ಅಕ್ಟೋಬರ್ 26 ರಿಂದ ಕೋಲ್ಕತ್ತಾದಿಂದ ಗುವಾಂಗ್‌ಝೌಗೆ ಪ್ರತಿನಿತ್ಯ ಇಂಡಿಗೋ ವಿಮಾನ ಹಾರಾಟ ನಡೆಸಲಿದೆ. ಮೂಲಗಳ ಪ್ರಕಾರ ಏರ್ ಇಂಡಿಯಾ ವರ್ಷಾಂತ್ಯದ ವೇಳೆಗೆ ಚೀನಾಕ್ಕೆ ತನ್ನ ವಿಮಾನ ಸೇವೆಗಳನ್ನು ಪುನರಾರಂಭಿಸುವ ಸಾಧ್ಯತೆಯಿದೆ. ಇದನ್ನೂ ಓದಿ: Chennai | ಅನುಮತಿಯಿಲ್ಲದೆ ಕಾರ್ಯಕ್ರಮ ಆಯೋಜಿಸಿದ 47 RSS ಕಾರ್ಯಕರ್ತರ ಬಂಧನ
ಡೋಕ್ಲಾಮ್ ಘರ್ಷಣೆಯ ಬಳಿಕ ವಿಮಾನ ಹಾರಾಟ ಸ್ಥಗಿತಗೊಳಿಸಲಾಗಿತ್ತು. ಕೋವಿಡ್ -19 ಸಾಂಕ್ರಾಮಿಕ ರೋಗ ಬಂದ ನಂತರ ಸ್ಥಗಿತಗೊಂಡಿದ್ದ ವಿಮಾನ ಹಾರಾಟ ಮತ್ತೇ ಆರಂಭಗೊಂಡಿರಲಿಲ್ಲ.
ನವದೆಹಲಿ: ದೆಹಲಿಯಲ್ಲಿ (New Delhi) ಭಾರೀ ಮಳೆ (Heavy Rain) ಸುರಿದ ಪರಿಣಾಮ ನಗರದ ಕೆಲವು ಭಾಗಗಳಲ್ಲಿ ಜನಜೀವನ ಅಸ್ತವ್ಯಸಗೊಂಡಿದೆ. ಭಾರೀ ಮಳೆಯ ಹಿನ್ನೆಲೆ ಇಂದು ದೆಹಲಿಯಲ್ಲಿ ರೆಡ್ ಅಲರ್ಟ್ (Red Alert) ಘೋಷಣೆ ಮಾಡಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಶಾಸ್ತ್ರಿ ಭವನ, ಆರ್‌ಕೆ ಪುರಂ, ಮೋತಿ ಬಾಗ್ ಮತ್ತು ಕಿದ್ವಾಯಿ ನಗರ ಸೇರಿದಂತೆ ದೆಹಲಿ-ಎನ್‌ಸಿಆರ್‌ನ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಿದೆ. ಮಳೆಗೆ ನಗರದ ರಸ್ತೆಗಳಲ್ಲಿ ನೀರು ನಿಂತು ಸಂಚಾರ ಅಸ್ತವ್ಯಸ್ತಗೊಂಡಿದೆ. ದೆಹಲಿಯಲ್ಲಿ ಮಿಂಚು ಮತ್ತು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಭಾರೀ ಮಳೆಯ ಪರಿಣಾಮ ಪಂಚಕುಯಿಯನ್ ಮಾರ್ಗ್, ಮಿಂಟೋ ರಸ್ತೆ, ಮಥುರಾ ರಸ್ತೆ ಹಾಗೂ ಭಾರತ್ ಮಂಟಪದ ಗೇಟ್ ಸಂಖ್ಯೆ 7 ಜಲಾವೃತಗೊಂಡಿದೆ. ಇದನ್ನೂ ಓದಿ: ಆಪರೇಷನ್ ಅಖಾಲ್ | ಭದ್ರತಾ ಸಿಬ್ಬಂದಿ, ಉಗ್ರರ ನಡುವೆ ಗುಂಡಿನ ಚಕಮಕಿ – ಇಬ್ಬರು ಯೋಧರು ಹುತಾತ್ಮ
ಇನ್ನು ಗೌತಮಬುದ್ಧನಗರದಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ದೆಹಲಿ, ಎನ್‌ಸಿಆರ್‌ನ ಹೆಚ್ಚಿನ ಸ್ಥಳಗಳಲ್ಲಿ ಮಧ್ಯಮದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಗೋಹಾನಾ, ಸೋನಿಪತ್, ರೋಹ್ಟಕ್, ಸೋಹಾನಾ, ಪಲ್ವಾಲ್, ನುಹ್, ಔರಂಗಾಬಾದ್ ಮತ್ತು ಇತರ ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದನ್ನೂ ಓದಿ: ಧರ್ಮಸ್ಥಳದಲ್ಲಿ ಸಮಾಧಿ ಶೋಧ ಮ್ಯಾರಥಾನ್ – ಐದು ಅಡಿ ಅಗೆದರೂ ಸಿಕ್ಕಿದ್ದು ಬರೀ ಮಣ್ಣು
ವಾಷಿಂಗ್ಟನ್: ಅಮೆರಿಕದ ಡೆನ್ವರ್ ವಿಮಾನ (American Airlines) ನಿಲ್ದಾಣದಿಂದ (Denver Airport) ಮಿಯಾಮಿಗೆ ತೆರಳಬೇಕಿದ್ದ ಅಮೇರಿಕನ್ ಏರ್‌ಲೈನ್ಸ್‌ನ ಬೋಯಿಂಗ್ 737 MAX 8 ವಿಮಾನದ ಲ್ಯಾಂಡಿಂಗ್ ಗೇರ್ ಕೈಕೊಟ್ಟಿದೆ. ಪೈಲಟ್ ಟೇಕಾಫ್ ಸ್ಥಗಿತಗೊಳಿಸಿದ್ದು, ಈ ವೇಳೆ ವಿಮಾನದ ಹಿಂಭಾಗದಲ್ಲಿ ದೊಡ್ಡ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ.
ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ವಿಮಾನದ ತುರ್ತು ದ್ವಾರಗಳಿಂದ ಪ್ರಯಾಣಿಕರು ಹಾಗೂ ಸಿಬ್ಬಂದಿ ಸುರಕ್ಷಿತವಾಗಿ ಕೆಳಗೆ ಇಳಿದಿದ್ದಾರೆ. ಸ್ಥಳೀಯ ಕಾಲಮಾನ ಮಧ್ಯಾಹ್ನ 2:45 ಕ್ಕೆ ಈ ಘಟನೆ ಸಂಭವಿಸಿದೆ. ಈ ಅವಘಡದಲ್ಲಿ 6 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ, ಇದರಲ್ಲಿ ಒಬ್ಬನಿಗೆ ಚಿಕಿತ್ಸೆ ಅಗತ್ಯವಿತ್ತು ಆತನನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಫ್ಯುಯೆಲ್ ಸ್ವಿಚ್ ನಿರ್ವಹಿಸುವಾಗ ಜಾಗ್ರತೆ – ಪೈಲಟ್‍ಗಳಿಗೆ ಆದೇಶಿಸಿದ ಇತಿಹಾದ್ ಏರ್‌ಲೈನ್ಸ್
ಟೆಕಾಫ್ ಆಗುವ ಕೆಲವೇ ಕ್ಷಣಗಳ ಮೊದಲು ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. ಎಚ್ಚೆತ್ತ ಪೈಲಟ್ ವಿಮಾನವನ್ನು ಹಠಾತ್ ಆಗಿ ನಿಲ್ಲಿಸಿದ್ದಾರೆ. ಈ ವೇಳೆ ಟೈರ್‌ಗಳು ಮತ್ತು ಬ್ರೇಕಿಂಗ್ ಲ್ಯಾಂಡಿಂಗ್ ಗೇರ್ ಬಳಿ ಬೆಂಕಿ ಕಾಣಿಸಿದೆ. ವಿಮಾನ ಕೆಲ ಸಮಯ ರನ್ ವೇಯಲ್ಲೇ ನಿಂತಿದ್ದರಿಂದ 90 ವಿಮಾನಗಳ ಹಾರಾಟ ವಿಳಂಬವಾಗಿದೆ.
ವಿಮಾನದಲ್ಲಿದ್ದ ಎಲ್ಲಾ 173 ಪ್ರಯಾಣಿಕರು ಮತ್ತು ಆರು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ವಿಮಾನವನ್ನು ರನ್ ವೇಯಿಂದ ಸ್ಥಳಾಂತರಿಸಲಾಗಿದೆ. ವಿಮಾನಯಾನ ಸಂಸ್ಥೆಯು ವಿಮಾನದಲ್ಲಿನ ಸಮಸ್ಯೆಯನ್ನು ಗುರುತಿಸಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಮುಂಬೈ ಏರ್‌ಪೋರ್ಟ್‌ನಲ್ಲಿ ಆಕಾಸ ಏರ್ ವಿಮಾನಕ್ಕೆ ಟ್ರಕ್ ಡಿಕ್ಕಿ
ನವದೆಹಲಿ: ದೆಹಲಿ(Delhi) ಮತ್ತು ಎನ್‌ಆರ್‌ಸಿಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶನಿವಾರ ರಾತ್ರಿ ಇಡೀ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಹಲವೆಡೆ ರಸ್ತೆಗಳು ಜಲಾವೃತವಾಗಿ ಸಂಚಾರ ಅಸ್ತವ್ಯಸ್ತವಾಗಿದೆ.
ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ(Indira Gandhi International Airport) ಬೀಸಿದ ಬಿರುಗಾಳಿ ಮತ್ತು ಭಾರೀ ಮಳೆಯಿಂದಾಗಿ 100ಕ್ಕೂ ಹೆಚ್ಚು ವಿಮಾನಗಳ ಕಾರ್ಯಾಚರಣೆ ವಿಳಂಬವಾಗಿದೆ. ಅಲ್ಲದೇ ಭಾರೀ ಮಳೆಗೆ 25ಕ್ಕೂ ಹೆಚ್ಚು ವಿಮಾನಗಳನ್ನು ಬೇರೆಡೆಗೆ ತಿರುಗಿಸಲಾಗಿದೆ. ಇದನ್ನೂ ಓದಿ: ಕೋವಿಡ್ ಆತಂಕ – ಬೆಂಗಳೂರಿನ ಮಲ್ಲೇಶ್ವರಂ, ರಾಜಾಜಿನಗರದ ಇಬ್ಬರಿಗೆ ಕೊರೊನಾ ಪಾಸಿಟಿವ್
ದೆಹಲಿಯ ಮೋತಿ ಬಾಗ್, ಮಿಂಟೋ ರಸ್ತೆ, ದೆಹಲಿ ಕಂಟೋನ್ಮೆಂಟ್ ಮತ್ತು ದೀನ್ ದಯಾಳ್ ಉಪಾಧ್ಯಾಯ ಮಾರ್ಗಗಳು ಸಂಪೂರ್ಣ ಜಲಾವೃತವಾಗಿತ್ತು. ಮಹಿಪಾಲಪುರ ಮೇಲ್ಸೇತುವೆಯ ಕೆಳಗೆ ನೀರು ನಿಂತ ಪರಿಣಾಮ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಇದನ್ನೂ ಓದಿ: ಕಾಲುಗಳಿಗೆ ಹಗ್ಗ ಕಟ್ಟಿ ಒಂದೇ ಕುಟುಂಬದ ಮೂವರು ಕೆರೆಗೆ ಹಾರಿ ಆತ್ಮಹತ್ಯೆ
ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಕಾರ್ಯಾಚರಣೆಗಳ ಮೇಲೆ ಮಳೆ ಪರಿಣಾಮ ಬೀರಿದೆ. ದೆಹಲಿಯ ಮೇಲಿನ ಪ್ರತಿಕೂಲ ಹವಾಮಾನದಿಂದಾಗಿ ವಿಮಾನ ಕಾರ್ಯಾಚರಣೆಗಳಲ್ಲಿ ತಾತ್ಕಾಲಿಕ ಅಡಚಣೆ ಉಂಟಾಗಿದೆ ಎಂದು ಇಂಡಿಗೋ(Indigo) ಎಕ್ಸ್‌ನಲ್ಲಿ ಪೋಸ್ಟ್ ಮಾಡುವ ಮೂಲಕ ಮಾಹಿತಿ ನೀಡಿದೆ. ಇದನ್ನೂ ಓದಿ: ‘ಬ್ರೋಕನ್ ಹಾರ್ಟ್ ಸಿಂಡ್ರೋಮ್’; ಇದು ಹೃದಯದ ಮಾತು – ಪುರುಷರೇ ಜೋಕೆ!
ಇದೀಗ ಭಾರೀ ಮಳೆಗೆ ರಾಜಧಾನಿ ನವದೆಹಲಿ ಸೇರಿ ಹಲವೆಡೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ನವದೆಹಲಿ: ಭಾರತವು ಪಾಕಿಸ್ತಾನದ(Pakistan) ಉಗ್ರರ ತಾಣಗಳ ಮೇಲೆ ದಾಳಿ ನಡೆಸಿದ ಬೆನ್ನಲ್ಲೇ ವಾಯುನೆಲೆಯನ್ನು ನಿರ್ಬಂಧಿಸಲಾಗಿದ್ದು, ಭಾರತದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋ(Indigo) 165ಕ್ಕೂ ಹೆಚ್ಚು ವಿಮಾನಯಾನವನ್ನು ಸ್ಥಗಿತಗೊಳಿಸಿದೆ.
ಪರಿಸ್ಥಿತಿ ಸೂಕ್ಷ್ಮತೆಯನ್ನು ಗಮನಿಸಿ ಇತರ ನಿಲ್ದಾಣಗಳಿಗೆ ವಿಮಾನ ಹಾರಾಟವನ್ನು ಹೊಂದಾಣಿಕೆ ಮಾಡಲಾಗುವುದು. ವಿಮಾನ ನಿಲ್ದಾಣಕ್ಕೆ ಹೋಗುವ ಮೊದಲು ಪ್ರಯಾಣಿಕರು ತಮ್ಮ ಪ್ರಯಾಣದ ಸ್ಥಿತಿಯನ್ನು ಪರಿಶೀಲಿಸುವಂತೆ ಗ್ರಾಹಕರಿಗೆ ಇಂಡಿಗೋ ಸಲಹೆ ನೀಡಿದೆ. ಇದನ್ನೂ ಓದಿ: JEM ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್ ಅಜರ್ ಕುಟುಂಬದ 10 ಜನ ಸೇರಿ 14 ಮಂದಿ ಹತ್ಯೆ
ಅಲ್ಲದೇ ಏರ್ ಇಂಡಿಯಾ(Air India) ಸಂಸ್ಥೆ ಕೂಡ ಜಮ್ಮು, ಶ್ರೀನಗರ, ಲೇಹ್, ಜೋಧ್‌ಪುರ, ಅಮೃತಸರ, ಭುಜ್, ಜಾಮ್‌ನಗರ, ಚಂಡೀಗಢ ಮತ್ತು ರಾಜ್‌ಕೋಟ್ ನಿಲ್ದಾಣಗಳಿಗೆ ತೆರಳುವ ಮತ್ತು ಅಲ್ಲಿಂದ ಹೊರಡುವ ಎಲ್ಲಾ ವಿಮಾನಗಳ ಹಾರಾಟಗಳನ್ನು ಮೇ 10ರ ವರೆಗೆ ಬಂದ್ ಮಾಡಿದೆ ಎಂದು ಎಕ್ಸ್ ಮೂಲಕ ತಿಳಿಸಿದೆ. ಇದನ್ನೂ ಓದಿ: ಏರ್‌ಸ್ಟ್ರೈಕ್‌ಗೆ ಸಾಕ್ಷಿ ಎಲ್ಲಿದೆ ಅಂದವರ ಬಾಯಿಯನ್ನೇ ಬಂದ್ ಮಾಡಿದ ಸೇನೆ!
`ಆಪರೇಷನ್ ಸಿಂಧೂರ'(Operation Sindoor) ಅಡಿಯಲ್ಲಿ ಭಾರತವು ಪಾಕಿಸ್ತಾನದ 9 ಉಗ್ರರ ಅಡಗುತಾಣಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಯ ನಂತರ ಭಾರತದ ಗಡಿಭಾಗಗಳಲ್ಲಿ ವಿಮಾನ ಹಾರಾಟವನ್ನು ನಿಷೇಧಿಸಲಾಗಿದೆ. ಇದನ್ನೂ ಓದಿ: I TOLD MODI – ಆಪರೇಷನ್ ಸಿಂಧೂರ ಬೆನ್ನಲ್ಲೇ ಕಾರ್ಟೂನ್ ವೈರಲ್ !
18 ಏರ್‌ಪೋರ್ಟ್‌ಗಳ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತ
ಇನ್ನೂ ʻಆಪರೇಷನ್ ಸಿಂಧೂರʼ ಬೆನ್ನಲ್ಲೇ ಏರ್ ಇಂಡಿಯಾ, ಇಂಡಿಗೋ, ಸ್ಪೈಸ್‌ಜೆಟ್, ಏರ್ ಇಂಡಿಯಾ ಎಕ್ಸ್‌ಪ್ರೆಸ್, ಆಕಾಶ ಏರ್ ಮತ್ತು ಕೆಲವು ವಿದೇಶಿ ವಿಮಾನಯಾನ ಸಂಸ್ಥೆಗಳು ವಿವಿಧ ವಿಮಾನ ನಿಲ್ದಾಣಗಳಿಗೆ ತಮ್ಮ ಸೇವೆಗಳನ್ನು ರದ್ದುಗೊಳಿಸಿವೆ. ಒಟ್ಟು 18 ವಿಮಾನ ನಿಲ್ದಾಣಗಳ ಕಾರ್ಯಾಚರಣೆಯನ್ನ ರದ್ದುಗೊಳಿಸಲಾಗಿದೆ, ಈ ಪೈಕಿ ಶ್ರೀನಗರ, ಲೇಹ್, ಜಮ್ಮು, ಅಮೃತಸರ, ಪಠಾಣ್‌ಕೋಟ್, ಚಂಡೀಗಢ, ಜೋಧ್‌ಪುರ, ಜೈಸಲ್ಮೇರ್, ಶಿಮ್ಲಾ, ಧರ್ಮಶಾಲಾ ಮತ್ತು ಜಾಮ್‌ನಗರ ನಿಲ್ದಾಣಗಳೂ ಸೇರಿವೆ. ಒಟ್ಟಾರೆಯಾಗಿ ವಿವಿಧ ವಿಮಾನಯಾನ ಸಂಸ್ಥೆಗಳ 200ಕ್ಕೂ ಹೆಚ್ಚು ವಿಮಾನ ಹಾರಾಟವನ್ನ ರದ್ದುಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ.
ಪಾಕಿಸ್ತಾನ: ಲಾಹೋರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಂದು (Allama Iqbal International Airport) ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಿಂದಾಗಿ ರನ್‌ವೇ (Runway) ಬಂದ್ ಮಾಡಲಾಗಿದ್ದು, ಎಲ್ಲಾ ವಿಮಾನಗಳ ಹಾರಾಟವನ್ನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಪಾಕಿಸ್ತಾನ ಸೇನೆಯ ವಿಮಾನ ಲ್ಯಾಂಡಿಂಗ್ (Flight Landing) ವೇಳೇ ಟೈಯರ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿದೆ ಎಂದು ಪ್ರಾಥಮಿಕ ವರದಿಗಳಿಂದ ತಿಳಿದುಬಂದಿದೆ. ಸದ್ಯ ಬೆಂಕಿ ನಿಯಂತ್ರಿಸಲು ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿದೆ. ಘಟನೆ ಬಳಿಕ ರನ್‌ವೇಯನ್ನು ಮುಚ್ಚಲಾಗಿದ್ದು, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಶಿಮ್ಲಾ ಒಪ್ಪಂದಕ್ಕೆ ಸಹಿ ಹಾಕಿದ್ದ ಮೇಜಿಂದ ಪಾಕ್ ಧ್ವಜ ತೆಗೆದು ಹಾಕಿದ ಭಾರತ
ಘಟನೆಗೆ ಸಂಬಂಧಿಸಿದ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ವಿಮಾನ ನಿಲ್ದಾಣದಲ್ಲಿನ ಜನ ಹೊಗೆಯಿಂದ ತೊಂದರೆ ಅನುಭವಿಸುತ್ತಿರುವುದು ವಿಡಿಯೋದಲ್ಲಿ ಸ್ಪಷ್ಟವಾಗಿ ಕಾಣಿಸುತ್ತಿದೆ. ಕಪಾಡಿಯಾ ಎಂಬುವವರು ತಮ್ಮ ಎಕ್ಸ್ ಖಾತೆಯಲ್ಲಿ 32 ಸೆಕೆಂಡುಗಳ ವಿಡಿಯೋ ಹಂಚಿಕೊಂಡಿದ್ದು, ಆಕಾಶದ ತುಂಬೆಲ್ಲ ಕಪ್ಪು ಹೊಗೆ ತುಂಬಿರುವುರು ಕಾಣುತ್ತಿದೆ. ಯಾವುದೇ ಸಾವು ನೋವು ದಾಖಲಾಗಿಲ್ಲ. ಲಾಹೋರ್ ವಿಮಾನ ನಿಲ್ದಾಣ ಹೊತ್ತಿ ಉರಿಯುತ್ತಿದೆ ಎಂದು ಬರೆದುಕೊಂಡಿದ್ದಾರೆ.
ಪಾಕಿಸ್ತಾನದ ಅಲ್ಲಾಮಾ ಇಕ್ಬಾಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಇದೇ ಮೊದಲಲ್ಲ. ಈ ಹಿಂದೆ ಕೂಡ ವಿಮಾನ ನಿಲ್ದಾಣದಲ್ಲಿ ಬೆಂಕಿ ಕಾಣಿಸಿಕೊಂಡ ಬಗ್ಗೆ ವರದಿಯಾಗಿತ್ತು. ಇದು ದೇಶದಲ್ಲಿ ಕಳಪೆ ಮೂಲಸೌಕರ್ಯ ಮತ್ತು ಭದ್ರತಾ ಮಾನದಂಡಗಳ ನಿರ್ಲಕ್ಷ್ಯವನ್ನು ಎತ್ತಿ ತೋರಿಸುತ್ತದೆ. ಇದನ್ನೂ ಓದಿ: ಸಿಂಧೂ ನೀರು ಪಾಕ್‌ಗೆ ಹರಿಯಬೇಕು, ಇಲ್ಲದಿದ್ರೆ ಭಾರತೀಯರ ರಕ್ತ ಹರಿಯುತ್ತೆ: ಬಿಲಾವಲ್ ಭುಟ್ಟೋ
14 ಸೈನಿಕರು ಸಾವು?
ವಿವಿಧ ಮೂಲಗಳ ಪ್ರಕಾರ, ಪಾಕಿಸ್ತಾನದ ಲಾಹೋರ್‌ನಲ್ಲಿರುವ ಅಲ್ಲಾಮಾ ಇಕ್ಬಾಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಾಯು ರಕ್ಷಣಾ ವ್ಯವಸ್ಥೆಯ ಕ್ಷಿಪಣಿ ಬ್ಯಾಟರಿ ಅಳವಡಿಸುವ ಸಮಯದಲ್ಲಿ ಸ್ಫೋಟಗೊಂಡ ಉಂಟಾಗಿದೆ. ಬಳಿಕ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ 14 ಪಾಕಿಸ್ತಾನಿ ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಕೆಲ ವರದಿಗಳು ದೃಢಪಡಿಸಿವೆ. ಆದ್ರೆ ಸೇನೆಯಿಂದ ಅಧಿಕೃತ ಹೇಳಿಕೆ ಬಿಡುಗಡೆಯಾಗಿಲ್ಲ. ಇದನ್ನೂ ಓದಿ: ಪಹಲ್ಗಾಮ್‌ನಲ್ಲಿ ನಡೆದಿದ್ದು ಘೋರ ದುರಂತ – ಭಾರತ, ಪಾಕ್ ಉದ್ವಿಗ್ನತೆ ಬಗೆಹರಿಸಿಕೊಳ್ಳಲಿವೆ: ಟ್ರಂಪ್
ನವದೆಹಲಿ: ಹವಾಮಾನ ಹಠಾತ್ ಬದಲಾವಣೆಯಿಂದ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (New Delhi) ಶುಕ್ರವಾರ ಸಂಜೆ ಭಾರೀ ಧೂಳಿನ ಬಿರುಗಾಳಿ (Dust Storm) ಅವಾಂತರ ಸೃಷ್ಟಿಸಿತು.
ಸಂಜೆ ಮೋಡ ಮುಸುಕಿದ ವಾತಾವರಣ ಕಂಡುಬಂತು. ಈ ಬೆನ್ನಲ್ಲೇ ಬಿರುಗಾಳಿ ವೇಗವಾಗಿ ಬೀಸಿತು. ಧೂಳು ಮಿಶ್ರಿತ ಗಾಳಿಗೆ ಜನರು ಕಂಗಾಲಾದರು. ಎಕ್ಸ್‌ಪ್ರೆಸ್ ಹೈವೇಗಳಲ್ಲಿ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಯಿತು.
ಗುರುಗ್ರಾಮದಲ್ಲಿ ಕಬ್ಬಿಣದ ಸರಳು ಬಿದ್ದು ಕಾರು ಜಖಂ ಆಯಿತು. ಹಲವೆಡೆ ಲಘು ಮಳೆಗೆ ಮರಗಳು ಧರೆಗುರುಳಿವೆ. ಬಿರುಗಾಳಿ ಹಿನ್ನೆಲೆ 15 ವಿಮಾನಗಳು ಡೈವರ್ಟ್ ಆಗಿವೆ. ಹಲವು ವಿಮಾನಗಳ ಹಾರಾಟದಲ್ಲಿ ವಿಳಂಬವಾಗಿದೆ.
ಬಿರುಗಾಳಿ ತುಂಬಾ ಹಾನಿ ಉಂಟುಮಾಡಬಹುದು. ಜನರು ಮನೆ ಒಳಗಡೆಯೇ ಇರಿ. ಹೊರಗಡೆ ಪ್ರಯಾಣ ಮಾಡದಿರಿ ಎಂದು ಹವಾಮಾನ ಕಚೇರಿ ಎಚ್ಚರಿಕೆ ನೀಡಿದೆ. ಮರಗಳ ಕೆಳಗೆ ಆಶ್ರಯ ಪಡೆಯಬೇಡಿ, ಕಾಂಕ್ರೀಟ್ ಮಹಡಿಗಳ ಮೇಲೆ ಮಲಗಬೇಡಿ ಮತ್ತು ಕಾಂಕ್ರೀಟ್ ಗೋಡೆಗಳ ಮೇಲೆ ಒರಗಬೇಡಿ. ವಿದ್ಯುತ್ ಉಪಕರಣಗಳನ್ನು ಅನ್‌ಪ್ಲಗ್ ಮಾಡಿ ಎಂದು ಸಲಹೆ ನೀಡಿದೆ.
ಸಾಮಾನ್ಯವಾಗಿ ವಿಮಾನದಲ್ಲಿ ಪ್ರಯಾಣಿಸುವಾಗ ಇಂತಿಷ್ಟು ಮೌಲ್ಯದ ಹಣ, ಚಿನ್ನ ಕೊಂಡೊಯ್ಯಬೇಕು ಎನ್ನುವ ನಿಯಮವಿರುತ್ತದೆ. ಆದರೆ ಇತ್ತೀಚಿಗಷ್ಟೇ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಟಿ ರನ್ಯಾ ರಾವ್ ಚಿನ್ನದ ಕಳ್ಳಸಾಗಣೆ ಕೇಸ್‌ನಲ್ಲಿ ಬಂಧಿಸಲ್ಪಟ್ಟರು. ಈ ಸಮಯದಲ್ಲಿ ಗ್ರೀನ್ ಚಾನೆಲ್‌ನಲ್ಲಿ ಬರಲು ಯತ್ನಿಸುತ್ತಿದ್ದ ರನ್ಯಾಳನ್ನು ಡಿಆರ್‌ಐ ಅಧಿಕಾರಿಗಳು ಬಂಧಿಸಿ, ಭಾರೀ ಮೊತ್ತದ ಚಿನ್ನವನ್ನು ವಶಕ್ಕೆ ಪಡೆದರು. ಹಾಗಾದರೆ ವಿಮಾನದಲ್ಲಿ ಪ್ರಯಾಣಿಸುವಾಗ ಎಷ್ಟು ಚಿನ್ನ, ನಗದು ಕೊಂಡೊಯ್ಯಬಹುದು ಹಾಗೂ ಭಾರತದ ಕಸ್ಟಮ್ಸ್ ನಿಯಮಗಳೇನು ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.
ಭಾರತೀಯ ಕಸ್ಟಮ್ಸ್ ಎಂದರೇನು?
ದೇಶದಿಂದ ವಿದೇಶಕ್ಕೆ ಹಾಗೂ ವಿದೇಶದಿಂದ ದೇಶಕ್ಕೆ ಸರಕುಗಳ ಆಮದು ಮತ್ತು ರಫ್ತಿಗೆ ವಿಧಿಸುವ ತೆರಿಗೆ ಇದು. ಸರ್ಕಾರವು ಈ ಕಸ್ಟಮ್ಸ್ ಸುಂಕವನ್ನು ತನ್ನ ಆದಾಯವನ್ನು ಹೆಚ್ಚಿಸಲು, ದೇಶೀಯ ಕೈಗಾರಿಕೆಗಳನ್ನು ರಕ್ಷಿಸಲು ಮತ್ತು ಸರಕುಗಳ ಚಲನೆಯನ್ನು ನಿಯಂತ್ರಿಸಲು ಬಳಸುತ್ತದೆ.
ಸಾಂದರ್ಭಿಕ ಚಿತ್ರ
ಕಸ್ಟಮ್ಸ್ ಕಾಯ್ದೆ
ದೇಶದಿಂದ ವಿದೇಶಕ್ಕೆ ಹಾಗೂ ವಿದೇಶದಿಂದ ದೇಶಕ್ಕೆ ಸರಕುಗಳ ಚಲನೆಯನ್ನು ನಿಯಂತ್ರಿಸುವ ನಿರ್ಣಾಯಕ ಕಾನೂನಾಗಿ ಕಾರ್ಯನಿರ್ವಹಿಸುವ ಕಸ್ಟಮ್ಸ್ ಕಾಯ್ದೆ 1962ರಲ್ಲಿ ಭಾರತದಲ್ಲಿ ಜಾರಿಯಾಯಿತು. 17 ಅಧ್ಯಾಯಗಳಾಗಿ ವಿಂಗಡಿಸಲಾದ ಈ ಕಾಯ್ದೆಯು ಆಮದು ಸುಂಕ, ರಫ್ತು ನಿರ್ಬಂಧ ಮತ್ತು ನಿಯಮ ಉಲ್ಲಂಘನೆಗಳಿಗೆ ದಂಡ ಸೇರಿದಂತೆ ವಿವಿಧ ಕಸ್ಟಮ್ಸ್ ನಿಯಮಗಳನ್ನು ಒಳಗೊಂಡಿದೆ. ಕಾನೂನುಬದ್ಧ ವ್ಯಾಪಾರ ಕಾರ್ಯಾಚರಣೆಗಳನ್ನು ಸುಗಮಗೊಳಿಸುವುದು ಮತ್ತು ಕಳ್ಳಸಾಗಣೆ ಮುಂತಾದ ಕಾನೂನುಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸುವುದು ಇದರ ಪ್ರಾಥಮಿಕ ಉದ್ದೇಶವಾಗಿದೆ.
ಭಾರತೀಯ ಕಸ್ಟಮ್ಸ್ ನಿಯಮಗಳ ಪ್ರಕಾರ, 1967ರ ಪಾಸ್‌ಪೋರ್ಟ್ ಕಾಯ್ದೆಯಡಿಯಲ್ಲಿ, ಭಾರತೀಯ ಪ್ರಯಾಣಿಕರು 1 ಕೆಜಿ ಚಿನ್ನವನ್ನು ಕೊಂಡೊಯ್ಯಲು ಅನುಮತಿಸಲಾಗಿದೆ, ನಿರ್ದಿಷ್ಟ ತೆರಿಗೆಯೊಂದಿಗೆ ಪುರುಷರಿಗೆ 20 ಗ್ರಾಂ ಮತ್ತು ಮಹಿಳೆಯರಿಗೆ 40 ಗ್ರಾಂ ಅನುಮತಿಸಲಾಗಿದೆ. ಜೊತೆಗೆ ಮಕ್ಕಳು 20/40 ಗ್ರಾಂ ಚಿನ್ನವನ್ನು ತರಲು ಅವಕಾಶವಿದ್ದು, ಲಿಂಗದ ಆಧಾರದ ಮೇಲೆ ಮೌಲ್ಯದ ಮಿತಿ ರೂ. 50,000ರೂ ದಿಂದ 1,00,000ಕ್ಕೆ ಅನುಮತಿಸಿದೆ. ಭಾರತೀಯ ಪ್ರಯಾಣಿಕರು ಅಥವಾ ಕನಿಷ್ಠ ಆರು ತಿಂಗಳ ಕಾಲ ವಿದೇಶದಲ್ಲಿ ಉಳಿದು ಭಾರತಕ್ಕೆ ಮರಳುವ ಪಾಸ್‌ಪೋರ್ಟ್ ಹೊಂದಿರುವವರು ತಮ್ಮ ಸಾಮಾನುಗಳ ಪೈಕಿ ಚಿನ್ನವನ್ನು ಆಮದು ಮಾಡಿಕೊಳ್ಳಲು ಅನುಮತಿ ಇದೆ.
ವಿಮಾನ ನಿಲ್ದಾಣದಲ್ಲಿ ಭಾರತೀಯ ಕಸ್ಟಮ್ಸ್ ಹೇಗೆ ಕಾರ್ಯನಿರ್ವಹಿಸುತ್ತದೆ?
ಎಲ್ಲಾ ಪ್ರಯಾಣಿಕರು ವಿಮಾನ ನಿಲ್ದಾಣದಿಂದ ಹೊರಬರಲು ಬರಲು ಕಸ್ಟಮ್ಸ್ ಅಧಿಕಾರಿಯಿಂದ ಕ್ಲಿಯರೆನ್ಸ್ ಪಡೆದುಕೊಳ್ಳಲೇಬೇಕು. ಕನ್ವೇಯರ್ ಬೆಲ್ಟ್‌ಗಳಿಂದ ತಮ್ಮ ವಸ್ತುಗಳನ್ನು ಮರಳಿ ಪಡೆದ ನಂತರ ಕಸ್ಟಮ್ಸ್ ತಪಾಸಣೆಗೆ ಒಳಗಾಗಬೇಕಾಗುತ್ತದೆ. ಹೌದು, ಇಲ್ಲಿ ಎರಡು ರೀತಿಯ ಕ್ಲಿಯರೆನ್ಸ್ ಚಾನೆಲ್‌ಗಳಿದ್ದು, ಗ್ರೀನ್ ಚಾನೆಲ್ ಮತ್ತು ರೆಡ್ ಚಾನೆಲ್ ಎಂದು ವಿಂಗಡಿಸಲಾಗಿದೆ. ತೆರಿಗೆ ಹಾಗೂ ನಿಷೇಧಿತ ವಸ್ತುಗಳನ್ನು ಹೊಂದಿರದವರಿಗೆ ಗ್ರೀನ್ ಚಾನೆಲ್ ಹಾಗೂ ತೆರಿಗೆ ಹಾಗೂ ನಿಷೇಧಿತ ವಸ್ತುಗಳನ್ನು ಹೊಂದಿರುವವರಿಗೆ ರೆಡ್ ಚಾನೆಲ್‌ನಲ್ಲಿ ಕ್ಲಿಯರೆನ್ಸ್ ನೀಡಲಾಗುತ್ತದೆ. ಪ್ರಯಾಣಿಕರು ಕ್ಲಿಯರೆನ್ಸ್ ಚಾನೆಲ್‌ಗೆ ಹೋಗುವ ಮುಂಚೆ ತಾವು ಯಾವ ಚಾನೆಲ್‌ಗೆ ಹೋಗಬೇಕು ಎಂದು ನಿರ್ಧರಿಸಬೇಕು. ಈ ಮೂಲಕ ತಾವು ಕೊಂಡೊಯ್ಯುತ್ತಿರುವ ಚಿನ್ನ ಅಥವಾ ನಗದು ಮೊತ್ತದ ಪ್ರಮಾಣವನ್ನು ತಿಳಿಸಬೇಕು. ಜೊತೆಗೆ ಚಿನ್ನದ ಖರೀದಿ ಬಿಲ್, ಇನ್ನಿತರ ದಾಖಲೆಗಳನ್ನು ಒದಗಿಸಬೇಕು. ಇಲ್ಲದೇ ಹೋದಲ್ಲಿ ಕಸ್ಟಮ್ಸ್ ಕಾಯ್ದೆ 1962ರ ಸೆಕ್ಷನ್ 111ರ ಅಡಿಯಲ್ಲಿ ಚಿನ್ನ ಅಥವಾ ನಗದನ್ನು ವಶಕ್ಕೆ ಪಡೆಯಬಹುದು.
ಇನ್ನೂ ಈ ಕುರಿತು ಹೆಚ್ಚಿನ ಮಾಹಿತಿಗಾಗಿ ATITHI ಮೊಬೈಲ್ ಅಪ್ಲಿಕೇಶನ್ ಬಳಸಿ, ವಿಮಾನದಲ್ಲಿ ಪ್ರಯಾಣಿಸುವ ಮೊದಲು ತೆರಿಗೆ ವಿಧಿಸಬಹುದಾದ ವಸ್ತುಗಳು ಮತ್ತು ಕರೆನ್ಸಿಯ ಬಗ್ಗೆ ಮಾಹಿತಿ ತಿಳಿದುಕೊಳ್ಳಬೇಕು. ವಿದೇಶಿ ಕರೆನ್ಸಿ ನೋಟುಗಳ ಮೌಲ್ಯವು US $5,000 ಮೀರಿದರೆ ಅಥವಾ ಕರೆನ್ಸಿ ಸೇರಿದಂತೆ ಒಟ್ಟು ವಿದೇಶಿ ವಿನಿಮಯವು US $10,000 ಮೀರಿದರೆ ಸಂಬಂಧಪಟ್ಟ ದಾಖಲಾತಿಗಳು ಅವಶ್ಯಕ. ಜೊತೆಗೆ ನಿಷೇಧಿತ ಅಥವಾ ತೆರಿಗೆ ವಿಧಿಸಬಹುದಾದ ವಸ್ತುಗಳನ್ನು ಹೊಂದಿದ್ದರೂ ಕೂಡ ಗ್ರೀನ್ ಚಾನೆಲ್ ಬಳಸುವ ಪ್ರಯಾಣಿಕರಿಗೆ ಕಾನೂನು ಕ್ರಮ, ದಂಡ ಅಥವಾ ವಸ್ತುಗಳನ್ನು ಜಪ್ತಿ ಮಾಡಿಕೊಳ್ಳಬಹುದು.
ಯಾವುದೇ ವ್ಯಕ್ತಿಗೆ ನಿರ್ದಿಷ್ಟ ಮಿತಿಯಿಲ್ಲದೆ ವಿದೇಶದಿಂದ ಭಾರತಕ್ಕೆ ಚಿನ್ನ ಅಥವಾ ನಗದನ್ನು ತರಲು ಅವಕಾಶವಿದೆ. ಆದರೆ ಈ ಕುರಿತು ಮೊದಲೇ ಮಾಹಿತಿ ನೀಡಬೇಕು. ಕಸ್ಟಮ್ಸ್ ಕಾಯ್ದೆಯ ಪ್ರಕಾರ, ಮಾಹಿತಿ ನೀಡದಿರುವುದು, ತಪ್ಪಾದ ಮಾಹಿತಿ ನೀಡುವುದು ಅಥವಾ ಕಳ್ಳ ಸಾಗಾಟ ಮಾಡುವುದರಿಂದ ವಸ್ತುಗಳನ್ನು ವಶಪಡಿಸಿಕೊಳ್ಳಲು ಅವಕಾಶವಿರುತ್ತದೆ. ಇನ್ನೂ ಗ್ರೀನ್ ಚಾನೆಲ್ ಮೂಲಕ ನಿಷೇಧಿತ ಅಥವಾ ತೆರಿಗೆ ವಿಧಿಸಬಹುದಾದ ವಸ್ತುಗಳನ್ನು ಕಳ್ಳಸಾಗಣೆ ಮಾಡಲು ಪ್ರಯತ್ನಿಸಿದರೇ ಅಥವಾ ರೆಡ್ ಚಾನೆಲ್‌ನಲ್ಲಿ ಸುಳ್ಳು ಅಥವಾ ತಪ್ಪು ಮಾಹಿತಿ ನೀಡಿದರೆ ಅಂತಹ ವ್ಯಕ್ತಿಗಳ ವಿರುದ್ಧ ಕಸ್ಟಮ್ಸ್ ಕಾನೂನು ಅಡಿಯಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ
ನವದೆಹಲಿ: ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶುಕ್ರವಾರ ಬೆಳಗ್ಗೆಯಿಂದಲೇ ದಟ್ಟ ಮಂಜು (Dense fog) ಆವರಿಸಿದ್ದು ವಾಹನ ಸವಾರರಿಗೆ ಸಂಕಷ್ಟ ತಂದೊಡ್ಡಿದೆ. ಅಲ್ಲದೇ ಕಡಿಮೆ ಗೋಚರತೆಯಿಂದಾಗಿ 100ಕ್ಕೂ ಅಧಿಕ ವಿಮಾನಗಳ (Flights) ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಿದೆ.
ದಟ್ಟ ಮಂಜಿನಿಂದಾಗಿ ವಿಮಾನ ಕಾರ್ಯಾಚರಣೆಯಲ್ಲಿ ವ್ಯತ್ಯಯ ಸಂಭವಿಸಿದೆ. CAT-III ಸಾಮರ್ಥ್ಯದ ವಿಮಾನಗಳು ಮಾತ್ರ ದೆಹಲಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಹಾಗೂ ಟೇಕಾಫ್ ಆಗುತ್ತಿವೆ. ವಿಮಾನ ಕಾರ್ಯಾಚರಣೆಯ ಸ್ಥಿತಿಗತಿ ಬಗ್ಗೆ ತಿಳಿದುಕೊಂಡು ಏರ್‌ಪೋರ್ಟ್‌ಗೆ ಹೋಗಿ ಎಂದು ಇಂಡಿಗೊ ತನ್ನ ಎಕ್ಸ್ ಖಾತೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಬೆಂಗಳೂರು | ದರ್ಶನಕ್ಕೆ ಪಾಸ್ ಸಿಗದಿದ್ದಕ್ಕೆ ತಿರುಪತಿ ತಿಮ್ಮಪ್ಪನನ್ನೇ ಮನೆಗೆ ಕರೆಸಿದ ಭಕ್ತ!
ಇನ್ನೂ Flightradar.com ಮಾಹಿತಿ ಪ್ರಕಾರ 100ಕ್ಕೂ ಅಧಿಕ ವಿಮಾನಗಳ ಕಾರ್ಯಾಚರಣೆಯಲ್ಲಿ ಏರುಪೇರಾಗಿದೆ. ಈ ನಡುವೆ ವಿಮಾನಗಳ ಕಾರ್ಯಾಚರಣೆ ಬಗ್ಗೆ ವಿಮಾನಯಾನ ಕಂಪನಿಗಳ ಜೊತೆ ಸಂಪರ್ಕದಲ್ಲಿರಿ ಎಂದಿರುವ ದೆಹಲಿ ವಿಮಾನ ನಿಲ್ದಾಣವು, ಉಂಟಾದ ಸಮಸ್ಯೆಗೆ ಪ್ರಯಾಣಿಕರ ಕ್ಷಮೆ ಕೋರಿದೆ. ಇದನ್ನೂ ಓದಿ: ಬೈಕ್ ನಿಲ್ಲಿಸಲು ಮೆಟ್ರೋ ಪಾರ್ಕಿಂಗ್ ಬಳಸುತ್ತಿದ್ದರೆ ಹುಷಾರಾಗಿರಿ!
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಉತ್ತರ ಭಾರತದ ಬಹುತೇಕ ರಾಜ್ಯಗಳಲ್ಲಿ ದಟ್ಟವಾದ ಮಂಜಿನ (Fog) ಪದರ ಆವೃತಗೊಂಡಿದ್ದು, ತೀವ್ರ ಶೀತ ವಾತವರಣ ನಿರ್ಮಾಣವಾಗಿದೆ. ಇದರ ಪರಿಣಾಮ ವಿಮಾನ (Flights) ಮತ್ತು ರೈಲುಗಳ (Train) ಸಂಚಾರದಲ್ಲಿ ಭಾರಿ ವ್ಯತ್ಯಯವಾಗಿದೆ.
ಫ್ಲೈಟ್ ಮಾನಿಟರಿಂಗ್ ವೆಬ್‌ಸೈಟ್ ಫ್ಲೈಟ್‌ರಾಡಾರ್ ಪ್ರಕಾರ, ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರು ವಿಮಾನಗಳನ್ನು ರದ್ದುಗೊಳಿಸಲಾಗಿದೆ. 215 ವಿಮಾನಗಳ ಆಗಮನ ವಿಳಂಬವಾಗಿದೆ. ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ 17 ಹೊರಡುವ ವಿಮಾನಗಳು ವಿಳಂಬಗೊಂಡಿದ್ದು, 10 ವಿಮಾನಗಳು ರದ್ದಾಗಿದೆ. 36 ಆಗಮಿಸುವ ವಿಮಾನಗಳು ವಿಳಂಬವಾಗಿವೆ. ಇದನ್ನೂ ಓದಿ: ಬೇರೆ ರೂಟ್‌ಗೆ ಕರೆದೊಯ್ದ ಚಾಲಕ – ಭಯಗೊಂಡು ಚಲಿಸುತ್ತಿದ್ದ ಆಟೋದಿಂದ ಜಿಗಿದ ಮಹಿಳೆ
ಮಂಜಿನ ವಾತಾವರಣದಿಂದಾಗಿ ಹಲವಾರು ದೂರದ ಸೇವೆಗಳು ಸೇರಿದಂತೆ ಕನಿಷ್ಠ 24 ರೈಲುಗಳು ತಡವಾಗಿ ಓಡುತ್ತಿವೆ ಎಂದು ರೈಲ್ವೆ ಇಲಾಖೆ ತಿಳಿಸಿದೆ. ಇವುಗಳಲ್ಲಿ ಕೆಲವು ರೈಲುಗಳು 4-5 ಗಂಟೆಗಳವರೆಗೆ ವಿಳಂಬವಾಗಿವೆ. ಕರ್ನಾಟಕ ಎಕ್ಸ್‌ಪ್ರೆಸ್ ಮತ್ತು ಬಿಹಾರ ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್, ಭಟಿಂಡಾ-ಬಾಲೂರ್‌ಘಾಟ್ ಫರಕ್ಕಾ ಎಕ್ಸ್‌ಪ್ರೆಸ್, ಆಂಧ್ರಪ್ರದೇಶ ಎಕ್ಸ್‌ಪ್ರೆಸ್, ಅಯೋಧ್ಯೆ ಎಕ್ಸ್‌ಪ್ರೆಸ್ ರೈಲುಗಳು ವಿಳಂಬವಾಗುತ್ತಿವೆ. ಇದನ್ನೂ ಓದಿ: ಸಿಎಂ ತವರು ಕ್ಷೇತ್ರದಲ್ಲೇ ದಲಿತ ಕುಟುಂಬಕ್ಕೆ 4 ವರ್ಷದಿಂದ ದಲಿತರಿಂದಲೇ ಬಹಿಷ್ಕಾರ
ನೋಯ್ಡಾದಲ್ಲಿ, ಜ.8ರವರೆಗೆ ಶಾಲಾ ತರಗತಿಗಳಿಗಳನ್ನು ಮುಚ್ಚಲಾಗುವುದು ಎಂದು ಜಿಲ್ಲಾ ಅಧಿಕಾರಿಗಳು ಘೋಷಿಸಿದ್ದಾರೆ. ನೋಯ್ಡಾದಲ್ಲಿ ಶುಕ್ರವಾರ ಕನಿಷ್ಠ 8 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗೋಚರತೆ ಕಡಿಮೆಯಾದ ಕಾರಣ ಪಂಜಾಬ್‌ನ ಬಟಿಂಡಾದಲ್ಲಿ ಖಾಸಗಿ ಬಸ್ ಮತ್ತು ಟ್ರಕ್ ಡಿಕ್ಕಿ ಹೊಡೆದು 20 ರಿಂದ 25 ಪ್ರಯಾಣಿಕರು ಗಾಯಗೊಂಡಿದ್ದಾರೆ. ಇದನ್ನೂ ಓದಿ: ಹಾಲಿನ ದರ 10 ರೂ. ಹೆಚ್ಚಳಕ್ಕೆ ಬೇಡಿಕೆ ಇದೆ: ಸಚಿವ ವೆಂಕಟೇಶ್
ಹರಿಯಾಣ, ಉತ್ತರ ಪ್ರದೇಶ, ರಾಜಸ್ಥಾನ, ಪಂಜಾಬ್ ಮತ್ತು ಬಿಹಾರ ಸೇರಿದಂತೆ ರಾಜ್ಯಗಳಲ್ಲಿ ದಟ್ಟವಾದ ಮಂಜಿನ ಜೊತೆಗೆ ತೀವ್ರವಾದ ಚಳಿ ಅಲೆಯನ್ನು ಅನುಭವಿಸುತ್ತಿದೆ. ಪಾಟ್ನಾ ಸೇರಿದಂತೆ ಬಿಹಾರದ ಹಲವಾರು ಭಾಗಗಳಲ್ಲಿ ಹವಮಾನ ಕುಸಿದಿರುವುದರಿಂದ, ಮುಂದಿನ ಮೂರರಿಂದ ನಾಲ್ಕು ದಿನಗಳಲ್ಲಿ ಕನಿಷ್ಠ ತಾಪಮಾನವು 6-11 ಡಿಗ್ರಿ ಸೆಲ್ಸಿಯಸ್ ನಡುವೆ ಉಳಿಯುವ ನಿರೀಕ್ಷೆಯಿದೆ. ಇದಕ್ಕೆ ಸ್ಪಂದಿಸಿದ ಸರ್ಕಾರ ಶಾಲಾ ಸಮಯದಲ್ಲಿ ಬದಲಾವಣೆ ಮಾಡಿ ಆದೇಶ ಹೊರಡಿಸಿದೆ. ಇದನ್ನೂ ಓದಿ: ಪೀಣ್ಯ ಬಸವೇಶ್ವರ ಬಸ್ ನಿಲ್ದಾಣವಾಗುತ್ತಾ ಕಲ್ಯಾಣ ಮಂಟಪ, ಮಾಲ್?