Tag: Farmers Bill

  • ದೆಹಲಿಯಲ್ಲಿ ರೈತ ಸಂಘಟನೆ ಜೊತೆಗಿನ ಕೇಂದ್ರದ ಮಾತುಕತೆ ವಿಫಲ

    ದೆಹಲಿಯಲ್ಲಿ ರೈತ ಸಂಘಟನೆ ಜೊತೆಗಿನ ಕೇಂದ್ರದ ಮಾತುಕತೆ ವಿಫಲ

    ದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳ ಜೊತೆ ಕೇಂದ್ರ ಸರ್ಕಾರ ನಡೆಸಿದ ಮಾತುಕತೆ ವಿಫಲವಾಗಿದೆ. ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ಥೋಮರ್ ಅವರ ಸಮಿತಿ ರಚನೆಯ ಪ್ರಸ್ತಾಪವನ್ನ ರೈತ ಸಂಘಟನೆಗಳು ತಿರಸ್ಕರಿಸಿವೆ. ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ಥೋಮರ್ ಅವರು 32 ರೈತ ಸಂಘಟನೆಗಳ ಪ್ರತಿನಿಧಿಗಳ ಜೊತೆ ದೆಹಲಿ ಕೃಷಿ ಭವನದಲ್ಲಿ ನಡೆಸಿದ ಸಂಧಾನ ಸಭೆ ವಿಫಲವಾಗಿದೆ.

    ರೈತ ಸಂಘಟನೆಗಳ ಜೊತೆಗಿನ ಸಭೆಯಲ್ಲಿ ಕೃಷಿ ಕಾಯಿದೆಯ ಸಮಗ್ರ ಚರ್ಚೆಗೆ ರೈತರು, ಸರ್ಕಾರ ಮತ್ತು ತಜ್ಞರನ್ನು ಒಳಗೊಂಡ ಸಮಿತಿ ರಚಿಸೋ ಪ್ರಸ್ತಾಪ ಮುಂದಿಟ್ಟಿದ್ದರು. ಪ್ರತಿಯೊಂದು ಸಂಘಟನೆ ನಾಲ್ಕರಿಂದ ಐದು ಜನರ ಈ ಸಮಿತಿಯಲ್ಲಿ ಇರುತ್ತಾರೆ. ಅದರಂತೆ ಸರ್ಕಾರದ ಕೆಲ ಅಧಿಕಾರಿಗಳು ಮತ್ತು ಕೃಷಿ ತಜ್ಞರನ್ನೊಳಗೊಂಡ ಸಮಿತಿ ರಚಿಸುವುದು ಎಂದು ಹೇಳಿದ್ದರು. ಪ್ರಸ್ತಾಪಕ್ಕೂ ಮುನ್ನ ರೈತ ಸಂಘಟನೆಗಳಿಗೆ ಹೊಸ ಕೃಷಿ ಕಾನೂನುಗಳಿಗೆ ಸಂಬಂಧಿಸಿದ ಮಾಹಿತಿಯನ್ನ ಎಲ್‍ಇಡಿ ಮೂಲಕ ತೋರಿಸಲಾಗಿತ್ತು.

    ಇಂದು ಬೆಳಗ್ಗೆ ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಜೊತೆ ನರೇಂದ್ರ ಸಿಂಗ್ ಥೋಮರ್ ಮಾತುಕತೆ ನಡೆಸಿದ್ದರು. ಈ ಸಭೆಯಲ್ಲಿ ಪ್ರತಿಭಟನಾ ನಿರತ ರೈತರ ಜೊತೆ ಸಂಧಾನದ ಮಾತುಕತೆ ಬಗ್ಗೆ ಚರ್ಚಿಸಲಾಗಿತ್ತು.

    ಕೇಂದ್ರ ಸರ್ಕಾರ ಅಹಂಕಾರ ಬಿಟ್ಟು ರೈತರ ಸಮಸ್ಯೆಯನ್ನು ಆಲಿಸಬೇಕು ಎಂದು ಕೇಂದ್ರಕ್ಕೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಟ್ವೀಟ್ ಏಟು ಕೊಟ್ಟಿದ್ದಾರೆ. ರೈತರಿಗೆ ನ್ಯಾಯ ಒದಗಿಸಿದರೆ ಮಾತ್ರ ಅವರ ಋಣ ತೀರಿಸಲು ಸಾಧ್ಯವೇ ವಿನಃ ರೈತರ ಮೇಲೆ ಲಾಠಿ, ಅಶ್ರುವಾಯು ಪ್ರಯೋಗಿಸಿ ದೌರ್ಜನ್ಯ ಎಸಗುವುದಲ್ಲ ಎಂದು ಸಲಹೆ ಕೊಟ್ಟಿದ್ದಾರೆ. ಈ ಮಧ್ಯೆ, ಭಾರತದ ರೈತರ ಪ್ರತಿಭಟನೆ ಬಗ್ಗೆ ಇಂಗ್ಲೆಂಡ್ ಕ್ರಿಕೆಟಿಗ ಮಾಂಟಿ ಪನೇಸರ್, ಕೆನಡಾ ಪ್ರಧಾನಿ ಜಸ್ಟೀನ್ ಟ್ರಡೋ ಕಳವಳ ವ್ಯಕ್ತಪಡಿಸಿದೆ. ಇದಕ್ಕೆ ಕೇಂದ್ರ ಸರ್ಕಾರ ಕೂಡ ನಿಮ್ಮ ಕಳವಳ ಅನಪೇಕ್ಷಿತ ಮತ್ತು ಅನಗತ್ಯ ಅಂತ ಹೇಳಿದೆ.

  • ಅಮಿತ್ ಶಾ ಪ್ರಸ್ತಾಪ ತಿರಸ್ಕರಿಸಿದ ಪ್ರತಿಭಟನಾ ನಿರತ ರೈತರು

    ಅಮಿತ್ ಶಾ ಪ್ರಸ್ತಾಪ ತಿರಸ್ಕರಿಸಿದ ಪ್ರತಿಭಟನಾ ನಿರತ ರೈತರು

    ನವದೆಹಲಿ: ಕೇಂದ್ರದ ಕೃಷಿ ಕಾನೂನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು ಕೇಂದ್ರ ಗೃಹಸಚಿವ ಅಮಿತ್ ಶಾ ಪ್ರಸ್ತಾಪವನ್ನ ತಿರಸ್ಕರಿಸಿದ್ದು ತಮ್ಮ ನಿಲುವಿಗೆಗೆ ಬದ್ಧರಾಗಿದ್ದಾರೆ.

    ಅಮಿತ್ ಶಾ ಪ್ರತಿಭಟನಾ ನಿರತ ರೈತರಿಗೆ ವೀಡಿಯೋ ಮೂಲಕ ಸಂದೇಶ ರವಾನಿಸಿದ್ದರು. ಡಿಸೆಂಬರ್ 3ರಂದು ನಿಮ್ಮ ಜೊತೆ ಮಾತುಕತೆ ನಡೆಸಲಾಗುವುದು. ಮಾತುಕತೆ ಇಚ್ಛಿಸಿದಲ್ಲಿ ಎಲ್ಲರೂ ದೆಹಲಿ-ಹರಿಯಾಣ ಗಡಿಯಿಂದ ಬುರಾಡಿತ ನಿರಂಕಾರಿ ಮೈದಾನಕ್ಕೆ ತೆರಳಬೇಕೆಂದು ಷರತ್ತು ವಿಧಿಸಿದ್ದರು. ಇದಕ್ಕೂ ಮೊದಲು ಕೇಂದ್ರ ಕೃಷಿ ಸಚಿವ ನರೇಂದ್ರ ತೋಮರ್ ಮಾತುಕತೆಗೆ ಆಹ್ವಾನಿಸಿದ್ದರು.

    ಅಮಿತ್ ಶಾ ಮತ್ತು ನರೇಂದ್ರ ತೋಮರ್ ಪ್ರಸ್ತಾಪ ತಿರಸ್ಕರಿಸಿದ ಬಳಿಕ ಮುಂದಿನ ಹೋರಾಟದ ಕುರಿತು ಚರ್ಚೆ ನಡೆಸಿದ್ದಾರೆ. ಅಮಿತ್ ಶಾ ತಮ್ಮ ಸಂದೇಶದಲ್ಲಿ ಬುರಾಡಿ ಮೈದಾನಕ್ಕೆ ತೆರಳಬೇಕೆಂಬ ಷರತ್ತು ವಿಧಿಸಿದ್ದಾರೆ. ಕೇಂದ್ರದ ವಿರುದ್ಧ ಪ್ರತಿಭಟನೆ ರಾಮಲೀಲಾ ಮೈದಾನದಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಹಾಗಾಗಿ ಪ್ರತಿಭಟನಾ ಸ್ಥಳ ಬದಲಿಸಲು ಸಾಧ್ಯವಿಲ್ಲ. ಸರ್ಕಾರ ಮೂರು ಕೃಷಿ ಕಾನೂನುಗಳನ್ನ ಹಿಂಪಡೆದುಕೊಳ್ಳುವರೆಗೂ ನಮ್ಮ ಹೋರಾಟ ನಡೆಯಲಿದೆ ಎಂದು ಪಂಜಾಬ್ ಕಿಸಾನ ಯೂನಿಯನ್ ಅಧ್ಯಕ್ಷ್ಯ ರೂಲ್ದೂ ಸಿಂಗ್ ಹೇಳಿದ್ದಾರೆ.

    ಮೋದಿ ಸರ್ಕಾರ ಜಾರಿಗೆ ತಂದಿರೋ ವಿವಿಧ ಕೃಷಿ ಮಸೂದೆ ವಿರೋಧಿಸಿ ದೆಹಲಿ ಚಲೋ ಆಂದೋಲನ ನಡೆಸುತ್ತಿರುವ ರೈತರ ವಿರುದ್ಧ ಹರಿಯಾಣ ಪೊಲೀಸರು ಕೊಲೆ ಯತ್ನ, ಗಲಭೆ ಸೃಷ್ಟಿ ಹಾಗೂ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಕೇಸ್ ದಾಖಲಿಸಿದ್ದಾರೆ.

    ಇನ್ನು ದೆಹಲಿ ಚಲೋ ಪ್ರತಿಭಟನೆ ನಡೆಸುತ್ತಿರುವ ಸಾವಿರಾರು ಮಂದಿ ರೈತರು ಸಿಂಗು ಗಡಿಯಲ್ಲಿ ಜಮಾಯಿಸಿದ್ದು, ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಇಲ್ಲಿಂದ ವಾಪಸ್ ಹೋಗಲ್ಲ ಅಂತ ಪಟ್ಟು ಹಿಡಿದಿದ್ದಾರೆ. ದೆಹಲಿ-ಎನ್ ಸಿಆರ್ ನಗರಗಳ ಮಧ್ಯೆ ವಾಹನ ಸಂಚಾರ ತೀವ್ರ ಅಡಚಣೆಯುಂಟಾಗಿದೆ. ಹರ್ಯಾಣದ ಗಡಿಭಾಗದ ಸಿಂಗು, ಟಿಕ್ರಿ, ಧನ್ಸ, ಜಾರೊಡ ಕಲನ್‍ಗಳಲ್ಲಿ ಪೊಲೀಸರು ಸಂಚಾರ ಬಂದ್ ಮಾಡಿದ್ದಾರೆ.

    ಈ ಮಧ್ಯೆ, ನಮ್ಮ ರೈತರು ಇಲ್ಲ. ಪಂಜಾಬ್ ಸರ್ಕಾರವೇ ಇದಕ್ಕೆ ಕಾರಣ ಅಂತ ಹರ್ಯಾಣ ಸಿಎಂ ಮನೋಹರ್‍ಲಾಲ್ ಖಟ್ಟರ್ ಟೀಕಿಸಿದ್ದಾರೆ. ಇದಕ್ಕೆ ಪಂಜಾಬ್ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ತಿರುಗೇಟು ಕೊಟ್ಟಿದ್ದು, ನಿಮ್ಮ ವರ್ತನೆಯಿಂದಾಗಿ ನಿಮ್ಮ ಫೋನ್ ಕಾಲ್ ಅನ್ನು ನಾನು ಸ್ವೀಕರಿಸಲ್ಲ ಅಂದಿದ್ದಾರೆ.