Tag: Flood Victim

  • ನಕಲಿ ಐಟಿ ಅಧಿಕಾರಿಗಳ ವೇಷದಲ್ಲಿ ವಂಚನೆ- ಸಂತ್ರಸ್ತನ ಮನೆಯಲ್ಲಿ ಹಣ ಪೀಕಲು ನಡೆಸಿದ್ರು ಮಸಲತ್ತು

    ನಕಲಿ ಐಟಿ ಅಧಿಕಾರಿಗಳ ವೇಷದಲ್ಲಿ ವಂಚನೆ- ಸಂತ್ರಸ್ತನ ಮನೆಯಲ್ಲಿ ಹಣ ಪೀಕಲು ನಡೆಸಿದ್ರು ಮಸಲತ್ತು

    ಬಾಗಲಕೋಟೆ: ಪ್ರವಾಹ ಸಂತ್ರಸ್ತನ ಮನೆ ಮೇಲೆ ನಕಲಿ ಐಟಿ ದಾಳಿ ನಡೆದಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಆಲಗೂರು ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ಲಕ್ಷ್ಮಣ ಸರೆನ್ನವರ್ (ಅಲಗೂರು) ಎಂಬವರು ನಕಲಿ ಐಟಿ ಅಧಿಕಾರಿಗಳ ವಂಚನೆಗೆ ಒಳಗಾದವರು. ಡಿಸೆಂಬರ್ 23ರಂದು ಈ ಪ್ರಕರಣ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಲಕ್ಷ್ಮಣ್ ಅವರ ಮನೆಗೆ ಡಿಸೆಂಬರ್ 23ರಂದು ಬೆಳಗ್ಗೆ ನಾಲ್ಕು ಗಂಟೆಗೆ ಗೋವಾ ಪಾಸಿಂಗ್ ಇರುವ ಎರ್ಟಿಗಾ ಕಾರಿನಲ್ಲಿ ಓರ್ವ ಮಹಿಳೆ ಸೇರಿದಂತೆ ಏಳು ಜನ ಬಂದಿದ್ದರು.

    ಲಕ್ಷ್ಮಣ್ ಮನೆಯವರಿಗೆ ತಾವು ಐಟಿ ಅಧಿಕಾರಿಗಳೆಂದು ಹೇಳಿ, ಮನೆಯ ಹಾಲ್ ನಲ್ಲಿನ ಹಾಸುಕಲ್ಲು, ಬ್ಯಾಗ್, ಪೆಟ್ಟಿಗೆ ಕಿತ್ತು ಜಾಲಾಡಿದ್ದಾರೆ. ಸೀಜ್ ಮಾಡುವ ನೆಪದಲ್ಲಿ 12,500 ರೂ. ಮೂರು ಮೊಬೈಲ್ ಹೊತ್ತೊಯ್ದಿದ್ದಾರೆ.

    ಇತ್ತೀಚೆಗೆ ಪ್ರವಾಹದ ವೇಳೆ ಲಕ್ಷ್ಮಣ್ ಮನೆಗೆ ಕೋಟಿ ಕೋಟಿ ಹಣ ಬಂದಿದೆ ಎಂದು ಸುದ್ದಿ ಹಬ್ಬಿತ್ತು. ಈ ಸುದ್ದಿ ತಿಳಿದು ಐಟಿ ಅಧಿಕಾರಿಗಳ ಸೋಗಿನಲ್ಲಿ ಬಂದು ವಂಚನೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಅಲ್ಲದೆ ವಂಚಕರು ಬೆಳಗಾವಿಗೆ ಬಂದು ಭೇಟಿಯಾಗಿ ಎಂದು ಬೆಳಗಾವಿ ತೆರಿಗೆ ಇಲಾಖೆ ವಿಳಾಸ ಕೊಟ್ಟು ಹೋಗಿದರು. ವಂಚಕರ ಮಾತು ಕೇಳಿ ಲಕ್ಷ್ಮಣ ಅಲಗೂರ ಬೆಳಗಾವಿಗೆ ಹೋದಾಗ ಮೋಸ ಹೋಗಿದ್ದಾಗಿ ತಿಳಿದುಬಂದಿದೆ.

    ಈ ನಕಲಿ ಐಟಿ ದಾಳಿ ಹಿಂದೆ ಗ್ರಾಮಸ್ಥರ ಕೈವಾಡದ ಶಂಕೆ ವ್ಯಕ್ತವಾಗಿದ್ದು, ಸದ್ಯ ಜಮಖಂಡಿ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ.

  • ಸಿಎಂಗೆ ಅಧಿಕಾರ ಅನುಭವಿಸಬೇಕಿದೆ, ಸಂತ್ರಸ್ತರ ಬಗ್ಗೆ ಯಾಕೆ ಯೋಚನೆ ಮಾಡ್ತಾರೆ: ಸತೀಶ್ ಜಾರಕಿಹೊಳಿ

    ಸಿಎಂಗೆ ಅಧಿಕಾರ ಅನುಭವಿಸಬೇಕಿದೆ, ಸಂತ್ರಸ್ತರ ಬಗ್ಗೆ ಯಾಕೆ ಯೋಚನೆ ಮಾಡ್ತಾರೆ: ಸತೀಶ್ ಜಾರಕಿಹೊಳಿ

    ಬೆಳಗಾವಿ: ಸಿಎಂ ಯಡಿಯೂರಪ್ಪ ಅವರಿಗೆ ರಾಜಕೀಯ ಮಾಡಿಕೊಂಡು, ಅಧಿಕಾರ ಅನುಭವಿಸಬೇಕಿದೆ. ಅವರು ಯಾಕೆ ಪ್ರವಾಹ ಸಂತ್ರಸ್ತರ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಾರೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಟಾಂಗ್ ಕೊಟ್ಟಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯದ ಪ್ರವಾಹ ಸಂತ್ರಸ್ತರಿಗೆ ಸ್ಪಂದಿಸದ ಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಆಂತರಿಕ ಸಮಸ್ಯೆಗಳು ಹೆಚ್ಚಾಗಿವೆ. ಪ್ರವಾಹ ಸಂತ್ರಸ್ತರ ನೆರವಿಗೆ ಧಾವಿಸಲು ಸಿಎಂ ಬಳಿ ಸಮಯವಿಲ್ಲ. ಸಿಎಂ ಅವರಿಗೆ ಕೇವಲ ರಾಜಕೀಯ ಮಾಡಬೇಕಿದೆ. ಅಧಿಕಾರ ಅನುಭವಿಸಬೇಕಿದೆ ಅಷ್ಟೇ. ಆದ್ದರಿಂದ ಪ್ರವಾಹದಿಂದ ಜನರ ಬದುಕು ಬೀದಿಗೆ ಬಂದರೂ ಸಿಎಂ ಹೆಚ್ಚು ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂದು ಮಾತಿನ ಚಾಟಿ ಬೀಸಿದರು.

    ಒಂದೆಡೆ ಸುಪ್ರೀಂ ಕೋರ್ಟಿನಲ್ಲಿ ಅನರ್ಹ ಶಾಸಕರ ವಿಚಾರಣೆ ಇರುವ ಕಾರಣ ಸಿಎಂ ಟೆನ್ಷನ್‍ನಲ್ಲಿದ್ದಾರೆ. ಇನ್ನೊಂದೆಡೆ ಸರ್ಕಾರಕ್ಕೆ ಏನಾಗುತ್ತೋ ಎಂಬ ಆತಂಕದಿಂದ ಸಿಎಂ ದೆಹಲಿಗೆ ತೆರಳಿದ್ದಾರೆ. ಅನರ್ಹ ಶಾಸಕರೆಲ್ಲರೂ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ ಎಂದು ಟೀಕಿಸಿದರು. ಹಾಗೆಯೇ ಬಿಜೆಪಿ ಶ್ರಮ ಪಟ್ಟು ಅಧಿಕಾರಕ್ಕೆ ಬಂದಿಲ್ಲ. ಹೀಗಾಗಿ ಜನರ ಕಷ್ಟ ಅವರಿಗೆ ಅರಿವಾಗುತ್ತಿಲ್ಲ. ಆದ್ದರಿಂದ ಸರ್ಕಾರದ ಗಮನ ಸೆಳೆಯಲೆಂದೇ ನಾಳೆ ಕಾಂಗ್ರೆಸ್ ಬೃಹತ್ ಸಮಾವೇಶ ನಡೆಸುತ್ತಿದೆ ಎಂದು ಹೇಳುವ ಮೂಲಕ ಬಿಜೆಪಿ ಸರ್ಕಾರಕ್ಕೆ ಕಾಂಗ್ರೆಸ್ ಬಿಸಿ ಮುಟ್ಟಿಸಲಿದೆ ಎಂದು ಎಚ್ಚರಿಕೆ ನೀಡಿದರು.

  • ಸುಳ್ಯದ ಆಶ್ರಯ ಕೇಂದ್ರದಲ್ಲಿದ್ದ ಜೋಡುಪಾಲ ಸಂತ್ರಸ್ತ ಸಾವು

    ಸುಳ್ಯದ ಆಶ್ರಯ ಕೇಂದ್ರದಲ್ಲಿದ್ದ ಜೋಡುಪಾಲ ಸಂತ್ರಸ್ತ ಸಾವು

    ಮಂಗಳೂರು: ಆಶ್ರಯ ಕೇಂದ್ರದಲ್ಲಿ ಜೋಡುಪಾಲ ಸಂತ್ರಸ್ತ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರಂತೋಡುವಿನ ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆದಿದೆ.

    ಅಂಗಾರ(60) ಮೃತಪಟ್ಟ ಸಂತ್ರಸ್ತ. ಇವರು ಕೊಡಗು ಜಿಲ್ಲೆಯ ಮೊಣ್ಣಂಗೇರಿ ಗ್ರಾಮದ ನಿವಾಸಿಯಾಗಿದ್ದಾರೆ. ಇವರಿಗೆ ರಾತ್ರಿ 1 ಗಂಟೆ ಸುಮಾರಿಗೆ ತೀವ್ರವಾಗಿ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಅಂಗಾರ ಅವರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆಯೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

    ಅಂಗಾರ ಅವರಿಗೆ ಹೃದಯ ಸಂಬಂಧಿತ ಕಾಯಿಲೆ ಇತ್ತು. ಕೊಡಗಿನಲ್ಲಿ ಆದ ಘಟನೆಯಿಂದ ಅವರು ಸಾಕಷ್ಟು ನೊಂದಿದ್ದರು. ಕೊಡಗಿನಲ್ಲಿ ಪ್ರವಾಹದಿಂದಾಗಿ ಸಾಕಷ್ಟು ಜನರಲ್ಲಿ ಈ ಸಮಸ್ಯೆಯಾಗುತ್ತಿತ್ತು. ತಕ್ಷಣಕ್ಕೆ ಸೂಕ್ತ ಚಿಕಿತ್ಸೆ ಹಾಗೂ ಹೆಚ್ಚಿನ ಚಿಕಿತ್ಸೆ ಸಿಗುತ್ತಿರಲಿಲ್ಲ. ಈ ಕಾರಣಕ್ಕಾಗಿ ಅಂಗಾರ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv