Tag: farm laws

  • ಪ್ರತಿಭಟನೆ ಕೈ ಬಿಡುವಂತೆ ರೈತರಲ್ಲಿ ಮೋದಿ ಮನವಿ

    ಪ್ರತಿಭಟನೆ ಕೈ ಬಿಡುವಂತೆ ರೈತರಲ್ಲಿ ಮೋದಿ ಮನವಿ

    ನವದೆಹಲಿ: ಕೃಷಿ ಕಾನೂನು ಹಿಂಪಡೆದ ಕೇಂದ್ರ ಸರ್ಕಾರ ಇದೀಗ ಪ್ರತಿಭಟನೆಯನ್ನು ಕೈ ಬಿಡುವಂತೆ ರೈತರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮನವಿ ಮಾಡಿದ್ದಾರೆ.

    ವಿವಾದಿತ ಕೃಷಿ ಯಾಕ್ದೆಯನ್ನು ವಾಪಸ್ ಪಡೆದುಕೊಂಡಿದೆ. ರೈತರು  ನಡೆಸಿದ  355 ದಿನಗಳ ಕಾಲ ಹೋರಾಟದ ನಂತರ ಫಲ ಸಿಕ್ಕಂತಾಗಿದೆ. ಕೈಷಿ ಕಾನೂನು ಹೋರಾಟದಲ್ಲಿ 600ಕ್ಕೂ ಹೆಚ್ಚು ರೈತರು ಪ್ರಾಣ ಕಳೆದುಕೊಂಡಿದ್ದಾರೆ. ಇದನ್ನೂ ಓದಿ:   ಕೃಷಿ ಕಾಯ್ದೆ ವಾಪಸ್ ಪಡೆದ ಮೋದಿ ಸರ್ಕಾರ

    ದೇಶವನ್ನು ಉದ್ದೇಶಿಸಿ ಮಾತನಾಡಿದ ನರೇಂದ್ರ ಮೋದಿ ಅವರು, ಕೃಷಿ ತಿದ್ದುಪಡಿ ಕಾಯ್ದೆ ಹಿಂಪಡೆಯಲು ರೈತರ ನಿರಂತರ ಹೋರಾಟ ಹಿನ್ನೆಲೆ ಕಾಯ್ದೆಗಳು ವಾಪಸ್ ತೆಗೆದುಕೊಳ್ಳಲಾಗುವುದು. 3 ಕೃಷಿ ತಿದ್ದುಪಡಿ ಕಾಯ್ದೆ ಹಿಂಪಡೆಯುತ್ತಿದ್ದೇವೆ. ಅದಕ್ಕಾಗಿ ಸಮಿತಿ ರಚಿಸುತ್ತೇವೆ. ಇದರಲ್ಲಿ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ, ರೈತರು ಮತ್ತು ಕೃಷಿ ತಜ್ಞರು ಇರಲಿದ್ದಾರೆ. ರೈತರು ಹೋರಾಟವನ್ನು ಕೈ ಬಿಡಿ ಎಂದು ಮೋದಿ ರೈತರಲ್ಲಿ ಮನವಿ ಮಾಡಿಕೊಂಡಿದ್ದಾರೆ.

    ಇತ್ತೀಚೆಗೆ ಭಾರೀ ಚರ್ಚೆಯಾಗಿ ವಿವಾದಕ್ಕೆ ತುತ್ತಾಗಿದ್ದ ಕೃಷಿ ಸಂಬಂಧಿತ ಮೂರೂ ಮಸೂದೆಗಳನ್ನು ವಾಪಸ್ ತೆಗೆದುಕೊಳ್ಳುತ್ತೇವೆ. ನಮ್ಮ ನಿರ್ಣಯದಲ್ಲಿಯೇ ಎಲ್ಲೋ ತಪ್ಪು ಆಗಿರಬಹುದು. ಹಾಗಾಗಿ ನಾನು ದೇಶವಾಸಿಗಳಲ್ಲಿ ಕ್ಷಮೆ ಕೋರುವೆ. ತನ್ಮೂಲಕ ಮೂರೂ ಕೃಷಿ ಮಸೂದೆಗಳನ್ನು ಇದೇ ತಿಂಗಳು ಸಂಸತ್ತಿನಲ್ಲಿ ವಾಪಸ್ ತೆಗೆದುಕೊಳ್ಳುವೆ. ರೈತ ಬಂಧುಗಳು ತಮ್ಮ ತಮ್ಮ ಹೊಲ, ತೋಟಗಳಿಗೆ ವಾಪಸ್ ಹೋಗಿ, ಕೃಷಿಯಲ್ಲಿ ತೊಡಗಿರಿ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

  • ಕೃಷಿ ಕಾಯ್ದೆ ವಾಪಸ್ ಪಡೆದ ಮೋದಿ ಸರ್ಕಾರ

    ಕೃಷಿ ಕಾಯ್ದೆ ವಾಪಸ್ ಪಡೆದ ಮೋದಿ ಸರ್ಕಾರ

    ನವದೆಹಲಿ: ರೈತರ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ ಮೂರು ವಿವಾಧಿತ ಕೃಷಿ ಕಾನೂನನ್ನು ಸರ್ಕಾರ ವಾಪಸ್ ಪಡೆದುಕೊಂಡಿದೆ. 355ದಿನಗಳ ಸುದೀರ್ಘವಾದ  ರೈತರ ಹೋರಾಟಕ್ಕೆ ಫಲ ಸಿಕ್ಕಿದೆ.

    ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ. ಈ ವೇಳೆ ರೈತರ ಆರ್ಥಿಕ, ಸಾಮಾಜಿಕ ಸ್ಥಿತಿ ಸುಧಾರಿಸಲು ಪ್ರಯತ್ನ ಮಾಡಲಾಗುತ್ತಿದ್ದು, 3 ಕಾಯ್ದೆ ಜಾರಿಗೆ ತಂದಿದ್ದೆವು. ಸಣ್ಣ ರೈತರ ಒಳಿತಿಗಾಗಿಯೇ ಕೃಷಿ ಕಾಯ್ದೆ ಜಾರಿಗೆ ತಂದಿದ್ದೆವು. ಈ 3 ಕಾನೂನುಗಳು ಸಂಪೂರ್ಣವಾಗಿ ರೈತರ ಪರವಾಗಿದ್ದವು. ರೈತರ ಹಿತ ದೃಷ್ಟಿಯಲ್ಲಿಟ್ಟುಕೊಂಡೇ ಕಾಯ್ದೆ ಜಾರಿ ಮಾಡಲಾಗಿತ್ತು ಎಂದಿದ್ದಾರೆ.

    ಯೋಜನೆ ಬಗ್ಗೆ ರೈತರಿಗೆ ತಿಳಿಸುವಲ್ಲಿ ಸಾಕಷ್ಟು ಯತ್ನಿಸಿದ್ದೇವೆ. ಆದರೆ ಕೆಲವು ರೈತರು ಕಾಯ್ದೆಯನ್ನು ಅವರ ಸಲಹೆ ಒಪ್ಪಿಕೊಂಡಿದ್ದರೂ ವಿರೋಧಿಸುತ್ತಿದ್ದಾರೆ. ರೈತರ ನಿರಂತರ ಹೋರಾಟದ ಹಿನ್ನೆಲೆಯಲ್ಲಿ ಇದೀಗ ಸರ್ಕಾರ ಮೂರು ಕೃಷಿ ಕಾಯ್ದೆ ವಾಪಸ್ ಪಡೆಯಲು ನಿರ್ಧರಿಸಲಾಗಿದೆ ಎಂದು ಪ್ರಧಾನಿ ಘೋಷಿಸಿದ್ದಾರೆ ಎಂದು ತಿಳಿಸಿದ್ದಾರೆ.

     ರೈತರ ಸಮಸ್ಯೆ ಬಗೆಹರಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ದೇಶದಲ್ಲಿ 100ರಲ್ಲಿ 80 ಪ್ರತಿಶತ ರೈತರು ಸಣ್ಣ ಹಿಡುವಳಿ ರೈತರಾಗಿದ್ದು, 10 ಕೋಟಿಗಿಂತ ಹೆಚ್ಚು ಸಣ್ಣ ರೈತರಿದ್ದಾರೆ. ಅವರ ಸಮಸ್ಯೆಗಳನ್ನು ನಾನು ಅರಿತಿದ್ದೇನೆ. ಅದನ್ನು ಬಗೆಹರಿಸಲು ಪ್ರಯತ್ನ ಮಾಡಲಾಗುತ್ತಿದ್ದು, ಬೀಜ, ವಿಮೆ, ಮಾರುಕಟ್ಟೆ, ಉಳಿತಾಯಕ್ಕೆ ಯೋಜನೆಗಳಿಗಾಗಿ ರೈತರಿಗೆ ಫಸಲ್ ಬಿಮಾ, ಪೆನ್ಷನ್‌ ಯೋಜನೆ ಜಾರಿಗೆ ತಂದಿದ್ದೇವೆ ಎಂದು ತಿಳಿಸಿದ್ದಾರೆ.

    ಕೃಷಿ ಮಾರುಕಟ್ಟೆ ಆಧುನೀಕರಣಕ್ಕೆ ಕೋಟ್ಯಂತರ ರೂ. ಖರ್ಚು ಮಾಡಲಾಗುತ್ತಿದೆ. ರೈತರು ಈಗ ಎಲ್ಲಿ ಬೇಕಾದರೂ ತಮ್ಮ ಬೆಳೆ ಮಾರಬಹುದು. ಕೃಷಿ ಬಜೆಟ್‌ ಮೊದಲಿಗಿಂತ 5 ಪಟ್ಟು ಹೆಚ್ಚಿಸಿದ್ದೇವೆ. ರೈತರಿಗೆ 22 ಕೋಟಿ ಸಾಯಿಲ್ ಹೆಲ್ತ್ ಕಾರ್ಡ್‌ ನೀಡಿದ್ದೇವೆ ಎಂದು ಪ್ರಧಾನಿ ಹೇಳಿದ್ದಾರೆ.

  • ಭಾರತ್ ಬಂದ್ ಮಾಡಿದ್ದು ರೈತರಲ್ಲ, ಮಧ್ಯವರ್ತಿಗಳು: ನಾರಾಯಣಗೌಡ

    ಭಾರತ್ ಬಂದ್ ಮಾಡಿದ್ದು ರೈತರಲ್ಲ, ಮಧ್ಯವರ್ತಿಗಳು: ನಾರಾಯಣಗೌಡ

    ಶಿವಮೊಗ್ಗ: ಹೊಸ ಕೃಷಿ ಕಾಯ್ದೆ, ಎಪಿಎಂಸಿ ಕಾಯ್ದೆಯಿಂದ ರೈತರಿಗೆ ಅನುಕೂಲವೇ ಹೊರತು, ನಷ್ಟವಿಲ್ಲ. ಭಾರತ್ ಬಂದ್ ಆಚರಣೆ ರೈತರು ಮಾಡುತ್ತಿರುವುದಲ್ಲ, ರೈತರ ಹೆಸರಿನಲ್ಲಿ ಮಧ್ಯವರ್ತಿಗಳು ಬಂದ್‍ಗೆ ಮುಂದಾಗಿದ್ದಾರೆ ಎಂದು ಕ್ರೀಡಾ ಹಾಗು ರೇಷ್ಮೆ ಸಚಿವ ನಾರಾಯಣಗೌಡ ತಿಳಿಸಿದರು.

    ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರೈತರಿಗೆ ಎಲ್ಲಾ ರೀತಿಯ ಸೌಲಭ್ಯ ನೀಡಿದ್ದಾರೆ. ಮೋದಿಯವರ ಆಡಳಿತಾವಧಿಯಲ್ಲಿ ರೈತರ ಬೆಳೆಗಳಿಗೆ ಬೆಲೆ ಏರಿಕೆ ಸಹ ಆಗಿದೆ. ಆದರೆ ರಾಜಕಾರಣ ಮಾಡುವ ಸಲುವಾಗಿ ದೆಹಲಿಯಲ್ಲಿ ಕಳೆದ 10 ತಿಂಗಳಿನಿಂದ ರೈತರ ಹೆಸರಿನಲ್ಲಿ ಕೆಲವರು ಧರಣಿ ನಡೆಸುತ್ತಿದ್ದಾರೆ. ವರ್ಷಗಳ ಕಾಲ ಧರಣಿ, ಪ್ರತಿಭಟನೆ ನಡೆಸಲು ರೈತರಿಂದ ಸಾಧ್ಯನಾ..? ಎಂದು ಪ್ರಶ್ನಿಸಿದರು. ಇದನ್ನೂ ಓದಿ: ನಾನಿರುವಾಗ ಪೊಲೀಸರು, ಕೋರ್ಟ್‍ಗೆ ಹೆದರಬೇಡಿ: ತ್ರಿಪುರಾ ಸಿಎಂ

    ನೂತನ ಎಪಿಎಂಸಿ ಕಾಯ್ದೆಯಿಂದ ಎಪಿಎಂಸಿ ಮಾರುಕಟ್ಟೆಯಲ್ಲಿ ಸುಧಾರಣೆ ಆಗಿದೆ. ಎಪಿಎಂಸಿ ಕಾಯ್ದೆಯಿಂದ ಮಧ್ಯವರ್ತಿಗಳಿಗೆ ತೊಂದರೆ ಆಗುತ್ತಿದ್ದು, ಆದರೆ ರೈತರಿಗೆ ಲಾಭವಾಗುತ್ತಿದೆ. ಈ ಮೊದಲು ರೈತರು ತಾವು ಬೆಳೆದ ಬೆಳೆಯನ್ನು ಮಾರುಕಟ್ಟೆಯಲ್ಲಿ ಮಾತ್ರ ಮಾರಾಟ ಮಾಡಬೇಕಿತ್ತು. ಆದರೆ ಈ ಹೊಸ ಕಾಯ್ದೆಯಿಂದ ರೈತರು ತಾವು ಬೆಳೆದ ಬೆಳೆಯನ್ನು ಎಲ್ಲಿ ಬೇಕಾದರೂ ಮಾರಾಟ ಮಾಡಬಹುದಾಗಿದೆ. ಆದರೆ ಈ ಹಿಂದೆ ಇಂತಹ ವ್ಯವಸ್ಥೆ ಇರಲಿಲ್ಲ. ಬಿಜೆಪಿ ಸರ್ಕಾರ ರೈತರ ಪರವಾದ ಸರಕಾರವಾಗಿದ್ದು, ರೈತರಿಗೆ ಯಾವುದೇ ಕಾರಣಕ್ಕು ತೊಂದರೆ ಆಗುವ ಕೆಲಸವನ್ನು ನಮ್ಮ ಸರ್ಕಾರ ಮಾಡುವುದಿಲ್ಲ ಎಂದು ಸಚಿವ ನಾರಾಯಣಗೌಡ ತಿಳಿಸಿದರು.

  • ತಪ್ಪು ಕಲ್ಪನೆಗಳಿಂದ ಭಾರತ್ ಬಂದ್ ಕರೆ ನೀಡಲಾಗಿದೆ: ಲಕ್ಷ್ಮಣ್ ಸವದಿ

    ತಪ್ಪು ಕಲ್ಪನೆಗಳಿಂದ ಭಾರತ್ ಬಂದ್ ಕರೆ ನೀಡಲಾಗಿದೆ: ಲಕ್ಷ್ಮಣ್ ಸವದಿ

    ಚಿಕ್ಕೋಡಿ: ತಪ್ಪು ಕಲ್ಪನೆಗಳಿಂದ ಭಾರತ ಬಂದ್ ಮಾಡಲಾಗಿದೆ ಎಂದು ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಬೆಳಗಾವಿಯಲ್ಲಿ ಹೇಳಿದ್ದಾರೆ.

    ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕೃಷಿ ಕಾನೂನು ರೈತರಿಗೆ ಅನುಕೂಲ ಮಾಡಲೆಂದು ಸರ್ಕಾರ ರೂಪಿಸಿದೆ. ದಲ್ಲಾಳಿಗಳಿಗೆ ಬಾರಿ ನಷ್ಟವಾಗುತ್ತಿರುವ ಕಾರಣ ರೈತರಿಗೆ ತಪ್ಪು ಸಂದೇಶ ಸಾರುತ್ತಿದ್ದಾರೆ. 2008ರಿಂದ ಕರ್ನಾಟಕದಲ್ಲಿ ಈ ಕಾನೂನು ಜಾರಿ ಇದೆ. ಕೇಂದ್ರ ಸರ್ಕಾರ ಈಗಷ್ಟೇ ಕಾನೂನು ತಿದ್ದುಪಡಿ ಮಾಡಿದೆ ಎಂದಿದ್ದಾರೆ. ಇದನ್ನೂ ಓದಿ:  ಮಗಳ ಹೆಸರು ರಿವೀಲ್ ಮಾಡಿದ ಯವರತ್ನ ನಟಿ ಸಯೇಷಾ

    ಹರಿಯಾಣ, ಉತ್ತರ ಪ್ರದೇಶ, ಜಾಖರ್ಂಡ್ ರಾಜ್ಯದಲ್ಲಿ ದಲ್ಲಾಳಿಗಳ ಹಾವಳಿ ಹೆಚ್ಚಾಗಿದೆ. ರೈತರನ್ನು ಅವರು ಕಪಿಮುಷ್ಟಿಯಲ್ಲಿ ಇಟ್ಟುಕೊಂಡಿದ್ದಾರೆ. ಅವರಿಗೆ ಭಾರಿ ನಷ್ಟ ಸಂಭವಿಸುವುದರಿಂದ ಕೃಷಿ ಕಾನೂನು ಬಗ್ಗೆ ತಪ್ಪು ಸಂದೇಶ ಸಾರಲಾಗುತ್ತಿದೆ. ರೈತರಿಗೆ ಅನ್ಯಾಯವಾಗುತ್ತದೆ ಎನ್ನುವರು ಬಹಿರಂಗ ಸವಾಲಕ್ಕೆ ಬರಲಿ, ಯಾರಾದರೂ ಸಾಬೀತು ಪಡಿಸಿದರೆ ಕಾನೂನನ್ನು ವಾಪಸ್ ಪಡೆಯುತ್ತೇವೆ ಎಂದು ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಲಕ್ಷ್ಮಣ್ ಸವದಿ ಸವಾಲು ಹಾಕಿದ್ದಾರೆ.

  • ಅಧಿವೇಶನಕ್ಕೆ ಬಿಸಿ ಮುಟ್ಟಿಸಲು ಸಜ್ಜಾದ ರೈತರು

    ಅಧಿವೇಶನಕ್ಕೆ ಬಿಸಿ ಮುಟ್ಟಿಸಲು ಸಜ್ಜಾದ ರೈತರು

    -ಬೊಮ್ಮಾಯಿ ಸರ್ಕಾರಕ್ಕೆ ರೈತರ ಮಹಾ ದಿಗ್ಬಂಧನ

    ಬೆಂಗಳೂರು: ಇಂದಿನಿಂದ ಹತ್ತುದಿನಗಳ ಕಾಲ ಮಳೆಗಾಲದ ಅಧಿವೇಶನ ನಡೆಯಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದ ಮೊದಲ ಅಧಿವೇಶನ ದಿನವೇ 2 ಸಾವಿರಕ್ಕೂ ಅಧಿಕ ರೈತರು ಸರ್ಕಾರಕ್ಕೆ ಮಹಾ ದಿಗ್ಬಂಧನ ಹಾಕಲು ಸಜ್ಜಾಗಿದ್ದಾರೆ.

    ನಿಷೇಧಾಜ್ಞೆ ಇದ್ರೂ ಡೋಂಟ್ ಕೇರ್ ಎನ್ನುತ್ತಿರುವ ರೈತರು, ನಾವು ಕ್ರಿಮಿನಲ್ಸ್ ಅಲ್ಲ. ಏನೇ ಆದ್ರೂ ನಾವು ಪ್ರತಿಭಟನೆ ನಿಲ್ಲಿಸುವುದಿಲ್ಲ. ರೈತರ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ವಿಧಾನಸೌಧ ಚಲೋ ಪ್ರತಿಭಟನಾ ರ್‍ಯಾಲಿ ಮಾಡುತ್ತೇವೆ ಎಂದು ಪಟ್ಟು ಹಿಡಿದಿದ್ದಾರೆ. ಇದನ್ನೂ ಓದಿ: ಮಹಿಳೆಯನ್ನು ನಗ್ನ ಮಾಡಿ ಪೈಶಾಚಿಕ ಹಲ್ಲೆ ನಡೆಸಿದ ಕಿರಾತಕರು

    ಸಿಟಿ ರೈಲ್ವೆ ನಿಲ್ದಾಣದಿಂದ ಬೆಳಗ್ಗೆ 11 ಗಂಟೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದ್ದು, ರಾಯಣ್ಣ ಸರ್ಕಲ್, ಆನಂದರಾವ್ ಸರ್ಕಲ್ ಮೂಲಕ ವಿಧಾನಸೌಧಕ್ಕೆ ಪ್ರತಿಭಟನಾ ರ್ಯಾಲಿ ನಡೆಯಲಿದೆ. ಸುಮಾರು 7 ರಿಂದ 8 ಸಾವಿರ ರೈತರು ಪ್ರತಿಭಟನೆಯಲ್ಲಿ ಭಾಗಿ ಸಾಧ್ಯತೆ ಇದ್ದು, ನಾವು ಅಪರಾಧ ಮಾಡಲು ಸೇರುತ್ತಿಲ್ಲ. ನಾವು ರೈತರು. ಭಾರತ ಸರ್ಕಾರ ಮೂರು ಕೃಷಿ ಕಾಯ್ದೆ ಜಾರಿಗೆ ತಂದ ನಂತರ ಅದಕ್ಕೆ ಪೂರಕವಾಗಿ ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಜಾರಿಗೆ ತಂದಿಲ್ಲ. ಆದರೆ ಇದೀಗ ಕರ್ನಾಟಕ ಸರ್ಕಾರ ಅದನ್ನು ಜಾರಿಗೊಳಿಸಲು ಮುಂದಾಗಿದೆ. ಬೇರೆ ಬೇರೆ ಕಾಯ್ದೆಗಳನ್ನು ಬದಲಾವಣೆ ಮಾಡಿ ಜಾರಿಗೊಳಿಸುವ ಕೆಲಸ ಮಾಡಿದೆ. ಈಗಾಗಲೇ ಕೆಟ್ಟ ಪರಿಣಾಮ ಕೃಷಿ ಕ್ಷೇತ್ರದ ಮೇಲಾಗಿದೆ. 80% ಎಪಿಎಂಸಿ ಬಂದ್ ಆಗ್ತಿವೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

    ಸರ್ಕಾರಕ್ಕೆ ತಮ್ಮ ಪ್ರತಿಭಟನಾ ರ್‍ಯಾಲಿ ಮೂಲಕ ಎಚ್ಚರಿಕೆ ನೀಡುತ್ತೇವೆ. ರೈತರ ಪಕ್ಷ, ರೈತ ನಾಯಕ ಅಂತ ಬಾಯಿ ಮಾತಿಗೆ ಹೇಳೋದ್ ಅಲ್ಲ. ಈ ಕಾಯ್ದೆಗಳನ್ನು ಬಂದ್ ಮಾಡಿ ನೀವು ರೈತ ನಾಯಕರು ಅಂತ ಸಾಬೀತು ಮಾಡ್ಕೊಳ್ಳಿ ಎಂದಿದ್ದಾರೆ. ಈಗಾಗಲೇ ಮೆಜೆಸ್ಟಿಕ್  ರೈಲ್ವೆ ಸ್ಟೇಷನ್ ಬಳಿಗೆ ರಾಜ್ಯದ ಬೇರೆ, ಬೇರೆ ಜಿಲ್ಲೆಗಳಿಂದ  ರೈತರು ಆಗಮಿಸಿದ್ದು, ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸಂಘಟನೆಯ ರೈತರು ಆಗಮಿಸಿದ್ದಾರೆ. ಇದನ್ನೂ ಓದಿ: ಇಂದಿನಿಂದ ಮಳೆಗಾಲದ ಅಧಿವೇಶನ ಆರಂಭ- ಕಾಂಗ್ರೆಸ್, ಬಿಜೆಪಿ ಮಧ್ಯೆ ಗದ್ದುಗೆ ಗುದ್ದಾಟ

  • ಕೃಷಿ ಕಾಯ್ದೆ ವಿರುದ್ಧ ಹೋರಾಟ ಮಾಡುತ್ತಿರುವವರು ರೈತರಲ್ಲ, ಮಧ್ಯವರ್ತಿಗಳು: ಶೋಭಾ ಕರಂದ್ಲಾಜೆ

    ಕೃಷಿ ಕಾಯ್ದೆ ವಿರುದ್ಧ ಹೋರಾಟ ಮಾಡುತ್ತಿರುವವರು ರೈತರಲ್ಲ, ಮಧ್ಯವರ್ತಿಗಳು: ಶೋಭಾ ಕರಂದ್ಲಾಜೆ

    ಚಾಮರಾಜನಗರ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವವರು ರೈತರೇ ಅಲ್ಲ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಗಂಭೀರ ಆರೋಪ ಮಾಡಿದ್ದಾರೆ.

    ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಲು ಚಾಮರಾಜನಗರದಲ್ಲಿ ಹಮ್ಮಿಕೊಂಡಿದ್ದ ಜನಾಶೀರ್ವಾದ ಯಾತ್ರೆ ಕಾರ್ಯಕ್ರಮದ ಬಳಿಕ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ದೆಹಲಿಯಲ್ಲಿ ಹಲವು ತಿಂಗಳಿಂದ ಹೋರಾಟ ಮಾಡುತ್ತಿರುವವರೆಲ್ಲಾ ಮದ್ಯವರ್ತಿಗಳೇ ಹೊರತು ರೈತರಲ್ಲ ಎಂದಿದ್ದಾರೆ. ಇದನ್ನೂ ಓದಿ: ಅಫ್ಘಾನಿಸ್ತಾನ ಭಯೋತ್ಪಾದಕರ ಕೈಗೆ ಹೋಗುವುದು ಒಳ್ಳೆಯದಲ್ಲ: ಶೋಭಾ ಕರಂದ್ಲಾಜೆ

    ಎಪಿಎಂಸಿ ಲಾಭಿಯ ಮದ್ಯವರ್ತಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ, ಎಪಿಎಂಸಿಗಳಲ್ಲಿ ಯಾರಿಗೆ ಲಾಭ ಸಿಗುತ್ತಿತ್ತೋ ಅವರು ಪ್ರತಿಭಟನೆ ಮಾಡುತ್ತಿದ್ದಾರೆ. ಪಂಜಾಬ್ ಮತ್ತು ಹರಿಯಾಣ ರಾಜ್ಯ ಗಳಲ್ಲಿ ಯಾರು ಹೆಚ್ಚು ಕಮಿಷನ್ ಹೊಡೆಯುತ್ತಿದ್ದಾರೋ ಅವರು ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದರು.

    ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕರ್ನಾಟಕದಲ್ಲೂ ನಡೆಯುತ್ತಿರುವ ಪ್ರತಿಭಟನೆಗಳು ರಾಜಕೀಯ ಪ್ರೇರಿತ ಎಂದು ಆರೋಪಿಸಿದ ಅವರು ಪ್ರತಿಭಟನೆ ಮಾಡುತ್ತಿರುವವರು ಹೇಳುತ್ತಿರುವುದರಲ್ಲಿ ಯಾವುದೇ ಹುರುಳಿಲ್ಲ ಎಂದಿದ್ದಾರೆ,

  • ಬದುಕಿದ್ದೇವೆ ಎಂದು ತೋರಿಸಲು ಕಾಂಗ್ರೆಸ್ಸಿನಿಂದ ಪ್ರತಿಭಟನೆ -ಸಿಎಂ ವ್ಯಂಗ್ಯ

    ಬದುಕಿದ್ದೇವೆ ಎಂದು ತೋರಿಸಲು ಕಾಂಗ್ರೆಸ್ಸಿನಿಂದ ಪ್ರತಿಭಟನೆ -ಸಿಎಂ ವ್ಯಂಗ್ಯ

    ಬೆಂಗಳೂರು: ಕಾಂಗ್ರೆಸ್‌ನವರು ಆಗೊಮ್ಮೆ ಈಗೊಮ್ಮೆ ನಾವು ಬದುಕಿದ್ದೇವೆ ಎಂದು ತೋರಿಸಿಕೊಳ್ಳಲು ಪ್ರತಿಭಟನೆ ಮಾಡುತ್ತಾರೆ ಎಂದು ಸಿಎಂ ಯಡಿಯೂರಪ್ಪ ವ್ಯಂಗ್ಯವಾಡಿದ್ದಾರೆ.

    ಇಂದಿನ ಕಾಂಗ್ರೆಸ್‌ ಪ್ರತಿಭಟನೆ ಕುರಿತು ಮಾಧ್ಯಮಗಳು ವಿಧಾನಸೌಧದಲ್ಲಿ ಕೇಳಿದ ಪ್ರಶ್ನೆಗೆ ಸಿಎಂ, ಯಾರನ್ನೋ ಕರೆದುಕೊಂಡು ಬಂದು ಪ್ರತಿಭಟಿಸಿದ್ದಾರೆ. ಕಾಂಗ್ರೆಸ್‌ನವರು ಭಾಷಣ ಶುರು ಮಾಡಿದ ತಕ್ಷಣ ಬಂದವರು ಎದ್ದು ಹೋಗಿದ್ದನ್ನು ನೀವೂ ನೋಡಿದ್ದೀರಿ. ಕಾಂಗ್ರೆಸ್‌ನವರು ಎಚ್ಚರವಾಗಿ ಎದ್ದು ನಿಂತು ಬದುಕಿದ್ದೇವೆ ಎಂದು ತೋರಿಸಲು ಈ ಪ್ರತಿಭಟನೆ ಮಾಡಿದ್ದಾರೆ ಎಂದು ಲೇವಡಿ ಮಾಡಿದರು.

    ನಾಳೆ ಖಾತೆ ಹಂಚಿಕೆ ಪಟ್ಟಿ ಪ್ರಕಟ ಮಾಡುತ್ತೇನೆ. ಪಟ್ಟಿ ಸಿದ್ಧವಾಗಿದ್ದು ಬೆಳಗ್ಗೆ ಬೆಳಗ್ಗೆ 7 – 8 ಗಂಟೆಗೆ ಖಾತೆ ಹಂಚಿಕೆಯನ್ನು ಪ್ರಕಟಿಸುತ್ತೇವೆ ಎಂದು ತಿಳಿಸಿದರು.

  • ಕೆನಡಾ ಟ್ರಿಪ್ ಬಿಟ್ಟು ರೈತರಿಗೆ ಉಚಿತ ಸೇವೆ ನೀಡುತ್ತಿರುವ ಸಲೂನ್ ಮಾಲೀಕ

    ಕೆನಡಾ ಟ್ರಿಪ್ ಬಿಟ್ಟು ರೈತರಿಗೆ ಉಚಿತ ಸೇವೆ ನೀಡುತ್ತಿರುವ ಸಲೂನ್ ಮಾಲೀಕ

    – ಪತ್ನಿಯೊಂದಿಗಿನ ಕೆನಡಾ ಟ್ರಿಪ್ ಕ್ಯಾನ್ಸಲ್
    – ಪ್ರತಿಭಟನಾ ನಿರತ ರೈತರಿಗೆ ಉಚಿತ ಸೇವೆ

    ನವದೆಹಲಿ: ಕೃಷಿ ಕಾನೂನುಗಳನ್ನು ವಿರೋಧಿಸಿ ಕೆಲ ವಾರಗಳಿಂದ ರೈತರು ಪ್ರತಿಭಟನೆಯನ್ನು ತೀವ್ರಗೊಳಿಸಿದ್ದು, ಪಟ್ಟು ಬಿಡದೆ ಹೋರಾಟ ನಡೆಸುತ್ತಿದ್ದಾರೆ. ನಗರದ ಸಿಂಘು ಬಾರ್ಡರ್‍ನಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಹಲವರು ಹಲವು ರೀತಿಯ ಸಹಾಯ ಮಾಡಿದ್ದಾರೆ. ಅದೇ ರೀತಿ ಸಲೂನ್ ಮಾಲೀಕರೊಬ್ಬರು ತಮ್ಮ ಕೆನಡಾ ಪ್ರವಾಸ ರದ್ದುಗೊಳಿಸಿ ಉಚಿತ ಸೇವೆ ನೀಡಲು ಮುಂದಾಗಿದ್ದಾರೆ.

    ಸುಮಾರು 20 ದಿನಗಳಿಂದ ರೈತರು ಸಿಂಘು ಬಾರ್ಡರ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದೇ ವೇಳೆ ಕಟಿಂಗ್, ಶೇವಿಂಗ್‍ಗಾಗಿ ಸಾಲಾಗಿ ನಿಲ್ಲುತ್ತಿದ್ದ ರೈತರಿಗೆ ಸಹಾಯ ಮಾಡಲು ಕ್ರೇಜಿ ಬ್ಯೂಟಿ ಸಲೂನ್‍ನ ಮಾಲೀಕ ಲಭ್ ಸಿಂಗ್ ಠಾಕೂರ್ ಅವರು ತಮ್ಮ ಕೆನಡಾ ಪ್ರವಾಸವನ್ನು ರದ್ದುಪಡಿಸಿದ್ದಾರೆ. ಅಲ್ಲದೆ ಉಚಿತವಾಗಿ ರೈತರ ಸೇವೆ ಸಲ್ಲಿಸುತ್ತಿದ್ದಾರೆ.

    ಕುರುಕ್ಷೇತ್ರದ ಪೇಹವಾದಲ್ಲಿ ಇವರ ಅಂಗಡಿ ಇದ್ದು, ಇದೀಗ ಅವರು ಸಿಂಘು ಬಾರ್ಡರ್‍ಗೆ ಸ್ಥಳಾಂತರಗೊಂಡು ರೈತರಿಗೆ ಉಚಿತ ಕಟಿಂಗ್ ಶೇವಿಂಗ್ ಮಾಡುತ್ತಿದ್ದಾರೆ. ಹೈ ವೇಯಲ್ಲಿಯೇ ಕಟಿಂಗ್ ಶಾಪ್ ಇಟ್ಟುಕೊಂಡಿದ್ದು, ಟ್ರ್ಯಾಕ್ಟರ್ ಟ್ರೇಲಿಗೆ ಕನ್ನಡಿ ನೇತು ಹಾಕಿ , ಮೂರು ಚೇರ್‍ಗಳನ್ನು ಹಾಕಿ ಕಟಿಂಗ್ ಮಾಡುತ್ತಿದ್ದಾರೆ. ರೈತರಿಗೆ ಸಂಪೂರ್ಣ ಉಚಿತ ಸೇವೆ ಒದಗಿಸುತ್ತಿದ್ದಾರೆ.

    ನನ್ನ ಪತ್ನಿಯೊಂದಿಗೆ ಕುರುಕ್ಷೇತ್ರದಲ್ಲಿ ಪಾರ್ಲರ್ ನಡೆಸುತ್ತಿದ್ದೇನೆ. ನಮ್ಮ ಬಹುತೇಕ ಗ್ರಾಹಕರು ರೈತರೇ ಆಗಿದ್ದಾರೆ. ಇದೀಗ ಪ್ರತಿಭಟನೆ ನಡೆಸುತ್ತಿರುವುದರಿಂದ ಅಂಗಡಿಯನ್ನು ಸಿಂಘು ಬಾರ್ಡರ್ ಗೆ ಸ್ಥಳಾಂತರಿಸುವಂತೆ ಕೇಳಿಕೊಂಡರು. ಹೀಗಾಗಿ ನಮ್ಮ ತಂಡದೊಂದಿಗೆ ನಾನು ಇಲ್ಲಿಗೆ ಬಂದೆ. ನಾವು ಪ್ರತಿ ದಿನ 100-150 ಜನರಿಗೆ ಕಟಿಂಗ್ ಮಾಡುತ್ತೇವೆ. ಯಾವುದೇ ರೀತಿಯ ಶುಲ್ಕ ಪಡೆಯುವುದಿಲ್ಲ. ಯಾರಾದರೂ ಹಣ ನಿಡಲು ಬಂದರೆ ನಾವು ತಿರಸ್ಕರಿಸುತ್ತೇವೆ ಎಂದು ಅಂಗಡಿ ಮಾಲೀಕ ಲಭ್ ಸಿಂಗ್ ಠಾಕೂರ್ ತಿಳಿಸಿದ್ದಾರೆ.

    ರೈತರಿಗೆ ಸಹಾಯ ಮಾಡುತ್ತಿರುವುದಕ್ಕೆ ನನಗೆ ಸಂತೋಷವಿದೆ ಎಂದು ಠಾಕೂರ್ ಹೇಳಿದ್ದಾರೆ. ಆದರೆ ಅವರು ಇಂದು ಸ್ವಲ್ಪ ಬೇಸರದಲ್ಲಿದ್ದು, ಅವರ ಈ ಹಿಂದಿನ ವರ್ಷಗಳಂತೆ ಪತ್ನಿಯ ಹುಟ್ಟುಹಬ್ಬವನ್ನು ಆಚರಿಸಲು ಅವರಿಗೆ ಆಗುತ್ತಿಲ್ಲ.

    ನಮ್ಮ ಸಲೂನ್‍ಗೆ ಪತ್ನಿ ಸಾಕಷ್ಟು ಕೊಡುಗೆ ನೀಡಿದ್ದಾಳೆ. ಕುರುಕ್ಷೇತ್ರದಲ್ಲಿನ ನಮ್ಮ ಅಂಗಡಿಗೆ ಬರುವ ಗ್ರಾಹಕರಿಗೆ ಚಹಾ ಮಾಡಿಕೊಡುತ್ತಾಳೆ. ಅಲ್ಲದೆ ನಮ್ಮ ಬಗ್ಗೆ ಸಹ ಕಾಳಜಿ ವಹಿಸುತ್ತಾಳೆ. ಅವಳ ಹುಟ್ಟುಹಬ್ಬವಾದ ಇಂದು ಅವಳನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಅವಳು ಕಾಳಜಿ ವಹಿಸುತ್ತಾಳೆ ಎಂಬ ನಂಬಿಕೆ ನನಗಿದೆ ಎಂದಿದ್ದಾರೆ.

    ಪ್ರತಿ ವರ್ಷ ಪತ್ನಿಯ ಹುಟ್ಟುಹಬ್ಬಕ್ಕೆ ವಿದೇಶ ಪ್ರವಾಸಕ್ಕೆ ತೆರಳುತ್ತಿದ್ದೆವು. ಈ ವರ್ಷವೂ ಕೆನಡಾಗೆ ತೆರಳಲು ಯೋಜನೆ ರೂಪಿಸಿದ್ದೆವು. ಆದರೆ ರೈತರ ಪ್ರತಿಭಟನೆಯಿಂದಾಗಿ ನಾವು ಇದನ್ನು ರದ್ದುಪಡಿಸಿದೆವು. ಇದೀಗ ರೈತರ ಸೇವೆ ಮಾಡಲು ಸಿಂಘು ಬಾರ್ಡರ್ ಗೆ ಬಂದಿದ್ದೇನೆ. ಪ್ರತಿ ದಿನ 15 ಗಂಟೆಗಳ ಕಾಲ ಕೆಲಸ ಮಾಡುತ್ತೇವೆ. ರೈತರಿಂದ ಹಣ ಪಡೆಯುವುದಿಲ್ಲ ಎಂದು ಲಭ್ ಸಿಂಗ್ ಠಾಕೂರ್ ವಿವರಿಸಿದ್ದಾರೆ.