Tag: Fengal Cyclone

  • ಶಾಲೆ, ಕಾಲೇಜುಗಳಿಗೆ ಮಂಗಳವಾರ ರಜೆ – ಯಾವ ಜಿಲ್ಲೆಗಳಲ್ಲಿ ರಜೆ ಘೋಷಣೆಯಾಗಿದೆ?

    ಶಾಲೆ, ಕಾಲೇಜುಗಳಿಗೆ ಮಂಗಳವಾರ ರಜೆ – ಯಾವ ಜಿಲ್ಲೆಗಳಲ್ಲಿ ರಜೆ ಘೋಷಣೆಯಾಗಿದೆ?

    ಬೆಂಗಳೂರು: ಫೆಂಗಲ್ ಚಂಡಮಾರುತದಿಂದ ಕರ್ನಾಟಕದ ದಕ್ಷಿಣ ಭಾಗದಲ್ಲಿರುವ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯಿಂದ ವಿದ್ಯಾರ್ಥಿಗಳಿಗೆ ಶಾಲೆ, ಕಾಲೇಜುಗಳಿಗೆ ತೆರಳಲು ಕಷ್ಟವಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

    ದಕ್ಷಿಣ ಕನ್ನಡ, ಕೊಡಗು, ಚಾಮರಾಜನಗರಮ ಉಡುಪಿ, ಮೈಸೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮಂಗಳವಾರ ಶಾಲೆ, ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿ ಆದೇಶ ಪ್ರಕಟಿಸಿದ್ದಾರೆ. ಚಾಮರಾಜನಗರ ಜಿಲ್ಲೆಯಲ್ಲಿ ಪರೀಕ್ಷೆ ನಡೆಯುತ್ತಿರುವ ಪದವಿ ಕಾಲೇಜು ಹೊರತು ಪಡಿಸಿ ಉಳಿದ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

    ಚಿಕ್ಕಮಗಳೂರಿನ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಅಂಗನವಾಡಿಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ.

    ಬೆಂಗಳೂರು ನಗರ ಜಿಲ್ಲೆಯಲ್ಲಿ  ಎಲ್ಲೋ ಅಲರ್ಟ್ಇರುವುದರಿಂದ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿರುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

    ಯಾವ ಜಿಲ್ಲೆಗಳಿಗೆ ಏನು ಅಲರ್ಟ್‌?
    ರೆಡ್ ಅಲರ್ಟ್ – ಕೊಡಗು
    ಆರೇಂಜ್‌ ಅಲರ್ಟ್‌ – ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ರಾಮನಗರ
    ಯೆಲ್ಲೋ ಅಲರ್ಟ್‌ – ಮಂಡ್ಯ, ಹಾಸನ, ಬೆಂಗಳೂರು.

  • ಕರ್ನಾಟಕ, ಕೇರಳದತ್ತ ಫೆಂಗಾಲ್ ಸೈಕ್ಲೋನ್- ಕೊಡಗಿಗೆ ರೆಡ್‌, ಯಾವ ಜಿಲ್ಲೆಗಳಿಗೆ ಯಾವ ಅಲರ್ಟ್‌?

    ಕರ್ನಾಟಕ, ಕೇರಳದತ್ತ ಫೆಂಗಾಲ್ ಸೈಕ್ಲೋನ್- ಕೊಡಗಿಗೆ ರೆಡ್‌, ಯಾವ ಜಿಲ್ಲೆಗಳಿಗೆ ಯಾವ ಅಲರ್ಟ್‌?

    ಬೆಂಗಳೂರು: ಫೆಂಗಲ್ ಚಂಡಮಾರುತ (Fengal Cyclone) ಎಫೆಕ್ಟ್ ಕರುನಾಡಿಗೂ (Karnataka) ತಟ್ಟಿದೆ. ಮೊನ್ನೆಯಿಂದ ಸುರಿಯುತ್ತಿರುವ ಜಡಿ ಮಳೆ (Heavy Rain), ಮೈಕೋರೆವ ಚಳಿಗೆ ಜನ ಹೈರಾಣಾಗಿದ್ದಾರೆ.

    ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ನಿರಂತರವಾಗಿ ಸುರಿತಿರುವ ಸೋನೆ ಮಳೆಯಿಂದ ವಾಹನ ಸವಾರರು ಪರದಾಡಿದ್ದಾರೆ. ಭಾನುವಾರ ಮತ್ತು ಇಂದು ಬೆಂಗಳೂರಿನ ಉಷ್ಣಾಂಶದಲ್ಲಿ ದಾಖಲೆಯ ಇಳಿಕೆಯಾಗಿದೆ. ಬುಧವಾರದ ಬಳಿಕ ಬೆಂಗಳೂರು (Bengaluru) ಸಹಜ ಸ್ಥಿತಿಗೆ ಬರುವ ಸುಳಿವನ್ನು ಹವಾಮಾನ ಇಲಾಖೆ ನೀಡಿದೆ.

     

    ಈ ತಿಂಗಳಿಡಿ ಹಗಲಿನಲ್ಲಿಯೂ ಚಳಿ ಇರಲಿದೆ ಎಂದು ಹೇಳಲಾಗಿದೆ. ಬರೀ ಬೆಂಗಳೂರು ಮಾತ್ರವಲ್ಲ ಫೆಂಗಲ್ ಪರಿಣಾಮದಿಂದ ಚಾಮರಾಜನಗರ, ಮೈಸೂರು, ಕೊಡಗು, ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಜಿಟಿ ಜಿಟಿ ಮಳೆ ಆಗುತ್ತಿದೆ. ಕೊಡಗಿನ ಜೊತೆ ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.  ಇದನ್ನೂ ಓದಿ: ಚಿಕ್ಕಬಳ್ಳಾಪುರ | ಫೆಂಗಲ್‌ ಚಂಡಮಾರುತಕ್ಕೆ ರಾಗಿ ಬೆಳೆ ನಾಶ – ಹೂದೋಟವೂ ಹಾಳು

    ಫೆಂಗಲ್ ಪರಿಣಾಮ ಕಟಾವಿಗೆ ಬಂದ ಬೆಳೆಗಳು ನೆಲಕಚ್ಚುವ ಆತಂಕ ರೈತರನ್ನು ಆವರಿಸಿದೆ. ಚಾಮರಾಜನಗರದಲ್ಲಿಯೂ ಮನೆಯೊಂದು ಕುಸಿದಿದೆ. ತಮಿಳುನಾಡು ಕಡೆಯಿಂದ ನೀರು ಬರ್ತಿರುವ ಕಾರಣ ಹಳ್ಳ ಕೊಳ್ಳಗಳು ಭರ್ತಿಯಾಗಿವೆ.

     

    ಯಾವ ಜಿಲ್ಲೆಗಳಿಗೆ ಏನು ಅಲರ್ಟ್‌?
    ರೆಡ್ ಅಲರ್ಟ್ – ಕೊಡಗು
    ಆರೆಂಜ್ ಅಲರ್ಟ್‌ – ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ರಾಮನಗರ
    ಯೆಲ್ಲೋ ಅಲರ್ಟ್‌ – ಮಂಡ್ಯ, ಹಾಸನ

  • ಕೇರಳದಲ್ಲೂ ಭಾರೀ ಮಳೆ; ಕಾಲ್ನಡಿಗೆಯಲ್ಲಿ ಬರುವ ಶಬರಿಮಲೆ ಯಾತ್ರಿಕರಿಗೆ ನಿಷೇಧ

    ಕೇರಳದಲ್ಲೂ ಭಾರೀ ಮಳೆ; ಕಾಲ್ನಡಿಗೆಯಲ್ಲಿ ಬರುವ ಶಬರಿಮಲೆ ಯಾತ್ರಿಕರಿಗೆ ನಿಷೇಧ

    ತಿರುವನಂತಪುರಂ: ಫೆಂಗಲ್ ಚಂಡಮಾರುತದ (Fengal Cyclone) ಪರಿಣಾಮ ಕೇರಳದಲ್ಲೂ (Kerala) ಭಾರೀ ಮಳೆಯಾಗುತ್ತಿದೆ. ಮಳೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಶಬರಿಮಲೆಗೆ (Sabarimala) ಅರಣ್ಯದ ದಾರಿ ಮೂಲಕ ಕಾಲ್ನಡಿಗೆಯಲ್ಲಿ ಬರುವ ಯಾತ್ರಿಕರಿಗೆ ನಿಷೇಧ ಹೇರಲಾಗಿದೆ.

    ಕರಿಮಲ, ಪುಲ್ಲುಮೇಡು ದಾರಿಯಲ್ಲಿ ಸಂಚಾರ ಮಾಡದಂತೆ ತಡೆಯಲಾಗಿದೆ. ಭೂಕುಸಿತ ಉಂಟಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಅರಣ್ಯ ಮಾರ್ಗವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್ ಒಕ್ಕಲಿಗರ ದ್ರೋಹಿ, ಡಿಕೆಶಿ ಸುಳ್ಳಿನ ಶೂರ – ಜೆಡಿಎಸ್ ಲೇವಡಿ

    ಕಾಲ್ನಡಿಗೆ ಯಾತ್ರಿಕರು ನೀಲಕ್ಕಲ್-ಪಂಬಾ ಮೂಲಕ ಶಬರಿಮಲೆಗೆ ತೆರಳುವಂತೆ ಸೂಚನೆ ನೀಡಲಾಗಿದೆ. ಈಗಾಗಲೇ ಅರಣ್ಯ ಮಾರ್ಗದ ಮೂಲಕ ಆಗಮಿಸಿದ್ದ ಭಕ್ತರನ್ನು ವಿಶೇಷ ಕೆಎಸ್‌ಆರ್‌ಟಿಸಿ ಬಸ್ ಮೂಲಕ ಪಂಪಾಗೆ ಕರೆದೊಯ್ಯಲಾಗಿದೆ. ಇದನ್ನೂ ಓದಿ: ರಾಯಚೂರು | ಬೈಕ್‌ಗೆ ಸರ್ಕಾರಿ ಬಸ್ ಡಿಕ್ಕಿ – ಸವಾರ ಸ್ಥಳದಲ್ಲೇ ಸಾವು

    ಪುಲ್ಲುಮೇಡುವಿನಿಂದ ಶಬರಿಮಲೆಗೆ 6 ಕಿ.ಮೀ ದೂರ ಇದೆ. ಭಾನುವಾರದಿಂದ ಈ ಅರಣ್ಯ ದಾರಿಯಲ್ಲಿ ದಟ್ಟ ಮಂಜು ಆವರಿಸಿದೆ. ಅಲ್ಲದೇ ಭೂಕುಸಿತ ಉಂಟಾಗುವ ಸಾಧ್ಯತೆಯಿಂದ ಅರಣ್ಯ ಮಾರ್ಗದಲ್ಲಿ ಕಾಲ್ನಡಿಗೆ ನಿಷೇಧಿಸಲಾಗಿದೆ. ಭಾರೀ ಮಳೆಯ ಹಿನ್ನೆಲೆ ಕೇರಳದ 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಪ್ರವಾಹ ಉಂಟಾಗುವ ಪ್ರದೇಶದಲ್ಲಿ ನೆಲೆಸಿರುವವರನ್ನು ಈಗಾಗಲೇ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚಿಸಲಾಗಿದೆ. ಇದನ್ನೂ ಓದಿ: ಇಂದು ರೈತರ ಪ್ರತಿಭಟನೆ: ದೆಹಲಿ–ನೋಯ್ಡಾ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್

  • ಬೆಂಗಳೂರಿನಲ್ಲಿ ಜಿಟಿಜಿಟಿ ಮಳೆ – ಟ್ರಾಫಿಕ್ ಜಾಮ್, ಕಿಲೋ ಮೀಟರ್‌ಗಟ್ಟಲೇ ನಿಂತ ವಾಹನಗಳು

    ಬೆಂಗಳೂರಿನಲ್ಲಿ ಜಿಟಿಜಿಟಿ ಮಳೆ – ಟ್ರಾಫಿಕ್ ಜಾಮ್, ಕಿಲೋ ಮೀಟರ್‌ಗಟ್ಟಲೇ ನಿಂತ ವಾಹನಗಳು

    – ನಗರದಲ್ಲಿ ಮುಂದಿನ 48 ಗಂಟೆ ಭಾರೀ ಮಳೆ ಸಾಧ್ಯತೆ

    ಬೆಂಗಳೂರು: ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತದ (Fengal Cyclone) ಬಿಸಿ ಬೆಂಗಳೂರಿಗೂ ತಟ್ಟಿದೆ. ಬೆಂಗಳೂರಿನಲ್ಲಿ (Bengaluru)  ಜಿಟಿಜಿಟಿ ಮಳೆಯಾಗುತ್ತಿರುವ ಹಿನ್ನೆಲೆ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಹೈರಾಣಾಗಿದ್ದಾರೆ.

    ಮೆಜೆಸ್ಟಿಕ್, ಓಕಳಿಪುರಂ, ಮಾಗಡಿ ರೋಡ್ ಸುತ್ತಮುತ್ತ ಫುಲ್ ಟ್ರಾಫಿಕ್ ಜಾಮ್ (Traffic Jam) ಉಂಟಾಗಿದೆ. ಸುಮಾರು ಒಂದು ಗಂಟೆಯಿಂದ ಜಾಮ್ ಉಂಟಾಗಿದ್ದು, ಕಿಲೋ ಮೀಟರ್‌ಗಟ್ಟಲೇ ವಾಹನಗಳು ನಿಂತಲ್ಲೇ ನಿಂತಿವೆ. ಮಳೆ ಮಧ್ಯೆ ವಾಹನ ಸವಾರರು ಟ್ರಾಫಿಕ್‌ನಲ್ಲಿ ಸಿಲುಕಿದ್ದಾರೆ. ಇದನ್ನೂ ಓದಿ: ಸಿಎಂ, ಡಿಸಿಎಂ ನಿಜವಾದ ಕಾನೂನು ಪಾಲಕರಾಗಿದ್ರೆ ನಾನು ಸಾಷ್ಟಾಂಗ ನಮಸ್ಕಾರ ಮಾಡ್ತೇನೆ – ಅಶ್ವಥ್ ನಾರಾಯಣ

    ಇನ್ನು ಹೆಬ್ಬಾಳ ಫ್ಲೈಓವರ್ ಮಾರ್ಗದಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ವಿಮಾನ ನಿಲ್ದಾಣದಿಂದ ಹೆಬ್ಬಾಳದ ಕಡೆ ವಾಹನಗಳು ನಿಧಾನಗತಿಯಲ್ಲಿ ಸಾಗುತ್ತಿವೆ. ಬೆಂಗಳೂರು ನಗರದಲ್ಲಿ ಮುಂದಿನ 48 ಗಂಟೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಆನೇಕಲ್ | ಸಿಲಿಂಡರ್ ಸ್ಫೋಟಗೊಂಡು ಮೂವರು ಕಾರ್ಮಿಕರು ಗಂಭೀರ

    ಎರಡು ದಿನದಿಂದ ಬಿಸಿಲು ಕಾಣದ ಸಿಲಿಕಾನ್ ಸಿಟಿ ಜನರಿಗೆ ಮತ್ತಷ್ಟು ಮಳೆಯ ಕಾಟ ಎದುರಾಗಲಿದ್ದು, ಮುಂದಿನ 2-3 ದಿನ ಇದೇ ಪರಿಸ್ಥಿತಿ ಮುಂದುವರೆಯುವ ಸಾಧ್ಯತೆ ಇದೆ. ಅಲ್ಲದೇ ರಾಜ್ಯದ ಕೆಲವು ಜಿಲ್ಲೆಗಳಿಗೆ ಭಾರೀ ಮಳೆಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಮೈಸೂರು, ಚಾಮರಾಜನಗರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮಂಡ್ಯ, ಕೋಲಾರ, ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಭಾರೀ ಮಳೆಯಾಗುವ ಸಂಭವವಿದೆ. ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡು ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ಕೊಟ್ಟಿದೆ. ಇದನ್ನೂ ಓದಿ: ಉತ್ತರ ಕನ್ನಡ| ಬಲೂನ್ ಊದುವಾಗ ಗಂಟಲಲ್ಲಿ ಸಿಲುಕಿ 7ನೇ ತರಗತಿ ವಿದ್ಯಾರ್ಥಿ ದುರ್ಮರಣ

    ಭಾನುವಾರ ಎಲ್ಲೆಲ್ಲಿ ಎಷ್ಟೆಷ್ಟು ಮಳೆಯಾಗಿದೆ?
    ಚಾಮರಾಜನಗರ: 89 ಎಂಎಂ
    ರಾಮನಗರ: 69 ಎಂಎಂ
    ಮಂಡ್ಯ: 41 ಎಂಎಂ
    ಬೆಂಗಳೂರು ಗ್ರಾಮಾಂತರ: 38 ಎಂಎಂ
    ಕೋಲಾರ: 37 ಎಂಎಂ
    ಮೈಸೂರು: 36 ಎಂಎಂ
    ತುಮಕೂರು: 34 ಎಂಎಂ
    ಚಿಕ್ಕಬಳ್ಳಾಪುರ: 38 ಎಂಎಂ
    ಕೊಡಗು: 26 ಎಂಎಂ
    ಬೆಂಗಳೂರು: 22 ಎಂಎ

  • ತಮಿಳುನಾಡು, ಆಂಧ್ರದಲ್ಲಿ ಫೆಂಗಲ್ ಅಬ್ಬರ – ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಎಚ್ಚರಿಕೆ

    ತಮಿಳುನಾಡು, ಆಂಧ್ರದಲ್ಲಿ ಫೆಂಗಲ್ ಅಬ್ಬರ – ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಎಚ್ಚರಿಕೆ

    -ಜೋರು ಮಳೆ, ಚಳಿಗೆ ಬೆಂಗಳೂರು ಥಂಢಾ

    ಬೆಂಗಳೂರು: ನೈರುತ್ಯ ಬಂಗಾಳಕೊಲ್ಲಿಯಲ್ಲಿ ಕಾಣಿಸಿಕೊಂಡಿರುವ ಫೆಂಗಲ್ ಚಂಡಮಾರುತದ (Fengal Cyclone) ಅಬ್ಬರ ರಾಜ್ಯದ ಮೇಲೂ ಪ್ರಭಾವ ಬೀರುತ್ತಿದ್ದು, ಮುಂದಿನ ಮೂರ್ನಾಲ್ಕು ದಿನ ಬೆಂಗಳೂರು (Bengaluru) ಸೇರಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳನ್ನು ಕಾಡುವ ಸಾಧ್ಯತೆ ಇದೆ.

    ಫೆಂಗಲ್ ಚಂಡಮಾರುತ ಶನಿವಾರ ಸಂಜೆ ವೇಳೆ ತಮಿಳುನಾಡು ಕರಾವಳಿಗೆ ಅಪ್ಪಳಿಸಿದ್ದು, ಚೆನ್ನೈ ಸೇರಿದಂತೆ ತಮಿಳುನಾಡಿನ ಹಲವು ನಗರಗಳು ಹಾಗೂ ಆಂಧ್ರಪ್ರದೇಶದ ಕರಾವಳಿ ಮತ್ತು ರಾಯಲಸೀಮಾ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಈ ಭಾಗದ ರಸ್ತೆಗಳಲ್ಲಿ ನೀರು ನಿಂತಿದೆ. ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿ ಜನ ಪರದಾಡಿದ್ದಾರೆ. ವಸತಿ ಪ್ರದೇಶಗಳು, ಆಸ್ಪತ್ರೆಗಳಿಗೂ ನೀರು ನುಗ್ಗಿ ತೊಂದರೆಯಾಗಿದೆ. ಈ ಮಧ್ಯೆ ಫೆಂಗಲ್ ಅಬ್ಬರ ರಾಜ್ಯದ ಕೆಲ ಜಿಲ್ಲೆಗಳ ಮೇಲೂ ಪ್ರಭಾವ ಬೀರುವ ಸಾಧ್ಯತೆ ಇದ್ದು, ಶನಿವಾರದಿಂದಲೇ ಬದಲಾದ ವಾತಾವರಣ ರಾಜ್ಯದ ಜಿಲ್ಲೆಗಳ ಜನರನ್ನು ಕಾಡತೊಡಗಿದೆ. ಇದನ್ನೂ ಓದಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷ ದೀಪೋತ್ಸವಕ್ಕೆ ಅದ್ದೂರಿ ತೆರೆ – ಲಕ್ಷಾಂತರ ಭಕ್ತರು ಸಾಕ್ಷಿ

    ಚಂಡಮಾರುತದ ಎಫೆಕ್ಟ್ ಮುಂದಿನ ಮೂರ್ನಾಲ್ಕು ದಿನ ರಾಜ್ಯ ರಾಜಧಾನಿ ಸೇರಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಪರಿಣಾಮ ಬೀರುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಕೆಲವೆಡೆ ಭಾನುವಾರ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗೆ ‘ಯೆಲ್ಲೋ ಅಲರ್ಟ್’ ನೀಡಲಾಗಿದ್ದು, ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದಿದೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಾಮರಾಜನಗರ, ತುಮಕೂರು ಮತ್ತು ಕೊಡಗು ಜಿಲ್ಲೆಯ ಕೆಲ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ. ಮೈಸೂರು ಹಾಗೂ ಕೊಡಗು ಜಿಲ್ಲೆಗೆ ಸೋಮವಾರ ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಮಂಡ್ಯ, ರಾಮನಗರ ಹಾಗೂ ಚಾಮರಾಜನಗರ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಮಂಗಳವಾರವೂ ಈ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಭಾರೀ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: ಜೆಡಿಎಸ್ ತೊರೆದು ಬಿಜೆಪಿ ಸೇರಿದ ಮಾಜಿ ಎಂಎಲ್‌ಸಿ ಘೋಟ್ನೇಕರ್

    ಇನ್ನೂ ಚಂಡಮಾರುತದ ಎಫೆಕ್ಟ್ ಸದ್ಯ ಬೆಂಗಳೂರಿಗೂ ತಟ್ಟುವ ಸಾಧ್ಯತೆ ಇದೆ. ಒಂದು ಕಡೆ ಮಳೆ ಆಗುವಂತಹ ವಾತವರಣ ಇದ್ದರೆ, ಮತ್ತೊಂದೆಡೆ ಚಳಿ ವಾತವರಣ ಹೆಚ್ಚಾಗುವ ಸಾಧ್ಯತೆ ಇದೆ. ಮುಂದಿನ ಮೂರು ದಿನ ನಗರದಲ್ಲಿ ಕೂಲ್ ಕೂಲ್ ವೆದರ್ ಮುಂದುವರೆಯುವ ಬಗ್ಗೆ ಹವಾಮಾನ ಇಲಾಖೆ ಕೂಡ ಮುನ್ಸೂಚನೆ ನೀಡಿದೆ. ಇದರ ಮಧ್ಯೆ ಮಳೆ ಸೂಚನೆ ಹಿನ್ನೆಲೆ ಬಿಬಿಎಂಪಿ ಕೂಡ ಅಲರ್ಟ್ ಆಗಿದ್ದು, ಮುಂಜಾಗ್ರತ ಕ್ರಮಗಳ ಕೈಗೊಳ್ಳಲು ಬಿಬಿಎಂಪಿ ಕಮಿಷನರ್ ಸೂಚಿಸಿದ್ದಾರೆ. ಜೊತೆಗೆ ಮುಂದಿನ ಮೂರ್ನಾಲ್ಕು ದಿನ ಅಧಿಕಾರಿಗಳ ರಜೆ ಕೂಡ ಕ್ಯಾನ್ಸಲ್ ಮಾಡಲಾಗಿದ್ದು, ನಿಯಮ ಉಲ್ಲಂಘನೆಯಾದರೆ ಕ್ರಮದ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ನಮ್ಮ ಮಠ-ಮಾನ್ಯಗಳ ಜೀರ್ಣೋದ್ಧಾರಕ್ಕೆ ಆ ಮುಲ್ಲಾಗಳಿಂದ ಹಣ ತೆಗೆದುಕೊಳ್ಳಬೇಡಿ: ಯತ್ನಾಳ್