Tag: Finish

  • ಶೂಟಿಂಗ್ ಮುಗಿಸಿದ `ಮೆಜೆಸ್ಟಿಕ್-2’ ಚಿತ್ರ :  126 ದಿನಗಳ ಚಿತ್ರೀಕರಣ

    ಶೂಟಿಂಗ್ ಮುಗಿಸಿದ `ಮೆಜೆಸ್ಟಿಕ್-2’ ಚಿತ್ರ : 126 ದಿನಗಳ ಚಿತ್ರೀಕರಣ

    ಗಿನ ಮೆಜೆಸ್ಟಿಕ್ ಏರಿಯಾ ಹೇಗಿದೆ,  ಅಲ್ಲಿ ನಡೆಯುವ ದಂಧೆಗಳು, ಅಕ್ರಮ ಚಟುವಟಿಕೆಗಳು  ಅಲ್ಲದೆ ಈಗಲೂ ಅಲ್ಲಿ ರೌಡಿಸಂ ಹೇಗೆ ನಡೆಯುತ್ತೆ ಎಂಬುದನ್ನು  ಅಲ್ಲಿಯೇ ಹುಟ್ಟಿ ಬೆಳೆದ ಹುಡುಗನೊಬ್ಬನ ಕಥೆಯನ್ನು  ಮೆಜೆಸ್ಟಿಕ್-2 ಚಿತ್ರದ ಮೂಲಕ ನಿರ್ದೇಶಕ ರಾಮು ಹೇಳಹೊರಟಿದ್ದಾರೆ.  ಹೀಗೆ ಸಾಮಾನ್ಯ ಜನರಿಗೆ ಗೊತ್ತಿಲ್ಲದಂಥ ಅನೇಕ  ಚಟುವಟಿಕೆಗಳನ್ನು ಮೆಜೆಸ್ಟಿಕ್-2 ಅನಾವರಣಗೊಳಿಸಲಿದೆ.  ಇದೀಗ ಈ ಚಿತ್ರದ ಚಿತ್ರೀಕರಣ ಯಶಸ್ವಿಯಾಗಿ ಮುಗಿದಿದೆ.

    ಅಮ್ಮಾ ಎಂಟರ್‌ ಪ್ರೈಸಸ್ ಮೂಲಕ  ಚಿತ್ರದುರ್ಗದ ಹೆಚ್.ಆನಂದಪ್ಪ ಅವರ ನಿರ್ಮಾಣದ ಈ ಚಿತ್ರಕ್ಕೆ  ರಾಮು ಅವರೇ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಯುವನಟ ಭರತ್, ಸಂಹಿತಾ ವಿನ್ಯಾ ನಾಯಕ, ನಾಯಕಿ ಪಾತ್ರ ನಿರ್ವಹಿಸಿದ್ದಾರೆ.  ಮೋಷನ್ ಪೋಸ್ಟರ್ ಬಿಡುಗಡೆಯ ಜೊತೆ ಶೂಟಿಂಗ್ ಅನುಭವಗಳ ಹೇಳಿಕೊಳ್ಳಲು ಇಡೀ ಚಿತ್ರತಂಡ ಮಾಧ್ಯಮದ ಮುಂದೆ ಹಾಜರಾಗಿತ್ತು.

    ಮೊದಲಿಗೆ ಮಾತನಾಡಿದ ನಿರ್ಮಾಪಕ ಹೆಚ್. ಆನಂದಪ್ಪ, ಮಾರ್ಚ್ 31ಕ್ಕೆ ನಮ್ಮ ಚಿತ್ರದ ಶೂಟಿಂಗ್ ಆರಂಭಿಸಿ, ಬೆಂಗಳೂರು ಸುತ್ತಮುತ್ತ ನಿರಂತರವಾಗಿ,ಅಲ್ಲದೆ ಮರುಘಾ ಮಠದಲ್ಲಿ ಡ್ಯುಯೆಟ್ ಸಾಂಗ್ ಚಿತ್ರೀಕರಣ ಮಾಡಿದ್ದು, ಅಂದುಕೊಂಡಂತೆಯೇ ಮುಗಿದಿದೆ. ಇಡೀ ಸಿನಿಮಾ ಶೂಟಿಂಗ್ನಲ್ಲಿ ನಾನೇ ಜೊತೆ ಇದ್ದು ನೋಡಿದ್ದೇನೆ. ಸಿನಿಮಾ ತುಂಬಾ ಚೆನ್ನಾಗಿ ಬಂದಿದೆ ಎಂದರು. ನಿರ್ದೇಶಕ ರಾಮು ಮಾತನಾಡಿ ಸತತವಾಗಿ 126 ದಿನ ಶೂಟಿಂಗ್ ಮಾಡಿದ್ದೇವೆ. ನನ್ನ ಸಬ್ಜೆಕ್ಟ್ ಕೇಳಿ ಅವಕಾಶ ಕೊಟ್ಟಿದ್ದು ಆನಂದಪ್ಪ ಅವರು. ನಾನು ಏನು ಕೇಳಿದೆನೋ ಅದೆಲ್ಲವನ್ನೂ ಒದಗಿಸಿಕೊಟ್ಟು ಸಹಕರಿಸಿದ್ದಾರೆ. ಮೊದಲ ಚಿತ್ರಕ್ಕೇ ಇಂಥ ನಿರ್ಮಾಪಕರು ಸಿಕ್ಕಿದ್ದು ನನ್ನ ಅದೃಷ್ಟ. ಈಗ ಡಬ್ಬಿಂಗ್ ಆರಂಭಿಸಬೇಕಿದೆ. ಚಿತ್ರವನ್ನು ಡಿಸೆಂಬರ್ 26ಕ್ಕೆ ರಿಲೀಸ್ ಮಾಡಬೇಕೆಂಬ ಪ್ಲಾನಿದೆ. ನಾನು, ಭರತ್ ಇಬ್ಬರೂ  ದರ್ಶನ್ ಅಭಿಮಾನಿಗಳು. ರಿಲೀಸ್ ಟೈಮಲ್ಲಿ ಮೈಸೂರಿನಿಂದ ಬೆಂಗಳೂರುವರೆಗೆ 101 ಸ್ಟಾರ್ಸ್ ಮೆರವಣಿಗೆ ಮಾಡಿಸಬೇಕು,  ದರ್ಶನ್ ಅವರ 101 ಅಡಿ ಕಟೌಟ್ ಹಾಕಬೇಕು ಎಂಬ ಪ್ಲಾನಿದೆ ಎಂದರು. ಮಾಲಾಶ್ರೀ ಅಭಿನಯದ ಹೀರೋ ಇಂಟ್ರಡಕ್ಷನ್ ಸಾಂಗನ್ನು  ಆರ್.ಎಸ್. ಗೌಡ ಅವರ ಸ್ಟುಡಿಯೋದಲ್ಲಿ ಚಿತ್ರೀಕರಿಸಲಾಗಿದೆ.

    ನಾಯಕ ಭರತ್ ಮಾತನಾಡಿ ಇದು 2024ರ ಮೆಜೆಸ್ಟಿಕ್ ಕಥೆ. ಬೆಂಗಳೂರಲ್ಲಿ ಏನೇನೆಲ್ಲ ನಡೀತಿದೆ ಅಂತ ತೋರಿಸಿದ್ದೇವೆ. ನಾವೆಲ್ಲ ತುಂಬಾ ಎಫರ್ಟ್ ಹಾಕಿ ಸಿನಿಮಾ ಮಾಡಿದ್ದೇವೆ. 6ಫೈಟ್ ಅದ್ಭುತವಾಗಿ ಮೂಡಿಬಂದಿವೆ. ಮೆಜೆಸ್ಟಿಕ್ ನಲ್ಲೇ ಹುಟ್ಟಿಬೆಳೆದ ಹುಡುಗನ‌ ಕಥೆ. ನನ್ನ ಪಾತ್ರಕ್ಕೆ 2 ಶೇಡ್ಸ್ ಇದೆ. ನಿರ್ಮಾಪಕನ ಕಷ್ಟ ಏನೆಂದು ನನಗೆ ಗೊತ್ತು. ನಿರ್ಮಾಪಕರು ಯಾವುದಕ್ಕೂ ಕೊರತೆ ಮಾಡದೆ ಒದಗಿಸಿಕೊಟ್ಟಿದ್ದಾರೆ. ಮೆಜೆಸ್ಟಿಕ್ ಅಂಡರ್ ಪಾಸ್, ಬಸ್ ಸ್ಟಾಪ್ ನಲ್ಲೂ ಶೂಟ್ ಮಾಡಿದ್ದೇವೆ. ಈ ಸಿನಿಮಾ ಮುಗಿಯುವ ಮುನ್ನವೇ ನನಗೆ ಮತ್ತೊಂದು ಸಿನಿಮಾದಲ್ಲಿ ಅವಕಾಶ ಸಿಕ್ಕಿದೆ ಹೆವಿ ಆಕ್ಷನ್ , ಫನ್ , ರೊಮ್ಯಾನ್ಸ್ ಸೆಂಟಿಮೆಂಟ್ ಎಲ್ಲವೂ ಚಿತ್ರದಲ್ಲಿದೆ ಎಂದರು.

     

    ನಾಯಕಿ  ಸಂಹಿತಾ ವಿನ್ಯಾ ಮಾತನಾಡಿ ತುಂಬಾ ದಿನಗಳ ಶ್ರಮ. ಸಿನಿಮಾಗೆ ಎಲ್ಲರೂ ಸಪೋರ್ಟ್ ಮಾಡಿದ್ದಾರೆ. ಮಿಡಲ್ ಕ್ಲಾಸ್ ಹುಡುಗಿ ಪಾತ್ರ ನನ್ನದು ಎಂದರು. ಛಾಯಾಗ್ರಾಹಕ ವೀನಸ್ ಮೂರ್ತಿ, ಅಸೋಸಿಯೇಟ್ ಡೈರೆಕ್ಟರ್ ವಿಜಯಕುಮಾರ್, ಸಾಹಸ ನಿರ್ದೇಶಕ ಎಲ್ಲರೂ ಚಿತ್ರದ ಕುರಿತಂತೆ ಮಾತನಾಡಿದರು.  ಈ ಚಿತ್ರಕ್ಕೆ ರಾಮೋಹಳ್ಳಿ, ಹೆಚ್.ಎಂ.ಟಿ., ಮಾಕಳಿ ಬಳಿಯ ಸಕ್ರೆ ಅಡ್ಡ, ಆರ್.ಟಿ.ನಗರದ ನಿಸರ್ಗ ಹೌಸ್ ಸೇರಿದಂತೆ ಬಹುತೇಕ  ಬೆಂಗಳೂರು ಸುತ್ತಮುತ್ತ  ಚಿತ್ರೀಕರಣ ನಡೆಸಲಾಗಿದೆ. ರೌಡಿಸಂ  ಹಾಗೂ ಆಕ್ಷನ್ ಬೇಸ್ ಕಥಾಹಂದರ ಹೊಂದಿರುವ  ಈ ಚಿತ್ರದಲ್ಲಿ ಹಿರಿಯನಟಿ ಶೃತಿ ಅವರು ತಾಯಿಯ ಪಾತ್ರ ನಿರ್ವಹಿಸಿದ್ದಾರೆ. ಇನ್ನು  ಈ ಚಿತ್ರಕ್ಕೆ  ವಿನು ಮನಸು ಅವರ ಸಂಗೀತ ನಿರ್ದೇಶನವಿದೆ.

  • ಶೂಟಿಂಗ್ ಮುಗಿಸಿದ ‘ಜೊತೆ ಜೊತೆಯಲಿ’ ಧಾರಾವಾಹಿ: ಮುಟ್ಟಲಿಲ್ಲ ಟಾರ್ಗೆಟ್?

    ಶೂಟಿಂಗ್ ಮುಗಿಸಿದ ‘ಜೊತೆ ಜೊತೆಯಲಿ’ ಧಾರಾವಾಹಿ: ಮುಟ್ಟಲಿಲ್ಲ ಟಾರ್ಗೆಟ್?

    ನ್ನಡದ ಪಾಪ್ಯುಲರ್ ಧಾರಾವಾಹಿಗಳಲ್ಲಿ (Serial) ಒಂದಾದ ‘ಜೊತೆ ಜೊತೆಯಲಿ’ (Jothe Jotheyali) ಕೊನೆಗೂ ತನ್ನ ಶೂಟಿಂಗ್ (Shooting) ಮುಗಿಸಿದೆ. ಭಾನುವಾರ ಕೊನೆ ಕಂತಿನ ಚಿತ್ರೀಕರಣ ಮಾಡಲಾಗಿದೆ ಎನ್ನುವ ಮಾಹಿತಿ ಹೊರಬಿದ್ದಿದೆ. ತಾವು ಕೊನೆ ದಿನದ ಶೂಟಿಂಗ್ ಮುಗಿಸಿರುವುದಾಗಿ ನಟಿ ಮೇಘಾ ಶೆಟ್ಟಿ (Megha Shetty) ಹೇಳಿಕೊಂಡಿದ್ಧಾರೆ. ಅದೊಂದು ಭಾವುಕ ಕ್ಷಣವೂ ಆಗಿತ್ತು ಎಂದು ಮಾತನಾಡಿದ್ದಾರೆ.

    ಕಳೆದ ವಾರವಷ್ಟೇ ಧಾರಾವಾಹಿ ಮುಕ್ತಾಯವಾಗುತ್ತಿರುವ ಕುರಿತು ಪಬ್ಲಿಕ್ ಟಿವಿ ಡಿಜಿಟಲ್ ನ್ಯೂಸ್ ಬ್ರೇಕ್ ಮಾಡಿತ್ತು. ಅದಕ್ಕೆ ಕಾರಣವನ್ನೂ ನಿಖರವಾಗಿ ನೀಡಿತ್ತು. ಧಾರಾವಾಹಿ ತಂಡದ ಸದಸ್ಯರ ಅನಿಸಿಕೆಯನ್ನೂ ಪ್ರಕಟಿಸಿತ್ತು. ಕೊನೆಗೂ ಅದು ನಿಜವಾಗಿದೆ. ಭಾನುವಾರ ಕೊನೆಯ ಎಪಿಸೋಡ್ ನ ದೃಶ್ಯಗಳನ್ನು ಸೆರೆ ಹಿಡಿಯಲಾಗಿದೆ ಎಂದು ಧಾರಾವಾಹಿ ತಂಡವೂ ಖಚಿತ ಪಡಿಸಿದೆ. ಇದನ್ನೂ ಓದಿ:7 ತಿಂಗಳ ಬಳಿಕ ಮೊದಲ ಬಾರಿಗೆ ಮಗಳ ಮುಖ ರಿವೀಲ್ ಮಾಡಿದ ಧ್ರುವ ಸರ್ಜಾ

    ಜೊತೆ ಜೊತೆಯಲಿ ಧಾರಾವಾಹಿ ಮೂಲಕ ಮನೆ ಮನ ತಲುಪಿದ್ದನಟ ಅನಿರುದ್ಧ, ಧಾರಾವಾಹಿ ತಂಡಕ್ಕೆ ಸಹಕಾರ ನೀಡಲಿಲ್ಲ ಎಂದು ದೊಡ್ಡ ಸುದ್ದಿ ಆಗಿತ್ತು. ಬಹಿರಂಗವಾಗಿಯೂ ಅನಿರುದ್ಧ ಹಾಗೂ ಧಾರಾವಾಹಿಯ ನಿರ್ಮಾಪಕ ಆರೂರು ಜಗದೀಶ್ ಈ ಕುರಿತು ಮಾತನಾಡಿದ್ದರು. ಅನಿರುದ್ಧ (Aniruddha) ಅವರನ್ನು ಧಾರಾವಾಹಿಯಿಂದ ಕೈ ಬಿಡಲಾಯಿತು. ನಂತರ ಹರೀಶ್ ರಾಜ್ ಆ ಪಾತ್ರವನ್ನು ಮುಂದುವರೆಸಿದರು. ಇದೀಗ ಮತ್ತೆ ಕಲಾವಿದರ ಕಾರಣದಿಂದಾಗಿಯೇ ಧಾರಾವಾಹಿ ನಿಲ್ಲಿಸಬೇಕಾದ ಸ್ಥಿತಿ ಬಂದಿತ್ತು.

    ಧಾರಾವಾಹಿ ತಂಡದ ಕೆಲವು ಸದಸ್ಯರೇ ಹೇಳಿಕೊಂಡಂತೆ ಪ್ರಮುಖ ಪಾತ್ರ ಮಾಡುತ್ತಿದ್ದ ಕಲಾವಿದೆಯು ಡೇಟ್ ಕೊಡದೇ ಇರುವ ಕಾರಣದಿಂದಾಗಿ ಧಾರಾವಾಹಿ ನಿಲ್ಲಿಸಬೇಕಾಗಿ ಬಂದಿದೆ. ಪ್ರಮುಖ ಪಾತ್ರ ಮಾಡುತ್ತಿದ್ದ ನಟಿ ಅಸಹಕಾರದಿಂದ ಪಾಪ್ಯುಲರ್ ಧಾರಾವಾಹಿಯೊಂದು ಅಕಾಲಿಕವಾಗಿ ನಿಂತಿದೆ. ಅಂದುಕೊಂಡಂತೆ ಆಗಿದ್ದರೆ ಈ ಧಾರಾವಾಹಿ 1000 ಕಂತುಗಳನ್ನು ಕಾಣಬೇಕಿತ್ತು. ಆದರೆ, ಟಾರ್ಗೆಟ್ ಮುಟ್ಟುವಲ್ಲಿ ವಿಫಲವಾಗಿದೆ.

  • ಪ್ರಭುದೇವ ಅಭಿನಯದ ‘wolf’ ಸಿನಿಮಾದ ಶೂಟಿಂಗ್ ಮುಕ್ತಾಯ

    ಪ್ರಭುದೇವ ಅಭಿನಯದ ‘wolf’ ಸಿನಿಮಾದ ಶೂಟಿಂಗ್ ಮುಕ್ತಾಯ

    ನ್ನಡ ಚಿತ್ರರಂಗಕ್ಕೆ ಸದಭಿರುಚಿ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ಲಾಂಛನದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಿರ್ಮಾಪಕ ಸಂದೇಶ್ ನಾಗರಾಜ್(ಎಂ.ಎಲ್.ಸಿ)  ನಿರ್ಮಸಿರುವ, ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ (Prabhudeva) ನಾಯಕರಾಗಿ ನಟಿಸಿರುವ “wolf” ಚಿತ್ರದ ಚಿತ್ರೀಕರಣ (shooting) ಮುಕ್ತಾಯವಾಗಿದೆ. ಬಹುಕೋಟಿ ವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿರುವ ಈ ಚಿತ್ರಕ್ಕೆ ಪಾಂಡಿಚೇರಿ, ಚೆನೈ, ಬೆಂಗಳೂರು, ಅಂಡಮಾನ್, ನಿಕೋಬಾರ್ ಮುಂತಾದ ಕಡೆ 65 ದಿನಗಳ ಚಿತ್ರೀಕರಣ ನಡೆದಿದೆ.

    ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿನು ವೆಂಕಟೇಶ್ (Vinu Venkatesh) ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಕನ್ನಡ, ತಮಿಳು, ತೆಲುಗು ಹಾಗೂ ಮಲೆಯಾಳಂ ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ಪ್ರಭುದೇವ, ಅಂಜು ಕುರಿಯನ್, ಲಕ್ಷ್ಮೀ ರೈ, ಅನಸೂಯ(ಪುಷ್ಪ ಖ್ಯಾತಿ) ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಇದನ್ನೂ ಓದಿ: ಬಾಯ್‌ಫ್ರೆಂಡ್ ಜಾಕಿ ಭಗ್ನಾನಿ ಬರ್ತ್‌ಡೇಗೆ ನಟಿ ರಾಕುಲ್ ಲವ್ಲಿ ವಿಶ್

    ಅಂಬರೀಶ್ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಅರುಳ್ ವಿನ್ಸೆಂಟ್ ಅವರ ಛಾಯಾಗ್ರಹಣವಿದೆ. ಲಾರೆನ್ಸ್ ಕಿಶೋರ್ ಸಂಕಲನ, ಪ್ರದೀಪ್ ದಿನೇಶ್ ಸಾಹಸ ನಿರ್ದೇಶನ, ಮಣಿ ಮೌಳಿ ಕಲಾ ನಿರ್ದೇಶನ ಹಾಗೂ ಗಣೇಶ್, ಶ್ರೀಧರ್, ಭೂಪತಿ ರಾಜ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಪ್ತಸಾದ್ ನಿರ್ಮಾಣ ಮೇಲ್ವಿಚಾರಣೆ ಹಾಗೂ ಶಂಕರ್ ಲಿಂಗಂ, ಮೈಸೂರು ಸುರೇಶ್ ನಿರ್ಮಾಣ ನಿರ್ವಹಣೆ “wolf” ಚಿತ್ರದ ನಿರ್ಮಾಣ ನಿರ್ವಾಹಕರು.

    Live Tv
    [brid partner=56869869 player=32851 video=960834 autoplay=true]

  • ‘ಗಣ’ ಸಿನಿಮಾದ ಶೂಟಿಂಗ್ ಮುಗಿಸಿದ ಪ್ರಜ್ವಲ್ ದೇವರಾಜ್

    ‘ಗಣ’ ಸಿನಿಮಾದ ಶೂಟಿಂಗ್ ಮುಗಿಸಿದ ಪ್ರಜ್ವಲ್ ದೇವರಾಜ್

    ಡೈನಾಮಿಕ್ ಪ್ರಿನ್ಸ್ ದೇವರಾಜ್ ಅಭಿನಯದ “ಗಣ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲಿ 80ದಿನಗಳ ಚಿತ್ರೀಕರಣ ನಡೆದಿದೆ. ನವೆಂಬರ್ ಹತ್ತರಿಂದ ಚಿತ್ರೀಕರಣ ನಂತರದ ಚಟುವಟಿಕೆಗಳು ಆರಂಭವಾಗಲಿದೆ. ಚೆರಿ ಕ್ರಿಯೇಷನ್ಸ್ ಲಾಂಛನದಲ್ಲಿ ಪಾರ್ಥು ಅವರು ನಿರ್ಮಿಸುತ್ತಿರುವ ಈ ಚಿತ್ರವನ್ನು ಹರಿಪ್ರಸಾದ್ ಜಕ್ಕ ನಿರ್ದೇಶಿಸುತ್ತಿದ್ದಾರೆ.

    ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ ಹೊಸ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಯಶ ಶಿವಕುಮಾರ್ ಈ ಚಿತ್ರದ ನಾಯಕಿ. ವಿಶಾಲ್ ಹೆಗ್ಡೆ, ವೇದಿಕಾ ಕುಮಾರ್, ಶಿವರಾಜ್ ಕೆ.ಆರ್ ಪೇಟೆ, ಕೃಷಿ ತಾಪಂಡ, ಸಂಪತ್ ರಾಜ್, ರವಿ ಕಾಳೆ, ರಮೇಶ್ ಭಟ್, ಉಮೇಶ್, ಸಿದ್ಲಿಂಗು ಶ್ರೀಧರ್, ಬಾಬು ಹಿರಣ್ಣಯ್ಯ ಹಾಗೂ ಮಾಸ್ಟರ್ ರಘುನಂದನ್ “ಗಣ”ದಲ್ಲಿ ಅಭಿನಯಿಸಿದ್ದಾರೆ. ಇದನ್ನೂ ಓದಿ: ರಾಹುಲ್‌ ಏಕಾಂಗಿ ಹೋರಾಟ ವ್ಯರ್ಥ, ಶಕೀಬ್‌ ಆಲ್‌ರೌಂಡರ್‌ ಆಟ – ಬಾಂಗ್ಲಾದೇಶಕ್ಕೆ 1 ವಿಕೆಟ್‌ ರೋಚಕ ಜಯ

    ಅನೂಪ್ ಸಂಗೀತ ಸಂಯೋಜಿಸಿರುವ ನಾಲ್ಕು ಸುಮಧುರ ಹಾಡುಗಳು ಈ ಚಿತ್ರದಲ್ಲಿದೆ. ನಾಲ್ಕು ಮೈನವಿರೇಳಿಸುವ ಸಾಹಸ ದೃಶ್ಯಗಳು ಚಿತ್ರದಲ್ಲಿದ್ದು, ಅರ್ಜುನ್, ಮಾಸ್ ಮಾದ ಹಾಗೂ ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ ಮಾಡಿದ್ದಾರೆ. ಜೈ ಆನಂದ್ ಛಾಯಾಗ್ರಹಣ, ಹರೀಶ್ ಕೊಮ್ಮೆ ಸಂಕಲನ ಹಾಗೂ ಮುರಳಿ ಅವರ ನೃತ್ಯ ನಿರ್ದೇಶನ ” ಗಣ” ಚಿತ್ರಕ್ಕಿದೆ. ಶ್ರೀನಿವಾಸ್ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು.

    Live Tv
    [brid partner=56869869 player=32851 video=960834 autoplay=true]

  • ವಿನಯ್ ರಾಜ್ ಕುಮಾರ್ ಅಭಿನಯದ ‘ಪೆಪೆ’ ಸಿನಿಮಾ ಶೂಟಿಂಗ್ ಮುಕ್ತಾಯ

    ವಿನಯ್ ರಾಜ್ ಕುಮಾರ್ ಅಭಿನಯದ ‘ಪೆಪೆ’ ಸಿನಿಮಾ ಶೂಟಿಂಗ್ ಮುಕ್ತಾಯ

    ಟ ವಿನಯ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಸಿನಿಮಾ ‘ಪೆಪೆ’. ಟೈಟಲ್ ಮೂಲಕವೇ ಕುತೂಹಲ ಹುಟ್ಟು ಹಾಕಿರುವ ಈ ಚಿತ್ರದ ಟೀಸರ್ ಝಲಕ್ ಕಂಡು ಪ್ರೇಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದ್ರು. ಸಾಕಷ್ಟು ಉತ್ತಮ ರೆಸ್ಪಾನ್ಸ್ ಟೀಸರ್ ಪಡೆದುಕೊಂಡಿತ್ತು. ಹೀಗೆ ಆರಂಭದಿಂದಲೂ ಸಿನಿರಸಿಕರಲ್ಲಿ ನಿರೀಕ್ಷೆ ಹುಟ್ಟು ಹಾಕಿರುವ ‘ಪೆಪೆ’ ಚಿತ್ರದ ಚಿತ್ರೀಕರಣ ಕಂಪ್ಲೀಟ್ ಆಗಿದ್ದು, ಚಿತ್ರೀಕರಣಕ್ಕೆ ಕುಂಬಳಕಾಯಿ ಒಡೆಯಲಾಗಿದೆ.

    ಶ್ರೀಲೇಶ್ ಎಸ್ ನಾಯರ್ ನಿರ್ದೇಶನಲ್ಲಿ ಮೂಡಿ ಬರ್ತಿರುವ ‘ಪೆಪೆ’ ಚಿತ್ರದ ಚಿತ್ರೀಕರಣ ಕಂಪ್ಲೀಟ್ ಆಗಿದೆ. ಇಷ್ಟು ದಿನ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದ ಚಿತ್ರತಂಡ ಸಕಲೇಶಪುರದಲ್ಲಿ ನಡೆದ ಕ್ಲೈಮ್ಯಾಕ್ಸ್ ಸೀನ್ ಶೂಟಿಂಗ್ ಬಳಿಕ ಚಿತ್ರೀಕರಣಕ್ಕೆ ಕುಂಬಳಕಾಯಿ ಒಡೆದಿದೆ. ಸಾಹಸ ನಿರ್ದೇಶಕ ರವಿವರ್ಮಾ ಕಂಪೋಸ್ ಮಾಡಿದ ಕ್ಲೈಮ್ಯಾಕ್ಸ್ ಫೈಟಿಂಗ್ ಸೀನ್ ಸೆರೆ ಹಿಡಿಯುವ ಮೂಲಕ ‘ಪೆಪೆ’ ಚಿತ್ರೀಕರಣಕ್ಕೆ ಶುಭಂ ಹೇಳಲಾಗಿದೆ. ಇದನ್ನೂ ಓದಿ: ಕ್ಯಾನ್ಸರ್‌ ಗೆದ್ದಿದ್ದ 24ರ ಹರೆಯದ ನಟಿ ಐಂದ್ರಿಲಾ ಶರ್ಮಾ ಹೃದಯಾಘಾತದಿಂದ ನಿಧನ

    ಆರಂಭದಿಂದ ಒಂದೇ ರೀತಿ ಸಿನಿಮಾಗಳಿಗೆ ಮೊರೆ ಹೋಗದೇ ಪ್ರತಿ ಸಿನಿಮಾದಲ್ಲೂ ವಿಭಿನ್ನತೆ ಕಾಪಾಡಿಕೊಂಡು ಬರ್ತಿರುವ ವಿನಯ್ ರಾಜ್ ಕುಮಾರ್ ಚಿತ್ರದಲ್ಲಿ ಗ್ಯಾಂಗ್ ಲೀಡರ್ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಟೀಸರ್, ಪೋಸ್ಟರ್ ಝಲಕ್ ನಲ್ಲಿ ವಿನಯ್ ಕಂಡು ದೊಡ್ಮನೆ ಅಭಿಮಾನಿಗಳು, ಸಿನಿರಸಿಕರು ಥ್ರಿಲ್ ಆಗಿದ್ದು, ಚಿತ್ರದ ಮೇಲೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

    ಚಿತ್ರದಲ್ಲಿ ಮೆದಿನಿ ಕೆಳಮನಿ, ಯಶ್ ಶೆಟ್ಟಿ, ಕಾಜಲ್ ಕುಂದರ್, ಅರುಣಾ ಬಾಲರಾಜ್, ನವೀನ್ ಡಿ ಪಡಿಲ್, ಬಾಲಾ ರಾಜ್ವಾಡಿ ಒಳಗೊಂಡ ತಾರಾಬಳಗವಿದೆ. ಅಭಿಷೇಕ್ ಕಾಸರಗೋಡು ಕ್ಯಾಮೆರಾ ವರ್ಕ್, ಪೂರ್ಣಚಂದ್ರ ತೇಜಸ್ವಿ ಸಂಗೀತ ನಿರ್ದೇಶನ ಚಿತ್ರಕ್ಕಿದೆ. ಕೊಡಗು, ಸಕಲೇಶಪುರದಲ್ಲಿ ಸಿನಿಮಾ ಸೆರೆ ಹಿಡಿಯಲಾಗಿದೆ. ಚಿತ್ರವನ್ನು ಉದಯ್ ಮತ್ತು ಶ್ರೀರಾಮ್ ಬಂಡವಾಳ ಹೂಡಿ ನಿರ್ಮಾಣ ಮಾಡಿದ್ದಾರೆ. 2018ರಲ್ಲಿ ತೆರೆಕಂಡ ಅನಂತು v/s ನುಸ್ರುತ್ ಸಿನಿಮಾ ಬಳಿಕ ವಿನಯ್ ರಾಜ್ ಕುಮಾರ್ ಯಾವುದೇ ಸಿನಿಮಾ ತೆರೆಕಂಡಿಲ್ಲ. ‘ಪೆಪೆ’ ಜೊತೆಗೆ ‘ಗ್ರಾಮಾಯಣ’, ‘ಅದೊಂದಿತ್ತು ಕಾಲ’ ಸಿನಿಮಾಗಳಲ್ಲೂ ವಿನಯ್ ಬ್ಯುಸಿಯಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ನಿರ್ಮಾಣದ ಸಿನಿಮಾದ ಶೂಟಿಂಗ್ ಮುಕ್ತಾಯ

    ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ನಿರ್ಮಾಣದ ಸಿನಿಮಾದ ಶೂಟಿಂಗ್ ಮುಕ್ತಾಯ

    ಮೊನ್ನೆ ಮೊನ್ನೆಯಷ್ಟೇ ತಮ್ಮ ನಿರ್ಮಾಣದ ಸಿನಿಮಾ ವಿಚಾರವನ್ನು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದರು ರಮ್ಯಾ. ಈ ಸಿನಿಮಾದಲ್ಲಿ ತಾವು ನಟಿಸುತ್ತಿಲ್ಲ ಎಂದು ಹೇಳುವ ಮೂಲಕ ಅಭಿಮಾನಿಗಳಿಗೆ ನಿರಾಸೆಯನ್ನೂ ಉಂಟು ಮಾಡಿದ್ದರು. ಈ ಆಸೆ, ನಿರಾಸೆಗಳು ಇನ್ನೂ ಮರೆಯಾಗಿಲ್ಲ, ಅಷ್ಟರಲ್ಲಿ ಸಿನಿಮಾದ ಶೂಟಿಂಗ್ ಅನ್ನೇ ಮುಗಿಸಿದ್ದಾರೆ. ಇಷ್ಟು ಬೇಗ ಚಿತ್ರೀಕರಣ ಮುಗಿಸುವ ಮೂಲಕ ಅಚ್ಚರಿಯನ್ನೂ ಉಂಟು ಮಾಡಿದ್ದಾರೆ.

    ರಮ್ಯಾ  (Ramya) ನಿರ್ಮಾಣದ ಚೊಚ್ಚಲ ಸಿನಿಮಾ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ಶೂಟಿಂಗ್‌ ಮುಕ್ತಾಯಗೊಳಿಸಿದೆ. ಇಂದು ಈ ಚಿತ್ರಕ್ಕೆ ಕುಂಬಳಕಾಯಿ ಪೂಜೆ ನೆರವೇರಲಿದೆ. ಆಪಲ್‌ ಬಾಕ್ಸ್‌ ಸ್ಟುಡಿಯೋಸ್‌ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ ಈ ಸಿನಿಮಾವನ್ನು ರಾಜ್‌ ಬಿ ಶೆಟ್ಟಿ  (Raj B Shetty) ನಿರ್ದೇಶನ ಮಾಡಿದ್ದಾರೆ. ಸಿರಿ ರವಿಕುಮಾರ್‌ (Siri Ravikumar) ಮತ್ತು ರಾಜ್‌ ಶೆಟ್ಟಿ ಈ ಚಿತ್ರದ ಮುಖ್ಯಭೂಮಿಕೆಯಲ್ಲಿದ್ದಾರೆ. ಇದನ್ನೂ ಓದಿ: ಧ್ರುವ ಸರ್ಜಾ ಚಿತ್ರಕ್ಕೆ ಮಾಲಾಶ್ರೀ ಪುತ್ರಿ ರಾಧನಾ ರಾಮ್ ನಾಯಕಿ

    ಅಂದುಕೊಂಡಂತೆ ಆಗಿದ್ದರೆ, ಈ ಸಿನಿಮಾದಲ್ಲಿ ರಮ್ಯಾ ಅವರೇ ನಟಿಸಬೇಕಿತ್ತು. ಹಾಗಂತ  ಅನೌನ್ಸ್ ಕೂಡ ಆಗಿತ್ತು. ಆದರೆ, ತಾವು ಈ ಸಿನಿಮಾದಲ್ಲಿ ನಟಿಸುತ್ತಿಲ್ಲ, ಕೇವಲ ನಿರ್ಮಾಪಕಿಯಾಗಿ ಮಾತ್ರ ಇರುತ್ತೇನೆ ಎಂದು ಹೇಳುವ ಮೂಲಕ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದರು ರಮ್ಯಾ. ಈ ವಿಷಯ ತಿಳಿಸಿದ ಕೆಲವೇ ದಿನಗಳ ನಂತರ ಮತ್ತೊಂದು ಸಿಹಿ ಸುದ್ದಿಯನ್ನೂ ನೀಡಿ, ತಾವು ಡಾಲಿ ಧನಂಜಯ್ ಜೊತೆ ಉತ್ತರಕಾಂಡ ಚಿತ್ರದಲ್ಲಿ ನಟಿಸುತ್ತಿರುವುದಾಗಿಯೂ ತಿಳಿಸಿದ್ದರು. ಇದೀಗ ರಮ್ಯಾ ಬ್ಯಾನರ್ ನ ಮೊದಲ ಸಿನಿಮಾ ಕಂಪ್ಲೀಟ್ ಆಗಿದೆ.

    Live Tv
    [brid partner=56869869 player=32851 video=960834 autoplay=true]