Tag: Film City

  • ಮೈಸೂರಲ್ಲಿ ವಿಶ್ವದರ್ಜೆಯ ಫಿಲ್ಮ್ ಸಿಟಿ ನಿರ್ಮಾಣಕ್ಕೆ 500 ಕೋಟಿ ಮೀಸಲು – ತವರು ಜಿಲ್ಲೆಗೆ ಸಿಎಂ ಭರ್ಜರಿ ಗಿಫ್ಟ್

    ಮೈಸೂರಲ್ಲಿ ವಿಶ್ವದರ್ಜೆಯ ಫಿಲ್ಮ್ ಸಿಟಿ ನಿರ್ಮಾಣಕ್ಕೆ 500 ಕೋಟಿ ಮೀಸಲು – ತವರು ಜಿಲ್ಲೆಗೆ ಸಿಎಂ ಭರ್ಜರಿ ಗಿಫ್ಟ್

    – ಮೈಸೂರು ಏರ್‌ಪೋರ್ಟ್‌ ರನ್‌ ವೇ ವಿಸ್ತರಣೆ ಭೂಸ್ವಾಧೀನಕ್ಕೆ 319 ಕೋಟಿ ಘೋಷಣೆ

    ಮೈಸೂರು: ತಮ್ಮ 16ನೇ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರು ಜಿಲ್ಲೆ ಮೈಸೂರಿಗೆ ಭರಪೂರ ಯೋಜನೆಗಳನ್ನ ಘೋಷಣೆ ಮಾಡಿದ್ದಾರೆ. ಮೈಸೂರಿನಲ್ಲಿ ವಿಶ್ವದರ್ಜೆಯ ಫಿಲ್ಮ್ ಸಿಟಿ ನಿರ್ಮಾಣಕ್ಕೆ 500 ಕೋಟಿ ಮೀಸಲಿಡುವುದಾಗಿ ಘೋಷಿಸಿದ್ದಾರೆ. ಅಲ್ಲದೇ ಮೈಸೂರು ವಿಮಾನ ನಿಲ್ದಾಣ ರನ್‌ ವೇ ವಿಸ್ತರಣೆಗೆ ಭೂಸ್ವಾಧೀನಕ್ಕೆ 319 ಕೋಟಿ ರೂ. ಅನುದಾನ, 100 ಕೋಟಿ ರೂ. ವೆಚ್ಚದಲ್ಲಿ ನಿಮ್ಹಾನ್ಸ್ ಮಾದರಿ ಆಸ್ಪತ್ರೆ ನಿರ್ಮಾಣ ಸೇರಿದಂತೆ ಹತ್ತು ಹಲವು ಯೋಜನೆಗಳನ್ನ ಘೋಷಿಸಿದ್ದಾರೆ.

    ಬಜೆಟ್‌ನಲ್ಲಿ ಮೈಸೂರಿಗೆ ಸಿಕ್ಕಿದ್ದೇನು?

    * ಅಂತಾರಾಷ್ಟ್ರೀಯ ಮಾದರಿ ʻಚಿತ್ರ ನಗರಿʼ ಸ್ಥಾಪನೆಗೆ 500 ಕೋಟಿ ರೂ. ಮೀಸಲು
    * ಅಗ್ನಿಶಾಮಕ ಠಾಣಾ ಕಟ್ಟಡ ನಿರ್ಮಾಣಕ್ಕೆ ಮೂರು ಕೋಟಿ ರೂ.
    * ಪ್ರೊ. ನಂಜುಂಡಸ್ವಾಮಿ ಸಂಶೋಧನ ಪೀಠ ಸ್ಥಾಪನೆ.
    * ರೇಷ್ಮೆಗೂಡು ಮಾರುಕಟ್ಟೆ ಸ್ಥಾಪನೆ.
    * 100 ಕೋಟಿ ರೂ. ವೆಚ್ಚದಲ್ಲಿ ನಿಮ್ಹಾನ್ಸ್ ಮಾದರಿ ಆಸ್ಪತ್ರೆ ನಿರ್ಮಾಣ.
    * ಕ್ರೀಡಾ ವಿಜ್ಞಾನ ಕೇಂದ್ರ ಸ್ಥಾಪನೆ.
    * ಬನ್ನಿ ಮಂಟಪದಲ್ಲಿ 120 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ಬಸ್ ನಿಲ್ದಾಣ ಸ್ಥಾಪನೆ.
    * ರಾಜ್ಯ ಮಟ್ಟದ ವಸ್ತು ಸಂಗ್ರಹಾಲಯ.
    * ಮೈಸೂರು ವಿಮಾನ ನಿಲ್ದಾಣ ರನ್ ವೇ ವಿಸ್ತರಣೆ – ಭೂ ಸ್ವಾಧೀನಕ್ಕಾಗಿ 319 ಕೋಟಿ ರೂ.
    * ಕ್ರೀಡಾ, ವಿಜ್ಞಾನ ಕೇಂದ್ರ ಸ್ಥಾಪನೆ. 7 ಕೋಟಿ ರೂ.
    * ಕುಸ್ತಿ, ವಾಲಿಬಾಲ್, ಖೋ ಖೋ ಅಕಾಡೆಮಿ ಸ್ಥಾಪನೆಗೆ 2 ಕೋಟಿ ರೂ. ಮೀಸಲು
    * ಪ್ರವಾಸಿಗರಿಗೆ ಪೌಷ್ಠಿಕ ಮೀನು ಖಾದ್ಯ ಒದಗಿಸಲು ಹೈಟೆಕ್ ಮತ್ಸದರ್ಶಿನಿ ಆರಂಭ.
    * ಮೈಸೂರು ಜಿಲ್ಲೆಯ ತಗಡೂರು ಸಮುದಾಯ ಆರೋಗ್ಯ ಕೇಂದ್ರ 100 ಹಾಸಿಗೆ ಆಸ್ಪತ್ರೆಯಾಗಿ ಮೇಲ್ದರ್ಜೆಗೆ.
    * ಎಂಡೋಕ್ರೈನಾಲಜಿ ಕೇಂದ್ರ ಸ್ಥಾಪನೆ.
    * ವಿಶೇಷ ಮಕ್ಕಳ ಸರ್ಕಾರಿ ವಸತಿಯುತ ಶಾಲೆಗಳ ಉನ್ನತೀಕರಣಕ್ಕೆ 5 ಕೋಟಿ ರೂ.
    * ಬುಡಕಟ್ಟು ಜನಾಂಗದ ವಿದ್ಯಾರ್ಥಿಗಳ ಐದು ವಸತಿ ಶಾಲೆ ಮೇಲ್ದರ್ಜೆಗೆ.
    * ವರುಣದಲ್ಲಿ ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪನೆಗೆ 60 ಕೋಟಿ ರೂ. ಮೀಸಲು.
    * ಮೈಸೂರು ವಿವಿಯಲ್ಲಿ ತಾಳೆಗರಿ ಹಸ್ತಪ್ರತಿ ಡಿಜಿಟಲೀಕರಣಕ್ಕೆ 1 ಕೋಟಿ ರೂ.
    * ಮೈಸೂರಿನ ರಂಗಾಯಣಕ್ಕೆ 2 ಕೋಟಿ ರೂ. ಅನುದಾನ.
    * ಟಿ. ನರಸೀಪುರ ತಾಲ್ಲೂಕು ಕ್ರೀಡಾಂಗಣಕ್ಕೆ ಆರು ಕೋಟಿ ರೂ.
    * ಮೈಸೂರಿನಲ್ಲಿ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ ಸ್ಥಾಪನೆ.
    * ಕಬಿನಿ ನದಿಗೆ ಅಡ್ಡಲಾಗಿ ಹಾಗೂ ಕಪ್ಪಡಿ ಗ್ರಾಮದ ಬಳಿ ಕಾವೇರಿ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಮಾಡುವುದಾಗಿ ಘೋಷಿಸಿದರು.

  • 160 ಎಕರೆ ಪ್ರದೇಶದಲ್ಲಿ ಮೈಸೂರು ಫಿಲಂ ಸಿಟಿ ನಿರ್ಮಾಣ: ಸಿದ್ದರಾಮಯ್ಯ

    160 ಎಕರೆ ಪ್ರದೇಶದಲ್ಲಿ ಮೈಸೂರು ಫಿಲಂ ಸಿಟಿ ನಿರ್ಮಾಣ: ಸಿದ್ದರಾಮಯ್ಯ

    ಮೈಸೂರು: ಇಲ್ಲಿನ ಇಮ್ಮಾವು ಗ್ರಾಮದಲ್ಲಿ (Immavu Village )160 ಎಕರೆ ಪ್ರದೇಶದಲ್ಲಿ ಮೈಸೂರು ಫಿಲಂ ಸಿಟಿ (Mysuru Film City) ನಿರ್ಮಿಸಲು ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.

    ಮೈಸೂರು ನಗರದಲ್ಲಿ ದಸರಾ ಉತ್ಸವ ಅಂಗವಾಗಿ ಚಲನಚಿತ್ರೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಿಂದಿನ ಬಾರಿ ನಾನು ಮುಖ್ಯಮಂತ್ರಿ ಆಗಿದ್ದಾಗ, ಮೈಸೂರಿನಲ್ಲಿ ಫಿಲಂ ಸಿಟಿ ನಿರ್ಮಿಸಲು ತೀರ್ಮಾನಿಸಿ ಇಮ್ಮಾವು ಗ್ರಾಮದಲ್ಲಿ 110 ಎಕರೆ ವಿಸ್ತೀರ್ಣದ ಭೂಮಿಯನ್ನು ಮೀಸಲಿರಿಸಲಾಗಿದ್ದು, ಇದರೊಂದಿಗೆ ಹೆಚ್ಚುವರಿಯಾಗಿ ಎರಡನೇ ಹಂತದ ವಿಸ್ತರಣೆಗೆ 50 ಎಕರೆ ಜಮೀನನ್ನು ಗುರುತಿಸಿ ನೀಡಲು ತೀರ್ಮಾನಿಸಲಾಗಿದೆ. ಮಾದರಿ ಸಿನಿಮಾ ನಗರಿಯನ್ನು ನಿರ್ಮಿಸುವುದು ಸರ್ಕಾರ ಹಾಗೂ ಚಿತ್ರರಂಗದವರ ಉದ್ದೇಶವಾಗಿದ್ದು, ಇನ್ನು ಮೂರು ವರ್ಷದೊಳಗೆ ಫಿಲಂಸಿಟಿಯನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದರು. ಇದನ್ನೂ ಓದಿ: ಅಶೋಕ್ ಹೆಗಲ ಮೇಲೆ ಬಂದೂಕು ಇಟ್ಟು ಸಿದ್ದರಾಮಯ್ಯ ಕಡೆ ಗುರಿ ಹೊಡೆದಿದ್ದಾರೆ- ಸಿಟಿ ರವಿ

    ಚಿತ್ರರಂಗದ (Kannada Film Industry) ಬೆಳವಣಿಗೆಗೆ ಸರ್ಕಾರ ಎಲ್ಲಾ ರೀತಿಯ ಬೆಂಬಲವನ್ನು ನೀಡುತ್ತಾ ಬಂದಿದೆ. ಕನ್ನಡ ಚಲನಚಿತ್ರಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು, ಚಿತ್ರರಂಗ ಬೆಳೆಯಬೇಕು. ಜನರು ಸಿನಿಮಾಗಳನ್ನು ಚಿತ್ರಮಂದಿರಗಳಿಗೆ ಹೋಗಿಯೇ ವೀಕ್ಷಿಸಬೇಕು. ದಸರಾ ಚಲನಚಿತ್ರೋತ್ಸವ ಅಕ್ಟೋಬರ್ 04ರಿಂದ 10ರವರೆಗೆ ನಡೆಯಲಿದ್ದು, ದೇಶ ವಿದೇಶಗಳ ಪ್ರಶಸ್ತಿ ಪುರಸ್ಕೃತ ಚಲನಚಿತ್ರಗಳು ಪ್ರದರ್ಶನವಾಗಲಿದೆ. ಚಲನಚಿತ್ರೋತ್ಸವದಲ್ಲಿ ಹಳೆಯ ಹಾಗೂ ಹೊಸ ಸಿನಿಮಾಗಳನ್ನು ವೀಕ್ಷಿಸುವ ಸುವರ್ಣ ಅವಕಾಶವಿದ್ದು, ಸಾರ್ವಜನಿಕರು ಈ ಅವಕಾಶವನ್ನು ಬಳಸಿಕೊಳ್ಳಬೇಕು ಎಂದು ತಿಳಿಸಿದರು. ಇದನ್ನೂ ಓದಿ: Breaking | ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್

    ನಟ ನಿರ್ಮಾಪಕ ದಿವಂಗತ ದ್ವಾರಕೀಶ್ ಅವರು ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಈ ಬಾರಿ ದಸರಾ ಚಿತ್ರೋತ್ಸವವನ್ನು ದ್ವಾರಕೀಶ್ ಅವರ ಗೌರವಾರ್ಥವಾಗಿ ಹಮ್ಮಿಕೊಳ್ಳಲಾಗಿದೆ. ದ್ವಾರಕೀಶ್ ಅವರು ಕನ್ನಡ ಚಿತ್ರರಂಗದಲ್ಲಿ ಮರೆಯಲಾಗದ ವ್ಯಕ್ತಿ. ದ್ವಾರಕೀಶ್ ಅವರ ಮಕ್ಕಳು ಕನ್ನಡ ಚಿತ್ರರಂಗಕ್ಕೆ ಉತ್ತಮ ಸೇವೆ ಸಲ್ಲಿಸುವಂತಾಗಲಿ ಎಂದ ಸಿಎಂ ಹೆಲಿಕಾಪ್ಟರ್‌ನಲ್ಲಿ ಮೈಸೂರಿಗೆ ದ್ವಾರಕೀಶ್ ಅವರ ಜೊತೆ ಪ್ರಯಾಣಿಸಿದ ನೆನಪನ್ನು ಸ್ಮರಿಸಿ ಅವರೊಂದಿಗಿದ್ದ ಸ್ನೇಹ ಬಾಂಧವ್ಯವನ್ನು ಮೆಲುಕು ಹಾಕಿದರು. ಇದನ್ನೂ ಓದಿ: ದಸರಾ, ದೀಪಾವಳಿ ಹಬ್ಬಕ್ಕೆ ರೈಲ್ವೆ ಇಲಾಖೆ ಬಂಪರ್ ಗಿಫ್ಟ್

  • Karnataka Budget 2023:  ಖಾಸಗಿ ಸಹಭಾಗಿತ್ವದಲ್ಲಿ ಫಿಲ್ಮ್ ಸಿಟಿ

    Karnataka Budget 2023: ಖಾಸಗಿ ಸಹಭಾಗಿತ್ವದಲ್ಲಿ ಫಿಲ್ಮ್ ಸಿಟಿ

    ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ 14ನೇ ಬಜೆಟ್ (Karnataka Budget 2023) ಮಂಡನೆ ಮಾಡಿದ್ದು, ಚಿತ್ರರಂಗಕ್ಕೂ ಭರ್ಜರಿ ಕೊಡುಗೆಯನ್ನು ನೀಡಿದ್ದಾರೆ. ಅದರಲ್ಲೂ ಹಲವು ವರ್ಷಗಳಿಂದ ಚರ್ಚೆಯಲ್ಲಿರುವ ಚಿತ್ರನಗರಿ (Film City) ಕುರಿತು ಈ ಬಾರಿಯೂ ಬಜೆಟ್ ನಲ್ಲಿ ಘೋಷಣೆ ಮಾಡಿದ್ದು, ಮೈಸೂರಿನಲ್ಲಿ (Mysore) ಚಿತ್ರನಗರಿ ಮಾಡುವುದಾಗಿ ಬಜೆಟ್ ನಲ್ಲಿ ತಿಳಿಸಿದ್ದಾರೆ.

    2015-16ನೇ ಸಾಲಿನಲ್ಲಿ ಮೈಸೂರು ಜಿಲ್ಲೆಯಲ್ಲಿ ಜಾಗತಿಕ ಮಟ್ಟದ ಚಿತ್ರನಗರಿ ಸ್ಥಾಪಿಸಲು ಘೋಷಿಸಲಾಗಿತ್ತು. ನಂತರದ ಸರಕಾರವು ಸದರಿ ಚಿತ್ರನಗರಿಯನ್ನು ಬೆಂಗಳೂರಿಗೆ ಸ್ಥಳಾಂತರಗೊಳಿಸಲು ಉದ್ದೇಶಿಸಿತ್ತು. ಆದರೆ, ಇಲ್ಲಿವರೆಗೂ ಅನುಷ್ಠಾನಗೊಂಡಿಲ್ಲ. ಈ ಬಾರಿ ಮೈಸೂರು ಜಿಲ್ಲೆಯಲ್ಲೇ ಚಿತ್ರನಗರಿ ಮಾಡುವುದಾಗಿ ಘೋಷಿಸಿದ್ದಾರೆ. ಇದನ್ನೂ ಓದಿ:ರಿಷಬ್ ಶೆಟ್ಟಿ ಹುಟ್ಟುಹಬ್ಬಕ್ಕೆ ಭೂರಿ ಭೋಜನ, ಭರ್ಜರಿ ತಯಾರಿ

    ಈ ಹಿಂದೆ ಸಿದ್ದರಾಮಯ್ಯನವರ ಸರಕಾರವೇ ಮೈಸೂರಿನಲ್ಲಿ ಚಿತ್ರನಗರಿ ಮಾಡುವುದಾಗಿ ತಿಳಿಸಿತ್ತು. ಆ ಘೋಷಣೆಯಂತೆ ಮೈಸೂರು ಜಿಲ್ಲೆಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಚಿತ್ರನಗರಿಯನ್ನು ನಿರ್ಮಿಸಲು ಮತ್ತೆ ಮುಂದಾಗಿದೆ. ಅದನ್ನು ಈ ಬಾರಿಯ ಬಜೆಟ್ ನಲ್ಲಿ ಘೋಷಣೆ ಮಾಡಿದೆ.

     

    ಹಲವಾರು ಬಾರಿ ಚಿತ್ರನಗರಿಯ ಬಗ್ಗೆ ಬಜೆಟ್ ನಲ್ಲಿ ಪ್ರಸ್ತಾಪವಾಗಿದೆ. ಕಾಂಗ್ರೆಸ್ ಸರಕಾರ ಮೈಸೂರಿನಲ್ಲಿ ಚಿತ್ರನಗರಿ ಎಂದಿದ್ದರೆ, ಜೆಡಿಎಸ್ ಸರಕಾರ ರಾಮನಗರದಲ್ಲಿ ಚಿತ್ರನಗರಿ ಮಾಡುವುದಾಗಿ ತಿಳಿಸಿತ್ತು. ಬಿಜೆಪಿ ಸರಕಾರವು ಅದನ್ನು ಬೆಂಗಳೂರಿನಲ್ಲೇ ಮಾಡುವುದಾಗಿ ಘೋಷಣೆ ಮಾಡಿತ್ತು. ಇದೀಗ ಮತ್ತೆ ಚಿತ್ರನಗರಿ ಮೈಸೂರು ಪಾಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸರಕಾರದ ಮುಂದೆ ಹಳೆ ಬೇಡಿಕೆ ಇಟ್ಟ ರಿಷಬ್ ಶೆಟ್ಟಿ

    ಸರಕಾರದ ಮುಂದೆ ಹಳೆ ಬೇಡಿಕೆ ಇಟ್ಟ ರಿಷಬ್ ಶೆಟ್ಟಿ

    ಕಾಂತಾರ (Kantara) ಚಿತ್ರ ಖ್ಯಾತಿಯ ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishabh Shetty)  ಸರಕಾರದ ಮುಂದೆ ಹಳೆ ಬೇಡಿಕೆಯನ್ನೇ ಇಟ್ಟಿದ್ದಾರೆ. ಈಗಾಗಲೇ ಬೆಂಗಳೂರಿನಲ್ಲೇ ಫಿಲ್ಮ್ ಸಿಟಿ ಆಗಬೇಕು ಎಂದು ಹಲವಾರು ಬಾರಿ ಚರ್ಚೆಯಾಗಿದೆ. ಆನಂತರ ರಾಮನಗರ, ಮೈಸೂರು ಹೇಗೆ ಮಾತಿನಲ್ಲೇ ಫಿಲ್ಮ್ ಸಿಟಿ ಸುತ್ತಾಡಿ ಬಂದಿದೆ. ಇದೀಗ ಮತ್ತೆ ಬೆಂಗಳೂರಿನಲ್ಲಿ ಫಿಲ್ಮ್ ಸಿಟಿ  (Film City)ಆಗಬೇಕು ಎಂದು ರಿಷಬ್ ಒತ್ತಾಯಿಸಿದ್ದಾರೆ.

    ಕೇಂದ್ರ ಸರಕಾರ (Govt) ಆಯೋಜಿಸಿದ್ದ ಭಾರತದ ಯುವಜನತೆಯ ಕುರಿತಾದ ಕಾರ್ಯಕ್ರಮದಲ್ಲಿ ಮಾತನಾಡಿರುವ ರಿಷಬ್, ‘ಬೆಂಗಳೂರಿನಲ್ಲೇ ಫಿಲ್ಮ್ ಸಿಟಿ ಆಗಲಿ. ಫಿಲ್ಮ್ ಸಿಟಿ ಅವಶ್ಯಕತೆ ಬೆಂಗಳೂರಿನಲ್ಲೇ ಹೆಚ್ಚಿದೆ. ಫಿಲ್ಮ್ ಸಿಟಿ ಎನ್ನುವುದು ಚಿತ್ರೋದ್ಯಮದ ಕನಸು. ಇನ್ನೂ ಆ ಕನಸು ಈಡೇರಿಲ್ಲ’ ಎಂದಿದ್ದಾರೆ ರಿಷಬ್. ಇದನ್ನೂ ಓದಿ:ಬಾಯ್‌ಫ್ರೆಂಡ್ ಖಾಸಗಿ ಫೋಟೋ ಶೇರ್ ಮಾಡಿದ ಮಲೈಕಾ- ಅರ್ಜುನ್ ಕಪೂರ್ ಟ್ರೋಲ್

    ‍ಪ್ರಸಾರ ಮತ್ತು ಮಾಹಿತಿ ಸಚಿವಾಲಯ ಆಯೋಜಿಸಿದ್ದ 9ನೇ ಸೇವಾ ಸುಶಾಸನ್ ಗರೀಬ್ ಕಲ್ಯಾಣ್ ರಾಷ್ಟ್ರೀಯ ಸಮಾವೇಶದ ಪ್ಯಾನೆಲಿಸ್ಟ್ ಆಗಿ ಹೋಗಿದ್ದ ರಿಷಬ್, ಸಿನಿಮಾ ರಂಗದ ಬಗ್ಗೆ ಅನೇಕ ವಿಷಯಗಳನ್ನೂ ಹೊರಹಾಕಿದ್ದಾರೆ. ಪ್ರೇಕ್ಷಕರನ್ನು ತಲುಪುವ ಬಗೆಯ ಬಗ್ಗೆಯೂ ಅವರು ಮಾತನಾಡಿದ್ದಾರೆ.

  • ಮುಂಬೈ, ಥಾಣೆ ನಡುವೆ ಫಿಲ್ಮ್ ಸಿಟಿ ನಿರ್ಮಾಣಕ್ಕೆ ಪ್ಲಾನ್: ಏಕನಾಥ್ ಶಿಂಧೆ

    ಮುಂಬೈ, ಥಾಣೆ ನಡುವೆ ಫಿಲ್ಮ್ ಸಿಟಿ ನಿರ್ಮಾಣಕ್ಕೆ ಪ್ಲಾನ್: ಏಕನಾಥ್ ಶಿಂಧೆ

    ಮುಂಬೈ: ಕಲಾವಿದರಿಗಾಗಿ ವಿಶಾಲವಾದ ವೇದಿಕೆ ಕಲ್ಪಿಸಲು ಮುಂಬೈ (Mumbai) ಮತ್ತು ಥಾಣೆ (Thane) ನಗರಗಳ ನಡುವೆ ಫಿಲ್ಮ್ ಸಿಟಿ (Film City) ಸ್ಥಾಪಿಸಲು ಮಹಾರಾಷ್ಟ್ರ ಸರ್ಕಾರ ಯೋಜಿಸಿದೆ ಎಂದು ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಹೇಳಿದ್ದಾರೆ.

    ಖ್ಯಾತ ಮರಾಠಿ ರಂಗಭೂಮಿ ಕಲಾವಿದ ಪ್ರಶಾಂತ್ ದಾಮ್ಲೆ (Prashant Damle) ಅವರ ‘ಏಕ್ ಲಗ್ನಾಚಿ ಗೋಷ್ಟ್’ (Eka Lagnachi Gosht) ಎಂಬ ನಾಟಕದ 12,500ನೇ ಪ್ರದರ್ಶನಕ್ಕೆ ಆಗಮಿಸಿ, ಕಾರ್ಯಕ್ರಮವನ್ನುದ್ದೇಶಿ ಮಾತನಾಡಿದ ಏಕನಾಥ್ ಶಿಂಧೆ ಅವರು, ರಾಜ್ಯ ಸರ್ಕಾರ ಮರಾಠಿ ರಂಗಭೂಮಿ ಮತ್ತು ಸಿನಿಮಾಗೆ ಬೆಂಬಲ ವ್ಯಕ್ತಪಡಿಸುವುದಾಗಿ ತಿಳಿಸಿದರು. ಇದನ್ನೂ ಓದಿ: ಇದೇ ವಾರ ರಾಜಧಾನಿಗೆ ಪ್ರಧಾನಿ ಮೋದಿ- ಬೆಂಗಳೂರಿನಲ್ಲಿ ಅಖಾಡಕ್ಕಿಳಿದ ಸಿಎಂ

    ಥಾಣೆಯಲ್ಲೂ ಸಾಕಷ್ಟು ಶೂಟಿಂಗ್‍ಗಳು ನಡೆಯುತ್ತಿರುತ್ತದೆ, ಮುಂಬೈ ಮತ್ತು ಥಾಣೆ ನಡುವೆ 23 ಕಿ.ಮೀ. ಪ್ರತ್ಯೇಕಿಸಿ ಫಿಲ್ಮ್ ಸಿಟಿಯನ್ನು ನಿರ್ಮಿಸುವ ಬಗ್ಗೆ ಸರ್ಕಾರ ಯೋಜಿಸಿದ್ದು, ಆದಷ್ಟು ಶೀಘ್ರವೇ ಕೆಲಸ ಮಾಡಲಿದೆ ಎಂದರು. ಇದನ್ನೂ ಓದಿ: ಹೇಮಾವತಿ ಹಿನ್ನೀರಿನಲ್ಲಿ ತೇಲುವ ಹಡಗು- ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ ಶೆಟ್ಟಿಹಳ್ಳಿ ಚರ್ಚ್

    ಡ್ರಾಮಾ ಆಡಿಟೋರಿಯಂಗಳನ್ನು ಪರಿಶೀಲಿಸಿ ಮತ್ತು ಅವುಗಳನ್ನು ಅಭಿವೃದ್ಧಿಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ನೋಡಲ್ ಅಧಿಕಾರಿಯನ್ನು ನೇಮಿಸಲಾಗುತ್ತದೆ ಎಂದರು. ಅಲ್ಲದೇ ಇದೇ ವೇಳೆ ಪ್ರಶಾಂತ್ ದಾಮ್ಲೆ ಅವರಿಗೆ ಪದ್ಮ ಶ್ರೀ ಪ್ರಶಸ್ತಿ ನೀಡಲು ಕೇಂದ್ರಕ್ಕೆ ಶಿಫಾರಸು ಮಾಡಲಾಗಿದೆ ಎಂದು ತಿಳಿಸಿದರು.

    Live Tv
    [brid partner=56869869 player=32851 video=960834 autoplay=true]

  • ಮತ್ತೆ ಮುನ್ನೆಲೆಗೆ ಬಂದ ಫಿಲ್ಮ್ ಸಿಟಿ: ಸಿಎಂ ಹೇಳಿದ್ದೇನು?

    ಮತ್ತೆ ಮುನ್ನೆಲೆಗೆ ಬಂದ ಫಿಲ್ಮ್ ಸಿಟಿ: ಸಿಎಂ ಹೇಳಿದ್ದೇನು?

    ಳೆದ ಹಲವು ವರ್ಷಗಳಿಂದ ಫಿಲ್ಮ್ ಸಿಟಿ ಬಗ್ಗೆ ಮಾತುಗಳು ಕೇಳುತ್ತಲೇ ಬರುತ್ತಿವೆ. ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದಾಗ ಈ ಫಿಲ್ಮ್ ಸಿಟಿಯನ್ನು ರಾಮನಗರದಲ್ಲಿ ಮಾಡುವುದಾಗಿ ಘೋಷಣೆ ಮಾಡಿದ್ದರು. ಆದರೆ, ಅದು ಅಲ್ಲಿ ಆಗಲಿಲ್ಲ. ಹಲವು ಸರಕಾರಗಳು ಬಂದಾಗ ಬೆಂಗಳೂರಿನಲ್ಲೇ ಫಿಲ್ಮ್ ಸಿಟಿ ಮಾಡುವಂತೆ ಒತ್ತಡ ಹೇರಲಾಗಿತ್ತು. ಅದು ಆಗಲಿಲ್ಲ. ಇದೀಗ ಮೈಸೂರಿನಲ್ಲಿ ಫಿಲ್ಮ್ ಸಿಟಿ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

    ಈ ಹಿಂದೆಯೇ ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲಿ ಮಾಡುವುದಾಗಿ ಹೇಳಿಕೆ ನೀಡಲಾಗಿದ್ದರೂ, ಅದರ ಕಾರ್ಯಚಟುವಟಿಕೆಗಳು ಆಗುವತನಕ ಯಾವುದನ್ನೂ ನಂಬಲು ಸಾಧ್ಯವಿಲ್ಲ ಎನ್ನವಂತಹ ಅನುಭವಗಳು ಈ ಹಿಂದೆ ಆಗಿವೆ. ಹೀಗಾಗಿ ಬಸವರಾಜ ಬೊಮ್ಮಾಯಿ ಅವರು ಮಾತು ಮಹತ್ವ ಪಡೆದುಕೊಂಡಿದೆ. ಅವರು ಕೇವಲ ಮೈಸೂರಿನಲ್ಲಿ ಫಿಲ್ಮ್ ಸಿಟಿ ಮಾಡಲಾಗುವುದು ಎನ್ನುವ ಹೇಳಿಕೆ ಮಾತ್ರ ಕೊಟ್ಟಿಲ್ಲ. ಜಾಗ ಗುರುತಿಸಿದ್ದಾಗಿಯೂ ಅವರು ಹೇಳಿದ್ದಾರೆ. ಇದನ್ನೂ ಓದಿ : ಶಿವರಾಜ್ ಕುಮಾರ್ ಗಾಗಿ ಚಿತ್ರ ಮಾಡಲಿದೆ ಹೊಂಬಾಳೆ ಫಿಲ್ಮ್ಸ್: ನಿರ್ದೇಶಕರು ಯಾರು?

    BASAVARAJ BOMMAI

    ನಿನ್ನೆ ಚಾರ್ಲಿ ಸಿನಿಮಾವನ್ನು ನೋಡಿಕೊಂಡು ಬಂದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಸಿಎಂ, “ಈಗಾಗಲೇ ಮೈಸೂರಿನಲ್ಲಿ ಫಿಲ್ಮ್ ಸಿಟಿ ಮಾಡಲು ಜಾಗ ಗುರುತಿಸಲಾಗಿದೆ. ಖಾಸಗಿ ಅವರ ಸಹಭಾಗಿತ್ವದಲ್ಲಿ ಫಿಲ್ಮ್ ಸಿಟಿ ಆದಷ್ಟು ಬೇಗ ಮಾಡಲಾಗುವುದು. ಆಧುನಿಕ ತಂತ್ರಜ್ಞಾನವನ್ನು ಅಲ್ಲಿ ಬಳಸಿಕೊಳ್ಳಲಾಗುವುದು’ ಎಂದಿದ್ದಾರೆ.

  • ಬೆಂಗ್ಳೂರಿನಲ್ಲಿ ಫಿಲ್ಮ್ ಸಿಟಿ ನಿರ್ಮಾಣ- ಸಿಎಂ ಬಿಎಸ್‍ವೈ ಅಂತಿಮ ಮುದ್ರೆ

    ಬೆಂಗ್ಳೂರಿನಲ್ಲಿ ಫಿಲ್ಮ್ ಸಿಟಿ ನಿರ್ಮಾಣ- ಸಿಎಂ ಬಿಎಸ್‍ವೈ ಅಂತಿಮ ಮುದ್ರೆ

    ಬೆಂಗಳೂರು: ಚಿತ್ರರಂಗದ ಬಹು ವರ್ಷಗಳ ಕನಸು ಕೊನೆಗೂ ಈಡೇರುವ ಕಾಲ ಸನ್ನಿತವಾಗಿದೆ. ಚಿತ್ರರಂದ ಬಹು ಬೇಡಿಕೆಯ ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಿಎಂ ಯಡಿಯೂರಪ್ಪ ಅಂತಿಮ ಮುದ್ರೆ ಒತ್ತಿದ್ದು, ಬೆಂಗಳೂರಿನಲ್ಲಿ ಫಿಲ್ಮ್ ಸಿಟಿ ಸ್ಥಾಪನೆ ಮಾಡುವುದಾಗಿ ಘೋಷಿಸಿದ್ದಾರೆ. ಅಷ್ಟೇ ಅಲ್ಲದೆ ಈ ವರ್ಷವೇ ಫಿಲ್ಮ್ ಸಿಟಿ ನಿರ್ಮಾಣ ಕಾಮಗಾರಿ ಪ್ರಾರಂಭ ಮಾಡುವ ಭರವಸೆಯನ್ನು ನೀಡಿದ್ದಾರೆ.

    ವಿಧಾನ ಪರಿಷತ್ ಕಲಾಪದಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ಸಿನ ಸದಸ್ಯೆ ಜಯಮಾಲ ಫಿಲ್ಮ್ ಸಿಟಿ ಬಗ್ಗೆ ಪ್ರಶ್ನೆ ಕೇಳಿದರು. ಅನೇಕ ವರ್ಷಗಳಿಂದ ಫಿಲ್ಮ್ ಸಿಟಿ ಕೇವಲ ಪುಸ್ತಕದಲ್ಲಿ ಇದೆ. ಸಿದ್ದರಾಮಯ್ಯ ಮೈಸೂರಿನಲ್ಲಿ ಫಿಲ್ಮ್ ಸಿಟಿ ಮಾಡುವುದಾಗಿ ಹೇಳಿದ್ದರು. ಕುಮಾರಸ್ವಾಮಿ ರಾಮನಗರದಲ್ಲಿ ಮಾಡುವುದಾಗಿ ಹೇಳಿದ್ದರು. ಎಲ್ಲವೂ ಕೇವಲ ಘೋಷಣೆ ಆಗಿಯೇ ಉಳಿದಿವೆ. ಯಡಿಯೂರಪ್ಪನವರಾದರೂ ಫಿಲ್ಮ್ ಸಿಟಿ ಕನಸನ್ನು ನನಸು ಮಾಡಿ ಎಂದು ಮನವಿ ಮಾಡಿದರು. ಇದಕ್ಕೆ ಧ್ವನಿಗೂಡಿಸಿದ ಜೆಡಿಎಸ್ ಸಂದೇಶ್ ನಾಗರಾಜ್ ಮೈಸೂರಿನಲ್ಲಿ ಈಗಾಗಲೇ ಜಾಗ ಗುರುತಿಸಲಾಗಿದೆ. ಅಲ್ಲೇ ಫಿಲ್ಮ್ ಸಿಟಿ ಮಾಡುವಂತೆ ಸಿಎಂ ಯಡಿಯೂರಪ್ಪರಿಗೆ ಮನವಿ ಸಲ್ಲಿಸಿದರು.

    ಸದಸ್ಯರ ಪ್ರಶ್ನೆಗೆ ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಉತ್ತರ ಕೊಟ್ಟರು. ಫಿಲ್ಮ್ ಸಿಟಿಗಾಗಿ ಈ ಬಜೆಟ್‍ನಲ್ಲಿ 500 ಕೋಟಿ ಹಣ ಇಟ್ಟಿದ್ದೇನೆ. ಬೆಂಗಳೂರಿನಲ್ಲಿ 150 ಎಕರೆ ಜಾಗ ಕೂಡ ಗುರುತಿಸಲಾಗಿದೆ. ನಾವೆಲ್ಲರೂ ಏಪ್ರಿಲ್ ಮೊದಲ ವಾರ ಸ್ಥಳ ಪರಿಶೀಲನೆ ಮಾಡಿ ಜಾಗ ಒಪ್ಪಿಗೆ. ಆದರೆ ಈ ವರ್ಷವೇ ಫಿಲ್ಮ್ ಸಿಟಿ ಕಾಮಗಾರಿ ಪ್ರಾರಂಭ ಮಾಡುವುದಾಗಿ ತಿಳಿಸಿದರು.

    ಸಂದೇಶ್ ನಾಗರಾಜ್ ಮನವಿ ತಿರಸ್ಕಾರ ಮಾಡಿದ ಮುಖ್ಯಮಂತ್ರಿಗಳು, ಬೆಂಗಳೂರಿನಲ್ಲಿ ಸ್ಥಳ ಗುರುತಿಸಲಾಗಿದೆ. ಬೆಂಗಳೂರಿನಲ್ಲೇ ಫಿಲ್ಮ್ ಸಿಟಿ ಸ್ಥಾಪನೆ ಮಾಡುತ್ತೇವೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಅಂತ ಸ್ಪಷ್ಟಪಡಿಸಿದರು.

  • ರಾಮೋಜಿ ರಾವ್ ಫಿಲ್ಮ್ ಸಿಟಿಯಂತೆ ರಾಜ್ಯದಲ್ಲೂ ಫಿಲ್ಮ್ ಸಿಟಿ ಆದ್ರೆ ಒಳ್ಳೆಯದು: ಪುನೀತ್

    ರಾಮೋಜಿ ರಾವ್ ಫಿಲ್ಮ್ ಸಿಟಿಯಂತೆ ರಾಜ್ಯದಲ್ಲೂ ಫಿಲ್ಮ್ ಸಿಟಿ ಆದ್ರೆ ಒಳ್ಳೆಯದು: ಪುನೀತ್

    – ಪಿವಿಆರ್​​​​​ನಲ್ಲೂ ಕನ್ನಡ ಸಿನಿಮಾಗೆ ಒಳ್ಳೆಯ ಅವಕಾಶ ಕೊಡಿ

    ಬೆಂಗಳೂರು: ಹೈದರಾಬಾದ್‍ನ ರಾಮೋಜಿ ರಾವ್ ಫಿಲ್ಮ್ ಸಿಟಿಯಂತೆ ರಾಜ್ಯದಲ್ಲೂ ಫಿಲ್ಮ್ ಸಿಟಿ ಆದರೆ ಒಳ್ಳೆಯದು ಎಂದು ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಹೇಳಿದ್ದಾರೆ.

    ಕೆ.ಆರ್.ಪುರಂ ಬಳಿಯ ಒರಾಯನ್ ಅಪ್ ಟೌನ್ ಮಾಲ್‍ನಲ್ಲಿ ಪಿವಿಆರ್​​​​​ನ ನೂರನೇ ಸ್ಕ್ರೀನ್ ಉದ್ಘಾಟನೆ ಮಾಡಿ ಮಾತನಾಡಿದ ಅವರು, ಫಿಲ್ಮ್ ಸಿಟಿ ನಿರ್ಮಾಣಕ್ಕಾಗಿ ಬಜೆಟ್‍ನಲ್ಲಿ 500 ಕೋಟಿ ರೂ. ಘೋಷಣೆ ಖುಷಿ ತಂದಿದೆ. ರಾಮೋಜಿ ರಾವ್ ಫಿಲ್ಮ್ ಸಿಟಿಯಂತೆ ಇಲ್ಲೂ ಫಿಲ್ಮ್ ಸಿಟಿ ಆದರೆ ಚೆನ್ನಾಗಿರುತ್ತೆ. ಇದರಿಂದ ಸಿನಿಮಾ ನಿರ್ಮಾಣಕ್ಕೆ ಅನುಕೂಲವಾಗಲಿದೆ. ಜೊತೆಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ರಾಜ್ಯಕ್ಕೆ ಬರುತ್ತಾರೆ ಎಂದು ಹೇಳಿದರು. ಇದನ್ನೂ ಓದಿ: ಮನವಿಯಂತೆ ಚಿತ್ರನಗರಿಗೆ 500 ಕೋಟಿ ರೂ. ಅನುದಾನ- ಸಿಎಂಗೆ ಅಭಿನಂದನೆ ಸಲ್ಲಿಸಿದ ಯಶ್

    ಫಿಲ್ಮ್ ಸಿಟಿ ಎಲ್ಲಿ ನಿರ್ಮಾಣವಾದ್ರೆ ಉತ್ತಮ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯಾವ ಸ್ಥಳದಲ್ಲಿ ಆದರೂ ಖುಷಿನೇ. ನಮ್ಮಗೆ ಒಳ್ಳೆಯ ವ್ಯವಸ್ಥೆ ಸಿಗಲಿದೆ. ಬೆಂಗಳೂರಿನಲ್ಲೇ ಆಗಬೇಕು, ಮೈಸೂರಿನಲ್ಲೇ ಆಗಬೇಕು ಅನ್ನೋದು ಏನು ಇಲ್ಲ ಎಂದು ತಿಳಿಸಿದರು.

    ಪಿವಿಆರ್​​​​​ನಲ್ಲೂ ಕನ್ನಡ ಸಿನಿಮಾಗೆ ಒಳ್ಳೆಯ ಅವಕಾಶ ಕೊಡಿ. ನನಗೆ ಥಿಯೇಟರ್‌ನಲ್ಲಿ ಸಿನಿಮಾ ನೋಡುವುಕ್ಕೆ ತುಂಬಾ ಖುಷಿಯಾಗುತ್ತದೆ. ಅಲ್ಲಿ ಜನಗಳ ನಡುವೆ ಸಿನಿಮಾ ನೋಡುವ ಖುಷಿಯೇ ಬೇರೆ. ಅಪ್ಪಾಜಿ ಡಾ.ರಾಜ್‍ಕುಮಾರ್ ಮತ್ತು ನಟ ರಜನಿಕಾಂತ್ ಸರ್ ಜೊತೆಗೆ ಪಿವಿಆರ್​​​​​ನಲ್ಲಿ ಜೋಗಿ ಸಿನಿಮಾ ವೀಕ್ಷಿಸಿದ ನೆನಪಿದೆ ಎಂದರು. ಇದೇ ವೇಳೆ ಪಿವಿಆರ್​​​​​ನಲ್ಲಿ ಕನ್ನಡ ಸಿನಿಮಾಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕು ಅಂತ ಪುನೀತ್ ಮನವಿ ಮಾಡಿಕೊಂಡರು.

  • ಮನವಿಯಂತೆ ಚಿತ್ರನಗರಿಗೆ 500 ಕೋಟಿ ರೂ. ಅನುದಾನ- ಸಿಎಂಗೆ ಅಭಿನಂದನೆ ಸಲ್ಲಿಸಿದ ಯಶ್

    ಮನವಿಯಂತೆ ಚಿತ್ರನಗರಿಗೆ 500 ಕೋಟಿ ರೂ. ಅನುದಾನ- ಸಿಎಂಗೆ ಅಭಿನಂದನೆ ಸಲ್ಲಿಸಿದ ಯಶ್

    – ಮೈಸೂರು ಫಿಲ್ಮ್ ಸಿಟಿಗೆ ಉತ್ತಮ ಜಾಗ
    – ಫಿಲ್ಮ್ ಸಿಟಿ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

    ಬೆಂಗಳೂರು: ಮನವಿಯಂತೆ ರಾಜ್ಯ ಬಜೆಟ್ ಮಂಡನೆಯಲ್ಲಿ ಚಿತ್ರನಗರಿಗೆ 500 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ರಾಕಿಂಗ್ ಸ್ಟಾರ್ ಯಶ್ ಅಭಿನಂದನೆ ಸಲ್ಲಿಸಿದ್ದಾರೆ.

    ನಗರದಲ್ಲಿ ಇಂದು ಓಬೆರಾಯನ ಕಥೆ ಸಿನಿಮಾದ ಪೋಸ್ಟರ್ ಬಿಡುಗಡೆ ಮಾಡಿ ಬಳಿಕ ಮಾತನಾಡಿದ ಅವರು, ಇಡೀ ಚಿತ್ರರಂಗದ ಪರವಾಗಿ ಮಾನ್ಯ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸುತ್ತೇವೆ. ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಮನವಿ ಸಲ್ಲಿಸಿದಾಗ ಸಿಎಂ ವೇದಿಕೆ ಮೇಲೆಯೇ ಮಾತು ಕೊಟ್ಟಿದ್ದರು. ಅದರಂತೆ ಇಂದು ಬಜೆಟ್‍ನಲ್ಲಿ 500 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು ಬಹಳ ಖುಷಿ ತಂದಿದೆ ಎಂದರು. ಇದನ್ನೂ ಓದಿ: ಯಶ್ ಬೇಡಿಕೆ ಬೆನ್ನಲ್ಲೇ ಬೆಂಗ್ಳೂರಲ್ಲಿ ಫಿಲಂ ಸಿಟಿಗೆ 500 ಕೋಟಿ ರೂ. ಘೋಷಣೆ

    ನಮ್ಮ ಸಿನಿಮಾ ಉದ್ಯಮಕ್ಕೆ ಫಿಲ್ಮ್ ಸಿಟಿ ತುಂಬಾ ಅವಶ್ಯಕತೆ ಇದೆ. ನಾವು ಎಲ್ಲೋ ಹೋಗಿ ಶೂಟ್ ಮಾಡುವಾಗ ನಮ್ಮ ರಾಜ್ಯದಲ್ಲೂ ಇಂತಹ ವ್ಯವಸ್ಥೆ ಇರಬೇಕು ಎನ್ನುವ ಅಭಿಪ್ರಾಯ ಬರುತ್ತದೆ. ಸಿನಿಮಾ ಕ್ಷೇತ್ರಕ್ಕೆ ಸೃಜನಶೀಲ ಕಲಾವಿದರು, ಬರಹಗಾರರು, ಯುವಕರಿಗೆ ಅಗತ್ಯವಿದೆ. ಸಿನಿಮಾ ಒಂದು ಉದ್ಯಮ. ಇದನ್ನು ಇನ್ನಷ್ಟು ಚೆನ್ನಾಗಿ ಬೆಳೆಯಲು ಸರ್ಕಾರ ಕೈ ಜೋಡಿಸಬೇಕು ಎಂದು ಕೇಳಿಕೊಂಡರು.

    ಫಿಲ್ಮ್ ಸಿಟಿ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ. ಈ ಬಗ್ಗೆ ಡಿಸಿಎಂ ಅಶ್ವಥ್‍ನಾರಾಯಣ ಅವರೊಂದಿಗೆ ಮಾತನಾಡಿದ್ದೇನೆ. ಬೆಂಗಳೂರಿನ ಹೆಸರಘಟ್ಟದಲ್ಲಿ ಭೂಮಿ ಇದೆ ಅಂತ ಅವರು ಹೇಳಿದ್ದಾರೆ. ಅಲ್ಲಿಯೇ ಫಿಲ್ಮ್ ಸಿಟಿ ಮಾಡುವ ಉದ್ದೇಶವನ್ನು ವ್ಯಕ್ತಪಡಿಸಿದ್ದಾರೆ. ಆದರೆ ಮೈಸೂರಿನಲ್ಲಿ ಫಿಲ್ಮ್ ಸಿಟಿ ಮಾಡಿದರೆ ಉತ್ತಮ ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ. ಏಕೆಂದರೆ ಅಲ್ಲಿ ಜನದಟ್ಟಣೆ, ಟ್ರಾಫಿಕ್ ಸಮಸ್ಯೆ ಇರುವುದಿಲ್ಲ. ಮೊದಲಿನಿಂದಲೂ ಮೈಸೂರಿನಲ್ಲಿ ಸಿನಿಮಾಗೆ ಪೂರಕ ವಾತಾವರಣ ಸಿಗುತ್ತಾ ಬಂದಿದೆ ಎಂದು ತಿಳಿಸಿದರು.

    ಸದ್ಯಕ್ಕೆ ನಮ್ಮ ರಾಜ್ಯಕ್ಕೆ ಫಿಲ್ಮ್ ಸಿಟಿ ಅಗತ್ಯವಿದೆ. ಸರ್ಕಾರ ಎಲ್ಲಿ ನಿರ್ಮಾಣ ಮಾಡಿದರೂ ಓಕೆ. ಚಿತ್ರರಂಗದ ಹಿರಿಯರು ಈ ಬಗ್ಗೆ ಸರ್ಕಾರದ ಜೊತೆಗೆ ಚರ್ಚೆ ಮಾಡಿ ಅಂತಿಮ ನಿರ್ಧಾರ ಕೈಗೊಳ್ಳಲಿ ಎಂದು ಹೇಳಿದರು.

  • ಯಶ್ ಬೇಡಿಕೆ ಬೆನ್ನಲ್ಲೇ ಬೆಂಗ್ಳೂರಲ್ಲಿ ಫಿಲಂ ಸಿಟಿಗೆ 500 ಕೋಟಿ ರೂ. ಘೋಷಣೆ

    ಯಶ್ ಬೇಡಿಕೆ ಬೆನ್ನಲ್ಲೇ ಬೆಂಗ್ಳೂರಲ್ಲಿ ಫಿಲಂ ಸಿಟಿಗೆ 500 ಕೋಟಿ ರೂ. ಘೋಷಣೆ

    ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಇಂದು 2020ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದು, ಬೆಂಗಳೂರಲ್ಲಿ ಜಾಗತಿಕ ಗುಣಮಟ್ಟದ ಫಿಲಂ ಸಿಟಿ ನಿರ್ಮಾಣ ಮಾಡಲು 500 ಕೋಟಿ ರೂ. ಅನುದಾನ ಘೋಷಣೆ ಮಾಡಿದ್ದಾರೆ.

    ಈ ಮೂಲಕ ನಟ ರಾಕಿಂಗ್ ಸ್ಟಾರ್ ಯಶ್ ಬೇಡಿಕೆಯ ಬೆನ್ನಲ್ಲೇ ಸಿಲಿಕಾನ್ ಸಿಟಿಯಲ್ಲಿ ಫಿಲಂ ಸಿಟಿ ನಿರ್ಮಾಣ ಮಾಡಲು ಸರ್ಕಾರ ಮುಂದಾಗುತ್ತಿರುವುದು ಚಿತ್ರರಂಗಕ್ಕೆ ಖುಷಿ ನೀಡಿದೆ. ಫೆಬ್ರವರಿ 26 ರಂದು ನಡೆದ ಚಲನಚಿತ್ರೋತ್ಸವ ಸ್ಮರಣ ಸಂಚಿಕೆ ಬಿಡುಗಡೆ ಮಾಡಿ ಮಾತನಾಡಿದ್ದ ಯಶ್, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಬಳಿ ಮನವಿ ಮಾಡಿಕೊಂಡಿದ್ದರು.

    ಮನವಿಯೇನು..?
    ಕರ್ನಾಟಕದಲ್ಲಿ ಹುಡುಗರಿಗೆ ತುಂಬಾನೇ ಕನಸು, ಹುರುಪು, ಶಕ್ತಿಯಿದೆ. ಹೀಗಾಗಿ ದೊಡ್ಡದಾಗಿ ಒಂದು ಸ್ಟುಡಿಯೋ ಕಟ್ಟಿಸಿ ಬಿಡಿ. ಕಾಲ ಕಾಲದಿಂದ ಬರೀ ಅಲ್ಲೊಂದಷ್ಟು ಎಕ್ರೆ ಬಂತಂತೆ, ಇಲ್ಲೊಂದಷ್ಟು ಎಕ್ರೆ ಬಂತಂತೆ. ಈ ಜಾಗ, ಆ ಜಾಗ ಅಂತ ಹೋಗ್ತಾನೇ ಇದೆ ಸರ್. ಎಲ್ಲೋ ಬೇರೆ ಊರಿಗೆ ಹೋಗಿ ಕೆಲಸ ಮಾಡಬೇಕು. ಹೀಗಾಗಿ ನಮಗೆ ಶಕ್ತಿ ಕೊಡಿ. ತೆರಿಗೆ ರೂಪದಲ್ಲಿ ಎಷ್ಟು ವಾಪಸ್ ಕೊಡ್ತೀವಿ ಅಂದ್ರೆ ತುಂಬಾ ಖುಷಿಯಾಗಿ ಬಿಡಬೇಕು. ಇದರಿಂದ ಇಡೀ ಉದ್ಯಮನೂ ಬೆಳೆಯುತ್ತದೆ. 70ನೇ ದಶಕದಲ್ಲಿ ಕನ್ನಡ ಚಿತ್ರರಂಗದ ಒಂದು ಯುಗ ಇತ್ತು ಅಂತ ನೀವು ಹೇಳಿದ್ರಿ. ಇದೀಗ ಆ ಕೆಲಸ ಮಾಡುವಂತಹ ಸಾಕಷ್ಟು ಹುಡುಗರು ಇಲ್ಲೇ ಇರುತ್ತಾರೆ. ಆದರೆ ಅವರಿಗೆ ಶಕ್ತಿ ತುಂಬಬೇಕಷ್ಟೆ ಎಂದು ಹೇಳಿದ್ದರು.

    70ರ ದಶಕದಲ್ಲಿ ಎಲ್ಲವೂ ಚೆನ್ನೈನಲ್ಲಿ ನಡೆಯುತ್ತಿತ್ತು. ಹೀಗಾಗಿ ಅವರಿಗೆ ಕಲಿಯೋದಕ್ಕೆ ಜಾಗ ಇತ್ತು. ಬೇರೆ ಬೇರೆ ಅಸಿಸ್ಟೆಂಟ್ ಡೈರೆಕ್ಟರುಗಳಾಗಿ ಸಿನಿಮಾ ಕೆಲಸ ತಿಳಿದುಕೊಳ್ಳಲು ಸಾಕಷ್ಟು ಅವಕಾಶಗಳು ಕೂಡ ಇತ್ತು. ಆದ್ರೆ ಈಗ ಎಲ್ಲರೂ ಏಕಲವ್ಯಗಳಾಗಿ ಬಿಟ್ಟಿದ್ದೇವೆ. ನಾವೇ ಎಲ್ಲೋ ಸಿನಿಮಾ ನೋಡಿಕೊಂಡು ಕಲಿತು ನಂತರ ಬೇರೆಯವರ ಜೊತೆ ಸ್ಪರ್ಧೆ ಮಾಡುತ್ತಿದ್ದೇವೆ. ಹೀಗಾಗಿ ಸ್ಟುಡಿಯೋ ಮಾಡುವ ಮೂಲಕ ಶಕ್ತಿ ತುಂಬಿ ಎಂದು ಬಿಎಸ್‍ವೈ ಅವರಿಗೆ ಯಶ್ ಮನವಿ ಮಾಡಿಕೊಂಡಿದ್ದರು.