ಮಂಡ್ಯ: ಕಾರ್ಯಕ್ರಮದ ನಡುವೆ ರಸಗೊಬ್ಬರ ಕೇಳಿದ್ದಕ್ಕೆ ಕೃಷಿ ಸಚಿವ ಚಲುವರಾಯಸ್ವಾಮಿ (Chaluvarayaswamy) ಅವರು ವೇದಿಕೆಯಲ್ಲೇ ಕೆಂಡಾಮಂಡರಾದ ಪ್ರಸಂಗ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆಯಿತು.
ಬಿತ್ತಿನೆ ರಾಗಿ ವಿತರಣೆ ಕಾರ್ಯಕ್ರಮದಲ್ಲಿ ಸಚಿವರು ಭಾಷಣ ಮಾಡುತ್ತಿದ್ದರು. ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳ ಕುರಿತು ಭಾಷಣ ಮಾಡುತ್ತಿದ್ದ ವೇಳೆ, ರೈತರೊಬ್ಬರು (Farmer) ಮೊದಲು ರಸಗೊಬ್ಬರ ಕೊಡುವಂತೆ ಕೇಳಿದರು. ಅಲ್ಲದೇ ಮಾತಿಗೆ ಮಾತು ಬೆಳೆಸಿ ಸಚಿವರ ಜೊತೆಗೆ ರೈತ ವಾಗ್ವಾದಕ್ಕೆ ಇಳಿದಿದ್ದರು. ಈ ವೇಳೆ ಕೋಪಗೊಂಡ ಸಚಿವರು ರೈತನಿಗೆ ವೇದಿಕೆಯಲ್ಲೇ ನಿಂತು ಗದರಿದರು. ಮಾತು ಕೇಳಲು ಇಷ್ಟ ಇಲ್ಲದಿದ್ರೆ ಹತ್ತಿ ಕೊಡಿ, ಇಲ್ಲ ಅಂದ್ರೆ ಟವೆಲ್ ಸುತ್ತಿಕೊಳ್ಳಲಿ. ನಾನು ಇಲ್ಲಿ ಚೌಕಾಸಿ ಮಾಡೋದಕ್ಕೆ ಬಂದಿಲ್ಲ. ಕರೆಕ್ಟಾಗಿ ಕೇಳಿದ್ರೆ ನಾನು ಕರೆಕ್ಟಾಗಿ ಹೇಳ್ತೀನಿ. ಪ್ರತೀ ಮನೆಗೆ ತಿಂಗಳಿಗೆ 2 ಸಾವಿರ ಕೊಡ್ತಿದ್ದೀವಿ. ವರ್ಷಕ್ಕೆ ನಾಗಮಂಗಲಕ್ಕೆ 200 ಕೋಟಿ ಕೊಡ್ತಿದ್ದೀವಿ. ತಾಲ್ಲೂಕು ಪಂಚಾಯತಿ ಬಿಲ್ಡಿಂಗ್ ಕಟ್ಟಿದ್ದು ಯಾರು? ನಾಗಮಂಗಲಕ್ಕೆ ಕೆಇಬಿ ಆಫೀಸ್ ತಂದಿದ್ದು ಯಾರು? ಎಂದೆಲ್ಲ ರೈತನ ಮೇಲೆ ಗದರಿದರು.
ನವದೆಹಲಿ: ಕೇಂದ್ರ ಸರ್ಕಾರ ರಸಗೊಬ್ಬರ ಕಳುಹಿಸಿಲ್ಲ ಎಂಬ ರಾಜ್ಯ ಸರ್ಕಾರದ ಟೀಕೆಯ ಬೆನ್ನಲ್ಲೇ ಕರ್ನಾಟಕದಲ್ಲಿ (Karnataka) ರಸಗೊಬ್ಬರದ ಅಭಾವವಿಲ್ಲ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಖಾತೆಯ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಹೇಳಿದ್ದಾರೆ.
ಕೇಂದ್ರ ಸರ್ಕಾರದಿಂದ ಸರಬರಾಜು ಆಗಿರುವ ರಸಗೊಬ್ಬರಗಳಲ್ಲಿ 1.65 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರವನ್ನು ಸಂಗ್ರಹಣೆ ಮಾಡಲಾಗಿದೆ. ರೈತರಿಗೆ (Farmers) ಬೇಕಾದ ರಸಗೊಬ್ಬರಗಳನ್ನು ರಾಜ್ಯ ಸರ್ಕಾರಕ್ಕೆ ಈಗಾಗಲೇ ನೀಡಲಾಗಿದ್ದು, ಸರಿಯಾದ ಕ್ರಮದಲ್ಲಿ ಬಳಸಬೇಕಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬಿಜೆಪಿಯವರಿಗೆ ಧಮ್ಮು-ತಾಕತಿದ್ರೆ ಕೇಂದ್ರದಿಂದ ಯೂರಿಯಾ ಕೊಡಿಸಲಿ – ಚಲುವರಾಯಸ್ವಾಮಿ
ಕರ್ನಾಟಕದಲ್ಲಿ ರಸಗೊಬ್ಬರದ ಅಭಾವವಿಲ್ಲಾ. ಕೇಂದ್ರ ಸರ್ಕಾರದಿಂದ ಸರಬರಾಜು ಆಗಿರುವ ರಸಗೊಬ್ಬರಗಳಲ್ಲಿ 1.65 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರವನ್ನು ಸಂಗ್ರಹಣೆ ಮಾಡಲಾಗಿದೆ. ರೈತರಿಗೆ ಬೇಕಾದ ರಸಗೊಬ್ಬರಗಳನ್ನು ರಾಜ್ಯ ಸರ್ಕಾರಕ್ಕೆ ಈಗಾಗಲೇ ನೀಡಲಾಗಿದ್ದು, ಸರಿಯಾದ ಕ್ರಮದಲ್ಲಿ ಬಳಸಬೇಕಿದೆ. ಇನ್ನೂ ರಸಗೊಬ್ಬರದ ಬೇಡಿಕೆ ಹೆಚ್ಚಿದ್ದು, ಅಗತ್ಯ… pic.twitter.com/VPJmpJiQzn
ರಸಗೊಬ್ಬರದ ಬೇಡಿಕೆ ಹೆಚ್ಚಿದ್ದು, ಅಗತ್ಯ ರಸಗೊಬ್ಬರಗಳನ್ನು ಕರ್ನಾಟಕಕ್ಕೆ ಸರಬರಾಜು ಮಾಡುವಂತೆ ಕೋರಿ ಇಂದು ರಾಜ್ಯದ ಎಲ್ಲಾ ಬಿಜೆಪಿ ಸಂಸದರು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರಗಳ ಸಚಿವರಾದ ಜೆಪಿ ನಡ್ಡಾ ಅವರನ್ನು ಭೇಟಿಯಾಗಿ ಮನವಿಯನ್ನು ಸಲ್ಲಿಸಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಚಿನ್ನಸ್ವಾಮಿ ಕಾಲ್ತುಳಿತ ಕೇಸ್ – ನಾಲ್ವರು ಪೊಲೀಸ್ ಅಧಿಕಾರಿಗಳ ಅಮಾನತು ಆದೇಶ ರದ್ದು
ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ದೇಶದ ರೈತರ ಬೆನ್ನೆಲುಬಾಗಿ ನಿಂತಿದ್ದು, ಎಂತಹದ್ದೇ ಸಮಯದಲ್ಲೂ ರೈತರ ಹಿತ ಕಾಪಾಡುವುದು ನಮ್ಮ ಸರ್ಕಾರದ ಧ್ಯೇಯವಾಗಿದೆ. ಸಂಸದರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರಗಳ ಸಚಿವರಾದ ಜೆಪಿ ನಡ್ಡಾ ಅವರಿಗೆ ಅನಂತ ಧನ್ಯವಾದಗಳು ಎಂದು ಸಾಮಾಜಿಕ ಜಾಲತಾಣದಲ್ಲಿ ಜೋಶಿ ಬರೆದಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ತಲೆದೋರಿರುವ ರಸಗೊಬ್ಬರ (Fertilizer) ಅಭಾವ ವಿರುದ್ಧ ಸೋಮವಾರ (ಜು.28) ರಾಜ್ಯಾದ್ಯಂತ ಬಿಜೆಪಿ ಹೋರಾಟ ಹಮ್ಮಿಕೊಂಡಿದೆ. ಬೆಂಗಳೂರಿನಲ್ಲಿ ಮಾತಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ಸರ್ಕಾರದ ವಿರುದ್ಧ ಹೋರಾಟ ಮಾಡೋದಾಗಿ ಘೋಷಿಸಿದರು.
ಬೆಂಗಳೂರು (Bengaluru) ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ರೈತ ಮೋರ್ಚಾ ವತಿಯಿಂದ ಬಿಜೆಪಿಯಿಂದ ಹೋರಾಟ ಹಮ್ಮಿಕೊಳ್ಳಲಾಗಿದೆ. ಯಡಿಯೂರಪ್ಪ ಸಿಎಂ ಆಗಿದ್ದಾಗ ದಾಸ್ತಾನು ಇಡ್ತಿದ್ರು, ಅದಕ್ಕೆ ಅನುದಾನವೂ ಇಡ್ತಿದ್ರು. ಈ ಸರ್ಕಾರ ಕಾಪು ದಾಸ್ತಾನು ಅನುದಾನಕ್ಕೂ ಕಡಿತ ಮಾಡಿದೆ. ಸಾವಿರ ಕೋಟಿ ದಾಸ್ತಾನು ಅನುದಾನ 400 ಕೋಟಿಗೆ ಇಳಿಸಿದೆ ಎಂದು ಅಸಮಾಧಾನ ಹೊರಹಾಕಿದ್ರು. ಇದನ್ನೂ ಓದಿ: ಕೇಂದ್ರದಿಂದ 1.50 ಲಕ್ಷ ಟನ್ ರಸಗೊಬ್ಬರ ಕೊರತೆಯಾಗಿದೆ – ಸಚಿವ ಚಲುವರಾಯಸ್ವಾಮಿ
ಕೇಂದ್ರದಿಂದ 8 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಬಂದಿದೆ, ಏನಾಯ್ತು? ರಾಜ್ಯದಲ್ಲಿ ರಸಗೊಬ್ಬರ ಕಳ್ಳ ದಂಧೆ ನಡೆಯುತ್ತಿದೆ. ರಸಗೊಬ್ಬರ ಅಭಾವ, ನಕಲಿ ಕೃಷಿ ಬೀಜಗಳಿಗೆ ಸರ್ಕಾರವೇ ಹೊಣೆ. ನಕಲಿ ಬಿತ್ತನೆ ಬೀಜ, ರಸಗೊಬ್ಬರ ಅಭಾವ, ಯಾರು ಕಳ್ಳಸಾಗಣೆ ಮಾಡ್ತಿದ್ದಾರೆ? ಇದನ್ನು ಪತ್ತೆ ಹಚ್ಚಿ ಸರ್ಕಾರ ಕ್ರಮ ತಗೋಬೇಕು. ರಸಗೊಬ್ಬರ ಕಳ್ಳದಂಧೆಗೆ ಬ್ರೋಕರ್‌ಗಳು ಕಾರಣ. ಬ್ರೋಕರ್‌ಗಳಿಗೆ ಸಹಕಾರ ಕೊಡುವ ಕೆಲಸ ಸರ್ಕಾರದಲ್ಲಿ ಆಗ್ತಿದೆ ಎಂದು ಇದೇ ವೇಳೆ ವಿಜಯೇಂದ್ರ ಆರೋಪಿಸಿದರು. ಇದನ್ನೂ ಓದಿ: ರಾಜ್ಯದಲ್ಲಿ ಕಾಂಗ್ರೆಸ್ ನಾಯಕರ ಮ್ಯೂಸಿಕಲ್ ಚೇರ್ ಆಸೆಗೆ ರಾಜ್ಯದ ಜನ ಬಲಿಯಾಗುತ್ತಿದ್ದಾರೆ: ನಿಖಿಲ್
ಶಿವಮೊಗ್ಗ: ರಸಗೊಬ್ಬರ ಮತ್ತು ಬಿತ್ತನೆ ಬೀಜವನ್ನ ರೈತರಿಗೆ (Farmers) ಮಾರಾಟಗಾರರು ಹೆಚ್ಚಿನ ದರದಲ್ಲಿ ಮಾರಾಟ ಮಾಡುತ್ತಿರುವುದು ಕಂಡು ಬಂದಲ್ಲಿ ಪರವಾನಗಿ ರದ್ದುಪಡಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗೆಡೆ ಆದೇಶಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಮುಂಗಾರು (Mansoon) ಹಂಗಾಮು ಪೂರ್ವ ಸಿದ್ಧತಾ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಜಿಲ್ಲೆಯ ಉಪ ಕೃಷಿ ನಿರ್ದೇಶಕರು ಮತ್ತು ಸಹಾಯಕ ಕೃಷಿ ನಿರ್ದೇಶಕರಗಳು ಹಾಗೂ ಕೃಷಿ ಅಧಿಕಾರಿಗಳು (Agriculture) ಎಲ್ಲೆಲ್ಲಿ ಬಿತ್ತನೆ ಬೀಜಗಳು ಲಭ್ಯವಿರುತ್ತವೆಯೋ ಅಲ್ಲಿಂದ ಕೊರತೆ ಇರುವ ಕಡೆ ಪೂರೈಸಲು ಕ್ರಮವಹಿಸಬೇಕು. ಜೊತೆಗೆ ಎಲ್ಲಾ ಪರಿಕರಗಳನ್ನು ಗರಿಷ್ಟ ಮಾರಾಟ ದರದೊಳಗೆ ಮಾರಾಟ ಮಾಡುತ್ತಿರುವಂತೆ ನೋಡಿಕೊಳ್ಳಬೇಕು. ರೈತರಿಗೆ ರಸಗೊಬ್ಬರ ಮತ್ತು ಬಿತ್ತನೆ ಬೀಜಗಳನ್ನ ಹೆಚ್ಚಿನ ದರದಲ್ಲಿ ಮಾರಾಟ ಮಾಡಿದರೆ ಅಂತಹವರ ಪರವಾನಗಿಯನ್ನು ರದ್ದು ಪಡಿಸುವ ಬಗ್ಗೆ ಸೂಕ್ತ ಕ್ರಮ ವಹಿಸುವಂತೆ ಸೂಚಿಸಿದ್ದಾರೆ.
ಜಂಟಿ ಕೃಷಿ ನಿರ್ದೇಶಕಿ ಜಿ.ಸಿ ಪೂರ್ಣಿಮ ಅವರು ಮಾತನಾಡಿ, ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಜನವರಿಯಿಂದ ಇಲ್ಲಿಯವರೆಗೆ 199 ಮಿ.ಮೀ ವಾಡಿಕೆ ಮಳೆಯಾಗಿದ್ದು, ಶೇ. 61ರಷ್ಟು ಹೆಚ್ಚವರಿ ಮಳೆ ಅಗಿರುತ್ತದೆ. ಕಳೆದ ಒಂದು ವಾರದಿಂದ ಮಳೆ ಪ್ರಮಾಣ ಕಡಿಮೆಯಾದ ಪ್ರಯುಕ್ತ 2024-25ರ ಮುಂಗಾರು ಹಂಗಾಮಿನ ವಾಡಿಕೆ ವಿಸ್ತೀರ್ಣ 1,23,580 ಹೆಕ್ಟೇರ್‌ಗೆ ಕೇವಲ 400 ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬಿತ್ತನೆ ಕಾರ್ಯ ಪ್ರಗತಿಯಲ್ಲಿದೆ ಎಂದಿದ್ದಾರೆ. ಇದನ್ನೂ ಓದಿ: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ- ನಾಗೇಂದ್ರ ರಾಜೀನಾಮೆಗೆ ಸಿಎಂ ಸೂಚನೆ?
2024ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 1,23,580 ಹೆಕ್ಟೇರ್ ಬಿತ್ತನೆ ಪ್ರದೇಶಕ್ಕೆ 35,625 ಕ್ವಿಂಟಲ್ ಗಳಷ್ಟು ಬಿತ್ತನೆ ಬೀಜಗಳ ಅವಶ್ಯಕತೆ ಇದ್ದು ಮೇ 30ರ ವರೆಗೆ ವಿವಿಧ ಸಂಸ್ಥೆಗಳಲ್ಲಿ 24,744 ಕ್ವಿಂಟಲ್ ಬಿತ್ತನೆ ಬೀಜಗಳು ಲಭ್ಯವಿರುತ್ತದೆ. ರೈತ ಸಂಪರ್ಕ ಕೇಂದ್ರಗಳಲ್ಲಿ ಸಹಾಯಧನದ ಅಡಿ ವಿತರಿಸಲು 9,265 ಕಿಂಟಲ್‌ಗಳಿಗೆ ಅವಕಾಶವಿದ್ದು ಈಗಾಗಲೇ 11,820 ಕಿಂಟಲ್ ಗೆ ವಿವಿಧ ಸಂಸ್ಥೆಗಳಿಗೆ ಬೇಡಿಕೆಯನ್ನು ಸಲ್ಲಿಸಲಾಗಿದೆ. 1960 ಕ್ವಿಂಟಾಲ್ ಪೂರೈಕೆಯಾಗಿ 560 ಕ್ವಿಂಟಾಲ್ ವಿತರಣೆ ಆಗಿರುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ಜಿಲ್ಲೆಗೆ 2024-25ರ ಸಾಲಿನ ಮುಂಗಾರು ಹಂಗಾಮಿಗೆ 91,416 ಮೆಟ್ರಿಕ್ ಟನ್ ಪ್ರಮಾಣದ ವಿವಿಧ ಗ್ರೇಡ್‍ಗಳ ರಸಗೊಬ್ಬರಗಳ ಬೇಡಿಕೆಯಿತ್ತು. ಮೇ 31ರ ಅಂತ್ಯಕ್ಕೆ ಆರಂಭ ಶಿಲ್ಕು ಸೇರಿ ಸುಮಾರು 70,326 ಮೆ. ಟನ್ ಪ್ರಮಾಣದ ರಸಗೊಬ್ಬರಗಳು ಲಭ್ಯವಿದ್ದು ಅದರಲ್ಲಿ ಸುಮಾರು 18,135 ಟನ್ ಗಳಷ್ಟು ವಿತರಣೆಯಾಗಿದೆ. ಹಾಲಿ 52,191 ಮೆ. ಟನ್ ಪ್ರಮಾಣದ ರಸಗೊಬ್ಬರ ದಾಸ್ತಾನು ಇರುತ್ತದೆ. ಸದ್ಯಕ್ಕೆ ಯಾವುದೇ ರಸಗೊಬ್ಬರದ ಕೊರತೆ ಇರುವುದಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ವಾಲ್ಮೀಕಿ ನಿಗಮ ಭ್ರಷ್ಟಾಚಾರ ಕೇಸ್ – ಸಚಿವ ನಾಗೇಂದ್ರ ತಲೆದಂಡಕ್ಕೆ ವಿಜಯೇಂದ್ರ ಆಗ್ರಹ!
ರಾಜ್ಯದಲ್ಲಿ 2022-23ರಲ್ಲಿ 82.67 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. ಇದುವರೆಗೂ ಸುಮಾರು 1.30 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಪೂರ್ವ ಮುಂಗಾರು ಬಿತ್ತನೆ ಆಗಿದೆ. ರಾಜ್ಯದಲ್ಲಿ 5.30 ಲಕ್ಷ ಕ್ವಿಂಟಲ್ ಬಿತ್ತನೆ ಬೀಜ ಬೇಡಿಕೆಗೆ 8.65 ಲಕ್ಷ ಕ್ವಿಂಟಲ್ ಬಿತ್ತನೆ ಬೀಜ ಲಭ್ಯವಿದೆ. ರಾಜ್ಯಾದ್ಯಂತ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರಗಳ ಮೂಲಕ ಬಿತ್ತನೆ ಬೀಜ ವಿತರಣೆ ಮಾಡಲಾಗಿದೆ. ಮೇ 9ರವರೆಗೆ ರೈತ ಸಂಪರ್ಕ ಕೇಂದ್ರಗಳ ಮೂಲಕ 3505.8 ಕ್ವಿಂಟಾಲ್ ಬಿತ್ತನೆ ಬೀಜ ವಿತರಣೆ ಮಾಡಲಾಗಿದೆ. 2185.8 ಕ್ವಿಂಟಾಲ್‍ಗಳಷ್ಟು ಬಿತ್ತನೆ ಬೀಜ ಇನ್ನು ದಾಸ್ತಾನು ಇದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ರಸಗೊಬ್ಬರದ ಕೊರತೆಯೂ ಇಲ್ಲ. ಈವರೆಗೂ 2.7 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಮಾರಾಟ ಮಾಡಲಾಗಿದೆ. ಉಳಿದಂತೆ 7.15 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ನಮ್ಮ ಬಳಿ ಇದೆ ಅಂತ ಮಾಹಿತಿ ನೀಡಿದ್ದಾರೆ. ಡಿಎಪಿ 1.02 ಲಕ್ಷ ಮೆಟ್ರಿಕ್ ಟನ್, ಎಂ.ಇ.ಪಿ 0.20 ಲಕ್ಷ ಮೆಟ್ರಿಕ್ ಟನ್, ಕಾಂಪ್ಲೆಕ್ಸ್ 2.48ಲಕ್ಷ ಮೆಟ್ರಿಕ್ ಟನ್ ಹಾಗೂ ಯೂರಿಯಾ 3.45 ಲಕ್ಷ ಮೆಟ್ರಿಕ್ ಟನ್ ದಾಸ್ತಾನು ಇದೆ. ಇದನ್ನು ಮೀರಿ ಯಾರಾದರೂ ಕೃತಕ ಅಭಾವ ಸೃಷ್ಟಿಸಿದರೆ ಅವರ ಮೇಲೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದಿದ್ದಾರೆ. ಇದನ್ನೂ ಓದಿ: 10 ಲಕ್ಷ ನಿರಾಶ್ರಿತರು ಟರ್ಕಿಯಿಂದ ಸಿರಿಯಾಕ್ಕೆ ವಾಪಸ್ – ಎಡೋರ್ಗನ್
ಬೆಂಗಳೂರು: ನಕಲಿ ಬಿತ್ತನೆ ಬೀಜ ಮತ್ತು ನಕಲಿ ಗೊಬ್ಬರ ಮಾರಾಟ ಮಾಡುವ ಕಂಪನಿ ಹಾಗೂ ಮಾಲೀಕರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಎಚ್ಚರಿಕೆ ನೀಡಿದರು.
ಬಿಜೆಪಿ ಸದಸ್ಯ ರವಿಕುಮಾರ್ ಪ್ರಶ್ನೆಗೆ ಕೃಷಿ ಸಚಿವರ ಪರವಾಗಿ ಉತ್ತರ ನೀಡಿದ ಈಶ್ವರಪ್ಪ, ರೈತರಿಗೆ ಮೋಸ ಮಾಡುವ ಕಂಪನಿಗಳನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಎಚ್ಚರಿಕೆ ಕೊಟ್ಟರು.
ಬಿಜೆಪಿ ಸದಸ್ಯ ರವಿಕುಮಾರ್, ರಾಜ್ಯದಲ್ಲಿ ನಕಲಿ ಬೀಜಗಳ ಹಾವಳಿ ಹೆಚ್ಚಾಗಿದೆ. ಒಂದೇ ವರ್ಷದಲ್ಲಿ 8,500 ಕ್ವಿಂಟಾಲ್ ನಕಲಿ ಬೀಜ ಸಿಕ್ಕಿದೆ. ಕೃಷಿ ಇಲಾಖೆಯೇ ದಾಳಿ ಮಾಡಿ ಸುಮಾರು 500 ಕ್ವಿಂಟಾಲ್ ವಶ ಮಾಡಿಕೊಂಡಿದೆ. 12-15 ಕೋಟಿ ಮೊತ್ತ ಇದರ ಬೆಲೆಯಾಗಿದೆ. ನಕಲಿ ಹಾಗೂ ಅಕ್ರಮ ಬೀಜದಿಂದ ರೈತರಿಗೆ ಅನ್ಯಾಯವಾಗುತ್ತಿದೆ ಎಂದರು. ಇದನ್ನೂ ಓದಿ: ಓಬಿಸಿ ಮೀಸಲಾತಿ ಕೈ ಬಿಟ್ಟು ತಾಲೂಕು, ಜಿಲ್ಲಾ ಪಂಚಾಯತಿ ಚುನಾವಣೆ ನಡೆಸುವುದಿಲ್ಲ: ಈಶ್ವರಪ್ಪ
ಇಷ್ಟೆಲ್ಲಾ ಆದರೂ ಕೇವಲ 10 ಕೇಸ್‌ಗಳು ಮಾತ್ರ ಈ ವರ್ಷ ದಾಖಲಾಗಿವೆ. ಇದು ಸರಿಯಲ್ಲ. ಲೈಸೆನ್ಸ್ ಇಲ್ಲದೆ ಕಂಪನಿಗಳು ನಕಲಿ ಬೀಜ ಮಾರಾಟ ಮಾಡುತ್ತಿವೆ. ಓದಲು ಬಾರದ ರೈತರಿಗೆ ಕಂಪನಿಗಳು ಅನ್ಯಾಯ ಮಾಡುತ್ತಿವೆ. ಈ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ರವಿಕುಮಾರ್ ಒತ್ತಾಯ ಮಾಡಿದರು.
ಇದಕ್ಕೆ ಉತ್ತರ ನೀಡಿದ ಸಚಿವ ಈಶ್ವರಪ್ಪ, ನಕಲಿ ಬಿತ್ತನೆ ಬೀಜ ಮಾರಾಟ ಮಾಡುವುದು ಆಘಾತಕಾರಿ ವಿಷಯ. ರೈತರಿಗೆ ಮೋಸ ಮಾಡುವ ಯಾವುದೇ ಕಂಪನಿಗಳನ್ನು ಬಿಡುವುದಿಲ್ಲ. ಬಿತ್ತನೆ ಬೀಜ ಆಗಲಿ ಅಥವಾ ಗೊಬ್ಬರದಲ್ಲಿಯೇ ಆಗಲಿ ಯಾರೇ ಮೋಸ ಮಾಡಿದರೂ ಅಂತಹ ಕಂಪನಿ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ಎಷ್ಟೇ ಪ್ರಭಾವಿಗಳಾದರೂ ಯಾರನ್ನೂ ರಕ್ಷಣೆ ಮಾಡುವುದಿಲ್ಲ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಪಂಚರಾಜ್ಯಗಳ ಸೋಲು ಕಾಂಗ್ರೆಸ್‍ಗೆ ಬದಲಾವಣೆ ಆಗೋದಕ್ಕೆ ಪಾಠ: ಸತೀಶ್ ಜಾರಕಿಹೊಳಿ
ಈ ಬಗ್ಗೆ ಶೀಘ್ರವೇ ಕೃಷಿ ಇಲಾಖೆ, ಸಚಿವರ ಜೊತೆ ಪರಿಷತ್ ಸದಸ್ಯರ ಸಭೆ ಮಾಡಿ ಅಂತಹ ಕಂಪನಿಗಳ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳುವ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದು ತಿಳಿಸಿದರು.
ಮಂಡ್ಯ: ರಸಗೊಬ್ಬರ ತಯಾರಿಕೆಯ ಹೆಸರಿನಲ್ಲಿ ಸಲ್ಫ್ಯೂರಿಕ್ ಆಸಿಡ್ ಉತ್ಪಾದಿಸಿ, ವಿಷಾನಿಲ ಸೋರಿಕೆಯಾಗಿ ಲಕ್ಷಾಂತರ ರೂ. ಮೌಲ್ಯದ ಬೆಳೆ ಹಾನಿಯಾಗಿರುವ ಘಟನೆ ಮಂಡ್ಯದ ಕಾರೇಕಟ್ಟೆ ಗ್ರಾಮದಲ್ಲಿ ನಡೆದಿದೆ.
ಕೀರ್ತಿ ಕೆಮಿಕಲ್ ಫ್ಯಾಕ್ಟರಿ ಹೆಸರಿನ ರಸಗೊಬ್ಬರ ತಯಾರಿಕಾ ಘಟಕ ಗ್ರಾಮದ ಹೊರವಲಯದಲ್ಲಿ ಕೆಲ ದಿನಗಳಿಂದ ಅನುಮತಿ ಪಡೆಯದೇ ಸಲ್ಫ್ಯೂರಿಕ್ ಆ್ಯಸಿಡ್ ತಯಾರಿಸುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಹಾಗೆಯೇ ಸ್ಥಳೀಯ ರೈತರು ಕಾರ್ಖಾನೆಗೆ ಮುತ್ತಿಗೆ ಹಾಕಿ ಬಾಗಿಲು ಮುಚ್ಚಿಸಿದ್ದಾರೆ. ಇದನ್ನೂ ಓದಿ: ಪಾದಯಾತ್ರೆ ಕೇಸ್‍ಗೆ ಕೌಂಟರ್ ಕೊಡಲು ಕೈ ಪಾಳಯ ಸಿದ್ಧ
ಕಾರ್ಖಾನೆಯ ವಿಷಾನಿಲ ಸೋರಿಕೆಯಿಂದಾಗಿ 15 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ತೆಂಗು, ರಾಗಿ, ಹುರುಳಿ ಬೆಳೆಗಳು ನಾಶವಾಗಿದೆ. ಸುತ್ತಮುತ್ತಲ ಗ್ರಾಮದ ಕೆಲವರಿಗೆ ಉಸಿರಾಟದ ಸಮಸ್ಯೆಯೂ ಕಂಡುಬಂದಿದೆ ಎಂದು ನಷ್ಟಕ್ಕೊಳಗಾದ ಗ್ರಾಮಸ್ಥರು ಆರೋಪಿಸಿದ್ದಾರೆ. ಇದನ್ನೂ ಓದಿ: ಮದ್ಯಪಾನಕ್ಕೆ ಕರೆದೊಯ್ದು ಸ್ನೇಹಿತರಿಂದಲೇ ಯುವಕನ ಕತ್ತು ಕೊಯ್ದು ಕೊಲೆ
ಕಾರ್ಖಾನೆಯನ್ನು ಅನುಮತಿ ಪಡೆದೇ ಆರಂಭಿಸಿದ್ದೇವೆ ಎಂದು ಕೀರ್ತಿ ಕಾರ್ಖಾನೆಯ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ. ನಷ್ಟಕ್ಕೊಳಗಾದ ರೈತರಿಗೆ ಪರಿಹಾರ ನೀಡುತ್ತೇವೆ ಎಂದು ತಿಳಿಸಿದೆ. ಆದರೂ ಕಾರ್ಖಾನೆಯನ್ನು ಶಾಶ್ವತವಾಗಿ ಮುಚ್ಚುವಂತೆ ಸ್ಥಳೀಯ ರೈತರು ಆಗ್ರಹಿಸುತ್ತಿದ್ದಾರೆ.
ನವದೆಹಲಿ: ಹಿಂಗಾರು ಬೆಳೆಗಳಿಗೆ ರೈರಿಗೆ ಕೈ ಗೆಟುಕುವ ದರದಲ್ಲಿ ರಸಗೊಬ್ಬರ ಪೂರೈಸುವ ನಿಟ್ಟಿನಲ್ಲಿ ಕೇಂದ್ರ ಸಕಾರ ಫಾಸ್ಫೆಟಿಕ್ ಮತ್ತು ಪೊಟಾಸಿಕ್ ರಸಗೊಬ್ಬರಗಳಿಗೆ 28.655 ಕೋಟಿ ರೂಪಾಯಿ ಸಬ್ಸಿಡಿ ಘೋಷಣೆ ಮಾಡಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಿನ್ನೆ ನಡೆದ ಕ್ಯಾಬಿನೆಟ್ ಸಮಿತಿ ಸಭೆ 2021ರ ಅಕ್ಟೋಬರ್ ನಿಂದ 2022ರ ಮಾರ್ಚ್‍ವರೆಗೆ ಈ ಎರಡೂ ರಸಗೊಬ್ಬರಗಳ ಮೇಲಿನ ಸಬ್ಸಿಡಿ ನೀಡಲು ಸಮ್ಮತಿ ನೀಡಿದೆ.
ಡಿಎಪಿ 5716 ಕೋಟಿ ರೂ. ಹೆಚ್ಚುವರಿ ಸಬ್ಸಿಡಿ ನೀಡಲಾಗುತ್ತಿದೆ. ರೈತರು ಅತಿ ಹೆಚ್ಚು ಬಳಸುವ ಡಿಎಪಿಗೆ ಹೆಚ್ಚುವರಿ 5716 ಕೋಟಿ ರೂಪಾತಿ ನಷ್ಟು ವಿಶೇಷ ಸಬ್ಸಿಡಿ ಪ್ಯಾಕೇಜ್ ನೀಡಲು ನಿರ್ಧರಿಸಲಾಗಿದೆ. ಜೊತೆಗೆ ಕಬ್ಬು, ಭತ್ತ ಸೇರಿದಂತೆ ಇನ್ನಿತರ ಬೆಳೆಗಳಿಗೆ ಯಥೇಚ್ಚವಾಗಿ ಬಳಸಲಾಗುವ ಎನ್‍ಪಿಕೆಯ ಮೂರು ಮಾದರಿ ರಸಗೊಬ್ಬರಗಳಿಗೆ 837 ಕೋಟಿ ರೂಪಾಯಿ ವಿಶೇಷ ಪ್ಯಾಕೇಜ್ ಪ್ರಕಟಿಸಲಾಗಿದೆ. ಇದನ್ನೂ ಓದಿ: ಸಮಂತಾರಿಂದ ದೂರವಾಗ್ತಿದ್ದಂತೆ ಹೊಸ ಮನೆ ಖರೀದಿಸಿದ ನಟ ನಾಗಚೈತನ್ಯ
ಅಲ್ಲದೆ ಈ ಕ್ಯಾಬಿನೆಟ್ ಸಮಿತಿಯು ಮೊಲಾಸಸ್‍ನಿಂದ ಉತ್ಪತ್ತಿಯಾಗುವ ಪೊಟ್ಯಾಷ್‍ಅನ್ನು ಸಹ ನ್ಯೂಟ್ರಿಯೆಂಟ್ ಆಧಾರಿತ ಸಬ್ಸಿಡಿ ಮಾಡಿ ಸೇರಿಸಿಕೊಳ್ಳಲು ನಿರ್ಧರಿಸಲಾಗಿದೆ. ಮುಂಗಾರು ಆರಂಭವಾಗುವ ಜೂನ್ ತಿಂಗಳಿನಲ್ಲಿ ಕೇಂದ್ರ ಸರ್ಕಾರ, ಡಿಎಪಿ ಸೇರಿದಂತೆ ಇತರೆ ಯೂರಿಯಾಯೇತರ ರಸಗೊಬ್ಬರಗಳಿಗೆ 14.755 ಕೋಟಿ ರೂ. ನಷ್ಟು ಸಬ್ಸಿಡಿ ಬಿಡುಗಡೆ ಮಾಡಿತ್ತು. ಕೇಂದ್ರ ಸರ್ಕಾರ 2021-22ರಲ್ಲಿ ರಸಗೊಬ್ಬರಗಳಿಗೆ 79.600 ಕೋಟಿ ರೂಪಾಯಿ ಸಬ್ಸಡಿ ನೀಡಿತ್ತು. ಇದರ ಹೊರತಾಗಿ ಈಗ ಹೆಚ್ಚುವರಿ ಹಣವನ್ನು ನೀಡಿದೆ. ಇದನ್ನೂ ಓದಿ: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಬಹುಮಹಡಿ ಕಟ್ಟಡ ಕುಸಿತ- ತಪ್ಪಿದ ಭಾರೀ ಅನಾಹುತ
ಹಾಸನ: ಅಕ್ರಮವಾಗಿ ಯೂರಿಯಾ ರಸಗೊಬ್ಬರ ದಾಸ್ತಾನು ಮಾಡಿ, ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಹಿನ್ನೆಲೆ ಅಧಿಕಾರಿಗಳು ದಾಳಿ ನಡೆಸಿ ರಸಗೊಬ್ಬರ ಚೀಲ ವಶಪಡಿಸಿಕೊಂಡಿದ್ದಾರೆ.
ಜಿಲ್ಲೆಯ ಅರಸೀಕೆರೆ ತಾಲೂಕಿನ ಅಣ್ಣಾಯಕನಹಳ್ಳಿ, ಕೆಳಗಲಹಟ್ಟಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಗ್ರಾಮದ ಜಯಶಂಕರ್ ಅವರ ಮನೆಯ ಮುಂಭಾಗ ಯೂರಿಯಾ ರಸಗೊಬ್ಬರವನ್ನು ಹೆಚ್ಚಿನ ಬೆಲೆಗೆ ರೈತರಿಗೆ ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದೆ ಎಂಬ ದೂರು ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಸಹಾಯಕ ಕೃಷಿ ನಿರ್ದೇಶಕ ಅಶೋಕ್, ರಸಗೊಬ್ಬರ ನಿರೀಕ್ಷಕ ಪ್ರಭಾವತಿ ಮತ್ತು ಪೊಲೀಸರ ತಂಡ ದಾಳಿ ನಡೆಸಿ, 47 ಕೆ.ಜಿ. ತೂಕದ 97 ಯೂರಿಯಾ ಗೊಬ್ಬರದ ಚೀಲಗಳನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಚಿರು, ಮೇಘನಾ ಪುತ್ರ ಈಗ ‘ರಾಯನ್ ರಾಜ್ ಸರ್ಜಾ
ಘಟನೆಗೆ ಸಂಬಂಧಿಸಿದಂತೆ ಅಗತ್ಯ ವಸ್ತು ಕಾಯ್ದೆ 1955ರ ರಿತ್ಯ ಪ್ರಕರಣ ದಾಖಲಿಸಿ, ಆರೋಪಿ ಜಯಶಂಕರ್‍ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಳೆಗಾಲವಾದ್ದರಿಂದ ರೈತರಿಗೆ ಸಹಜವಾಗಿ ಗೊಬ್ಬರದ ಅವಶ್ಯಕತೆಯಿದೆ. ಹೀಗಾಗಿ ರಸಗೊಬ್ಬರದ ಕೃತಕ ಅಭಾವ ಸೃಷ್ಟಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಜಾಲ ಸದ್ದಿಲ್ಲದೆ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ಆಗಾಗ ಆರೋಪಗಳು ಕೇಳಿ ಬರುತ್ತಿವೆ. ಘಟನೆ ಸಂಬಂಧ ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾದಗಿರಿ: ಜಿಲ್ಲೆಯಲ್ಲಿ ಗೊಬ್ಬರದ ಏಜೆನ್ಸಿಗಳು ಸರ್ಕಾರ ನಿಗದಿ ಮಾಡಿದ ದರಕ್ಕಿಂತ ದುಬಾರಿ ಬೆಲೆಗೆ ರಸಗೊಬ್ಬರ ಮಾರಾಟ ಮಾಡಿ, ಅನ್ನದಾತರಿಗೆ ಮೋಸ ಮಾಡುತ್ತಿದ್ದ ದಂಧೆ ಬಯಲಾಗಿದೆ. ಕೃತಕ ಅಭಾವ ಸೃಷ್ಟಿ ಮಾಡಿ ಡಿಎಪಿ ಗೊಬ್ಬರವನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡುವುದರ ಜೊತೆಗೆ ನಕಲಿ ಬಿಲ್ ಗಳನ್ನು ನೀಡಿ ರೈತರಿಗೆ ವಂಚನೆ ಮಾಡುತ್ತಿದ್ದ ಕೃತ್ಯ ಬೆಳಕಿಗೆ ಬಂದಿದೆ.
ಒಂದು ಕಡೆ ಕೃಷಿ ಇಲಾಖೆ ಅಧಿಕಾರಿಗಳು ಡಿಎಪಿ ಗೊಬ್ಬರ ಕೊರತೆಯಿಲ್ಲ, ಯಾದಗಿರಿ ಜಿಲ್ಲೆಗೆ 4 ಸಾವಿರ ಟನ್ ಡಿಎಪಿ ಗೊಬ್ಬರ ಪೂರೈಕೆಯಾಗಿದೆ. ಸದ್ಯಕ್ಕೆ ಯಾವುದೇ ರಸಗೊಬ್ಬರ ಅಭಾವ ಇಲ್ಲ ಎನ್ನುತ್ತಿದ್ದಾರೆ. ಆದರೆ ಜಿಲ್ಲೆಯಲ್ಲಿ ರಸಗೊಬ್ಬರ ಮಾರಾಟ ಮಾಡುವ ಅಂಗಡಿಗಳ ಮಾಲೀಕರು ಡಿಎಪಿ ಗೊಬ್ಬರದ ಸ್ಟಾಕ್ ಇಲ್ಲವೆಂದು ಕೃತಕ ಅಭಾವ ಸೃಷ್ಟಿ ಮಾಡಿ, ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದಾರೆ. ಇದನ್ನೂ ಓದಿ: ಐಟಿ ಉದ್ಯೋಗಿಗಳಿಗೆ ಗದ್ದೆಯಲ್ಲಿ ನಾಟಿ ಕಾರ್ಯಾಗಾರ
ಕೇಂದ್ರ ಸರ್ಕಾರ ನಿಗದಿ ಮಾಡಿದಂತೆ ಪ್ರತಿ 50 ಕೆ.ಜಿ. ಡಿಎಪಿ ಗೊಬ್ಬರಕ್ಕೆ 1,200 ರೂ.ಗಳಂತೆ ಮಾರಾಟ ಮಾಡಬೇಕು. ಆದರೆ ಸರ್ಕಾರ ನಿಗದಿ ಮಾಡಿದ ದರಕ್ಕಿಂತ 300 ರೂ. ಹೆಚ್ಚಿನ ಹಣ ಪಡೆದು ಪ್ರತಿ 50 ಕೆ.ಜಿ. ರಸಗೊಬ್ಬರದ ಬ್ಯಾಗ್ ಗೆ 1,500 ರೂಪಾಯಿಗೆ ಮಾಲೀಕರು ಮಾರಾಟ ಮಾಡುತ್ತಿದ್ದಾರೆ. ಜಿಲ್ಲೆಯ ಶಹಾಪುರ ತಾಲೂಕಿನ ರಸ್ತಾಪುರ ಗ್ರಾಮದಲ್ಲಿ ಇಂತಹ ದಂಧೆ ಬೆಳಕಿಗೆ ಬಂದಿದ್ದು, ತೋಟೆಂದ್ರ ಎಂಬ ಎಜೆನ್ಸಿ ಹೆಸರಿನಲ್ಲಿರುವ ಅಂಗಡಿಯಲ್ಲಿ ಗೊಬ್ಬರದ ಕೃತಕ ಅಭಾವ ಸೃಷ್ಟಿ ಮಾಡಿ, ದುಬಾರಿ ಬೆಲೆಗೆ ಗೊಬ್ಬರ ಮಾರಾಟ ಮಾಡಿ, ನಕಲಿ ಬಿಲ್ ನೀಡಿ ರೈತರಿಗೆ ಮೋಸ ಮಾಡಲಾಗುತ್ತಿದೆ.