Tag: farmer

  • ಮಹದಾಯಿ ವಿಚಾರದಲ್ಲಿ ಸರ್ಕಾರ ನಿರ್ಲಕ್ಷ್ಯ- ಸಾಲ ಮರುಪಾವತಿ ಮಾಡಲ್ಲ ಎಂದ ರೈತರು

    ಮಹದಾಯಿ ವಿಚಾರದಲ್ಲಿ ಸರ್ಕಾರ ನಿರ್ಲಕ್ಷ್ಯ- ಸಾಲ ಮರುಪಾವತಿ ಮಾಡಲ್ಲ ಎಂದ ರೈತರು

    ಹುಬ್ಬಳ್ಳಿ: ಮಹದಾಯಿ ನೀರಿನ ವಿಚಾರದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆಗೆ ಬೇಸತ್ತಿರುವ ರೈತರು ಮತ್ತೊಂದು ಸುತ್ತಿನ ಹೋರಾಟಕ್ಕೆ ರಣಕಹಳೆ ಮೊಳಗಿಸಿದ್ದಾರೆ.

    ರೈತ ಹುತ್ಮಾತ್ಮ ದಿನವಾದ ಜುಲೈ 21 ರಿಂದ ಸಾಲ ಮರುಪಾವತಿ ಬಾಯ್ಕಟ್ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಈ ಅಭಿಯಾನಕ್ಕೆ ಮಹದಾಯಿ ಹೋರಾಟ ಸಂಸ್ಥಾಪಕ ವಿಜಯ ಕುಲಕರ್ಣಿ ಕರೆ ನೀಡಿದ್ದು, ವಿವಿಧ ಸಂಘಟನೆಗಳು ಮತ್ತು ರೈತರಿಂದ ಬೆಂಬಲ ವ್ಯಕ್ತವಾಗಿದೆ. ಮಹಾದಾಯಿ ಯೋಜನೆ ಜಾರಿಯಾಗದಿದ್ದರೆ ಬ್ಯಾಂಕ್‍ನಲ್ಲಿ ಮಾಡಿರುವ ಬೆಳೆ ಸಾಲ, ನೀರಾವರಿ ಸಾಲ ಸೇರಿದಂತೆ ವಿವಿಧ ಮಾದರಿಯ ಸಾಲಗಳನ್ನು ತುಂಬದಿರಲು ನಿರ್ಧಾರ ಮಾಡಿದ್ದಾರೆ.

    ಈ ಬಗ್ಗೆ ರೈತ ಮುಖಂಡರು ಮಾತನಾಡಿ, ಬಜೆಟ್‍ನಲ್ಲಿ ಹಣವಿಟ್ಟು ನಾಟಕ ಆಡ್ತಿರಿ, ಆದರೆ ಡಿಪಿಆರ್ ಮಾಡಿಸಲು ಆಗುತ್ತಿಲ್ಲ. ಎಲ್ಲ ರಾಜಕೀಯ ಪಕ್ಷಗಳು ಮಹದಾಯಿಯನ್ನು ರಾಜಕೀಯ ದಾಳ ಮಾಡಿಕೊಂಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಹಾದಾಯಿ ವಿಷಯವಾಗಿ ನಮ್ಮ ಜೊತೆ ಹೋರಾಟ ಮಾಡಿದ್ದರು. ಪಾದಾಯತ್ರೆ ಮಾಡಿದ್ದರು. ಜೊತೆಗೆ ರಕ್ತದಲ್ಲಿ ನಮ್ಮ ಜೊತೆ ಪತ್ರ ಬರೆದಿದ್ದಿರಿ. ಇವಾಗ ನೀವೇ ಅಧಿಕಾರದಲ್ಲಿದ್ದಿರಿ. ಯಾಕೆ ಯೋಜನೆ ಜಾರಿ ಮಾಡುತ್ತಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಚಾಮುಂಡೇಶ್ವರಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ- ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟನೆ

    ಯೋಜನೆ ಜಾರಿ ಮಾಡಲಿಲ್ಲ ಅಂದರೆ ನಿಮಗೆ ಧಿಕ್ಕಾರ ಕೂಗಬೇಕಾಗುತ್ತದೆ. ಅದಕ್ಕಾಗಿ ನಮ್ಮ ರೈತರಿಗೆ ಕರೆ ಕಟ್ಟಿದ್ದೇವೆ. ನಮಗೆ ನೀರೆ ನೀಡಲ್ಲ ಅಂದರೆ ಸಾಲ ತುಂಬೊದು ಹೇಗೆ. ಅದಕ್ಕಾಗಿಯೇ ನಾವು ಸಾಲ ತುಂಬುವುದಿಲ್ಲ. ಸರ್ಕಾರದ ಏನಾದ್ರು ಮಾಡಿಕೊಳ್ಳಲಿ, ನಾವು ಸಾಲ ತುಂಬಲ್ಲ ಎಂದು ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ಈ ಚುನಾವಣೆ ಪ್ರಜಾಪ್ರಭುತ್ವದ ಉಳಿವಿನ ಬಗ್ಗೆ ನಿರ್ಧರಿಸುತ್ತೆ: ಯಶವಂತ್ ಸಿನ್ಹಾ

    Live Tv
    [brid partner=56869869 player=32851 video=960834 autoplay=true]

  • ರಾಷ್ಟ್ರಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ರೈತ

    ರಾಷ್ಟ್ರಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ರೈತ

    ನವದೆಹಲಿ: ಬಿಜೆಪಿ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಚುನಾವಣೆಯಲ್ಲಿ ಗೆಲ್ಲುವುದು ಬಹುತೇಕ ಖಚಿತವಾಗಿದೆ. ಆದರೂ ವಿಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹ ಅವರು ತಮ್ಮ ಪ್ರಯತ್ನ ಮುಂದುವರಿಸಿದ್ದಾರೆ. ಪ್ರಬಲ ಅಭ್ಯರ್ಥಿಗಳ ನಡುವೆ ಪೈಟೋಟಿ ಏರ್ಪಟ್ಟಿರುವ ಹೊತ್ತಿನಲ್ಲಿ ರೈತರೊಬ್ಬರು ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸಿ ನಾಮಪತ್ರ ಸಲ್ಲಿಸಿದ್ದಾರೆ.

    ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಿರುವ ಉತ್ತರ ಪ್ರದೇಶದ ಚಂದೌಲಿ ಜಿಲ್ಲೆಯ ರೈತ ವಿನೋದ್ ಕುಮಾರ್ ಯಾದವ್ ತನಗೆ ಹಲವು ಸಂಸದರು, ಶಾಸಕರು ಹಾಗೂ ಸಚಿವರ ಬೆಂಬಲ ಇರುವುದಾಗಿಯೂ ಅವರು ಹೇಳಿಕೊಂಡಿದ್ದಾರೆ.

    10ನೇ ತರಗತಿ ವರೆಗೆ ಓದಿಕೊಂಡಿರುವ ವಿನೋದ್ ಕುಮಾರ್ ಕೃಷಿ ಚಟುವಟಿಕೆ ನಡೆಸುತ್ತಿದ್ದಾರೆ. ಇದರೊಂದಿಗೆ ರಾಜಕೀಯ ಚಟುವಟಿಕೆಗಳಲ್ಲೂ ತನ್ನನ್ನು ತಾನು ತೊಡಗಿಸಿಕೊಂಡಿದ್ದ ವಿನೋದ್ ಇದೀಗ ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸಿದ್ದಾರೆ. ಇದನ್ನೂ ಓದಿ: ರಿಲಯನ್ಸ್ ಜಿಯೋ ನಿರ್ದೇಶಕ ಸ್ಥಾನದಿಂದ ಕೆಳಗಿಳಿದ ಮುಖೇಶ್ ಅಂಬಾನಿ – ಮಗ ಆಕಾಶ್‌ಗೆ ಪಟ್ಟ

    ಚುನಾವಣೆಗೆ ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿರುವ ಅವರು, 2005-06 ರಿಂದ ನಾನು ಸಕ್ರೀಯ ರಾಜಕಾರಣದಲ್ಲಿದ್ದೇನೆ. ಗ್ರಾಮ ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲೂ ಸ್ಪರ್ಧಿಸಿದ್ದೇನೆ. ಅಷ್ಟೇ ಅಲ್ಲದೇ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಸಮೀಪದ ಗ್ರಾಮದವನೇ ಆಗಿದ್ದೇನೆ. ಹೀಗಾಗಿ ತನ್ನ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ತಾನು 10 ರಾಜ್ಯಗಳ ನಾಯಕರು ಹಾಗೂ ಪಕ್ಷಗಳ ಜೊತೆ ಮಾತುಕತೆ ನಡೆಸಿದ್ದೇನೆ. ಎಲ್ಲರೂ ಬೆಂಬಲ ಸೂಚಿಸಿದ್ದಾರೆ. ಈ ಎಲ್ಲ ಬೆಳವಣಿಗೆಗಳಿಂದ ನನ್ನ ಗೆಲುವು ಖಚಿತ. ಅಷ್ಟೇ ಅಲ್ಲ ತಾನು ಗೆದ್ದ ಬಳಿತ ತನ್ನ ಕಲಾನಿ ಗ್ರಾಮವನ್ನು ವಿಶ್ವವಿಖ್ಯಾತ ಮಾಡುತ್ತೇನೆ ಬೀಗಿದ್ದಾರೆ. ಇದನ್ನೂ ಓದಿ: ನೂಪುರ್‌ ಶರ್ಮಾಗೆ ಬೆಂಬಲ ವ್ಯಕ್ತಪಡಿಸಿದ್ದಕ್ಕೆ ಮುಸ್ಲಿಂ ಯುವಕರಿಂದ ಟೈಲರ್‌ ಶಿರಚ್ಛೇದ

    ನಾಮಪತ್ರ ಸಲ್ಲಿಕೆ ನಾಳೆಗೆ ಕೊನೆ: ಈವರೆಗೆ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು, ವಿಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹ ಸೇರಿದಂತೆ 56 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಜೂನ್ 29ಕ್ಕೆ ನಾಮಪತ್ರ ಸಲ್ಲಿಕೆ ಅಂತಿಮವಾಗಲಿದ್ದು, ಜುಲೈ 2ರ ಒಳಗೆ ನಾಮಪತ್ರ ಹಿಂಪಡೆಯಲು ಅವಕಾಶವಿದೆ. ಜುಲೈ 18ಕ್ಕೆ ರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಜುಲೈ 21ಕ್ಕೆ ಎತ ಎಣಿಕೆ ನಡೆಯಲಿದ್ದು, ಫಲಿತಾಂಶ ಪ್ರಕಟಗೊಳ್ಳಲಿದೆ.

    2017ರಲ್ಲಿ ರಾಷ್ಟ್ರಪತಿ ಚುನಾವಣೆಗೆ 106 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು.

    Live Tv

  • ನೀನಾ, ನಾನಾ ಅಂತ ಕಾಳಗಕ್ಕಿಳಿದ ಹಾವು, ನಾಯಿ – ಸಾವಿನಲ್ಲಿ ಅಂತ್ಯ

    ನೀನಾ, ನಾನಾ ಅಂತ ಕಾಳಗಕ್ಕಿಳಿದ ಹಾವು, ನಾಯಿ – ಸಾವಿನಲ್ಲಿ ಅಂತ್ಯ

    ಗದಗ: ಸಾಮಾನ್ಯವಾಗಿ ಹಾವು, ಮುಂಗುಸಿ ಕಾದಾಟ ನಡೆಸುವುದನ್ನು ನೋಡಿರುತ್ತೀರಾ. ಅಷ್ಟೇ ಯಾಕೆ ಹದ್ದು ಮತ್ತು ಹಾವು ಜಗಳ ಆಡಿರುವುದನ್ನು ನೋಡಿರುತ್ತೀರಾ. ಆದರೆ ಹಾವು ಹಾಗೂ ನಾಯಿ ನೀನಾ, ನಾನಾ ಎಂದು ಪರಸ್ಪರ ಜಗಳ ಆಡಿರುವುದನ್ನು ಎಲ್ಲಾದರೂ ನೋಡಿದ್ದೀರಾ? ಹಾಗದರೆ ಈ ಸ್ಟೋರಿ ಓದಿ..

    ಹೌದು, ಗದಗ ಜಿಲ್ಲೆ ನರಗುಂದ ತಾಲೂಕಿನ ಹದಲಿ ಗ್ರಾಮದಲ್ಲಿ ಹಾವು ಮತ್ತು ನಾಯಿ ಪರಸ್ಪರ ಕಿತ್ತಾಟ ನಡೆಸಿದೆ. ಗ್ರಾಮದ ಜಮೀನಿ ಹಾವು ನೋಡಿದ ನಾಯಿ ಕಾಳಗಕ್ಕಿಳಿದಿದೆ. ಈ ವೇಳೆ ನಾಯಿಯನ್ನು ನೋಡಿ ಹಾವು ಬುಸುಗುಡುತ್ತಿದ್ದರೆ, ಕೊಂಚವು ಹಿಂದೆ ಸರಿಯದೇ ನಾಯಿ ನಾನು ನೀನಗೇನು ಕಡಿಮೆ ಎಂಬಂತೆ ಗುರ್ ಗುರ್ ಎಂದು ರೊಚ್ಚಿಗೆದಿದೆ. ಇನ್ನೂ ಈ ದೃಶ್ಯ ನೋಡಿ ಗ್ರಾಮಸ್ಥರು ಕೂಡ ಭಯಭೀತರಾಗಿ ಶಾಕ್ ಆಗಿದ್ದಾರೆ. ಇದನ್ನೂ ಓದಿ: ದಾವೂದ್ ಇಬ್ರಾಹಿಂ ಸಹೋದರನ ಕಡೆಯಿಂದ ಸಾಧ್ವಿ ಪ್ರಜ್ಞಾ ಠಾಕೂರ್‌ಗೆ ಕೊಲೆ ಬೆದರಿಕೆ

    ರೈತ ಶೇಖಪ್ಪ ಚಲವಾದಿ ತನ್ನ ನಾಯಿಯೊಂದಿಗೆ ಜಮೀನಿಗೆ ಬಂದ ಸಂದರ್ಭ ನಾಗರಹಾವು ಕಾಣಿಸಿಕೊಂಡಿದ್ದು, ನಾಯಿ ಹಾವಿನ ಜೊತೆ ಸೆಣಸಾಡಿದೆ. ನಾಯಿ ಹಾವಿನ ಬಾಲ ಕಚ್ಚಿ ಗಾಯಗೊಳಿಸಿದರೆ, ಹಾವು ಕೂಡ ನಾಯಿಯ ಮೇಲೆ ನಿರಂತರವಾಗಿ ಅಟ್ಯಾಕ್ ಮಾಡಿ ಎಲ್ಲೆಂದರಲ್ಲಿ ಕಚ್ಚಿ ಗಾಯಗೊಳಿಸಿದೆ. ಈ ಎರಡು ಉಭಯ ಪ್ರಾಣಿಗಳನ್ನು ಬಿಡಿಸಲು ಎಷ್ಟೇ ಪ್ರಯತ್ನಿಸಿದರೂ ಯಾರಿಗೂ ಅಂಜದೇ ಎರಡು ಪ್ರಾಣಿ ಜಿದ್ದಾ-ಜಿದ್ದಿ ನಡೆಸಿದೆ. ಕೊನೆಗೆ ಸೋಲು ಅನುಭವಿಸಲು ಇಷ್ಟಪಡದ ಎರಡು ಪ್ರಾಣಿಗಳ ಕಾದಾಟ ಸಾವಿನಲ್ಲಿ ಅಂತ್ಯ ಕಂಡಿದೆ.

    ಕೂಡಲೇ ರೈತ ಶೇಖಪ್ಪ ಚಲವಾದಿ ಜಮೀನಿಗೆ ಪಶು ವೈದ್ಯರನ್ನು ಕರೆಯಿಸಿ ತನ್ನ ಸಾಕು ನಾಯಿಯ ಜೀವ ಉಳಿಸಲು ಪ್ರಯತ್ನಿಸಿದರೂ ಅಷ್ಟೊತ್ತಿಗಾಗಲೇ ನಾಯಿ ಸಾವನ್ನಪ್ಪಿದೆ. ಕಣ್ಣ ಮುಂದೆಯೇ ತಮ್ಮ ಪ್ರೀತಿಯ ನಾಯಿ ಮೃತಪಟ್ಟಿದ್ದು, ಶೇಖಪ್ಪರಿಗೆ ಭಾರೀ ಆಘಾತವಾಗಿದೆ. ಇದನ್ನೂ ಓದಿ: WWE ಸಿಇಒ ಸ್ಥಾನದಿಂದ ಹೊರನಡೆದ ವಿನ್ಸ್ ಮೆಕ್ ಮಹೊನ್

    Live Tv

  • ಗೊಬ್ಬರ ಸಿಗದಿದ್ದರೆ ನಾನೇನು ಮಾಡಲಿ – ಅಲವತ್ತುಕೊಂಡ ರೈತನ ಮುಂದೆ ಸಚಿವ ಉಡಾಫೆ ಮಾತು

    ಗೊಬ್ಬರ ಸಿಗದಿದ್ದರೆ ನಾನೇನು ಮಾಡಲಿ – ಅಲವತ್ತುಕೊಂಡ ರೈತನ ಮುಂದೆ ಸಚಿವ ಉಡಾಫೆ ಮಾತು

    ಬೀದರ್: ರಾಜ್ಯದ ಹಲವೆಡೆ ರಸಗೊಬ್ಬರ ಸಮಸ್ಯೆ ಇದೆ. ರೈತರು ಪರದಾಡ್ತಾ ಇದ್ದಾರೆ. ಆದ್ರೆ ಈ ವಿಚಾರದಲ್ಲಿ ಕೇಂದ್ರದ ರಸಗೊಬ್ಬರ ಸಚಿವ ಭಗವಂತ್ ಖೂಬಾ ದಿವ್ಯನಿರ್ಲಕ್ಷ್ಯ ವಹಿಸಿದ್ದಾರೆ. ಜೊತೆಗೆ ರೈತರೊಬ್ಬರು ನಮ್ಮ ಊರಿನಲ್ಲಿ ಗೊಬ್ಬರ ಸಿಗುತ್ತಿಲ್ಲ ಎಂದು ಅಲವತ್ತುಕೊಂಡಿದ್ದರು. ಇದಕ್ಕೆ ಖಾರವಾಗಿ ಪ್ರತ್ಯುತ್ತರ ನೀಡಿದ್ದು ಗೊಬ್ಬರ ಸಿಗದಿದ್ದರೆ ನಾನೇನು ಮಾಡಲಿ ಎಂದು ಉಡಾಫೆ ಉತ್ತರ ನೀಡಿದ್ದಾರೆ.

    ರಸಗೊಬ್ಬರ ವಿತರಣೆ ವಿಚಾರವಾಗಿ ತಮಗೆ ಕರೆ ಮಾಡಿದ ರೈತ ಶ್ರೀಮಂತ ಪಾಟೀಲ್ ಜೊತೆ ಭಗವಂತ್ ಖೂಬಾ ಏಕವಚನದಲ್ಲೇ ತರಾಟೆಗೆ ತೆಗೆದುಕೊಂಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಜೊತೆಗೆ ಸಚಿವರು ಮತ್ತು ರೈತರ ನಡುವಿನ ಸಂಭಾಷಣೆಯ ಆಡಿಯೋ ಕೂಡ ವೈರಲ್ ಆಗಿದೆ. ರೈತನಿಗೆ ಅವಾಚ್ಯ ಶಬ್ಧಗಳಿಂದ ಖೂಬಾ ನಿಂದಿಸಿದ್ದಾರೆ ಎಂದು ಆರೋಪವಿದ್ದು, ಕೇಂದ್ರ ಸಚಿವರ ವಿರುದ್ಧ ಆಕ್ರೋಶ ಕೇಳಿಬರುತ್ತಿದೆ. ಇದನ್ನೂ ಓದಿ: ಭೂಸ್ವಾಧೀನ ಮಾಡಿಕೊಂಡ ಜಮೀನು ಮಾರುಕಟ್ಟೆ ದರದಲ್ಲಿ ಖರೀದಿಸಲು ರೈತರರಿಂದ ಸಚಿವ ಮುರುಗೇಶ್ ನಿರಾಣಿಗೆ ಒತ್ತಾಯ

    ಭಗವಂತ್ ಖೂಬಾ ಬೀದರ್ ಸಂಸದರು ಕೂಡ ಹೌದು. ಹೀಗಾಗಿ ಬೀದರ್ ಜಿಲ್ಲೆ ಔರಾದ್ ತಾಲೂಕಿನ ಹೆಡಗಾಪುರದ ರೈತ ಶ್ರೀಮಂತ ಪಾಟೀಲ್, ಸಚಿವರಿಗೆ ಫೋನ್ ಮಾಡಿ ಸರ್ ನಮ್ಮೂರಲ್ಲಿ ಗೊಬ್ಬರ ಸಿಗುತ್ತಿಲ್ಲ ಸಮಸ್ಯೆ ಬಗಹರಿಸಿ ಎಂದು ಕೇಳಿದ್ದಾರೆ. ಇದಕ್ಕೆ ಉಡಾಫೆ ಉತ್ತರ ನೀಡಿದ ಅವರು, ಅದಕ್ಕೆ ನಾನೇನು ಮಾಡ್ಲಿ. ರಾಜ್ಯಕ್ಕೆ ಕಳಿಸೊದಷ್ಟೇ ನನ್ನ ಕೆಲಸ. ಅಲ್ಲಿನ ಶಾಸಕನ್ನು ಕೇಳಿ. ಸಾವಿರಾರು ನೌಕರರು ಇದ್ದಾರೆ ಅವರು ನೋಡ್ಕೋತಾರೆ, ಅವರನ್ನೇ ಹೋಗಿ ಕೇಳು, ನನಗೆ ಬೇರೆ ಕೆಲಸ ಇಲ್ವಾ ಎಂದಿದ್ದಾರೆ. ಇದರಿಂದ ಸಿಟ್ಟಾದ ರೈತ, ಮುಂದಿನ ಬಾರಿ ಹೇಗೆ ಆರಿಸಿ ಬರ್ತೀರಿ ನೋಡ್ತಿನಿ ಎಂದಿದ್ದಾರೆ. ಇದಕ್ಕೆ, ಮುಂದಿನ ಬಾರಿ ಹೇಗೆ ಗೆಲ್ಲೋದು ನನಗೆ ಗೊತ್ತಿದೆ. ಪ್ರತಿಯೊಬ್ಬ ರೈತರಿಗೂ ಗೊಬ್ಬರ ಸಿಕ್ಕಿದ್ಯಾ ಅಂತಾ ನಾನು ನೋಡೋಕೆ ಆಗುತ್ತಾ ಎಂದು ಅವಾಜ್ ಹಾಕಿದ್ದಾರೆ. ಈ ಅಡಿಯೋ ವೈರಲ್ ಆಗುತ್ತಿದೆ.

    Live Tv

  • ಭೂಸ್ವಾಧೀನ ಮಾಡಿಕೊಂಡ ಜಮೀನು ಮಾರುಕಟ್ಟೆ ದರದಲ್ಲಿ ಖರೀದಿಸಲು ರೈತರರಿಂದ ಸಚಿವ ಮುರುಗೇಶ್ ನಿರಾಣಿಗೆ ಒತ್ತಾಯ

    ಭೂಸ್ವಾಧೀನ ಮಾಡಿಕೊಂಡ ಜಮೀನು ಮಾರುಕಟ್ಟೆ ದರದಲ್ಲಿ ಖರೀದಿಸಲು ರೈತರರಿಂದ ಸಚಿವ ಮುರುಗೇಶ್ ನಿರಾಣಿಗೆ ಒತ್ತಾಯ

    ಬೆಂಗಳೂರು: ಕೈಗಾರಿಕಾ ಉದ್ದೇಶಗಳಿಗೆ ಭೂಸ್ವಾಧೀನ ಮಾಡಿಕೊಂಡಿರುವ ಜಮೀನನ್ನು ಮಾರುಕಟ್ಟೆ ದರದಲ್ಲಿ ಖರೀದಿ ಮಾಡಬೇಕು ಎಂದು ಸಾವಿರಾರು ರೈತರು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಅವರಿಗೆ ಮನವಿ ಮಾಡಿಕೊಂಡಿದ್ದಾರೆ. ಗುರುವಾರ ದೇವನಹಳ್ಳಿಯ ಸಾವಿರಾರು ರೈತರ ನಿಯೋಗವು ಮುಖಂಡ ಪ್ರಕಾಶ್ ನೇತೃತ್ವದಲ್ಲಿ ಕರ್ನಾಟಕ ಉದ್ಯೋಗ ಮಿತ್ರ ಕಚೇರಿ ಬಳಿ ತಮ್ಮ ಜಮೀನನ್ನು ಖರೀದಿ ಮಾಡುವಂತೆ ಪ್ರತಿಭಟನೆ ನಡೆಸಲು ಮುಂದಾದರು.

    ಇದಕ್ಕೆ ತಕ್ಷಣವೇ ಸ್ಪಂದಿಸಿ ರೈತ ನಿಯೋಗವನ್ನು ಖುದ್ದು ಭೇಟಿ ಮಾಡಿದ ಸಚಿವ ನಿರಾಣಿ ಅವರು, ಕೈಗಾರಿಕಾ ಉದ್ದೇಶಗಳಿಗಾಗಿ ಭೂಸ್ವಾಧೀನ ಮಾಡಿಕೊಂಡಿರುವ ಜಮೀನನ್ನು ಸರ್ಕಾರ ಯೋಗ್ಯ ಬೆಲೆಯಲ್ಲಿ ಖರೀದಿಸಲು ಸಿದ್ದವಿದೆ. ನಿಮಗೆ ಅನ್ಯಾಯವಾಗಲು ಅವಕಾಶ ಕೊಡುವುದಿಲ್ಲ ಎಂದು ನಿಯೋಗಕ್ಕೆ ಆಶ್ವಾಸನೆ ನೀಡಿದರು.

    ನಾವು ನಮ್ಮ ಜಮೀನು ಬಿಟ್ಟುಕೊಡಲು ಸಿದ್ದರಿದ್ದೇವೆ. ಬೆರಳಿಣಿಕೆಯ ರೈತರು ಮಾತ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಮಾರುಕಟ್ಟೆ ದರದಂತೆ ಜಮೀನನ್ನು ಖರೀದಿ ಮಾಡುವಂತೆ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು. ಇದನ್ನೂ ಓದಿ: ಮೋದಿಗೆ ನಾಯಿ ಸಾವು ಬರುತ್ತೆ ಎಂದಿದ್ದ ಕಾಂಗ್ರೆಸ್ ಮುಖಂಡ ಶೇಖ್ ಹುಸೇನ್ ಬಂಧನ

    ದೇವನಹಳ್ಳಿಯಲ್ಲಿ 4 ಸಾವಿರ ಎಕರೆ ಜಮೀನು ಕೈಗಾರಿಕೆಗಳ ಸ್ಥಾಪನೆಗೆ ಮೀಸಲಿಡಲಾಗಿತ್ತು. ಇದರಲ್ಲಿ ಹಾರ್ಡ್‍ವೇರ್, ಏರೋಸ್ಪೇಸ್ ಸೇರಿದಂತೆ ವಿವಿಧ ರೀತಿಯ ಕೈಗಾರಿಕೆಗಳನ್ನು ಸ್ಥಾಪನೆ ಮಾಡಿದ್ದೇವೆ, ಜಮೀನು ನೀಡಿದ ರೈತರಿಗೆ ಯೋಗ್ಯವಾದ ಬೆಲೆ ಕೊಡಬೇಕು ಎಂಬುದರಲ್ಲಿ ಎರಡು ಮಾತಿಲ್ಲ. ಅದೇ ರೀತಿ ಸ್ಥಳೀಯರಿಗೆ ಉದ್ಯೋಗ ಕೊಡಲು ನಾವು ಬದ್ಧರಾಗಿದ್ದೇವೆ. ಎಲ್ಲೆಲ್ಲಿ ಈ ರೀತಿಯ ಸಮಸ್ಯೆಗಳಿವೆಯೋ ಅಲ್ಲಿ ಸಂಬಂಧಪಟ್ಟ ರೈತ ಮುಖಂಡರ ಜೊತೆ ನಾನೇ ಖುದ್ದು ಮಾತುಕತೆ ನಡೆಸಿ ಸಮಸ್ಯೆಯನ್ನು ಇತ್ಯರ್ಥಪಡಿಸುತ್ತೇನೆ. ಯಾವುದೇ ಕಾರಣಕ್ಕೂ ಜಮೀನು ನೀಡಿದ ರೈತರು ಆತಂಕಕ್ಕೆ ಒಳಗಾಗಬಾರದು. ನಿಮ್ಮ ಹಿತಾಸಕ್ತಿಯನ್ನು ಕಾಪಾಡಲು ನಾವು ಬದ್ಧವಾಗಿದ್ದೇವೆ ಎಂದು ನಿರಾಣಿ ಅವರು ರೈತ ನಿಯೋಗಕ್ಕೆ ಆಭಯ ನೀಡಿದರು.

    ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ನಿರಾಣಿ, ಅವರು,ಆರ್ಥಿಕವಾಗಿ ಹಿಂದುಳಿದ ಸಮುದಾಯ(ಇಡಬ್ಲ್ಯುಎಸ್) ದವರು ಕೈಗಾರಿಕೆಗಳನ್ನು ಸ್ಥಾಪಿಸಲು ಮುಂದೆ ಬಂದರೆ 2 ಎಕರೆವರೆಗೂ ಜಮೀನನ್ನು ರಿಯಾಯಿತಿ ದರದಲ್ಲಿ ನೀಡಲು ಹಾಲಿ ಇರುವ ಕಾಯ್ದೆಗೆ ತಿದ್ದುಪಡಿ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.

    ಈಗಾಗಲೇ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದವರು ಕೈಗಾರಿಕೆಗಳನ್ನು ಪ್ರಾರಂಭಿಸಿದರೆ ಅಂತಹವರಿಗೆ ಸರ್ಕಾರದ ವತಿಯಿಂದ ಶೇ. 75ರಷ್ಟು ರಿಯಾಯಿತಿ ನೀಡಿ ಜಮೀನು ನೀಡಲಾಗುತ್ತದೆ. ಉಳಿದ ಶೇ. 25 ರಷ್ಟು ಹಣವನ್ನು ಹಂತ ಹಂತವಾಗಿ ಕಟ್ಟಲು ಅನುವು ಮಾಡಿಕೊಡಲಾಗಿದೆ ಎಂದು ಹೇಳಿದರು.

    Live Tv

  • ಬಿಜೆಪಿ ಸರ್ಕಾರ ನನ್ನನ್ನು ಕೊಲ್ಲಲು ಯತ್ನಿಸುತ್ತಿದೆ: ಟಿಕಾಯತ್

    ಬಿಜೆಪಿ ಸರ್ಕಾರ ನನ್ನನ್ನು ಕೊಲ್ಲಲು ಯತ್ನಿಸುತ್ತಿದೆ: ಟಿಕಾಯತ್

    ನವದೆಹಲಿ: ನನ್ನನ್ನು ಬಿಜೆಪಿ ಸರ್ಕಾರ ಕೊಲ್ಲಲು ಯತ್ನಿಸುತ್ತಿದೆ ಎಂದು ರಾಷ್ಟ್ರೀಯ ‌ಕಿಸಾನ್ ಮೋರ್ಚಾ ಅಧ್ಯಕ್ಷ ರಾಕೇಶ್ ಟಿಕಾಯತ್ ಆರೋಪಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗಷ್ಟೇ ಕರ್ನಾಟಕದಲ್ಲಿ ಮಸಿ ಹಾಕಿ ದಾಳಿ ಮಾಡಿರುವುದು ಯೋಜಿತ ಪಿತೂರಿಯಾಗಿದೆ. ಇದರ ಜೊತೆಗೆ ಸರ್ಕಾರ ಕೊಲ್ಲಲು ಬಯಸುತ್ತಿದೆ. ಇದಕ್ಕೆ ಕರ್ನಾಟಕ ಮತ್ತು ದೆಹಲಿಯಲ್ಲಿ ಅವರ ಮೇಲೆ ನಡೆದ ದಾಳಿಗಳು ಸಾಕ್ಷಿಯಾಗಿದೆ ಎಂದು ಹೇಳಿದರು.

    ಸರ್ಕಾರವು ರೈತ ಸಂಘವನ್ನು ನಾಶಮಾಡಲು ಬಯಸುತ್ತಿದೆ. ಇದರ ಜೊತೆಗೆ ನಮ್ಮ ಕುಟುಂಬ ಮತ್ತು ಸಂಘಟನೆಯನ್ನು ಒಡೆಯಲು ಪ್ರಯತ್ನಿಸುತ್ತಿದೆ. ಆದರೆ ಇದು ಎಂದಿಗೂ ಸಂಭವಿಸುವುದಿಲ್ಲ. ಯಾವಾಗಲೂ ರೈತರ ಧ್ವನಿಯನ್ನು ಬಲವಾಗಿ ಎತ್ತುತ್ತೇನೆ. ಹಾಗೂ ಅದನ್ನು ಮುಂದುವರಿಸುತ್ತದೆ ಎಂದರು. ಇದನ್ನೂ ಓದಿ: ಕಾನ್ಪುರದಲ್ಲಿ ಘರ್ಷಣೆ – ಸಾವಿರ ಮಂದಿ ಮೇಲೆ ಎಫ್‍ಐಆರ್, 18 ಮಂದಿ ಅರೆಸ್ಟ್

    ಮಹಾತ್ಮ ಗಾಂಧೀಜಿಯನ್ನು ಸಂಚುಕೋರರು ಹತ್ಯೆ ಮಾಡಿದಂತೆಯೇ, ದೇಶ ಮತ್ತು ಅದರ ರೈತರ ಪರವಾಗಿ ಮಾತನಾಡುವ ಯಾರೇ ಆಗಲಿ ಸಂಚುಕೋರರಿಂದ ಗುರಿಯಾಗುತ್ತಾರೆ ಎನ್ನುವ ಮೂಲಕ ಮಸಿ ದಾಳಿ ಮತ್ತು ಮಹಾತ್ಮ ಗಾಂಧಿ ಅವರ ಹತ್ಯೆಯ ನಡುವೆ ಹೋಲಿಕೆ ಮಾಡಲು ಪ್ರಯತ್ನಿಸಿದರು.

    ಕೋಡಿಹಳ್ಳಿ ಚಂದ್ರಶೇಖರ್ ಅವರ ಮೇಲಿನ ಭ್ರಷ್ಟಾಚಾರ ಆರೋಪದ ಬಗ್ಗೆ ಗಾಂಧಿ ಭವನದಲ್ಲಿ ಸಭೆ ಕರೆಯಲಾಗಿತ್ತು. ಈ ವೇಳೆ ರಾಷ್ಟ್ರೀಯ ಕಿಸಾನ್ ಮೋರ್ಚಾ ಅಧ್ಯಕ್ಷ ರಾಕೇಶ್ ಸಿಂಗ್ ಟಿಕಾಯತ್ ಮುಖಕ್ಕೆ ಮಸಿ ಬಳಿದು ಹಲ್ಲೆಗೆ ಯತ್ನಿಸಿದ ಘಟನೆ ನಗರದಲ್ಲಿ ನಡೆದಿತ್ತು. ಇದನ್ನೂ ಓದಿ: ಬಾಲಕ್ಕೆ ಬೆಂಕಿ ಇಟ್ಟಿದ್ರಿಂದ ಲಂಕೆ ಸುಟ್ಟು ಹೋಯ್ತು, ಚಡ್ಡಿಗೆ ಬೆಂಕಿ ಹಚ್ಚಿದ್ರೆ ನಿಮ್ಮ ಬುಡವೇ ಬೂದಿಯಾಗುತ್ತೆ: ಈಶ್ವರಪ್ಪ

  • ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗದಿದ್ದಕ್ಕೆ ರೈತ ಆತ್ಮಹತ್ಯೆ

    ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗದಿದ್ದಕ್ಕೆ ರೈತ ಆತ್ಮಹತ್ಯೆ

    ಚಿಕ್ಕೋಡಿ: ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗಲಿಲ್ಲ ಎಂಬ ಕಾರಣಕ್ಕೆ ಯುವ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕರಗುಪ್ಪಿ ಯಲ್ಲಾಪುರ ಗ್ರಾಮದಲ್ಲಿ ನಡೆದಿದೆ.

    ತನ್ನ ಜಮೀನಿನ ಮಾವಿನ ಮರಕ್ಕೆ ನೇಣು ಹಾಕಿಕೊಂಡು ರಮೇಶ್ ಬಾಳಪ್ಪ ಪಾಟೀಲ್ (25) ಸಾವನ್ನಪ್ಪಿದ್ದಾನೆ. ಮನೆಯಲ್ಲಿ ತನ್ನ ಹಿರಿಯ ಇಬ್ಬರು ಸಹೋದರರು ಬಹುದಿನಗಳಿಂದ ಮದುವೆ ಮಾಡಿಕೊಳ್ಳಲು ಹೆಣ್ಣು ಹುಡುಕುತ್ತಿದ್ದರು ಅವರಿಗೆ ಇನ್ನೂ ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲ. ನನ್ನ ಅಣ್ಣಂದಿರಿಗೆ ಇನ್ನೂ ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲ. ನನಗೂ ಹೆಣ್ಣು ಸಿಗುವುದಿಲ್ಲ ಎಂದು ಮನಸ್ಸಿಗೆ ನೋವು ಮಾಡಿಕೊಂದು ತನ್ನ ಜಮೀನಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನೂ ಓದಿ: ಹೊಸ ನೇಮಕಾತಿಗೆ ವಿರಾಮ – 10% ಉದ್ಯೋಗಿಗಳನ್ನು ತೆಗೆದುಹಾಕಬೇಕು ಎಂದ ಟೆಸ್ಲಾ ಸಿಇಒ

    crime

    ಈ ಕುರಿತು ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದನ್ನೂ ಓದಿ: ಸುಧಾರಣೆ, ಸಾಧನೆ ಮತ್ತು ರೂಪಾಂತರ ಮಂತ್ರದ ಮೇಲೆ ಭಾರತ ಪ್ರಗತಿ ಸಾಧಿಸಿದೆ: ಮೋದಿ

  • ಹೆಲಿಕಾಪ್ಟರ್‌ನಲ್ಲಿ ಸುತ್ತಿದ ರೈತರು, ಕುರಿಗಾಹಿಗಳು

    ಹೆಲಿಕಾಪ್ಟರ್‌ನಲ್ಲಿ ಸುತ್ತಿದ ರೈತರು, ಕುರಿಗಾಹಿಗಳು

    ಚಿತ್ರದುರ್ಗ: ಸುಮಾರು 200ಕ್ಕೂ ಹೆಚ್ಚು ರೈತರು, ಕುರಿಗಾಹಿಗಳು ವಿವಿಸಾಗರ ಹಿನ್ನೀರು ಪ್ರದೇಶದ ಸೊಬಗನ್ನು ಹೆಲಿಕಾಪ್ಟರ್‌ನಲ್ಲಿ ವೀಕ್ಷಿಸಿ ಸಂಭ್ರಮಿಸಿದ್ದಾರೆ.

    ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ವಿವಿಸಾಗರ ಹಿನ್ನೀರು ಪ್ರದೇಶದಲ್ಲಿ ಹೆಲಿಟೂರಿಸಂ ಅಭಿವೃದ್ಧಿ ಹಿನ್ನಲೆಯಲ್ಲಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಗ್ರಾಮಾಂತರ ಪ್ರದೇಶದ ಜನರನ್ನು ಹೆಲಿಕಾಪ್ಟರ್‌ನಲ್ಲಿ ಸುತ್ತಿಸಿದ್ದಾರೆ. ಹೆಲಿಕಾಪ್ಟರ್‌ನಲ್ಲಿ ಸುತ್ತಿದ 200ಕ್ಕೂ ಅಧಿಕ ಜನರು ಮಲೆನಾಡನ್ನೇ ನಾಚಿಸುವಂತಹ ಸೊಬಗನ್ನು ಕಂಡು ಬೆರಗಾಗಿದ್ದಾರೆ. ಇದನ್ನೂ ಓದಿ: ಇನ್ಮುಂದೆ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗೆ ಸಬ್ಸಿಡಿ ಸಿಗಲ್ಲ

    ಈ ಹಿಂದೆ ಹಂಪಿಯಲ್ಲಿ ಹೆಲಿಟೂರಿಸಂ ಆರಂಭಿಸಲಾಗಿತ್ತು. ಆಗ ಪ್ರವಾಸಿಗರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಐಲ್ಯಾಂಡ್ ನಿರ್ಮಾಣ, ಹೆಲಿಟೂರಿಸಂ ಹಾಗೂ ಬೋಟಿಂಗ್‍ಗೆ ಸಿದ್ಧತೆ ನಡೆದಿತ್ತು. ಇದನ್ನೂ ಓದಿ: 2 ವರ್ಷದಿಂದ ಬಗೆಹರಿಯದ ಮಂಡ್ಯ ವ್ಯಕ್ತಿಯ ಸಮಸ್ಯೆಗೆ ಎರಡೇ ದಿನದಲ್ಲಿ ಪರಿಹಾರ ಕೊಟ್ಟ ಮೋದಿ

  • ಅಧಿಕಾರಿಗಳ ವಿರುದ್ಧ ವಿಭಿನ್ನ ಆಕ್ರೋಶ- ಮೆಸ್ಕಾಂ ಕಚೇರಿಯಲ್ಲೇ ಮಸಾಲೆ ರುಬ್ಬಿಕೊಳ್ಳುವ ರೈತ

    ಅಧಿಕಾರಿಗಳ ವಿರುದ್ಧ ವಿಭಿನ್ನ ಆಕ್ರೋಶ- ಮೆಸ್ಕಾಂ ಕಚೇರಿಯಲ್ಲೇ ಮಸಾಲೆ ರುಬ್ಬಿಕೊಳ್ಳುವ ರೈತ

    ಶಿವಮೊಗ್ಗ: ರೈತರೊಬ್ಬರು ತನ್ನ ತೋಟದ ಮನೆಗೆ ನಿರಂತರ ವಿದ್ಯುತ್ ಸಂಪರ್ಕ ನೀಡದ ಮೆಸ್ಕಾಂ ಅಧಿಕಾರಿಗಳ ವಿರುದ್ಧ ವಿಭಿನ್ನವಾಗಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ.

    ಹನುಮಂತಪ್ಪ ಮೆಸ್ಕಾಂ ಕಚೇರಿಯಲ್ಲೇ ಮಸಾಲೆ ರುಬ್ಬುತ್ತಿದ್ದ ರೈತ. ಅವರು ಪ್ರತಿನಿತ್ಯ ಮನೆಯಿಂದ ಮಿಕ್ಸಿ ತಂದು ಮೆಸ್ಕಾಂ ಕಚೇರಿಯಲ್ಲಿ ಮಸಾಲೆ ರುಬ್ಬಿಕೊಂಡು ಹೋಗುತ್ತಿದ್ದರು. ಹಲವು ವರ್ಷಗಳಿಂದ ಅವರು ತೋಟದ ಮನೆಯಲ್ಲಿಯೇ ವಾಸವಿದ್ದರು. ಅವರ ತೋಟದಲ್ಲಿರುವ ಕೊಳವೆ ಬಾವಿಯ ಐಪಿ ಸೆಟ್‍ಗೆ ವಿದ್ಯುತ್ ಸಂಪರ್ಕ ಇದೆ. ಆದರೆ ಐಪಿ ಸೆಟ್‍ನ ವಿದ್ಯುತ್‍ಗೆ ಸಮಯ ನಿಗದಿ ಇಲ್ಲ. ಹೀಗಾಗಿ ಮನೆಗೆ ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಅವರು ಮೆಸ್ಕಾಂಗೆ ಮನವಿ ಮಾಡಿಕೊಂಡಿದ್ದರು. ಇದನ್ನೂ ಓದಿ: ಸಿದ್ದರಾಮಯ್ಯ ಮೆಂಟಲ್ ಗಿರಾಕಿಯ ರೀತಿ ಆಡಬಾರದು, ಪ್ರಬುದ್ಧವಾಗಿ ಮಾತನಾಡಬೇಕು: ಸಿ.ಟಿ.ರವಿ ವ್ಯಂಗ್ಯ

    ರೈತ ಕಳೆದ 6 ತಿಂಗಳಿನಿಂದ ಮೆಸ್ಕಾಂ ಅಧಿಕಾರಿಗಳಿಗೆ ಮನವಿ ಸಲ್ಲಿಸುತ್ತಿದ್ದು, ವಿದ್ಯುತ್ ಸಂಪರ್ಕ ಕಲ್ಪಿಸದ ಹಿನ್ನೆಲೆಯಲ್ಲಿ ಮೆಸ್ಕಾಂ ಕಚೇರಿಯಲ್ಲೇ ಮಸಾಲೆ ರುಬ್ಬಿಕೊಂಡು ಹೋಗುತ್ತಿದ್ದಾರೆ. ಇದನ್ನೂ ಓದಿ: ಮಗನ ಕಾಯಿಲೆ ಗುಣಪಡಿಸ್ತೀನೆಂದು ಮಹಿಳೆ ಮೇಲೆ ಸ್ವಯಂಘೋಷಿತ ದೇವಮಾನವ ರೇಪ್

  • ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ – ಎರಡು ಹಸುಗಳು ಸಜೀವ ದಹನ

    ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ – ಎರಡು ಹಸುಗಳು ಸಜೀವ ದಹನ

    ಚಿಕ್ಕಮಗಳೂರು: ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಎರಡು ರಾಸುಗಳು ಜೀವಂತವಾಗಿ ಸುಟ್ಟು ಹೋಗಿರುವ ಘಟನೆ ಕೊಪ್ಪ ತಾಲೂಕಿನ ಹಿರೇಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿವಪುರ ಗ್ರಾಮದಲ್ಲಿ ನಡೆದಿದೆ.

    ರೈತ ನಾಗೇಶ್ ಅವರಿಗೆ ಸೇರಿದ ಎರಡು ಹಸುಗಳು ಸಜೀವ ದಹನವಾಗಿದೆ. ಶನಿವಾರ ಬೆಳಗಿನ ಜಾವ ಈ ದುರ್ಘಟನೆ ಸಂಭವಿದೆ. ಶುಕ್ರವಾರ ರಾತ್ರಿ ಶಿವಪುರ ಗ್ರಾಮದ ನಾಗೇಶ್ ಮನೆಯಲ್ಲಿ ಯಾರೂ ಇರಲಿಲ್ಲ. ಮನೆ ಹಿಂಭಾಗದ ಕೊಟ್ಟಿಗೆಯಲ್ಲಿ ಎರಡು ರಾಸುಗಳನ್ನು ಕಟ್ಟಿದ್ದರು. ಈ ವೇಳೆ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ತಗುಲಿದೆ.

    ರಾಸುಗಳನ್ನು ಹಗ್ಗದಿಂದ ಕಟ್ಟಿ ಹಾಕಿದ್ದರಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ. ಪರಿಣಾಮ ಬೆಂಕಿಯ ಕೆನ್ನಾಲಿಗೆಗೆ ಸಿಕ್ಕಿ ಉಸಿರು ಬಿಟ್ಟಿವೆ. ಮನೆ ಮೇಲೆ ಹಾಗೂ ಸುತ್ತಮುತ್ತ ದಟ್ಟ ಹೊಗೆ ಆವರಿಸಿದ್ದರಿಂದ ಅಕ್ಕಪಕ್ಕದ ಮನೆಯವರು ಸ್ಥಳಕ್ಕೆ ಧಾವಿಸಿದಾಗ ಬೆಂಕಿ ತಗುಲಿರುವುದು ತಿಳಿದುಬಂದಿದೆ. ಸ್ಥಳೀಯರು ರಾಸುಗಳನ್ನ ರಕ್ಷಿಸಲು ಮುಂದಾದರೂ ಯಾವುದೇ ಪ್ರಯೋಜನವಾಗಿಲ್ಲ. ಇದನ್ನೂ ಓದಿ: 1991ರ ಕಾಯಿದೆ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸುಪ್ರೀಂಕೋರ್ಟ್‍ಗೆ ಮತ್ತೊಂದು ಅರ್ಜ

    ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಆ ವೇಳೆಗಾಗಲೇ ರಾಸುಗಳು ಬೆಂಕಿಯಲ್ಲಿ ಬೆಂದು ಉಸಿರು ಚೆಲ್ಲಿದ್ದವು. ಸ್ಥಳಕ್ಕೆ ಗ್ರಾಮ ಪಂಚಾಯಿತಿ ಸದಸ್ಯ ಅಭಿಷೇಕ್, ಕೊಪ್ಪ ಪಿ.ಎಸ್.ಐ.ಶ್ರೀನಾಥ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.