Tag: Filmfare

  • ಅವಾರ್ಡ್ ಕಾರ್ಯಕ್ರಮಕ್ಕೆ ವಿಭಿನ್ನ ಕಾಸ್ಟ್ಯೂಮ್ ನಲ್ಲಿ ಬಂದ ಜಾಕ್ವೆಲಿನ್

    ಅವಾರ್ಡ್ ಕಾರ್ಯಕ್ರಮಕ್ಕೆ ವಿಭಿನ್ನ ಕಾಸ್ಟ್ಯೂಮ್ ನಲ್ಲಿ ಬಂದ ಜಾಕ್ವೆಲಿನ್

    ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾದ ‘ರಾ ರಾ ರಕ್ಕಮ್ಮ’ ಹಾಡಿಗೆ ಮೈಚಳಿ ಬಿಟ್ಟು ಕುಣಿದಿರುವ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez) ಇತ್ತೀಚೆಗಷ್ಟೇ ನಡೆದ ಫಿಲ್ಮ್ ಫೇರ್ ಪ್ರಶಸ್ತಿ ಸಮಾರಂಭದಲ್ಲಿ ವಿಭಿನ್ನ ರೀತಿಯ ಕಾಸ್ಟ್ಯೂಮ್ ನಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ.

    ಈ ಪ್ರಶಸ್ತಿ ಸಮಾರಂಭಕ್ಕಾಗಿಯೇ ಕಾಸ್ಟ್ಯೂಮ್ ಸಿದ್ಧಪಡಿಸಿಕೊಂಡಿದ್ದ ಜಾಕ್ವೆಲಿನ್ ಬುಡಕಟ್ಟು ರಾಣಿಯ ವೇಷದಲ್ಲಿ ಕಾಣಿಸಿಕೊಂಡು ಕುತೂಹಲಕ್ಕೆ ಕಾರಣವಾದರು. ಅದೇ ಡ್ರೆಸ್ ನಲ್ಲೇ ಹತ್ತಾರು ಫೋಟೋಗಳು ಪೋಸ್ (Photoshoot)  ಕೂಡ ನೀಡಿದ್ದಾರೆ.

    ಕರ್ನಾಟಕ ಮೂಲದ ಸುಖೇಶ್ ಚಂದ್ರಶೇಖರ್ (Sukhesh Chandrasekhar) ಸ್ನೇಹದಿಂದಾಗಿ ನಾನು ನೆಮ್ಮದಿ ಕಳೆದುಕೊಂಡೆ ಎಂದಿದ್ದರು ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez). ಬಹುಕೋಟಿ ವಂಚನೆಯ ಆರೋಪಿ ಆಗಿರುವ ಸುಖೇಶ್ ಚಂದ್ರಶೇಖರ್ ಕಡೆಯಿಂದ ದುಬಾರಿ ಬೆಲೆಯ ಗಿಫ್ಟ್ ಪಡೆದುಕೊಂಡಿದ್ದಾರೆ ಎನ್ನುವ ಕಾರಣಕ್ಕಾಗಿ ಜಾಕ್ವೆಲಿನ್ ಇಡಿ ವಿಚಾರಣೆಯನ್ನು ಎದುರಿಸಿದ್ದರು.

    ಕೋರ್ಟ್ ಮುಂದೆ ಹಾಜರಾಗಿದ್ದ ಜಾಕ್ವೆಲಿನ್ ಕಣ್ಣೀರಿಟ್ಟು ಆತನ ಸ್ನೇಹದಿಂದಾಗಿ ನೆಮ್ಮದಿ ಕಳೆದುಕೊಂಡೆ ಹಾಗೂ ಅವನು ನನ್ನ ಭಾವನೆಗಳೊಂದಿಗೆ ಆಟವಾಡಿ, ಜೀವನವನ್ನೇ ನರಕ ಮಾಡಿದ್ದಾನೆ ಎಂದು ಹೇಳಿಕೊಂಡಿದ್ದರು. ಜೀವನವನ್ನು ಮಾತ್ರವಲ್ಲ, ವೃತ್ತಿ ಜೀವನವನ್ನೇ ಅವನು ಹದಗೆಡಿಸಿಬಿಟ್ಟಿದ್ದಾನೆ ಎಂದೂ ದೂರಿದ್ದರು. ಸುಖೇಶ್ ತಮಗೆ ಪರಿಚಯವಾಗಿದ್ದು ಪಿಂಕಿ ಇರಾನಿ ಎನ್ನುವ ಮಹಿಳೆಯಿಂದ ಎಂದು ಅವರು ಹೇಳಿಕೆ ಕೊಟ್ಟಿದ್ದರು.

    ಸುಕೇಶ್ ಮತ್ತು ಜಾಕ್ವೆಲಿನ್ ಡೇಟಿಂಗ್ ವಿಚಾರ ಹಲವು ತಿಂಗಳಿಂದ ನಡೆಯುತ್ತಿದ್ದರೂ, ಅದು ಬೆಳಕಿಗೆ ಬಂದಿದ್ದು ಸುಕೇಶ್ ಬಂಧನವಾದ ನಂತರ. ವಂಚನೆಯ ಹಣವನ್ನು ಈತ ಯಾರಿಗೆಲ್ಲ ಖರ್ಚು ಮಾಡಿದ್ದಾನೆ ಎಂದು ತನಿಖೆಗೆ ಇಳಿದಾಗ ಅದರಲ್ಲಿ ಜಾಕ್ವೆಲಿನ್ ಹೆಸರು ಪತ್ತೆಯಾಗಿತ್ತು. ಹಲವು ದುಬಾರಿ ವಸ್ತುಗಳನ್ನು ಈಕೆಗೆ ಸುಕೇಶ್ ನೀಡಿದ್ದಾನೆ ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದ್ದರು.

    ತಾನು ಸುಕೇಶ್‌ನನ್ನು ಭೇಟಿಯಾಗಿದ್ದು ಕಡಿಮೆ. ಆತ ನನಗೇನೂ ಕೊಡಿಸಿಲ್ಲ ಎಂದು ಜಾಕ್ವೆಲಿನ್ ಹೇಳಿಕೊಂಡಿದ್ದರೂ, ತಾನು ಆತನನ್ನು ಪ್ರೀತಿಸುತ್ತಿಲ್ಲ ಎಂದು ಪದೇ ಪದೇ ಹೇಳಿಕೆ ಕೊಡುತ್ತಿದ್ದರೂ, ಸುಕೇಶ್ ಮಾತ್ರ ಅದನ್ನು ಒಪ್ಪುತ್ತಿಲ್ಲ. ಈಗಲೂ ಜಾಕ್ವೆಲಿನ್‌ಳನ್ನು ಪ್ರೀತಿಸುತ್ತಿದ್ದೇನೆ ಎಂದು ಜೈಲಿನಿಂದಲೇ ಸಂದೇಶ ಕಳುಹಿಸುತ್ತಿದ್ದಾನೆ. ಅಲ್ಲದೇ ಪ್ರೇಮಿಗಳ ದಿನದಂದು ಅವನು ವಿಶ್ ಮಾಡಿದ್ದ.

    ಈಗಲೂ ಜಾಕ್ವೆಲಿನ್ ರನ್ನು ಸುಕೇಶ್ ಪ್ರೀತಿಸುತ್ತಿದ್ದಾನೆ ಎಂದು ಹೇಳಲಾಗುತ್ತಿದೆ. ಜೈಲಿನಿಂದಲೇ ಅವನು ಅನೇಕ ಪತ್ರಗಳನ್ನು ಬರೆದಿದ್ದಾನೆ. ‘ಜಾಕ್ವೆಲಿನ್ ಜೊತೆ ನನ್ನ ಸ್ನೇಹ ಮುರಿಯಬೇಕು ಎಂದು ಹಲವಾರು ಬಾರಿ ನೋರಾ ಪ್ರಯತ್ನಿಸಿದಳು. ಜಾಕ್ವೆಲಿನ್ ಜೊತೆ ನಾನು ಇರುವುದು ಆಕೆಗೆ ಇಷ್ಟವಿರಲಿಲ್ಲ. ಜಾಕ್ವೆಲಿನ್ ಜೊತೆ ಹೋಗಲು ನೋರಾ ಬಿಡುತ್ತಿರಲಿಲ್ಲ. ನಾನು ಕಾಲ್ ರಿಸೀವ್ ಮಾಡದೇ ಇದ್ದರೆ ಪದೇ ಪದೇ ಕಾಲ್ ಮಾಡುತ್ತಿದ್ದಳು. ಜಾಕ್ವೆಲಿನ್ ಜೊತೆಗಿನ ಸ್ನೇಹವನ್ನು ಮುರಿದುಕೋ ಎಂದು ಹೇಳುತ್ತಿದ್ದಳು’ ಎಂದು ಪತ್ರದಲ್ಲಿ ಸುಕೇಶ್ ಬರೆದಿದ್ದ.

  • `ಕಲಾತಪಸ್ವಿ’ ಖ್ಯಾತ ಚಲನಚಿತ್ರ ನಿರ್ಮಾಪಕ ಕೆ. ವಿಶ್ವನಾಥ್ ನಿಧನ

    `ಕಲಾತಪಸ್ವಿ’ ಖ್ಯಾತ ಚಲನಚಿತ್ರ ನಿರ್ಮಾಪಕ ಕೆ. ವಿಶ್ವನಾಥ್ ನಿಧನ

    ಅಮರಾವತಿ: ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ (Dadasaheb Phalke Award) ಪುರಸ್ಕೃತ ಖ್ಯಾತ ಚಲನಚಿತ್ರ ನಿರ್ಮಾಪಕ (Filmmaker) ಕಾಸಿನಾಧುನಿ ವಿಶ್ವನಾಥ್ (92) (K Viswanath) ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.

    ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಗುರುವಾರ ತಡರಾತ್ರಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

    `ಕಲಾತಪಸ್ವಿ’ (Kalatapasvi) ಎಂದೇ ಖ್ಯಾತರಾಗಿರುವ ವಿಶ್ವನಾಥ್ ಅವರು ಫೆಬ್ರವರಿ 1930ರಲ್ಲಿ ಆಂಧ್ರಪ್ರದೇಶದಲ್ಲಿ ಜನಿಸಿದರು. ತೆಲುಗು ಚಿತ್ರರಂಗದಲ್ಲಿ (Telugu Industry) ಮಾತ್ರವಲ್ಲದೇ ತಮಿಳು ಹಾಗೂ ಹಿಂದಿ ಚಲನಚಿತ್ರಗಳಲ್ಲಿಯೂ ತಮ್ಮದೇ ಛಾಪು ಮೂಡಿಸಿದ್ದಾರೆ.

    1951ರಲ್ಲಿ ಪಾತಾಳ ಭೈರವಿ ಸಿನಿಮಾದ ಮೂಲಕ ಸಹಾಯಕ ನಿರ್ದೇಶಕರಾಗಿ ಸಿನಿಮಾ (Cinema) ರಂಗದಲ್ಲಿ ವೃತ್ತಿ ಜೀವನ ಆರಂಭಿಸಿದ ಕೆ ವಿಶ್ವನಾಥ್, 1965 ರಲ್ಲಿ `ಆತ್ಮ ಗೌರವಂ’ ಸಿನಿಮಾದ ಮೂಲಕ ನಿರ್ದೇಶನಕ್ಕೆ ಕಾಲಿಟ್ಟರು. ಇದನ್ನೂ ಓದಿ: ಖ್ಯಾತ ನಟ ನಿತಿನ್ ಪಾಲಾದ ‘ಕಬ್ಜ’ ಸಿನಿಮಾದ ಆಂಧ್ರ-ತೆಲಂಗಾಣ ಹಕ್ಕು

    `ಸ್ವಾತಿ ಮುತ್ಯಂ (Swati Mutyam), ಸಾಗರ ಸಂಗಮಂ, ಶಂಕರಾಭರಣಂ, ಸಪ್ತಪದಿ, ಸಿರಿವೆನ್ನೆಲ, ಶುಭಲೇಖ, ಶ್ರುತಿಲಯಲು’ ಸೇರಿದಂತೆ ಹತ್ತು ಹಲವು ಅತ್ಯದ್ಭುತ ತೆಲುಗು ಸಿನಿಮಾಗಳನ್ನು ನಿರ್ದೇಶಿಸಿ ಸೈ ಎನಿಸಿಕೊಂಡಿದ್ದ ವಿಶ್ವನಾಥ್, ಹಿಂದಿ ಭಾಷೆಯಲ್ಲೂ `ಈಶ್ವರ್, ಸಂಜೋಗ್, ಸುರ ಸಂಗಮ್ ಸೇರಿದಂತೆ ಅನೇಕ ಚಿತ್ರಗಳನ್ನು ನಿರ್ದೇಶಿಸಿದ್ದರು. ಸ್ವರಾಭಿಷೇಕಂ, ಅತಡು, ಠಾಗೂರ್’ ಸೇರಿ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ. ನಟ, ನಿರ್ದೇಶಕರಾಗಿ, ಚಿತ್ರಕಥೆಗಾರರಾಗಿಯೂ ತನ್ನದೇ ಆದ ಛಾಪು ಮೂಡಿಸಿ ತೆಲುಗು ಚಿತ್ರರಂಗದಲ್ಲಿ ಕಲಾ ತಪಸ್ವಿ ಎಂದೇ ಹೆಸರಾಂತರಾಗಿದ್ದರು.

    ವಿಶ್ವನಾಥ್ ಅವರಿಗೆ 1992ರಲ್ಲಿ ಪದ್ಮಶ್ರೀ, 5 ರಾಷ್ಟ್ರೀಯ ಪ್ರಶಸ್ತಿಗಳು, ಆಂಧ್ರಪ್ರದೇಶ ಸರ್ಕಾರದಿಂದ 20 ನಂದಿ ಪ್ರಶಸ್ತಿಗಳು, ಜೀವಮಾನ ಸಾಧನೆ ಸೇರಿ 10 ಫೆಲ್ಮ್‌ಫೇರ್‌ ಪ್ರಶಸ್ತಿಗಳು ಸಂದಿವೆ. ಅಲ್ಲದೇ ಭಾರತೀಯ ಚಿತ್ರರಂಗದ ಅತ್ಯುನ್ನತ `ದಾದಾಸಾಹೇಬ್ ಫಾಲ್ಕೆ’ ಗೌರವ ಸಿಕ್ಕಿತ್ತು. ಇದನ್ನೂ ಓದಿ: ಕನ್ನಡದ ‘ಕಬ್ಜ’ ಸಿನಿಮಾಗೆ ಸಾಥ್ ನೀಡಲಿದ್ದಾರೆ ರಾಜಮೌಳಿ

    ವಿಶ್ವನಾಥ್ ಅವರ ನಿಧನಕ್ಕೆ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಸಂತಾಪ ಸೂಚಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಫಿಲ್ಮ್ ಫೇರ್: ಆ್ಯಕ್ಟ್ 1978 ಚಿತ್ರಕ್ಕೆ ನಾಲ್ಕು ಪ್ರಶಸ್ತಿ, ಅತ್ಯುತ್ತಮ ನಟ ಧನಂಜಯ್, ನಟಿ ಯಜ್ಞಾ

    ಫಿಲ್ಮ್ ಫೇರ್: ಆ್ಯಕ್ಟ್ 1978 ಚಿತ್ರಕ್ಕೆ ನಾಲ್ಕು ಪ್ರಶಸ್ತಿ, ಅತ್ಯುತ್ತಮ ನಟ ಧನಂಜಯ್, ನಟಿ ಯಜ್ಞಾ

    ದಕ್ಷಿಣ ಭಾರತದ ಫಿಲ್ಮ್ ಫೇರ್ (Filmfare) ಪ್ರಶಸ್ತಿ ಪ್ರದಾನ ಸಮಾರಂಭವು ನಿನ್ನೆ ಬೆಂಗಳೂರಿನಲ್ಲಿ ನಡೆದಿದ್ದು, 2020 ಹಾಗೂ 2021ನೇ ಸಾಲಿನಲ್ಲಿ ಬಿಡುಗಡೆಯಾದ ಸಿನಿಮಾಗಳಿಗೆ 67ನೇ ಫಿಲ್ಮ್ ಫೇರ್ ಪ್ರಶಸ್ತಿಗಳನ್ನು ನೀಡಲಾಗಿದೆ. ಕನ್ನಡ, ತಮಿಳು, ತೆಲುಗು ಹಾಗೂ ಮಲಯಾಳಂ ಸಿನಿಮಾಗಳಿಗೆ ಪ್ರತ್ಯೇಕವಾಗಿ ಈ ಪ್ರಶಸ್ತಿಗಳನ್ನು ನೀಡಲಾಗಿದ್ದು, ನಾಲ್ಕು ಸಿನಿಮಾ ರಂಗದ ಅನೇಕ ಕಲಾವಿದರು ಮತ್ತು ತಂತ್ರಜ್ಞರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

    ಎರಡು ವರ್ಷಗಳಲ್ಲಿ ಬಿಡುಗಡೆಯಾದ ಸಿನಿಮಾಗಳಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ (Mansore) ಅವರ ಆ್ಯಕ್ಟ್ 1978 ಸಿನಿಮಾಗೆ ಅತೀ ಹೆಚ್ಚು ಪ್ರಶಸ್ತಿಗಳು ದೊರೆತದ್ದು, ಇದೇ ಸಿನಿಮಾದ ನಟನೆಗಾಗಿ ಯಜ್ಞಾ ಶೆಟ್ಟಿ ಅವರು ಅತ್ಯುತ್ತಮ ನಟಿಯಾಗಿ ಹೊರ ಹೊಮ್ಮಿದ್ದಾರೆ. ಅತ್ಯುತ್ತಮ ನಟ ಪ್ರಶಸ್ತಿಯು ಡಾಲಿ ಧನಂಜಯ್ (Dhananjay) ಬಡವ ರಾಸ್ಕಲ್ ಸಿನಿಮಾದ ನಟನೆಗಾಗಿ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಪವನ್ ಕುಮಾರ್-ಫಾಸಿಲ್ ಕಾಂಬಿನೇಷನ್‌ನ ‘ಧೂಮ್ʼ ಚಿತ್ರದ ಅದ್ಧೂರಿ ಮುಹೂರ್ತ

    ಈ ಬಾರಿ ಜೀವ ಮಾನ ಸಾಧನೆಗಾಗಿ ಪುನೀತ್ (Puneeth Rajkumar) ಅವರಿಗೆ ಮರಣೋತ್ತರ ಪ್ರಶಸ್ತಿಯನ್ನು ಘೋಷಿಸಿದ್ದು, ಈ ಪ್ರಶಸ್ತಿಯನ್ನು ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಪಡೆದುಕೊಂಡಿದ್ದಾರೆ. ಡಾ.ರಾಜ್ ಕುಟುಂಬದ ಕುಡಿ, ರಾಮ್ ಕುಮಾರ್ ಪುತ್ರಿ ಧನ್ಯಾ ರಾಮ್ ಕುಮಾರ್ ಅವರಿಗೆ ನಿನ್ನ ಸನಿಹಕೆ ಚಿತ್ರಕ್ಕಾಗಿ ಅತ್ಯುತ್ತಮ ಡೆಬ್ಯೂ ನಟಿ ಪ್ರಶಸ್ತಿಯು ದೊರೆತಿರುವುದು ಮತ್ತೊಂದು ವಿಶೇಷ.

    ಆ್ಯಕ್ಟ್ 1978 ಸಿನಿಮಾಗೆ ಅತ್ಯುತ್ತಮ ಸಿನಿಮಾ, ಅತ್ಯುತ್ತಮ ನಟಿ, ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ಬಿ.ಸುರೇಶ್ ಪಡೆದುಕೊಂಡಿದ್ದರೆ, ಅತ್ಯುತ್ತಮ ಗೀತ ಸಾಹಿತ್ಯಕ್ಕಾಗಿ ಜಯಂತ್ ಕಾಯ್ಕಿಣಿ ಪ್ರಶಸ್ತಿ  ಸ್ವೀಕರಿಸಿದ್ದಾರೆ. ಅತ್ಯುತ್ತಮ ನಟಿ ಪ್ರಶಸ್ತಿ ಪಡೆಯಲು ಯಜ್ಞಾ ಗೈರಾದ ಕಾರಣದಿಂದಾಗಿ ಅವರ ಪರವಾಗಿ ನಿರ್ದೇಶಕ ಮಂಸೋರೆ ಈ ಪ್ರಶಸ್ತಿ ಸ್ವೀಕರಿಸಿದ್ದಾರೆ. ಅತ್ಯುತ್ತಮ ಚಿತ್ರದ ಪ್ರಶಸ್ತಿಯನ್ನು ನಿರ್ಮಾಪಕ ದೇವರಾಜ್ ಆರ್ ಪಡೆದುಕೊಂಡರು.

    ಅತ್ಯುತಮ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ (ಯುವರತ್ನ), ಅತ್ಯುತಮ ಛಾಯಾಗ್ರಾಹಕ ಶ್ರೀಶ ಕುಡುವಳ್ಳಿ (ರತ್ನನ ಪ್ರಪಂಚ), ಅತ್ಯುತಮ ಹಿನ್ನೆಲೆ ಗಾಯಕಿ ಅನುರಾಧ ಭಟ್ (ಧೀರ ಸಮ್ಮೋಹಗಾರ-ಬಿಚ್ಚುಗತ್ತಿ), ಅತ್ಯುತಮ ಹಿನ್ನೆಲೆ ಗಾಯಕ ರಘು ದೀಕ್ಷಿತ್ (ನಿನ್ನ ಸನಿಹಕೆ), ಅತ್ಯುತಮ ಸಂಗೀತ ನಿರ್ದೇಶಕ ವಾಸುಕಿ ವೈಭವ್ (ಬಡವ ರಾಸ್ಕಲ್), ಅತ್ಯುತಮ ನಟಿ (ಕ್ರಿಟಿಕ್ಸ್) ಮಿಲನ ನಾಗರಾಜ್ (ಲವ್ ಮಾಕ್ಟೇಲ್), ಅಮೃತಾ ಅಯ್ಯಂಗಾರ್ (ಬಡವ ರಾಸ್ಕಲ್), ಅತ್ಯುತ್ತಮ ನಟ (ಕ್ರಿಟಿಕ್ಸ್) ಡಾರ್ಲಿಂಗ್ ಕೃಷ್ಣ (ಲವ್ ಮಾಕ್ಟೇಲ್) ಸಿನಿಮಾಗಳಿಗಾಗಿ ಪಡೆದಿದ್ದಾರೆ. ಗರುಡ ಗಮನ ವೃಷಭ ವಾಹನ ಚಿತ್ರದ ನಿರ್ದೇಶನಕ್ಕಾಗಿ ರಾಜ್ ಬಿ ಶೆಟ್ಟಿ (Raj B Shetty) ಅವರಿಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯು ಸಂದಿದೆ.

    Live Tv
    [brid partner=56869869 player=32851 video=960834 autoplay=true]

  • ಬ್ಲಾಕ್ ಆ್ಯಂಡ್ ವೈಟ್ ಡ್ರೆಸ್‌ನಲ್ಲಿ ಮಿಂಚಿದ ಪ್ರಿಯಾಂಕ ಚೋಪ್ರಾ

    ಬ್ಲಾಕ್ ಆ್ಯಂಡ್ ವೈಟ್ ಡ್ರೆಸ್‌ನಲ್ಲಿ ಮಿಂಚಿದ ಪ್ರಿಯಾಂಕ ಚೋಪ್ರಾ

    ಹಿಂದಿ ಚಿತ್ರರಂಗದ ಟಾಪ್ ನಟಿ ಪ್ರಿಯಾಂಕ ಚೋಪ್ರಾ ಈಗ ಹಾಲಿವುಡ್‌ನಲ್ಲೂ ಬ್ಯುಸಿಯಿರೋ ನಟಿ, ಬ್ಯಾಕ್ ಟು ಬ್ಯಾಕ್ ಚಿತ್ರಗಳಲ್ಲಿ ಬ್ಯುಸಿಯಿರೋ ಬ್ಯೂಟಿ ಈಗ ಮಗುವಿನ ಪೋಷಣೆಯಲ್ಲಿ ಬ್ಯುಸಿಯಾಗಿದ್ದಾರೆ. ಕೊಂಚ ಬಿಡುವು ಮಾಡಿಕೊಂಡು ಫಿಲ್ಮಂಫೇರ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಸಖತ್ ಹಾಟ್ ಆಗಿ ಬ್ಲಾಕ್ ಆ್ಯಂಡ್ ವೈಟ್ ಡ್ರೆಸ್‌ನಲ್ಲಿ ಪ್ರಿಯಾಂಕಾ ಮಿಂಚಿದ್ದಾರೆ.

    ಬಾಲಿವುಡ್‌ನಲ್ಲಿ ಬ್ಯೂಟಿ ಜತೆ ಪ್ರತಿಭೆಯಿರೋ ನಟಿ ಪ್ರಿಯಾಂಕ ಚೋಪ್ರಾ, ಬೇಡಿಕೆ ಇರೋವಾಗಲೇ ನಿಕ್ ಜೊನಸ್ ಅವರನ್ನು ಮದುವೆಯಾಗಿ ಖುಷಿಯಾಗಿ ಬಾಳುತ್ತಿದ್ದಾರೆ. ಮನೆಗೆ ಮುದ್ದು ಮಗಳ ಆಗಮನದಿಂದ ಪೋಷಣೆಯಲ್ಲಿ ಬ್ಯುಸಿಯಾಗಿದ್ದ ಪ್ರಿಯಾಂಕ ಈಗ ತುಸು ಬಿಡುವು ಮಾಡಿಕೊಂಡು ಫಿಲ್ಮಂಫೇರ್‌ನಲ್ಲಿ ಭಾಗಿಯಾಗಿದ್ದಾರೆ. ಯಾವಾಗಲೂ ಯೂನಿಕ್ ಸ್ಟೈಲಿನಲ್ಲಿ ಕಾಣಿಸಿಕೊಳ್ಳುವ ಪ್ರಿಯಾಂಕ, ಈಗ ಸಮಾರಂಭದಲ್ಲಿ ಬ್ಲಾಕ್ ಆ್ಯಂಡ್ ವೈಟ್ ಡ್ರೆಸ್‌ನಲ್ಲಿ ಡಿಫರೆಂಟ್ ಸ್ಟೈಲ್‌ನಿಂದ ಗಮನ ಸೆಳೆದಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗಿದೆ. ಇದನ್ನೂ ಓದಿ: ಶ್ರದ್ಧಾ ಶ್ರೀನಾಥ್ ಗುಡ್ ಬೈ ಹೇಳಿದ್ದು ಯಾಕೆ.?

     

    View this post on Instagram

     

    A post shared by Priyanka (@priyankachopra)

    ಫಿಲ್ಮಂಫೇರ್‌ನಲ್ಲಿ ಬ್ಲಾಕ್ ಆ್ಯಂಡ್ ವೈಟ್ ಡ್ರೆಸ್‌ನಲ್ಲಿ ಮಿರ ಮಿರ ಅಂತಾ ಪ್ರಿಯಾಂಕಾ ಚೋಪ್ರಾ ಮಿಂಚಿದ್ದಾರೆ. 39ರ ಹರೆಯದಲ್ಲೂ ಫಿಟ್‌ ಆಗಿ ಭಿನ್ನ ಅವತಾರದಲ್ಲಿ ಕಾಣಿಸಿಕೊಳ್ಳುವ ಪ್ರಿಯಾಂಕಾ ನಯಾ ಲುಕ್‌ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

  • ಗೋಲ್ಡನ್ ಕಲರ್ ಗೌನ್‌ನಲ್ಲಿ ಮಿಂಚಿದ ಪ್ರಿಯಾಂಕ ಚೋಪ್ರಾ

    ಗೋಲ್ಡನ್ ಕಲರ್ ಗೌನ್‌ನಲ್ಲಿ ಮಿಂಚಿದ ಪ್ರಿಯಾಂಕ ಚೋಪ್ರಾ

    ಬಾಲಿವುಡ್ ಬ್ಯೂಟಿ ಪ್ರಿಯಾಂಕ ಚೋಪ್ರಾ ಈಗ ಹಾಲಿವುಡ್‌ನಲ್ಲೂ ಬ್ಯುಸಿಯಿರೋ ನಟಿ,  ಕೈ ತುಂಬಾ ಆಫರ್ಸ್‌ಗಳ ಮಧ್ಯೆ ಕಥೆಯ ಆಯ್ಕೆಯ ವಿಚಾರದಲ್ಲೂ ಸಖತ್ ಚ್ಯೂಸಿ ಆಗಿದ್ದಾರೆ. ಇನ್ನು ಈಗ ಮಗುವಿನ ಪೋಷಣೆಯಲ್ಲಿ ಬ್ಯುಸಿಯಿರೋ ಪ್ರಿಯಾಂಕಾ, ಕೊಂಚ ಬಿಡುವು ಮಾಡಿಕೊಂಡು ಫಿಲ್ಮಂಫೇರ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಸಖತ್ ಹಾಟ್ ಆಗಿ ಕಾಣಿಸಿಕೊಂಡಿರೋ ಪ್ರಿಯಾಂಕಾ ಫೋಟೋ ಸಖತ್ ವೈರಲ್ ಆಗುತ್ತಿದೆ.

    ಹಿಂದಿ ಚಿತ್ರರಂಗದಲ್ಲಿ ಟಾಪ್ ನಟಿಯರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿರುವ ಪ್ರಿಯಾಂಕ ಚೋಪ್ರಾ, ಬೇಡಿಕೆ ಇರೋವಾಗಲೇ ನಿಕ್ ಜೊನಸ್ ಅವರ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈಗ ಮನೆಗೆ ಮುದ್ದು ಮಗಳ ಆಗಮನದ ನಂತರ ಪೋಷಣೆಯಲ್ಲಿ ಬ್ಯುಸಿಯಾಗಿದ್ದ ಪ್ರಿಯಾಂಕ ಈಗ ತುಸು ಬಿಡುವು ಮಾಡಿಕೊಂಡು ಫಿಲ್ಮಂಫೇರ್‌ನಲ್ಲಿ ಭಾಗಿಯಾಗಿದ್ದಾರೆ. ಈ ಸಮಾರಂಭದಲ್ಲಿ ಡಿಫರೆಂಟ್ ಸ್ಟೈಲ್‌ನಿಂದ ಗಮನ ಸೆಳೆದಿದ್ದಾರೆ. ಇದನ್ನೂ ಓದಿ: ಚಿರಂಜೀವಿ ಸರ್ಜಾ ಅಗಲಿಕೆಗೆ ಎರಡು ವರ್ಷ : ಕುಟುಂಬದಿಂದ ಇಂದು ವಿಶೇಷ ಪೂಜೆ

    ಫಿಲ್ಮಂಫೇರ್‌ನಲ್ಲಿ, ಗೋಲ್ಡನ್ ಕಲರ್ ಗೌನ್‌ನಲ್ಲಿ ಮಿರ ಮಿರ ಅಂತಾ ಪ್ರಿಯಾಂಕಾ ಚೋಪ್ರಾ ಮಿಂಚಿದ್ದಾರೆ. ಅಮೆರಿಕನ್ ನಟಿಯರಾದ ಆನ್ನೆ ಹ್ಯಾಥ್‌ವೇ ಮತ್ತು ಲೀಸಾ ಜತೆ ಒಳ್ಳೆಯ ಸಮಯವನ್ನು ಕಳೆದಿದ್ದಾರೆ. ಸದ್ಯ ಪ್ರಿಯಾಂಕ ಅವರ ನಯಾ ಲುಕ್‌ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

  • 2018ನೇ ಫಿಲಂ ಫೇರ್ ಪ್ರಶಸ್ತಿ ಪ್ರಕಟ- ಯಾರು ಅತ್ಯುತ್ತಮ ನಟ, ನಟಿ: ಇಲ್ಲಿದೆ ಸಂಪೂರ್ಣ ಮಾಹಿತಿ

    2018ನೇ ಫಿಲಂ ಫೇರ್ ಪ್ರಶಸ್ತಿ ಪ್ರಕಟ- ಯಾರು ಅತ್ಯುತ್ತಮ ನಟ, ನಟಿ: ಇಲ್ಲಿದೆ ಸಂಪೂರ್ಣ ಮಾಹಿತಿ

    ಹೈದರಾಬಾದ್: 2018ರ ಸೌತ್ ಫಿಲಂ ಫೇರ್ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಶನಿವಾರ ಹೈದರಾಬಾದ್‍ನಲ್ಲಿ ನಡೆದಿದೆ. ಈ ಅದ್ಧೂರಿ ಕಾರ್ಯಕ್ರಮದಲ್ಲಿ ದಕ್ಷಿಣ ಭಾರತದ ನಾಲ್ಕು ಚಿತ್ರರಂಗದ ಗಣ್ಯರು ಭಾಗಿಯಾಗಿದ್ದರು.

    2018 ನೇ ಸಾಲಿನ ಸೌತ್ ಫಿಲಂ ಫೇರ್ ಅವಾರ್ಡ್ ಪ್ರಕಟವಾಗಿದ್ದು, ‘ರಾಜಕುಮಾರ’ ಚಿತ್ರಕ್ಕಾಗಿ ಪವರ್ ಸ್ಟಾರ್ ಪುನೀತ್‍ ರಾಜ್‍ಕುಮಾರ್ ಅತ್ಯುತ್ತಮ ನಟ ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದಾರೆ. ಇನ್ನೂ ‘ಬ್ಯೂಟಿಫುಲ್ ಮನಸ್ಸುಗಳು’ ಚಿತ್ರಕ್ಕಾಗಿ ನಟಿ ಶೃತಿ ಹರಿಹರನ್ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಪಡೆದಿದ್ದಾರೆ.

    ಪುನೀತ್ ರಾಜ್‍ಕುಮಾರ್ ಅತ್ಯುತ್ತಮ ನಟ ಪ್ರಶಸ್ತಿಯನ್ನು ಸ್ವೀಕರಿಸುವಾಗ ಪುನೀತ್ ಬಾಲ್ಯದಿನಗಳಲ್ಲಿ ಅಪ್ಪಾಜಿ ಜೊತೆ ಸ್ವೀಕರಿಸಿದ್ದ ಪ್ರಶಸ್ತಿಯನ್ನು ನೆನಪಿಸಿಕೊಂಡರು. ಇನ್ನೂ ಅತ್ಯುತ್ತಮ ಪ್ರಶಸ್ತಿ ಪಡೆದ ಶೃತಿ ಹರಿಹರನ್ ಬ್ಯೂಟಿಫುಲ್ ಮನಸ್ಸುಗಳು ಸಿನಿಮಾಕ್ಕಾಗಿ ರಾಜ್ಯ ಪ್ರಶಸ್ತಿಯನ್ನು ಪಡೆದಿದ್ದರು.

    https://twitter.com/PuneethOfficial/status/1008223181256224769

    2018 ನೇ ಸಾಲಿನ ಸೌತ್ ಫಿಲಂ ಫೇರ್ ಅವಾರ್ಡ್ ಪ್ರಕಟ:

    ಅತ್ಯುತ್ತಮ ನಟ                                            – ಪುನೀತ್ ರಾಜ್‍ಕುಮಾರ್(ರಾಜಕುಮಾರ್)
    ಅತ್ಯುತ್ತಮ ನಟಿ                                             – ಶೃತಿ ಹರಿಹರನ್ (ಬ್ಯೂಟಿಫುಲ್ ಮನಸ್ಸುಗಳು)
    ಅತ್ಯುತ್ತಮ ನಿದೇಶಕ                                      – ತರುಣ್ ಸುಧೀರ್ (ಚೌಕ)
    ಅತ್ಯುತ್ತಮ ಗೀತರಚನೆಕಾರ                             – ವಿ.ನಾಗೇಂದ್ರ ಪ್ರಸಾದ್(ಚೌಕ)
    ಅತ್ಯುತ್ತಮ ಚಿತ್ರ                                            – ಒಂದು ಮೊಟ್ಟೆಯ ಕಥೆ
    ಅತ್ಯುತ್ತಮ ಹಿನ್ನೆಲೆ ಗಾಯಕ                             – ಆರ್ಮನ್ ಮಲ್ಲಿಕ್(ಚಕ್ರವರ್ತಿ)
    ಅತ್ಯುತ್ತಮ ಹಿನ್ನೆಲೆ ಗಾಯಕಿ                             –ಅನುರಾಧ ಭಟ್(ಚೌಕ)
    ಅತ್ಯುತ್ತಮ ಸಂಗೀತ ನಿರ್ದೇಶಕ                       –ಭರತ್ ಬಿಜೆ(ಬ್ಯೂಟಿಫುಲ್ ಮನಸ್ಸುಗಳು)
    ಕ್ರಿಟಿಕ್ಸ್ ಅವಾರ್ಡ್                                         – ಧನಂಜಯ್(ಅಲ್ಲಮ್ಮ)
    ಕ್ರಿಟಿಕ್ಸ್ ಅವಾರ್ಡ್                                         – ಶ್ರದ್ಧ ಶ್ರೀನಾಥ್(ಆಪರೇಷನ್ ಅಲುಮೇಲಮ್ಮ)

     

    ತಮಿಳಿನಲ್ಲಿ ‘ಆರಂ’ ಅತ್ಯುತ್ತಮ ಚಿತ್ರ ಪ್ರಶಸ್ತಿ ಪಡೆದಿದೆ. ‘ವಿಕ್ರಮ್ ವೇದ’ ಚಿತ್ರಕ್ಕಾಗಿ ನಟ ವಿಜಯ್ ಸೇತುಪತಿ ಅತ್ಯುತ್ತಮ ನಟ ಪ್ರಶಸ್ತಿ ಪಡೆದರೆ, ‘ಆರಂ’ ಚಿತ್ರಕ್ಕೆ ನಟಿ ನಯನತಾರ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದಿದ್ದಾರೆ.

    ತೆಲುಗುವಿನಲ್ಲಿ ‘ಬಾಹುಬಲಿ-2’ ಅತ್ಯುತ್ತಮ ಚಿತ್ರ ಪ್ರಶಸ್ತಿ ಪಡೆದಿದೆ. ‘ಅರ್ಜುನ್ ರೆಡ್ಡಿ’ ಚಿತ್ರಕ್ಕಾಗಿ ವಿಜಯ್ ದೇವರಕೊಂಡ ಅತ್ಯುತ್ತಮ ನಟ ಪ್ರಶಸ್ತಿ ಪಡೆದರೆ, ‘ಫೀದಾ’ ಚಿತ್ರಕ್ಕೆ ಸಾಯಿ ಪಲ್ಲವಿ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದಿದ್ದಾರೆ.