Tag: Fire tragedy

  • ಬೆಂಗ್ಳೂರಲ್ಲಿ ಮತ್ತೊಂದು ಅಗ್ನಿ ದುರಂತ – 30 ಲಕ್ಷಕ್ಕೂ ಅಧಿಕ ಮೌಲ್ಯ ವಸ್ತುಗಳು ಬೆಂಕಿಗಾಹುತಿ

    ಬೆಂಗ್ಳೂರಲ್ಲಿ ಮತ್ತೊಂದು ಅಗ್ನಿ ದುರಂತ – 30 ಲಕ್ಷಕ್ಕೂ ಅಧಿಕ ಮೌಲ್ಯ ವಸ್ತುಗಳು ಬೆಂಕಿಗಾಹುತಿ

    ಬೆಂಗಳೂರು: ನಗರದಲ್ಲಿ ಮತ್ತೊಂದು ಅಗ್ನಿ ದುರಂತ (Fire Tragedy) ಸಂಭವಿಸಿದ್ದು, ಬರೋಬ್ಬರಿ 30 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ.

    ನಗರದ ಬಳೆಪೇಟೆಯ ಪೇಯಿಂಟ್ ಶಾಪ್‌ನಲ್ಲಿ (Paint Shop) ಬೆಂಕಿ ಕಾಣಿಸಿಕೊಂಡಿದ್ದು, ಎರಡು ಅಂತಸ್ಥಿನ ಕಟ್ಟದ ಹೊತ್ತಿ ಉರಿದಿದೆ. ಅಪಾರ ಪ್ರಮಾಣದ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು, ಅಂಗಡಿ ಕಳೆದುಕೊಂಡ ಕುಟುಂಬ ಕಣ್ಣೀರಿಟ್ಟಿದೆ. ಇದನ್ನೂ ಓದಿ: ದೆಹಲಿಯ ಕರ್ತವ್ಯ ಪಥದಲ್ಲಿ NCC ಪಥಸಂಚಲನದ ನೇತೃತ್ವ ವಹಿಸಿದ ಕೊಡಗಿನ ಪುಣ್ಯಾ ಪೊನ್ನಮ್ಮ

    ಬಳೆಪೇಟೆಯ ಪೇಯಿಂಟ್ ಶಾಪ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಕೆಲ ಕ್ಷಣಗಳಲ್ಲೇ ಎರಡು ಅಂತಸ್ಥಿಗೆ ವ್ಯಾಪಿಸಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಮಾಲೀಕ ಕೃಷ್ಣಮೂರ್ತಿ ಕುಟುಂಬ, ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. 20 ವರ್ಷಗಳಷ್ಟು ಹಳೆಯ ಬಿಲ್ಡಿಂಗ್‌ನಲ್ಲಿ ಇದೇ ಮೊದಲಬಾರಿಗೆ ಅಗ್ನಿ ಅನಾಹುತ ಸಂಭವಿಸಿದೆ ಎಂದು ಸಹ ಕೃಷ್ಣಮೂರ್ತಿ ತಿಳಿಸಿದ್ದಾರೆ.

    ಇನ್ನೂ ಬೆಂಕಿ ನಂದಿಸುವ ಕಾರ್ಯಾಚರಣೆ ವೇಳೆ ಕಟ್ಟಡದ ಒಳಗೆ ಪ್ರವೇಶಿಸಿ ಅಲ್ಲಿಯೇ ಸಿಲುಕಿದ್ದ ಯುವಕನನ್ನು ಅಗ್ನಿ ಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಸತತ ನಾಲ್ಕು ಗಂಟೆಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿದ ಸಿಬ್ಬಂದಿ, ಜೆಸಿಬಿ ಬಳಸಿ ಕಟ್ಟಡದ ಶಟರ್ ಮುರಿದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಘಟನೆಗೆ ನಿಖರ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: 75th Republic Day: M-29 ಯುದ್ಧ ವಿಮಾನ ಹಾರಾಟ ನಡೆಸಿ ಮಿಂಚಿದ ಕೊಡಗಿನ ಪುಣ್ಯಾ ನಂಜಪ್ಪ

  • ಭೀಕರ ಅಗ್ನಿ ದುರಂತ: 25ಕ್ಕೂ ಹೆಚ್ಚು ಮನೆಗಳು, 25ಕ್ಕೂ ಹೆಚ್ಚು ಬಣವೆ, 14 ಜಾನುವಾರುಗಳು ಭಸ್ಮ

    ಭೀಕರ ಅಗ್ನಿ ದುರಂತ: 25ಕ್ಕೂ ಹೆಚ್ಚು ಮನೆಗಳು, 25ಕ್ಕೂ ಹೆಚ್ಚು ಬಣವೆ, 14 ಜಾನುವಾರುಗಳು ಭಸ್ಮ

    ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 25ಕ್ಕೂ ಹೆಚ್ಚು ಮನೆಗಳು, 25ಕ್ಕೂ ಹೆಚ್ಚು ಮೇವಿನ ಬಣವೆ, 14 ಜಾನುವಾರುಗಳು ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿವೆ.

    ಶನಿವಾರ ಸಂಜೆ ಸುಮಾರು 4.30ರ ವೇಳೆಗೆ ಗ್ರಾಮದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮೊದಲು ಊರ ಹೊರಗಡೆ ಬೆಂಕಿ ಕಾಣಿಸಿಕೊಂಡಿತ್ತು. ನಂತರ ಬೆಂಕಿಯ ಕೆನ್ನಾಲಿಗೆ ಗ್ರಾಮಕ್ಕೂ ಸಹ ಆವರಿಸಿ ಶೇ.70 ರಷ್ಟು ಗ್ರಾಮ ಬೆಂಕಿಗಾಹುತಿಯಾಗಿದೆ. ಮನೆಗಳಿಗೆ ಬೆಂಕಿ ಬಿದ್ದಿದ್ದರಿಂದ 25ಕ್ಕೂ ಹೆಚ್ಚು ಕುಟುಂಬಗಳು ಬೀದಿಪಾಲಾಗಿವೆ.

    ಬೆಳಗಾವಿ, ಧಾರವಾಡ, ಬಾಗಲಕೋಟೆ ಜಿಲ್ಲೆಗಳಿಂದ ಆಗಮಿಸಿರುವ 10ಕ್ಕೂ ಹೆಚ್ಚು ಅಗ್ನಿ ಶಾಮಕದಳದ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯುತ್ತಿದೆ. ಆದರೂ ಬೆಂಕಿ ಹತೋಟಿಗೆ ಬರುತ್ತಿಲ್ಲ. ಬೆಂಕಿ ನಂದಿಸುವ ಕಾರ್ಯ ಭರದಿಂದ ಸಾಗಿದೆ.

    ಶನಿವಾರ ರಾತ್ರಿ ಮನೆಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಗ್ರಾಮಸ್ಥರು ಹೊರಬಂದು ರಸ್ತೆಬದಿಯಲ್ಲಿ ಕುಳಿತಿದ್ದರು. ಸದ್ಯ ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ಈ ಕುಟುಂಬಗಳಿಗೆ ತಾತ್ಕಾಲಿಕ ಊಟ, ವಸತಿ ವ್ಯವಸ್ಥೆ ಮಾಡಲಾಗಿದೆ.

    https://youtu.be/p6_BxagEP_g