Tag: farmer

  • ದುಬಾರಿಯಾದ ಟೊಮೆಟೋ ದರ- ರೈತರು ಫುಲ್ ಖುಷ್

    ದುಬಾರಿಯಾದ ಟೊಮೆಟೋ ದರ- ರೈತರು ಫುಲ್ ಖುಷ್

    ಚಿಕ್ಕಬಳ್ಳಾಪುರ: ಟೊಮೆಟೋ ದರ (Tomato Price) ದಿನದಿಂದ ದಿನಕ್ಕೆ ಏರಿಕೆಯಾಗಿದ್ದು, ಗ್ರಾಹಕರಿಗೆ ಶಾಕ್ ಎದುರಾದರೆ ರೈತರು ಮಾತ್ರ ಫುಲ್ ಖುಷಿಯಾಗಿದ್ದಾರೆ.

    ಚಿಕ್ಕಬಳ್ಳಾಪುರ (Chikkaballapur) ನಗರದ ಮಾರುಕಟ್ಟೆಯಲ್ಲಿ ಟೊಮೆಟೋ ದರ ಕಳೆದ ಒಂದು ವಾರದಿಂದ ಗಗನಕ್ಕೇರಿದೆ. ಕಳೆದ ಮೂರ್ನಾಲ್ಕು ದಿನಗಳ ಹಿಂದೆ 15 ಕೆ.ಜಿ ತೂಕದ ಟೊಮೆಟೋ ಬಾಕ್ಸ್ 1000 ರೂ. ನಿಂದ 1,500 ರೂ. ವರೆಗೆ ಮಾರಾಟವಾಗಿದೆ. ಮೂರು ದಿನಗಳಿಂದಲೂ ನಿರಂತರವಾಗಿ ಬೆಲೆ ಏರಿಕೆಯಾಗಿ ಬುಧವಾರ (ಇಂದು) ಸಹ ಉತ್ತಮ ಗುಣಮಟ್ಟದ ಟೊಮೆಟೋ 1,000 ರೂಪಾಯಿಯವರೆಗೂ ಬಿಕರಿಯಾಗಿದೆ. ಇದು ಸಹಜವಾಗಿ ಟೊಮೆಟೋ ಬೆಳೆದ ರೈತರಿಗೆ ಇದು ಖುಷಿ ತಂದಿದೆ. ಇದನ್ನೂ ಓದಿ: ನೂರರ ಗಡಿ ದಾಟಿದ ಟೊಮೆಟೋ ಬೆಲೆ- ಗೃಹಿಣಿಯರ ಆಕ್ರೋಶ

    ಅಂದಹಾಗೆ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಯಥೇಚ್ಚವಾಗಿ ಟೊಮೆಟೋ ಬೆಳೆಯಲಾಗುತ್ತದೆ. ಚಿಕ್ಕಬಳ್ಳಾಪುರ-ಚಿಂತಾಮಣಿ, ಕೋಲಾರದ ಟೊಮೆಟೋ ಮಾರುಕಟ್ಟೆಯಿಂದ ದೇಶದಲ್ಲಿ ಅಷ್ಟೇ ಅಲ್ಲದೆ ವಿದೇಶಗಳಿಗೂ ಟೊಮೆಟೋ ರಫ್ತು ಮಾಡಲಾಗುತ್ತದೆ. ಆದರೆ ಈ ಬಾರಿ ಮಳೆಯ ಕೊರತೆ, ಅತಿಯಾದ ಬಿಸಿಲಿನ ಪರಿಣಾಮ ಟೊಮೆಟೋ ಬೆಳೆಯಲ್ಲಿ ವ್ಯತ್ಯಾಸ ಆಗಿದ್ದು ಇಳುವರಿಯಲ್ಲಿಯೂ ಕುಂಠಿತವಾಗಿದೆ. ಹೀಗಾಗಿ ಟೊಮೆಟೋ ಸಿಗದೆ ರೇಟ್ ಸಹ ಹೆಚ್ಚಳವಾಗುತ್ತಿದೆ ಎಂದು ವರ್ತಕರು ಹೇಳುತ್ತಾರೆ.

    ಟೊಮೆಟೋ ಬೆಲೆ ಏರಿಕೆ ಗ್ರಾಹಕರು ಶಾಕ್ ಆಗುವಂತೆ ಮಾಡಿದ್ರೆ ರೈತರು ಖುಷಿಯಾಗುವಂತೆ ಮಾಡಿದೆ. ಕೇವಲ ಟೊಮೆಟೋ ಅಷ್ಟೇ ಅಲ್ಲದೆ ಇತರೆ ತರಕಾರಿಗಳ ಬೆಲೆಯೂ ಏರಿಕೆಯಾಗಿ ಜನರ ಜೇಬಿಗೆ ಕತ್ತರಿ ಬೀಳುತಿದ್ದು, ಜನ ಬೆಲೆ ಏರಿಕೆಯಿಂದ ತತ್ತರಿಸುವಂತಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಳೆ ಸಂಪ್ರದಾಯಕ್ಕೆ ಹೈಟೆಕ್ ಟಚ್ – ಯುವ ರೈತನ ಮದುವೆ ಸೂಪರೋ ಸೂಪರು

    ಹಳೆ ಸಂಪ್ರದಾಯಕ್ಕೆ ಹೈಟೆಕ್ ಟಚ್ – ಯುವ ರೈತನ ಮದುವೆ ಸೂಪರೋ ಸೂಪರು

    – ಎತ್ತಿನ ಬಂಡಿಯಲ್ಲಿ ನವ ವಧುವರನ ಮೆರವಣಿಗೆ

    ಹುಬ್ಬಳ್ಳಿ: ಮದುವೆ (Marriage) ಅಂದ್ರೆ ಸಡಗರ, ಸಂಭ್ರಮ, ಖುಷಿ, ಮೋಜು… ಹಿಂದೆಲ್ಲಾ ಹಳ್ಳಿಗಳಲ್ಲಿ ಮದುವೆ ಅಂದ್ರೆ ಅದೊಂದು ಊರ ಹಬ್ಬದಂತಿತ್ತು. ವಾರಗಟ್ಟಲೇ ಬಂದು ಬಳಗ ಮನೆಯಲ್ಲಿ ಕೂಡಿಕೊಂಡು, ಊರಿನವರಿಗೆಲ್ಲಾ ಊಟ ಹಾಕಿ ಖುಷಿಪಡುತ್ತಿದ್ದರು. ಆದ್ರೆ ಇತ್ತೀಚಿನ ದಿನಗಳಲ್ಲಿ ಮದುವೆ ಎನ್ನುತ್ತಿದ್ದಂತೆ ಡಿಜೆ ಸಾಂಗು, ಬ್ರೇಕ್‌ ಡ್ಯಾನ್ಸು ಕಾಮನ್‌ ಆಗಿಬಿಟ್ಟಿದೆ.

    ಈ‌ ಆಧುನಿಕ ಆಡಂಬರಗಳ ನಡುವೆಯೂ ಹಳೇ ಸಂಪ್ರದಾಯವನ್ನೇ ಮರೆತು ಬಿಟ್ಟಿದ್ದೇವೆ. ಆದರೆ ಇಲ್ಲೊಬ್ಬ ಯುವ ರೈತ (Youth Farmer) ತನ್ನ ಮದುವೆಯನ್ನು ದಶಕಗಳ ಹಿಂದಿನ ಸಂಪ್ರದಾಯದಂತೆ ಮಾಡಿಕೊಂಡಿದ್ದಾನೆ. ಇದನ್ನೂ ಓದಿ: 100 ಯೂನಿಟ್ ವಿದ್ಯುತ್ ಫ್ರೀ – ರಾಜಸ್ಥಾನದಲ್ಲಿ ಅಶೋಕ್ ಗೆಹ್ಲೋಟ್ ಘೋಷಣೆ

    ಹೌದು.. ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲ್ಲೂಕಿನ ಬ್ಯಾಹಟ್ಟಿ ಗ್ರಾಮದ ಪ್ರವೀಣ್‌ ಹಾಗೂ ಗದಗ ಜಿಲ್ಲೆಯ ಅಂತೂರ ಬೆಂತೂರ ಗ್ರಾಮದ ವಿದ್ಯಾ ನವಜೋಡಿ ತಮ್ಮ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಮದುವೆಯ ಹಿಂದಿನ ದಿನ ರಾತ್ರಿ ನವ ವಧುವರರನ್ನು, ಸಿಂಗರಿಸಿದ ಚಕ್ಕಡಿ, ಎತ್ತುಗಳ ಬಂಡಿಯ ಮೇಲೆ ಊರು ತುಂಬಾ ಮೆರವಣಿಗೆ ಮಾಡಿಸಿದ್ದಾರೆ. ಇದನ್ನೂ ಓದಿ: ದೇಶದಲ್ಲೇ ಅತ್ಯುತ್ತಮವಾದ ಕಾನೂನು ವ್ಯವಸ್ಥೆ ಕೇರಳದಲ್ಲಿದೆ – ಪಿಣರಾಯಿ ವಿಜಯನ್‌

    ಪ್ರವೀಣ್ ರೈತನ ಮಗನಾಗಿದ್ದು, ಆಧುನಿಕತೆಯ ಡಿಜೆ, ಡ್ಯಾನ್ಸ್ ಬಿಟ್ಟು ಹಳೆಯ ಸಂಪ್ರದಾಯ ನೆನಪಿಸುವ ನಿಟ್ಟಿನಲ್ಲಿ, ಈ ಕಾರ್ಯಕ್ಕೆ ಮುಂದಾಗಿದ್ದಾನೆ. ಯುವಕನ ಈ ಚಿಂತನೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಪ್ರಶಂಸೆ ವ್ಯಕ್ತವಾಗುತ್ತಿದೆ.

  • 2 ಲಕ್ಷಕ್ಕೂ ಅಧಿಕ ಸಾಲ ಮಾಡಿದ್ದ ರೈತ ಆತ್ಮಹತ್ಯೆಗೆ ಶರಣು

    2 ಲಕ್ಷಕ್ಕೂ ಅಧಿಕ ಸಾಲ ಮಾಡಿದ್ದ ರೈತ ಆತ್ಮಹತ್ಯೆಗೆ ಶರಣು

    ಬೀದರ್: ಸಾಲಬಾಧೆ ತಾಳಲಾರದೆ ರೈತ (Farmer) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ (Suicide) ಶರಣಾದ ಘಟನೆ ಬೀದರ್ (Bidar) ಜಿಲ್ಲೆಯ ಔರಾದ್ ತಾಲೂಕಿನ ಹೆಡಗಾಪೂರ (Hedgapur) ಗ್ರಾಮದಲ್ಲಿ ನಡೆದಿದೆ.

    ನಾಗಪ್ಪ ಹಲಗೆ (43) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಇವರು ಪಿಕೆಪಿಎಸ್ ಸೇರಿದಂತೆ ವಿವಿಧ ಬ್ಯಾಂಕ್‌ಗಳಲ್ಲಿ 2 ಲಕ್ಷಕ್ಕೂ ಅಧಿಕ ಸಾಲ (Loan) ಮಾಡಿದ್ದರು. ಸಾಲ ಮರುಪಾವತಿ ಮಾಡಲಾಗದೆ ಮನನೊಂದು ತನ್ನ ಜಮೀನಿನ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳಾ ಟೆಕ್ಕಿ ದುರ್ಮರಣ 

    ವಿಷಯ ತಿಳಿದು ಠಾಣಾ ಕುಸುನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಠಾಣಾ ಕುಸುನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮೇವಿಗೆ ವಿದ್ಯುತ್ ತಂತಿ ಸ್ಪರ್ಶ- ಟ್ರ‍್ಯಾಕ್ಟರ್ ಭಸ್ಮ

  • ಪಬ್ಲಿಕ್ ಟಿವಿ ವರದಿ ಬೆನ್ನಲ್ಲೇ ನರೇಗಾ ಬಿಲ್ ಪಾವತಿಗೆ ಲಂಚಕ್ಕೆ ಬೇಡಿಕೆಯಿಟ್ಟಿದ್ದ ತಾಂತ್ರಿಕ ಸಹಾಯಕ ವಜಾ

    ಪಬ್ಲಿಕ್ ಟಿವಿ ವರದಿ ಬೆನ್ನಲ್ಲೇ ನರೇಗಾ ಬಿಲ್ ಪಾವತಿಗೆ ಲಂಚಕ್ಕೆ ಬೇಡಿಕೆಯಿಟ್ಟಿದ್ದ ತಾಂತ್ರಿಕ ಸಹಾಯಕ ವಜಾ

    ಬೀದರ್: ಪಬ್ಲಿಕ್ ಟಿವಿ ವರದಿ ಬೆನ್ನಲ್ಲೇ ನರೇಗಾ ಯೋಜನೆಯಡಿ ಕೈಗೊಂಡ ಕಾಮಗಾರಿಯ ಬಿಲ್ ಪಾವತಿಗೆ ಲಂಚಕ್ಕೆ (Bribery) ಬೇಡಿಕೆಯಿಟ್ಟ ತಾಂತ್ರಿಕ ಸಹಾಯಕನನ್ನು (Technical Assistant) ಕೆಲಸದಿಂದ ವಜಾ ಮಾಡಲಾಗಿದೆ.

    ಬಸವಕಲ್ಯಾಣ ತಾ.ಪಂ. ತಾಂತ್ರಿಕ ಸಹಾಯಕ ಸೂರ್ಯಕಾಂತ್ ಪಾಟೀಲ್‌ನನ್ನು ಕೆಲಸದಿಂದ ವಜಾಗೊಳಿಸಿ ಬೀದರ್ (Bidar) ಜಿಲ್ಲಾ ಪಂಚಾಯತ್ ಸಿಇಒ ಶಿಲ್ಪಾ ಎಂ ಆದೇಶ ನೀಡಿದ್ದಾರೆ.

    ನರೇಗಾ ಯೋಜನೆಯಡಿ ಕೈಗೊಂಡ ಕಾಮಗಾರಿಯ ಬಿಲ್ ಪಾವತಿಗೆ ಲಂಚಕ್ಕೆ ಬೇಡಿಕೆಯಿಟ್ಟಿದ್ದಾರೆ ಎಂದು ಎತ್ತುಗಳ ಸಮೇತ ತಾ.ಪಂ.ಗೆ ಬಂದು ರೈತರೊಬ್ಬರು ಆರೋಪ ಮಾಡಿದ್ದರು. ಈ ಸುದ್ದಿ ಪಬ್ಲಿಕ್ ಟಿವಿಯಲ್ಲಿ ಬಿತ್ತರವಾಗಿರುವ ಹಿನ್ನೆಲೆ ಅಧಿಕಾರಿಗಳಿಂದ ವರದಿ ಪರಿಶೀಲನೆ ಮಾಡಲಾಗಿತ್ತು. ರೈತನ ಬಿಲ್ ಪಾವತಿ ಮಾಡದೆ ಮೇಲ್ನೋಟಕ್ಕೆ ಕರ್ತವ್ಯ ನಿರ್ಲಕ್ಷ್ಯ ತೊರಿದ್ದು ಕಂಡುಬಂದಿದೆ. ಹೀಗಾಗೀ ತಾಂತ್ರಿಕ ಸಹಾಯಕ ಸೂರ್ಯಕಾಂತ್ ಪಾಟೀಲ್‌ನನ್ನು ಸೇವೆಯಿಂದ ವಜಾ ಮಾಡಲಾಗದೆ ಎಂದು ಜಿ.ಪಂ. ಸಿಇಒ ಆದೇಶಿಸಿದ್ದಾರೆ. ಇದನ್ನೂ ಓದಿ: ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ – ಜಿಲ್ಲಾ ಪ್ರವಾಸ ಮೊಟಕುಗೊಳಿಸಿ ಸಿಎಂ ಬೆಂಗಳೂರಿಗೆ ವಾಪಸ್

     

    ನರೇಗಾ ಕಾಮಗಾರಿ ಬಿಲ್ ಪಾವತಿ ಮಾಡಲು ರೈತನ ಬಳಿ ಲಂಚ ಕೇಳಿದ್ದ ತಾಲೂಕು ಪಂಚಾಯತ್ ಅಧಿಕಾರಿಗೆ ಲಂಚ ಕೊಡಲು ಹಣವಿಲ್ಲದೆ ತನ್ನ 2 ಎತ್ತುಗಳನ್ನು ನೀಡಲು ರೈತ ಮುಂದಾಗಿದ್ದ. ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಬಗದುರಿ ಗ್ರಾಮದ ರೈತ ಪ್ರಶಾಂತ್ ಬಿರಾದಾರ ಲಂಚ ರೂಪದಲ್ಲಿ ತನ್ನ 2 ಎತ್ತುಗಳನ್ನು ಕೊಡಲು ತಾ.ಪಂ. ಕಚೇರಿಗೆ ಬಂದಿದ್ದ. ಎತ್ತುಗಳ ಸಮೇತ ಬಂದಿದ್ದ ರೈತನನ್ನು ಕಂಡು ಅಧಿಕಾರಿಗಳು ಶಾಕ್ ಆಗಿದ್ದರು. ಇದನ್ನೂ ಓದಿ: ರಾಜ್ಯ ವಿಧಾನಸಭೆ ಚುನಾವಣೆಗೆ ಇಂದೇ ಮುಹೂರ್ತ ಫಿಕ್ಸ್

  • ನರೇಗಾ ಬಿಲ್ ಪಾವತಿಗೆ ಗ್ರಾ.ಪಂ ಅಧಿಕಾರಿಯಿಂದ ಲಂಚಕ್ಕೆ ಬೇಡಿಕೆ- ಹಣವಿಲ್ಲದೆ ಎತ್ತುಗಳನ್ನು ನೀಡಲು ಮುಂದಾದ ರೈತ

    ನರೇಗಾ ಬಿಲ್ ಪಾವತಿಗೆ ಗ್ರಾ.ಪಂ ಅಧಿಕಾರಿಯಿಂದ ಲಂಚಕ್ಕೆ ಬೇಡಿಕೆ- ಹಣವಿಲ್ಲದೆ ಎತ್ತುಗಳನ್ನು ನೀಡಲು ಮುಂದಾದ ರೈತ

    ಬೀದರ್: ನರೇಗಾ (NREGA) ಬಿಲ್ ಪಾವತಿಸಲು ಲಂಚಕ್ಕೆ (Bribe) ಬೇಡಿಕೆಯನ್ನಿಟ್ಟ ಗ್ರಾಮ ಪಂಚಾಯತಿ ಅಧಿಕಾರಿಗೆ ನೀಡಲು ಹಣವಿಲ್ಲದೆ ತನ್ನ ಎರಡು ಎತ್ತುಗಳನ್ನು (Ox) ಲಂಚದ ರೂಪದಲ್ಲಿ ನೀಡಲು ರೈತ ಮುಂದಾದ ಘಟನೆ ಬೀದರ್ (Bidar) ಜಿಲ್ಲೆಯ ಬಸವಕಲ್ಯಾಣ ಪಟ್ಟಣದ ತಾಲೂಕು ಪಂಚಾಯತ್ ಕಚೇರಿ ಬಳಿ ನಡೆದಿದೆ.

    ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಬಗದೂರಿ ಗ್ರಾಮದ ರೈತ ಪ್ರಶಾಂತ ಬಿರಾದಾರ ತನ್ನ ಎರಡು ಎತ್ತುಗಳನ್ನು ಲಂಚದ ರೂಪದಲ್ಲಿ ನೀಡಲು ಮುಂದಾಗಿ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. ಉದ್ಯೋಗ ಖಾತರಿ ಯೋಜನೆಯಲ್ಲಿ ರೈತನ ಜಮೀನಿಗೆ ತಡೆಗೋಡೆ ನಿರ್ಮಾಣ ಮಾಡಲಾಗಿದ್ದು, ಈ ಕಾಮಗಾರಿಗೆ ಒಂದು 1 ಲಕ್ಷ ರೂ. ಅನುದಾನ ಮಂಜೂರಾಗಿತ್ತು. 1 ಲಕ್ಷ ರೂ. ಅನುದಾನದ ಪೈಕಿ 55 ಸಾವಿರ ಹಣ ಮಾತ್ರ ಅಧಿಕಾರಿಗಳು ನೀಡಿದ್ದು, ಉಳಿದ 45 ಸಾವಿರ ಹಣ ನೀಡಲು ಗ್ರಾ.ಪಂ ಅಧಿಕಾರಿ (Grampanchayat Officer) ಲಂಚಕ್ಕೆ ಬೇಡಿಕೆಯಿಟ್ಟಿದ್ದಾರೆ. ಇದರಿಂದ ಬೇಸತ್ತ ರೈತ ತನ್ನ ಎರಡು ಎತ್ತುಗಳನ್ನು ಲಂಚದ ರೂಪದಲ್ಲಿ ನೀಡಲು ಮುಂದಾಗಿದ್ದಾರೆ. ಇದನ್ನೂ ಓದಿ: ಡಿಸ್ನಿಯಲ್ಲೂ ಶುರುವಾಯ್ತು ಜಾಬ್ ಕಟ್ – ಮುಂದಿನ 4 ದಿನದಲ್ಲಿ 7,000 ಉದ್ಯೋಗಿಗಳು ವಜಾ 

    ರೈತ ತನ್ನ ಎರಡು ಎತ್ತುಗಳ ಸಮೇತ ತಾಲೂಕು ಪಂಚಾಯತ್‌ಗೆ ಆಗಮಿಸಿದ್ದು, ಲಂಚದ ರೂಪದಲ್ಲಿ ಈ ಎರಡು ಎತ್ತುಗಳನ್ನು ತೆಗೆದುಕೊಂಡು ಉಳಿದ 45 ಸಾವಿರ ಹಣ ನೀಡಿ ಎಂದು ಪಟ್ಟು ಹಿಡಿದಿದ್ದಾರೆ. ಈ ಘಟನೆಯಿಂದಾಗಿ ಕೆಲ ಕಾಲ ತಾ.ಪಂ ಅಧಿಕಾರಿಗಳಿಗೆ ಮುಜುಗರ ಉಂಟಾಗಿದ್ದು, ಸುದ್ದಿ ತಿಳಿದು ತಾ.ಪಂ ಎಡಿ ಸಂತೋಷ್ ಚವ್ಹಾಣ್ ಸ್ಥಳಕ್ಕೆ ಬಂದು ರೈತನಿಗೆ ಬಿಲ್ ಪಾವತಿಸುವುದಾಗಿ ಭರವಸೆ ನೀಡಿ ರೈತನನ್ನು ಮನೆಗೆ ಕಳುಹಿಸಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ ಪ್ರತಿಷ್ಠಿತ ಉದ್ಯಮಿ ಗಡಿಪಾರು!

  • ಆಲಿಕಲ್ಲು ಸಹಿತ ಮಳೆಗೆ ನೆಲಕಚ್ಚಿದ ಬೆಳೆಗಳು ಅನ್ನದಾತನಿಗೆ ನಷ್ಟವೋ ನಷ್ಟ

    ಆಲಿಕಲ್ಲು ಸಹಿತ ಮಳೆಗೆ ನೆಲಕಚ್ಚಿದ ಬೆಳೆಗಳು ಅನ್ನದಾತನಿಗೆ ನಷ್ಟವೋ ನಷ್ಟ

    ಚಿಕ್ಕಬಳ್ಳಾಪುರ: ಗುರುವಾರ ರಾತ್ರಿ ಚಿಕ್ಕಬಳ್ಳಾಪುರದಲ್ಲಿ (Chikballapur) ಸುರಿದ ಬಿರುಗಾಳಿ ಸಹಿತ ಆಲಿಕಲ್ಲು (Hailstorm) ಮಳೆಯಿಂದ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ರೇಣುಮಾಕಲಹಳ್ಳಿ ಗ್ರಾಮದ ರೈತ (farmer) ರಾಮಮೂರ್ತಿ ಹಾಗೂ ನಾರಾಯಣ ಮೂರ್ತಿ ಎಂಬುವವರು ಬೆಳೆದಿದ್ದ ದ್ರಾಕ್ಷಿ ಫಸಲು ಆಲಿಕಲ್ಲು ಮಳೆಗೆ ಸಿಲುಕಿ ಹಾಳಾಗಿದೆ.

    ಬೊಮ್ಮನಹಳ್ಳಿ ಗ್ರಾಮದ ಬೆರಾರೆಡ್ಡಿ ಎಂಬುವವರಿಗೆ ಸೇರಿದ ಜೋಳದ ಬೆಳೆ ಸಹ ಸಂಪೂರ್ಣ ನೆಲಕ್ಕುರುಳಿದೆ. ಇಷ್ಟೇ ಅಲ್ಲದೇ ರೈತರು ಬೆಳೆದಿದ್ದ ಹೂವಿನ ತೋಟ, ತರಕಾರಿ ಸೇರಿದಂತೆ ದಾಳಿಂಬೆ ಬೆಳೆಗಳು ಹಾನಿಯಾಗಿ ಲಕ್ಷಾಂತರ ರೂ. ಮೌಲ್ಯದ ಬೆಳೆ ಹಾನಿ ಸಂಭವಿಸಿದೆ. ಬೆಳೆ ಹಾನಿಯಿಂದ ಕಂಗಾಲಾಗಿರುವ ರೈತರ ನೆರವಿಗೆ ಸರ್ಕಾರ ಧಾವಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ.

    ರಾಜ್ಯದಲ್ಲಿ ಹವಾಮಾನ ವೈಪರಿತ್ಯದಿಂದ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದೆ. ಮಾ. 18ರ ವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ( Meteorological Department) ಮಾಹಿತಿ ನೀಡಿದೆ. ಇದನ್ನೂ ಓದಿ: ಬೇಸಿಗೆಯಲ್ಲಿ ಆಲಿಕಲ್ಲು ಮಳೆ – ಕಲಬುರಗಿಯಲ್ಲಿ ‘ಹಿಮಾಲಯದ ರಸ್ತೆ’!

  • ವಿಶೇಷಚೇತನ ರೈತನ ಕಾಫಿ ತೋಟ ನಾಶ ಮಾಡಿದ ದುಷ್ಟರು- ಕ್ರಮಕ್ಕೆ ಗ್ರಾಮಸ್ಥರ ಒತ್ತಾಯ

    ವಿಶೇಷಚೇತನ ರೈತನ ಕಾಫಿ ತೋಟ ನಾಶ ಮಾಡಿದ ದುಷ್ಟರು- ಕ್ರಮಕ್ಕೆ ಗ್ರಾಮಸ್ಥರ ಒತ್ತಾಯ

    ಹಾಸನ: ವಿಶೇಷಚೇತನ ರೈತನೊಬ್ಬರ ಒಂದು ಎಕರೆ ಕಾಫಿ ತೋಟವನ್ನು (Coffee Plantation) ದುಷ್ಕರ್ಮಿಗಳು ನಾಶಪಡಿಸಿದ ಘಟನೆ ಹಾಸನದ (Hassan) ಆಲೂರಿನ (Alur) ಅಡಿಬೈಲು ಗ್ರಾಮದಲ್ಲಿ ನಡೆದಿದೆ.

    ಚಂದ್ರು ಎಂಬವರು ಒಂದು ಎಕರೆ ಜಾಗದಲ್ಲಿ 450ಕ್ಕೂ ಹೆಚ್ಚು ಕಾಫಿ ಗಿಡ ಹಾಗೂ ಮೆಣಸಿನ ಗಿಡಗಳನ್ನು ಬೆಳೆದಿದ್ದರು. ದುಷ್ಕರ್ಮಿಗಳು ಬೆಳೆಯನ್ನು ಕಡಿದು ಹಾಕಿದ್ದು ರೈತ (Farmer) ಹಾಗೂ ಆತನ ಕುಟುಂಬ (Family) ಕಂಗಾಲಾಗಿ ಕಣ್ಣೀರಿಟ್ಟಿದೆ. ಇದನ್ನೂ ಓದಿ: ಸಿಎಂ ಉದ್ಘಾಟಿಸಿದ್ದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಮತ್ತೊಮ್ಮೆ ಲೋಕಾರ್ಪಣೆ

    ಹನ್ನೆರಡು ವರ್ಷಗಳಿಂದ ಕಷ್ಟಪಟ್ಟು ಬೆಳೆದಿದ್ದ ಗಿಡಗಳಲ್ಲಿ ಫಸಲು ಬರುತ್ತಿದ್ದು, ಕುಟುಂಬ ನಿರ್ವಹಣೆಯ ಆಧಾರವೇ ಕಳಚಿದಂತಾಗಿದೆ ಎಂದು ರೈತ ತನ್ನ ಅಳಲನ್ನು ತೋಡಿಕೊಂಡಿದ್ದಾನೆ. ಪರಿಹಾರಕ್ಕಾಗಿ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾನೆ. ವಿಶೇಷಚೇತನ ರೈತನ ಕಾಫಿ ತೋಟದಲ್ಲಿ ಹೀನ ಕೃತ್ಯ ಎಸಗಿರುವ ದುಷ್ಟರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

    ಸ್ಥಳಕ್ಕೆ ಆಲೂರು ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಸ್ವಗ್ರಾಮದಲ್ಲೇ ಶಾಸಕ ಅಜಯ್ ಸಿಂಗ್‌ಗೆ ಗ್ರಾಮಸ್ಥರಿಂದ ಕ್ಲಾಸ್

  • ಕಾಂಗ್ರೆಸ್‌ಗೆ ಸೇರ್ಪಡೆಯಾಗದ್ದಕ್ಕೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ರಾ ಕೆಜಿಎಫ್ ಶಾಸಕಿ?

    ಕಾಂಗ್ರೆಸ್‌ಗೆ ಸೇರ್ಪಡೆಯಾಗದ್ದಕ್ಕೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ರಾ ಕೆಜಿಎಫ್ ಶಾಸಕಿ?

    – 4 ದಿನಗಳಿಂದ ಗದ್ದೆಗೆ ನೀರು ಪೂರೈಕೆ ಇಲ್ಲ
    – ರೈತನ ಪರವಾಗಿ ಬಿಜೆಪಿ ಪ್ರತಿಭಟನೆ

    ಕೋಲಾರ: ಚುನಾವಣೆ ಸಮೀಪಿಸುತ್ತಿದ್ದಂತೆ ಹಳ್ಳಿ ಭಾಗಗಳಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಜೊತೆಗೆ ಮತದಾರರನ್ನು ಸೆಳೆಯಲು ತಮ್ಮದೇ ಆದಂತಹ ಕಸರತ್ತುಗಳನ್ನು ರಾಜಕೀಯ ಪಕ್ಷದ ಅಭ್ಯರ್ಥಿಗಳು ನಡೆಸುತ್ತಿದ್ದಾರೆ. ಒಂದೆಡೆ ಮತದಾರರಿಗೆ ಆಸೆ ಆಮಿಷಗಳನ್ನು ಒಡ್ಡಿದರೆ ಇನ್ನೊಂದಡೆ ಬೇರೆ ಪಕ್ಷದ ಮತದಾರರನ್ನು ತಮ್ಮತ್ತ ಸೆಳೆದು ಪಕ್ಷ ಸೇರ್ಪಡೆ ಮಾಡಿಕೊಳ್ಳುತ್ತಿದ್ದಾರೆ.

    ಕೋಲಾರ (Kolar) ಜಿಲ್ಲೆಯ ಕೆಜಿಎಫ್ (KGF) ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ (Congress MLA) ರೂಪಾ ಶಶಿಧರ್ (Roopa Shashidhar) ತಮ್ಮ ಪಕ್ಷಕ್ಕೆ ಸೇರ್ಪಡೆಗೊಳ್ಳದ ಕುಟುಂಬಕ್ಕೆ ವಿದ್ಯುತ್  (Electricity) ಸಂಪರ್ಕ ಕಡಿತಗೊಳಿಸಿರುವ ಆರೋಪ ಕೇಳಿ ಬಂದಿದೆ. ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನ ಬೇತಮಂಗಲ ವ್ಯಾಪ್ತಿಯ ಪಂತನಹಳ್ಳಿ ಗ್ರಾಮದಲ್ಲಿ ತಮ್ಮ ಪಕ್ಷಕ್ಕೆ ಸೇರ್ಪಡೆಯಾಗಿಲ್ಲ ಎಂದು ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

    ಪಂತನಹಳ್ಳಿ ಗ್ರಾಮದ ರೈತ (Farmer) ಶಿವಪ್ಪ ಬಿಜೆಪಿ (BJP) ಪಕ್ಷದಲ್ಲಿ ಗುರುತಿಸಿಕೊಂಡಿದ್ದು, ಇವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವಂತೆ ಕೆಜಿಎಫ್ ಶಾಸಕಿ ರೂಪಾ ಒತ್ತಾಯ ಮಾಡಿದ್ದರು ಎನ್ನಲಾಗಿದೆ. ಆದರೆ ರೈತ ಶಿವಪ್ಪ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳದ ಹಿನ್ನೆಲೆ ಕಳೆದ 3 ದಿನಗಳ ಹಿಂದೆ ಅವರ ಜಮೀನಿಗೆ ಇದ್ದಂತಹ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ್ದಾರೆಂದು ಆರೋಪಿಸಲಾಗಿದೆ. ಇದನ್ನೂ ಓದಿ: ಬುಧವಾರದಿಂದ ಸರ್ಕಾರಿ ನೌಕರರ ಮುಷ್ಕರ: ಯಾವ ಕಚೇರಿಗಳು ಬಂದ್‌ ಆಗಲಿವೆ?

    ಈ ಹಿನ್ನೆಲೆ ಶಾಸಕಿ ಅವರ ವಿರುದ್ಧ ಕೆಜಿಎಫ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಆಕಾಂಕ್ಷಿಯಾಗಿರುವ ಮೋಹನ್ ಕೃಷ್ಣ ನೇತೃತ್ವದಲ್ಲಿ ಪಂತನಹಳ್ಳಿ ಗ್ರಾಮದ ರೈತನ ತೋಟದಲ್ಲಿ ನಿಂತು ಪ್ರತಿಭಟನೆ ಮಾಡಿದ್ದಾರೆ. ಶಾಸಕಿ ರೂಪಾ ಅವರು ತಮ್ಮ ಪ್ರಭಾವ ಬಳಸಿ, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳದ ಬಿಜೆಪಿ ಕಾರ್ಯಕರ್ತನ ತೋಟಕ್ಕೆ ಇದ್ದಂತಹ ವಿದ್ಯುತ್ ಸಂಪರ್ಕ ಕಡಿತ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

    ಕಳೆದ 4 ದಿನಗಳಿಂದ ರೈತನು ಬೆಳೆದ ಬೆಳೆಗಳಿಗೆ ನೀರಿಲ್ಲದೆ ಪರದಾಡುವಂತಹ ಸ್ಥಿತಿಯಲ್ಲಿದ್ದು ಇದಕ್ಕೆ ಶಾಸಕಿ ರೂಪಾ ಅವರೇ ನೇರ ಹೊಣೆ ಎಂದು ಹೇಳಿದ್ದಾರೆ. ಶಾಸಕಿ ಆದಂತಹವರು ರೈತರ ಸಂಕಷ್ಟಗಳಿಗೆ ಸ್ಪಂದಿಸಬೇಕೇ ಹೊರತು ರಾಜಕೀಯವಾಗಿ ಅವರಿಗೆ ತೊಂದರೆ ನೀಡಬಾರದು ಎಂದು ಗುಡುಗಿದ್ದಾರೆ. ಇದನ್ನೂ ಓದಿ: 14 ಕಡೆ ಕುಕ್ಕರ್ ಬ್ಲಾಸ್ಟ್ ಆಗಿದೆ, ತಗೊಳೋ ಮುನ್ನ ಎಚ್ಚರ: ರಮೇಶ್ ಜಾರಕಿಹೊಳಿ

  • ವಿದ್ಯುತ್ ಅವಘಡದಿಂದ ಇಬ್ಬರು ರೈತರು ಸಾವು

    ವಿದ್ಯುತ್ ಅವಘಡದಿಂದ ಇಬ್ಬರು ರೈತರು ಸಾವು

    ದಾವಣಗೆರೆ: ತೋಟದಲ್ಲಿ ಮೋಟರ್ ಆನ್ ಮಾಡಲು ಹೋಗಿ ಇಬ್ಬರು ರೈತರು ಮೃತಪಟ್ಟ ಘಟನೆ ದಾವಣಗೆರೆ ತಾಲ್ಲೂಕಿನ ಮಾಯಕೊಂಡ ಪೊಲೀಸ್ ಠಾಣೆ ವ್ಯಾಪ್ತಿಯ ಬಾಡಾ ಗ್ರಾಮದಲ್ಲಿ ನಡೆದಿದೆ.

    ಮೃತ ರೈತರನ್ನು (Farmer) ಮಲ್ಲಪ್ಪ (62), ಮಂಜುನಾಥ್ (32) ಎಂದು ಗುರುತಿಸಲಾಗಿದೆ. ಅಡಿಕೆ ತೋಟಕ್ಕೆ ನೀರು ಬಿಡಲು ಮೋಟಾರ್ (Motar) ಸ್ವಿಚ್ ಆನ್ ಮಾಡುವ ಸಮಯದಲ್ಲಿ ವಿದ್ಯುತ್ ಶಾಕ್‍ನಿಂದ ಈ ಅವಘಡ ಸಂಭವಿಸಿದೆ. ಇದನ್ನೂ ಓದಿ: ಎದೆನೋವು ಬಂದ್ರೆ ಗ್ಯಾಸ್ಟ್ರಿಕ್‌ ಅಂತಾ ನಿರ್ಲಕ್ಷಿಸಬೇಡಿ – ಹೃದಯಾಘಾತ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ವೈದ್ಯರು ಹೇಳೋದೇನು?

    ಮೋಟಾರ್ ಆನ್ ಮಾಡಲು ತೆರಳಿದ್ದ ಮಂಜುನಾಥ್‍ಗೆ ವಿದ್ಯುತ್ ಪ್ರವಹಿಸಿತ್ತು (Electric shock). ನಂತರ ಆತನ ರಕ್ಷಣೆಗೆ ತೆರಳಿದ್ದ ಮಲ್ಲಪ್ಪನಿಗೂ ಕೂಡ ಪ್ರವಹಿಸಿ ಇಬ್ಬರೂ ಮೃತಪಟ್ಟಿದ್ದಾರೆ. ಮಾಯಕೊಂಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಆಸ್ತಿ ವಿಷಯಕ್ಕೆ ರೈತನ ಮೇಲೆ ಮಾರಣಾಂತಿಕ ಹಲ್ಲೆ – ಸ್ವಾಮೀಜಿ, ಬೆಂಬಲಿಗರ ಮೇಲೆ ಎಫ್‌ಐಆರ್

    ಆಸ್ತಿ ವಿಷಯಕ್ಕೆ ರೈತನ ಮೇಲೆ ಮಾರಣಾಂತಿಕ ಹಲ್ಲೆ – ಸ್ವಾಮೀಜಿ, ಬೆಂಬಲಿಗರ ಮೇಲೆ ಎಫ್‌ಐಆರ್

    ಬೀದರ್: ಆಸ್ತಿ ವಿಷಯಕ್ಕೆ ಸಂಬಂಧಿಸಿದಂತೆ ರೈತನ (Farmer) ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪದ ಮೇಲೆ ಬಸವತೀರ್ಥ ಮಠದ ಸ್ವಾಮೀಜಿ ಹಾಗೂ ಬೆಂಬಲಿಗರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿದೆ.

    ಜಮೀನು ಆಸ್ತಿ ವಿಷಯಕ್ಕೆ ಬಸವತೀರ್ಥ ಮಠದ ಸ್ವಾಮೀಜಿ ಬೆಂಬಲಿಗರು ಹಾಗೂ ತಾಂಡ ಜನರ ನಡುವೆ ಗಲಾಟೆಯಾಗಿತ್ತು. ಸ್ವಾಮೀಜಿ ಬೆಂಬಲಿಗರು ತಾಂಡ ಜನರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದು, ಇದೀಗ ಸಿದ್ದಲಿಂಗ ಸ್ವಾಮೀಜಿ (Siddalinga Swamiji) ಹಾಗೂ ಇಬ್ಬರು ಬೆಂಬಲಿಗರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇದನ್ನೂ ಓದಿ: ಬಸ್ ನಿಲ್ದಾಣ ಜಾಗದ ವಿಚಾರಕ್ಕೆ 2 ಗುಂಪುಗಳ ನಡುವೆ ಮಾರಾಮಾರಿ – ಚಾಕು ಇರಿತದಿಂದ ಯುವಕ ಗಂಭೀರ

    ಬೀದರ್ (Bidar) ಜಿಲ್ಲೆಯ ಚಿಟ್ಟಗುಪ್ಪ ತಾಲೂಕಿನ ಕಲ್ಲೂರು ತಾಂಡದ ಸೋಮಲು ಎಂಬ ರೈತನ 4 ಎಕರೆ ಜಮೀನು ಮಠಕ್ಕೆ ಸೇರಬೇಕು ಎಂದು ಸ್ವಾಮೀಜಿ ಬೆಂಬಲಿಗರು ರೈತ ಸೋಮಲು, ಪತ್ನಿ ಹಾಗೂ ತಾಂಡದ ಜನರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಬಳಿಕ ರೈತ ಸೋಮಲು ಚಿಟಗುಪ್ಪಾ ಠಾಣೆಗೆ ದೂರು ನೀಡಿದ್ದು, ಈ ಹಿನ್ನೆಲೆ ಸ್ವಾಮೀಜಿ ಬೆಂಬಲಿಗರ ವಿರುದ್ಧ ಮಾರಣಾಂತಿಕ ಹಲ್ಲೆ ಹಾಗೂ ಜೀವ ಬೆದರಿಕೆ ಕೇಸ್ ದಾಖಲಾಗಿದೆ.

    ಬಸವತೀರ್ಥ ಮಠದ ಜಾತ್ರಾಮಹೋತ್ಸವಕ್ಕೆ ಚಾಲನೆ ನೀಡುವ ವೇಳೆ ಬಸವತೀರ್ಥ ಮಠದ ಡಾ. ಸಿದ್ದಲಿಂಗ ಮಹಾಸ್ವಾಮಿಗಳು ಗಾಳಿಯಲ್ಲಿ ಗುಂಡು ಕೂಡಾ ಹಾರಿಸಿದ್ದಾರೆ. ಎಫ್‌ಐಆರ್ ದಾಖಲಾಗುತ್ತಿದ್ದಂತೆ ಸಿದ್ದಲಿಂಗ ಸ್ವಾಮೀಜಿ ಪರಾರಿಯಾಗಿದ್ದಾರೆ. ಇದನ್ನೂ ಓದಿ: ಭಿನ್ನಮತ ಸ್ಫೋಟ – ಬಿಜೆಪಿಗೆ ಮಾಜಿ ಶಾಸಕ ಕಿರಣ್ ಕುಮಾರ್ ಗುಡ್‌ಬೈ

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k