Tag: firework

  • ದೀಪಾವಳಿ ಹಬ್ಬಕ್ಕೆ ಬೆಂಗಳೂರಿನಲ್ಲಿ ಪಟಾಕಿ ಬ್ಯಾನ್ ಆಗುತ್ತಾ?

    ದೀಪಾವಳಿ ಹಬ್ಬಕ್ಕೆ ಬೆಂಗಳೂರಿನಲ್ಲಿ ಪಟಾಕಿ ಬ್ಯಾನ್ ಆಗುತ್ತಾ?

    ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ (Diwali Festival) ಬಂದ್ರೆ ಎಲ್ಲೆಲ್ಲೂ ಪಟಾಕಿ (Firework) ಸದ್ದಿನದ್ದೇ ಆರ್ಭಟ. ಅದರಲ್ಲೂ ಈ ಬಾರಿ ಅತ್ತಿಬೆಲೆಯ ಬಾಲಾಜಿ ಕ್ರ‍್ಯಾಕರ್ಸ್‌ನ ಬೆಂಕಿ ಅವಘಡದಿಂದ ಬೆಂಗಳೂರಿನಲ್ಲಿ ಪ್ರಮುಖ ಏರಿಯಾಗಳಲ್ಲಿ ಪಟಾಕಿ ಬ್ಯಾನ್ ಮಾಡುವ ಚರ್ಚೆಗಳು ನಡೆಯುತ್ತಿವೆ.

    ಶನಿವಾರ ಅತ್ತಿಬೆಲೆಯ ಬಾಲಾಜಿ ಕ್ರ‍್ಯಾಕರ್ಸ್ಗೆ ಬೆಂಕಿ ಬಿದ್ದು 14 ಮಂದಿ ಸಜೀವ ದಹನವಾಗಿದ್ರು. ಪಟಾಕಿ ಅಂಗಡಿಗಳು ಸುರಕ್ಷತ ನಿಯಮ ಪಾಲಿಸದಿರುವ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿತ್ತು. ನಿಯಮಗಳನ್ನ ಗಾಳಿಗೆ ತೂರಿರುವ ಎಲ್ಲಾ ಅಂಗಡಿಗಳನ್ನ ತಪಾಸಣೆಗೊಳಪಡಿಸುವಂತೆ ಜಿಲ್ಲಾಧಿಕಾರಿ ಆದೇಶ ಕೂಡ ನೀಡಿದ್ದರು. ಇದೀಗ ತಹಶೀಲ್ದಾರರು ಪಟಾಕಿ ಗೊಡೌನ್‌ಗಳ ಮೇಲೆ ರೇಡ್ ನಡೆಸುತ್ತಿದ್ದು, ಡಿಸಿ, ಎಸಿ ತಹಶೀಲ್ದಾರ್ ಗಳ ಸಭೆಯಲ್ಲಿ ಮಹತ್ವದ ವಿಷಯವನ್ನ ಚರ್ಚಿಸಲಾಗಿದೆ. ಇದನ್ನೂ ಓದಿ: ವಿಶ್ವ ಹಿಂದೂ ಪರಿಷತ್‍ಗೆ ತುಂಬಿತು 60 ವರ್ಷ- ಉಡುಪಿ ಶ್ರೀಕೃಷ್ಣನ ನಗರ ಕೇಸರಿಮಯ

    ಈ ಬಾರಿ ಬೆಂಗಳೂರಲ್ಲಿ ಪಟಾಕಿ ಬ್ಯಾನ್ ಮಾಡಬೇಕು. ಆ ಮೂಲಕ ಮುಂಜಾಗೃತಾ ಕ್ರಮಗಳನ್ನ ಕೈಗೊಳ್ಳದ, ನಿಯಮ ಪಾಲಿಸದ ಪಟಾಕಿ ಅಂಗಡಿಗಳ ಮಾಲೀಕರಿಗೆ ಬಿಸಿ ಮುಟ್ಟಿಸಬೇಕು ಅನ್ನೋ ನಿಟ್ಟಿನಲ್ಲಿ ಜಿಲ್ಲಾಡಳಿತದ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎನ್ನಲಾಗಿದೆ. ಇದನ್ನೂ ಓದಿ: ಹಮಾಸ್ ಉಗ್ರರ ನಡೆಗೆ ಮೋದಿ ಖಂಡನೆ- ಇಸ್ರೇಲ್ ಪರ ನಿಂತ ಭಾರತ

    ಒಂದು ವೇಳೆ ಬೆಂಗಳೂರಿನಾದ್ಯಂತ ಪಟಾಕಿ ನಿಷೇಧಿಸುವುದು ಅಸಾಧ್ಯವೆನಿಸಿದರೆ, ಪ್ರಮುಖ ಬಡಾವಣೆಗಳಲ್ಲಾದರೂ ಪಟಾಕಿ ನಿಷೇಧಿಸಬೇಕು. ಅದೂ ಸಾಧ್ಯವಾಗದಿದ್ದಲ್ಲಿ, ಕಟ್ಟು ನಿಟ್ಟಿನ ನಿಯಮಗಳೊಂದಿಗೆ ದೀಪಾವಳಿ ಆಚರಣೆಗೆ ಅನುವು ಮಾಡಿಕೊಡಬೇಕು ಎಂಬ ನಿರ್ಧಾರದ ಬಗ್ಗೆ ಚರ್ಚೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ನ್ಯೂಜಿಲೆಂಡ್‌ಗೆ 99 ರನ್‌ಗಳ ಭರ್ಜರಿ ಜಯ – ಡಚ್ಚರ ಗೇಮ್‌ ಪ್ಲ್ಯಾನ್‌ಗೆ ಅಭಿಮಾನಿಗಳ ಮೆಚ್ಚುಗೆ 

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾರನ್ನು ವೇಗವಾಗಿ ಚಲಿಸುತ್ತಾ ಡಿಕ್ಕಿ ಮೇಲೆ ಪಟಾಕಿ ಸಿಡಿಸಿದ ಕಿಡಿಗೇಡಿಗಳು- ವೀಡಿಯೋ ವೈರಲ್

    ಕಾರನ್ನು ವೇಗವಾಗಿ ಚಲಿಸುತ್ತಾ ಡಿಕ್ಕಿ ಮೇಲೆ ಪಟಾಕಿ ಸಿಡಿಸಿದ ಕಿಡಿಗೇಡಿಗಳು- ವೀಡಿಯೋ ವೈರಲ್

    ಲಕ್ನೋ: ಚಲಿಸುತ್ತಿರುವ ಕಾರಿನ (Car) ಡಿಕ್ಕಿ ಮೇಲೆ ಕಿಡಿಗೇಡಿಗಳು ಪಟಾಕಿಗಳನ್ನು (Firework) ಸಿಡಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Video Viral) ಆಗಿದೆ.

    ಉತ್ತರಪ್ರದೇಶದ ಗುರುಗ್ರಾಮದಲ್ಲಿ (Gurugram) ದೀಪಾವಳಿ ಆಚರಣೆ ವೇಳೆ ಅಪಾಯಕಾರಿಯಾಗಿ ಪಟಾಕಿಯನ್ನು ಸಿಡಿಸಿದ್ದಾರೆ. ಅಲ್ಲಿನ ಮೂವರು ನಿವಾಸಿಗಳು ಸೇರಿ ಕಾರನ್ನು ವೇಗವಾಗಿ ಚಲಿಸುತ್ತಿದ್ದರು. ಈ ವೇಳೆ ತಮ್ಮ ಕಾರಿನ ಮೇಲೆ ಪಟಾಕಿಯನ್ನು ಸಿಡಿಸಿದ್ದಾರೆ. ಇದೀಗ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.

    ವೀಡಿಯೋದಲ್ಲಿ ಏನಿದೆ?: ಕಾರಿನ ಡಿಕ್ಕಿ ಮೇಲೆ ಪಟಾಕಿ ಪೆಟ್ಟಿಗೆಯೊಂದನ್ನು ಇಟ್ಟುಕೊಂಡು ಕಾರನ್ನು ಗುರುಗ್ರಾಮ್‍ನ ಬೀದಿಗಳಲ್ಲಿ ವೇಗವಾಗಿ ಚಲಿಸುತ್ತಿದ್ದಾರೆ. ಆ ಕಾರಿನ ಪಕ್ಕ ಇತರ ಕಾರುಗಳು ಚಲಿಸುತ್ತಿದೆ. ಆದರೂ ಚಾಲಕ ಹಾಗೂ ಕಾರಿನಲ್ಲಿದ್ದ ಇನ್ನಿಬ್ಬರೂ ಅದಕ್ಕೂ ಕೇರ್ ಮಾಡದೇ ಪಟಾಕಿಯನ್ನು ಸಿಡಿಸುತ್ತ ಹೋಗುತ್ತಿದ್ದಾರೆ. ವೈರಲ್ ಆದ ವೀಡಿಯೋದಲ್ಲಿ ಕಾರಿನ ಡಿಕ್ಕಿಯ ಮೇಲ್ಭಾಗದಿಂದ ಹಲವಾರು ಬಾರಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನೂ ಓದಿ: ಸ್ವಿಗ್ಗಿ ಡೆಲಿವರಿ ಬಾಯ್‍ಗೆ ಚಾಕುವಿನಿಂದ ಚುಚ್ಚಿ ಸುಲಿಗೆ

    ಘಟನೆಗೆ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೀಡಿಯೋ ವೈರಲ್ ಆಗುತ್ತಿದ್ದಂತೆ ಘಟನೆಗೆ ಸಂಬಂಧಿಸಿ ಮೂವರನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಪೂಜೆಗಾಗಿ ಅಡುಗೆ ಮಾಡುತ್ತಿದ್ದಾಗ ಗ್ಯಾಸ್ ಸಿಲಿಂಡರ್ ಸ್ಫೋಟ – ಹಲವರ ಸ್ಥಿತಿ ಗಂಭೀರ

    Live Tv
    [brid partner=56869869 player=32851 video=960834 autoplay=true]

  • ಠುಸ್ಸಾದ ಪಟಾಕಿ ಕೈಯಲ್ಲಿ ಹಿಡಿದು ಮುಂಗೈ ಛಿದ್ರ- ಈ ಯುವಕನಿಗೆ ಬೇಕಿದೆ ನೌಕರಿ

    ಠುಸ್ಸಾದ ಪಟಾಕಿ ಕೈಯಲ್ಲಿ ಹಿಡಿದು ಮುಂಗೈ ಛಿದ್ರ- ಈ ಯುವಕನಿಗೆ ಬೇಕಿದೆ ನೌಕರಿ

    ಮೈಸೂರು: ರುಸ್ಸಾದ ಪಟಾಕಿಯನ್ನು ಕೈಯ್ಯಲ್ಲಿ ಹಿಡಿದ ಪರಿಣಾಮ ಯುವಕನ ಮುಂಗೈ ಛಿದ್ರವಾಗಿದ್ದು, ಅವತ್ತಿನಿಂದ ಆತ ಎರಡು ಮುಂಗೈ ಇಲ್ಲದೆ ಬದುಕು ಕಟ್ಟಿಕೊಳ್ಳಲು ಹೆಣಗಾಡುತ್ತಿದ್ದಾನೆ.

    ಮೈಸೂರು ಜಿಲ್ಲೆಯ ನಂಜನಗೂಡು ಪಟ್ಟಣದ ನಿವಾಸಿಯಾಗಿರುವ ಎ.ಎಸ್. ಅಭಿಷೇಕ್ 7 ವರ್ಷಗಳ ಹಿಂದೆ ನಂಜನಗೂಡಿನ ಶ್ರೀ ನಂಜುಂಡೇಶ್ವರ ಕಾರ್ತಿಕೋತ್ಸವದ ಸಂದರ್ಭದಲ್ಲಿ ಪಟಾಕಿ ಬಾಂಬ್ ಸಿಡಿಸುವ ವೇಳೆ ಬಾಂಬ್ ಸಿಡಿಯದೆ ಠುಸ್ಸಾಗಿತ್ತು.

    ಸಿಡಿಯದೇ ಠುಸ್ಸಾದ ಪಟಾಕಿ ಬಾಂಬನ್ನು ಕೂತುಹಲದಿಂದ ಅಭಿಷೇಕ್ ಕೈಯಲ್ಲಿ ತೆಗೆದುಕೊಂಡಿದ್ದಾನೆ. ಆಗ ಆ ಪಟಾಕಿ ಬಾಂಬ್ ಸಿಡಿದಿದೆ. ಸಿಡಿದ ರಭಸಕ್ಕೆ ಅಭಿಷೇಕ್‍ನ ಎರಡು ಮುಂಗೈ ಛಿದ್ರಗೊಂಡಿವೆ. ತಕ್ಷಣ ಆಸ್ಪತ್ರೆಗೆ ಹೋದರೂ ಸಹಿತ ಯಾವುದೇ ಪ್ರಯೋಜನವಾಗಿಲ್ಲ.

    ಘಟನೆ ನಡೆದ ವರ್ಷದಲ್ಲಿ ಅಭಿಷೇಕ್ ಎಸ್‍ಎಸ್‍ಎಲ್‍ಸಿ ಓದುತ್ತಿದ್ದ. ಮುಂಗೈ ಇಲ್ಲದ ಕಾರಣ ಇನ್ನೊಬ್ಬರ ನೆರವಿನಿಂದ ಪರೀಕ್ಷೆ ಕೂಡ ಬರೆದು ಉತ್ತೀರ್ಣನಾಗಿದ್ದಾನೆ. ಆದರೆ ಮುಂದೆ ವಿದ್ಯಾಭ್ಯಾಸ ಮುಂದುವರಿಸಲು ಸಾಧ್ಯವಾಗಿಲ್ಲ. ಆತನ ತಾಯಿ ಅಶಾ ದೇವಸ್ಥಾನ ಬಳಿ ಹೂ ಕಾಯಿ ಮಾರಿಕೊಂಡು ಜೀವನ ನಡೆಸುತ್ತಿದ್ದಾರೆ. ಅಭಿಷೇಕ್‍ಗೆ ತಂದೆ ಕೂಡ ಇಲ್ಲ.

    ಮನೆಗೆ ಆಧಾರ ಸ್ಥಂಭವಾಗಬೇಕಿದ್ದ ಅಭಿಷೇಕ್, ಮುಂಗೈ ಕಳೆದುಕೊಂಡು ಕಂಗಾಲಾಗಿದ್ದಾನೆ. ಕಂಪ್ಯೂಟರ್ ಜ್ಞಾನ ಹೊಂದಿರೋ ಅಭಿಷೇಕ್ ಬುದ್ಧಿವಂತ ಕೂಡ ಇದ್ದಾನೆ. ಮುಂಗೈ ಕಳೆದುಕೊಂಡರೂ ತನ್ನ ಎಲ್ಲಾ ಕೆಲಸವನ್ನು ತಾನೇ ಆತ್ಮವಿಶ್ವಾಸದಿಂದ ಮಾಡಿಕೊಂಡು ಹೋಗುತ್ತಿದ್ದಾನೆ.

    ಅಭಿಷೇಕ್‍ಗೆ ಒಂದು ಸೂಕ್ತ ಕೆಲಸದ ಅವಶ್ಯಕತೆ ಇದೆ. ಅದರಲ್ಲೂ ಕಂಪ್ಯೂಟರ್ ಕ್ಲಾಸ್‍ಗಳಲ್ಲಿ, ಅಥವಾ ಮ್ಯಾನೇಜ್‍ಮೆಂಟ್ ಕಚೇರಿಗಳಲ್ಲಿ ಕೆಲಸ ಸಿಕ್ಕರೆ ಉತ್ತಮ ಅಂತಿದ್ದಾನೆ. ಜೊತೆಗೆ ಈ ಕುಟುಂಬಕ್ಕೆ ಸ್ವಲ್ಪ ಅರ್ಥಿಕ ನೆರವು ಕೂಡ ಬೇಕಿದೆ. ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದಲ್ಲೇ ಕೆಲಸ ಕೊಡುವ ಪ್ರಸ್ತಾಪ ಇದ್ದು ಸದ್ಯಕ್ಕೆ ಅದು ನೆನೆಗುದಿಗೆ ಬಿದ್ದಿಗೆ. ಸರ್ಕಾರ ಮನಸ್ಸು ಮಾಡಿದರೆ ಈ ಕೆಲಸ ಕೊಡಬಹುದಾಗಿದ್ದು, ಅಭಿಷೇಕ್ ಸಹಾಯದ ನಿರೀಕ್ಷೆಯಲ್ಲಿದ್ದಾನೆ.

    https://www.youtube.com/watch?v=ltAvEyRpenQ