Tag: Firecrackers Ban

  • ಭಾರತ-ಪಾಕ್ ಯುದ್ಧ ಭೀತಿ; ಚಂಡೀಗಢ ಸರ್ಕಾರದಿಂದ 2 ತಿಂಗಳು ಪಟಾಕಿ ಬ್ಯಾನ್

    ಭಾರತ-ಪಾಕ್ ಯುದ್ಧ ಭೀತಿ; ಚಂಡೀಗಢ ಸರ್ಕಾರದಿಂದ 2 ತಿಂಗಳು ಪಟಾಕಿ ಬ್ಯಾನ್

    -ರಾಜಸ್ಥಾನದ ಜೈಸಲ್ಮೇರ್‌ನಲ್ಲೂ ಪಟಾಕಿ ಮಾರಾಟ, ಖರೀದಿ ನಿಷೇಧ

    ಚಂಡೀಗಢ: ಭಾರತ ಮತ್ತು ಪಾಕಿಸ್ತಾನದ (India-Pakistan) ನಡುವಿನ ಉದ್ವಿಗ್ನತೆ ಹೆಚ್ಚಾಗುತ್ತಿರುವ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಚಂಡೀಗಢ ಸರ್ಕಾರ (Chandigarh Government) 2 ತಿಂಗಳುಗಳ ಕಾಲ ಪಟಾಕಿ ನಿಷೇಧಿಸಿದೆ.

    ಪಹಲ್ಗಾಮ್ ದಾಳಿಯ (Pahalgam Terrorist Attack) ಬಳಿಕ ಭಾರತ ಹಾಗೂ ಪಾಕ್ ನಡುವಿನ ಕಾದಾಟ ಹೆಚ್ಚಾಗುತ್ತಿದೆ. ಹಿಂದೂಗಳ ನರಮೇಧಕ್ಕೆ ಪ್ರತೀಕಾರವಾಗಿ `ಆಪರೇಷನ್ ಸಿಂಧೂರ’ದಡಿಯಲ್ಲಿ (Operation Sindoor) ಭಾರತೀಯ ಸೇನೆ ಪಾಕ್ ಮೇಲೆ ವಾಯುದಾಳಿ ನಡೆಸಿತ್ತು. ಬಳಿಕ ಗುರುವಾರ ರಾತ್ರಿ ಪಾಕಿಸ್ತಾನ ನಡೆಸಿದ ಕ್ಷಿಪಣಿ ದಾಳಿ ಬೆನ್ನಲ್ಲೇ ಭಾರತವು ತಕ್ಕ ಉತ್ತರ ನೀಡಿದೆ.ಇದನ್ನೂ ಓದಿ: ನಮ್ಮ ನಾಯಕ ಹೇಡಿ.. ಮೋದಿ ಹೆಸರು ಹೇಳುವುದಕ್ಕೂ ಹೆದರುತ್ತಿದ್ದಾರೆ: ತಮ್ಮ ಪ್ರಧಾನಿ ವಿರುದ್ಧವೇ ಗುಡುಗಿದ ಪಾಕ್ ಸಂಸದ

    ಉಭಯ ದೇಶಗಳ ನಡುವೆ ಹೆಚ್ಚುತ್ತಿರುವ ಯುದ್ಧ ಭೀತಿ ಹಿನ್ನೆಲೆ ಇದೀಗ ಚಂಡೀಗಢ ಸರ್ಕಾರ ಎರಡು ತಿಂಗಳುಗಳ ಪಟಾಕಿ ನಿಷೇಧಿಸಿದೆ. ಮದುವೆ, ಶುಭ ಸಮಾರಂಭಗಳಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸಿದೆ. ಇನ್ನೂ ರಾಜಸ್ಥಾನದ ಜೈಸಲ್ಮೇರ್‌ನಲ್ಲಿಯೂ (Jaisalmer) ಪಟಾಕಿ ಸಿಡಿಸುವುದರ ಜೊತೆಗೆ ಮಾರಾಟ ಹಾಗೂ ಖರೀದಿಯನ್ನು ನಿಷೇಧಿಸಿಲಾಗಿದೆ.

    ಈ ಕುರಿತು ಚಂಡೀಗಢ ಜಿಲ್ಲಾ ಮ್ಯಾಜಿಸ್ಟ್ರೇಟ್ ನಿಶಾಂತ್ ಕುಮಾರ್ ಯಾದವ್ ಮಾತನಾಡಿ, 2023ರ ಬಿಎನ್‌ಎಸ್ (BNS) ಸೆಕ್ಷನ್ 163ರ ಅಡಿಯಲ್ಲಿ 2025ರ ಮೇ 09 ರಿಂದ ಜುಲೈ 7ರವರೆಗೆ ಪಟಾಕಿ ನಿಷೇಧಿಸಲಾಗಿದೆ ಎಂದು ಆದೇಶಿಸಿದ್ದಾರೆ.

    ಮದುವೆ, ಶುಭ ಸಮಾರಂಭ ಹಾಗೂ ಧಾರ್ಮಿಕ ಹಬ್ಬಗಳಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ. ಕಾರಣ ಯುದ್ಧ ಭೀತಿಯ ಸಂದರ್ಭದಲ್ಲಿ ಈ ರೀತಿ ಪಟಾಕಿ ಶಬ್ದವು ಡ್ರೋನ್ ಹಾಗೂ ಕ್ಷಿಪಣೆ ದಾಳಿಯ ಭ್ರಮೆಯನ್ನು ಸೃಷ್ಟಿಸಿ, ಸಾರ್ವಜನಿಕರಲ್ಲಿ ಭಯ ಉಂಟು ಮಾಡುತ್ತದೆ. ಹೀಗಾಗಿ ಈ ಆದೇಶವು ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಎಲ್‌ಒಸಿಯಲ್ಲಿ ಭಾರತ-ಪಾಕ್ ಸಂಘರ್ಷ; ಭಾರತೀಯ ಯೋಧ ಹುತಾತ್ಮ

  • ದೀಪಾವಳಿ ಹೊಸ್ತಿಲಲ್ಲೇ ಪಟಾಕಿ ಬ್ಯಾನ್ ಮಾಡಿದ ದೆಹಲಿ ಸರ್ಕಾರ

    ದೀಪಾವಳಿ ಹೊಸ್ತಿಲಲ್ಲೇ ಪಟಾಕಿ ಬ್ಯಾನ್ ಮಾಡಿದ ದೆಹಲಿ ಸರ್ಕಾರ

    – ಜ.1ರ ವರೆಗೆ ಪಟಾಕಿ ಉತ್ಪಾದನೆ, ಮಾರಾಟ, ಬಳಕೆಗೆ ಬ್ರೇಕ್

    ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ವಾಯುಮಾಲಿನ್ಯ ಹೆಚ್ಚುತ್ತಿರುವ ಹಿನ್ನೆಲೆ ಪಟಾಕಿ ಮಾರಾಟ ಹಾಗೂ ಬಳಕೆಯನ್ನು 2025ರ ಜನವರಿ 1 ರ ವರೆಗೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದೆಹಲಿ ಸರ್ಕಾರ (Delhi Government) ತಿಳಿಸಿದೆ.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೆಹಲಿಯ ಪರಿಸರ ಸಚಿವ ಗೋಪಾಲ್ ರೈ (Gopal Rai), ಕೇಜ್ರಿವಾಲ್ ಸರ್ಕಾರವು ಪಟಾಕಿಗಳ ತಯಾರಿಕೆ, ಸಂಗ್ರಹಣೆ, ಮಾರಾಟ ಮತ್ತು ಬಳಕೆಯ ಮೇಲೆ ಸಂಪೂರ್ಣ ನಿಷೇಧವನ್ನು ವಿಧಿಸಿದೆ. 2025ರ ಜನವರಿ 1ರ ವರೆಗೆ ಆನ್‌ಲೈನ್‌ನಲ್ಲಿ ಪಟಾಕಿ ಮಾರಾಟ ಮತ್ತು ವಿತರಣೆಯನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಎತ್ತಿನಹೊಳೆ ಯೋಜನೆಯ ಮೊದಲ ಹಂತ ಉದ್ಘಾಟನೆ ಬೆನ್ನಲ್ಲೆ ಕೇಂದ್ರ ಸರ್ಕಾರ ಆಕ್ಷೇಪ

    ಚಳಿಗಾಲದ ಅಧಿವೇಶನದಲ್ಲಿ ವಾಯುಮಾಲಿನ್ಯವನ್ನು ತಡೆಯುವ 21 ಅಂಶಗಳ ಯೋಜನೆಯ ಭಾಗವಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಪರಿಸರ ಇಲಾಖೆಯು ಮಾಲಿನ್ಯದ ಹಾಟ್‌ಸ್ಪಾಟ್‌ಗಳಲ್ಲಿ ಗಾಳಿಯ ಗುಣಮಟ್ಟ ಮೇಲ್ವಿಚಾರಣೆ ಮಾಡಲು ಡ್ರೋನ್‌ಗಳನ್ನು ಬಳಸುತ್ತದೆ ಎಂದು ಮಾಹಿತಿ ನೀಡಿದ್ದಾರೆ.ಇದನ್ನೂ ಓದಿ: ದರ್ಶನ್‌ ಜೊತೆಗೆ ಸಂಪರ್ಕ ಬೆಳೆದಿದ್ದು ಹೇಗೆ? – ಎಳೆಎಳೆಯಾಗಿ ಬಿಚ್ಚಿಟ್ಟ ಪವಿತ್ರಾಗೌಡ

    ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejrival) ಅವರ ನೇತೃತ್ವದಲ್ಲಿ, ಚಳಿಗಾಲದಲ್ಲಿ ಉಂಟಾಗುವ ಮಾಲಿನ್ಯ ಸಮಸ್ಯೆ ಎದುರಿಸಲು ಸರ್ಕಾರ ತೀವ್ರ ಸಿದ್ಧತೆಗಳನ್ನು ನಡೆಸಿದೆ. ನಮ್ಮ ಸರ್ಕಾರವು ದೆಹಲಿಯಲ್ಲಿ ವಾಯುಮಾಲಿನ್ಯವನ್ನು ಕಡಿಮೆ ಮಾಡಲು ನಿರಂತರವಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಇದರ ಪರಿಣಾಮವಾಗಿ ಕಳೆದ 9 ವರ್ಷಗಳಲ್ಲಿ ಸುಮಾರು 30 ಪ್ರತಿಶತದಷ್ಟು ಮಾಲಿನ್ಯವನ್ನು ಕಡಿಮೆ ಮಾಡಲಾಗಿದೆ ಎಂದರು.

  • ಕದ್ದು ಮುಚ್ಚಿ ಪಟಾಕಿ ಸಿಡಿಸುವವರ ಮೇಲೂ ನಿಗಾ: ಸುಧಾಕರ್

    ಕದ್ದು ಮುಚ್ಚಿ ಪಟಾಕಿ ಸಿಡಿಸುವವರ ಮೇಲೂ ನಿಗಾ: ಸುಧಾಕರ್

    ಬೆಂಗಳೂರು: ಸರಳ ದೀಪಾಳಿ ಆಚರಣೆ ಮೂಲಕ ಕತ್ತಲೆಯಂತೆ ಇರುವ ಕೊರೊನಾ ದುಸ್ಥಿತಿಯಿಂದ ಬೆಳಕಿನ ಕಡೆಗೆ ಹೋಗಬೇಕಿದೆ. ನಿಯಮಗಳನ್ನು ಮೀರಿ ಕದ್ದು ಮುಚ್ಚಿ ಪಟಾಕಿ ಸಿಡಿಸುವವರ ಮೇಲೆ ನಿಗಾ ವಹಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಪಟಾಕಿ ನಿಷೇಧ ಬಗ್ಗೆ ಸಿಎಂ ಅವರು ಘೋಷಿಸಿದ್ದಾರೆ. ಈ ಬಾರಿ ಸರಳ ದೀಪಾವಳಿ ಮಾಡಿ ಎಂದು ನಾಡಿನ ಜನರಿಗೆ ಕರೆ ನೀಡಿದ್ದಾರೆ. ಈ ವರ್ಷ ಯಾರೂ ಪಟಾಕಿ ಸಿಡಿಸದೆ ಅರ್ಥ ಪೂರ್ಣವಾಗಿ ಹಬ್ಬವನ್ನು ಆಚರಣೆ ಮಾಡಬೇಕಿದೆ. ಆರೋಗ್ಯದ ದೃಷ್ಟಿಯಿಂದ ಪಟಾಕಿ ನಿಷೇಧ ಮಾಡಲಾಗಿದೆ. ಜನರ ಸಂತೋಷವನ್ನು ದೂರ ಮಾಡಲು ನಾವು ಈ ಕ್ರಮಕೈಗೊಂಡಿಲ್ಲ ಎಂದು ಸ್ಪಷ್ಟನೆ ನೀಡಿದರು.

    ಆರೋಗ್ಯ ಇಲಾಖೆಯ ತಾಂತ್ರಿಕ ಸಮಿತಿಯಿಂದ ನೀಡಿರುವ ವರದಿ ಅನ್ವಯ ದೀಪಾಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ನಿಷೇಧ ಮಾಡಲಾಗಿದೆ. ಕದ್ದು ಮುಚ್ಚಿ ಪಟಾಕಿ ಸಿಡಿಸುವವರ ಮೇಲೂ ನಿಗಾ ವಹಿಸಲಾಗುವುದು. ಪಟಾಕಿ ಸಿಡಿಸುವುದನ್ನು ತಡೆಯಲು ನಿಯಮ ರೂಪಿಸುತ್ತೇವೆ. ಇಂದು ಅಥವಾ ನಾಳೆ ಪಟಾಕಿ ನಿಷೇಧದ ರೂಪುರೇಷೆಗಳನ್ನು ಅಂತಿಮಗೊಳಿಸುತ್ತೇವೆ. ಜನರು ಕೂಡ ಪಟಾಕಿ ನಿಷೇಧಕ್ಕೆ ಸಹಕರಿಸಬೇಕು ಎಂದು  ಮನವಿ ಮಾಡಿದರು.