ಬೆಂಗಳೂರು: ಕನ್ನಡಿಗರ ಅಭಿಮಾನವನ್ನು ಪಹಲ್ಗಾಮ್ ದಾಳಿಗೆ (Pahalgam Terror Attack) ಹೋಲಿಸಿದ ಸೋನು ನಿಗಮ್ (Sonu Nigam) ಮೇಲೆ ಎಫ್‌ಐಆರ್ ದಾಖಲಾಗಿದೆ.
ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಕರ್ನಾಟಕ ರಕ್ಷಣಾ ವೇದಿಕೆ (Karnataka Rakshana Vedike) ಬೆಂಗಳೂರು ನಗರ ಘಟಕದ ಅಧ್ಯಕ್ಷ ಧರ್ಮರಾಜ್ ಎಂಬವರು ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಖಾಸಗಿ ಕಾಲೇಜೊಂದರ ಕಾರ್ಯಕ್ರಮದಲ್ಲಿ ಕನ್ನಡ ಹಾಡು ಹೇಳುವಂತೆ ವಿದ್ಯಾರ್ಥಿ ಕೇಳಿದ್ದಕ್ಕೆ, ಇದಕ್ಕೆ ಪಹಲ್ಗಾಮ್‌ನಲ್ಲಿ ಅಟ್ಯಾಕ್ ಆಗಿದ್ದು ಎಂದು ಸೋನು ನಿಗಮ್ ಹೇಳಿದ್ದ ವೀಡಿಯೋ ವೈರಲ್ ಆದ ಬಳಿಕ ಸೋನು ನಿಗಮ್ ವಿರುದ್ಧ ಕನ್ನಡ ಪರ ಸಂಘಟನೆಗಳು ಆಕ್ರೋಶ ಹೊರಹಾಕಿದ್ದವು. ಯಾವುದೇ ನಿರ್ಮಾಪಕರು ಸೋನು ನಿಗಮ್ ಇಂದ ಹಾಡು ಹೇಳಸಬಾರದು. ಹೇಳಿಸಿದರೆ ಅದಕ್ಕೆ ನೀವೆ ಹೊಣೆ ಎಂದು ಎಚ್ಚರಿಕೆ ನೀಡುವ ಕೆಲಸ ಕೂಡ ಮಾಡಿದ್ದರು. ಇದನ್ನೂ ಓದಿ: ಶಿವಾನಂದ್ ಪಾಟೀಲ್ ವಿಚಾರ ಹೈಕಮಾಂಡ್ ಗಮನಕ್ಕೆ ತರುತ್ತೇನೆ: ಎಂ.ಬಿ.ಪಾಟೀಲ್
ದೂರಿನ ಆಧಾರದ ಮೇಲೆ ಬಿಎನ್ಎಸ್ 351 (1) (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 351 (2) (ಕ್ರಿಮಿನಲ್ ಮಾನಹಾನಿ), 353 (ಧಾರ್ಮಿಕ ಮತ್ತು ಭಾಷಿಕ ಭಾವನೆಗಳನ್ನ ಕೆರಳಿಸುವುದು) ಬಿಎನ್‌ಎಸ್ 352 (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ) ಸೆಕ್ಷನ್‌ನಡಿ ಎಫ್‌ಐಆರ್ ದಾಖಲಾಗಿದೆ. ಇದನ್ನೂ ಓದಿ: ಭಾರತ-ಪಾಕ್ ಉದ್ವಿಗ್ನತೆ ನಡುವೆ ಪಾಕ್ ರೇಂಜರ್‌ನನ್ನ ಬಂಧಿಸಿದ ಬಿಎಸ್‌ಎಫ್
ಬೆಂಗಳೂರು: ಶಾಲಾ ಮಕ್ಕಳಿಂದ (Students) ಶೌಚಾಲಯ ಸ್ವಚ್ಛಗೊಳಿಸಿದರೆ ಶಿಕ್ಷಕರ (Teachers) ಮೇಲೆಯೇ ಎಫ್‌ಐಆರ್ (FIR) ದಾಖಲಿಸಲಾಗುವುದು ಶಿಕ್ಷಣ ಇಲಾಖೆ ಮತ್ತೆ ಎಚ್ಚರಿಕೆ ನೀಡಿದೆ.
ಶಾಲಾ ಮಕ್ಕಳು ಶೌಚಾಲಯ ಸ್ವಚ್ಛಗೊಳಿಸುವಂತಿಲ್ಲ (Toilet Clenaing) ಎಂದು ಈ ಹಿಂದೆಯೇ ಶಿಕ್ಷಣ ಇಲಾಖೆ ಆದೇಶ ಹೊರಡಿಸಿತ್ತು. ಹೀಗಿದ್ದರೂ ರಾಜ್ಯದ ಕೆಲ ಶಾಲೆಗಳಲ್ಲಿ ಪ್ರಕರಣ ವರದಿಯಾದ ಬೆನ್ನಲ್ಲೇ ಮತ್ತೊಮ್ಮೆ ಶಿಕ್ಷಣ ಇಲಾಖೆ ಆದೇಶ ಪ್ರಕಟಿಸಿದೆ.
ಆದೇಶದಲ್ಲಿ ಏನಿದೆ?
ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯಗಳ ಸ್ವಚ್ಛತೆಯನ್ನು ಕಡ್ಡಾಯವಾಗಿ ಮಾಡಿಸಬಾರದೆಂದು ಸಂಬಂಧಿಸಿದ ಶಾಲಾ ಶಿಕ್ಷಣ ಇಲಾಖಾಧಿಕಾರಿಗಳು ಮತ್ತು ಸರ್ಕಾರಿ ಪ್ರಾಥಮಿಕ/ಪ್ರೌಢಶಾಲಾ ಮುಖ್ಯ ಶಿಕ್ಷಕರುಗಳಿಗೆ ಈಗಾಗಲೇ ಉಲ್ಲೇಖಿತ ಸುತ್ತೋಲೆಯ ಮೂಲಕ ತಿಳಿಸಲಾಗಿದ್ದರೂ ಸಹ ವಿದ್ಯಾರ್ಥಿಗಳಿಂದ ಶೌಚಾಲಯಗಳ ಸ್ವಚ್ಛತೆಯಲ್ಲಿ ತೊಡಗಿಸಿಕೊಳ್ಳುತ್ತಿರುವ ಬಗ್ಗೆ ಇತ್ತೀಚೆಗೆ ಕೆಲವು ಪ್ರಕರಣಗಳು ಬೆಳಕಿಗೆ ಬಂದಿರುವುದನ್ನು ಇಲಾಖೆಯು ಗಮನಿಸಿದೆ. ಇದನ್ನೂ ಓದಿ: ಅಮೆರಿಕಕ್ಕೆ ಭಾರತದಿಂದ 5 ವಿಮಾನ ಭರ್ತಿ ಐಫೋನ್ ಕಳುಹಿಸಿದ ಆಪಲ್
ಸರ್ಕಾರದಿಂದ ಮತ್ತು ಇಲಾಖೆಯಿಂದ ಕಾಲ-ಕಾಲಕ್ಕೆ ಹೊರಡಿಸಲಾಗುವ ಸೂಚನೆಗಳನ್ನು ಮತ್ತು ನಿರ್ದೇಶನಗಳನ್ನು ಚಾಚೂ ತಪ್ಪದೇ ಪಾಲಿಸುವಂತೆ ಸೂಚನೆಗಳನ್ನು ನೀಡಲಾಗುತ್ತಿದ್ದರೂ ಸಹ ಇಂತಹ ಸೂಚನೆಗಳನ್ನು ಉಲ್ಲಂಘಿಸುತ್ತಿರುವುದು ಗಂಭೀರವಾಗಿ ಪರಿಗಣಿಸಿ ಆಕ್ಷೇಪಿಸಿದೆ.
ಈ ಹಿನ್ನೆಲೆಯಲ್ಲಿ ಮತ್ತೆ ಇಂತಹ ಘಟನೆಗಳು ಮರುಕಳಿಸಿದ್ದಲ್ಲಿ ಅಂತವರ ವಿರುದ್ಧ ಇಲಾಖಾ ವತಿಯಿಂದ ನಿಯಮಾನುಸಾರ ಕಠಿಣ ಶಿಸ್ತು ಕ್ರಮಗಳನ್ನು ಜರುಗಿಸಲಾಗುವುದು ಅಲ್ಲದೆ ಪ್ರಥಮ ವರ್ತಮಾನ ವರದಿ (FIR) ದಾಖಲಿಸಲಾಗುವುದು ಮತ್ತು ಸಂಬಂಧಿಸಿದ ಶಾಲಾ ಶಿಕ್ಷಣ ಇಲಾಖಾಧಿಕಾರಿಗಳು ಮತ್ತು ಸರ್ಕಾರಿ ಪ್ರಾಥಮಿಕ/ಪ್ರೌಢ ಶಾಲಾ ಮುಖ್ಯ ಶಿಕ್ಷಕರನ್ನೇ ನೇರ ಹೊಣೆಗಾರರನ್ನಾಗಿ ಮಾಡಿ ಶಿಸ್ತು ಕ್ರಮಕ್ಕೆ ಶಿಫಾರಸ್ಸು ಮಾಡಲಾಗುವುದು. ಉಲ್ಲೇಖಿತ ಪತ್ರದಲ್ಲಿ ಶೌಚಾಲಯ ಸ್ವಚ್ಛತೆಯನ್ನು ನಿರ್ಹಿಸುವ ಕುರಿತು ತಿಳಿಸಿರುವ ಅಂಶಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಮತ್ತೊಮ್ಮೆ ಎಚ್ಚರಿಸಲಾಗಿದೆ.
ಬೆಂಗಳೂರು: ಸಂಸದ ಸಾಗರ್ ಖಂಡ್ರೆ ಮನೆಯ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದ ಶ್ರೀ ಕೃಷ್ಣ ಅಪಾರ್ಟ್‌ಮೆಂಟ್ ಮ್ಯಾನೇಜರ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಶ್ರೀ ಕೃಷ್ಣ ಅಪಾರ್ಟ್‌ಮೆಂಟ್‌ನ ಮ್ಯಾನೇಜರ್ ಚಂದ್ರ ಕುಮಾರ್ ಹಾಗೂ ಸೆಕ್ರೆಟರಿ ವಿರುದ್ಧ ವಿಧಾನಸೌದ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಸಚಿವ ಈಶ್ವರ್ ಖಂಡ್ರೆ ಅಪ್ತ ಸಹಾಯಕ ದೂರು ದಾಖಲಿಸಿದ್ದು, ವಿನಾಕಾರಣ ವಿದ್ಯುತ್ ಕಡಿತಗೊಳಿಸಲಾಗಿದೆ ಎಂದು ಆರೋಪಿಸಲಾಗಿದೆ.
ಏ.2 ರಂದು ಅಲಿ ಅಸ್ಕರ್ ರಸ್ತೆಯಲ್ಲಿರುವ ಶ್ರೀ ಕೃಷ್ಣ ಅಪಾರ್ಟ್ಮೆಂಟ್ ಸೊಸೈಟಿಯಿಂದ ಪೂರ್ವಾನುಮತಿ ಪಡೆದು ನವೀಕರಣ ಮಾಡಲಾಗುತ್ತಿತ್ತು. ಮೆಟ್ಟಿಲುಗಳ ಮೇಲೆ ಬೆಳಕಿನ ವ್ಯವಸ್ಥೆ ಮಾಡಲು ವೈರ್ ಎಳೆಯಲಾಗಿತ್ತು. ಇದನ್ನು ನೆಪಮಾಡಿಕೊಂಡು ಮ್ಯಾನೇಜರ್ ಕಾರ್ಮಿಕರಿಗೆ ಅವಾಚ್ಯವಾಗಿ ನಿಂದಿದ್ದಾರೆ ಎಂದು ಆರೋಪಿಸಲಾಗಿದೆ.
ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನವದೆಹಲಿ: ನಿವಾಸದಲ್ಲಿ ಕಂತೆ ಕಂತೆ ನೋಟು ಪತ್ತೆಯಾಗಿ ಸುದ್ದಿಯಲ್ಲಿರುವ ದೆಹಲಿ ಹೈಕೋರ್ಟ್ (Delhi High Court) ನ್ಯಾ. ಯಶವಂತ ವರ್ಮಾ (Justice Yaswant Varma) ಅವರ ಹೆಸರನ್ನು ಪ್ರಕರಣ ಒಂದರಲ್ಲಿ ಸಿಬಿಐ (CBI) ಆರೋಪಿಯನ್ನಾಗಿಸಿ ಎಫ್‌ಐಆರ್ ದಾಖಲು ಮಾಡಿದ್ದ ವಿಚಾರ ಈಗ ಬೆಳಕಿಗೆ ಬಂದಿದೆ.
ಬ್ಯಾಂಕ್‌ನಿಂದ ಪಡೆದ ಸಾಲವನ್ನು ದುರುಪಯೋಗ ಮಾಡಿಕೊಂಡ ಆರೋಪದ ಅಡಿ ಸಿಂಭಾವೋಲಿ ಶುಗರ್ಸ್ ಕಂಪನಿ ವಿರುದ್ಧ 2018 ರಲ್ಲಿ ಸಿಬಿಐ ಮತ್ತು ಇಡಿ ಎಫ್‌ಐಆರ್ ದಾಖಲಿಸಿತ್ತು. ಅಲಹಾಬಾದ್ ಹೈಕೋರ್ಟ್ ಆದೇಶದ ಮೇರೆಗೆ ಸಿಬಿಐ ಎಫ್‌ಐಆರ್ ದಾಖಲಿಸಿಕೊಂಡಿತ್ತು. ಈ ಕಂಪನಿಯಲ್ಲಿ ಯಶವಂತ ವರ್ಮಾ ಕಾರ್ಯನಿರ್ವಾಹಕೇತರ ನಿರ್ದೇಶಕರಾಗಿದ್ದರು. ಸಿಬಿಐ ವರ್ಮಾ ಅವರನ್ನು 10ನೇ ಆರೋಪಿಯನ್ನಾಗಿ ಉಲ್ಲೇಖಿಸಿತ್ತು. ಕ್ರಿಮಿನಲ್ ದುರ್ನಡತೆ, ವಂಚನೆ ಮತ್ತು ಕ್ರಿಮಿನಲ್ ಪಿತೂರಿ ಅಡಿ ಎಫ್‌ಐಆರ್ ದಾಖಲಾಗಿತ್ತು.
ಎಫ್ಐಆರ್ ದಾಖಲಾಗಿದ್ದು ಯಾಕೆ?
ಓರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್‌ನಿಂದ ಸಿಂಭಾವೋಲಿ ಶುಗರ್ಸ್ ರೈತರ ಕೃಷಿ ಉಪಕರಣಗಳು ಮತ್ತು ಇತರ ಅಗತ್ಯಗಳಿಗಾಗಿ ಸಾಲವನ್ನು ಪಡೆದುಕೊಂಡಿತ್ತು. ಈ ಸಾಲವನ್ನು ಕಂಪನಿ ಬೇರೆ ಉದ್ದೇಶಗಳಿಗೆ ಬಳಕೆ ಮಾಡಿದ ಆರೋಪ ಕೇಳಿ ಬಂದಿತ್ತು. ಕ್ರಿಮಿನಲ್ ನಂಬಿಕೆ ಉಲ್ಲಂಘನೆಯ ಕಾರಣಕ್ಕಾಗಿ 97.85 ಕೋಟಿ ರೂ.ಹಣವನ್ನು ವಂಚನೆ ಮಾಡಲಾಗಿದೆ ಎಂದು ಬ್ಯಾಂಕ್ ಘೋಷಿಸಿ 2015 ರಲ್ಲಿ ಆರ್‌ಬಿಐಗೆ ವರದಿ ನೀಡಿತ್ತು.
ಯಾವುದೇ ತನಿಖೆ ಅಗತ್ಯವಿಲ್ಲದ ಕಾರಣ ಈ ವಿಷಯದಲ್ಲಿ ಸಿಬಿಐ ತನಿಖೆಗೆ ಆದೇಶಿಸುವಲ್ಲಿ ಹೈಕೋರ್ಟ್ ತಪ್ಪು ಮಾಡಿದೆ ಎಂದು ಸುಪ್ರೀಂ ಕೋರ್ಟ್ ಕಳೆದ ವರ್ಷ ಹೇಳಿತ್ತು.
ಮಂಡ್ಯ: ಜಿಲ್ಲೆಯ ಮಳವಳ್ಳಿ (Malavalli) ಖಾಸಗಿ ಶಾಲೆಯಲ್ಲಿ ಫುಡ್ ಪಾಯಿಸನ್ (Food Poison) ಪ್ರಕರಣಕ್ಕೆ ಸಂಬಂಧಿಸಿದಂತೆ ಹೋಳಿ ಹಬ್ಬದ ಆಯೋಜಕರು, ಆಹಾರ ತಯಾರಕರು ಹಾಗೂ ಶಾಲೆಯ ಮುಖ್ಯಸ್ಥರು ಸೇರಿದಂತೆ 6 ಮಂದಿಯ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲು ಮಾಡಿದ್ದಾರೆ.
ಶುಕ್ರವಾರ ಮಳವಳ್ಳಿ ಪಟ್ಟಣ ಮದನ್ ಲಾಲ್ ಕಲ್ಯಾಣ ಮಂಟಪದಲ್ಲಿ ಪುಷ್ಪೇಂದ್ರ ಕುಮಾರ್ ಹೋಳಿ ಹಬ್ಬ ಆಚರಣೆ ಮಾಡಿದ್ದು, ಈ ಹೋಳಿ ಹಬ್ಬಕ್ಕೆ ಸಿದ್ದರಾಜು ಎಂಬವರ ಹೋಟೆಲ್‌ನಲ್ಲಿ ವೆಜಿಟೇಬಲ್ ಪಲಾವ್ ಮಾಡಿಸಲಾಗಿತ್ತು. ಇನ್ನೂ ಕಾಗೇಪುರದ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳಿಗೆ ಉಳಿಕೆ ವೆಜಿಟೇಬಲ್ ಪಲಾವ್‌ನ್ನು ನೀಡಲಾಗಿತ್ತು. ಇದನ್ನೂ ಓದಿ: ಕನ್ನಡ ಸಂಘಟನೆಗಳ ಪ್ರತಿಭಟನೆ ಬೆನ್ನಲ್ಲೇ ನೋಟಿಫಿಕೇಶನ್‌ನಲ್ಲಿ ಅಕ್ಷರದೋಷ ಸರಿಪಡಿಸ್ತೇವೆ ಎಂದ BMRCL
ಈ ಪ್ರಕರಣ ಸಂಬಂಧ ಹೋಳಿ ಆಯೋಜಕ ಪುಷ್ಪೇಂದ್ರ, ಹೋಟೆಲ್ ಮಾಲೀಕ ಸಿದ್ದರಾಜು, ಕಲ್ಯಾಣ ಮಂಟಪ ಸಿಬ್ಬಂದಿ ಕೃಷ್ಣ, ಗೋಕುಲ ವಿದ್ಯಾ ಸಂಸ್ಥೆ ಮುಖ್ಯಸ್ಥ ಲಂಕೇಶ್, ಕಾರ್ಯದರ್ಶಿ ಜಗದೀಶ್, ಕೆಲಸಗಾರ ಅಭಿಷೇಕ್ ಮೇಲೆ ಬಿಇಓ ಉಮಾ ನೀಡಿದ ಮೇರೆಗೆ ಎಫ್‌ಐಆರ್ ಹಾಕಲಾಗಿದೆ. ಇದನ್ನೂ ಓದಿ: ಸೂಲಿಬೆಲೆ ವಿರುದ್ಧ ಉಳ್ಳಾಲದಲ್ಲಿ ಎಫ್‌ಐಆರ್ ದಾಖಲು
– ಬಂಧನಕ್ಕೆ ಮಧ್ಯಂತರ ತಡೆ – ಹೊಸ ಎಫ್‌ಐಆರ್ ದಾಖಲಿಸದಂತೆ ಸೂಚನೆ
ನವದೆಹಲಿ: ಇಂಡಿಯಾಸ್ ಗಾಟ್ ಲ್ಯಾಟೆಂಟ್ (India’s Got Latent) ಕಾರ್ಯಕ್ರಮದ ಇತ್ತೀಚಿನ ಸಂಚಿಕೆಯಲ್ಲಿ ಅಶ್ಲೀಲ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಮಹಾರಾಷ್ಟ್ರ, ಅಸ್ಸಾಂ ಮತ್ತು ರಾಜಸ್ಥಾನದಲ್ಲಿ ದಾಖಲಾಗಿರುವ ಎಫ್‌ಐಆರ್‌ಎಸ್ ಅಡಿ ಯೂಟ್ಯೂಬರ್ ರಣವೀರ್ ಅಲಹಬಾದಿಯ (Ranveer Allahabadia) ಬಂಧನಕ್ಕೆ ಸುಪ್ರೀಂಕೋರ್ಟ್ (Supreme Court) ಮಂಗಳವಾರ ತಡೆ ನೀಡಿದೆ.
ತನ್ನ ವಿರುದ್ಧ ದಾಖಲಾಗಿರುವ ವಿವಿಧ ಎಫ್‌ಐಆರ್‌ಗಳನ್ನು ಒಟ್ಟುಗೂಡಿಸಿ ಮಧ್ಯಂತರ ರಕ್ಷಣೆ ಕೋರಿ ರಣವೀರ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಪ್ರಕರಣ ವಿಚಾರಣೆ ನಡೆಸಿದ ನ್ಯಾ ಸೂರ್ಯ ಕಾಂತ್ ಮತ್ತು ಎನ್ ಕೋಟಿಶ್ವರ್ ಸಿಂಗ್ ಪೀಠ ಪ್ರಕರಣಗಳಲ್ಲಿ ತನಿಖೆಗೆ ಸಹಕರಿಸುವಂತೆ ಸೂಚಿಸಿ ಯಾವುದೇ ಹೊಸ ಪ್ರಕರಣ ದಾಖಲಿಸಿದಂತೆ ನಿರ್ದೇಶಿಸಿ ಬಂಧನಕ್ಕೆ ಮಧ್ಯಂತರ ತಡೆ ನೀಡಿತು.
ವಿಚಾರಣೆ ವೇಳೆ ಯೂಟ್ಯೂಬರ್ ರಣವೀರ್ ಅವರ ಹೇಳಿಕೆಗೆ ನ್ಯಾ. ಸೂರ್ಯಕಾಂತ್ ಆಕ್ಷೇಪ ವ್ಯಕ್ತಪಡಿಸಿದರು. ನಿಮ್ಮ ಹೇಳಿಕೆ ಅಶ್ಲೀಲವಲ್ಲದಿದ್ದರೆ ಮತ್ತೇನು? ನೀವು ಯಾವಾಗ ಬೇಕಾದರೂ ನಿಮ್ಮ ಅಸಭ್ಯತೆಯನ್ನು ತೋರಿಸಬಹುದೇ? ಇಡೀ ದೇಶದ ಪೋಷಕರನ್ನು ಅವಮಾನಿಸಿದ್ದೀರಿ ಇಂತಹ ನಡವಳಿಕೆಯನ್ನು ಖಂಡಿಸಲೇಬೇಕು ಎಂದು ಖಾರವಾಗಿ ಅಭಿಪ್ರಾಯ ವ್ಯಕ್ತಪಡಿಸಿದರು.
ನೀವು ಜನಪ್ರಿಯರಾಗಿದ್ದೀರಿ ಎಂಬ ಕಾರಣಕ್ಕೆ ಸಮಾಜವನ್ನು ಹಗುರವಾಗಿ ಪರಿಗಣಿಸಲು ಸಾಧ್ಯವಿಲ್ಲ. ಈ ಭಾಷೆಯನ್ನು ಇಷ್ಟಪಡುವವರು ಭೂಮಿಯ ಮೇಲೆ ಯಾರಾದರೂ ಇದ್ದಾರೆಯೇ? ಇಷ್ಟಪಟ್ಟರೇ ಅವರ ಮನಸ್ಸಿನಲ್ಲಿ ಏನೋ ಕೊಳಕಿದೆ ಎಂದರ್ಥ. ನಾವು ನಿಮ್ಮನ್ನು ಯಾಕೆ ರಕ್ಷಿಸಬೇಕು? ನೀವು ಮತ್ತು ನಿಮ್ಮ ಬೆಂಬಲಿಗರು ಈ ಅಧಃಪತನದ ಮಟ್ಟಕ್ಕೆ ಇಳಿದಿದ್ದೀರಿ. ಕಾನೂನು ಮತ್ತು ವ್ಯವಸ್ಥೆಯ ನಿಯಮವನ್ನು ಪಾಲಿಸಬೇಕು ಎಂದು ನ್ಯಾ. ಸೂರ್ಯಕಾಂತ್ ಸೂಚಿಸಿದರು.
ಮಾಜಿ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರ ಪುತ್ರ ಅಭಿನವ್ ಚಂದ್ರಚೂಡ್ ಅವರು ರಣವೀರ್ ಪರ ವಾದ ಮಂಡಿಸಿ, ತಮ್ಮ ಕಕ್ಷಿದಾರರಿಗೆ ಜೀವ ಬೆದರಿಕೆ ಕರೆಗಳು ಬಂದಿವೆ ಎಂದು ಹೇಳಿದರು. ಯೂಟ್ಯೂಬರ್‌ನ ನಾಲಿಗೆ ಕತ್ತರಿಸುವವರಿಗೆ 5 ಲಕ್ಷ ರೂ. ಬಹುಮಾನ ಘೋಷಿಸಲಾದ ಪ್ರಕರಣವನ್ನು ಅವರು ಉಲ್ಲೇಖಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಪೀಠ ಅಭಿನವ್ ಚಂದ್ರಚೂಡ್ ಅವರನ್ನು ತರಾಟೆಗೆ ತೆಗೆದುಕೊಂಡು ಪಾಡ್‌ಕ್ಯಾಸ್ಟರ್ ಬಳಸಿದ ಭಾಷೆಯನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆಯೇ ಎಂದು ಪ್ರಶ್ನಿಸಿತು. ನೀವು ಜನಪ್ರೀಯತೆಗೆ ಹೇಳಿಕೆ ನೀಡಿದ್ದೀರಿ ಅದೇ ರೀತಿ ಅವರು ಬೆದರಿಕೆ ಮೂಲಕ ಜನಪ್ರಿಯತೆ ಪಡೆಯಲು ಪ್ರಯತ್ನಿಸುತ್ತಿರಬಹುದು ಎಂದು ಹೇಳಿತು.
ಬೆಂಗಳೂರು: ಪದೇ ಪದೇ ಗ್ಯಾಸ್ ಸೋರಿಕೆಯಿಂದ (Gas Leakage) ಅಗ್ನಿ ಅವಘಡದಲ್ಲಿ ಸಾಕಷ್ಟು ಸಾವು ನೋವುಗಳ ಬಳಿಕ ಪೊಲೀಸ್ ಇಲಾಖೆ ಎಚ್ಚೆತ್ತಿದೆ.
ಇದೇ ಮೊದಲ ಬಾರಿಗೆ ಗ್ಯಾಸ್ ಕಂಪನಿ ಹಾಗೂ ಏಜೆನ್ಸಿ (Gas Agency) ವಿರುದ್ಧ ಬೇಗೂರು ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಈ ಹಿಂದೆ ಗ್ಯಾಸ್ ಲೀಕ್, ಗ್ಯಾಸ್ ಸ್ಫೋಟಕ್ಕೆ ಯಾವುದೇ ಕೇಸ್ ದಾಖಲಾಗುತ್ತಿರಲಿಲ್ಲ. ಇದೀಗ ಪ್ರೈವೆಟ್ ಗ್ಯಾಸ್ ಕಂಪನಿ ಮಾಲೀಕ ಚೋಟಾ ಸಿಕಂದರ್ ಮೇಲೆ ಎಫ್‌ಐಆರ್ ದಾಖಲಾಗಿದೆ. ಇದನ್ನೂ ಓದಿ: ಸ್ವಾಮೀಜಿಗಳು ಆಶೀರ್ವಾದ ಮಾಡಿದ್ರೆ, ಯೋಗ್ಯ ಅಂದ್ರೆ ಜನರ ವೋಟು ಗ್ಯಾರಂಟಿ: ಮುಖ್ಯಮಂತ್ರಿ ಚಂದ್ರು
ಎಲ್‌ಎಲ್‌ಬಿ ವಿದ್ಯಾರ್ಥಿನಿ ಜಾಹ್ನವಿ ನೀಡಿದ ದೂರಿನ ಮೇಲೆ ಬೇಗೂರು ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಜಾಹ್ನವಿ ತಂದೆ ಪಶ್ಚಿಮ ಬಂಗಾಳ ಮೂಲದ ನೇತ್ಯಾ ನಯ್ಯ ಎಂಬುವರಿಗೆ ಮನೆ ಬಾಡಿಗೆಗೆ ಕೊಟ್ಟಿದ್ರು. ಇದೇ ತಿಂಗಳ 1ನೇ ತಾರೀಖು ಸಿಲಿಂಡರ್ ಬ್ಲ್ಯಾಸ್ಟ್ ಆಗಿ ನೇತ್ಯಾ ನಯ್ಯ ಹಾಗೂ ಅವರ ಪತ್ನಿ ಗಂಭೀರ ಗಾಯಗೊಂಡಿದ್ದರು. ಇದನ್ನೂ ಓದಿ: ಮುಡಾ ಕೇಸಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ – CBI ತನಿಖೆಗೆ ವಹಿಸಲು ಹೈಕೋರ್ಟ್ ನಕಾರ
ಸಿಲಿಂಡರ್ ಬ್ಲ್ಯಾಸ್ಟ್‌ಗೆ ಖಾಸಗಿ ಪ್ರೈವೆಟ್ ಸಿಲಿಂಡರ್ ಕಂಪನಿ ಏಜೆನ್ಸಿಯೇ ಕಾರಣ. ಹೀಗಾಗಿ ಮಾಲೀಕ ಚೋಟಾ ಸಿಕಂದರ್ ಡಿಸ್ಟ್ರಿಬ್ಯೂಟರ್ ನೈಸ್ ಎಸ್‌ಕೆಎಲ್ ಮೇಲೆ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದರು. ದೂರಿನನ್ವಯ ಇದೀ ಬಿಎನ್‌ಎಸ್ 125(ಎ), 287, 324(2) ಅಡಿ ಎಫ್‌ಐಆರ್ ದಾಖಲಾಗಿದೆ. ಇದನ್ನೂ ಓದಿ: RBI: 5 ವರ್ಷಗಳ ಬಳಿಕ ರೆಪೊ ದರ ಕಡಿತ ಮಾಡಿದ ಆರ್‌ಬಿಐ
ಬೆಂಗಳೂರು: ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ (Sexual Harassment) ಎಸಗಿದ ಆರೋಪದ ಮೇಲೆ ನಗರದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿ (IT Officer) ವಿರುದ್ಧ ಎಫ್ಐಆರ್ (FIR) ದಾಖಲಾಗಿದೆ.
ಐಟಿ ಅಧಿಕಾರಿ ವರುಣ್ ಮಲ್ಲಿಕ್ ಲೈಂಗಿಕ ಕಿರುಕುಳ ನೀಡಿದ್ದಾರೆ. ಅಲ್ಲದೇ ಹಲ್ಲೆ ನಡೆಸಿದ್ದಾರೆ ಎಂದು ವಕೀಲೆಯೊಬ್ಬರು ಆರೋಪಿಸಿ ದೂರು ದಾಖಲಿಸಿದ್ದರು. ದೂರಿನ ಅನ್ವಯ ಆರೋಪಿಗೆ ಪೊಲೀಸರು 2 ನೋಟಿಸ್ ನೀಡಿದ್ದಾರೆ.
ಈ ಸಂಬಂಧ ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಬಾಗಲಕೋಟೆ: ವ್ಯಕ್ತಿತ್ವ ವಿಕಸನ ತರಬೇತಿ ಶಿಬಿರದ ಹೆಸರಲ್ಲಿ ಗನ್ ಹಾಗೂ ಇತರೆ ಸಾಹಸ ತರಬೇತಿ ನೀಡಿದ್ದಕ್ಕೆ ಶ್ರೀರಾಮ ಸೇನೆ (Sri Ram Sena) ಕಾರ್ಯಕರ್ತರ ಮೇಲೆ ಎಫ್‌ಐಆರ್ (FIR) ದಾಖಲಾಗಿದೆ.
ಜಮಖಂಡಿ ತಾಲ್ಲೂಕಿನ ತೊದಲಬಾಗಿ ಗ್ರಾಮದ ಗುಡ್ಡದಲ್ಲಿ ಡಿ.24 ರಿಂದ ಡಿ.29 ರವರೆಗೆ ಸೇನಾ ತರಬೇತಿ ಮಾದರಿಯಲ್ಲಿ ಯುವಕರಿಗೆ ದಂಡ ಪ್ರಯೋಗ, ಗನ್ ಟ್ರೈನಿಂಗ್, ಕರಾಟೆ ಸೇರಿದಂತೆ ವಿವಿಧ ಕೌಶಲ್ಯ ತರಬೇತಿ ನೀಡಲಾಗಿತ್ತು.
ಮುಳ್ಳು ಕಂಟಿಯ ಗುಂಡಿಯಲ್ಲಿ ಹಾದುಹೋಗುವುದು, ಸಂಧಿಗ್ದ ಸ್ಥಳಗಳಲ್ಲಿ ಪಾರಾಗುವುದು, ಟಾರ್ಗೆಟ್ ಸೆಟ್ ಮಾಡಿ ಗುರಿ ಇಟ್ಟು ಹೊಡೆಯುವ ತರಬೇತಿ ನೀಡಲಾಗಿತ್ತು. ಶ್ರೀರಾಮ ಸೇನೆ ಸ್ವಸುರಕ್ಷೆಗಾಗಿ ವಿವಿಧ ರಕ್ಷಾ ತರಬೇತಿ ನೀಡಿದ್ದೇವೆ ಎಂದು ಹೇಳಿಕೊಂಡಿತ್ತು.
ವೈದ್ಯೆ ಮಂಜುಳ ಪಾಟೀಲ್ ಅವರ ಕ್ಲಿನಿಕ್‌ಗೆ ಬಂದು ಐಶ್ವರ್ಯಗೌಡ ತಾನು ಡಿಕೆ ಸುರೇಶ್ ತಂಗಿ ಎಂದು ಹೇಳಿ ವೈದ್ಯೆಯನ್ನು ಪರಿಚಯ ಮಾಡಿಕೊಂಡಿದ್ದರು. ಜೊತೆಗೆ ಗೋಲ್ಡ್ ಬಿಸಿನೆಸ್, ಕೆಸಿನೊ, ಹಾಗೂ ದೊಡ್ಡ ಮಟ್ಟದಲ್ಲಿ ಬಿಸಿನೆಸ್ ಮಾಡುತ್ತಿರುವುದಾಗಿ ತಿಳಿಸಿದ್ದಳು. 2022ರಿಂದ ಹಂತ ಹಂತವಾಗಿ ಹೂಡಿಕೆ ನೆಪದಲ್ಲಿ ಐಶ್ವರ್ಯಾಗೌಡ ಹಣ ಪಡೆದಿರುತ್ತಾಳೆ. ಒಟ್ಟು 2.52 ಕೋಟಿ ಹಣ ಹಾಗೂ 2.350 ಕೆಜಿ ಚಿನ್ನಾಭರಣ ಪಡೆದು ವಂಚನೆ ಮಾಡಿದ್ದಾಳೆ ಎಂದು ವೈದ್ಯೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಚಂದ್ರಲೇಔಟ್‌ನಲ್ಲಿ (Chandralayout) ಎಫ್‌ಐಆರ್ ದಾಖಲಾಗಿದ್ದ ಬಗ್ಗೆ ತಿಳಿದು ವೈದ್ಯೆ ಶಾಕ್‌ಗೆ ಒಳಗಾಗಿದ್ದರು. ಬಳಿಕ ವೈದ್ಯೆ ಮನೆ ಬಳಿ ಹೋಗಿ ಐಶ್ವರ್ಯ ಡ್ರೈವರ್ ಧನಂಜಯ್ಯ ಐಶ್ವರ್ಯಾಗೆ ಕಾಲ್ ಮಾಡಿ ಕೊಟ್ಟಿದ್ದ. ಕೊಟ್ಟಿರುವ ಹಣದ ಬಗ್ಗೆ ದೂರು ಕೊಟ್ಟರೆ ಸರಿ ಇರಲ್ಲ ಎಂದು ಫೋನ್‌ನಲ್ಲಿ ಐಶ್ವರ್ಯಾ ಬೆದರಿಕೆ ಹಾಕಿದ್ದರು. ಜೊತೆಗೆ ಹಣ ಕೇಳಲು ಮನೆ ಬಳಿ ಹೋದಾಗಲೂ ಕೂಡ ಐಶ್ವರ್ಯ ಡ್ರೈವರ್‌ಗಳಾದ ಅಶ್ವಥ್ ಹಾಗೂ ಧನಂಜಯ್ಯ ಬೆದರಿಕೆ ಹಾಕಿದ್ದರು.