ರಾಯಚೂರು: ಫೋಟೋ ತೆಗೆಯುವ ನೆಪದಲ್ಲಿ ಪತ್ನಿ ತನ್ನ ಪತಿಯನ್ನೇ ನದಿಗೆ ತಳ್ಳಿದ ಘಟನೆ ರಾಯಚೂರು (Raichur) ತಾಲೂಕಿನ ಗುರ್ಜಾಪುರ ಬ್ರಿಡ್ಜ್ ಕಂ ಬ್ಯಾರೇಜ್ ಬಳಿ ನಡೆದಿದೆ. ಇದೀಗ ಪತ್ನಿ, ಮೊದಲೇ ಪತಿಯನ್ನ ನೀರಿಗೆ ತಳ್ಳುವ ಪ್ಲಾನ್ ಮಾಡಿದ್ಲಾ ಅನ್ನೋ ಅನುಮಾನ ವ್ಯಕ್ತವಾಗಿದೆ.
ರಾಯಚೂರಿನ ಶಕ್ತಿನಗರ (Shakthinagara) ಮೂಲದ ತಾತಪ್ಪ ಜೀವ ಉಳಿಸಿಕೊಂಡಿರುವ ಪತಿ. ನದಿಯಲ್ಲಿ ಈಜಿ ಕಲ್ಲು ಬಂಡೆಯ ಮೇಲೆ ನಿಂತು ಕಾಪಾಡಿ ಅಂತ ಕೂಗಿಕೊಂಡಿದ್ದರು. ಬ್ರಿಡ್ಜ್ ಕಂ ಬ್ಯಾರೇಜ್ ಮಾರ್ಗವಾಗಿ ಹೊರಟಿದ್ದ ಬುಲೆರೋ ವಾಹನದಲ್ಲಿದ್ದವರು ಹಾಗೂ ಕೆಬಿಜೆಎನ್‌ಎಲ್ ಸಿಬ್ಬಂದಿ, ಸ್ಥಳೀಯರು ನದಿಗೆ ಹಗ್ಗ ಎಸೆದು ತಾತಪ್ಪ ಅವರನ್ನು ಕಾಪಾಡಿದ್ದಾರೆ. ಇದನ್ನೂ ಓದಿ: ವಾಕಿಂಗ್ ಮಾಡುವಾಗ ಹೃದಯಾಘಾತ – ನರ್ಸಿಂಗ್ ಹೋಮ್ ಮಾಲೀಕ ಸಾವು
ಯಾದಗಿರಿಯ (Yadagiri) ವಡಗೆರಾ ತಾಲೂಕಿನ ಗದ್ದೆಮ್ಮ ಹಾಗೂ ತಾತಪ್ಪ ಕಳೆದ ಏ.10ರಂದು ಮದುವೆಯಾಗಿದ್ದರು. ಮದುವೆಯಾಗಿ ಮೂರು ತಿಂಗಳಲ್ಲೇ ಸಂಸಾರದಲ್ಲಿ ಬಿರುಕು ಮೂಡಿ, ಜಗಳವಾಡುತ್ತಿದ್ದರು. ಆ ಜಗಳವೇ ಈ ಘಟನೆಗೆ ಕಾರಣ ಎಂದು ತಾತಪ್ಪ ಆರೋಪಿಸಿದ್ದಾರೆ. ಇದನ್ನೂ ಓದಿ: ಸುಡುಗಾಡಿಗೆ ಹೋಗಿ ತೆಂಗಿನಕಾಯಿ ಒಡೆದರೂ GST ಅನ್ವಯಿಸುತ್ತೆ: ಸಂತೋಷ್ ಲಾಡ್ ಲೇವಡಿ
ಪತ್ನಿಯನ್ನು ನಂಬಿ ಫೋಟೋ ತೆಗೆಸಿಕೊಳ್ಳಲು ನಿಂತಿದ್ದೆ. ಆಕೆ ನನ್ನನ್ನು ನದಿಗೆ ತಳ್ಳಿದ್ದಾಳೆ ಎಂದು ತಾತಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದ್ರೆ ಪತ್ನಿ ಗದ್ದೆಮ್ಮ, ಮಾತ್ರ ನಾನು ತಳ್ಳಿಲ್ಲ. ಕಾಲು ಜಾರಿ ನದಿಗೆ ಬಿದ್ದಿದ್ದಾರೆ ಎಂದು ತನ್ನ ಮೇಲಿನ ಆರೋಪವನ್ನು ತಳ್ಳಿಹಾಕಿದ್ದಾಳೆ. ಇದನ್ನೂ ಓದಿ: ಮೂರುವರೆ ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ ಜೀವಾವಧಿ ಶಿಕ್ಷೆ
ಘಟನೆ ಬಳಿಕ ಒಟ್ಟಾಗಿಯೇ ಬೈಕ್‌ನಲ್ಲಿ ಪತಿ-ಪತ್ನಿ ಹೊರಟು ಹೋಗಿದ್ದಾರೆ. ರಾಯಚೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಶಶಿ ಮತ್ತು ವಸಂತ ಚೌಕಾಬಾರ ಆಡುತ್ತಿದ್ದಾಗ ಬಸವರಾಜ ಬಂದು ಜಗಳ ಮಾಡಿ, ಅವರಿಬ್ಬರ ಮೇಲೆ ಹಲ್ಲೆ ಮಾಡಿದ್ದ. ಈ ವೇಳೆ ಲಕ್ಕಪ್ಪ ಜಗಳ ಬಿಡಿಸಲು ಹೋದಾಗ ಬಸವರಾಜ ಚಾಕುವಿನಿಂದ ಎದೆ ಭಾಗಕ್ಕೆ ಇರಿದು ಕೊಲೆ ಮಾಡಿದ್ದಾನೆ. ಬಸವರಾಜನ ಜೊತೆಗಿದ್ದ ನಂಜುಂಡಿಯು ಹಲ್ಲೆಗೆ ಬೆಂಬಲ ನೀಡಿದ್ದ ಎಂದ ಆರೋಪ ಕೇಳಿಬಂದಿದೆ. ಇದೀಗ ಆರೋಪಿ ಬಸವರಾಜ ಹಾಗೂ ನಂಜುಂಡಿ ತಲೆಮರೆಸಿಕೊಂಡಿದ್ದಾರೆ. ಇದನ್ನೂ ಓದಿ: ವಕ್ಫ್ ಮಸೂದೆ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಎಎಪಿ
ಶಶಿ, ವಸಂತ ಎಂಬುವವರಿಗೆ ಬೆನ್ನು ಹಾಗೂ ಕೈ ಭಾಗಕ್ಕೆ ಬಸವರಾಜ ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದ. ಗಾಯಾಳು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಕೆನಡಾದಲ್ಲಿ ಭಾರತೀಯ ಪ್ರಜೆಗೆ ಚಾಕುವಿನಿಂದ ಇರಿದು ಕೊಲೆ
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಅರಸೀಕೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಬೆಳಗಾವಿ: ಪ್ರಾರ್ಥನೆ ಮುಗಿಸಿ ಉಪಹಾರ ಸೇವಿಸಲು ಹೋಟೆಲ್‌ಗೆ (Hotel) ಬಂದಾಗ ಒಂದೇ ಕೋಮಿನ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿದ್ದು, ಸೋಡಾ ಬಾಟಲಿ ಹಾಗೂ ನೀರಿನ ಬಾಟಲಿಯಿಂದ ಪರಸ್ಪರ ಹೊಡೆದಾಡಿಕೊಂಡ ಘಟನೆ ಬೆಳಗಾವಿ (Belagavi) ನಗರದಲ್ಲಿ ನಡೆದಿದೆ.
ಎರಡು ಗುಂಪುಗಳ ಯುವಕರು ಪರಸ್ಪರ ಹೊಡೆದಾಡುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆಯಿಂದ ಕೆಲಕಾಲ ತ್ವೇಷಮಯ ವಾತಾವರಣ ಉಂಟಾಗಿತ್ತು. ಏಕಾಏಕಿ ಘರ್ಷಣೆ ಉಂಟಾದ ಹಿನ್ನೆಲೆ ಸಿಬ್ಬಂದಿ ಹೋಟೆಲ್‌ನ ಬಾಗಿಲು ಮುಚ್ಚಿದ್ದಾರೆ. ಇದನ್ನೂ ಓದಿ: ರಾಜ್ಯದ ಮೊಟ್ಟ ಮೊದಲ ಮೇಕೆ ಹಾಲು ಉತ್ಪಾದನಾ ಘಟಕ ಕಾಡುಪಾಲು
ಎರಡು ತಿಂಗಳ ನಂತರ ಬೆಳಗಾವಿಗೆ ಬಂದು ಮಾಸಾಬಿ ಜೊತೆಗೆ ಬಸವರಾಜ್ ವಾಸ ಮಾಡತೊಡಗಿದ್ದ. ಬುಧವಾರ ರಾತ್ರಿ ವಾಣಿಶ್ರೀ ಕೈಯಲ್ಲಿ ಜೋಡಿಗಳು ಸಿಕ್ಕಿಬಿದ್ದಿದ್ದಾರೆ.
ಮಾಸಾಬಿಯನ್ನು ಪ್ರಶ್ನೆ ಮಾಡಿದ್ದಕ್ಕೆ ವಾಣಿಶ್ರೀ ಮೇಲೆ ಹಲ್ಲೆಯಾಗಿದೆ. ಹಲ್ಲೆಯಾಗುತ್ತಿದ್ದಂತೆ ಪರಸ್ಪರ ಜುಟ್ಟು ಹಿಡಿದುಕೊಂಡು ವಾಣಿಶ್ರೀ ಮತ್ತು ಮಾಸಾಬಿ ಇಬ್ಬರು ಹೊಡೆದಾಡಿಕೊಂಡಿದ್ದಾರೆ.
ಪತಿ ಬಸವರಾಜ್ ನಿಂದಲೂ ವಾಣಿಶ್ರೀಯ ಮೇಲೆ ಹಲ್ಲೆ ನಡೆದಿದೆ. ನಡು ರಸ್ತೆಯಲ್ಲಿ ಹೊಡೆದಾಡಿಕೊಳ್ಳುತ್ತಿರುವುದನ್ನು ನೋಡಿ ಸ್ಥಳೀಯರು ಮೂವರ ಜಗಳವನ್ನು ಬಿಡಿಸಿ ಕಳುಹಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಇಬ್ಬರು ಹೊಡೆದಾಡುವ ವಿಡಿಯೋ ಈಗ ಹರಿದಾಡುತ್ತಿದೆ.
ಲಕ್ನೋ: ಉತ್ತರಪ್ರದೇಶದಲ್ಲಿ (Uttarpradesh) ನಗರಸಭೆಯ ಸದಸ್ಯರುಗಳ (Civic Body Meeting) ನಡುವೆ ಭಾರೀ ಗುದ್ದಾಟ-ತಳ್ಳಾಟ ನಡೆದಿದೆ. ಸದ್ಯ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.
जब विकास कार्य हुए ही नहीं तो समीक्षा बैठक में और क्या होता, इसीलिए शामली में सभासदों के मध्य जमकर शारीरिक प्रहारों का आदान-प्रदान हुआ।
ಶಾಮ್ಲಿ ಪುರಸಭೆಯ (Shamli Municipal Council) ಆಡಳಿತ ಮಂಡಳಿ ಸಭೆಯಲ್ಲಿ ಪುರಸಭೆ ಅಧ್ಯಕ್ಷ (Municipal Chairman) ಅರವಿಂದ ಸಂಗಲ್ ಮತ್ತು ಶಾಸಕ ಪ್ರಸನ್ನ ಚೌಧರಿ ಉಪಸ್ಥಿತರಿದ್ದರು. ಸಭೆಯಲ್ಲಿ 4 ಕೋಟಿ ವೆಚ್ಚದ ಅಭಿವೃದ್ಧಿ ಯೋಜನೆಗಳ ಕುರಿತು ಚರ್ಚೆ ಆರಂಭವಾಯಿತು. ಈ ವೇಳೆ ಅರವಿಂದ ಸಂಗಲ್ ಮತ್ತು ಪ್ರಸನ್ನ ಚೌಧರಿ ನಡುವೆ ತೀವ್ರ ವಾಗ್ವಾದ ನಡೆಯಿತು. ಮಾತಿನ ಚಕಮಕಿಯಿಂದ ಪ್ರಾರಂಭವಾದ ಜಗಳ ಪರಸ್ಪರ ಹೊಡೆದಾಡಿಕೊಳ್ಳುವ ಮಟ್ಟಕ್ಕೆ ತಿರುಗಿತು.
ಇಬ್ಬರು ಸದಸ್ಯರು ಪರಸ್ಪರ ಗುದ್ದಾಟ ನಡೆಸುವುದರೊಂದಿಗೆ ನಗರ ಪಾಲಿಕೆ ಆಡಳಿತ ಮಂಡಳಿ ಸಭೆಯು ಸಂಪೂರ್ಣ ಕುಸ್ತಿ ಅಖಾಡವಾಯಿತು. ಪೊಲೀಸರು ಮತ್ತು ಹಿರಿಯ ಮುಖಂಡರ ಎದುರೇ ಇಡೀ ಘಟನೆ ನಡೆದಿದೆ. ಇನ್ನು ಇದರ ವೀಡಿಯೋವನ್ನು ಸಭೆಯಲ್ಲಿದ್ದವರು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದು, ಸದ್ಯ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಅಖಿಲೇಶ್ ಯಾದವ್ ಹೇಳಿದ್ದೇನು..?: ಇತ್ತ ವೈರಲ್ ವೀಡಿಯೋವನ್ನು ಗಮನಿಸಿದ ಸಮಾಜವಾದಿ ಪಕ್ಷದ ಮುಖ್ಯಸ್ಥ ಮತ್ತು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಬಿಜೆಪಿಯನ್ನು (BJP) ತೀವ್ರ ತರಾಟೆಗೆ ತೆಗೆದುಕೊಂಡರು.
ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ವೀಡಿಯೋ ಹಂಚಿಕೊಂಡು, ಯಾವುದೇ ಅಭಿವೃದ್ಧಿ ಕೆಲಸಗಳು ಆಗದಿದ್ದಾಗ ಪರಿಶೀಲನಾ ಸಭೆಯಲ್ಲಿ ಇನ್ನೇನು ಆಗಿರಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ ಇದರಿಂದಾಗಿ ಶಾಮ್ಲಿಯಲ್ಲಿ ನಡೆದ ಕೌನ್ಸಿಲರ್‌ಗಳ ಸಭೆಯಲ್ಲಿ ಪರಸ್ಪರ ದೈಹಿಕ ಹಲ್ಲೆಗಳು ನಡೆದಿವೆ ಎಂದಿದ್ದಾರೆ. ಒಟ್ಟಿನಲ್ಲಿ ನಿಮ್ಮ ಸ್ವಂತ ಭದ್ರತೆಯನ್ನು ಏರ್ಪಡಿಸಿದ ನಂತರ ಪರಿಶೀಲನಾ ಸಭೆಗೆ ಬನ್ನಿ ಎಂಬುದು ಬಿಜೆಪಿ ಆಡಳಿತದ ಪಾಠವಾಗಿದೆ ಎಂದು ಅವರು ಗರಂ ಆದರು.
ವಿನಯ್ ಮತ್ತು ಸಂಗೀತಾ ನಡುವಿನ ಫೈಟ್ (Fight) ಈ ಸಲದ ಬಿಗ್‌ಬಾಸ್ (Bigg Boss Kannada) ಮನೆಯಲ್ಲಿ ಸಾಕಷ್ಟು ಏರುಪೇರುಗಳನ್ನು ಸೃಷ್ಟಿಸುತ್ತಿದೆ. ಪ್ರತಿಯೊಂದು ಹಂತದಲ್ಲಿಯೂ ಒಬ್ಬರು ಇನ್ನೊಬ್ಬರನ್ನು ಕೆಣಕುವುದು, ಮಾತಿನ ಚಕಮಕಿ ಮೊದಲಿನಿಂದಲೂ ನಡೆದೇ ಇತ್ತು. ಆಗೆಲ್ಲ ಸಂಗಿತಾಗೆ ಪ್ರತ್ಯಕ್ಷವಾಗಿ ಪರೋಕ್ಷವಾಗಿ ಬೆಂಬಲಕ್ಕೆ ನಿಂತವರು ಕಾರ್ತಿಕ್. ಆದರೆ ಈಗ ವಿನಯ್ ಮತ್ತು ಸಂಗೀತಾ ರಾಜಿಯಾಗಿದ್ದಾರೆ.
ಸಂಗೀತಾ (Sangeetha) ತಾವು ಆಡಿದ ‘ಥ್ರೆಟನಿಂಗ್’ ಎಂಬ ಪದವನ್ನು ಹಿಂಪಡೆದು ಕ್ಷಮೆ ಕೇಳಿದ್ದಾರೆ. ಹಾಗೆಯೇ ವಿನಯ್ ಕೂಡ, ತಮಗೆ ನಿಮ್ಮನ್ನು ಹರ್ಟ್ ಮಾಡುವ ಉದ್ದೇಶ ಇಲ್ಲ. ನಿಮ್ಮ ಬಗ್ಗೆ ಇನ್ನು ಎಂದಿಗೂ ಕೆಟ್ಟದಾಗಿ ಮಾತಾಡಲ್ಲ. ಹರ್ಟ್ ಮಾಡಲ್ಲ ಎಂದು ಹೇಳಿ ಕ್ಷಮೆ ಕೋರಿದ್ದಾರೆ. ಅಲ್ಲಿಗೆ ಅವರಿಬ್ಬರೂ ಹಗ್ ಮಾಡಿಕೊಳ್ಳುವುದರ ಮೂಲಕ, ಬಿಗ್‌ಬಾಸ್ ಮನೆಯೊಳಗಿನ ಬಹುದೊಡ್ಡ ಜಗಳವೊಂದು ಸುಖಾಂತ್ಯ ಕಂಡಿದೆ.
ಆದರೆ ಇದುವರೆಗೆ ಬೆಸ್ಟ್ ಫ್ರೆಂಡ್ಸ್ ಆಗಿ ಸದಾ ಜೊತೆಗೇ ಕಾಣಿಸಿಕೊಳ್ಳುತ್ತಿದ್ದ ಕಾರ್ತಿಕ್ (Karthik) ಮತ್ತು ಸಂಗೀತಾ ನಡುವೆ ಫೈಟ್ ಶುರುವಾಗಿದೆ. ಇದುವರೆಗೆ ಪರಸ್ಪರ ಕಾಂಪ್ಲಿಮೆಂಟರಿಯಾಗಿಯೇ ಒದಗಿಬರುತ್ತಿದ್ದ ಅವರ ನಡುವೆ ಫೈಟ್ ಹುಟ್ಟಿಕೊಂಡಿದ್ದ ಹೇಗೆ, ಅದಕ್ಕೆ ಕಾರಣವೇನು, ಹಾಗಾದ್ರೆ ಹೊಸದೊಂದು ಜಗಳಕ್ಕೆ ಬಿಗ್‌ಬಾಸ್ ಮನೆ ಸಾಕ್ಷಿಯಾಗುತ್ತಿದೆಯೇ? ಹೀಗೆಲ್ಲ ಪ್ರಶ್ನೆಗಳು ಮೂಡುವುದು ಸಹಜ. ಕಾರ್ತಿಕ್ ಮತ್ತು ಸಂಗೀತಾ ನಡುವೆ ಫೈಟ್ ಸಿಕ್ವೆನ್ಸ್ ನಡೆದಿದ್ದು ನಿಜ. ಆದರದು ಕೋಪದಿಂದ ಹುಟ್ಟಿಕೊಂಡ ಫೈಟ್ ಅಲ್ಲ, ಸ್ನೇಹದಿಂದ, ಸಲಿಗೆಯಿಂದ ಹುಟ್ಟಿಕೊಂಡ ತಮಾಷೆಯ ಫೈಟ್.
ಬಿಗ್‌ಬಾಸ್ ಮನೆಯ ಹಾಲ್‌ನಲ್ಲಿ ಕಾರ್ತಿಕ್ ಮತ್ತು ಸಂಗೀತಾ ಇಬ್ಬರೂ ನಿಂತಿದ್ದಾರೆ. ಸಂಗೀತಾ, ‘ಸೋಲೊ ಪರ್ಫಾರ್ಮೆನ್ಸ್ ನಡೀತಿದ್ಯಾ?’ ಎಂದು ಕೇಳುತ್ತಾರೆ. ಕಾರ್ತಿಕ್, ‘ಸೋಲೊ ಎಲ್ಲ ಇಲ್ಲ’ ಎಂದು ಉತ್ತರಿಸುತ್ತಾರೆ. ಹಾಗೆಯೇ, ‘ಸ್ಕಿಟ್ ಸೌಂಡ್ ಅದು. ಅಲ್ನೋಡು’ ಎಂದು ಸಂಗೀತಾ ಗಮನವನ್ನು ಬೇರೆ ಕಡೆಗೆ ಸೆಳೆಯುತ್ತಾರೆ. ಸಂಗೀತಾ ಅತ್ತ ನೋಡುತ್ತಿದ್ದ ಹಾಗೆಯೇ ಅವರಿಗೆ ಒಂದು ಒದೆ ಕೊಟ್ಟು ಓಡಿಹೋಗುತ್ತಾರೆ ಕಾರ್ತಿಕ್.
ಸಂಗೀತಾ ಹುಸಿಮುನಿಸಿಂದ, ‘ಕಾರ್ತಿಕ್… ನೋ.. ನೋ..’ ಎನ್ನುತ್ತಾರೆ. ಕಾರ್ತಿಕ್ ಮತ್ತ ಸಂಗೀತಾ ಹತ್ತಿರ ಬಂದು, ‘ಯೆಸ್ ಯೆಸ್’ ಎಂದು ಮತ್ತೆ ಒದೆಯಲು ಯತ್ನಿಸುತ್ತಾರೆ. ಆಗ ಸಂಗೀತಾ, ಕಾರ್ತಿಕ್ ಕೈ ಹಿಡಿದುಕೊಂಡು ತಾವೂ ತಿರುಗಿ ಒದೆಯುತ್ತ, ‘ಎಲ್ಲಿಗೆ ಹೊಡಿತೀನಿ ಗೊತ್ತಿಲ್ಲ’ ಎನ್ನುತ್ತಾರೆ. ಕಾರ್ತಿಕ್ ಫೈಟ್ ಮಾಡುವವರ ಹಾಗೆ ಹಾವಭಾವ ಮಾಡುತ್ತ ಅವರ ಎದುರಿಗೆ ನಿಲ್ಲುತ್ತಾರೆ. ಸಂಗೀತಾ ಅತ್ತ ಹೋಗುತ್ತಿದ್ದ ಹಾಗೆಯೇ, ‘ಬೇಜಾರಾಯ್ತಾ?’ ಎಂದು ಹೆಗಲ ಮೇಲೆ ಕೈ ಹಾಕಲು ಹೋಗುತ್ತಾರೆ. ಆಗ ಸಂಗೀತಾ, ‘ಅಫ್‌ಕೋರ್ಸ್’ ಎನ್ನುತ್ತ ಕಾರ್ತಿಕ್‌ಗೆ ಇನ್ನಷ್ಟು ಹೊಡೆಯುತ್ತಾರೆ. ಆ ರಭಸಕ್ಕೆ ಅವರ ಕಾಲಲ್ಲಿನ ಚಪ್ಪಲಿ ಬಿದ್ದು ಹೋಗುತ್ತದೆ. ಕಾರ್ತಿಕ್ ಚಪ್ಪಲಿಯನ್ನು ಒದ್ದುಕೊಂಡು ಹೋಗುತ್ತಾರೆ.
ಹೀಗೆ ಪರಸ್ಪರ ತಮಾಷೆಯಾಗಿ, ಮಾಕ್ ಫೈಟ್ ಮಾಡುತ್ತ ಕಳೆದ ಚಂದದ ಕ್ಷಣಗಳು ಈ ವಿಡಿಯೊದಲ್ಲಿ ಸೆರೆಯಾಗಿವೆ. ಈ ಫೈಟ್ ಸಂಗೀತಾ ಮತ್ತು ಕಾರ್ತಿಕ್ ಮಧ್ಯೆ ಬಿರುಕು ಮೂಡಿಸುವುದಲ್ಲ, ಅವರ ಸ್ನೇಹಸಂಬಂಧವನ್ನು ಇನ್ನಷ್ಟು ಗಟ್ಟಿಕೊಳಿಸುವಂತೆ ಕಾಣಿಸುತ್ತದೆ. ಈ ಎಲ್ಲ ಕ್ಷಣಗಳನ್ನು ಬಿಗ್‌ಬಾಸ್ ಕನ್ನಡ 24 ಗಂಟೆ ನೇರಪ್ರಸಾರದಲ್ಲಿ JioCinema ಬಿತ್ತರಿಸಿದೆ.
ಮಂಡ್ಯ: ಕ್ಷುಲ್ಲಕ ಕಾರಣಕ್ಕೆ ಶುರುವಾದ ಜಗಳ (Fight) ಯುವಕನ ಕೊಲೆಯಲ್ಲಿ ಅಂತ್ಯಕಂಡ ಘಟನೆ ಮಂಡ್ಯ (Mandya) ಜಿಲ್ಲೆ ಕೆಆರ್ ಪೇಟೆ (K.R.Pete) ತಾಲೂಕಿನ ಮಲ್ಕೋನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಯೋಗೇಶ್ (32) ಕೊಲೆಯಾದ ದುರ್ದೈವಿ. ಪ್ರದೀಪ್ (31) ಹತ್ಯೆಗೈದ ದುಷ್ಕರ್ಮಿ. ಕೊಲೆಯಾದ ಯೋಗೇಶ್ ಹಾಗೂ ಆತನ ತಾಯಿ ಭಾಗ್ಯಮ್ಮ ಜೊತೆ ಪ್ರದೀಪ್ ಪದೇ ಪದೇ ಜಗಳ ಮಾಡುತ್ತಿದ್ದ. ಮಂಗಳವಾರ ಸಂಜೆಯೂ ಇದೇ ರೀತಿ ಜಗಳ ಶುರುವಾಗಿದ್ದು, ಕೋಪ ವಿಕೋಪಕ್ಕೆ ತಿರುಗಿದೆ. ಕೋಪದ ಭರದಲ್ಲಿ ಯೋಗೇಶ್ ತನ್ನ ಮನೆಯಲ್ಲಿದ್ದ ಚಾಕು ತಂದು ಯೋಗೇಶ್‌ಗೆ ಇರಿದಿದ್ದಾನೆ. ಇದನ್ನೂ ಓದಿ: ಬೆಲೆ ಬಾಳುವ ವಾಚ್‍ಗಾಗಿ ಯುವಕನ ಬರ್ಬರ ಹತ್ಯೆ
ಚಾಕು ಇರಿತಕ್ಕೊಳಗಾದ ಯೋಗೇಶ್‌ನನ್ನು ತಕ್ಷಣವೇ ಸ್ಥಳಿಯರು ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ತೀವ್ರ ರಕ್ತಸ್ರಾವ ಉಂಟಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಯೋಗೇಶ್ ಮೃತಪಟ್ಟಿದ್ದಾನೆ. ಸದ್ಯ ಕೊಲೆಗೈದ ಆರೋಪಿ ಪ್ರದೀಪ್ ಪರಾರಿಯಾಗಿದ್ದು, ತಲೆಮರೆಸಿಕೊಂಡಿರುವ ಪ್ರದೀಪ್‌ಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಘಟನೆಯ ಕುರಿತು ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: 2ನೇ ಮದುವೆಗೆ ಅಡ್ಡಿಯಾಗುತ್ತೆ ಎಂದು 14 ತಿಂಗಳ ಮಗುವನ್ನೇ ಕೊಂದ ಪಾಪಿ ತಂದೆ
ಚಿತ್ರೀಕರಣ ಶುರುವಾದಾಗಿನಿಂದಲೂ, ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟಿಸಿರುವ ಚಂದನವನದ ಚಿತ್ರಗಳಲ್ಲಿ ಒಂದು ‘ಅನ್‌ಲಾಕ್ ರಾಘವ’ (Unlock Raghava). ಈಗಾಗಲೇ ಡಬ್ಬಿಂಗ್ ಮುಗಿಸಿರುವ ಅನ್‌ಲಾಕ್ ರಾಘವ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕಾರ್ಯ ಭರದಿಂದ ಸಾಗಿದೆ. ವಿಶೇಷವೆಂದರೆ ಈ ಸಿನಿಮಾದ ಫೈಟ್‌ಗಳು (Fights) ಈಗಾಗಲೇ ಎಲ್ಲರ ಗಮನ ಸೆಳೆದಿದೆ.
ಈ ಚಿತ್ರದಲ್ಲಿ ನಾಲ್ಕೂವರೆ ಫೈಟ್ ಗಳಿವೆ. ಈ ಅರ್ಧ ಫೈಟ್ ಒಂದು ಹಾಡಿನ ನಡುವೆ ಬರುತ್ತದೆ. ಚಿತ್ರಕತೆಯ ಹಂತದಲ್ಲಿ ಈ ಹಾಡನ್ನು ನಾವು ಸೇರಿಸಿರಲಿಲ್ಲ. ಬಳಿಕ, ಆ ಸೀಕ್ವೆನ್ಸ್ ನಲ್ಲಿ ಒಂದು ಹಾಡಿದ್ದರೆ ಹೇಗೆ ಎಂಬ ಆಲೋಚನೆ ಬಂತು. ಅದನ್ನು ಇನ್ ಕಾರ್ಪೋರೇಟ್ ಮಾಡಿದಾಗ ಈ ಸೀಕ್ವೆನ್ಸ್ ತುಂಬಾ ಬ್ಯೂಟಿಫುಲ್ ಆಗಿ ಮೂಡಿಬಂದಿದೆ. ನಮ್ಮ ಚಿತ್ರದಲ್ಲಿ ಅಭಿನಯಿಸಿರುವ ಎಲ್ಲಾ ಕಲಾವಿದರು ಡಬ್ಬಿಂಗ್ ಸಮಯದಲ್ಲಿ ಆ ಹಾಡನ್ನು ನೋಡಿ, ಬಹಳ ಮೆಚ್ಚಿದ್ದಾರೆ. ಜೊತೆಗೆ ಆ ಹಾಡು, ಸಿನಿಮಾದ ಟ್ರಂಪ್ ಕಾರ್ಡ್ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದಿದ್ದಾರೆ. ಈ ಆಲೋಚನೆಗೆ ಸಾಥ್ ಕೊಟ್ಟ ನಿರ್ಮಾಪಕರಾದ ಮಂಜುನಾಥ ಡಿ ಅವರು, ಸಂಗೀತ ನಿರ್ದೇಶಕರಾದ ಅನೂಪ್ ಸೀಳಿನ್, ಡಿಒಪಿ ಲವಿತ್, ಸಾಹಸ ನಿರ್ದೇಶಕರಾದ ಅರ್ಜುನ್ ಮಾಸ್ಟರ್, ನೃತ್ಯ ನಿರ್ದೇಶಕರಾದ ಮುರುಳಿ ಮಾಸ್ಟರ್, ಎಡಿಟರ್ ಅಜಯ್ ಎಲ್ಲರಿಗೂ ತುಂಬಾ ಥ್ಯಾಂಕ್ಸ್. ಕಾಂತಾರ ಸಿನಿಮಾದ ವರಾಹ ರೂಪಂ ಹಾಡನ್ನು ಹಾಡಿರುವ ಸಾಯಿ ವಿಘ್ನೇಶ್ ಈ ಹಾಡನ್ನು ಹಾಡಿರುವುದು ಮತ್ತೊಂದು ವಿಶೇಷ ಎಂದಿದ್ದಾರೆ ಚಿತ್ರದ ನಿರ್ದೇಶಕರಾದ ದೀಪಕ್ ಮಧುವನಹಳ್ಳಿ.
ಎಡಿಟಿಂಗ್ ಮುಗಿಸಿ ಪೋಸ್ಟ್ ಪ್ರೊಡಕ್ಷನ್‌ಗೆ ಹೋಗುವ ಮುನ್ನ ಅನ್‌ಲಾಕ್ ರಾಘವ ಸಿನಿಮಾವನ್ನು ನೋಡಿರುವ ಚಲನಚಿತ್ರ ನಿರ್ಮಾಪಕರು ಹಾಗೂ ಚಿತ್ರ ತಂಡ ಸಂತೋಷ ಪಟ್ಟಿದ್ದಾರೆ. ಈ ವರ್ಷದ ನಿರೀಕ್ಷಿತ ಚಲನಚಿತ್ರಗಳಲ್ಲಿ, ನಮ್ಮ ಅನ್‌ಲಾಕ್ ರಾಘವ ಸಿನಿಮಾ ಸೇರುವುದರಲ್ಲಿ ಯಾವುದೇ ಅನುಮಾನವೇ ಇಲ್ಲ ಎಂದು ನಿರ್ಮಾಪಕರು ಹರ್ಷ ವ್ಯಕ್ತಪಡಿಸಿದ್ದಾರೆ.
ಇಡೀ ಸಿನಿಮಾದಲ್ಲಿ ನಾಯಕರಾದ ಮಿಲಿಂದ್ ಗೌತಮ್ ಅವರು ತುಂಬಾ ಹ್ಯಾಂಡ್ಸಮ್ ಆಗಿ ಮಿಂಚಿದ್ದಾರೆ. ಬಹಳ ಮುಖ್ಯವಾಗಿ ಸಾಹಸ ಸೀಕ್ವೆನ್ಸ್ ಗಳನ್ನು ನೋಡಿದಾಗ ನಮ್ಮ ಕನ್ನಡಕ್ಕೆ ಪ್ರಾಮಿಸಿಂಗ್ ಕಮರ್ಷಿಯಲ್ ಹೀರೋ ಆಗುವುದರಲ್ಲಿ ಅನುಮಾನವೇ ಇಲ್ಲ. ಜೊತೆಗೆ ಬ್ಯೂಟಿಫುಲ್ ಆಗಿರೋ ನಾಯಕಿ ರೇಚಲ್ ಡೇವಿಡ್ ಅವರೊಂದಿಗಿನ ಎಲ್ಲಾ ಸೀನ್‌ಗಳು ಮ್ಯಾಜಿಕಲ್ ಆಗಿ ಮೂಡಿಬಂದಿವೆ ಎನ್ನುತ್ತಿದೆ ಚಿತ್ರ ತಂಡ.
ಇಲ್ಲಿಯವರೆಗೂ ನಮಗೆ ಸಿಕ್ಕಿರುವ ಮಾಹಿತಿಯಂತೆ ಅನ್‌ಲಾಕ್ ರಾಘವ ಚಿತ್ರ ಕಲರ್‌ಫುಲ್ ಆಗಿದ್ದು, ಹ್ಯೂಮರಸ್ ಮಜವನ್ನು ಉಣ ಬಡಿಸೋ ಕಮರ್ಷಿಯಲ್ ಸಿನಿಮಾ ಆಗಿದೆ. ಈಗಾಗಲೇ ಎಡಿಟಿಂಗ್ ಮುಗಿಸಿ, ಪೋಸ್ಟ್ ಪ್ರೊಡಕ್ಷನ್ ನ ಉಳಿದ ಹಂತಗಳಲ್ಲಿ ತೊಡಗಿಸಿಕೊಂಡಿರುವ ಅನ್‌ಲಾಕ್ ರಾಘವ ಬೇಗನೇ ತೆರೆಗಪ್ಪಳಿಸಿ, ಚಿತ್ರಪ್ರೇಮಿಗಳಿಗೆ ಮನರಂಜನೆ ಉಣಬಡಿಸಲಿದ್ದಾನೆ ಎಂಬ ಕಾತುರದಲ್ಲಿ ಸಿನಿಪ್ರೇಮಿಗಳಿದ್ದಾರೆ.
ಅನ್‌ಲಾಕ್ ರಾಘವ ಚಿತ್ರವನ್ನು ಮಯೂರ ಮೋಷನ್ ಪಿಕ್ಚರ್ಸ್ ಬ್ಯಾನರ್ ನಡಿ ಮಂಜುನಾಥ ಡಿ ಹಾಗೂ ಗಿರೀಶ್ ಕುಮಾರ್ ಜಂಟಿಯಾಗಿ ನಿರ್ಮಿಸುತ್ತಿದ್ದು, ದೀಪಕ್ ಮಧುವನಹಳ್ಳಿ (Deepak Madhuvanahalli) ಅವರು ನಿರ್ದೇಶಕರ ಕ್ಯಾಪ್ ತೊಟ್ಟಿದ್ದಾರೆ. ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸತ್ಯಪ್ರಕಾಶ್ ಕಥೆ-ಚಿತ್ರಕಥೆ-ಸಂಭಾಷಣೆ ಬರೆದಿದ್ದು, ಲವಿತ್ ಛಾಯಾಗ್ರಾಹಣ, ಅನೂಪ್ ಸೀಳಿನ್ ಸಂಗೀತ, ಅಜಯ್ ಕುಮಾರ್ ಸಂಕಲನ ಚಿತ್ರಕ್ಕಿದೆ. ಮುರಳಿ ಮಾಸ್ಟರ್ ಹಾಗೂ ಧನಂಜಯ್ ಮಾಸ್ಟರ್ ನೃತ್ಯ ನಿರ್ದೇಶನದಲ್ಲಿ ಹಾಡುಗಳು ಮೂಡಿಬಂದಿದ್ದು, ವಿನೋದ್ ಮಾಸ್ಟರ್ ಮತ್ತು ಅರ್ಜುನ್ ಮಾಸ್ಟರ್ ಸಾಹಸ ದೃಶ್ಯಗಳನ್ನು ಸಂಯೋಜಿಸಿದ್ದಾರೆ.
ಮಿಲಿಂದ್ ಗೌತಮ್ (Milind Gautham)ನಾಯಕನಾಗಿ ಹಾಗೂ ರೇಚಲ್ ಡೇವಿಡ್ (Rachel David) ಚಿತ್ರದ ನಾಯಕಿಯಾಗಿ ಅಭಿನಯಿಸಿದ್ದಾರೆ. ಸಾಧುಕೋಕಿಲ, ಅವಿನಾಶ್, ಶೋಭರಾಜ್, ರಮೇಶ್ ಭಟ್, ವೀಣಾ ಸುಂದರ್, ಸುಂದರ್, ಧರ್ಮಣ್ಣ ಕಡೂರು, ಸಾಯಿ ಕುಡ್ಲ, ಭೂಮಿ ಶೆಟ್ಟಿ, ಮೂಗು ಸುರೇಶ್, ಅಥರ್ವ ಪ್ರಕಾಶ್, ಶ್ರೀದತ್ತ, ಬೃಂದಾ ವಿಕ್ರಮ್ ಮೊದಲಾದವರು ಚಿತ್ರದ ಪ್ರಮುಖ ತಾರಾಗಣದಲ್ಲಿದ್ದಾರೆ.
ಮಾಜಿ ಬಿಗ್ ಬಾಸ್ ಸ್ಪರ್ಧಿ, ನಟಿ ಉರ್ಫಿ ಜಾವೇದ್ (Urfi Javed) ಅರೆಬರೆ ಬಟ್ಟೆ ಹಾಕಿಕೊಂಡು ಮುಂಬೈ (Mumbai) ವಿಮಾನ ನಿಲ್ದಾಣದಲ್ಲಿ (Airport) ಕಾಣಿಸಿಕೊಂಡಿದ್ದಾರೆ. ಪೂರ್ತಿ ಬೆನ್ನು ಕಾಣುವಂತೆ ಹಾಕಿದ್ದ ಕಾಸ್ಟ್ಯೂಮ್ ಕಂಡ ವ್ಯಕ್ತಿಯೊಬ್ಬ ‘ನೀನು ನಮ್ಮ ದೇಶದ ಸಂಸ್ಕೃತಿಯನ್ನು ಹಾಳು ಮಾಡುತ್ತಿದ್ದೀಯಾ. ಇಂತಹ ಬಟ್ಟೆಗಳನ್ನು ನೀವು ಧರಿಸೋದು ಯಾಕೆ?’ ಎಂದು ವ್ಯಕ್ತಿಯು ಪ್ರಶ್ನೆ ಮಾಡುತ್ತಾರೆ.
ಇದನ್ನು ಕೇಳಿಸಿಕೊಂಡ ಉರ್ಫಿ ತಕ್ಷಣವೇ ಆವ್ಯಕ್ತಿಯೊಂದಿಗೆ ಜಗಳಕ್ಕೆ ಇಳಿಯುತ್ತಾರೆ. ‘ನಾನು ಈ ರೀತಿಯ ಬಟ್ಟೆ ಹಾಕುವುದರಿಂದ ನಿನಗೆ, ನಿನ್ನ ತಂದೆಗೆ ಏನಾದರೂ ತೊಂದರೆಯಾ?’ ಎನ್ನುತ್ತಾ ಹರಿಹಾಯ್ತಾಳೆ. ಆ ಸನ್ನಿವೇಶವನ್ನು ಕಂಡ ಮಹಿಳೆಯೊಬ್ಬರು ಉರ್ಫಿ ಮತ್ತು ಆವ್ಯಕ್ತಿಯ ನಡುವಿನ ಮಾತುಕತೆ ನಿಲ್ಲಿಸಲು ಪ್ರಯತ್ನಿಸುತ್ತಾರೆ. ಉರ್ಫಿಯನ್ನೂ ಸಮಾಧಾನ ಮಾಡಿ ಕಳಿಸ್ತಾರೆ. ಇದನ್ನೂ ಓದಿ:ಕಾಲ್‌ಶೀಟ್ ಕದನಕ್ಕೆ ಬ್ರೇಕ್ ಬೀಳುವ ಮುಂಚೆಯೇ ‘K46’ ಸಿನಿಮಾಗೆ ಸಜ್ಜಾದ ಕಿಚ್ಚ ಸುದೀಪ್
ಈ ವಿಡಿಯೋವನ್ನು ಶೂಟ್ ಮಾಡದಂತೆ ಉರ್ಫಿ ನಂತರ ಮನವಿ ಮಾಡುತ್ತಾರೆ. ಆದರೂ, ಈ ವಿಡಿಯೋ ಶೂಟ್ ಹಾಕಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಉರ್ಫಿ ಜಾವೇದ್ ಅವರಿಗೆ ಈ ರೀತಿ ಕಾಮೆಂಟ್ ಮಾಡುವುದು ಮೊದಲೇನೂ ಅಲ್ಲ. ಹಲವಾರು ಬಾರಿ ಇಂತಹ ಸನ್ನಿವೇಶವನ್ನು ಅವರು ಎದುರಿಸಿದ್ದಾರೆ.
ಕೇವಲ ಜನರು ನಿಂದಿಸುವುದು ಮಾತ್ರವಲ್ಲ, ಉರ್ಫಿ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಿ ಎಂದು ಹಲವಾರು ಜನರು ಪೊಲೀಸ್ ಠಾಣೆ ಮೆಟ್ಟಿಲು ಏರಿದ್ದರು. ಹಾಗಂತ ಉರ್ಫಿ ಹೆದರಿಕೊಂಡಿಲ್ಲ, ತನ್ನ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ತಡೆಯುವಂತೆ ಮಹಿಳಾ ಆಯೋಗಕ್ಕೆ ಪತ್ರವನ್ನು ಬರೆದಿದ್ದರು.