Tag: fire fly kannada film

  • ‘ಫೈರ್ ಫ್ಲೈ’ ತಂಡದಿಂದ ಹೊಸ ಸುದ್ದಿ- ಶಿವಣ್ಣನ ಪುತ್ರಿ ಜೊತೆ ಕೈಜೋಡಿಸಿದ ಅಚ್ಯುತ್ ಕುಮಾರ್

    ‘ಫೈರ್ ಫ್ಲೈ’ ತಂಡದಿಂದ ಹೊಸ ಸುದ್ದಿ- ಶಿವಣ್ಣನ ಪುತ್ರಿ ಜೊತೆ ಕೈಜೋಡಿಸಿದ ಅಚ್ಯುತ್ ಕುಮಾರ್

    ‘ಫೈರ್ ಫ್ಲೈ’ (Fire Fly Kannada Film) ಸಿನಿಮಾ ತಾರಾಬಳಗದ ಮೂಲಕವೇ ಸದ್ದು ಸುದ್ದಿಯಾಗುತ್ತಿದೆ. ಕಳೆದ ವಾರವಷ್ಟೇ ಸುಧಾರಾಣಿ ಚಿತ್ರತಂಡ ಸೇರಿಕೊಂಡಿದ್ದರು. ಇದೀಗ ಹಿರಿಯ ನಟ ಅಚ್ಯುತ್ ಕುಮಾರ್ (Achyuth Kumar) ‘ಫೈರ್ ಫ್ಲೈ’ನಲ್ಲಿ ಅಭಿನಯಿಸುತ್ತಿರುವ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ಅಚ್ಯುತ್ ಕುಮಾರ್ ಇಲ್ಲಿ ನಾಯಕನ ತಂದೆ ಪಾತ್ರ ನಿಭಾಯಿಸಲಿದ್ದಾರೆ. ಅವರಿಗೆ ಜೋಡಿಯಾಗಿ ಸುಧಾರಾಣಿ ಸಾಥ್ ಕೊಡುತ್ತಿದ್ದಾರೆ. ಇದನ್ನೂ ಓದಿ:ಪ್ರಜ್ವಲ್ ದೇವರಾಜ್ ನಟನೆಯ ‘ಮಾಫಿಯಾ’ ಚಿತ್ರದ ಟೀಸರ್ ಔಟ್

    ತಮ್ಮ ಪಾತ್ರದ ಬಗ್ಗೆ ಮಾತನಾಡಿದ ಅಚ್ಯುತ್ ಕುಮಾರ್, ನಾನು ಹೀರೋ ತಂದೆಯ ಪಾತ್ರ ಮಾಡುತ್ತಿದ್ದೇನೆ. ಪಾತ್ರ ತುಂಬಾ ಇಂಟ್ರೆಸ್ಟಿಂಗ್ ಆಗಿದೆ. ಒಬ್ಬ ತಂದೆ ಮಗನ ಬಾಂಧವ್ಯ ಮತ್ತು ಅವರಿಬ್ಬರು ಫ್ರೆಂಡ್ಸ್ ಆಗಿದ್ರೆ ಹೇಗೆ ಮಜವಾಗಿರುತ್ತೆ ಅಂತ ಈ ಸಿನೆಮಾದಲ್ಲಿ ನೋಡಬಹುದು. ನನ್ನ ಕೋಸ್ಟಾರ್ ಆಗಿ ಸುಧಾರಾಣಿಯವರು ನಟಿಸುತ್ತಿದ್ದಾರೆ. ಮುಂಚೆ ನಾವು ಬೇರೆ ಸಿನಿಮಾಗಳಲ್ಲಿ ನಮ್ಮ ಜೋಡಿಯನ್ನು ನೋಡಿ ಜನ ಮೆಚ್ಚಿದ್ದರು. ಆದರೆ ಈ ಸಿನಿಮಾದಲ್ಲಿ ನಮ್ಮಿಬ್ಬರ ಜೋಡಿ ಹಿಂದಿನ ಸಿನಿಮಾಗಳಿಗಿಂತ ವಿಭಿನ್ನವಾಗಿರುತ್ತದೆ. ಅದನ್ನು ನೀವು ಸ್ಕ್ರೀನ್ ಮೇಲೆ ನೋಡಬೇಕು. ‘ಫೈರ್ ಫ್ಲೈ’ ತುಂಬಾ ಕಲರ್ ಫುಲ್ ಆಗಿ ಮೂಡಿ ಬಂದಿದೆ ಮತ್ತು ತುಂಬಾ ಮನರಂಜನೆಯಿಂದ ಕೂಡಿದೆ ಎಂದಿದ್ದಾರೆ.

    ನಮ್ಮ ಶಿವಣ್ಣನ ಮಗಳು ನಿವೇದಿತಾ (Niveditha) ಸಿನಿಮಾ ಮಾಡುತ್ತಿರುವುದು ತುಂಬಾ ಖುಷಿಯಾಗುತ್ತಿದೆ. ಶ್ರೀಮುತ್ತು ಸಿನಿ ಸರ್ವಿಸ್ ನಡಿ ತುಂಬಾ ಪ್ರೊಪೆಷನಲ್ ಆಗಿ ಮುನ್ನೆಡೆಯುತ್ತಿರುವುದು ನೋಡಿದ್ರೆ ಇಂತಹದೊಂದು ನಿರ್ಮಾಣ ಸಂಸ್ಥೆ ಮತ್ತು ನಿರ್ಮಾಪಕಿ ನಮ್ಮ ಚಿತ್ರರಂಗಕ್ಕೆ ಬೇಕಿತ್ತು ಮತ್ತು ಹೊಸಬರಿಗೆ ಅವಕಾಶ ಕೊಡುತ್ತಿರುವುದರಿಂದ ಹೊಸ ತಲೆಮಾರಿನ ಫಿಲ್ಮಂಮೇಕರ್‌ಗೆ ಅನುಕೂಲವಾಗುತ್ತದೆ. ಇವರು ಆಯ್ಕೆ ಮಾಡಿಕೊಂಡಿರುವ ಕಥೆ ಕುಟುಂಬ ಕೂತು ನೋಡಬಹುದು. ಮತ್ತೆ ಮತ್ತೆ ಈ ತರ ಹೊಸಬರಿಗೆ ಅವಕಾಶ ಕೊಟ್ಟಿ ನಮ್ಮ ಇಂಡಸ್ಟಿç ಮುಂದಿನ ಹೆಜ್ಜೆಗಳಿಗೆ ಇವರ ನಿರ್ಮಾಣ ಸಂಸ್ಥೆ ಮೆಟ್ಟಿಲುಗಳಾಗಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.

    ‘ಫೈರ್ ಫ್ಲೈ’ ಸಿನಿಮಾದಲ್ಲಿ ವಂಶಿ ಅವರು ಹೀರೋ ಆಗಿ ಅಭಿನಯಿಸುತ್ತಿದ್ದಾರೆ. ಅಲ್ಲದೇ, ಅವರೇ ನಿರ್ದೇಶನ ಕೂಡ ಮಾಡುತ್ತಿದ್ದಾರೆ. ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ (Actor Shivarajkumar) ಅವರ ಪುತ್ರಿ ನಿವೇದಿತಾ ಅವರು ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಈ ಚಿತ್ರದ ಮೂಲಕ ವಂಶಿ ಅವರು ಸ್ವತಂತ್ರ ನಿರ್ದೇಶಕರಾಗಿ ಹಾಗೂ ಪೂರ್ಣಪ್ರಮಾಣದ ಹೀರೋ ಆಗಿ ಪ್ರೇಕ್ಷಕರರ ಮುಂದೆ ಬರಲಿದ್ದಾರೆ.

    ‘ಫೈರ್ ಫ್ಲೈ’ ಸಿನಿಮಾಗೆ ಪಾತ್ರವರ್ಗದ ಮೂಲಕ ಗಮನ ಸೆಳೆಯುತ್ತಿದೆ. ಇತ್ತೀಚೆಗೆ ನಟಿ ಶೀತಲ್ ಶೆಟ್ಟಿ, ನಟ ಮೂಗು ಸುರೇಶ್ , ಸುಧಾರಾಣಿ ಈ ಸಿನಿಮಾಗೆ ಸೇರ್ಪಡೆ ಆಗಿದ್ದರು. ಈಗ ಸುಧಾರಾಣಿ (Sudharani) ಅಚ್ಯುತ್ ಕುಮಾರ್ ಎಂಟ್ರಿ ಕೊಟ್ಟಿದ್ದಾರೆ. ಜಯ್ ರಾಮ್ ಅವರು ಸಹ-ನಿರ್ದೇಶಕನ ಮಾಡುತ್ತಿದ್ದಾರೆ. ಅಭಿಲಾಷ್ ಕಳತ್ತಿ ಅವರ ಛಾಯಾಗ್ರಹಣ, ಚರಣ್ ರಾಜ್ ಅವರ ಸಂಗೀತ ನಿರ್ದೇಶನ, ರಘು ನಿಡುವಳ್ಳಿ ಅವರ ಸಂಭಾಷಣೆ ಈ ಸಿನಿಮಾಗಿದೆ.

  • ಬೆಳಕಿನ ಹಬ್ಬಕ್ಕೆ ‘ಫೈರ್ ಫ್ಲೈ’ ದರ್ಶನ- ಇದು ಶಿವಣ್ಣ ಪುತ್ರಿ ಹೊಸ ಪ್ರಯತ್ನ

    ಬೆಳಕಿನ ಹಬ್ಬಕ್ಕೆ ‘ಫೈರ್ ಫ್ಲೈ’ ದರ್ಶನ- ಇದು ಶಿವಣ್ಣ ಪುತ್ರಿ ಹೊಸ ಪ್ರಯತ್ನ

    ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ (Shivarajkumar) ಅವರ ಪುತ್ರಿ ನಿವೇದಿತಾ ಶಿವರಾಜ್‌ಕುಮಾರ್‌ ನಿರ್ಮಾಣದ ಚೊಚ್ಚಲ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ನಿವೇದಿತಾ ಒಡೆತನದ ‘ಶ್ರೀ ಮುತ್ತು ಸಿನಿ ಸರ್ವೀಸಸ್’ ಬ್ಯಾನರ್ ಮೂಲಕ ಮೂಡಿಬಂದಿರುವ ‘ಫೈರ್ ಫ್ಲೈ’ (Fire Fly)  ಬೆಳಕಿನ ಹಬ್ಬ ದೀಪಾವಳಿಗೆ ದರ್ಶನ ಕೊಡಲಿದೆ. ಈ ಬಗ್ಗೆ ಶಿವಣ್ಣನ ನಾಗವಾರ ನಿವಾಸದಲ್ಲಿ ಚಿತ್ರತಂಡ ಸುದ್ದಿಗೋಷ್ಠಿ ಆಯೋಜಿಸಿತ್ತು. ಈ ವೇಳೆ, ಮಗಳ ಹೊಸ ಪ್ರಯತ್ನಕ್ಕೆ ಜೊತೆಯಾಗಿ ಶಿವಣ್ಣ ದಂಪತಿ ಸಾಥ್ ಕೊಟ್ಟರು.

    ಬಳಿಕ ಮಾತನಾಡಿದ ನಿರ್ಮಾಪಕಿ ನಿವೇದಿತಾ ಶಿವರಾಜ್‌ಕುಮಾರ್ (Niveditha Shivarajkumar) ಮಾತನಾಡಿ, ವೆಬ್ ಸೀರಿಸ್ ಮಾಡಿದ ಮೇಲೆ ಸಿನಿಮಾ ಮಾಡಬೇಕು ಅಂತಾ ತುಂಬಾ ಆಸಕ್ತಿ ಇತ್ತು. ವಂಶಿ ಅವರು ಕಥೆ ಹೇಳಿದಾಗ ನನಗೆ ತುಂಬಾ ಇಷ್ಟವಾಯಿತು. ಒಳ್ಳೆಯ ಟೆಕ್ನಿಕಲ್ ಟೀಂ ತೆಗೆದುಕೊಂಡು ಮಾಡಬೇಕು ಎಂದು ಚಿತ್ರ ಮಾಡಿದ್ದೆವೆ. ಕಥೆ ತುಂಬಾ ಸರಳವಾಗಿದ್ದರೂ, ಅವರು ಕಥೆ ಹೇಳಿದ ರೀತಿ ತುಂಬಾ ಇಷ್ಟವಾಯ್ತು. ಹೊಸ ಪ್ರಯೋಗ ಮಾಡಿದ್ದೇನೆ. ಕೊನೆಯ ಹಂತದ ಚಿತ್ರೀಕರಣ ಶುರು ಮಾಡುತ್ತಿದ್ದೇವೆ. ದೀಪಾವಳಿ ಸಿನಿಮಾ ಬಿಡುಗಡೆಯಾಗಲಿದೆ ಎಂದರು. ಇದನ್ನೂ ಓದಿ:ಉತ್ತರ ಕರ್ನಾಟಕದ ನಾನಾ ಸ್ಥಳಗಳಿಗೆ ಇಂದು ಶಿವರಾಜ್ ಕುಮಾರ್ ಭೇಟಿ

    ನಟ ಕಮ್ ನಿರ್ದೇಶಕ ವಂಶಿ ಮಾತನಾಡಿ, ಎಲ್ಲರ ಜೀವನದಲ್ಲಿಯೂ ಒಂದು ಪಾಯಿಂಟ್ ಇರುತ್ತದೆ. ನಾವು ಡೆಂಡ್ ಎಂಡ್ ಅಂದುಕೊಂಡಿರುತ್ತೇವೆ. ಒಂದು ಹೋಪ್ ಹಾಗೂ ಮೊಟಿವೇಷನ್‌ಗೆ ಕಾಯುತ್ತಾ ಇರುತ್ತೇವೆ. ಆ ಟೈಮ್‌ನಲ್ಲಿ ಹೋಪ್ ಎಂಬ ಬೆಳಕು ಎಲ್ಲಿಂದಲೋ ಬರಲ್ಲ ನಮ್ಮಿಂದಲೇ ಬರಬೇಕು ಎಂಬುದೇ ಫೈರ್ ಫ್ಲೈ. ಅದಕ್ಕೆ ಈ ಟೈಟಲ್ ಇಟ್ಟಿದ್ದೇವೆ. ನಿವೇದಿತಾ ಮೇಡಂಗೆ ಧನ್ಯವಾದ. ಇದಕ್ಕಿಂತ ಮೊದಲು ಎರಡು ಮೂರು ಕಥೆ ಚರ್ಚೆ ಮಾಡಿದ್ದೇವು. ಆದರೆ ಅವರು ರಿಜೆಕ್ಟ್ ಮಾಡಿದರು. ಈ ಕಥೆ ಒಪ್ಪಿಕೊಂಡಿದ್ದಕ್ಕೆ ನನಗೆ ಖುಷಿಯಾಯ್ತು. ಯಾಕೆಂದರೆ ನನ್ನಲ್ಲಿ ಕೆಲ ಬದಲಾವಣೆ ಆಯ್ತು. ಟೆಕ್ನಿಕಲ್ ಸ್ಟ್ರಾಂಗ್ ಹಾಗೂ ಸಿಂಪಲ್ ಸಿನಿಮಾದೊಂದಿಗೆ ಬರುತ್ತಿದ್ದೇವೆ. ಇದೇ ದೀಪಾವಳಿಗೆ ಚಿತ್ರ ಬರುತ್ತಿದೆ. ಇಡೀ ಸಿನಿಮಾದಲ್ಲಿ ನಾನು ಒಬ್ಬನೇ ಹೊಸಬ. ಆದರೆ ಆ ರೀತಿ ಫೀಲ್ ನನಗೆ ಬಂದೇ ಇಲ್ಲ. ಇಷ್ಟು ಜನ ಸಿಕ್ಕಿದ್ದು, ಶ್ರೀಮುತ್ತು ಸಿನಿ ಸರ್ವೀಸ್‌ನಿಂದ. ನಾನು ಬೇರೆ ನಿರ್ಮಾಪಕರ ಜೊತೆ ಕೈ ಜೋಡಿಸಿದ್ದರೇ ಡೇಟ್ಸ್ ಕೂಡ ಸಿಕ್ಕುತ್ತಿರಲಿಲ್ಲ ಎಂದರು.

    ಫೈರ್ ಫ್ಲೈ ಚಿತ್ರದಲ್ಲಿ ವಂಶಿ ಹೀರೋ ಆಗಿ ನಟಿಸುತ್ತಿದ್ದಾರೆ. ನಿರ್ದೇಶನದ ಜವಾಬ್ದಾರಿ ಕೂಡ ಅವರದ್ದೇ ಎಂಬುದು ವಿಶೇಷ. ಪುನೀತ್ ರಾಜ್‌ಕುಮಾರ್ ಅವರ ‘ಪಿಆರ್‌ಕೆ ಪ್ರೊಡಕ್ಷನ್ಸ್’ ನಿರ್ಮಾಣದ ‘ಮಯಾಬಜಾರ್’ ಸಿನಿಮಾದಲ್ಲಿ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ್ದ, ‘ಪೆಂಟಗನ್’ ಚಿತ್ರದಲ್ಲೂ ಪ್ರಮುಖ ಪಾತ್ರವೊಂದರಲ್ಲಿ ಅವರು ನಟಿಸಿದ್ದರು. ಈಗ ನಿವೇದಿತಾ ನಿರ್ಮಾಣ ಮಾಡುತ್ತಿರುವ ಮೊದಲ ಚಿತ್ರಕ್ಕೆ ನಿರ್ದೇಶನ ಮಾಡುವ ಮೂಲಕ ವಂಶಿ ಅವರು ಸ್ವತಂತ್ರ ನಿರ್ದೇಶಕರಾಗಿ ಮತ್ತು ಪೂರ್ಣಪ್ರಮಾಣದ ಹೀರೋ ಆಗಿ ಚಿತ್ರರಂಗದಲ್ಲಿ ಹೊಸ ಅಧ್ಯಾಯ ಶುರು ಮಾಡಿದ್ದಾರೆ.

    ಶಿವರಾಜ್‌ಕುಮಾರ್ ಅವರು ಯಾವಾಗಲೂ ಹೊಸ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ. ಅವರ ರೀತಿಯೇ ನಿವೇದಿತಾ ಶಿವರಾಜ್‌ಕುಮಾರ್ ಕೂಡ ಹೊಸಬರಿಗೆ ವೇದಿಕೆ ಒದಗಿಸಿಕೊಡುತ್ತಿದ್ದಾರೆ. ‘ಶ್ರೀ ಮುತ್ತು ಸಿನಿ ಸರ್ವೀಸಸ್’ ಸಂಸ್ಥೆಯು ಅವರ ಕನಸಿನ ಕೂಸು. ಯುವ ಪ್ರತಿಭೆಗಳಿಗೆ ಹಾಗೂ ಹೊಸ ಆಲೋಚನೆಗಳಿಗೆ ಅವಕಾಶ ನೀಡುವ ಉದ್ದೇಶದಿಂದ ಈ ಸಂಸ್ಥೆ ಕಾರ್ಯಪ್ರವೃತ್ತವಾಗಿದೆ. ಶಿವರಾಜ್‌ಕುಮಾರ್ ಚಿತ್ರಕ್ಕೆ ಜಯ್ ರಾಮ್ ಸಹ-ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ. ಅಭಿಲಾಷ್ ಕಳತ್ತಿ ಛಾಯಾಗ್ರಹಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಚರಣ್ ರಾಜ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ರಘು ನಿಡುವಳ್ಳಿ ಅವರು ಸಂಭಾಷಣೆಯ ಬರೆದಿದ್ದಾರೆ.