Tag: FIR

  • ಆರ್‌ಸಿಬಿ ಸ್ಟಾರ್‌ ವೇಗಿ ಯಶ್‌ ದಯಾಳ್‌ ವಿರುದ್ಧ ಲೈಂಗಿಕ ಕಿರುಕುಳ ಆರೋಪ – FIR ದಾಖಲು

    ಆರ್‌ಸಿಬಿ ಸ್ಟಾರ್‌ ವೇಗಿ ಯಶ್‌ ದಯಾಳ್‌ ವಿರುದ್ಧ ಲೈಂಗಿಕ ಕಿರುಕುಳ ಆರೋಪ – FIR ದಾಖಲು

    – ಮದ್ವೆಯಾಗೋದಾಗಿ ನಂಬಿಸಿ ಮೋಸ – ಸಿಎಂ ಯೋಗಿಗೂ ಅಧಿಕೃತ ದೂರು ನೀಡಿದ ಯುವತಿ

    ಲಕ್ನೋ: ಐಪಿಎಲ್‌ನಲ್ಲಿ ರಿಂಕು ಸಿಂಗ್‌ನಿಂದ 5 ಸಿಕ್ಸರ್‌ ಹೊಡೆಸಿಕೊಂಡು ಕುಖ್ಯಾತಿ ಪಡೆದಿದ್ದ ಹಾಗೂ 2025ರ ಆವೃತ್ತಿಯಲ್ಲಿ ಆರ್‌ಸಿಬಿ ತಂಡವನ್ನ ಚಾಂಪಿಯನ್‌ ಪಟ್ಟಕ್ಕೇರಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ಸ್ಟಾರ್‌ ವೇಗಿ ಯಶ್‌ ದಯಾಳ್‌ (Yash Dayal) ವಿರುದ್ಧ ಲೈಂಗಿಕ ಕಿರುಕುಳ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.

    ದಯಾಳ್ ಅವರ ಮೇಲೆ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ, ಹಿಂಸೆ ಮತ್ತು ವಂಚನೆ ಆರೋಪ ಹೊರಿಸಿದ್ದಾರೆ. ಹಾಗೆಯೇ ಯಶ್ ದಯಾಳ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಂತ್ರಸ್ತ ಮಹಿಳೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದು, ನ್ಯಾಯಕ್ಕಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ರಾಜ್ಯ ಪೊಲೀಸರಿಗೂ ಮನವಿ ಕೂಡ ಮಾಡಿದ್ದಾರೆ. ಇದನ್ನೂ ಓದಿ: ಭಾರತ, ಪಾಕ್‌ ಮಧ್ಯೆ ಜುಲೈ 20 ರಂದು ಹೈವೋಲ್ಟೇಜ್‌ ಮ್ಯಾಚ್‌

    ಭಾವಿ ಸೊಸೆ ಎಂದು ಪರಿಚಯಿಸಿದ್ರು
    ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆ ಸಿಎಂ ಹೆಲ್ಪ್‌ಲೈನ್ ಪೋರ್ಟಲ್‌ನಲ್ಲಿ ದೂರು ದಾಖಲಿಸಿದ್ದು, ಅದರ ಸ್ಕ್ರೀನ್‌ಶಾಟ್‌ಗಳನ್ನು ಸಾಮಾಜಿಕ ಜಾಲತಾಣಾದಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್‌ನಲ್ಲಿ ಮಹಿಳೆ ದಯಾಳ್ ಜೊತೆಗಿನ ತನ್ನ ಫೋಟೋ ಸಹ ಹಂಚಿಕೊಂಡಿದ್ದಾರೆ. ಕಳೆದ 5 ವರ್ಷಗಳಿಂದ ದಯಾಳ್ ಜೊತೆ ಸಂಬಂಧ ಹೊಂದಿದ್ದು, ದಯಾಳ್ ಮದುವೆಯಾಗುವುದಾಗಿ ನಂಬಿಸಿ ಭಾವನಾತ್ಮಕವಾಗಿ, ಮಾನಸಿಕವಾಗಿ ಮತ್ತು ದೈಹಿಕವಾಗಿ ತನ್ನನ್ನು ಶೋಷಿಸಿದ್ದಾರೆ. ಅಲ್ಲದೇ ದಯಾಳ್ ನನ್ನನ್ನು ನಿಮ್ಮ ಭಾವಿ ಸೊಸೆ ಎಂದು ಅವರ ಕುಟುಂಬಕ್ಕೆ ಪರಿಚಯಿಸಿ, ಆ ಬಳಿಕ ನನಗೆ ವಂಚಿಸಿದ್ದಾರೆ ಎಂದು ಮಹಿಳೆ ತನ್ನ ದೂರಿನಲ್ಲಿ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: 1st Test: ಮಿಂಚಿದ ಡಕೆಟ್- ಭಾರತದ ವಿರುದ್ಧ ಇಂಗ್ಲೆಂಡ್‌ಗೆ 5 ವಿಕೆಟ್‌ಗಳ ಜಯ

    ಅನೇಕ ಮಹಿಳೆಯರೊಟ್ಟಿಗೆ ಸಂಬಂಧ
    ದಯಾಳ್ ತನಗೆ ಮೋಸ ಮಾಡುತ್ತಿದ್ದಾನೆಂದು ತಿಳಿದ ತಕ್ಷಣ ನಾನು ಇದನ್ನು ಪ್ರತಿಭಟಿಸಿದೆ. ಇದರಿಂದ ನಾನು ದೈಹಿಕ ಹಿಂಸೆ ಮತ್ತು ಮಾನಸಿಕ ಕಿರುಕುಳವನ್ನು ಎದುರಿಸಬೇಕಾಯಿತು. ದಯಾಳ್ ನನ್ನೊಂದಿಗೆ ಮಾತ್ರವಲ್ಲದೆ ಅನೇಕ ಮಹಿಳೆಯರೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ದೂರುದಾರೆ ಆರೋಪಿಸಿದ್ದಾರೆ. ಈ ಬಗ್ಗೆ ನಾನು ಜೂನ್ 14 ರಂದು ಮಹಿಳಾ ಸಹಾಯವಾಣಿಗೆ ಪ್ರಕರಣದ ಬಗ್ಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಸಂತ್ರಸ್ತೆ ಪೊಲೀಸರ ವಿರುದ್ಧವೂ ಆರೋಪ ಹೊರಿಸಿದ್ದಾರೆ. ಇದನ್ನೂ ಓದಿ: ಆಂಗ್ಲರ ನೆಲದಲ್ಲಿ ಶತಕ ಸಿಡಿಸಿ ಮೆರೆದಾಡಿದ ರಾಹುಲ್‌ – ಇದು ತುಂಬಾ ಸ್ಪೆಷಲ್‌ ಅಂದ್ರು ಅಥಿಯಾ ಶೆಟ್ಟಿ

  • ನೀನು ಚಪ್ಪಲಿ ಹೊಲಿಯಲು ಯೋಗ್ಯ: ನಿಂದಿಸಿದ್ದ ಮೂವರು ಇಂಡಿಗೋ ಅಧಿಕಾರಿಗಳ ವಿರುದ್ಧ ಅಟ್ರಾಸಿಟಿ ಕೇಸ್‌

    ನೀನು ಚಪ್ಪಲಿ ಹೊಲಿಯಲು ಯೋಗ್ಯ: ನಿಂದಿಸಿದ್ದ ಮೂವರು ಇಂಡಿಗೋ ಅಧಿಕಾರಿಗಳ ವಿರುದ್ಧ ಅಟ್ರಾಸಿಟಿ ಕೇಸ್‌

    ನವದೆಹಲಿ: ಕೆಲಸದಲ್ಲಿ ಜಾತಿ ನಿಂದನೆ (Casteist Insults) ಮಾಡಿದ್ದಾರೆ ಎಂದು ಆರೋಪಿಸಿ ಇಂಡಿಗೋದ (Indigo) ತರಬೇತಿ ಪೈಲಟ್ ಒಬ್ಬರು ಮೂವರು ಹಿರಿಯ ಅಧಿಕಾರಿಗಳ ವಿರುದ್ಧ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿದ್ದಾರೆ.

    ತರಬೇತಿ ಪೈಲಟ್‌ ಮೊದಲು ಬೆಂಗಳೂರಿನಲ್ಲಿ(Bengaluru) ದೂರು ನೀಡಿದ್ದರು. ಇಂಡಿಗೋ ಅಧಿಕಾರಿಗಳಾದ ತಪಸ್ ಡೇ, ಮನೀಶ್ ಸಾಹ್ನಿ ಮತ್ತು ಕ್ಯಾಪ್ಟನ್ ರಾಹುಲ್ ಪಾಟೀಲ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿದ ಬೆಂಗಳೂರು ಪೊಲೀಸರು ಈಗ ಈ ಪ್ರಕರಣವನ್ನು ಇಂಡಿಗೋದ ಪ್ರಧಾನ ಕಚೇರಿ ಇರುವ ಗುರುಗ್ರಾಮ ಪೊಲೀಸರಿಗೆ ವರ್ಗಾಯಿಸಿದ್ದಾರೆ. ಈ ಪ್ರಕರಣದ ಬಗ್ಗೆ ಇಂಡಿಗೋ ಇಲ್ಲಿಯವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

    ತಮ್ಮ ದೂರಿನಲ್ಲಿ ಪೈಲಟ್‌ ಏಪ್ರಿಲ್ 28 ರಂದು ಇಂಡಿಗೋದ ಗುರುಗ್ರಾಮ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನಡೆದ ಘಟನೆಯನ್ನು ಉಲ್ಲೇಖಿಸಿದ್ದಾರೆ. 30 ನಿಮಿಷಗಳ ಕಾಲ ನಡೆದ ಸಭೆಯಲ್ಲಿ, ನಿನಗೆ ವಿಮಾನ ಹಾರಿಸಲು ಬರಲ್ಲ. ಬದಲಾಗಿ ಚಪ್ಪಲಿ ಹೊಲಿಯಲು ನೀನು ಯೋಗ್ಯ ವ್ಯಕ್ತಿ. ಇಲ್ಲಿ ನಿನಗೆ ಕಾವಲುಗಾರನಾಗಲು ಸಹ ಅರ್ಹತೆ ಹೊಂದಿಲ್ಲ ಎಂದು ಹೇಳಿ ನಿಂದಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಒಂದೇ ತಿಂಗಳಲ್ಲಿ ಹೃದಯಾಘಾತಕ್ಕೆ 13 ಬಲಿ – ಕೋವಿಡ್ ಲಸಿಕೆ ಕಾರಣವಲ್ಲ ತನಿಖೆಯಲ್ಲಿ ಬಯಲು

     

    ನಾನು ಉದ್ಯೋಗಕ್ಕೆ ರಾಜೀನಾಮೆ ನೀಡಬೇಕೆಂಬ ಕಾರಣಕ್ಕೆ ನನಗೆ ಕಿರುಕುಳ ನೀಡಲಾಗಿದೆ ಪರಿಶಿಷ್ಟ ಜಾತಿಗೆ ಸೇರಿದ ನನ್ನ ಗುರುತನ್ನು ಅವಮಾನಿಸುವ ಉದ್ದೇಶದಿಂದ ಈ ಅವಹೇಳನಕಾರಿ ಹೇಳಿಕೆಗಳನ್ನು ಅಧಿಕಾರಿಗಳು ನೀಡಿದ್ದಾರೆ ಎಂದು ದೂರಿದ್ದಾರೆ.

    ಸಂಬಳ ಕಡಿತ, ಅನಗತ್ಯ ಎಚ್ಚರಿಕೆ ಪತ್ರಗಳನ್ನು ನೀಡುವ ಮೂಲಕ ನನ್ನನ್ನು ಬಲಿಪಶು ಮಾಡಲಾಗಿದೆ. ನನಗಾದ ಅನ್ಯಾದ ಬಗ್ಗೆ ಉನ್ನತ ಅಧಿಕಾರಿಗಳು ಮತ್ತು ಇಂಡಿಗೋದ ನೈತಿಕ ಸಮಿತಿ ದೂರು ನೀಡಿದ್ದೆ. ಆದರೆ ಅವರು ಯಾವುದೇ ಕ್ರಮಕೈಗೊಳ್ಳದ ಕಾರಣ ಪೊಲೀಸ್‌ ದೂರು ನೀಡಬೇಕಾಯಿತು ಎಂದು ಅವರು ಹೇಳಿದ್ದಾರೆ.

  • ಮರದ ಕೊಂಬೆ ಬಿದ್ದು ಯುವಕ ಸಾವು – ಮೂವರು ಬಿಬಿಎಂಪಿ ಅರಣ್ಯಾಧಿಕಾರಿಗಳ ವಿರುದ್ಧ FIR

    ಮರದ ಕೊಂಬೆ ಬಿದ್ದು ಯುವಕ ಸಾವು – ಮೂವರು ಬಿಬಿಎಂಪಿ ಅರಣ್ಯಾಧಿಕಾರಿಗಳ ವಿರುದ್ಧ FIR

    ಬೆಂಗಳೂರು: ಮರದ ಕೊಂಬೆ ಬಿದ್ದು ಯುವಕ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಬಿಎಂಪಿಯ
    (BBMP) ಅರಣ್ಯಾಧಿಕಾರಿಗಳ ವಿರುದ್ಧ ಎಫ್‌ಐಆರ್ (FIR) ದಾಖಲಾಗಿದೆ.

    ಬೆನಕ್ ರಾಜ್ ಎಂಬುವವರು ಹನುಮಂತ ನಗರ (Hanumant Nagar) ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬಿಬಿಎಂಪಿಯ ಮೂವರು ಅರಣ್ಯಾಧಿಕಾರಿಗಳಾದ ಆರ್‌ಎಫ್‌ಓ, ಎಸಿಎಫ್, ಡಿಎಫ್‌ಓ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ.ಇದನ್ನೂ ಓದಿ:KRS ಭರ್ತಿಗೆ 7 ಅಡಿಗಳಷ್ಟೇ ಬಾಕಿ

    ಅಧಿಕಾರಿಗಳ ನಿರ್ಲಕ್ಷ್ಯವೇ ಅಕ್ಷಯ್ ಸಾವಿಗೆ ಕಾರಣವಾಗಿದೆ. ಎ1 ಆರೋಪಿ ಆರ್‌ಎಫ್‌ಓ, ಎ2 ಆರೋಪಿ ಎಸಿಎಫ್, ಎ3 ಆರೋಪಿ ಡಿಎಫ್‌ಓ ಆಗಿದ್ದು, ಯುವಕನ ಸಾವಿಗೆ ಕಾರಣವಾಗಿರುವ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

    ಅಧಿಕಾರಿಗಳ ನಿರ್ಲಕ್ಷ್ಯದ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪ್ರಕರಣದ ಆರೋಪಿಗಳಾಗಿರುವ ಬಿಬಿಎಂಪಿ ಅರಣ್ಯಾಧಿಕಾರಿಗಳಿಗೆ ಕರೆದು ವಿಚಾರಣೆ ಮಾಡಲು ಪೊಲೀಸರು ಮುಂದಾಗಿದ್ದಾರೆ.

    ಘಟನೆ ಏನು?
    ಇದೇ ಜೂ.15ರಂದು ಯುವಕ ಅಕ್ಷಯ್ ದ್ವಿಚಕ್ರ ವಾಹನದಲ್ಲಿ ಚಲಿಸುತ್ತಿದ್ದಾಗಲೇ ಮರದ ಕೊಂಬೆ ಬಿದ್ದು ಬಸವನಗುಡಿಯ (Basavanagudi) ಬ್ರಹ್ಮ ಚೈತನ್ಯ ಮಂದಿರದ ಬಳಿ ಸವಾರ ಗಂಭೀರವಾಗಿ ಗಾಯಗೊಂಡಿದ್ದರು. ಕೊಂಬೆ ಬೀಳುತ್ತಿದ್ದಂತೆ ನಿಯಂತ್ರಣ ತಪ್ಪಿ ಎದುರುಗಡೆ ನಿಲ್ಲಿಸಿದ್ದ ಕಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿತ್ತು.

    ಶ್ರೀನಿವಾಸನಗರದ ನಿವಾಸಿಯಾಗಿರುವ ಅಕ್ಷಯ್ ರಾಜಾಜಿನಗರದರುವ ಖಾಸಗಿ ಕಂಪನಿಯೊಂದರಲ್ಲಿ ಹೆಚ್‌ಆರ್ ಆಗಿ ಕೆಲಸ ಮಾಡುತ್ತಿದ್ದರು. ಮರದ ಕೊಂಬೆ ಬಿದ್ದು ತಲೆಯ ಮಧ್ಯ ಭಾಗಕ್ಕೆ ತೀವ್ರ ಹಾನಿಯಾಗಿತ್ತು. ಮೂಗು, ಬಾಯಿ, ಕಿವಿಯಲ್ಲಿ ರಕ್ತಸ್ರಾವವಾಗಿತ್ತು. ಅಕ್ಷಯ್ ತಂದೆಗೆ ಡಯಾಲಿಸಿಸ್ ನಡೆಯುತ್ತಿದ್ದು, ಕುಟುಂಬಕ್ಕೆ ಅಕ್ಷಯ್ ಆಧಾರವಾಗಿದ್ದರು. ಎರಡು ದಿನದ ಹಿಂದೆಯಷ್ಟೇ ಅಕ್ಷಯ್ ಬ್ರೈನ್ ಡೆಡ್ ಆಗಿದೆ ಎಂದಿದ್ದರು. ಆದರೆ ಜೂ.19ರ ಮಧ್ಯಾಹ್ನ 1 ಗಂಟೆಗೆ ಸಾವನ್ನಪ್ಪಿರುವುದಾಗಿ ವೈದ್ಯರು ದೃಢಪಡಿಸಿದ್ದರು.ಇದನ್ನೂ ಓದಿ: Air India Crash | 215 ಡಿಎನ್‌ಎ ಮ್ಯಾಚ್‌ – 198 ಮೃತದೇಹ ಹಸ್ತಾಂತರ

  • ಕೊಹ್ಲಿ ಮಾಲೀಕತ್ವದ ಬೆಂಗ್ಳೂರು ಪಬ್ ವಿರುದ್ಧ ಮತ್ತೊಂದು ಎಫ್‌ಐಆರ್

    ಕೊಹ್ಲಿ ಮಾಲೀಕತ್ವದ ಬೆಂಗ್ಳೂರು ಪಬ್ ವಿರುದ್ಧ ಮತ್ತೊಂದು ಎಫ್‌ಐಆರ್

    ಬೆಂಗಳೂರು: ಟೀಂ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ (Virat Kohli) ಮಾಲೀಕತ್ವದ ಪಬ್ ವಿರುದ್ಧ ಮತ್ತೊಂದು ಎಫ್‌ಐಆರ್ (FIR) ದಾಖಲಾಗಿದೆ.

    ಪ್ರತ್ಯೇಕ ಸ್ಥಳ ಮೀಸಲಿಡದೆ ಧೂಮಪಾನಕ್ಕೆ ಅವಕಾಶ ನೀಡಿದ್ದಕ್ಕಾಗಿ ಬೆಂಗಳೂರಿನ (Bengaluru) ಕಸ್ತೂರ್‌ಬಾ ರಸ್ತೆಯಲ್ಲಿರುವ ಒನ್ 8 ಕಮ್ಯೂನ್ ಬಾರ್ & ರೆಸ್ಟೋರೆಂಟ್‌ನ (One 8 Commune Restro-Bar) ಮ್ಯಾನೇಜರ್ ಹಾಗೂ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: Mysuru | 60 ಗ್ರಾಂ ಚಿನ್ನ ಕದ್ದು ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವಕನ ಬರ್ಬರ ಹತ್ಯೆ

    ಮೇ 29ರಂದು ಕಬ್ಬನ್ ಪಾರ್ಕ್ ಪೊಲೀಸರು (Cubbon Park Police)  ಬಾರ್ ಮೇಲೆ ದಾಳಿ ಮಾಡಿ, ಸ್ವಯಂಪ್ರೇರಿತವಾಗಿ ಎನ್‌ಸಿಆರ್ (NCR) ದಾಖಲಿಸಿಕೊಂಡಿದ್ದರು. ಇದೀಗ ನ್ಯಾಯಾಲಯದ ಅನುಮತಿ ಪಡೆದು, ಕೊಟ್ಪಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಇದಕ್ಕೂ ಮುನ್ನ 2024ರ ಜುಲೈನಲ್ಲಿ ಇದೇ ಬಾರ್ ಮೇಲೆ ಅವಧಿ ಮೀರಿ ಪಬ್ ನಡೆಸುತ್ತಿದ್ದರು ಎಂದು ದೂರು ದಾಖಲಾಗಿತ್ತು. ಜು.6 ರಂದು ರಾತ್ರಿ 1:20ರವರೆಗೆ ಪಬ್ ತೆರೆದಿತ್ತು. ರಾತ್ರಿ ಗಸ್ತಿನಲ್ಲಿದ್ದ ಸಿಬ್ಬಂದಿಗೆ ಪಬ್ ಓಪನ್ ಇರುವುದಾಗಿ ಮಾಹಿತಿ ಇತ್ತು. ಸ್ಥಳಕ್ಕೆ ಹೋಗಿ ಪರಿಶೀಲಿಸಿದಾಗ ಅವಧಿ ಮುಗಿದಿದ್ದರೂ ಗ್ರಾಹಕರು ಇದ್ದರು. ಹೀಗಾಗಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.ಇದನ್ನೂ ಓದಿ: ಚಪ್ಪಲಿಯಿಂದ ಹೊಡೆದ ಪ್ರಕರಣ – ಆಟೋ ಚಾಲಕನ ಕಾಲಿಗೆ ಬಿದ್ದು ಕ್ಷಮೆ ಕೇಳಿದ ದಂಪತಿ

  • ಹೇಮಾವತಿ ಲಿಂಕ್ ಕೆನಾಲ್ ಕದನ – ಇಬ್ಬರು ಸ್ವಾಮೀಜಿಗಳು ಸೇರಿ ನೂರಾರು ರೈತರ ವಿರುದ್ಧ FIR

    ಹೇಮಾವತಿ ಲಿಂಕ್ ಕೆನಾಲ್ ಕದನ – ಇಬ್ಬರು ಸ್ವಾಮೀಜಿಗಳು ಸೇರಿ ನೂರಾರು ರೈತರ ವಿರುದ್ಧ FIR

    ತುಮಕೂರು: ಹೇಮಾವತಿ ಲಿಂಕ್ ಕೆನಾಲ್ (Hemavati Link Canal) ಕಾಮಗಾರಿ ವಿರೋಧಿಸಿ ಶನಿವಾರ ರೈತರು ಪ್ರತಿಭಟನೆ ನಡೆಸಿದ ಹಿನ್ನೆಲೆ ಇಬ್ಬರು ಸ್ವಾಮೀಜಿಗಳು ಸೇರಿದಂತೆ ನೂರಾರು ರೈತರ ವಿರುದ್ಧ ಗುಬ್ಬಿ ಪೊಲೀಸರು (Gubbi Police) 11 ಎಫ್‌ಐಆರ್ (FIR)ದಾಖಲಿಸಿದ್ದಾರೆ.

    ತುಮಕೂರಿನಿಂದ ರಾಮನಗರಕ್ಕೆ ನೀರು ಒದಗಿಸುವ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿಯನ್ನು ವಿರೋಧಿಸಿ ನಿಷೇಧಾಜ್ಞೆಯ ನಡುವೆಯೂ ರೈತರು, ರಾಜಕೀಯ ಮುಖಂಡರು ಶನಿವಾರ ಬೃಹತ್ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪೊಲೀಸರು ಹೋರಾಟಗಾರರನ್ನು ವಶಕ್ಕೆ ಪಡೆದ ಪ್ರಸಂಗವೂ ನಡೆಯಿತು. ಈ ಬೆನ್ನಲ್ಲೇ ನೀರಿಗಾಗಿ ಪ್ರತಿಭಟನೆ ನಡೆಸಿದವರ ವಿರುದ್ಧ ಪೊಲೀಸರು ಗುಬ್ಬಿ ಠಾಣೆಯಲ್ಲಿ ಎಫ್‌ಐಆರ್ ದಾಖಲು ಮಾಡಿದ್ದಾರೆ. ಇದನ್ನೂ ಓದಿ: Video | ಹೇಮಾವತಿ ಕೆನಾಲ್‌ ಕಾಮಗಾರಿ ವಿರೋಧಿಸಿ ಪ್ರತಿಭಟನೆ; ನೂರಾರು ರೈತಹೋರಾಟಗಾರರ ವಿರುದ್ಧ FIR

    ಪ್ರತಿಭಟನೆ ವೇಳೆ ಎಸ್ಪಿ ಮತ್ತು ಪೊಲೀಸ್ ಅಧಿಕಾರಿಗಳ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದರು. ಅಲ್ಲದೇ ಹಿಟಾಚಿಗಳನ್ನು ತಾವೇ ಚಾಲನೆ ಮಾಡಿ ಬೃಹತ್ ಗಾತ್ರದ ಪೈಪ್‌ಗಳನ್ನು ಪುಡಿಪುಡಿ ಮಾಡಿದ್ದರು. ಈ ಹಿನ್ನೆಲೆ ತುಮಕೂರು ನಗರ ಶಾಸಕ ಜ್ಯೋತಿಗಣೇಶ್, ತುಮಕೂರು ಗ್ರಾಮಾಂತರ ಶಾಸಕ ಸುರೇಶ್ ಗೌಡ, ತುರುವೇಕೆರೆ ಜೆಡಿಎಸ್ ಶಾಸಕ ಎಂಟಿ ಕೃಷ್ಣಪ್ಪ, ಬಿಜೆಪಿ ಮುಖಂಡ ದಿಲೀಪ್ ಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ಹೆಬ್ಬಾಕ ರವಿ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಸಾಕ್ಷ್ಯಧಾರದ ಮೇಲೆ ಮತ್ತಷ್ಟು ಎಫ್‌ಐಆರ್ ದಾಖಲಾಗುವ ಸಾಧ್ಯತೆಯಿದೆ.  ಇದನ್ನೂ ಓದಿ: 100ಕ್ಕೂ ಹೆಚ್ಚು ಆತ್ಮಾಹುತಿ ಡ್ರೋನ್ ಸಾಗಿಸಬಲ್ಲ `ಬಾಹುಬಲಿ’ ಡ್ರೋನ್ ಸಿದ್ಧಪಡಿಸಿದ ಚೀನಾ!

  • ಕಮಲ್‌ ಹಾಸನ್ ಭಾವಚಿತ್ರಕ್ಕೆ ಬೆಂಕಿ ಹಚ್ಚಿದ ಇಬ್ಬರ ವಿರುದ್ಧ ಎಫ್‌ಐಆರ್

    ಕಮಲ್‌ ಹಾಸನ್ ಭಾವಚಿತ್ರಕ್ಕೆ ಬೆಂಕಿ ಹಚ್ಚಿದ ಇಬ್ಬರ ವಿರುದ್ಧ ಎಫ್‌ಐಆರ್

    ಬೆಂಗಳೂರು: ನಟ ಕಮಲ್‌ ಹಾಸನ್ (Kamal Haasan) ಭಾವಚಿತ್ರಕ್ಕೆ ಬೆಂಕಿ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದ ಕನ್ನಡ ಪರ ಸಂಘಟನೆಯ ಇಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಾಗಿದೆ.

    ನಟ ಕಮಲ್ ಹಾಸನ್ ಅವರ ತಮಿಳಿನಿಂದಲೇ ಕನ್ನಡ ಹುಟ್ಟಿದ್ದು ಎಂಬ ಹೇಳಿಕೆ ರಾಜ್ಯದಲ್ಲಿ ತ್ರೀವ ಆಕ್ರೋಶ ಹುಟ್ಟುಹಾಕಿದೆ. ಹೇಳಿಕೆ ಖಂಡಿಸಿ ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ಬಸವೇಶ್ವರ ನಗರದ (Basaveshwar Nagar) ಪವಿತ್ರ ಪ್ಯಾರಡೈಸ್ ಬಳಿ ನಟನ ಭಾವಚಿತ್ರಕ್ಕೆ ಬೆಂಕಿ ಹಾಕಿ ಪ್ರತಿಭಟಿಸಿದ್ದರು.ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ಗುಡ್ಡ ಕುಸಿತ, ಪ್ರಾಣಹಾನಿ – ರಕ್ಷಣಾ ಕಾರ್ಯಕ್ಕೆ ಯು.ಟಿ ಖಾದರ್ ಸೂಚನೆ

    ಪೊಲೀಸರ ಅನುಮತಿ ಪಡೆಯದೇ ರಸ್ತೆಯಲ್ಲಿ ಬೆಂಕಿ ಹಾಕಿ ಆಕ್ರೋಶ ವ್ಯಕ್ತಪಡಿಸಿರುವ ಆರೋಪದ ಬೆನ್ನಲ್ಲೇ ಇದೀಗ ಕನ್ನಡ ಪರ ಸಂಘಟನೆಯ ಕಾರ್ಯಕರ್ತರಾದ ರವಿಕುಮಾರ್ ಹಾಗೂ ಬಸವೇಶ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸದ್ಯ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು, ನೋಟಿಸ್ ಕೊಟ್ಟು ಕಳುಹಿಸಿದ್ದಾರೆ.

    ಏನಿದು ವಿವಾದ?
    ಮೇ 27ರಂದು `ಥಗ್ ಲೈಫ್’ (Thug Life) ಸಿನಿಮಾದ ಪ್ರಚಾರಕ್ಕಾಗಿ ಚಿತ್ರತಂಡ ಬೆಂಗಳೂರಿಗೆ ಆಗಮಿಸಿತ್ತು. ಸಿನಿಮಾದ ನಾಯಕ ಕಾಲಿವುಡ್ ನಟ ಕಮಲ್ ಹಾಸನ್ ಅವರು ಕೂಡ ಆಗಮಿಸಿದ್ದರು. ಈ ವೇಳೆ ಕಮಲ್ ಹಾಸನ್ `ತಮಿಳಿನಿಂದ ಕನ್ನಡ ಹುಟ್ಟಿದ್ದು’ ಎಂದು ಹೇಳಿಕೆ ನೀಡುವ ಮೂಲಕ ವಿವಾದ ಹುಟ್ಟುಹಾಕಿದ್ದರು.ಇದನ್ನೂ ಓದಿ: ಕಮಲ್ ಹಾಸನ್ ಬ್ಯಾನರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ

  • ಕಲಬುರಗಿ ಡಿಸಿ ವಿರುದ್ಧ ಅವಹೇಳನಕಾರಿ ಹೇಳಿಕೆ – ಬಿಜೆಪಿ ಎಂಎಲ್‌ಸಿ ರವಿಕುಮಾರ್‌ಗೆ ಬಂಧನ ಭೀತಿ!

    ಕಲಬುರಗಿ ಡಿಸಿ ವಿರುದ್ಧ ಅವಹೇಳನಕಾರಿ ಹೇಳಿಕೆ – ಬಿಜೆಪಿ ಎಂಎಲ್‌ಸಿ ರವಿಕುಮಾರ್‌ಗೆ ಬಂಧನ ಭೀತಿ!

    ಬೆಂಗಳೂರು: ಕಲಬುರಗಿ (Kalaburagi) ಜಿಲ್ಲಾಧಿಕಾರಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಎಂಎಲ್‌ಸಿ ಎನ್. ರವಿಕುಮಾರ್ (N Ravikumar) ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದು ಬಂಧನ ಭೀತಿ ಎದುರಾಗಿದೆ.

    ಮೇ 24 ರಂದು ಬಿಜೆಪಿಯ ʻಕಲಬುರಗಿ ಚಲೋʼ (Kalaburagi Chalo) ಪ್ರತಿಭಟನಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡುವ ವೇಳೆ ರವಿಕುಮಾರ್‌, ಡಿಸಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಕಲಬುರಗಿಯ ಸ್ಟೇಷನ್ ಬಜಾರ್ ಠಾಣೆಗೆ ದೂರು ನೀಡಲಾಗಿತ್ತು. ಈ ಸಂಬಂಧ ಎಫ್‌ಐಆರ್‌ (FIR) ಸಹ ದಾಖಲಾಗಿದ್ದು, ಬಂಧನ ಭೀತಿ ಎದುರಾಗಿದೆ. ಇದನ್ನೂ ಓದಿ: ಸಿಎಂ Vs ಡಿಸಿಎಂ – ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳ ವರ್ಗ, ಡಿಕೆಶಿ ಕೆಂಡಾಮಂಡಲ

    ಈ ನಡುವೆ ಎಫ್‌ಐಆರ್ ರದ್ದು ಹಾಗೂ ನಿರೀಕ್ಷಣಾ ಜಾಮೀನು ಕೋರಿ ರವಿಕುಮಾರ್‌ ಕೋರ್ಟ್‌ ಮೊರೆ ಹೋಗಿದ್ದಾರೆ. ಇಂದು ಹೈಕೋರ್ಟ್‌ನಲ್ಲಿ ಅರ್ಜಿಯ ವಿಚಾರಣೆ ನಡೆಯಲಿದೆ. ಅಲ್ಲದೇ ಬುಧವಾರ (ಮೇ 28) ಜನಪ್ರತಿನಿಧಿಗಳ ನ್ಯಾಯಾಲಯಕ್ಕೂ ಅರ್ಜಿ ಸಲ್ಲಿಸಿದ್ದು, ಅದರ ವಿಚಾರಣೆ ನಾಳೆ (ಮೇ 30) ನಡೆಯಲಿದೆ. ಇದನ್ನೂ ಓದಿ: ಪಾಕ್‌ ಪರ ಬೇಹುಗಾರಿಕೆ – 7 ಬಾರಿ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದ ರಾಜಸ್ಥಾನದ ಸರ್ಕಾರಿ ನೌಕರ ಅರೆಸ್ಟ್‌

    ಇನ್ನೂ ಬಿಜೆಪಿ ಎನ್. ರವಿಕುಮಾರ್ ಅವರ ಪರ ನಿಲ್ಲಲ್ಲು ತೀರ್ಮಾನ ಮಾಡಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಇದನ್ನೂ ಓದಿ: ನನ್ನಿಷ್ಟ ನನ್ನ ಗಾಡಿ, ದಂಡ ಕಟ್ಟಲ್ಲ, ನೀವ್ಯಾರು ಕೇಳೋಕೆ – ಟ್ರಾಫಿಕ್ ಪೊಲೀಸರೊಂದಿಗೆ ಮಹಿಳೆಯ ಹೆಲ್ಮೆಟ್ ಕಿರಿಕ್

    ರವಿಕುಮಾರ್‌ ಹೇಳಿದ್ದೇನು?
    ಮೇ 24 ರಂದು ಬಿಜೆಪಿಯ ʻಕಲಬುರಗಿ ಚಲೋʼ ಪ್ರತಿಭಟನಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡುವಾಗ ಎನ್‌. ರವಿಕುಮಾರ್, ʻʻಜಿಲ್ಲಾಡಳಿತವು ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಪ್ರಭಾವದಿಂದ ಕಾರ್ಯನಿರ್ವಹಿಸುತ್ತಿದೆ. ಕಲಬುರಗಿ ಡಿಸಿ ಕಚೇರಿಯೂ ತನ್ನ ಸ್ವಾತಂತ್ರ್ಯ ಕಳೆದುಕೊಂಡಿದೆ. ಡಿಸಿ ಮೇಡಂ ಅವರು (ಕಾಂಗ್ರೆಸ್) ಹೇಳುವುದನ್ನು ಸಹ ಕೇಳುತ್ತಿದ್ದಾರೆ. ಡಿಸಿ ಪಾಕಿಸ್ತಾನದಿಂದ ಬಂದಿದ್ದಾರೋ ಅಥವಾ ಇಲ್ಲಿ ಐಎಎಸ್ ಅಧಿಕಾರಿಯೋ ನನಗೆ ತಿಳಿದಿಲ್ಲʼʼ ಎಂದು ನಾಲಿಗೆ ಹರಿಬಿಟ್ಟಿದ್ದರು. ಈ ವೇಳೆ ಜನರ ಚಪ್ಪಾಳೆಗೆ ಪ್ರತಿಕ್ರಿಯಿಸಿ, ನಿಮ್ಮ ಚಪ್ಪಾಳೆ ನೋಡಿದರೆ, ʻಡಿಸಿ ಬಹುಶಃ ಪಾಕಿಸ್ತಾನದಿಂದ ಬಂದಿದ್ದಾರೆʼ ಎಂದೂ ಅವಹೇಳನ ಮಾಡಿದ್ದರು.

    ಇದರ ಬೆನ್ನಲ್ಲೇ ಕಾಂಗ್ರೆಸ್‌ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು. ರವಿಕುಮಾರ್‌ ಅವರ ಹೇಳಿಕೆ ವಿರುದ್ಧ ರಾಜ್ಯ ಸರ್ಕಾರ ಕೂಡ ಕ್ರಮ ಕೈಗೊಳ್ಳಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ ನೀಡಿದ್ದರು. ಇದನ್ನೂ ಓದಿ: ಸಿಎಂ Vs ಡಿಸಿಎಂ ಮಧ್ಯೆ ವರ್ಗಾವಣೆ ಸಂರ್ಘರ್ಷ – ನಿಜಕ್ಕೂ ಆಗಿದ್ದೇನು? ಡಿಕೆಶಿ ಆಕ್ಷೇಪ ಏಕೆ?

  • ರಹೀಂ ಹತ್ಯೆ| ಸಾಮೂಹಿಕ ರಾಜೀನಾಮೆ ನೀಡಿ: ಕಾಂಗ್ರೆಸ್‌ ವಿರುದ್ಧ ಮುಸ್ಲಿಮರ ಆಕ್ರೋಶ

    ರಹೀಂ ಹತ್ಯೆ| ಸಾಮೂಹಿಕ ರಾಜೀನಾಮೆ ನೀಡಿ: ಕಾಂಗ್ರೆಸ್‌ ವಿರುದ್ಧ ಮುಸ್ಲಿಮರ ಆಕ್ರೋಶ

    ಮಂಗಳೂರು: ಅಬ್ದುಲ್ ರಹೀಂ (Abdul Rahim Murder) ಹತ್ಯೆಯಾದ ಬೆನ್ನಲ್ಲೇ ಮುಸ್ಲಿಂ ಮುಖಂಡರು (Muslim Leaders) ಕಾಂಗ್ರೆಸ್‌ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

    ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗುತ್ತಿದೆ. ಆದರೆ ಪೊಲೀಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಹೀಗಾಗಿ ಕಾಂಗ್ರೆಸ್‌ (Congress) ಪಕ್ಷದಲ್ಲಿರುವ ಸಮುದಾಯದ ನಾಯಕರು ಸಾಮೂಹಿಕ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.  ಇದನ್ನೂ ಓದಿ: ಅಬ್ದುಲ್ ರಹೀಂ ಹತ್ಯೆ| ಇಬ್ಬರು ಪರಿಚಯಸ್ಥರು ಸೇರಿ 15 ಮಂದಿ ವಿರುದ್ಧ ಎಫ್‌ಐಆರ್‌

     

    ನಮಗೆ ನಿಮ್ಮ ರಾಜಕೀಯ ಬೇಡ. ಜಿಲ್ಲೆಯಲ್ಲಿ ನಮ್ಮವರ ಕೊಲೆ ಎಷ್ಟಾಗಿದೆ? ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ಆಗಮಿಸಬೇಕು. ಅಮಾಯಕರ ಸಾವಿಗೆ ನ್ಯಾಯ ಕೊಡಿಬೇಕೆಂದು ಪಟ್ಟು ಹಿಡಿದಿದ್ದಾರೆ. ಮುಸ್ಲಿಂ ಮುಖಂಡರು ಕಾಂಗ್ರೆಸ್‌ ನಾಯಕರನ್ನು ತರಾಟೆಗೆ ತೆಗೆದುಕೊಳ್ಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ: ಅಬ್ದುಲ್‌ ರಹೀಂ ಹತ್ಯೆ| ರಾತ್ರಿ ಆಸ್ಪತ್ರೆ ಮುಂದೆ ಮುಸ್ಲಿಮರ ಪ್ರತಿಭಟನೆ – ಮಂಗಳೂರಿಗೆ ಹೆಚ್ಚುವರಿ ಪೊಲೀಸರ ನಿಯೋಜನೆ

    ದುಷ್ಕರ್ಮಿಗಳಿಂದ ಕೊಲೆಯಾದ ಅಬ್ದುಲ್ ರಹೀಂ ಅವರ ಮೃತದೇಹವನ್ನು ಕೊಳತ್ತಮಜಲಿಗೆ ಇಂದು ಬೆಳಗ್ಗೆ ಸಾಗಿಸಲಾಯಿತು. ಕುತ್ತಾರ್ ಮದನಿ ನಗರ ಮಸೀದಿಯಲ್ಲಿ ರಹೀಂ ಅವರ ಮಯ್ಯತ್ ಸ್ನಾನ ಮಾಡಲಾಯಿತು. ನಂತರ ಮಯ್ಯತ್ ನಮಾಝ್ ಬಳಿಕ ಪೊಲೀಸ್ ಬಂದೋಬಸ್ತ್‌ನಲ್ಲಿ ಮೃತದೇಹವನ್ನು ಮೆರವಣಿಗೆಯ ಮೂಲಕ ಸಾಗಿಸಲಾಯಿತು.

  • ಅಬ್ದುಲ್ ರಹೀಂ ಹತ್ಯೆ| ಇಬ್ಬರು ಪರಿಚಯಸ್ಥರು ಸೇರಿ 15 ಮಂದಿ ವಿರುದ್ಧ ಎಫ್‌ಐಆರ್‌

    ಅಬ್ದುಲ್ ರಹೀಂ ಹತ್ಯೆ| ಇಬ್ಬರು ಪರಿಚಯಸ್ಥರು ಸೇರಿ 15 ಮಂದಿ ವಿರುದ್ಧ ಎಫ್‌ಐಆರ್‌

    ಮಂಗಳೂರು: ಅಬ್ದುಲ್ ರಹೀಂ (Abdul Rahim) ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 15 ಮಂದಿಯ ವಿರುದ್ದ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ (Bantwal Rural Police Station) ಪ್ರಕರಣ ದಾಖಲಾಗಿದೆ.

    ಗಾಯಗೊಂಡ ಕಲಂದರ್ ಶಫಿ ಮಾಹಿತಿ ಅನ್ವಯ ನಿಸಾರ್ ಎಂಬವರ ದೂರಿನಡಿ ರಹೀಂ ಪರಿಚಯಸ್ಥರೇ ಆಗಿರುವ ದೀಪಕ್, ಸುಮಿತ್ ಸೇರಿ 15 ಜನರ ವಿರುದ್ದ ಬಿಎನ್‌ಎಸ್‌ 103, 109, 118(1), 118(2), 190, 191(1), 191(2), 191(3) ಅಡಿ ಎಫ್‌ಐಆರ್‌ ದಾಖಲಾಗಿದೆ. ಎಫ್‌ಐಆರ್‌ನಲ್ಲಿ ದೀಪಕ್‌, ಸುಮಿತ್‌ ಹೆಸರು ಮಾತ್ರ ಉಲ್ಲೇಖವಾಗಿದ್ದು ಉಳಿದ 13 ಮಂದಿ ಯಾರೂ ಎನ್ನುವುದು ತಿಳಿದು ಬಂದಿಲ್ಲ.

    ಹಲ್ಲೆಗೈದವರ ಪೈಕಿ ಇಬ್ಬರು ಪರಿಚಯಸ್ಥರು ಎಂದು ಹಲ್ಲೆಗೊಳಗಾಗಿ ಅಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಕಲಂದ‌ರ್ ಶಾಫಿ ಮಾಹಿತಿ ನೀಡಿದ್ದರು. ಇದನ್ನೂ ಓದಿ: ಅಬ್ದುಲ್‌ ರಹೀಂ ಹತ್ಯೆ| ರಾತ್ರಿ ಆಸ್ಪತ್ರೆ ಮುಂದೆ ಮುಸ್ಲಿಮರ ಪ್ರತಿಭಟನೆ – ಮಂಗಳೂರಿಗೆ ಹೆಚ್ಚುವರಿ ಪೊಲೀಸರ ನಿಯೋಜನೆ

     

    ದೂರಿನಲ್ಲಿ ಏನಿದೆ?
    ಅಬ್ದುಲ್ ರಹೀಂ ಮತ್ತು ಕಲಂದರ್ ಶಾಫಿ ಅವರು ಹೊಳೆ ಬದಿಯಿಂದ ಪಿಕ್ ಅಪ್ ವಾಹನದಲ್ಲಿ ಮರಳು ಲೋಡ್ ಮಾಡಿ ಕುರಿಯಾಳ ಗ್ರಾಮದ ಈರಾ ಕೋಡಿಯ ರಾಜೀವಿ ಎಂಬವರ ಮನೆ ಬಳಿ ಇಳಿಸುತ್ತಿದ್ದರು. ಈ ವೇಳೆ ಪರಿಚಯಸ್ಥರಾದ ದೀಪಕ್, ಸುಮಿತ್ ಮತ್ತು 15 ಮಂದಿ ಏಕಾಏಕಿ ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಜೈಲಿನಲ್ಲಿ ನಿತ್ಯ ಒಂದೊಂದು ಸೌಲಭ್ಯ ನೀಡುವಂತೆ ಹರ್ಷ ಕೊಲೆ ಆರೋಪಿಗಳು ಕಿರಿಕ್‌

     

    ಚಾಲಕನ ಸೀಟಿನಲ್ಲಿದ್ದ ಅಬ್ದುಲ್ ರಹಿಮಾನ್ ಅವರನ್ನು ಹೊರಗೆ ಎಳೆದು ತಲವಾರು, ಚೂರಿ, ರಾಡ್ ಗಳೊಂದಿಗೆ ಯದ್ವಾ- ತದ್ವಾ ದಾಳಿ ನಡೆಸಿದ್ದಾರೆ. ಅಲ್ಲಿದ್ದವರು ಕೂಗಾಡಿದ್ದರಿಂದ ಹಲ್ಲೆ ಮಾಡಿದ ಆರೋಪಿಗಳು ಮಾರಕಾಸ್ತ್ರಗಳೊಂದಿಗೆ ಪರಾರಿಯಾಗಿದ್ದಾರೆ.

  • ಸುಹಾಸ್ ಹತ್ಯೆ | ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ ಎಂದಿದ್ದ ಮಾಜಿ ಕಾರ್ಪೊರೇಟರ್ ವಿರುದ್ಧ FIR

    ಸುಹಾಸ್ ಹತ್ಯೆ | ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ ಎಂದಿದ್ದ ಮಾಜಿ ಕಾರ್ಪೊರೇಟರ್ ವಿರುದ್ಧ FIR

    ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ (Suhas Shetty Case) ಪ್ರಕರಣದಲ್ಲಿ ಘಟನಾ ಸ್ಥಳದಲ್ಲಿ ಕಾಣಿಸಿಕೊಂಡ ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ ಎಂದು ಪ್ರಶ್ನಿಸಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಉದ್ದೇಶಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನಿಸಿದ್ದ ಬಿಜೆಪಿ ಮಹಿಳಾಮೋರ್ಚಾ ರಾಜ್ಯ ಕಾರ್ಯದರ್ಶಿ, ಮಾಜಿ ಕಾರ್ಪೊರೇಟರ್ ಶ್ವೇತಾ ಪೂಜಾರಿ ಮೇಲೆ ಎಫ್‌ಐಆರ್ (FIR) ದಾಖಲಾಗಿದೆ.

    ಶ್ವೇತಾ ಪೂಜಾರಿ ಮೇಲೆ ಎಫ್‌ಐಆರ್ ದಾಖಲಾಗಿದ್ದಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಸುಹಾಸ್ ಶೆಟ್ಟಿ ಹತ್ಯೆಯ ಸಂದರ್ಭ ಹಂತಕರ ಜೊತೆ ಮಾತಾಡಿದ್ದ ಇಬ್ಬರು ಬುರ್ಖಾಧಾರಿ ಮಹಿಳೆಯರ ಬಗ್ಗೆ ವ್ಯಾಪಕ ಅನುಮಾನ ವ್ಯಕ್ತವಾಗಿತ್ತು. ಈ ವೇಳೆ ಶ್ವೇತಾ ಪೂಜಾರಿ ಅವರು ಫೇಸ್‌ಬುಕ್ ಪೋಸ್ಟ್ನಲ್ಲಿ ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ? ದ.ಕ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಈ ಬಗ್ಗೆ ಯಾಕೆ ಮಾತಾಡುತ್ತಿಲ್ಲ? ಎಂಬರ್ಥದಲ್ಲಿ ಪೋಸ್ಟ್ ಮಾಡಿದ್ದರು. ಇದನ್ನೇ ಮುಂದಿಟ್ಟುಕೊಂಡು ಕಾಂಗ್ರೆಸ್ ಸದಸ್ಯೆಯೋರ್ವರು ಪೊಲೀಸರಿಗೆ ದೂರು ನೀಡಿದ್ದು, ದೂರು ದಾಖಲಾಗುತ್ತಿದ್ದಂತೆ ಪೊಲೀಸರು ಶ್ವೇತಾ ಪೂಜಾರಿ ಮೇಲೆ ಎಫ್‌ಐಆರ್ ದಾಖಲಿಸಿದ್ದಾರೆ. ಇದನ್ನೂ ಓದಿ: ಆಪರೇಷನ್‌ ಸಿಂಧೂರ ಬಗ್ಗೆ ಆಕ್ಷೇಪಾರ್ಹ ಪೋಸ್ಟ್‌ – ಅಶೋಕ ವಿಶ್ವವಿದ್ಯಾಲಯದ ಪ್ರೊಫೆಸರ್ ಅರೆಸ್ಟ್‌

    ಇದು ಹಿಂದೂ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ಹಿಂದುತ್ವದ ಪರ ಹೋರಾಟ ಮಾಡುವವರನ್ನು ದಮನಿಸುವ ಹೀನ ಕೆಲಸಕ್ಕೆ ಕಾಂಗ್ರೆಸ್ ಕೈ ಹಾಕಿದೆ. ಈ ಮೂಲಕ ಅಭಿವ್ಯಕ್ತಿ ಸ್ವಾತಂತ್ರ‍್ಯಕ್ಕೆ ಧಕ್ಕೆ ತರಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಅಸಲಿ ಆಟ ಈಗ ಶುರು – ಸಾಲದ ಹಣ ಬಿಡುಗಡೆಗೆ ಪಾಕ್‌ಗೆ 11 ಷರತ್ತು ವಿಧಿಸಿದ IMF