Tag: fire fighter

  • ಆಟವಾಡುತ್ತಾ ಬಾವಿಗೆ ಬಿದ್ದ 8ರ ಬಾಲಕಿ ಸಾವು

    ಆಟವಾಡುತ್ತಾ ಬಾವಿಗೆ ಬಿದ್ದ 8ರ ಬಾಲಕಿ ಸಾವು

    ವಿಜಯಪುರ: ಆಟವಾಡಲು ಹೋಗಿ ಬಾಲಕಿಯೋರ್ವಳು ಬಾವಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ವಿಜಯಪುರ (Vijayapura) ಜಿಲ್ಲೆಯ ಇಂಡಿ (Indi) ತಾಲೂಕಿನ ಧನಸಿಂಗ್ ತಾಂಡಾದಲ್ಲಿ ಘಟನೆ ನಡೆದಿದೆ.ಇದನ್ನೂ ಓದಿ:ಧರ್ಮಸ್ಥಳ ನಿಗೂಢ ಶವ ಕೇಸಲ್ಲಿ ಮಾನವ ಹಕ್ಕುಗಳ ಆಯೋಗ ಎಂಟ್ರಿ

    ಅರ್ಚನಾ ದೀಪಕ್ ರಾಠೋಡ (8) ಮೃತ ಬಾಲಕಿ. ಸೋಮವಾರ ಸಂಜೆ ಬಾಲಕಿ ತನ್ನ ತಾಯಿಯೊಂದಿಗೆ ಕುರಿ ಮೇಯಿಸಲು ಹೋಗಿದ್ದಳು. ಈ ವೇಳೆ ಆಟವಾಡುತ್ತಿದ್ದ ಬಾಲಕಿ ಆಯಾತಪ್ಪಿ ಬಾವಿಗೆ ಬಿದ್ದಿದ್ದಾಳೆ.

    ಬಾಲಕಿ ಬಾವಿಗೆ ಬಿದ್ದಿರುವ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದರು. ರಕ್ಷಣಾ ಕಾರ್ಯಾಚರಣೆ ನಡೆಸಿ ಸದ್ಯ ಬಾಲಕಿಯ ಮೃತದೇಹವನ್ನು ಹೊರಕ್ಕೆ ತೆಗೆದಿದ್ದಾರೆ. ಈ ಕುರಿತು ಇಂಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಭಾರತದ ಮೇಲೆ 50% ಸುಂಕ ವಿಧಿಸಿದ್ದು, ರಷ್ಯಾಗೆ ದೊಡ್ಡ ಹೊಡೆತ ಕೊಟ್ಟಿದೆ: ಟ್ರಂಪ್‌

     

  • ಶಾರ್ಟ್ ಸರ್ಕ್ಯೂಟ್‍ನಿಂದ ಮನೆ ಬೆಂಕಿಗಾಹುತಿ – 1.25 ಲಕ್ಷ ನಗದು, ಒಡವೆ ಭಸ್ಮ

    ಶಾರ್ಟ್ ಸರ್ಕ್ಯೂಟ್‍ನಿಂದ ಮನೆ ಬೆಂಕಿಗಾಹುತಿ – 1.25 ಲಕ್ಷ ನಗದು, ಒಡವೆ ಭಸ್ಮ

    ಹಾಸನ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‍ನಿಂದಾಗಿ ಮನೆಗೆ ಬೆಂಕಿ ಬಿದ್ದು ಸುಮಾರು 1.25 ಲಕ್ಷ ನಗದು, ಒಡವೆ ಹಾಗೂ ಗೃಹಪಯೋಗಿ ವಸ್ತುಗಳೆಲ್ಲಾ ಸುಟ್ಟು ಭಸ್ಮವಾಗಿರುವ ಘಟನೆ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ದೊಡ್ಡಕಾಡನೂರು ಗ್ರಾಮದಲ್ಲಿ ನಡೆದಿದೆ.

    ದೊಡ್ಡಕಾಡನೂರು ಗ್ರಾಮದ ನಿವಾಸಿ ಮಂಜುಳಾ ಅವರ ಮನೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‍ ಸಂಭವಿಸಿದೆ. ಪರಿಣಾಮ ಮನೆಗೆ ಬೆಂಕಿ ಹೊತ್ತಿಕೊಂಡು ಗೃಹಪಯೋಗಿ ವಸ್ತುಗಳೆಲ್ಲಾ ಸುಟ್ಟು ಭಸ್ಮವಾಗಿದೆ. ಇದೇ ವೇಳೆ ಮನೆಯಲ್ಲಿಟ್ಟಿದ್ದ ಸುಮಾರು 1.25 ಲಕ್ಷ ರೂ. ಹಣ ಹಾಗೂ ಬಂಗಾರದ ಒಡವೆಗಳೆಲ್ಲಾ ಬೆಂಕಿಗೆ ಆಹುತಿಯಾಗಿದೆ.

    ಮಂಜುಳಾ ಅವರು ಬ್ಯೂಟಿ ಪಾರ್ಲರ್ ನಡೆಸುತಿದ್ದು, ತನ್ನ ತಾಯಿಯೊಂದಿಗೆ ಈ ಮನೆಯಲ್ಲಿ ವಾಸವಿದ್ದರು. ಆದರೆ ಅವಘಡ ಸಂಭವಿಸಿದ್ದ ವೇಳೆ ಮಂಜುಳಾ ಹಾಗೂ ಅವರ ತಾಯಿ ಮನೆಯಲ್ಲಿ ಇರಲಿಲ್ಲ. ಹೀಗಾಗಿ ಯಾವುದೇ ಪ್ರಾಣಹಾನಿ ಆಗಿಲ್ಲ. ಮನೆಗೆ ಬೆಂಕಿ ಬಿದ್ದಿರುವುದನ್ನು ಗಮನಿಸಿದ ಗ್ರಾಮಸ್ಥರು ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಆದರೆ ಅಷ್ಟರಲ್ಲಿ ಮನೆಯೊಳಗಿದ್ದ ಎಲ್ಲಾ ವಸ್ತುಗಳು ಸುಟ್ಟು ಕರಕಲಾಗಿದ್ದವು. ಆದರೆ ಅದೃಷ್ಟವಶಾತ್ ಮನೆಯಲ್ಲಿದ್ದ ಎರಡು ಭರ್ತಿಯಾಗಿದ್ದ ಗ್ಯಾಸ್ ಸಿಲಿಂಡರ್ ಗಳಿಗೆ ಬೆಂಕಿ ಹೊತ್ತಿಕೊಂಡಿರಲಿಲ್ಲ. ಒಂದು ವೇಳೆ ಸಿಲಿಂಡರ್ ಬ್ಲಾಸ್ಟ್ ಆಗಿದ್ದರೆ ಇನ್ನಷ್ಟು ಅನಾಹುತವಾಗುತ್ತಿತ್ತು.

    ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಗ್ರಾಮಸ್ಥರು ಹಾಗೂ ಅಗ್ನಿ ಶಾಮಕ ಸಿಬ್ಬಂದಿ ಸುಟ್ಟ ವಸ್ತುಗಳನ್ನು ಮನೆಯಿಂದ ಹೊರತಂದಿದ್ದಾರೆ.