Tag: Farmer Martyr’s Day

  • ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ರೈತ ಹುತಾತ್ಮ ದಿನಾಚರಣೆ ಆಚರಣೆ

    ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ರೈತ ಹುತಾತ್ಮ ದಿನಾಚರಣೆ ಆಚರಣೆ

    ಹಾವೇರಿ: ಜಿಲ್ಲೆಯ ಜಿ.ಎ ಲಕ್ಷ್ಮೀನಾರಾಯಣ ಬಣದ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು 39ನೇ ರೈತ ಹುತಾತ್ಮ ದಿನಾಚರಣೆ ಆಚರಿಸಿದರು.

    ನಗರದ ಪುರಸಿದ್ದೇಶ್ವರ ದೇವಸ್ಥಾನದಿಂದ ಪಾದಯಾತ್ರೆ ಆರಂಭಿಸಿ, ಸರ್ಕಾರದ ವಿರುದ್ಧ ಘೋಷಣೆ ಕೂಗಿ ರೈತರು ಆಕ್ರೋಶ ವ್ಯಕ್ತಪಡಿಸಿದರು. ಹೊಸಮನಿ ಸಿದ್ದಪ್ಪ ವೃತ್ತದಲ್ಲಿಯ ಗೋಲಿಬಾರ್‍ ನಲ್ಲಿ ಹುತಾತ್ಮರಾದ ರೈತರಿಗೆ ಮೌನಾಚರಣೆ ಮಾಡುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು.

    ರಾಜ್ಯದ ರೈತರ ಸಾಲಮನ್ನಾ ಮಾಡಬೇಕು. ಈ ಬಗ್ಗೆ ರೈತರಿಗೆ ಯಾವುದೇ ಮಾಹಿತಿ ಬಂದಿಲ್ಲ. ಕೆಲವು ಬ್ಯಾಂಕ್‍ಗಳಿಂದ ನೋಟಿಸ್ ಬರುತ್ತಿವೆ. ಕೆರೆ ತುಂಬಿಸುವ ಯೋಜನೆ ಹಾಗೂ ಸಕಾಲಕ್ಕೆ ಬೆಳೆವಿಮೆ ನೀಡಬೇಕು ಎಂದು ಆಗ್ರಹಿಸಿದರು. ಬೇರೆ ಜಿಲ್ಲೆಯ ರೈತರು ಹಾಗೂ ರೈತ ಮಹಿಳೆಯರು ರೈತ ಹುತಾತ್ಮ ದಿನಾಚರಣೆ ಭಾಗವಹಿಸಿ ಸರ್ಕಾರದ ವಿರುದ್ಧ ತಮ್ಮ ಅಕ್ರೋಶ ವ್ಯಕ್ತಪಡಿಸಿದರು.