Tag: farmer’s association

  • ರಾಮನಗರ ಹೆಸರು ಬದಲಾವಣೆಗೆ ಸಂಘಟನೆಗಳ ವಿರೋಧ – ರಾಜ್ಯಪಾಲರಿಗೆ ಮನವಿ ಸಲ್ಲಿಸಲು ನಿರ್ಧಾರ

    ರಾಮನಗರ ಹೆಸರು ಬದಲಾವಣೆಗೆ ಸಂಘಟನೆಗಳ ವಿರೋಧ – ರಾಜ್ಯಪಾಲರಿಗೆ ಮನವಿ ಸಲ್ಲಿಸಲು ನಿರ್ಧಾರ

    ರಾಮನಗರ: ಬೆಂಗಳೂರು ದಕ್ಷಿಣ (Bengaluru South) ಜಿಲ್ಲೆಯಾಗಿ ರಾಮನಗರ (Ramanagara) ಜಿಲ್ಲೆಗೆ ಮರುನಾಮಕರಣ ಮಾಡಿದ ವಿಚಾರಕ್ಕೆ ಕನ್ನಡಪರ (Pro Kannada Organizations) ಹಾಗೂ ರೈತಸಂಘಟನೆಗಳು (Farmer’s Association ವಿರೋಧ ವ್ಯಕ್ತಪಡಿಸಿವೆ.

    ಸೋಮವಾರ ಹಲವು ಸಂಘಟನೆಗಳ ಮುಖಂಡರು ಸಭೆ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲು ನಿರ್ಧಾರ ಮಾಡಿದ್ದಾರೆ. ಮರುನಾಮಕರಣ ಅಂಗೀಕಾರ ಮಾಡದಂತೆ ಮನವಿ ಸಲ್ಲಿಸಿ ಬಳಿಕ ಬೃಹತ್ ಹೋರಾಟ ನಡೆಸಲು ತೀರ್ಮಾನ ಮಾಡಲಾಗಿದೆ ಎಂದು ಮುಖಂಡರು ತಿಳಿಸಿದ್ದಾರೆ. ಇದನ್ನೂ ಓದಿ: Delhi Coaching Centre Flooded: ಐಎಎಸ್ ಆಕಾಂಕ್ಷಿಗಳ ಸಾವು ಪ್ರಕರಣ – ಲೋಕಸಭೆಯಲ್ಲಿ ಚರ್ಚೆ

    ಚನ್ನಪಟ್ಟಣ ಉಪಚುನಾವಣೆ ದೃಷ್ಟಿಯಿಂದ ಹೆಸರು ಬದಲಾವಣೆ ಮಾಡಲಾಗುತ್ತಿದೆ. ರಾಜಕೀಯ ದುರುದ್ದೇಶಕ್ಕೆ ಡಿಸಿಎಂ ಡಿಕೆಶಿ ಮರುನಾಮಕರಣ ಮಾಡುತ್ತಿದ್ದಾರೆ. ಹೆಸರು ಬದಲಾವಣೆ ಬಗ್ಗೆ ಯಾವುದೇ ಸಂಘಟನೆಗಳ ಅಭಿಪ್ರಾಯ ಪಡೆದಿಲ್ಲ. ಕೇವಲ ಡಿಸಿಎಂ ಹಾಗೂ ಹಿಂಬಾಲಕರ ಆಸ್ತಿ ಮೌಲ್ಯ ಹೆಚ್ಚಿಸಲು ಈ ನಾಟಕ ಆಡುತ್ತಿದ್ದಾರೆ ಎಂದು ಸಂಘಟನೆಯ ಪ್ರಮುಖರು ಕಿಡಿಕಾರಿದ್ದಾರೆ. ಇದನ್ನೂ ಓದಿ: Valmiki Corporation Scam | ಹೈದರಾಬಾದ್‌ನಲ್ಲೇ ಬೀಡುಬಿಟ್ಟ ಎಸ್‌ಐಟಿ – ಒಟ್ಟು 16 ಕೆಜಿ ಚಿನ್ನ ಜಪ್ತಿ

    ಹೆಸರು ಬದಲಾವಣೆಯಿಂದ ರೈತರಿಗೆ ಯಾವುದೇ ಅನುಕೂಲ ಆಗಲ್ಲ. ರೈತರ ಜಮೀನುಗಳನ್ನು ಕಾರ್ಪೋರೆಟ್ ಸಂಸ್ಥೆಗಳಿಗೆ ಮಾರಾಟ ಮಾಡಲು ಈ ರೀತಿ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ರಾಮನಗರ ಹೆಸರು ಬದಲಾವಣೆ ಮಾಡಲು ಬಿಡಲ್ಲ. ಮುಂದಿನ ದಿನಗಳಲ್ಲಿ ಬೃಹತ್ ಹೋರಾಟ ಮಾಡುತ್ತೇವೆ ಎಂದು ಸರ್ಕಾರಕ್ಕೆ ಕನ್ನಡಪರ ಹಾಗೂ ರೈತ ಸಂಘಟನೆಗಳು ಎಚ್ಚರಿಕೆ ನೀಡಿವೆ. ಇದನ್ನೂ ಓದಿ: ನಮ್ಮದು ಯಾರಿಗೂ ಕೆಟ್ಟದ್ದು ಬಯಸುವ ವಂಶವಲ್ಲ: ಡಿ.ಕೆ ಸುರೇಶ್

  • ಮಂಡ್ಯದ ಬೇಬಿ ಬೆಟ್ಟದಲ್ಲಿ ಇಂದಿನಿಂದ 4 ದಿನ ಟ್ರಯಲ್ ಬ್ಲಾಸ್ಟ್ – ಕೆಆರ್‌ಎಸ್‌ಗೆ ಬಂದ ತಜ್ಞರ ತಂಡ

    ಮಂಡ್ಯದ ಬೇಬಿ ಬೆಟ್ಟದಲ್ಲಿ ಇಂದಿನಿಂದ 4 ದಿನ ಟ್ರಯಲ್ ಬ್ಲಾಸ್ಟ್ – ಕೆಆರ್‌ಎಸ್‌ಗೆ ಬಂದ ತಜ್ಞರ ತಂಡ

    – ರೈತ ಸಂಘ, ಬಿಜೆಪಿಯಿಂದ ಗೋ ಬ್ಯಾಕ್ ಚಳುವಳಿ

    ಮಂಡ್ಯ: ಇಲ್ಲಿನ ಬೇಬಿ ಬೆಟ್ಟದಲ್ಲಿ (Baby Betta) ಗಣಿಗಾರಿಕೆ (Mining) ನಡೆಯಬೇಕೋ ಬೇಡವೋ ಎಂದು ತೀರ್ಮಾನ ಮಾಡುವ ಉದ್ದೇಶದಿಂದ ಹೈಕೋರ್ಟ್ ಟ್ರಯಲ್ ಬ್ಲಾಸ್ಟ್ (Trail blast) ನಡೆಸಲು ಆದೇಶ ನೀಡಿದೆ. ಅದರಂತೆ ಇಂದಿನಿಂದ 4 ದಿನಗಳ ಟ್ರಯಲ್ ಬ್ಲಾಸ್ಟ್‌ಗೆ ಮುಹೂರ್ತ ಫಿಕ್ಸ್ ಆಗಿದೆ. ಈ ನಡುವೆ ಇದಕ್ಕೆ ತೀವ್ರ ವಿರೋಧ ಸಹ ವ್ಯಕ್ತವಾಗುತ್ತಿದೆ.

    ಮಂಡ್ಯ (Mandya) ಜಿಲ್ಲೆಯ ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದಲ್ಲಿ ನಡೆಯುತ್ತಿದ್ದ ಗಣಿಗಾರಿಕೆಯಿಂದ ಹಳೇ ಮೈಸೂರು ಭಾಗದ ಜೀವನಾಡಿಯಾಗಿರುವ ಕೆಆರ್‌ಎಸ್ (KRS) ಅಣೆಕಟ್ಟೆಗೆ ಹಾನಿ ಆಗುತ್ತದೆ ಎಂದು ಹಲವು ಹೋರಾಟಗಳು ನಡೆದವು. ರೈತ ಸಂಘಟನೆಗಳು, ಸಂಸದೆ ಸುಮಲತಾ ಅಂಬರೀಶ್, ಸಾಮಾಜಿಕ ಕಾರ್ಯಕರ್ತರ ಹೋರಾಟದ ಪ್ರತಿಫಲವಾಗಿ ಹೈಕೋರ್ಟ್ ಬೇಬಿ ಬೆಟ್ಟದಲ್ಲಿ ಗಣಿಗಾರಿಕೆಗೆ ನಿರ್ಬಂಧ ಹೇರಿತ್ತು. ಇದೀಗ ಇದೇ ಹೈಕೋರ್ಟ್ ಬೇಬಿ ಬೆಟ್ಟದ ಗಣಿಗಾರಿಕೆಯಿಂದ ಕೆಆರ್‌ಎಸ್ ಅಣೆಕಟ್ಟೆಗೆ ಸಮಸ್ಯೆ ಆಗುತ್ತಾ ಎಂದು ತಿಳಿಯಲು ಟ್ರಯಲ್ ಬ್ಲಾಸ್ಟ್ ಮಾಡಿಸಲು ಸರ್ಕಾರಕ್ಕೆ ಆದೇಶ ನೀಡಿದೆ. ಇದನ್ನೂ ಓದಿ: ಸರ್‌, ನಾನು ನೂರಾರು ಕೋಟಿಗೆ ಬಾಳ್ತೀನಿ: ಪಾಕ್‌ ಪರ ಘೋಷಣೆ ಕೂಗಿದ್ದ ನಾಶಿಪುಡಿ ಯಾರು?

    ಸರ್ಕಾರವೂ ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸಲು ಇಂದಿನಿಂದ 4 ದಿನ ಮುಹೂರ್ತ ಫಿಕ್ಸ್ ಮಾಡಿದೆ. ಈ ಸಂಬಂಧ ಹೊರ ರಾಜ್ಯದಿಂದ ತಜ್ಞರ ತಂಡ ಸೋಮವಾರ ರಾತ್ರಿಯೇ ಕೆಆರ್‌ಎಸ್‌ನ ರಾಯಲ್ ಆರ್ಕಿಡ್ ಹೊಟೇಲ್‌ನಲ್ಲಿ ವಾಸ್ತವ್ಯ ಹೂಡಿದೆ. ಇಂದು ಬೆಳಗ್ಗೆ ಕೆಆರ್‌ಎಸ್‌ನ ಕಾವೇರಿ ಸಭಾಂಗಣದಲ್ಲಿ ತಜ್ಞರು ಕಾವೇರಿ ನೀರಾವರಿ ನಿಗಮ, ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಸೇರಿದಂತೆ ಇತರ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಬಳಿಕ ಬೇಬಿ ಬೆಟ್ಟಕ್ಕೂ ತಜ್ಞರು ಭೇಟಿ ನೀಡಲಿದ್ದಾರೆ. ಬುಧವಾರ ಹಾಗೂ ಗುರುವಾರ ಬೇಬಿ ಬೆಟ್ಟದ ಆಯ್ದ ಸ್ಥಳದಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸಲಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಿಗಳು ಮೂರು ದಿನ ಪೊಲೀಸ್ ಕಸ್ಟಡಿಗೆ

    ಒಂದೆಡೆ ಹೈಕೋರ್ಟ್ ಆದೇಶದಂತೆ ಸರ್ಕಾರ ಇಂದಿನಿಂದ ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ಮಾಡಿಸುತ್ತಿದ್ದರೆ, ಇನ್ನೊಂದೆಡೆ ರೈತ ಸಂಘ (Farmers Association) ಹಾಗೂ ಬಿಜೆಪಿ (BJP) ತೀವ್ರ ವಿರೋಧ ವ್ಯಕ್ತಪಡಿಸುತ್ತಿದೆ. ಸರ್ಕಾರ ಗಣಿ ಮಾಲೀಕರ ಲಾಬಿಗೆ ಮಣಿದು ಟ್ರಯಲ್ ಬ್ಲಾಸ್ಟ್ ಮಾಡಿಸಲು ಮುಂದಾಗುತ್ತಿದೆ. ಟ್ರಯಲ್ ಬ್ಲಾಸ್ಟ್ ಮಾಡುವಾಗ ಕಡಿಮೆ ಸ್ಫೋಟ ಬಳಸಿ ಬ್ಲಾಸ್ಟ್ ಮಾಡಿ ಕೆಆರ್‌ಎಸ್‌ಗೆ ತೊಂದರೆ ಆಗಲ್ಲ ಎಂದು ವರದಿ ನೀಡುತ್ತಾರೆ. ಬಳಿಕ ಬೆಟ್ಟದಲ್ಲಿ ಮತ್ತೆ ಗಣಿಗಾರಿಕೆ ಆರಂಭವಾಗಿ ಅಪಾರ ಪ್ರಮಾಣದ ಸ್ಫೋಟಕ ಬಳಸಿ ಬ್ಲಾಸ್ಟ್ ಮಾಡುರತ್ತಾರೆ. ಇದರಿಂದ ಕೆಆರ್‌ಎಸ್‌ಗೆ ಹಾನಿಯಾಗುತ್ತದೆ. ಹೀಗಾಗಿ ಟ್ರಯಲ್ ಬ್ಲಾಸ್ಟ್ ಮಾಡಬಾರದು. ಈಗ ಇರುವಂತೆಯೇ ಶಾಶ್ವತವಾಗಿ ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ನಿಲ್ಲಿಸಬೇಕೆಂದು ರೈತ ಸಂಘ ಹಾಗೂ ಬಿಜೆಪಿ ಆಗ್ರಹಿಸಿದೆ. ಇದನ್ನೂ ಓದಿ: ಶಿಲ್ಪಿ ಅರುಣ್ ಯೋಗಿರಾಜ್‌ಗೆ ಪ್ರತಿಷ್ಠಿತ ‘ಅಭಿನವ ಅಮರಶಿಲ್ಪಿ’ ಪ್ರಶಸ್ತಿ ಪ್ರದಾನ

    ಟ್ರಯಲ್ ಬ್ಲಾಸ್ಟ್ ವಿರೋಧಿಸಿ ರೈತರು ಗೋ ಬ್ಯಾಕ್ ಚಳುವಳಿ ನಡೆಸಲಿದ್ದಾರೆ. ಕೆಆರ್‌ಎಸ್ ಬೃಂದಾವನದ ಮುಖ್ಯ ದ್ವಾರದ ರಸ್ತೆಯಲ್ಲಿ ಈ ಚಳುವಳಿ ನಡೆಯಲಿದೆ. ರೈತಸಂಘ ಹಾಗೂ ಬೇಬಿ ಬೆಟ್ಟ ಉಳಿಸಿ ಹೋರಾಟ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದ್ದು, ಟ್ರಯಲ್ ಬ್ಲಾಸ್ಟ್ ನಡೆಸದಂತೆ ಬೆಳಿಗ್ಗೆ 10 ಗಂಟೆಗೆ ಚಳುವಳಿ ಆರಂಭವಾಗಲಿದೆ. ಬಿಜೆಪಿಯಿಂದಲೂ ಪ್ರತ್ಯೇಕ ಪ್ರತಿಭಟನೆಗೆ ನಿರ್ಧಾರ ಮಾಡಿದ್ದು, ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಟ್ರಯಲ್ ಬ್ಲಾಸ್ಟ್‌ಗೆ ಆಗಮಿಸಿರುವ ತಜ್ಞರು ವಾಪಸ್ ತೆರಳುವಂತೆ ಗೋ ಬ್ಯಾಕ್ ಚಳುವಳಿ ನಡೆಯಲಿದೆ. ಇದನ್ನೂ ಓದಿ: ಕೇಂದ್ರದಲ್ಲಿ ಕಾಂಗ್ರೆಸ್ ಬಂದ್ರೆ ಮೋದಿ ನರ ಕಟ್- ತಲ್ವಾರ್ ಹಿಡಿದು ಅವಾಜ್ ಹಾಕಿದವನಿಗಾಗಿ ಶೋಧ

    ಗಣಿ ಮಾಲೀಕರು ನಡೆಸುವ ಬ್ಲಾಸ್ಟ್‌ಗೂ ತಜ್ಞರು ನಡೆಸುವ ಬ್ಲಾಸ್ಟ್‌ಗೂ ತುಂಬಾ ವ್ಯತ್ಯಾಸ ಇದೆ. ಗಣಿಗಾರಿಕೆಗೆ ಅಪಾರ ಪ್ರಮಾಣದ ಸ್ಫೋಟಕ ಬಳಕೆ ಮಾಡುತ್ತಾರೆ. ಆದರೆ ತಜ್ಞರು ಟ್ರಯಲ್ ಬ್ಲಾಸ್ಟ್‌ನಲ್ಲಿ ಅಲ್ಪ ಪ್ರಮಾಣದ ಸ್ಫೋಟಕ ಬಳಸುತ್ತಾರೆ. ಟ್ರಯಲ್ ಬ್ಲಾಸ್ಟ್‌ನಲ್ಲಿ ಕೆಆರ್‌ಎಸ್ ಡ್ಯಾಂಗೆ ಅಪಾಯ ಇಲ್ಲ ಎಂಬ ವರದಿ ಬರುವ ಸಾಧ್ಯತೆ ಇದೆ. ಯಾವುದೇ ಕಾರಣಕ್ಕೂ ಟ್ರಯಲ್ ಬ್ಲಾಸ್ಟ್ ಮಾಡಬಾರದು ಎಂದು ಪ್ರತಿಭಟನೆ ನಡೆಯಲಿದೆ. ಇದನ್ನೂ ಓದಿ: ಬಿಜೆಪಿಯಲ್ಲಿ ಎಲ್ಲರೂ ಜೇಬಿನಲ್ಲಿ ಟಿಕೆಟ್‌ ಇಟ್ಕೊಂಡು ಓಡಾಡ್ತಿದ್ದಾರೆ: ಅನಂತ್‌ ಕುಮಾರ್‌ ಹೆಗಡೆ

  • ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಫೆ.17ರಂದು ರೈತರಿಂದ ʻಬೆಂಗಳೂರು ಚಲೋʼ

    ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಫೆ.17ರಂದು ರೈತರಿಂದ ʻಬೆಂಗಳೂರು ಚಲೋʼ

    ಬೆಳಗಾವಿ: ಬೆಂಬಲ ಬೆಲೆ ಖಾತ್ರಿಪಡಿಸುವ ಕಾನೂನು ಜಾರಿ ಸೇರಿದಂತೆ ವಿವಿಧ ಬೇಡಿಕೆಗೆಗಳ ಈಡೇರಿಕೆಗೆ ಆಗ್ರಹಿಸಿ ವಿವಿಧ ರಾಜ್ಯಗಳ ರೈತರು ʻದೆಹಲಿ ಚಲೋʼ ಪ್ರತಿಭಟನೆ (Dehli Chalo) ಆರಂಭಿಸಿದ್ದಾರೆ. ಈ ಬೆನ್ನಲ್ಲೇ ರಾಜ್ಯದಲ್ಲಿಯೂ ರೈತರು (Farmers) ತಮ್ಮ ಬೇಡಿಕೆಗಳನ್ನು ಒತ್ತಾಯಿಸಿ ಬೃಹತ್‌ ಸಮಾವೇಶ ಹಮ್ಮಿಕೊಂಡಿದ್ದಾರೆ.

    ಕರ್ನಾಟಕ ರಾಜ್ಯ ರೈತ ಸಂಘಗಳ ಒಕ್ಕೂಟ ಆಶ್ರಯದಲ್ಲಿ (Farmers Association) ವಿವಿಧ ಬೇಡಿಕೆಗೆ ಆಗ್ರಹಿಸಿ ಫೆ.17ರಂದು ʻಬೆಂಗಳೂರು ಚಲೋʼ (Bengaluru Chalo) ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಮಾವೇಶಕ್ಕೆ ಬರುವ ರೈತರಿಗೆ ಆಯಾ ಜಿಲ್ಲೆಗಳಿಂದ ಉಚಿತ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘಗಳ ಒಕ್ಕೂಟ ಅಧ್ಯಕ್ಷ ಬೀರಪ್ಪ ದೇಶನೂರ ತಿಳಿಸಿದ್ದಾರೆ. ಇದನ್ನೂ ಓದಿ: ಅಜ್ಜನ ಕನಸು ನೆರವೇರಿಸಲು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಲಾಲ್ ಬಹದ್ದೂರ್ ಶಾಸ್ತ್ರಿ ಮೊಮ್ಮೊಗ

    ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಫೆ.17ರಂದು ರೈತರು ತಮ್ಮ ಬೇಡಿಕೆಗಳನ್ನು ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಪತ್ರ ಸಲ್ಲಿಸಲಿದ್ದಾರೆ. ಈ ಬೃಹತ್‌ ಸಮಾವೇಶದಲ್ಲಿ ರಾಜ್ಯಾದ್ಯಂತ ಸುಮಾರು 15 ಸಂಘಟನೆಗಳ ರೈತ ಮುಖಂಡರು, ರೈತ ಮಹಿಳೆಯರು, ವಿವಿಧ ಸಂಘಟನೆಯ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.

    ಫೆ.16ರಂದು ಸಂಜೆ ಪ್ರತಿಯೊಬ್ಬ ರೈತರೂ ತಮ್ಮ ಜಿಲ್ಲೆಯ ಹಾಗೂ ತಾಲೂಕು, ಪಟ್ಟಣ, ಗ್ರಾಮಗಳಿಂದ ಬೆಂಗಳೂರಿಗೆ ಬರಬೇಕು ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ದೆಹಲಿ ಚಲೋ ಪ್ರತಿಭಟನೆ ನಿಗ್ರಹಕ್ಕೆ ಯತ್ನ – ಪೊಲೀಸರ ವರ್ತನೆ ಖಂಡಿಸಿ ಶುಕ್ರವಾರ ದೇಶಾದ್ಯಂತ ರಸ್ತೆ ತಡೆ

  • ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರ – ಸುಪ್ರೀಂ ಕೋರ್ಟ್‍ಗೆ ರೈತ ಸಂಘ ಅರ್ಜಿ

    ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರ – ಸುಪ್ರೀಂ ಕೋರ್ಟ್‍ಗೆ ರೈತ ಸಂಘ ಅರ್ಜಿ

    ಮಂಡ್ಯ: ರೈತರ ಸಂಕಷ್ಟದ ನಡುವೆಯೂ ತಮಿಳುನಾಡಿಗೆ ನೀರು ಬಿಡುಗಡೆ ಮಾಡಿರುವ ಹಿನ್ನೆಲೆ ಕೆಆರ್‌ಎಸ್‌ನಲ್ಲಿ (KRS) ಅಹೋರಾತ್ರಿ ಧರಣಿ ನಡೆಸುತ್ತಿದ್ದ ರೈತ ಸಂಘ ಸುಪ್ರೀಂ ಕೋರ್ಟ್‍ಗೆ (Supreme Court) ಅರ್ಜಿ ಸಲ್ಲಿಸಲು ಮುಂದಾಗಿದೆ. ಕಾವೇರಿ ನೀರಿಗಾಗಿ ಕಾನೂನು ಹೋರಾಟಕ್ಕೆ ಮುಂದಾಗಿರುವ ರೈತ ಸಂಘದ (Farmers Association) ಪರವಾಗಿ ಅರ್ಜಿ ಸಲ್ಲಿಸಲು ದೆಹಲಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ (Darshan Puttannaiah) ತೆರಳಿದ್ದಾರೆ.

    ಹಿರಿಯ ವಕೀಲ ರವಿವರ್ಮ ಅವರ ಮೂಲಕ ಸುಪ್ರೀಂಗೆ ಇಂದು ಅವರು ಅರ್ಜಿ ಸಲ್ಲಿಸಲಿದ್ದಾರೆ. ಕೋರ್ಟ್‍ಗೆ ಕಾವೇರಿ ಕೊಳ್ಳದ ಸಂಕಷ್ಟದ ಪರಿಸ್ಥಿತಿ ಮನವರಿಕೆ ಮಾಡಲಾಗುತ್ತದೆ. ಪ್ರಸಕ್ತ ಜಲಾಶಯದ ನೀರಿನ ಮಟ್ಟ, ರೈತರ ಬೆಳೆಗೆ ನೀರಿಲ್ಲದಿರುವ ವಸ್ತುಸ್ಥಿತಿ ಹಾಗೂ ಕುಡಿಯಲು ಅಗತ್ಯ ಇರುವ ನೀರಿನ ಬಗ್ಗೆ ಅಂಕಿ ಅಂಶಗಳನ್ನು ಅರ್ಜಿಯಲ್ಲಿ ಉಲ್ಲೇಖ ಮಾಡಲಾಗಿದೆ. ಈ ಬಗ್ಗೆ ಕೋರ್ಟ್‍ನಲ್ಲಿ ವಾದ ಮಂಡನೆಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಇದನ್ನೂ ಓದಿ: KRSನಿಂದ 7ನೇ ದಿನವೂ ತಮಿಳುನಾಡಿಗೆ ನೀರು – ಮಂಡ್ಯದಲ್ಲಿ ಮುಂದುವರಿದ ಪ್ರತಿಭಟನೆಗಳು

    ಅರ್ಜಿ ಸಲ್ಲಿಕೆಗಾಗಿ ಕಳೆದ 5 ದಿನಗಳಿಂದಲೇ ಪೂರ್ವ ತಯಾರಿ ಮಾಡಲಾಗಿತ್ತು. ಈ ವಿಚಾರವಾಗಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ವಕೀಲರೊಂದಿಗೆ ಖುದ್ದು ದೆಹಲಿಗೆ ತೆರಳಿದ್ದಾರೆ. ರಾಜ್ಯ ಸರ್ಕಾರಕ್ಕೆ ಒತ್ತಡ ಹಾಕಲು ಅಹೋರಾತ್ರಿ ಧರಣಿ ನಡೆಸುವ ಜೊತೆಗೆ ಕಾನೂನು ಹೋರಾಟವನ್ನು ಈ ಮೂಲಕ ಆರಂಭಿಸಿದ್ದಾರೆ. ಕಾವೇರಿ ನೀರಿಗಾಗಿ ಇಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಲಿರುವ ರಾಜ್ಯ ರೈತ ಸಂಘ ಅರ್ಜಿ ಸಲ್ಲಿಕೆಯಾದರೆ ಬುಧವಾರವೇ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುವ ಸಾಧ್ಯತೆ ಇದೆ. ಇದನ್ನೂ ಓದಿ: ಹಾಲಿನ ಡೈರಿ ರಾಜಕೀಯ – ಪಶು ಸಂಗೋಪನಾ ಸಚಿವರ ಸ್ವಕ್ಷೇತ್ರದಲ್ಲೇ ಹಾಲು ಚರಂಡಿ ಪಾಲು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಉತ್ತರ ಭಾರತದಲ್ಲಿ ಪ್ರವಾಹ- ನಷ್ಟದ ಪರಿಹಾರಕ್ಕೆ ಆಗ್ರಹಿಸಿ ರೈತ ಸಂಘಟನೆಗಳ ಹೋರಾಟ

    ಉತ್ತರ ಭಾರತದಲ್ಲಿ ಪ್ರವಾಹ- ನಷ್ಟದ ಪರಿಹಾರಕ್ಕೆ ಆಗ್ರಹಿಸಿ ರೈತ ಸಂಘಟನೆಗಳ ಹೋರಾಟ

    ನವದೆಹಲಿ: ಪ್ರವಾಹದಿಂದ ಉಂಟಾದ ನಷ್ಟಕ್ಕೆ ಪರಿಹಾರ ನೀಡುವಂತೆ ಆಗ್ರಹಿಸಿ ಪಂಜಾಬ್ ನಲ್ಲಿ ರೈತ ಸಂಘಟನೆಗಳು ಪ್ರತಿಭಟನೆ ಆರಂಭಿಸಿವೆ. ಚಂಡೀಗಢದ ಸೆಕ್ಟರ್ 17 ಪರೇಡ್ ಮೈದಾನದಲ್ಲಿ ರೈತರು ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ್ದು, ಗಡಿಗಳಲ್ಲಿ ಭದ್ರತೆ ಹೆಚ್ಚಿಸಲಾಗುತ್ತಿದೆ.

    ಪಂಜಾಬ್ ಸೇರಿದಂತೆ ಸುತ್ತಮುತ್ತಲಿನ ರಾಜ್ಯಗಳಿಂದ ಚಂಡೀಗಢಕ್ಕೆ ತೆರಳುತ್ತಿರುವ ಹಿನ್ನೆಲೆ ಸೋಮವಾರ ಪಂಜಾಬ್‍ನ ವಿವಿಧ ಭಾಗಗಳಲ್ಲಿ ತಮ್ಮ ಹಲವಾರು ಮುಖಂಡರನ್ನು, ಕೆಲವು ರೈತರನ್ನು ಹರಿಯಾಣದ ಅಂಬಾಲಾ ಮತ್ತು ಕುರುಕ್ಷೇತ್ರದಲ್ಲಿ ಬಂಧಿಸಲಾಯಿತು ಎಂದು ರೈತರು ಹೇಳಿಕೊಂಡಿದ್ದಾರೆ.

    ಚಂಡೀಗಢದಲ್ಲಿ, ರೈತರು ನಗರಕ್ಕೆ ಪ್ರವೇಶಿಸುವುದನ್ನು ತಡೆಯಲು ಎಲ್ಲಾ ಪ್ರವೇಶ ಮತ್ತು ನಿರ್ಗಮನ ಸ್ಥಳಗಳಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ರೈತ ಮುಖಂಡರನ್ನು ಬಂಧನಕ್ಕೆ ಪ್ರಯತ್ನಿಸಿದಾಗ ರೈತರು ಮತ್ತು ಪೊಲೀಸರೊಂದಿಗೆ ನಡೆದ ಘರ್ಷಣೆಯಲ್ಲಿ ಸಂಗ್ರೂರ್ ಜಿಲ್ಲೆಯಲ್ಲಿ ಟ್ರಾಕ್ಟರ್-ಟ್ರಾಲಿಯಿಂದ ಒಬ್ಬ ರೈತ ಸಾವನ್ನಪ್ಪಿದ್ದಾನೆ ಮತ್ತು ಕನಿಷ್ಠ ಐವರು ಪೊಲೀಸರು ಗಾಯಗೊಂಡಿದ್ದಾರೆ.

    ಪಂಜಾಬ್ ಸೇರಿದಂತೆ ಇಡೀ ಉತ್ತರ ಭಾರತದಲ್ಲಿ ಪ್ರವಾಹದಿಂದ (North India Flood) ಉಂಟಾಗಿರುವ ಹಾನಿಗೆ ಕೇಂದ್ರದಿಂದ 50,000 ಕೋಟಿ ರೂಪಾಯಿಗಳ ವಿಶೇಷ ಪ್ಯಾಕೇಜ್ ಅನ್ನು ರೈತರು (Farmers Protest) ಒತ್ತಾಯಿಸುತ್ತಿದ್ದಾರೆ. ಬೆಳೆ ನಷ್ಟಕ್ಕೆ ಎಕರೆಗೆ 50 ಸಾವಿರ, ಹಾನಿಗೀಡಾದ ಮನೆಗೆ 5 ಲಕ್ಷ ಹಾಗೂ ಪ್ರವಾಹದಲ್ಲಿ ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‍ನಿಂದ್ಲೇ 50 ಜನ ಶಾಸಕರು ಬಿಜೆಪಿಗೆ ಬರ್ತಾರೆ: ಮಾಜಿ ಶಾಸಕ ಅಮೃತ ದೇಸಾಯಿ

    ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿ, ಭಾರತಿ ಕಿಸಾನ್ ಯೂನಿಯನ್ (ಕಾರಂತಿ ಕರಿ), ಬಿಕೆಯು (ಏಕ್ತಾ ಆಜಾದ್), ಆಜಾದ್ ಕಿಸಾನ್ ಸಮಿತಿ, ದೋಬಾ, ಬಿಕೆಯು (ಬೆಹ್ರಾಮ್‍ಕೆ) ಮತ್ತು ಭೂಮಿ ಬಚಾವೋ ಮೋಹಿಮ್ ಸೇರಿದಂತೆ 16 ಕೃಷಿ ಸಂಸ್ಥೆಗಳು ಪ್ರತಿಭಟನೆಗೆ ಕರೆ ನೀಡಿವೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರೈತ ಸಂಘದಿಂದ ಕೊಡಗು ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ

    ರೈತ ಸಂಘದಿಂದ ಕೊಡಗು ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ

    ಮಡಿಕೇರಿ: ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ವಿವಿಧ ಸರ್ಕಾರಗಳು, ರಾಜಕೀಯ ಪಕ್ಷಗಳು ಕೊಡಗಿನ ವಿಚಾರದಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿವೆ. ಹೀಗಾಗಿ ಮುಂದೆ ಕೊಡಗಿನ ಜನತೆ ಜಾತಿ, ಧರ್ಮ, ಮತ ಬೇಧ ಮರೆತು ರಾಜಕೀಯವಾಗಿ ಕೊಡಗು ಪ್ರತ್ಯೇಕ ರಾಜ್ಯಕ್ಕೆ ಹೋರಾಟ ನಡೆಸಬೇಕು ಎಂದು ಕೊಡಗು ಜಿಲ್ಲಾಧ್ಯಕ್ಷ ಕಾಡ್ಯಮಾಡ ಮನುಸೋಮಯ್ಯ ಹೇಳಿದರು.

    ಕೊಡಗು ಜಿಲ್ಲೆಯ ಪೋನ್ನಂಪೇಟೆ ತಾಲೂಕಿನ ಗೋಣಿಕೊಪ್ಪಲುವಿನ ಪರಿಮಳ ಮಂಗಳ ವಿಹಾರದಲ್ಲಿ ಆಯೋಜನೆ ಗೊಂಡಿದ್ದ ರೈತ ಸಂಘದ ಮಹಾಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೊಡಗು ಜಿಲ್ಲೆ ಅಭಿವೃದ್ಧಿ ಕಾಣಬೇಕಾದರೆ ಕೊಡಗು ಪ್ರತ್ಯೇಕ ರಾಜ್ಯವಾಗಬೇಕು ಇದರಿಂದ ನಮ್ಮ ಜಿಲ್ಲೆಯ ಏಳಿಗೆ ಸಾಧ್ಯ ಎಂದರು. ಇದನ್ನೂ ಓದಿ: ಚಂಡಮಾರುತ ಎಫೆಕ್ಟ್- ಸಮುದ್ರದಲ್ಲಿ ತೇಲಿ ಬಂತು ಚಿನ್ನದ ರಥ!

    ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ರೈತ ಸಂಘದ ಸದಸ್ಯರು ಇದನ್ನು ಒಗ್ಗಟ್ಟಾಗಿ ಒಪ್ಪಿಗೆ ಸೂಚಿಸಿ ಮುಂದೆ ಪ್ರತ್ಯೇಕ ರಾಜ್ಯದ ಹೋರಾಟ ಕೈಗೆತ್ತಿಕೊಳ್ಳವುದೇ ಲೇಸು ಎಂದು ಸಹಮತ ವ್ಯಕ್ತಪಡಿಸಿದರು. ಚೆಸ್ಕಾಂ ಇಲಾಖೆಯು ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡದೇ ಗ್ರಾಹಕರಿಂದ ವಿದ್ಯುತ್ ಬಿಲ್ ಪಡೆಯುತ್ತಿರುವ ಬಗ್ಗೆ ತೀವ್ರ ಚರ್ಚೆ ನಡೆಯಿತು. ಇದೇ ವೇಳೆ ಹಲವು ನಿರ್ಣಯಗಳನ್ನು ಕೈಗೊಳ್ಳಲಾಯಿತು. ಸಭೆಯಲ್ಲಿ ರೈತ ಸಂಘದ ಜಿಲ್ಲಾ ಪ್ರಕಾರ್ಯದರ್ಶಿ ಚೆಟ್ರುಮಾಡ ಸುಜಯ್ ಬೋಪಯ್ಯ ವಾರ್ಷಿಕ ವರದಿ ಮಂಡಿಸಿದರು. ಇದನ್ನೂ ಓದಿ: ಎರಡೇ ದಿನದಲ್ಲಿ ಸಿಕ್ಸ್ ಪ್ಯಾಕ್ – ವೀಡಿಯೋ ನೋಡಿ ಶಾಕ್ ಆದ ನೆಟ್ಟಿಗರು

    ಕಾನೂನು ಸಲಹೆಗಾರರಾದ ಹೇಮಚಂದ್ರ ಪ್ರಾಸ್ತಾವಿಕ ಮಾತನಾಡಿ, ರೈತ ಸಂಘವು ನಡೆಸಿದ ಹೋರಾಟದ ಮಾಹಿತಿಗಳನ್ನು ಸಭೆಯಲ್ಲಿ ಮಂಡಿಸಿದರು. ರೈತರ 10 ಹೆಚ್.ಪಿ. ಉಚಿತ ವಿದ್ಯುತ್ ವಿಚಾರದಲ್ಲಿ ರಾಜ್ಯದ ಮುಖ್ಯಮಂತ್ರಿಗಳು ಕೊಟ್ಟ ಮಾತಿನಂತೆ ನಡೆದುಕೊಳ್ಳಲಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.

  • ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರೈತಸಂಘದಿಂದ ಪರ್ಯಾಯ ರಾಜಕಾರಣ: ಕೋಡಿಹಳ್ಳಿ

    ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರೈತಸಂಘದಿಂದ ಪರ್ಯಾಯ ರಾಜಕಾರಣ: ಕೋಡಿಹಳ್ಳಿ

    ಹಾವೇರಿ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರೈತಸಂಘದಿಂದ ಪರ್ಯಾಯ ರಾಜಕಾರಣ ಮಾಡುತ್ತೇವೆ. ರಾಜ್ಯದಲ್ಲಿ ತತ್ವ ಸಿದ್ಧಾಂತಗಳಿಲ್ಲದ ರಾಜಕೀಯ ಪಕ್ಷಗಳು ಹಾಗೂ ರಾಜಕೀಯ ನಾಯಕರಿದ್ದಾರೆ. ಜನರ ಸಮಸ್ಯೆಗಳಿಗೆ ಸ್ಪಂದಿಸದಿರುವ ಪಕ್ಷಗಳಿವೆ ಎಂದು ರಾಜ್ಯ ರೈತಸಂಘದ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಸರ್ಕಾರದ ವಿರುದ್ಧ ಕಿಡಿಕಾರಿದರು.

    ಹಾವೇರಿಯಲ್ಲಿ ಮಾತನಾಡಿದ ಚಂದ್ರಶೇಖರ್, ಇದೇ ತಿಂಗಳು 21ರಂದು ಬೆಂಗಳೂರಿನಲ್ಲಿ ನಡೆಯಲಿರುವ ರೈತ ಸಮಾವೇಶದಲ್ಲಿ ಪರ್ಯಾಯ ರಾಜಕಾರಣದ ಬಗ್ಗೆ ಘೋಷಣೆ ಮಾಡಲಾಗುವುದು. ಈಗಾಗಲೇ ಮಮತಾ ಬ್ಯಾನರ್ಜಿ, ದೆಹಲಿಯಿಂದ ಎಎಪಿ ಪಕ್ಷದ ಮುಖಂಡರು ಸಂಪರ್ಕ ಮಾಡಿದ್ದಾರೆ. ನಾವು ಯಾರ ಜೊತೆಗೂ ಕೈ ಜೋಡಿಸಬೇಕು ಎಂದೇನಿಲ್ಲ. ಏಪ್ರಿಲ್ 11 ರಂದು ರಾಜ್ಯ ಕೋರ ಕಮಿಟಿ ಸಭೆ ಇದೆ. ಸಾಧಕ ಬಾಧಕಗಳನ್ನು ಚರ್ಚಿಸಿ ಈ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದರು. ಇದನ್ನೂ ಓದಿ: ಲವ್ ಜಿಹಾದ್ ಕೇಸ್‍ಗೆ ಟ್ವಿಸ್ಟ್ – ನನ್ನನ್ನು ಯಾರು ಒತ್ತಾಯ ಪೂರ್ವಕವಾಗಿ ಕರೆದುಕೊಂಡು ಬಂದಿಲ್ಲ ಅಂದ ಯುವತಿ

    ನಾವು ಈಗ ಸ್ವತಂತ್ರ್ಯರಾಗಿದ್ದು, ನಮ್ಮ ಸಿದ್ಧಾಂತಕ್ಕೆ ಬದ್ಧರಾಗಿದ್ದೇವೆ. ಸಿದ್ಧಾಂತಕ್ಕೆ ದಕ್ಕೆ ಬಾರದಂತೆ ಭ್ರಷ್ಟಾಚಾರ ಮುಕ್ತವಾಗಿ ಚುನಾವಣೆ ಮಾಡುತ್ತೇವೆ ಹಾಗೂ ಗೆಲ್ಲುತ್ತೇವೆ ಕೂಡ. ಬೇರೆಯವರಂತೆ ಇಪ್ಪತ್ತು-ಮೂವತ್ತು ಕೋಟಿ ಹೆಂಡ ಇಟ್ಟುಕೊಂಡು ಚುನಾವಣೆ ಮಾಡುವುದಾದರೆ ನಾವು ಕಳ್ಳರೆ ಆಗಬೇಕಾಗುತ್ತದೆ. ಬೊಮ್ಮಾಯಿಯವರ ಶೇ.40 ರಷ್ಟು ಸರ್ಕಾರಕ್ಕೆ ನಾವು ಪರ್ಯಾಯ ಆಗುತ್ತೇವೆ ಎಂದು ತಿಳಿಸಿದರು.

    ಮಾವು ಮಾರಾಟದಲ್ಲಿ ಹಿಂದೂ ಮುಸ್ಲಿಂ ವಿಚಾರದ ಬಗ್ಗೆ ಮಾತನಾಡಿದ ಅವರು, ರಾಮನಗರದಲ್ಲಿ ರಾಜ್ಯದಲ್ಲೇ ಅತೀ ಹೆಚ್ಚು ಮಾವು ಉತ್ಪಾದನೆ ಮಾಡಲಾಗುತ್ತದೆ. ಅಲ್ಲಿ ಮಾರುಕಟ್ಟೆ ನಡೆಯುವುದೇ ಮುಸ್ಲಿಮರ ಕೈಯಲ್ಲಿ. ಅವರು ಬೆಲೆ ಸರಿಯಾಗಿ ಕೊಡುವುದಿಲ್ಲ ಅಥವಾ ಮುಸ್ಲಿಮರು ಎನ್ನುವುದು ಒಂದೇ ಟಾರ್ಗೆಟಾ? ಸಿಎಂ ಬೊಮ್ಮಾಯಿಯವರೇ, ಮಾವು ವಾರ್ಷಿಕ ಬೆಳೆ ಈ ಬಾರಿ ಫಸಲು ಕಡಿಮೆ ಇದೆ. ಮಾವಿಗೆ ವೈಜ್ಞಾನಿಕ ದರ ನೀಡಿ. ಮಾವಿನ ದರ ಕಡಿಮೆಯಾದರೆ ಸರ್ಕಾರದವರು ಖರೀದಿ ಮಾಡುತ್ತೀವಿ ಎಂದು ಘೋಷಣೆ ಮಾಡಿ. ಅದು ಬಿಟ್ಟು ಇಂತಹ ಕನಿಷ್ಠವಾದ ಕಾರ್ಯಕ್ರಮಗಳನ್ನು ಮಾಡಬೇಡಿ. ಸರ್ಕಾರ ಜನರ ಸಂಕಷ್ಟಕ್ಕೆ ಪರಿಹಾರ ಸೂಚಿಸಬೇಕೆ ಹೊರತು ನೀವೇ ಸಮಸ್ಯೆ ಸೃಷ್ಟಿ ಮಾಡಿ ಅಲ್ಲೋಲ ಕಲ್ಲೋಲ ಮಾಡಬೇಡಿ ಎಂದು ಗುಡುಗಿದರು. ಇದನ್ನೂ ಓದಿ: ಬೆಳಗಾವಿ ಆರ್‌ಎಸ್‌ಎಸ್ ಕಚೇರಿಗೆ ಗೋವಾ ಸಿಎಂ ಭೇಟಿ – ಇನ್ನೊಮ್ಮೆ ಮೋದಿ ಪ್ರಧಾನಿ ಆಗ್ತಾರೆ ಎಂದ ಸಾವಂತ್

    ಮನುಷ್ಯ ದ್ವೇಷವನ್ನು ಹುಟ್ಟು ಹಾಕುವುದಾದರೆ ಸರ್ಕಾರವನ್ನು ನೀವೇ ಮಾಡ್ತಾ ಇದ್ದೀರಾ? ಅಥವಾ ವಿರೋಧ ಪಕ್ಷದವರು ಸರ್ಕಾರ ನಡೆಸುತ್ತಿದ್ದರಾ? ಸರ್ಕಾರದ ವಿರುದ್ಧ ಜನರನ್ನು ಸಂಘಟಿಸುವುದು ವಿರೋಧ ಪಕ್ಷದವರ ಕೆಲಸ. ಆದರೆ ಸರ್ಕಾರದವರೇ ಈ ಕೆಲಸಕ್ಕೆ ಇಳಿದುಬಿಟ್ಟಿದ್ದೀರಿ. ವೋಟ್ ಪರ್ಸಂಟೇಜ್ ಹೆಚ್ಚಾಗುತ್ತದೆ ಎಂದೋ? ಇದರಿಂದ ವೋಟ್ ಪರ್ಸಂಟೇಜ್ ಜಾಸ್ತಿ ಆಗುವುದಿಲ್ಲ. ನಿಮ್ಮ ಬಳಿ ಇಂತಹ ಅಜೆಂಡಾಗಳು ಬಹಳ ಇವೆ ಎಂದು ಕೇಳಿದ್ದೇನೆ. ಚುನಾವಣೆ ಬರುವವರೆಗೂ ಇದನ್ನು ಟ್ರಯಲ್ ಮಾಡುತ್ತಾ ಇರುತ್ತೀರಿ ಎಂದು ಕೇಳಿದ್ದೇನೆ ಎಂದು ಟೀಕಿಸಿದರು.

    ನಿಮ್ಮ ಪಕ್ಷದ ಮಾನ ಮರ್ಯಾದೆ ಕಡಿಮೆ ಮಾಡಿಕೊಳ್ಳುವುದಕ್ಕೆ ಇಂತಹ ಕಾರ್ಯಕ್ರಮಗಳನ್ನು ಮುಂದುವರೆಸಿ. ಜನರು ಒಂದು-ಎರಡು ಸುಳ್ಳುಗಳನ್ನು ನಂಬುತ್ತಾರೆ. ಸುಳ್ಳು ಹೇಳುವುದೇ ನಿಮ್ಮ ಜಾಯಮಾನ ಆಗಿಬಿಟ್ರೆ ನಿಮ್ಮನ್ನು ಡಸ್ಟ್ ಬಿನ್‌ಗೆ ಎಸೆದುಬಿಡುತ್ತಾರೆ. ಇದರ ಬಗ್ಗೆ ಬಿಜೆಪಿಯವರಿಗೆ ಎಚ್ಚರಿಕೆ ಇರಲಿ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಕಿಡಿಕಾರಿದರು.

  • ರಾಜ್ಯದ ಜನ ಕಷ್ಟ ಅನುಭವಿಸಲು ಕೋಡಿಹಳ್ಳಿಯೇ ಕಾರಣ- ತಿರುಗಿ ಬಿದ್ದ ರೈತ ಸಂಘದ ರಾಜ್ಯಾಧ್ಯಕ್ಷ

    ರಾಜ್ಯದ ಜನ ಕಷ್ಟ ಅನುಭವಿಸಲು ಕೋಡಿಹಳ್ಳಿಯೇ ಕಾರಣ- ತಿರುಗಿ ಬಿದ್ದ ರೈತ ಸಂಘದ ರಾಜ್ಯಾಧ್ಯಕ್ಷ

    – ಹಸಿರು ಟವಲ್ ಹಾಕಿ, ಆಟವಾಡಿ ರೈತರಿಗೆ ಅವಮಾನ ಮಾಡಬೇಡಿ

    ಮೈಸೂರು: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ತಿರುಗಿ ಬಿದ್ದಿದ್ದಾರೆ.

    ಈ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ನಾಲ್ಕು ದಿನಗಳ ಕಾಲ ರಾಜ್ಯದ ಜನ ಕಷ್ಟ ಅನುಭವಿಸಲು ಕೋಡಿಹಳ್ಳಿಯೇ ಕಾರಣ. ನೀವು ಸಾರಿಗೆ ನೌಕರರ ಪರ ಹೋರಾಟ ಮಾಡಿ. ಆದರೆ ಹಸಿರು ಟವಲ್ ಇಳಿಸಿ ಹೋರಾಟ ಮಾಡಿ. ಸುಮ್ಮನೆ ಹಸಿರು ಟವಲ್ ಹಾಕಿಕೊಂಡು ರೈತರಿಗೆ ಅವಮಾನ ಮಾಡಬೇಡಿ. ನಿಮ್ಮಿಂದ ರೈತ ಮುಖಂಡರು, ರೈತ ಸಂಘಟನೆಗಳ ಬಗ್ಗೆ ಜನರಿಗೆ ಕೆಟ್ಟ ಅಭಿಪ್ರಾಯ ಮೂಡಿದೆ ಎಂದು ಟೀಕಿಸಿದ್ದಾರೆ.

    ಕೋಡಿಹಳ್ಳಿ ಚಂದ್ರಶೇಖರ್ ಅವರು ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟಕ್ಕೆ ಬೆಂಬಲ ಕೊಡಬೇಕಿತ್ತು. ಅದನ್ನು ಬಿಟ್ಟು ಸಾರಿಗೆ ನೌಕರರ ಜೊತೆ ಮುಷ್ಕರ ನಡೆಸಿ, ಅದನ್ನೂ ಹಳ್ಳ ಹಿಡಿಸಿದರು. ಅಲ್ಲದೆ ಇದರಿಂದ ರೈತ ಸಂಘದ ವರ್ಚಸ್ಸು ಕುಂದಿದೆ. ಗೌರವ ಕಡಿಮೆಯಾಗಿದೆ. ಹಸಿರು ಟವಲ್ ಹಾಕಿಕೊಂಡು ಆಟವಾಡಬೇಡಿ. ನಿಮಗೆ ಬದ್ಧತೆ ಇದ್ದರೆ ರೈತರ ಬಗ್ಗೆ ಆ ಕಾಳಜಿ ತೋರಿಸಿ. ಪ್ರಚಾರಕ್ಕಾಗಿ, ಬೇರೆ ಸಂಘಟನೆಗಳಲ್ಲಿ ಒಡಕು ಉಂಟುಮಾಡಲು ಈ ರೀತಿ ಮಾಡಬೇಡಿ ಎಂದು ತರಾಟೆಗೆ ತೆಗೆದುಕೊಮಡಿದ್ದಾರೆ.

    ರಾಜ್ಯದ ಜನ ನಾಲ್ಕು ದಿನಗಳಿಂದ ಸಂಕಷ್ಟ ಅನುಭವಿಸುವುದಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಅವರ ತಪ್ಪು ನಿರ್ಧಾರಗಳೇ ಕಾರಣ. ಕೋಡಿಹಳ್ಳಿಗೆ ಸಮಸ್ಯೆಯ ಅರಿವಿಲ್ಲ ಹಾಗಾಗಿ ಅದಕ್ಕೆ ಪರಿಹಾರವೂ ಗೊತ್ತಿಲ್ಲ. ಸಾರಿಗೆ ನೌಕರರನ್ನು ದಿಕ್ಕು ತಪ್ಪಿಸಿರೋದೆ ಕೋಡಿಹಳ್ಳಿ ಚಂದ್ರಶೇಖರ್. ಭಾನುವಾರ ಮುಕ್ತಾಯವಾಗಿದ್ದ ಮುಷ್ಕರವನ್ನು ಮುಂದುವರೆಸಲು ಚಿತಾವಣೆ ಮಾಡಿದ್ದೇ ಕೋಡಿಹಳ್ಳಿ. ಸಾರಿಗೆ ನೌಕರರೇ ನಿಮ್ಮ ಬಗ್ಗೆ ಜನರಿಗೆ ಸಹಾನುಭೂತಿ ಇದೆ. ಕೋಡಿಹಳ್ಳಿ ಮಾತು ಕಟ್ಟಿಕೊಂಡು ಹೋದರೆ ಅವರ ಸಂಘಟಯೇ ಹಾಳಾಗುತ್ತದೆ ಎಂದು ಎಚ್ಚರಿಸಿದ್ದಾರೆ.

  • ಬಲವಂತ ಸಾಲ ವಸೂಲಾತಿಗೆ ಬಂದರೆ ಕಟ್ಟಿ ಹಾಕ್ತೀವಿ: ರೈತ ಸಂಘದ ಎಚ್ಚರಿಕೆ

    ಬಲವಂತ ಸಾಲ ವಸೂಲಾತಿಗೆ ಬಂದರೆ ಕಟ್ಟಿ ಹಾಕ್ತೀವಿ: ರೈತ ಸಂಘದ ಎಚ್ಚರಿಕೆ

    ಶಿವಮೊಗ್ಗ: ಸಹಕಾರಿ ಸಂಸ್ಥೆಗಳಲ್ಲಿ ರೈತರು ಮಾಡಿರುವ ಸಾಲವನ್ನು ಬಲವಂತವಾಗಿ ವಸೂಲಿ ಮಾಡುವುದನ್ನು ನಿಲ್ಲಿಸಬೇಕು. ಇಲ್ಲವಾದಲ್ಲಿ ಸಾಲ ವಸೂಲಿಗೆ ಬರುವ ಸಹಕಾರಿ ಸಂಸ್ಥೆಗಳ ಏಜೆನ್ಸಿಯವರನ್ನು ಗ್ರಾಮದಲ್ಲಿಯೇ ಕಟ್ಟಿ ಹಾಕುತ್ತೇವೆ ಎಂದು ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಎಚ್.ಆರ್.ಬಸವರಾಜನಪ್ಪ ಎಚ್ಚರಿಕೆ ನೀಡಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರ ಸಂಸ್ಥೆಗಳಿಂದ ರೈತರು ಪಡೆದ ಸಾಲಗಳನ್ನು ಸರ್ಕಾರ ಬಲವಂತವಾಗಿ ವಸೂಲಿ ಮಾಡಲು ಆದೇಶ ನೀಡಿದೆ. ಈ ಆದೇಶವನ್ನು ರೈತ ಸಂಘ ಖಂಡಿಸುತ್ತದೆ. ಸರ್ಕಾರ ಈ ಬಗ್ಗೆ ಸುತ್ತೋಲೆ ಹೊರಡಿಸಿರಬಹುದು. ಆದರೆ ಸಹಕಾರಿ ಸಂಸ್ಥೆಗಳು ಕಡ್ಡಾಯ ಸಾಲ ವಸೂಲಿ ಮಾಡಿದರೆ, ಸಾಲದ ಹಣಕ್ಕಾಗಿ ರೈತರ ಟ್ರ್ಯಾಕ್ಟರ್, ಟಿಲ್ಲರ್, ಜಪ್ತಿಗೆ ಬಂದರೆ ಅಂತಹವರನ್ನು ಕಟ್ಟಿ ಹಾಕುತ್ತೇವೆ. ಅಲ್ಲದೇ ಜಪ್ತಿ ಮಾಡಿದ್ದರೆ ಅದನ್ನು ಮರು ಜಪ್ತಿ ಮಾಡುತ್ತೇವೆ. ಹೀಗಾಗಿ ಸರ್ಕಾರ ಈ ಸುತ್ತೋಲೆಯನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

    ಈ ಹಿಂದೆ ಕಾಂಗ್ರೆಸ್ ಸರಕಾರ ಇದ್ದಾಗಲೂ ಸಹಕಾರಿ, ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ ದೀರ್ಘಾವಧಿ ಸಾಲಗಳಿಗೆ ಅಸಲು ಪಾವತಿಸಿದರೆ ಬಡ್ಡಿ ಮನ್ನಾ ಮಾಡುವುದಾಗಿ ಆದೇಶ ಹೊರಡಿಸಿದ್ದರು. ಆದರೆ ರೈತರು ಅಸಲು ಕೂಡ ಕಟ್ಟಲು ಸಾಧ್ಯವಾಗಲಿಲ್ಲ. ನಂತರ ಎಚ್.ಡಿ.ಕುಮಾರಸ್ವಾಮಿ ಸರಕಾರ ಬಂದಾಗ 1 ಲಕ್ಷದವರೆಗಿನ ಸಾಲಮನ್ನಾ ಮಾಡಿದ್ದರು. ಆದರೆ ಈಗ ಅಸಲು ಮತ್ತು ಬಡ್ಡಿ ವಸೂಲಿಗೆ ಆದೇಶ ನೀಡಿರುವುದು ಖಂಡನೀಯ.

    ರೈತರು ಮೊದಲೇ ಒಂದೆಡೆ ಅತಿವೃಷ್ಟಿ, ಮತ್ತೊಂದೆಡೆ ಅನಾವೃಷ್ಟಿ ಎರಡರಿಂದಲೂ ತತ್ತರಿಸಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿಗಳು ಸುತ್ತೋಲೆ ಹಿಂಪಡೆದು ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ತೀವ್ರ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು.

  • ಉಳುಮೆ ಮಾಡಲು ಬಂದಿದ್ದ ರೈತನ ಮೇಲೆ ಅರಣ್ಯಾಧಿಕಾರಿಗಳಿಂದ ಹಲ್ಲೆ!

    ಉಳುಮೆ ಮಾಡಲು ಬಂದಿದ್ದ ರೈತನ ಮೇಲೆ ಅರಣ್ಯಾಧಿಕಾರಿಗಳಿಂದ ಹಲ್ಲೆ!

    ದಾವಣಗೆರೆ: ಬಡ ರೈತರೊಬ್ಬರ ಮೇಲೆ ಅರಣ್ಯ ಇಲಾಖೆಯ ಅಧಿಕಾರಗಳು ದೌರ್ಜನ್ಯ ನಡೆಸಿರೋ ಪ್ರಕರಣವೊಂದು ಬೆಳಕಿಗೆ ಬಂದಿದೆ.

    ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಕಂಚಕಾರಕ್ಕಿ ಕಟ್ಟಿಯಲ್ಲಿ ಈ ಘಟನೆ ನಡೆದಿದ್ದು, ಬಗರ್ ಹುಕುಂ ಜಮೀನಿನಲ್ಲಿ ಜಯ್ಯಪ್ಪ ಎಂಬ ರೈತರ ಮೇಲೆ ಹಲ್ಲೆ ನಡೆದಿದೆ.

    ಜಯ್ಯಪ್ಪ ಅರಣ್ಯ ಪ್ರದೇಶದ ಪಕ್ಕದಲ್ಲಿ ಇದ್ದ ತಮ್ಮ 2 ಎಕರೆ ಭೂಮಿಯಲ್ಲಿ ಉಳುಮೆ ಮಾಡಲು ಮುಂದಾದಾಗ ಅರಣ್ಯ ಇಲಾಖೆಯ ಅಧಿಕಾರಿಗಳು ಏಕಾಏಕಿ ಹಲ್ಲೆ ನಡೆಸಿದ್ದಾರೆ. ಜಯ್ಯಪ್ಪ 30 ವರ್ಷ ದಿಂದ ಉಳುಮೆ ಮಾಡುತ್ತಾ ಬಂದಿದ್ದರು. ಆದ್ರೆ ಇದೀಗ ತನ್ನ ಜಮೀನಿನಲ್ಲಿ ಉಳುಮೆ ಮಾಡಲು ಬಂದಿದ್ದ ವೇಳೆ ನಾಲ್ವರು ಅಧಿಕಾರಿಗಳಾದ ಷಡಕ್ಷರಪ್ಪ, ಶ್ರೀ ಶೈಲ, ಭೀಮಪ್ಪ ಹಾಗೂ ರವಿ ಎಂಬವರಿಂದ ಹಲ್ಲೆ ನಡೆದಿದೆ.

    ಸದ್ಯ ಜಯ್ಯಪ್ಪ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಧಿಕಾರಿಗಳ ವಿರುದ್ಧ ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.