ಪರಿಹಾರ ಕೊಡಬೇಕೆಂದು ಒತ್ತಾಯಿಸುತ್ತೇನೆ ಎಂದಿದ್ದಾರೆ.

    ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ, ಎದೆಯಗಲ ಎಷ್ಟೇ ಇಂಚಿನದ್ದಾಗಿರಲಿ, ಜನಶಕ್ತಿಯ ಎದುರು ಆತ ಮಣಿಯಲೇಬೇಕು. ಇದುವೇ ಪ್ರಜಾಪ್ರಭುತ್ವದ ಸೊಗಸು. ಇದುವೇ ರೈತರ ಸ್ವಾತಂತ್ರ್ಯೋತ್ಸವ ಎಂದು ಅಭಿಪ್ರಾಯಪಟ್ಟಿದ್ದಾರೆ. ಕೃಷಿ ಕಾಯ್ದೆಯಷ್ಟೇ ಅಲ್ಲ, ಕೇಂದ್ರ ಸರ್ಕಾರದ ಪ್ರತಿಯೊಂದು ನೀತಿ ಮತ್ತು ಕಾರ್ಯಕ್ರಮಗಳು ರೈತ ವಿರೋಧಿಯಾದುದು. ಇದು ವಿರಮಿಸುವ ಕಾಲ ಅಲ್ಲ, ರೈತ ವಿರೋಧಿ ಬಿಜೆಪಿ ವಿರುದ್ಧದ ಹೋರಾಟ ಮುಂದುವರಿಯಲಿದೆ ಎಂದಿದ್ದಾರೆ. ಇದನ್ನೂ ಓದಿ: ಪ್ರತಿಭಟನೆ ಕೈ ಬಿಡುವಂತೆ ರೈತರಲ್ಲಿ ಮೋದಿ ಮನವಿ

    ರೈತರ ಹೋರಾಟಕ್ಕೆ ಸಿಕ್ಕ ಗೆಲುವಿನ ಸ್ಪೂರ್ತಿ ಕೇಂದ್ರ ಸರ್ಕಾರದ ಜನವಿರೋಧಿ ನೀತಿ ವಿರುದ್ಧದ ಜನ ಹೋರಾಟಕ್ಕೆ ನಾಂದಿಯಾಗಲಿದೆ. ಪೆಟ್ರೋಲ್-ಡೀಸೆಲ್ ಸೇರಿದಂತೆ ಅಗತ್ಯವಸ್ತುಗಳ ಬೆಲೆ ಏರಿಕೆ ವಿರುದ್ಧದ ಹೋರಾಟಕ್ಕೆ ದೇಶದ ಜನ ಅಣಿಯಾಗಿದ್ದಾರೆ. ಇದನ್ನೂ ಓದಿ:   ಕೃಷಿ ಕಾಯ್ದೆ ವಾಪಸ್ ಪಡೆದ ಮೋದಿ ಸರ್ಕಾರ

  • ಆ ಮೂರು ವಿವಾದಿತ ಕೃಷಿ ಕಾಯ್ದೆ ಯಾವುದು?- ರೈತರ ಹೋರಾಟಕ್ಕೆ ಜಯ ಸಿಕ್ಕಿದ್ದೇಗೆ?

    ಆ ಮೂರು ವಿವಾದಿತ ಕೃಷಿ ಕಾಯ್ದೆ ಯಾವುದು?- ರೈತರ ಹೋರಾಟಕ್ಕೆ ಜಯ ಸಿಕ್ಕಿದ್ದೇಗೆ?

    ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಮೂರು ವಿವಾದಿತ ಕೃಷಿ ಕಾಯ್ದೆಯನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇಂದು ವಾಪಸ್ ಪಡೆದುಕೊಂಡಿದೆ. ಈ ಮೂಲಕ ವರ್ಷದಿಂದ ಹೋರಾಟ ನಡೆಸುತ್ತಿದ್ದ ರೈತರಿಗೆ ಜಯ ಸಿಕ್ಕಿದಂತಾಗಿದೆ.

    modi

    ಮೂರು ಕೃಷಿಕಾಯ್ದೆ:
    1. ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಉತ್ತೇಜನ ಮತ್ತು ಸೌಲಭ್ಯ) ಮಸೂದೆ, Farmers’ Produce Trade and Commerce (Promotion and Facilitation) Act, 2020.
    2. ರೈತರ (ಸಬಲೀಕರಣ ಮತ್ತು ಸಂರಕ್ಷಣೆ) ಬೆಲೆ ಖಾತ್ರಿ ಮತ್ತು ಕೃಷಿ ಸೇವೆಗಳ ಒಪ್ಪಂದ ಮಸೂದೆ, (Farmers (Empowerment and Protection) Agreement on Price Assurance and Farm Services Act, 2020).
    3. ಅಗತ್ಯ ಸರಕುಗಳ (ತಿದ್ದುಪಡಿ) ಮಸೂದೆ, 2020 Essential Commodities (Amendment) Act, 2020). ಇದನ್ನೂ ಓದಿ:   ಕೃಷಿ ಕಾಯ್ದೆ ವಾಪಸ್ ಪಡೆದ ಮೋದಿ ಸರ್ಕಾರ

    ಈ ಮೂರು ಕೃಷಿ ಕಾಯ್ದೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದ ಬಳಿಕ ರೈತರು ಈ ಕಾಯ್ದೆಯ ವಿರುದ್ಧ ಪ್ರತಿಭಟನೆಗಿಳಿದರು. ದೆಹಲಿ ಗಡಿ ಪ್ರದೇಶಗಳಲ್ಲಿ ರೈತರು ವರ್ಷಾನುಗಟ್ಟಲೇ ಪ್ರತಿಭಟನೆ ನಿರತರಾಗಿದ್ದರು. ಈ ನಡುವೆ ನರೇಂದ್ರ ಮೋದಿ ಸಹಿತ ಕೇಂದ್ರ ಕೃಷಿ ಸಚಿವರು ಹಾಗೂ ಇತರ ಸಚಿವರು ರೈತರಿಗೆ ಕೃಷಿ ಮಸೂದೆ ಬಗ್ಗೆ ತಿಳಿ ಹೇಳಿದರು. ಆದರು ಕೂಡ ರೈತರು ಅದನ್ನು ಒಪ್ಪಿಕೊಳ್ಳದೆ ಪ್ರತಿಭಟನೆ ಮುಂದುವರಿಸಿದರು.

    ಸರ್ಕಾರ, ರೈತರ ನಡುವೆ ಮಾತುಕತೆ:
    ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ದೆಹಲಿ ಗಡಿಭಾಗದಲ್ಲಿ ಒಂದೂವರೆ ವರ್ಷಕ್ಕೂ ಮೇಲ್ಪಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ. ಇದವರೆಗೂ ಸರ್ಕಾರ ಮತ್ತು ರೈತರ ನಡುವೆ 10ಕ್ಕೂ ಅಧಿಕ ಬಾರಿ ಸಭೆ ನಡೆದರು ಕೂಡ ಆ ಸಭೆಗಳು ವಿಫಲವಾಗಿತ್ತು. ಇದನ್ನೂ ಓದಿ: ಪ್ರತಿಭಟನೆ ಕೈ ಬಿಡುವಂತೆ ರೈತರಲ್ಲಿ ಮೋದಿ ಮನವಿ

    ಸುಪ್ರೀಂ ತಡೆ:
    ಕೇಂದ್ರ ಸರ್ಕಾರದ ನೂತನ ಮೂರು ಕೃಷಿ ಕಾಯ್ದೆ ಜಾರಿಗೆ ಸುಪ್ರೀಂಕೋರ್ಟ್ ತಡೆ ನೀಡಿತ್ತು. ಸಮಸ್ಯೆ ಇತ್ಯರ್ಥಕ್ಕಾಗಿ ನಾಲ್ವರು ಸದಸ್ಯರ ಸಮಿತಿ ರಚನೆ ಮಾಡುವಂತೆ ಸುಪ್ರೀಂಕೋರ್ಟ್ ಸೂಚಿಸಿತ್ತು. ಸುಪ್ರೀಂಕೋರ್ಟ್ ಸಮಿತಿಯಲ್ಲಿ ಧನವಂತ್ ಶೇಖಾವತ್, ಜೀತೇಂದ್ರ ಸಿಂಗ್ ಮಾನ್, ಅಶೋಕ್ ಗುಲಾಟಿ ಮತ್ತು ಡಾ.ಪ್ರಮೋದ್ ಕುಮಾರ್ ಅವರಿದ್ದರು.

    ಈ ನಡುವೆ ಪಂಚ ರಾಜ್ಯಗಳ ಚುನಾವಣೆಗೆ ಇನ್ನೂ 1 ವರ್ಷ ಬಾಕಿ ಇರುವಂತೆ ಬಿಜೆಪಿ ಸರ್ಕಾರ ಮಸೂದೆಯನ್ನು ಹಿಂಪಡೆದಿದೆ. ಕೃಷಿ ಮಸೂದೆಯಿಂದ ಬಿಜೆಪಿಗೆ ಮುಂದಿನ ಚುನಾವಣೆಯಲ್ಲಿ ಹಿನ್ನಡೆಯಾಗಬಹುದೆಂಬ ಲೆಕ್ಕಾಚಾರಗಳೊಂದಿಗೆ ಸರ್ಕಾರ ಮಸೂದೆಯನ್ನು ವಾಪಸ್ ಪಡೆದಿದೆ. ಈ ಮೂಲಕ ದೇಶದಲ್ಲಿ ನಡೆಯುತ್ತಿದ್ದ ರೈತರ ಅತೀ ದೊಡ್ಡ ಪ್ರತಿಭಟನೆಗೆ ತೆರೆ ಬಿದ್ದಿದೆ.