ಮಂಗಳೂರು: ಜಿಲ್ಲೆಯ ಬೈಕಂಪಾಡಿ (Baikampady) ಕೈಗಾರಿಕಾ ವಲಯದಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಅಮೆಜಾನ್ ಸುಗಂಧದ್ರವ್ಯ ತಯಾರಕ ಕಂಪನಿ ಬೆಂಕಿಗಾಹುತಿಯಾಗಿದೆ.
ಸುಗಂಧ ದ್ರವ್ಯಕ್ಕೆ ಬೆಂಕಿ ತಗುಲಿದ ಪರಿಣಾಮ ಬೆಂಕಿ ಹೊತ್ತಿಕೊಂಡಿರುವ ಶಂಕೆ ಉಂಟಾಗಿದ್ದು, ಸಂಪೂರ್ಣ ಘಟಕವೇ ಧಗಧಗನೆ ಉರಿದು ಕರಕಲಾಗಿದೆ. ಸ್ಥಳಕ್ಕೆ ಎಂಸಿಎಫ್, ಎನ್ಎಂಪಿಎ ಹಾಗೂ ಕದ್ರಿ ಅಗ್ನಿಶಾಮಕ ದಳ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡಿವೆ.ಇದನ್ನೂ ಓದಿ: ಸಂಡೂರಿನ ನಾರಿಹಳ್ಳದಲ್ಲಿ ಅಪರೂಪದ ಮ್ಯಾಂಗನೀಸ್ ಶಿಲಾ ಶಾಸನ ಪತ್ತೆ
ಅಪಾರ ಪ್ರಮಾಣದ ಆಸ್ತಿ ನಷ್ಟವಾಗಿದ್ದು, ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ ಎಂದು ತಿಳಿದುಬಂದಿದೆ. ಸದ್ಯ ಈ ಸಂಬಂಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಗ್ನಿ ಅವಘಡದ ಕಾರಣ ಪತ್ತೆಹಚ್ಚಲು ತನಿಖೆ ಆರಂಭಿಸಿದ್ದಾರೆ.
ಆನೇಕಲ್: ಆಯಿಲ್ ಕಾರ್ಖಾನೆಯಲ್ಲಿ (Oil Factory) ಭಾರೀ ಅಗ್ನಿ ಅವಘಡ (Fire Incident) ಸಂಭವಿಸಿದ ಪರಿಣಾಮ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ಬೆಂಗಳೂರು (Bengaluru) ಹೊರವಲಯ ಆನೇಕಲ್ (Anekal) ತಾಲೂಕಿನ ಹೀಲಲಿಗೆಯಲ್ಲಿ ನಡೆದಿದೆ.
ವಿಶಾಲ್ ಟ್ರೈಬೊಟೆಕ್ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಯಲ್ಲಿ ಹೆಚ್ಚಿನ ಪ್ರಮಾಣದ ಆಯಿಲ್ ಬ್ಯಾರೆಲ್ಗಳನ್ನು ಶೇಖರಿಸಲಾಗಿತ್ತು. ಏಕಾಏಕಿ ಕಾರ್ಖಾನೆಯಲ್ಲಿ ಬೆಂಕಿ ಹೊತ್ತಿಕೊಂಡು ಕ್ಷಣಾರ್ಧದಲ್ಲಿ ಇಡೀ ಕಾರ್ಖಾನೆಯನ್ನು ಆವರಿಸಿದೆ. ಸ್ಥಳಕ್ಕೆ ಹತ್ತಕ್ಕೂ ಹೆಚ್ಚು ಅಗ್ನಿಶಾಮಕ ದಳದ ವಾಹನಗಳು ಆಗಮಿಸಿದ್ದು, ಅಗ್ನಿಶಾಮಕ ಸಿಬ್ಬಂದಿ ಕಳೆದ ಐದು ಗಂಟೆಗಳಿಂದ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಇದನ್ನೂ ಓದಿ: ದಾವಣಗೆರೆ | ವೃದ್ಧ ದಂಪತಿಯ ಕೈಕಾಲು ಕಟ್ಟಿ 8 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಗ್ಯಾಂಗ್
ಸೂರ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅದೃಷ್ಟವಶಾತ್ ಅಗ್ನಿ ಅವಘಡದಿಂದ ಯಾವುದೇ ಸಾವು ನೋವು ಸಂಭವಿಸಿಲ್ಲ. ಕಾರ್ಖಾನೆಯಲ್ಲಿ ಸುಮಾರು 40 ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಆದರೆ ಇಂದು ಭಾನುವಾರ ಆಗಿರುವುದರಿಂದ ರಜೆ ಇತ್ತು. ಹೀಗಾಗಿ ಅಗ್ನಿ ಅವಘಡದ ವೇಳೆ ಕಾರ್ಖಾನೆಯಲ್ಲಿ ಕಾರ್ಮಿಕರು ಇರಲಿಲ್ಲ. ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹತ್ತಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಇದನ್ನೂ ಓದಿ: ಚಂದ್ರಗ್ರಹಣ ಕಣ್ತುಂಬ ನೋಡಿ ಸಂಭ್ರಮಿಸಿ: ಭೌತವಿಜ್ಞಾನಿ ಎ.ಪಿ.ಭಟ್
ಇಟಾನಗರ: ಅರುಣಾಚಲ ಪ್ರದೇಶದ (Arunachal Pradesh) ಶಿ-ಯೋಮಿ ಜಿಲ್ಲೆಯ ಸರ್ಕಾರಿ ವಸತಿ ಶಾಲೆಯಲ್ಲಿ ಅಗ್ನಿ ಅವಘಡ (Fire) ಸಂಭವಿಸಿದೆ. ಅವಘಡದಲ್ಲಿ 3 ನೇ ತರಗತಿಯ ವಿದ್ಯಾರ್ಥಿ ಸಜೀವ ದಹನವಾಗಿದ್ದು, ಮೂವರು ಗಾಯಗೊಂಡಿದ್ದಾರೆ.
ಶಾಲೆಗೆ ಹತ್ತಿರದಲ್ಲಿ ಯಾವುದೇ ಆಸ್ಪತ್ರೆಗಳು ಇಲ್ಲದ ಕಾರಣ ಗಾಯಾಳುಗಳನ್ನು ಸುಮಾರು 85 ಕಿ.ಮೀ ದೂರದಲ್ಲಿರುವ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಪಶ್ಚಿಮ ಸಿಯಾಂಗ್ ಜಿಲ್ಲೆಯ ಆಲೊದಲ್ಲಿರುವ ವಲಯ ಜನರಲ್ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಪತ್ನಿಗೆ ಬೆಂಕಿ ಹಚ್ಚಿ ಕೊಂದವನ ಕಾಲಿಗೆ ಗುಂಡೇಟು – ನನಗ್ಯಾವ ಪಶ್ಚಾತ್ತಾಪ ಇಲ್ಲ ಎಂದ ಪಾಪಿ!
ಶಾಲೆಯು ಮೋನಿಗಾಂಗ್ ಪಟ್ಟಣದಿಂದ 17 ಕಿ.ಮೀ ದೂರದಲ್ಲಿರುವ ದೂರದ ಹಳ್ಳಿಯಲ್ಲಿದೆ. ಗ್ರಾಮದಲ್ಲಿ ವಿದ್ಯುತ್ ಸಂಪರ್ಕವಿಲ್ಲ. ಇನ್ನೂ ಅವಘಡಕ್ಕೆ ಕಾರಣವನ್ನು ತಿಳಿಯಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು: ನಗರದ (Bengaluru) ಕೆಆರ್ ಪೇಟೆಯಯಲ್ಲಿ (KR Pete) ಐವರನ್ನು ಬಲಿ ಪಡೆದಿದ್ದ ಅಗ್ನಿ ದುರಂತ (Fire Accident) ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟಡದ ಮಾಲೀಕರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಬಾಲಕೃಷ್ಣ ಶೆಟ್ಟಿ ಮತ್ತು ಸಂದೀಪ್ ಶೆಟ್ಟಿ ಎಂದು ಗುರುತಿಸಲಾಗಿದೆ. ಕಟ್ಟಡದಲ್ಲಿ ಅಗ್ನಿ ಅವಘಡ ತಪ್ಪಿಸಲು ಸಾಮಾನ್ಯ ಸೇಫ್ಟಿ ಸಹ ಇರಲಿಲ್ಲ. ಈ ಕಾರಣಕ್ಕಾಗಿ ಕಟ್ಟಡದ ಮಾಲೀಕರನ್ನು ಬಂಧಿಸಲಾಗಿದೆ ಎಂದು ಕೇಂದ್ರ ವಿಭಾಗದ ಡಿಸಿಪಿ ಅಕ್ಷಯ್ ಹಕಾಯ್ ತಿಳಿಸಲಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ – ಒಂದೇ ಕುಟುಂಬದ ನಾಲ್ವರು ಸೇರಿ ಐವರು ಸಜೀವ ದಹನ
ಅಗ್ನಿ ಅವಘಡದಲ್ಲಿ ಮೃತಪಟ್ಟ ಮದನ್ ಸಿಂಗ್ ಸಹೋದರ ಗೋಪಾಲ್ ಸಿಂಗ್ ದೂರಿನ ಅಧಾರದ ಮೇಲೆ ಎಫ್ಐಆರ್ ದಾಖಲಾಗಿದೆ. ಈ ಘಟನೆಗೆ ಇನ್ನೂ ನಿಖರ ಕಾರಣ ಗೊತ್ತಾಗಿಲ್ಲ. ನಿನ್ನೆ (ಆ.16) ರಕ್ಷಣಾ ಕಾರ್ಯಾಚರಣೆ ಸುಮಾರು 15 ಗಂಟೆಗಳ ಕಾಲ ನಡೆದಿದೆ. ಇವತ್ತು (ಆ.17) ಘಟನಾ ಸ್ಥಳಕ್ಕೆ ಎಫ್ಎಸ್ಎಲ್ ಟೀಂ ತೆರಳಿ ಮಾಹಿತಿ ಕಲೆ ಹಾಕಲಿದೆ. ತನಿಖೆ ಬಳಿಕ ಸತ್ಯಾಸತ್ಯತೆ ಗೊತ್ತಾಗುತ್ತದೆ. ಗಾಯಾಳುಗಳಿಗೆ ಚಿಕಿತ್ಸೆ ಮುಂದುವರೆದಿದೆ ಎಂದಿದ್ದಾರೆ.
ಬೆಂಗಳೂರು: ಇಲ್ಲಿನ ಕೆ.ಆರ್ ಮಾರ್ಕೆಟ್ (KR Market) ಬಳಿಯ ನಗರ್ತಪೇಟೆಯ ವಾಣಿಜ್ಯ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ (Massive Fire) ಒಂದೇ ಕುಟುಂಬದ ನಾಲ್ವರು ಸೇರಿ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಇನ್ನೂ ಘಟನಾ ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ (Bengaluru Police Commissioner) ಸೀಮಂತ್ ಕುಮಾರ್ ಸಿಂಗ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ರಾತ್ರಿ 2.30ರ ಸುಮಾರಿಗೆ ಅಗ್ನಿ ಅವಗಢ ಸಂಭವಿಸಿದ ಮಾಹಿತಿ ಬಂತು. ಅಗ್ನಿಶಾಮಕ ದಳದವರು ನಮ್ಮ ಪೊಲೀಸ್ರು ಪರಿಶೀಲನೆ ಮಾಡ್ತಿದ್ದಾರೆ. ಗ್ರೌಂಡ್ ಫ್ಲೋರ್ ನಲ್ಲಿರುವ ಗೋಡೌನ್ ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ನಂತರ ಅದು ಮೇಲಿನ ಫ್ಲೋರ್ ಗಳಿಗೆ ಆವರಿಸಿದೆ. ಬೆಂಕಿ ಹೊತ್ತಿಕೊಂಡ ಕೂಡಲೇ ಕಟ್ಟಡದಲ್ಲಿದ್ದ ಬಹುತೇಕ ಜನ ಓಡಿ ಹೋಗಿದ್ದಾರೆ. ಆದ್ರೆ ಒಂದು ಫ್ಯಾಮಿಲಿ ಮಾತ್ರ ಬೆಂಕಿ ಕೆನ್ನಾಲಿಗೆಗೆ ಸಿಲುಕಿಕೊಂಡಿದೆ.
ಎರಡು ಮೃತದೇಹಗಳನ್ನ ಈಗಾಗಲೇ ಹೊರ ತೆಗೆಯಲಾಗಿದೆ. ಮೇಲಿನ ಫ್ಲೋರ್ ನಲ್ಲಿ ಕಂಪ್ಲೀಟ್ ಬೆಂಕಿ, ಹೊಗೆ ಆವರಿಸಿದೆ ಒಳಗಡೆ ಹೋಗೋದಕ್ಕೆ ಆಗ್ತಿಲ್ಲ, ಹೀಗಾಗಿ ಒಳಗಡೆ ಸಿಲುಕಿದವರನ್ನ ಹುಡುಕಲು ಆಗ್ತಿಲ್ಲ. ಕಾರ್ಯಾಚರಣೆ ಮುಂದುವರಿಸಲಾಗಿದೆ. ಅಗ್ನಿಶಾಮಕ ಸಿಬ್ಬಂದಿ, ವಿಧಿವಿಜ್ಞಾನ ಪ್ರಯೋಗಾಲಯ ಅಧಿಕಾರಿಗಳು ಹಾಗೂ ನಮ್ಮ ರಕ್ಷಣಾ ತಂಡದವರು ಕಾರ್ಯಾಚರಣೆ ಮಾಡ್ತಿದ್ದಾರೆ. ಇನ್ನು ಮೃತದೇಹಗಳು ಇರುವ ಶಂಕೆ ಇದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು | ನಗರ್ತಪೇಟೆಯಲ್ಲಿ ಭೀಕರ ಅಗ್ನಿ ದುರಂತ – ಓರ್ವ ಸುಟ್ಟು ಕರಕಲು, ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ
ಏನಿದು ದುರಂತ?
ಕೆ.ಆರ್ ಮಾರ್ಕೆಟ್ ಬಳಿಯ ನಗರ್ತಪೇಟೆಯ ವಾಣಿಜ್ಯ ಕಟ್ಟಡದಲ್ಲಿದ್ದ ಮಹಡಿ ಮನೆಯಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಡಿತ್ತು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ್ದ ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಸ್ಥಳದಲ್ಲಿ ಅಂಬುಲೆನ್ಸ್ಗಳನ್ನ ನಿಯೋಜನೆ ಮಾಡಲಾಗಿದೆ. ಇದನ್ನೂ ಓದಿ: ಸರ್ಕಾರ ಧರ್ಮಸ್ಥಳದ ಜೊತೆಗಿರುತ್ತೆ, ದಿಕ್ಕು ತಪ್ಪಿಸಿದವರನ್ನ ನಾವು ಬಿಡಲ್ಲ: ಲಕ್ಷ್ಮಿ ಹೆಬ್ಬಾಳ್ಕರ್
ಬೆಂಗಳೂರು: ಇಲ್ಲಿನ ಕೆ.ಆರ್ ಮಾರ್ಕೆಟ್ (KR Market) ಬಳಿಯ ನಗರ್ತಪೇಟೆಯ ವಾಣಿಜ್ಯ ಕಟ್ಟಡದಲ್ಲಿದ್ದಲ್ಲಿ ಭೀಕರ ಅಗ್ನಿ ಅವಘಡ (Massive fire) ಸಂಭವಿಸಿದ್ದು, ಓರ್ವ ವ್ಯಕ್ತಿ ಸುಟ್ಟುಕರಕಲಾಗಿರುವ ಘಟನೆ ನಡೆದಿದೆ.
ರಾಜಸ್ಥಾನ ಮೂಲದ ಮದನ್ ಸಿಂಗ್ ಮೃತಪಟ್ಟಿರುವ ವ್ಯಕ್ತಿ. ವಾಣಿಜ್ಯ ಕಟ್ಟಡದ (Commercial building) 3ನೇ ಅಂತಸ್ಥಿನಲ್ಲಿದ್ದ ಮನೆಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ದುರಂತ ಸಂಭವಿಸಿದೆ. ಈ ವೇಳೆ ಮಳಿಗೆಯಲ್ಲೇ ಇದ್ದ ಮದನ್ ಸಿಂಗ್ ಸಾವನ್ನಪ್ಪಿದ್ದಾನೆ. ಇನ್ನೂ ದುರಂತ ನಡೆದ ಮಳಿಗೆಯಲ್ಲಿ ಒಂದೇ ಕುಟುಂಬದ ಇನ್ನೂ ಮೂವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಒಟ್ಟು ನಾಲ್ವರು ಮನೆಯಲ್ಲಿ ವಾಸಿಸುತ್ತಿದ್ದರು. ಮನೆಯಲ್ಲಿ ಪತಿ, ಪತ್ನಿ ಹಾಗೂ 8 ಮತ್ತು 5 ವರ್ಷದ ಇಬ್ಬರು ಮಕ್ಕಳಿದ್ದರು. ಮದನ್ ಸಿಂಗ್ ಎಂಬಾತ ಸಾವನ್ನಪ್ಪಿದ್ದು, ಉಳಿದ ಮೂವರು ಸಾವನ್ನಪ್ಪಿರುವ ಶಂಕ್ಯೆ ವ್ಯಕ್ತವಾಗಿದೆ. ಇದನ್ನೂ ಓದಿ: ಈ ದೇಶಗಳಲ್ಲಿ ಬೀದಿ ನಾಯಿಗಳಿಗೆ ಗ್ಯಾಸ್ ಚೇಂಬರ್, ದಯಾಮರಣ ಶಿಕ್ಷೆ – ಯಾವ ದೇಶದಲ್ಲಿ ಏನು ಕಾನೂನು?
ಘಟನಾ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿರುವ ಹಿನ್ನೆಲೆ ರಕ್ಷಣಾ ಸಿಬ್ಬಂದಿ ಆಕ್ಸಿಜನ್ ಸಿಲಿಂಡರ್ ಧರಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇನ್ನೂ ದುರಂತ ನಡೆದ ಮಳಿಗೆಯಲ್ಲಿ ತಾಯಿ-ಮಗು ಒಳಗೆ ಸಿಲುಕಿದ್ದಾರೆಂದು ಹೇಳಲಾಗುತ್ತಿದೆ. ಅವಘಡಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಇದನ್ನೂ ಓದಿ: ಇಂದು ಬಿಜೆಪಿಯಿಂದ ʻಧರ್ಮಸ್ಥಳ ಚಲೋʼ – 500 ಕಾರುಗಳಲ್ಲಿ ಬೃಹತ್ ಯಾತ್ರೆ
ರಾಯಚೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದ (Mantralayam Mutt) ಗೋ ಶಾಲೆಯಲ್ಲಿ ಅಗ್ನಿ ಅವಘಡ (Fire Accident) ಸಂಭವಿಸಿದೆ. ಮೇವು ಸಂಗ್ರಹಿಸಿಟ್ಟಿದ್ದ ಮೇವಿನ ಗೋದಾಮಿನಲ್ಲಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂ. ಮೌಲ್ಯದ ಮೇವು ಬೆಂಕಿಗಾಹುತಿಯಾಗಿದೆ.
ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಗೋ ಶಾಲೆ ಸಿಬ್ಬಂದಿ ನೂರಾರು ಗೋವುಗಳನ್ನು ಹೊರಗೆ ಬಿಟ್ಟಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಆಂಧ್ರಪ್ರದೇಶದ ಎಮ್ಮಿಗನೂರು ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಇದರಿಂದಾಗಿ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಇದನ್ನೂ ಓದಿ: ರಾಜಣ್ಣ ವಜಾ ಬೆನ್ನಲ್ಲೇ ಹೊಸ ಬಾಂಬ್ ಸಿಡಿಸಿದ ಕುಣಿಗಲ್ ರಂಗನಾಥ್
ಪೃಥ್ವಿರಾಜ್ ಮಡಿವಾಳರ್ ಅವರಿಗೆ ಸೇರಿದ್ದ ಸ್ಟುಡಿಯೋ ಹಾಗೂ ಅದರ ಪಕ್ಕದಲ್ಲಿರುವ ಸೀಮನ್ ಅವರಿಗೆ ಸೇರಿದ್ದ ಬೇಕರಿಯಲ್ಲಿ ಕಳ್ಳತನ ಮಾಡಿದ್ದಾರೆ. ಈ ವೇಳೆ 70 ಸಾವಿರ ರೂ. ನಗದು, ಒಂದು ಐಪೋನ್, ಎರಡು ಕ್ಯಾಮೆರಾವನ್ನು ಕದ್ದುಕೊಂಡು ಹೋಗಿದ್ದಾರೆ. ಕಳ್ಳತನದ ಬಳಿಕ ಸ್ಟುಡಿಯೋಗೆ ಬೆಂಕಿ ಹಚ್ಚಿದ್ದು, 15 ಲಕ್ಷ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದೆ.
ಅದೇ ಬೆಂಕಿ ಪಕ್ಕದ ಬೇಕರಿಗೆ ಹರಡಿಕೊಂಡು ಅದರಲ್ಲಿದ್ದ ಫ್ರಿಡ್ಜ್ ಸೇರಿದಂತೆ 8 ಲಕ್ಷ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ಗಾಂಧಿಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಇದನ್ನೂ ಓದಿ: ರಾಜಣ್ಣ ರಾಜೀನಾಮೆ| ಎರಡು ಕೈ ಮುಗಿದು ಒಳಗೆ ಹೋದ ಡಿಕೆಶಿ
ಶಿವಮೊಗ್ಗ: ನಗರದ ಆಟೋ ಕಾಂಪ್ಲೆಕ್ಸ್ನಲ್ಲಿರುವ ಗ್ಯಾರೇಜ್ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿ 2 ಕಾರುಗಳು ಸುಟ್ಟು ಕರಕಲಾದ ಘಟನೆ ನಡೆದಿದೆ.
ಭಾನುವಾರ ಆಗಿದ್ದರಿಂದ ಗ್ಯಾರೇಜ್ ಬಂದ್ ಮಾಡಲಾಗಿತ್ತು. ಗ್ಯಾರೇಜ್ ಬಂದ್ ಆಗಿದ್ದಾಗ ಅಗ್ನಿ ಅವಘಡ ಸಂಭವಿಸಿದೆ. ಪರಿಣಾಮ ಡಸ್ಟರ್, ಇಕೋ ಸ್ಪೋರ್ಟ್ಸ್ ಕಾರುಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಅವಘಡದಲ್ಲಿ ಟಾಟಾ ಸುಮೋ ವಾಹನ ಅರ್ಧದಷ್ಟು ಸುಟ್ಟು ಕರಕಲಾಗಿದೆ. ಇದನ್ನೂ ಓದಿ: ತುಮಕೂರು | ಮಹಿಳೆ ಆತ್ಮಹತ್ಯೆ – ವರದಕ್ಷಿಣೆ ಕಿರುಕುಳ ಆರೋಪ
ಮಾಹಿತಿ ಸಿಕ್ಕ ಬಳಿಕ ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಗ್ಯಾರೇಜ್ ಮಾಲೀಕರು ಸಹ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.
ರಾಯಚೂರು: ಜಿಲ್ಲೆಯ ದೇವದುರ್ಗ ತಾಲೂಕಿನ ಗಬ್ಬೂರು ನಾಡ ತಹಶಿಲ್ದಾರ ಕಚೇರಿಯಲ್ಲಿ (Tahsildar office) ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡು ಮಹತ್ವದ ದಾಖಲೆಗಳು, ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ.
ರಾತ್ರಿ ವೇಳೆ ಅಗ್ನಿ ಅವಘಡ ನಡೆದಿದ್ದು ಕಂಪ್ಯೂಟರ್, ಸಾರ್ವಜನಿಕರ ಮಹತ್ವದ ದಾಖಲೆಗಳು, ಪೀಠೋಪಕರಣಗಳು ಸುಟ್ಟು ಕರಕಲಾಗಿವೆ. ಮಳೆಯಿಂದ ಹಳೆಯ ಕಟ್ಟಡದ ಗೋಡೆಗಳು ಒದ್ದೆಯಾಗಿದ್ದು ಅಲ್ಲಲ್ಲಿ ಸೋರಿದ್ದರಿಂದ ಶಾರ್ಟ್ ಸರ್ಕ್ಯೂಟ್ (Short circuit) ಉಂಟಾಗಿದೆ. ಇನ್ವೊಟರ್ನಲ್ಲಿ ಬೆಂಕಿ ಕಾಣಿಸಿಕೊಂಡು ಸ್ಫೋಟಗೊಂಡಿದೆ. ಇದರಿಂದ ಕಚೇರಿಯಲ್ಲಿನ ವಸ್ತುಗಳೆಲ್ಲಾ ಸುಟ್ಟು ಕರಕಲಾಗಿವೆ.
ಎರಡನೇ ಬಾರಿ ನಾಡ ತಹಶಿಲ್ದಾರ ಕಚೇರಿ ಅಗ್ನಿದುರಂತಕ್ಕೆ ಈಡಾಗಿದೆ. ಮಹತ್ವದ ದಾಖಲೆಗಳು ಸುಟ್ಟು ಹೋಗಿರುವುದರಿಂದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗಬ್ಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.