Tag: Film Chamber

  • ಗೋವಾದಲ್ಲಿ ಕನ್ನಡ ನಿರ್ಮಾಪಕರ ಗಲಾಟೆ

    ಗೋವಾದಲ್ಲಿ ಕನ್ನಡ ನಿರ್ಮಾಪಕರ ಗಲಾಟೆ

    ಚಿತ್ರರಂಗದ ಸಮಸ್ಯೆಯನ್ನು ಚರ್ಚೆ ಮಾಡುವುದಕ್ಕೆಂದು ಗೋವಾಗೆ (Goa)  ಹೋಗಿದ್ದ ನಿರ್ಮಾಪಕರು ಗಲಾಟೆ ಮಾಡಿಕೊಂಡಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (Film Chamber), ನಿರ್ಮಾಪಕರ ಸಂಘ ಹಾಗೂ ನಿರ್ದೇಶಕರ ಸಂಘದ ಪದಾಧಿಕಾರಿಗಳು ಗೋವಾ ಪ್ರವಾಸ ಬೆಳೆಸಿದ್ದರು. ಮಾತಿಗೆ ಮಾತು ಬೆಳೆದು ಅದು ಗಲಾಟೆ ಸ್ವರೂಪ ಪಡೆದುಕೊಂಡಿದೆ.

    ಗೋವಾದ ಹಿಬೀಸ್ ರೆಸಾರ್ಟ್ನಲ್ಲಿ ನಿನ್ನೆ ರಾತ್ರಿ (ಮೇ ೨೭) ಚರ್ಚೆ ನಡೆಯುವಾಗ ಮಾತಿಗೆ ಮಾತು ಬೆಳೆದು ಸಣ್ಣದಾಗಿ ಗಲಾಟೆ ಶುರುವಾಗಿದೆ. ಗಲಾಟೆ ಕೈ ಕೈ ಮಿಲಾಯಿಸುವ ಹಂತ ತಲುಪಿದೆ. ನಿರ್ಮಾಪಕರಾದ ರಥಾವರ ಮಂಜುನಾಥ್, .ಗಣೇಶ್ ಹಾಗೂ ಸತೀಶ್ ಆರ್ಯ ಮೂವರು ನಡುವೆ ಮಾತಿನ ಚಕಮಕಿ ನಡೆದು ಗಲಾಟೆಯಲ್ಲಿ ಮುಕ್ತಾವಾಗಿದೆ.

    ಗಲಾಟೆಯ ನಂತರ ಸತೀಶ್ ಆರ್ಯ, .ಗಣೇಶ್ ಹಾಗೂ ರಥಾವರ ಮಂಜುನಾಥ್ ಅವರನ್ನು ಬೆಂಗಳೂರಿಗೆ ವಾಪಸ್ಸು ಕಳುಹಿಸಲಾಗಿದೆಯಂತೆ. ಗೋವಾ ಟ್ರಿಪ್ಗೆ ಹೋದ ನಿಯೋಗದ ಸದಸ್ಯರು, ಪದಾಧಿಕಾರಿಗಳು ನಾಳೆ (ಮೇ ೨೯) ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ. ವಾಣಿಜ್ಯ ಮಂಡಳಿಯ ಅಧ್ಯಕ್ಷರಾದ ಎನ್.ಎಂ.ಸುರೇಶ್, ಉಮೇಶ್ ಬಣಕಾರ್, ಆಸ್ಕರ್ ಕೃಷ್ಣ, ಭಾಮಾ ಹರೀಶ್, ಭಾಮಾ ಗಿರೀಶ್, ಟೇಸಿ ವೆಂಕಟೇಶ್, ಸತೀಶ್ ಆರ್ಯ, ರಥಾವರ ಮಂಜುನಾಥ್, .ಗಣೇಶ್ ಸೇರಿ ಮುಂತಾದವರು ಗೋವಾ ಪ್ರವಾಸಕ್ಕೆ ತೆರಳಿದ್ದರು.

    ಸದ್ಯ ಕನ್ನಡ ಚಿತ್ರರಂಗ ಚಿತ್ರರಂಗ ಸಂಕಷ್ಟವನ್ನ ಎದುರಿಸುತ್ತಿದೆ. ಸಂದರ್ಭದಲ್ಲಿ ವಾಣಿಜ್ಯ ಮಂಡಳಿಗೆ ಪಾರ್ಟಿ, ಜಾಲಿ ಮೂಡು ಬೇಕಿತ್ತಾ ಅನ್ನೋದು ಕೆಲವರ ಪ್ರಶ್ನೆಯಾಗಿದೆ. ಆದ್ರೆ ಅಲ್ಲಿ ನಡೆದ ಘಟನೆ ಯಾವುದಕ್ಕಾಗಿ..? ಏನೇನಾಯ್ತು ಅನ್ನೋದು ವಾಪಾಸ್ಸಾದ ಮೇಲೆ ತಿಳಿಯಲಿದೆ. ಅಲ್ಲಿಯವರೆಗೆ ಕಾದು ನೋಡಬೇಕು.

  • ದರ್ಶನ್ ವಿರುದ್ಧ ದೂರು ವಾಪಸ್: ಕ್ಷಮೆ ಕೇಳಿದ ಕನ್ನಡ ಶಫಿ

    ದರ್ಶನ್ ವಿರುದ್ಧ ದೂರು ವಾಪಸ್: ಕ್ಷಮೆ ಕೇಳಿದ ಕನ್ನಡ ಶಫಿ

    ನಿರ್ಮಾಪಕ ಉಮಾಪತಿ ಅವರಿಗೆ ನಟ ದರ್ಶನ್ (Darshan) ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಕನ್ನಡ ಪರ ಸಂಘಟನೆಯ ಕನ್ನಡ ಶಫಿ ಎನ್ನುವವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ (Film Chambe) ದೂರು ನೀಡಿದ್ದರು. ದರ್ಶನ್ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳಬೇಕು ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು. ಇದೀಗ ಶಫಿ ಉಲ್ಟಾ ಹೊಡೆದಿದ್ದಾರೆ.

    ಮೊನ್ನೆಯಷ್ಟೇ ದೂರು (Complaint) ನೀಡಿದ್ದ ಕನ್ನಡ ಶಫಿ (Kannada Shafi), ಇದೀಗ ದರ್ಶನ್ ಮತ್ತು ಅವರ ಅಭಿಮಾನಿಗಳಿಗೆ ಕ್ಷಮೆ ಕೇಳಿ ದೂರು ವಾಪಸ್ಸು ಪಡೆದುಕೊಳ್ಳುವುದಾಗಿ ತಿಳಿಸಿದ್ದಾರೆ. ದರ್ಶನ್ ಅವರನ್ನು ಶಫಿ ಬಾಯಿಗೆ ಬಂದಂತೆ ಬೈದಿದ್ದರು. ಆ ವಿಡಿಯೋ ವೈರಲ್ ಕೂಡ ಆಗಿತ್ತು. ಇದೀಗ ಆ ಕುರಿತಂತೆಯೂ ಶಫಿ ಕ್ಷಮೆ ಕೇಳಿದ್ದಾರೆ.

    ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದಕ್ಕಾಗಿ ನಾನು ಕ್ಷಮೆ ಕೇಳುತ್ತೇನೆ. ದೂರು ನೀಡಿದ ಬಗ್ಗೆ ಕ್ಷಮೆ ಕೇಳುವುದಷ್ಟೇ ಅಲ್ಲ, ದೂರು ಹಿಂಪಡೆಯುವುದಾಗಿಯೂ ಕನ್ನಡ ಪ್ರಜಾಪರ ವೇದಿಕೆ ಕನ್ನಡ ಶಫಿ ವಿಡಿಯೋ ಮೂಲಕ ಹೇಳಿದ್ದಾರೆ. ಬೇರೆ ಸಂಘಟನೆಯವರು ಹಾಗೂ ನಾವು ಸೇರಿ ಆತುರದಿಂದ ನಿರ್ಧಾರ ಕೈಗೊಂಡೆವು. ಇದರಿಂದ ಹಿರಿಯ ನಟರ ಮನಸ್ಸಿಗೆ ನೋವಾಗಿದೆ. ಎಲ್ಲಾ ಕನ್ನಡ ಮನಸ್ಸುಗಳಿಗೂ ಕ್ಷಮೆ ಕೇಳುತ್ತೇನೆ ಎಂದಿದ್ದಾರೆ ಶಫಿ.

  • ನಟ ದರ್ಶನ್ ಹೇಳಿಕೆ ಖಂಡಿಸಿ ದೂರು: ಕ್ಷಮೆ ಕೇಳಲು ಆಗ್ರಹ

    ನಟ ದರ್ಶನ್ ಹೇಳಿಕೆ ಖಂಡಿಸಿ ದೂರು: ಕ್ಷಮೆ ಕೇಳಲು ಆಗ್ರಹ

    ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡರಿಗೆ ಕಟು ನುಡಿಗಳಲ್ಲಿ ಟೀಕಿಸಿರುವ ನಟ ದರ್ಶನ್ (Darshan) ವಿರುದ್ಧ ಕರ್ನಾಟಕ ಪ್ರಜಾಪರ ವೇದಿಕೆಯು ಫಿಲ್ಮ್ ಛೇಂಬರ್ ಗೆ ದೂರು ನೀಡಿದೆ. ಸಾರ್ವಜನಿಕ ವೇದಿಕೆಯ ಮೇಲೆ ಉಮಾಪತಿಗೆ ತಗಡು, ಗುಮ್ಮಿಸ್ಕೋತೀಯಾ ರೀತಿಯ ಪದಗಳನ್ನು ಆಡಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

    ಕಾಟೇರ ಸಿನಿಮಾದ ಕಥೆ ಬರೆಯಿಸಿದ್ದು ನಾನು, ಅದು ನನ್ನದೇ ಟೈಟಲ್ ಎಂದು ಉಮಾಪತಿ ಗೌಡ ಸಂದರ್ಶನವೊಂದರಲ್ಲಿ ಹೇಳಿದ್ದರು. ಇದಕ್ಕೆ ಉತ್ತರ ಎನ್ನುವಂತೆ ಕಾಟೇರ ಸಿನಿಮಾದ ಐವತ್ತನೇ ದಿನದ ಸಂಭ್ರಮದಲ್ಲಿ ದರ್ಶನ್ ತಿರುಗೇಟು ನೀಡಿದ್ದರು. ಅಲ್ಲದೇ, ತಗಡು ಮತ್ತು ‘ಪ್ರತಿ ಬಾರಿ ಯಾಕೆ ನಮ್ಮಿಂದ ಗುಮ್ಮಿಸ್ಕೋಳ್ತಿಯಾ’ ಎನ್ನುವ ಮಾತುಗಳನ್ನು ಆಡಿದ್ದರು.

    ಈ ಕುರಿತಂತೆ ಸಂಘಟನೆಯು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದು, ಈ ವಿಷಯದಲ್ಲಿ ದರ್ಶನ್ ಅವರು ಕ್ಷಮೆ ಕೇಳಬೇಕು. ಕ್ಷಮೆ ಕೇಳದೇ ಇದ್ದರೆ, ದರ್ಶನ್ ಮನೆಯ ಮುಂದೆ ನೂರಾರು ಕನ್ನಡ ಕಾರ್ಯಕರ್ತರು ಹೋರಾಟ ಮಾಡಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.

     

    ಉಮಾಪತಿ ಮತ್ತು ದರ್ಶನ್ ವಿಚಾರ ದಿನದಿಂದ ದಿನಕ್ಕೆ ನಾನಾ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ನಿರ್ದೇಶಕರಾದ ತರುಣ್ ಸುಧೀರ್ ಮತ್ತು ಮಹೇಶ್ ಕುಮಾರ್ ಇಬ್ಬರೂ ದರ್ಶನ್ ಪರ ಬ್ಯಾಟ್ ಮಾಡುತ್ತಿದ್ದಾರೆ. ಇದಕ್ಕೆ ಕೌಂಟರ್ ಎನ್ನುವಂತೆ ಉಮಾಪತಿ ಪ್ರತಿಕ್ರಿಯೆ ನೀಡುತ್ತಿದ್ದಾರೆ.

  • ಸಿನಿ ಕಾರ್ಮಿಕರ ಪರ ನಿಂತ ಚಿತ್ರರಂಗ : ಹೊಸ ವೇತನ ಜಾರಿ

    ಸಿನಿ ಕಾರ್ಮಿಕರ ಪರ ನಿಂತ ಚಿತ್ರರಂಗ : ಹೊಸ ವೇತನ ಜಾರಿ

    ನಿರ್ಮಾಪಕ ಕೆ.ಮಂಜು (K. Manju) ಅಧ್ಯಕ್ಷತೆಯ 36 ಮಂದಿ ನಿರ್ಮಾಪಕರನ್ನು ಒಳಗೊಂಡ ಸಮಿತಿಯಿಂದ ಸಿನಿ ಕಾರ್ಮಿಕರ ಹೊಸ ವೇತನ ಪರಿಷ್ಕರಣೆ ವರದಿಯನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘಕ್ಕೆ ಹಸ್ತಾಂತರಿಸಿದೆ. ಕೊರೋನಾ ಸೇರಿದಂತೆ ಬೇರೆ ಬೇರೆ ಕಾರಣಗಳಿಗಾಗಿ ಕಳೆದ ನಾಲ್ಕು ವರ್ಷಗಳಿಂದ ಸಿನಿಮಾ ಕಾರ್ಮಿಕರ ವೇತನ ಪರಿಷ್ಕರಣೆಗೆ ಕೊನೆಗೂ ಮುಕ್ತಿ ಸಿಕ್ಕಿದೆ. ನಿರ್ಮಾಪಕ ಕೆ. ಮಂಜು ಅಧ್ಯಕ್ಷತೆಯಲ್ಲಿ 36ಕ್ಕೂ ಹೆಚ್ಚು ನಿರ್ಮಾಪಕರನ್ನು ಒಳಗೊಂಡ ಸಿನಿಮಾ ಕಾರ್ಮಿಕರ ವೇತನ ಪರಿಷ್ಕರಣೆ ಸಮಿತಿಯಿಂದ ಹೊಸ ವೇತನ ವರದಿಯನ್ನು ರೂಪಿಸಿಲಾಗಿದ್ದು, ಸಮಿತಿ ಸೂಚಿಸಿರುವ ವರದಿಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘ ಸಂಪೂರ್ಣವಾಗಿ ಒಪ್ಪಿಗೆ ಸೂಚಿಸಿದೆ. ಆ ಮೂಲಕ ನಿರ್ಮಾಪಕರಿಗೆ ಹೊರೆ ಅನಿಸಿದರೂ ಚಿತ್ರೋದ್ಯಮದ ಕುಟುಂಬದ ಸದಸ್ಯರಾಗಿರುವ ಸಿನಿಮಾ ಕಾರ್ಮಿಕರಿಗೆ ಒಳ್ಳೆಯದಾಗಬೇಕು ಎನ್ನುವ ಆಲೋಚನೆಯಲ್ಲಿ ಕಾರ್ಮಿಕರ ಎಲ್ಲ ಬೇಡಿಕೆಗಳನ್ನು ಒಳಗೊಂಡಂತೆಯೇ ಹೊಸ ವೇತನ ಪರಿಷ್ಕರಣೆ ಮಾಡಲಾಗಿದೆ.

    ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ (Film Chamber) ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಸಿನಿಮಾ ಕಾರ್ಮಿಕರಿಗಾಗಿ ರೂಪಿಸಿರುವ ಹೊಸ ವೇತನದ ಕುರಿತು ನೀಡಿದ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್. ಎಂ. ಸುರೇಶ್, ‘36ಕ್ಕೂ ಹೆಚ್ಚು ನಿರ್ಮಾಪಕರನ್ನು ಒಳಗೊಂಡ ವೇತನ ಪರಿಷ್ಕರಣೆ ಸಮಿತಿಯನ್ನು ನಿರ್ಮಾಪಕ ಕೆ. ಮಂಜು ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿತ್ತು. ಮೂರು  ತಿಂಗಳ ಕಾಲ ಹಲವು ಹಂತಗಳಲ್ಲಿ ಸಭೆಗಳನ್ನು ನಡೆಸುವ ಜತೆಗೆ ಹಲವರ ಅಭಿಪ್ರಾಯಗಳನ್ನು ಸಂಗ್ರಹಿಸಿ ನೀಡಿರುವ ವೇತನ ಪರಿಷ್ಕರಣಾ ವರದಿ ಅತ್ಯಂತ ಸಮಂಜಸವಾಗಿದೆ. ರಜೆ ಹಾಗೂ ಹಬ್ಬದ ದಿನಗಳಲ್ಲಿ ಕೆಲಸ ಮಾಡಿದರೆ ಸಂಬಳದ (ದಿನದ ವೇತನ) ಜತೆಗೆ ಹೆಚ್ಚುವರಿ ಕೆಲಸದ ಬಾಟಾ (ದಿನದ ಕೂಲಿ), ಪ್ರಯಾಣದ ಬಾಟಾ ವೇತನದಲ್ಲಿ ಅರ್ಧ ಮಾತ್ರ ಕಡಿತ ಮಾಡಲಾಗಿದೆ. ಆದರೂ ಪೂರ್ತಿ ಬಾಟಾ ಕೊಡಲೇ ಬೇಕು ಎಂದು ಪಟ್ಟು ಹಿಡಿದಿರುವುವುದು ಸರಿಯಲ್ಲ. ದಿನದ ವೇತನ ಜತೆಗೆ ಪೂರ್ತಿ ಹೆಚ್ಚುವರಿ ಬಾಟಾ ಬದಲು ಅರ್ಧ ಕೂಲಿ ಕೊಡಲು ಸಮಿತಿ ಸೂಚಿಸಿದೆ. ನಿರ್ಮಾಪಕರಿಗೆ ಸ್ವಲ್ಪ ಹೊರೆಯಾದರೂ ನಿರ್ಮಾಪಕರು ಈ ಹೊಸ ವೇತನಕ್ಕೆ ಒಪ್ಪಿಕೊಂಡಿದ್ದಾರೆ. ಆದರೂ ಕೆಲವರು ದಿನದ ಬಾಟಾದಲ್ಲಿ ಕಡಿತ ಮಾಡಿದ್ದಾರೆ ಎಂದು ನೆಪ ಒಡ್ಡಿ ಹೊಸ ವೇತನಕ್ಕೆ ವಿರೋಧ ಮಾಡುತ್ತಿದ್ದಾರೆ. ಜತೆಗೆ ಶೂಟಿಂಗ್‌ನಲ್ಲಿರುವ ಸಿನಿಮಾಗಳ ಕೆಲಸಗಳನ್ನು ನಿಲ್ಲಿಸುತ್ತೇವೆ ಎಂದು ಬೆದರಿಸುತ್ತಿದ್ದಾರೆ. ಇದು ಸರಿಯಾದ ನಡೆ ಅಲ್ಲ. ಒಂದು ವೇಳೆ ಈ ಬೆದರಿಕೆ ವರ್ತನೆಗಳು ಮುಂದುವರಿದರೆ ಕಾನೂನು ವ್ಯಾಪ್ತಿಯ ಜತೆಗೆ ಚಿತ್ರರಂಗದ ನಿಯಮಗಳ ಪ್ರಕಾರ ನಾವೂ ಕೂಡ ಸೂಕ್ತ ಕ್ರಮ ಕೈಗೊಳ್ಳುತ್ತೇವೆ’ ಎಂದು ಹೇಳಿದರು.

    ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಮಾತನಾಡಿ, ‘ಮಂಜು ಅವರ ಅಧ್ಯಕ್ಷತೆಯ ವೇತನ ಪರಿಷ್ಕರಣೆ ಸಮಿತಿ ನೀಡಿರುವ ವರದಿಗೆ ನಿರ್ಮಾಪಕರ ಸಂಘದ ಒಪ್ಪಿಗೆ ಇದೆ. ಈಗಿನಿಂದಲೇ ಹೊಸ ವೇತನ ಜಾರಿಯಾಗಲಿದೆ. ಯಾರಾದರೂ ಈ ಹೊಸ ವೇತನವನ್ನು ಉಲ್ಲಂಘಿಸುವುದು ಅಥವಾ ಚಿತ್ರೀಕರಣಕ್ಕೆ ತೊಂದರೆ ಕೊಟ್ಟರೆ ನಿರ್ಮಾಪಕರು ತೆಗೆದುಕೊಳ್ಳುವ ಸ್ವತಂತ್ರ ನಿರ್ಧಾರಗಳಿಂದ ಬರಬಹುದಾದ ಪರಿಣಾಮಗಳನ್ನು ಸಿನಿಮಾ ಕಾರ್ಮಿಕರೇ ಎದುರಿಸಬೇಕಾಗುತ್ತದೆ’ ಎಂದು ಪರೋಕ್ಷವಾಗಿ ಎಚ್ಚರಿಸಿದರು.

    ಹೊಸ ವೇತನ ಪರಿಷ್ಕರಣೆ ಸಮಿತಿ ಅಧ್ಯಕ್ಷ ಕೆ.ಮಂಜು ಮಾತನಾಡಿ, ‘ಮೂರು ವರ್ಷಕ್ಕೊಮ್ಮೆ ವೇತನ ಪರಿಷ್ಕರಣೆ ಮಾಡುವುದು ಚಿತ್ರೋದ್ಯಮದ ವಾಡಿಕೆ. ಕೊರೋನಾದಿಂದ ಕಳೆದ ನಾಲ್ಕು ವರ್ಷಗಳಿಂದ ಸಿನಿಮಾ ಕಾರ್ಮಿಕರಿಗೆ ವೇತನ ಪರಿಷ್ಕರಣೆ ಆಗಿಲ್ಲ. ನಿರ್ಮಾಪಕರಿಗೆ ಏನೇ ಕಷ್ಟ ಇದ್ದರೂ ಕಾರ್ಮಿಕರಿಗೆ ತೊಂದರೆ ಆಗಬಾರದು ಎನ್ನುವ ಕಾರಣಕ್ಕೆ ಮೂರು ತಿಂಗಳ ಕಾಲ ಕೆಲಸ ಮಾಡಿ 30ಕ್ಕೂ ಹೆಚ್ಚು ಸಭೆ, ಚಿತ್ರರಂಗದ ದಿಗ್ಗಜರ, ಚಿತ್ರೋದ್ಯಮದ ಸಂಘ- ಸಂಸ್ಥೆಗಳ ಅಭಿಪ್ರಾಯಗಳನ್ನು ತೆಗೆದುಕೊಂಡೇ ನಾವು ಹೊಸ ವೇತನ ಪರಿಷ್ಕರಣೆ ಮಾಡಿದ್ದೇವೆ. ರಜೆ ಹಾಗೂ ಹಬ್ಬದ ದಿನಗಳಲ್ಲಿ ಮಾಡುವ ಕೆಲಸಕ್ಕೆ ಅರ್ಧ ಬಾಟಾ ಕಡಿತ ಮಾಡಿರುವುದಕ್ಕೆ ವಿರೋಧ ಮಾಡುತ್ತಿರುವುದು ಸರಿಯಲ್ಲ. ರಜೆ ದಿನಗಳಲ್ಲೂ ಕೆಲಸ ಕೊಡುತ್ತಿದ್ದೇವೆ. ಸಂಬಳ ಜತೆಗೆ ಅರ್ಧ ಕೂಲಿಯೂ ಹೆಚ್ಚುವರಿಯಾಗಿ ಕೊಡುತ್ತಿದ್ದೇವೆ. ಹೀಗಾಗಿ ನಾವು ರೂಪಿಸಿರುವ ಹೊಸ ವೇತನ ಪರಿಷ್ಕರಣೆ ವರದಿ ಅತ್ಯಂತ ವೈಜ್ಞಾನಿಕವಾಗಿದೆ. ಚಿತ್ರರಂಗ ತುಂಬಾ ಕಷ್ಟದಲ್ಲಿದೆ. ನಿರ್ಮಾಪಕರಿಗೆ ಹಾಕಿದ ಹಣ ವಾಪಸ್ಸು ಬರುತ್ತದೋ ಇಲ್ಲವೋ ಎನ್ನುವ ಗ್ಯಾರಂಟಿ ಇಲ್ಲ. ಆದರೂ ನಾವು ಎಲ್ಲರಿಗೂ ಹಣ ಪಾವತಿ ಮಾಡಿಯೇ ಕೆಲಸ ಮಾಡಿಸುತ್ತಿದ್ದೇವೆ’ ಎಂದರು.

     

    ವೇತನ ಪರಿಷ್ಕರಣೆ ಸಮಿತಿ ಸದಸ್ಯ ದಯಾಳ್‌ ಪದ್ಮನಾಭನ್‌ ಮಾತನಾಡಿ, ‘ನಾಲ್ಕು ವರ್ಷಗಳಿಂದ ವೇತನ ಪರಿಷ್ಕರಣೆ ಮಾಡಿಲ್ಲ. ಆ ನಾಲ್ಕು ವರ್ಷಗಳನ್ನು ಗಮನದಲ್ಲಿಟ್ಟುಕೊಂಡು ವರ್ಷಕ್ಕೆ ಶೇ.5ರಂತೆ ನಾಲ್ಕು ವರ್ಷಗಳನ್ನು ಸೇರಿಸಿ ಶೇ.20ರಷ್ಟು ವೇತನ ಹೆಚ್ಚಳ ಮಾಡಿದ್ದೇವೆ. ಇದರಿಂದ ಚಿತ್ರರಂಗದ ಆಯಾ ವಿಭಾಗಗಳಲ್ಲಿ ಕೆಲಸ ಮಾಡುವ ಪ್ರತಿಯೊಬ್ಬ ಕಾರ್ಮಿಕರಿಗೆ ಶೇ.45 ರಿಂದ 70ರಷ್ಟು ವೇತನ ಹೆಚ್ಚಳವಾಗಲಿದೆ’ ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಪ್ರಮೀಳಾ ಜೋಷಾಯ್‌, ನರಸಿಂಹಲು, ಭಾ. ಮ. ಗಿರೀಶ್‌, ಪ್ರವೀಣ್‌ ಕುಮಾರ್‌ ಮುಂತಾದವರು ಹಾಜರಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಈವರೆಗೂ ಪರಿಹಾರ ಸಿಗದೇ ಇರೋ ಏಕೈಕ ಸಮಸ್ಯೆ ಕಾವೇರಿಯದ್ದು: ನಟ ಉಪೇಂದ್ರ

    ಈವರೆಗೂ ಪರಿಹಾರ ಸಿಗದೇ ಇರೋ ಏಕೈಕ ಸಮಸ್ಯೆ ಕಾವೇರಿಯದ್ದು: ನಟ ಉಪೇಂದ್ರ

    ನ್ನಡ ಪರ ಸಂಘಟನೆಗಳ ಕರ್ನಾಟಕ ಬಂದ್ ಕರೆ ಹಿನ್ನೆಲೆಯಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು (Film Chamber) ಬೆಂಬಲ ಸೂಚಿಸಿದ್ದು, ಈ ಹೋರಾಟದಲ್ಲಿ ಸ್ಯಾಂಡಲ್ ವುಡ್ ನ ಸಾಕಷ್ಟು ಕಲಾವಿದರು ಮತ್ತು ತಂತ್ರಜ್ಞರು ಭಾಗಿಯಾಗಿದ್ದಾರೆ. ಈ ಸಂದರ್ಭದಲ್ಲಿ ನಟ ಉಪೇಂದ್ರ  (Upendra) ಮಾತನಾಡಿ, ‘ಈವರೆಗೂ ಪರಿಹಾರ ಸಿಗದೇ ಇರೋ ಏಕೈಕ ಸಮಸ್ಯೆ ಎಂದರೆ ಅದು ಕಾವೇರಿ ನದಿ ನೀರಿನ ಸಮಸ್ಯೆ’ ಎಂದರು.

    ಮುಂದುವರೆದು ಮಾತನಾಡಿ ಉಪೇಂದ್ರ, ‘ನಾವೆಲ್ಲರೂ ಬುದ್ದಿವಂತರು. ವಿಚಾರ ಮಾಡುವ ಶಕ್ತಿಯಿದೆ. ಅದನ್ನು ಬಳಸಿಕೊಂಡು ಇದಕ್ಕೊಂದು ಪರಿಹಾರವನ್ನು ಕಂಡುಕೊಳ್ಳಬೇಕು. ನಮ್ಮ ಸಮಸ್ಯೆಗೆ ನಾವೇ ಪರಿಹಾರ ಹುಡುಕಿಕೊಳ್ಳಬೇಕು. ಎರಡೂ ಕಡೆಗಳಲ್ಲೂ ಈ ಕೆಲಸ ನಡೆಯಬೇಕು’ ಎಂದರು. ಇದನ್ನೂ ಓದಿ:‘ಕೆಂಡ’ದಂತಹ ಸಿನಿಮಾ ಮಾಡಿದ ಸಹದೇವ್-ರೂಪಾ ರಾವ್

    ಪೂಜಾ ಗಾಂಧಿ ಹೇಳಿದ್ದೇನು?

    ಕಾವೇರಿ ನೀರಿಗಾಗಿ (Cauvery Protest) ಕನ್ನಡಪರ ಸಂಘಟನೆ ಇಂದು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದು, ಕಾವೇರಿ ಹೋರಾಟಕ್ಕೆ ಸ್ಯಾಂಡಲ್‌ವುಡ್ ಕಲಾವಿದರು ಸಾಥ್ ನೀಡಿದ್ದಾರೆ. ಈ ವೇಳೆ ಪೂಜಾ ಗಾಂಧಿ (Pooja Gandhi) ಕೂಡ ಭಾಗಿಯಾಗಿ ಕನ್ನಡಿಗರ ಸಹನೆ ಮತ್ತು ತಾಳ್ಮೆಯ ಬಗ್ಗೆ ಶ್ಲಾಘಿಸಿದ್ದಾರೆ. ಕಾವೇರಿ ನಮ್ಮವಳು ಎಂದು ಹೇಳುವ ಮೂಲಕ ನಟಿ ಸಾಥ್ ನೀಡಿದ್ದಾರೆ.

    ಎರಡು ರಾಜ್ಯಕ್ಕೂ ಒಳ್ಳೆಯದಾಗಲಿ. ಕನ್ನಡಿಗರಿಗೆ ನಿಜವಾಗಲೂ ಸಹನೆಯಿದೆ. ಆದರೆ ಈ ವಿಚಾರವಾಗಿ ಜಾಸ್ತಿ ಸಹನೆ ತಗೋಬೇಡಿ ಎಂದು ಕೇಳಿಕೇಳುತ್ತೇನೆ ಎಂದು ನಟಿ ಪೂಜಾ ಗಾಂಧಿ ಮಾತನಾಡಿದ್ದಾರೆ. ಇವತ್ತು ಕರ್ನಾಟಕ್ಕೆ ಯಾವು ಸಂದರ್ಭ ಕ್ರಿಯೇಟ್ ಆಗಿದೆ. ರಾಜ್ಯ ಸರ್ಕಾರ, ಕೇಂದ್ರ ಸರ್ಕಾರ ಇಬ್ಬರು ಅಹಂ ಮತ್ತು ಅಸೂಯೆ ಬಿಟ್ಟು ಕಾವೇರಿ ವಿಚಾರ ಬಗ್ಗೆ ಚರ್ಚೆ ಮಾಡಬೇಕು. ಮೇಕೆದಾಟು ಯೋಜನೆ ಬಗ್ಗೆ ಕೂಡ ಗಮನ ಕೊಡಬೇಕು.

    ನಮ್ಮ ರಾಜ್ಯದ ರೈತರಿಗೆ ಏನು ಬೇಕಾದರೂ ಆಗಲಿ, ತಮಿಳುನಾಡಿನ ರೈತರು ಮಾತ್ರ ಚೆನ್ನಾಗಿ ಇರಬೇಕಾ? ಎಂದು ನಟಿ ಪೂಜಾ ಗಾಂಧಿ ಪ್ರಶ್ನೆ ಮಾಡಿದ್ದಾರೆ. ಕಾವೇರಿಯ ಒಂದು ಹನಿ ನೀರು ತಮಿಳುನಾಡಿಗೆ ಬಿಡದೇ ಇರುವ ಹಾಗೆ ಮಾಡೋಕೆ ಕನ್ನಡಿಗರಿಗೆ ಶಕ್ತಿ ಇದೆ. ಇಡೀ ಚಿತ್ರರಂಗ ನಮ್ಮ ಭಾಷೆ, ನೆಲ, ಜಲ ವಿಚಾರ ಬಂದಾಗ ನಮ್ಮ ಜನರಿಗೋಸ್ಕರ ಹೋರಾಟ ಮಾಡುತ್ತೇವೆ.

     

    ಬೆಳ್ಳಿಯ ಬಾಗಿಲು ಚಿನ್ನದ ದೇಗುಲ, ಒಳಗಡೆ ಬಹು ಮುತ್ತು ರತ್ನ, ಬೀಗರ ಕೈ ತಂದು ಬಾಗಿಲನ್ನು ತೆಗೆಯಲು ನೀನು ಒಮ್ಮೆ ಮಾಡು ಪ್ರಯತ್ನ ಎಂದು ನಟಿ ಪದ್ಯ ಹೇಳಿದರು. ಎಂತಹ ಖಜಾನೆಗೂ ಒಂದು ಬೀಗದ ಕೈ ಇದ್ದೆ ಇರುತ್ತೆ, ಹಾಗೆಯೇ ಎಲ್ಲಾ ಸಮ್ಮಸ್ಯೆಗೂ ಒಂದು ಪರಿಹಾರ ಇದ್ದೇ ಇರುತ್ತದೆ ಅದನ್ನು ನಾವು ಬಗೆಹರಿಸಬೇಕು ಎಂದು ಹೇಳುವ ಮೂಲಕ ಹೋರಾಟಕ್ಕೆ ನಟಿ ಹುರುಪು ನೀಡಿದ್ದಾರೆ. ಈ ಹೋರಾಟದಲ್ಲಿ ಶಿವರಾಜ್‌ಕುಮಾರ್, ಶ್ರೀಮುರಳಿ, ಹಿರಿಯ ನಟ ಶ್ರೀನಿವಾಸ್ ಮೂರ್ತಿ, ಪದ್ಮ ವಾಸಂತಿ, ಉಮಾಶ್ರೀ, ನವೀನ್ ಕೃಷ್ಣ, ಲೂಸ್ ಮಾದ, ಪ್ರಮೀಳಾ ಜೋಷಾಯ್, ಸುಂದರ್ ರಾಜ್ ಸೇರಿದಂತೆ ಹಲವು ಕಿರುತೆರೆ ನಟ-ನಟಿಯರು ಭಾಗಿಯಾಗಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Karnataka Bandh: ಫಿಲ್ಮ್ ಚೇಂಬರ್ ಮುಂದೆ ಕಲಾವಿದರ ಪ್ರತಿಭಟನೆಗೆ ಸಿದ್ಧತೆ

    Karnataka Bandh: ಫಿಲ್ಮ್ ಚೇಂಬರ್ ಮುಂದೆ ಕಲಾವಿದರ ಪ್ರತಿಭಟನೆಗೆ ಸಿದ್ಧತೆ

    ಕಾವೇರಿ (Cauvery) ನದಿ ವಿವಾದ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಕನ್ನಡ ಪರ ಸಂಘಟನೆಗಳು ನೀಡಿರುವ ಕರ್ನಾಟಕ ಬಂದ್ (Karnataka Bandh) ಕರೆಗೆ ಸ್ಯಾಂಡಲ್ ವುಡ್ ಕೂಡ ಬೆಂಬಲ ಸೂಚಿಸಿದೆ. ಇಂದು ಬೆಳಗ್ಗೆ 11 ಗಂಟೆಯಿಂದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ (Film Chamber) ಪಕ್ಕದಲ್ಲಿ ಸಿದ್ಧವಾಗಿರುವ ಬೃಹತ್ ವೇದಿಕೆಯಲ್ಲಿ ಪ್ರತಿಭಟನೆಯನ್ನು ಮಾಡಲಾಗುತ್ತಿದೆ.

    ಈ ಹೋರಾಟದ ನೇತೃತ್ವವನ್ನು ಹಿರಿಯ ನಟ ಶಿವರಾಜ್ ಕುಮಾರ್ ವಹಿಸುತ್ತಿದ್ದು, ಅನೇಕ ಕಲಾವಿದರು ಈ ಹೋರಾಟದಲ್ಲಿ ಭಾಗಿಯಾಗಲಿದ್ದಾರೆ. ಧ್ರುವ ಸರ್ಜಾ, ದುನಿಯಾ ವಿಜಯ್, ನಿಖಿಲ್, ಕೋಮಲ್, ರವಿಶಂಕರ್, ಸಾಧು ಕೋಕಿಲ, ಪೂಜಾ ಗಾಂಧಿ, ರಾಘವೇಂದ್ರ ರಾಜಕುಮಾರ್, ನಿಖಿಲ್ ಕುಮಾರ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗಿ ಆಗಲಿದ್ದಾರೆ.

    ಈ ನಡುವೆ ಅನೇಕ ಕಲಾವಿದರು ಸೋಷಿಯಲ್ ಮೀಡಿಯಾ ಮೂಲಕ ಬಂದ್ ಗೆ ಬೆಂಬಲವನ್ನು ವ್ಯಕ್ತ ಪಡಿಸಿದ್ದಾರೆ. ಕೆಲ ಕಲಾವಿದರು ಹೊರ ರಾಜ್ಯಗಳಲ್ಲಿ ಮತ್ತು ವಿದೇಶಗಳಲ್ಲಿ ಇರುವುದರಿಂದ ಅವರು ಹೋರಾಟದಲ್ಲಿ ಭಾಗಿ ಆಗುತ್ತಿಲ್ಲ. ಆದರೆ, ನೈತಿಕ ಬೆಂಬಲವನ್ನೂ ಅವರೆಲ್ಲರೂ ಸೂಚಿಸಿದ್ದಾರೆ.

     

    ಫಿಲ್ಮ್ ಚೇಂಬರ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ನಿನ್ನೆಯಷ್ಟೇ ಬಹುತೇಕ ಕಲಾವಿದರನ್ನು ಸಂಪರ್ಕಿಸಿ, ಹೋರಾಟದಲ್ಲಿ ಭಾಗಿ ಆಗುವಂತೆ ವಿನಂತಿಸಿದ್ದಾರೆ. ಸಾಕಷ್ಟು ಕಲಾವಿದರು ಈ ಹೋರಾಟದಲ್ಲಿ ಭಾಗಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೇ, ಕಿರುತೆರೆ ಕಲಾವಿದರು ಕೂಡ  ಈ  ಬಂದ್ ನಲ್ಲಿ ಭಾಗಿಯಾಗಲಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕರ್ನಾಟಕ ಬಂದ್:  ಬೆಳಗ್ಗೆಯಿಂದಲೇ ಬೀದಿಗಿಳಿಯಲಿದೆ ಸ್ಯಾಂಡಲ್ ವುಡ್

    ಕರ್ನಾಟಕ ಬಂದ್: ಬೆಳಗ್ಗೆಯಿಂದಲೇ ಬೀದಿಗಿಳಿಯಲಿದೆ ಸ್ಯಾಂಡಲ್ ವುಡ್

    ನ್ನಡಪರ ಸಂಘಟನೆಗಳು ನೀಡಿದ ಕರ್ನಾಟಕದ ಬಂದ್ ಕರೆಯನ್ನು ಗಂಭೀರವಾಗಿ ಸ್ವೀಕರಿಸಿರುವ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು (Film Chamber), ತನ್ನ ಅಂಗ ಸಂಸ್ಥೆಗಳೊಂದಿಗೆ ಜೊತೆಯಾಗಿ ಇಂದು ಬೀದಿಗೆ ಇಳಿದು ಹೋರಾಟ ಮಾಡಲಿದೆ. ಬೆಳಗ್ಗೆಯಿಂದಲೇ ಎಲ್ಲ ಚಿತ್ರಮಂದಿರಗಳು ಬಾಗಿಲು ಹಾಕಿವೆ. ಕರ್ನಾಟಕದಲ್ಲಿ ಯಾವುದೇ ಚಿತ್ರೀಕರಣ ನಡೆಯುತ್ತಿಲ್ಲ. ಹೊರ ರಾಜ್ಯಗಳಲ್ಲಿ ನಡೆಯುತ್ತಿರುವ ಚಿತ್ರೀಕರಣಕ್ಕೆ ಯಾವುದೇ ಅಡೆತಡೆ ಇಲ್ಲ.

    ಇಂದು ಬೆಳಗ್ಗೆ ಹತ್ತು ಗಂಟೆಗೆ ವಾಣಿಜ್ಯ (Sandalwood) ಮಂಡಳಿಯ ಪಕ್ಕದಲ್ಲಿರುವ ಕಲ್ಯಾಣ ಮಂಟಪದಲ್ಲಿ ಕಲಾವಿದರು ಮತ್ತು ತಂತ್ರಜ್ಞರು ಒಗ್ಗೂಡಲಿದ್ದಾರೆ. ಅಲ್ಲಿಂದ ಯಾವ ರೀತಿ ಹೋರಾಟ ಮಾಡಬೇಕು ಎನ್ನುವ ಕುರಿತಂತೆ ಚರ್ಚಿಸಿ ನಂತರ ಮುಂದಿನ ಹೋರಾಟಕ್ಕೆ ಕಲಾವಿದರು ಇಳಿಯಲಿದ್ದಾರೆ ಎನ್ನುವ ಮಾಹಿತಿ ಇದೆ. ಇದನ್ನೂ ಓದಿ:ಟಾಲಿವುಡ್‌ನಲ್ಲಿ ರುಕ್ಮಿಣಿ ವಸಂತ್‌ಗೆ ಭರ್ಜರಿ ಡಿಮ್ಯಾಂಡ್

    ಈಗಾಗಲೇ ಹಲವು ಕಲಾವಿದರು ಹೋರಾಟದಲ್ಲಿ ಭಾಗಿಯಾಗುವ ಕುರಿತು ಸಮ್ಮತಿ ಸೂಚಿಸಿದ್ದಾರೆ. ಇನ್ನೂ ಹಲವು ಕಲಾವಿದರು ಸೋಷಿಯಲ್ ಮೀಡಿಯಾ ಮೂಲಕ ಬಂದ್ ಗೆ ಬೆಂಬಲ ಸೂಚಿಸಿದ್ದಾರೆ. ಕೆಲವು ಕಲಾವಿದರು ಹೊರ ರಾಜ್ಯಗಳಲ್ಲಿ ನಡೆಯುತ್ತಿರುವ ಶೂಟಿಂಗ್ ನಲ್ಲೂ ಭಾಗಿಯಾಗಿದ್ದಾರೆ.

     

    ಇಂದು ನಡೆಯುವ ಹೋರಾಟದಲ್ಲಿ (Cauvery Protest) ಶಿವರಾಜ್ ಕುಮಾರ್ (Shivaraj Kumar) ನೇತೃತ್ವ ವಹಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಅಧಿಕೃತವಾಗಿ ಈ ಕುರಿತು ಯಾರೂ ಮಾಹಿತಿಯನ್ನು ಹಂಚಿಕೊಂಡಿಲ್ಲ. ಕರ್ನಾಟಕ ಬಂದ್ ದಿಢೀರ್ ಆಗಿರುವಂತಹ ಪ್ರತಿಭಟನೆ ಆಗಿರುವುದರಿಂದ ಕೆಲವು ಕಲಾವಿದರು ಮೊದಲೇ ನಿಗದಿಯಾಗಿರುವ  ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕರ್ನಾಟಕ ಬಂದ್ ಕುರಿತು ನಿಖಿಲ್ ಕುಮಾರ್ ಜೊತೆ ಫಿಲ್ಮ್ ಚೇಂಬರ್ ಚರ್ಚೆ

    ಕರ್ನಾಟಕ ಬಂದ್ ಕುರಿತು ನಿಖಿಲ್ ಕುಮಾರ್ ಜೊತೆ ಫಿಲ್ಮ್ ಚೇಂಬರ್ ಚರ್ಚೆ

    ನಾಳೆ ರಾಜ್ಯಾದ್ಯಂತ ನಡೆಯಲಿರುವ ಕರ್ನಾಟಕ ಬಂದ್ ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಬೆಂಬಲ ಸೂಚಿಸಿದ್ದು, ಕಲಾವಿದರೊಂದಿಗೆ ನಾಳೆ ಬೀದಿಗೆ ಇಳಿದು ಹೋರಾಟ ಮಾಡಲಿದೆ. ಬೆಳಗ್ಗೆಯಷ್ಟೇ ನಾಳಿನ ಬಂದ್ ನಲ್ಲಿ ಭಾಗಿಯಾಗುವಂತೆ ಮತ್ತು ಮುಂದಾಳತ್ವ ವಹಿಸಿಕೊಳ್ಳುವಂತೆ ಶಿವರಾಜ್ ಕುಮಾರ್ ಅವರಿಗೆ ಫಿಲ್ಮ್ ಚೇಂಬರ್ ಮನವಿ ಮಾಡಿತ್ತು. ನಂತರ ನಿಖಿಲ್ ಕುಮಾರಸ್ವಾಮಿ (Nikhil Kumar) ಅವರನ್ನು ಭೇಟಿ ಮಾಡಿ, ಬಂದ್ ನಲ್ಲಿ ಭಾಗಿಯಾಗುವಂತೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಚರ್ಚಿಸಿದ್ದಾರೆ.

    ನಾಳೆ ನಡೆಯಲಿರುವ ಕರ್ನಾಟಕ ಬಂದ್ (Karnataka Band) ಹೋರಾಟಕ್ಕೆ ಚಿತ್ರಮಂದಿರಗಳ ಮಾಲೀಕರು ಕೂಡ ಬೆಂಬಲ ಸೂಚಿಸಿದ್ದು, ನಾಳೆ ಬೆಳಿಗ್ಗೆಯಿಂದಲೇ ಕರ್ನಾಟಕದ ಎಲ್ಲ ಚಿತ್ರಮಂದಿರಗಳು ಬಾಗಿಲು ಹಾಕಲಿವೆ. ಸಂಜೆ ಹೋರಾಟ ಮುಗಿದ ಬಳಿಕ ಮತ್ತೆ ಚಿತ್ರ ಪ್ರದರ್ಶನಗಳನ್ನು ಆರಂಭಿಸಲಿವೆ ಎಂದು ಕರ್ನಾಟಕ ಚಿತ್ರ ಪ್ರದರ್ಶಕರ ಸಂಘದ ಅಧ್ಯಕ್ಷ ಕೆ.ವಿ.ಚಂದ್ರಶೇಖರ್ ತಿಳಿಸಿದ್ದಾರೆ.

    ಶುಕ್ರವಾರ ನಡೆಯಲಿರುವ ಕರ್ನಾಟಕ ಬಂದ್ ಗೆ ರಾಜ್ಯದ ಎಲ್ಲ ಚಿತ್ರಮಂದಿರಗಳು ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತಾ, ಸಂಜೆವರೆಗೆ ಪ್ರದರ್ಶನಗಳನ್ನು ಸ್ಥಗಿತಗೊಳಿಸಿ ಸಂಜೆ ನಂತರ ಪ್ರದರ್ಶನಗಳು ಮಾಮೂಲಿನಂತೆ ಪ್ರದರ್ಶನಗೊಳ್ಳುತ್ತವೆ. ಕಾವೇರಿ ನಮ್ಮದು. ರಾಜ್ಯ ಭಾಷೆ, ನೀರು ಮತ್ತು ನೆಲದ ವಿಷಯದಲ್ಲಿ ಯಾವುದೇ ರಾಜಿ ಇಲ್ಲದೇ ಸರ್ಕಾರ, ರೈತರ ಮತ್ತು ಹೋರಾಟಗಾರರ ಬೆಂಬಲಕ್ಕೆ ಸದಾ ಸಿದ್ಧರಿದ್ದೇವೆ ಎಂದು ತಿಳಿಸಿದ್ದಾರೆ ಅಧ್ಯಕ್ಷರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಾಳೆ ಕರ್ನಾಟಕ ಬಂದ್: ಸಂಜೆ ನಂತರ ಚಿತ್ರಮಂದಿರ ಓಪನ್

    ನಾಳೆ ಕರ್ನಾಟಕ ಬಂದ್: ಸಂಜೆ ನಂತರ ಚಿತ್ರಮಂದಿರ ಓಪನ್

    ನಾಳೆ ನಡೆಯಲಿರುವ ಕರ್ನಾಟಕ ಬಂದ್ (Karnataka Band) ಹೋರಾಟಕ್ಕೆ ಚಿತ್ರಮಂದಿರಗಳ (Theatre) ಮಾಲೀಕರು ಕೂಡ ಬೆಂಬಲ ಸೂಚಿಸಿದ್ದು, ನಾಳೆ ಬೆಳಿಗ್ಗೆಯಿಂದಲೇ ಕರ್ನಾಟಕದ ಎಲ್ಲ ಚಿತ್ರಮಂದಿರಗಳು ಬಾಗಿಲು ಹಾಕಲಿವೆ. ಸಂಜೆ ಹೋರಾಟ ಮುಗಿದ ಬಳಿಕ ಮತ್ತೆ ಚಿತ್ರ ಪ್ರದರ್ಶನಗಳನ್ನು ಆರಂಭಿಸಲಿವೆ ಎಂದು ಕರ್ನಾಟಕ ಚಿತ್ರ ಪ್ರದರ್ಶಕರ ಸಂಘದ ಅಧ್ಯಕ್ಷ ಕೆ.ವಿ.ಚಂದ್ರಶೇಖರ್ (KV Chandrasekhar) ತಿಳಿಸಿದ್ದಾರೆ.

    ಶುಕ್ರವಾರ ನಡೆಯಲಿರುವ ಕರ್ನಾಟಕ ಬಂದ್ ಗೆ ರಾಜ್ಯದ ಎಲ್ಲ ಚಿತ್ರಮಂದಿರಗಳು ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತಾ, ಸಂಜೆವರೆಗೆ ಪ್ರದರ್ಶನಗಳನ್ನು ಸ್ಥಗಿತಗೊಳಿಸಿ ಸಂಜೆ ನಂತರ ಪ್ರದರ್ಶನಗಳು ಮಾಮೂಲಿನಂತೆ ಪ್ರದರ್ಶನಗೊಳ್ಳುತ್ತವೆ. ಕಾವೇರಿ ನಮ್ಮದು. ರಾಜ್ಯ ಭಾಷೆ, ನೀರು ಮತ್ತು ನೆಲದ ವಿಷಯದಲ್ಲಿ ಯಾವುದೇ ರಾಜಿ ಇಲ್ಲದೇ ಸರ್ಕಾರ, ರೈತರ ಮತ್ತು ಹೋರಾಟಗಾರರ ಬೆಂಬಲಕ್ಕೆ ಸದಾ ಸಿದ್ಧರಿದ್ದೇವೆ ಎಂದು ತಿಳಿಸಿದ್ದಾರೆ ಅಧ್ಯಕ್ಷರು.

    ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ (Film Chamber) ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಶಿವರಾಜ್ ಕುಮಾರ್ ನಿವಾಸಕ್ಕೆ ಆಗಮಿಸಿ, ನಾಳೆಯ ಹೋರಾಟಕ್ಕೆ ಮುಂದಾಳತ್ವ ವಹಿಸಿಕೊಳ್ಳಬೇಕು ಎಂದು ಮನವಿ ಮಾಡಿದರು. ಹೀಗಾಗಿ ಶಿವರಾಜ್ ಕುಮಾರ್ ನೇತೃತ್ವದಲ್ಲಿ ನಾಳೆ ಚಿತ್ರೋದ್ಯಮ ಹೋರಾಟಕ್ಕೆ ಇಳಿಯಲಿದೆ. ಇದನ್ನೂ ಓದಿ:ಸಮಂತಾ ಔಟ್‌, ರಶ್ಮಿಕಾ ಮಂದಣ್ಣಗೆ ಸಿಕ್ತು ಬಿಗ್‌ ಚಾನ್ಸ್

    ಸಾಕಷ್ಟು ವರ್ಷಗಳಿಂದ ಕಾವೇರಿ ನೀರಿಗಾಗಿ ಹೋರಾಟ ನಡೆಯುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಸೆ.29ರಂದು ಕರ್ನಾಟಕ ಬಂದ್ ಕರೆ ನೀಡಿದ್ದು, ಸೀರಿಯಲ್, ಸಿನಿಮಾ ಚಿತ್ರೀಕರಣ, ಚಿತ್ರ ಪ್ರದರ್ಶನ ಸೇರಿದಂತೆ ಎಲ್ಲಾ ಚಟುವಟಿಕೆಗಳು ಬಂದ್ ಮೂಲಕ ಚಿತ್ರೋದ್ಯಮ ಸಾಥ್ ನೀಡುತ್ತಿದೆ.

    ನಾಳೆಯ ಪ್ರತಿಭಟನೆಯಲ್ಲಿ ಶಿವಣ್ಣ, ಉಪೇಂದ್ರ, ರಾಘಣ್ಣ, ನೆನಪಿರಲಿ ಪ್ರೇಮ್, ಅಜಯ್ ರಾವ್, ಪ್ರಜ್ವಲ್ ದೇವರಾಜ್, ರಂಗಾಯಣ ರಘು, ಸಾಧು ಕೋಕಿಲಾ ಸೇರಿದಂತೆ ಕಿರುತೆರೆ ನಟ- ನಟಿಯರು ಭಾಗಿಯಾಗುವ ಸಾಧ್ಯತೆ ಇದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಜನಿಕಾಂತ್ ವಿರುದ್ಧ ಮತ್ತೆ ಗುಡುಗಿದ ವಾಟಾಳ್ ನಾಗರಾಜ್

    ರಜನಿಕಾಂತ್ ವಿರುದ್ಧ ಮತ್ತೆ ಗುಡುಗಿದ ವಾಟಾಳ್ ನಾಗರಾಜ್

    ಕಾವೇರಿ ನದಿ ನೀರಿನ ವಿಚಾರವಾಗಿ ಮೌನ ವಹಿಸುವ ನಟ ರಜನಿಕಾಂತ್ (Rajinikanth) ಬಗ್ಗೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ (Vatal Nagaraj) ಕಿಡಿಕಾರಿದ್ದಾರೆ. ಯಾವುದೇ ಕಾರಣಕ್ಕೂ ರಜನಿಕಾಂತ್ ಕರ್ನಾಟಕಕ್ಕೆ ಬರಬಾರದು. ಅವರ ಚಿತ್ರಗಳನ್ನು ರಿಲೀಸ್ ಮಾಡಬಾರದು ಎಂದರು. ರಜನಿಕಾಂತ್ ಕನ್ನಡದವರಾಗಿ ಕನ್ನಡಿಗರ ಪರವಾಗಿ ಹೋರಾಟ ಮಾಡಬೇಕು ಎಂದು ಈ ಸಂದರ್ಭದಲ್ಲಿ ಹೇಳಿದರು.

    ಕಾವೇರಿ ಹೋರಾಟ ಅಥವಾ ಕನ್ನಡ ಪರ ಹೋರಾಟಗಳು ನಡೆದಾಗೊಮ್ಮೆ ರಜನಿಕಾಂತ್ ಹೆಸರು ಪ್ರಸ್ತಾಪವಾಗುತ್ತದೆ. ಈ ಹಿಂದೆ ರಜನಿಕಾಂತ್ ಅವರ ಸಿನಿಮಾಗಳನ್ನು ಕರ್ನಾಟಕದಲ್ಲಿ ರಿಲೀಸ್ ಆಗಬಾರದು ಎಂದು ದೊಡ್ಡ ಮಟ್ಟದಲ್ಲೇ ಹೋರಾಟ ನಡೆದಿತ್ತು. ಸಿನಿಮಾಗಳ ಪ್ರದರ್ಶನವನ್ನೂ ತಡೆದಿದ್ದರು. ಇದೀಗ ಮತ್ತೆ ಅಂಥದ್ದೊಂದು ಚರ್ಚೆ ಮುನ್ನೆಲೆಗೆ ಬಂದಿದೆ. ಅದರಲ್ಲೂ ರಜನಿಕಾಂತ್ ನಟನೆಯ ಜೈಲರ್ ಸಿನಿಮಾ ರಾಜ್ಯದಲ್ಲಿ ಐವತ್ತು ಕೋಟಿಗೂ ಅಧಿಕ ಹಣ ಗಳಿಕೆ ಮಾಡಿದೆ. ಹೀಗಾಗಿ ಮತ್ತೆ ರಜನಿ ವಿರುದ್ಧ ಗುಡುಗುವಂತಾಗಿದೆ.

    ಕರ್ನಾಟಕ ಬಂದ್ ಗೆ ಸ್ಯಾಂಡಲ್ ವುಡ್ ಬೆಂಬಲ

    ಕನ್ನಡ ಪರ ಹೋರಾಟಗಾರರು ನಾಳೆ ಕರ್ನಾಟಕ ಬಂದ್ (Karnataka Band)ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಈ ವಾರ ಸಿನಿಮಾಗಳನ್ನು ಬಿಡುಗಡೆ ಮಾಡದಂತೆ ಕರ್ನಾಟಕ ನಿರ್ಮಾಪಕರ ಸಂಘದ ಉಮೇಶ್ ಬಣಕಾರ್ ತಿಳಿಸಿದ್ದಾರೆ. ಈಗಾಗಲೇ ಸಂಬಂಧ ಪಟ್ಟ ನಿರ್ಮಾಪಕರ ಜೊತೆ ಮಾತನಾಡಲಾಗಿದೆ. ಅವರು ಕೂಡ ಬೆಂಬಲ ಸೂಚಿಸಿದ್ದಾರೆ ಎಂದು ಅವರು ಹೇಳಿದರು.

    ಇಂದು ಜಗ್ಗೇಶ್ ನಟನೆಯ ತೋತಾಪುರಿ 2 ಸಿನಿಮಾ ರಿಲೀಸ್ ಆಗುತ್ತಿದೆ. ನಾಳೆ ಗಣೇಶ್ ನಟನೆಯ ಬಾನದಾರಿಯಲ್ಲಿ ಚಿತ್ರ ಬಿಡುಗಡೆ ಆಗಬೇಕಿತ್ತು. ಅಲ್ಲದೇ, ಇನ್ನೂ ಹಲವು ಚಿತ್ರಗಳು ಬಿಡುಗಡೆ ಆಗಲು ತಯಾರಿ ಮಾಡಿಕೊಂಡಿದ್ದವು. ಬಂದ್ ಹಿನ್ನೆಲೆಯಲ್ಲಿ ಗುರುವಾರ ಮತ್ತು ಶನಿವಾರ ಸಿನಿಮಾಗಳನ್ನು ರಿಲೀಸ್ ಮಾಡಲು ಹೊರಟಿದ್ದಾರೆ ನಿರ್ಮಾಪಕರು.

     

    ನಾಳೆ ಸ್ಯಾಂಡಲ್ ವುಡ್ (Sandalwood) ಕೂಡ ತನ್ನ ಕೆಲಸ ನಿಲ್ಲಿಸಲಿದೆ. ಕಲಾವಿದರು ಕೂಡ ಬೀದಿಗೆ ಇಳಿದು ಹೋರಾಟ ಮಾಡಲಿದ್ದಾರೆ. ಬಹುತೇಕ ಶೂಟಿಂಗ್ ನಿಲ್ಲಿಸಲಾಗಿದೆ. ಸಿನಿಮಾ ಸಂಬಂಧಿ ಎಲ್ಲ ಚಟುವಟಿಕೆಗಳನ್ನು ನಿಲ್ಲಿಸಿ, ಬಂದ್ ನಲ್ಲಿ ಭಾಗಿಯಾಗಲಿದ್ದಾರೆ. ಇದರ ನೇತೃತ್ವವನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (Film Chamber) ವಹಿಸಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]