Tag: firing attack

  • ಮಣಿಪುರದಲ್ಲಿ ಮತ್ತೆ ಗುಂಡಿನ ದಾಳಿ – ಇಬ್ಬರು ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ

    ಮಣಿಪುರದಲ್ಲಿ ಮತ್ತೆ ಗುಂಡಿನ ದಾಳಿ – ಇಬ್ಬರು ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ

    ಗುವಾಹಟಿ: ಮಣಿಪುರದಲ್ಲಿ (Manipur) ಶುಕ್ರವಾರ ಶಸ್ತ್ರಸಜ್ಜಿತ ಸ್ಥಳೀಯರು (Armed Locals) ಮತ್ತು ಭದ್ರತಾ ಪಡೆಗಳ (Security Force) ಮಧ್ಯೆ ಭಾರೀ ಗುಂಡಿನ ಚಕಮಕಿ ನಡೆದಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

    ತೆಂಗ್ನೌಪಾಲ್ (Tengnoupal) ಜಿಲ್ಲೆಯ ಪಲ್ಲೆಲ್ ಪಟ್ಟಣದಲ್ಲಿ ಶುಕ್ರವಾರ ಮುಂಜಾನೆ ಗುಂಡಿನ ಚಕಮಕಿ ನಡೆದಿದ್ದು, ಘಟನೆಯಲ್ಲಿ ಗಾಯಗೊಂಡವರನ್ನು ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲಾಗಿದೆ. ಬೆಳಗ್ಗೆ 6 ಗಂಟೆಗೆ ಗುಂಡಿನ ದಾಳಿ ಪ್ರಾರಂಭವಾಗಿದ್ದು, ದಾಳಿಯಲ್ಲಿ ಭದ್ರತಾ ಸಿಬ್ಬಂದಿಯೂ ಗಾಯಗೊಂಡಿದ್ದಾರೆ ಎಂದು ಸರ್ಕಾರಿ ಮೂಲಗಳು ಹೇಳಿವೆ. ಇದನ್ನೂ ಓದಿ: G-20 ಶೃಂಗಸಭೆ ಹಿನ್ನೆಲೆ ಸೆ.14ರ ವರೆಗೆ ಚೀನಾ-ಪಾಕ್ ಗಡಿಯಲ್ಲಿ ಡ್ರಿಲ್ಲಿಂಗ್ ಕಾರ್ಯಾಚರಣೆ ಸ್ಥಗಿತ

    ಈ ಪ್ರದೇಶದಲ್ಲಿ ಉದ್ವಿಗ್ನತೆ ಹೆಚ್ಚಾಗಿದ್ದು, ಆರ್‌ಎಎಫ್‌, ಅಸ್ಸಾಂ ರೈಫಲ್ಸ್ ಮತ್ತು ಪೊಲೀಸರನ್ನು ಒಳಗೊಂಡ ಭದ್ರತಾ ಪಡೆಗಳು ಪರಿಸ್ಥಿತಿಯನ್ನು ಹತೋಟಿಗೆ ತರಲು ಅಶ್ರುವಾಯು ಶೆಲ್‍ಗಳನ್ನು ಹಾರಿಸುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಣಿಪುರ ಬಿಕ್ಕಟ್ಟನ್ನು ಪರಿಹರಿಸುವಲ್ಲಿ ಸರ್ಕಾರದ ವೈಫಲ್ಯದ ವಿರುದ್ಧ ತೌಬಲ್ ಮತ್ತು ಕಾಕ್ಚಿಂಗ್ ಜಿಲ್ಲೆ ಅಪುನ್ಬಾ ಲುಪ್ ರಾಜ್ಯಾದ್ಯಂತ ಬಂದ್ ಘೋಷಿಸಿದ ದಿನವೇ ಗುಂಡಿನ ದಾಳಿ ನಡೆದಿದೆ. ಇದನ್ನೂ ಓದಿ: ಕತ್ತು ಸೀಳಿ ಗಗನಸಖಿ ಹತ್ಯೆಗೈದಿದ್ದ ಆರೋಪಿ – ಲಾಕಪ್‌ನಲ್ಲೇ ಪ್ಯಾಂಟ್‌ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸುಳ್ಯದ ಯುವಕನ ಮೇಲೆ ಗುಂಡಿನ ದಾಳಿ

    ಸುಳ್ಯದ ಯುವಕನ ಮೇಲೆ ಗುಂಡಿನ ದಾಳಿ

    ಮಂಗಳೂರು: ಯುವಕನೊಬ್ಬನ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿಗೆ ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಮೊಗರ್ಪಣೆಯಲ್ಲಿ ನಡೆದಿದೆ.

    ಸುಳ್ಯ ಜಯನಗರದ ನಿವಾಸಿ ಮೊಹಮ್ಮದ್ ಸಾಯಿ (39) ಗುಂಡಿನ ದಾಳಿಗೊಳಗಾದ ವ್ಯಕ್ತಿ. ಮೊಹಮ್ಮದ್ ಕಾರು ಹತ್ತುತ್ತಿದ್ದ ವೇಳೆ ಗುಂಡಿನ ದಾಳಿ ನಡೆಸಲಾಗಿದೆ. ಕೆಎ 12 ನೋಂದಣಿಯ ಸ್ಕಾರ್ಪಿಯೋ ಕಾರಿನಿಂದ ಗುಂಡು ಹಾರಾಟ ನಡೆದಿದೆ. ಅದೃಷ್ಟವಶಾತ್ ಗುಂಡು ಗುರಿ ತಪ್ಪಿ ಕಾರಿನ ಬಾಗಿಲಿಗೆ ತಾಗಿದೆ. ಈ ವೇಳೆ ಗುಂಡು ತಾಗಿ ಮೊಹಮ್ಮದ್ ಹೊಟ್ಟೆ ಭಾಗಕ್ಕೆ ಸಣ್ಣ ಗಾಯವಾಗಿದೆ.

    ತಂಗಿಯ ಮನೆಗೆ ತೆರಳಿ ವಾಪಸ್ ತನ್ನ ಕಾರು ಹತ್ತುತ್ತಿದ್ದ ವೇಳೆ ಈ ದಾಳಿ ನಡೆದಿದೆ. ಸುಳ್ಯ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಆರಂಭಿಸಿದ್ದಾರೆ.

  • ಬಿಜೆಪಿ ಮಾಜಿ ಶಾಸಕನ ಸಹೋದರರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

    ಬಿಜೆಪಿ ಮಾಜಿ ಶಾಸಕನ ಸಹೋದರರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

    ಪಾಟ್ನಾ: ಗ್ಯಾಂಗ್ ವಾರ್‌ನಲ್ಲಿ ಬಿಜೆಪಿಯ ಮಾಜಿ ಶಾಸಕ ಚಿತ್ತರಂಜನ್ ಶರ್ಮಾ ಅವರ ಇಬ್ಬರು ಸಹೋದರರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿರುವ ಘಟನೆ ನಗರದ ವಿಜಯ್ ನಗರದ ಜನನಿಬಿಡ ಮಾರುಕಟ್ಟೆಯಲ್ಲಿ ನಡೆದಿದೆ.

    ಇಡೀ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಆರೋಪಿಗಳು ನಡುರಸ್ತೆಯಲ್ಲೇ ಇಬ್ಬರನ್ನು ಹೇಗೆ ಕೊಂದಿದ್ದಾರೆ ಎಂಬುದು ಸ್ಪಷ್ಟವಾಗಿ ಗೋಚರಿಸುತ್ತದೆ. ಗೌತಮ್ ಮತ್ತು ಶಂಭು ಗುಂಡಿನ ದಾಳಿಗೊಳಗಾದ ಚಿತ್ತರಂಜನ್ ಶರ್ಮಾ ಅವರ ಇಬ್ಬರು ಸಹೋದರರು. ಆರೋಪಿಗಳು ಮತ್ತು ಸಂತ್ರಸ್ತರು ಮೋಟಾರ್ ಸೈಕಲ್ ಚೇಸ್‍ನಲ್ಲಿ ತೊಡಗಿದ್ದರು. ನಂತರ ಅವರು ಗೌತಮ್ ಮೇಲೆ ಗುಂಡು ಹಾರಿಸಿದ್ದಾರೆ. ಒಮ್ಮೆ ಬೈಕ್‍ನಿಂದ ಬಿದ್ದ ಆರೋಪಿಗಳು ಹತ್ತಿರದಿಂದಲೇ ಗೌತಮ್ ತಲೆಗೆ ಗುಂಡು ಹಾರಿಸಿದ್ದಾರೆ. ಇದನ್ನೂ ಓದಿ: ಕೌಟುಂಬಿಕ ಕಲಹಕ್ಕೆ ಬೇಸತ್ತು ಮಗಳ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

    ದುಷ್ಕರ್ಮಿಗಳು ಶಂಬು ಅವರ ಮೇಲೂ ಹಲ್ಲೆ ನಡೆಸಿ ತೀವ್ರವಾಗಿ ಗಾಯಗೊಳಿಸಿದ್ದು, ಜನ ಗುಂಪು ಸೇರುತ್ತಿರುವುದನ್ನು ಕಂಡು ಸ್ಥಳದಿಂದ ಪರಾರಿಯಾಗಿದ್ದಾರೆ. ಇತ್ತ ಮಾರುಕಟ್ಟೆಯಲ್ಲಿದ್ದ ಸಾರ್ವಜನಿಕರಲ್ಲಿ ಭಯ, ಗಾಬರಿ ಆವರಿಸಿತು. ಗಾಯಗೊಂಡ ಇಬ್ಬರ ಪೈಕಿ ಗೌತಮ್ ಸ್ಥಳದಲ್ಲೇ ಮೃತಪಟ್ಟರೆ, ಶಂಬು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ರಾಮಮಂದಿರ ಸುತ್ತಮುತ್ತಲಿನ ಮದ್ಯ ಮಾರಾಟಗಾರರ ಪರವಾನಗಿ ರದ್ದು: ಯುಪಿ ಸರ್ಕಾರ 

    ಘಟನಾ ಸ್ಥಳದಿಂದ ನಾವು ಅರ್ಧ ಡಜನ್ ಖಾಲಿ ಕಾಟ್ರ್ರಿಡ್ಜ್‍ಗಳನ್ನು ವಶಪಡಿಸಿಕೊಂಡಿದ್ದೇವೆ ಎಂದು ಪಾಟ್ನಾದ ಹಿರಿಯ ಪೊಲೀಸ್ ಅಧೀಕ್ಷಕ (ಎಸ್‍ಎಸ್‍ಪಿ) ಮಾನವಜಿತ್ ಸಿಂಗ್ ಧಿಲ್ಲೋನ್ ಹೇಳಿದ್ದಾರೆ.

    ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

  • ಶಂಕಿತ ಉಗ್ರರ ಗುಂಡಿಗೆ ಪೊಲೀಸ್ ಅಧಿಕಾರಿ ಸಾವು

    ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಹಸನಾವೋದಲ್ಲಿ ಶನಿವಾರ ನಡೆದ ಶಂಕಿತ ಉಗ್ರರ ದಾಳಿಯಲ್ಲಿ ಹೆಡ್ ಕಾನ್‍ಸ್ಟೇಬಲ್ ಅಲಿ ಮೊಹಮ್ಮದ್ ಗನಿ ಹತ್ಯೆಯಾಗಿದ್ದಾರೆ.

    ಹೆಡ್ ಕಾನ್‍ಸ್ಟೇಬಲ್ ಮೊಹಮ್ಮದ್ ಗನಿ ಅವರನ್ನು ಕುಲ್ಗಾಮ್ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ದಾಳಿ ವೇಳೆ ಗನಿ ಅವರಿಗೆ ಗುಂಡು ತಗುಲಿತ್ತು. ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

    ಮೂರು ವಾರಗಳ ಹಿಂದೆ ಕಾಶ್ಮೀರದ ಇದೇ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‍ಕೌಂಟರ್‍ನಲ್ಲಿ ಇಬ್ಬರು ಉಗ್ರರು ಹತರಾಗಿದ್ದರು. ಇದನ್ನೂ ಓದಿ: ಡ್ರಗ್ಸ್ ಪ್ರಕರಣದಲ್ಲಿ ಸುಶಾಂತ್ ಸಿಂಗ್ ನೆರೆಮನೆಯಾತನ ಬಂಧನ

    ಭದ್ರತಾ ಸಿಬ್ಬಂದಿ ಮೇಲೆ ಗ್ರೆನೇಡ್ ದಾಳಿ:
    ಇದೇ ಸಂದರ್ಭದಲ್ಲಿ ಶ್ರೀನಗರದ ಮಹಾರಾಜ್ ಬಜಾರ್ ಪ್ರದೇಶದಲ್ಲಿ ಉಗ್ರರು ಭದ್ರತಾ ಸಿಬ್ಬಂದಿ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದಾರೆ. ಸದ್ಯ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಪೆಗಾಸಸ್ ಖರೀದಿಸಿ ಮೋದಿ ಸರ್ಕಾರ ದೇಶದ್ರೋಹ ಮಾಡಿದೆ: ರಾಹುಲ್ ಗಾಂಧಿ

    ಶನಿವಾರ ಸಂಜೆ ಸುಮಾರು 4.30ರ ವೇಳೆಗೆ ಸಿಆರ್‍ಪಿಎಫ್ ತಂಡ ಹಾಗೂ ಪೊಲೀಸ್ ಸಿಬ್ಬಂದಿ ಮೇಲೆ ಗ್ರೆನೇಡ್ ದಾಳಿ ನಡೆದಿತ್ತು. ದಾಳಿ ನಡೆದಿರುವ ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತುವರಿದಿದ್ದು, ದಾಳಿಕೋರರನ್ನು ಹಿಡಿಯಲು ಪ್ರಯತ್ನಿಸುತ್ತಿದ್ದಾರೆ.

  • ಆಟೋ ಚಾಲಕನ ತಲೆಗೆ ಗನ್ ಇಟ್ಟ ಮಹಿಳೆ!

    ಆಟೋ ಚಾಲಕನ ತಲೆಗೆ ಗನ್ ಇಟ್ಟ ಮಹಿಳೆ!

    ಗುರುಗಾಂವ್: 34 ವರ್ಷದ ಮಹಿಳೆಯೊಬ್ಬರು ಆಟೋ ಚಾಲಕನ ಮೇಲೆ ಗುಂಡಿನ ದಾಳಿ ನಡೆಸಲು ಯತ್ನಿಸಿದ ಘಟನೆ ಬುಧವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸಪ್ನಾ ಹಾಗೂ ಆಕೆಯ ಪತಿ ಭುರೇಯನ್ ಎಂಬಾತನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

    ಏನಿದು ಪ್ರಕರಣ?:
    ಬುಧವಾರ ಗುರುಗಾಂವ್ ರಸ್ತೆ ಪಕ್ಕದಲ್ಲಿ ವಾಹನ ಪಾರ್ಕಿಂಗ್ ಮಾಡೋ ವಿಚಾರದಲ್ಲಿ ಮಹಿಳೆ ಹಾಗೂ ಆಟೋ ರಿಕ್ಷಾ ಚಾಲಕನಿಗೆ ಮಾತಿನ ಚಕಮಕಿ ನಡೆದಿತ್ತು. ಇದೇ ವೇಳೆ ಮಹಿಳೆಯ ಪತಿ ತನಗೆ ಹೊಡೆದಿದ್ದಾನೆ ಅಂತ ಚಾಲಕ ಆರೋಪಿಸಿದ್ದಾರೆ.

    ಭವಾನಿ ಎನ್ಕ್ಲೇವ್ ಎಂಬ ಪ್ರದೇಶದಲ್ಲಿ ಬೆಳಗ್ಗೆ ನಡೆದ ಈ ಘಟನೆಯನ್ನು ಅಲ್ಲೇ ಇದ್ದ ಸ್ಥಳೀಯರು ಗಮನಿಸಿದ್ದಾರೆ. ಅಲ್ಲದೇ ಕೆಲವರು ಇದನ್ನು ತಮ್ಮ ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದಾರೆ. ಬಳಿಕ ಪೊಲೀಸರಿಗೆ ಈ ದೃಶ್ಯವನ್ನು ನೀಡಿದ್ದಾರೆ.

    ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಸಪ್ನಾ ಹಾಗೂ ಆಕೆಯ ಪತಿ ಭುರೇಯನ್ನು ಬಂಧಿಸಿ, ಸೆಕ್ಟರ್ 9 ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡಿದ್ದಾರೆ. ಇವರೊಂದಿಗೆ ಹಲ್ಲೆ ನಡೆಸಲು ಇನ್ನೋರ್ವ ವ್ಯಕ್ತಿ ಕೂಡ ಇದ್ದಿದ್ದು, ಆತ ಪೊಲೀಸರು ಬರುತ್ತಿದ್ದಂತೆಯೇ ಪರಾರಿಯಾಗಿದ್ದಾನೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಹಾಗೂ ಆಕೆಯ ಪತಿ ವಿರುದ್ಧ ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ. ಹಾಗೆಯೇ ತಲೆಮರೆಸಿಕೊಂಡಿರೋ ಆರೋಪಿಯನ್ನು ಕೂಡ ಶೀಘ್ರವೇ ಬಂಧಿಸುವುದಾಗಿ ಎಸಿಪಿ ರಾಜೀವ್ ಕುಮಾರ್ ತಿಳಿಸಿದ್ದಾರೆ.

    ಆಟೋ ರಿಕ್ಷಾ ಚಾಲಕನನ್ನು ಸುನೀಲ್ ಎಂದು ಗುರುತಿಸಲಾಗಿದ್ದು, ಇವರು ರಸ್ತೆ ಪಕ್ಕದಲ್ಲಿ ತನ್ನ ಆಟೋವನ್ನು ಪಾರ್ಕ್ ಮಾಡಿದ್ದರು. ಈ ವೇಳೆ ಅಲ್ಲಿಗೆ ಬಂದ ಸಪ್ನಾ ವಾಹನ ಅಲ್ಲಿಂದ ತೆಗೆಯುವಂತೆ ಸೂಚಿಸಿದ್ದಾರೆ. ಆದ್ರೆ ಸಪ್ನಾ ಮಾತನ್ನು ಸುನೀಲ್ ಕಡೆಗಣಿಸಿದ್ದಾರೆ. ಇದರಿಂದ ಸಿಟ್ಟುಗೊಂಡ ಮಹಿಳೆ ಸುನೀಲ್ ಜೊತೆ ಮಾತಿನ ಚಕಮಕಿ ನಡೆಸಿದ್ದಾರೆ. ಈ ವೇಳೆ ಸುನೀಲ್ ಪಕ್ಕದಲ್ಲೇ ಆಟೋ ನಿಲ್ಲಿಸಿ ಜಗಳವಾಡಿದ್ದಾನೆ. ಹೀಗಾಗಿ ಇಬ್ಬರು ಕೈಕೈ ಮಿಲಾಯಿಸಿಕೊಂಡಿದ್ದಾರೆ ಅಂತ ಕುಮಾರ್ ತಿಳಿಸಿದ್ದಾರೆ.

    ಜಗಳ ತಾರಕಕ್ಕೇರಿ ಸಪ್ನಾ ತನ್ನ ಹಣೆಗೆ ಪಿಸ್ತೂಲ್ ಇಟ್ಟು ಗುಂಡಿನ ದಾಳಿ ನಡೆಸಲು ಮುಂದಾದ್ರು. ಈ ವೇಳೆ ಎಚ್ಚೆತ್ತುಕೊಂಡು ಮಹಿಳೆ ಕೈಯಿಂದ ಪಿಸ್ತೂಲನ್ನು ದೂಡಿ ಆಗುವ ಅನಾಹುತದಿಂದ ಪಾರಾದೆ ಅಂತ ಚಾಲಕ ಸುನೀಲ್ ನಡೆದ ಘಟನೆಯನ್ನು ವಿವರಿಸಿದ್ದಾರೆ.