Tag: Farmer Leader

  • ಹಾಡಹಗಲೇ ರೈತ ಮುಖಂಡನ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ

    ಹಾಡಹಗಲೇ ರೈತ ಮುಖಂಡನ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ

    ಚಿಕ್ಕಬಳ್ಳಾಪುರ: ಹಾಡಹಗಲೇ ರೈತ ಮುಖಂಡ(Farmer leader) ಹಾಗೂ ಆತನ ರಕ್ಷಣೆಗೆ ಧಾವಿಸಿದ ಬಾಮೈದನ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಭಕ್ತರಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ಪ್ರತೀಶ್ ಹಾಗೂ ಈತನ ಬಾಮೈದ ಶಿವರಾಜಕುಮಾರ್ ಹಲ್ಲೆಗೆ ಒಳಗಾದವರು. ಇದೇ ಗ್ರಾಮದ ಉದಯ್ ಕಿರಣ್, ಗೋವಿಂದ, ಹಾಗೂ ಹೇಮಂತ್ ಎಂಬುವವರು ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಅಂದಹಾಗೆ ರೈತ ಸಂಘದಲ್ಲಿ ಸಕ್ರಿಯನಾಗಿರುವ ಪ್ರತೀಶ್, ಇಂದು ಬೆಳಗ್ಗೆ ವಾಕಿಂಗ್ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದಾಗ ಉದಯ್ ಕಿರಣ್ ಎಂಬಾತ ಚಾಕು ಹಿಡಿದು ಕೊಲೆ ಮಾಡುವ ಬೆದರಿಕೆ ಹಾಕಿ ಮನಸ್ಸೋ ಇಚ್ಛೆ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ. ಇದನ್ನೂ ಓದಿ: ಮಾಲಿನ್ಯ ನಿಯಂತ್ರಣ ಪ್ರಮಾಣ ಪತ್ರ ಇಲ್ಲದ್ದಕ್ಕೆ ಎಲೆಕ್ಟ್ರಿಕ್‌ ಸ್ಕೂಟರ್‌ಗೆ ದಂಡ

    ಘಟನೆಯಲ್ಲಿ ಪರಾರಿಯಾಗಿ ಮನೆಯಲ್ಲಿ ಅವಿತುಕೊಳ್ಳಲು ಹೋದ ಪ್ರತಿಷ್ ಹಿಂಬಾಲಿಸಿ ಹೋದ ಉದಯ್ ಕಿರಣ್ (Uday Kiran) ಹಾಗೂ ಆತನ ಕಡೆಯವರು ಅಡ್ಡ ಬಂದ ಪ್ರತೀಶ್ ಬಾಮೈದ ಶಿವರಾಜ್ ಕುಮಾರ್ ಮೇಲೂ ಹಲ್ಲೆ ಮಾಡಿದ್ದಾರೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಸ್ಥಳೀಯ ಶಿಡ್ಲಘಟ್ಟ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿತ್ತು.

    ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಿಂದಲೂ ಚಿಕಿತ್ಸೆ ಸಾಧ್ಯವಾಗದೇ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ (Victoria Hospital) ಗೆ ರವಾನಿಸಲಾಗಿದೆ. ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹಳೆಯ ದ್ವೇಷ ಹಾಗೂ ಜಮೀನು ವಿವಾದದ ಹಿನ್ನೆಲೆಯಲ್ಲಿ ಘಟನೆ ನಡೆದಿರುವ ಸಾಧ್ಯತೆ ಇದೆ ಎನ್ನಲಾಗಿದ್ದು ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ರಾಘವೇಂದ್ರ ಸ್ವಾಮಿ ದರ್ಶನಕ್ಕೆ ಬಂದಿದ್ದವರ ಕಾರಿಗೆ ಬೆಂಕಿ, ಸುಟ್ಟು ಕರಕಲು

    ರಾಘವೇಂದ್ರ ಸ್ವಾಮಿ ದರ್ಶನಕ್ಕೆ ಬಂದಿದ್ದವರ ಕಾರಿಗೆ ಬೆಂಕಿ, ಸುಟ್ಟು ಕರಕಲು

    ರಾಯಚೂರು: ರಾಘವೇಂದ್ರ ಸ್ವಾಮಿ ದರ್ಶನಕ್ಕೆ ಬಂದಿದ್ದವರ ಕಾರಿಗೆ ಬೆಂಕಿ ಹೊತ್ತಿಕೊಂಡು ಧಗ ಧಗ ಉರಿದು ಸುಟ್ಟು ಕರಕಲಾಗಿರುವ ಘಟನೆ ನಗರದ ಮಡ್ಡಿಪೇಟೆಯಲ್ಲಿ ತಿಪ್ಪೆಯ ಬಳಿ ನಿಲ್ಲಿಸಿದ್ದಾಗ ನಡೆದಿದೆ.

    ರೈತ ಮುಖಂಡ ಡಾ. ವಿಜಯಾನಂದ ಸ್ವಾಮಿ ಅವರಿಗೆ ಸೇರಿದ ಕಾರು ಬೆಳಗಿನ ಜಾವ ಬೆಂಕಿಗಾಹುತಿಯಾಗಿದೆ. ಶ್ರೀ ರಾಘವೇಂದ್ರ ಸ್ವಾಮಿ ದರ್ಶನಕ್ಕಾಗಿ ಮಂತ್ರಾಲಯಕ್ಕೆ ಹೋಗಲು ಬೆಂಗಳೂರಿನಿಂದ ರಾಯಚೂರಿನ ಮಡ್ಡಿಪೇಟೆಯಲ್ಲಿರುವ ಸಹೋದರನ ಮನೆಗೆ ಬಂದಿದ್ದರು. ಇದನ್ನೂ ಓದಿ: ಹಿಜಬ್ ಸಂಘರ್ಷ ಮಧ್ಯೆ ಸಾವರ್ಕರ್ ಫೋಟೋ ವಿವಾದ – ವಿದ್ಯಾರ್ಥಿಗಳ ಮೇಲೆ ಹಲ್ಲೆ

    ಮನೆ ಹೊರಗೆ ಪಾರ್ಕ್ ಮಾಡಿದ್ದ ಕಾರು ಬೆಳಗಾಗುವಷ್ಟರಲ್ಲಿ ಸುಟ್ಟು ಕರಕಲಾಗಿದೆ. ತಿಪ್ಪೆಗೆ ಆಕಸ್ಮಿಕವಾಗಿ ಹೊತ್ತಿಕೊಂಡ ಬೆಂಕಿ ಕಾರಿಗೆ ತಗುಲಿರಬಹುದು ಅಂತ ಶಂಕಿಸಲಾಗಿದೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳ ಸಿಬ್ಬಂದಿ ಸತತ ಅರ್ಧ ಗಂಟೆಕಾಲ ಬೆಂಕಿ ನಂದಿಸಿದೆ. ನೇತಾಜಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಮುಸ್ಲಿಂ ಸಂಘಟನೆಗಳ ಪ್ರತಿಭಟನೆ – ಬೆಂಗಳೂರಿನ ಸೂಕ್ಷ್ಮ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ

  • ಮಾಯಕೊಂಡ ತಾಲೂಕಿಗೆ ಆನಗೋಡು ಸೇರಿಸಿದರೆ ಗೋಲಿಬಾರ್ ಮರುಕಳಿಸುತ್ತೆ – ರೈತ ಮುಖಂಡ

    ಮಾಯಕೊಂಡ ತಾಲೂಕಿಗೆ ಆನಗೋಡು ಸೇರಿಸಿದರೆ ಗೋಲಿಬಾರ್ ಮರುಕಳಿಸುತ್ತೆ – ರೈತ ಮುಖಂಡ

    ದಾವಣಗೆರೆ: ಮಾಯಕೊಂಡ ತಾಲೂಕು ಕೇಂದ್ರವನ್ನಾಗಿಸಲು ನಮ್ಮ ಅಭ್ಯಂತರವಿಲ್ಲ. ಆದರೆ ಆನಗೋಡು ಹೋಬಳಿಯನ್ನು ಮಾಯಕೊಂಡ ತಾಲೂಕಿಗೆ ಸೇರಿಸಿದರೆ 1992 ಗೋಲಿಬಾರ್ ಮರುಕಳಿಸುತ್ತದೆ ಎಂದು ಜಿಲ್ಲಾಧಿಕಾರಿಗಳ ಮುಂದೆಯೇ ರೈತ ಮುಖಂಡ ಚಿನ್ನಸಮುದ್ರದ ಶೇಖರ್ ನಾಯ್ಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಮಾಯಕೊಂಡ ಪ್ರತ್ಯೇಕ ತಾಲೂಕು ವಿಚಾರದಲ್ಲಿ ಜನಾಭಿಪ್ರಾಯ ಸಂಗ್ರಹಿಸಲು ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಸಭೆ ನಡೆದಿತ್ತು. ಜಿಲ್ಲಾಧಿಕಾರಿ ಸಭೆಯ ನೇತೃತ್ವ ವಹಿಸಿದ್ದರು. ಮಾಯಕೊಂಡ ಕ್ಷೇತ್ರದ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಮುಖಂಡರು ತಮ್ಮ ಅಭಿಪ್ರಾಯಗಳನ್ನು ಜಿಲ್ಲಾಧಿಕಾರಿಗಳಿಗೆ ತಿಳಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ರೈತ ಮುಖಂಡ ಶೇಖರ್ ನಾಯ್ಕ್, ಮಾಯಕೊಂಡ ಕ್ಷೇತ್ರವನ್ನು ತಾಲೂಕು ಮಾಡಲು ನಮ್ಮ ವಿರೋಧವಿಲ್ಲ. ಆದರೆ ಮಾಯಕೊಂಡ ತಾಲೂಕಿಗೆ ಆನಗೋಡು ಹೋಬಳಿಯನ್ನು ಸೇರ್ಪಡೆ ಮಾಡಿದರೆ 1992ರಲ್ಲಿ ನಡೆದ ಗೋಲಿಬಾರ್ ಮತ್ತೆ ಮರುಕಳಿಸುತ್ತದೆ ಎಂದು ವೇದಿಕೆ ಮೇಲೆಯೇ ಎಚ್ಚರಿಕೆ ನೀಡಿದರು.

    ಜಿಲ್ಲಾಧಿಕಾರಿಗಳ ಮುಂದೆಯೇ ಈ ರೀತಿ ಹೇಳಿಕೆ ನೀಡಿದ್ದನ್ನು ಖಂಡಿಸಿ ಇತರ ಗ್ರಾಮಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ಕೆಲವರು ಅವರ ವಿರುದ್ಧ ಏರು ಧ್ವನಿಯಲ್ಲಿ ಮಾತನಾಡಿದರು. ಹೀಗಾಗಿ ಸಭೆಯಲ್ಲಿ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು. ಶೇಖರ್ ನಾಯ್ಕ್ ವಿರುದ್ಧ ಜನರು ಮುಗಿಬಿದ್ದರು. ಆಗ ಪೊಲೀಸರು ಶೇಖರ್ ನಾಯ್ಕ್ ಅವರನ್ನು ಸಭೆಯಿಂದ ಹೊರಗೆ ಕಳುಹಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಅಲ್ಲದೆ ಸಭೆಯಲ್ಲಿ ಗೊಂದಲ ಸೃಷ್ಟಿಯಾದ ಹಿನ್ನಲೆ ಜಿಲ್ಲಾಧಿಕಾರಿಗಳೇ ಸಭೆಯಿಂದ ಹೊರ ನಡೆದರು.