Tag: firecracker factory

  • ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ – 6 ಮಂದಿ ಸಜೀವ ದಹನ

    ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ – 6 ಮಂದಿ ಸಜೀವ ದಹನ

    ಅಮರಾವತಿ: ಪಟಾಕಿ ತಯಾರಿಕಾ ಘಟಕದಲ್ಲಿ (Firecracker factory) ಭೀಕರ ಸ್ಫೋಟ ಸಂಭವಿಸಿ, 6 ಮಂದಿ ಸಜೀವ ದಹನವಾಗಿರುವ ಘಟನೆ ಆಂಧ್ರಪ್ರದೇಶದ (Andhra Pradesh) ಅಂಬೇಡ್ಕರ್ ಕೊನಸೀಮಾ (Konaseema) ಜಿಲ್ಲೆಯಲ್ಲಿ ಸಂಭವಿಸಿದೆ.

    ರಾಯವರಂ ಮಂಡಲದ ರಾಯವರಂ ಲಕ್ಷ್ಮಿ ಗಣಪತಿ ಪಟಾಕಿ ತಯಾರಿಕಾ ಕೇಂದ್ರದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಪಟಾಕಿ ತಯಾರಿಸುತ್ತಿದ್ದಾಗ ಅವಘಡ ಸಂಭವಿಸಿದೆ. ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇದನ್ನೂ ಓದಿ: ದಾವಣಗೆರೆ | ಮನೆಯಲ್ಲಿ ಬಾಯ್ಲರ್ ಸ್ಫೋಟ – 11ರ ಬಾಲಕಿ ಸಾವು, ಮೂವರಿಗೆ ಗಂಭೀರ

    ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ, ಬೆಂಕಿ ನಂದಿಸುವ ಕಾರ್ಯವನ್ನು ಆರಂಭಿಸಿದ್ದಾರೆ. ಮೃತರು ಮತ್ತು ಗಾಯಗೊಂಡವರನ್ನು ಕಾರ್ಖಾನೆಯಲ್ಲಿ ಕೆಲಸ ಮಾಡುವ ಕಾರ್ಮಿಕರು ಎಂದು ಗುರುತಿಸಲಾಗಿದೆ ಎಂದು ಜಿಲ್ಲಾ ಡಿಎಸ್ಪಿ ರಾಹುಲ್ ಮೀನಾ ತಿಳಿಸಿದ್ದಾರೆ.

  • ಶಿವಕಾಶಿ | ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – ಮೂವರು ಸಾವು

    ಶಿವಕಾಶಿ | ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – ಮೂವರು ಸಾವು

    ಚೆನ್ನೈ: ಪಟಾಕಿ ಕಾರ್ಖಾನೆಯಲ್ಲಿ (Firecracker factory) ಸೋಮವಾರ ಸಂಭವಿಸಿದ ಸ್ಫೋಟದಲ್ಲಿ ಮೂವರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ತಮಿಳುನಾಡಿನ ವಿರುಧ್‌ನಗರ ಜಿಲ್ಲೆಯ ಶಿವಕಾಶಿ (Sivakasi) ಬಳಿಯ ನಾರಣಾಪುರಂದಲ್ಲಿ (Naranapuram) ನಡೆದಿದೆ.

    ಮರಿಯಮ್ಮಲ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ಮೂವರು ಮೃತಪಟ್ಟಿದ್ದಾರೆ. ಮೂವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಬಾಂಗ್ಲಾದೇಶದ ವಾಯುಪಡೆಯ ತರಬೇತಿ ವಿಮಾನ ದುರಂತ – ಪೈಲಟ್ ಸೇರಿ 16 ಜನ ಸಾವು

    ಈ ಸಂದರ್ಭ ದೊಡ್ಡ ಮಟ್ಟದ ಸ್ಫೋಟದ ಶಬ್ದ ಕೇಳಿ ಬಂತು. ಗಾಬರಿಯಲ್ಲಿ ಮನೆಯಿಂದ ಹೊರಗೆ ಬಂದಾಗ ಪಟಾಕಿ ಅಂಗಡಿ ಸ್ಫೋಟಗೊಂಡಿರುವುದು ಗೋಚರಿಸಿದೆ ಎಂದು ಸ್ಥಳೀಯರು ವಿವರಿಸಿದ್ದಾರೆ. ಘಟನಾ ರಕ್ಷಣಾ ತಂಡಗಳು ಮತ್ತು ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ, ಬೆಂಕಿ ನಂದಿಸುವ ಕಾರ್ಯ ಮಾಡುತ್ತಿದೆ. ಸ್ಫೋಟದ ನಿಖರ ಕಾರಣ ತಿಳಿದುಬಂದಿಲ್ಲ.

  • ಪಂಜಾಬ್‌ನಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ – ಐವರು ಸಾವು, 25 ಮಂದಿಗೆ ಗಾಯ

    ಪಂಜಾಬ್‌ನಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ – ಐವರು ಸಾವು, 25 ಮಂದಿಗೆ ಗಾಯ

    ಚಂಡೀಗಢ: ಪಂಜಾಬ್‌ನ (Punjab) ಶ್ರೀ ಮುಕ್ತಸರ್ ಸಾಹಿಬ್‌ನಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ (Firecracker Factory) ಶುಕ್ರವಾರ ಬೆಳ್ಳಂಬೆಳಗ್ಗೆ ಭಾರೀ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಕನಿಷ್ಠ ಐವರು ಸಾವನ್ನಪ್ಪಿದ್ದು, ಸುಮಾರು 25 ಜನರು ಗಾಯಗೊಂಡಿದ್ದಾರೆ.

    ಸ್ಫೋಟದ ತೀವ್ರತೆಗೆ ಎರಡು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದೆ. ಹೀಗಾಗಿ ಸ್ಥಳದಲ್ಲಿ ಹಲವು ಕಾರ್ಮಿಕರು (Labourers) ಕಟ್ಟಡದ ಅವಶೇಷಗಳ ಅಡಿಯಲ್ಲೇ ಸಿಲುಕಿಕೊಂಡಿದ್ದಾರೆ. ಅವರನ್ನು ರಕ್ಷಿಸುವ ಕಾರ್ಯಾಚರಣೆ ನಡೆಯುತ್ತಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ‘ಇದು ಅಭಿಮಾನಿ ದೇವ್ರುಗಳಿಗೆ’: ಅಣ್ಣಾವ್ರ ಸ್ಟೈಲಲ್ಲಿ ಕೈಮುಗಿದ ಕೊಹ್ಲಿ – ಆರ್‌ಸಿಬಿ ಫ್ಯಾನ್ಸ್‌ ಥ್ರಿಲ್‌

    ಶ್ರೀ ಮುಕ್ತಸರ್ ಸಾಹಿಬ್‌ನ ಸಿಂಘಾವಲಿ-ಕೋಟ್ಲಿ ರಸ್ತೆಯಲ್ಲಿರುವ 2 ಅಂತಸ್ತಿನ ಪಟಾಕಿ ಕಾರ್ಖಾನೆ ಘಟಕದಲ್ಲಿ ಸ್ಫೋಟ ಸಂಭವಿಸಿದೆ. ಆದ್ರೆ ಸ್ಫೋಟಕಕ್ಕೆ ಇನ್ನೂ ನಿಖರ ಕಾರಣ ತಿಳಿದುಬಂದಿಲ್ಲ ಎಂದು ಲಂಬಿಯ ಉಪ ಪೊಲೀಸ್ ವರಿಷ್ಠಾಧಿಕಾರಿ ಜಸ್ಪಾಲ್ ಸಿಂಗ್ ಹೇಳಿದ್ದಾರೆ.

    ಸದ್ಯ ಸ್ಥಳೀಯ ಪೊಲೀಸರು ಸೇರಿದಂತೆ ರಕ್ಷಣಾ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು ರಕ್ಷಣಾ ಕಾರ್ಯ ನಡೆಯುತ್ತಿದೆ. ಗಾಯಗೊಂಡವರನ್ನ ಬಟಿಂಡಾದ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್)ಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಇದನ್ನೂ ಓದಿ:  ಬೇಹುಗಾರಿಕೆಗಾಗಿ ಭಾರತೀಯ ಮೊಬೈಲ್‌ ಸಿಮ್‌ ಕಾರ್ಡ್‌ ಪೂರೈಸುತ್ತಿದ್ದ ಪಾಕ್‌ ಸ್ಪೈ ಅರೆಸ್ಟ್‌

  • ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 6 ಶವ ಪತ್ತೆ, ಹಲವರು ಸಾವು ಶಂಕೆ

    ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 6 ಶವ ಪತ್ತೆ, ಹಲವರು ಸಾವು ಶಂಕೆ

    ತಮಿಳುನಾಡು: ತಮಿಳುನಾಡಿನ (TamilNadu) ವಿರುದುನಗರ ಜಿಲ್ಲೆಯ ಸತ್ತೂರು ಪ್ರದೇಶದಲ್ಲಿ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ (Firecracker Factory) ಸ್ಫೋಟ (Explosion) ಸಂಭವಿಸಿದೆ. ಇದುವರೆಗೆ 6 ಮೃತದೇಹಗಳು ಪತ್ತೆಯಾಗಿವೆ ಎಂದು ವರದಿಯಾಗಿದೆ.

    ಅಗ್ನಿಶಾಮಕ ಮತ್ತು ರಕ್ಷಣಾ ಇಲಾಖೆ ಸಿಬ್ಬಂದಿ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸ್ಫೋಟಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕಾರ್ಖಾನೆ ಪರವಾನಗಿ ಹೊಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ರಾಸಾಯನಿಕಗಳನ್ನು ಬೆರೆಸುವ ಪ್ರಕ್ರಿಯೆಯಲ್ಲಿ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

    ಮೇ 9 ರಂದು ತಮಿಳುನಾಡಿನ ಶಿವಕಾಶಿ ಬಳಿಯ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ್ದ ಭಾರೀ ಸ್ಫೋಟದಲ್ಲಿ 8 ಮಂದಿ ಸಾವನ್ನಪ್ಪಿದ್ದರು.

  • ಹಾವೇರಿಯಲ್ಲಿ ಪಟಾಕಿ ಗೋದಾಮಿಗೆ ಬೆಂಕಿ ಪ್ರಕರಣ – ಮೂವರು ಕಾರ್ಮಿಕರು ಸಜೀವ ದಹನ

    ಹಾವೇರಿಯಲ್ಲಿ ಪಟಾಕಿ ಗೋದಾಮಿಗೆ ಬೆಂಕಿ ಪ್ರಕರಣ – ಮೂವರು ಕಾರ್ಮಿಕರು ಸಜೀವ ದಹನ

    ಹಾವೇರಿ: ಹಾವೇರಿ (Haveri) ಹೊರವಲಯದ ಆಲದಕಟ್ಟಿ ಗ್ರಾಮದ ಬಳಿ ಪಟಾಕಿ ಗೋದಾಮಿಗೆ (Firecracker Godown) ಬೆಂಕಿ ತಗುಲಿದ ಪರಿಣಾಮ ಮೂವರು ಕಾರ್ಮಿಕರು ಸಜೀವ ದಹನ ಆಗಿರುವ ದುರ್ಘಟನೆ ನಡೆದಿದೆ.

    ದ್ಯಾಮಪ್ಪ ಓಲೇಕಾರ, ರಮೇಶ್ ಬಾರ್ಕಿ ಹಾಗೂ ಶಿವಲಿಂಗ ಅಕ್ಕಿ ಎಂಬವರ ಮೃತದೇಹ ಪತ್ತೆಯಾಗಿದೆ. ಮೃತರು ತಾಲೂಕಿನ ಕಾಟೇನಹಳ್ಳಿ ಗ್ರಾಮದ ನಿವಾಸಿಗಳು ಎನ್ನಲಾಗಿದೆ. ಇವರು ಪಟಾಕಿ ಅಂಗಡಿಯಲ್ಲಿ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಇದನ್ನೂ ಓದಿ: ಪಟಾಕಿ ಸಂಗ್ರಹ ಘಟಕಕ್ಕೆ ಬೆಂಕಿ – 1.5 ಕೋಟಿ ರೂ. ಮೌಲ್ಯದ ಪಟಾಕಿ ಭಸ್ಮ

    ಗಣೇಶ ಹಬ್ಬದ ನಿಮಿತ್ತವಾಗಿ ಪಟಾಕಿ ಸಾಮಾಗ್ರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದಿದ್ದವು. ಹೀಗಾಗಿ ಮಾಲೀಕರು ಕೆಲಸಕ್ಕೆಂದು ಆಳುಗಳನ್ನು ಕರೆತಂದಿದ್ದರು. ಬೆಳಗ್ಗೆ 11 ಗಂಟೆಯಿಂದಲೇ ಕಾರ್ಯಾಚರಣೆ ನಡೆಯುತ್ತಿದೆ. ಈಗಾಗಲೆ 3 ಮೃತದೇಹಗಳನ್ನು ಶವಗಾರಕ್ಕೆ ಸಾಗಿಸಲಾಗಿದೆ. ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ.

    ಗಣೇಶನ ಹಬ್ಬಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆ, ಪ್ರತಿ ವರ್ಷದಂತೆ ಈ ವರ್ಷವೂ ಕೋಟ್ಯಂತರ ರೂಪಾಯಿ ಮೌಲ್ಯದ ಪಟಾಕಿ ತರಲಾಗಿತ್ತು. ಆದರೆ ಒಂದೇ ಒಂದು ಸಣ್ಣ ಬೆಂಕಿಯ ಕಿಡಿಯಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಇಡೀ ಗೋದಾಮು ಬೆಂಕಿಗೆ ಆಹುತಿ ಆಗಿದೆ. ಭೂಮಿಕಾ ಪಟಾಕಿ ಅಂಗಡಿಯ ಗೋದಾಮಿನಲ್ಲಿ ಸುಮಾರು 1.5 ಕೋಟಿ ರೂ. ಮೌಲ್ಯದ ಪಟಾಕಿ ಇದ್ದವು. ಹಾವೇರಿ ನಿವಾಸಿ ಕುಮಾರ ಸಾತೇನಹಳ್ಳಿ ಎಂಬವರಿಗೆ ಸೇರಿದ ಪಟಾಕಿ ಅಂಗಡಿಯಾಗಿದೆ. ಇದನ್ನೂ ಓದಿ: ಅಪಾರ್ಟ್ಮೆಂಟ್‌ನ 12ನೇ ಮಹಡಿಯಿಂದ ಬಿದ್ದು 10ನೇ ತರಗತಿ ವಿದ್ಯಾರ್ಥಿನಿ ಸಾವು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – 5 ಸಾವು, 13 ಮಂದಿಗೆ ಗಂಭೀರ ಗಾಯ

    ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – 5 ಸಾವು, 13 ಮಂದಿಗೆ ಗಂಭೀರ ಗಾಯ

    ಚೆನ್ನೈ: ಪಟಾಕಿ ಕಾರ್ಖಾನೆಯೊಂದರಲ್ಲಿ (Firecracker Factory) ಸ್ಫೋಟ (Explosion) ಉಂಟಾಗಿ ಭಾರೀ ಬೆಂಕಿಗೆ (Fire) ಐವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಇಂದು ತಮಿಳುನಾಡಿನ (Tamil Nadu) ಮಧುರೈ (Madurai) ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ 13 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

    ಮೂಲಗಳ ಪ್ರಕಾರ ಮಧುರೈ ಜಿಲ್ಲೆಯ ಉಸಿಲಂಪಟ್ಟಿ ಬಳಿಯ ಅಜುಗುಸಿರೈ ಗ್ರಾಮದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟದ ಸದ್ದು ಕೇಳಿದ ಸ್ಥಳೀಯರು ಘಟನಾ ಸ್ಥಳಕ್ಕೆ ದೌಡಾಯಿಸಿದ್ದಾರೆ. ಇದನ್ನೂ ಓದಿ: ಬಾಲಕನಿಗೆ ಬೈಕ್‌ ಓಡಿಸಲು ಕೊಟ್ಟ ತಂದೆಗೆ 25 ಸಾವಿರ ರೂ. ದಂಡ

    ಬಳಿಕ ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ 13 ಜನರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಅವುಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಇದನ್ನೂ ಓದಿ: ಮದ್ಯ ಕುಡಿದು ಮಲಗಿದ 24 ಕಾಡಾನೆಗಳು – ಎಬ್ಬಿಸಲು ಡೋಲು ಬಾರಿಸಿದ್ರು

    ಘಟನೆಯ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸ್ಫೋಟದ ಹಿಂದಿನ ಕಾರಣ ತಿಳಿಯಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – 7 ಕಾರ್ಮಿಕರು ಸಾವು

    ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – 7 ಕಾರ್ಮಿಕರು ಸಾವು

    ಶಿಮ್ಲಾ: ಹಿಮಾಚಲ ಪ್ರದೇಶದ ಉನಾದ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಿಂದಾಗಿ 7 ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಸ್ಫೋಟದಿಂದಾಗಿ 12 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

    ಸ್ಫೋಟದ ಪರಿಣಾಮ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದವರ ಪೈಕಿ 7 ಮಂದಿ ಮೃತಪಟ್ಟಿದ್ದಾರೆ. ಗಾಯಗೊಂಡವರನ್ನು ಉನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ಧಾವಿಸಿದ್ದಾರೆ. ಇದನ್ನೂ ಓದಿ: ಬಾಲಿವುಡ್ ನಟ ಸೋನು ಸೂದ್ ವಿರುದ್ಧ FIR ದಾಖಲು

    ಸ್ಫೋಟದಲ್ಲಿ ಮೃತಪಟ್ಟವರು ಮತ್ತು ಗಾಯಗೊಂಡವರು ವಲಸೆ ಕಾರ್ಮಿಕರು ಎಂದು ಉನಾ ಡೆಪ್ಯುಟಿ ಕಮಿಷನರ್‌ ರಾಘವ್‌ ಶರ್ಮ ಅವರು ತಿಳಿಸಿದ್ದಾರೆ.

    ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರವನ್ನು ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಘೋಷಿಸಲಾಗಿದೆ. ಗಾಯಗೊಂಡವರಿಗೆ ತಲಾ 50,000 ಪರಿಹಾರ ಘೋಷಿಸಲಾಗಿದೆ. ಇದನ್ನೂ ಓದಿ: ಮದುವೆ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ಕಂದಕಕ್ಕೆ ಬಿದ್ದ ವಾಹನ – 14 ಮಂದಿ ದುರ್ಮರಣ

  • ಅಕ್ರಮ ಪಟಾಕಿ ಕಾರ್ಖಾನೆ ಸ್ಫೋಟ-5 ಸಾವು, 25 ಜನರಿಗೆ ತೀವ್ರ ಗಾಯ

    ಅಕ್ರಮ ಪಟಾಕಿ ಕಾರ್ಖಾನೆ ಸ್ಫೋಟ-5 ಸಾವು, 25 ಜನರಿಗೆ ತೀವ್ರ ಗಾಯ

    ಪಾಟ್ನಾ: ಅಕ್ರಮ ಪಟಾಕಿ ಕಾರ್ಖಾನೆ ಸ್ಫೋಟಗೊಂಡು ಐದು ಜನ ಸಾವನ್ನಪ್ಪಿ, 25 ಜನರಿಗೆ ಗಂಭೀರ ಸ್ವರೂಪದ ಗಾಯಗಳಾಗಿರುವ ಘಟನೆ ಬಿಹಾರ ರಾಜ್ಯದ ನಳಂದ ಜಿಲ್ಲೆಯ ಜಲಾಲ್ಪುರ ಭಾಗದಲ್ಲಿ ಇಂದು ಬೆಳಗಿನ ಜಾವ ನಡೆದಿದೆ.

    ಸ್ಫೋಟದ ತೀವ್ರತೆಗೆ ಕಾರ್ಖಾನೆಯ ಅಕ್ಕ-ಪಕ್ಕದ ಸುಮಾರು ಐದು ಮನೆಗಳಿಗೆ ತೀವ್ರ ಸ್ವರೂಪದ ಹಾನಿಯಾಗಿವೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು 17 ಜನರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

    ಘಟನೆ ನಡೆದ ಕೆಲವೇ ಸಮಯದಲ್ಲಿ ಸ್ಥಳಕ್ಕೆ ಪೊಲೀಸರು ಮತ್ತು ಅಗ್ನಿ ಶಾಮಕದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಫೋಟಕ್ಕೆ ನಿಖರ ಕಾರಣವೇನೆಂದು ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಎಂಟು ಸದಸ್ಯರನ್ನೊಳಗೊಂಡ ಭಯೋತ್ಪಾದನ ವಿರೋಧಿ ತಂಡ(ಎಟಿಎಸ್) ಭೇಟಿ ನೀಡಿ ಸ್ಫೋಟದ ಬಗ್ಗೆ ತನಿಖೆ ಕೈಗೊಂಡಿದ್ದಾರೆ.

    ನಳಂದ ಜಿಲ್ಲಾಧಿಕಾರಿ ಮತ್ತು ಎಸ್.ಪಿ ಆಸ್ಪತ್ರೆಗೆ ಭೇಟಿ ನೀಡಿ ಘಟನೆಯಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದರು. ಘಟನೆಯ ಕುರಿತು ತನಿಖೆ ಆರಂಭಿಸಲಾಗಿದೆ. ಶೀಘ್ರವೇ ಘಟನೆಗೆ ಕಾರಣರಾದ ಆರೋಪಿಗಳನ್ನು ಬಂಧಿಸಲಾಗುವುದು ಮತ್ತು ಸಂಬಂಧಪಟ್ಟ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.