ಬೆಂಗಳೂರು: ವಿಶ್ವದಾದ್ಯಂತ ಈಗ ಫಿಫಾ ಫೀವರ್ (FIFA World Cup) ಜೋರಾಗಿದೆ. 2022ರ ಫಿಫಾ ಆ್ಯಂಥಮ್ ಸಾಂಗ್ ಸಹ ಕಾಲ್ಚೆಂಡಿನ ಆಟದ ಕ್ರೇಜ್ ಹೆಚ್ಚು ಮಾಡಿತ್ತು. ಅದರ ಜೊತೆಗೆ ಈಗ ಬೆಂಗಳೂರಲ್ಲೂ ಈ ಫಿಫಾ ಫಿವರ್ ಜೋರಾಗಿದೆ. ತಮ್ಮದೇ ಆ್ಯಂಥಮ್ ಸಾಂಗ್ ಮಾಡಿಕೊಂಡು ವಿದ್ಯಾರ್ಥಿಗಳು ಫುಟ್‍ಬಾಲ್ (Football) ಹಬ್ಬವನ್ನು ಸಂಭ್ರಮಿಸುತ್ತಿದ್ದಾರೆ.
ಕತಾರ್‌ನಲ್ಲಿ ಫಿಫಾ ವಿಶ್ವಕಪ್ ಶುರುವಾದ ಬೆನ್ನಲ್ಲೇ ಸಿಲಿಕಾನ್ ಸಿಟಿ (Bengaluru) ಜನರಲ್ಲೂ ಫುಟ್‍ಬಾಲ್ ಕ್ರೇಜ್ ಹೆಚ್ಚಿಸಿದೆ. ನಗರದ ದೊಮ್ಮಲೂರು ಬಳಿ ಇರುವ ಬಿಬಿಎಂಪಿ ಮೈದಾನದಲ್ಲಿ ನಡೆದ ಅಂತರ್ ಕಾಲೇಜು ಫುಟ್‍ಬಾಲ್ ಟೂರ್ನಮೆಂಟ್‍ಗೆ ಇಂಡಿಯನ್ ಪೀಲೆ ಎಂದೇ ಖ್ಯಾತಿ ಗಳಿಸಿರುವ ಭಾರತದ ಫುಟ್‍ಬಾಲ್ ದಂತಕತೆ ನಾರಾಯಣಸ್ವಾಮಿ ಉಲಘನಾಥನ್ ಆಗಮಿಸಿದ್ರು. ಈ ವೇಳೆ ವಿದ್ಯಾರ್ಥಿಗಳು ಸೇರಿ ಮಾಡಿದ ಆ್ಯಂಥಮ್ ಸಾಂಗ್ ಗಮನಸೆಳೆಯಿತು. ಬಳಿಕ ಕಾರ್ಯಕ್ರಮದಲ್ಲಿ ಮಾತನಾಡಿದ ನಾರಾಯಣಸ್ವಾಮಿ ಉಲಘನಾಥನ್, ನಾವು ಭಾರತವನ್ನು ಪ್ರತಿನಿಧಿಸುವ ಕಾಲದಲ್ಲಿ ಈಗ ನೋಡುವ ಫುಟ್‍ಬಾಲ್ ಕ್ರೇಜ್ ಇರಲಿಲ್ಲ. ಈಗ ನಮ್ಮ ಹುಡುಗರು ಫುಟ್‍ಬಾಲ್ ಬಗ್ಗೆ ಇಷ್ಟೊಂದು ಉತ್ಸಾಹದಿಂದಿರುವುದು ನೊಡೋಕೆ ಖುಷಿ ಆಗುತ್ತೆ. ಕರ್ನಾಟಕ ನನ್ನ ಎರಡನೇ ತವರು. ಇಲ್ಲಿ ಬರೋದು ಖುಷಿ ಆಗುತ್ತೆ ಎಂದಿದ್ದಾರೆ. ಇದನ್ನೂ ಓದಿ: ಒಂದೇ ಓವರ್‌ನಲ್ಲಿ 7 ಸಿಕ್ಸ್ ಸಿಡಿಸಿ ದಾಖಲೆ ಬರೆದ ಋತುರಾಜ್ ಗಾಯಕ್ವಾಡ್
ಕ್ರಿಕೆಟ್ ಅನ್ನೆ ಹಾಸಿಹೊದ್ದಿರುವ ಭಾರತದಲ್ಲಿ ಫುಟ್‍ಬಾಲ್ ಬಗ್ಗೆ ವಿದ್ಯಾರ್ಥಿಗಳಿಗೆ ಆಸಕ್ತಿಯಿದ್ರೂ ಸರಿಯಾದ ಅವಕಾಶಗಳ ಕೊರತೆಯಿದೆ. ಸರ್ಕಾರಗಳು ಫುಟ್‍ಬಾಲ್ ಬಗ್ಗೆಯೂ ಆಸಕ್ತಿ ತೋರಿದ್ರೇ ಭಾರತವೂ ಫುಟ್‍ಬಾಲ್‍ನಲ್ಲಿ ಮಿಂಚಬಹುದು. ಭಾರತದಲ್ಲಿ ಈಗಾಗಲೇ ಐಪಿಎಲ್ ಮಾದರಿಯಲ್ಲೇ ಫುಟ್‍ಬಾಲ್ ಲೀಗ್ ಕೂಡ ನಡೆಯುತ್ತಿದೆ. ಈ ಮೂಲಕ ಹೊಸ ಪ್ರತಿಭೆಗಳಿಗೆ ಅವಕಾಶ ಸಿಗುತ್ತಿದೆ. ಇನ್ನಷ್ಟು ಅವಕಾಶ ಸಿಕ್ಕರೆ ಭಾರತ ಕೂಡ ಫುಟ್‍ಬಾಲ್‍ನಲ್ಲಿ ವಿಶ್ವಮಟ್ಟದಲ್ಲಿ ಸದ್ದು ಮಾಡುವ ಸಾಧ್ಯತೆ ಇದೆ. ಇದನ್ನೂ ಓದಿ: ಮೊರೊಕ್ಕೊ ವಿರುದ್ಧ ಪಂದ್ಯ ಸೋತ ಬೆಲ್ಜಿಯಂ – ಅಭಿಮಾನಿಗಳಿಂದ ಹಿಂಸಾಚಾರ
Live Tv
[brid partner=56869869 player=32851 video=960834 autoplay=true]
ಜಕಾರ್ತ: ಈ ತಿಂಗಳ ಆರಂಭದಲ್ಲಿ ಕಾಲ್ತುಳಿತದಿಂದಾಗಿ (Stampede) 130 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದ ಇಂಡೋನೇಷ್ಯಾದ (Indonesia) ಫುಟ್‌ಬಾಲ್ ಕ್ರೀಡಾಂಗಣವನ್ನು (Football Stadium) ಕೆಡವಲು (Demolish) ನಿರ್ಧರಿಸಲಾಗಿದೆ.
ಇಂಡೋನೇಷ್ಯಾದ ಅಧ್ಯಕ್ಷ ಜೊಕೊ ವಿಡೋಡೋ (Joko Widodo) ಮಂಗಳವಾರ ವಿಶ್ವ ಫುಟ್‌ಬಾಲ್ ಆಡಳಿತ ಮಂಡಳಿ ಫಿಫಾದ (FIFA) ಮುಖ್ಯಸ್ಥ ಜಿಯಾನಿ ಇನ್‌ಫಾಂಟಿನೋ (Gianni Infantino) ಅವರನ್ನು ಭೇಟಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಕ್ರೀಡಾಂಗಣವನ್ನು ನೆಲಸಮಗೊಳಿಸುವುದಾಗಿ ತಿಳಿಸಿದ್ದಾರೆ. ಮಾತ್ರವಲ್ಲದೇ ಆ ಕ್ರೀಡಾಂಗಣವನ್ನು ಮರು ನಿರ್ಮಾಣ ಮಾಡುವುದಾಗಿ ಹೇಳಿದ್ದಾರೆ.
ಈ ತಿಂಗಳ ಆರಂಭದಲ್ಲಿ ಮಲಾಂಗ್‌ನಲ್ಲಿರುವ ಕಂಜುರುಹಾನ್ ಕ್ರೀಡಾಂಗಣದಲ್ಲಿ ಕಾಲ್ತುಳಿತ ಉಂಟಾಗಿ 130ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ಇದೀಗ ಆ ಕ್ರೀಡಾಂಗಣವನ್ನು ಕೆಡವಲು ನಿರ್ಧರಿಸಲಾಗಿದ್ದು, ಮತ್ತೆ ಅದನ್ನು ಫಿಫಾ ಮಾನದಂಡಗಳ ಪ್ರಕಾರ ಮರುನಿರ್ಮಾಣ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ತೀವ್ರ ಸ್ವರೂಪ ಪಡೆದ ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ- ನೂರಾರು ಹೋರಾಟಗಾರರ ಬಂಧನ
ಅಕ್ಟೋಬರ್ 1 ರಂದು ಮಲಾಂಗ್ ನಗರದಲ್ಲಿ ನಡೆದ ಫುಟ್‌ಬಾಲ್ ಪಂದ್ಯದ ಬಳಿಕ ಗಲಭೆ ಸಂಭವಿಸಿತ್ತು. ಈ ವೇಳೆ ಪೊಲೀಸರು ಸ್ಟೇಡಿಯಂನಲ್ಲಿ ಅಶ್ರುವಾಯು ಪ್ರಯೋಗಿಸಿದ್ದರು. ಜನಸಂದಣಿಯೂ ಹೆಚ್ಚಿದ್ದರಿಂದ ಸ್ಥಳದಲ್ಲಿ ಕಾಲ್ತುಳಿತ ಉಂಟಾಗಿ, ಪೊಲೀಸರು, ಮಕ್ಕಳು ಸೇರಿದಂತೆ 130ಕ್ಕೂ ಹೆಚ್ಚು ಜನರು ಸ್ಟೇಡಿಯಂನಲ್ಲಿ ಸಾವನ್ನಪ್ಪಿದ್ದರು.
ಅಂದು ಸ್ಟೇಡಿಯಂನಲ್ಲಿ ನಡೆದ ಫುಟ್‌ಬಾಲ್ ಪಂದ್ಯದಲ್ಲಿ ಸ್ಥಳೀಯ ತಂಡ ಅರೆಮಾ ಫುಟ್‌ಬಾಲ್ ಕ್ಲಬ್ ಅನ್ನು ಪ್ರತಿಸ್ಪರ್ಧಿ ತಂಡ ಪರ್ಸೆಬಾಯಾ ಸೋಲಿಸಿತ್ತು. ಇದರಿಂದ ಬೇಸರಗೊಂಡ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಿಚ್‌ಗೆ ನುಗ್ಗಿದ್ದರು. ಬಳಿಕ ಸಾಮೂಹಿಕ ಗಲಭೆ ಭುಗಿಲೆದ್ದಿತ್ತು. ಇದನ್ನೂ ಓದಿ: ಉಜ್ಜಯಿನಿ ದೇವಾಲಯದಲ್ಲಿ ರೀಲ್ಸ್ ಮಾಡಿದ್ದ ಯುವತಿಗೆ ಕಂಟಕ – ಕ್ರಮಕ್ಕೆ ಸೂಚಿಸಿದ ಗೃಹ ಸಚಿವ
Live Tv
[brid partner=56869869 player=32851 video=960834 autoplay=true]
ನವದೆಹಲಿ: ಅಖಿಲ ಭಾರತ ಫುಟ್‌ಬಾಲ್ ಫೆಡರೇಶನ್‍ನ (ಎಐಎಫ್‍ಎಫ್) ಅಧ್ಯಕ್ಷರಾಗಿ ಮೋಹನ್ ಬಗಾನ್ ತಂಡದ ಮಾಜಿ ಗೋಲ್ಕೀಪರ್ ಕಲ್ಯಾಣ್ ಚೌಬೆ ಆಯ್ಕೆಯಾಗಿದ್ದಾರೆ.
ನೂತನ ಅಧ್ಯಕ್ಷ ಪಟ್ಟಕ್ಕೆ ನಡೆದ ಚುನಾವಣೆಯಲ್ಲಿ ಭಾರತ ತಂಡದ ಮಾಜಿ ನಾಯಕ ಬೈಚುಂಗ್ ಭುಟಿಯಾ ಅವರನ್ನು ಸೋಲಿಸಿ ಕಲ್ಯಾಣ್ ಚೌಬೆ ಅಧ್ಯಕ್ಷ ಪಟ್ಟಕ್ಕೇರಿದ್ದಾರೆ. ಚೌಬೆ ಚುನಾವಣೆಯಲ್ಲಿ 33-1 ಅಂತರದಿಂದ ಗೆಲುವು ದಾಖಲಿಸಿದರು. ಈ ಮೂಲಕ 85 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ಆಟಗಾರರೊಬ್ಬರು ಫುಟ್ಬಾಲ್ ಫೆಡರೇಶನ್‍ನ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಚೌಬೆ ಬಿಜೆಪಿ ನಾಯಕರೂ ಆಗಿದ್ದು, ಪಶ್ಚಿಮ ಬಂಗಾಳದ ಕೃಷ್ಣನಗರ ಕ್ಷೇತ್ರದಿಂದ ಸ್ಪರ್ಧಿಸಿ ಸೋಲನುಭವಿಸಿದ್ದರು. ಇದನ್ನೂ ಓದಿ: ಭಾರತದ ಮೇಲೆ ಫಿಫಾ ಹೇರಿದ ಅಮಾನತು ತೆರವು
ಚುನಾವಣೆಯಲ್ಲಿ ಒಟ್ಟು 34 ರಾಜ್ಯಗಳು ಭಾಗವಹಿಸಿದ್ದವು, ಅದರಲ್ಲಿ ಬೈಚುಂಗ್ ಭುಟಿಯಾ ಕೇವಲ ಒಂದು ರಾಜ್ಯದ ಮತವನ್ನು ಪಡೆಯುವಲ್ಲಿ ಯಶಸ್ವಿಯಾದರು. ಫಿಫಾ ಇತ್ತೀಚೆಗೆ AIFF ಅನ್ನು ನಿಷೇಧಿಸಿತು. ಅಖಿಲ ಭಾರತ ಫುಟ್ಬಾಲ್ ಫೆಡರೇಶನ್‍ನಲ್ಲಿ ಮೂರನೇ ವ್ಯಕ್ತಿಯ ಹಸ್ತಕ್ಷೇಪವಿದೆ ಎಂದು ಫಿಫಾ ಆರೋಪ ಹೊರಿಸಿತ್ತು. ಎಐಎಫ್‍ಎಫ್‍ನ ಕಾರ್ಯನಿರ್ವಹಣೆಯನ್ನು ಮೇಲ್ವಿಚಾರಣೆ ಮಾಡಲು ಸರ್ವೋಚ್ಚ ನ್ಯಾಯಾಲಯವು ಆಡಳಿತಗಾರರ ಸಮಿತಿಯನ್ನು ರಚಿಸಿತ್ತು. ಇದನ್ನು FIFA ಮೂರನೇ ವ್ಯಕ್ತಿಯ ಹಸ್ತಕ್ಷೇಪ ಎಂದು ಪರಿಗಣಿಸಿ AIFF ಅನ್ನು ನಿಷೇಧಿಸಿತ್ತು. ಆಗ ಭಾರತ ಸರ್ಕಾರವು ಫಿಫಾದಿಂದ ನಿಷೇಧವನ್ನು ತೆರವುಗೊಳಿಸುವಂತೆ ಒತ್ತಾಯಿಸಿತ್ತು. ಜೊತೆಗೆ ಸಿಒಎ ತೆಗೆದುಹಾಕಿ, ಅವಧಿಗೆ ಮುಂಚಿತವಾಗಿ ಚುನಾವಣೆ ನಡೆಸಲು ಮುಂದಾಗಿತ್ತು. ಇದನ್ನೂ ಓದಿ: 6 ವರ್ಷಗಳ ಬಳಿಕ ಬೌಲಿಂಗ್ ಮಾಡಿದ ಕೊಹ್ಲಿ – 1 ಓವರ್ 6 ರನ್
ಪ್ರಫುಲ್ ಪಟೇಲ್ ಅಧಿಕಾರವಧಿ ಅಂತ್ಯ
ಈ ಹಿಂದೆ ಪ್ರಫುಲ್ ಪಟೇಲ್ ಎಐಎಫ್‍ಎಫ್ ಅಧ್ಯಕ್ಷರಾಗಿದ್ದರು. ಅವರು 2008 ರಿಂದ ಈ ಹುದ್ದೆಯಲ್ಲಿದ್ದರು. ಆ ಬಳಿಕ 2022ರಲ್ಲಿ ಸುಪ್ರೀಂಕೋರ್ಟ್ ಅವರನ್ನು ಹುದ್ದೆಯಿಂದ ತೆಗೆದುಹಾಕಲು ಆದೇಶಿಸಿತ್ತು. ಇದಾದ ನಂತರ AIFFನ ಸಮಸ್ಯೆಗಳು ಹೆಚ್ಚಾಗತೊಡಗಿದವು. ಫಿಫಾ ನಿಷೇಧದ ನಂತರ ಭಾರತವೂ ಅಂಡರ್-17 ಮಹಿಳಾ ವಿಶ್ವಕಪ್‍ಗೆ ಆತಿಥ್ಯ ವಹಿಸುವ ಬಗ್ಗೆ ಗೊಂದಲ ಏರ್ಪಟಿತ್ತು. ಆದರೆ ಈಗ ನಿಷೇಧವನ್ನು ತೆಗೆದುಹಾಕಲಾಗಿದ್ದು, ಮಹಿಳಾ ವಿಶ್ವಕಪ್ ಯಾವುದೇ ಆತಂಕವಿಲ್ಲದೆ ನಡೆಯಲಿದೆ.
Live Tv
[brid partner=56869869 player=32851 video=960834 autoplay=true]
ನವದೆಹಲಿ: ಅಖಿಲ ಭಾರತ ಫುಟ್ಬಾಲ್ ಫೆಡರೇಶನ್(ಎಐಎಫ್‌ಎಫ್) ಮೇಲಿನ ಅಮಾನತನ್ನು ವಿಶ್ವ ಫುಟ್‌ಬಾಲ್ ಆಡಳಿತ ಮಂಡಳಿ ಫಿಫಾ ಶುಕ್ರವಾರ ತೆರವುಗೊಳಿಸಿದೆ. ಈ ಕ್ರಮದಿಂದ 17 ವರ್ಷದೊಳಗಿನ ಮಹಿಳಾ ವಿಶ್ವಕಪ್ 2022ರ ಪಂದ್ಯದಲ್ಲಿ ಭಾರತ ಭಾಗವಹಿಸಲು ಸಾಧ್ಯವಾಗಲಿದೆ.
ಫಿಫಾ ಕೌನ್ಸಿಲ್‌ನ ಬ್ಯೂರೋ ಅನಗತ್ಯ ಮೂರನೇ ವ್ಯಕ್ತಿಯ ಪ್ರಭಾವದಿಂದಾಗಿ ಎಐಎಫ್‌ಎಫ್ ಅನ್ನು ಅಮಾನತುಗೊಳಿಸಿತ್ತು. ಇದೀಗ ಎಐಎಫ್‌ಎಫ್ ಮೇಲೆ ವಿಧಿಸಲಾಗಿದ್ದ ಅಮಾನತನ್ನು ತೆಗೆದುಹಾಕಲು ನಿರ್ಧರಿಸಿರುವುದಾಗಿ ಫಿಫಾ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಫಿಫಾ ಭಾರತವನ್ನು ಅಮಾನುತು ಮಾಡಿದ್ದು ಯಾಕೆ? ಇಲ್ಲಿ ಪೂರ್ಣ ಮಾಹಿತಿ
ತಾನು ಮಿಸಿದ್ದ ಆಡಳಿತಾಧಿಕಾರಿಗಳ ಸಮಿತಿಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು. ಐಎಫ್‌ಎಫ್‌ನ ದೈನಂದಿನ ವ್ಯವಹಾರಗಳು ಸದ್ಯಕ್ಕೆ 36 ರಾಜ್ಯ ಸಂಘಗಳು ಈಗಾಗಲೇ ಆಯ್ಕೆ ಮಾಡಿರುವ ಎಐಎಫ್‌ಎಫ್‌ನ ಪ್ರಧಾನ ಕಾರ್ಯದರ್ಶಿಯಿಂದ ನಿರ್ವಹಣೆಯಾಗಬೇಕು ಎಂದು ಎಂದು ಸುಪ್ರೀಂ ಸೂಚಿಸಿತ್ತು. ಸುಪ್ರೀಂ ಆದೇಶ ಪ್ರಕಟವಾದ ಬೆನ್ನಲ್ಲೇ ಎಐಎಫ್‌ಎಫ್ ತನ್ನ ಮೇಲೆ ವಿಧಿಸಲಾಗಿರುವ ಅಮಾನತನ್ನು ತೆರವುಗೊಳಿಸಬೇಕೆಂದು ಫಿಫಾ ಬಳಿ ಮನವಿ ಮಾಡಿತ್ತು. ಈ ಮನವಿಯನ್ನು ಪುರಸ್ಕರಿಸಿದ ಫಿಫಾ ಈಗ ಅಮಾನತನ್ನು ತೆರವುಗೊಳಿಸಿದೆ. ಇದನ್ನೂ ಓದಿ: ಅಂದುಕೊಂಡಂತೆ ನಡೆದರೆ ಮುಂದಿನ ಮೂರು ಭಾನುವಾರ ಇಂಡೋ-ಪಾಕ್ ಫೈಟ್ ಗ್ಯಾರಂಟಿ
Live Tv
[brid partner=56869869 player=32851 video=960834 autoplay=true]
ನವದೆಹಲಿ: ಭಾರತದ ಮೇಲೆ ವಿಶ್ವ ಫುಟ್‌ಬಾಲ್‌ನ ಆಡಳಿತ ಮಂಡಳಿ (ಫಿಫಾ) ಹೇರಿರುವ ಅಮಾನತನ್ನು ತೆರವುಗೊಳಿಸಲು ತಾನು ನೇಮಿಸಿದ್ದ ಆಡಳಿತಾಧಿಕಾರಿಗಳ ಸಮಿತಿಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.
ಅಖಿಲ ಭಾರತ ಫುಟ್ಬಾಲ್ ಫೆಡರೇಶನ್ (ಎಐಎಫ್‌ಎಫ್) ಕಾರ್ಯಕಾರಿ ಸಮಿತಿಯ ಆಯ್ಕೆ ಸಂಬಂಧ ಚುನಾವಣೆಯನ್ನು ಮುಂದೂಡುವಂತೆ ಕೇಂದ್ರ ಸರ್ಕಾರ ಮಾಡಿದ ಮನವಿಗೆ ಸುಪ್ರೀಂ ಸೋಮವಾರ ಒಪ್ಪಿಗೆ ನೀಡಿದೆ.
ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು ಎಐಎಫ್‌ಎಫ್‌ನ ದೈನಂದಿನ ವ್ಯವಹಾರಗಳು ಸದ್ಯಕ್ಕೆ 36 ರಾಜ್ಯ ಸಂಘಗಳು ಈಗಾಗಲೇ ಆಯ್ಕೆ ಮಾಡಿರುವ ಎಐಎಫ್‌ಎಫ್‌ನ ಪ್ರಧಾನ ಕಾರ್ಯದರ್ಶಿಯಿಂದ ನಿರ್ವಹಣೆಯಾಗಬೇಕು ಎಂದು ಎಂದು ಆದೇಶಿಸಿದೆ.
ಫಿಫಾ ಎಐಎಫ್‌ಎಫ್ ಮೇಲೆ ಹೇರಿದ ಅಮಾನತನ್ನು ತೆರವುಗೊಳಿಸಲು ಈ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ ಎಂದಿರುವ ಸುಪ್ರೀಂ ಭಾರತದಲ್ಲಿ 17 ವರ್ಷದೊಳಗಿನವರ ಮಹಿಳೆಯರ ವಿಶ್ವಕಪ್ ಆಯೋಜನೆಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.
ಫಿಫಾ ನ್ಯಾಯಾಲಯ ನೇಮಿಸಿದ ಸಮಿತಿಯ ಜೊತೆ ವ್ಯವಹಾರ ನಡೆಸುವುದಿಲ್ಲ. ಹೀಗಾಗಿ ಆಡಳಿತಾಧಿಕಾರಿಗಳ ಸಮಿತಿಯಯನ್ನು ಕೂಡಲೇ ರದ್ದುಗೊಳಿಸಬೇಕು. ಐಎಫ್‌ಎಫ್‌ನ ಪ್ರಧಾನ ಕಾರ್ಯದರ್ಶಿಯಿಂದ ವ್ಯವಹಾರ ನಡೆಸುವಂತೆ ನಿರ್ದೇಶನ ನೀಡಬೇಕು ಮತ್ತು ಈ ಕೂಡಲೇ ಚುನಾವಣಾ ಪ್ರಕ್ರಿಯೆ ನಡೆಸುವಂತೆ ಆದೇಶಿಸಬೇಕೆಂದು ಕೇಂದ್ರ ಸರ್ಕಾರ ಇಂದು ಸುಪ್ರೀಂ ಮುಂದೆ ಮನವಿ ಮಾಡಿತ್ತು.
ಮೇ 18 ರಂದು ಸುಪ್ರೀಂ ಕೋರ್ಟ್ ಅಖಿಲ ಭಾರತ ಫುಟ್ಬಾಲ್ ಫೆಡರೇಶನ್ ವಿಸರ್ಜಿಸಿತು ಮತ್ತು ದೇಶದಲ್ಲಿ ಫುಟ್‌ಬಾಲ್ ಕ್ರೀಡೆಯನ್ನು ನಿಯಂತ್ರಿಸಲು ಮೂರು ಸದಸ್ಯರ ಆಡಳಿತಾಧಿಕಾರಿಗಳ ಸಮಿತಿ(CoA) ನೇಮಿಸಿತು. ಸುಪ್ರೀಂ ಕೋರ್ಟ್ ನಿವೃತ್ತ ನ್ಯಾ. ಎಆರ್ ದವೆ, ಮಾಜಿ ಮುಖ್ಯ ಚುನಾವಣಾ ಆಯುಕ್ತ ಎಸ್ ವೈ ಖುರೇಷಿ ಮತ್ತು ಭಾರತೀಯ ಪುರುಷರ ಫುಟ್ಬಾಲ್ ತಂಡದ ಮಾಜಿ ನಾಯಕ ಭಾಸ್ಕರ್ ಗಂಗೂಲಿ ಅವರನ್ನು ಒಳಗೊಂಡ ಸಮಿತಿಯನ್ನು ರಚಿಸಿತ್ತು.
Live Tv
[brid partner=56869869 player=32851 video=960834 autoplay=true]
ನವದೆಹಲಿ: ಫಿಫಾ ಎಐಎಫ್‌ಎಫ್ ಮೇಲೆ ಹೇರಿರುವ ಅಮಾನತು ನಿರ್ಧಾರವನ್ನು ತೆಗೆದು ಭಾರತದಲ್ಲೇ 17 ವರ್ಷದ ಒಳಗಿನ ಮಹಿಳೆಯರ ವಿಶ್ವಕಪ್ ಆಯೋಜಿಸುವಂತೆ ಕ್ರಮ ವಹಿಸಿ ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ.
ವಿಶ್ವ ಫುಟ್‌ಬಾಲ್ ಆಡಳಿತ ಮಂಡಳಿ (ಫಿಫಾ) ಭಾರತೀಯ ಫುಟ್ಬಾಲ್ ಫೆಡರೇಶನ್ ಸಂಸ್ಥೆಯನ್ನು(ಎಐಎಫ್‌ಎಫ್) ಅಮಾನುತು ಮಾಡಿದ ಹಿನ್ನೆಲೆಯಲ್ಲಿ ಇಂದು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯಿತು.
ಫಿಫಾ ಅಮಾನತು ಮಾಡಿದ ನಿರ್ಧಾರವನ್ನು ಮಂಗಳವಾರ ಕೋರ್ಟ್ ಗಮನಕ್ಕೆ ಸಾಲಿಸಿಟರ್ ಜನರಲ್ ತಂದಿದ್ದರು. ಇಂದು ನ್ಯಾ. ಡಿವೈ ಚಂದ್ರಚೂಡ್, ಎಎಸ್ ಬೋಪಣ್ಣ ಮತ್ತು ಜೆಬಿ ಪಾರ್ದಿವಾಲಾ ನೇತೃತ್ವದ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಿತು.
ಈ ಸಂದರ್ಭದಲ್ಲಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಕೇಂದ್ರ ಸರ್ಕಾರ ಅಮಾನತು ನಿರ್ಧಾರ ತೆಗೆಯುವ ಸಂಬಂಧ ಫಿಫಾ ಜೊತೆ ಮಾತುಕತೆ ನಡೆಯುತ್ತಿದೆ. ಈಗಾಗಲೇ 2 ಬಾರಿ ಸಭೆ ನಡೆಸಿದೆ. ಮಾತುಕತೆ ಫಲಪ್ರದವಾಗುವ ಸಾಧ್ಯತೆಯಿದೆ. ಸಭೆಯ ಫಲಿತಾಂಶ ಬರುವವರೆಗೂ ಮುಂದಿನ ಸೋಮವಾರದವರೆಗೆ ವಿಚಾರಣೆ ನಡೆಸಬಾರದು ಎಂದು ಮನವಿ ಮಾಡಿದರು. ಇದನ್ನೂ ಓದಿ: ಫಿಫಾ ಭಾರತವನ್ನು ಅಮಾನುತು ಮಾಡಿದ್ದು ಯಾಕೆ? – ನಡೆಯುತ್ತಾ ಮಹಿಳಾ ವಿಶ್ವಕಪ್?
ಅಷ್ಟೇ ಅಲ್ಲದೇ ಸುಪ್ರೀಂ ನೇಮಿಸಿದ ಮೂರು ಸದಸ್ಯರ ಆಡಳಿತಾಧಿಕಾರಿಗಳ ಸಮಿತಿ(CoA) ಸಮಸ್ಯೆ ಬಗೆಹರಿಸಲು ಫಿಫಾ ಅಧಿಕಾರಿಗಳ ಜೊತೆ ಮಾತುಕತೆ ನಡೆಸುತ್ತಿದೆ ಎಂದು ಸಾಲಿಸಿಟರ್ ಜನರಲ್ ಕೋರ್ಟ್ ಗಮನಕ್ಕೆ ತಂದರು.
ಎಐಎಫ್‌ಎಫ್‌ನಲ್ಲಿ ಚುನಾವಣೆ ನಡೆಸಬೇಕು ಎಂದು ಕೋರಿ ಅರ್ಜಿ ಸಲ್ಲಿಸಿದ್ದ ಹಿರಿಯ ವಕೀಲ ರಾಹುಲ್ ಮೆಹ್ತಾ, ಮಾಜಿ ಎಐಎಫ್‌ಎಫ್ ಅಧ್ಯಕ್ಷ ಪ್ರಫುಲ್ ಪಟೇಲ್ ಅವರಿಂದಲೇ ಈ ಎಲ್ಲ ಘಟನೆಗಳು ಆಗುತ್ತಿದೆ ಎಂದು ವಾದಿಸಿದರು.
ಈ ಪ್ರಕರಣ ಬಗೆ ಹರಿಸುವ ಸಂಬಂಧ ಕೇಂದ್ರ ಸರ್ಕಾರದ ನಡೆಗೆ ಮೆಚ್ಚುಗೆ ಇದೆ ಎಂದ ಕೋರ್ಟ್ ಫಿಫಾ ಜೊತೆ ಮಾತುಕತೆ ನಡೆಸಿ ಅಮಾನತು ನಿರ್ಧಾರ ತೆಗೆಯಬೇಕು ಮತ್ತು ಭಾರತದಲ್ಲೇ ವಿಶ್ವಕಪ್ ಫುಟ್‌ಬಾಲ್ ಆಯೋಜನೆಯಾಗಬೇಕು ಎಂದು ಸೂಚಿಸಿತು.
ಸಾಲಿಸಿಟರ್ ಜನರಲ್ ಮನವಿಯ ಮೇರೆಗೆ ಕೋರ್ಟ್ ಮುಂದಿನ ಸೋಮವಾರಕ್ಕೆ ವಿಚಾರಣೆಯನ್ನು ಮುಂದೂಡಿತು.
Live Tv
[brid partner=56869869 player=32851 video=960834 autoplay=true]
ಐಪಿಎಲ್ ಭ್ರಷ್ಟಾಚಾರದಿಂದ ಭಾರತ ಈ ಹಿಂದೆ ಸುದ್ದಿಯಾಗಿತ್ತು. ಈಗ ಫುಟ್‌ಬಾಲ್‌ನಿಂದ ಮತ್ತೆ ವಿಶ್ವ ಮಟ್ಟದಲ್ಲಿ ಸುದ್ದಿಯಾಗಿದೆ. ವಿಶ್ವ ಫುಟ್‌ಬಾಲ್‌ನ ಆಡಳಿತ ಮಂಡಳಿ (ಫಿಫಾ) ಭಾರತೀಯ ಫುಟ್ಬಾಲ್ ಫೆಡರೇಶನ್ ಸಂಸ್ಥೆಯನ್ನು(ಎಐಎಫ್‌ಎಫ್) ಅಮಾನುತು ಮಾಡಿದೆ. ಭಾರತವನ್ನು ಫಿಫಾ ಅಮಾನತು ಮಾಡಿದ್ದು ಯಾಕೆ ಎಂಬುದರ ಬಗ್ಗೆ ಕಿರು ಮಾಹಿತಿ ಇಲ್ಲಿದೆ.
ಕ್ರೀಡಾ ಸಚಿವಾಲಯ ವ್ಯಾಪ್ತಿಯ ಅಡಿಯಲ್ಲಿ ಭಾರತೀಯ ಫುಟ್ಬಾಲ್ ಫೆಡರೇಶನ್ ಕೆಲಸ ಮಾಡುತ್ತಿದ್ದು ಇದರ ಅಧ್ಯಕ್ಷ ಸ್ಥಾನವನ್ನು ಎನ್‌ಸಿಪಿ ರಾಜ್ಯಸಭಾ ಸದಸ್ಯ ಪ್ರಫುಲ್ ಪಟೇಲ್ 2009 ರಿಂದ ಅಲಂಕರಿಸಿದ್ದಾರೆ. ಪ್ರಫುಲ್ ಪಟೇಲ್ ಈಗಾಗಲೇ 4 ವರ್ಷ ಅಧ್ಯಕ್ಷರಾಗಿದ್ದು ರಾಷ್ಟ್ರೀಯ ಕ್ರೀಡಾ ಸಂಹಿತೆಯ(ಎನ್‌ಎಸ್‌ಸಿ) ಪ್ರಕಾರ ಮತ್ತೆ ಅಧ್ಯಕ್ಷರಾಗಿ ಮುಂದುವರಿಯಲು ಸಾಧ್ಯವಿಲ್ಲ. ಎನ್‌ಎಸ್‌ಸಿ ಪ್ರಕಾರ ಗರಿಷ್ಠ 12 ವರ್ಷದವರೆಗೆ ಮಾತ್ರ ಅಧ್ಯಕ್ಷರಾಗಲು ಮಾತ್ರ ಅವಕಾಶವಿದೆ. ಆದರೆ ಪ್ರಫುಲ್ ಪಟೇಲ್ ಅವರು ಹೊಸ ಚುನಾವಣೆಗಳನ್ನು ನಡೆಸದೆಯೇ ಅಧಿಕಾರದಲ್ಲಿ ಮುಂದುವರಿದ್ದರು.
ಮೇ 18 ರಂದು ಸುಪ್ರೀಂ ಕೋರ್ಟ್ ಅಖಿಲ ಭಾರತ ಫುಟ್ಬಾಲ್ ಫೆಡರೇಶನ್ ವಿಸರ್ಜಿಸಿತು ಮತ್ತು ದೇಶದಲ್ಲಿ ಫುಟ್‌ಬಾಲ್ ಕ್ರೀಡೆಯನ್ನು ನಿಯಂತ್ರಿಸಲು ಮೂರು ಸದಸ್ಯರ ಆಡಳಿತಾಧಿಕಾರಿಗಳ ಸಮಿತಿ(CoA) ನೇಮಿಸಿತು. ಸುಪ್ರೀಂ ಕೋರ್ಟ್ ನಿವೃತ್ತ ನ್ಯಾ. ಎಆರ್ ದವೆ, ಮಾಜಿ ಮುಖ್ಯ ಚುನಾವಣಾ ಆಯುಕ್ತ ಎಸ್ ವೈ ಖುರೇಷಿ ಮತ್ತು ಭಾರತೀಯ ಪುರುಷರ ಫುಟ್ಬಾಲ್ ತಂಡದ ಮಾಜಿ ನಾಯಕ ಭಾಸ್ಕರ್ ಗಂಗೂಲಿ ಅವರನ್ನು ಒಳಗೊಂಡ ಸಮಿತಿಯನ್ನು ರಚಿಸಿತು. ಈ ಸಮಿತಿ ಸಭೆಗಳನ್ನು ನಡೆಸಿ 12 ಪರಿಚಿತ ಮುಖಗಳನ್ನು ಒಳಗೊಂಡ ಸಲಹಾ ಮಂಡಳಿಯನ್ನು ಸ್ಥಾಪಿಸಿತು. ಇದನ್ನೂ ಓದಿ: ಮೋದಿ, ಶಾ ಜೊತೆ ಗಂಗೂಲಿ ಚರ್ಚೆ – ರಾಜಕೀಯ ಇನ್ನಿಂಗ್ಸ್ ಆಡ್ತಾರಾ ದಾದಾ?
ಯಾವಾಗ ಆಡಳಿತಾಧಿಕಾರಿಗಳ ಸಮಿತಿ ಸಲಹಾ ಸಮಿತಿಯನ್ನು ಸ್ಥಾಪಿಸಿತ್ತೋ ಆವಾಗ ಸಮಸ್ಯೆ ಆರಂಭವಾಯಿತು. ಯಾಕೆಂದರೆ ಫಿಫಾ ತನ್ನ ಎಲ್ಲ ವ್ಯವಹಾರವನ್ನು ದೇಶಗಳ ಫುಟ್‌ಬಾಲ್ ಆಡಳಿತ ಮಂಡಳಿ ಜೊತೆ ನಡೆಸುತ್ತದೆ. ಈ ಹಿನ್ನೆಲೆಯಲ್ಲಿ ಫಿಫಾ ಎಐಎಫ್‌ಎಫ್‌ಗೆ ಕೂಡಲೇ ಚುನಾವಣೆ ನಡೆಸುವಂತೆ ಸೂಚಿಸಿತ್ತು. ಎಐಎಫ್‌ಎಫ್‌ನಲ್ಲಿ ಸೃಷ್ಟಿಯಾಗಿರುವ ಗೊಂದಲ ಬಗೆಹರಿಸಲು ಫಿಫಾ ಮತ್ತು ಏಷ್ಯನ್ ಫುಟ್‌ಬಾಲ್ ಒಕ್ಕೂಟ(ಎಎಫ್‌ಸಿ) ಜೂನ್‌ನಲ್ಲಿ ಗಡುವು ನೀಡಿತ್ತು. ಎಐಎಫ್‌ಎಫ್‌ಗೆ ಹೊಸದಾಗಿ ನಿಯಮಾವಳಿ ರೂಪಿಸಿ, ಜುಲೈ 31ರ ಒಳಗೆ ಅನುಮೋದನೆ ನೀಡಬೇಕು. ಸೆ.15ರ ಒಳಗಾಗಿ ಚುನಾವಣೆ ನಡೆಸಿ ಹೊಸ ಆಡಳಿತ ಮಂಡಳಿ ಅಸ್ತಿತ್ವಕ್ಕೆ ಬರಬೇಕು ಎಂದು ಫಿಫಾ ಸೂಚಿಸಿತ್ತು.
ಈ ಡೆಡ್‌ಲೈನ್ ನೀಡಿದ ಬೆನ್ನಲ್ಲೇ ಪ್ರಫುಲ್ ಪಟೇಲ್ ಅವರು ದೇಶದ 35 ಫುಟ್‌ಬಾಲ್ ಸದಸ್ಯ ಸಂಘಗಳೊಂದಿಗೆ ಸಭೆ ನಡೆಸಿದ್ದರು. ಸಭೆ ನಡೆಸಿದ ಹಿನ್ನೆಲೆಯಲ್ಲಿ ಆಡಳಿತಾಧಿಕಾರಿಗಳ ಸಮಿತಿ ಸುಪ್ರೀಂ ಕೋರ್ಟ್‌ನಲ್ಲಿ ಭಾರತದಲ್ಲಿ ನಿಗದಿಯಾಗಿರುವ 17 ವರ್ಷದ ಒಳಗಿನ ಮಹಿಳಾ ವಿಶ್ವಕಪ್‌ಗೆ ಸಮಸ್ಯೆ ಮಾಡಲೆಂದೇ ಈ ಸಭೆ ನಡೆಸಿದ್ದಾರೆ ಎಂದು ಆರೋಪಿಸಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ. ನ್ಯಾ ಡಿ.ವೈ.ಚಂದ್ರಚೂಡ್, ನ್ಯಾ. ಸೂರ್ಯಕಾಂತ್ ಮತ್ತು ನ್ಯಾ. ಎ.ಎಸ್. ಬೋಪಣ್ಣ ಅವರಿದ್ದ ಪೀಠದಲ್ಲಿ ಈ ಅರ್ಜಿ ಇದ್ದು ವಿಚಾರಣೆ ನಡೆಸಬೇಕಿದೆ.
ಅಮಾನತುಗೊಂಡಿದ್ದು ಯಾಕೆ?
ತಾನು ನೀಡಿದ ಡೆಡ್‌ಲೈನ್ ಒಳಗಡೆ ಚುನಾವಣೆ ನಡೆಸದ ಹಿನ್ನೆಲೆಯಲ್ಲಿ ಭಾರತೀಯ ಫುಟ್ಬಾಲ್ ಫೆಡರೇಶನ್ ಸಂಸ್ಥೆಯನ್ನು ಫಿಫಾ ಅಮಾನತುಗೊಳಿಸಿದೆ. ಫೆಡರೇಶನ್‌ನಲ್ಲಿ ಮೂರನೇ ವ್ಯಕ್ತಿಗಳ ಹಸ್ತಕ್ಷೇಪ, ಪ್ರಭಾವ ಆರೋಪದ ಮೇಲೆ ಫಿಫಾ ಈ ಕ್ರಮ ಕೈಗೊಂಡಿದೆ. ಇದು ತನ್ನ ಕಾನೂನುಗಳ ಗಂಭೀರ ಉಲ್ಲಂಘನೆ ಎಂದಿರುವ ಫಿಫಾ ಎಐಎಫ್‌ಎಫ್ ತನ್ನ ದೈನಂದಿನ ವ್ಯವಹಾರಗಳ ಸಂಪೂರ್ಣ ನಿಯಂತ್ರಣವನ್ನು ಮರಳಿ ಪಡೆಯುವವರೆಗೆ ಅಮಾನತು ಜಾರಿಯಲ್ಲಿರುತ್ತದೆ ಎಂದು ಹೇಳಿದೆ. ಚುನಾವಣೆ ನಡೆಸದ ಹಿನ್ನೆಲೆಯಲ್ಲಿ ಈ ಹಿಂದೆಯೂ ಹಲವು ದೇಶಗಳ ಸಂಸ್ಥೆಯನ್ನು ಫಿಫಾ ಅಮಾನುತು ಮಾಡಿತ್ತು.
ಪಂದ್ಯ ನಡೆಯುತ್ತಾ?
2020ರಲ್ಲಿ ಭಾರತದಲ್ಲಿ ನಡೆಯಬೇಕಿದ್ದ 17 ವರ್ಷದ ಒಳಗಿನ ಮಹಿಳಾ ವಿಶ್ವಕಪ್ ಪಂದ್ಯಾವಳಿಯನ್ನು ಕೋವಿಡ್ ಹಿನ್ನೆಲೆಯಲ್ಲಿ ರದ್ದುಗೊಳಿಸಲಾಗಿತ್ತು. ಈ ಬಾರಿ ಅಕ್ಟೋಬರ್ 11 ರಿಂದ 30ರ ವರೆಗೆ ಭಾರತದಲ್ಲಿ ಪಂದ್ಯಾವಳಿ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಇದೀಗ ಫಿಫಾ ಎಐಎಫ್‌ಎಫ್ ಅನ್ನು ಅಮಾನತುಗೊಳಿಸಿದ ಹಿನ್ನೆಲೆಯಲ್ಲಿ ಮುಂದೇನು ಎಂಬ ಪ್ರಶ್ನೆ ಎದ್ದಿದೆ.
ಮಂದೇನು?
ಭಾರತದ ಕ್ರೀಡಾ ಸಂಸ್ಥೆಗಳಲ್ಲಿ ರಾಜಕೀಯ ಲಾಬಿಗಳು ಹೆಚ್ಚಿರುವುದು ಎಲ್ಲರಿಗೂ ತಿಳಿದ ವಿಚಾರ. ಐಪಿಎಲ್‌ನಲ್ಲಿ ಭಾರೀ ಅಕ್ರಮಗಳು ನಡೆದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಮಧ್ಯಪ್ರವೇಶಿಸಿ ಪಾರದರ್ಶನ ವ್ಯವಸ್ಥೆ ರೂಪಿಸಿತ್ತು. ಈಗ ಫುಟ್‌ಬಾಲ್ ಕಿತ್ತಾಟ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಸುಪ್ರೀಂ ನೀಡುವ ಮುಂದಿನ ಆದೇಶದ ಮೇಲೆ ಭಾರತದಲ್ಲಿ ಫುಟ್‌ಬಾಲ್ ಪಂದ್ಯದ ಭವಿಷ್ಯ ನಿರ್ಧಾರವಾಗಿದೆ. ಅಮಾತು ನಿರ್ಧಾರ ತೆಗೆಯುವವರೆಗೆ ಫಿಫಾ ಆಯೋಜಿಸುವ ಟೂರ್ನಿಯಲ್ಲಿ ಭಾರತ ತಂಡ ಆಡುವ ಅವಕಾಶವನ್ನು ಕಳೆದುಕೊಳ್ಳಲಿದೆ.
ಅಪ್‌ಡೇಟ್ ಸುದ್ದಿ: ಫಿಫಾ ಅಮಾನತುಗೊಳಿಸಿದ ವಿಚಾರವನ್ನು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗಮನಕ್ಕೆ ತಂದಿದೆ. ನ್ಯಾ.ಚಂದ್ರಚೂಡ್ ನೇತೃತ್ವದ ಪೀಠ ಮಂಗಳವಾರ ಈ ಅರ್ಜಿಯ ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದೆ.
Live Tv
[brid partner=56869869 player=32851 video=960834 autoplay=true]
ಪ್ಯಾರಿಸ್: ಜಾಗತಿಕ ಫುಟ್‌ಬಾಲ್ ಆಡಳಿತ ಮಂಡಳಿ ಫಿಫಾ ಅಖಿಲ ಭಾರತ ಫುಟ್ಬಾಲ್ ಫೆಡರೇಶನ್(ಎಐಎಫ್‌ಎಫ್) ಅನ್ನು ಸೋಮವಾರ ಅಮಾನತುಗೊಳಿಸಿದೆ. ಫೆಡರೇಶನ್ ಹಿಂದೆ ಮೂರನೇ ವ್ಯಕ್ತಿಗಳ ಪ್ರಭಾವ ಇದೆ ಎನ್ನಲಾಗಿದ್ದು, ಇದು ಕಾನೂನುಗಳ ಗಂಭೀರ ಉಲ್ಲಂಘನೆ ಎಂದು ಫಿಫಾ ಆರೋಪಿಸಿದೆ.
ಎಐಎಫ್‌ಎಫ್‌ನ ಅಮಾನತಿನಿಂದಾಗಿ ಈ ಬಾರಿ ಅಕ್ಟೋಬರ್‌ನಲ್ಲಿ ಭಾರತದಲ್ಲಿ ನಡೆಯಬೇಕಿದ್ದ 17 ವರ್ಷದ ಒಳಗಿನ ಮಹಿಳಾ ವಿಶ್ವಕಪ್ ಟೂರ್ನಿಯನ್ನು ಮೊದಲೇ ನಿರ್ಧರಿಸಿದಂತೆ ನಡೆಸಲು ಸಾಧ್ಯವಿಲ್ಲ ಎಂದು ಫಿಫಾ ಹೇಳಿದೆ. ಇದನ್ನೂ ಓದಿ: ಸ್ವಾತಂತ್ರ್ಯ ದಿನದಂದೇ ಶ್ರೀನಗರದಲ್ಲಿ 2 ಬಾರಿ ಗ್ರೆನೇಡ್ ದಾಳಿ
2020ರಲ್ಲಿ ಭಾರತದಲ್ಲಿ ನಡೆಯಬೇಕಿದ್ದ ಪಂದ್ಯಾವಳಿಯನ್ನು ಕೋವಿಡ್ ಹಿನ್ನೆಲೆ ರದ್ದುಗೊಳಿಸಲಾಗಿತ್ತು. ಈ ಬಾರಿ ಅಕ್ಟೋಬರ್ 11 ರಿಂದ 30ರ ವರೆಗೆ ಭಾರತದಲ್ಲಿ 17 ವರ್ಷದ ಒಳಗಿನ ಮಹಿಳಾ ವಿಶ್ವಕಪ್ ಪಂದ್ಯಾವಳಿ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಇದೀಗ ಫಿಫಾ ಎಐಎಫ್‌ಎಫ್ ಅನ್ನು ಅಮಾನತುಗೊಳಿಸಿದೆ.
ಎಐಎಫ್‌ಎಫ್‌ನಲ್ಲಿ ಸೃಷ್ಟಿಯಾಗಿರುವ ಗೊಂದಲ ಬಗೆಹರಿಸಲು ಫಿಫಾ ಮತ್ತು ಎಎಫ್‌ಸಿ ಜೂನ್‌ನಲ್ಲಿ ಗಡುವು ನೀಡಿತ್ತು. ‘ಎಐಎಫ್‌ಎಫ್‌ಗೆ ಹೊಸದಾಗಿ ನಿಯಮಾವಳಿ ರೂಪಿಸಿ, ಜುಲೈ 31ರ ಒಳಗೆ ಅನುಮೋದನೆ ನೀಡಬೇಕು. ಸೆ.15ರ ಒಳಗಾಗಿ ಚುನಾವಣೆ ನಡೆಸಿ ಹೊಸ ಆಡಳಿತ ಮಂಡಳಿ ಅಸ್ತಿತ್ವಕ್ಕೆ ಬರಬೇಕು ಎಂದು ಫಿಫಾ ಸೂಚಿಸಿತ್ತು.
Live Tv
[brid partner=56869869 player=32851 video=960834 autoplay=true]
ಮಾಸ್ಕೋ: ಇಂಜುರಿ ಟೈಂನ ಕೊನೆಯ ಕ್ಷಣದಲ್ಲಿ (90+4ನೇ ನಿಮಿಷ) ಮಿಡ್‍ಫೀಲ್ಡರ್ ನಾಸೆರ್ ಚಾಡ್ಲಿ ಗಳಿಸಿದ ಸುಂದರ ಗೋಲಿನ ನೆರವಿನಿಂದ ಜಪಾನ್ ತಂಡವನ್ನು ರೋಚಕವಾಗಿ ಮಣಿಸಿದ ರೆಡ್ ಡೆವಿಲ್ಸ್ ಖ್ಯಾತಿಯ ಬೆಲ್ಜಿಯಂ, ಫಿಫಾ ವಿಶ್ವಕಪ್ ಟೂರ್ನಿಯ ಕ್ವಾರ್ಟರ್ ಫೈನಲ್‍ಗೆ ಎಂಟ್ರಿ ಪಡೆದಿದೆ. ರೋಸ್ಟೋವ್ ಅರೆನಾದಲ್ಲಿ ನಡೆದ ಜಿದ್ದಾಜಿದ್ದಿನಿಂದ ಕೂಡಿದ್ದ ಪಂದ್ಯದಲ್ಲಿ ಮೊದಲು 2 ಗೋಲುಗಳಿಂದ ಮುನ್ನಡೆ ಸಾಧಿಸಿದ್ದ ಜಪಾನ್, ನಂತರದಲ್ಲಿ 3 ಗೋಲು ಬಿಟ್ಟುಕೊಟ್ಟು ಕೂಟದಿಂದಲೇ ಹೊರನಡೆಯಿತು.
ಗೋಲು ರಹಿತ ಮೊದಲಾರ್ಧದ ಬಳಿಕ ಆಕ್ರಮಣಕಾರಿ ಆಟಕ್ಕೆ ಮುಂದಾದ ಜಪಾನ್, 48ನೇ ನಿಮಿಷದಲ್ಲಿ ಶಿಬಾಸ್ಕಿ ನೀಡಿದ ಪಾಸ್ ಮೂಲಕ ಮಿಡ್ ಫೀಲ್ಡರ್ ಜೆಂಕಿ ಹರಗುಚಿ ಗೋಲುಗಳಿಸಿ ಮುನ್ನಡೆ ತಂದುಕೊಟ್ಟರು. ಮೊದಲನೇ ಗೋಲು ದಾಖಲಿಸಿ ನಾಲ್ಕು ನಿಮಿಷ ಕಳೆಯುವಷ್ಟರಲ್ಲಿಯೇ ಎರಡನೇ ಗೋಲು ದಾಖಲಿಸಿದ ಜಪಾನ್, ಬೆಲ್ಜಿಯಂಗೆ ಡಬಲ್ ಶಾಕ್ ನೀಡಿತು.
52ನೇ ನಿಮಿಷದಲ್ಲಿ ಕಗಾವಾ ಅಸಿಸ್ಟ್ ನೆರವಿನಿಂದ ಚೆಂಡನ್ನು ಪಡೆದ ತಕಾಶಿ ಇನೂಯ್, ಡಿ ಬಾಕ್ಸ್‍ನ ಹೊರಗಡೆಯಿಂದಲೇ ಗೋಲ್ ಪೋಸ್ಟ್ ನ ಬಲತುದಿಯನ್ನು ಗುರಿಯಾಗಿಸಿ ಒದ್ದ ಚೆಂಡು ರಾಕೆಟ್ ವೇಗದಲ್ಲಿ ಗುರಿ ಸೇರಿತು. 2-0 ಗೋಲುಗಳಿಂದ ಮುನ್ನಡೆ ಸಾಧಿಸಿದ್ದ ಜಪಾನ್ ಪಂದ್ಯ ಗೆದ್ದೇ ಬಿಟ್ಟಿತು ಎಂಬ ವಿಶ್ವಾಸದಲ್ಲಿರುವಾಗಲೇ 5 ನಿಮಿಷಗಳ ಅಂತರದಲ್ಲಿ ಎರಡು ಗೋಲು ಬಾರಿಸಿದ ಬೆಲ್ಜಿಯಂ, ಜಪಾನ್ ತಂಡ ಬೆಚ್ಚಿಬೀಳುವಂತೆ ಮಾಡಿತು.
69ನೇ ನಿಮಿಷದಲ್ಲಿ ಡಿ ಬಾಕ್ಸ್‍ನಿಂದಲೇ ಆಕರ್ಷಕ ಹೆಡರ್ ಮೂಲಕ ಜಪಾನ್ ಗೋಲಿ ಕವಾಶಿಮಾರನ್ನು ವಂಚಿಸಿದ ಮಿಡ್ ಫೀಲ್ಡರ್ ವೇರೊಂಗನ್ ಮೊದಲ ಗೋಲು ದಾಖಲಿಸಿದರು. ಹಝಾರ್ಡ್ ಪಾಸ್ ಅನ್ನು ಹೆಡರ್ ಮೂಲಕ ಗೋಲಾಗಿ ಪರಿವರ್ತಿಸಿದ ಅನುಭವಿ ಅಟಗಾರ ಮರೌನೆ ಫೆಲೈನಿ 74ನೇ ನಿಮಿಷದಲ್ಲಿ ಬೆಲ್ಜಿಯಂ ಸಮಬಲ ಸಾಧಿಸುವಂತೆ ಮಾಡಿದರು. ಮತ್ತಷ್ಟು ರೋಚಕತೆಯತ್ತ ತಿರುಗಿದ ಪಂದ್ಯ ನಿಗದಿತ ಅವಧಿ ಮುಗಿದು, ಇನ್ನೇನು ಇಂಜುರಿ ಟೈಂ ಮುಗಿಯಿತು ಎನ್ನುವಷ್ಟರಲ್ಲಿ ಮಿಂಚಿನ ಕೌಂಟರ್ ಅಟ್ಯಾಕ್ ನಡೆಸಿದ ಬೆಲ್ಜಿಯಂ, ಸ್ಟಾರ್ ಅಟಗಾರ ಕೆವಿನ್ ಡಿ ಬ್ರೂನೆ, ಮಿನ್ಯೂಯೆರ್ ಶರವೇಗದಲ್ಲಿ ನೀಡಿದ ಪಾಸ್‍ಗೆ ಅಂತಿಮ ಟಚ್ ಕೊಟ್ಟ ನಾಸೆರ್ ಚಾಡ್ಲಿ, ಬೆಲ್ಜಿಯಂಗೆ ಅವಿಸ್ಮರಣೀಯ ಜಯ ತಂದಿತ್ತರು.
ಮುನ್ನಡೆ ಸಾಧಿಸಿದ ಬಳಿಕ ರಕ್ಷಣಾ ವಿಭಾಗವನ್ನು ಹೆಚ್ಚು ಬಲಪಡಿಸಿ ಪಂದ್ಯ ಉಳಿಸಿಕೊಳ್ಳುವ ಫುಟ್ಬಾಲ್‍ನ ಸಾಂಪ್ರದಾಯಿಕ ತಂತ್ರಗಾರಿಕೆಯನ್ನು ಕೈಬಿಟ್ಟಿದ್ದೇ ಜಪಾನ್ ಸೋಲಿಗೆ ಕಾರಣವಾಯಿತು. ಈ ಗೆಲುವಿನ ಮೂಲಕ ವಿಶ್ವಕಪ್ ನಾಕೌಟ್ ಹಂತದಲ್ಲಿ ಎರಡು ಗೋಲಿನಿಂದ ಹಿಂದಿದ್ದು, ಬಳಿಕ ನಿಗದಿತ ಅವಧಿಯಲ್ಲಿ ಪಂದ್ಯ ಗೆದ್ದ ಮೊದಲ ತಂಡವೆಂಬ ದಾಖಲೆ ಬೆಲ್ಜಿಯಂ ಪಾಲಾಯಿತು.
ಇದಕ್ಕೂ ಮೊದಲು ನಡೆದ ಪಂದ್ಯದಲ್ಲಿ ಮೆಕ್ಸಿಕೋ ವಿರುದ್ಧ 2-0 ಗೋಲಿನ ಅಂತರದಲ್ಲಿ ಗೆದ್ದ ಬ್ರಜಿಲ್ ತಂಡವನ್ನು ಕ್ವಾರ್ಟರ್ ಫೈನಲ್‍ನಲ್ಲಿ ಬೆಲ್ಜಿಯಂ ಎದುರಿಸಲಿದೆ.
ಡಬ್ಲಿನ್: 14 ವರ್ಷದ ಬಾಲಕನೊಬ್ಬ ವಿಡಿಯೋ ಗೇಮ್ ಆಡಿ ತನಗೆ ಗೊತ್ತಿಲ್ಲದೆ ಅಮ್ಮನ ಬ್ಯಾಂಕ್ ಖಾತೆಯಲ್ಲಿದ್ದ ಹಣವನ್ನ ಖಾಲಿ ಮಾಡಿರೋ ಘಟನೆ ಐರ್ಲೆಂಡಿನಲ್ಲಿ ನಡೆದಿದೆ.
ಇಲ್ಲಿನ ಕಾರ್ಕ್ ನಿವಾಸಿಯಾದ ಮಹಿಳೆ ಹಣ ವಿತ್ಡ್ರಾ ಮಾಡಲು ಹೋದಾಗ ಖಾತೆಯಲ್ಲಿ ಹಣ ಇಲ್ಲದಿರುವುದು ಗೊತ್ತಾಗಿ ಶಾಕ್ ಆಗಿದ್ದರು. ತನ್ನ ಇಡೀ ಸಂಬಳ ಹಾಗೂ ಕ್ರಿಸ್ಮಸ್ಗಾಗಿ ನೀಡಲಾಗಿದ್ದ ಬೋನಸ್ ಹಣವೆಲ್ಲಾ ಖರ್ಚಾಗಿತ್ತು.
ಮಹಿಳೆ ಮಗನಿಗಾಗಿ ತನ್ನ ಡೆಬಿಟ್ ಕಾರ್ಡ್ ಬಳಸಿ ಪ್ಲೇಸ್ಟೇಷನ್ ನ ಫೀಫಾ 18 ಗೇಮ್ ಖರೀದಿಸಿದ್ದರು. ಗೇಮ್ ಆಡುವಾಗ ಬಾಲಕ ಪರ್ಚೇಸಿಂಗ್ ಪಾಯಿಂಟ್ಸ್ ಖರೀದಿಸಿದ್ದು, ಇದಕ್ಕೆ ಹಣ ಕಟ್ ಆಗುತ್ತದೆ ಎಂಬುದು ಆತನಿಗೆ ತಿಳಿದಿರಲಿಲ್ಲ.
ಆತನಿಗೆ ಇದು ಅರ್ಥವಾಗಿರಲಿಲ್ಲ. ಪ್ರತಿ 10 ಪಾಯಿಂಟ್ಗೆ ಹೆಚ್ಚಿನ ಹಣ ಕಟ್ ಆಗ್ತಿತ್ತು. ಗೇಮ್ ಖರೀದಿ ಮಾಡುವಾಗ ಅಥವಾ ಆಡುವಾಗ ಇದರಲ್ಲಿ ಹಣ ಕಡಿತವಾಗೋ ಅಂಶ ಇರುತ್ತದೆ ಎಂದು ಅವರು ಹೇಳಲ್ಲ. ನನ್ನ ಕಾರ್ಡ್ ಆ್ಯಕ್ಟಿವೇಟ್ ಮಾಡಲು ಆತ ಏನೂ ಮಾಡಬೇಕಿರಲಿಲ್ಲ ಅಥವಾ ಏನನ್ನೂ ಕ್ಲಿಕ್ ಮಾಡಬೇಕಿರಲಿಲ್ಲ. ಅದಾಗಲೇ ಕಾರ್ಡ್ ರೆಜಿಸ್ಟರ್ ಆಗಿದ್ದರಿಂದ ಅದರ ವಿವರ ಹಾಕುವ ಅಗತ್ಯವಿರಲಿಲ್ಲ. ಆತ ಗೇಮ್ ಆಡುವಾಗ ನನ್ನ ಖಾತೆಯಿಂದ ಹಣ ಕಡಿತಗೊಳ್ಳುತ್ತಿದೆ ಎಂದು ಗೊತ್ತಿರಲಿಲ್ಲ ಎಂದು ಮಹಿಳೆ ಹೇಳಿದ್ದಾರೆ.
ನಾನು ಪ್ಲೇಸ್ಟೇಷನ್ ಸಂಪರ್ಕ ಮಾಡಿದಾಗ ಇದು ವಯಸ್ಕರ ಗೇಮ್ ಎಂದು ಹೇಳಿದ್ರು. ನನ್ನ ಮಗ 14 ವರ್ಷದವನು. ಆತನಿಗೆ ತಾನು ಹಣದೊಂದಿಗೆ ಆಟವಾಡ್ತಿದ್ದೇನೆಂದು ಅರ್ಥವಾಗಿರಲಿಲ್ಲ ಎಂದು ವಿವರಿಸಿದೆ ಎಂದು ಆಕೆ ಹೇಳಿದ್ದಾರೆ. ಆದರೂ ಪ್ಲೇಸ್ಟೇಷನ್ ಹಿಂದಿರೋ ಸೋನಿ ಸಂಸ್ಥೆ, ಗೇಮ್ಗಾಗಿ ಖರ್ಚು ಮಾಡಲಾಗಿರೋ ಹಣವನ್ನ ಹಿಂದಿರುಗಿಸಲು ನಿರಾಕರಿಸಿದೆ.
ಇದರಿಂದ ಮಹಿಳೆಯ ಮಗ ಕೂಡ ಪಶ್ಚಾತ್ತಾಪ ಪಡುತ್ತಿದ್ದು, ಮನೆಯಿಂದ ಹೊರಹೋಗಿಲ್ಲ ಎಂದು ವರದಿಯಾಗಿದೆ.