Tag: farmer

  • Kolar| ಚೆಂಡು ಹೂವು ಬೆಲೆ ಕುಸಿತ – ರಸ್ತೆಬದಿ ಸುರಿದು ರೈತ ಆಕ್ರೋಶ

    Kolar| ಚೆಂಡು ಹೂವು ಬೆಲೆ ಕುಸಿತ – ರಸ್ತೆಬದಿ ಸುರಿದು ರೈತ ಆಕ್ರೋಶ

    – ಕೆಜಿಗೆ 10 ರೂ.ನಂತೆ ಕೇಳುತ್ತಿರುವ ವ್ಯಾಪಾರಿಗಳು

    ಕೋಲಾರ: ಸಾಲು ಸಾಲು ಹಬ್ಬಗಳು ಮುಗಿದ ಬಳಿಕ ಚೆಂಡು ಹೂವಿನ (Marigold Flower) ಬೆಲೆ ತೀವ್ರ ಕುಸಿತವಾಗಿದೆ. ಈ ಹಿನ್ನೆಲೆ ರೈತರೊಬ್ಬರು ತಾವು ಬೆಳೆದ ಹೂವನ್ನು ರಸ್ತೆಬದಿ ಸುರಿದು ಆಕ್ರೋಶ ವ್ಯಕ್ತಪಡಿಸಿದ ಘಟನೆ ಕೋಲಾರದಲ್ಲಿ (Kolar) ನಡೆದಿದೆ.

    ಕೋಲಾರ ಜಿಲ್ಲೆಯ ಬಂಗಾರಪೇಟೆ (Bangarpet) ತಾಲೂಕಿನ ನೆರ್ನಹಳ್ಳಿಯ ನಾರಾಯಣಪ್ಪ ಎಂಬ ರೈತ ದೇವರ ಪಾದದ ಬಳಿ ಇರಬೇಕಾದ ಹೂವನ್ನು ರಸ್ತೆಯಲ್ಲಿ ಚೆಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ. ವ್ಯಾಪಾರಿಗಳು ಕೆಜಿಗೆ 10 ರೂ.ನಂತೆ ಕೇಳುತ್ತಿದ್ದಾರೆ. ಮಾರುಕಟ್ಟೆಯಲ್ಲಿ ಹೂವಿನ ಬೆಲೆ ಇಲ್ಲದೆ ಹೂವಿನ ಬೆಳೆಗಾರರು ಕಂಗಾಲಾಗಿದ್ದಾರೆ. ಇದನ್ನೂ ಓದಿ: ಬೆಳಗಾವಿ| ಗಂಡು ಮಗುವಿಗೆ ಜನ್ಮ ನೀಡಿದ ತಾಯಿ ಸಾವು – ಬಿಮ್ಸ್‌ ಮುಂದೆ ಸಂಬಂಧಿಕರ ಪ್ರತಿಭಟನೆ

    ನಾರಾಯಣಪ್ಪ ಸುಮಾರು ನಾಲ್ಕು ಎಕರೆ ಪ್ರದೇಶದಲ್ಲಿ ಎಕರೆಗೆ 50 ಸಾವಿರದಂತೆ ಖರ್ಚು ಮಾಡಿ ಚೆಂಡು ಹೂವು ಬೆಳೆದಿದ್ದರು. ಆದರೆ ಚೆಂಡು ಹೂವು ಬೆಲೆ ಕುಸಿತ ಕಂಡ ಹಿನ್ನೆಲೆ ಕೋಲಾರ ಮುಖ್ಯರಸ್ತೆ ಬದಿಯಲ್ಲಿ ಸುರಿದು ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ ಸರ್ಕಾರ ರೈತರ ನೆರವಿಗೆ ಧಾವಿಸುವಂತೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ದಿನಸಿಗೆಂದು ಬಂದಿದ್ದ ವಿಕ್ರಂಗೌಡ ಉಡೀಸ್ – ಎನ್‌ಕೌಂಟರ್‌ಗೂ ಮುನ್ನ ಪೊಲೀಸರಿಂದ ಮನೆಯವರ ಶಿಫ್ಟ್

  • ಎತ್ತಿಗೆ ಸ್ನಾನ ಮಾಡಿಸಲು ಹೋದಾಗ ಮೊಸಳೆ ದಾಳಿ – ಮಾಲೀಕನ ಜೀವ ಉಳಿಸಿದ ಎತ್ತು

    ಎತ್ತಿಗೆ ಸ್ನಾನ ಮಾಡಿಸಲು ಹೋದಾಗ ಮೊಸಳೆ ದಾಳಿ – ಮಾಲೀಕನ ಜೀವ ಉಳಿಸಿದ ಎತ್ತು

    ಬಾಗಲಕೋಟೆ: ಎತ್ತಿನ ಮೈ ತೊಳೆಯಲು ಹೋಗಿದ್ದಾಗ ರೈತನ ಮೇಲೆ ಮೊಸಳೆ ದಾಳಿ ನಡೆಸಿದ್ದು, ಸಾಕಿದ ಎತ್ತು ರೈತನ ಜೀವ ಉಳಿಸಿರುವ ರೋಚಕ ಘಟನೆ ಜಿಲ್ಲೆಯ ಬೀಳಗಿ ( Bilagi) ತಾಲ್ಲೂಕಿನ ಹೊನ್ಯಾಳ ಗ್ರಾಮದ ಬಳಿ ಆಲಮಟ್ಟಿ (Almatti) ಜಲಾಶಯದ ಹಿನ್ನೀರಲ್ಲಿ ನಡೆದಿದೆ.

    ದಾಳಿಗೊಳಗಾದ ರೈತನನ್ನು ಹೊನ್ಯಾಳ (Honyal)  ಗ್ರಾಮದ ನಿವಾಸಿ ಧರಿಯಪ್ಪ ಮೇಟಿ(32) ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ದೇವಾಲಯಗಳಲ್ಲಿ ವಿಶೇಷ ಆಯುಧಪೂಜೆ – ವಾಹನಗಳಿಗೆ ಪೂಜೆ ಮಾಡಿ ಸಂಭ್ರಮಿಸಿದ ಜನ

    ಹೊನ್ಯಾಳ ಗ್ರಾಮದ ಆಲಮಟ್ಟಿ ಜಲಾಶಯದ ಹಿನ್ನೀರಿನಲ್ಲಿ ರೈತ ಎತ್ತಿನ ಮೈ ತೊಳೆಯಲು ಹೋಗಿದ್ದ. ಆ ವೇಳೆ ರೈತನ ಮೇಲೆ ಮೊಸಳೆ ದಾಳಿ ನಡೆಸಿದ್ದು, ಆತನ ಬಲಗೈಗೆ ಬಾಯಿಹಾಕಿದೆ. ಗಾಬರಿಯಲ್ಲಿ ಏನೂ ತೋಚದೇ ಪಕ್ಕದಲ್ಲಿದ್ದ ಎತ್ತಿನ ಹಗ್ಗವನ್ನು ತನ್ನ ಎಡಗೈಯಿಂದ ಹಿಡಿದುಕೊಂಡಿದ್ದಾನೆ. ಹಗ್ಗ ಹಿಡಿದಿದ್ದನ್ನು ಕಂಡ ಎತ್ತು ತನ್ನ ಮಾಲೀಕನನ್ನು ನೀರಿನಿಂದ ಹೊರಗೆ ಎಳೆದಿದೆ. ಆತನನ್ನು ಎತ್ತು ಹೊರಕ್ಕೆ ಎಳೆದಾಗ ಮೊಸಳೆ ಓಡಿಹೋಗಿದ್ದು, ರೈತನ ಬಲಗೈ ಕತ್ತರಿಸಿದೆ. ಆದರೆ ಸಾಕಿದ ಎತ್ತು ತನ್ನ ಮಾಲೀಕನನ್ನು ಪ್ರಾಣಾಪಾಯದಿಂದ ಪಾರು ಮಾಡಿದೆ.

    ಗಾಯಳು ಧರಿಯಪ್ಪನನ್ನು ಬಾಗಲಕೋಟೆ ಜಿಲ್ಲೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಭೇಟಿ ನೀಡಿ ಬೀಳಗಿ ಶಾಸಕ ಜೆಟಿ ಪಾಟೀಲ್ (JT Patil) ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಅರಣ್ಯಾಧಿಕಾರಿಗಳ ಜೊತೆ ದೂರವಾಣಿ ಕರೆಯ ಮೂಲಕ ಮಾತನಾಡಿ, ಸೂಕ್ತ ಪರಿಹಾರ ಕೊಡಬೇಕು ಹಾಗೂ ಎಲ್ಲ ದಾಖಲೆಗಳನ್ನು ಕಲೆ ಹಾಕಿ ಪರಿಹಾರಕ್ಕೆ ಪ್ರಕ್ರಿಯೆ ನಡೆಸಲು ಸೂಚನೆ ನೀಡಿದ್ದಾರೆ.ಇದನ್ನೂ ಓದಿ: ಆಯುಧ ಪೂಜೆಯ ದಿನದಂದೇ ಸಿಹಿಸುದ್ದಿ ಕೊಟ್ಟ ಯುವ- ಚಿತ್ರದ ಪೋಸ್ಟರ್‌ ಔಟ್

  • ಭಾರೀ ಮಳೆಗೆ ನೀರಿನಲ್ಲಿ ಕೊಚ್ಚಿ ಹೋದ ರೈತ – ಮುಳ್ಳು ಕಂಟಿಯಲ್ಲಿ ಶವ ಪತ್ತೆ

    ಭಾರೀ ಮಳೆಗೆ ನೀರಿನಲ್ಲಿ ಕೊಚ್ಚಿ ಹೋದ ರೈತ – ಮುಳ್ಳು ಕಂಟಿಯಲ್ಲಿ ಶವ ಪತ್ತೆ

    ಬಾಗಲಕೋಟೆ: ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ (Heavy Rain) ನೀರಿನಲ್ಲಿ ಕೊಚ್ಚಿ ಹೋಗಿ ರೈತರೊಬ್ಬರು (Farmer) ಸಾವನ್ನಪ್ಪಿದ ಘಟನೆ ಹುನಗುಂದ ತಾಲ್ಲೂಕಿನ ಮೂಗನೂರಿನಲ್ಲಿ ನಡೆದಿದೆ.

    ಮಲ್ಲಪ್ಪ ಶಿವಪ್ಪ ಬಸವನಾಳ(38) ಮೃತ ರೈತ. ಮೂಗನೂರು ಗ್ರಾಮದಿಂದ ಸ್ವಗ್ರಾಮ ಅಂಬಲಿಕೊಪ್ಪಕ್ಕೆ ಬೈಕಿನಲ್ಲಿ ತೆರಳುತ್ತಿದ್ದರು.

    ಬೈಕ್‌ನಲ್ಲಿ ಸೇತುವೆ ದಾಟುವಾಗ ನೀರಲ್ಲಿ ಕೊಚ್ಚಿ ಹೋಗಿದ್ದರು. ಬೈಕ್‌ ಸೇತುವೆ ಮೇಲೆ ಬಿದ್ದಿದ್ದರೆ ಹಳ್ಳದ ಪಕ್ಕದ ಮುಳ್ಳು ಕಂಟಿಯಲ್ಲಿ ರೈತನ ಶವ ಪತ್ತೆಯಾಗಿದೆ. ಅಮೀನಗಢ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ.

  • ರೈತನಿಗೆ ಅಪಮಾನ ಪ್ರಕರಣ – ಬೆಂಗಳೂರಿನ ಜಿ.ಟಿ ಮಾಲ್ ಬಂದ್!

    ರೈತನಿಗೆ ಅಪಮಾನ ಪ್ರಕರಣ – ಬೆಂಗಳೂರಿನ ಜಿ.ಟಿ ಮಾಲ್ ಬಂದ್!

    – 1.70 ಕೋಟಿ ರೂ. ತೆರಿಗೆ ಬಾಕಿ – ಬಿಬಿಎಂಪಿ ನೋಟಿಸ್‌ ಬಗ್ಗೆ ಮಾಲೀಕರು ಹೇಳಿದ್ದೇನು?
    – ಇದರಲ್ಲಿ ರಾಜಕೀಯವಿಲ್ಲ: ಮಾಲೀಕ ಪ್ರಶಾಂತ್‌

    ಬೆಂಗಳೂರು: ರೈತರೊಬ್ಬರಿಗೆ (Farmer) ಅಪಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ಸ್ವಯಂ ಪ್ರೇರಿತವಾಗಿ ಜಿ.ಟಿ ಮಾಲ್ (GT Mall) ಬಂದ್ ಮಾಡುವ ನಿರ್ಧಾರವನ್ನು ಮಾಲೀಕ ಪ್ರಶಾಂತ್ ಕೈಗೊಂಡಿದ್ದಾರೆ.

    ಕಳೆದ ಎರಡು ದಿನಗಳ ಹಿಂದೆಯಷ್ಟೇ ಹಾವೇರಿ ಮೂಲದ ರೈತ ಫಕೀರಪ್ಪ ಅವರಿಗೆ ಅಪಮಾನ ಮಾಡಿರುವ ಘಟನೆ ಬೆಳಕಿಗೆ ಬಂದಿತ್ತು. ಪಂಚೆ ಧರಿಸಿ ಬಂದಿದ್ದಕ್ಕೆ ಸಿಬ್ಬಂದಿ ಮಾಲ್ ಒಳಗೇ ಬಿಡದೇ ಅಪಮಾನ ಮಾಡಿದ್ದರು. ಈ ಪ್ರಕರಣ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿತ್ತು. ಅಲ್ಲದೇ ವಿಧಾನಸಭೆಯ ಅಧಿವೇಶನದಲ್ಲೂ ಸಚಿವ ಬೈರತಿ ಸುರೇಶ್ ಅವರು ಮಾಲ್ ಮುಚ್ಚಿಸುತ್ತೇವೆ ಎಂದು ಪ್ರಸ್ತಾಪಿಸಿದ್ದರು. ಈ ಎಲ್ಲ ಬೆಳವಣಿಗೆಗಳ ನಡುವೆ ಮಾಲೀಕರು ಸ್ವಯಂಪ್ರೇರಿತವಾಗಿ ಮಾಲ್ ಬಂದ್ ಮಾಡುವ ನಿರ್ಧಾರ ಕೈಗೊಂಡಿದ್ದಾರೆ. ಇದನ್ನೂ ಓದಿ: ಮದ್ಯದ ಅಂಗಡಿಗೆ ಪರವಾನಗಿ ನೀಡಲು ಅಧಿಕಾರಿಗಳು ಲಕ್ಷಾಂತರ ರೂಪಾಯಿ ಲಂಚ ಪಡೆಯುತ್ತಿದ್ದಾರೆ – ಕಾಂಗ್ರೆಸ್‌ ಸದಸ್ಯ ಬಾಂಬ್‌!

    ಈ ಕುರಿತು `ಪಬ್ಲಿಕ್ ಟಿವಿ’ (Public TV) ಜೊತೆಗೆ ಮಾತನಾಡಿದ ಜಿ.ಟಿ ಮಾಲ್ ಮಾಲೀಕ ಪ್ರಶಾಂತ್ (Prashanth), ನಮ್ಮ ಮಾಲ್‌ನಲ್ಲಿ ಆಗಬಾರದಂತಹ ಘಟನೆ ಆಗಿದೆ. ಅದು ಹೊಸ ಸಿಬ್ಬಂದಿಯಿಂದ ಆಗಿದೆ. ನಾನು ಮಾಲ್ ಮಾಲೀಕನಾಗಿ ಆ ಘಟನೆ ಬಗ್ಗೆ ಕ್ಷಮೆ ಕೇಳುತ್ತೇನೆ. ಇದನ್ನ 2 ದಿನಗಳ ಹಿಂದೆಯೇ ಕ್ಷಮೆ ಕೇಳಬೇಕಾಗಿತ್ತು. ನಮ್ಮ ತಂದೆ ಅನಾರೋಗ್ಯದ ವಿಚಾರವಾಗಿ ಸ್ಪಲ್ವ ಆಸ್ಪತ್ರೆಯಲ್ಲಿದ್ದೆವು. ರೈತ ಫಕೀರಪ್ಪ ಅವ್ರಿಗೆ ನಮ್ಮಿಂದ ಆಗಿರೋದ ತಪ್ಪು. ನನ್ನ ತಂದೆ ಕೂಡ ಫಕೀರಪ್ಪ ಜೊತೆಗೆ ಫೋನ್ ಕಾಲ್ ಮಾಡಿ ಕ್ಷಮೆ ಕೇಳಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: 7 ದಿನಗಳ ಕಾಲ ಜಿ.ಟಿ ಮಾಲ್ ಮುಚ್ಚಿಸುತ್ತೇವೆ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್ ಘೋಷಣೆ

    1.70 ಕೋಟಿ ತೆರಿಗೆ ಬಾಕಿ:
    ಮುಂದುವರಿದು ಮಾತನಾಡಿದ ಅವರು, ಬಿಬಿಎಂಪಿಯಿಂದ (BBMP) ನೋಟಿಸ್ ಬಂದಿದೆ. ಆದ್ರೆ ಮಾಲ್ ಬಂದ್ ಮಾಡುವಂತೆ ಹೇಳಿಲ್ಲ. ಘಟನೆ ಬಗ್ಗೆ ವರದಿ ನೀಡಿ ಎಂದು ನೀಡಿದ್ದಾರೆ ಎಂದರು. ಇದೇ ವೇಳೆ ಮಾಲ್ ತೆರಿಗೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, 1 ವರ್ಷದ ತೆರಿಗೆ ಬಾಕಿಯಿದೆ. 1.70 ಕೋಟಿ ರೂ. ಬಾಕಿ ಇದೆ. ಆದ್ರೆ ತೆರಿಗೆ ವಿಚಾರಕ್ಕೂ ಮಾಲ್ ಬಂದ್ ಮಾಡುತ್ತಿಲ್ಲ. ನಮ್ಮ ಕಡೆಯಿಂದ ತಪ್ಪಾಗಿದೆ, ಹಾಗಾಗಿ ನಾವು ಮಾಲ್ ಕ್ಲೋಸ್ ಮಾಡ್ತಿದ್ದೇವೆ. 24 ಗಂಟೆಗಳಲ್ಲಿ ಉತ್ತರ ನೀಡುವಂತೆ ಹೇಳಿದ್ದಾರೆ. ನಾವು ಇನ್ನೂ ಎರಡ್ಮೂರು ದಿನ ಮಾಲ್ ಕ್ಲೋಸ್ ಮಾಡುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ನಟ ದರ್ಶನ್ & ಗ್ಯಾಂಗ್‌ಗೆ ಆ.1ರ ವರೆಗೆ ಜೈಲೇ ಗತಿ – ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ

    ಇದರಲ್ಲಿ ರಾಜಕೀಯ ಇಲ್ಲ:
    ಮಾಲ್ ಬಂದ್ ಮಾಡುವ ವಿಚಾರದಲ್ಲಿ ಯಾವುದೇ ರಾಜಕೀಯ ನಡೆದಿಲ್ಲ. ನಮ್ಮ ಕಡೆಯಿಂದ ತಪ್ಪಾಗಿದೆ. ಫಕೀರಪ್ಪ ಅವ್ರಿಗೆ ಆಗಿರೋದಕ್ಕೆ ನೈತಿಕ ಹೊಣೆ ನಮ್ಮದೇ. ಮಾಲ್ ಎಷ್ಟು ದಿನ ಬಂದ್ ಆಗುತ್ತೆ ಗೊತ್ತಿಲ್ಲ. ಸೆಷನ್‌ನಲ್ಲಿ 7 ದಿನ ಬಂದ್ ಮಾಡುತ್ತೇವೆ ಅಂತ ಹೇಳಿದ್ದಾರೆ. ಗುರುವಾರ ಮಧ್ಯಾಹ್ನದ ಬಳಿಕವೇ ನಾವು ಈ ನಿರ್ಧಾರ ಕೈಗೊಂಡಿರೋದು, ಮಾಲ್ 7 ದಿನ ಬಂದ್ ಆಗಬಹುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: Valmiki Corporation Scam | ಮಾಜಿ ಸಚಿವ ನಾಗೇಂದ್ರಗೆ ಮತ್ತೆ 5 ದಿನ ಇಡಿ ಕಸ್ಟಡಿ – ಕೋರ್ಟ್ ಆದೇಶ

  • 7 ದಿನಗಳ ಕಾಲ ಜಿ.ಟಿ ಮಾಲ್ ಮುಚ್ಚಿಸುತ್ತೇವೆ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್ ಘೋಷಣೆ

    7 ದಿನಗಳ ಕಾಲ ಜಿ.ಟಿ ಮಾಲ್ ಮುಚ್ಚಿಸುತ್ತೇವೆ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್ ಘೋಷಣೆ

    ಬೆಂಗಳೂರು: ರೈತನಿಗೆ ಅವಮಾನ ಮಾಡಿದ ಜಿ.ಟಿ ಮಾಲ್ (GT Mall) ಅನ್ನು 7 ದಿನಗಳ ಕಾಲ ಮುಚ್ಚಿಸುತ್ತೇವೆ ಎಂದು ಸಚಿವ ಬೈರತಿ ಸುರೇಶ್ (Byrathi Suresh) ಘೋಷಣೆ ಮಾಡಿದ್ದಾರೆ.

    ವಿಧಾನಸಭೆಯಲ್ಲಿ ನಡೆದ ಚರ್ಚೆಗೆ ಸರ್ಕಾರದ ಪರವಾಗಿ ಉತ್ತರಿಸಿದ ಅವರು, ಈಗಾಗಲೇ ಬಿಬಿಎಂಪಿ ಆಯುಕ್ತರ ಹತ್ತಿರ ಮಾತನಾಡಿದ್ದೇವೆ. ಕಾನೂನಿನಲ್ಲಿ ಅವಕಾಶ ಇದೆ. ಸರ್ಕಾರದ ಕ್ರಮ ಕೈಗೊಳ್ಳಬಹುದು. ಹಾಗಾಗಿ 7 ದಿನ ಮಾಲ್ ಮುಚ್ಚಿಸುತ್ತೇವೆ, ಕ್ರಮ ಜರುಗಿಸುತ್ತೇವೆ ಎಂದರು. ಇದನ್ನೂ ಓದಿ: ಕಾಂಗ್ರೆಸ್ ಅವಧಿಯಲ್ಲೇ ಇಂದಿರಾ ಕ್ಯಾಂಟೀನ್ ಬಂದ್ – ಬೆಂಗಳೂರಲ್ಲಿ 15ಕ್ಕೂ ಹೆಚ್ಚು ಕ್ಯಾಂಟೀನ್‌ಗಳಿಗೆ ಬೀಗ

    ಇದಕ್ಕೂ ಮುನ್ನ ವಿಧಾನಸಭೆಯಲ್ಲಿ ಸ್ಪೀಕರ್ ಯು.ಟಿ.ಖಾದರ್ ವಿಷಯ ಪ್ರಸ್ತಾಪಿಸಿ ಗರಂ ಆಗಿದ್ದರು. ಅವನು ಎಷ್ಟೇ ದೊಡ್ಡವನು ಇರಲಿ. ಅವನಿಗೆ ಏನು ಅನ್ನೋದನ್ನ ತೋರಿಸಬೇಕು. ಅವಮಾನ ಮಾಡಿದ್ದನ್ನು ಖಂಡಿಸಬೇಕು. ಸರ್ಕಾರ ಕಠಿಣ ಕ್ರಮ ಜರುಗಿಸಬೇಕು. ಎಲ್ಲಾ ಮಾಲ್‌ಗಳಿಗೂ ಒಂದೇ ರೂಲ್ಸ್ ಮಾಡಬೇಕು ಎಂದು ಸೂಚಿಸಿದರು. ಇದನ್ನೂ ಓದಿ: ಶಿರೂರು ಗುಡ್ಡ ಕುಸಿತ ಪ್ರಕರಣ – ಐದು ವರ್ಷದ ಬಾಲಕಿ ಮೃತದೇಹ ಪತ್ತೆ

    ಇದೇ ವೇಳೆ ಸರ್ಕಾರದಿಂದ ಒಂದು ಆದೇಶ ಹೊರಡಿಸಲಿ. ಆ ಮಾಲ್‌ಗೆ ವಾರಗಳ ಕಾಲ ಪವರ್ ಕಟ್ ಮಾಡಲಿ ಎಂದು ಶಾಸಕ ಲಕ್ಷ್ಮಣ ಸವದಿ ಆಗ್ರಹಿಸಿದರೆ, ರೈತನಿಗೆ ಅವಮಾನ ಮಾಡಿದ ಆ ಮಾಲ್ ಅನ್ನು ಮುಚ್ಚಬೇಕು ಎಂದು ಶಾಸಕ ಪ್ರಕಾಶ್ ಕೋಳಿವಾಡ ಒತ್ತಾಯಿಸಿದರು. ಇದನ್ನೂ ಓದಿ: ಉದ್ಯೋಗ ಕಲ್ಪಿಸುವ ವಿಧೇಯಕ ತಡೆಹಿಡಿದು ಕನ್ನಡಿಗ, ಕರ್ನಾಟಕಕ್ಕೆ ಅಪಮಾನ: ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

    ಅಲ್ಲದೆ ರಾಜ್ಯದ ಎಲ್ಲಾ ಕ್ಲಬ್‌ಗಳು, ಮಾಲ್‌ಗಳಲ್ಲಿ ಒಂದೇ ರೂಲ್ಸ್ ತರಬೇಕು. ಪಂಚೆ ಸೇರಿದಂತೆ ಸಾಂಪ್ರದಾಯಿಕ ಉಡುಗೆಗಳನ್ನು ಧರಿಸುವುದನ್ನು ಬಿಡಬೇಕು ಎಂದು ಅಶೋಕ್ ಪಟ್ಟಣ, ಬೈರತಿ ಸುರೇಶ್ ಅಭಿಪ್ರಾಯ ವ್ಯಕ್ತಪಡಿಸಿದ್ರು. ಒಟ್ಟಾರೆಯಾಗಿ ಇಡೀ ಸದನ ಮಾಲ್ ನಡವಳಿಕೆ ಖಂಡಿಸಿ ಆಕ್ರೋಶವನ್ನು ವ್ಯಕ್ತಪಡಿಸಿತು. ಆ ಬಳಿಕ ಸರ್ಕಾರದ ಪರವಾಗಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ 7 ದಿನಗಳ ಕಾಲ ಮಾಲ್ ಮುಚ್ಚುವ ಘೋಷಣೆ ಮಾಡಿದರು. ಇದನ್ನೂ ಓದಿ: ಫರ್ನಿಚರ್ ಅಂಗಡಿಗೆ ಆಕಸ್ಮಿಕ ಬೆಂಕಿ – ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಭಸ್ಮ

  • ಪಂಚೆಯುಟ್ಟ ಬಂದಿದ್ದ ರೈತನಿಗೆ ಪ್ರವೇಶ ನಿರಾಕರಿಸಿ ಅವಮಾನಿಸಿದ್ದ ಸಿಬ್ಬಂದಿಯಿಂದ ಕ್ಷಮೆಯಾಚನೆ

    ಪಂಚೆಯುಟ್ಟ ಬಂದಿದ್ದ ರೈತನಿಗೆ ಪ್ರವೇಶ ನಿರಾಕರಿಸಿ ಅವಮಾನಿಸಿದ್ದ ಸಿಬ್ಬಂದಿಯಿಂದ ಕ್ಷಮೆಯಾಚನೆ

    – ಅವಮಾನಿಸಿದ್ದ ಮಾಲ್‌ ಆಡಳಿತ ಮಂಡಳಿಯಿಂದಲೇ ರೈತನಿಗೆ ಸನ್ಮಾನ

    ಬೆಂಗಳೂರು: ಪಂಚೆಯುಟ್ಟು ಬಂದಿದ್ದ ರೈತನಿಗೆ (Farmer) ಪ್ರವೇಶ ನಿರಾಕರಿಸಿ ಅವಮಾನಿಸಿದ್ದಕ್ಕೆ ಜಿಟಿ ಮಾಲ್‌ (GT Mall) ಆಡಳಿತ ಮಂಡಳಿ ಕ್ಷಮೆಯಾಚಿಸಿದೆ.

    ಘಟನೆ ಕುರಿತು ‘ಪಬ್ಲಿಕ್‌ ಟಿವಿ’ಗೆ ಸ್ಪಷ್ಟನೆ ನೀಡಿದ ಸೆಕ್ಯೂರಿಟಿ ಅರುಣ್‌, ಉದ್ದೇಶಪೂರ್ವಕವಾಗಿ ನಾವು ತಡೆದಿಲ್ಲ. ಮ್ಯಾನೇಜ್‌ಮೆಂಟ್‌ ಅವರಿಂದ ಉತ್ತರ ಬರುವ ತನಕ ಕಾಯಿಸಿದ್ದೆವು ಅಷ್ಟೇ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಮ್ಮ ಮೆಟ್ರೋ ಬಳಿಕ ಮಾಲ್‌ನಲ್ಲಿ ರೈತನಿಗೆ ಅವಮಾನ – ಪಂಚೆ ಧರಿಸಿದ್ದಕ್ಕೆ ಮಾಲ್‌ ಒಳಗೆ ಬಿಡದ ಸಿಬ್ಬಂದಿ!

    ನಿನ್ನೆ ಮಧ್ಯಾಹ್ನವೂ ವ್ಯಕ್ತಿಯೊಬ್ಬರು ಪಂಚೆ ಧರಿಸಿ ಮಾಲ್‌ಗೆ ಬಂದಿದ್ದರು. ಪಂಚೆಯನ್ನು ಮೊಣಕಾಲಿನ ತನಕ ಉಟ್ಕೊಂಡು ನಿಂತಿದ್ರು. ಆಗ ಕೆಳಗಿನ ಫ್ಲೋರ್‌ನಲ್ಲಿ ಬರ್ತ್‌ಡೇ ಪಾರ್ಟಿಯ ಇವೆಂಟ್ ನಡೆಯುತ್ತಿತ್ತು. ಈ ವಿಚಾರವನ್ನು ಮ್ಯಾನೇಜ್‌ಮೆಂಟ್‌ ಗಮನಕ್ಕೆ ತಂದಿದ್ದೆವು ಎಂದಿದ್ದಾರೆ.

    ಸಂಜೆ ಮತ್ತೆ ರೈತನೊಬ್ಬ ಪಂಚೆ ಉಟ್ಟುಕೊಂಡು ಬಂದಿದ್ದರು. ಈ ಸಮಯದಲ್ಲಿ ನಾವು ತಡೆದು, ಮ್ಯಾನೇಜ್‌ಮೆಂಟ್‌ ಗಮನಕ್ಕೆ ತಂದಿದ್ದೇವೆ. ಉದ್ದೇಶಪೂರ್ವಕವಾಗಿ ನಾವು ತಡೆದಿಲ್ಲ‌. ಮ್ಯಾನೇಜ್‌ಮೆಂಟ್‌ ಅವರಿಂದ ಉತ್ತರ ಬರುವ ತನಕ ಕಾಯಿಸಿದ್ದೆವು ಅಷ್ಟೆ ಎಂದು ಹೇಳಿದ್ದಾರೆ.

    ರೈತನಿಗೆ ಪ್ರವೇಶ ನಿರಾಕರಿಸಿ ಅವಮಾನಿಸಿದ್ದಕ್ಕೆ ಮಾಲ್‌ ವಿರುದ್ಧ ಜನಾಕ್ರೋಶ ವ್ಯಕ್ತವಾಗಿತ್ತು. ರೈತಪರ ಹಾಗೂ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಮಾಲ್‌ ಮುಂದೆ ಪ್ರತಿಭಟನೆ ನಡೆಸಿದರು. ಇದನ್ನೂ ಓದಿ: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿ: ಮಸೂದೆಯಲ್ಲಿ ಏನಿದೆ? ಕನ್ನಡಿಗರಿಗೆ ಅರ್ಹತೆ ಹೇಗೆ? ಯಾವ ಹುದ್ದೆಯಲ್ಲಿ ಎಷ್ಟು?

    ನಿನ್ನೆ ರೈತ ಫಕೀರಪ್ಪಗೆ ಪ್ರವೇಶ ನಿರಾಕರಿಸಿ ಜಿಟಿ ಮಾಲ್‌ನಲ್ಲಿ ಅವಮಾನಿಸಲಾಗಿತ್ತು. ಇಂದು ಅದೇ ಮಾಲ್‌ ಆಡಳಿತ ಮಂಡಳಿಯ ಉಸ್ತುವಾರಿ ಸುರೇಶ್‌ ಅವರಿಂದ ರೈತ ಫಕೀರಪ್ಪರನ್ನು ಸನ್ಮಾನಿಸಲಾಯಿತು. ಶಾಲು, ಹೂವಿನ ಹಾರ ಹಾಕಿ ಸನ್ಮಾನಿಸಿದರು.

  • ನಮ್ಮ ಮೆಟ್ರೋ ಬಳಿಕ ಮಾಲ್‌ನಲ್ಲಿ ರೈತನಿಗೆ ಅವಮಾನ – ಪಂಚೆ ಧರಿಸಿದ್ದಕ್ಕೆ ಮಾಲ್‌ ಒಳಗೆ ಬಿಡದ ಸಿಬ್ಬಂದಿ!

    ನಮ್ಮ ಮೆಟ್ರೋ ಬಳಿಕ ಮಾಲ್‌ನಲ್ಲಿ ರೈತನಿಗೆ ಅವಮಾನ – ಪಂಚೆ ಧರಿಸಿದ್ದಕ್ಕೆ ಮಾಲ್‌ ಒಳಗೆ ಬಿಡದ ಸಿಬ್ಬಂದಿ!

    ಬೆಂಗಳೂರು: ನಮ್ಮ ಮೆಟ್ರೋ (Namma Metro) ಬಳಿಕ ಬೆಂಗಳೂರಿನ ಖಾಸಗಿ ಮಾಲ್‌ನಲ್ಲಿ (Private Mall) ರೈತನಿಗೆ ಅವಮಾನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

    ರೈತರೊಬ್ಬರು (Farmer) ಪಂಚೆ ಧರಿಸಿ ಬಂದಿದ್ದಕ್ಕೆ ಒಳಗೆ ಬಿಡದೇ ಅವಮಾನ ಮಾಡಿರುವ ಘಟನೆ ಬೆಂಗಳೂರು ಮಾಗಡಿ ರಸ್ತೆಯಲ್ಲಿರುವ ಜಿ.ಟಿ ಮಾಲ್‌ನಲ್ಲಿ (GT Mall) ನಡೆದಿದೆ. ಮಾಲ್ ಆಡಳಿತ ಮಂಡಳಿಯ ವರ್ತನೆಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ. ಇದನ್ನೂ ಓದಿ: ಪಬ್ಲಿಕ್ ಟಿವಿ ಇಂಪ್ಯಾಕ್ಟ್- ಬಟ್ಟೆ ಕ್ಲೀನ್ ಇಲ್ಲವೆಂದು ಮೆಟ್ರೋದೊಳಗೆ ಬಿಡದ ಸಿಬ್ಬಂದಿ ವಜಾ: MD

    ಏನಿದು ಘಟನೆ?
    ಹಾವೇರಿ ಮೂಲದ ನಾಗರಾಜ್‌ ಎಂಬುವವರು ತಮ್ಮ ತಂದೆ – ತಾಯಿಯನ್ನು ಜಿ.ಟಿ ಮಾಲ್‌ಗೆ ಕರೆದುಕೊಂಡು ಬಂದಿದ್ದರು. ತಂದೆ-ತಾಯಿಗೆ ಸಿನಿಮಾ ತೋರಿಸಲು ಮಾಲ್‌ಗೆ ಕರೆದುಕೊಂಡು ಬಂದಿದ್ದರು. ಆದ್ರೆ ತಮ್ಮ ತಂದೆ ಪಂಚೆ ಧರಿಸಿದ್ದಾರೆ ಅನ್ನೋ ಕಾರಣಕ್ಕೆ ಮಾಲ್‌ ಸಿಬ್ಬಂದಿ ಪ್ರವೇಶ ನಿರಾಕರಿಸಿದ್ದಾರೆ. ಪಂಚೆ ಧರಿಸಿದರಿಗೆ ಮಾಲ್‌ ಒಳಗೆ ಬಿಡುವುದಿಲ್ಲ, ನಮ್ಮ ಮಾಲ್‌ನಲ್ಲಿ ಈ ರೀತಿ ರೂಲ್ಸ್ ಇದೆ ಅಂತ ಸಿಬ್ಬಂದಿ ಹೇಳಿರುವುದಾಗಿ ನಾಗರಾಜ್‌ ಆರೋಪಿಸಿದ್ದಾರೆ.

    ನಾಗರಾಜ್‌ ಅವರ ತಂದೆ ಹಾವೇರಿ ಜಿಲ್ಲೆಯ ಅರೇಮಲ್ಲಾಪುರ ಗ್ರಾಮದ ರೈತರು. ಪಂಚೆ ಧರಿಸಿದ್ದಾರೆ ಎಂಬ ಕಾರಣಕ್ಕೆ ಮಾಲ್‌ ಒಳಗೂ ಬಿಡದೇ, ಅರ್ಧ ಗಂಟೆಗೂ ಹೆಚ್ಚು ಕಾಲ ಮಾಲ್ ಮುಂದೆ ಕೂರಿಸಿ ಅವಮಾನ ಮಾಡಿದ್ದಾರೆ ಎಂದು ಪುತ್ರ ನಾಗರಾಜ್‌ ದೂರಿದ್ದಾರೆ. ಇದನ್ನೂ ಓದಿ: ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಅತ್ಯುತ್ತಮ ಪ್ರದರ್ಶನ – ಎನ್‌ಸಿಸಿ ಕೆಡೆಟ್‌ಗಳಿಗೆ ರಾಜ್ಯಪಾಲರ ಅಭಿನಂದನೆ

    ರೈತನಿಗೆ ಮಾಲ್‌ ಪ್ರವೇಶ ನಿರಾಕರಿಸಿದ ಆಡಳಿತ ಮಂಡಳಿ ವರ್ತನೆಗೆ ಸಾರ್ವಜನಿಕರಿಂದ ಭಾರೀ ಆಕ್ರೋಶ ವ್ಯಕ್ತವಾಯಿತು. ಅಲ್ಲೇ ಇದ್ದ ಕೆಲ ಯೂಟ್ಯೂಬರ್ಸ್‌ ಘಟನೆಯನ್ನ ವೀಡಿಯೋ ಮಾಡಲು ಶುರು ಮಾಡಿದರು. ಬಳಿಕ ಮಾಲ್‌ನ ಆಡಳಿತ ಮಂಡಳಿ ಜೊತೆ ಮಾತನಾಡಿ, ರೈತನಿಗೆ ಮಾಲ್ ಒಳಗೆ ಪ್ರವೇಶ ಕೊಡಿಸುವಂತೆ ಮಾಡಿದ್ದಾರೆ. ಅರ್ಧ ಗಂಟೆ ಬಳಿಕ ಸಿಬ್ಬಂದಿ ರೈತನಿಗೆ ಮಾಲ್‌ಒಳಗೆ ಪ್ರವೇಶ ಕಲ್ಪಿಸಿಕೊಟ್ಟಿದ್ದಾರೆ ಎಂದು ಪುತ್ರ ನಾಗರಾಜ್‌ ತಿಳಿಸಿದ್ದಾರೆ.

    ಕಳೆದ ಫೆಬ್ರವರಿ 26ರಂದು ಬೆಂಗಳೂರಿನ ರಾಜಾಜಿನಗರ ನಮ್ಮ ಮೆಟ್ರೋ ನಿಲ್ದಾಣದಲ್ಲಿ ರೈತನಿಗೆ ಅವಮಾನ ಮಾಡಿದ್ದ ಘಟನೆ ನಡೆದಿತ್ತು. ಇದಕ್ಕೆ ಮೆಟ್ರೋ ಆಡಳಿತ ಮಂಡಳಿ ಕ್ಷಮೆಯಾಚಿಸಿತ್ತು. ಇದನ್ನೂ ಓದಿ: ಹೆಣ್ಮಗಳೊಬ್ಬಳಿಂದ ನಮ್ಮ ವಿರುದ್ಧ ದೂರು ಬರೆಸಿದ ರಾಜ್ಯದ ಡಿಜಿಪಿ ನಾಲಾಯಕ್: ಸದನದಲ್ಲಿ ಹೆಚ್‌.ಡಿ.ರೇವಣ್ಣ ಭಾವೋದ್ವೇಗದ ಮಾತು

  • ಸಾಲಬಾಧೆ ತಾಳದೆ ವಿದ್ಯುತ್ ತಂತಿ ಹಿಡಿದು ರೈತ ಆತ್ಮಹತ್ಯೆ

    ಸಾಲಬಾಧೆ ತಾಳದೆ ವಿದ್ಯುತ್ ತಂತಿ ಹಿಡಿದು ರೈತ ಆತ್ಮಹತ್ಯೆ

    ರಾಯಚೂರು: ರೈತನೋರ್ವ (Farmer) ಸಾಲಬಾಧೆ (Indebtedness) ತಾಳದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು (Raichur) ಜಿಲ್ಲೆಯ ಸಿಂಧನೂರು (Sindhanur) ತಾಲೂಕಿನ ಉಪ್ಪಲದೊಡ್ಡಿ ಗ್ರಾಮದಲ್ಲಿ ನಡೆದಿದೆ.

    ಮಲ್ಲಪ್ಪ ತೆಗ್ಗಿಹಾಳ (32) ಸಾವನ್ನಪ್ಪಿರುವ ಯುವ ರೈತ. ಬ್ಯಾಂಕ್ ಹಾಗೂ ಖಾಸಗಿಯಾಗಿ ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದ ರೈತ ಸಾಲ ತೀರಿಸಲು ಆಗದೆ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದನ್ನೂ ಓದಿ: ರಾಹುಲ್‌ ವಿರುದ್ಧ ವಿಡಿಯೋ – ಯೂಟ್ಯೂಬರ್‌ ಬಂಧನಕ್ಕೆ ನೋಯ್ಡಾಗೆ ತೆರಳಿ ಬರಿಗೈಯಲ್ಲಿ ಕರ್ನಾಟಕ ಪೊಲೀಸರು ವಾಪಸ್‌

    ತನ್ನ ಮನೆಯ ಬಳಿ ವಿದ್ಯುತ್ ತಂತಿ ಹಿಡಿದು ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆ ಹಿನ್ನೆಲೆ ತುರ್ವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಜೈಲುಪಾಲಾದ ಅಮ್ಮನ ಕಂಡು ಬಿಕ್ಕಿ ಬಿಕ್ಕಿ ಅತ್ತ ಪವಿತ್ರಾ ಗೌಡ ಮಗಳು

  • ಸಾಲ ಮರುಪಾವತಿಸುವಂತೆ ಪತ್ನಿ, ಪುತ್ರನಿಗೆ 2 ದಿನ ಗೃಹ ಬಂಧನ- ಮನನೊಂದು ರೈತ ಆತ್ಮಹತ್ಯೆ

    ಸಾಲ ಮರುಪಾವತಿಸುವಂತೆ ಪತ್ನಿ, ಪುತ್ರನಿಗೆ 2 ದಿನ ಗೃಹ ಬಂಧನ- ಮನನೊಂದು ರೈತ ಆತ್ಮಹತ್ಯೆ

    ಚಿಕ್ಕೋಡಿ: ಸಾಲ (Loan) ಮರುಪಾವತಿ ವಿಳಂಬವಾಗಿದ್ದಕ್ಕೆ ಮಹಿಳೆಯೊಬ್ಬಳು ರೈತನ ಪತ್ನಿ ಹಾಗೂ ಪುತ್ರನನ್ನು ಗೃಹ ಬಂಧನದಲ್ಲಿಟ್ಟಿದ್ದಕ್ಕೆ ಮನನೊಂದು ರೈತ (Farmer) ವಿಷಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಹುಕ್ಕೇರಿಯ (Hukkeri) ಇಸ್ಲಾಂಪುರದಲ್ಲಿ ನಡೆದಿದೆ.

    ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ರಾಜು ಖೋತಗಿ ಎಂದು ಗುರುತಿಸಲಾಗಿದೆ. ಮೃತ ರಾಜು ರೈತನಾಗಿದ್ದು, ಭೀಕರ ಬರದಿಂದ ಬೆಳೆ ನಷ್ಟದಿಂದ ಅದೇ ಗ್ರಾಮದ ಸಿದ್ದವ್ವ ಬಯ್ಯನವರ ಎಂಬ ಮಹಿಳೆ ಬಳಿ 5 ತಿಂಗಳ ಹಿಂದೆ 1.5 ಲಕ್ಷ ರೂ. ಸಾಲ ಮಾಡಿದ್ದರು. ಎರಡು ದಿನದ ಹಿಂದೆ ಒಂದೇ ಬಾರಿಗೆ ಹಣ ಕೊಡುವಂತೆ ಸಿದ್ದವ್ವ ಕೇಳಿದ್ದಾಳೆ. ಹಣ ಕೊಡುವ ತನಕ ರೈತನ ಪತ್ನಿ ಹಾಗೂ ಪುತ್ರನನ್ನು ಮನೆಯಲ್ಲಿ ಬಿಟ್ಟು ಹೋಗುವಂತೆ ಹೇಳಿದ್ದಳು. ಬಳಿಕ ರೈತನ ಪತ್ನಿ ಹಾಗೂ ಪುತ್ರನನ್ನು ಎರಡು ದಿನದಿಂದ ಗೃಹ ಬಂಧನದಲ್ಲಿಟ್ಟಿದ್ದಳು. ಮಹಿಳೆ ಬಳಿ ರಾಜು ತನ್ನ ಪತ್ನಿ ಹಾಗೂ ಪುತ್ರನನ್ನು ಗೃಹಬಂಧನದಿಂದ ಬಿಡುವಂತೆ ಪರಿಪರಿಯಾಗಿ ಬೇಡಿಕೊಂಡರೂ ಬಿಡುಗಡೆ ಮಾಡದಿರುವ ಕಾರಣ ಮನನೊಂದು ರೈತ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನೂ ಓದಿ: ಅಪ್ರಾಪ್ತನ ಹುಚ್ಚಾಟಕ್ಕೆ ಇಬ್ಬರು ಟೆಕ್ಕಿಗಳು ಬಲಿ – ಅಪಘಾತದ ಬಗ್ಗೆ ಪ್ರಬಂಧ ಬರೆಯುವಂತೆ ಸೂಚಿಸಿದ ಕೋರ್ಟ್‌

    ರಾಜು ಪಡೆದಿದ್ದ ಸಾಲಕ್ಕೆ ಪ್ರತಿ ತಿಂಗಳು 10%ರಷ್ಟು ಬಡ್ಡಿಯನ್ನು ಕಟ್ಟುತ್ತಿದ್ದರು. ಅಲ್ಲದೇ ಒಂದೇ ಬಾರಿ ಹಣ ಮರಳಿಸುವಂತೆ ಸಿದ್ದವ್ವ ಕೇಳಿದಾಗ ಎರಡು ದಿನ ಕಾಲಾವಕಾಶ ಕೇಳಿದ್ದ ಎಂದು ತಿಳಿದು ಬಂದಿದೆ. ಇದಕ್ಕೆ ಒಪ್ಪದ ಮಹಿಳೆಯು ರೈತ, ಪತ್ನಿ ಹಾಗೂ ಪುತ್ರನನ್ನು ಗೃಹ ಬಂದನದಲ್ಲಿಟ್ಟಿದ್ದಳು. ಒಂದು ದಿನದ ಬಳಿಕ ರಾಜುನನ್ನು ಬಿಡುಗಡೆ ಮಾಡಿ, ಮಗ ಮತ್ತು ಪತ್ನಿಯನ್ನು ಗೃಹಬಂಧನದಲ್ಲಿಟ್ಟಳು.

    ಈ ಸಂಬಂಧ ದೂರು ನೀಡಲು ತೆರಳಿದಾಗ ಪೊಲೀಸರು ವಿಳಂಬ ಮಾಡಿದ್ದಾರೆ. ಬೆಳಗ್ಗೆಯಿಂದ ಠಾಣೆಯಲ್ಲಿ ಕೂರಿಸಿಕೊಂಡು ರಾತ್ರಿ ವೇಳೆ ದೂರು ದಾಖಲಿಸಿಕೊಂಡಿದ್ದಾರೆ ಎಂದು ಯಮಕನಮರಡಿ ಠಾಣೆ ಪೊಲೀಸರ (Yamakanmardi police) ವಿರುದ್ಧ ರೈತನ ಕುಟುಂಬಸ್ಥರು ಆರೋಪಿಸಿದ್ದಾರೆ. ಇದನ್ನೂ ಓದಿ: ಕೊವಾಕ್ಸಿನ್‌ ಅಡ್ಡ ಪರಿಣಾಮ ಅಧ್ಯಯನ – ಸಂಶೋಧನಾ ವರದಿ ಕಳಪೆ ಎಂದ ICMR

  • 200 ರೂ. ಗೆ 1 ಕೆ.ಜಿ ಬೀನ್ಸ್ ಮಾರಾಟ ಮಾಡಿದ ಯುವ ರೈತ!

    200 ರೂ. ಗೆ 1 ಕೆ.ಜಿ ಬೀನ್ಸ್ ಮಾರಾಟ ಮಾಡಿದ ಯುವ ರೈತ!

    – 2 ಎಕೆರೆ ಬೀನ್ಸ್ ಬೆಳೆದು 20 ಲಕ್ಷ ಆದಾಯ ಗಳಿಕೆ

    ಚಿಕ್ಕಬಳ್ಳಾಪುರ: ಬರದ ನಡುವೆಯೂ ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ತಿಪ್ಪೇನಹಳ್ಳಿ ಗ್ರಾಮದ ಯುವ ರೈತ ಗಿರೀಶ್‌, ಬೀನ್ಸ್‌ (Beans) ಬೆಳೆ ಬೆಳೆದು ಬಂಪರ್‌ ಲಾಭ ಮಾಡಿ ಇದೀಗ ಸುದ್ದಿಯಾಗಿದ್ದಾರೆ.

    ಹೌದು. ಇತ್ತೀಚೆಗೆ ರಾಜ್ಯ ಕಂಡ ಬಿಸಿಲಿನ ತಾಪಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆಯಷ್ಟೇ ಅಲ್ಲ, ರಾಜ್ಯದಲ್ಲಿ ಎಲ್ಲಿಯೂ ಹುರುಳಿಕಾಯಿ ಬೆಳೆಯಲು ಸಾಧ್ಯವಾಗಿಲ್ಲ. ರಣ ಬಿಸಿಲಿನ ತಾಪಮಾನಕ್ಕೆ ಹುರುಳಿಕಾಯಿ ಬೆಳೆ ಇಳುವರಿ ಬಂದಿಲ್ಲ. ಹಲವು ಕಡೆ ಬಿಸಿಲಿಗೆ ಹೂ ಬಾಡಿ ಉದುರಿ ಹೋಗಿದೆ. ಇದರಿಂದ ಹುರುಳಿಕಾಯಿಗೆ ಎಲ್ಲಿಲ್ಲದ ಬೇಡಿಕೆ ಬಂದಿದೆ.

    ಒಂದು ಕೆ.ಜಿ ಹುರುಳಿ ಬೆಲೆ ಇನ್ನೂರು ರೂಪಾಯಿಗೆ ಮಾರಾಟವಾಗುತ್ತಿದೆ. ಚಿಕ್ಕಬಳ್ಳಾಪುರ ತರಕಾರಿ ಮಾರುಕಟ್ಟೆಯಲ್ಲಿ ಖರೀದಿ ಮಾಡೋಣ ಅಂದ್ರೂ ಸಾಕಾಗುವಷ್ಟು ಬೀನ್ಸ್ ಸಿಗುತ್ತಿಲ್ಲ. ಒಂದೋ ಎರಡು ಮೂಟೆ ಬೀನ್ಸ್ ಬಂದರೆ ಅದಕ್ಕಾಗಿ ವರ್ತಕರ ನಡುವೆ ಭಾರೀ ಪೈಪೋಟಿ ಬೀಳುತ್ತಿದೆ. ಇದನ್ನೂ ಓದಿ: ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

    ಚಿಕ್ಕಬಳ್ಳಾಪುರ ತಾಲೂಕಿನ ತಿಪ್ಪೇನಹಳ್ಳಿ ಗ್ರಾಮದ ಗಿರೀಶ್, ಡಿಗ್ರಿ ಮುಗಿಸಿ ಖಾಸಗಿ ಕಂಪನಿಗೆ ಕೆಲಸಕ್ಕೆ ಸೇರಿಕೊಂಡಿದ್ದರು. ಬರುವ 15 ಸಾವಿರ ಸಂಬಳ ಸಾಕಾಗ್ತಾ ಇರಲಿಲ್ಲ. ಇದರಿಂದ ಕಂಪನಿ ಬಿಟ್ಟು ಊರಿಗೆ ಬಂದು ಇದ್ದ 8 ಎಕರೆ ಜಮೀನಿನಲ್ಲಿ ಎರಡು ಎಕರೆಯಲ್ಲಿ ಹುರುಳಿ ಬೀಜ ನಾಟಿ ಮಾಡಿದ್ದರು. ಕರೆಂಟ್ ಸಮಸ್ಯೆ ಇದ್ದರೂ ಜನರೇಟರ್ ಇಟ್ಟು ತೋಟಕ್ಕೆ ನೀರು ಹಾಯಿಸಿ ರಾತ್ರಿ ಹಗಲು ಕಷ್ಟ ಪಟ್ಟು ಬಂಪರ್ ಬೆಳೆ ಬೆಳೆದಿದ್ದಾರೆ.

    ಇದೀಗ ತಾನು ಬೆಳೆದ ಬೆಳೆಗೆ ಬಂಗಾರದಂತಹ ಬೆಲೆ ಬಂದಿದ್ದು ಎರಡು ಟನ್ ಹುರಳಿಗೆ ಬರೋಬ್ಬರಿ ಇಪ್ಪತ್ತು ಲಕ್ಷ ಗಳಿಸಿ ಬಂಪರ್ ಲಾಟರಿ ಹೊಡೆದಿದ್ದಾರೆ. ಬರದ ನಡುವೆಯೂ ಬೀನ್ಸ್ ಬೆಳೆದ ರೈತನಿಗೆ ಬಂಪರ್ ಲಾಭ ಬಂದಿದ್ದು ಸಂತಸಕ್ಕೆ ಪಾರವೇ ಇಲ್ಲದಂತಾಗಿದೆ.