Tag: fine

  • ಬೆಂಗಳೂರು ಟೆಕ್ಕಿಗೆ 2.65 ಲಕ್ಷ ವಂಚನೆ – ಟ್ರಾಫಿಕ್‌ ಫೈನ್‌ ಕಟ್ಟೋ ಮುನ್ನ ಎಚ್ಚರವಾಗಿರಿ

    ಬೆಂಗಳೂರು ಟೆಕ್ಕಿಗೆ 2.65 ಲಕ್ಷ ವಂಚನೆ – ಟ್ರಾಫಿಕ್‌ ಫೈನ್‌ ಕಟ್ಟೋ ಮುನ್ನ ಎಚ್ಚರವಾಗಿರಿ

    ಬೆಂಗಳೂರು: ಟ್ರಾಫಿಕ್‌ ದಂಡದ (Traffic Fine) ಮೊತ್ತವನ್ನು ಪಾವತಿಸುವ ಮುನ್ನ ಎಚ್ಚರವಾಗಿರಿ. ಸೈಬರ್‌ ಕಳ್ಳರು (Cyber ​​Thieves) ಯಾವುದೋ ಲಿಂಕ್‌ ಕಳುಹಿಸಿ ನಿಮ್ಮ ಹಣಕ್ಕೆ ಕನ್ನ ಹಾಕಲು ಮುಂದಾಗಿದ್ದು, ಟೆಕ್ಕಿಯೊಬ್ಬರು 2.65 ಲಕ್ಷ ರೂ. ಕಳೆದುಕೊಂಡಿದ್ದಾರೆ.

    ಹೌದು. ಸಂಚಾರ ಪೊಲೀಸರು 50% ರಿಯಾಯಿತಿ ನೀಡಿ ದಂಡ ಕಟ್ಟಲು ಅವಕಾಶ ನೀಡಿದ್ದಾರೆ. ಆದರೆ ಇದನ್ನೇ ಬಂಡವಾಳ ಮಾಡಿಕೊಳ್ಳುತ್ತಿರುವ ಸೈಬರ್ ವಂಚಕರು ವಾಹನ ಸವಾರರ ಮೊಬೈಲ್ ನಂಬರ್‌ಗಳಿಗೆ ಕೆಲ ಲಿಂಕ್‌ಗಳು, ಎಪಿಕೆ ಫೈಲ್‌ಗಳನ್ನು ಕಳುಹಿಸಿ ವಾಹನಗಳ ದಂಡವನ್ನು ಚೆಕ್‌ ಮಾಡಿಕೊಳ್ಳಿ. ಹಾಗೆಯೇ ಇಲ್ಲೇ ದಂಡ ಕಟ್ಟಬಹುದು ಎಂಬ ಮೆಸೇಜ್‌ಗಳನ್ನು ಕಳುಹಿಸುತ್ತಿದ್ದಾರೆ.

    ವಂಚಕರ ಮೆಸೇಜ್‌ಗಳನ್ನು ನಂಬಿದ ಹಲವರು ಅದನ್ನು ಓಪನ್ ಮಾಡಿದ ತಕ್ಷಣ ಅಕೌಂಟ್ ನಲ್ಲಿದ್ದ ಹಣ ಮಾಯವಾಗುತ್ತದೆ. ಕೊಡಿಗೇಹಳ್ಳಿ ವ್ಯಾಪ್ತಿಯ ಟೆಕ್ಕಿಯೊಬ್ಬರಿಗೆ ಸೈಬರ್ ವಂಚಕರು ಓಪನ್ ಮಾಡಿ ನಿಮ್ ವಾಹನದ ಫೈನ್ ಎಷ್ಟಿದೆ ಚೆಕ್ ಮಾಡಿಕೊಳ್ಳಿ ಅಂತಾ ಎಪಿಕೆ ಫೈಲ್‌ ಕಳುಹಿಸಿದ್ದರು. ಇದನ್ನೂ ಓದಿ: ಆನ್‌ಲೈನ್ ಗೇಮಿಂಗ್ ನಿಷೇಧ – BCCI ಪ್ರಾಯೋಜಕತ್ವದಿಂದ ಹಿಂದೆ ಸರಿದ Dream11

     

    ಆ ಮಸೇಜ್ ನಂಬಿದ ಟೆಕ್ಕಿ ಆ ಲಿಂಕ್ ನ ಓಪನ್ ಮಾಡಿದ ಕೆಲವೇ ನಿಮಿಷಗಳಲ್ಲಿ ಖಾತೆಯಲ್ಲಿದ್ದ 2.65 ಲಕ್ಷ ರೂ. ಹಣವನ್ನು ಸೈಬರ್ ವಂಚಕರು ಎಗರಿಸಿದ್ದಾರೆ. ಈ ಸಂಬಂಧ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಮುರಳಿ ದೂರು ನೀಡಿದ್ದಾರೆ.

    ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಮಾಲೀಕರು ಆ.23ರಿಂದ ಸೆ.12ರವರೆಗೂ ದಂಡದ ಕೇವಲ ಶೇ.50ರಷ್ಟನ್ನು ಪಾವತಿಸಬಹುದು.

    ಹಲವು ವರ್ಷಗಳಿಂದ ಟ್ರಾಫಿಕ್ ದಂಡ ಕಟ್ಟದೇ ಹಾಗೇ ಉಳಿಸಿಕೊಂಡವರಿಗೆ ಈ ರಿಯಾಯಿತಿ ನೀಡಲಾಗಿದೆ. ಇದಕ್ಕೂ ಮುನ್ನ ರಾಜ್ಯ ಸರ್ಕಾರ ಇದೇ ರೀತಿ ರಿಯಾಯಿತಿ ಘೋಷಿಸಿ ಮೊತ್ತದ ದಂಡ ಸಂಗ್ರಹಿಸಿತ್ತು. ಈ ಆದೇಶದಂತೆ ಕೇವಲ ಬೆಂಗಳೂರು ವ್ಯಾಪ್ತಿಯಲ್ಲಿ ನಿಯಮ ಉಲ್ಲಂಘಿಸಿದವರಿಗೆ ಮಾತ್ರ ದಂಡ ಪಾವತಿಸಲು ಅವಕಾಶವಿರುತ್ತದೆ.

  • ಬೆಂಗಳೂರಿನ ಸವಾರರಿಗೆ ಗುಡ್‌ನ್ಯೂಸ್‌ – ದಂಡ ಪಾವತಿಗೆ 50% ಡಿಸ್ಕೌಂಟ್ 

    ಬೆಂಗಳೂರಿನ ಸವಾರರಿಗೆ ಗುಡ್‌ನ್ಯೂಸ್‌ – ದಂಡ ಪಾವತಿಗೆ 50% ಡಿಸ್ಕೌಂಟ್ 

    – ಆ.23ರಿಂದ ಸೆ.12ರವರೆಗೆ ಪಾವತಿಸಲು ಡೆಡ್‌ಲೈನ್

    ಬೆಂಗಳೂರು: ವಾಹನ ಸವಾರರಿಗೆ ಬೆಂಗಳೂರು ಸಂಚಾರಿ ಪೊಲೀಸರು (Bengaluru Traffic Police) ಗುಡ್ ನ್ಯೂಸ್ ಕೊಟ್ಟಿದ್ದು, ನಿಯಮ ಉಲ್ಲಂಘಿಸಿದ್ರೆ ಶೇ.50ರಷ್ಟು ದಂಡ ಕಟ್ಟಲು ಅವಕಾಶ ನೀಡಿದ್ದಾರೆ.ಇದನ್ನೂ ಓದಿ: ಬೀದರ್ `ಕೈ’ ನಾಯಕರಿಂದ ಖಂಡ್ರೆ ವಿರುದ್ಧ ಸಿಎಂ, ಡಿಸಿಎಂಗೆ ದೂರು

    ಈ ಕುರಿತು ರಾಜ್ಯ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ಪುಷ್ಪ ವಿ.ಎಸ್ ಅವರು ಆದೇಶ ಹೊರಡಿಸಿದ್ದು, ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಮಾಲೀಕರು ಆ.23ರಿಂದ ಸೆ.12ರವರೆಗೂ ದಂಡದ ಕೇವಲ ಶೇ.50ರಷ್ಟನ್ನು ಪಾವತಿಸುವಂತೆ ರಿಯಾಯಿತಿ ಘೋಷಿಸಿದ್ದಾರೆ.

    ಹಲವು ವರ್ಷಗಳಿಂದ ಟ್ರಾಫಿಕ್ ದಂಡ ಕಟ್ಟದೇ ಹಾಗೇ ಉಳಿಸಿಕೊಂಡವರಿಗೆ ಈ ರಿಯಾಯಿತಿ ನೀಡಲಾಗಿದೆ. ಇದಕ್ಕೂ ಮುನ್ನ ರಾಜ್ಯ ಸರ್ಕಾರ ಇದೇ ರೀತಿ ರಿಯಾಯಿತಿ ಘೋಷಿಸಿ ಮೊತ್ತದ ದಂಡ ಸಂಗ್ರಹಿಸಿತ್ತು. ಈ ಆದೇಶದಂತೆ ಕೇವಲ ಬೆಂಗಳೂರು ವ್ಯಾಪ್ತಿಯಲ್ಲಿ ನಿಯಮ ಉಲ್ಲಂಘಿಸಿದವರಿಗೆ ಮಾತ್ರ ದಂಡ ಪಾವತಿಸಲು ಅವಕಾಶವಿರುತ್ತದೆ.ಇದನ್ನೂ ಓದಿ: ಮಂಗಳೂರು | ಕುಡುಪುವಿನಲ್ಲಿ ಅಶ್ರಫ್ ಕೊಲೆ ಪ್ರಕರಣ – 10 ಆರೋಪಿಗಳ ಜಾಮೀನು ಅರ್ಜಿ ವಜಾ

  • ಐದೇ ನಿಮಿಷದಲ್ಲಿ ಆಟೋ, ಇಲ್ಲವಾದಲ್ಲಿ 50 ರೂ. ಆಫರ್ ನೀಡಿ ವಂಚನೆ – ರಾಪಿಡೋಗೆ 10 ಲಕ್ಷ ದಂಡ

    ಐದೇ ನಿಮಿಷದಲ್ಲಿ ಆಟೋ, ಇಲ್ಲವಾದಲ್ಲಿ 50 ರೂ. ಆಫರ್ ನೀಡಿ ವಂಚನೆ – ರಾಪಿಡೋಗೆ 10 ಲಕ್ಷ ದಂಡ

    – ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ ಕಟ್ಟುನಿಟ್ಟಿನ ಕ್ರಮ

    ನವದೆಹಲಿ: ‘ಐದೇ ನಿಮಿಷದಲ್ಲಿ ಆಟೋ ಅಥವಾ ಪಡೆಯಿರಿ ಅಥವಾ 50 ರೂ. ಪಡೆಯಿರಿ’ (AUTO IN 5 MIN OR GET Rs 50) ಹೀಗೆ ಆಫರ್ ನೀಡಿ ಗ್ರಾಹಕರನ್ನು ವಂಚಿಸುತ್ತಿದ್ದ ‘ರಾಪಿಡೋ’ (Rapido) ಸಂಸ್ಥೆಗೆ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ (CCPA) ಬರೋಬ್ಬರಿ 10 ಲಕ್ಷ ರೂ. ದಂಡ ವಿಧಿಸುವ ಮೂಲಕ ಕಠಿಣ ಕ್ರಮ ಕೈಗೊಂಡಿದೆ. ಇಂಥ ಮೋಸದ ಜಾಹೀರಾತು ನೀಡುವಂಥ ಸಂಸ್ಥೆಗಳಿಗೆ ಈ ಮೂಲಕ ಎಚ್ಚರಿಕೆ ನೀಡಿದೆ.

    ಸದಾ ಗ್ರಾಹಕರ ದಾರಿ ತಪ್ಪಿಸುವ ಜಾಹೀರಾತು ನೀಡಿ ವಂಚಿಸುತ್ತಿದ್ದ ಕಾರಣಕ್ಕೆ ರಾಪಿಡೋ ಸಂಸ್ಥೆ ವಿರುದ್ಧ ಅತ್ಯಧಿಕ ದೂರುಗಳು ಬಂದಿದ್ದರಿಂದ ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ ಸಚಿವ ಪ್ರಹ್ಲಾದ್ ಜೋಶಿ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚಿಸಿದ್ದರು. ಅದರಂತೆ ಕಾರ್ಯಾಚರಣೆಗಿಳಿದ ಸಿಸಿಪಿಎ ಪರಿಶೀಲನೆ ನಡೆಸಿ ಕ್ರಮ ಕೈಗೊಂಡಿದ್ದು, ತಕ್ಷಣದಿಂದಲೇ ಇಂಥ ದಾರಿ ತಪ್ಪಿಸುವ ಜಾಹೀರಾತುಗಳನ್ನು ನಿಲ್ಲಿಸುವಂತೆ ಆದೇಶ ಸಹ ನೀಡಿದೆ.

    ಗ್ರಾಹಕರ ಹಕ್ಕುಗಳ ರಕ್ಷಣೆ ವಿಚಾರದಲ್ಲಿ ಒಂದು ಹೆಜ್ಜೆ ಮುಂದಿರುವ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ ಜನರ ದಾರಿ ತಪ್ಪಿಸುವ ಜಾಹೀರಾತು ಹಾಗೂ ಅನ್ಯಾಯದ ವ್ಯಾಪಾರ ಪದ್ಧತಿ ಅನುಸರಿಸುತ್ತಿದ್ದ ಕಾರಣಕ್ಕೆ ರಾಪಿಡೋ ಟ್ರಾನ್ಸ್ಪೋರ್ಟೇಷನ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್‌ಗೆ 10 ಲಕ್ಷ ರೂ. ದಂಡ ವಿಧಿಸಿದೆ.

    ಮೋಸದ ಜಾಹೀರಾತು ನಿಲ್ಲಿಸಲು ರಾಪಿಡೋಗೆ ಸ್ಪಷ್ಟ ನಿರ್ದೇಶನ:
    ‘5 ನಿಮಿಷದಲ್ಲಿ ಆಟೋ ಸೇವೆ ಅಥವಾ 50 ರೂ. ಪಡೆಯಿರಿ’ ಹಾಗೂ ‘ಗ್ಯಾರಂಟಿ ಆಟೋ’ ಎಂದೆಲ್ಲಾ ಭರವಸೆ ನೀಡುತ್ತಿದ್ದ ರಾಪಿಡೋ ಜಾಹೀರಾತು ಮತ್ತು ಸಂಬಂಧಿತ ದೂರುಗಳನ್ನು ಗಂಭೀರವಾಗಿ ಪರಿಗಣಿಸಿದ ಸಿಸಿಪಿಎ ಇದೊಂದು ಮೋಸದ ಜಾಹೀರಾತು ಎಂಬುದನ್ನು ಖಚಿತಪಡಿಸಿಕೊಂಡಿದೆ. ಈ ಜಾಹೀರಾತು ವಂಚನೆಯಿಂದ ಕೂಡಿದ್ದು, ಜನರ ದಾರಿ ತಪ್ಪಿಸುವುದಾಗಿದೆ. ಅಲ್ಲದೇ, ಗ್ರಾಹಕರನ್ನು ಮೋಸಗೊಳಿಸುವುದಾಗಿದೆ. ಹಾಗಾಗಿ ತಕ್ಷಣವೇ ಇದನ್ನು ನಿಲ್ಲಿಸುವಂತೆ ರಾಪಿಡೋಗೆ ಸ್ಪಷ್ಟ ನಿರ್ದೇಶನ ನೀಡಿದೆ.

    ಗ್ರಾಹಕರಿಂದ 1799 ದೂರುಗಳು:
    ರಾಪಿಡೋ ಸಂಸ್ಥೆಯ ಮೋಸದ ಜಾಹೀರಾತು ವಿರುದ್ಧ ರಾಷ್ಟ್ರೀಯ ಗ್ರಾಹಕ ಸಹಾಯವಾಣಿ (ಎನ್‌ಸಿಹೆಚ್) ಮೂಲಕ ಅತ್ಯಧಿಕ ದೂರುಗಳು ದಾಖಲಾಗಿವೆ. 2023ರ ಏಪ್ರಿಲ್‌ನಿಂದ 2024ರ ಮೇ ವರೆಗೆ 575 ದೂರುಗಳು ಬಂದಿವೆ. 2024 ಜೂನ್‌ನಿಂದ 2025ರ ಜುಲೈವರೆಗೆ ಹಿಂದಿನಕ್ಕಿಂತ ದುಪ್ಟಟ್ಟು ಅಂದರೆ 1,224 ದೂರುಗಳು ಬಂದಿವೆ. ಹೀಗಾಗಿ ಸಚಿವ ಪ್ರಹ್ಲಾದ್ ಜೋಶಿ ಅವರು ಇದನ್ನು ಗಂಭೀರವಾಗಿ ಪರಿಗಣಿಸಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರಕ್ಕೆ ಸೂಚನೆ ನೀಡಿದ್ದರು.

    ಸಿಸಿಪಿಎ ತನಿಖೆ ವೇಳೆ ರಾಪಿಡೋ ಜಾಹೀರಾತುಗಳಲ್ಲಿ ಟಿ&ಸಿ ಅನ್ವಯ ಎಂಬುದು ಓದಲಾಗದಂಥ ಅತ್ಯಂತ ಚಿಕ್ಕ ಗಾತ್ರದ ಅಕ್ಷರದಲ್ಲಿ ಪ್ರದರ್ಶಿಸಲ್ಪಟ್ಟಿತ್ತು. ಅಲ್ಲದೇ, ಭರವಸೆ ನೀಡಿದಂತೆ 50 ರೂ. ಮೊತ್ತವೂ ಸಿಗುತ್ತಿರಲಿಲ್ಲ. ಬದಲಿಗೆ ‘ರಾಪಿಡೋ ನಾಣ್ಯಗಳು’ ರೂಪದಲ್ಲಿ ಅದೂ ಕೇವಲ 7 ದಿನಗಳ ಮಾನ್ಯತೆ ಹೊಂದಿತ್ತು. ಇದಲ್ಲದೆ, ಈ ಆಫರ್ ಅನ್ನು ‘ವೈಯಕ್ತಿಕ ಕ್ಯಾಪ್ಟನ್‌ಗಳು ನೀಡುತ್ತಿದ್ದಾರೆಯೇ ಹೊರತು ರಾಪಿಡೋ’ ಅಲ್ಲ ಎಂದು ಹೇಳಿ ಕಂಪನಿ ಹೊಣೆಗಾರಿಕೆಯಿಂದ ಜಾರಿಕೊಳ್ಳತೊಡಗಿತ್ತು.

    ರಾಪಿಡೋ ವಿರುದ್ಧ ಗ್ರಾಹಕರಿಂದ ಹೆಚ್ಚಿನ ಸಂಖ್ಯೆಯಲ್ಲಿ ದೂರುಗಳು ಬರುತ್ತಲೇ ಇದ್ದವು. ಸೇವಾ ನ್ಯೂನತೆ, ಪಾವತಿಸಿದ ಮೊತ್ತ ಮರುಪಾವತಿ ಮಾಡದೇ ಇರುವುದು, ಅಧಿಕ ಶುಲ್ಕ ವಿಧಿಸುವುದು, ಭರವಸೆ ನೀಡಿದಂತೆ ಸೇವೆ ಒದಗಿಸುವಲ್ಲಿ ವಿಫಲ ಹಾಗೂ ಖಾತರಿಪಡಿಸಿದ ‘5 ನಿಮಿಷ’ ಸೇವೆ ಪೂರೈಸದಿರುವ ಬಗ್ಗೆ ದೂರುಗಳು ವ್ಯಾಪಕವಾಗಿದ್ದವು. ಈ ಬಗ್ಗೆ ಸಂಸ್ಥೆಯ ಗಮನ ಸೆಳೆದರೂ ಪರಿಹರಿಸದೆ ಕಡೆಗಣಿಸಿತ್ತು ರಾಪಿಡೋ.

    ದೊಡ್ಡ ದೊಡ್ಡ ಭರವಸೆ ನೀಡುವ ಅಥವಾ ಷರತ್ತುಗಳನ್ನು ವಿವರಿಸದೆ ‘ಖಾತರಿ’ ಅಥವಾ ‘ಖಚಿತ’ದಂತಹ ನುಡಿಗಟ್ಟು ಬಳಸುವ ಜಾಹೀರಾತುಗಳ ಬಗ್ಗೆ ಗ್ರಾಹಕರು ಜಾಗರೂಕರಾಗಿರಬೇಕು ಎಂದು ಸಿಸಿಪಿಎ ಸಲಹೆ ನೀಡಿದೆ. ಅಲ್ಲದೇ, ಇಂಥ ದಾರಿ ತಪ್ಪಿಸುವ ಜಾಹೀರಾತು, ಅನ್ಯಾಯದ ವ್ಯಾಪಾರ ಪದ್ಧತಿಗಳಿಂದ ಸಮಸ್ಯೆ ಎದುರಿಸಿದರೆ ರಾಷ್ಟ್ರೀಯ ಗ್ರಾಹಕ ಸಹಾಯವಾಣಿ ‘1915’ ಕರೆ ಮಾಡಿ ದೂರು ಸಲ್ಲಿಸಲು ಅಥವಾ ಎನ್‌ಸಿಹೆಚ್ ಅಪ್ಲಿಕೇಶನ್ ಅಥವಾ ವೆಬ್‌ಸೈಟ್ ಮೂಲಕ ದೂರು ಸಲ್ಲಿಸುವಂತೆ ತಿಳಿಸಿದೆ.

  • ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ಪೋಷಕರಿಗೆ ಬಿತ್ತು 25,000 ರೂ. ದಂಡ

    ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ಪೋಷಕರಿಗೆ ಬಿತ್ತು 25,000 ರೂ. ದಂಡ

    ದಾವಣಗೆರೆ: ಅಪ್ರಾಪ್ತ ಬಾಲಕ ಬೈಕ್ (Bike) ಚಾಲನೆ ಮಾಡಿದ ಹಿನ್ನೆಲೆ ಪೋಷಕರಿಗೆ ಚನ್ನಗಿರಿ ಪೊಲೀಸರು (Channagiri Police) 25,000 ರೂ. ದಂಡ (Fine) ವಿಧಿಸಿದ್ದಾರೆ.

    ಚನ್ನಗಿರಿ ಠಾಣೆಯ ವ್ಯಾಪ್ತಿಯಲ್ಲಿ ಪೊಲೀಸರು ವಾಹನಗಳ ತಪಾಸಣೆ ಮಾಡುತ್ತಿದ್ದಾಗ ಬಾಲಕನೊಬ್ಬ ಬೈಕ್ ಚಲಾಯಿಸುತ್ತಿರುವುದು ಗಮನಕ್ಕೆ ಬಂದಿದೆ. ಕೂಡಲೇ ಬೈಕ್ ವಶಕ್ಕೆ ಪಡೆದ ಪೊಲೀಸರು ಪರಿಶೀಲನೆ ನಡೆಸಿದರು. ಆತ ಅಪ್ರಾಪ್ತ ಎಂದು ತಿಳಿದುಬಂದಿದ್ದು, ಕೂಡಲೇ ಕ್ರಮ ಕೈಗೊಂಡ ಪೊಲೀಸರು ಪಾಲಕರಿಗೆ 25,000 ರೂ. ದಂಡ ವಿಧಿಸಿದ್ದಾರೆ. ಇದನ್ನೂ ಓದಿ: ಇದ್ದವರು ಮೂರು ಜನ ಆದ್ರೆ ಕದ್ದವರು ಯಾರು?: ಸಿಎಂ ಕ್ಲೀನ್‌ಚಿಟ್‌ಗೆ ಸಿ.ಟಿ.ರವಿ ವ್ಯಂಗ್ಯ

    ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಸಾರ್ವಜನಿಕರು ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಹೇಮಾವತಿ ನಾಲೆ ಅಭಿವೃದ್ಧಿ ಹೆಸರಲ್ಲಿ ನೂರಾರು ಕೋಟಿ ಅಕ್ರಮ ಆರೋಪ

  • FASTag ಬ್ಯಾಲೆನ್ಸ್‌ ಇಲ್ಲದೇ ಇದ್ರೆ ದುಪ್ಪಟ್ಟು ದಂಡ: ಇಂದಿನಿಂದ ಏನೇನು ಬದಲಾವಣೆ? ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

    FASTag ಬ್ಯಾಲೆನ್ಸ್‌ ಇಲ್ಲದೇ ಇದ್ರೆ ದುಪ್ಪಟ್ಟು ದಂಡ: ಇಂದಿನಿಂದ ಏನೇನು ಬದಲಾವಣೆ? ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

    ನವದೆಹಲಿ: ಟೋಲ್‌ (Toll) ಇರುವ ಹೆದ್ದಾರಿಯಲ್ಲಿ ನೀವು ವಾಹನ ಚಾಲನೆ ಮಾಡುತ್ತೀರಾ? ಹಾಗಾದ್ರೆ ಇನ್ನು ಮುಂದೆ ಪ್ರಯಾಣ ನಡೆಸುವ ಒಂದು ಗಂಟೆಯ ಮೊದಲು ಫಾಸ್ಟ್‌ಟ್ಯಾಗ್‌ (FASTag) ಸಕ್ರಿಯವಾಗಿದೆಯೋ ಇಲ್ವೋ ಎಂಬುದನ್ನು ಪರೀಕ್ಷೆ ಮಾಡಿಕೊಳ್ಳಿ.

    ಹೌದು. ಕಡಿಮೆ ಬ್ಯಾಲೆನ್ಸ್‌, ವಿಳಂಬ ಪಾವತಿ, ಕೆವೈಸಿ ನಿಯಮಗಳನ್ನು ಪಾಲಿಸದೇ ಇದ್ದಲ್ಲಿ ಅಥವಾ ಕಪ್ಟುಪಟ್ಟಿಗೆ (Black List) ಸೇರ್ಪಡೆಯಾದ ಫಾಸ್ಟ್‌ಟ್ಯಾಗ್‌ಗಳಿಗೆ ದಂಡ ವಿಧಿಸುವ ಈ ಹೊಸ ನಿಯಮ ಇಂದಿನಿಂದ(ಫೆ.17) ಜಾರಿಗೆ ಬಂದಿದೆ.

    ರಾಷ್ಟ್ರೀಯ ಪಾವತಿ ನಿಗಮ (NPCI) ಟೋಲ್ ಸಂಗ್ರಹಕ್ಕಾಗಿ ಹೊಸ ನಿಯಮಗಳನ್ನು ಪ್ರಕಟಿಸಿದೆ. ಈ ನಿಯಮಗಳನ್ನು ಪಾಲಿಸಲು ವಿಫಲವಾದರೆ ಬಳಕೆದಾರರು ದುಪ್ಪಟ್ಟು ಟೋಲ್ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಇದನ್ನೂ ಓದಿ: ಅಪಾರ್ಟ್‌ಮೆಂಟ್‌ನಲ್ಲಿ ಒಂದೇ ಕುಟುಂಬದ ನಾಲ್ವರ ಶವ – ಪತ್ನಿ, ಮಕ್ಕಳಿಗೆ ವಿಷ ನೀಡಿ ನೇಣಿಗೆ ವ್ಯಕ್ತಿ ಶರಣು!

     

    ನಿಯಮ ಏನು ಬದಲಾವಣೆ?
    1. ವಾಹನ ಟೋಲ್‌ ದಾಟುವ 60 ನಿಮಿಷ ಮೊದಲು ಮತ್ತು ಟೋಲ್‌ ದಾಟಿದ ಕನಿಷ್ಠ 10 ನಿಮಿಷ ಫಾಸ್ಟ್‌ಟ್ಯಾಗ್‌ ಸಕ್ರಿಯ ಆಗಿರುವಂತೆ ನೋಡಿಕೊಳ್ಳಬೇಕು.
    2. ಕಡಿಮೆ ಬ್ಯಾಲೆನ್ಸ್ ಅಥವಾ ತಾಂತ್ರಿಕ ಸಮಸ್ಯೆಗಳಿಂದಾಗಿ ಕಪ್ಪುಪಟ್ಟಿಗೆ ಸೇರಿಸಿದ್ದರೆ ಬಳಕೆದಾರರು ತಮ್ಮ ಖಾತೆಯನ್ನು ರೀಚಾರ್ಜ್ ಮಾಡಲು 70 ನಿಮಿಷಗಳ ಕಾಲಾವಕಾಶ ನೀಡಲಾಗುತ್ತದೆ.
    3. ಟೋಲ್‌ನಲ್ಲೇ ಹಣ ಕಡಿತ ವಿಳಂಬವಾದರೆ ಅದಕ್ಕೆ ಟೋಲ್‌ ಆಪರೇಟರ್‌ ಅವರನ್ನೇ ಹೊಣೆ ಮಾಡಲಾಗುತ್ತದೆ.

    ಪಾವತಿಗಳನ್ನು ಯಾವಾಗ ತಿರಸ್ಕರಿಸಲಾಗುತ್ತದೆ?
    ವಾಹನ ಟೋಲ್‌ ದಾಟುವ 60 ನಿಮಿಷ ಮೊದಲು ಮತ್ತು ಟೋಲ್‌ ದಾಟಿದ ಕನಿಷ್ಠ 10 ನಿಮಿಷ ಫಾಸ್ಟ್‌ಟ್ಯಾಗ್‌ ಸಕ್ರಿಯ ಆಗಿರುವಂತೆ ನೋಡಿಕೊಳ್ಳಬೇಕು. ಇಲ್ಲದೇ ಹೋದಲ್ಲಿ ಆ ಫಾಸ್ಟ್‌ಟ್ಯಾಗ್‌ ವಹಿವಾಟು ನಿರಾಕರಿಸಲಾಗುತ್ತದೆ. ಸಕ್ರಿಯ ಆಗಿರದೇ ಇದ್ದರೆ ಟೋಲ್‌ ಸಿಸ್ಟಮ್‌ನಲ್ಲಿ ‘ಎರರ್‌ ಕೋಡ್‌ 176’ ಎಂದು ತೋರಿಸಲಾಗುತ್ತದೆ ಮತ್ತು ಕಪ್ಪುಪಟ್ಟಿಗೆ ಸೇರಿಸಲಾಗುತ್ತದೆ. ಕಪ್ಪುಪಟ್ಟಿಗೆ ಸೇರಿಸಿದ ಫಾಸ್ಟ್ಯಾಗ್‌ನೊಂದಿಗೆ ಟೋಲ್ ಪ್ರವೇಶಿಸಿದರೆ ವಾಹನ ಮಾಲೀಕರಿಗೆ ದುಪ್ಪಟ್ಟು ಶುಲ್ಕ ವಿಧಿಸಲಾಗುತ್ತದೆ.

     

    FASTag ಕಪ್ಪುಪಟ್ಟಿಗೆ ಹೇಗೆ ಹೋಗುತ್ತೆ?
    – ಸಾಕಷ್ಟು ಬ್ಯಾಲೆನ್ಸ್ ಇಲ್ಲದಿರುವುದು.
    – ಟೋಲ್ ತೆರಿಗೆ ಪಾವತಿಸದಿರುವುದು.
    – ಪಾವತಿ ವೈಫಲ್ಯಗಳು.
    – ನಿಮ್ಮ ಗ್ರಾಹಕರನ್ನು ತಿಳಿದುಕೊಳ್ಳಿ (KYC) ವಿವರಗಳನ್ನು ಸರಿಯಾಗಿ ನವೀಕರಣ ಮಾಡದೇ ಇರುವುದು.
    – ವಾಹನದ ಚಾಸಿಸ್ ಸಂಖ್ಯೆ ಅಥವಾ ನೋಂದಣಿ ಸಂಖ್ಯೆಯಲ್ಲಿನ ವ್ಯತ್ಯಾಸ.

    ಹಣ ಇಲ್ಲದೇ ಇದ್ದರೂ ಪ್ರವೇಶ:
    ಒಂದು ವೇಳೆ ಫಾಸ್ಟ್‌ಟ್ಯಾಗ್‌ ಖಾತೆಯಲ್ಲಿ ಅಗತ್ಯ ಹಣ ಇಲ್ಲದೇ ಇದ್ದರೂ ಟೋಲ್‌ಗೇಟ್‌ನಲ್ಲಿ ಪ್ರವೇಶ ನೀಡಲಾಗುತ್ತದೆ. ಟೋಲ್‌ ಪ್ರವೇಶವಾದ ಕೂಡಲೇ ‘ನಿಮ್ಮ ಖಾತೆಯಲ್ಲಿ ಅಗತ್ಯ ಹಣ ಇಲ್ಲ, ಅದನ್ನು ಕೂಡಲೇ ಭರ್ತಿ ಮಾಡಿ’ ಎಂಬ ಮೆಸೇಜ್‌ ಮೊಬೈಲ್‌ಗೆ ಬರುತ್ತದೆ. ಮಸೇಜ್‌ ಬಂದ ಬಂದ 10 ನಿಮಿಷದ ಒಳಗಡೆ ಅಗತ್ಯ ಹಣ ಹಾಕಿಕೊಂಡರೆ ಯಾವುದೇ ದಂಡ ಇರುವುದಿಲ್ಲ. ಇಲ್ಲದೇ ಇದ್ದಲ್ಲಿ ಟೋಲ್‌ ಶುಲ್ಕದ ಎರಡು ಪಟ್ಟು ಹಣ ಕಟ್ಟಬೇಕಾಗುತ್ತದೆ. ನೆಗೆಟಿವ್‌ ಬ್ಯಾಲೆನ್ಸ್‌ ಇದ್ದಲ್ಲಿ ಟೋಲ್ ಶುಲ್ಕವನ್ನು ಭದ್ರತಾ ಠೇವಣಿಯಿಂದ ಕಡಿತಗೊಳಿಸಲಾಗುತ್ತದೆ.

    15 ದಿನದ ಬಳಿಕ ದೂರು:
    ಹೆಚ್ಚುವರಿ ಹಣ ಕಡಿತ ಅಥವಾ ತಪ್ಪು ಶುಲ್ಕಕ್ಕೆ ಸಂಬಂಧಿಸಿ ಸವಾರರು 15 ದಿನಗಳ ಕೂಲಿಂಗ್‌ ಅವಧಿಯ ನಂತರ ಬ್ಯಾಂಕ್‌ಗಳಲ್ಲಿ ದೂರು ಸಲ್ಲಿಸಬಹುದಾಗಿದೆ.

    FASTag ಬಳಕೆದಾರರಿಗೆ ಪ್ರಮುಖ ಸಲಹೆಗಳು
    – FASTag ವ್ಯಾಲೆಟ್‌ನಲ್ಲಿ ಸಾಕಷ್ಟು ಹಣ ಬ್ಯಾಲೆನ್ಸ್ ಇರುವಂತೆ ನೋಡಿಕೊಳ್ಳಿ, ಕನಿಷ್ಠ 100 ರೂ. ಬ್ಯಾಲೆನ್ಸ್ ಅನ್ನು ಖಚಿತಪಡಿಸಿಕೊಳ್ಳಿ.
    – ಬ್ಯಾಂಕಿನಿಂದ ಬರುವ SMS ಎಚ್ಚರಿಕೆಗಳು ಮತ್ತು ಮೆಸೇಜ್‌ಗಳನ್ನು ಗಮನಿಸಿ.
    – MyFASTag ಅಪ್ಲಿಕೇಶನ್ ಮೂಲಕ FASTag ಬ್ಯಾಲೆನ್ಸ್ ಮತ್ತು ಸ್ಥಿತಿಯನ್ನು ಪರಿಶೀಲಿಸಿ.
    – ವಾಹನದ ವಿಂಡ್‌ಶೀಲ್ಡ್‌ನಲ್ಲಿ FASTag ಸ್ಟಿಕ್ಕರ್ ಅನ್ನು ಸರಿಯಾಗಿ ಅಂಟಿಸಿ.
    – ಸಮಸ್ಯೆಗಳನ್ನು ತಡೆಗಟ್ಟಲು ಪ್ರತಿ ವಾಹನಕ್ಕೆ ಒಂದೇ FASTag ಮಾತ್ರ ಬಳಸಿ.

     

  • ಇನ್ಮುಂದೆ ವಾಹನಗಳ ಮೇಲೆ ಮಚ್ಚು ಹಿಡಿದ ಪೋಸ್ಟರ್ ಹಾಕಿದ್ರೆ ಬೀಳುತ್ತೆ ದಂಡ!

    ಇನ್ಮುಂದೆ ವಾಹನಗಳ ಮೇಲೆ ಮಚ್ಚು ಹಿಡಿದ ಪೋಸ್ಟರ್ ಹಾಕಿದ್ರೆ ಬೀಳುತ್ತೆ ದಂಡ!

    – ಪರಿಶೀಲನೆ ವೇಳೆ ಹಳೆಯ ಕೇಸುಗಳಿದ್ದರೆ ವಾಹನ ಜಪ್ತಿ

    ಬೆಂಗಳೂರು: ವಾಹನಗಳ ಮೇಲೆ ವಿವಾದಾತ್ಮಕ, ಕ್ರೌರ್ಯ, ಅಶ್ಲೀಲ ಪೋಸ್ಟರ್ ಹಾಕಿದರೆ ಇನ್ನು ಮುಂದೆ ದಂಡ ಬೀಳಲಿದೆ. ಇದಕ್ಕೆ ಸಂಬಂಧಿಸಿದಂತೆ ಸಾರಿಗೆ ಅಧಿಕಾರಿಗಳು ಕಣ್ಣಿಟ್ಟಿದ್ದು, ದಂಡದ ಜೊತೆ ಸೀಜ್ ಮಾಡುವ ಪ್ಲ್ಯಾನ್ ಮಾಡುತ್ತಿದ್ದಾರೆ.

    ಹೌದು, ಆಟೋ, ಟ್ಯಾಕ್ಸಿ, ಇತರೆ ವಾಹನ ಚಾಲಕರ ಗಮನದಲ್ಲಿರಲಿ. ವಾಹನಗಳ ಮೇಲೆ ನೆಚ್ಚಿನ ನಟರ ಫೋಟೋ ಹಾಕಿ, ಯಾವುದೋ ವಿವಾದಾತ್ಮಕ ಫೋಟೋ ಅಥವಾ ಬರಹಗಳನ್ನು ಹಾಕಿ ಸಮಾಜದ ಸ್ವಾಸ್ಥ್ಯ ಕೆಡಿಸುವವರ ವಿರುದ್ಧ ಸಾರಿಗೆ ಇಲಾಖೆಯ ಅಧಿಕಾರಿಗಳು ಸಮರ ಸಾರಲು ಮುಂದಾಗಿದ್ದಾರೆ.ಇದನ್ನೂ ಓದಿ: ಯುದ್ಧವನ್ನು ಕೊನೆಗೊಳಿಸದಿದ್ದರೆ ಮತ್ತಷ್ಟು ನಿರ್ಬಂಧ, ಸುಂಕ – ಪುಟಿನ್‌ಗೆ ಟ್ರಂಪ್‌ ಬೆದರಿಕೆ

    ನಟರು ಮಚ್ಚು ಹಿಡಿಯುವ ಪೋಸ್ಟರ್ ಅಥವಾ ಕೆಲವರ ಭಾವನೆಗಳನ್ನು ಕೆರಳಿಸುವ ಬರಹಗಳು, ಫೋಟೋಗಳನ್ನು ಹಾಕಿದರೆ ಅಧಿಕಾರಿಗಳು ದಂಡಾಸ್ತ್ರ ಪ್ರಯೋಗ ಮಾಡಲಿದ್ದಾರೆ. ಆಯಾ ಪ್ರಾದೇಶಿಕ ಸಾರಿಗೆ ಕಚೇರಿಯ ಅಧಿಕಾರಿಗಳ ತಂಡ ಇಂತಹ ವಾಹನಗಳ ಪರಿಶೀಲನೆಗೆ ಇಳಿಯಲಿದೆ. ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ಚಾಲಕರು, ತಮ್ಮ ವಾಹನಗಳ ಮೇಲೆ ಯಾವುದಾದರೂ ಹಳೆಯ ಕೇಸುಗಳಿದ್ದರೆ ಅಂತ ವಾಹನಗಳನ್ನ ಅಧಿಕಾರಿಗಳು ಸೀಜ್ ಮಾಡಲಿದ್ದಾರೆ.

    ಅಶ್ಲೀಲ, ಅಸಭ್ಯ ಹಾಗೂ ಕ್ರೌರ್ಯವನ್ನು ಬಿಂಬಿಸುವ ಬರಹಗಳು, ಕೆಲವು ಪೋಸ್ಟರ್‌ಗಳನ್ನ ಆಟೋ, ಟ್ಯಾಕ್ಸಿಗಳ ಮೇಲೆ ಹಾಕಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗ್ತಿವೆ. ಇದು ನಕಾರಾತ್ಮಕ ಪರಿಣಾಮ ಬೀಳುತ್ತಿದ್ದು, ಸಾರಿಗೆ ನಿಯಮಗಳನ್ನ ಉಲ್ಲಂಘಿಸಿ ಇಂತಹ ಪೋಸ್ಟರ್‌ಗಳನ್ನು ಹಾಕುವುದನ್ನು ನಿಲ್ಲಿಸಿ ಎಂದು ಸಾರಿಗೆ ಇಲಾಖೆಯ ಅಧಿಕಾರಿಗಳು ಮನವಿ ಮಾಡಿದ್ದಾರೆ.

    ಕೆಲವು ಕಂಪನಿ, ಸಂಸ್ಥೆಗಳ ಜಾಹೀರಾತುಗಳನ್ನು, ಪೋಸ್ಟರ್ ಕವರ್ ಹಾಕಿಕೊಳ್ಳಲು ನಗರ ಜಿಲ್ಲಾಧಿಕಾರಿಗಳು ಅನುಮತಿ ಕೊಟ್ಟಿದ್ದು, ಅದನ್ನ ಹೊರತುಪಡಿಸಿ ಇತರೆ ಪೋಸ್ಟರ್‌ಗಳನ್ನು ಹಾಕಿಕೊಳ್ಳುವುದು ಕೂಡ ನಿಯಮ ಉಲ್ಲಂಘನೆ. ಇಷ್ಟು ದಿನ ಸುಮ್ಮನಿದ್ದ ಸಾರಿಗೆ ಇಲಾಖೆಯ ಅಧಿಕಾರಿಗಳು, ಇದೀಗ ನಿಯಮ ಉಲ್ಲಂಘಿಸಿ ಪೋಸ್ಟರ್ ಹಾಕಿಕೊಂಡವರ ವಿರುದ್ಧ ದಂಡಾಸ್ತ್ರ ಪ್ರಯೋಗ ಮಾಡಲಿದ್ದಾರೆ.ಇದನ್ನೂ ಓದಿ: ದಿನ ಭವಿಷ್ಯ 23-01-2025

  • ಆಹಾರ ಸುರಕ್ಷತಾ ಇಲಾಖೆಯಿಂದ ರಾಜ್ಯದ 127 ಪಿಜಿಗಳಿಗೆ ನೋಟಿಸ್ – 4 ಪಿಜಿಗಳಿಗೆ ದಂಡ

    ಆಹಾರ ಸುರಕ್ಷತಾ ಇಲಾಖೆಯಿಂದ ರಾಜ್ಯದ 127 ಪಿಜಿಗಳಿಗೆ ನೋಟಿಸ್ – 4 ಪಿಜಿಗಳಿಗೆ ದಂಡ

    ಬೆಂಗಳೂರು: ಪಿಜಿಗಳಲ್ಲಿ (PG) ಆಹಾರ ಸುರಕ್ಷತೆ ಕಾಪಾಡಿಕೊಳ್ಳದ ಹಿನ್ನೆಲೆ ರಾಜ್ಯದ 127 ಪಿಜಿಗಳಿಗೆ ಆಹಾರ ಸುರಕ್ಷತಾ ಮತ್ತು ಗುಣಮಟ್ಟ (FSSAI) ಇಲಾಖೆ ನೋಟಿಸ್ ನೀಡಿದೆ.

    ರಾಜ್ಯದ 305 ಪಿಜಿಗಳಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ 127 ಪಿಜಿಗಳಲ್ಲಿ ಆಹಾರ ಪದಾರ್ಥಗಳನ್ನು ಸಂಗ್ರಹ ಮಾಡಲಾಗಿದೆ. ಇದನ್ನೂ ಓದಿ: ಸರ್ಕಾರಿ ಶಾಲೆಗೆ ಮಂಜೂರಾದ ಜಾಗದಲ್ಲಿ ದೇಗುಲ – ಪೊಲೀಸ್ ಬಂದೋಬಸ್ತ್‌ನಲ್ಲಿ ತೆರವು

    ಸಂಗ್ರಹಿಸಿದ ಆಹಾರ ಪದಾರ್ಥಗಳನ್ನು ಪರೀಕ್ಷಿಸಿದ ವೇಳೆ ಸುರಕ್ಷತೆ ಕಾಪಾಡದೇ ಇರುವುದು ಪತ್ತೆಯಾಗಿದೆ. ಈ ಹಿನ್ನೆಲೆ 127 ಪಿಜಿಗಳಿಗೆ ನೋಟಿಸ್ ನೀಡಲಾಗಿದೆ. ಅದರಲ್ಲಿ ನಾಲ್ಕು ಪಿಜಿಗಳಿಗೆ ಸೇರಿ ಒಟ್ಟು 21,000 ರೂ. ದಂಡ ಹಾಕಲಾಗಿದೆ. ಇದನ್ನೂ ಓದಿ: Kolar| ಚೆಂಡು ಹೂವು ಬೆಲೆ ಕುಸಿತ – ರಸ್ತೆಬದಿ ಸುರಿದು ರೈತ ಆಕ್ರೋಶ

  • 10.76 ಲಕ್ಷ ಪ್ರಯಾಣಿಕರಿಗೆ ದಂಡ – ಬರೋಬ್ಬರಿ 5.38 ಕೋಟಿ ಸಂಗ್ರಹಿಸಿದ BMRCL

    10.76 ಲಕ್ಷ ಪ್ರಯಾಣಿಕರಿಗೆ ದಂಡ – ಬರೋಬ್ಬರಿ 5.38 ಕೋಟಿ ಸಂಗ್ರಹಿಸಿದ BMRCL

    ಬೆಂಗಳೂರು: ನಮ್ಮ ಮೆಟ್ರೋ (Namma Metro) ಪ್ರಯಾಣಿಕರು ಓದಲೇಬೇಕಾದ ಸುದ್ದಿ ಇದು. ಒಟ್ಟು 10.76 ಲಕ್ಷ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್‌ (BMRCL) ದಂಡ ವಿಧಿಸಿ ಬರೋಬ್ಬರಿ 5.38 ಕೋಟಿ ರೂ. ಹಣವನ್ನು11 ತಿಂಗಳಿನಲ್ಲಿ ವಸೂಲಿ ಮಾಡಿದೆ.

    ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ ದಂಡ (Fine) ಹಾಕುತ್ತಿದೆ. ಕಳೆದ ವಾರ ವಿಜಯನಗರ ಮೆಟ್ರೋ ನಿಲ್ದಾಣದಲ್ಲಿ 20 ನಿಮಿಷಗಳ ಕಾಲ ನಿಂತಿದ್ದ ಯುವಕನಿಗೆ 50 ರೂ. ದಂಡ ಹಾಕಿತ್ತು. ಇದಾದ ಬಳಿಕ ಈಗ ಆಸಕ್ತಿಕರ ವಿಚಾರಗಳು ಬಯಲಿಗೆ ಬರುತ್ತಿದೆ. ಇದನ್ನೂ ಓದಿ: RCB vs CSK – ಸೈಬರ್‌ ಖದೀಮರಿಂದ ಭಾರೀ ವಂಚನೆ, ದೂರು ದಾಖಲು

    ಕಳೆದ ಜೂನ್ ನಿಂದ ಇಲ್ಲಿಯವರೆಗೆ ಮೆಟ್ರೋ ನಿಲ್ದಾಣದಲ್ಲಿ ಹೆಚ್ಚು ಸಮಯ ಕಳೆದಿದ್ದ 10.75 ಲಕ್ಷ ಪ್ರಯಾಣಿಕರಿಗೆ ದಂಡ ಹಾಕಲಾಗಿದೆ. ಒಬ್ಬರಿಗೆ 50 ರೂ. ನಂತೆ 5.38 ಕೋಟಿ ರೂ. ದಂಡ ವಸೂಲಿ ಮಾಡಿದೆ. ಭದ್ರತೆ ಮತ್ತು ಸುರಕ್ಷತೆ ದೃಷ್ಟಿಯಿಂದ ಈ ನಿಯಮದ ಪ್ರಕಾರವೇ ದಂಡ ವಸೂಲಿ ಮಾಡಲಾಗಿದೆ ಎಂದು ಬಿಎಂಆರ್‌ಸಿಎಲ್‌ ಸಮರ್ಥನೆ ನೀಡಿದೆ.

    ಪ್ರಯಾಣಿಕರು ಅವಧಿ ಮೀರಿ ನಿಲ್ದಾಣದಲ್ಲಿ ಇರಬಾರದು ಎಂಬ ನಿಯಮ ಮೊದಲಿನಿಂದಲೂ ಇದೆ. ಪ್ರಯಾಣಿಕರು ಹೆಚ್ಚು ಸಮಯ ನಿಲ್ದಾಣದಲ್ಲಿ ಕಳೆದರೆ ಇತರೆ ಪ್ರಯಾಣಿಕರಿಗೆ ತೊಂದರೆ ಆಗುತ್ತದೆ. ಹೀಗಾಗಿ 20 ನಿಮಿಷಕ್ಕೂ ಹೆಚ್ಚಿನ ಸಮಯ ಕಳೆದರೆ ದಂಡ ವಿಧಿಸಲಾಗುತ್ತದೆ. ಬಿಎಂಆರ್‌ಸಿಎಲ್ ದಂಡಕ್ಕೆ ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧದ ಚರ್ಚೆ ಆಗುತ್ತಿದೆ. ಈ ದಂಡ ಪ್ರಯೋಗದ ಬಗ್ಗೆ ನಿಮ್ಮ ಅಭಿಪ್ರಾಯ ಏನು ಕಮೆಂಟ್‌ ಮಾಡಿ.  ಇದನ್ನೂ ಓದಿ: ತಲೆಮರೆಸಿಕೊಂಡಿರೋ ಪ್ರಜ್ವಲ್‍ಗೆ ಆರ್ಥಿಕ ಸಂಕಷ್ಟ ತಂದೊಡ್ಡಲು ಎಸ್‍ಐಟಿ ನಿರ್ಧಾರ!

     

  •  284 ಕೇಸ್, 1.40 ಲಕ್ಷ ರೂ. ಫೈನ್ – ಪೊಲೀಸರ ಬಲೆಗೆ ಬಿದ್ದ ಯುವಕ

     284 ಕೇಸ್, 1.40 ಲಕ್ಷ ರೂ. ಫೈನ್ – ಪೊಲೀಸರ ಬಲೆಗೆ ಬಿದ್ದ ಯುವಕ

    ಬೆಂಗಳೂರು: ಬೆಂಗಳೂರು ದಕ್ಷಿಣ ವಿಭಾಗದ ಸಂಚಾರ ಪೊಲೀಸರು (Police)  ವಿಶೇಷ ಕಾರ್ಯಚರಣೆ ನಡೆಸಿ ಸಂಚಾರಿ ನಿಯಮಗಳನ್ನು ಉಲ್ಲಂಘನೆ ಮಾಡಿದ್ದ ವಾಹನಗಳನ್ನು ಮತ್ತು 50 ಸಾವಿರಕ್ಕೂ ಹೆಚ್ಚು ದಂಡವಿರುವ ವಾಹನಗಳನ್ನು (Vechicles) ವಶಕ್ಕೆ ಪಡೆದಿದ್ದಾರೆ.

    ನಗರದಲ್ಲಿ ದಕ್ಷಿಣ ವಿಭಾಗ ಸಂಚಾರಿ ಪೊಲೀಸರು ಕಳೆದ ವಾರದಿಂದ ವಿಶೇಷ ಡ್ರೈವ್‌ ನಡೆಸಿ 50 ಸಾವಿರ ಮೇಲ್ಪಟ್ಟ ದಂಡವಿರುವ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ವಶ ಪಡಿಸಿಕೊಂಡಿರುವ 85 ಬೈಕ್‌ಗಳು ಮತ್ತು ಒಂದು ಕಾರಿನ ಮೇಲೆ ಇರುವ ಒಟ್ಟು ದಂಡ ಬರೋಬ್ಬರಿ 1,07,45,000 ರೂ. 85 ವಾಹನಗಳ ಮೇಲೆ ಬರೋಬ್ಬರಿ 10,210 ನಿಯಮ ಉಲ್ಲಂಘನೆ ಕೇಸ್ ದಾಖಲಾಗಿದೆ. ಸದ್ಯ ವಾಹನಗಳನ್ನು ವಶಕ್ಕೆ ಪಡೆದು ಮಾಲೀಕರಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ನೋಂದಣಿ ಹೆಸರಲ್ಲಿ ದೋಖಾ – ಅಪ್ಲೈ ಮಾಡುವ ಮುನ್ನ ಎಚ್ಚರ!

    ಈ ವೇಳೆ ಸಿಟಿ 100 ಬೈಕ್‌ನ ಯುವಕನೊಬ್ಬ 1.40 ಲಕ್ಷ ದಂಡವಿದ್ದರೂ ಹಾಗೇ ಬೈಕ್ ಓಡಿಸುತ್ತಿದ್ದ. ಪ್ರತೀ ದಿನ ಹೆಲ್ಮೆಟ್ ಇಲ್ಲದೇ ಆಫೀಸ್‌ಗೆ ಬೈಕ್ ಓಡಿಸಿಕೊಂಡು ಹೋಗುತ್ತಿದ್ದನು. ಜೊತೆಗೆ ದಿನವೂ ಸಂಚಾರ ನಿಯಮಗಳ ಉಲ್ಲಂಘನೆ ಮಾಡುತ್ತಿದ್ದ. ನಗರದಲ್ಲಿರುವ ಹೈ ರೆಸ್ಯೂಲೇಷನ್ ಕ್ಯಾಮರಾ ಪದೇ ಪದೇ ರೂಲ್ಸ್ ಬ್ರೇಕ್ ಮಾಡಿದ್ದ ಸವಾರನ ಫೋಟೋ ತೆಗೆದ ಹಿನ್ನೆಲೆ ಯುವಕನ ಹುಚ್ಚಾಟ ಬೆಳಕಿಗೆ ಬಂದಿದೆ. ಆತನ ಸಿಟಿ-100 ಬೈಕ್ ಮೇಲೆ ಬರೋಬ್ಬರಿ 284 ಕೇಸ್‌ಗಳು ದಾಖಾಲಾಗಿದೆ. ಕಳೆದ 2020 ರಿಂದ ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸುತ್ತಿದ್ದ. ಇದನ್ನೂ ಓದಿ: ಕಾಂತಾರ-2ನಲ್ಲಿ ದೈವಾರಾಧನೆ ಪ್ರದರ್ಶನವಾದ್ರೆ ಉಗ್ರ ಹೋರಾಟ – ರಿಷಬ್ ಶೆಟ್ಟಿಗೆ ವಿಹೆಚ್‌ಪಿ, ಬಜರಂಗ ದಳ ಎಚ್ಚರಿಕೆ

  • ಬೈಕ್‌ ಚಲಾಯಿಸಿದ ಅಪ್ರಾಪ್ತ- ತಾಯಿಗೆ 30 ಸಾವಿರ ದಂಡ!

    ಶಿವಮೊಗ್ಗ: ಅಪ್ರಾಪ್ತನಿಗೆ ಬೈಕ್​ ಚಲಾಯಿಸಲು ಕೊಟ್ಟ ಕಾರಣಕ್ಕೆ ವಾಹನ ಮಾಲೀಕರಿಗೆ ಶಿವಮೊಗ್ಗ ಜಿಲ್ಲಾ ನ್ಯಾಯಾಲಯ 30 ಸಾವಿರ ರೂಪಾಯಿ ದಂಡ ವಿಧಿಸಿದೆ. 3ನೇ ಎ.ಸಿ.ಜೆ & ಜೆ.ಎಂ.ಎಫ್.ಸಿ ನ್ಯಾಯಾಲಯ ಈ ಆದೇಶ ಹೊರಡಿಸಿದೆ.

    2024 ರ ಜನವರಿ 30 ರಂದು ಶಿವಮೊಗ್ಗ ಪೂರ್ವ ಸಂಚಾರಿ‌ ಠಾಣೆ ಪಿಎಸ್ ಐ ನವೀನ್ ಕುಮಾರ್ ಮಠಪತಿ ಅವರು ಶಿವಮೊಗ್ಗ ನಗರದ ಎಸ್ ಪಿ.ಎಂ ರಸ್ತೆಯ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಹತ್ತಿರ ವಾಹನ ತಪಾಸಣೆ ಮಾಡುತ್ತಿದ್ದರು. ಈ ವೇಳೆ 17 ವರ್ಷದ ಹುಡುಗನೊಬ್ಬ ಮೊಪೆಡ್ ಅನ್ನು ಚಾಲನೆ ಮಾಡಿಕೊಂಡು ಬಂದಿದ್ದಾನೆ.

    ಇದನ್ನ ಗಮನಿಸಿದ ಪಿಎಸ್​ಐ ಅಪ್ರಾಪ್ತನಿಗೆ ವಾಹನವನ್ನು ಚಾಲನೆ ಮಾಡಲು ಅವಕಾಶ ನೀಡಿದ ವಾಹನದ ಮಾಲೀಕರಾದ ತಾಯಿ ವಿರುದ್ಧ ಶಿವಮೊಗ್ಗ ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಲಘು ಪ್ರಕರಣವನ್ನು ದಾಖಲಿಸಿದ್ದರು. ಪ್ರಕರಣ ಸಂಬಂಧ ಘನ ನ್ಯಾಯಾಲಯಕ್ಕೆ ದೋಷಾರೋಪಣಾ ವರದಿಯನ್ನು ಸಲ್ಲಿಸಿದ್ದರು. ಇದೀಗ ಕೋರ್ಟ್‌ ಮೊಪೆಡ್ ವಾಹನದ ಮಾಲೀಕರಿಗೆ 30 ಸಾವಿರ ರೂ ದಂಡ ವಿಧಿಸಿದೆ.