Tag: farmer

  • ರೈತರಿಗೆ ಪವರ್ ಶಾಕ್- ಲಕ್ಷ ಲಕ್ಷ ಬಿಲ್ ನೀಡಿರುವ ವಿದ್ಯುತ್ ಇಲಾಖೆ

    ರೈತರಿಗೆ ಪವರ್ ಶಾಕ್- ಲಕ್ಷ ಲಕ್ಷ ಬಿಲ್ ನೀಡಿರುವ ವಿದ್ಯುತ್ ಇಲಾಖೆ

    ಹಾಸನ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ (Congress Govt) ಅಧಿಕಾರಕ್ಕೆ ಬಂದು ನಾಲ್ಕು ತಿಂಗಳು ಕಳೆದಿದೆ. ಚುನಾವಣಾ ಪೂರ್ವದಲ್ಲಿ ನೀಡಿದ್ದ ಐದು ಗ್ಯಾರಂಟಿಗಳಲ್ಲಿ ಗೃಹಜ್ಯೋತಿ, ಗೃಹಲಕ್ಷ್ಮಿ, ಶಕ್ತಿ, ಅನ್ನಭಾಗ್ಯ ಯೋಜನೆಗಳನ್ನು ಜಾರಿ ಮಾಡಿದೆ. ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಲೆ ಇವೆ. ಒಂದೆಡೆ ಉಚಿತ ವಿದ್ಯುತ್ ನೀಡುತ್ತಿದ್ದೇವೆ ಎನ್ನುತ್ತಿರುವ ಸರ್ಕಾರ ಮತ್ತೊಂದೆಡೆ ರೈತರಿಂದ ದುಪ್ಪಟ್ಟು ವಿದ್ಯುತ್ ಬಿಲ್ ವಸೂಲಿಗೆ ಇಳಿದಿದೆ.

    ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಗೃಹಜ್ಯೋತಿ ಯೋಜನೆ ಜಾರಿಗೊಳಿಸಿ 200 ಯೂನಿಟ್‍ವರೆಗೆ ಉಚಿತ ಕರೆಂಟ್ ನೀಡುವ ಕೊಟ್ಟ ಭರವಸೆ ಈಡೇರಿಸಿದೆ. ಆದ್ರೆ ಗ್ರಾಮೀಣ ಭಾಗಗಳಲ್ಲಿ ಬೇರೆ ರೀತಿಯ ಚಿತ್ರಣವಿದೆ. ತೀವ್ರ ಬರಗಾಲದಿಂದ ಬೆಳೆಗಳೆಲ್ಲಾ ನಾಶವಾಗಿ ರೈತರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಈ ನಡುವೆ ಉಳಿದಿರೋ ಅಲ್ಪಸ್ವಲ್ಪ ಬೆಳೆಗಳನ್ನು ಉಳಿಸಿಕೊಳ್ಳಲು ಪಂಪ್‍ಸೆಟ್ ಹೊಂದಿರುವ ರೈತರು, ವಿದ್ಯುತ್ ಇಲಾಖೆ ನೀಡ್ತಿರೋ ಒಂದೆರಡು ಗಂಟೆ ಕರೆಂಟ್‍ನಲ್ಲೇ ಬೆಳೆಗಳಿಗೆ ನೀರು ಹಾಯಿಸುತ್ತಿದ್ದಾರೆ. ಪಂಪ್‍ಸೆಟ್‍ಗಳನ್ನು ಹೊಂದಿರುವ ರೈತರಿಗೆ ವಿದ್ಯುತ್ ಇಲಾಖೆ ಶಾಕ್ ನೀಡಿದೆ. ಲಕ್ಷ ಲಕ್ಷ ಮೊತ್ತದ ಕರೆಂಟ್ ಬಿಲ್ ನೀಡಿದ್ದು, ಇನ್ನು 15 ದಿನಗಳಲ್ಲಿ ಬಿಲ್ ಪಾವತಿ ಮಾಡಬೇಕು ಎಂದು ವಾರ್ನಿಂಗ್ ನೀಡಿದೆ.

    ಹಾಸನ (Hassan) ಜಿಲ್ಲೆಯಲ್ಲಿ ರೈತರು ಬಳಸುವ ಒಂದೂವರೆ ಲಕ್ಷಕ್ಕೂ ಅಧಿಕ ಪಂಪ್‍ಸೆಟ್‍ಗಳಿಗೆ ಸರ್ಕಾರ ಕರೆಂಟ್ ನೀಡುತ್ತಿದೆ. ಇದುವರೆಗೂ ಬಹುತೇಕ ಸರ್ಕಾರಗಳು ರೈತರ ಬೆಳೆಗಳಿಗೆ ಬಳಸುವ ವಿದ್ಯುತ್‍ಗೆ ಬಿಲ್ ನೀಡಿರಲಿಲ್ಲ. ಅದರಲ್ಲೂ ಕೃಷಿ ಬಳಕೆ ಪಂಪ್‍ಸೆಟ್‍ಗಳಿಗೆ ರೈತರು ಉಚಿತವಾಗಿಯೇ ಕರೆಂಟ್ ಬಳಕೆ ಮಾಡಿಕೊಳ್ಳುತ್ತಿದ್ದರು. ಕೆಲವು ರೈತರು ಇನ್ನೂ ಮೀಟರ್ ಅಳವಡಿಕೆ ಮಾಡಿಸಿಕೊಳ್ಳುವ ಪ್ರಕ್ರಿಯೆಯಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಗೃಹಜ್ಯೋತಿ ಜಾರಿ ಮಾಡಿರುವ ಸರ್ಕಾರ ಸಣ್ಣ, ಅತಿಸಣ್ಣ ರೈತರು ತಮ್ಮ ಕೃಷಿ ಚಟುವಟಿಕೆಗೆ ಅಗತ್ಯಕ್ಕೆ ತಕ್ಕಂತೆ ಬಳಸುತ್ತಿರುವ ನೀರಾವರಿ ಪಂಪ್‍ಸೆಟ್‍ಗಳಿಗೆ ಲಕ್ಷ ಲಕ್ಷ ಬಿಲ್ ನೀಡಲು ಆರಂಭಿರುವುದು ರೈತರಿಗೆ ದೊಡ್ಡ ಆಘಾತ ಉಂಟು ಮಾಡಿದೆ.

    ಸಕಲೇಶಪುರ, ಬೇಲೂರು ಸೇರಿದಂತೆ ಎಲ್ಲಾ ತಾಲೂಕುಗಳ ರೈತರಿಗೆ ದುಬಾರಿ ಬಿಲ್ ಮೂಲಕ ಬರೆ ಎಳೆಯುತ್ತಿದೆ. ಹತ್ತಾರು ವರ್ಷಗಳಿಂದ ಕೆಲ ರೈತರು ಬಿಲ್ ಪಾವತಿ ಮಾಡಿಲ್ಲ. ಅಂತಹವರನ್ನು ಸೇರಿಸಿ ಎಲ್ಲಾ ರೈತರ ಪಂಪ್‍ಸೆಟ್‍ಗಳಿಗೆ ಎರಡೂವರೆ ಲಕ್ಷ, ಒಂದು ಲಕ್ಷ, ಐವತ್ತು ಸಾವಿರ ಹೀಗೆ ಮನಬಂದಂತೆ ಬಿಲ್ ನೀಡಿದ್ದಾರೆ. ಈ ವರ್ಷ ಬರಗಾಲದಿಂದ ಬೆಳೆ ಕಳೆದುಕೊಂಡು ಕಂಗಾಲಾಗಿದ್ದೀವಿ. ಈ ವೇಳೆ ಹೇಗೆ ಬಿಲ್ ಕಟ್ಟೋದು ಎನ್ನುತ್ತಿದ್ದಾರೆ. ಇದನ್ನೂ ಓದಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಎಡವಟ್ಟು- ಕೆಇಎಯಿಂದ ನೂರಾರು ಅಭ್ಯರ್ಥಿಗಳಿಗೆ ಸಂಕಷ್ಟ

    ಸರ್ಕಾರ ಕೊಟ್ಟ ಮಾತಿನಂತೆ ಗ್ಯಾರಂಟಿ ಈಡೇರಿಸಲು ಗೃಹಜ್ಯೋತಿ ಜಾರಿಗೊಳಿಸಿ ಮನೆಮನೆಗೆ ಉಚಿತ ವಿದ್ಯುತ್ ನೀಡುತ್ತಿದ್ದೇವೆ ಎಂದು ಹೇಳಿಕೊಳ್ಳುತ್ತಿದೆ. 200 ಯೂನಿಟ್ ವಿದ್ಯುತ್ ಉಚಿತ ಸಿಗುತ್ತಿದೆ ಎಂದು ಜನರು ಖಷಿಯಲ್ಲಿರುವಾಗ ಪಂಪ್‍ಸೆಟ್‍ಗಳಿಗೆ ದುಬಾರಿ ಬಿಲ್ ನೀಡುವ ಮೂಲಕ ರೈತರಿಂದ ಹಣ ವಸೂಲಿ ಮಾಡಲು ಮುಂದಾಗಿರೋದು ರೈತರ ಕಣ್ಣು ಕೆಂಪಾಗಿಸಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಭತ್ತದ ಬೆಳೆಯಲ್ಲಿ ಮೂಡಿ ಬಂದ ಅಪ್ಪು ಚಿತ್ರ – ವಿಭಿನ್ನ ಕಲೆ ಮೂಲಕ ಅಭಿಮಾನ ಮೆರೆದ ರೈತ

    ಭತ್ತದ ಬೆಳೆಯಲ್ಲಿ ಮೂಡಿ ಬಂದ ಅಪ್ಪು ಚಿತ್ರ – ವಿಭಿನ್ನ ಕಲೆ ಮೂಲಕ ಅಭಿಮಾನ ಮೆರೆದ ರೈತ

    ರಾಯಚೂರು: ಕರ್ನಾಟಕ ರತ್ನ, ಕನ್ನಡ ಚಿತ್ರರಂಗದ ದೊಡ್ಮನೆ ಕಣ್ಮಣಿ ಪುನೀತ್ ರಾಜಕುಮಾರ್ (Puneeth Rajkumar) ಅಂದ್ರೆ ಅಭಿಮಾನಿಗಳಿಗೆ ಎಲ್ಲಿಲ್ಲದ ಪ್ರೀತಿ. ಸಾಕಷ್ಟು ಅಭಿಮಾನಿಗಳು ಈಗಾಗಲೇ ಭಿನ್ನ ವಿಭಿನ್ನ ರೀತಿಯಲ್ಲಿ ಅಪ್ಪು ಮೇಲಿನ ಅಭಿಮಾನ ಮೆರೆದಿದ್ದಾರೆ. ಆದರೆ ರಾಯಚೂರಿನ (Raichur) ಅಭಿಮಾನಿ ರೈತ ಕಲಾವಿದ ಸತ್ಯನಾರಾಯಣ ಮಾತ್ರ ವಿಶೇಷವಾಗಿ ನಿಲ್ಲುತ್ತಾರೆ.

    ಸಿರವಾರ ತಾಲೂಕಿನ ಡೋಣಿ ಬಸವಣ್ಣ ಕ್ಯಾಂಪ್‌ನ ರೈತ, ಅಪ್ಪು ಅಭಿಮಾನಿ ಸತ್ಯನಾರಾಯಣ ತನ್ನ ಎರಡು ಎಕರೆ ಗದ್ದೆಯಲ್ಲಿ ಜಪಾನ್ ತಂತ್ರಜ್ಞಾನ ಮೂಲಕ ವಿವಿಧ ಭತ್ತದ ತಳಿಗಳನ್ನು ಬೆಳೆದು ಅಪ್ಪು ಚಿತ್ರ ಬಿಡಿಸಿದ್ದಾರೆ. ಈ ಮೂಲಕ ಭತ್ತದ ಬೆಳೆಯಲ್ಲಿ ಪುನೀತ್ ರಾಜಕುಮಾರ್‌ನ ಜೀವಂತವಿರಿಸಿದ್ದಾರೆ.

    ತೆಲಂಗಾಣ, ಗುಜರಾತ್‌ನಿಂದ ತಂದ ಕಾವೇರಿ, ಗೋಲ್ಡನ್ ರೋಸ್, ಕಾಲ ಭಟ್ಟಿ ಹೆಸರಿನ 100 ಕೆ.ಜಿ ಭತ್ತದ ಬೀಜಗಳನ್ನು ನೆಟ್ಟು ಸಾವಯವ ಪದ್ಧತಿಯಲ್ಲಿ ಬೆಳೆದು ಅಪ್ಪು ಮೇಲಿನ ಅಭಿಮಾನ ಮೆರೆದಿದ್ದಾರೆ. ಬರದ ನಡುವೆಯೇ ಟ್ಯಾಂಕರ್ ಮೂಲಕ ಗದ್ದೆಗೆ ನೀರು ಹಾಯಿಸಿ ಸುಮಾರು 3 ಲಕ್ಷ ರೂ. ಖರ್ಚು ಮಾಡಿ, ನಿತ್ಯ ನಿಗಾವಹಿಸಿ 90 ದಿನದ ಬೆಳೆಯಲ್ಲಿ ಅದ್ಭುತ ಕಲಾಚಿತ್ರ ಮೂಡಿಸಿದ್ದಾರೆ. ಭಾವಚಿತ್ರದ ಕೆಳಗೆ ‘ಕರ್ನಾಟಕ ರತ್ನ’ ಅನ್ನೋ ಅಕ್ಷರಗಳನ್ನೂ ಬೆಳೆಯಲ್ಲೇ ಬರೆದಿದ್ದಾರೆ. ಒಂದೊಂದು ಅಕ್ಷರ 40 ಅಡಿ ಇದೆ. ತನ್ನ ಅಂಗವೈಕಲ್ಯ ಮೆಟ್ಟಿ ನಿಂತು ಉತ್ತಮ ಬೆಳೆ ಬೆಳೆಯುವ ಮೂಲಕ ಅಪ್ಪು ದ್ವಿತೀಯ ಪುಣ್ಯಸ್ಮರಣೆಗೆ ಅಭಿಮಾನಿಗಳಿಗೆ ವಿಶೇಷ ಉಡುಗೊರೆ ನೀಡಿದ್ದಾರೆ. ಇದನ್ನೂ ಓದಿ: Operation Ajay: ಇಸ್ರೇಲ್‌ನಿಂದ 230 ಮಂದಿ ಭಾರತೀಯರ ಆಗಮನ – ಕನ್ನಡಿಗರಿಗೆ ಟಿ.ಬಿ ಜಯಚಂದ್ರ ಆತ್ಮೀಯ ಸ್ವಾಗತ

    ರೈತ (Farmer) ಸತ್ಯನಾರಾಯಣ ಅವರಿಗೆ ಅಪ್ಪು ಮೇಲೆ ಇರುವ ಅಭಿಮಾನಕ್ಕೆ ಇಡೀ ಗ್ರಾಮವೇ ಮೆಚ್ಚುಗೆ ವ್ಯಕ್ತಪಡಿಸಿದೆ. ಚಪ್ಪಲಿ ಹಾಕದೆ ಬರಿಗಾಲಲ್ಲೇ ಉಳುಮೆ ಮಾಡಿರುವ ರೈತ ಸತ್ಯನಾರಾಯಣ, ಗದ್ದೆಗೆ ಪೂಜೆ ಮಾಡುವ ಮೂಲಕ ಅಪ್ಪು ಮೇಲಿನ ಅಭಿಮಾನದ ಭಕ್ತಿಯನ್ನೂ ಮೆರೆಯುತ್ತಿದ್ದಾರೆ. ಸಾಮಾನ್ಯ ಕಣ್ಣಿಗೆ ಕಪ್ಪು, ಹಸಿರು ಬೆಳೆ ಮಾತ್ರ ಕಾಣುತ್ತಿದ್ದರೂ ಡ್ರೋನ್ ಕ್ಯಾಮೆರಾ ಕಣ್ಣಿಲ್ಲಿ ಅಪ್ಪು ಚಿತ್ರ ಮನಮೋಹಕವಾಗಿ ಮೂಡಿಬಂದಿದೆ.

    ಈಗಾಗಲೇ ಅಶ್ವಿನಿ ಪುನೀತ್ ರಾಜಕುಮಾರ್ ಅವರನ್ನು ಭೇಟಿಯಾಗಿರುವ ಸತ್ಯನಾರಾಯಣ ಮೆಚ್ಚುಗೆಯನ್ನೂ ಪಡೆದಿದ್ದಾರೆ. ಅಶ್ವಿನಿಯವರ ಕೈಯಿಂದ ಅಪ್ಪು ಭಾವಚಿತ್ರವನ್ನು ಲೋಕಾರ್ಪಣೆ ಮಾಡಿಸುವ ಇಂಗಿತ ಹೊಂದಿದ್ದಾರೆ. ಒಟ್ಟಿನಲ್ಲಿ ಇಡೀ ದೇಶದಲ್ಲೇ ಅಪರೂಪದ ಕಲೆಯ ಮೂಲಕ ಅಪ್ಪು ಅಭಿಮಾನಿ ತನ್ನ ಅಭಿಮಾನವನ್ನು ಜಗತ್ತಿಗೆ ತೋರಿಸಿದ್ದಾರೆ. ಇದನ್ನೂ ಓದಿ: ಐಟಿ ಭರ್ಜರಿ ಬೇಟೆ- ಬಾಕ್ಸ್‌ಗಳಲ್ಲಿ ಕಂತೆ ಕಂತೆ ಸಂಗ್ರಹಿಸಿಟ್ಟಿದ್ದ 42 ಕೋಟಿ ರೂ. ಸೀಜ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದನಗಳ ಮೈ ತೊಳೆಯಲು ಹೋದ ರೈತ ನೀರು ಪಾಲು

    ದನಗಳ ಮೈ ತೊಳೆಯಲು ಹೋದ ರೈತ ನೀರು ಪಾಲು

    ದೊಡ್ಡಬಳ್ಳಾಪುರ: ದನಗಳ ಮೈ ತೊಳೆಯಲು ನೀರಿಗಿಳಿದಿದ್ದ ರೈತನೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದುರ್ಘಟನೆ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ದೊಡ್ಡಬಳ್ಳಾಪುರ (Doddaballapura) ತಾಲೂಕಿನ ಒಡೇರಹಳ್ಳಿ ಸಮೀಪದ ಜಾಲಿಕಟ್ಟೆಯಲ್ಲಿ ಸಂಭವಿಸಿದೆ.

    ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ರಾಮಪುರ ಗ್ರಾಮದ ಕುಮಾರ್ (44) ಮೃತ ರೈತ. ಒಡೇರಹಳ್ಳಿ ಸಮೀಪದ ಜಾಲಿಕಟ್ಟೆಯಲ್ಲಿ ದನಗಳ ಮೈ ತೊಳೆಯಲು ನೀರಿಗಿಳಿದಿದ್ದ ವೇಳೆ ಕಾಲು ಜಾರಿ ಬಿದ್ದು ಸಾವನಪ್ಪಿದ್ದಾರೆ ಎನ್ನಲಾಗಿದೆ. ಮಂಗಳವಾರ ಮಧ್ಯಾಹ್ನ 06 ದನಗಳ ಮೈತೊಳೆಯಲು ತೆರಳಿದ್ದ ವೇಳೆ ಘಟನೆ ಸಂಭವಿಸಿದ್ದು, ದನಗಳು ಮನೆಗೆ ಹಿಂದಿರುಗಿ ಬಂದರೂ ಕುಮಾರ್ ಮನೆಗೆ ಬಾರದೇ ಇರುವುದರಿಂದ ಕುಟುಂಬಸ್ಥರು ಆತಂಕಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಪ್ರಿಯತಮೆಯ ಬೆತ್ತಲೆ ಫೋಟೋ ಸ್ನೇಹಿತರೊಂದಿಗೆ ಹಂಚಿಕೊಳ್ತಿದ್ದ ವಿಕೃತ ಕಾಮಿ ಅಂದರ್

    ಸ್ಥಳಕ್ಕೆ ದೊಡ್ಡಬೆಳವಂಗಲ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಎಂ.ಆರ್.ಹರೀಶ್ ನೇತೃತ್ವದಲ್ಲಿ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಯವರು ಸ್ಥಳಕ್ಕೆ ತೆರಳಿ ಹುಡುಕಾಟ ನಡೆಸಿ ಮೃತದೇಹವನ್ನು ಹೊರತೆಗೆದಿದ್ದಾರೆ. ಮೃತನಿಗೆ ಮೂರು ವರ್ಷಗಳ ಹಿಂದೆ ಮದುವೆಯಾಗಿದ್ದು, ಮಡದಿ ಆರು ತಿಂಗಳ ಗರ್ಭಿಣಿ ಎನ್ನಲಾಗಿದೆ. ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ಸಂಭವಿಸಿದೆ. ಇದನ್ನೂ ಓದಿ: ಅತ್ತಿಬೆಲೆ ಪಟಾಕಿ ದುರಂತ- ನಾಲ್ವರು ಅಧಿಕಾರಿಗಳ ಅಮಾನತು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸರ್ಕಾರವೇ ನಾಚುವಂತೆ ರೈತರಿಂದಲೇ ನಿರ್ಮಾಣವಾಯ್ತು ವಿಶೇಷ ಬ್ಯಾರಲ್‌ ಸೇತುವೆ

    ಸರ್ಕಾರವೇ ನಾಚುವಂತೆ ರೈತರಿಂದಲೇ ನಿರ್ಮಾಣವಾಯ್ತು ವಿಶೇಷ ಬ್ಯಾರಲ್‌ ಸೇತುವೆ

    – ಜಮಖಂಡಿಯ ಕಂಕಣವಾಡಿ ಗ್ರಾಮದ ರೈತರ ಸಾಧನೆ
    – ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ದುಡ್ಡು ಹಾಕಿ ನಿರ್ಮಾಣ

    ಬಾಗಲಕೋಟೆ: ಆಗದು ಎಂದು ಕೈಲಾಗದು ಎಂದು ಕೈಕಟ್ಟಿ ಕುಳಿತರೆ ಸಾಗದು ಕೆಲಸವು ಮುಂದೆ. ಮನಸೊಂದಿದ್ದರೆ ಮಾರ್ಗವು ಉಂಟು ಕೆಚ್ಚೆದೆ ಇರಬೇಕೆಂದು ಎಂಬ ಚಿತ್ರಗೀತೆಯಂತೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಂಕಣವಾಡಿ ಗ್ರಾಮದ ರೈತರು ಒಂದು ವಿಶೇಷ ಸಾಧನೆ ಮಾಡಿದ್ದಾರೆ. ಸರ್ಕಾರವೇ ನಾಚುವಂತೆ ಯಾವ ಎಂಜಿನಿಯರ್‌ಗಳ ಸಹಾಯ ಇಲ್ಲದೇ ಸ್ವತಃ ತಾವೇ ಎಂಜಿನಿಯರ್‌ಗಳಾಗಿ ಕೃಷ್ಣಾ ನದಿಗೆ ಅಡ್ಡಲಾಗಿ ಬ್ಯಾರಲ್ ಸೇತುವೆ ನಿರ್ಮಾಣ ಮಾಡಿ ಸೈ ಎನಿಸಿಕೊಂಡಿದ್ದಾರೆ.

    ಈ ಬ್ಯಾರಲ್ ಸೇತುವೆ ಸುಮಾರು 20 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿದ್ದು, 300 ಪ್ಲಾಸ್ಟಿಕ್ ಬ್ಯಾರೆಲ್‌ಗಳು, 15 ಟನ್ ಕಬ್ಬಿಣದ ಆ್ಯಂಗ್ಲರ್, 10 ಟನ್ ಕಟ್ಟಿಗೆ ಹಾಗೂ 10 ಟನ್‌ನಷ್ಟು ಪ್ಲಾಸ್ಟಿಕ್ ಹಗ್ಗದಿಂದ ನಿರ್ಮಾಣವಾಗುತ್ತಿದೆ. ಇದನ್ನೂ ಓದಿ: ಕರ್ನಾಟಕ ಬಂದ್ ಬಿಸಿ – 60 ವಿಮಾನ ರದ್ದು

    ಸೇತುವೆ ನಿರ್ಮಿಸಿದ್ದು ಯಾಕೆ?
    ಕಂಕನವಾಡಿ ಗ್ರಾಮದಿಂದ ಸುಮಾರು 600 ಅಡಿ ದೂರದ ಗುಹೇಶ್ವರ ಗಡ್ಡೆಗೆ (ನಡುಗಡ್ಡೆ) ತೆರಳಲು ಜನ ಹಲವು ವರ್ಷಗಳಿಂದ ಬೋಟನ್ನೇ ಅವಲಂಬಿಸಿದ್ದರು. ಅಲ್ಲದೇ ಗುಹೇಶ್ವರ ನಡುಗಡ್ಡೆಯಲ್ಲಿ ಈ ರೈತರ ಸುಮಾರು 700 ಎಕರೆ ಜಮೀನು ಇದೆ. ರೈತರು ಹೊಲ, ಗದ್ದೆಗಳಿಗೆ ಹೋಗಲು, ದನಕರುಗಳನ್ನು ಕರೆದೊಯ್ಯಲು ಹಾಗೂ ತಾವು ಬೆಳೆದ ಫಸಲನ್ನು ಮಾರುಕಟ್ಟೆಗೆ ಸಾಗಿಸಲು ಬೋಟನ್ನೇ ಅವಲಂಬಿಸಿದ್ದರು.

    ಅಷ್ಟೇ ಅಲ್ಲದೇ ಆ ಗುಹೇಶ್ವರ ಗಡ್ಡೆಯಲ್ಲಿ ಪ್ರಖ್ಯಾತ ಗುಹೇಶ್ವರ ದೇವಸ್ಥಾನವಿದ್ದು, ಪ್ರತಿ ಅಮವಾಸ್ಯೆ ದಿನದಂದು ನೂರಾರು ಭಕ್ತಾದಿಗಳು ಬೋಟ್ ಮೂಲಕವೇ ದೇವಸ್ಥಾನಕ್ಕೆ ತೆರಳುವ ಪರಿಸ್ಥಿತಿ ಇತ್ತು. ಅದೇ ನಡುಗಡ್ಡೆಯ ಜಮೀನುಗಳಲ್ಲಿ ಮನೆ ಮಾಡಿಕೊಂಡು ಸುಮಾರು 150 ಕುಟುಂಬಗಳು ವಾಸಿಸುತ್ತಿವೆ. ಹೀಗಾಗಿ ನಡುಗಡ್ಡೆಯಿಂದ ಕಂಕನವಾಡಿಗೆ ಬರಲು, ಊರಿನಿಂದ ಗುಹೇಶ್ವರ ಗಡ್ಡೆ ತಲುಪಲು, ಜನ ಜೀವ ಕೈಯಲ್ಲೇ ಹಿಡಿದುಕೊಂಡು ಬೋಟ್ ಮೂಲಕವೇ ಕೃಷ್ಣಾ ನದಿಯನ್ನು ದಾಟಬೇಕಿತ್ತು.

    ಇದರಿಂದಾಗಿ ನೊಂದ ಗ್ರಾಮಸ್ಥರು ಹಲವು ಬಾರಿ ಅಧಿಕಾರಿಗಳಿಗೆ ಮತ್ತು ಆ ಭಾಗದ ಜನಪ್ರತಿನಿಧಿಗಳಿಗೆ ನದಿಗೆ ಅಡ್ಡಲಾಗಿ ಮೇಲು ಸೇತುವೆ ಮಾಡಿಸಿಕೊಡಿ ಎಂದು ಮನವಿ‌ ಮಾಡಿದರೂ ಸಹ ಯಾವುದೇ ಪ್ರಯೋಜನವಾಗಿರಲಿಲ್ಲ. ಮನವಿಗೆ ಸ್ಪಂದನೆ ಸಿಗದೇ ಇದ್ದಾಗ ರೈತರು ಯಾರ ಸಹಾಯವೂ ಇಲ್ಲದೇ ಸೇತುವೆ ನಿರ್ಮಾಣಕ್ಕೆ ಕೈ ಹಾಕಿದರು.

    ಪ್ರೇರಣೆ ಏನು?
    ಕಂಕನವಾಡಿ ಗ್ರಾಮದಲ್ಲಿ ನಡೆಯುವ ಗುಹೇಶ್ವರ ಜಾತ್ರೆಯ ದಿನ ಪ್ರತಿ ವರ್ಷ ಗ್ರಾಮಸ್ಥರು ಕೃಷ್ಣಾ ನದಿಯಲ್ಲಿ, ಪ್ಲಾಸ್ಟಿಕ್ ಬ್ಯಾರಲ್‌ಗಳ ಸಹಾಯದಿಂದ ಒಂದು (ಫ್ಲೋಟಿಂಗ್) ನೀರಿನ ಕಾರಂಜಿಯನ್ನು ಮಾಡುತ್ತಿದ್ದರು. ಪ್ಲಾಸ್ಟಿಕ್ ಬ್ಯಾರಲ್‌ಗಳಿಂದ ಆದ ಆ ಸುಂದರ ಕಾರಂಜಿ ಎಲ್ಲರ ಗಮನ ಸೆಳೆಯುತ್ತಿತ್ತು. ಪ್ಲಾಸ್ಟಿಕ್ ಬ್ಯಾರಲ್‌ಗಳು ಇದ್ದರೆ ಆ ನೀರಿನ ಕಾರಂಜಿ ನದಿಯಲ್ಲಿ ಮುಳುಗುವುದಿಲ್ಲ ಎಂಬುದನ್ನು ಅರಿತ ರೈತರು ಕಾರಂಜಿ ಪ್ರೇರಣೆಯಿಂದಲೇ ತಾವೇ ಸ್ವತಃ ಪ್ಲಾಸ್ಟಿಕ್ ಬ್ಯಾರಲ್, ಕಬ್ಬಿಣದ ಆ್ಯಂಗ್ಲರ್ ಹಾಗೂ ಕಟ್ಟಿಗೆ ತುಂಡುಗಳ ಸಹಾಯದಿಂದ ಒಂದು ಸೇತುವೆ‌ ಯಾಕೆ ನಿರ್ಮಿಸಬಾರದು ಎಂದು ಆಲೋಚಿಸಿ ಸೇತುವೆ ನಿರ್ಮಾಣದ ಸಾಹಸಕ್ಕೆ ಕೈಹಾಕಿದರು.

    ಜನರಿಂದಲೇ ದುಡ್ಡು:
    ಗ್ರಾಮದ ರೈತರೆಲ್ಲ ಸೇರಿ, ಕೃಷ್ಣಾ ನದಿಗೆ ಅಡ್ಡಲಾಗಿ ಬ್ಯಾರಲ್‌ ಸೇತುವೆ ನಿರ್ಮಾಣ ಮಾಡುವ ತೀರ್ಮಾನ ಕೈಗೊಂಡರು. ಪ್ರತಿ ಎಕರೆಗೆ 1 ಸಾವಿರ ರೂ. ನಂತೆ ಗ್ರಾಮದ ಎಲ್ಲ ರೈತರಿಂದ ದೇಣಿಗೆ ಸಂಗ್ರಹಿಸಲಾಯಿತು. ನಂತರ ಸಂಗ್ರಹವಾದ ಹಣದಿಂದ ನದಿಗೆ ಸೇತುವೆ ನಿರ್ಮಿಸುವ ಕೆಲಸ ಆರಂಭಿಸಿದರು. ಸದ್ಯ ಸೇತುವೆ ಕಾರ್ಯ ಪೂರ್ಣಗೊಳ್ಳುವ ಹಂತಕ್ಕೆ ಬಂದಿದೆ. ರೈತರ ಒಂದೂವರೆ ತಿಂಗಳ ನಿರಂತರ ಪರಿಶ್ರಮದಿಂದ ಈ ಸೇತುವೆ ನಿರ್ಮಾಣವಾಗುತ್ತಿದ್ದು, ರೈತರ ಈ ವಿಶೇಷ ಸಾಹಸಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ತಂತ್ರಜ್ಞರು, ಸರ್ಕಾರ ಹಾಗೂ ಸಂಘಸಂಸ್ಥೆ ಹೀಗೆ ಯಾರ ಸಹಾಯವೂ ಇಲ್ಲದೇ ನದಿಗೆ ಅಡ್ಡಲಾಗಿ ಸೇತುವೆ ಮಾಡುತ್ತಿರುವ ಈ ರೈತರ ಛಲ ಹಾಗೂ ಸಾಹಸ ನಿಜಕ್ಕೂ ಅಸಾಮಾನ್ಯ ಸಾಧನೆಯೇ ಸರಿ.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದಾಳಿಂಬೆಯಿಂದ ಬದುಕು ಬಂಗಾರ – ಮೊದಲ ಬೆಳೆಯಲ್ಲೇ ಕೋಟಿ ಒಡೆಯನಾದ ರೈತ

    ದಾಳಿಂಬೆಯಿಂದ ಬದುಕು ಬಂಗಾರ – ಮೊದಲ ಬೆಳೆಯಲ್ಲೇ ಕೋಟಿ ಒಡೆಯನಾದ ರೈತ

    ಚಿಕ್ಕಬಳ್ಳಾಪುರ: ಅವರು ಮೊದಲೆಲ್ಲಾ ಹಿಪ್ಪು ನೇರಳೆ, ಸೊಪ್ಪು ಬೆಳೆಯುವ ಕೃಷಿ ಮಾಡುತ್ತಿದ್ದ ರೈತರು (Farers) ಕ್ರಮೇಣ ದ್ರಾಕ್ಷಿ ಬೆಳೆದು ಕೈ ಸುಟ್ಟುಕೊಂಡಿದ್ದರು. ಕೊನೆಗೆ ಏನು ಮಾಡುವುದು ಅಂತಾ ತಲೆಮೇಲೆ ಕೈಹೊತ್ತು ಕುಳಿತಿದ್ದಾಗ ಬಾಲ್ಯ ಸ್ನೇಹಿತ ಕೊಟ್ಟ ದಾಳಿಂಬೆ (Pomegranate) ಬೆಳೆಯುವ ಐಡಿಯಾ ಈಗ ಆ ರೈತನ ಬದುಕನ್ನೇ ಬದಲಿಸಿದೆ. ಮೊದಲ ಬೆಳೆಯಲ್ಲೇ ರೈತ 1 ಕೋಟಿಗೂ ಅಧಿಕ ಆದಾಯ ಗಳಿಸಿದ್ದು ಬದುಕು ಸಿಹಿಯಾಗಿಸಿಕೊಂಡಿದ್ದಾರೆ.

    ಹೌದು.. ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ಹೊಸಹುಡ್ಯ ಗ್ರಾಮದ ರೈತ ಮಂಜುನಾಥ್ ಇದೇ ಮೊದಲ ಬಾರಿಗೆ ದಾಳಿಂಬೆ ಬೆಳೆದು ಯಶಸ್ಸು ಕಂಡಿದ್ದಾರೆ. ತಮ್ಮ ಪಿತ್ರಾರ್ಜಿತ 11 ಎಕೆರೆ ಭೂಮಿಯಲ್ಲಿ ದಾಳಿಂಬೆ ಬೆಳೆದಿದ್ದು (Pomegranate Crop) ರೈತನಿಗೆ ಇದೀಗ ಭರಪೂರ ಇಳುವರಿ ಬಂದಿದೆ. ಮೊದಲ ಬೆಳೆಯಲ್ಲೇ 80ಕ್ಕೂ ಹೆಚ್ಚು ಟನ್ ಹಣ್ಣು ಕಟಾವಿಗೆ ಬಂದಿದ್ದು 1 ಕೆಜಿ ದಾಳಿಂಬೆ ಹಣ್ಣು 145 ರೂಪಾಯಿಗೆ ಮಾರಾಟವಾಗಿದೆ. ಇದರಿಂದ 1 ಕೋಟಿ ರೂ.ಗಿಂತಲೂ ಅಧಿಕ ಆದಾಯ ಗಳಿಸಿದ್ದಾರೆ. ಇದನ್ನೂ ಓದಿ: ಬೆಂಗ್ಳೂರಿಗರು ಭಾಗಿಯಾಗದ್ದಕ್ಕೆ ಆಕ್ರೋಶ- ಕಾವೇರಿ ನೀರು ಸರಬರಾಜು ಮಾಡೋ ಪಂಪ್ ಹೌಸ್‍ಗೆ ಮುತ್ತಿಗೆ

    ಕಳೆದ 2 ವರ್ಷಗಳಿಂದ ಹಗಲು ರಾತ್ರಿ ಅನ್ನದೇ ಕಷ್ಟಪಟ್ಟು ದಾಳಿಂಬೆ ಬೆಳೆದಿದ್ದು, ರೈತ ಮಂಜುನಾಥ್ ಕಷ್ಟಕ್ಕೆ ಪ್ರತಿಫಲವಾಗಿ ಉತ್ತಮ ಬೆಳೆ ಬಂದಿದೆ. ಮಂಜುನಾಥ 60 ಲಕ್ಷ ರೂ.ನಷ್ಟು ಬಂಡವಾಳ ಹೂಡಿ ಸರಿಸುಮಾರು 11 ಎಕೆರೆ ಪ್ರದೇಶದಲ್ಲಿ 4,500 ದಾಳಿಂಬೆ ಗಿಡ ನಾಟಿ ಮಾಡಿದ್ದರು. ಇದೀಗ ವ್ಯಾಪಾರಸ್ಥರೇ ತೋಟಕ್ಕೆ ಬಂದು ಹಣ್ಣು ಖರೀದಿ ಮಾಡಲು ಮುಂದಾಗಿದ್ದು, ನಿರೀಕ್ಷೆಗೂ ಮೀರಿದ ಆದಾಯ ದೊರೆತಿದೆ. ಇದನ್ನೂ ಓದಿ: ಮಹಿಳಾ ಮೀಸಲಾತಿ ಅಂಗೀಕಾರ – ಇದು ಭಾರತದ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡೋ ದಿನ: ಪ್ರಹ್ಲಾದ್ ಜೋಶಿ

    ಈಗಾಗಲೇ 11 ಎಕೆರೆಯಲ್ಲಿ ದಾಳಿಂಬೆ ಬೆಳೆದಿರುವ ರೈತ ಮತ್ತೊಂದೆಡೆ 8 ಎಕರೆ ದಾಳಿಂಬೆ ನಾಟಿ ಮಾಡಿದ್ದಾರೆ. ಸಾಲದ್ದಕ್ಕೆ ಇನ್ನೂ 40 ಎಕೆರೆ ಭೂಮಿ ಭೋಗ್ಯಕ್ಕೆ ಪಡೆದು ದಾಳಿಂಬೆ ಬೆಳೆಯಲು ಮುಂದಾಗುತ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರೈತನ ಬದುಕಿಗೆ ಗ್ಯಾರಂಟಿ ಕೊಡಲು ಸಾಧ್ಯವಿಲ್ಲವೇ?: ಹೆಚ್‍ಡಿಕೆ ಕಿಡಿ

    ರೈತನ ಬದುಕಿಗೆ ಗ್ಯಾರಂಟಿ ಕೊಡಲು ಸಾಧ್ಯವಿಲ್ಲವೇ?: ಹೆಚ್‍ಡಿಕೆ ಕಿಡಿ

    ಬೆಂಗಳೂರು: ರಾಜ್ಯದಲ್ಲಿ ಮುಂದುವರೆದ ರೈತರ (Farmer) ಆತ್ಮಹತ್ಯೆ ವಿಚಾರವಾಗಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರು (H.D.Kumaraswamy) ಸರ್ಕಾರದ ವಿರುದ್ಧ ಟ್ವಿಟ್ಟರ್‌ನಲ್ಲಿ ಚಾಟಿ ಬೀಸಿದ್ದಾರೆ. ರೈತನ ಬದುಕಿಗೆ ಗ್ಯಾರಂಟಿ ಕೊಡಲು ಸಾಧ್ಯವಿಲ್ಲವೇ ಎಂದು ಅವರು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

    ಬೆಳ್ಳಂ ಬೆಳಗ್ಗೆ ವರದಿ ಓದಿದ ತಕ್ಷಣ ಬಹಳ ಸಂಕಟವಾಯಿತು, ಕಣ್ಣಲ್ಲಿ ನೀರು ತುಂಬಿ ಬಂದವು. ಇನ್ನೆಷ್ಟು ದಿನ ಇಂತಹ ಸಾವುಗಳನ್ನು ನೋಡಬೇಕು. ಕೇವಲ ಪ್ರಚಾರ, ಅಧಿಕಾರದ ಸುಖ ಅನುಭವಿಸುತ್ತಿರುವ ಕಾಂಗ್ರೆಸ್ (Congress) ಸರ್ಕಾರಕ್ಕೆ ಅನ್ನದಾತನ ಸಾವಿನ ಕೇಕೆ ಸವಿಗಾನವಾಗಿದೆಯೇ? ಇವರಿಗೆ ವಾಸ್ತವ ಅರಿವಿಲ್ಲವೆ? ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಪೂಜೆಗೆ ತೆರಳಿದ್ದ ವೈದ್ಯ ಹೇಮಾವತಿ ನದಿಯಲ್ಲಿ ಮುಳುಗಿ ಸಾವು

    ಗ್ಯಾರಂಟಿಗಳನ್ನು ಕೊಟ್ಟಿದ್ದೇವೆ ಎಂದು ಬೀಗುತ್ತಿರುವ ಸರ್ಕಾರಕ್ಕೆ ರೈತನ ಬದುಕಿಗೆ ಗ್ಯಾರಂಟಿ ಕೊಡಲು ಸಾಧ್ಯವಿಲ್ಲವೇ? ಇದೇನಾ `ಕರ್ನಾಟಕ ಮಾದರಿ’? ರಾಜ್ಯದಲ್ಲಿ ಕೃಷಿ ಇಲಾಖೆ ಎನ್ನುವುದು ಇದೆಯೇ? ಅದು ಕೃಷಿ ಇಲಾಖೆಯಾ, ಕಸಾಯಿಖಾನೆಯಾ? ಕಂದಾಯಕ್ಕೂ ಆದಾಯದ ಚಿಂತೆಯಾ? ರಾಜ್ಯಕ್ಕೆ ಬರ, ಕೆಲವರಿಗೆ ಅದೇ ವರವಾಗಿದೆ. ಇದು ನೈಜಸ್ಥಿತಿಯಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

    ಆಗಸ್ಟ್, ಸೆಪ್ಟೆಂಬರ್‌ನಲ್ಲಿ ಕೆಲವೆಡೆ ಮಳೆಯಾದರೂ ಪ್ರಯೋಜನವಾಗಿಲ್ಲ. ಬೆಳೆಗಳು ನಾಶವಾಗಿವೆ. ತುರ್ತಾಗಿ ಕೇಂದ್ರಕ್ಕೆ ಮನವಿ ಮಾಡಬೇಕಿದ್ದ ಸರ್ಕಾರ, ಮಾರ್ಗಸೂಚಿ ನೆಪದಲ್ಲಿ ಕಾಲಹರಣ ಮಾಡುತ್ತಿದೆ. ಕಾಲಹರಣವೂ ಜೀವಹರಣವೂ ಬೇರೆ ಬೇರೆ ಅಲ್ಲ. ತುರ್ತಾಗಿ ಜಿಲ್ಲಾಧಿಕಾರಿಗಳ ಖಾತೆಯಲ್ಲಿರುವ ಹಣ ಬಿಡುಗಡೆ ಮಾಡಬಹುದಲ್ಲವೇ? ಎಂದು ಸರ್ಕಾರವನ್ನು ತಿವಿದಿದ್ದಾರೆ.

    ಬೆಳೆ ವಿಮೆಯೂ ಅನ್ನದಾತರ ಆಪತ್ತಿಗೆ ಆಗುತ್ತಿಲ್ಲ. ಅದರ ಬಗ್ಗೆ ಅವರಿಗೆ ವಿಶ್ವಾಸವೇ ಇಲ್ಲ. ಅವರು ಸಾವಿನ ದವಡೆಗೆ ಬೀಳುತ್ತಿದ್ದರೆ ಅಧಿಕಾರಿಗಳು ಅರ್ಹ-ಅನರ್ಹ ಸಾವು ಎಂದು ವಿಭಜಿಸಿ ಲೆಕ್ಕ ಹಾಕಿಕೊಂಡು ಕೂತಿದ್ದಾರೆ. ಸಾವಿನಲ್ಲೂ ಅರ್ಹತೆ, ಅನರ್ಹತೆ ಹುಡುಕುವ ಈ ಕ್ರೂರತೆಗೆ ಏನೆಂದು ಹೇಳುವುದು? ರೈತರ ಸಾವುಗಳೆಂದರೆ ಇವರಿಗೆ ಇಷ್ಟು ಹಗುರವೇ ಎಂದು ಪ್ರಶ್ನಿಸಿದ್ದಾರೆ.

    ನನ್ನ ಮನವಿ ಇಷ್ಟೇ, ರೈತರು ಎದೆಗುಂದಬಾರದು. ನಿಮ್ಮ ದುಡುಕಿನ ನಿರ್ಧಾರ ನಿಮ್ಮ ಕುಟುಂಬವನ್ನು ಅನಾಥಗೊಳಿಸುತ್ತದೆ. ನಿಮ್ಮೊಂದಿಗೆ ನಾನಿದ್ದೇನೆ. ಸರ್ಕಾರ ಇಂಥಹ ಆತ್ಮಹತ್ಯೆ ಪ್ರಕರಣಗಳಿಗೆ ಇತಿಶ್ರೀ ಹಾಡಲೇಬೇಕು. ಶಾಶ್ವತವಾಗಿ ಪರಿಹಾರೋಪಾಯ ಕಂಡುಕೊಳ್ಳಬೇಕು. ಜೀವಬಿಟ್ಟ ರೈತ ಕುಟುಂಬಗಳಿಗೆ ಮಾನವೀಯತೆಯ ನೆರವು ಕೊಡಬೇಕು. ವಿಳಂಬ ಸರಿಯಲ್ಲ ಎಂದು ಅವರು ಟ್ವೀಟರ್‌ನಲ್ಲಿ ಬರೆದುಕೊಂಡಿದ್ದಾರೆ. ಟ್ವೀಟ್‍ನ್ನು ರೈತರಿಗೆ ಮಾರಿ ಕರ್ನಾಟಕ ಮಾದರಿ ಎಂದು ಟ್ಯಾಗ್ ಬಳಸಿ ಅವರು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ವರ್ಗಾವಣೆ ಮಾಡಿದರೂ ಜಾಗ ಖಾಲಿ ಮಾಡದ ಮುಕ್ತ ವಿವಿ ಹಣಕಾಸು ಅಧಿಕಾರಿ!

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 7 ಎಕರೆಯಲ್ಲಿ ಟೊಮೆಟೋ ಬೆಳೆದು ಕೋಟಿ ರೂ. ಸಂಪಾದಿಸಿದ ರೈತ

    7 ಎಕರೆಯಲ್ಲಿ ಟೊಮೆಟೋ ಬೆಳೆದು ಕೋಟಿ ರೂ. ಸಂಪಾದಿಸಿದ ರೈತ

    ಚಿಕ್ಕೋಡಿ: ರೈತರೊಬ್ಬರು (Farmer) 7 ಎಕರೆ ಜಮೀನನ್ನು ಲೀಸ್ ಮೇಲೆ ಪಡೆದು ಅದರಲ್ಲಿ ಟೊಮೆಟೋ (Tomato) ಬೆಳೆದು ಕೋಟಿ ರೂ. ಸಂಪಾದಿಸಿ ಸಾಧನೆಗೈದ ಘಟನೆ ಬೆಳಗಾವಿ (Belagavi) ಜಿಲ್ಲೆ ಚಿಕ್ಕೋಡಿ (Chikkodi) ತಾಲೂಕಿನ ಎಕ್ಸಂಬಾ ಪಟ್ಟಣದಲ್ಲಿ ನಡೆದಿದೆ.

    ಮಹಾರಾಷ್ಟ್ರದ (Maharashtra) ಜಯಸಿಂಗಪುರದ ಸಾಗರ್ ಮಗದುಮ್ ಕೋಟಿ ರೂ. ಸಂಪಾದಿಸಿದ ರೈತ. ಇವರು ನನದಿ ಗ್ರಾಮದಲ್ಲಿ 7 ಎಕರೆ ಜಮೀನನ್ನು ಲೀಸ್ ಮೇಲೆ ಪಡೆದಿದ್ದರು. 4 ತಿಂಗಳಿಗೆ ಒಂದು ಎಕರೆಗೆ ತಲಾ 40 ಸಾವಿರ ರೂ. ನೀಡಿ ಜಮೀನನ್ನು ಲೀಸ್‌ಗೆ ಪಡೆದಿದ್ದು, ಇದೀಗ 5 ಕಟಾವುಗಳಲ್ಲಿ ಒಂದು ಕೋಟಿ ರೂ. ಸಂಪಾದಿಸಿ ಸೈ ಎನಿಸಿಕೊಂಡಿದ್ದಾರೆ. ಇವರ ಜಮೀನಿಗೆ ದೆಹಲಿ (Delhi) ಮೂಲದ ವ್ಯಾಪಾರಸ್ಥರು ಆಗಮಿಸಿ ಟೊಮೆಟೋ ಖರೀದಿ ಮಾಡಿ ತೆಗೆದುಕೊಂಡು ಹೋಗುತ್ತಾರೆ. ಇದನ್ನೂ ಓದಿ: ಚಿತ್ರದುರ್ಗ ಶಾಸಕನಿಂದ ಮತ್ತೊಂದು ಯಡವಟ್ಟು – ಬೆಂಕಿಯಿಡಲು ಪ್ರಚೋದಿಸಿದ ವಿಡಿಯೋ ವೈರಲ್

    ಪ್ರತಿವರ್ಷ ಸಾಗರ್ ಮಗದುಮ್ ಕುಟುಂಬಸ್ಥರು ಗಡಿಭಾಗದಲ್ಲಿ ಜಮೀನನ್ನು ಲೀಸ್‌ಗೆ ಪಡೆದು ಟೊಮೆಟೋ ಬೆಳೆ ಬೆಳೆಯುತ್ತಾರೆ. ಇವರು ಮತ್ತು ಇವರ ಕುಟುಂಬಸ್ಥರು ಕಳೆದ 30 ವರ್ಷಗಳಿಂದ ಟೊಮೆಟೋ ಬೆಳೆಯುತ್ತಿದ್ದು, 30 ವರ್ಷದಲ್ಲಿ ಟೊಮೆಟೊಗೆ ಇಷ್ಟೊಂದು ಬೆಲೆ ಎಂದೂ ಬಂದಿರಲಿಲ್ಲ. ಇದೇ ಮೊದಲ ಬಾರಿಗೆ ಟೊಮೆಟೋಗೆ ಇಷ್ಟೊಂದು ಡಿಮ್ಯಾಂಡ್ ಬಂದಿದ್ದು, ಇನ್ನೂ ಐದು ಬಾರಿ ಕಟಾವು ಮಾಡಿ ಒಟ್ಟಾರೆ ಒಂದೂವರೆ ಕೋಟಿ ಲಾಭದ ನಿರೀಕ್ಷೆ ಇದೆ. ಈವರೆಗೆ 7 ಎಕರೆಗೆ 20 ಲಕ್ಷ ರೂ. ಖರ್ಚು ಮಾಡಿದ್ದು, 1 ಕೋಟಿಗೂ ಅಧಿಕ ಲಾಭ ಗಳಿಸಿದ್ದೇವೆ ಎಂದು ರೈತ ಸಾಗರ್ ತಿಳಿಸಿದ್ದಾರೆ. ಇದನ್ನೂ ಓದಿ: ಅಮೃತ್ ಭಾರತ್; ರಾಜ್ಯದ 13 ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿ – ಮೋದಿಯಿಂದ ಇಂದು ಚಾಲನೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 9.20 ಲಕ್ಷ ರೂ. ದಾಖಲೆ ಬೆಲೆಗೆ ʻಜಾಗ್ವಾರ್‌ʼ ಎತ್ತು ಮಾರಾಟ – ಮಂಡ್ಯದ ರೈತ ಫುಲ್‌ ಖುಷ್‌

    9.20 ಲಕ್ಷ ರೂ. ದಾಖಲೆ ಬೆಲೆಗೆ ʻಜಾಗ್ವಾರ್‌ʼ ಎತ್ತು ಮಾರಾಟ – ಮಂಡ್ಯದ ರೈತ ಫುಲ್‌ ಖುಷ್‌

    ಮಂಡ್ಯ: ಶ್ರೀರಂಗಪಟ್ಟಣ ಶ್ರೀನಿವಾಸ ಅಗ್ರಹಾರ ಗ್ರಾಮದ ರೈತ (Farmer) ನವೀನ್ ಸಾಕಿದ್ದ ಹಳ್ಳಿಕಾರ್ ತಳಿಯ ಒಂಟಿ ಎತ್ತು 9.20 ಲಕ್ಷ ರೂ.ಗಳಿಗೆ ಮಾರಾಟವಾಗಿದ್ದು ರೈತ ನವೀನ್‌ ಹರ್ಷಗೊಂಡಿದ್ದಾರೆ.

    ಹಳ್ಳಿಕಾರ್ ತಳಿಯ ಎರಡು ಹಲ್ಲಿನ ಒಂಟಿ ಎತ್ತನ್ನು (Ox) ತಮಿಳುನಾಡು (Tamilnadu) ಮೂಲದ ಸರವಣಪಟ್ಟಿ ಗ್ರಾಮದ ಸಿರವೈ ತಂಬಿ 9.20 ಲಕ್ಷ ರೂ.ಗಳಿಗೆ ಖರೀದಿಸಿದ್ದಾರೆ. ಇದನ್ನೂ ಓದಿ: ಇನ್‍ಸ್ಪೆಕ್ಟರ್, ಮೇಲಧಿಕಾರಿಗಳಷ್ಟೇ ಡ್ರಂಕ್ & ಡ್ರೈವ್ ತಪಾಸಣೆ ಮಾಡ್ಬೇಕು – ಸುಲಿಗೆ ನಿಯಂತ್ರಣಕ್ಕೆ ಪೊಲೀಸ್ ಇಲಾಖೆ ಕ್ರಮ

    ʻಜಾಗ್ವಾರ್‌ʼ ಹೆಸರಿನ ಈ ಎತ್ತು ಹೊರ ರಾಜ್ಯಗಳಲ್ಲೂ ಎತ್ತಿನಗಾಡಿ ಸ್ಪರ್ಧೆಯಲ್ಲಿ ಪಾಲ್ಗೊಂಡು ಹಲವು ಪ್ರಶಸ್ತಿಗಳನ್ನ ಬಾಚಿಕೊಂಡಿತ್ತು. ತಮಿಳುನಾಡಿನಲ್ಲೂ ಪ್ರಶಸ್ತಿ ಗೆದ್ದು ಅಭಿಮಾನಿಗಳ ಮೆಚ್ಚುಗೆ ಗಳಿಸಿತ್ತು. ರೇಸ್‌ನಲ್ಲಿ ಕಣಕ್ಕಿಳಿದರೆ ಅಬ್ಬರಿಸುತ್ತಿದ್ದ ಜಾಗ್ವಾರ್‌ ವೇಗಕ್ಕೆ ಮನಸೋತ ತಮಿಳುನಾಡಿನ ವ್ಯಕ್ತಿ 9.20 ಲಕ್ಷ ರೂ. ನೀಡಿ ಖರೀದಿಸಿದ್ದಾರೆ. ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್‌ – ಒಂದು ವಾರದಲ್ಲಿ 70 ಲಕ್ಷಕ್ಕೂ ಹೆಚ್ಚು ಮಂದಿ ನೋಂದಣಿ

    ಈ ಹಿಂದೆ ಶ್ರೀರಂಗಪಟ್ಟಣದ ನವೀನ್‌ ಮಂಡ್ಯದ ಇಂಡವಾಳು ಗ್ರಾಮದ ಅಜಿತ್ ಅವರಿಂದ 1.20 ಲಕ್ಷ ರೂ.ಗೆ ಈ ಎತ್ತನ್ನು ಖರೀದಿಸಿದ್ದರು. ಸದ್ಯ 9.20 ಲಕ್ಷಕ್ಕೆ ಮಾರಾಟವಾಗಿದ್ದು, ಬರೋಬ್ಬರಿ 8 ಲಕ್ಷ ರೂ. ಲಾಭ ಗಳಿಸಿದ್ದಾರೆ. ಎತ್ತು ದಾಖಲೆ ಬೆಲೆಗೆ ಮಾರಾಟವಾದ ಬಳಿಕ ಗ್ರಾಮದಲ್ಲಿ ಅದ್ಧೂರಿ ಮೆರವಣಿಗೆಯೊಂದಿಗೆ ಬೀಳ್ಕೊಡಲಾಯಿತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕನ್ಯಾಭಾಗ್ಯ ಘೋಷಣೆ ಮಾಡುವಂತೆ ಸಿದ್ದರಾಮಯ್ಯಗೆ ಯುವ ರೈತರು ಮನವಿ

    ಕನ್ಯಾಭಾಗ್ಯ ಘೋಷಣೆ ಮಾಡುವಂತೆ ಸಿದ್ದರಾಮಯ್ಯಗೆ ಯುವ ರೈತರು ಮನವಿ

    ಹಾವೇರಿ: ಈ ದೇಶದ ಬೆನ್ನಲುಬು ಅನ್ನದಾತರು. ಆದರೆ ಯುವ ರೈತರಿಗೆ ಕನ್ಯೆ ಕೊಡಲು ಹಿಂದೇಟು ಹಾಕುತ್ತಿರುವುದಕ್ಕೆ ಬೇಸತ್ತ ಯುವಕರು, ಸಿಎಂ ಸಿದ್ದರಾಮಯ್ಯ (Siddaramaiah) ಪತ್ರ ಬರೆದು ವಿಶೇಷ ಯೋಜನೆ ರೂಪಿಸುವಂತೆ ಮನವಿ ಮಾಡಿದ ಘಟನೆ ಹಾವೇರಿ (Haveri) ಜಿಲ್ಲೆಯಲ್ಲಿ ನಡೆದಿದೆ.

    ಬ್ಯಾಡಗಿ ತಾಲೂಕಿನ ಯುವ ರೈತರು ಕನ್ಯಾಭಾಗ್ಯ ಆರಂಭಿಸುವಂತೆ ಪತ್ರದ ಮೂಲಕ ಮನವಿ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. 5 ರಿಂದ 6 ಎಕರೆ ಜಮೀನು ಇದ್ದರು ಸಹಿತ ಹೆಣ್ಣು ಕೊಡಲು ಹಿಂದೇಟು ಹಾಕುತ್ತಿದ್ದಾರೆ. ಕೃಷಿಕ ಎಂದ ಮಾತ್ರಕ್ಕೆ ಎಷ್ಟೋ ಜನ ಕನ್ಯೆಯನ್ನು ತೊರಿಸುತ್ತಿಲ್ಲ. 5 ಸಾವಿರ ಸಂಬಳ ಬರುವ ವ್ಯಕ್ತಿಗೆ ಹೆಣ್ಣು ಕೊಡಲು ಮುಂದಾಗುತ್ತಾರೆ.

    ನಾವು ಕೂಡ ಉತ್ತಮ ಮಳೆ (Rain) ಬಂದ್ರೆ ಲಕ್ಷಾಂತರ ರೂಪಾಯಿ ಗಳಿಸ್ತೀವಿ. ಆದರೆ ಹವಾಮಾನ ವೈಪರೀತ್ಯದಿಂದ ನಷ್ಟ ಅನುಭವಿಸುತ್ತಿದ್ದೇವೆ. ಕೃಷಿ ಮಾಡುತ್ತಿರುವವನು ಕೂಡ ತನ್ನ ಮಗಳನ್ನು ಕೃಷಿಕನಿಗೆ ಕೊಡಲು ಹಿಂದೇಟು ಹಾಕುವ ಪರಸ್ಥಿತಿ ನಿರ್ಮಾಣವಾಗಿದೆ. ಈ ಸಂಬಂಧ ಯುವ ರೈತರನ್ನು ಮದುವೆ ಆದ ಯುವತಿಯರಿಗೆ ಕನಿಷ್ಠ 2 ಲಕ್ಷ ರೂ. ಪ್ರೋತ್ಸಾಹ ಧನ ನೀಡಬೇಕು. ಇದನ್ನೂ ಓದಿ: ಎಕ್ಸ್‌ಪ್ರೆಸ್‌ವೇಯಲ್ಲಿ KSRTC ಚಾಲಕನ ಹುಚ್ಚಾಟ – ಒನ್‍ವೇ ಸಂಚಾರಕ್ಕೆ ಆಕ್ರೋಶ

    ರೈತರನ್ನು ಮದುವೆ ಆದ ವಿದ್ಯಾವಂತ ಯುವತಿಯರಿಗೆ ಸರ್ಕಾರಿ ಹಾಗೂ ಅರೆ ಸರ್ಕಾರಿ ನೌಕರಿಯಲ್ಲಿ ಮೀಸಲಾತಿ ನೀಡಬೇಕು. ಮನೆಯೊಡತಿಗೆ 2 ಸಾವಿರ ಕೊಡುವ ಮಾದರಿಯಲ್ಲಿ ರೈತರನ್ನು ಮದುವೆ ಆದವರಿಗೂ ಹಣ ಕೊಡಬೇಕು. ಇಂತಹ ಕಾರ್ಯಕ್ರಮಗಳನ್ನೊಳಗೊಂಡ ಕನ್ಯಾಭಾಗ್ಯ ಯೋಜನೆ ಜಾರಿಗೆ ತರಬೇಕೆಂದು ಪತ್ರ ಮೂಲಕ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 20 ಬಾಕ್ಸ್ ಟೊಮೆಟೋ 58 ಸಾವಿರಕ್ಕೆ ಮಾರಾಟ- ರೈತ ಫುಲ್ ಖುಷ್

    20 ಬಾಕ್ಸ್ ಟೊಮೆಟೋ 58 ಸಾವಿರಕ್ಕೆ ಮಾರಾಟ- ರೈತ ಫುಲ್ ಖುಷ್

    ಕೊಪ್ಪಳ: ಕಳೆದ ಕೆಲ ದಿನಗಳಿಂದ ಟೊಮೆಟೋ (Tomato Price) ಬೆಲೆಯಲ್ಲಿ ಏರಿಕೆ ಕಂಡಿದೆ. ಇದರಿಂದ ಗ್ರಾಹಕರು ಕಂಗಾಲಾದರೆ, ಕೊಪ್ಪಳದ ರೈತರೊಬ್ಬರಿಗೆ ಜಾಕ್‍ಪಾಟ್ ಹೊಡೆದಿದೆ.

    ಕೊಪ್ಪಳದ (Koppala Farmer) ಕನಕಗಿರಿ ಸಗಟು (ಸವಾಲು) ಮಾರುಕಟ್ಟೆಯಲ್ಲಿ ರೈತ ಶರಣಪ್ಪ ಕರಡಿ ಅವರು ತಾನು ಬೆಳೆದ ಟೊಮೆಟೋಗೆ ಬಂಗಾರದ ಬೆಲೆ ಪಡೆದಿದ್ದಾರೆ. ಟೊಮೆಟೋ ಬಾಕ್ಸ್ ಗೆ 2,900 ರೂ. ಮಾರಾಟ ಮಾಡಿದ್ದಾರೆ. ಇದನ್ನೂ ಓದಿ: ವಿಪಕ್ಷ ನಾಯಕನ ಆಯ್ಕೆ ಕಗ್ಗಂಟು – ಇಂದು BJP ಕೇಂದ್ರ ನಾಯಕರು ಬೆಂಗ್ಳೂರಿಗೆ

    20 ಬಾಕ್ಸ್ ಟೊಮೆಟೋವನ್ನು ಶರಣಪ್ಪ ಅವರು ಮಾರುಕಟ್ಟೆಗೆ ತಂದಿದ್ದರು. ಇದೀಗ ಪ್ರತಿ ಬಾಕ್ಸ್ ಟೊಮೆಟೋ 2,900 ರೂ. ನಂತೆ ಮಾರಾಟವಾಗುತ್ತಿದೆ. ಈ ಮೂಲಕ 20 ಬಾಕ್ಸ್ ಟೊಮೆಟೋ ಒಟ್ಟು 58 ಸಾವಿರಕ್ಕೆ ಮಾರಾಟವಾಗಿದೆ. ಇದರಿಂದ ರೈತ ಫುಲ್ ಖುಷಿಯಾಗಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]