Tag: Fit India

  • ತೇಜಸ್ವಿ ಸೂರ್ಯ ಈಗ ಐರನ್ ಮ್ಯಾನ್ – 70.3 ರೇಸ್‌ನಲ್ಲಿ ವಿಜೇತರಾದ ಪ್ರಥಮ ಜನಪ್ರತಿನಿಧಿ!

    ತೇಜಸ್ವಿ ಸೂರ್ಯ ಈಗ ಐರನ್ ಮ್ಯಾನ್ – 70.3 ರೇಸ್‌ನಲ್ಲಿ ವಿಜೇತರಾದ ಪ್ರಥಮ ಜನಪ್ರತಿನಿಧಿ!

    ಬೆಂಗಳೂರು: ಗೋವಾದಲ್ಲಿಂದು ನಡೆದ ವಾಕಿಂಗ್, ಸ್ವಿಮ್ಮಿಂಗ್ ಹಾಗೂ ಸೈಕಲ್ ಮೂರು ರೀತಿಯ ಸ್ಪರ್ಧೆಯಲ್ಲಿ ಭಾಗವಹಿಸಿದ ಸಂಸದ ತೇಜಸ್ವಿ ಸೂರ್ಯ (Tejasvi Surya) ಅವರು 1,900 ಮೀ ಈಜು, 90 ಕಿಮೀ ಸೈಕ್ಲಿಂಗ್ ಮತ್ತು 21.1 ಕಿಮೀ ಓಟ ಮೂರು ವಿಭಾಗಗಳಲ್ಲಿ ಭಾಗಿಯಾಗಿ 8 ಗಂಟೆ, 27 ನಿಮಿಷ ಮತ್ತು 32 ಸೆಕೆಂಡುಗಳಲ್ಲಿ ಪೂರ್ಣಗೊಳಿಸಿದರು. ಈ‌ ಮೂಲಕ ಐರನ್ ಮ್ಯಾನ್ 70.3 ರೇಸ್‌ನಲ್ಲಿ (Ironman Race) ವಿಜೇತರಾದ ಪ್ರಥಮ ಜನಪ್ರತಿನಿಧಿ ಎಂಬ ಹೆಗ್ಗಳಿಕೆಗೆ ಸಂಸದ ತೇಜಸ್ವಿ ಸೂರ್ಯ ಭಾಜನರಾದ್ರು.

    ಈ ಸಂಸತವನ್ನು ಮಾಧ್ಯಮಗಳೊಂದಿಗೆ ಹಂಚಿಕೊಂಡ ಸಂಸದರು, ಗೋವಾ (Goa) ಐರನ್‌ಮ್ಯಾನ್ ಸ್ಪರ್ಧೆ ಕ್ರೀಡೆಗೆ ಹೆಸರುವಾಸಿಯಾಗಿದ್ದು, 50ಕ್ಕೂ ಹೆಚ್ಚು ದೇಶಗಳ ಕ್ರೀಡಾಪಟುಗಳು ಈ ರೇಸ್‌ನಲ್ಲಿ ಪಾಲ್ಗೊಂಡಿರುವುದು ವಿಶೇಷ ಎಂದರು. ಇದನ್ನೂ ಓದಿ: ಯೂಟ್ಯೂಬ್‌ನಲ್ಲಿ ಸಕ್ರಿಯವಾಗಿದ್ದ ಕೇರಳ ದಂಪತಿ ಮನೆಯಲ್ಲಿ ಶವವಾಗಿ ಪತ್ತೆ; ಕಾರಣ ನಿಗೂಢ

    ಈ ಸ್ಪರ್ಧೆಯಲ್ಲಿ ಭಾಗವಹಿಸುವುದು ಕಠಿಣ ಸವಾಲಾಗಿದ್ದು, ಕಳೆದ 4 ತಿಂಗಳಿಂದ ಫಿಟ್‌ನೆಸ್ ಅನ್ನು ಸುಧಾರಿಸಲು ಕಠಿಣವಾಗಿ ತರಬೇತಿ ಪಡೆದಿದ್ದು, ಪ್ರಸ್ತುತ ಈ ಸವಾಲನ್ನು ಪೂರ್ಣಗೊಳಿಸಿದ್ದಕ್ಕಾಗಿ ನನಗೆ ಅತ್ಯಂತ ಸಂತೋಷವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಫಿಟ್ ಇಂಡಿಯಾ ಉಪಕ್ರಮವು ಇಂತಹ ಸವಾಲನ್ನು ತೆಗೆದುಕೊಳ್ಳಲು ಪ್ರೇರಕವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಆರಂಭಿಸಿದ ʻಫಿಟ್‌ ಇಂಡಿಯಾ‌ʼ ಅಭಿಯಾನ ನನ್ನ ಇಂದಿನ ಅಭಿಯಾನಕ್ಕೆ ಸ್ಫೂರ್ತಿಯಾಗಿದೆ ಎಂದು ಶ್ಲಾಘಿಸಿದ್ರು. ಇದನ್ನೂ ಓದಿ:  ವಕ್ಫ್‌ ಆಸ್ತಿ ವಿವಾದ | 1964-1974ರ ದಾಖಲೆ ಪರಿಶೀಲಿಸಿ ಕ್ರಮವಹಿಸಲು ಟಾಸ್ಕ್ ಫೋರ್ಸ್ ರಚನೆ

    ಇದೇ ಸಂದರ್ಭದಲ್ಲಿ, ನನ್ನ ದೈಹಿಕ ಸಾಮರ್ಥ್ಯವು ದೇಶದ ಅಭ್ಯುದಯಕ್ಕೆ ಸಹಕಾರಿಯಾಗಲಿದೆ ಎಂಬ ವಿಶ್ವಾಸ ಮೂಡಿದೆ. ದೊಡ್ಡ ಮಹತ್ವಾಕಾಂಕ್ಷೆಗಳನ್ನು ಬೆನ್ನಟ್ಟುತ್ತಿರುವ ಭಾರತವು ಯುವ ರಾಷ್ಟ್ರವಾಗಿ ರೂಪುಗೊಳಿಸುವಲ್ಲಿ ನಮ್ಮ ದೈಹಿಕ ಸಾಮರ್ಥ್ಯ ಪೋಷಿಸುವಲ್ಲಿ ಹೆಚ್ಚಿನ ಉತ್ತೇಜನ ದೊರಕಿದ್ದು, ಭಾರತವನ್ನು ಆರೋಗ್ಯಕರ ರಾಷ್ಟ್ರವಾಗಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಈ ಮೂಲಕ ನಮ್ಮ ದೈಹಿಕ ಸಾಮರ್ಥ್ಯವನ್ನು ಸ್ಥಿರವಾಗಿಸಿಕೊಳ್ಳುವ ಮೂಲಕ ಯಾವುದೇ ಉದ್ಯಮದಲ್ಲಿ ಯಶಸ್ಸಿನ ಸಾಧ್ಯತೆಗಳನ್ನು ಸುಧಾರಿಸಬಹುದಾಗಿದೆ‌.‌ #FitIndia ಅಭಿಯಾನವು ಕ್ರೀಡಾ ಸ್ಫೂರ್ತಿ, ಜಾಗೃತಿಯನ್ನು ಹೆಚ್ಚಿಸುವಲ್ಲಿ ಮತ್ತು ಹೆಚ್ಚಿನ ಜನರನ್ನು ಫಿಟ್‌ನೆಸ್ ದಿನಚರಿಗೆ ತರುವಲ್ಲಿ ಸಹಕಾರಿಯಾಗಿದೆ. ಅದು ನಮ್ಮ ರಾಷ್ಟ್ರಕ್ಕೆ ಮೂಲಭೂತವಾಗಿ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

  • ‘ಫಿಟ್ ಇಂಡಿಯಾ’ ಬಗ್ಗೆ ಅರಿವು ಮೂಡಿಸಲು ಜಿಮ್‌ನಲ್ಲಿ ವರ್ಕೌಟ್ ಮಾಡಿದ ಮೋದಿ

    ‘ಫಿಟ್ ಇಂಡಿಯಾ’ ಬಗ್ಗೆ ಅರಿವು ಮೂಡಿಸಲು ಜಿಮ್‌ನಲ್ಲಿ ವರ್ಕೌಟ್ ಮಾಡಿದ ಮೋದಿ

    ಲಕ್ನೋ: ಪ್ರಧಾನಿ ನರೇಂದ್ರ ಮೋದಿ ‘ಫಿಟ್ ಇಂಡಿಯಾ’ ಬಗ್ಗೆ ಅರಿವು ಮೂಡಿಸಲು ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸುದ್ದಿಯಾಗಿದೆ.

    ನರೇಂದ್ರ ಮೋದಿ ದೇಶದಲ್ಲಿ ಕ್ರೀಡಾ ಸಂಸ್ಕೃತಿಯನ್ನು ಹುಟ್ಟುಹಾಕಿ, ವಿಶ್ವದರ್ಜೆಯಲ್ಲಿ ಅಥ್ಲೆಟಿಕ್ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಬೇಕು ಎಂಬುದು ಅವರ ಬಹುದೊಡ್ಡ ಆಸೆಯಾಗಿದೆ. ಈ ಹಿನ್ನೆಲೆ ಇಂದು ಮೋದಿ ಅವರು ಉತ್ತರ ಪ್ರದೇಶದ ಮೀರತ್‍ನಲ್ಲಿ ಮೇಜರ್ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾಲಯಕ್ಕೆ ಅಡಿಪಾಯ ಹಾಕಿದರು. ಇದನ್ನೂ ಓದಿ: ಗಡಿಯೊಳಗೆ ನುಸುಳಿದ ಪಾಕ್ ಯೋಧನ ಹತ್ಯೆ – ಶವವನ್ನ ಹಿಂದಕ್ಕೆ ತೆಗೆದುಕೊಳ್ಳಿ ಎಂದ ಭಾರತೀಯ ಸೇನೆ

    ಈ ವಿಶ್ವವಿದ್ಯಾಲಯವನ್ನು ಮೀರತ್‍ನ ಸರ್ಧಾನ ಪಟ್ಟಣದ ಸಲಾವಾ ಮತ್ತು ಕೈಲಿ ಪ್ರದೇಶಗಳಲ್ಲಿ 700 ಕೋಟಿ ರೂ. ಗಳಲ್ಲಿ ನಿರ್ಮಿಸಲು ಯೋಜಿಸಲಾಗಿದೆ. ಸಂಸ್ಥೆಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಜಿಮ್‍ಗೆ ತೆರಳಿದ ಮೋದಿ ಅವರು ದೇಶಾದ್ಯಂತ ‘ಫಿಟ್ ಇಂಡಿಯಾ’ ಎಂಬ ಸಂದೇಶವನ್ನು ಹರಡುವ ಸಲುವಾಗಿ ಸ್ವತಃ ಅವರೇ ಜಿಮ್ ನಲ್ಲಿ ವರ್ಕೌಟ್ ಮಾಡಿದ್ದಾರೆ. ಈ ವೀಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದ್ದು, ಮೋದಿ ಅಭಿಮಾನಿಗಳು ಖುಷ್ ಆಗಿದ್ದಾರೆ.

    ಈ ವೇಳೆ ಮಾತನಾಡಿದ ಮೋದಿ ಅವರು, 700 ಕೋಟಿ ರೂಪಾಯಿ ಮೌಲ್ಯದ ಈ ವಿಶ್ವವಿದ್ಯಾಲಯವು ಯುವಕರಿಗೆ ಅಂತಾರಾಷ್ಟ್ರೀಯ ಕ್ರೀಡಾ ಸೌಲಭ್ಯಗಳನ್ನು ಒದಗಿಸುತ್ತದೆ. ಪ್ರತಿ ವರ್ಷ 1000ಕ್ಕೂ ಹೆಚ್ಚು ಹುಡುಗಿಯರು ಮತ್ತು ಹುಡುಗರು ಇಲ್ಲಿಂದ ಪದವಿ ಪಡೆಯುತ್ತಾರೆ ಎಂದು ತಿಳಿಸಿದರು.

    ಏನಿದರ ವಿಶೇಷತೆ?
    ಈ ಕ್ರೀಡಾ ವಿಶ್ವವಿದ್ಯಾಲಯದಲ್ಲಿ ಹಾಕಿ, ಫುಟ್‍ಬಾಲ್ ಮೈದಾನಗಳು, ಬ್ಯಾಸ್ಕೆಟ್‍ಬಾಲ್, ವಾಲಿಬಾಲ್, ಹ್ಯಾಂಡ್‍ಬಾಲ್ ಮತ್ತು ಕಬಡ್ಡಿ ಮೈದಾನ, ಲಾನ್ ಟೆನ್ನಿಸ್ ಕೋರ್ಟ್, ಜಿಮ್ನಾಷಿಯಂ ಹಾಲ್, ಸಿಂಥೆಟಿಕ್ ರನ್ನಿಂಗ್ ಸ್ಟೇಡಿಯಂ, ಈಜುಕೊಳ, ಹಲವು ಹಾಲ್ ಮತ್ತು ಸೈಕ್ಲಿಂಗ್ ಟ್ರ್ಯಾಕ್ ಎಲ್ಲ ರೀತಿಯ ಕ್ರೀಡೆಗಳಿಗೂ ಇಲ್ಲಿ ಸ್ಥಳವಕಾಶವನ್ನು ನೀಡಲಾಗುತ್ತೆ. ಈ ವಿಶ್ವವಿದ್ಯಾಲಯದಲ್ಲಿ ಆರ್ಚರಿ, ವೇಟ್‍ಲಿಫ್ಟಿಂಗ್, ಶೂಟಿಂಗ್, ಕ್ಯಾನೋಯಿಂಗ್, ಕಯಾಕಿಂಗ್, ಜಿಮ್ನಾಸ್ಟಿಕ್ಸ್ ಮತ್ತು ಸ್ಕ್ವಾಷ್ ಸೇರಿದಂತೆ ಕ್ರೀಡೆಗೆ ಸಂಬಂಧಿಸಿದಂತೆ ಹಲವು ಸೌಲಭ್ಯಗಳು ಲಭ್ಯವಿರುತ್ತವೆ. ಇದನ್ನೂ ಓದಿ: ತಿರುಕನ ಕನಸು ಕಾಣುತ್ತಿರುವ ಕಾಂಗ್ರೆಸ್, ತಿರುಕನ ರೀತಿಯೇ ಇರಲಿ: ಆರ್.ಅಶೋಕ್

    ಘೋಷಣೆಯ ಪ್ರಕಾರ, ವಿಶ್ವವಿದ್ಯಾನಿಲಯವು 540 ಮಹಿಳೆಯರು ಮತ್ತು 540 ಪುರುಷರನ್ನು ಒಳಗೊಂಡಂತೆ 1,080 ಕ್ರೀಡಾಪಟುಗಳಿಗೆ ತರಬೇತಿ ನೀಡಲು ಸಾಧ್ಯವಾಗುತ್ತದೆ.

  • ಯಶಸ್ಸಿಗಾಗಿ ಲಿಫ್ಟ್ ಅಲ್ಲ, ಮೆಟ್ಟಿಲು ಬಳಸಿ- ಫಿಟ್ ಇಂಡಿಯಾಗೆ ಮೋದಿ ಚಾಲನೆ

    ಯಶಸ್ಸಿಗಾಗಿ ಲಿಫ್ಟ್ ಅಲ್ಲ, ಮೆಟ್ಟಿಲು ಬಳಸಿ- ಫಿಟ್ ಇಂಡಿಯಾಗೆ ಮೋದಿ ಚಾಲನೆ

    ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ‘ಫಿಟ್ ಇಂಡಿಯಾ ಅಭಿಯಾನ ಚಾಲನೆ ನೀಡಿ ರಾಷ್ಟ್ರದ ಜನರು ಸದೃಢರಾಗುವಂತೆ ಕೋರಿಕೊಂಡಿದ್ದಾರೆ.

    ಇಂದು ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಫಿಟ್ ಇಂಡಿಯಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಯಶಸ್ಸಿಗಾಗಿ ಲಿಫ್ಟ್ ಅಲ್ಲ, ಮೆಟ್ಟಿಲುಗಳನ್ನು ಬಳಸಿ ಫಿಟ್ ಆಗಿರಬೇಕು ಎಂದು ಕರೆಕೊಟ್ಟರು.

    ಸಚಿವರು, ಶಾಲಾ ಮಕ್ಕಳು ಮತ್ತು ಸೆಲೆಬ್ರಿಟಿಗಳು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅದು ಬೋರ್ಡ್ ರೂಮ್ ಆಗಿರಲಿ ಬಾಲಿವುಡ್ ಆಗಿರಲಿ ನಾವು ಫಿಟ್ ಆಗಿರಬೇಕು. ನಮಗೆ ಫಿಟ್ ಆದ ದೇಹವಿದ್ದರೆ. ಮನಸ್ಸು ನಿಯಂತ್ರಣದಲ್ಲಿರುತ್ತದೆ. ಈ ಫಿಟ್ ಇಂಡಿಯಾ ಚಾಲೆಂಜ್ ಅನ್ನು ಎಲ್ಲರೂ ಸ್ವೀಕರಿಸಬೇಕು. ‘ಸ್ವಚ್ಛ ಭಾರತ್’ ಅಭಿಯಾನದಂತೆ ಇದನ್ನು ಎಲ್ಲರೂ ಸ್ವೀಕಾರ ಮಾಡಿ ಎಂದು ಜನರಲ್ಲಿ ಮೋದಿ ಕೋರಿಕೊಂಡರು.

    ನಾವು ಫಿಟ್‍ನೆಸ್ ಅನ್ನು ಜೀವನದ ಮಂತ್ರವಾಗಿ ಮಾಡಿಕೊಳ್ಳಬೇಕು. ನಾವು ಆಹಾರ ಪದ್ಧತಿ ಮತ್ತು ದೇಹದ ಫಿಟ್‍ನೆಸ್ ಬಗ್ಗೆ ಮಾತನಾಡುತ್ತೇವೆ ಆದರೆ ಊಟದ ಟೇಬಲ್ ಬಳಿ ಬಂದಾಗ ನಾವು ಅದನ್ನು ಪಾಲಿಸುವುದಿಲ್ಲ. ಈಗಿನ ನಮ್ಮ ಯಂತ್ರಚಾಲಿತ ಜೀವನ ಶೈಲಿಗೆ ನಮ್ಮ ತಂತ್ರಜ್ಞಾನವು ಬಹುದೊಡ್ಡ ಕಾರಣ. ಕೆಲವು ದಶಕಗಳ ಹಿಂದೆ, ಒಬ್ಬ ಸಾಮಾನ್ಯ ವ್ಯಕ್ತಿಯು ದಿನದಲ್ಲಿ 8-10 ಕಿ.ಮೀ ನಡೆಯುತ್ತಿದ್ದ, ಸೈಕ್ಲಿಂಗ್ ಮಾಡುತ್ತಿದ್ದ ಅಥವಾ ಓಡುತ್ತಿದ್ದನು. ಆದರೆ ಈಗ ತಂತ್ರಜ್ಞಾನದಿಂದ ಈ ಎಲ್ಲಾ ದೈಹಿಕ ಚಟುವಟಿಕೆ ಕಡಿಮೆಯಾಗಿದೆ. ನಾವು ಈಗ ಕಡಿಮೆ ನಡೆಯುತ್ತೇವೆ ಎಂದು ಮೋದಿ ಹೇಳಿದರು.

    ತಮ್ಮ ದೈನಂದಿನ ದಿನಚರಿಯಲ್ಲಿ ದಿನ ಯೋಗ ಮಾಡುವ ಮೋದಿ ಅವರು ಜನರು ಜೀವನ ಶೈಲಿಯನ್ನು ಬದಲಾವಣೆ ಮಾಡಿಕೊಳ್ಳಬೇಕು ಎಂದು ಒತ್ತಾಯ ಮಾಡಿದ್ದಾರೆ. ನಾವು ಹಿಂದಿನ ಕಾಲದಲ್ಲಿ 60 ವರ್ಷ ಆದ ನಂತರ ಹೃದಯಾಘಾತವಾಗುತ್ತದೆ ಎಂದು ಕೇಳಿದ್ದವು. ಆದರೆ ಈಗ 30, 40 ವರ್ಷಕ್ಕೆ ಜನರು ಹೃದಯಾಘಾತದಿಂದ ಬಳಲುತ್ತಿದ್ದಾರೆ. ಇದಕ್ಕೆ ಕಾರಣ ನಮ್ಮ ಜೀವನ ಶೈಲಿ. ನಮ್ಮ ಜೀವನದಲ್ಲಿ ನಾವು ಮಾಡಿಕೊಂಡ ಸಣ್ಣ ಬದಲಾವಣೆ ನಮ್ಮ ಜೀವನದಲ್ಲಿ ದೊಡ್ಡ ವ್ಯತ್ಯಾಸವನ್ನು ಉಂಟುಮಾಡುತ್ತದೆ ಎಂದು ಮೋದಿ ಅಭಿಪ್ರಾಯಪಟ್ಟರು.

    ಈ ಫಿಟ್ ಇಂಡಿಯಾ ಚಳುವಳಿಯು ರಾಷ್ಟ್ರೀಯ ಕ್ರೀಡಾದಿನವನ್ನು ಸೂಚಿಸುತ್ತದೆ. ರಾಷ್ಟ್ರದ ಜನರ ದೈನಂದಿನ ದಿನದಲ್ಲಿ ದೈಹಿಕ ಚಟುವಟಿಕೆಗಳು ಮತ್ತು ಕ್ರೀಡೆಯನ್ನು ಪ್ರೋತ್ಸಾಹಿಸುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ.