Tag: Farmer Protest

  • ದೇವನಹಳ್ಳಿಯ ಭೂಸ್ವಾಧೀನ ಅಧಿಸೂಚನೆ ರದ್ದು – ಸಿಎಂ ಘೋಷಣೆ

    ದೇವನಹಳ್ಳಿಯ ಭೂಸ್ವಾಧೀನ ಅಧಿಸೂಚನೆ ರದ್ದು – ಸಿಎಂ ಘೋಷಣೆ

    ಬೆಂಗಳೂರು: 3 ವರ್ಷಗಳಿಂದ ನಡೆಯುತ್ತಿದ್ದ ದೇವನಹಳ್ಳಿಯ ಚನ್ನರಾಯಪಟ್ಟಣ ಜಮೀನು ಭೂಸ್ವಾಧೀನ ವಿವಾದ ಕೊನೆಗೂ ಅಂತ್ಯವಾಗಿದೆ. 1,777 ಎಕರೆ ಭೂಸ್ವಾಧೀನಕ್ಕೆ ಸರ್ಕಾರ ಹೊರಡಿಸಿದ್ದ ಫೈನಲ್ ನೋಟಿಫಿಕೇಶನ್‌ಅನ್ನು ರಾಜ್ಯ ಸರ್ಕಾರ ರದ್ದು ಮಾಡೋದಾಗಿ ಘೋಷಣೆ ಮಾಡಿದೆ.

    ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರೈತರು, ಹೋರಾಟಗಾರರು, ಸಂಘಟನೆಗಳ ಸಭೆಯಲ್ಲಿ ನೋಟಿಫಿಕೇಶನ್ ರದ್ದು ಮಾಡುವ ಬಗ್ಗೆ ಘೋಷಣೆ ಮಾಡಿದರು. ಸಭೆ ಬಳಿಕ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, 1,777 ಎಕರೆ ಜಮೀನು ಭೂಸ್ವಾಧೀನಕ್ಕೆ ಸರ್ಕಾರ ನೋಟಿಫಿಕೇಶನ್ ಹೊರಡಿಸಿತ್ತು. ಕೃಷಿ ಭೂಮಿ ಭೂಸ್ವಾಧೀನ ಮಾಡದಂತೆ ರೈತರು ಹೋರಾಟ ಮಾಡುತ್ತಿದ್ದರು. ಕೃಷಿ ಚಟುವಟಿಕೆಗಳು ಮುಂದುವರೆಸುವ ದೃಷ್ಟಿಯಿಂದ ಸರ್ಕಾರ ಹೊರಡಿಸಿದ್ದ ಅಧಿಸೂಚನೆಯನ್ನ ರದ್ದು ಮಾಡುತ್ತಿರೋದಾಗಿ ತಿಳಿಸಿದರು.ಇದನ್ನೂ ಓದಿ: ಇದೇ ರೀತಿ 20 ದೇಶದ ಕಾಡಿನಲ್ಲಿ ವಾಸವಿದ್ದೆವು – ಗೋಕರ್ಣ ಗುಹೆಯಲ್ಲಿ ವಾಸವಿದ್ದ ರಷ್ಯಾ ಮಹಿಳೆ ಮಾತು

    ಒಂದು ವೇಳೆ ರೈತರು ಸ್ವಯಂ ಪ್ರೇರಿತರಾಗಿ ಜಮೀನು ಕೊಟ್ಟರೆ ಆ ಭೂಮಿ ಸರ್ಕಾರ ಪಡೆಯಲಿದೆ. ಜೊತೆಗೆ ಸೂಕ್ತ ಪರಿಹಾರ ಕೊಡುವ ಜೊತೆಗೆ ಅಭಿವೃದ್ಧಿಪಡಿಸಿದ 50% ಭೂಮಿಯನ್ನು ಜಮೀನು ಕೊಡುವ ರೈತರಿಗೆ ಕೊಡಲಾಗುತ್ತದೆ. ಸರ್ಕಾರದ ಈ ನಿರ್ಧಾರ ದೇವನಹಳ್ಳಿ ಜಮೀನಿಗೆ ಮಾತ್ರ ಅನ್ವಯ ಆಗಲಿದೆ ಎಂದು ಸ್ಪಷ್ಟಪಡಿಸಿದರು.

    ಸರ್ಕಾರದ ನಿರ್ಧಾರದ ಬಗ್ಗೆ ಮಾತನಾಡಿದ ನಟ ಪ್ರಕಾಶ್ ರಾಜ್, ಇದು 3 ವರ್ಷಗಳ ಪ್ರತಿಭಟನೆಗೆ ಸಿಕ್ಕ ಜಯ. ಇದು ರೈತರ ಜಯ ಇದು. ಸಂಘಟನೆಗಳ ಜಯ. ಐತಿಹಾಸಿಕ ಚಳುವಳಿಯ ಜಯ ಇದು. ಸರ್ಕಾರಕ್ಕೆ, ಸಿಎಂಗೆ ಧನ್ಯವಾದಗಳನ್ನು ಹೇಳ್ತೀನಿ. ದೇವನಹಳ್ಳಿ ಹೋರಾಟಕ್ಕೆ ಜಯವಾಗಿದೆ. ಮುಂದಿನ ಹೋರಾಟದ ಬಗ್ಗೆ ಮುಂದೆ ನೋಡೋಣ ಎಂದರು.

    ರೈತ ನಾಯಕ ಬಡಗಲಪುರ ನಾಗೇಂದ್ರ ಮಾತಾಡಿ, ಇದೊಂದು ಸಂಘಟಿತ ಹೋರಾಟ. ಎಲ್ಲರು ಒಟ್ಟಾಗಿ ಹೋರಾಟ ಮಾಡಿದ್ವಿ. ಇದೊಂದು ಐತಿಹಾಸಿಕ ಜಯ. ಯಾವುದೇ ಕೃಷಿ ಭೂಮಿಗೆ ಸಮಸ್ಯೆ ಮಾಡಿದ್ರೆ ಹೋರಾಟ ಮಾಡ್ತೀವಿ. ಫಲವತ್ತಾದ ಭೂಮಿ ಸ್ವಾಧೀನ ಮಾಡಿಕೊಳ್ಳಬಾರದು. ಭೂಮಿ ಬಲಾತ್ಕಾರವಾಗಿ ವಶ ಮಾಡಿಕೊಂಡರೇ ಹೋರಾಟ ಮಾಡ್ತೀವಿ. ಇದು ರೈತರ ಹೋರಾಟಕ್ಕೆ ಸಿಕ್ಕ ಜಯ ಇದು. ಇಲ್ಲಿ ಯಾವುದೇ ಮಾಫಿಯಾದ ಕೈಗಳು ಇಲ್ಲ. ಇದು ರೈತರು, ಮಹಿಳೆಯರ ಹೋರಾಟಕ್ಕೆ ಸಿಕ್ಕ ಜಯ ಎಂದರು. ಇದನ್ನೂ ಓದಿ: ಭಾರತಕ್ಕೆ ಟೆಸ್ಲಾ ಎಂಟ್ರಿ | ಮೈಲೇಜ್‌ ಎಷ್ಟು? ಬೇರೆ ದೇಶದಲ್ಲಿ ದರ ಎಷ್ಟಿದೆ? ಭಾರತದಲ್ಲಿ ದುಬಾರಿ ಯಾಕೆ?

  • ಪಂಜಾಬ್‌ನಲ್ಲಿ ರೈತರಿಂದ ಬಂದ್ – 221 ರೈಲುಗಳ ಸಂಚಾರ ವ್ಯತ್ಯಯ – 163 ರೈಲುಗಳು ಕ್ಯಾನ್ಸಲ್

    ಪಂಜಾಬ್‌ನಲ್ಲಿ ರೈತರಿಂದ ಬಂದ್ – 221 ರೈಲುಗಳ ಸಂಚಾರ ವ್ಯತ್ಯಯ – 163 ರೈಲುಗಳು ಕ್ಯಾನ್ಸಲ್

    – ರಸ್ತೆಗಳನ್ನು ಬ್ಲಾಕ್ ಮಾಡಿ ರೈತರ ಆಕ್ರೋಶ

    ಚಂಡೀಗಢ: ಪಂಜಾಬ್‌ನಲ್ಲಿ (Punjab) ನಡೆದ ರೈತರ ಪ್ರತಿಭಟನೆ (Farmer Protest) ಹಿನ್ನೆಲೆ ಇಂದು 221 ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, 163 ರೈಲುಗಳನ್ನು ರದ್ದುಗೊಳಿಸಲಾಗಿತ್ತು.

    ಇಂದು (ಡಿ.30) ಪಂಜಾಬ್‌ನಲ್ಲಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಹಾಗೂ ಇನ್ನಿತರ ಬೇಡಿಕೆಗಳ ಈಡೇರಿಕೆಗಾಗಿ ಕಿಸಾನ್ ಮಜ್ದೂರ್ ಮೋರ್ಚಾ ಹಾಗೂ ಸಂಯುಕ್ತ ಕಿಸಾನ್ ಮೋರ್ಚಾ ಪಂಜಾಬ್ ಬಂದ್‌ಗೆ ಕರೆ ನೀಡುವ ಮೂಲಕ ಬೆಳಿಗ್ಗೆ 7 ರಿಂದ ಸಂಜೆ 4 ಗಂಟೆಯವರೆಗೆ ಪ್ರತಿಭಟನೆ ನಡೆಸಿದರು. ಜೊತೆಗೆ `ರೈಲ್ ರೋಕೊ’ ಪ್ರತಿಭಟನೆಯಿಂದಾಗಿ ಈ ಅಡಚಣೆಗಳು ಉಂಟಾಗಿವೆ.ಇದನ್ನೂ ಓದಿ: ಸಿಂಗ್ ಶೋಕಾಚರಣೆ ವೇಳೆ ರಾಹುಲ್ ವಿಯೆಟ್ನಾಂ ಪ್ರವಾಸ – ಬಿಜೆಪಿ ಆರೋಪಕ್ಕೆ ಕಾಂಗ್ರೆಸ್‌ ಗರಂ

    ಪ್ರತಿಭಟನೆ ಹಿನ್ನೆಲೆ ಫಿರೋಜ್‌ಪುರ ಮತ್ತು ಅಂಬಾಲಾ ವಿಭಾಗೀಯ ರೈಲ್ವೆ ಕಚೇರಿಗಳ ವರದಿ ಪ್ರಕಾರ, ಪಂಜಾಬ್ ಮೂಲಕ ಹಾಯ್ದು ಹೋಗುವ ಹಾಗೂ ಜಮ್ಮು ಮತ್ತು ಕಾಶ್ಮೀರ ಮತ್ತು ಹಿಮಾಚಲ ಪ್ರದೇಶಗಳಿಗೂ ಸಂಪರ್ಕಿಸುವ ರೈಲುಗಳನ್ನು ರದ್ದುಗೊಳಿಸಲಾಗಿದೆ. ಜೊತೆಗೆ ದೆಹಲಿ ಮತ್ತು ಪಂಜಾಬ್ ನಡುವೆ ಕಾರ್ಯನಿರ್ವಹಿಸುವ ಶತಾಬ್ದಿ, ವಂದೇ ಭಾರತ್ ಸೇರಿದಂತೆ ಒಟ್ಟು 163 ರೈಲುಗಳನ್ನು ರದ್ದುಗೊಳಿಸಲಾಗಿದೆ. ಈ ಮೂಲಕ ಒಟ್ಟು 221 ರೈಲುಗಳ ಸಂಚಾರದ ಮೇಲೆ ಪರಿಣಾಮ ಉಂಟಾಗಲಿದೆ ಎಂದು ಮಾಹಿತಿ ನೀಡಿದೆ.

    ಇವುಗಳ ಜೊತೆಗೆ, ಪ್ಯಾಸೆಂಜರ್, ಎಕ್ಸ್ಪ್ರೆಸ್ ಮತ್ತು ಇಂಟರ್‌ಸಿಟಿ ರೈಲುಗಳ ಮೇಲೆಯೂ ಸಹ ಪರಿಣಾಮ ಬೀರುತ್ತವೆ. ಪಂಜಾಬ್, ಹರಿಯಾಣ ಮತ್ತು ಚಂಡೀಗಢದಲ್ಲಿ ಪ್ರಯಾಣಿಕರ ಮೇಲೆ ತೀವ್ರ ಪರಿಣಾಮ ಬೀರಲಿದೆ. ಇದರಿಂದಾಗಿ ನಿಲ್ದಾಣಗಳಲ್ಲಿ ಸಹಾಯ ಕೇಂದ್ರಗಳು ಹಾಗೂ ಪ್ರಮುಖ ನಿಲ್ದಾಣಗಳಲ್ಲಿ ಹೆಚ್ಚುವರಿ ಟಿಕೆಟ್ ಕೌಂಟರ್‌ಗಳ ಸ್ಥಾಪನೆ, ಪ್ರಯಾಣಿಕರಿಗೆ ಅಗತ್ಯ ನೆರವು ನೀಡಲು ಮೇಲ್ವಿಚಾರಕರು ಮತ್ತು ವಾಣಿಜ್ಯ ನಿರೀಕ್ಷಕರು ಗೊತ್ತುಮಾಡಲಾಗುವುದು ಎಂದು ಡಿಆರ್‌ಎಂ ಫಿರೋಜ್‌ಪುರ ಕಚೇರಿ ತಿಳಿಸಿತ್ತು.

    ರೈಲು ಸೇವೆಗಳು ಸಂಜೆ 4ರ ನಂತರ ಎಂದಿನಂತೆ ಕಾರ್ಯನಿರ್ವಹಿಸುವ ನಿರೀಕ್ಷೆಯಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದರು.ಇದನ್ನೂ ಓದಿ: ಹೊಸ ವರ್ಷಾಚರಣೆ ಆಹ್ವಾನಿತರಿಗೆ ಈ ಪಬ್‌ನಲ್ಲಿ ಕಾಂಡೋಮ್‌, ಒಆರ್‌ಎಸ್‌ ಗಿಫ್ಟ್‌ – ಕಾಂಗ್ರೆಸ್‌ ದೂರು

  • ಅರಣ್ಯ ಭೂಮಿ ಒತ್ತುವರಿ ತೆರವಿಗೆ ಪ್ರತಿಭಟನೆ – ರೈತ ಸಂಘದ ಸದಸ್ಯರ ಮೇಲೆ ಕೈ ಮುಖಂಡರಿಂದ ಹಲ್ಲೆ

    ಅರಣ್ಯ ಭೂಮಿ ಒತ್ತುವರಿ ತೆರವಿಗೆ ಪ್ರತಿಭಟನೆ – ರೈತ ಸಂಘದ ಸದಸ್ಯರ ಮೇಲೆ ಕೈ ಮುಖಂಡರಿಂದ ಹಲ್ಲೆ

    ಕೋಲಾರ: ಜಿಲ್ಲೆಯಲ್ಲಿ ಅರಣ್ಯ ಭೂಮಿ ಒತ್ತುವರಿ ತೆರವಿಗೆ ನಡೆಸಿದ್ದ ಪ್ರತಿಭಟನಾ ನಿರತ ರೈತ ಸಂಘದ ಮುಖಂಡರ ಮೇಲೆ ಕಾಂಗ್ರೆಸ್ (Congress) ಮುಖಂಡರು ಹಲ್ಲೆ ನಡೆಸಿದ್ದಾರೆ.

    ಕೋಲಾರ (Kolar) ಜಿಲ್ಲೆಯ ಶ್ರೀನಿವಾಸಪುರದ (Srinivasapura) ತಾಲ್ಲೂಕು ಕಚೇರಿ (Taluka Office) ಎದುರಿಗೆ ಇಂದು (ಡಿ.09) ರೈತ ಸಂಘದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬೆಂಬಲಿಗರು ಹಾಗೂ ರೈತ ಸಂಘದ ಮುಖಂಡರ ಮೇಲೆ ಗಲಾಟೆ ನಡೆದಿದೆ.ಇದನ್ನೂ ಓದಿ: ಭಾರತ ವಿರೋಧಿ ಸೊರೊಸ್‌ ಸಂಸ್ಥೆಯ ಜೊತೆ ಸೋನಿಯಾಗೆ ನಂಟು – ಚರ್ಚೆಗೆ ಸರ್ಕಾರ ಸಿದ್ಧವಿದೆ ಎಂದ ಕಿರಣ್‌ ರಿಜಿಜು

    ಕೆಲಕಾಲ ತಳ್ಳಾಟ ನೂಕಾಟ ನಡೆಸಿದ್ದು, ರೈತ ಮುಖಂಡ ನಾರಾಯಣಗೌಡ, ಮಂಜುನಾಥ್ ಸೇರಿದಂತೆ ಹಲವರ ಮೇಲೆ ಹಲ್ಲೆ ನಡೆಸಿದ್ದಾರೆ. ಪೊಲೀಸರ ಸಮ್ಮುಖದಲ್ಲಿಯೇ ಕಾಂಗ್ರೆಸ್ ಮುಖಂಡರು ಹಲ್ಲೆ ಮಾಡಿದ್ದಾರೆ. ಶ್ರೀನಿವಾಸಪುರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

    ಪ್ರತಿಭಟನೆ ಯಾಕೆ?
    ಕೋಲಾರ ಜಿಲ್ಲೆಯ ಶ್ರೀನಿವಾಸಪುರದ ತಾಲೂಕಿನ ಜಿನಗಲಕುಂಟೆ ಗ್ರಾಮದ ಬಳಿಯಿರುವ ಸರ್ವೇ ನಂ.1 ಮತ್ತು 2ರಲ್ಲಿ 122 ಎಕರೆಯನ್ನು ಮಾಜಿ ಸ್ಪೀಕರ್ ರಮೇಶ್ ಕುಮಾರ್ (Former Speaker Ramesh Kumar) ಅರಣ್ಯ ಭೂಮಿ ಒತ್ತುವರಿ ಮಾಡಿದ್ದಾರೆ ಎಂದು ಆರೋಪಿಸಿದ್ದರು. ಏಳು ಜನ ಒತ್ತುವರಿದಾರರಲ್ಲಿ ರಮೇಶ್ ಕುಮಾರ್‌ಗೆ 61 ಎಕರೆ ಅರಣ್ಯ ಭೂಮಿ ಸೇರಿತ್ತು. ಈ ಹಿನ್ನೆಲೆ ನ.6ರಂದು ಕಂದಾಯ ಹಾಗೂ ಅರಣ್ಯ ಇಲಾಖೆಯಿಂದ (Forest Department) ಸರ್ವೇ ನಡೆಸಲು ಸುಪ್ರೀಂ ಕೋರ್ಟ್ (Supreme Court) ಸೂಚನೆ ನೀಡಿತ್ತು. ಜೊತೆಗೆ ಸರ್ವೇ ಮಾಡಿ ವರದಿ ಸಲ್ಲಿಸುವಂತೆ ತಿಳಿಸಿತ್ತು. ಆದರೆ ಕಾರಣಾಂತರಗಳಿಂದ ಸರ್ವೇ ಕಾರ್ಯ ನಡೆದಿರಲಿಲ್ಲ. ಈ ಹಿನ್ನೆಲೆ ರೈತ ಸಂಘದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.ಇದನ್ನೂ ಓದಿ: BBK 11: ಮತ್ತೆ ಬಿಗ್‌ ಬಾಸ್‌ಗೆ ತನಿಷಾ, ಪ್ರತಾಪ್‌, ಸಂತು ಪಂತು ಎಂಟ್ರಿ

  • ರೇಪ್ ಹೇಗಾಗುತ್ತೆ ಎಂದು ಕಂಗನಾಗೆ ಕೇಳಿ, ಆಕೆಗೆ ರೇಪ್ ಅನುಭವ ಇದೆ: ಪಂಜಾಬ್ ಮಾಜಿ ಸಂಸದನ ವಿವಾದಿತ ಹೇಳಿಕೆ

    ರೇಪ್ ಹೇಗಾಗುತ್ತೆ ಎಂದು ಕಂಗನಾಗೆ ಕೇಳಿ, ಆಕೆಗೆ ರೇಪ್ ಅನುಭವ ಇದೆ: ಪಂಜಾಬ್ ಮಾಜಿ ಸಂಸದನ ವಿವಾದಿತ ಹೇಳಿಕೆ

    ಚಂಡೀಗಢ: ರೈತರ ಪ್ರತಿಭಟನೆಗಳ ಕುರಿತು ನಟಿ ಹಾಗೂ ಸಂಸದೆ ಕಂಗನಾ ರಣಾವತ್ (Kangana Ranaut) ಅವರನ್ನು ಟೀಕಿಸುವ ಭರದಲ್ಲಿ ಪಂಜಾಬ್‌ನ ಮಾಜಿ ಸಂಸದ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ.

    ನಟಿ-ರಾಜಕಾರಣಿ ಕಂಗನಾ ರೈತರ ಪ್ರತಿಭಟನೆಯ (Farmer Protest) ಸಂದರ್ಭದಲ್ಲಿ ಅತ್ಯಾಚಾರ ನಡೆದಿದೆ ಎಂದು ಆರೋಪಿಸಿದ್ದರು. ಅವರ ಹೇಳಿಕೆ ವಿರೋಧಿಸಲು ಮುಂದಾಗಿ ಪಂಜಾಬ್ ಮಾಜಿ ಸಂಸದ ಸಿಮ್ರಂಜಿತ್ ಸಿಂಗ್ ಮಾನ್ (Simranjit Singh Mann) ವಿವಾದಕ್ಕೆ ಸಿಲುಕಿದ್ದಾರೆ.ಇದನ್ನೂ ಓದಿ: 100 ಕೋಟಿ ಮೌಲ್ಯದ ಮನೆಗೆ ಶಿಫ್ಟ್ ಆಗಲಿದ್ದಾರೆ ದೀಪಿಕಾ ಪಡುಕೋಣೆ ದಂಪತಿ

    ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅತ್ಯಾಚಾರ ಹೇಗೆ ನಡೆಯುತ್ತವೆ ಎಂದು ಕಂಗನಾರನ್ನು ಕೇಳಿ. ಆಕೆಗೆ ಅದರ ಅನುಭವವಿದೆ ಎಂದು ನಾಲಿಗೆ ಹರಿಬಿಟ್ಟಿದ್ದಾರೆ.

    ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದೆ ಕಂಗನಾ ರಣಾವತ್, ರೈತರ ಚಳುವಳಿ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ರೈತ ಹೋರಾಟ ನಿಗ್ರಹಿಸುವ ಸಂಬಂಧ ಕಠಿಣ ನಿಲುವುಗಳನ್ನು ಕೈಗೊಂಡಿತು. ನಾಯಕರು ಬಲವಾಗಿರದಿದ್ದರೆ ಅಥವಾ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ನಮ್ಮ ದೇಶದಲ್ಲೂ ಬಾಂಗ್ಲಾದೇಶದಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿತ್ತು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

    ಮುಂದಿನ ದಿನಗಳಲ್ಲಿ ಈ ರೀತಿಯ ಹೇಳಿಕೆಗಳನ್ನು ನೀಡದಂತೆ ಕಂಗನಾ ಅವರಿಗೆ ಬಿಜೆಪಿ ಎಚ್ಚರಿಕೆ ನೀಡಿತ್ತು.ಇದನ್ನೂ ಓದಿ: ಬೆಂಗ್ಳೂರಿನ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ – ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆ

    ಗುಜರಾತ್ ಗಲಭೆ ವೇಳೆ ಸಾಮೂಹಿಕ ಅತ್ಯಾಚಾರಕ್ಕೆ ತುತ್ತಾಗಿದ್ದ ಮಹಿಳೆ ಎಂದು ಕಂಗನಾ ಬಿಂಬಿಸಿದ್ದು ವಿವಾದವಾಗಿತ್ತು. ಅಷ್ಟೇ ಅಲ್ಲ, ಮಹಿಳೆಯರು ಕೇವಲ 100 ರೂ. ಕೂಲಿಗೆ ಧರಣಿ ಮಾಡಲು ಬರುತ್ತಾರೆ ಎಂದೂ ನಾಲಿಗೆ ಹರಿಬಿಟ್ಟಿದ್ದರು.

    ಈ ಹೇಳಿಕೆ ಆಧಾರದ ಮೇಲೆ ಪಂಜಾಬ್ ಮಾಜಿ ಸಂಸದ ಸಿಮ್ರಂಜಿತ್ ಸಿಂಗ್ ಮಾನ್ ನಟಿ-ಸಂಸದೆ ಕಂಗನಾ ವಿರುದ್ಧ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.

  • ರೈತರ ಭಾರತ್ ಬಂದ್‌ಕರೆಗೆ ಆಂಧ್ರ ಪ್ರದೇಶ ಸರ್ಕಾರ ಬೆಂಬಲ

    ರೈತರ ಭಾರತ್ ಬಂದ್‌ಕರೆಗೆ ಆಂಧ್ರ ಪ್ರದೇಶ ಸರ್ಕಾರ ಬೆಂಬಲ

    ಹೈದರಾಬಾದ್: ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ ಬಂದ್‍ಗೆ ಆಂಧ್ರ ಪ್ರದೇಶ ಸರ್ಕಾರ ಬೆಂಬಲ ಘೋಷಿಸಿದೆ ಎಂದು ಆಂಧ್ರ ಪ್ರದೇಶದ ಮಾಹಿತಿ ಮತ್ತು ಸಾರಿಗೆ ಸಚಿವ ಪೆರ್ನಿ ವೆಂಕಟರಾಮಯ್ಯ ತಿಳಿಸಿದ್ದಾರೆ.

    ಆಂಧ್ರ ಪ್ರದೇಶ ಸರ್ಕಾರ, ವೈಎಸ್‍ಆರ್ ಕಾಂಗ್ರೆಸ್ ಬಂದ್‍ಗೆ ಬೆಂಬಲ ನೀಡುತ್ತಿವೆ. ಸೆಪ್ಟೆಂಬರ್ 26ರ ಮಧ್ಯರಾತ್ರಿಯಿಂದ 27ರ ಸಂಜೆಯವರೆಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‍ಗಳೂ ರಸ್ತೆಗಿಳಿಯುವುದಿಲ್ಲ ಎಂದು ಸಚಿವರು ತಿಳಿಸಿದ್ದಾರೆ. ಇದನ್ನೂ ಓದಿ:  ಒಳ್ಳೆಯ ಕೆಲಸ ಮಾಡಿದ್ದರೆ ಯಡಿಯೂರಪ್ಪರನ್ನ ಸಿಎಂ ಸ್ಥಾನದಿಂದ ಇಳಿಸುತ್ತಿರಲಿಲ್ಲ: ಡಿಕೆಶಿ

    ವಿಶಾಖಪಟ್ಟಣ ಉಕ್ಕಿನ ಕಾರ್ಖಾನೆಯ ಕಾರ್ಮಿಕರೂ ಬಂದ್‍ಗೆ ಬೆಂಬಲ ಸೂಚಿಸಿದ್ದಾರೆ.ವಿಶಾಖಪಟ್ಟಣ ಉಕ್ಕಿನ ಕಾರ್ಖಾನೆಯ ಖಾಸಗೀಕರಣವನ್ನು ವಿರೋಧಿಸುವುದಾಗಿ ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಎಡಪಕ್ಷಗಳು, ಕಾಂಗ್ರೆಸ್ ಮತ್ತು ತೆಲುಗುದೇಶಂ ಪಕ್ಷಗಳೂ ಬಂದ್‍ಗೆ ಬೆಂಬಲ ಘೋಷಿಸಿವೆ.

  • ಬೆಂಗಳೂರಿನಲ್ಲಿ ನಾಳೆ ಬಾರುಕೋಲು ಚಳವಳಿ – ಎಲ್ಲೆಲ್ಲಿ ಟ್ರಾಫಿಕ್ ಜಾಮ್?

    ಬೆಂಗಳೂರಿನಲ್ಲಿ ನಾಳೆ ಬಾರುಕೋಲು ಚಳವಳಿ – ಎಲ್ಲೆಲ್ಲಿ ಟ್ರಾಫಿಕ್ ಜಾಮ್?

    ಬೆಂಗಳೂರು: ಇಂದು ಕಾವೇರಿದ್ದ ರೈತರ ಪ್ರತಿಭಟನೆ ನಾಳೆಯೂ ಬೆಂಗಳೂರಿನಲ್ಲಿ ಮುಂದುವರಿಯಲಿದೆ. ನಾಳೆ ಬೆಂಗಳೂರಿಗೆ ನೇಗಿಲ ಯೋಗಿಯ ಪ್ರತಿಭಟನೆಯ ಕಿಚ್ಚು ಬೆಂಗಳೂರಿಗೆ ತುಸು ಹೆಚ್ಚಾಗೇ ತಾಗಲಿದೆ.

    ಬುಧವಾರ 10 ಸಾವಿರ ಅನ್ನದಾತರು ಬಾರುಕೋಲು ಚಳವಳಿ ನಡೆಸಲಿದ್ದಾರೆ. ಸಿಟಿ ರೈಲ್ವೆ ನಿಲ್ದಾಣದಿಂದ ಬೃಹತ್ ರ‌್ಯಾಲಿ ಮೂಲಕ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ರೈತರು ಪ್ಲಾನ್ ಮಾಡಿದ್ದಾರೆ. ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ಕರವೇ ನಾರಾಯಣ ಗೌಡ ಬಣವೂ ರ‌್ಯಾಲಿ ನಡೆಸಲಿದೆ.

    ಕೋಡಿಹಳ್ಳಿ ಚಂದ್ರಶೇಖರ್ ಕರೆ ನೀಡಿರುವ ನಾಳೆ ಬಾರುಕೋಲು ಚಳವಳಿಗೆ ಕಬ್ಬು ಬೆಳೆಗಾರರ ಸಂಘದ ಮುಖಂಡ ಕುರುಬೂರು ಶಾಂತಕುಮಾರ್ ಬೆಂಬಲ ನೀಡದಿರಲು ತೀರ್ಮಾನಿಸಿದ್ದಾರೆ. ನಮಗೆ ಮಾಹಿತಿ ಇಲ್ಲ. ಯಾರು ಬೆಂಬಲ ಕೇಳಿಲ್ಲ ಎಂದಿದ್ದಾರೆ. ಯಾರು ಮಣ್ಣಿನ ಮಕ್ಕಳ ಹೋರಾಟದಿಂದ ನಾಳೆ ಬೆಂಗಳೂರಲ್ಲಿ ಟ್ರಾಫಿಕ್ ಜಾಮ್ ಉಂಟಾಗುವ ಸಂಭವ ಹೆಚ್ಚಿದೆ.

    ಎಲ್ಲೆಲ್ಲಿ ಟ್ರಾಫಿಕ್ ಜಾಮ್: ಸಿಟಿ ರೈಲ್ವೆ ಸ್ಟೇಷನ್, ಮೆಜೆಸ್ಟಿಕ್, ಗಾಂಧಿನಗರ, ಆನಂದ್‍ರಾವ್ ಸರ್ಕಲ್, ಮಲ್ಲೇಶ್ವರಂ, ಶೇಷಾದ್ರಿಪುರಂ, ಅರಮನೆ ರಸ್ತೆ, ಓಕಳೀಪುರಂ, ಕೆ.ಆರ್. ಸರ್ಕಲ್, ವಿಧಾನಸೌಧ, ರಾಜಭವನ ಆಸುಪಾಸು ಕಾರ್ಪೋರೇಷನ್ ಸುತ್ತಮುತ್ತ, ಕಬ್ಬನ್‍ಪಾರ್ಕ್ ಸುತ್ತಮುತ್ತ ಮತ್ತು ಮೈಸೂರು ಬ್ಯಾಂಕ್ ಬಳಿ ಬೆಳಗ್ಗೆ 10 ಗಂಟೆಯ ನಂತರ ಭಾರೀ ಟ್ರಾಫಿಕ್ ಜಾಮ್ ಉಂಟಾಗುವ ಸಾಧ್ಯತೆಗಳಿವೆ.

    ಪೊಲೀಸರ ಪ್ಲಾನ್: ರೈತರ ಪ್ರತಿಭಟನೆ ತಡೆಗೆ ಪೊಲೀಸರು ಪ್ಲಾನ್ ಸಿದ್ಧಪಡಿಸಿಕೊಂಡಿದ್ದಾರೆ. ವಿಧಾನಸೌಧದ 1 ಕಿ.ಮೀ. ವ್ಯಾಪ್ತಿಯಲ್ಲಿ ಮೂರು ಕಡೆ 1 ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ಹಾಗೆ ಸಂಗೊಳ್ಳಿ ರಾಯಣ್ಣ ಪ್ರತಿಮೆ, ಮೌರ್ಯ ಸರ್ಕಲ್ ಫ್ಲೈಓವರ್, ಫ್ರೀಡಂ ಪಾರ್ಕ್ ಮುಂಭಾಗದಲ್ಲಿ ಪೊಲೀಸರ ಸರ್ಪಗಾವಲು ಇರಲಿದೆ. ವಿಧಾನಸೌಧದ ಸುತ್ತಮುತ್ತ ಕೂಡ ಬಿಗಿ ಬಂದೋಬಸ್ತ್ ಮಾಡಲಾಗುತ್ತಿದೆ.

  • ಒಳ್ಳೆ ಕೆಲಸ ಮಾಡುವುದು ತಪ್ಪೇ? ನಾನು ಏನು ತಪ್ಪು ಮಾಡಿದ್ದೇನೆ: ಸಿಎಂ

    ಒಳ್ಳೆ ಕೆಲಸ ಮಾಡುವುದು ತಪ್ಪೇ? ನಾನು ಏನು ತಪ್ಪು ಮಾಡಿದ್ದೇನೆ: ಸಿಎಂ

    ಬೆಂಗಳೂರು: ನಾನು ಮಹಿಳೆಗೆ ಅಪಮಾನ ಮಾಡಿದರೆ ಈ ಕ್ಷಣವೇ ರಾಜೀನಾಮೆ ನೀಡುತ್ತೇನೆ. ಹೆಣ್ಣುಮಗಳಿಗೆ ನೋವಾಗಿದ್ದರೆ ಪದ ವಾಪಸ್ ತೆಗೆದುಕೊಳ್ಳುತ್ತೇನೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

    ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆಕೆಯೇ ಮುಖ್ಯಮಂತ್ರಿ ನಾಲಾಯಕ್ ಅಂದು ರಾಜ್ಯಕ್ಕೆ ಅವಮಾನ ಮಾಡಿದ್ದಾರೆ. ಕನ್ನಡಸೌಧ ಗೇಟ್‍ಗೆ ಕಲ್ಲಲ್ಲಿ ಹೊಡೆದರೆ ಸುಮ್ಮನಿರಬೇಕೇ? ಅದಕ್ಕೆ ಕ್ರಮ ತೆಗೆದುಕೊಂಡಿದ್ದೇವೆ ಎಂದು ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡರು.

    ನಾನು ರೈತ ಮಹಿಳೆಯಗೆ ಅವಹೇಳನಕಾರಿಯಾಗಿ ಮಾತನಾಡಿಲ್ಲ. ಮಹಿಳೆಯರಿಗೆ ಅಪಮಾನ ಮಾಡಿದೆ ಎಂದು ಹೇಳಿದರೆ ಒಂದು ಕ್ಷಣ ನಾನು ಈ ಸ್ಥಾನದಲ್ಲಿ ಇರುವುದಿಲ್ಲ. ನನ್ನ ವೈಯಕ್ತಿಕ ಜೀವನದ ಬಗ್ಗೆ ಚರ್ಚೆಗೂ ನಾನು ರೆಡಿ. ಒಳ್ಳೆ ಕೆಲಸ ಮಾಡುವುದು ತಪ್ಪೇ? ನಾನು ಏನು ತಪ್ಪು ಮಾಡಿದ್ದೇನೆ? ಆ ಮಹಿಳೆಗೆ ನೋವಾಗಿದ್ದರೆ ಆ ಪದವನ್ನು ವಾಪಸ್ ತೆಗೆದುಕೊಳ್ಳುತ್ತೇನೆ ಎಂದರು.

    ಪೊಲೀಸರಿಗಿಂತ ಮಾಧ್ಯಮಗಳೇ ಮೊದಲು ಹೋಗ್ತಿರಾ ಅಂದ್ರೆ ಅರ್ಥ ಏನು? ನಾಲಾಯಕ್ ಮುಖ್ಯಮಂತ್ರಿ ಅಂದ್ರೆ ನಾನು ಸುಮ್ಮನೆ ಇರಬೇಕೇ? ಅದಕ್ಕೆ ಆಕೆಯನ್ನ ಬಂಧಿಸಲು ನಾನೇ ಹೇಳಿದೆ. ಗುಪ್ತಚರ ಇಲಾಖೆಯ ವೈಫಲ್ಯ ಆಗಿಲ್ಲ. ಕೆಲ ಮಾಧ್ಯಮಗಳ ಪ್ರಾಯೋಜಿತ ಪ್ರತಿಭಟನೆ ಇದು ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ ಎಂದರು.

    ಮುಖ್ಯಮಂತ್ರಿಯಾಗಿ ನಾನು ಟಿಎ, ಡಿಎ ತೆಗೆದುಕೊಂಡಿಲ್ಲ. ಸರ್ಕಾರಿ ಬಂಗಲೆಯನ್ನು ನಾನು ಬಳಸುತ್ತಿಲ್ಲ. ಪೆಟ್ರೋಲ್ ಬಿಲ್ ತಗೊಂಡಿಲ್ಲ. ನಾನು ನಾಡಿನ ಜನರನ್ನು ರಕ್ಷಿಸಲು ಇಲ್ಲಿ ಕುಳಿತಿದ್ದೇನೆ. ನನ್ನ ಮೇಲೆ ಯಾಕೆ ಅನುಮಾನ, ಯಾಕೆ ಆಕ್ರೋಶ? 45 ಸಾವಿರ ಕೋಟಿ ಸಾಲಮನ್ನಾ ಮಾಡಿದ್ದಕ್ಕಾ ಎಂದು ಪ್ರಶ್ನಿಸಿದರು.

    ಪ್ರತಿಭಟನೆ ವಾಪಸ್: ಸೋಮವಾರ ಫ್ರೀಡಂ ಪಾರ್ಕ್‍ನಲ್ಲಿ ರೈತರು ನೆಲದಮೇಲೆ ಉರುಳಾಡಿ ಆಕ್ರೋಶ ವ್ಯಕ್ತಪಡಿಸಿದರು. ಅಹೋರಾತ್ರಿ ಧರಣಿಗೂ ಮುಂದಾಗಿದ್ದರು. ಆದರೆ ಮಧ್ಯಾಹ್ನ 4 ಗಂಟೆ ಹೊತ್ತಿಗೆ ಸರ್ಕಾರಕ್ಕೆ 15 ದಿನಗಳ ಗಡುವು ನೀಡಿದ ರೈತರು ಪ್ರತಿಭಟನೆ ಹಿಂಪಡೆದರು. ಸಿಎಂ ನಮ್ಮನ್ನ ಭೇಟಿಯಾಗದೇ ಇದ್ದರೂ ಪರವಾಗಿಲ್ಲ. ನಮ್ಮ 29 ಬೇಡಿಕೆಗಳ ಪಟ್ಟಿಕೊಟ್ಟಿದ್ದೇವೆ. 15 ದಿನಗಳೊಳಗೆ ಈಡೇರಿಸದಿದ್ದರೆ ಮತ್ತೆ ಉಗ್ರ ಹೋರಾಟ ನಡೆಸುತ್ತೇವೆ ಎಂದು ಡೆಡ್‍ಲೈನ್ ನೀಡಿದರು.

    https://www.youtube.com/watch?v=Uy_ZDY02jOo

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews