Tag: fligt

  • ಮಂಕಿಪಾಕ್ಸ್ ಆತಂಕ – ಬೆಂಗಳೂರಿನಲ್ಲಿ ಹೈ ಅಲರ್ಟ್

    ಮಂಕಿಪಾಕ್ಸ್ ಆತಂಕ – ಬೆಂಗಳೂರಿನಲ್ಲಿ ಹೈ ಅಲರ್ಟ್

    ಬೆಂಗಳೂರು: ಯುರೋಪ್, ಅಮೆರಿಕ ದೇಶಗಳಲ್ಲಿ ಗಣನೀಯವಾಗಿ ಮಂಕಿಪಾಕ್ಸ್ ಪ್ರಕರಣಗಳು ಪತ್ತೆಯಾಗುತ್ತಿರುವ ಬೆನ್ನಲ್ಲೇ ಕೋವಿಡ್-19 ನಾಲ್ಕನೇ ಅಲೆಯ ಭೀತಿಯಲ್ಲಿರುವ ಭಾರತಕ್ಕೂ ಇದರ ಆತಂಕ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಇದೀಗ ಬೆಂಗಳೂರಿನಲ್ಲಿ ಹೈಅಲರ್ಟ್ ಘೋಷಿಸಲಾಗಿದೆ.

    ಹೌದು. ಕೋವಿಡ್ ಆತಂಕದ ನಡುವೆ ಇದೀಗ ಸಿಲಿಕಾನ್ ಸಿಟಿಗೆ ಮಂಕಿ ಪಾಕ್ಸ್ (Monkey Pox) ಭಯ ಶುರುವಾಗಿದೆ. ಹೀಗಾಗಿ ಏರ್ ಪೋರ್ಟ್ ಪ್ರಯಾಣಿಕರ ಮೇಲೆ ಕಣ್ಗಾವಲು ಇಡಲಾಗಿದೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅಂತರಾಷ್ಟ್ರೀಯ ಪ್ರಯಾಣಿಕರ ಮೇಲೆ ತೀವ್ರ ನಿಗಾ ವಹಿಸಲಾಗಿದೆ.

    MONKEY

    ಎಲ್ಲಾ ಕಡೆ ನಿಗಾ ಇಡಲು ಸೂಚನೆ ನೀಡಲಾಗಿದೆ. ಇದುವರೆಗೆ ರಾಜ್ಯ ರಾಜಧಾನಿಯಲ್ಲಿ ಮಂಕಿಪಾಕ್ಸ್ ಪ್ರಕರಣ ಕಂಡು ಬಂದಿಲ್ಲ. ಆದರೂ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

    ಏನಿದು ಮಂಕಿ ಪಾಕ್ಸ್..?: ಈ ವೈರಸ್ ಸಿಡುಬು ರೋಗಕ್ಕೆ ಕಾರಣವಾದ ವೆರಿಯೊಲಾ ವೈರಸ್ (Variola Virus) ಹಾಗೂ ಸಿಡುಬು ರೋಗಕ್ಕೆ ಬಳಸಲಾದ ವ್ಯಾಕ್ಸಿನಿಯಾ ವೈರಸ್‍ನ (Vaccinia virus) ಆರ್ಥೋಪಾಕ್ಸ್ ವೈರಸ್‍ (Orthomyxo Viruse)ಗೆ ಸೇರಿದ್ದಾಗಿದೆ. ಇದನ್ನೂ ಓದಿ: ಸೆಕ್ಸ್‌ನಿಂದಲೂ ಹರಡಬಹುದು ಮಂಕಿಪಾಕ್ಸ್- ತಜ್ಞರಿಂದ ಎಚ್ಚರಿಕೆ

    ಲಕ್ಷಣಗಳೇನು..?: ಮೈಮೇಲೆ ಕೆಂಪು ದದ್ದುಗಳ ಜೊತೆಗೆ ಜ್ವರದ ರೋಗಲಕ್ಷಣಗಳು ಕಂಡುಬರುತ್ತದೆ. ಜ್ವರ, ನೆಗಡಿ, ತಲೆನೋವು, ಮೈಕೈ ನೋವು ಮುಂತಾ ಸಾಮಾನ್ಯ ಲಕ್ಷಣಗಳು ಕೂಡ ಕಾಣಿಸಿಕೊಳ್ಳುತ್ತದೆ.

    ಸ್ಮಾಲ್‍ಪಾಕ್ಸ್ ಲಸಿಕೆಯಿಂದ ರಕ್ಷಣೆ: ಮಂಕಿಪಾಕ್ಸ್ ವೈರಸ್‍ಗೆ ನಿರ್ದಿಷ್ಟ ಲಸಿಕೆ ಇಲ್ಲ. ಆದರೆ ಸ್ಮಾಲ್‍ಪಾಕ್ಸ್ ಗೆ ಬಳಸುವ ಲಸಿಕೆಯು ಶೇ.85 ರಷ್ಟು ರಕ್ಷಣೆ ನೀಡುತ್ತದೆ. ಈ ಎರಡೂ ವೈರಸ್‍ಗಳ ಮಧ್ಯೆ ಬಹಳ ಸಾಮ್ಯತೆ ಇದೆ. ಇಲ್ಲಿಯವರೆಗೆ, ವೈರಸ್ ಹೆಚ್ಚಾಗಿ ಆಫ್ರಿಕಾಕ್ಕೆ ಸೀಮಿತವಾಗಿತ್ತು. ಈಗ ಯುರೋಪ್‍ನ ಬ್ರಿಟನ್, ಸ್ಪೇನ್, ಪೋರ್ಚುಗಲ್, ಜರ್ಮನಿ, ಬೆಲ್ಜಿಯಂ, ಫ್ರಾನ್ಸ್, ನೆದರ್‍ಲ್ಯಾಂಡ್ಸ್, ಇಟಲಿ ಮತ್ತು ಸ್ವೀಡನ್‍ಗಳಲ್ಲಿ ಖಚಿತವಾಗಿದೆ.

    ಗಾಳಿಯಲ್ಲಿ ಹರಡುವುದಿಲ್ಲ: ಮಂಕಿಪಾಕ್ಸ್ ಸೋಂಕು ಗಾಳಿಯಲ್ಲಿ ಹರಡುವುದಿಲ್ಲ. ಇದಕ್ಕೆ ವೈಜ್ಞಾನಿಕ ಆಧಾರವೂ ಇಲ್ಲ. ಅಲ್ಲದೆ ಲೈಂಗಿಕ ಸಂಪರ್ಕ ಇದ್ದವರಲ್ಲೂ ಪತ್ತೆಯಾಗುತ್ತದೆ ಎನ್ನುವ ಬಗ್ಗೆ ಮಾಹಿತಿಯಿಲ್ಲ. ಆದರೆ ಗಾಯಗಳು, ದೇಹದಿಂದ ಹೊರಬರುವ ದ್ರವಾಂಶ, ಉಸಿರಾಟ ಹಾಗೂ ಕಲುಷಿತ ವಸ್ತುಗಳೊಂದಿಗೆ ನಿಕಟ ಸಂಪರ್ಕದಿಂದ ವೈರಸ್ ಹರಡುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಸಿದೆ.