Tag: First Night with Devva

  • ಬಿಗ್ ಬಾಸ್ ಪ್ರಥಮ್ ನಟಿಸಿ, ನಿರ್ದೇಶಿಸಿದ ‘ಫಸ್ಟ್ ನೈಟ್ ವಿತ್ ದೆವ್ವ’ ಟೀಸರ್ ಬಿಡುಗಡೆ

    ಬಿಗ್ ಬಾಸ್ ಪ್ರಥಮ್ ನಟಿಸಿ, ನಿರ್ದೇಶಿಸಿದ ‘ಫಸ್ಟ್ ನೈಟ್ ವಿತ್ ದೆವ್ವ’ ಟೀಸರ್ ಬಿಡುಗಡೆ

    ಬಿಗ್ ಬಾಸ್ ಮೂಲಕ ಜನಪ್ರಿಯರಾದ ನಟ ಪ್ರಥಮ್ (Pratham) ನಾಯಕನಾಗಿ ಅಭಿನಯಿಸಿರುವ, ನವೀನ್ ಬೀರಪ್ಪ ನಿರ್ಮಾಣದ ಹಾಗೂ ಪಿ.ವಿ.ಆರ್ ಸ್ವಾಮಿ ಗೂಗಾರೆದೊಡ್ಡಿ ನಿರ್ದೇಶನದ “ಫಸ್ಟ್ ನೈಟ್ ವಿತ್ ದೆವ್ವ” (First Night with Devva) ಚಿತ್ರದ ಟೀಸರ್ (Teaser) ಬಿಡುಗಡೆಯಾಗಿದೆ. ಇತ್ತೀಚಿಗೆ ನಡೆದ ಟೀಸರ್ ಬಿಡುಗಡೆ ಸಮಾರಂಭಕ್ಕೆ ಬಿಗ್ ಬಾಸ್ ಸ್ಪರ್ಧಿಗಳಾದ ತುಕಾಲಿ ಸಂತೋಷ್ ಹಾಗೂ ನಮೃತ ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು.

    ನಾನು ನಿರ್ದೇಶಕರ ನಟ ಎಂದು ಮಾತನಾಡಿದ ಪ್ರಥಮ್, ಪಿ.ವಿ.ಆರ್ ಸ್ವಾಮಿ‌ ಅವರು ಬಹುಬೇಗನೇ ಚಿತ್ರವನ್ನು ಪೂರ್ಣಗೊಳಿಸಿದ್ದಾರೆ. ಕಳೆದ ನವೆಂಬರ್ ನಲ್ಲಿ ಈ ಚಿತ್ರ ಆರಂಭವಾಗಿತ್ತು. ಚಿತ್ರ ಆರಂಭವಾದ ತಕ್ಷಣ ಮೊದಲು ಬರುವ ಸನ್ನಿವೇಶವೇ ಮದುವೆ ದೃಶ್ಯ. ಮದುವೆಯನ್ನು ಬಹಳ ಆಸೆಯಿಂದ ಆದ ಹುಡುಗನಿಗೆ ತನ್ನ ಮೊದಲರಾತ್ರಿ ನಡೆಯುತ್ತಿರುವುದು ದೆವ್ವದ ಜೊತೆಗೆ ಎಂದು ತಿಳಿದಾಗ ಏನೆಲ್ಲಾ ಆಗುತ್ತದೆ? ಎಂಬುದೆ ಚಿತ್ರದ ಕಥಾಸಾರಾಂಶ. ಈ ಚಿತ್ರದಲ್ಲಿ ನಗುವಿಗೆ ಬರವಿಲ್ಲ. ಹಾರಾರ್, ಕಾಮಿಡಿ, ಆಕ್ಷಮ್ ಹಾಗೂ ಸೆಂಟಿಮೆಂಟ್ ಗಳ ಸಮ್ಮಿಲ್ಲನವೇ ಈ ನಮ್ಮ ಚಿತ್ರ. ನಾನೇ ಕಥೆ, ಚಿತ್ರಕಥೆ ಬರೆದಿದ್ದೇನೆ. ನಿಖಿತ, ಜೀವಿತ ಹಾಗೂ ಸುಶ್ಮಿತ ಮೂವರು ನಾಯಕಿಯರು. ನಿಖಿತ ನನ್ನ ಹೆಂಡತಿ ಪಾತ್ರ‌‌ ಮಾಡಿದ್ದಾರೆ. ಹಿರಿಯ ನಟರಾದ ಶ್ರೀನಿವಾಸಮೂರ್ತಿ, ರಮೇಶ್ ಭಟ್, ಹರೀಶ್ ರಾಜ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ಸಮಾರಂಭಕ್ಕೆ ಬಂದಿರುವ ತುಕಾಲಿ ಸಂತೋಷ್ ಹಾಗೂ ನಮೃತಾ ಅವರಿಗೆ ಧನ್ಯವಾದ ಎಂದರು.

    ನವೆಂಬರ್ ನಲ್ಲಿ ಆರಂಭವಾದ ಈ ಚಿತ್ರ, ನನ್ನ ತಂಡದ ಸಹಕಾರದಿಂದ ನಿಗದಿಯಂತೆ ಪೂರ್ಣವಾಗಿದೆ. ಚಿತ್ರವನ್ನು ಮುಂದಿನ ತಿಂಗಳು ತೆರೆಗೆ ತರುವ ಸಿದ್ದತೆ ನಡೆಯತ್ತಿದೆ ಎಂದು ನಿರ್ದೇಶಕ ಹಾಗೂ ಛಾಯಾಗ್ರಾಹಕ ಪಿ‌ವಿಆರ್ ಸ್ವಾಮಿ ತಿಳಿಸಿದರು.

     ನಿರ್ಮಾಪಕ ನವೀನ್ ಬೀರಪ್ಪ,  ನಾಯಕಿರಾದ ನಿಖಿತ, ಸುಶ್ಮಿತ, ಜೀವಿತ, ನಟಿ ಪುಷ್ಪ ಸ್ವಾಮಿ, ನಟ ಹರೀಶ್ ರಾಜ್,  ಸಂಗೀತ ನಿರ್ದೇಶಕ ಅದ್ವಿಕ್ ವರ್ಮ, ಕಾರ್ಯಕಾರಿ ನಿರ್ಮಾಪಕ ಅರವಿಂದ್ ಹಾಗೂ ಸಂಭಾಷಣೆ ಬರೆದು ಸಂಕಲನ ಕಾರ್ಯವನ್ನು ಮಾಡುತ್ತಿರುವ ನಾಗೇಶ್ ಚಿತ್ರದ ಕುರಿತು ಮಾತನಾಡಿದರು.

  • ‘ಫಸ್ಟ್ ನೈಟ್ ವಿತ್ ದೆವ್ವ’ ಅಂತಾರೆ ಪ್ರಥಮ್: ಫೋಟೋ ವೈರಲ್

    ‘ಫಸ್ಟ್ ನೈಟ್ ವಿತ್ ದೆವ್ವ’ ಅಂತಾರೆ ಪ್ರಥಮ್: ಫೋಟೋ ವೈರಲ್

    ಮೊನ್ನೆಯಷ್ಟೇ ಹೊಸ ಜೀವನಕ್ಕೆ ಕಾಲಿಟ್ಟಿರುವ ನಟ ಪ್ರಥಮ್, ಇದೀಗ ದೆವ್ವದ ಜೊತೆ ಫಸ್ಟ್ ನೈಟ್ ಮಾಡಿಕೊಳ್ಳಲು ಸಜ್ಜಾಗಿದ್ದಾರೆ. ಅವರೇ ಹೇಳಿಕೊಂಡಂತೆ ಮದುವೆ ಮುಗಿಸಿಕೊಂಡು ಫಸ್ಟ್ ನೈಟ್ ವಿತ್ ದೆವ್ವ (First Night with Devva) ಸಿನಿಮಾದ ಶೂಟಿಂಗ್ ನಲ್ಲಿ ತೊಡಗಿಕೊಂಡಿದ್ದಾರೆ. ಸಿನಿಮಾದ ಫೋಟೋಶೂಟ್ ಒಂದರ ಫೋಟೋವನ್ನೂ ಅವರು ಹಂಚಿಕೊಂಡಿದ್ದಾರೆ.

    ಇದೊಂದು ಹಾರಾರ್ ವಿತ್ ಕಾಮಿಡಿ ಜಾನರ್ ನ ಸಿನಿಮಾವಾಗಿದ್ದು, ಚಿತ್ರದ ಬಗ್ಗೆ ನಾಯಕ ಪ್ರಥಮ್ (Pratham) ಮುಹೂರ್ತ ದಿನ ಮಾತನಾಡಿದ್ದು, ಈ ಚಿತ್ರಕ್ಕೆ ನಾನೇ ಕಥೆ ಬರೆದಿದ್ದೇನೆ. ನಾನು ಈ ಚಿತ್ರಕ್ಕೆ ಕಥೆ ಬರೆಯಲು ವಿಕ್ರಮ್ ಮತ್ತು ಬೇತಾಳ ಕಥೆ ಸ್ಪೂರ್ತಿ. ಸಾಕಷ್ಟು ಹಾರಾರ್ ಚಿತ್ರ ಬಂದಿದೆ. ಆದರೆ ನಾವು ಸ್ವಲ್ಪ ವಿಭಿನ್ನವಾಗಿ ತೋರಿಸುತ್ತಿದ್ದೇವೆ‌. ನಿಖಿತ ಅವರು  ನನ್ನ ಪತ್ನಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹಿರಿಯ ನಟರಾದ ಶ್ರೀನಿವಾಸಮೂರ್ತಿ, ಸಂಗೀತಾ, ಹರೀಶ್ ರಾಜ್, ತನುಜಾ ಮುಂತಾದವರು ಪ್ರಮುಖ ತಾರಾಬಳಗದಲ್ಲಿದ್ದಾರೆ. ಮಾನ್ಯ ಸಿಂಗ್ (Manya Singh) ದೆವ್ವದ ಪಾತ್ರ ಮಾಡುತ್ತಿದ್ದಾರೆ. ನನ್ನ ಸ್ನೇಹಿತ ನವೀನ್ ಈ ಚಿತ್ರ ನಿರ್ಮಿಸುತ್ತಿದ್ದಾರೆ ಎಂದು ತಿಳಿಸಿದ್ದರು.

    ಪ್ರಥಮ್ ಬರೆದಿರುವ ಕಥೆ ಚೆನ್ನಾಗಿದೆ. ನಾನು ಛಾಯಾಗ್ರಹಣದೊಂದಿಗೆ ನಿರ್ದೇಶನವನ್ನು ಮಾಡುತ್ತಿದ್ದೇನೆ‌. ಇಂದಿನಿಂದ ಬೆಂಗಳೂರಿನಲ್ಲಿ ಚಿತ್ರೀಕರಣ ಆರಂಭವಾಗಿದೆ. ಹಾಡಿನ ಚಿತ್ರೀಕರಣ ಹೊರದೇಶದಲ್ಲಿ ನಡೆಯಲಿದೆ ಎಂದಿದ್ದರು ನಿರ್ದೇಶಕ ಪಿ.ವಿ.ಆರ್ ಸ್ವಾಮಿ. ಇದೀಗ ಬೆಂಗಳೂರಿನಿಂದಲೇ ತಮ್ಮ ಸಿನಿಮಾದ ಚಿತ್ರೀಕರಣವನ್ನು ಶುರು ಮಾಡಿದ್ದಾರೆ.

    ನಿಖಿತ (Nikita) ಹಾಗೂ ಮಾನ್ಯ ಸಿಂಗ್ ಸಿನಿಮಾದ ನಾಯಕಿಯರಾಗಿದ್ದು, ಪ್ರಮುಖಪಾತ್ರದಲ್ಲಿ ಶ್ರೀನಿವಾಸಮೂರ್ತಿ,  ಸಂಗೀತ, ಹರೀಶ್ ರಾಜ್  ಕಾಣಿಸಿಕೊಳ್ಳಲಿದ್ದಾರೆ. ಸಂಗೀತ ನಿರ್ದೇಶನ ಅದ್ವಿಕ್ ವರ್ಮ ಹಾಗೂ ಸಂಭಾಷಣೆ ಬರೆದು ಸಂಕಲನ ಕಾರ್ಯವನ್ನು ಮಾಡುತ್ತಿರುವುದು ನಾಗೇಶ್.

  • ದೆವ್ವದ ಜೊತೆ ಪ್ರಥಮ್ ಫಸ್ಟ್ ನೈಟ್: ಏನಿದು ಸಿನಿಮಾ ಟೈಟಲ್

    ದೆವ್ವದ ಜೊತೆ ಪ್ರಥಮ್ ಫಸ್ಟ್ ನೈಟ್: ಏನಿದು ಸಿನಿಮಾ ಟೈಟಲ್

    ಬಿಗ್ ಬಾಸ್ ಮೂಲಕ ಜನಪ್ರಿಯರಾದ ನಟ ಪ್ರಥಮ್ ನಾಯಕನಾಗಿ ಅಭಿನಯಿಸುತ್ತಿರುವ, ಪಿ.ವಿ.ಆರ್ ಸ್ವಾಮಿ ಗೂಗಾರದೊಡ್ಡಿ ನಿರ್ದೇಶನದ ‘ಫಸ್ಟ್ ನೈಟ್ ವಿತ್ ದೆವ್ವ’  (First Night with Devva) ಚಿತ್ರದ ಮುಹೂರ್ತ ಸಮಾರಂಭ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ಹಿರಿಯನಟ ಶ್ರೀನಿವಾಸಮೂರ್ತಿ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು. ನಂತರ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.

    ಫಸ್ಟ್ ನೈಟ್ ವಿತ್ ದೆವ್ವ ಹಾರಾರ್ ವಿತ್ ಕಾಮಿಡಿ ಜಾನರ್ ನ ಚಿತ್ರ ಎಂದು ಮಾತನಾಡಿದ ನಾಯಕ ಪ್ರಥಮ್ (Pratham), ಈ ಚಿತ್ರಕ್ಕೆ ನಾನೇ ಕಥೆ ಬರೆದಿದ್ದೇನೆ. ನಾನು ಈ ಚಿತ್ರಕ್ಕೆ ಕಥೆ ಬರೆಯಲು ವಿಕ್ರಮ್ ಮತ್ತು ಬೇತಾಳ ಕಥೆ ಸ್ಪೂರ್ತಿ. ಸಾಕಷ್ಟು ಹಾರಾರ್ ಚಿತ್ರ ಬಂದಿದೆ. ಆದರೆ ನಾವು ಸ್ವಲ್ಪ ವಿಭಿನ್ನವಾಗಿ ತೋರಿಸುತ್ತಿದ್ದೇವೆ‌. ನಿಖಿತ ಅವರು  ನನ್ನ ಪತ್ನಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹಿರಿಯ ನಟರಾದ ಶ್ರೀನಿವಾಸಮೂರ್ತಿ, ಸಂಗೀತಾ, ಹರೀಶ್ ರಾಜ್, ತನುಜಾ ಮುಂತಾದವರು ಪ್ರಮುಖ ತಾರಾಬಳಗದಲ್ಲಿದ್ದಾರೆ. ಮಾನ್ಯ ಸಿಂಗ್ (Manya Singh) ದೆವ್ವದ ಪಾತ್ರ ಮಾಡುತ್ತಿದ್ದಾರೆ. ನನ್ನ ಸ್ನೇಹಿತ ನವೀನ್ ಈ ಚಿತ್ರ ನಿರ್ಮಿಸುತ್ತಿದ್ದಾರೆ ಎಂದು ತಿಳಿಸಿದರು.

    ಪ್ರಥಮ್ ಬರೆದಿರುವ ಕಥೆ ಚೆನ್ನಾಗಿದೆ. ನಾನು ಛಾಯಾಗ್ರಹಣದೊಂದಿಗೆ ನಿರ್ದೇಶನವನ್ನು ಮಾಡುತ್ತಿದ್ದೇನೆ‌. ಇಂದಿನಿಂದ ಬೆಂಗಳೂರಿನಲ್ಲಿ ಚಿತ್ರೀಕರಣ ಆರಂಭವಾಗಿದೆ. ಹಾಡಿನ ಚಿತ್ರೀಕರಣ ಹೊರದೇಶದಲ್ಲಿ ನಡೆಯಲಿದೆ ಎಂದರು ನಿರ್ದೇಶಕ ಪಿ.ವಿ.ಆರ್ ಸ್ವಾಮಿ.

    ಚಿತ್ರದ ನಾಯಕಿರಾದ ನಿಖಿತ ಹಾಗೂ ಮಾನ್ಯ ಸಿಂಗ್, ಪ್ರಮುಖಪಾತ್ರದಲ್ಲಿ ಅಭಿನಯಿಸುತ್ತಿರುವ ಶ್ರೀನಿವಾಸಮೂರ್ತಿ, ಸಂಗೀತ, ಹರೀಶ್ ರಾಜ್ ತಮ್ಮ ಪಾತ್ರದ ಕುರಿತು ಮಾಹಿತಿ ನೀಡಿದರು. ಸಂಗೀತ ನಿರ್ದೇಶಕ ಅದ್ವಿಕ್ ವರ್ಮ ಹಾಗೂ ಸಂಭಾಷಣೆ ಬರೆದು ಸಂಕಲನ ಕಾರ್ಯವನ್ನು ಮಾಡುತ್ತಿರುವ ನಾಗೇಶ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.